Tag: Israel

  • ಇಸ್ರೇಲ್‌ ಮೇಲೆ ಹಮಾಸ್‌ ಉಗ್ರರ ದಾಳಿ ಖಂಡಿಸಿದ ಮೊದಲ ಮುಸ್ಲಿಂ ರಾಷ್ಟ್ರ

    ಇಸ್ರೇಲ್‌ ಮೇಲೆ ಹಮಾಸ್‌ ಉಗ್ರರ ದಾಳಿ ಖಂಡಿಸಿದ ಮೊದಲ ಮುಸ್ಲಿಂ ರಾಷ್ಟ್ರ

    ಟೆಲ್‌ ಅವಿವ್‌: ಇಸ್ರೇಲಿಗಳ (Israel) ಮೇಲೆ ಹಮಾಸ್‌ ಬಂಡುಕೋರರು (Hamas) ನಡೆಸುತ್ತಿರುವ ದಾಳಿಯನ್ನು ಯುಎಇ (ಸಂಯುಕ್ತ ಅರಬ್‌ ಒಕ್ಕೂಟ) ಖಂಡಿಸಿದೆ. ಹಮಾಸ್‌ ದಾಳಿಯನ್ನು ಖಂಡಿಸಿದ ಮೊದಲ ಮುಸ್ಲಿಂ ರಾಷ್ಟ್ರವಾಗಿದೆ.

    ಜನಸಂಖ್ಯಾ ಕೇಂದ್ರಗಳ ಮೇಲೆ ಸಾವಿರಾರು ರಾಕೆಟ್‌ಗಳ ಹಾರಾಟ ಸೇರಿದಂತೆ ಗಾಜಾ ಪಟ್ಟಿಯ ಸಮೀಪವಿರುವ ಇಸ್ರೇಲಿ ಪಟ್ಟಣಗಳು ಮತ್ತು ಹಳ್ಳಿಗಳ ಮೇಲೆ ಹಮಾಸ್‌ನ ದಾಳಿಗಳು ಗಂಭೀರ ಸ್ವರೂಪದ್ದಾಗಿವೆ. ಇಸ್ರೇಲಿ ನಾಗರಿಕರನ್ನು ಅವರ ಮನೆಗಳಿಂದ ಒತ್ತೆಯಾಳುಗಳಾಗಿ ಅಪಹರಿಸಿರುವುದು ಕಳವಳಕಾರಿಯಾಗಿದೆ. ಎರಡೂ ಕಡೆಯ ನಾಗರಿಕರು ಅಂತಾರಾಷ್ಟ್ರೀಯ ಮಾನವೀಯ ಕಾನೂನಿನ ಅಡಿಯಲ್ಲಿ ಸಂಪೂರ್ಣ ರಕ್ಷಣೆ ಹೊಂದಿರಬೇಕು. ಎಂದಿಗೂ ಯಾರೂ ಸಂಘರ್ಷಕ್ಕೆ ಗುರಿಯಾಗಬಾರದು ಎಂದು ದಾಳಿಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಯುಎಇ ವಿದೇಶಾಂಗ ಸಚಿವಾಲಯ ಖಂಡನೆ ವ್ಯಕ್ತಪಡಿಸಿದೆ. ಇದನ್ನೂ ಓದಿ: ಯುವತಿ ಅಪಹರಿಸಿ ಒತ್ತೆಯಾಳಾಗಿರಿಸಿಕೊಂಡ ಹಮಾಸ್ ಉಗ್ರರು

    ದಾಳಿಯ ಬಲಿಪಶುಗಳ ಕುಟುಂಬಗಳಿಗೆ ಯುಎಇ ತನ್ನ ಸಂತಾಪ ವ್ಯಕ್ತಪಡಿಸುತ್ತದೆ. ಎರಡೂ ಕಡೆಯ ಈ ಮುಖಾಮುಖಿಯನ್ನು ತಡೆಗಟ್ಟಲು ರಾಜತಾಂತ್ರಿಕ ಪ್ರಯತ್ನಗಳ ಅಗತ್ಯವಿದೆ. ಹಿಂಸಾಚಾರದಿಂದ ಆಗಿರುವ ಜೀವಹಾನಿಗೆ ತೀವ್ರವಾಗಿ ದುಃಖಿಸುತ್ತದೆ. ನಾಗರಿಕ ಜೀವನ ಮತ್ತು ಸೌಲಭ್ಯಗಳ ಮೇಲೆ ಪರಿಣಾಮ ಬೀರುತ್ತಿರುವ ಹಿಂಸಾಚಾರ ಕೊನೆಗಾಣಿಸಬೇಕು ಎಂದು ಎರಡೂ ಕಡೆಯವರಿಗೆ ಯುಎಇ ಸಲಹೆ ನೀಡಿದೆ.

    ಎಲ್ಲಾ ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ಪಾಲುದಾರರೊಂದಿಗೆ ಯುಎಇ ನಿಕಟ ಸಂಪರ್ಕದಲ್ಲಿದೆ. ಪರಿಸ್ಥಿತಿಯನ್ನು ತ್ವರಿತವಾಗಿ ತಗ್ಗಿಸಿ ಶಾಂತಿ ಪುನಃಸ್ಥಾಪಿಸಲು, ಪ್ಯಾಲೆಸ್ಟೀನಿಯನ್ನರು ಮತ್ತು ಇಸ್ರೇಲಿಗಳು ಶಾಂತಿ ಮಾತುಕತೆಗೆ ಮರಳಬೇಕು. ಪ್ರತಿಯೊಬ್ಬರೂ ಶಾಂತಿ ಮತ್ತು ಘನತೆಯಿಂದ ಬದುಕಲು ಅರ್ಹರು ಎಂದು ಒತ್ತಿ ಹೇಳಿದೆ. ಇದನ್ನೂ ಓದಿ: ಯುದ್ಧ ನಾವು ಆರಂಭಿಸಿಲ್ಲ ಆದ್ರೆ ಮುಗಿಸುತ್ತೇವೆ – ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುಡುಗು

    ಅಕ್ಟೋಬರ್ 7 ರಂದು ಹಮಾಸ್ ಬಂಡುಕೋರರು ಇಸ್ರೇಲ್ ಮೇಲೆ ಹಠಾತ್‌ ದಾಳಿ ನಡೆಸಿದರು. ದೇಶದ ದಕ್ಷಿಣ ಮತ್ತು ಮಧ್ಯ ಭಾಗಗಳಿಗೆ ರಾಕೆಟ್‌ಗಳ ಸುರಿಮಳೆ ಸುರಿಸಿ 700 ಕ್ಕೂ ಹೆಚ್ಚು ಜನರನ್ನು ಹತ್ಯೆ ಮಾಡಲಾಯಿತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪ್ಯಾಲೆಸ್ತೀನ್‌ನಲ್ಲಿರುವ ಭಯೋತ್ಪಾದಕರಿಗೆ ಕಾಂಗ್ರೆಸ್‌ ಬೆಂಬಲ: ಬೊಮ್ಮಾಯಿ ಆರೋಪ

    ಪ್ಯಾಲೆಸ್ತೀನ್‌ನಲ್ಲಿರುವ ಭಯೋತ್ಪಾದಕರಿಗೆ ಕಾಂಗ್ರೆಸ್‌ ಬೆಂಬಲ: ಬೊಮ್ಮಾಯಿ ಆರೋಪ

    ಹುಬ್ಬಳ್ಳಿ: ಪ್ಯಾಲೆಸ್ತೀನ್‌ನಲ್ಲಿರುವ ಭಯೋತ್ಪಾದಕರಿಗೆ (Paletine Terrorists) ಕಾಂಗ್ರೆಸ್ ಬೆಂಬಲ ನೀಡುತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಲ್ಲಾ ಭಯೋತ್ಪಾದಕರು ಒಂದೇ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಕಿಡಿಕಾರಿದರು.

