Tag: IT Enquiry

  • ಬಳ್ಳಾರಿ ಜೈಲಲ್ಲಿ ಗುರುವಾರ ಕೊಲೆ ಆರೋಪಿ ದರ್ಶನ್‌ಗೆ `ಐಟಿ’ ಡ್ರಿಲ್

    ಬಳ್ಳಾರಿ ಜೈಲಲ್ಲಿ ಗುರುವಾರ ಕೊಲೆ ಆರೋಪಿ ದರ್ಶನ್‌ಗೆ `ಐಟಿ’ ಡ್ರಿಲ್

    -ಮಾಹಿತಿ ನೀಡದೇ ವಕೀಲರ ದಿಢೀರ್ ಭೇಟಿ, ದರ್ಶನ್ ಜೊತೆ ಚರ್ಚೆ

    ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ಆರೋಪಿ ದರ್ಶನ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಆದಷ್ಟು ಬೇಗ ಜಾಮೀನು ಪಡೆದು ಹೊರಗೆ ಬರಬೇಕು ಎನ್ನುವ ಆಲೋಚನೆಯಲ್ಲಿದ್ದ ದರ್ಶನ್‌ಗೆ ಐಟಿ (ಆದಾಯ ತೆರಿಗೆ ಇಲಾಖೆ) (Income Tax) ಅಧಿಕಾರಿಗಳ ವಿಚಾರಣೆ ಬಹುತೇಕ ಮುಳುವಾಗುವ ಸಾಧ್ಯತೆ ಹೆಚ್ಚಾಗಿದೆ.

    ಕೊಲೆ ಪ್ರಕರಣದಲ್ಲಿನ ಹಣದ ವಹಿವಾಟಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಐಟಿ ಎಂಟ್ರಿ ಕೊಟ್ಟಿದೆ. ಗುರುವಾರ ಅಥವಾ ಶುಕ್ರವಾರ ಬಳ್ಳಾರಿ ಜೈಲಿಗೆ ಐಟಿ ಅಧಿಕಾರಿಗಳು ಬರಲಿದ್ದಾರೆ. ಈಗಾಗಲೇ ಆರೋಪಿ ದರ್ಶನ್ ವಿಚಾರಣೆಗೆ ಕೋರ್ಟ್ ಅದೇಶ ನೀಡಿದೆ. ಜೊತೆಗೆ ಐಟಿ ಅಧಿಕಾರಿಗಳಿಗೆ ಸಹಕಾರ ನೀಡುವಂತೆ ಕೋರ್ಟ್‌ನಿಂದ ಜೈಲಿಗೆ ಇ-ಮೇಲ್ ಕಳುಹಿಸಲಾಗಿದೆ. ಹಣ ಕೊಟ್ಟು ಕೊಲೆ ಆರೋಪವನ್ನು ಮತ್ತೊಬ್ಬರ ಮೇಲೆ ಹೊರಿಸಲು ಪ್ಲಾನ್ ಮಾಡಲಾಗಿತ್ತು ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ. ಹೀಗಾಗಿ ಅಷ್ಟೊಂದು ಹಣ ಎಲ್ಲಿಂದ ಬಂತು? ಹೇಗೆಲ್ಲ ಹಣ ವರ್ಗಾವಣೆ ಮಾಡಲಾಗಿದೆ? ಎನ್ನುವ ನಿಟ್ಟಿನಲ್ಲಿ ವಿಚಾರಣೆ ನಡೆಸಲಿರುವ ಐಟಿ ಅಧಿಕಾರಿಗಳು ಹಣದ ಮೂಲ ಪತ್ತೆಗೆ ಮುಂದಾಗಿದ್ದು, ಐಟಿ ಅಧಿಕಾರಿಗಳು ಬರುವುದನ್ನು ಜೈಲು ಮೂಲಗಳು ಖಚಿತಪಡಿಸಿವೆ.ಇದನ್ನೂ ಓದಿ: MUDA Scam| ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಕೋರ್ಟ್‌ ಆದೇಶ

