Tag: isreal

  • ಮೃತದೇಹದಲ್ಲೂ ಹಮಾಸ್‌ ಕಳ್ಳಾಟ, ಇಸ್ರೇಲ್‌ ಕೆಂಡಾಮಂಡಲ – ಗಾಜಾ ಮೇಲೆ ಭಾರೀ ದಾಳಿಗೆ ಆದೇಶ

    ಮೃತದೇಹದಲ್ಲೂ ಹಮಾಸ್‌ ಕಳ್ಳಾಟ, ಇಸ್ರೇಲ್‌ ಕೆಂಡಾಮಂಡಲ – ಗಾಜಾ ಮೇಲೆ ಭಾರೀ ದಾಳಿಗೆ ಆದೇಶ

    ಟೆಲ್‌ ಅವಿವ್‌: ಹಮಾಸ್‌ನಿಂದ (Hamas) ಕದನ ವಿರಾಮ ಒಪ್ಪಂದ ಉಲ್ಲಂಘನೆಯಾದ ಬೆನ್ನಲ್ಲೇ ಇಸ್ರೇಲ್‌ (Isreal) ಪ್ರಧಾನಿ ಬೆಂಜಮಿನ್‌ ನೆತನ್ಯಾಹು (Benjamin Netanyahu) ತಕ್ಷಣವೇ ಪ್ರಬಲ ದಾಳಿ ನಡೆಸುವಂತೆ ಆದೇಶಿಸಿದ್ದಾರೆ.

    “ಭದ್ರತಾ ಸಮಾಲೋಚನೆಗಳ ನಂತರ, ಪ್ರಧಾನಿ ನೆತನ್ಯಾಹು ಅವರು ಗಾಜಾ ಪಟ್ಟಿ(Gaza Strip) ಮೇಲೆ ತಕ್ಷಣವೇ ಪ್ರಬಲ ದಾಳಿಗಳನ್ನು ನಡೆಸುವಂತೆ ಮಿಲಿಟರಿಗೆ ಸೂಚನೆ ನೀಡಿದ್ದಾರೆ” ಎಂದು ಅವರ ಕಚೇರಿಯ ಹೇಳಿಕೆ ತಿಳಿಸಿದೆ.

    ಯಾಕೆ ಮತ್ತೆ ದಾಳಿ?
    ಸೋಮವಾರ ಹಮಾಸ್ ಒತ್ತೆಯಾಳಿನ ಮೃತದೇಹ ಇರುವ ಶವಪೆಟ್ಟಿಗೆಯನ್ನು ಹಸ್ತಾಂತರಿಸಿತ್ತು. ಆದರೆ ಈ ಶವಪೆಟ್ಟಿಗೆಯಲ್ಲಿ ಈ ಹಿಂದೆ ಮರಳಿಸಿದ ಒತ್ತೆಯಾಳಿನ ಮೃತದೇಹದ ಹೆಚ್ಚಿನ ಭಾಗಗಳಿದ್ದವು ಎಂದು ಇಸ್ರೇಲ್ ಹೇಳಿದೆ.

    ಸೋಮವಾರ ಹಸ್ತಾಂತರಿಸಲಾದ ದೇಹದ ಭಾಗಗಳು ಓಫಿರ್ ಝರ್ಫಾಟಿ ಎಂಬವರಿಗೆ ಸೇರಿದೆ ಎನ್ನುವುದು ವಿಧಿವಿಜ್ಞಾನ ಪರೀಕ್ಷೆಗಳಿಂದ ದೃಢಪಟ್ಟಿತ್ತು. ಆದರೆ ಅವರ ಮೃತ ದೇಹವನ್ನು 2023ರ ಕೊನೆಯಲ್ಲಿ ಇಸ್ರೇಲ್‌ ಪಡೆಗಳು ವಶಪಡಿಸಿದ್ದವು. ಈಗ ಕಳುಹಿಸಿದ ಮೃತದೇಹಗಳು ಗಾಜಾದಲ್ಲಿ ಮೃತಪಟ್ಟ 13 ಮೃತ ಒತ್ತೆಯಾಳುಗಳದ್ದಲ್ಲ ಎಂದು ಎಂದು ತಿಳಿಸಿದೆ.

    ಅಮೆರಿಕ ನೇತೃತ್ವದಲ್ಲಿ ಅರಬ್ ರಾಷ್ಟ್ರಗಳ ಸಮ್ಮುಖದಲ್ಲಿ ಕದನ ವಿರಾಮ ಘೋಷಣೆಯಾಗಿತ್ತು. ಈಗ ಬೇರೆ ವ್ಯಕ್ತಿಯ ಮೃತದೇಹವನ್ನು ಕಳುಹಿಸಿ ಹಮಾಸ್‌ ಕದನ ವಿರಾಮ ಉಲ್ಲಂಘನೆ ಮಾಡಿದೆ ಎಂದು ಇಸ್ರೇಲ್‌ ಹೇಳಿದೆ.

  • ಯುದ್ಧದ ಅಂತ್ಯ ಮಾತ್ರವಲ್ಲ, ಇದು ಹೊಸ ಮಧ್ಯಪ್ರಾಚ್ಯದ ಐತಿಹಾಸಿಕ ಉದಯ: ಟ್ರಂಪ್‌

    ಯುದ್ಧದ ಅಂತ್ಯ ಮಾತ್ರವಲ್ಲ, ಇದು ಹೊಸ ಮಧ್ಯಪ್ರಾಚ್ಯದ ಐತಿಹಾಸಿಕ ಉದಯ: ಟ್ರಂಪ್‌

    – ಇಸ್ರೇಲ್‌, ಹಮಾಸ್‌ ನಡುವೆ ಕದನ ವಿರಾಮ
    – ಇಸ್ರೇಲ್‌ ಸಂಸತ್ತಿನಲ್ಲಿ ಟ್ರಂಪ್‌ ಭಾಷಣ

    ಜೆರುಸಲೆಮ್: ಯುದ್ಧದ ಅಂತ್ಯ ಮಾತ್ರವಲ್ಲ. ಇದು ಹೊಸ ಮಧ್ಯಪ್ರಾಚ್ಯದ ಐತಿಹಾಸಿಕ ಉದಯವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಬಣ್ಣಿಸಿದ್ದಾರೆ.

    ಇಸ್ರೇಲ್(Isreal)  ಮತ್ತು ಗಾಜಾದ ಹಮಾಸ್ (Hamas) ಬಂಡುಕೋರರ ನಡುವಿನ ಸುದೀರ್ಘ 2 ವರ್ಷಗಳ ಯುದ್ಧಕ್ಕೆ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಇಸ್ರೇಲ್‌ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ ಅವರು, ಹಲವು ವರ್ಷಗಳ ನಿರಂತರ ಯುದ್ಧದ ನಂತರ ಇಂದು ಆಕಾಶವು ಶಾಂತವಾಗಿದೆ. ಬಂದೂಕುಗಳು ಮೌನವಾಗಿವೆ. ಸೈರನ್‌ಗಳು ಶಬ್ಧ ಮಾಡುವುದನ್ನು ನಿಲ್ಲಿಸಿವೆ. ಶಾಂತಿಯಿಂದ ಇರುವ ಪವಿತ್ರ ಭೂಮಿಯ ಮೇಲೆ ಸೂರ್ಯ ಉದಯಿಸುತ್ತಿದ್ದಾನೆ ಎಂದು ಹೇಳಿದರು.  ಇದನ್ನೂ ಓದಿ:  ಗಾಜಾ ಯುದ್ಧ ಅಂತ್ಯ | ಇಸ್ರೇಲ್‌ನ 7 ಒತ್ತೆಯಾಳುಗಳನ್ನ ಬಿಡುಗಡೆ ಮಾಡಿದ ಹಮಾಸ್

    ಒತ್ತೆಯಾಳುಗಳು ಹಿಂತಿರುಗಿದ್ದಾರೆ, ಅದನ್ನು ಹೇಳಲು ತುಂಬಾ ಸಂತೋಷವಾಗುತ್ತಿದೆ. ನಾನು ಕ್ರೂರಿಯಾಗಿ ವರ್ತಿಸುತ್ತೇನೆ ಎಂದು ಎಲ್ಲರೂ ಭಾವಿಸಿದ್ದರು. ನಾನು ಎಲ್ಲರೊಂದಿಗೆ ಯುದ್ಧಕ್ಕೆ ಹೋಗುತ್ತೇನೆ ಎಂದು ಹಿಲರಿ ಕ್ಲಿಂಟನ್ ಹೇಳಿದ್ದು ನನಗೆ ನೆನಪಿದೆ. ಆದರೆ ನಾನು ಯುದ್ಧ ಬಯಸುವ ವ್ಯಕ್ತಿಯಲ್ಲ. ನನ್ನದು ಯುದ್ಧ ನಿಲ್ಲಿಸುವ ವ್ಯಕ್ತಿತ್ವ ಎಂದರು. ಇದನ್ನೂ ಓದಿ:  ಯುದ್ಧಗಳನ್ನ ಪರಿಹರಿಸೋದ್ರಲ್ಲಿ ನಾನು ನಿಪುಣ; ಭಾರತ-ಪಾಕ್‌ ಕದನ ವಿರಾಮ ಬಗ್ಗೆ ಮತ್ತೆ ಬೆನ್ನುತಟ್ಟಿಕೊಂಡ ಟ್ರಂಪ್‌