    ಹುಬ್ಬಳ್ಳಿಯಲ್ಲಿ (Hubballi) ಮಾತನಾಡಿದ ಬೊಮ್ಮಾಯಿ ಅವರು, ಅಮಾಯಕರು, ಹೆಣ್ಣುಮಕ್ಕಳು, ಮಕ್ಕಳ ಮೇಲೆ ಬಾಂಬ್ ದಾಳಿ ಮಾಡಲಾಗುತ್ತಿದೆ. ಇದನ್ನು ಯಾವುದೇ ಸಮಾಜ ಹಾಗೂ ಸಮುದಾಯ ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಇಸ್ರೇಲ್-ಪ್ಯಾಲೆಸ್ತೀನ್ ಯುದ್ಧ; 60 ಕ್ಕೂ ಹೆಚ್ಚು ವಿದೇಶಿ ಪ್ರಜೆಗಳು ಸಾವು – ಯಾವ ದೇಶದ ಎಷ್ಟು ಮಂದಿ?

    ಇದೊಂದು ಅಂತಾರಾಷ್ಟ್ರೀಯ ವಿಚಾರ. ಇಸ್ರೇಲ್ ಹಾಗೂ ಪ್ಯಾಲೆಸ್ತೀನ್ ನಡುವೆ ಬಹಳ ವರ್ಷದ ಸಂಘರ್ಷ ಇದೆ.‌ ಪ್ಯಾಲೆಸ್ತೀನ್ ಹಮಾಸ್ ಉಗ್ರವಾದಿಗಳು ಪ್ಯಾಲೆಸ್ತೀನ್ ನಾಗರಿಕರಲ್ಲ. ಅದನ್ನು ಕಾಂಗ್ರೆಸ್ ಮರೆಮಾಚಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್ (Congress) ಮತ್ತೆ ತುಷ್ಟೀಕರಣದ ರಾಜಕಾರಣಕ್ಕೆ ಇಳಿಯುತ್ತಿದೆ. ಇದು ದೊಡ್ಡ ದುರಂತ ಎಂದು ಅಸಮಾಧಾನ ಹೊರಹಾಕಿದರು.

    ಹಿಂದಿನ ಕಾಂಗ್ರೆಸ್ ಸರ್ಕಾರ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಬಹುದಿತ್ತು. ಚುನಾವಣೆ ಬಂತು ಅಂತ ಆ ಸಮಯದಲ್ಲಿ ಮಾಡಲಿಲ್ಲ. ಈಗ ಈ ಬಗ್ಗೆ ಮಾತನಾಡುತ್ತಾರೆ. ಅದು ಜಾತಿಗಣತಿ ಹೌದೋ ಅಲ್ಲೋ ಅನ್ನೋದರ ಬಗ್ಗೆ ಸ್ಪಷ್ಟತೆ ಇಲ್ಲ. ಈ ಬಗ್ಗೆ ಸ್ಪಷ್ಟತೆಯನ್ನು ನೀಡಬೇಕು ಎಂದರು. ಇದನ್ನೂ ಓದಿ: ಲಂಡನ್‌ನಲ್ಲಿ ಇಸ್ರೇಲ್‌, ಪ್ಯಾಲಿಸ್ತೀನ್‌ ಪರ ಪ್ರತಿಭಟನಾಕಾರರ ನಡುವೆ ಘರ್ಷಣೆ

    160 ಕೋಟಿ ಖರ್ಚು ಮಾಡಿ ಜಾತಿ ಸಮೀಕ್ಷೆ ಮಾಡಿದ್ದು, ಅದು ಯಾವ ಜಾತಿ ಸಮೀಕ್ಷೆ ಎನ್ನುವ ಸ್ಪಷ್ಟತೆ ಇಲ್ಲ. ಅದರ ಬಗ್ಗೆ ಸ್ಪಷ್ಟತೆಯನ್ನು ಸರ್ಕಾರ ಮೊದಲು ಕೊಡಲಿ. ವರದಿ ಆಧಾರದ ಮೇಲೆ ಸಾಧಕ-ಬಾಧಕಗಳ ಕುರಿತು ಚರ್ಚಿಸೋಣ ಅಂತ ಕಾಂಗ್ರೆಸ್ಸಿನ ನಾಯಕರು ಹೇಳಿದ್ದಾರೆ. ಈ ಸಮೀಕ್ಷೆಯ ಫಲಶ್ರುತಿ ಸಮಾಜದ ಮೇಲೆ ಯಾವ ಪರಿಣಾಮ ಬೀರುತ್ತೆ? ಅದರ ಫಲಿತಾಂಶ ಏನಾಗುತ್ತೆ? ಕೆಲವರ್ಗದಲ್ಲಿ ಅಸಮಾಧಾನ ಉಂಟಾಗುತ್ತಾ? ಈ ಬಗ್ಗೆ ಮೊದಲು ಚರ್ಚೆಯಾಗಲಿ ಎಂದು ತಾಕೀತು ಮಾಡಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಯುದ್ಧ ನಾವು ಆರಂಭಿಸಿಲ್ಲ ಆದ್ರೆ ಮುಗಿಸುತ್ತೇವೆ – ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುಡುಗು

    ಯುದ್ಧ ನಾವು ಆರಂಭಿಸಿಲ್ಲ ಆದ್ರೆ ಮುಗಿಸುತ್ತೇವೆ – ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುಡುಗು

    ನವದೆಹಲಿ: ನಮಗೆ ಈ ಯುದ್ಧ ಬೇಕಾಗಿಲ್ಲ, ನಾವು ಯುದ್ಧ ಆರಂಭಿಸಲಿಲ್ಲ, ಆದ್ರೆ ಹಮಾಸ್ ಆರಂಭಿಸಿರುವ ಯುದ್ಧವನ್ನು (Israel Hamas war) ನಾವು ಅಂತ್ಯಗೊಳಿಸುತ್ತೇವೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು (Benjamin Netanyahu) ಎಚ್ಚರಿಕೆ ನೀಡಿದ್ದಾರೆ.

