Tag: Israel Iran Conflict

  • ಇರಾನ್‌ ಜನ ತಕ್ಷಣವೇ ಟೆಹ್ರಾನ್‌ ಖಾಲಿ ಮಾಡಿ: ಟ್ರಂಪ್‌ ಸೂಚನೆ

    ಇರಾನ್‌ ಜನ ತಕ್ಷಣವೇ ಟೆಹ್ರಾನ್‌ ಖಾಲಿ ಮಾಡಿ: ಟ್ರಂಪ್‌ ಸೂಚನೆ

    ವಾಷಿಂಗ್ಟನ್‌: ಇಸ್ರೇಲ್ ಮತ್ತು ಇರಾನ್ (Israel Iran Conflict) ಪರಸ್ಪರ ಐದನೇ ದಿನವೂ ದಾಳಿ ನಡೆಸಿವೆ. ಇರಾನ್ ಜನತೆ ತಕ್ಷಣವೇ ಟೆಹ್ರಾನ್‌ ತೊರೆಯುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಸೂಚಿಸಿದ್ದಾರೆ.

    ಮಧ್ಯಪ್ರಾಚ್ಯದ ಪರಿಸ್ಥಿತಿಯಿಂದಾಗಿ ಟ್ರಂಪ್ ಸೋಮವಾರ ಕೆನಡಾದಲ್ಲಿ ನಡೆದ ಗ್ರೂಪ್ ಆಫ್ ಸೆವೆನ್ ಶೃಂಗಸಭೆಯಿಂದ ಒಂದು ದಿನ ಮುಂಚಿತವಾಗಿ ಹೊರಡಬೇಕಿತ್ತು ಎಂದು ಶ್ವೇತಭವನ ತಿಳಿಸಿದೆ. ಇಸ್ರೇಲ್ ಮತ್ತು ಇರಾನ್ ಕದನ ವಿರಾಮಕ್ಕೆ ಒಪ್ಪಿಗೆ ನೀಡುವುದು ತಕ್ಷಣದ ಉದ್ದೇಶವಾಗಿರುವುದರಿಂದ ಟ್ರಂಪ್ ಅವರ ಆರಂಭಿಕ ನಿರ್ಗಮನ ಸಕಾರಾತ್ಮಕವಾಗಿದೆ ಎಂದು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಹೇಳಿದ್ದಾರೆ. ಇದನ್ನೂ ಓದಿ: Iran-Israel Conflict | ಕರ್ನಾಟಕಕ್ಕೆ ಬರುತ್ತಿದ್ದ ಮಸಾಲೆ, ಡ್ರೈಫ್ರೂಟ್ಸ್‌ ಸಪ್ಲೈ ಬಂದ್

    ನಾನು ಹೇಳಿದ ಒಪ್ಪಂದಕ್ಕೆ ಇರಾನ್ ಸಹಿ ಹಾಕಬೇಕಿತ್ತು. ಎಂತಹ ನಾಚಿಕೆಗೇಡಿನ ಸಂಗತಿ. ಮಾನವ ಜೀವ ವ್ಯರ್ಥ. ಇರಾನ್ ಪರಮಾಣು ಶಸ್ತ್ರಾಸ್ತ್ರವನ್ನು ಹೊಂದಲು ಸಾಧ್ಯವಿಲ್ಲ. ನಾನು ಅದನ್ನು ಮತ್ತೆ ಮತ್ತೆ ಹೇಳಿದ್ದೇನೆ. ಎಲ್ಲರೂ ತಕ್ಷಣ ಟೆಹ್ರಾನ್ ಅನ್ನು ಬಿಟ್ಟು ಹೊರಡಿ ಎಂದು ಎಕ್ಸ್‌ ಖಾತೆಯಲ್ಲಿ ಟ್ರಂಪ್‌ ಎಚ್ಚರಿಕೆ ನೀಡಿದ್ದಾರೆ.

    ಮಂಗಳವಾರ ಮುಂಜಾನೆ ಟೆಹ್ರಾನ್‌ನಲ್ಲಿ ಸ್ಫೋಟಗಳು ಮತ್ತು ಭಾರೀ ವಾಯು ರಕ್ಷಣಾ ಗುಂಡಿನ ದಾಳಿ ನಡೆದಿರುವುದಾಗಿ ಇರಾನಿನ ಮಾಧ್ಯಮಗಳು ವರದಿ ಮಾಡಿವೆ. 320 ಕಿಮೀ (200 ಮೈಲುಗಳು) ದೂರದಲ್ಲಿರುವ ಪ್ರಮುಖ ಪರಮಾಣು ಸ್ಥಾಪನೆಗಳ ನೆಲೆಯಾದ ನಟಾಂಜ್‌ನಲ್ಲಿಯೂ ವಾಯು ರಕ್ಷಣಾ ಪಡೆಗಳನ್ನು ಸಕ್ರಿಯಗೊಳಿಸಲಾಗಿದೆ ಎಂದು ತಿಳಿಸಿವೆ. ಇದನ್ನೂ ಓದಿ: ಭಾರತದ ಮನವಿಗೆ ಸ್ಪಂದಿಸಿ ಭೂ ಗಡಿ ತೆರೆದ ಇರಾನ್‌

    ಇಸ್ರೇಲ್‌ನಲ್ಲಿ ಮಧ್ಯರಾತ್ರಿಯ ನಂತರ ಟೆಲ್ ಅವೀವ್‌ನಲ್ಲಿ ವಾಯುದಾಳಿ ಸೈರನ್‌ಗಳು ಕೂಗಿದವು. ಇರಾನಿನ ಕ್ಷಿಪಣಿಗಳು ಮತ್ತೆ ಇಸ್ರೇಲ್‌ ಗುರಿಯಾಗಿಸಿಕೊಂಡು ದಾಳಿ ಮುಂದುವರಿಸಿದೆ.