    ಕೊಲೆ ಬಳಿಕ ಅರೋಪ ಮೈಮೇಲೆ ಹೊತ್ತುಕೊಳ್ಳಲು ಆರೋಪಿ ದರ್ಶನ್ (Actor Darshan) ಲಕ್ಷ ಲಕ್ಷ ಡೀಲ್ ನೀಡಿದ್ದ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಐಟಿ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ. ಐಟಿ ಅಧಿಕಾರಿಗಳು ಆರೋಪಿ ದರ್ಶನ್‌ಗೆ ಡ್ರಿಲ್ ಮಾಡೋದಕ್ಕೆ ಬಳ್ಳಾರಿ ಸೆಂಟ್ರಲ್ ಜೈಲಿಗೆ ಬರ್ತಾರೆ ಎನ್ನುವ ಮಾಹಿತಿ ಸಿಕ್ಕಿದ ಕೂಡಲೇ ದರ್ಶನ್ ಪರ ವಕೀಲರು ಬಳ್ಳಾರಿ ಸೆಂಟ್ರಲ್ ಜೈಲಿಗೆ ಬಂದಿದ್ದಾರೆ.

    ಜೈಲಿಗೆ ಬರುವ ಕುರಿತು ಸಣ್ಣ ಸುಳಿವನ್ನು ನೀಡದೇ ದರ್ಶನ್ ಪರ ವಕೀಲ ರಾಮಸಿಂದ್ 35 ನಿಮಿಷಗಳ ಕಾಲ ಚರ್ಚೆ ಮಾಡಿದ್ದಾರೆ. ಐಟಿ ಅಧಿಕಾರಿಗಳು ದರ್ಶನ್ ವಿಚಾರಣೆ ಮಾಡಲಿರುವ ಹಿನ್ನೆಲೆ ಐಟಿ ಅಧಿಕಾರಿಗಳ ಮುಂದೆ ಯಾವ ರೀತಿಯಲ್ಲಿ ಉತ್ತರ ನೀಡಬೇಕು ಎನ್ನುವ ಬಗ್ಗೆ ಮಾಹಿತಿ ನೀಡಿದ್ದಾರೆ.

    ಒಟ್ಟಿನಲ್ಲಿ ಕೊಲೆ ಆರೋಪದ ಬಳಿಕ ಜಾಮೀನಿನ ನಿರೀಕ್ಷೆಯಲ್ಲಿದ್ದ ಆರೋಪಿ ದರ್ಶನ್‌ಗೆ ಇದೀಗ ಐಟಿ ವಿಚಾರಣೆಯ (IT Enquiry) ಆತಂಕ ಎದುರಾಗಿದೆ. ಐಟಿ ಅಧಿಕಾರಿಗಳ ಮುಂದೆ ಸ್ವಲ್ಪ ಯಾಮಾರಿದ್ರೂ ಜಾಮೀನಿಗೆ ಮತ್ತೇ ಕಷ್ಟ ಎಂದು ಜೈಲಿನಲ್ಲಿ ಆರೋಪಿ ಚಡಪಡಿಸುತ್ತಿದ್ದಾರೆ. ಇದೇ ಕಾರಣಕ್ಕೆ ಬುಧವಾರ ಬಂದಿದ್ದ ಆರೋಪಿ ದರ್ಶನ್ ಪರ ವಕೀಲರು ಒಂದಷ್ಟು ಆತ್ಮವಿಶ್ವಾಸ ತುಂಬಿದ್ದು, ವಿಚಾರಣೆ ವೇಳೆ ಧೈರ್ಯ ಕಳೆದುಕೊಳ್ಳದಂತೆ ಸಲಹೆ ನೀಡಿದ್ದಾರೆ.ಇದನ್ನೂ ಓದಿ: ವಕ್ಫ್‌ ತಿದ್ದುಪಡಿ ಮಸೂದೆ ವಿರುದ್ಧ ಬಂತು 1.25 ಕೋಟಿ ಪ್ರತಿಕ್ರಿಯೆ