    ಮಂಗಳವಾರ (ಅ.10) ಮತ್ತೊಂದು ವೀಡಿಯೋ ಬಿಡುಗಡೆ ಮಾಡಿರುವ ಇಸ್ರೇಲ್‌ ಪ್ರಧಾನಿ ಯುದ್ಧದ ಬಗ್ಗೆ ಮಾತನಾಡಿದ್ದಾರೆ. ನಮಗೆ ಈ ಯುದ್ಧ ಬೇಕಾಗಿಲ್ಲ, ಅತ್ಯಂತ ಕ್ರೂರ ಮತ್ತು ಅನಾಗರಿಕ ರೀತಿಯಲ್ಲಿ ನಮ್ಮ ಮೇಲೆ ಬಲವಂತದಿಂದ ಯುದ್ಧ ಹೇರಲಾಯಿತು. ಇಸ್ರೇಲ್ (Hamas) ಈ ಯುದ್ಧವನ್ನ ಪ್ರಾರಂಭಿಸದಿದ್ದರೂ ಅದನ್ನು ಮುಗಿಸುತ್ತದೆ. ಈ ಯುದ್ಧವನ್ನು ಇಸ್ರೇಲ್ ಗೆಲ್ಲುತ್ತದೆ, ನಾವು ಗೆದ್ದಾಗ, ಇಡೀ ನಾಗರಿಕ ಜಗತ್ತು ಗೆಲ್ಲುತ್ತದೆ ಎಂದು ಅವರು ಗುಡುಗಿದ್ದಾರೆ.

    ಇಸ್ರೇಲ್ ಮೇಲೆ ದಾಳಿ ಮಾಡುವ ಮೂಲಕ ಹಮಾಸ್ ಉಗ್ರರು ತುಂಬಾ ದೊಡ್ಡ ತಪ್ಪು ಮಾಡಿದ್ದಾರೆ ಒತ್ತಿ ಎಂದು ಒತ್ತಿಹೇಳುತ್ತಾ, ಒಮ್ಮೆ, ಯಹೂದಿ ಜನರು ರಾಷ್ಟ್ರಹೀನರಾಗಿದ್ದರು, ಒಮ್ಮೆ ಯಹೂದಿಗಳು ರಕ್ಷಣೆಯಿಲ್ಲದವರಾಗಿದ್ದರು, ಆದ್ರೆ ಇನ್ಮುಂದೆ ನಾವು ಬೆಲೆಯನ್ನು ನಿಗದಿಪಡಿಸುತ್ತೇವೆ. ಇಸ್ರೇಲ್‌ನ ಇತರ ಶತ್ರುಗಳು ಮುಂಬರುವ ದಶಕಗಳವರೆಗೆ ಬೆಲೆ ಕಟ್ಟಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಗಾಜಾ ಸೀಜ್‌ಗೆ ಇಸ್ರೇಲ್ ಆದೇಶದ ಬೆನ್ನಲ್ಲೇ ಒತ್ತೆಯಾಳುಗಳನ್ನು ಕೊಲ್ಲುವ ಬೆದರಿಕೆ ಹಾಕಿದ ಹಮಾಸ್

    ಇಸ್ರೇಲಿ ಕುಟುಂಬಗಳನ್ನು ಅವರ ಮನೆಗಳಲ್ಲಿ ಹತ್ಯೆ ಮಾಡಿದೆ, ಹೊರಾಂಗಣ ಉತ್ಸವದಲ್ಲಿ ನೂರಾರು ಯುವಕರನ್ನು ಕಗ್ಗೊಲೆ ಮಾಡಲಾಗಿದೆ. ಹತ್ಯಾಕಾಂಡದಿಂದ ಬದುಕುಳಿದ ಹಲವಾರು ಮಹಿಳೆಯರು, ಮಕ್ಕಳು ಮತ್ತು ವೃದ್ಧರನ್ನ ಅಪಹರಿಸಲಾಗಿದೆ. ಹಮಾಸ್ ಉಗ್ರರು (Hamas Terrorists) ಮಕ್ಕಳನ್ನೂ ಬಂಧಿಸಿದ್ದಾರೆ, ಕೆಲವರನ್ನ ಸುಟ್ಟುಹಾಕಿದ್ದಾರೆ ಮತ್ತು ಗಲ್ಲಿಗೇರಿಸಿದ್ದಾರೆ ಎಂದು ವಿಷಾದಿಸಿದ್ದಾರೆ. ಇದನ್ನೂ ಓದಿ: ಇಸ್ರೇಲ್-ಪ್ಯಾಲೆಸ್ತೀನ್ ಯುದ್ಧ; 60 ಕ್ಕೂ ಹೆಚ್ಚು ವಿದೇಶಿ ಪ್ರಜೆಗಳು ಸಾವು – ಯಾವ ದೇಶದ ಎಷ್ಟು ಮಂದಿ?

    ಹಮಾಸ್ ಮತ್ತು ಐಸಿಸ್ (ISIS) ನಡುವೆ ಹೋಲಿಕೆ ಮಾಡಿದ ನೆತನ್ಯಾಹು ಅದರ ಮಿತ್ರರಾಷ್ಟ್ರಗಳ ಬೆಂಬಲಕ್ಕೆ ಕರೆ ನೀಡಿದರು. ಹಮಾಸ್ ಐಸಿಸ್ ಆಗಿದೆ ಮತ್ತು ಐಸಿಸ್ ಅನ್ನು ಸೋಲಿಸಲು ನಾಗರಿಕತೆ ಶಕ್ತಿಗಳು ಒಗ್ಗೂಡಿದಂತೆಯೇ, ಹಮಾಸ್ ಅನ್ನು ಸೋಲಿಸುವಲ್ಲಿ ಇಸ್ರೇಲ್ ಅನ್ನು ನಾಗರಿಕತೆಯ ಶಕ್ತಿಗಳು ಬೆಂಬಲಿಸಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಇಸ್ರೇಲ್-ಹಮಾಸ್ ಭೀಕರ ಸಂಘರ್ಷ – 1,100 ಸಾವು, ಸಂಗೀತ ಉತ್ಸವದಲ್ಲಿ 260 ಶವ ಪತ್ತೆ

    ಇದೇ ವೇಳೆ ಯುದ್ಧ ಪ್ರಾರಂಭವಾದಾಗಿನಿಂದ ಇಸ್ರೇಲ್‌ಗೆ ಬೆಂಬಲ ನೀಡಿದ ದೇಶಗಳಿಗೆ ಅವರು ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಅಮೆರಿಕ ಅಧ್ಯಕ್ಷ ಬಿಡೆನ್ ಅವರ ಬೆಂಬಲಕ್ಕಾಗಿ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಇಂದು ಇಸ್ರೇಲ್‌ಗೆ ಬೆಂಬಲವಾಗಿ ನಿಂತಿರುವ ವಿಶ್ವನಾಯಕರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ನಾನು ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ ಜನರಿಗೆ ಮತ್ತು ಕಾಂಗ್ರೆಸ್‌ಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ನೆತನ್ಯಾಹು ಹೇಳಿದರು. ಇದನ್ನೂ ಓದಿ: ಅಫ್ಘಾನ್ ಪ್ರಬಲ ಭೂಕಂಪಕ್ಕೆ ಬಲಿಯಾದವರ ಸಂಖ್ಯೆ 2,000ಕ್ಕೆ ಏರಿಕೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಸ್ರೇಲ್-ಪ್ಯಾಲೆಸ್ತೀನ್ ಯುದ್ಧ; 60 ಕ್ಕೂ ಹೆಚ್ಚು ವಿದೇಶಿ ಪ್ರಜೆಗಳು ಸಾವು – ಯಾವ ದೇಶದ ಎಷ್ಟು ಮಂದಿ?