    ಐದು ದಿನಗಳಲ್ಲಿ ಇರಾನ್‌ನಲ್ಲಿ 224 ಮಂದಿ ಸಾವಿಗೀಡಾಗಿದ್ದಾರೆ. ಇಸ್ರೇಲ್‌ನಲ್ಲಿ 24 ನಾಗರಿಕರು ಸಾವನ್ನಪ್ಪಿದ್ದಾರೆ. ಇರಾನಿನ ದಾಳಿಯಿಂದ ಹಾನಿಗೊಳಗಾದ ಸುಮಾರು 3,000 ಇಸ್ರೇಲಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ಇಸ್ರೇಲ್ ಹಣಕಾಸು ಸಚಿವ ಬೆಜಲೆಲ್ ಸ್ಮೋಟ್ರಿಚ್ ಹೇಳಿದ್ದಾರೆ. ಇದನ್ನೂ ಓದಿ: ಇರಾನ್‌ ಸರ್ಕಾರಿ ವಾಹಿನಿ ಮೇಲೆ ಬಾಂಬ್‌ ದಾಳಿ – ಲೈವ್‌ನಿಂದಲೇ ಓಡಿ ಹೋದ ನಿರೂಪಕಿ

  • ಇರಾನ್‌ನ ತೈಲ ಸಂಗ್ರಹ, ಅನಿಲ ಉತ್ಪಾದನಾ ಘಟಕಗಳೇ ಇಸ್ರೇಲ್‌ಗೆ ಟಾರ್ಗೆಟ್

    ಇರಾನ್‌ನ ತೈಲ ಸಂಗ್ರಹ, ಅನಿಲ ಉತ್ಪಾದನಾ ಘಟಕಗಳೇ ಇಸ್ರೇಲ್‌ಗೆ ಟಾರ್ಗೆಟ್

    -ಇಸ್ರೇಲ್‌ನಲ್ಲಿ 18 ಕನ್ನಡಿಗರು ಸೇಫ್

    ಟೆಲ್ ಅವಿವ್/ಟೆಹ್ರಾನ್: ಇರಾನ್ ಹಾಗೂ ಇಸ್ರೇಲ್ ನಡುವಿನ ಉದ್ವಿಗ್ನತೆ ಹೆಚ್ಚಾಗುತ್ತಿದ್ದು, ಇರಾನ್‌ನ ತೈಲ ಸಂಗ್ರಹ, ಅನಿಲ ಉತ್ಪಾದನಾ ಘಟಕಗಳನ್ನೇ ಇಸ್ರೇಲ್ ಟಾರ್ಗೆಟ್ ಮಾಡಿಕೊಂಡಿದೆ.

    ಇರಾನ್-ಇಸ್ರೇಲ್ ಕದನ ಮೂರನೇ ದಿನಕ್ಕೆ ತಲುಪಿದ್ದು, ದಾಳಿ ಪ್ರತಿದಾಳಿಯ ಭೀಕರತೆ ಹೆಚ್ಚಾಗಿದೆ. ಇಸ್ರೇಲ್ ದಾಳಿಯಿಂದಾಗಿ 400ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. 600ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, 40ಕ್ಕೂ ಹೆಚ್ಚು ಜನ ಕಾಣೆಯಾಗಿದ್ದಾರೆ. ಇರಾನ್ ರಾಜಧಾನಿ ಟೆಹ್ರಾನ್‌ನ ಶಹರಾನ್ ತೈಲ ಸಂಗ್ರಹಣಾ ಘಟಕ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದೆ. ಇಸ್ರೇಲ್‌ನ ಈ ಭೀಕರ ದಾಳಿಯಿಂದ ವಿಶ್ವದ ಅತಿದೊಡ್ಡ ಅನಿಲ ಕ್ಷೇತ್ರ ಸೌತ್ ಪಾರ್ಸ್ನಲ್ಲಿ ಅನಿಲ ಉತ್ಪಾದನೆಯನ್ನ ಇರಾನ್ ಸ್ಥಗಿತಗೊಳಿಸಿದೆ.ಇದನ್ನೂ ಓದಿ: ಇರಾನ್ ಹಾರ್ಮುಝ್ ಜಲಸಂಧಿ ಬಂದ್ ಮಾಡಿದ್ರೆ ಭಾರತಕ್ಕೆ ಭಾರೀ ನಷ್ಟ: ಹಿರಿಯ ಪ್ರಾಧ್ಯಾಪಕ ಎಸ್.ಆರ್ ಕೇಶವ್

    ಇಸ್ರೇಲ್‌ನ ದಾಳಿಗೆ ಪ್ರತಿದಾಳಿ ಆರಂಭಿಸಿದ ಇರಾನ್ ರಾತ್ರಿಯಿಡಿ ಸೆಂಟ್ರಲ್ ಟೆಲ್ ಅವೀವ್ ನಗರದ ಮೇಲೆ ನೂರಾರು ಡ್ರೋನ್, ಬ್ಯಾಲಿಸ್ಟಿಕ್ ಮಿಸೈಲ್ ದಾಳಿ ನಡೆಸಿದೆ. ಜೊತೆಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ನಿವಾಸದ ಮೇಲೂ ಕ್ಷಿಪಣಿ ದಾಳಿ ನಡೆಸಿದ್ದು, ಸ್ವಲ್ಪದರಲ್ಲೇ ಪ್ರಧಾನಿ ಬಚಾವ್ ಆಗಿದ್ದಾರೆ.

