Tag: Israeli military

  • ಇಸ್ರೇಲ್‌ ಮತ್ತೆ ಸರಣಿ ವಾಯುದಾಳಿ – ಗಾಜಾದಲ್ಲಿ ಕನಿಷ್ಠ 70 ಮಂದಿ ಪ್ಯಾಲೆಸ್ತೀನಿಯರು ಸಾವು!

    ಇಸ್ರೇಲ್‌ ಮತ್ತೆ ಸರಣಿ ವಾಯುದಾಳಿ – ಗಾಜಾದಲ್ಲಿ ಕನಿಷ್ಠ 70 ಮಂದಿ ಪ್ಯಾಲೆಸ್ತೀನಿಯರು ಸಾವು!

    – 3 ದಿನಗಳ ಅಂತರದಲ್ಲಿ ಇಸ್ರೇಲ್‌ 2ನೇ ಬಾರಿ ದಾಳಿ

    ಗಾಜಾ: ಕದನ ವಿರಾಮ ಘೋಷಣೆಯಾದ ಬಳಿಕವೂ ಇಸ್ರೇಲ್‌ ತನ್ನ ವಾಯುದಾಳಿಯನ್ನು (Israel Airstrikes) ಮುಂದುವರಿಸಿದೆ. ಗುರುವಾರ ಗಾಜಾದಲ್ಲಿ (Gaza Strip) ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 70 ಮಂದಿ ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

    Israel

    ಗಾಜಾಪಟ್ಟಿಯ ಉತ್ತರ ಮತ್ತು ದಕ್ಷಿಣ ಪ್ರದೇಶಗಳಲ್ಲಿ ಹಲವು ಮನೆಗಳು ಹಾಗೂ ಮೂಲ ಸೌಕರ್ಯಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ಸೇನೆ ವಾಯುದಾಳಿ ನಡೆಸಿದೆ. ಈ ದಾಳಿಯಲ್ಲಿ ಹಲವು ಹಮಾಸ್‌ ನಾಯಕರೂ ಹತ್ಯೆಗೀಡಾಗಿದ್ದಾರೆ. ಕಳೆದ ಜನವರಿ 19ರಂದು ಕದನ ವಿರಾಮ ಘೋಷಣೆಯಾದ ಬಳಿಕ ಮೂರು ದಿನಗಳ ಅಂತರದಲ್ಲಿ ಇಸ್ರೇಲ್‌ ನಡೆಸಿದ 2ನೇ ವಾಯುದಾಳಿ ಇದಾಗಿದೆ. ಇದನ್ನೂ ಓದಿ: ಇಸ್ರೇಲ್‌ ಭೀಕರ ವಾಯುದಾಳಿ – ಗಾಜಾದಲ್ಲಿ 300ಕ್ಕೂ ಅಧಿಕ ಮಂದಿ ಸಾವು

    Israel 3

    ಕಳೆದ ಎರಡು ದಿನಗಳ ಹಿಂದೆಯಷ್ಟೇ ಭೀಕರ ವೈಮಾನಿಕ ದಾಳಿ ನಡೆಸಿದ್ದ ಇಸ್ರೇಲ್‌, ಗಾಜಾದಲ್ಲಿ 400ಕ್ಕೂ ಅಧಿಕ ಮಂದಿಯನ್ನ ಹತ್ಯೆ ಮಾಡಿತ್ತು. ಗಾಜಾ ಪಟ್ಟಿಯಲ್ಲಿದ್ದ ಹಮಾಸ್‌ನ ಆಂತರಿಕ ಭದ್ರತಾ ಸೇವೆಗಳ ಮುಖ್ಯಸ್ಥ ಮಹಮೂದ್ ಅಬು ವತ್ಫಾ ಕೂಡ ಇಸ್ರೇಲ್‌ ದಾಳಿಗೆ ಬಲಿಯಾಗಿದ್ದ. ಇದನ್ನೂ ಓದಿ: ಹಮಾಸ್‌ ಉಗ್ರರಿಗೆ ಬೆಂಬಲ – ಭಾರತದ ಸಂಶೋಧಕ ಅಮೆರಿಕದಲ್ಲಿ ಅರೆಸ್ಟ್‌, ಶೀಘ್ರವೇ ಗಡೀಪಾರು