    ಇಸ್ರೇಲ್-ಪ್ಯಾಲೆಸ್ತೀನ್ ಯುದ್ಧ; 60 ಕ್ಕೂ ಹೆಚ್ಚು ವಿದೇಶಿ ಪ್ರಜೆಗಳು ಸಾವು – ಯಾವ ದೇಶದ ಎಷ್ಟು ಮಂದಿ?

    ಟೆಲ್‌ ಅವಿವ್‌: ಇಸ್ರೇಲ್‌-ಪ್ಯಾಲೆಸ್ತೀನ್‌ (Israel-Palestine) ನಡುವಿನ ಯುದ್ಧದಲ್ಲಿ 60 ಕ್ಕೂ ಹೆಚ್ಚು ಪ್ರಜೆಗಳು ಸಾವನ್ನಪ್ಪಿದ್ದಾರೆ. ಯಾವ ದೇಶದ ಎಷ್ಟು ಮಂದಿ ಮೃತಪಟ್ಟಿದ್ದಾರೆ ಮತ್ತು ಕಾಣೆಯಾಗಿದ್ದಾರೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

    ಯುದ್ಧದಲ್ಲಿ ಈವರೆಗೆ ಅಮೇರಿಕಾದ 9 ಮಂದಿ ಸಾವಿಗೀಡಾಗಿದ್ದಾರೆ. ಕೆನಡಾ – 1 (ಇಬ್ಬರು ಕಾಣೆ), ಗ್ರೇಟ್ ಬ್ರಿಟನ್ – 10 ಕ್ಕೂ ಹೆಚ್ಚು ಮಂದಿ ಸಾವು ಅಥವಾ ಕಾಣೆಯಾಗಿದ್ದಾರೆ. ಫ್ರಾನ್ಸ್ – 1 ಸಾವು (ಹಲವಾರು ಕಾಣೆ), ಥೈಲ್ಯಾಂಡ್ – 12 ಸಾವು (11 ಕಾಣೆ), ನೇಪಾಳ – 10 ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಲಂಡನ್‌ನಲ್ಲಿ ಇಸ್ರೇಲ್‌, ಪ್ಯಾಲಿಸ್ತೀನ್‌ ಪರ ಪ್ರತಿಭಟನಾಕಾರರ ನಡುವೆ ಘರ್ಷಣೆ

    ಜರ್ಮನಿ – ದೃಢೀಕರಿಸದ/ಕಾಣೆಯಾದ ಸಾವಿನ ಸಂಖ್ಯೆ, ರಷ್ಯಾ – 1, ಕಾಂಬೋಡಿಯಾ – 1, ಚೀನಾ – ಸಾವು/ಹಾನಿಗಳ ಸಂಖ್ಯೆಯನ್ನು ದೃಢೀಕರಿಸಲಾಗಿಲ್ಲ. ಬ್ರೆಜಿಲ್ – 3 ಮಂದಿ ಗಾಯಗೊಂಡಿದ್ದಾರೆ. ಪರಾಗ್ವೆ – 2 ಸಾವು ಅಥವಾ ಕಾಣೆ, ಉಕ್ರೇನ್ – ಇಬ್ಬರು ಮೃತಪಟ್ಟಿದ್ದಾರೆ.

    ಮೆಕ್ಸಿಕೋದ ಇಬ್ಬರು ಕೈದಿಗಳು, ಐರ್ಲೆಂಡ್‌ನ ಒಬ್ಬರು ಗಾಯಗೊಂಡಿದ್ದಾರೆ. ತಾಂಜಾನಿಯಾದ ಇಬ್ಬರು ಗಾಯಗೊಂಡಿದ್ದಾರೆ. ಇದನ್ನೂ ಓದಿ: ಗಾಜಾ ಸೀಜ್‌ಗೆ ಇಸ್ರೇಲ್ ಆದೇಶದ ಬೆನ್ನಲ್ಲೇ ಒತ್ತೆಯಾಳುಗಳನ್ನು ಕೊಲ್ಲುವ ಬೆದರಿಕೆ ಹಾಕಿದ ಹಮಾಸ್

    ಅಕ್ಟೋಬರ್ 7 ರಂದು ಹಮಾಸ್ (Hamas) ಬಂಡುಕೋರರು ಇಸ್ರೇಲ್ ಮೇಲೆ ಹಠಾತ್‌ ದಾಳಿ ನಡೆಸಿದರು. ದೇಶದ ದಕ್ಷಿಣ ಮತ್ತು ಮಧ್ಯ ಭಾಗಗಳಿಗೆ ರಾಕೆಟ್‌ಗಳ ಸುರಿಮಳೆ ಸುರಿಸಿ 700 ಕ್ಕೂ ಹೆಚ್ಚು ಜನರನ್ನು ಹತ್ಯೆ ಮಾಡಲಾಯಿತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗಾಜಾ ಸೀಜ್‌ಗೆ ಇಸ್ರೇಲ್ ಆದೇಶದ ಬೆನ್ನಲ್ಲೇ ಒತ್ತೆಯಾಳುಗಳನ್ನು ಕೊಲ್ಲುವ ಬೆದರಿಕೆ ಹಾಕಿದ ಹಮಾಸ್

    ಗಾಜಾ ಸೀಜ್‌ಗೆ ಇಸ್ರೇಲ್ ಆದೇಶದ ಬೆನ್ನಲ್ಲೇ ಒತ್ತೆಯಾಳುಗಳನ್ನು ಕೊಲ್ಲುವ ಬೆದರಿಕೆ ಹಾಕಿದ ಹಮಾಸ್

    ಟೆಲ್ ಅವಿವ್: ಇಸ್ರೇಲ್‌ನ (Israel) ರಕ್ಷಣಾ ಸಚಿವ ಯೋವ್ ಗ್ಯಾಲಟ್ ಸೋಮವಾರ ಗಾಜಾದ (Gaza) ಮೇಲೆ ಸಂಪೂರ್ಣ ಮುತ್ತಿಗೆಯ ಆದೇಶ ಹೊರಡಿಸಿದೆ. ಇದಾದ ನಂತರ ಪ್ಯಾಲೆಸ್ಟೀನ್ ಹಮಾಸ್ (Hamas) ಗುಂಪು ಒತ್ತೆಯಾಳಾಗಿ (Hostage) ಇಟ್ಟಿರುವ ನೂರಾರು ಇಸ್ರೇಲಿ ನಾಗರಿಕರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದೆ.