    ಇಂದು ಇಸ್ರೇಲ್ ಪ್ರಧಾನಿಯ ಪುತ್ರ ಅವ್ನೇರ್ ನೆತಾನ್ಯಾಹುನ ಮದುವೆ ಇತ್ತು. ಯುದ್ಧದ ಸಮಯದಲ್ಲಿ ಆಕ್ಷೇಪ ವ್ಯಕ್ತವಾದ ಹಿನ್ನೆಲೆ, ಮದುವೆಯನ್ನು ಮುಂದೂಡಲಾಗಿದೆ. ಇನ್ನೂ ಇಸ್ರೇಲ್‌ನ ಟೆಲ್ ಅವೀವ್ ನಗರದ ಕಟ್ಟಡಗಳು ಧ್ವಂಸಗೊAಡಿದ್ದು, ಪುಟ್ಟ ಕಂದಮ್ಮಗಳನ್ನ ಉಳಿಸಲು ಇಸ್ರೇಲ್‌ನ ರಕ್ಷಣಾ ಪಡೆಗಳು ನಿರಂತರ ರಕ್ಷಣಾ ಕಾರ್ಯಚರಣೆ ಮಾಡುತ್ತಿದ್ದಾರೆ. ಸದ್ಯ ಮುಂದಿನ 15 ದಿನಗಳ ಕಾಲ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ.

    ಇಸ್ರೇಲ್‌ನಲ್ಲಿ 18 ಕನ್ನಡಿಗರು ಸೇಫ್:
    ಇಸ್ರೇಲ್‌ನ ಟೆಲ್ ಅವೀವ್ ನಗರದಲ್ಲಿ 18 ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದು, ಸದ್ಯಕ್ಕೆ ಹೊಟೇಲ್ ಒಂದರಲ್ಲಿ ಸೇಫ್ ಆಗಿದ್ದಾರೆ. ಅಧ್ಯಯನ ಪ್ರವಾಸಕ್ಕೆ ಹೋಗಿದ್ದ ತಂಡದ ಜೊತೆ ಕೇಂದ್ರ ಸಚಿವ ಕುಮಾರಸ್ವಾಮಿ ಮಾತನಾಡಿದ್ದು, ಧೈರ್ಯ ತುಂಬಿದ್ದಾರೆ. ಇಸ್ರೇಲ್‌ನ ಜೇರುಸೇಲಂ ನಗರದಲ್ಲಿಯೂ ಮಂಗಳೂರು ಮೂಲದ ಹಲವರು ಕೆಲಸ ಮಾಡ್ತಿದ್ದು, ಮಿಸೈಲ್, ಡ್ರೋನ್ ದಾಳಿಯ ನಡುವೆ ಬಂಕರ್‌ಗಳಲ್ಲಿ ಸುರಕ್ಷಿತವಾಗಿದ್ದಾರೆ. ಮೂರು ದಿನಗಳಿಂದ ನಡೆಯುತ್ತಿರುವ ಯುದ್ಧ ಮತ್ತಷ್ಟು ರಕ್ತಸಿಕ್ತ ಸಂಘರ್ಷಕ್ಕೆ ನಾಂದಿ ಹಾಡುವಂತಿದೆ.ಇದನ್ನೂ ಓದಿ: ಮಲೆನಾಡಿನಲ್ಲಿ ಮಳೆಗೆ 4ನೇ ಬಲಿ – ಮರ ಬಿದ್ದು ವ್ಯಕ್ತಿ ಸಾವು

  • ಇರಾನ್ ಹಾರ್ಮುಝ್ ಜಲಸಂಧಿ ಬಂದ್ ಮಾಡಿದ್ರೆ ಭಾರತಕ್ಕೆ ಭಾರೀ ನಷ್ಟ: ಹಿರಿಯ ಪ್ರಾಧ್ಯಾಪಕ ಎಸ್.ಆರ್ ಕೇಶವ್

    ಇರಾನ್ ಹಾರ್ಮುಝ್ ಜಲಸಂಧಿ ಬಂದ್ ಮಾಡಿದ್ರೆ ಭಾರತಕ್ಕೆ ಭಾರೀ ನಷ್ಟ: ಹಿರಿಯ ಪ್ರಾಧ್ಯಾಪಕ ಎಸ್.ಆರ್ ಕೇಶವ್

    ಬೆಂಗಳೂರು: ಇರಾನ್ (Iran) ಹಾರ್ಮುಝ್ ಜಲಸಂಧಿ (Hormuz Strait) ಬಂದ್ ಮಾಡಿದ್ರೆ ಭಾರತಕ್ಕೆ ಭಾರೀ ನಷ್ಟವಾಗಲಿದೆ, ಆರ್ಥಿಕತೆಗೂ ಹೊಡೆತ ಬೀಳಲಿದೆ ಎಂದು ಅರ್ಥಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕ ಎಸ್.ಆರ್ ಕೇಶವ್ (SR Keshav) ಹೇಳಿದ್ದಾರೆ.