     

  • ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ ಬೆನ್ನಲ್ಲೇ ದರ್ಶನ್‌ಗೆ ಐಟಿ ಕಂಟಕ

    ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ ಬೆನ್ನಲ್ಲೇ ದರ್ಶನ್‌ಗೆ ಐಟಿ ಕಂಟಕ

    ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಸದ್ಯ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಅವರನ್ನು ಆದಾಯ ತೆರಿಗೆ ಇಲಾಖೆ (Income Tax Department) ವಿಚಾರಣೆ ನಡೆಸಲಿದೆ.

    ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿದ್ದ ದರ್ಶನ್ ಅವರನ್ನು ರಾಜಾತಿಥ್ಯ ಪ್ರಕರಣದ ಬಳಿಕ ಬಳ್ಳಾರಿ ಸೆಂಟ್ರಲ್ ಜೈಲಿಗೆ (Ballary Central Jail) ವರ್ಗಾಯಿಸಲಾಗಿತ್ತು. ಇಂದು (ಸೆ.23ರಂದು) ನಡೆಯಬೇಕಿದ್ದ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ.ಇದನ್ನೂ ಓದಿ:ರೇಣುಕಾ ಹತ್ಯೆ ಕೇಸ್‌ – ಮೂವರಿಗೆ ಜಾಮೀನು ಮಂಜೂರು

    ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 70 ಲಕ್ಷ ರೂ. ಸಿಕ್ಕಿರುವ ಕಾರಣ ಐಟಿ ಅಧಿಕಾರಿಗಳು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ (Magistrate Court) ಮನವಿ ಸಲ್ಲಿಸಿದ್ದರು. ಬಳ್ಳಾರಿ ಜೈಲಿನಲ್ಲಿರುವ ಕೊಲೆ ಆರೋಪಿ ದರ್ಶನ್ (Darshan) ಅವರನ್ನು ವಿಚಾರಣೆ ನಡೆಸಲು ಅನುಮತಿ ನೀಡುವಂತೆ ಕೋರಿದ್ದರು. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಮನವಿಗೆ ಕೋರ್ಟ್ ಒಪ್ಪಿಗೆ ಸೂಚಿಸಿದೆ.

    ಕೋರ್ಟ್ ಒಪ್ಪಿಗೆ ಸೂಚಿಸಿದ ಬೆನ್ನಲ್ಲೇ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಂಗಳವಾರ ದರ್ಶನ್ ಅವರನ್ನು ವಿಚಾರಣೆ ನಡೆಸುವ ಸಾಧ್ಯತೆಯಿದೆ.ಇದನ್ನೂ ಓದಿ:ರೇಣುಕಾಸ್ವಾಮಿ ಹತ್ಯೆ ಕೇಸ್‌ – ಮೊದಲ ಜಾಮೀನು ಮಂಜೂರು

  • ಐಟಿ ತನಿಖೆ ಮುಗಿಸಿ ಬಿಗ್ ಬಾಸ್ ಮನೆಗೆ ತೆರಳಿದ ಕಿಚ್ಚ

    ಐಟಿ ತನಿಖೆ ಮುಗಿಸಿ ಬಿಗ್ ಬಾಸ್ ಮನೆಗೆ ತೆರಳಿದ ಕಿಚ್ಚ

    ಬೆಂಗಳೂರು: ಸತತ ಎರಡು ದಿನಗಳ ಐಟಿ ಪರಿಶೋಧದ ಬಳಿಕ ಕಿಚ್ಚ ಸುದೀಪ್ ಈಗ ಬಿಗ್ ಬಾಸ್ ಶೂಟಿಂಗ್ ಗೆ ತೆರಳಿದ್ದಾರೆ.