    ಟ್ರಂಪ್ ರಾಜಧಾನಿ ಟೆಲ್ ಅವೀವ್‌ಗೆ ಬಂದಿಳಿದಾಗ ಅದ್ಧೂರಿ ಸ್ವಾಗತ ನೀಡಲಾಯಿತು. ಯುದ್ಧ ನಿಲ್ಲಿಸಲು ಮಧ್ಯಸ್ಥಿತಿಕೆ ವಹಿಸಿದ್ದಕ್ಕೆ ಇಸ್ರೇಲ್‌ ಸಂಸದರು ಎದ್ದು ನಿಂತು ಚಪ್ಪಾಳೆ ತಟ್ಟುವ ಮೂಲಕ ಕೃತಜ್ಞತೆ ಸಲ್ಲಿಸಿದರು.

     

  • ಸೇರ್ಪಡೆಯಾಗಿ 2 ವರ್ಷದ ನಂತ್ರ ಯುನೆಸ್ಕೋದಿಂದ ಹೊರ ಬಂದ ಅಮೆರಿಕ

    ಸೇರ್ಪಡೆಯಾಗಿ 2 ವರ್ಷದ ನಂತ್ರ ಯುನೆಸ್ಕೋದಿಂದ ಹೊರ ಬಂದ ಅಮೆರಿಕ

    ವಾಷಿಂಗ್ಟನ್‌: ಮಹತ್ವದ ಬೆಳವಣಿಗೆಯಲ್ಲಿ ಅಮೆರಿಕ (USA) ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯಾದ ಯುನೆಸ್ಕೋದಿಂದ (UNESCO) ಹೊರ ಬಂದಿದೆ.

    ಡೊನಾಲ್ಡ್‌ ಟ್ರಂಪ್‌ ಮೊದಲಿನಿಂದಲೂ ಯುನೆಸ್ಕೋ ನಡೆಯನ್ನು ಟೀಕಿಸುತ್ತಾ ಬಂದಿದ್ದರು. ಯುನೆಸ್ಕೋ ರಾಷ್ಟ್ರೀಯ ಹಿತಾಸಕ್ತಿಯಲ್ಲಿ ಇಲ್ಲ ಮತ್ತು ಇಸ್ರೇಲ್ (Isreal) ವಿರೋಧಿ ಧೋರಣೆ,  ಚೀನಾ ಪರ ನೀತಿಯಿಂದ  ನಾವು ಹೊರ ಬಂದಿದ್ದೇವೆ ಎಂದು ಅಮೆರಿಕ ಹೇಳಿದೆ.

    ಡೊನಾಲ್ಡ್ ಟ್ರಂಪ್ (Donald Trump) ಅವರ ಮೊದಲ ಆಡಳಿತದ ಅವಧಿಯಲ್ಲಿ ಅಮೆರಿಕ 2018 ರಲ್ಲಿ ಯುನೆಸ್ಕೋದಿಂದ ಹೊರ ಬಂದಿತ್ತು. ಜುಲೈ 2023 ರ ಬೈಡನ್‌ ಅವಧಿಯಲ್ಲಿ ಮತ್ತೆ ಯುನೆಸ್ಕೋವನ್ನು ಅಮೆರಿಕ ಸೇರಿತ್ತು.

    ವಿದೇಶಾಂಗ ಇಲಾಖೆಯ ವಕ್ತಾರ ಟ್ಯಾಮಿ ಬ್ರೂಸ್ ಪ್ರತಿಕ್ರಿಯಿಸಿ, ಪ್ಯಾಲೆಸ್ಟೈನ್‌ನ್ನು ಸದಸ್ಯ ರಾಷ್ಟ್ರವಾಗಿ ಒಪ್ಪಿಕೊಳ್ಳುವ ಯುನೆಸ್ಕೋದ ನಿರ್ಧಾರವು ಹೆಚ್ಚು ಸಮಸ್ಯಾತ್ಮಕವಾಗಿದೆ ಮತ್ತು ಇದು ಅಮೆರಿಕದ ನೀತಿಗೆ ವಿರುದ್ಧವಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಬಾಂಗ್ಲಾದೇಶದ ವಾಯುಪಡೆ ವಿಮಾನ ದುರಂತ ಸಾವಿನ ಸಂಖ್ಯೆ 27ಕ್ಕೆ ಏರಿಕೆ

    ಟ್ರಂಪ್ ತಮ್ಮ ಮೊದಲ ಅವಧಿಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ (WHO), UN ಮಾನವ ಹಕ್ಕುಗಳ ಮಂಡಳಿ, ಪ್ಯಾರಿಸ್ ಹವಾಮಾನ ಒಪ್ಪಂದ ಮತ್ತು ಇರಾನ್ ಪರಮಾಣು ಒಪ್ಪಂದ ಸೇರಿದಂತೆ ಹಲವಾರು ಅಂತರರಾಷ್ಟ್ರೀಯ ಸಂಸ್ಥೆಗಳಿಂದ ಅಮೆರಿಕ ಹೊರಬಂದಿತ್ತು. ಎರಡನೇ ಅವಧಿಯಲ್ಲಿ ಟ್ರಂಪ್‌ ವಿಶ್ವ ಆರೋಗ್ಯ ಸಂಸ್ಥೆಯಿಂದ ಹಿಂದೆ ಸರಿಯುವಂತೆ ಆದೇಶಿಸಿದ್ದಾರೆ ಮತ್ತು ಪ್ಯಾಲೆಸ್ಟೀನಿಯನ್ ಪರಿಹಾರ ಸಂಸ್ಥೆ UNRWA ಗೆ ಹಣವನ್ನು ನಿಲ್ಲಿಸಿದ್ದಾರೆ.

    1945 ರಲ್ಲಿ ರಚನೆಯಾದ ಯುನೆಸ್ಕೋದ ಸ್ಥಾಪಕ ಸದಸ್ಯ ರಾಷ್ಟ್ರವಾಗಿರುವ ಅಮೆರಿಕ ಯುನೆಸ್ಕೋದ ಒಟ್ಟು ಬಜೆಟ್‌ನ ಸುಮಾರು 8% ರಷ್ಟು ಕೊಡುಗೆ ನೀಡುತ್ತದೆ. ಪ್ಯಾರಿಸ್‌ನಲ್ಲಿ ನೆಲೆಗೊಂಡಿರುವ ಯುನೆಸ್ಕೋವನ್ನು ಅಮೆರಿಕ ತೊರೆದಿರುವುದು ಇದು ಮೂರನೇ ಬಾರಿ. ಇದನ್ನೂ ಓದಿ: ಯುಎಇ ಅಪಾರ್ಟ್‌ಮೆಂಟ್‌ನಲ್ಲಿ ಕೇರಳದ ಮಹಿಳೆ ಶವವಾಗಿ ಪತ್ತೆ ವರದಕ್ಷಿಣೆ ಕಿರುಕುಳ ಆರೋಪ

    ಹಣಕಾಸಿನ ದುರುಪಯೋಗ ಮತ್ತು ಅದು ಅಮೇರಿಕನ್ ವಿರೋಧಿ ಪಕ್ಷಪಾತವೆಂದು ಪರಿಗಣಿಸಿದ ಬಗ್ಗೆ ಕಳವಳ ವ್ಯಕ್ತಪಡಿಸಿ 1984 ರಲ್ಲಿ ರೇಗನ್‌ ಅವಧಿಯಲ್ಲಿ ಮೊದಲು ಹಿಂದೆ ಸರಿಯಿತು. ಸುಧಾರಣೆಗಳನ್ನು ಮಾಡಿದ ನಂತರ 2003 ರಲ್ಲಿ ಅಧ್ಯಕ್ಷ ಜಾರ್ಜ್ ಡಬ್ಲ್ಯೂ. ಬುಷ್ ನೇತೃತ್ವದಲ್ಲಿ ಅಮೆರಿಕ ಮತ್ತೆ ಯುನೆಸ್ಕೋವನ್ನು ಸೇರ್ಪಡೆಯಾಗಿತ್ತು.