    ಇರಾನ್‌-ಇಸ್ರೇಲ್‌ ನಡುವೆ ಸಂಘರ್ಷ (Israel Iran Conflict) ತೀವ್ರಗೊಂಡಿದ್ದು, ಭಾರತದ ಆರ್ಥಿಕತೆ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿದೆ ಎಂಬ ಚರ್ಚೆಗಳು ನಡೆಯುತ್ತಿವೆ. ಸಂಘರ್ಷ ಮುಂದುವರಿದ್ರೆ ಅಥವಾ ಇರಾನ್‌ ಮುಂದಿನ ಕ್ರಮ ಭಾರತದ (India) ಮೇಲೆ ಏನು ಪರಿಣಾಮಗಳು ಬೀರಬಹುದು ಅನ್ನೋ ಕುರಿತು ಎಸ್. ಆರ್ ಕೇಶವ್ ಮಾತನಾಡಿದ್ದಾರೆ.

    ಆಮದು-ರಫ್ತಿನ ಪ್ರಮುಖ ಮಾರ್ಗ
    ಇರಾನ್ ಹಾರ್ಮುಝ್ ಜಲಸಂಧಿ ಬಂದ್ ಮಾಡಿದ್ರೆ ಕಷ್ಟವಾಗುತ್ತದೆ. ಸಹಜವಾಗಿಯೇ ವಿಶ್ವದಲ್ಲಿ ಯಾವುದೇ ಯುದ್ಧವಾದ್ರೂ ವಿಶ್ವದ ಎಲ್ಲಾ ದೇಶಗಳಿಗೂ ಪರಿಣಾಮ ಬೀರುತ್ತೆ. ಅದೇ ರೀತಿ ಇಸ್ರೇಲ್-ಇರಾನ್ ಯುದ್ಧ ಸುದೀರ್ಘವಾದಷ್ಟು ಭಾರತಕ್ಕೆ ಲಾಸ್. ಏಕೆಂದ್ರೆ ಭಾರತದ 80% ರಷ್ಟು ಕಚ್ಚಾ ತೈಲವನ್ನ (Crude oil) ಆಮದು ಮಾಡಿಕೊಳ್ಳುತ್ತೆ. ಹಾರ್ಮೂಝ್ ಜಲಸಂಧಿ ಮಾರ್ಗದಿಂದಲೇ ಭಾರತಕ್ಕೆ ಆಮದು ಆಗಬೇಕು. ಭಾರತದಿಂದ ರಫ್ತಾಗುವ ಎಲ್ಲ ವಸ್ತುಗಳು ಸಹ ಈ ಜಲಸಂಧಿಯಿಂದಲೇ ಹೋಗಬೇಕು ಎಂದು ವಿವರಿಸಿದ್ರು.

    ಈಗಾಗಲೇ ಆಮದು, ರಫ್ತು ಎರಡಲ್ಲೂ ಭಾರತಕ್ಕೆ ನಷ್ಟ ಶುರುವಾಗಿದೆ. ಇಸ್ರೇಲ್‌ ಜೊತೆಗಿನ ಸಂಘರ್ಷ ತೀವ್ರವಾದ ಬೆನ್ನಲ್ಲೇ ಇರಾನ್ ಜೊತೆಗೆ ವಹಿವಾಟು ಕಡಿಮೆ ಆಗಿದೆ. ಜೊತೆಗೆ ಸೌದಿ ಅರೇಬಿಯಾ, ಯುಎಇ, ಅರಬ್ ದೇಶಗಳಿಂದ ಸಾಗಣಿಕೆಗೆ ಈ ಜಲಸಂಧಿಯಲ್ಲೇ ಬರಬೇಕು. ಎಲ್ಲಾ ಆಮದು ಬರೋದಕ್ಕೆ ಈ ಜಲಸಂಧಿ ಮಾರ್ಗವೇ ಹತ್ತಿರವಾಗುತ್ತೆ. ಯೂರೋಪ್ ದೇಶಗಳಿಗೆ ಭಾರತ ರಪ್ತು ಮಾಡೋದಕ್ಕೂ ಈ ಮಾರ್ಗವೇ ಮುಖ್ಯ. ಹಾಗಾಗಿ ಇರಾನ್ ಹಾರ್ಮುಝ್ ಜಲಸಂಧಿ ಬಂದ್ ಮಾಡಿದ್ರೇ ಭಾರತಕ್ಕೆ ಭಾರೀ ನಷ್ಟವಾಗುತ್ತದೆ ಎಂದು ತಿಳಿಸಿದರು.