    ಕದನ ವಿರಾಮ ಘೋಷಣೆಯ ಬಳಿಕ ಒಪ್ಪಂದದ ಪ್ರಕಾರ ಬಾಕಿಯಿರುವ 59 ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಹಮಾಸ್‌ ನಿರಾಕರಿಸಿದ ನಂತರ ಇಸ್ರೇಲ್‌ ದಾಳಿ ನಡೆಸಿರುವುದಾಗಿ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದರು. ಇದನ್ನೂ ಓದಿ: ಯುರೋಪ್‌ನಿಂದ ಹೆಚ್ಚಿನ ವಾಯು ರಕ್ಷಣೆ ಪಡೆಯಲು ಝೆಲೆನ್ಸ್ಕಿಗೆ ಟ್ರಂಪ್ ಸಹಾಯ: ಶ್ವೇತಭವನ ಮಾಹಿತಿ

  • ಇಸ್ರೇಲ್‌ ಭೀಕರ ವಾಯುದಾಳಿ – ಗಾಜಾದಲ್ಲಿ 300ಕ್ಕೂ ಅಧಿಕ ಮಂದಿ ಸಾವು

    ಇಸ್ರೇಲ್‌ ಭೀಕರ ವಾಯುದಾಳಿ – ಗಾಜಾದಲ್ಲಿ 300ಕ್ಕೂ ಅಧಿಕ ಮಂದಿ ಸಾವು

    ನವದೆಹಲಿ: ಕಳೆದ ಜನವರಿ 19ರಂದು ಕದನ ವಿರಾಮ ಘೋಷಣೆಯಾದ ಬಳಿಕ ಮತ್ತೆ ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಆವರಿಸಿದೆ. ಇಂದು ಮುಂಜಾನೆ ಇಸ್ರೇಲ್‌ ಸೇನೆಯು (Israeli military) ಗಾಜಾದ ಮೇಲೆ ನಡೆದ ಭೀಕರ ವೈಮಾನಿಕ ದಾಳಿಯಲ್ಲಿ (Israel AirStrikes) ಕನಿಷ್ಠ 330 ಮಂದಿ ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

    ಬೆಳ್ಳಂ ಬೆಳಗ್ಗೆ ವೈಮಾನಿಕ ದಾಳಿ ನಡೆಸಿದ ಇಸ್ರೇಲ್‌, ಉತ್ತರ ಗಾಜಾ, ಗಾಜಾ ನಗರ ಮತ್ತು ಮಧ್ಯ ಮತ್ತು ದಕ್ಷಿಣ ಗಾಜಾ ಪಟ್ಟಿಯ ದೇರ್ ಅಲ್-ಬಲಾಹ್, ಖಾನ್ ಯೂನಿಸ್ ಮತ್ತು ರಫಾ ಸೇರಿದಂತೆ ಅನೇಕ ಸ್ಥಳಗಳನ್ನು ಧ್ವಂಸಗೊಳಿಸಿದೆ. ಭೀಕರ ವಾಯುದಾಳಿಯಲ್ಲಿ ಮೃತಪಟ್ಟವರ ಪೈಕಿ ಪ್ಯಾಲೆಸ್ತೀನಿನ ಮಕ್ಕಳು, ಮಹಿಳೆಯರು ಮತ್ತು ವೃದ್ಧರು ಹೆಚ್ಚಿನವರು ಎಂದು ಗಾಜಾದ ನಾಗರಿಕ ರಕ್ಷಣಾ ಸಂಸ್ಥೆ ಹೇಳಿದೆ.

    ಅಲ್ಲದೇ ಗಾಜಾ ಪಟ್ಟಿಯಲ್ಲಿರುವ ಹಮಾಸ್‌ನ ಆಂತರಿಕ ಭದ್ರತಾ ಸೇವೆಗಳ ಮುಖ್ಯಸ್ಥ ಮಹಮೂದ್ ಅಬು ವತ್ಫಾ ಕೂಡ ಇಸ್ರೇಲ್‌ ದಾಳಿಗೆ ಬಲಿಯಾಗಿದ್ದಾನೆಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಸತತ ಸಿನಿಮಾಗಳ ಸೋಲಿನ ನಡುವೆಯೂ ಸ್ಟಾರ್‌ ನಟನಿಗೆ ಪುರಿ ಜಗನ್ನಾಥ್ ಆ್ಯಕ್ಷನ್ ಕಟ್