    ಇಸ್ರೇಲ್ ಗಾಜಾವನ್ನು ಸಂಪೂರ್ಣ ಸೀಜ್ ಮಾಡಿದ್ದು, ವಿದ್ಯುತ್, ಆಹಾರ, ನೀರು, ಗೃಹ ಅಥವಾ ವಾಣಿಜ್ಯ ಬಳಕೆ ಅನಿಲ ಪೂರೈಕೆಯನ್ನು ಸ್ಥಗಿತಗೊಳಿಸಿದೆ. ಇದರ ಬೆನ್ನಲ್ಲೇ ಎಚ್ಚರಿಕೆ ನೀಡಿದ ಹಮಾಸ್ ಸಶಸ್ತ್ರ ವಿಭಾಗ, ಯಾವುದೇ ಸೂಚನೆ ನೀಡದೆ ನಮ್ಮ ಜನರನ್ನು ಗುರಿಪಡಿಸಿದ್ದಲ್ಲಿ, ನಾವು ಒತ್ತೆಯಾಳಾಗಿ ಇಟ್ಟಿರುವವರಲ್ಲಿ ಒಬ್ಬೊಬ್ಬರನ್ನೇ ಕೊಲ್ಲಲಾಗುವುದು ಎಂದಿದೆ. ಈಗಾಗಲೇ ಇಸ್ರೇಲ್‌ನ ವೈಮಾನಿಕ ದಾಳಿಯಿಂದಾಗಿ ಒತ್ತೆಯಾಳಾಗಿದ್ದ ನಾಲ್ವರು ನಾಗರಿಕರು ಕೊಲ್ಲಲ್ಪಟ್ಟಿದ್ದಾಗಿ ಹಮಾಸ್ ಹೇಳಿಕೊಂಡಿದೆ. ಆದರೆ ಇದು ಖಚಿತವೇ ಎಂಬುದು ದೃಢವಾಗಿಲ್ಲ.

    ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಹಮಾಸ್‌ಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಅವರ ಸರ್ಕಾರ ಯುದ್ಧಕ್ಕೆ 3,00,000 ಸೈನಿಕರನ್ನು ಸಜ್ಜುಗೊಳಿಸಿದೆ ಎಂದು ವರದಿಯಾಗಿದೆ. ನಾವು ಈ ಯುದ್ಧವನ್ನು ಬಯಸಿರಲಿಲ್ಲ. ಆದರೆ ಇದು ಅತ್ಯಂತ ಕ್ರೂರ ಮತ್ತು ಅನಾಗರಿಕ ರೀತಿಯಲ್ಲಿ ನಮ್ಮ ಮೇಲೆ ದಾಳಿಮಾಡಿರುವುದು ಯುದ್ಧಕ್ಕೆ ಪ್ರಚೋದನೆ ನೀಡಿದೆ. ಆದರೆ ನಾವು ಈ ಯುದ್ಧವನ್ನು ಪ್ರಾರಂಭಿಸದಿದ್ದರೂ, ಇಸ್ರೇಲ್ ಅದನ್ನು ಮುಗಿಸುತ್ತದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಶೋಪಿಯಾನದಲ್ಲಿ ಇಬ್ಬರು ಲಷ್ಕರ್ ಉಗ್ರರ ಎನ್‍ಕೌಂಟರ್

    ಶನಿವಾರ ಪ್ರಾರಂಭವಾದ ಉದ್ವಿಗ್ನತೆಯಿಂದ ಇಲ್ಲಿಯವರೆಗೆ ಎರಡೂ ಕಡೆಗಳಿಂದ ಸುಮಾರು 1,600 ನಾಗರಿಕರು ಸಾವನ್ನಪ್ಪಿದ್ದಾರೆ. ಇಸ್ರೇಲ್‌ನಲ್ಲಿ 900ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರೆ, ಗಾಜಾದಲ್ಲಿ ಸಾವಿನ ಸಂಖ್ಯೆ 687ಕ್ಕೆ ಏರಿಕೆಯಾಗಿದೆ. ಇದನ್ನೂ ಓದಿ: ಹಮಾಸ್ ಉಗ್ರರ ನಡೆಗೆ ಮೋದಿ ಖಂಡನೆ- ಇಸ್ರೇಲ್ ಪರ ನಿಂತ ಭಾರತ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಮಾಸ್ ವಿರುದ್ಧ ಫೀಲ್ಡ್‌ಗಿಳಿದ ಇಸ್ರೇಲ್‍ನ ಮಾಜಿ ಪ್ರಧಾನಿ

    ಹಮಾಸ್ ವಿರುದ್ಧ ಫೀಲ್ಡ್‌ಗಿಳಿದ ಇಸ್ರೇಲ್‍ನ ಮಾಜಿ ಪ್ರಧಾನಿ

    ಟೆಲ್ ಅವಿವ್: ಹಮಾಸ್ ಉಗ್ರರ (Hamas Terrorists) ವಿರುದ್ಧ ಹೋರಾಡಲು ಸೇನೆಯೊಂದಿಗೆ ಇಸ್ರೇಲ್‍ನ (Israel) ಮಾಜಿ ಪ್ರಧಾನಿ ನಫ್ತಾಲಿ ಬೆನೆಟ್ ಸೇನೆಯೊಂದಿಗೆ ಕೈಜೋಡಿಸಿದ್ದಾರೆ.

    ಸೇನೆಯೊಂದಿಗೆ ಕಾರ್ಯಕ್ಕಿಳಿದು ಸೈನಿಕರೊಂದಿಗೆ ಆಪ್ತವಾಗಿ ಚರ್ಚಿಸಿದ್ದಾರೆ. ಬಳಿಕ ಹಮಾಸ್ ವಿರುದ್ಧದ ಸೇನೆಯ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಇದನ್ನೂ ಓದಿ: ವಿದ್ಯುತ್‌, ಆಹಾರ, ನೀರು ಪೂರೈಕೆ ಇಲ್ಲ; ಗಾಜಾ ಸಂಪೂರ್ಣ ಸೀಜ್‌ಗೆ ಇಸ್ರೇಲ್ ಆದೇಶ

    ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಎಲ್ಲಾ ಹಮಾಸ್ ತಾಣಗಳಿಂದ ದೂರ ಹೋಗುವಂತೆ ಗಾಜಾ ನಾಗರಿಕರಿಗೆ ಎಚ್ಚರಿಕೆ ನೀಡಿದ್ದಾರೆ. ಆ ನಗರವನ್ನು ಸಂಪೂರ್ಣವಾಗಿ ನಾಶ ಮಾಡಲಾಗುವುದು ಎಂದು ಅವರು ಘೋಷಿಸಿದ್ದಾರೆ. ಇದರ ಸಲುವಾಗಿ ಸುಮಾರು ಹತ್ತು ಸಾವಿರ ಸಂಖ್ಯೆಯಷ್ಟು ಸೈನಿಕರು ಮುತ್ತಿಗೆ ಹಾಕಿದ್ದಾರೆ.

