Tag: IT-BT

  • ಸ್ಪೇಸ್ ಪಾರ್ಕ್ ಸೇರಿ ಹಲವು ಯೋಜನೆಗಳಿಗೆ ವಿಶೇಷ ಪ್ರೋತ್ಸಾಹ ನೀತಿ – ಎಂ.ಬಿ ಪಾಟೀಲ್, ಪ್ರಿಯಾಂಕ್ ಖರ್ಗೆ ಮಾತುಕತೆ

    ಸ್ಪೇಸ್ ಪಾರ್ಕ್ ಸೇರಿ ಹಲವು ಯೋಜನೆಗಳಿಗೆ ವಿಶೇಷ ಪ್ರೋತ್ಸಾಹ ನೀತಿ – ಎಂ.ಬಿ ಪಾಟೀಲ್, ಪ್ರಿಯಾಂಕ್ ಖರ್ಗೆ ಮಾತುಕತೆ

    ಕೈಗಾರಿಕೆ, ಐಟಿ ಇಲಾಖೆಯ ಯೋಜನೆಗಳ ಕುರಿತು ಚರ್ಚೆ

    ಬೆಂಗಳೂರು: ಉದ್ದೇಶಿತ ಬಾಹ್ಯಾಕಾಶ ಪಾರ್ಕ್, ವಿದ್ಯುನ್ಮಾನ ಬಿಡಿಭಾಗಗಳ ತಯಾರಿಕಾ ಪಾರ್ಕ್ ಮುಂತಾದ ಯೋಜನೆಗಳು ಸೇರಿದಂತೆ ಹಲವು ಮಹತ್ವದ ಉದ್ಯಮಗಳಿಗೆ ಸರ್ಕಾರ ಕೊಡುವ ರಿಯಾಯಿತಿಗಳ ಕುರಿತು ನೀತಿಯನ್ನು ರೂಪಿಸಲಾಗುತ್ತಿದೆ. ಇನ್ನೊಂದು ವಾರದಲ್ಲಿ ಕೈಗಾರಿಕಾ ಮತ್ತು ಐಟಿ-ಬಿಟಿ (IT-BT) ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ವಿಸ್ತೃತ ಹೂಡಿಕೆ-ಪ್ರೋತ್ಸಾಹ ನೀತಿಗೆ ಸಂಬಂಧಿಸಿದ ವರದಿ ಸಿದ್ಧಪಡಿಸಲು ಸೂಚಿಸಲಾಗಿದೆ. ಇದಾದ ಕೂಡಲೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ವಿಸ್ತೃತವಾಗಿ ಚರ್ಚಿಸಲು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ (MB Patil) ಮತ್ತು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರು ತೀರ್ಮಾನಿಸಿದ್ದಾರೆ.

    ಎರಡೂ ಇಲಾಖೆಗಳು ಜೊತೆಗೂಡಿ ಜಾರಿಗೊಳಿಸಬೇಕಾದ ಹಲವು ಯೋಜನೆಗಳು ಮತ್ತು ರೂಪಿಸಬೇಕಾದ ಉಪಕ್ರಮಗಳ ಕುರಿತು ಇಬ್ಬರೂ ಸಚಿವರು ಬುಧವಾರ (ಜು.30) ಇಲ್ಲಿನ ಖನಿಜ ಭವನದಲ್ಲಿ ಮಹತ್ತ್ವದ ಸಭೆ ನಡೆಸಿದರು.ಇದನ್ನೂ ಓದಿ: ರಾಜ್ಯದಲ್ಲಿ ದೀಪಾವಳಿ ಧಮಾಕ, ಕಾಂಗ್ರೆಸ್‌ನಲ್ಲಿ ಕ್ರಾಂತಿ : ವಿಜಯೇಂದ್ರ

    ಐಟಿ ಇಲಾಖೆಯು ಇಎಸ್‌ಡಿಎಂ ವಲಯಕ್ಕೆ ಸಂಬಂಧಿಸಿದಂತೆ ವಿಶೇಷ ಪ್ರೋತ್ಸಾಹ ಕ್ರಮಗಳ ನೀತಿಯನ್ನು ರೂಪಿಸುತ್ತಿದೆ. ಇದಕ್ಕೆ ಪೂರಕವಾಗಿ ಕೈಗಾರಿಕಾ ಇಲಾಖೆ ಕೂಡ ವಿದ್ಯುನ್ಮಾನ ತಯಾರಿಕೆ ವಲಯದಲ್ಲಿ ಹೂಡಿಕೆ ಆಕರ್ಷಣೆಗೆ ಕಾರ್ಯತಂತ್ರ ರೂಪಿಸಬೇಕಾದ ಅಗತ್ಯವಿದೆ. ಕೆಲವೆಡೆ ಒಂದೇ ಯೋಜನೆಗೆ ಐಟಿ ಮತ್ತು ಕೈಗಾರಿಕೆ ಇಲಾಖೆಗಳೆರಡೂ ರಿಯಾಯಿತಿಗಳನ್ನು ಕೊಡುತ್ತಿದ್ದು, ಇದನ್ನು ಸರಿ ಮಾಡಬೇಕಾಗಿದೆ ಎನ್ನುವ ಅಭಿಪಾಯ ಸಭೆಯಲ್ಲಿ ವ್ಯಕ್ತವಾಗಿದೆ ಎಂದು ತಿಳಿದುಬಂದಿದೆ.

    ಸದ್ಯಕ್ಕೆ ನಮ್ಮಲ್ಲಿ ತಯಾರಾಗುತ್ತಿರುವ ಸ್ಮಾರ್ಟ್ಫೋನ್‌ಗಳಲ್ಲಿ ಶೇ.44ರಷ್ಟು ಅಮೆರಿಕಕ್ಕೆ ರಫ್ತಾಗುತ್ತಿದೆ. ಇದರಲ್ಲಿ ಮೊದಲು ಶೇ.61ರಷ್ಟು ಪಾಲು ಹೊಂದಿದ್ದ ಚೀನಾದ ಪ್ರಮಾಣ ಈಗ ಶೇ.25ಕ್ಕೆ ಕುಸಿದಿದೆ. ಆದರೆ, ವಿಯೆಟ್ನಾಂನ ಪಾಲು ಮಾತ್ರ ಶೇ.50ರಷ್ಟಿದೆ. ಈ ಸ್ಪರ್ಧೆಯನ್ನು ಪರಿಗಣಿಸಿ ಬಂಡವಾಳವನ್ನು ಸೆಳೆಯಬೇಕಾಗಿದೆ. ಜೊತೆಗೆ ಸ್ಮಾರ್ಟ್ಫೋನ್ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬೇಕಾಗಿದೆ. ಇದಕ್ಕೆ ಪೂರಕವಾಗಿ ಈ ಕ್ಷೇತ್ರಕ್ಕೆ ಹಲವು ರಿಯಾಯಿತಿಗಳನ್ನು ಘೋಷಿಸಬೇಕಾಗಿದೆ ಎಂದು ಇಬ್ಬರೂ ಸಚಿವರು ಅಭಿಪ್ರಾಯಪಟ್ಟರು.