    ಕದನ ವಿರಾಮ ಘೋಷಣೆಯ ಬಳಿಕ ಒಪ್ಪಂದದ ಪ್ರಕಾರ ಬಾಕಿಯಿರುವ 59 ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಹಮಾಸ್‌ ನಿರಾಕರಿಸಿದ ನಂತರ ಇಸ್ರೇಲ್‌ ದಾಳಿ ನಡೆಸಿರುವುದಾಗಿ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ. ಇದನ್ನೂ ಓದಿ: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರು ಮಹಿಳೆಯರು ಸೇರಿ ಮೂವರು ಅರೆಸ್ಟ್

    ಮೊದಲೇ ಎಚ್ಚರಿಕೆ ನೀಡಿದ್ದ ಇಸ್ರೇಲ್‌”
    ದಾಳಿ ನಡೆಸುವುದಕ್ಕೂ ಮುನ್ನವೇ ಇಸ್ರೇಲ್‌ ಎಚ್ಚರಿಸುವ ಕೆಲಸ ಮಾಡಿತ್ತು. ತನ್ನ ಎಕ್ಸ್‌ ಪೋಸ್ಟ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದ ಇಸ್ರೇಲ್‌ ಸೇನೆ, ಜಾಪಟ್ಟಿಯಲ್ಲಿರುವ ಹಮಾಸ್‌ ಭಯೋತ್ಪಾದಕ ಸಂಘಟನೆ ಸೇರಿದ ನೆಲೆಗಳ ಮೇಲೆ ಇಸ್ರೇಲ್‌ ಸೇನೆ ವ್ಯಾಪಕ ದಾಳಿ ನಡೆಸುತ್ತಿದೆ. ಹೀಗಾಗಿ ಗಾಜಾದ ನೆರೆಯ ಶಾಲೆಗಳನ್ನು ಮುಚ್ಚುವಂತೆ ಆದೇಶಿಸುತ್ತಿದೆ ಎಂದು ಎಚ್ಚರಿಕೆ ನೀಡಿತ್ತು. ಇದನ್ನೂ ಓದಿ: ಹೈಕೋರ್ಟ್‌ ಆದೇಶದ ಬೆನ್ನಲ್ಲೇ ಹೆಚ್‍ಡಿಕೆ ಕೇತಗಾನಹಳ್ಳಿ ಜಮೀನು ಒತ್ತುವರಿ ತೆರವು ಕಾರ್ಯಾಚರಣೆ

    ಟ್ರಂಪ್‌ ಎಚ್ಚರಿಕೆ:
    ಇಸ್ರೇಲ್‌ ದಾಳಿ ವಿಚಾರ ತಿಳಿಯುತ್ತಿದ್ದಂತೆ ಅಮೆರಿಕದ ಶ್ವೇತಭವನ ಪ್ರತಿಕ್ರಿಯಿಸಿದೆ. ಜೊತೆಗೆ ಹಮಾಸ್ ಮತ್ತು ಇರಾನ್ ಬೆಂಬಲಿತ ಹೌತಿ ಬಂಡುಕೋರರು ಸೇರಿದಂತೆ ಇತರ ಭಯೋತ್ಪಾದಕ ಗುಂಪುಗಳು ಬೆಲೆ ತೆರಬೇಕಾಗುತ್ತದೆ ಎಂದು ಟ್ರಂಪ್‌ ಎಚ್ಚರಿಸಿದ್ದಾರೆ.

  • ವಾಯುದಾಳಿಗೆ ಕೌಂಟರ್‌ ಅಟ್ಯಾಕ್‌ – ದಕ್ಷಿಣ ಇಸ್ರೇಲ್‌ ಕಡೆಗೆ ಹೊರಟ ಸ್ಫೋಟಕ ತುಂಬಿದ ರಾಕೆಟ್‌

    ವಾಯುದಾಳಿಗೆ ಕೌಂಟರ್‌ ಅಟ್ಯಾಕ್‌ – ದಕ್ಷಿಣ ಇಸ್ರೇಲ್‌ ಕಡೆಗೆ ಹೊರಟ ಸ್ಫೋಟಕ ತುಂಬಿದ ರಾಕೆಟ್‌

    – ಇಸ್ರೇಲ್‌ ಮೇಲಿನ ದಾಳಿಗೆ 1 ವರ್ಷ

    ಬೈರೂತ್‌: ಗಾಜಾಪಟ್ಟಿಯಲ್ಲಿ (Gaza Strip) ನಿರಾಶ್ರಿತರ ಶಿಬಿರವಾಗಿ ಪರಿವರ್ತನೆಯಾಗಿದ್ದ ಮಸೀದಿಯೊಂದರ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದ್ದು, 26 ಮಂದಿ ಬಲಿಯಾಗಿದ್ದಾರೆ. ಈ ಬೆನ್ನಲ್ಲೇ ಹಮಾಸ್‌ ಕೂಡ ಕೌಂಟರ್‌ ಅಟ್ಯಾಕ್‌ ಮಾಡಿದೆ. ಇಸ್ರೇಲ್‌ ವೈಮಾನಿಕ ದಾಳಿ ಬೆನ್ನಲ್ಲೇ ಗಾಜಾದಿಂದ ರಾಕೆಟ್‌ಗಳನ್ನು (Rocket Fired) ಹಾರಿಸಿದೆ.