    ಆಪರೇಷನ್ ಅಲ್-ಅಕ್ಸಾ ಎಂದು ಹೆಸರಿಟ್ಟು ಮುನ್ನುಗುತ್ತಿರುವ ಹಮಾಸ್ ಉಗ್ರರು ಅರಬ್ ಮತ್ತು ಇಸ್ಲಾಮಿಕ್ ರಾಷ್ಟ್ರಗಳು ಕೈಜೋಡಿಸುವಂತೆ ಕರೆ ನೀಡಿದ್ದಾರೆ. ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ನಾವು ಗೆಲುವಿನ ಅಂಚಿನಲ್ಲಿದೆ ಎಂದು ಘೋಷಿಸಿಕೊಂಡಿದ್ದಾನೆ.

    ಯುದ್ಧದಲ್ಲಿ (War) ಎರಡೂ ಕಡೆಗಳಲ್ಲಿ ಕನಿಷ್ಠ 1,200 ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಕಳೆದ 14 ವರ್ಷಗಳಿಂದ ಇದ್ದು, ಭಯ ಇಲ್ಲ: ಇಸ್ರೇಲಿನಲ್ಲಿದ್ದ ಕನ್ನಡಿಗನ ಮಾತು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಸ್ರೇಲ್‍ನಲ್ಲಿ ಸಿಲುಕಿರುವ ಹಾಸನದ ಜನರ ಕರೆತರಲು ಹೆಚ್‍ಡಿಡಿ ಪ್ರಯತ್ನ

    ಇಸ್ರೇಲ್‍ನಲ್ಲಿ ಸಿಲುಕಿರುವ ಹಾಸನದ ಜನರ ಕರೆತರಲು ಹೆಚ್‍ಡಿಡಿ ಪ್ರಯತ್ನ

    ಹಾಸನ: ಯುದ್ಧ ಪೀಡಿತ ಇಸ್ರೇಲ್‍ನಲ್ಲಿರುವ (Israel) ಜಿಲ್ಲೆಯ (Hassan) 25ಕ್ಕೂ ಹೆಚ್ಚು ಜನರನ್ನು ಕರೆತರಲು ಕೇಂದ್ರ ಸಚಿವರ ಜೊತೆ ಮಾತನಾಡುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು (H.D. Deve Gowda) ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಸ್ರೇಲ್‍ನಲ್ಲಿ ಸಿಲುಕಿದ ಜಿಲ್ಲೆಯ ಜನರು ಸುರಕ್ಷಿತವಾಗಿದ್ದಾರೆ ಎಂಬ ಮಾಹಿತಿ ಇದೆ. ಅವರನ್ನು ಸುರಕ್ಷಿತವಾಗಿ ಕರೆತರಲು ಶಕ್ತಿಮೀರಿ ಪ್ರಯತ್ನಿಸುತ್ತೇನೆ. ಈ ಸಲುವಾಗಿ ಕೇಂದ್ರದೊಂದಿಗೆ ಚರ್ಚಿಸುತ್ತೇನೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ವಿದ್ಯುತ್‌, ಆಹಾರ, ನೀರು ಪೂರೈಕೆ ಇಲ್ಲ; ಗಾಜಾ ಸಂಪೂರ್ಣ ಸೀಜ್‌ಗೆ ಇಸ್ರೇಲ್ ಆದೇಶ

    ಈ ಬಗ್ಗೆ ತಕ್ಷಣವೇ ವಿದೇಶಾಂಗ ಸಚಿವರ ಜೊತೆ ಮಾತನಾಡುತ್ತೇನೆ. ಅಲ್ಲಿ ಭಾರತದವರು ಹೆಚ್ಚು ಮಂದಿ ಇದ್ದಾರೆ. ಜಿಲ್ಲೆಯ ಸಕಲೇಶಪುರ, ಬೇಲೂರು, ಚನ್ನರಾಯಪಟ್ಟಣದ ಮಂದಿ ಅಲ್ಲಿ ಸಿಲುಕಿದ್ದಾರೆ. ಅವರ ಹೆಸರುಗಳನ್ನು ತಿಳಿದುಕೊಂಡ ತಕ್ಷಣವೇ ಯಾವ ಪ್ರದೇಶದಲ್ಲಿ ಇದ್ದಾರೆ ಎಂದು ಮಾಹಿತಿ ಪಡೆದುಕೊಂಡು ಚರ್ಚಿಸುತ್ತೇನೆ. ಈ ವಿಚಾರವಾಗಿ ರಾಜ್ಯ ಸರ್ಕಾರಕ್ಕೂ ಮನವಿ ಮಾಡುತ್ತೇನೆ ಎಂದಿದ್ದಾರೆ.

    ಇಸ್ರೇಲ್ ಹಾಗೂ ಹಮಾಸ್ ಉಗ್ರರ ನಡುವಿನ ಯುದ್ಧದಲ್ಲಿ ಇಲ್ಲಿಯವರೆಗೂ 1,300 ಜನ ಮೃತಪಟ್ಟಿದ್ದಾರೆ. ಯುದ್ಧ ಇನ್ನೂ ಮುಂದುವರೆದಿದ್ದು ಎರಡೂ ಕಡೆಗಳಲ್ಲೂ ಸಾವು ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಪ್ಯಾಲೆಸ್ಟೈನ್‌ ಬೆಂಬಲಿಸಿ ನಿರ್ಣಯ ಕೈಗೊಂಡ ಕಾಂಗ್ರೆಸ್‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪ್ಯಾಲೆಸ್ಟೈನ್‌ ಬೆಂಬಲಿಸಿ ನಿರ್ಣಯ ಕೈಗೊಂಡ ಕಾಂಗ್ರೆಸ್‌

    ಪ್ಯಾಲೆಸ್ಟೈನ್‌ ಬೆಂಬಲಿಸಿ ನಿರ್ಣಯ ಕೈಗೊಂಡ ಕಾಂಗ್ರೆಸ್‌

    ನವದೆಹಲಿ: ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (CWC) ಪ್ಯಾಲೆಸ್ಟೈನ್‌ ಹಕ್ಕುಗಳನ್ನು (Palestinian Rights) ಬೆಂಬಲಿಸಿ ನಿರ್ಣಯ ಅಂಗೀಕರಿಸಿದೆ.

    ಇಂದು ನಡೆದ ಸಿಡಬ್ಲ್ಯೂಸಿ ಸಭೆಯಲ್ಲಿ ಇಸ್ರೇಲ್‌-ಪ್ಯಾಲೆಸ್ಟೈನ್‌ (Israel-Palestine) ಸಂಘರ್ಷದ ಬಗ್ಗೆ ದುಃಖ ವ್ಯಕ್ತಪಡಿಸಿ ಕದನ ವಿರಾಮಕ್ಕೆ ಕರೆ ನೀಡಿದೆ. ಅಷ್ಟೇ ಅಲ್ಲದೇ ಪ್ಯಾಲೆಸ್ಟೈನ್‌ ಜನರ ಹಕ್ಕುಗಳನ್ನು ಬೆಂಬಲಿಸಿದೆ.