    ಸುದೀಪ್ ಇಂದು ಬೆಳ್ಳಬೆಳಗ್ಗೆ 5.30ಕ್ಕೆ ಬಿಗ್ ಬಾಸ್ ಶೂಟಿಂಗ್ ಸ್ಪಾಟ್ ಗೆ ತೆರಳಿದ್ದಾರೆ. ಸುದೀಪ್ ಮನೆಯಲ್ಲಿ ಕೊಂಚ ರೆಸ್ಟ್ ಮಾಡಿ ನಂತರ ಬಿಗ್ ಬಾಸ್ ರೀಡಿಂಗ್ ತೆಗೆದುಕೊಳ್ಳುತ್ತಿದ್ದಾರೆ. ಕೆಲವೇ ಗಂಟೆಗಳಲ್ಲಿ ಬಿಗ್ ಬಾಸ್ ಶೂಟಿಂಗ್ ಆರಂಭವಾಗಲಿದೆ. ಇದನ್ನೂ ಓದಿ: ಐಟಿ ಅಧಿಕಾರಿಗಳ ಬಳಿ ಕಿಚ್ಚ ಸುದೀಪ್ ಮನವಿ

    ಪ್ರತಿ ಶನಿವಾರ ಬಿಗ್ ಬಾಸ್ ಕಾರ್ಯಕ್ರಮದಲ್ಲಿ ‘ವಾರದ ಕಥೆ ಕಿಚ್ಚನ ಜೊತೆ’ ಸಂಚಿಕೆ ಟೆಲಿಕಾಸ್ಟ್ ಆಗುತ್ತದೆ. ಹೀಗಾಗಿ ಪರಿಶೀಲನೆಯನ್ನು ಬೇಗ ಮುಗಿಸುವಂತೆ ಅಧಿಕಾರಿಗಳ ಬಳಿ ಸುದೀಪ್ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಸುದೀಪ್ ಮನೆಯಲ್ಲಿ ಐಟಿ ರೇಡ್ ಅಂತ್ಯ- ಬೆಳಗ್ಗೆ ತೆರಳಿದ ಬಳಿಕ ಮತ್ತೆ ಅಧಿಕಾರಿಗಳು ಆಗಮಿಸಿದ್ದು ಯಾಕೆ?

    ಶನಿವಾರ ಬಿಗ್‍ಬಾಸ್ ಶೂಟಿಂಗ್ ಇದೆ. ನಾನು ಹೋಗಲೇಬೇಕು, ಇಲ್ಲದಿದ್ದಲ್ಲಿ `ವಾರದ ಕಥೆ ಕಿಚ್ಚನ ಜೊತೆ’ ಸಂಚಿಕೆಗೆ ಅಡ್ಡಿಯಾಗುತ್ತದೆ. ಸಂಜೆಯೊಳಗೆ ಪರಿಶೀಲನೆ ಮಾಡಿ ಮುಗಿಸುವಂತೆ ಶುಕ್ರವಾರವೇ ಸುದೀಪ್ ಮನವಿ ಮಾಡಿಕೊಂಡಿದ್ದರು ಎನ್ನುವ ವಿಚಾರ ಮೂಲಗಳಿಂದ ತಿಳಿದುಬಂದಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv
  • Exclusive: ಡಿಕೆ ಶಿವಕುಮಾರ್ ಮಗಳು ಐಶ್ವರ್ಯಗೆ ಐಟಿ ಕೇಳಿದ ಪ್ರಶ್ನೆಗಳು ಏನು?

    Exclusive: ಡಿಕೆ ಶಿವಕುಮಾರ್ ಮಗಳು ಐಶ್ವರ್ಯಗೆ ಐಟಿ ಕೇಳಿದ ಪ್ರಶ್ನೆಗಳು ಏನು?

    ಬೆಂಗಳೂರು: ನಾನು ಇದೂವರೆಗೆ ತಂದೆಯ ಬಳಿ ಆಸ್ತಿ ವಿಚಾರದ ಬಗ್ಗೆ ಕೇಳಿಲ್ಲ ಎಂದು ಇಂಧನ ಸಚಿವ ಡಿಕೆ ಶಿವಕುಮಾರ್ ಅವರ ಮಗಳು ಐಶ್ವರ್ಯ ಐಟಿ ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸಿದ್ದಾರೆ.