    ಜೊತೆಗೆ ಏಷ್ಯಾ ದೇಶಗಳ ಸಂಪರ್ಕಕ್ಕೂ ನೇರ ಹೊಡೆತ ಬೀಳುತ್ತೆ. ಭಾರತ ಮಾತ್ರವಲ್ಲ ಬಹುತೇಕ ಎಲ್ಲ ಏಷ್ಯಾ ರಾಷ್ಟ್ರಗಳಿಗೆ ಹೊಡೆತ ಬೀಳುತ್ತೆ. ಸದ್ಯದ ಪರಿಸ್ಥಿಯಲ್ಲಿ ಇರಾನ್‌ಗೆ ಚೀನಾ ಬೇಕಿದೆ, ಇಸ್ರೇಲ್‌ಗೆ ಅಮೆರಿಕ ಬೇಕಿದೆ ಎಂದು ಮಾಹಿತಿ ನೀಡಿದರು.

  • Israel-Iran Conflict | ಅಡುಗೆ ಎಣ್ಣೆ ಬೆಲೆ 3-4ರೂ. ದಿಢೀರ್ ಹೆಚ್ಚಳ

    Israel-Iran Conflict | ಅಡುಗೆ ಎಣ್ಣೆ ಬೆಲೆ 3-4ರೂ. ದಿಢೀರ್ ಹೆಚ್ಚಳ

    – ಯುದ್ಧ ಮುಂದುವರೆದ್ರೆ 10-30 ರೂ. ಏರಿಕೆ ಸಾಧ್ಯತೆ

    ನವದೆಹಲಿ/ಬೆಂಗಳೂರು: ಇರಾನ್-ಇಸ್ರೇಲ್ ಉದ್ವಿಗ್ನತೆದಿಂದಾಗಿ (Iran Israel Conಪ್ರಪಂಚದಾದ್ಯಂತ ತೈಲ ಮಾರುಕಟ್ಟೆಗಳು ಸಂಪೂರ್ಣವಾಗಿ ಅಲುಗಾಡುತ್ತಿವೆ. ಇದರಿಂದಾಗಿ ರಾಜ್ಯದ ಮೇಲೂ ಪರಿಣಾಮ ಬೀರಿದ್ದು, ಅಡುಗೆ ಎಣ್ಣೆ ಬೆಲೆ ಕಳೆದ ಶನಿವಾರದಿಂದ 3-4ರೂ. ಏರಿಕೆಯಾಗಿದೆ.

    ಸದ್ಯ ಇಸ್ರೇಲ್ ಮತ್ತು ಇರಾನ್ ನಡುವಿನ ಉದ್ವಿಗ್ನತೆ ತಾರಕಕ್ಕೇರಿದೆ. ಎರಡೂ ದೇಶಗಳು ಪರಸ್ಪರ ದಾಳಿ ನಡೆಸುತ್ತಿವೆ. ಇದರಿಂದಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೆಲವಸ್ತುಗಳು ಹಾಗೂ ಪದಾರ್ಥಗಳು ದುಬಾರಿಯಾಗುತ್ತಿವೆ. ಒಂದೆಡೆ ಕಚ್ಛಾ ತೈಲ ಬೆಲೆ ಹೆಚ್ಚಾಗುತ್ತಿದ್ದು, ಇನ್ನೊಂದೆಡೆ ಅಡುಗೆ ಎಣ್ಣೆ ಬೆಲೆ ಶನಿವಾರದಿಂದಲೇ ಲೀಟರ್‌ಗೆ 3 ರಿಂದ 4 ರೂ. ಏರಿಕೆಯಾಗಿದೆ.ಇದನ್ನೂ ಓದಿ: Israel-Iran Conflict | ಇಸ್ರೇಲ್‌ ಮಿಸೈಲ್‌ ದಾಳಿಗೆ ಇರಾನ್‌ನ 14 ಅಧಿಕಾರಿಗಳು ಬಲಿ

    ಖಾದ್ಯ ತೈಲಗಳಾದ ಸನ್ ಫ್ಲವರ್, ಫಾಮ್ ಆಯಿಲ್, ಕಡಲೆ ಎಣ್ಣೆ, ಅರಳೆಣ್ಣೆ, ಸಾಸಿವೆ ಎಣ್ಣೆ ಹಾಗೂ ದೀಪದ ಎಣ್ಣೆಯಲ್ಲಿಯೂ ಏರಿಕೆಯಾಗಿದೆ. ಒಂದು ವೇಳೆ ಯುದ್ಧ ಇದೇ ರೀತಿ ಮುಂದುವರೆದರೆ ಲೀಟರ್‌ಗೆ 10 ರಿಂದ 30 ರೂ.ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ.

    ಬೆಲೆ ಏರಿಕೆ:
    ಬ್ರ್ಯಾಂಡ್‌                      ಎಷ್ಟಿತ್ತು?     ಎಷ್ಟಾಗಿದೆ?
    *ಸನ್ ಫ್ಲವರ್ ಆಯಿಲ್     139ರೂ.      141ರೂ.
    *ಗೋಲ್ಡ್ ವಿನ್ನರ್            142ರೂ.       145ರೂ.
    *ರುಚಿಗೋಲ್ಡ್                 110ರೂ.        112ರೂ.
    *ಜೆಮಿನಿ                        147ರೂ.         150ರೂ.
    *ಫ್ರೀಡಂ                        137ರೂ.         141ರೂ.
    *ದೀಪದ ಎಣ್ಣೆ                  111ರೂ.         114ರೂ.