    ಅಕ್ಟೋಬರ್‌ 7ರ ದಾಳಿಗೆ ಒಂದು ವರ್ಷ ತುಂಬುವುದಕ್ಕೆ ಒಂದು ದಿನ ಮೊದಲು ಈ ಘಟನೆ ನಡೆದಿದೆ. ಹಲವಾರು ಸ್ಪೋಟಕಗಳನ್ನು ಹೊತ್ತ ರಾಕೆಟ್‌ವೊಂದು ಉತ್ತರ ಗಾಜಾಪಟ್ಟಿಯಿಂದ ಇಸ್ರೇಲ್‌ಗೆ Israel) ನುಗ್ಗುತ್ತಿರುವುದನ್ನು ಗುರುತಿಸಲಾಗಿದೆ. ಇದನ್ನೂ ಓದಿ: ಜಾತಿ ಗಣತಿ ವರದಿ ಕ್ಯಾಬಿನೆಟ್‌ನಲ್ಲಿ ಚರ್ಚೆಯಾಗಲಿ ಆಮೇಲೆ ನೋಡೋಣ – ಪರಮೇಶ್ವರ್

    ಭಾನುವಾರ ಮಧ್ಯಾಹ್ನವಷ್ಟೇ ಗಾಜಾ ಪಟ್ಟಿಯ ದೀರ್ ಅಲ್ – ಬಾಲಾಹ್ ನಗರದ ಕೇಂದ್ರ ಭಾಗದಲ್ಲಿ ಇದ್ದ ಮಸೀದಿ ಮೇಲೆ ಇಸ್ರೇಲ್‌ ದಾಳಿ ನಡೆಸಿ 26 ಜನರ ಹತ್ಯೆಗೈದಿತ್ತು. ಈ ಮಸೀದಿಯ ಒಳಗೆ ಹಮಾಸ್ ಉಗ್ರರ ಕಮಾಂಡ್ ಹಾಗೂ ನಿಯಂತ್ರಣ ಕೇಂದ್ರ ಇತ್ತು ಎಂದು ಇಸ್ರೇಲ್ ಸೇನೆ ಹೇಳಿಕೊಂಡಿತ್ತು. ಇದೇ ಕಾರಣಕ್ಕಾಗಿ ದಾಳಿ ನಡೆಸಿದ್ದಾಗಿ ಸಮರ್ಥನೆ ಮಾಡಿಕೊಂಡಿತ್ತು. ಈ ಬೆನ್ನಲ್ಲೇ ಗಾಜಾದಿಂದ ರಾಕೆಟ್‌ಗಳು ಇಸ್ರೇಲ್‌ ಕಡೆಗೆ ಹೊರಟಿವೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ನನ್ನ ಬದುಕು ಇರೋದು ನಿಮ್ಮ ಋಣ ತೀರಿಸೋಕೆ, ನಿಮ್ಮ ಮನೆ ಮಗನಿಗೆ ಹಾಲಾದ್ರೂ ಕೊಡಿ, ವಿಷವಾದ್ರೂ ಕೊಡಿ: ಹೆಚ್‌ಡಿಕೆ ಭಾವುಕ