  • ಇರಾನ್ ಅಧ್ಯಕ್ಷರಿಗೆ ಪ್ರಧಾನಿ ಮೋದಿ ಕರೆ – ಇಸ್ರೇಲ್‌ನೊಂದಿಗಿನ ಸಂಘರ್ಷ ಶಮನಕ್ಕೆ ಸಲಹೆ

    ಇರಾನ್ ಅಧ್ಯಕ್ಷರಿಗೆ ಪ್ರಧಾನಿ ಮೋದಿ ಕರೆ – ಇಸ್ರೇಲ್‌ನೊಂದಿಗಿನ ಸಂಘರ್ಷ ಶಮನಕ್ಕೆ ಸಲಹೆ

    ನವದೆಹಲಿ: ಇರಾನ್‌ನ (Iran) ಪರಮಾಣು ನೆಲೆಗಳ ಮೇಲೆ ಅಮೆರಿಕ (America) ದಾಳಿ ನಡೆಸಿದ ಬೆನ್ನಲ್ಲೇ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ (Masoud Pezeshkian) ಅವರಿಗೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ.

    ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಮೋದಿ (Narendra Modi), ಇರಾನ್ ಅಧ್ಯಕ್ಷ ಮಸೂದ್ ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದು, ಪ್ರಸ್ತುತ ಪರಿಸ್ಥಿತಿಯ ಬಗ್ಗೆ ವಿವರವಾಗಿ ಚರ್ಚಿಸಿದೆವು. ಈ ಸಂಘರ್ಷದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದೇನೆ. ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಸಂಘರ್ಷವನ್ನು ಶಮನಗೊಳಿಸಿ ಆದಷ್ಟು ಬೇಗ ಶಾಂತಿ, ಭದ್ರತೆ ಮತ್ತು ಸ್ಥಿರತೆಯನ್ನು ಸ್ಥಾಪಿಸುವಂತೆ ಸಲಹೆ ನೀಡಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಕೃಷಿ ಹೊಂಡದಲ್ಲಿ ತಾಯಿ-ಮಗಳ ಶವ ಪತ್ತೆ; ಪತಿ, ಕುಟುಂಬಸ್ಥರ ವಿರುದ್ಧ ಕೊಲೆ ಆರೋಪ

    ಸುಮಾರು 45 ನಿಮಿಷಗಳ ಕಾಲ ಮಸೂದ್ ಪೆಜೆಶ್ಕಿಯಾನ್ ಮತ್ತು ಮೋದಿ ನಡುವೆ ಮಾತುಕತೆ ನಡೆಯಿತು. ಈ ವೇಳೆ ಪ್ರಾದೇಶಿಕ ಶಾಂತಿ, ಭದ್ರತೆ ಮತ್ತು ಸ್ಥಿರತೆಯನ್ನು ಉತ್ತೇಜಿಸುವಲ್ಲಿ ಭಾರತ ಸ್ನೇಹಿತ ಮತ್ತು ಪಾಲುದಾರ ಎಂದು ಪೆಜೆಶ್ಕಿಯಾನ್ ಬಣ್ಣಿಸಿದರು. ಅಲ್ಲದೇ ಭಾರತದ ನಿಲುವಿಗೆ ಪ್ರಧಾನಿ ಮೋದಿಯವರಿಗೆ ಧನ್ಯವಾದ ಅರ್ಪಿಸಿದರು.  ಇದನ್ನೂ ಓದಿ: ಹಾಸನ | ಅನಾಥ ಶವಗಳಿಗೆ ಮುಕ್ತಿ ನೀಡುತ್ತಿದ್ದ ಸಮಾಜ ಸೇವಕ ನಿಶಾದ್ ಅಹಮ್ಮದ್ ಹೃದಯಾಘಾತದಿಂದ ನಿಧನ

  • ಬಂಕರ್‌ನಿಂದಲೇ ಸಂಭಾವ್ಯ ಉತ್ತರಾಧಿಕಾರಿಗಳ ಹೆಸರನ್ನು ಸೂಚಿಸಿದ ಖಮೇನಿ

    ಬಂಕರ್‌ನಿಂದಲೇ ಸಂಭಾವ್ಯ ಉತ್ತರಾಧಿಕಾರಿಗಳ ಹೆಸರನ್ನು ಸೂಚಿಸಿದ ಖಮೇನಿ

    ವಾಷಿಂಗ್ಟನ್‌: ಒಂದು ಕಡೆ ಇರಾನ್‌ (Iran) ಸೇನೆಯ ಟಾಪ್‌ ಕಮಾಂಡರ್‌, ಮುಖ್ಯಸ್ಥರು, ವಿಜ್ಞಾನಿಗಳನ್ನು ಇಸ್ರೆಲ್‌ (Isreal) ಹತ್ಯೆ ಮಾಡುತ್ತಿದ್ದಂತೆ ಇನ್ನೊಂದು ಕಡೆ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ (Ayatollah Ali Khamenei) ಸಂಭಾವ್ಯ ಉತ್ತರಾಧಿಕಾರಿಗಳಾಗಿ ಮೂವರು ಹಿರಿಯ ಧರ್ಮಗುರುಗಳ ಹೆಸರನ್ನು ಸೂಚಿಸಿದ್ದಾರೆ.

    ಇಸ್ರೇಲ್‌ ಈಗಾಗಲೇ ಅಯತೊಲ್ಲಾ ಅಲಿ ಖಮೇನಿ ಹತ್ಯೆಯೊಂದಿಗೆ ಯುದ್ಧವನ್ನು ಕೊನೆಗೊಳಿಸುವುದಾಗಿ ಶಪಥ ಮಾಡಿದೆ. ಈ ಶಪಥ ಮಾಡಿದ ಬೆನ್ನಲ್ಲೇ ಖಮೇನಿ ತಾವು ಅಡಗಿರುವ ಬಂಕರ್‌ನಿಂದಲೇ (Bunker) ಮೂವರ ಹೆಸರನ್ನು ಫೈನಲ್‌ ಮಾಡಿದ್ದಾರೆ ಎಂದು ನ್ಯೂಯಾರ್ಕ್‌ ಟೈಮ್ಸ್‌ ವರದಿ ಮಾಡಿದೆ. ಇದನ್ನೂ ಓದಿ: 1 ಸಾವಿರ ಕಿ.ಮೀ. ದೂರದಿಂದ ದಾಳಿ – ಕಾರಿನಲ್ಲಿ ಹೋಗುತ್ತಿದ್ದಾಗಲೇ ಇರಾನ್‌ ಟಾಪ್‌ ಸೇನಾ ನಾಯಕ ಹತ್ಯೆ

    ಇಸ್ರೇಲ್‌ ಜೊತೆ ನಡೆಯುತ್ತಿರುವ ಸಂಘರ್ಷದಲ್ಲಿ ಒಂದು ವೇಳೆ ಖಮೇನಿ ಸಾವನಪ್ಪಿದ್ದಾರೆ ಮಗ ಮೊಜ್ತಬಾ ಅವರನ್ನು ಆಯ್ಕೆ ಮಾಡಬಹುದು ಎಂಬ ಸುದ್ದಿ ಈ ಹಿಂದೆ ಹರಿದಾಡಿತ್ತು. ಆದರೆ ಈಗ ಮೂವರು ಧರ್ಮಗುರುಗಳ ಪೈಕಿ ಒಬ್ಬರನ್ನು ಆಯ್ಕೆ ಮಾಡುವಂತೆ ತಮ್ಮ ಆಪ್ತ ವಲಯಕ್ಕೆ ಸೂಚಿಸಿದ್ದಾರೆ.

    ಸಾಮಾನ್ಯವಾಗಿ ಸರ್ವೋಚ್ಚ ನಾಯಕನ ನೇಮಕ ಪ್ರಕ್ರಿಯೆ ಒಂದು ತಿಂಗಳು ಅಥವಾ ಅದಕ್ಕಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಬಹಳ ಗಂಭೀರವಾಗಿ ಚರ್ಚೆ ನಡೆಸಿದ ಬಳಿಕ ಅಂತಿಮವಾಗಿ ಒಬ್ಬರನ್ನು ಆಯ್ಕೆ ಮಾಡಲಾಗುತ್ತದೆ. ಇದನ್ನೂ ಓದಿ: ಒಂದು ಕಾಲದಲ್ಲಿ ಕುಚಿಕು ದೋಸ್ತಿಗಳಾಗಿದ್ದ ಇರಾನ್-ಇಸ್ರೇಲ್ ಈಗ ಬದ್ಧವೈರಿಗಳಂತೆ ಕಚ್ಚಾಡುತ್ತಿರೋದ್ಯಾಕೆ?

    ದೇಶವು ಈಗ ಯುದ್ಧದ ಮಧ್ಯದಲ್ಲಿರುವುದರಿಂದ ಇರಾನ್‌ನ್ನು ರಾಷ್ಟ್ರವಾಗಿ ಮತ್ತು ತಮ್ಮ ಪರಂಪರೆಯನ್ನು ಉಳಿಸಿಕೊಳ್ಳಲು ಶೀಘ್ರವೇ ಉತ್ತರಾಧಿಕಾರಿಯನ್ನು ನೇಮಿಸುವಂತೆ ಖಮೇನಿ ತಮ್ಮ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ.