    ಭಾನುವಾರ ಪ್ಯಾಲೆಸ್ಟೈನ್‌ ಉಗ್ರಗಾಮಿ ಗುಂಪು ಹಮಾಸ್‌ ಇಸ್ರೇಲ್ ಜನರ ಮೇಲಿನ ಕ್ರೂರ ದಾಳಿಯನ್ನು ಖಂಡಿಸಿದ ಒಂದು ದಿನದ ನಂತರ ಕಾಂಗ್ರೆಸ್ (Congress) ಸೋಮವಾರ ಪ್ಯಾಲೆಸ್ಟೀನಿಯಾದವರಿಗೆ ಬೆಂಬಲವನ್ನು ನೀಡಿದೆ.  ಇದನ್ನೂ ಓದಿ:  ಕಷ್ಟದ ಸಮಯದಲ್ಲಿ ಇಸ್ರೇಲ್ ಪರ ಒಗ್ಗಟ್ಟಿನಿಂದ ನಿಲ್ಲುತ್ತೇವೆ: ನರೇಂದ್ರ ಮೋದಿ

    ಸಭೆಯಲ್ಲಿ ಕಳೆದ ಎರಡು ದಿನಗಳಲ್ಲಿ ಸಾವಿರಕ್ಕೂ ಹೆಚ್ಚು ಜನರು ಕೊಲ್ಲಲ್ಪಟ್ಟ ಮಧ್ಯಪ್ರಾಚ್ಯದಲ್ಲಿ ನಡೆದ ಯುದ್ಧದ ಬಗ್ಗೆ ದುಃಖವನ್ನು ವ್ಯಕ್ತಪಡಿಸಿತು. ಭೂಮಿ, ಸರ್ಕಾರ ಮತ್ತು ಘನತೆ ಮತ್ತು ಗೌರವದಿಂದ ಬದುಕಲು ಪ್ಯಾಲೇಸ್ಟಿಯನ್ ಜನರ ಹಕ್ಕುಗಳಿಗಾಗಿ ಕಾಂಗ್ರೆಸ್‌ ನೀಡಿದ ದೀರ್ಘಕಾಲದ ಬೆಂಬಲವನ್ನು ಪುನರುಚ್ಚರಿಸುತ್ತದೆ ಎಂದು ಹೇಳಿದೆ.

    ಸಂಘರ್ಷಕ್ಕೆ ಕಾರಣವಾದ ಸಮಸ್ಯೆಗಳು ಸೇರಿದಂತೆ ಎಲ್ಲಾ ಬಾಕಿ ಉಳಿದಿರುವ ವಿಷಯಗಳ ಬಗ್ಗೆ ಮಾತುಕತೆ ಪ್ರಾರಂಭಿಸಬೇಕೆಂದು ಎಂದು ನಿರ್ಣಯ ಕೈಗೊಂಡಿದೆ. ಇದನ್ನೂ ಓದಿ: ವಿದ್ಯುತ್‌, ಆಹಾರ, ನೀರು ಪೂರೈಕೆ ಇಲ್ಲ; ಗಾಜಾ ಸಂಪೂರ್ಣ ಸೀಜ್‌ಗೆ ಇಸ್ರೇಲ್ ಆದೇಶ

    ಶನಿವಾರ ಹಮಾಸ್ ಉಗ್ರರು (Hamas Militants) ತಮ್ಮ ನಿಯಂತ್ರಣದಲ್ಲಿರುವ ಗಾಜಾಪಟ್ಟಿಯಿಂದ (Gaza Strip) ಇಸ್ರೇಲ್ (Israel) ಮೇಲೆ ಬರೋಬ್ಬರಿ 5,000 ರಾಕೆಟ್ ದಾಳಿ (Rocket Attack) ಮಾಡಿದ್ದರು. ಈ ದಾಳಿಯ ಬೆನ್ನಲ್ಲೇ ಇಸ್ರೇಲ್ ಈಗ ಯುದ್ಧ (War) ಘೋಷಣೆ ಮಾಡಿದೆ.


    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿದ್ಯುತ್‌, ಆಹಾರ, ನೀರು ಪೂರೈಕೆ ಇಲ್ಲ; ಗಾಜಾ ಸಂಪೂರ್ಣ ಸೀಜ್‌ಗೆ ಇಸ್ರೇಲ್ ಆದೇಶ

    ವಿದ್ಯುತ್‌, ಆಹಾರ, ನೀರು ಪೂರೈಕೆ ಇಲ್ಲ; ಗಾಜಾ ಸಂಪೂರ್ಣ ಸೀಜ್‌ಗೆ ಇಸ್ರೇಲ್ ಆದೇಶ

    ಟೆಲ್‌ ಅವಿವ್‌: ಇಸ್ರೇಲಿ (Israel) ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಸೋಮವಾರ ಗಾಜಾದಲ್ಲಿ ಸಂಪೂರ್ಣ ಬಂದ್‌ಗೆ ಆದೇಶ ಹೊರಡಿಸಿದ್ದಾರೆ. ಆ ಮೂಲಕ ಗಾಜಾದಲ್ಲಿ ವಿದ್ಯುತ್‌, ನೀರು, ಆಹಾರ ಪೂರೈಕೆಯನ್ನು ಸ್ಥಗಿತಗೊಳಿಸಲಾಗಿದೆ.

    ‘ನಾವು ಗಾಜಾವನ್ನು ಸಂಪೂರ್ಣ ಸೀಜ್‌ ಮಾಡಿದ್ದೇವೆ. ಇಲ್ಲಿ ವಿದ್ಯುತ್ ಇಲ್ಲ, ಆಹಾರವಿಲ್ಲ, ನೀರಿಲ್ಲ, ಗೃಹ ಅಥವಾ ವಾಣಿಜ್ಯ ಬಳಕೆ ಅನಿಲ ಪೂರೈಕೆ ಇರುವುದಿಲ್ಲ. ಎಲ್ಲವನ್ನೂ ಸ್ಥಗಿತಗೊಳಿಸಲಾಗಿದೆ’ ಎಂದು ಯೋವ್ ಗ್ಯಾಲಂಟ್ ವೀಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಹಮಾಸ್ ರಾಕೆಟ್ ದಾಳಿಯಿಂದ ಕೇರಳದ ಶೀಜಾ ಆನಂದ್‍ಗೆ ಗಾಯ

    ಹಮಾಸ್‌ (Hamas) ಭಯೋತ್ಪಾದಕರು ಶನಿವಾರ ಇಸ್ರೇಲ್‌ನ ಗಡಿಯುದ್ದಕ್ಕೂ ದಾಳಿ ನಡೆಸಿದರು. ಪರಿಣಾಮವಾಗಿ ದಕ್ಷಿಣ ಇಸ್ರೇಲ್‌ನಲ್ಲಿ 700 ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ. ಗಾಜಾದ ಸಮೀಪವಿರುವ ಸಮುದಾಯಗಳು ಮತ್ತು ಪಟ್ಟಣಗಳಲ್ಲಿನ ಜನರನ್ನು ಉಗ್ರರು ಗುಂಡಿಕ್ಕಿ ಕೊಂದಿದ್ದಾರೆ. ಇದಕ್ಕೆ ಪ್ರತಿಯಾಗಿ ಇಸ್ರೇಲಿ ಭದ್ರತಾ ಪಡೆಗಳು ಹೋರಾಟ ನಡೆಸುತ್ತಿವೆ.