    ಸ್ಪೇಸ್ ಪಾರ್ಕ್, ಪಿಸಿಬಿ ಪಾರ್ಕ್‌ಗೆ ಭೂಮಿ:
    ಐಟಿ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ತಮ್ಮ ಇಲಾಖೆಯು ದೇವನಹಳ್ಳಿ ಸಮೀಪದ ಆದಿನಾರಾಯಣ ಹೊಸಹಳ್ಳಿ ಅಥವಾ ಐಟಿಐಆರ್ ಪ್ರದೇಶದಲ್ಲಿ 100 ಎಕರೆಯಲ್ಲಿ ಸ್ಪೇಸ್ ಪಾರ್ಕ್, ಮೈಸೂರಿನ ಕೋಚನಹಳ್ಳಿ ಹಂತ-2ರಲ್ಲಿ 150 ಎಕರೆಯಲ್ಲಿ ಪ್ರಿಂಟೆಡ್ ಸರ್ಕ್ಯೂಟ್ ಬೋರ್ಡ್ (ಪಿಸಿಬಿ) ಪಾರ್ಕ್, ಕ್ವಿನ್ ಸಿಟಿ / ಅಡಕನಹಳ್ಳಿ ಮತ್ತು ಕೋಚನಹಳ್ಳಿ ಎರಡೂ ಕಡೆಗಳಲ್ಲಿ ತಲಾ 100 ಎಕರೆಯಲ್ಲಿ ಗ್ಲೋಬಲ್ ಇನ್ನೋವೇಶನ್ ಸಿಟಿ, ಅಡಕನಹಳ್ಳಿ/ ಕೋಚನಹಳ್ಳಿಯಲ್ಲಿ 100 ಎಕರೆಯಲ್ಲಿ ಕಿಯೋನಿಕ್ಸ್ ಪ್ಲಗ್ & ಪ್ಲೇ ಸೌಲಭ್ಯ ಕೇಂದ್ರದ ಅಭಿವೃದ್ಧಿ ಮೂಲಕ ಗ್ಲೋಬಲ್ ಕೇಪಬಿಲಿಟಿ ಸೆಂಟರ್‌ಗಳನ್ನು ಸ್ಥಾಪಿಸಲು ತೀರ್ಮಾನಿಸಿದೆ. ಇದಕ್ಕಾಗಿ ಈ ಸ್ಥಳಗಳಲ್ಲಿ ಜಮೀನನ್ನು ಮಂಜೂರು ಮಾಡುವಂತೆ ಈ ಸಂದರ್ಭದಲ್ಲಿ ಪಾಟೀಲ್ ಅವರಲ್ಲಿ ಕೋರಿದರು.

    ಡ್ರೋನ್ ಪರೀಕ್ಷಾ ಕೇಂದ್ರವು ನಿರ್ಜನ ಪ್ರದೇಶದಲ್ಲಿ ಇರಬೇಕು ಎನ್ನುವ ನಿಯಮವಿದೆ. ಆದ್ದರಿಂದ ಬೆಂಗಳೂರಿನ ಭಾಗವೇ ಆಗಿರುವ ಹೆಸರಘಟ್ಟದಲ್ಲಿ ಈ ಯೋಜನೆ ಬರುವುದು ಕಷ್ಟವಾಗಬಹುದು. ಆದ್ದರಿಂದ ಇದಕ್ಕೆ ಸೂಕ್ತ ಜಾಗ ಹುಡುಕುವುದು ಒಳ್ಳೆಯದು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

    ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಐಟಿಬಿಟಿ ಇಲಾಖೆ ಕಾರ್ಯದರ್ಶಿ ಏಕ್ ರೂಪ್ ಕೌರ್, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ್, ಐಟಿ ಇಲಾಖೆ ನಿರ್ದೇಶಕ ರಾಹುಲ್ ಸಂಕನೂರು ಸೇರಿದಂತೆ ಇತರ ಅಧಿಕಾರಿಗಳು ಸಭೆಯಲ್ಲಿ ಇದ್ದರು.ಇದನ್ನೂ ಓದಿ: ನನ್ನ ಹೆಸರಿನ ನಕಲಿ ಅಕೌಂಟ್‌ನಿಂದ ಅವಹೇಳನಕಾರಿ ಪೋಸ್ಟ್ – ಪೊಲೀಸ್ ಆಯುಕ್ತರಿಗೆ ದೂರು ನೀಡಿದ ಎಸ್.ನಾರಾಯಣ್

  • ಬೆಂಗಳೂರಿಗೆ ವಿಶ್ವಮಾನ್ಯ ಗರಿಮೆ ಕೊಟ್ಟ `ಗಾರುಡಿಗ’ ಎಸ್‌ಎಂಕೆ – ವಿಶ್ವದ ಪ್ರಖ್ಯಾತ ಐಟಿ ಕಂಪನಿಗಳಿಗೆ ಸ್ಪೇಸ್

    ಬೆಂಗಳೂರಿಗೆ ವಿಶ್ವಮಾನ್ಯ ಗರಿಮೆ ಕೊಟ್ಟ `ಗಾರುಡಿಗ’ ಎಸ್‌ಎಂಕೆ – ವಿಶ್ವದ ಪ್ರಖ್ಯಾತ ಐಟಿ ಕಂಪನಿಗಳಿಗೆ ಸ್ಪೇಸ್

    ಬೆಂಗಳೂರು: ವಿಶ್ವಭೂಪಟದಲ್ಲಿಂದು ಬೆಂಗಳೂರಿಗೆ ಪ್ರತ್ಯೇಕ ಸ್ಥಾನವಿದೆ.. ಕಳೆದ ಎರಡು ದಶಕಗಳಿಂದ ಐಟಿ ರಂಗದಲ್ಲಿ ಅಗ್ರಗಣ್ಯವಾಗಿ ನಿಂತಿದೆ. ಭಾರತಕ್ಕೆ ಸೆಮಿಕಂಡಕ್ಟರ್ ಹಬ್ ಆಗಿ ಮಾರ್ಪಟ್ಟಿದೆ. ಸಿಲಿಕಾನ್ ವ್ಯಾಲಿ ಆಫ್ ಇಂಡಿಯಾ, ಐಟಿ ಕ್ಯಾಪಿಟಲ್ ಆಫ್ ಇಂಡಿಯಾ, ಎಲೆಕ್ಟಾçನಿಕ್ಸ್ ಕ್ಯಾಪಿಟಲ್ ಆಫ್ ಇಂಡಿಯಾ ಎಂದು ಬೆಂಗಳೂರು ಕರೆಯಲ್ಪಡುತ್ತಿದೆ.