    ಮಸೀದಿಯಲ್ಲಿ ಗಾಯಾಳುಗಳ ಆಕ್ರಂದನ!
    ಇಸ್ರೇಲ್ ನಡೆಸಿದ ದಾಳಿಯಲ್ಲಿ 26 ಮಂದಿ ಬಲಿಯಾಗುವ ಜೊತೆಯಲ್ಲೇ ನೂರಾರು ಮಂದಿ ಗಾಯಗೊಂಡಿದ್ದಾರೆ. ಮಸೀದಿಯಲ್ಲಿ ಇದ್ದ ಗಾಯಾಳುಗಳನ್ನು ಸಮೀಪದ ಅಲ್ – ಅಕ್ಸಾ ಹುತಾತ್ಮರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಾಂಬ್ ದಾಳಿಯಿಂದ ಧ್ವಂಸಗೊಂಡ ಮಸೀದಿಯ ಒಳಗಿನಿಂದ ಗಾಯಾಳುಗಳನ್ನ ಹೊರ ತೆಗೆಯೋದೇ ಹರ ಸಾಹಸ ಆಗಿತ್ತು ಎಂದು ಆಸ್ಪತ್ರೆಯ ವಕ್ತಾರ ಮೊಹಮ್ಮದ್ ಬಸ್ಸಾಲ್ ಹೇಳಿದ್ದಾರೆ. ಬಹುತೇಕ ಗಾಯಾಳುಗಳಿಗೆ ಆಸ್ಪತ್ರೆಯ ಒಳಗೆ ಬೆಡ್ ಸಿಗದ ಕಾರಣ ಆಸ್ಪತ್ರೆಯ ಮುಂಭಾಗದ ಗೇಟ್‌ ಬಳಿಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.

    ಇಸ್ರೇಲ್ ಮೇಲೆ ಹಮಾಸ್ ದಾಳಿಗೆ 1 ವರ್ಷ:
    2023ರ ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ನೂರಾರು ಹಮಾಸ್ ಉಗ್ರರು ದಾಳಿ ನಡೆಸಿದ್ದರು. ಈ ಕರಾಳ ಘಟನೆ 1 ವರ್ಷ ಒಂದು ವರ್ಷ ಪೂರೈಸಿದಂತಾಗಿದೆ. ಒಂದು ವರ್ಷಗಳ ಅವಧಿಯಲ್ಲಿ ಗಾಜಾ ಪಟ್ಟಿಯಲ್ಲಿ ಸುಮಾರು 50 ಸಾವಿರ ಮಂದಿ ಸಾವನ್ನಪ್ಪಿದಂತಾಗಿದೆ. ಅಕ್ಟೋಬರ್ 7ರ ದಾಳಿಯ ಕಹಿ ನೆನಪಿನ ಹಿನ್ನೆಲೆಯಲ್ಲಿ ವಿಶ್ವ ಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಆಂಟೋನಿಯೋ ಗುಟರೆಸ್‌ ಕೂಡಾ ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದು, ಹಿಂಸಾಚಾರದ ಕಹಿ ನೆನಪನ್ನು ಈ ವಿಡಿಯೋದಲ್ಲಿ ಬಿಂಬಿಸಲಾಗಿದೆ.

    ಇಸ್ರೇಲ್ ಮೇಲೆ ಹಮಾಸ್ ಉಗ್ರರು ದಾಳಿ ನಡೆಸಿದ ಬೆನ್ನಲ್ಲೇ ಇಸ್ರೇಲ್ ಕೂಡಾ ಪ್ರತಿ ದಾಳಿ ನಡೆಸಿ ಗಾಜಾ ಪಟ್ಟಿಯಲ್ಲಿ ಹಮಾಸ್ ಉಗ್ರರ ನೆಲೆಗಳನ್ನು ಧ್ವಂಸ ಮಾಡುತ್ತಾ ಬಂದಿದೆ. ಈ ಸಮರದಲ್ಲಿ ಸಾವಿರಾರು ಪ್ಯಾಲಸ್ತೀನ್ ಪ್ರಜೆಗಳು ಸಾವನ್ನಪ್ಪಿದ್ದಾರೆ. ಈ ಹಿಂಸಾಚಾರ ನಿಲ್ಲಬೇಕು ಎಂದು ಆಗ್ರಹಿಸಿರುವ ವಿಶ್ವ ಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಆಂಟೋನಿಯೋ ಗುಟರೆಸ್‌ ಶಾಂತಿಯ ಸಂದೇಶ ಸಾರಿದ್ದಾರೆ. ಇದನ್ನೂ ಓದಿ: ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮಿಸ್ಸಿಂಗ್; ನಾಪತ್ತೆ ಹಿಂದಿದ್ಯಾ ಮಹಿಳೆ ಕೈವಾಡ? ಬ್ಲ್ಯಾಕ್‌ಮೇಲ್‌ಗೆ ಬಲಿಯಾದ್ರಾ?