    ಗಾಜಾಕ್ಕೆ ಸಮೀಪವಿರುವ ಕಿಬ್ಬುಟ್ಜ್ ರೀಮ್ ಬಳಿ ಇಸ್ರೇಲ್‌ನ ಯುವಜನತೆ ಮತ್ತು ವಿದೇಶಿಯರು ಭಾಗವಹಿಸಿದ್ದ ಸಂಗೀತ ಉತ್ಸವದಲ್ಲಿ ಹಮಾಸ್ ಬಂದೂಕುಧಾರಿಗಳು ದಾಳಿ ನಡೆಸಿದ್ದರು. ಅದರಲ್ಲೂ ಅಂದಾಜು 250 ಜನರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಕಳೆದ 14 ವರ್ಷಗಳಿಂದ ಇದ್ದು, ಭಯ ಇಲ್ಲ: ಇಸ್ರೇಲಿನಲ್ಲಿದ್ದ ಕನ್ನಡಿಗನ ಮಾತು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಯುದ್ಧಪೀಡಿತ ಇಸ್ರೇಲ್‌ನಲ್ಲಿ ಸಿಲುಕಿರೋ 20 ಕ್ಕೂ ಹೆಚ್ಚು ಕನ್ನಡಿಗರು

    ಯುದ್ಧಪೀಡಿತ ಇಸ್ರೇಲ್‌ನಲ್ಲಿ ಸಿಲುಕಿರೋ 20 ಕ್ಕೂ ಹೆಚ್ಚು ಕನ್ನಡಿಗರು

    ಹಾಸನ: ಯುದ್ಧಪೀಡಿತ ಇಸ್ರೇಲ್‌ನಲ್ಲಿ (Israel) ಹಾಸನ (Hassan) ಜಿಲ್ಲೆಯ 20 ಕ್ಕೂ ಹೆಚ್ಚು ಕನ್ನಡಿಗರು ಸಿಲುಕಿಕೊಂಡಿದ್ದಾರೆ. ಸಕಲೇಶಪುರ ತಾಲ್ಲೂಕಿನ ನವೀನ್‌ ಕುಟುಂಬದವರು, ನಾವು ಸುರಕ್ಷಿತವಾಗಿದ್ದೇವೆ ಎಂಬ ಸಂದೇಶವನ್ನು ತಮ್ಮ ಕುಟುಂಬಸ್ಥರಿಗೆ ರವಾನಿಸಿದ್ದಾರೆ.

    ಚನ್ನರಾಯಪಟ್ಟಣ ತಾಲ್ಲೂಕಿನ ಡಿಂಕ, ಸಕಲೇಶಪುರ ತಾಲ್ಲೂಕಿನ ಲಕ್ಕುಂದ, ಅಂಕಿಹಳ್ಳಿ, ಬೆಳಗೊಡು ಗ್ರಾಮದವರು ಇಸ್ರೇಲ್‌ನಲ್ಲಿ ನೆಲೆಸಿದ್ದಾರೆ. ಜಾನ್ಸನ್, ನವೀನ್, ಡೀನಾ ಡಿಸೋಜಾ, ಎಲಿಜಾ ಪಿಂಟೋ, ಅಂತೋನಿ ಡಿಸೋಜಾ ಇವರು ಚನ್ನರಾಯಪಟ್ಟಣ ಮೂಲದವರು. ಕೃಷ್ಣೇಗೌಡ ಅವರು ಸಕಲೇಶಪುರ ತಾಲ್ಲೂಕಿನವರು. ಇದನ್ನೂ ಓದಿ: ಕಳೆದ 14 ವರ್ಷಗಳಿಂದ ಇದ್ದು, ಭಯ ಇಲ್ಲ: ಇಸ್ರೇಲಿನಲ್ಲಿದ್ದ ಕನ್ನಡಿಗನ ಮಾತು

    ಇವರೆಲ್ಲ ಇಸ್ರೇಲ್‌ನಲ್ಲಿ ನರ್ಸಿಂಗ್ ಹಾಗೂ ಇತರೆ ಉದ್ಯೋಗ ಮಾಡಿಕೊಂಡಿದ್ದಾರೆ. ಜೆರುಸಲೇಮ್, ತಲ್ಹಿವಿಯಲ್ಲಿ ನೆಲೆಸಿದ್ದಾರೆ. ಚನ್ನರಾಯಪಟ್ಟಣ ತಾಲ್ಲೂಕಿನ ಡಿಂಕ ಗ್ರಾಮದ ಕೃಷ್ಣೇಗೌಡ ಸುಮಾರು 20 ವರ್ಷಗಳಿಂದ ಇಸ್ರೇಲ್‌ನಲ್ಲಿ ನೆಲೆಸಿದ್ದಾರೆ. ಹೋಟೆಲ್‌ನಲ್ಲಿ ಕೆಲಸ ಮಾಡಿಕೊಂಡಿದ್ದಾರೆ.

    ತನ್ನ ಸಹೋದರ ಮಹದೇವ ಅವರ ಜೊತೆ ನಿನ್ನೆ ಫೋನ್‌ನಲ್ಲಿ ಕೃಷ್ಣೇಗೌಡ ಮಾತನಾಡಿದ್ದಾರೆ. ಯುದ್ಧ ನಡೆಯುತ್ತಿದೆ, ರಾಕೆಟ್‌ಗಳ ದಾಳಿ ಮಾಡುತ್ತಿರುವುದು ಕಾಣುತ್ತಿದೆ. ನಾನು ಸುರಕ್ಷಿತವಾಗಿದ್ದೇನೆ. ಒಂದು ವಾರ ಕಾಯುತ್ತೇನೆ ಎಂದು ಕೃಷ್ಣೇಗೌಡ ತಿಳಿಸಿದ್ದಾರೆ. ಇವರು ಆಗಾಗ್ಗೆ ಹುಟ್ಟೂರು ಡಿಂಕ ಗ್ರಾಮಕ್ಕೆ ಬಂದು ಹೋಗುತ್ತಿದ್ದರು. ಇವರ ಪೋಷಕರು ಡಿಂಕ ಗ್ರಾಮದಲ್ಲಿದ್ದಾರೆ. ಇದನ್ನೂ ಓದಿ: ಇಸ್ರೇಲ್‌-ಹಮಾಸ್ ಉಗ್ರರ ನಡುವೆ ವಾರ್‌; ತೈಲ ಬೆಲೆ ಏರಿಕೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]