    ಬೆಂಗಳೂರಿಗೆ ಇಷ್ಟು ಗರಿಮೆಗಳು ದಕ್ಕಲು ಕಾರಣ ಎಸ್‌.ಎಂ ಕೃಷ್ಣ ಅವರು ಮಾಡಿದ ಕೃಷಿ ಎಂದರೇ ತಪ್ಪಾಗಲಾರದು.. ಬೆಂಗಳೂರನ್ನು ಸಿಂಗಾಪುರ ಮಾಡುವ ಘೋಷಣೆಯೊಂದಿಗೆ ಎಸ್‌ಎಂ ಕೃಷ್ಣ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ರು. ಆದ್ರೆ, ಬೆಂಗಳೂರು ಸಿಂಗಾಪುರ ಆಗದಿದ್ರೂ ಎಸ್‌ಎಂ ಕೃಷ್ಣ ದೂರದೃಷ್ಟಿಯ ಕಾರಣ ಐಟಿ ಸಿಟಿಯಾಗಿ ಹೊರಹೊಮ್ಮಿತು. ಅಷ್ಟಕ್ಕೂ, ಬೆಂಗಳೂರಿಗೆ ಮತ್ತು ರಾಜ್ಯಕ್ಕೆ ಎಸ್‌ಎಂ ಕೃಷ್ಣ ಅವರು ಕೊಟ್ಟ ಕೊಡುಗೆಗಳ ಪಟ್ಟಿಯನ್ನು ಒಮ್ಮೆ ಕಣ್ಣಾಯಿಸೋಣ…

    ಬೆಂಗಳೂರಿಗೆ ಎಸ್‌ಎಂ ಕೃಷ್ಣ ಕೊಡುಗೆ
    * ಜಗತ್ತಿನ ಪ್ರಖ್ಯಾತ ಐಟಿ ಕಂಪನಿಗಳಿಗೆ ಬೆಂಗಳೂರಿನಲ್ಲಿ ಸ್ಪೇಸ್
    * ಐಟಿ ರಂಗದ ಅಭಿವೃದ್ಧಿಗೆ ಅನುಗುಣವಾದ ವಾತಾವರಣ
    * ಐಟಿ ಪಾರ್ಕ್, ಎಸ್‌ಇಝೆಡ್, ಮೂಲಸೌಕರ್ಯಕ್ಕೆ ಆದ್ಯತೆ
    * ತಮ್ಮ ಭಾಷಾ ಪ್ರೌಢಿಮೆ ಬಳಸಿ ಐಟಿ ದಿಗ್ಗಜರ ಜೊತೆ ಮಂಥನ
    * ತೆರಿಗೆ ಪ್ರೋತ್ಸಾಹಕ, ಸರಳೀಕೃತ ನಿಯಮ.. ಸ್ಟಾರ್ಟಪ್‌ಗಳಿಗೆ ಬೆಂಬಲ
    * ಬೆಂಗಳೂರಿಗೆ ಪ್ರತ್ಯೇಕ ಟಾಸ್ಕ್ಫೋರ್ಸ್, ವಿದೇಶಿ ಹೂಡಿಕೆ ಆಕರ್ಷಣೆ
    * ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಬೆಂಗಳೂರಿನ ಬಗ್ಗೆ ಪ್ರಮೋಷನ್
    * ಇನ್ಫೊಸಿಸ್, ವಿಪ್ರೋ, ಟಾಟಾ ಮೊದಲಾದ ಕಂಪನಿಗಳಿಗೆ ಗಟ್ಟಿ ನೆಲೆ
    * ಐಟಿ ಹೊರಗುತ್ತಿಗೆ ಸೇವೆ ಒದಗಿಸುವ ಅತೀದೊಡ್ಡ ಹಬ್
    * ಕೆಂಪೇಗೌಡ ಏರ್‌ಪೋರ್ಟ್, ಮೆಟ್ರೋಗೆ ಆದ್ಯತೆ
    * ಪೀಣ್ಯ ಕೈಗಾರಿಕಾ ಪ್ರದೇಶದ ರೂವಾರಿ
    * ವಿಧಾನಸೌಧದ ಪ್ರತಿಕೃತಿ ವಿಕಾಸಸೌಧ ನಿರ್ಮಾಣ

    ರಾಜ್ಯಕ್ಕೆ ಎಸ್‌ಎಂ ಕೃಷ್ಣ ಕೊಡುಗೆ
    * ಬೆಂಗಳೂರಿಗೆ ಪರ್ಯಾಯ ನಗರವಾಗಿ ಮೈಸೂರು
    * ಬೆಂಗಳೂರು-ಮೈಸೂರು ನಾಲ್ಕು ಪಥದ ಹೆದ್ದಾರಿ
    * ಮೈಸೂರು ಹೊರವರ್ತುಲ ರಸ್ತೆ
    * ಮೈಸೂರಲ್ಲಿ ಇನ್ಫೋಸಿಸ್, ವಿಪ್ರೋ ಕ್ಯಾಂಪಸ್
    * ಕಂದಾಯ ಇಲಾಖೆಯಲ್ಲಿ ಡಿಜಿಟಲೀಕರಣ
    * ಸ್ತ್ರೀ ಶಕ್ತಿ ಯೋಜನೆಗೆ ಆದ್ಯತೆ
    * ಯಶಸ್ವಿನಿ ಯೋಜನೆ ಜಾರಿಗೆ ತಂದ ಕೀರ್ತಿ
    * ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ
    * ಶಾಲಾ ಮಕ್ಕಳಿಗೆ ಕಂಪ್ಯೂಟರ್ ಕಲಿಕೆ ವ್ಯವಸ್ಥೆ

  • LAM ರೀಸರ್ಚ್, ಲಿಯೋ ಲ್ಯಾಬ್ಸ್, ಟೆಕಾಂಡ್ ಕಂಪನಿಗಳ ಉನ್ನತ ಮಟ್ಟದ ಪ್ರತಿನಿಧಿಗಳ ಜೊತೆ ಎಂ.ಬಿ ಪಾಟೀಲ್‌ ಚರ್ಚೆ