  • ಇಸ್ರೇಲ್‌ ದಾಳಿಗೆ ಹಿಜ್ಬುಲ್ಲಾ ಭದ್ರಕೋಟೆಯೇ ಛಿದ್ರ – ತುರ್ತು ಸಭೆಗೆ ವಿಶ್ವಸಂಸ್ಥೆ ತಯಾರಿ

    ಇಸ್ರೇಲ್‌ ದಾಳಿಗೆ ಹಿಜ್ಬುಲ್ಲಾ ಭದ್ರಕೋಟೆಯೇ ಛಿದ್ರ – ತುರ್ತು ಸಭೆಗೆ ವಿಶ್ವಸಂಸ್ಥೆ ತಯಾರಿ

    – ಪರಸ್ಪರ ದಾಳಿಯಲ್ಲಿ ಲೆಬನಾನ್‌ ಕ್ಯಾಪ್ಟನ್‌, ಇಸ್ರೇಲ್‌ನ ಗಾರ್ಡ್‌ ಕಮಾಂಡರ್‌ ಹತ್ಯೆ

    ಜೆರುಸಲೇಂ/ಬೈರೂತ್‌: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ಹಿಜ್ಬುಲ್ಲಾ (Hezbollah) ಮುಖ್ಯಸ್ಥ ಹಸನ್‌ ನಸ್ರಲ್ಲಾ ಹತ್ಯೆ ಬಳಿಕ ಇಸ್ರೇಲ್‌ (Israel) ಮೇಲೆ ಇರಾನ್‌ ನೂರಾರು ಕ್ಷಿಪಣಿಗಳ ಮಳೆ ಸುರಿಸಿದೆ. ಇದೇ ಮೊದಲ ಭಾರಿಗೆ ಹೈಪರ್‌ಸಾನಿಕ್‌ ಕ್ಷಿಪಣಿ ಬಳಸಿ ದಾಳಿ ನಡೆಸಿದೆ. ಈ ಬೆನ್ನಲ್ಲೇ ಇಸ್ರೇಲಿ ಪಡೆಗಳು ಲೆಬನಾನ್‌ ಮೇಲೆ ಸೇಡಿನ ದಾಳಿ ನಡೆಸಿದೆ. ಲೆಬನಾನ್‌ನ (Lebanon) ಅಲ್-ಬೆಕಾ ಕಣಿವೆಯಲ್ಲಿರುವ ಹಲ್ಬಟಾ ಮತ್ತು ಜಬುದ್ ಪಟ್ಟಣಗಳ ಮೇಲೆ ವೈಮಾನಿಕ ದಾಳಿ ನಡೆಸಿವೆ. ಎರಡೂ ಕಡೆ ಸಾವುನೋವು ಸಂಭವಿಸಿದೆ.

    ಹಿಜ್ಬುಲ್ಲಾ ವಿರುದ್ಧ ಯುದ್ಧದಲ್ಲಿ ಇಸ್ರೇಲ್‌ನ ಗಾರ್ಡ್ ಕಮಾಂಡರ್ (Guards commander) ಮತ್ತು ಇತರ ನಾಯಕರು ಜೀವ ಕಳೆದುಕೊಂಡಿದ್ದಾರೆ. ಮತ್ತೊಂದೆಡೆ ಇಸ್ರೇಲ್‌ ದಾಳಿಗೆ ಲೆಬನಾನ್‌ ಸೇನೆಯ 22 ವರ್ಷದ ಕ್ಯಾಪ್ಟನ್‌ ಕ್ಯಾಪ್ಟನ್ ಈಟಾನ್ ಇಟ್ಜಾಕ್ ಓಸ್ಟರ್ ಪ್ರಾಣ ತೆತ್ತಿದ್ದಾರೆ. ಇರಾನ್‌, ಇಸ್ರೇಲ್‌ ಮೇಲೆ ಕ್ಷಿಪಣಿ ದಾಳಿ ನಡೆಸುತ್ತಿದ್ದಂತೆ, ಇಸ್ರೇಲ್‌ ಕೂಡ, ಇರಾನ್‌ಗೆ ಎಚ್ಚರಿಕೆ ನೀಡಿತ್ತು. ಇದಾದ ಬಳಿಕ ಲೆಬನಾನ್‌ನ ಬೈರೂತ್‌ನಲ್ಲಿರುವ ಹಿಜ್ಬುಲ್ಲಾ ಶಿಬಿರಗಳ ಮೇಲೆ ಇಸ್ರೇಲ್‌ ಸೇನೆ ಬಾಂಬ್‌ ಮಳೆ ಸುರಿಸಿದೆ. ಈ ಮೂಲಕ ಹಿಜ್ಬುಲ್ಲಾ ಭದ್ರಕೋಟೆ ಎಂದೇ ಕರೆಸಿಕೊಂಡಿದ್ದ ಸೇನಾ ನೆಲೆಗಳನ್ನು ಇಸ್ರೇಲ್‌ ಛಿದ್ರಗೊಳಿಸಿದೆ.