  • ಇರಾನಿನ ಪರಮಾಣು ಘಟಕದ ಮೇಲೆ ಅಮೆರಿಕ 14 ಸಾವಿರ ಕೆಜಿ ತೂಕದ ಬಾಂಬ್‌ ಹಾಕುತ್ತಾ?

    ಇರಾನಿನ ಪರಮಾಣು ಘಟಕದ ಮೇಲೆ ಅಮೆರಿಕ 14 ಸಾವಿರ ಕೆಜಿ ತೂಕದ ಬಾಂಬ್‌ ಹಾಕುತ್ತಾ?

    – ಸದ್ಯದ ವಿಶ್ವದ ಅತ್ಯಂತ ಶಕ್ತಿಶಾಲಿ ಬಾಂಬ್‌ ಎಂದೇ ಪ್ರಸಿದ್ಧಿ
    – ಬಿ2 ಯುದ್ಧ ವಿಮಾನದಿಂದ ಬಾಂಬ್‌ ದಾಳಿ

    ವಾಷಿಂಗ್ಟನ್‌: ಇಸ್ರೇಲ್‌- ಇರಾನ್‌ (Isreal-Iran) ಮಧ್ಯೆ ನಡೆಯುತ್ತಿರುವ ಕಾದಾಟಕ್ಕೆ ಅಮೆರಿಕ (USA) ಈಗಾಗಲೇ ಅಧಿಕೃತವಾಗಿ ಎಂಟ್ರಿಯಾಗಿದೆ. ಈಗ ಇರಾನ್‌ನ ಫೋರ್ಡೋ ಪರಮಾಣು ಘಟಕ (Fordo Nuclear Facility) ಮೇಲೆ ದಾಳಿ ಮಾಡಲು ಅಮೆರಿಕ 14,000 ಕೆಜಿ ತೂಕದ ಬಾಂಬ್‌ ಹಾಕುತ್ತಾ ಎಂಬ ಪ್ರಶ್ನೆ ಎದ್ದಿದೆ.

    ಹೌದು, ಇರಾನಿನ ಪರಮಾಣು ಘಟಕಗಳ ಮೇಲೆ ಇಸ್ರೇಲ್‌ ದಾಳಿ ಮಾಡಿದರೂ ಸಂಪೂರ್ಣ ಯಶಸ್ಸು ಸಿಕಿಲ್ಲ. ಇರಾನಿನ ಶಕ್ತಿ ಯಾವುದು ಎಂದರೆ ಅದು ಫೋರ್ಡೋ ಪರಮಾಣು ಘಟಕ. ಈ ಘಟಕದ ಮೇಲೆ ದಾಳಿ ಮಾಡುವುದು ಅಷ್ಟು ಸುಲಭವಲ್ಲ.

    ಇರಾನ್‌ನ ಫೋರ್ಡೋ ಪರಮಾಣು ಘಟಕ

    ಇರಾನ್‌ ರಾಜಧಾನಿ ತೆಹ್ರಾನ್‌ನಿಂದ 100 ಕಿ.ಮೀ ದೂರದಲ್ಲಿರುವ ಫೋರ್ಡೋ ಘಟಕವನ್ನು ಬೆಟ್ಟದ ಮೇಲೆ ಸ್ಥಾಪನೆ ಮಾಡಲಾಗಿದೆ. ಫೋರ್ಡೊ ಅತ್ಯಂತ ರಹಸ್ಯ ಮತ್ತು ಬಿಗಿ ಭದ್ರತೆಯ ಸೌಲಭ್ಯವಾಗಿದ್ದು 2009 ರಲ್ಲಿ ಈ ವಿಚಾರ ಸಾರ್ವಜನಿಕವಾಗಿ ಬೆಳಕಿಗೆ ಬಂದಿತ್ತು.

    ಇರಾನ್‌ನ ಪವಿತ್ರ ನಗರವಾದ ಕೋಮ್‌ಗೆ ಹತ್ತಿರದಲ್ಲಿ ನಿರ್ಮಾಣವಾಗಿರುವ ಈ ಘಟಕದ ನಿಜವಾದ ಗಾತ್ರ ಮತ್ತು ಒಳಗಡೆ ಯಾವೆಲ್ಲ ಸಂಶೋಧನೆಗಳು ನಡೆಯುತ್ತಿದೆ ಎನ್ನುವುದು ಇನ್ನೂ ಊಹಾಪೋಹಗಳ ವಿಷಯವಾಗಿದೆ. ಹೀಗಿದ್ದರೂ ಇಸ್ರೇಲಿ ಗುಪ್ತಚರ ಸಂಸ್ಥೆ ಮೊಸಾದ್‌ ಕೆಲ ವರ್ಷಗಳ ಹಿಂದೆ ಕದ್ದ ಇರಾನಿನ ದಾಖಲೆಗಳಿಂದ ಕೆಲವು ವಿವರಗಳು ಬಹಿರಂಗವಾಗಿದೆ. ಇದನ್ನೂ ಓದಿ: ಎಲ್ಲಿ ಅಡಗಿರೋದು ಗೊತ್ತಿದೆ – ಈಗ ಹತ್ಯೆ ಮಾಡಲ್ಲ, ಖಮೇನಿ ಶರಣಾಗಬೇಕು: ಟ್ರಂಪ್‌ ವಾರ್ನಿಂಗ್‌

    ಈ ಘಟಕದ ಮುಖ್ಯ ಸಭಾಂಗಣವು ನೆಲದಡಿಯಲ್ಲಿ ಸುಮಾರು 80 ರಿಂದ 90 ಮೀಟರ್ (295 ಅಡಿ) ಆಳದಲ್ಲಿದೆ. ಇಷ್ಟು ಅಡಿ ಆಳದಲ್ಲಿರುವ ಈ ಘಟಕವನ್ನು ಇಸ್ರೇಲ್ ಹೊಂದಿರುವ ಯಾವುದೇ ವೈಮಾನಿಕ ಬಾಂಬ್‌ನಿಂದ ಧ್ವಂಸ ಮಾಡಲು ಸಾಧ್ಯವಿಲ್ಲ.

    ಇಷ್ಟು ಆಳದಲ್ಲಿ ನಿರ್ಮಾಣವಾಗಿರುವ ಪರಮಾಣು ಘಟಕವನ್ನು ಧ್ವಂಸ ಮಾಡಬೇಕಾದರೆ ಅಮೆರಿಕ ನಿರ್ಮಿತ GBU-57A/B Massive Ordinance Penetrator ಬಾಂಬ್‌ನಿಂದ ಮಾತ್ರ ಸಾಧ್ಯ ಎಂಬ ವಿಶ್ಲೇಷಣೆ ಕೇಳಿ ಬಂದಿದೆ.

    2011 ರಿಂದ ಈ ಬಾಂಬ್‌ ಅಮೆರಿಕ ವಾಯುಸೇನೆಯ ಬತ್ತಳಿಕೆಯಲ್ಲಿದೆ. 6.2 ಮೀಟರ್‌ ಉದ್ದದ ಈ ಬಾಂಬ್‌ 13,608 ಕೆಜಿ ತೂಕವನ್ನು ಹೊಂದಿದೆ. ಈ ಬಾಂಬ್‌ ಅನ್ನು ʼಬಂಕರ್‌ ಬಸ್ಟರ್‌ʼ ಬಾಂಬ್‌ ಎಂದೇ ಕರೆಯಲಾಗುತ್ತದೆ. ಅಂದಾಜು ಸುಮಾರು 200 ಮೀಟರ್‌ ಆಳದಲ್ಲಿರುವ ಗುರಿಯನ್ನು ಧ್ವಂಸ ಮಾಡುವ ಸಾಮರ್ಥ್ಯವನ್ನು ಈ ಬಾಂಬ್‌ ಹೊಂದಿದೆ. 2007 ರಲ್ಲಿ ಈ ಬಾಂಬ್‌ ಪ್ರಯೋಗ ನಡೆದು 2011 ರಲ್ಲಿ 16 ಬಂಕರ್‌ ಬಾಂಬ್‌ ಅಮೆರಿಕ ವಾಯುಸೇನೆಗೆ ಸೇರ್ಪಡೆಯಾಗಿತ್ತು.