    LAM ರೀಸರ್ಚ್, ಲಿಯೋ ಲ್ಯಾಬ್ಸ್, ಟೆಕಾಂಡ್ ಕಂಪನಿಗಳ ಉನ್ನತ ಮಟ್ಟದ ಪ್ರತಿನಿಧಿಗಳ ಜೊತೆ ಎಂ.ಬಿ ಪಾಟೀಲ್‌ ಚರ್ಚೆ

    – ಸಚಿವ ಪ್ರಿಯಾಂಕ್ ಖರ್ಗೆ ಸಾಥ್

    ಸ್ಯಾನ್ ಫ್ರಾನ್ಸಿಸ್ಕೊ: ರಾಜ್ಯದ ಕೈಗಾರಿಕಾ ವಲಯಕ್ಕೆ ಹೆಚ್ಚಿನ ಬಂಡವಾಳ ಹೂಡಿಕೆ ಸೆಳೆಯಬೇಕೆಂಬ ಗುರಿಯೊಂದಿಗೆ ಅಮೆರಿಕ ಪ್ರವಾಸ ಕೈಗೊಂಡಿರುವ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್‌ (MB Patil) ಅವರು ಗುರುವಾರ ಇಲ್ಲಿ LAM ರೀಸರ್ಚ್ (Lam Research), ಲಿಯೋ ಲ್ಯಾಬ್ಸ್ ಮತ್ತು ಟೆಕಾಂಡ್ ಕಂಪನಿಗಳ ಉನ್ನತ ಮಟ್ಟದ ಪ್ರತಿನಿಧಿಗಳ ಜೊತೆ ವಿಸ್ತೃತ ಮಾತುಕತೆ ನಡೆಸಿದ್ದಾರೆ.

    ಇವತ್ತಿನ ಸಭೆಯಲ್ಲಿ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಕೂಡ ಸಾಥ್ ನೀಡಿದರು. ಈ ಮೂರೂ ಸಂಸ್ಥೆಗಳ ಉನ್ನತಾಧಿಕಾರಿಗಳ ಜೊತೆ ವಿಸ್ತೃತ ಚರ್ಚೆ ನಡೆಸಿದ್ದಲ್ಲದೇ ರಾಜ್ಯದಲ್ಲಿ ಬಂಡವಾಳ ಹೂಡಲು ಇರುವ ಪೂರಕ ವಾತಾವರಣದ ಬಗ್ಗೆ ವಿವರಿಸಿದರು. ಇದನ್ನೂ ಓದಿ: ಹೊಸ ಮದ್ಯದಂಗಡಿಗಳಿಗೆ ಲೈಸೆನ್ಸ್ ನೀಡಲ್ಲ ಅಂತಿದ್ದಾರೆ ಸಿಎಂ-ಉದ್ಯೋಗ ಸೃಷ್ಟಿಯ ಚಿಂತನೆಯಿದೆ ಅಂತಿದ್ದಾರೆ ಡಿಸಿಎಂ

    ಸೆಮಿಕಂಡಕ್ಟರ್ ಉತ್ಪನ್ನಗಳು ಮತ್ತು ಸೇವೆಗಳಿಗೆ ಹೆಸರಾಗಿರುವ ಎಲ್ಎಎಂ ರೀಸರ್ಚ್ ಕಂಪನಿಯು ಈ ಕ್ಷೇತ್ರದಲ್ಲಿ 23 ವರ್ಷಗಳ ಅನುಭವ ಹೊಂದಿದ್ದು, ಬೆಂಗಳೂರಿನಲ್ಲೇ ನೆಲೆ ಹೊಂದಿದೆ. ಮುಂದಿನ ತಲೆಮಾರುಗಳಿಗೆ ಅಗತ್ಯವಾದ ಪರಿಣಿತ ಇಂಜಿನಿಯರುಗಳನ್ನು ಸಜ್ಜುಗೊಳಿಸಲು ಉತ್ಸುಕವಾಗಿರುವ ಕಂಪನಿಯು ಕರ್ನಾಟಕ ಸರ್ಕಾರದೊಂದಿಗೆ ಸಹಭಾಗಿತ್ವ ಬಯಸಿದೆ ಎಂದು ಎಂಬಿಪಿ ಹೇಳಿದ್ದಾರೆ.

    ಇದಲ್ಲದೇ ಬೆಂಗಳೂರಿನಲ್ಲಿರುವ ಸೆಮಿಕಂಡಕ್ಟರ್ ಆರ್ & ಡಿ ಪಾರ್ಕ್ ನಲ್ಲಿ ನೂತನ ಪ್ರಯೋಗಾಲಯಗಳಲ್ಲಿ ರಚನಾತ್ಮಕ ಹೂಡಿಕೆ ಮಾಡುವ ಸಾಧ್ಯತೆಗಳನ್ನು ಪರಿಶೀಲಿಸಲು ಎಲ್ಎಎಂ ರೀಸರ್ಚ್ ಕಂಪನಿಯು ಮುಕ್ತವಾಗಿದೆ. ಇದನ್ನು ಸರ್ಕಾರದ ಪರವಾಗಿ ಸ್ವಾಗತಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಕನ್ನಡ ಮಾತು ಕೇಳಿ ಇಂಗ್ಲಿಷ್‌ನಲ್ಲಿ ಉತ್ತರ ಕೊಟ್ಟ ರಚಿನ್‌ – ಬೆಂಗ್ಳೂರು ವಿಲ್ಸನ್‌ ಗಾರ್ಡನ್‌ ನೆನಪು ಹಂಚಿಕೊಂಡ ರವೀಂದ್ರ 

    ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ಹೆಸರಾಗಿರುವ ಲಿಯೋ (ಲೋ ಅರ್ತ್ ಆರ್ಬಿಟ್) ಲ್ಯಾಬ್, ಭಾರತದಲ್ಲಿ ರೆಡಾರ್‌ಗಳನ್ನ ಸ್ಥಾಪಿಸಲು ಮುಂದಾಗುವ ಖಾಸಗಿ ಕ್ಷೇತ್ರದವರಿಗೆ ಸರ್ಕಾರವು ನೀಡುವ ಅನುಮೋದನೆಗಳ ಕುರಿತು ಅಧ್ಯಯನ ನಡೆಸುವ ಬಗ್ಗೆ ಚರ್ಚಿಸಿದೆ. ಜೊತೆಗೆ ರಾಜ್ಯದ ಬಾಹ್ಯಾಕಾಶ ಕಾರ್ಯಪರಿಸರದಲ್ಲಿ ಅದು ನೆಲೆಯೂರಲು ಆಸಕ್ತಿ ತಾಳಿದೆ. ಇದಕ್ಕಾಗಿ ನಮ್ಮಲ್ಲಿ `ಸ್ಪೇಸ್ ಟೆಕ್ ಸೆಂಟರ್ ಆಫ್ ಎಕ್ಸಲೆನ್ಸ್’ ಸ್ಥಾಪನೆಗೆ ಕೈ ಜೋಡಿಸಲು ಅದು ಒಲವು ಹೊಂದಿದೆ ಎಂದು ಪ್ರಕಟಣೆ ತಿಳಿಸಿದೆ.