    ತುರ್ತು ಸಭೆಗೆ ವಿಶ್ವಸಂಸ್ಥೆ ತಯಾರಿ:
    ಮಧ್ಯ ಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ದಟ್ಟವಾಗಿ ಆವರಿಸಿದೆ. ಪರಿಸ್ಥಿತಿ ದಿನೇ ದಿನೇ ವಿಕೋಪಕ್ಕೆ ತಿರುಗುತ್ತಿದೆ. ಇದರಿಂದ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಪರಿಸ್ಥಿತಿಯನ್ನು ಪರಿಹರಿಸಲು ತುರ್ತು ಸಭೆ ಕರೆಯಲಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

    ವಿಶ್ವಸಂಸ್ಥೆಯ ಆಂಟೋನಿಯೊ ಗುಟೆರೆಸ್, ಒಂದು ವಾರದ ಹಿಂದೆ ಭದ್ರತಾ ಮಂಡಳಿಗೆ ಲೆಬನಾನ್‌ನ ಪರಿಸ್ಥಿತಿ ಬಗ್ಗೆ ವರದಿ ಮಾಡಿದ್ದಾರೆ. ಸದ್ಯ ಅಲ್ಲಿನ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಲೆಬನಾನಿನ ಸರ್ಕಾರವು ದೇಶದೊಳಗಿನ ಎಲ್ಲಾ ಶಸ್ತ್ರಾಸ್ತ್ರಗಳ ಮೇಲೆ ನಿಯಂತ್ರಣವನ್ನು ಮರಳಿ ಪಡೆಯಬೇಕು ಎಂದು ಪ್ರತಿಪಾದಿಸಿದ್ದಾರೆ.

  • ಇಸ್ರೇಲ್‌ ಮೇಲೆ ರಾಕೆಟ್‌ ಸುರಿಮಳೆ – ಏಕಕಾಲಕ್ಕೆ 400ಕ್ಕೂ ಹೆಚ್ಚು ಕ್ಷಿಪಣಿಗಳಿಂದ ಇರಾನ್‌ ಅಟ್ಯಾಕ್‌

    ಇಸ್ರೇಲ್‌ ಮೇಲೆ ರಾಕೆಟ್‌ ಸುರಿಮಳೆ – ಏಕಕಾಲಕ್ಕೆ 400ಕ್ಕೂ ಹೆಚ್ಚು ಕ್ಷಿಪಣಿಗಳಿಂದ ಇರಾನ್‌ ಅಟ್ಯಾಕ್‌

    – ಕೆಲ ಗಂಟೆಗಳ ಮುಂಚೆಯೇ ಸುಳಿವು ಕೊಟ್ಟಿದ್ದ ಅಮೆರಿಕ

    ಬೈರೂತ್: ಇಸ್ರೇಲ್ (Israel) ವಾಯುಪಡೆ ಹಿಜ್ಬುಲ್ಲಾ (Hezbollah) ಮುಖ್ಯಸ್ಥ ಹಸನ್ ನಸ್ರಲ್ಲಾ ಸೇರಿದಂತೆ ಪ್ರಮುಖ ನಾಯಕರನ್ನ ಹತ್ಯೆಗೈದ ಬಳಿಕ ಇಸ್ರೇಲ್‌-ಇರಾನ್‌ ನಡುವಿನ ಯುದ್ಧ ಸ್ವರೂಪವು ಮತ್ತಷ್ಟು ತೀವ್ರಗೊಂಡಿದೆ.

    ಇರಾನ್‌, ಇಸ್ರೇಲ್‌ ಮೇಲೆ ಏಕಕಾಲಕ್ಕೆ ನೂರಾರು ಕ್ಷಿಪಣಿಗಳನ್ನ ಹಾರಿಸಿದೆ. ಇಸ್ರೇಲ್‌ ವಿರುದ್ಧ ಬ್ಯಾಲಿಸ್ಟಿಕ್‌ ಕ್ಷಿಪಣಿ ದಾಳಿ ನಡೆಸಲು ತಯಾರಿ ನಡೆಸುತ್ತಿದೆ ಎಂದು ಹೇಳಿದ ಕೆಲವೇ ಗಂಟೆಗಳಲ್ಲಿ ಈ ದಾಳಿ ನಡೆದಿದ್ದು, ಇಸ್ರೇಲ್‌ನಾದ್ಯಂತ ಸೈರನ್‌ ಮೊಳಗಿದೆ.