    ಜಿಪಿಎಸ್‌ ಆಧಾರಿತ ಈ ಬಾಂಬ್‌ ವಿನ್ಯಾಸವನ್ನು ಬೋಯಿಂಗ್‌ ಕಂಪನಿ ಮಾಡಿದ್ದು ಅಮೆರಿಕ ವಾಯುಸೇನೆ ಈ ಉತ್ಪಾದನೆ ಮಾಡಿದೆ. ಅಮೆರಿಕದ ವಾಯುಪಡೆಯ ಬಳಿ ಇರುವ ಅತ್ಯಂತ ಶಕ್ತಿಶಾಲಿ ಪರಮಾಣು ರಹಿತ ಬಾಂಬ್ ಎಂದೇ ಇದನ್ನು ಕರೆಯಲಾಗುತ್ತದೆ. ಇದನ್ನೂ ಓದಿ: ಇರಾನ್‌ ವಾರ್‌ ಟೈಂ ಕಮಾಂಡರ್‌ ಹತ್ಯೆ – ಖಮೇನಿ ಹತ್ಯೆ ಬಳಿಕವಷ್ಟೇ ಯುದ್ಧಕ್ಕೆ ವಿರಾಮ ಎಂದ ಇಸ್ರೇಲ್‌

    ಈ ಬಾಂಬ್‌ ಅನ್ನು ಹಾಕಬೇಕಾದರೆ ಅಮರಿಕದ ಬಳಿ ಇರುವ ಶಕ್ತಿಶಾಲಿ Northrop B-2 Spirit ಯುದ್ಧವಿಮಾನದಿಂದ ಮಾತ್ರ ಸಾಧ್ಯ. ಬಾವಲಿಯಂತೆ ಕಾಣುವ ಈ ವಿಮಾನಕ್ಕೆ ಒಂದು ಬಾರಿ ಇಂಧನ ತುಂಬಿಸಿದರೆ 11 ಸಾವಿರ ಕಿ.ಮೀ ದೂರವನ್ನು ಕ್ರಮಿಸಬಲ್ಲದು. ಅಲ್ಲದೇ ನಿರಂತರವಾಗಿ 44 ಗಂಟೆಗಳ ಕಾಲ ಹಾರುವ ಸಾಮರ್ಥ್ಯವನ್ನು ಹೊಂದಿದೆ. ಈ ವಿಮಾನವು ದೀರ್ಘಾವಧಿಯ ಕಾರ್ಯಾಚರಣೆ ನಡೆಸುವುದರಿಂದ ಶೌಚಾಲಯ, ಹಾಸಿಗೆ ಜೊತೆಗೆ ಮೈಕ್ರೋವೇವ್ ಹೊಂದಿದೆ. ಇಬ್ಬರು ಪೈಲಟ್‌ ಪೈಕಿ ಒಬ್ಬರು ವಿಶ್ರಾಂತಿ ಪಡೆದರೆ ಇನ್ನೊಬ್ಬರು ವಿಮಾನವನ್ನು ಹಾರಿಸುತ್ತಿರುತ್ತಾರೆ. ಇದರಿಂದಾಗಿ ಕಾರ್ಯಾಚರಣೆಯು ಅಡಚಣೆಯಿಲ್ಲದೆ ಮುಂದುವರಿಯುತ್ತದೆ.

    2001 ರಲ್ಲಿ ಐದು ಬಿ-2 ವಿಮಾನಗಳು ಅಫ್ಘಾನಿಸ್ತಾನದ ಮೇಲೆ ನಿರಂತರ 44 ಗಂಟೆಗಳ ಕಾರ್ಯಾಚರಣೆ ನಡೆಸಿತ್ತು. ಇದು ಇತಿಹಾಸದಲ್ಲಿ ಅತಿ ಉದ್ದದ ವಾಯು ಯುದ್ಧ ಕಾರ್ಯಾಚರಣೆ ಎಂಬ ಹೆಸರನ್ನು ಪಡೆದಿದೆ.

    ಸದ್ಯ ಅಮೆರಿಕ ವಾಯುಸೇನೆ 19 ಬಿ-2 ಬಾಂಬರ್‌ ಯುದ್ಧ ವಿಮಾನಗಳನ್ನು ಹೊಂದಿದೆ. B-2 ಏಕಕಾಲದಲ್ಲಿ ಎರಡು MOP ಬಾಂಬ್‌ಗಳನ್ನು ಮಾತ್ರ ಸಾಗಿಸಬಲ್ಲದು. ಹೀಗಾಗಿ ಅಮೆರಿಕ ಈ ಬಾಂಬ್‌ ಹಾಕುವ ಮೂಲಕ ಇರಾನಿನ ಪರಮಾಣು ಘಟಕವನ್ನು ನಾಶ ಮಾಡುತ್ತಾ ಎಂಬ ಪ್ರಶ್ನೆಗೆ ಮುಂದಿನ ದಿನಗಳಲ್ಲಿ ಉತ್ತರ ಸಿಗುವ ಸಾಧ್ಯತೆಯಿದೆ.

  • ಎಲ್ಲಿ ಅಡಗಿರೋದು ಗೊತ್ತಿದೆ – ಈಗ ಹತ್ಯೆ ಮಾಡಲ್ಲ, ಖಮೇನಿ ಶರಣಾಗಬೇಕು: ಟ್ರಂಪ್‌ ವಾರ್ನಿಂಗ್‌

    ಎಲ್ಲಿ ಅಡಗಿರೋದು ಗೊತ್ತಿದೆ – ಈಗ ಹತ್ಯೆ ಮಾಡಲ್ಲ, ಖಮೇನಿ ಶರಣಾಗಬೇಕು: ಟ್ರಂಪ್‌ ವಾರ್ನಿಂಗ್‌

    ವಾಷಿಂಗ್ಟನ್‌: ಇಸ್ರೇಲ್‌- ಇರಾನ್‌ ನಡುವಿನ ಯುದ್ಧಕ್ಕೆ ಅಮೆರಿಕ ಅಧಿಕೃತವಾಗಿ ಎಂಟ್ರಿಯಾಗಿದೆ. ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿಯನ್ನು (Iran’s Supreme Leader Ali Khamenei) ಸದ್ಯಕ್ಕೆ ನಾವು ಹತ್ಯೆ ಮಾಡುವುದಿಲ್ಲ. ಬದಲಾಗಿ ಅಲಿ ಖಮೇನಿ ಶರಣಾಗಬೇಕು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ನೇರವಾಗಿ ಎಚ್ಚರಿಕೆ ನೀಡಿದ್ದಾರೆ.

    ಅರ್ಧದಲ್ಲೇ ಜಿ7 ದೇಶಗಳ ಶೃಂಗಸಭೆಯಿಂದ ಹೊರ ಬಂದ ಬಳಿಕ ಟ್ರಂಪ್‌ ಸಾಮಾಜಿಕ ಜಾಲತಾಣದಲ್ಲಿ ಸರಣಿ ಪೋಸ್ಟ್‌ ಮಾಡಿ ಖಮೇನಿ ಶರಣಾಗಬೇಕು ಎಂದು ಸೂಚಿಸಿದ್ದಾರೆ. ಇದನ್ನೂ ಓದಿ: ಇರಾನ್‌ ವಾರ್‌ ಟೈಂ ಕಮಾಂಡರ್‌ ಹತ್ಯೆ – ಖಮೇನಿ ಹತ್ಯೆ ಬಳಿಕವಷ್ಟೇ ಯುದ್ಧಕ್ಕೆ ವಿರಾಮ ಎಂದ ಇಸ್ರೇಲ್‌

     

    ಟ್ರಂಪ್‌ ಹೇಳಿದ್ದೇನು?
    ಸುಪ್ರೀಂ ಲೀಡರ್ ಎಂದು ಕರೆಯಲ್ಪಡುವ ವ್ಯಕ್ತಿ ಅಡಗಿದ್ದಾನೆ ಎನ್ನುವುದು ನಮಗೆ ನಿಖರವಾಗಿ ತಿಳಿದಿದೆ. ಅವನನ್ನು ನಾವು ಹತ್ಯೆ ಮಾಡಲು ಹೋಗುವುದಿಲ್ಲ. ನಾಗರಿಕರು ಅಥವಾ ಅಮೇರಿಕನ್ ಸೈನಿಕರ ಮೇಲೆ ಕ್ಷಿಪಣಿಗಳು ಹಾರಿಸುವುದನ್ನು ನಾವು ಬಯಸುವುದಿಲ್ಲ. ನಮ್ಮ ಸಹನೆಯನ್ನು ಪರೀಕ್ಷೆ ಮಾಡುವುದು ಬೇಡ ಎಂದಿದ್ದಾರೆ. ಇದನ್ನೂ ಓದಿ: ಅಮೆರಿಕಗೆ ತೆರಳಲು ನೋ ಕ್ಲಿಯರೆನ್ಸ್ – ಪ್ರಿಯಾಂಕ್ ಖರ್ಗೆಗೆ ಬಿಗ್‌ ಶಾಕ್‌

    ನಾವು ಈಗ ಇರಾನ್ ಆಕಾಶದ ಮೇಲೆ ಸಂಪೂರ್ಣ ನಿಯಂತ್ರಣವನ್ನು ಹೊಂದಿದ್ದೇವೆ. ಇರಾನ್ ಉತ್ತಮ ಸ್ಕೈ ಟ್ರ್ಯಾಕರ್‌ಗಳು ಮತ್ತು ಇತರ ರಕ್ಷಣಾ ಸಾಧನಗಳನ್ನು ಹೊಂದಿತ್ತು. ಆದರೆ ಅಮೇರಿಕ ನಿರ್ಮಿತ ಸಾಮಾಗ್ರಿಗೆ ಹೋಲಿಕೆ ಮಾಡಲು ಸಾಧ್ಯವಿಲ್ಲ. ಅಮೆರಿಕ ತಯಾರಿಸಿದಂತೆ ಯಾರೂ ಉತ್ತಮವಾಗಿ ತಯಾರಿಸಲು ಸಾಧ್ಯವಿಲ್ಲ ಎಂದು ಪೋಸ್ಟ್‌ನಲ್ಲಿ ಹೇಳಿದ್ದಾರೆ.