    ಬಿಗ್ ಡೇಟಾ ಕ್ಷೇತ್ರದಲ್ಲಿ ಪರಿಣತಿ ಹೊಂದಿರುವ ಟೆಕಾಂಡ್ ಕಂಪನಿಯ ಪ್ರತಿನಿಧಿಗಳು, ಬೆಂಗಳೂರಿನಲ್ಲಿ ತಮ್ಮ ಆರ್ & ಡಿ ಕೇಂದ್ರ ತೆರೆಯುವ ಬಗ್ಗೆ ಚರ್ಚಿಸಿದ್ದಾರೆ. ಇದು ಸಾಧ್ಯವಾದರೆ ರಾಜ್ಯದಲ್ಲಿ ಅಸೆಂಬ್ಲಿಂಗ್ ಮತ್ತು ಹಾರ್ಡ್‌ವೇರ್‌ ಉತ್ಪಾದನೆ ಆರಂಭಿಸಲು ಸಾಧ್ಯವಾಗಲಿದೆ ಎಂದು ಅವರು ತಿಳಿಸಿದ್ದಾರೆ. ಬಿಗ್ ಡೇಟಾದಿಂದ ನಮ್ಮ 2 ಮತ್ತು 3ನೇ ಹಂತದ ನಗರಗಳಿಗೂ ಪ್ರಯೋಜನ ಸಿಗಲಿದೆ. ಇ-ಆಡಳಿತದಲ್ಲಿ ಕೂಡ ಅದು ಸರ್ಕಾರದೊಂದಿಗೆ ಸಹಭಾಗಿತ್ವ ಹೊಂದಲು ಬಯಸಿದೆ ಎಂದು ಪಾಟೀಲ ಮಾಹಿತಿ ನೀಡಿದ್ದಾರೆ.

    ಮಾತುಕತೆಗಳಲ್ಲಿ ಎಲ್ಎಎಂ ರೀಸರ್ಚ್ ಕಂಪನಿಯ ಉಪಾಧ್ಯಕ್ಷ ರಂಗೇಶ್ ರಾಘವನ್, ಕಾರ್ತಿಕ್ ರಾಮಮೋಹನ್, ಪ್ಯಾಟ್ ಲಾರ್ಡ್, ಲಿಯೋ ಲ್ಯಾಬ್ಸ್ ಕಂಪನಿಯ ಸಂಸ್ಥಾಪಕ ಡ್ಯಾನ್ ಸೀಪರ್ಲಿ, ರಚಿತ್ ಭಾಟಿಯಾ ಮತ್ತು ಟೇಕಾಂಡ್ ಕಂಪನಿಯ ಸಿಇಒ ಸಾಹಿಲ್ ಚಾವ್ಲಾ ಮತ್ತು ಸಹ ಸಂಸ್ಥಾಪಕ ರಮೇಶ್ ಸಿಂಗ್ ಭಾಗವಹಿಸಿದ್ದರು. ಸರ್ಕಾರದ ನಿಯೋಗದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್. ಸೆಲ್ವಕುಮಾರ್, ಐಟಿ-ಬಿಟಿ ಇಲಾಖೆ ಕಾರ್ಯದರ್ಶಿ ಏಕ್‌ರೂಪ್‌ ಕೌರ್ ಮತ್ತು ಆಯುಕ್ತೆ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿಲಿಕಾನ್ ಸಿಟಿ ಬೆಂಗ್ಳೂರಲ್ಲಿ ತಲೆ ಎತ್ತಲಿದೆ ಐಕಿಯ ಸ್ಟೋರ್

    ಸಿಲಿಕಾನ್ ಸಿಟಿ ಬೆಂಗ್ಳೂರಲ್ಲಿ ತಲೆ ಎತ್ತಲಿದೆ ಐಕಿಯ ಸ್ಟೋರ್

    ಬರ್ನ್: ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಇಂಗ್ಕಾ ಗ್ರೂಪ್ (ಐಕಿಯ) ಸಿಇಒ ಜೆಸ್ಪರ್ ಬ್ರಾಡಿನ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಕರ್ನಾಟಕದಲ್ಲಿ ಐಕಿಯ ಸ್ಟೋರ್ ತೆರೆಯುತ್ತಿರುವ ಹಿನ್ನೆಲೆಯಲ್ಲಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

    ಜೂನ್ ತಿಂಗಳಲ್ಲಿ ಬೆಂಗಳೂರಿನ ನಾಗಸಂದ್ರದಲ್ಲಿ ಐಕಿಯ ಸ್ಟೋರ್ ತೆರೆಯಲಿದ್ದು, ಇದರ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಜೆಸ್ಪರ್ ಬ್ರಾಡಿನ್ ಅವರು ಸಿಎಂ ಬೊಮ್ಮಾಯಿ ಅವರನ್ನು ಆಹ್ವಾನಿಸಿದರು. ಇದನ್ನೂ ಓದಿ: ದಾವೋಸ್‌ನಲ್ಲೂ ಆಪರೇಷನ್ ಕಮಲದ ಸದ್ದು- ಸಿಎಂಗೆ ನೀವು ಸ್ಟೇಬಲ್ ಇದ್ದೀರಾ ಎಂದ ಮಿತ್ತಲ್

    Davos 2

    ಐಕಿಯದ ಭಾರತೀಯ ಕೇಂದ್ರ ಕಚೇರಿ ಬೆಂಗಳೂರಿನಲ್ಲಿದ್ದು ಪೀಠೋಪಕರಣಗಳ ತಯಾರಿಕೆಯ ಸಂದರ್ಭದಲ್ಲಿ ಬಿದಿರು ಮತ್ತಿತರ ಸ್ಥಳೀಯ ವಸ್ತುಗಳ ವ್ಯಾಪಕ ಬಳಕೆಯ ಕುರಿತು ಸಹ ಚರ್ಚಿಸಲಾಯಿತು. ಇದನ್ನೂ ಓದಿ: ಲುಲು ಗ್ರೂಪ್‍ನೊಂದಿಗೆ 2,000 ಕೋಟಿ ರೂ. ಹೂಡಿಕೆ ಒಪ್ಪಂದ – ಪ್ರತಿಷ್ಠಿತ ಕಂಪನಿಗಳೊಂದಿಗೆ ಬೊಮ್ಮಾಯಿ ಚರ್ಚೆ