    ಒಟ್ಟಿನಲ್ಲಿ ಇರಾನ್-ಇಸ್ರೇಲ್ ಯುದ್ಧದಿಂದಾಗಿ ಜನಸಾಮಾನ್ಯರ ಮೇಲೆ ಪ್ರಭಾವ ಬೀರುತ್ತಿದೆ.ಇದನ್ನೂ ಓದಿ: Israel-Iran Conflict – ರಾಜ್ಯದ 9 ವಿದ್ಯಾರ್ಥಿಗಳನ್ನು ಕರೆತರಲು ವಿದೇಶಾಂಗ ಸಚಿವರಿಗೆ ಪತ್ರ

  • Israel-Iran Conflict | ಇಸ್ರೇಲ್‌ ಮಿಸೈಲ್‌ ದಾಳಿಗೆ ಇರಾನ್‌ನ 14 ಅಧಿಕಾರಿಗಳು ಬಲಿ

    Israel-Iran Conflict | ಇಸ್ರೇಲ್‌ ಮಿಸೈಲ್‌ ದಾಳಿಗೆ ಇರಾನ್‌ನ 14 ಅಧಿಕಾರಿಗಳು ಬಲಿ

    – ಇರಾನ್‌ನ 170ಕ್ಕೂ ಹೆಚ್ಚು ಸ್ಥಳ, 720 ಮಿಲಿಟರಿ ನೆಲೆಗಳ ಮೇಲೆ ಏರ್‌ಸ್ಟ್ರೈಕ್‌

    ಟೆಲ್‌ ಅವಿವ್‌/ಟೆಹ್ರಾನ್‌: ಆಪರೇಷನ್‌ ʻರೈಸಿಂಗ್‌ ಲಯನ್‌ʼ ಬಳಿಕ ಇಸ್ರೇಲ್‌-ಇರಾನ್‌ ನಡುವಿನ ಸಂಘರ್ಷ (Israel-Iran Conflict) ತೀವ್ರ ಸ್ವರೂಪ ಪಡೆದುಕೊಂಡಿದೆ. ಇರಾನ್‌ ಮಿಸೈಲ್‌ ದಾಳಿಗೆ ಇಸ್ರೇಲ್‌ (Israel) ಕೂಡ ಮಿಸೈಲ್‌ಗಳ ಸುರಿಮಳೆಯನ್ನೇ ಸುರಿಸಿದೆ.

    ಅಣ್ವಸ್ತ್ರ (Nuclear Site), ಮಿಲಿಟರಿ ನೆಲೆಗಳ ಬಳಿಕ ಇರಾನ್‌ನ ಮೂಲ ಸೌಕರ್ಯಗಳನ್ನು ಗುರಿಯಾಗಿಸಿ ಇಸ್ರೇಲ್‌ ದಾಳಿ ಮಾಡಲು ಶುರು ಮಾಡಿದೆ. ಇರಾನ್‌ನಲ್ಲಿ ಒಟ್ಟು 170ಕ್ಕೂ ಹೆಚ್ಚು ಸ್ಥಳಗಳು 720 ಮಿಲಿಟರಿ ಮೂಲ ಸೌಕರ್ಯಗಳ ಮೇಲೆ ದಾಳಿ ಮಾಡಿದೆ. ಇದನ್ನೂ ಓದಿ: ನಮ್ಮ ತಂಟೆಗೆ ಬಂದ್ರೆ ಹಿಂದೆಂದೂ ನೋಡಿರದ ಮಿಲಿಟರಿ ಬಲವನ್ನು ಎದುರಿಸಬೇಕಾಗುತ್ತೆ – ಇರಾನ್‌ಗೆ ಟ್ರಂಪ್‌ ಬಿಗ್‌ ವಾರ್ನಿಂಗ್‌

    ಈವರೆಗಿನ ದಾಳಿಯಲ್ಲಿ ಇರಾನಿನ ಉನ್ನತ ಅಧಿಕಾರಿಗಳು ಮತ್ತು ಅಣ್ವಸ್ತ್ರ ವಿಜ್ಞಾನಿಗಳು ಸೇರಿದಂತೆ ಈವರೆಗೆ 14 ಹಿರಿಯ ಅಧಿಕಾರಿಗಳು ಸಾವನ್ನಪ್ಪಿದ್ದಾರೆ. ಅತ್ತ ಇರಾನ್‌ ಕೂಡ ಇಸ್ರೇಲ್‌ ಮೇಲೆ 200 ಖಂಡಾಂತರ ಕ್ಷಿಪಣಿಗಳು ಹಾಗೂ 100 ಡ್ರೋನ್‌ಗಳಿಂದ ಭೀಕರ ದಾಳಿ ನಡೆಸಿ ಪ್ರತೀಕಾರ ತೀರಿಸಿಕೊಂಡಿದೆ. ಟೆಲ್‌ ಅವಿವ್‌, ಜೆರುಸಲೆಮ್‌ ಸೇರಿದಂತೆ ಮಿಲಿಟರಿ ಮತ್ತು ಸಾರ್ವಜನಿಕ ಸ್ಥಳಗಳ ಮೇಲೆ ದಾಳಿ ನಡೆಸಿದೆ. ಹೀಗಾಗಿ ಉಭಯ ರಾಷ್ಟ್ರಗಳ ನಡುವಿನ ಸಂಘರ್ಷ 4ನೇ ದಿನವೂ ಮುಂದುವರಿದಿದೆ. ಇದನ್ನೂ ಓದಿ: ಚೆನ್ನೈಗೆ ಹೊರಟಿದ್ದ ಬ್ರಿಟಿಷ್ ಏರ್‌ವೇಸ್‌ ಡ್ರೀಮ್‌ಲೈನರ್‌ನಲ್ಲಿ ತಾಂತ್ರಿಕ ದೋಷ – ಮರಳಿ ಲಂಡನ್‌ನಲ್ಲಿ ಲ್ಯಾಂಡಿಂಗ್‌!