  • ಇರಾನ್‌ ಸರ್ಕಾರಿ ವಾಹಿನಿ ಮೇಲೆ ಬಾಂಬ್‌ ದಾಳಿ – ಲೈವ್‌ನಿಂದಲೇ ಓಡಿ ಹೋದ ನಿರೂಪಕಿ

    ಇರಾನ್‌ ಸರ್ಕಾರಿ ವಾಹಿನಿ ಮೇಲೆ ಬಾಂಬ್‌ ದಾಳಿ – ಲೈವ್‌ನಿಂದಲೇ ಓಡಿ ಹೋದ ನಿರೂಪಕಿ

    ಟೆಹ್ರಾನ್‌: ನಾಗರಿಕರನ್ನು ಗುರಿಯಾಗಿಸಿ ದಾಳಿ ಮಾಡಿದ್ದಕ್ಕೆ ಸಿಟ್ಟಾಗಿರುವ ಇಸ್ರೇಲ್‌ (Isreal) ಟೆಹ್ರಾನ್‌ನಲ್ಲಿರುವ (Tehran) ಇರಾನಿನ ಸರ್ಕಾರಿ ಟಿವಿ ವಾಹಿನಿ IRIB(Islamic Republic of Iran Broadcasting) ಕಚೇರಿಯ ಮೇಲೆಯೇ ಬಾಂಬ್‌ ದಾಳಿ ನಡೆಸಿದೆ.

    ಐಆರ್‌ಐಬಿ ನಿರೂಪಕಿಯೊಬ್ಬರು ಇಸ್ರೇಲ್‌ ದಾಳಿ ಕುರಿತಂತೆ ಸುದ್ದಿ ಓದುತ್ತಿದ್ದರು. ಈ ಸಂದರ್ಭದಲ್ಲೇ ಇಸ್ರೇಲ್‌ ಐಆರ್‌ಬಿ ಕಟ್ಟಡದ ಮೇಲೆಯೇ ಇಸ್ರೇಲ್‌ ವಾಯುಸೇನೆ ಬಾಂಬ್‌ ದಾಳಿ ನಡೆಸಿದೆ.

    ದಾಳಿ ಆಗುತ್ತಿದ್ದಂತೆ ನಿರೂಪಕಿ ಓಡಿ ಹೋಗಿದ್ದಾರೆ. ಗೋಡೆಗಳು ಉದುರುತ್ತಿರುವ ದೃಶ್ಯ ಸ್ಟುಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಇರಾನ್‌ನ ತೈಲ ಸಂಗ್ರಹ, ಅನಿಲ ಉತ್ಪಾದನಾ ಘಟಕಗಳೇ ಇಸ್ರೇಲ್‌ಗೆ ಟಾರ್ಗೆಟ್

    ಪಶ್ಚಿಮ ಏಷ್ಯಾದ ಇಸ್ರೇಲ್-ಇರಾನ್ ದೇಶಗಳ ಮಧ್ಯೆ ಯುದ್ಧೋನ್ಮಾದ ತಾರಕಕ್ಕೇರಿದ್ದು ಸುಮಾರು 2,000 ಕಿ.ಮೀ. ದೂರ ಇದ್ದರೂ ಎರಡೂ ರಾಷ್ಟ್ರಗಳು ಪರಸ್ಪರ ಖಂಡಾಂತರ ಕ್ಷಿಪಣಿಗಳು, ಡ್ರೋನ್‌ಗಳ ಮೂಲಕ ಸಂಘರ್ಷ ನಡೆಸುತ್ತಿವೆ. 4 ದಿನಗಳ ಈ ಯುದ್ಧದಲ್ಲಿ ಎರಡೂ ಕಡೆ ಈವರೆಗೆ 224 ಮಂದಿ ಸಾವನ್ನಪ್ಪಿದ್ದರೆ, 1,300ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಇದನ್ನೂ ಓದಿ: ಇಸ್ರೇಲ್, ಇರಾನ್ ಮೇಲೆ ಪರಮಾಣು ಬಾಂಬ್ ಬಳಸಿದ್ರೆ, ನಾವು ಪರಮಾಣು ದಾಳಿ ಮಾಡಲ್ಲ: ಪಾಕಿಸ್ತಾನ

    ಇಸ್ರೇಲ್‌ನ ಹೈಫಾ, ಟೆಲ್‌ಅವಿವ್ ಮೇಲೆ ಇರಾನ್ ಕ್ಷಿಪಣಿ ದಾಳಿ ಮಾಡಿದೆ. ಹೈಫಾದ 2 ಪವರ್ ಪ್ಲಾಂಟ್‌ಗಳನ್ನು ಧ್ವಂಸಗೊಳಿಸಿದೆ. ಟೆಲ್‌ಅವಿವ್‌ನ ಪ್ರಧಾನಿ ನೆತನ್ಯಾಹು ಮನೆ ಮೇಲೆ ಮಿಸೈಲ್ ದಾಳಿ ಮಾಡಿದೆ. ನೆತನ್ಯಾಹು ಪಾರಾಗಿದ್ದಾರೆ. ಬೆನ್ನಲ್ಲೇ ಇಸ್ರೇಲ್ ಆಕ್ರಮಣವನ್ನು ಮತ್ತಷ್ಟು ತೀವ್ರಗೊಳಿಸಿದೆ. ಇರಾನ್‌ನ ತೈಲ-ಅನಿಲ ಘಟಕ, ಮಿಲಿಟರಿ ಸೆಂಟರ್‌ಗಳ ಮೇಲೆ ಇಸ್ರೇಲ್ ಬಾಂಬ್ ಮಳೆ ಸುರಿಸಿದೆ. ಇರಾನ್‌ನ ನಾಲ್ವರು ಗುಪ್ತಚರ ಅಧಿಕಾರಿಗಳು ಬಲಿಯಾಗಿದ್ದಾರೆ

    ಟೆಹ್ರಾನ್‌ನಲ್ಲಿರುವ ಶಹರಾನ್ ತೈಲ ಸಂಗ್ರಹಗಾರ ಧ್ವಂಸಗೊಳಿಸಿದೆ, ವಿದ್ಯುತ್, ಇಂಟರ್ನೆಟ್ ಸೇವೆ ಸ್ಥಗಿತಗೊಂಡಿದೆ. ಅಷ್ಟೇ ಅಲ್ಲ, ವಿಶ್ವದ ಅತಿದೊಡ್ಡ ಅನಿಲ ಕ್ಷೇತ್ರ ಸೌತ್ ಪಾರ್ಸ್ನಲ್ಲಿ ಅನಿಲ ಉತ್ಪಾದನೆಯನ್ನ ಸ್ಥಗಿತಗೊಳಿಸಿದೆ. ಇದರಿಂದ 12 ಮಿಲಿಯನ್ ಕ್ಯೂಬಿಕ್ ಗ್ಯಾಸ್ ಉತ್ಪಾದನೆ ಬಂದ್ ಆಗಿದ್ದು, ಅನಿಲ ದರ ಹೆಚ್ಚಾಗುವ ಎಲ್ಲಾ ಸಾಧ್ಯತೆ ಇದೆ.

  • Pegasus Case | ದೇಶ ಸ್ಪೈವೇರ್‌ ಹೊಂದಿರುವುದರಲ್ಲಿ ಯಾವುದೇ ತಪ್ಪಿಲ್ಲ: ಸುಪ್ರೀಂ ಕೋರ್ಟ್‌

    Pegasus Case | ದೇಶ ಸ್ಪೈವೇರ್‌ ಹೊಂದಿರುವುದರಲ್ಲಿ ಯಾವುದೇ ತಪ್ಪಿಲ್ಲ: ಸುಪ್ರೀಂ ಕೋರ್ಟ್‌

    ನವದೆಹಲಿ: ಭದ್ರತಾ ಉದ್ದೇಶಗಳಿಗಾಗಿ ಒಂದು ದೇಶವು ಸ್ಪೈವೇರ್ (Spyware) ಹೊಂದಿರುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಸುಪ್ರೀಂ ಕೋರ್ಟ್‌ (Supreme Court) ಅಭಿಪ್ರಾಯಪಟ್ಟಿದೆ.