    INKGA 3

    ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಐಟಿ ಬಿಟಿ, ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ, ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣ ರೆಡ್ಡಿ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್, ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

  • ಐಟಿ ವೃತ್ತಿಪರರ ವರ್ಕ್ ಫ್ರಮ್ ಹೋಮ್ ಜುಲೈ 31ರ ವರೆಗೆ ವಿಸ್ತರಣೆ

    ಐಟಿ ವೃತ್ತಿಪರರ ವರ್ಕ್ ಫ್ರಮ್ ಹೋಮ್ ಜುಲೈ 31ರ ವರೆಗೆ ವಿಸ್ತರಣೆ

    ಬೆಂಗಳೂರು: ಕೋವಿಡ್-19 ಹಿನ್ನೆಲೆಯಲ್ಲಿ ಐಟಿ ವೃತ್ತಿಪರರು ಮುಂದಿನ ಜುಲೈ 31ರ ವರೆಗೆ ಮನೆಯಿಂದಲೇ ಕೆಲಸ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.

    ಕೊರೊನಾ ಲಾಕ್‍ಡೌನ್ ನಿರ್ಬಂಧದಿಂದ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಆಗಿರುವ ಸಮಸ್ಯೆಗಳ ಕುರಿತಂತೆ ಎಲ್ಲಾ ರಾಜ್ಯಗಳ ಮಾಹಿತಿ ತಂತ್ರಜ್ಞಾನ ಸಚಿವರ ಜತೆ ನಡೆಸಿದ ವೀಡಿಯೋ ಕಾನ್ಫರೆನ್ಸ್ ನಲ್ಲಿ ಕೇಂದ್ರ ಐಟಿ ಮತ್ತು ದೂರಸಂಪರ್ಕ ಖಾತೆ ಸಚಿವ ರವಿ ಶಂಕರ್ ಪ್ರಸಾದ್ ಅವರು ಈ ವಿಷಯ ಪ್ರಕಟಿಸಿದ್ದಾರೆ.

    ಲಾಕ್ ಡೌನ್ ಬಳಿಕ ರಾಜ್ಯ ಐಟಿ ವಲಯ ಎದುರಿಸುತ್ತಿರುವ ಸವಾಲುಗಳು, ಕಂಡುಕೊಂಡಿರುವ ಪರಿಹಾರಗಳು ಹಾಗೂ ರಾಜ್ಯ ಸರ್ಕಾರ ಕೈಗೊಂಡಿರುವ ಪರಿಹಾರ ಕ್ರಮಗಳ ಕುರಿತು ಕೇಂದ್ರ ಸಚಿವರಿಗೆ ವಿವರಿಸಿದ ಐಟಿ-ಬಿಟಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವತ್ಥನಾರಾಯಣ, ರಾಜ್ಯದ ಐಟಿ ವೃತ್ತಿ ಪರರಿಗೆ ಮುಂದಿನ ವರ್ಷ ಮಾರ್ಚ್ ವರೆಗೂ ಮನೆಯಿಂದಲೇ ಕೆಲಸ ಮಾಡಲು ಅವಕಾಶ ಕಲ್ಪಿಸಬೇಕೆಂದು ಕೋರಿದರು. ಈ ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವರು, ಸದ್ಯ ಜುಲೈ 31ರ ವರೆಗೆ ವರ್ಕ್ ಫ್ರಮ್ ಹೋಂ ಸೌಲಭ್ಯ ವಿಸ್ತರಣೆ ಮಾಡಲಾಗುವುದು. ಪರಿಸ್ಥಿತಿ ನೋಡಿಕೊಂಡು ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

    ಐಟಿ ವಲಯ ಸದ್ಯ ಹಲವಾರು ಸಂಕಷ್ಟಗಳನ್ನು ಎದುರಿಸುತ್ತಿದ್ದು, ರಾಜ್ಯದ ಐಟಿ ವೃತ್ತಿಪರರ ಜತೆ ಪ್ರತ್ಯೇಕ ವೀಡಿಯೋ ಕಾನ್ಫರೆನ್ಸ್ ನಡೆಸಬೇಕೆಂಬ ಡಾ. ಅಶ್ವತ್ಥನಾರಾಯಣ ಅವರ ಮನವಿಗೂ ಸಕಾರಾತ್ಮಕವಾಗಿ ಸ್ಪಂದಿಸಿದ ರವಿ ಶಂಕರ್ ಪ್ರಸಾದ್, ಶೀಘ್ರದಲ್ಲೇ ವೀಡಿಯೋ ಕಾನ್ಫರೆನ್ಸ್ ನಡೆಸುವ ಭರವಸೆ ನೀಡಿದರು.

    ಕಾರ್ಯ ತಂತ್ರ ಸಮಿತಿ:
    ‘ಕೋವಿಡ್‍ನಂಥ ಪರಿಸ್ಥಿತಿ ಎದುರಾದಾಗ ಐಟಿ ಹಾಗೂ ಸಂಬಂಧಿತ ವಲಯಗಳು ಯಾವ ರೀತಿ ಕಾರ್ಯ ನಿರ್ವಹಿಸಬೇಕು. ವಿಪತ್ತಿನ ಸಂದರ್ಭದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿ, ಪರಿಹಾರ ಕ್ರಮಗಳ ಬಗ್ಗೆ ರೂಪುರೇಷೆ ಸಿದ್ಧಪಡಿಸಲು ರಾಷ್ಟ್ರ ಮಟ್ಟದ ಕಾರ್ಯತಂತ್ರ ಸಮಿತಿ ರಚಿಸಲಾಗುವುದು,’ ಎಂದು ಕೆಂದ್ರ ಸಚಿವರು ತಿಳಿಸಿದರು.