    ಕದನ ವಿರಾಮ ಮಾತುಕತೆ ತಿರಸ್ಕಾರ
    ಇತ್ತ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು, ಟೆಹ್ರಾನ್‌ ಹೊತ್ತಿ ಉರಿಯಯತ್ತೆ, ನಿರಂತರ ದಾಳಿ ಇರಾನ್‌ ಮೇಲೆ ನಡೆಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಅತ್ತ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಇಸ್ರೇಲ್‌ ಮೇಲೆ ಬೃಹತ್‌ ದಾಳಿ ನಡೆಸುವ ಸೂಚನೆ ಕೊಟ್ಟಿದೆ. ಜೊತೆಗೆ ಇಸ್ರೇಲ್‌ನಿಂದ ದಾಳಿ ಮುಂದುವರಿಯುವವರೆಗೂ ನಾವು ಕದನ ವಿರಾಮದ ಬಗ್ಗೆ ಮಾತನಾಡುವುದಿಲ್ಲ ಎಂದು ಒಮನ್ ಮತ್ತು ಕತಾರ್‌ನ ಮಧ್ಯಸ್ಥಿಕೆಯನ್ನು ಇರಾನ್‌ ತಿರಸ್ಕರಿಸಿದೆ.

    ಇಸ್ರೇಲ್‌ ನಡೆಸಿದ ದಾಳಿಯಲ್ಲಿ 224 ಮಂದಿ ಸಾವನ್ನಪ್ಪಿದ್ದು, 1,277 ಜನರು ಗಾಯಗೊಂಡಿದ್ದಾರೆ. ಅದೇ ವೇಳೆ ಇರಾನ್‌ ನಡೆಸಿದ ದಾಳಿಯಲ್ಲಿ 14 ಇಸ್ರೇಲಿ ನಾಗರಿಕರು ಸಾವನ್ನಪ್ಪಿದ್ದು, 390 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಉತ್ತರಾಖಂಡ್‌ ಹೆಲಿಕಾಪ್ಟರ್‌ ಪತನ – 15 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿದ್ದ ಪೈಲಟ್‌ಗಿತ್ತು ಅಪಾರ ಅನುಭವ

  • ನಮ್ಮ ತಂಟೆಗೆ ಬಂದ್ರೆ ಹಿಂದೆಂದೂ ನೋಡಿರದ ಮಿಲಿಟರಿ ಬಲವನ್ನು ಎದುರಿಸಬೇಕಾಗುತ್ತೆ – ಇರಾನ್‌ಗೆ ಟ್ರಂಪ್‌ ಬಿಗ್‌ ವಾರ್ನಿಂಗ್‌

    ನಮ್ಮ ತಂಟೆಗೆ ಬಂದ್ರೆ ಹಿಂದೆಂದೂ ನೋಡಿರದ ಮಿಲಿಟರಿ ಬಲವನ್ನು ಎದುರಿಸಬೇಕಾಗುತ್ತೆ – ಇರಾನ್‌ಗೆ ಟ್ರಂಪ್‌ ಬಿಗ್‌ ವಾರ್ನಿಂಗ್‌

    – ಇರಾನ್‌ ಮೇಲಿನ ದಾಳಿಗೆ ಇಸ್ರೇಲ್‌ ಅಮೆರಿಕದ ಶಸ್ತ್ರಾಸ್ತ್ರ ಬಳಸಿಕೊಂಡಿದೆ

    ವಾಷಿಂಗ್ಟನ್‌/ಟೆಹ್ರಾನ್‌: ಇಸ್ರೇಲ್‌ ನಡೆಸಿದ ವಾಯುದಾಳಿಗೂ (Israel Air Strike) ನಮಗೂ ಯಾವುದೇ ಸಂಬಂಧವಿಲ್ಲ. ಒಂದು ವೇಳೆ ಇರಾನ್‌ ಅಮೆರಿಕದ ಮೇಲೆ ದಾಳಿ ಮಾಡಿದ್ರೆ, ಹಿಂದೆಂದೂ ನೋಡಿರದ ಮಟ್ಟದಲ್ಲಿ ನಮ್ಮ ಮಿಲಿಟರಿ ಬಲವನ್ನು ಎದುರಿಸಬೇಕಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಎಚ್ಚರಿಕೆ ನೀಡಿದ್ದಾರೆ.