    ನ್ಯಾ.ಸೂರ್ಯ ಕಾಂತ್ ಮತ್ತು ನ್ಯಾ ಎನ್ ಕೋಟೀಶ್ವರ್ ಸಿಂಗ್ ಅವರಿದ್ದ ದ್ವಿಸದಸ್ಯ ಪೀಠ ಇಸ್ರೇಲಿ ಸ್ಪೈವೇರ್ ಪೆಗಾಸಸ್ (Israel Spyware Pegasus) ಬಳಸಿ ಪತ್ರಕರ್ತರು, ಕಾರ್ಯಕರ್ತರು ಮತ್ತು ರಾಜಕಾರಣಿಗಳ ಮೇಲೆ ಗುರಿಯಿಟ್ಟು ಕಣ್ಗಾವಲು ಮಾಡಲಾಗುತ್ತಿದೆ ಎಂಬ ಆರೋಪಗಳ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕೆಂದು ಕೋರಿ 2021 ರಲ್ಲಿ ಸಲ್ಲಿಸಲಾದ ಹಲವಾರು ರಿಟ್ ಅರ್ಜಿಗಳ ವಿಚಾರಣೆಯನ್ನು ಇಂದು ನಡೆಸಿತು.

    ಅರ್ಜಿದಾರರ ಪರ ವಾದಿಸಿದ ಹಿರಿಯ ವಕೀಲ ದಿನೇಶ್ ದ್ವಿವೇದಿ, ಪ್ರಕರಣದಲ್ಲಿನ ಮೂಲ ಸಮಸ್ಯೆ ಏನೆಂದರೆ ಸರ್ಕಾರದ ಬಳಿ ಈ ಸ್ಪೈವೇರ್ ಇದೆಯೋ? ಅವರು ಖರೀದಿಸಿದ್ದಾರೋ ಅಥವಾ ಇಲ್ಲವೋ ಎನ್ನುವುದು. ಸರ್ಕಾರದ ಬಳಿ ಇದ್ದರೆ ಅದನ್ನು ಈಗಲೂ ಅದನ್ನು ನಿರಂತರವಾಗಿ ಬಳಸುವುದನ್ನು ತಡೆಯಲು ಸಾಧ್ಯವಿಲ್ಲ ಎಂದು ವಾದಿಸಿದರು.  ಇದನ್ನೂ ಓದಿ: ಭಾರತದಲ್ಲಿ ಪಾಕ್ ರಕ್ಷಣಾ ಸಚಿವರ ಬಾಯಿ ಬಂದ್!

    ದ್ವಿವೇದಿಯವರ ವಾದಕ್ಕೆ ಪ್ರತಿಕ್ರಿಯಿಸಿದ ನ್ಯಾ.ಸೂರ್ಯ ಕಾಂತ್, ದೇಶವು ಸ್ಪೈವೇರ್ ಬಳಸುತ್ತಿದ್ದರೆ ತಪ್ಪು ಏನಿದೆ? ಸ್ಪೈವೇರ್ ಹೊಂದುವುದರಲ್ಲಿ ಯಾವುದೇ ತಪ್ಪಿಲ್ಲ. ಅದನ್ನು ಯಾರ ವಿರುದ್ಧ ಬಳಸಲಾಗಿದೆ ಎಂಬುದು ಪ್ರಶ್ನೆ. ನಾವು ರಾಷ್ಟ್ರದ ಭದ್ರತೆಯನ್ನು ರಾಜಿ ಮಾಡಿಕೊಳ್ಳಲು ಅಥವಾ ತ್ಯಾಗ ಮಾಡಲು ಸಾಧ್ಯವಿಲ್ಲ ಎಂದು ಮೌಖಿಕವಾಗಿ ಹೇಳಿದರು.

    ಬೇಹುಗಾರಿಕೆ ಆರೋಪಗಳ ಕುರಿತು ತನ್ನ ಸಮಿತಿಯು ಸಲ್ಲಿಸಿದ ತನಿಖಾ ವರದಿಯ ವಿವರಗಳನ್ನು ಬಹಿರಂಗಪಡಿಸಲಾಗುವುದಿಲ್ಲ ಏಕೆಂದರೆ ಅದು ದೇಶದ ಭದ್ರತೆ ಮತ್ತು ಸಾರ್ವಭೌಮತ್ವಕ್ಕೆ ಸಂಬಂಧಿಸಿದೆ ಎಂದು ಹೇಳಿತು.

    ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಗ್ಗೆ ಸುಳಿವು ನೀಡುತ್ತಾ, ನಾವೀಗ ಇರುವ ಪರಿಸ್ಥಿತಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ಅಗತ್ಯವಿದೆ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿತು.

    ಸ್ಪೈವೇರ್ ಬಳಸಿಕೊಂಡು ತನ್ನನ್ನು ಬೇಹುಗಾರಿಕೆ ಮಾಡಲಾಗಿದೆ ಎಂದು ಅನುಮಾನಿಸುವ ಯಾರಾದರೂ ನ್ಯಾಯಾಲಯವನ್ನು ಸಂಪರ್ಕಿಸಬಹುದು ಮತ್ತು ಅವರನ್ನು ಗುರಿಯಾಗಿಸಲಾಗಿದೆಯೇ ಎಂಬುದರ ಕುರಿತು ಪ್ರತಿಕ್ರಿಯೆಯನ್ನು ಪಡೆಯಲಾಗುವುದು ಎಂದು ನ್ಯಾಯಾಲಯ ಹೇಳಿತು.

    ಈ ವೇಳೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಭಯೋತ್ಪಾದಕರು ಗೌಪ್ಯತೆಯ ಹಕ್ಕುಗಳನ್ನು ಹೊಂದಲು ಸಾಧ್ಯವಿಲ್ಲ. ಗೌಪ್ಯತೆಯ ಹಕ್ಕನ್ನು ಹೊಂದಿರುವ ನಾಗರಿಕ ವ್ಯಕ್ತಿಯನ್ನು ಸಂವಿಧಾನದ ಅಡಿಯಲ್ಲಿ ರಕ್ಷಿಸಲಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಉಗ್ರರ ದಾಳಿ ಹಿಂದೆ ಪಾಕ್, ಐಎಸ್‌ಐ ನಂಟು – ಪಾಕ್ ಪ್ಯಾರಾ ಕಮಾಂಡೋ ಆಗಿದ್ದ ಹಾಶೀಮ್ ಮೂಸಾ!

    ಪತ್ರಕರ್ತರ ಪರ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್, ಪೆಗಾಸಸ್ ಮಾಲ್‌ವೇರ್ ಬಳಸಿ ಎನ್‌ಎಸ್‌ಒ ವಾಟ್ಸಾಪ್ ಅನ್ನು ಹ್ಯಾಕ್ ಮಾಡಿದೆ ಎಂದು ಅಮೆರಿಕ ಜಿಲ್ಲಾ ನ್ಯಾಯಾಲಯದ ತೀರ್ಪಿನಲ್ಲಿ ಹೇಳಿದೆ. ಹ್ಯಾಕ್ ಆಗಿರುವ ದೇಶಗಳಲ್ಲಿ ಭಾರತವೂ ಒಂದು ಎಂದು ಕೋರ್ಟ್‌ ಅಭಿಪ್ರಾಯಪಟ್ಟಿದೆ ಎಂದು ಜಡ್ಜ್‌ ಗಮನಕ್ಕೆ ತಂದರು.

    ಪೆಗಾಸಸ್ ವಿರುದ್ಧ ವಾಟ್ಸಾಪ್ ಸಲ್ಲಿಸಿದ ಪ್ರಕರಣದಲ್ಲಿ ಅಮೆರಿಕ ನ್ಯಾಯಾಲಯವು ನೀಡಿದ ತೀರ್ಪನ್ನು ದಾಖಲಿಸಲು ಅರ್ಜಿದಾರರಿಗೆ ಅವಕಾಶ ಮಾಡಿಕೊಟ್ಟ ಕೋರ್ಟ್‌ ಮುಂದಿನ ವಿಚಾರಣೆಯನ್ನು ಜುಲೈ 30ಕ್ಕೆ ಮುಂದೂಡಿತು.