    ‘ಐಟಿ ವಲಯ ಮಾತ್ರವಲ್ಲದೆ, ಎಲ್ಲಾ ರಾಜ್ಯಗಳು ಅನ್ವೇಷಣೆ, ಸ್ಟಾರ್ಟ್ ಅಪ್‍ಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಇ-ಆಡಳಿತ, ಇ-ಪಾಸ್‍ಗಳ ಪರಿಣಾಮಕಾರಿ ಜಾರಿಗೆ ಗಮನ ಹರಿಸಲಾಗುವುದು. ಜತೆಗೆ, ಕೋವಿಡ್ ಸಮಸ್ಯೆ ಎದುರಾದಾಗಿನಿಂದ ಬಹುತೇಕ ಎಲ್ಲ ವಲಯಗಳ ಕೆಲಸದ ರೀತಿ ನೀತಿ ಬದಲಾಗಿದ್ದು, ಶೇ. 80ರಷ್ಟು ಐಟಿ ವೃತ್ತಿಪರರು ಮನೆಯಿಂದಲೇ ಕೆಲಸ ಮಾಡುತ್ತಿದ್ದಾರೆ. ಬಹುತೇಕ ಎಲ್ಲ ಕೆಲಸ ಕಾರ್ಯಗಳು ಆನ್‍ಲೈನ್ ಮೂಲಕವೇ ನಡೆಯುತ್ತಿದೆ. ಇದಕ್ಕೆ ಅನುಕೂಲವಾಗುವಂತೆ ಭಾರತ್ ನೆಟ್ ಯೋಜನೆ ಮೂಲಕ ದೇಶದ ಮೂಲೆಮೂಲೆಗೂ ಇಂಟರ್ ನೆಟ್ ಸಂಪರ್ಕ ಜಾಲ ಬಲಪಡಿಸಲಾಗುತ್ತದೆ,’ ಎಂದು ರವಿ ಶಂಕರ್ ಪ್ರಸಾದ್ ಹೇಳಿದರು.

    ಮೇಕ್ ಇನ್ ಇಂಡಿಯಾ:
    ‘ಮೇಕ್ ಇನ್ ಇಂಡಿಯಾ ಯೋಜನೆಗಳ ಕಾರ್ಯರೂಪಕ್ಕೆ ಇದು ಸಕಾಲ. ಕೋವಿಡ್ ನಂತರದಲ್ಲಿ ದೇಶದ ಆರ್ಥಿಕತೆಯ ಪುನಶ್ಚೇತನಕ್ಕೆ ಮೇಕ್ ಇನ್ ಇಂಡಿಯಾ ಯೋಜನೆಗೆ ಹೆಚ್ಚು ಒತ್ತು ನೀಡಬೇಕು. ಈ ನಿಟ್ಟಿನಲ್ಲಿ ನಾವು ತಕ್ಕ ಮಟ್ಟಿನ ಯಶಸ್ಸು ಪಡೆದಿದ್ದರೂ, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬರುವುದಕ್ಕೂ ಮೊದಲು ದೇಶದಲ್ಲಿ ಇದ್ದ ಮೊಬೈಲ್ ಉತ್ಪಾದಕ ಸಂಸ್ಥೆಗಳ ಸಂಖ್ಯೆ 2 ರಿಂದ 268ಕ್ಕೆ ಏರಿದೆ. ಮೇಕ್ ಇನ್ ಇಂಡಿಯಾ ಯೋಜನೆ ಯಶಸ್ಸಿಗೆ ಇದು ಅತ್ಯುತ್ತಮ ಉದಾಹರಣೆ,’ ಎಂದು ವಿವರಿಸಿದರು.

    ಆನ್‍ಲೈನ್ ಆರೋಗ್ಯ ಸೇವೆ:
    ‘ಕೋವಿಡ್ ನಂತರ ಆರೋಗ್ಯ ಸೇವೆಯಲ್ಲೂ ತಂತ್ರಜ್ಞಾನದ ಬಳಕೆ ಹೆಚ್ಚಿದ್ದು ಆನ್‍ಲೈನ್ ಆರೋಗ್ಯ ವ್ಯವಸ್ಥೆಗೆ ಹೆಚ್ಚು ಒತ್ತು ನೀಡಲಾಗಿದೆ. ಕರ್ನಾಟಕ ಸೇರಿಂದಂತೆ ಮಹಾರಾಷ್ಟ್ರ, ತಮಿಳುನಾಡು, ತೆಲಂಗಾಣ ಹಾಗೂ ತಮಿಳುನಾಡಿನಲ್ಲಿ ಆನ್‍ಲೈನ್ ಆರೋಗ್ಯ ಸೇವೆ ಉತ್ತಮವಾಗಿದ್ದು, ಇತರ ರಾಜ್ಯಗಳಲ್ಲೂ ಇದು ವಿಸ್ತರಣೆ ಆಗಬೇಕು,’ ಎಂದರು.

    ಆಪ್ತ ಮಿತ್ರ ಹೆಲ್ಪ್ ಲೈನ್:
    ಶಿಕ್ಷಣ, ಅಗತ್ಯ ವಸ್ತುಗಳ ಪೂರೈಕೆ ಮುಂತಾದ ಹಲವು ಕಾರ್ಯಗಳಲ್ಲಿ ತಂತ್ರಜ್ಞಾನವನ್ನು ಸಮರ್ಥವಾಗಿ ಬಳಸಿಕೊಂಡು ಪರಿಹಾರ ಒದಗಿಸುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ ಎಂಬುದನ್ನು ಡಾ. ಅಶ್ವತ್ಥನಾರಾಯಣ ವೀಡಿಯೋ ಕಾನ್ಫರೆನ್ಸ್ ನಲ್ಲಿ ವಿವರಿಸಿದರು.

    ‘500ಕ್ಕೂ ಹೆಚ್ಚು ವೃತ್ತಿಪರರು ‘ಆಪ್ತ ಮಿತ್ರ ಹೆಲ್ಪ್ ಲೈನ್’ನ ಕಾಲ್ ಸೆಂಟರ್ ನಲ್ಲಿ ಹಗಲಿರುಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಪ್ರತಿ ನಿತ್ಯ ಸುಮಾರು 50 ಸಾವಿರ ಕರೆಗಳನ್ನು ಸ್ವೀಕರಿಸಿ, ಜನರ ಅಗತ್ಯಗಳಿಗೆ ಸ್ಪಂದಿಸುತ್ತಿದ್ದಾರೆ. ಇ-ಕಾಮರ್ಸ್ ಗೆ ಪರ್ಯಾಯವಾದ ವ್ಯವಸ್ಥೆ ಕಂಡುಕೊಂಡಿದ್ದು, ರೆಡ್ ಝೋನ್‍ನಲ್ಲಿರುವ ಜನ ಮನೆಯಿಂದ ಹೊರ ಬರುವ ಅಗತ್ಯ ಬಾರದಂತೆ ಎಲ್ಲಾ ವಸ್ತುಗಳನ್ನು ಅವರ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಆಗುತ್ತಿದೆ. ದಿನಸಿ, ಹಾಲು, ಔಷಧ, ತರಕಾರಿ ಮುಂತಾದ ವಸ್ತುಗಳನ್ನು ಮನೆಗೆ ತಲುಪಿಸಲು ವಿಧಿಸುತ್ತಿರುವ ದರ ಕೇವಲ 10 ರೂಪಾಯಿ. ಒಂದೇ ರೀತಿಯ ಸೇವೆ (ಪರಿಹಾರ ಸಾಮಗ್ರಿಗಳು) ಬೇರೆ ಬೇರೆ ಇಲಾಖೆಗಳಿಂದ ಪುನರಾವರ್ತನೆ ಆಗದಂತೆ ತಡೆಯಲು ತಂತ್ರಜ್ಞಾನದ ಮೊರೆ ಹೋಗಲಾಗಿದೆ,’ ಎಂದು ಉಪಮುಖ್ಯಮಂತ್ರಿ ತಿಳಿಸಿದರು.