    ಇಸ್ರೇಲ್‌ ನೆರವಿಗೆ ಬಂದರೆ ನಿಮ್ಮ ನೌಕಾನೆಲೆಗಳನ್ನು ಧ್ವಂಸಗೊಳಿಸ್ತೇವೆ ಎಂದು ಇರಾನ್‌ (Iran) ಎಚ್ಚರಿಕೆ ನೀಡಿದ ಬೆನ್ನಲ್ಲೇ ಟ್ರಂಪ್‌ ವಾರ್ನಿಂಗ್‌ ಕೊಟ್ಟಿದ್ದಾರೆ. ಇರಾನ್‌ನ ಅಣ್ವಸ್ತ್ರ ಮತ್ತು ಮಿಲಿಟರಿ ನೆಲೆಗಳ ಮೇಲಿನ ಇಸ್ರೇಲ್‌ ದಾಳಿಗೂ ನಮಗೂ ಯಾವುದೇ ಸಂಬಂಧವಿಲ್ಲ. ಇರಾನ್‌ ನಮ್ಮ ಮೇಲೆ ಯಾವುದೇ ರೀತಿಯಲ್ಲಿ ದಾಳಿ ಮಾಡಿದ್ರೆ ಅಮೆರಿಕದ ಪಡೆಗಳ ಸಂಪೂರ್ಣ ಶಕ್ತಿ ಅಲ್ಲಿ ಬಂದಿಳಿಯಲಿದೆ. ಇಂದೆಂದೂ ನೋಡಿರದ ಮಟ್ಟದಲ್ಲಿ ಸೇನಾ ಬಲವನ್ನು (US Armed Forces) ಎದುರಿಸಬೇಕಾಗುತ್ತದೆ ಎಂದು ಭೀಕರ ದಾಳಿಯ ಮುನ್ಸೂಚನೆ ನೀಡಿದ್ದಾರೆ. ಇದನ್ನೂ ಓದಿ: Israel vs Iran War: ಹೊತ್ತಿ ಉರಿದ ಟೆಹ್ರಾನ್‌- ತೈಲ ಡಿಪೋ ಮೇಲೆ ಇಸ್ರೇಲ್‌ ದಾಳಿ 

    ಒಂದು ಕಾಲದಲ್ಲಿ ಇರಾನ್ ಸಾಮ್ರಾಜ್ಯ ಎಂದು ಕರೆಯಲ್ಪಡುತ್ತಿತ್ತು, ಈಗ ಅವರಲ್ಲಿ ಏನೂ ಉಳಿದಿಲ್ಲ. ಇರಾನ್‌ನ ಪರಿಸ್ಥಿತಿ ಕುರಿತಂತೆ ರಾಷ್ಟ್ರೀಯ ಭದ್ರತಾ ತಂಡದ ಜೊತೆ ಮಾತುಕತೆ ನಡೆಸಿದ್ದೇನೆ. ದಾಳಿಯಲ್ಲಿ ನಮ್ಮ ದೇಶದ ಯಾವುದೇ ಪಾತ್ರವಿಲ್ಲ. ಆದರೆ, ಇರಾನ್ ಮೇಲಿನ ದಾಳಿಗೆ ಅಮೆರಿಕದ ಶಸ್ತ್ರಾಸ್ತ್ರಗಳನ್ನು ಇಸ್ರೇಲ್ ಬಳಸಿಕೊಂಡಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಕ್ಷಿಪಣಿ ದಾಳಿ, ಪ್ರತಿದಾಳಿ – ಇರಾನ್‌, ಇಸ್ರೇಲ್‌ನಲ್ಲಿ 80 ಮಂದಿ ಸಾವು

    ಇನ್ನಷ್ಟು ವಿನಾಶವಾಗುವ ಮುನ್ನ ಇರಾನ್ ಒಪ್ಪಂದಕ್ಕೆ ಬರಲು ಮತ್ತೊಂದು ಅವಕಾಶವಿದೆ. ಇರಾನ್ ಮತ್ತು ಇಸ್ರೇಲ್ ನಡುವೆ ಸುಲಭವಾಗಿ ಒಪ್ಪಂದ ಮಾಡಿಕೊಳ್ಳಬಹುದು. ಜೊತೆಗೆ ಈ ರಕ್ತಸಿಕ್ತ ಸಂಘರ್ಷವನ್ನು ಕೊನೆಗೊಳಿಸಬಹುದು ಎಂದು ತಮ್ಮ ಸೋಷಿಯಲ್‌ ಮೀಡಿಯಾ ವೇದಿಕೆ ‘ಟ್ರುತ್ ಸೋಶಿಯಲ್’ನಲ್ಲಿ ಅಭಿಪ್ರಯಾ ಹಂಚಿಕೊಂಡಿದ್ದಾರೆ. ಅಲ್ಲದೇ ಇರಾನ್ ತನ್ನ ಪರಮಾಣು ಯೋಜನೆಗಳನ್ನು ಸ್ಥಗಿತಗೊಳಿಸುವ ಸಂಬಂಧ ಶೀಘ್ರ ಒಪ್ಪಂದಕ್ಕೆ ಬರುವಂತೆ ಒತ್ತಾಯಿಸಿದ್ದಾರೆ.

    ಇರಾನ್‌-ಇಸ್ರೇಲ್‌ ನಡುವಿನ ಸಂಘರ್ಷ ತೀವ್ರಗೊಂಡಿದ್ದು ಮಧ್ಯಪ್ರಾಚ್ಯದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನೂ ಓದಿ:  ಗೋಲ್ಡ್‌ ಪ್ರಿಯರಿಗೆ ಶಾಕ್‌ – 1 ವಾರದಲ್ಲಿ ಚಿನ್ನದ ದರ 3,645 ರೂ. ಏರಿಕೆ