    ಏನಿದು ಪ್ರಕರಣ?
    ಭಾರತ (India) ಸೇರಿದಂತೆ ಹಲವಾರು ದೇಶಗಳಲ್ಲಿ ಪತ್ರಕರ್ತರು, ಮಾನವ ಹಕ್ಕುಗಳ ರಕ್ಷಕರು, ರಾಜಕಾರಣಿಗಳು ಮತ್ತು ಇತರರ ಮೇಲೆ ಕಣ್ಣಿಡಲು ಸರ್ಕಾರಗಳು ಪೆಗಾಸಸ್‌ ಸಾಫ್ಟ್‌ವೇರ್‌ ಬಳಸುತ್ತಿವೆ ಎಂಬ ಆರೋಪ 2021 ರಲ್ಲಿ ಕೇಳಿ ಬಂದಿತ್ತು. ಇದಕ್ಕೆ ಪೂರಕ ಎಂಬಂತೆ ಭಾರತ ಮತ್ತು ಇಸ್ರೇಲ್‌ ನಡುವೆ 2017ರಲ್ಲಿ ನಡೆದ ರಕ್ಷಣಾ ಒಪ್ಪಂದದ ಸಂದರ್ಭದಲ್ಲಿ ಇಸ್ರೇಲಿ ಪೆಗಾಸಸ್‌ ತಂತ್ರಾಂಶವನ್ನೂ ಖರೀದಿಸಿದೆ ಎಂದು ನ್ಯೂಯಾರ್ಕ್‌ ಟೈಮ್ಸ್‌ ವರದಿ ಮಾಡಿತ್ತು. ಐಫೋನ್‌, ಆ್ಯಂಡ್ರಾಯ್ಡ್ ಸ್ಮಾರ್ಟ್‌ಫೋನ್‌ ಎನ್‌ಕ್ರಿಪ್ಟ್‌ ಮಾಡಲಾದ ಸಂವಹನಗಳನ್ನು ಯಶಸ್ವಿಯಾಗಿ ಭೇದಿಸುತ್ತದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

    ಈ ವರದಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿ ನಿರ್ದಿಷ್ಟ ಜನರ ಮೇಲೆ ಯಾವುದೇ ಕಣ್ಗಾವಲು ಮಾಡಿಲ್ಲ ಎಂದು ಹೇಳಿತ್ತು. ಈ ವಿಚಾರ ಜೋರಾಗಿ ಚರ್ಚೆ ಆಗುತ್ತಿದ್ದಂತೆ ಪ್ರಕರಣ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಕೊನೆಗೆ ಸುಪ್ರೀಂ ಕೋರ್ಟ್‌ ಈ ಬಗ್ಗೆ ತನಿಖೆ ನಡೆಸಲು ಒಂದು ಸಮಿತಿಯನ್ನು ರಚಿಸಿತ್ತು. ಸಮಿತಿ ತನಿಖೆ ಆರಂಭಿಸಿದಾಗ ಪೆಗಾಸಸ್‌ ಸಾಫ್ಟ್‌ವೇರ್‌ ಇದೆ ಎಂದು ಆರೋಪ ಮಾಡಿದವರೆ ಪೈಕಿ ಹಲವು ಮಂದಿ ಮೊಬೈಲ್‌ ಫೋನ್‌ ನೀಡಿರಲಿಲ್ಲ. ಅಂತಿಮವಾಗಿ ಸುಪ್ರೀಂಗೆ ಸಮಿತಿ ವರದಿ ಸಲ್ಲಿಸಿತ್ತು. ನಾವು 29 ಸಾಧನಗಳನ್ನು ಪರಿಶೀಲಿಸಿದ್ದೇವೆ. ಈ ಸಾಧನಗಳಲ್ಲಿ ಪೆಗಾಸಸ್‌ ಕಂಡುಬಂದಿಲ್ಲ. ಆದರೆ 5 ಸಾಧನಗಳಲ್ಲಿ ಮಾಲ್ವೇರ್‌ ಇತ್ತು. ಆದರೆ ಪೆಗಾಸಸ್‌ ಅಲ್ಲ ಎಂದು ತಿಳಿಸಿತ್ತು.

  • ಹಮಾಸ್​​ ಮುಖ್ಯಸ್ಥ ​ಹತ್ಯೆ – ನಮ್ಮ ಮಿಲಿಟರಿಗೆ ಸಿಕ್ಕಿದ ಜಯ ಎಂದ ಇಸ್ರೇಲ್‌

    ಹಮಾಸ್​​ ಮುಖ್ಯಸ್ಥ ​ಹತ್ಯೆ – ನಮ್ಮ ಮಿಲಿಟರಿಗೆ ಸಿಕ್ಕಿದ ಜಯ ಎಂದ ಇಸ್ರೇಲ್‌

    ಟೆಲ್‌ ಅವಿವ್‌: ಕಳೆದ ವರ್ಷ ಅಕ್ಟೋಬರ್ 7 ರಂದು ಇಸ್ರೇಲ್‌ (Isreal) ಮೇಲೆ ನಡೆಸಿದ ದಾಳಿಯ ಮಾಸ್ಟರ್ ಮೈಂಡ್ ಹಮಾಸ್ ಉಗ್ರ ಸಂಘಟನೆಯ ನಾಯಕ (Hamas Leader) ಯಾಹ್ಯಾ ಸಿನ್ವಾರ್(Yahya Sinwar) ಇಸ್ರೇಲ್‌ ನಡೆಸಿದ ದಾಳಿಗೆ ಬಲಿಯಾಗಿದ್ದಾನೆ.

    ಗುರುವಾರ ಗಾಜಾದಲ್ಲಿ (Gaza) ಇಸ್ರೇಲಿ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಅಕ್ಟೋಬರ್ 7 ರ ಹತ್ಯಾಕಾಂಡ ಮತ್ತು ದುಷ್ಕೃತ್ಯಗಳಿಗೆ ಕಾರಣವಾದ ಸಾಮೂಹಿಕ ಕೊಲೆಗಾರ ಯಾಹ್ಯಾ ಸಿನ್ವಾರ್‌ನನ್ನು ಹತ್ಯೆ ಮಾಡಲಾಗಿದೆ. ಇದು ನಮ್ಮ ಮಿಲಿಟರಿಗೆ ಸಿಕ್ಕಿದ ಜಯ ಎಂದು ಇಸ್ರೇಲ್ ವಿದೇಶಾಂಗ ಸಚಿವ ಕಾಟ್ಜ್ ಬಣ್ಣಿಸಿದ್ದಾರೆ.

    ಇಸ್ರೇಲಿ ಮಿಲಿಟರಿ ಮತ್ತು ಗುಪ್ತಚರ ಸಂಸ್ಥೆಗಳು ಮೃತಪಟ್ಟ ವ್ಯಕ್ತಿಯ ದೇಹವು ಸಿನ್ವಾರ್‌ನದೇ ಎಂದು ಡಿಎನ್‌ಎ ಪರಿಶೀಲನೆ ನಡೆಸಿದ ಬಳಿಕ ಆತ ಮೃತಪಟ್ಟಿರುವುದನ್ನು ಅಧಿಕೃತವಾಗಿ ತಿಳಿಸಿವೆ.

    ಗಾಜಾದ ಕಟ್ಟಡದ ನೆಲ ಮಹಡಿಯಲ್ಲಿ ನೆಲೆಗೊಂಡಿದ್ದ ಹಮಾಸ್‌ ಉಗ್ರರ ವಿರುದ್ಧ ಇಸ್ರೇಲ್‌ ದಾಳಿ ನಡೆಸಿತ್ತು. ಕಾರ್ಯಾಚರಣೆ ನಡೆಸಿದ್ದ ಕಟ್ಟಡದಲ್ಲಿ ಈತ ನೆಲೆಸಿದ್ದ ವಿಚಾರ ಇಸ್ರೇಲ್‌ಗೆ ತಿಳಿದಿರಲಿಲ್ಲ ಎಂದು ವರದಿಯಾಗಿದೆ.


    ಯಾಹ್ಯಾ ಸಿನ್ವಾರ್ ಯಾರು?
    ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ಹಮಾಸ್‌ ನಡೆಸಿದ ದಾಳಿ ಬಳಿಕ ಯಾಹ್ಯಾ ಸಿನ್ವಾರ್ ಇಸ್ರೇಲ್‌ನ ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ. ಆಗಸ್ಟ್‌ನಲ್ಲಿ ಇರಾನ್‌ನಲ್ಲಿ ನಡೆದ ಸ್ಫೋಟದಲ್ಲಿ ಇಸ್ಮಾಯಿಲ್ ಹನಿಯೆಹ್ ಹತನಾದ ನಂತರ ಹಮಾಸ್ ಮುಖ್ಯಸ್ಥನಾಗಿದ್ದ. 1962 ರಲ್ಲಿ ಜನಿಸಿದ ಸಿನ್ವಾರ್ 1987 ರಲ್ಲಿ ಹಮಾಸ್ ಅನ್ನು ಸ್ಥಾಪಿಸಿದಾಗ ಅದರ ಆರಂಭಿಕ ಸದಸ್ಯರಲ್ಲಿ ಒಬ್ಬನಾಗಿದ್ದ.