  • ಐಟಿ-ಬಿಟಿ ಕಂಪನಿ ಓಪನ್ ಇಲ್ಲ, ನಾಳೆಯಿಂದ ಕಠಿಣ ರೂಲ್ಸ್: ಮಾಧುಸ್ವಾಮಿ

    ಐಟಿ-ಬಿಟಿ ಕಂಪನಿ ಓಪನ್ ಇಲ್ಲ, ನಾಳೆಯಿಂದ ಕಠಿಣ ರೂಲ್ಸ್: ಮಾಧುಸ್ವಾಮಿ

    ಬೆಂಗಳೂರು: ಸಿಎಂ ಯಡಿಯೂರಪ್ಪ ಏಪ್ರಿಲ್ 20ರಿಂದ ಅಂದರೆ ಇಂದಿನಿಂದ ಐಟಿ-ಬಿಟಿ ಕಂಪನಿ ಓಪನ್ ಆಗುತ್ತವೆ ಎಂದು ಹೇಳಿದ್ದರು. ಆದರೆ ಇದೀಗ ಕ್ಯಾಬಿನೆಟ್ ಸಭೆಯಲ್ಲಿ ಐಟಿ-ಬಿಟಿ ಕಂಪನಿ ಓಪನ್ ಇಲ್ಲ ಎಂದು ಸಚಿವ ಮಾಧುಸ್ವಾಮಿ ಘೋಷಣೆ ಮಾಡಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಮೇ 3ರ ತನಕ ಲಾಕ್‍ಡೌನ್ ಇರುತ್ತದೆ. ಹೀಗಾಗಿ ಯಾವುದೇ ರಿಯಾಯಿತಿ ಇರಲ್ಲ. ರಾಜ್ಯವೇ ಫುಲ್ ಲಾಕ್‍ಡೌನ್ ಆಗುತ್ತದೆ. ಕೇರಳ, ಉತ್ತರ ಪ್ರದೇಶ ಮಾದರಿಯಲ್ಲಿ ಸುಗ್ರಿವಾಜ್ಞೆಗೆ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ಆದ್ದರಿಂದ ರಾಜ್ಯದಲ್ಲಿ ನಾಳೆಯಿಂದ ಫುಲ್ ಟಫ್ ರೂಲ್ಸ್ ಜಾರಿಯಾಗಲಿದೆ. ಲಾಕ್‍ಡೌನ್‍ನನ್ನು ಮೇ.3ರ ತನಕ ಮುಂದುವರಿಸಬೇಕು ಎಂದು ನಿರ್ಧಾರ ಮಾಡಲಾಗಿದೆ ಎಂದರು.

    ಈಗಿರುವ ಲಾಕ್‍ಡೌನ್ ಮುಂದುವರಿಯುತ್ತೆ. ಯಾವುದೇ ಬದಲಾವಣೆ ಇಲ್ಲ. ಎರಡು-ಮೂರು ದಿನದಲ್ಲಿ ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ ಬಂದರೆ ಆ ಬಳಿಕ ಕ್ರಮ ಕೈಗೊಳ್ಳಲಾಗುತ್ತದೆ. ಐಟಿ, ಬಿಟಿ ಕಂಪನಿ ಮತ್ತು ಕಾರ್ಖಾನೆ ಎಲ್ಲವೂ ಬಂದ್ ಆಗಲಿದೆ. ಹೀಗಾಗಿ ಲಾಕ್‍ಡೌನ್ ಯಥಾಸ್ಥಿತಿ ಮುಂದುವರಿಯುತ್ತೆ ಎಂದು ಸ್ಪಷ್ಟ ಪಡಿಸಿದ್ದಾರೆ.

    ಇದೇ ವೇಳೆ ಪಾದರಾಯನಪುರದ ಗಲಾಟೆಯ ಬಗ್ಗೆ ಮಾತನಾಡಿ, ಪಾದರಾಯನಪುರ ಗಲಾಟೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಪ್ರಕರಣಕ್ಕೆ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳುತ್ತದೆ. ಕೇರಳ ಮತ್ತು ಉತ್ತರಪ್ರದೇಶ ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳನ್ನೇ ಜಾರಿ ಮಾಡುತ್ತೇವೆ. ಯಾರಾದರೂ ಪಾಲನೆ ಮಾಡಲಿದ್ದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

    ಕೊರೊನಾವನ್ನು ಹತೋಟಿಗೆ ತರಲೇಬೇಕು ಅನ್ನೋ ತೀರ್ಮಾನವನ್ನ ಸರ್ಕಾರ ಮಾಡಿದೆ. ಹೀಗಾಗಿ ಕೊರೊನಾ ವಾರಿಯರ್ಸ್ ಗೆ ರಕ್ಷಣೆ ಕೊಡುತ್ತೇವೆ. ಅದೇ ರೀತಿ ಅವರಿಗೆ ತೊಂದರೆ ಕೊಟ್ಟರೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮಾಧುಸ್ವಾಮಿ ಎಚ್ಚರಿಕೆ ನೀಡಿದರು.

    ಸರ್ಕಾರ 21ರ ತನಕ ಹಿಂದಿನ ನಿಯಮ ಮುಂದುವರಿಯುತ್ತೆ ಅಂತ ಆದೇಶ ಮಾಡಿದ್ದು, 21ರ ನಂತರ ಸಡಿಲ ಆಗುತ್ತೆ ಅಂತ ಆದೇಶ ಮಾಡಿಲ್ಲ. ಹಾಗಾಗಿ ಇಂದಿನ ಕ್ಯಾಬಿನೆಟ್ ತೀರ್ಮಾನದಂತೆ ಮೇ 3ರ ತನಕ ಲಾಕ್‍ಡೌನ್ ಮುಂದುವರಿಯುತ್ತೆ ಎಂದು ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್ ಹೇಳಿದರು.