    ಟೆಲ್ ಅವೀವ್‌ನಲ್ಲಿ ಭಾರೀ ಸ್ಫೋಟದ ಸದ್ದು ಕೇಳಿಬಂದಿದ್ದು, ಸುರಕ್ಷಿತ ಸ್ಥಳಗಳಲ್ಲಿ ರಕ್ಷಣೆ ಪಡೆಯುವಂತೆ ಇಸ್ರೇಲ್‌ ತನ್ನ ದೇಶದ ನಾಗರಿಕರಿಗೆ ತಿಳಿಸಿದೆ. ಭಾರತೀಯ ಕಾಲಮಾನ ರಾತ್ರಿ 10:08ರ ಸುಮಾರಿಗೆ ಇಸ್ರೇಲ್‌ ರಕ್ಷಣಾಪಡೆಗನ್ನು ಗುರಿಯಾಗಿಸಿ ಇರಾನ್‌ ರಾಕೆಟ್‌ ದಾಳಿ ನಡೆಸಿದೆ ಎಂದು ಇಸ್ರೇಲಿ ವಿದೇಶಾಂಗ ಸಚಿವಾಲಯ ಹೇಳಿಕೊಂಡಿರುವುದಾಗಿ ವರದಿಯಾಗಿದೆ. ಇದನ್ನೂ ಓದಿ: ಬೈರೂತ್ ದಾಳಿಯಲ್ಲಿ ಹಿಜ್ಬುಲ್ಲಾ‌ ಮುಖ್ಯಸ್ಥನ ಪುತ್ರಿಯೂ ಸಾವು; ನಸ್ರಲ್ಲಾ ಬಳಿಕ ಮತ್ತೊಬ್ಬ ಟಾಪ್‌ ಲೀಡರ್‌ ಟಾರ್ಗೆಟ್‌!

    ಸದ್ಯ ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ತಿಳಿದುಬಂದಿಲ್ಲ. ಇಸ್ರೇಲ್‌ನ ಪ್ರಸಿದ್ಧ ಐರನ್ ಡೋಮ್ ಮತ್ತು ಆರೋ ರಕ್ಷಣಾ ವ್ಯವಸ್ಥೆಗಳಿಂದ ಕ್ಷಿಪಣಿಗಳನ್ನು ತಡೆಹಿಡಿಯಲು ಮುಂದಾಗಿದೆ. ಆದ್ರೆ ಜೆರುಸಲೇಂ ಮತ್ತು ಇತರೆಡೆಗಳಲ್ಲಿ ಸ್ಫೋಟ ಸಂಭವಿಸಿವೆ. ಇದನ್ನೂ ಓದಿ: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಖಾಯಂ ಸದಸ್ಯರಾಗಿ ಭಾರತವನ್ನು ಸೇರಿಸಿ: ಫ್ರಾನ್ಸ್ ಅಧ್ಯಕ್ಷ ಒತ್ತಾಯ

    ಇಸ್ರೇಲ್‌ ಭದ್ರತಾ ಮಂಡಳಿಯ ತುರ್ತು ಸಭೆ:
    ಇರಾನ್‌ ರಾಕೆಟ್‌ ದಾಳಿ ಬೆನ್ನಲ್ಲೇ ಇಸ್ರೇಲ್‌ ಭದ್ರತಾ ಮಂಡಳಿಯ ತುರ್ತು ಸಭೆ ಕರೆದಿದೆ. ಪ್ರಸಕ್ತ ವರ್ಷದಲ್ಲಿ ಇದೇ ಮೊದಲಬಾರಿಗೆ ಜೆರುಸಲೆಂನ ಬಂಕರ್‌ನಲ್ಲಿ ಭದ್ರತಾ ಮಂಡಳಿಯ ಸಭೆ ಕರೆಯಲಾಗಿದೆ. ಅಲ್ಲದೇ ಪ್ರತಿ ದಾಳಿಯ ಎಚ್ಚರಿಕೆಯನ್ನೂ ನೀಡಿವೆ ಎಂದು ಸುದ್ದಿಸಂಸ್ಥೆಗಳು ವರದಿ ಮಾಡಿವೆ. ಆದ್ರೆ ಈ ದಾಳಿ ಬಗ್ಗೆ ಇರಾನ್‌ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.