    ಇಂಧನ ಸಚಿವ ಡಿಕೆ ಶಿವಕುಮಾರ್ ಕುಟುಂಬದವರನ್ನು ಸೋಮವಾರ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ವಿಚಾರಣೆ ನಡೆಸಿ ಪ್ರಶ್ನೆ ಕೇಳಿದ್ದಾರೆ. ತಾಯಿ ಗೌರಮ್ಮ, ಪತ್ನಿ ಉಷಾ, ಪುತ್ರಿ ಐಶ್ವರ್ಯ ಮಧ್ಯಾಹ್ನ ಕ್ವೀನ್ಸ್ ರಸ್ತೆಯಲ್ಲಿರುವ ಕಚೇರಿಯಲ್ಲಿ ಪ್ರತ್ಯೇಕವಾಗಿ ವಿಚಾರಣೆಗೆ ಹಾಜರಾಗಿ ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸಿದ್ದಾರೆ. ಹೀಗಾಗಿ ಏನು ಪ್ರಶ್ನೆ ಕೇಳಿದ್ದಾರೆ ಅದಕ್ಕೆ ಉತ್ತರ ಏನು ನೀಡಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಪುತ್ರಿ ಐಶ್ವರ್ಯ ಉತ್ತರಿಸಿದ್ದು ಹೀಗೆ:
    ನಿಮ್ಮ ತಂದೆ ನಿಮ್ಮ ಹೆಸರಲ್ಲಿ ಎಷ್ಟು ಆಸ್ತಿ ಮಾಡಿದ್ದಾರೆ ಎನ್ನುವ ಪ್ರಶ್ನೆಗೆ ಅದೆಲ್ಲಾ ನನಗೆ ಗೊತ್ತಿಲ್ಲ. ಅವರು ಇದುವರೆಗೂ ಹೇಳಿಲ್ಲ ನಾನು ಕೇಳಿಲ್ಲ ಎಂದು ಹೇಳಿದ್ದಾರೆ. ಗ್ಲೋಬಲ್ ಕಾಲೇಜಿನಲ್ಲಿ ನಿಮ್ಮ ಪಾತ್ರ ಏನು? ನೀವು ಪಾಲುದಾರರಾ ಎಂದು ಕೇಳಿದ್ದಕ್ಕೆ ನಾನು ಪಾಲುದಾರಳಾಗಿ ಇಲ್ಲ. ಅಪ್ಪ ಮಾಡಿರಬಹುದು ಅದರ ಬಗ್ಗೆ ಗೊತ್ತಿಲ್ಲ ನಾನು ಅಲ್ಲಿ ಟ್ರಸ್ಟಿಯಾಗಿ ಇದ್ದೇನೆ ಎಂದು ಹೇಳಿದರು.

    ಟ್ರಸ್ಟಿ ಎಂದರೆ ಏನು? ನಿಮ್ಮ ಕೆಲಸ ಏನಿರುತ್ತದೆ ಎಂದಿದ್ದಕ್ಕೆ ಇಡೀ ಕಾಲೇಜಿನ ಬಗ್ಗೆ ಶಿಕ್ಷಣ ಟ್ರಸ್ಟ್ ಅಂತ ಮಾಡಲಾಗಿದೆ. ಅದರಲ್ಲಿ ನಾನು ಒಬ್ಬಳು ಟ್ರಸ್ಟಿ ಅಷ್ಟೇ. ಸಲಹೆ ಸೂಚನೆಗಳನ್ನು ಕೊಡಲಾಗುತ್ತದೆ ಎಂದು ಉತ್ತರಿಸಿದ್ದಾರೆ.

    ಇದನ್ನೂ ಓದಿ: Exclusive: ಡಿಕೆ ಶಿವಕುಮಾರ್ ಪತ್ನಿ ಉಷಾಗೆ ಐಟಿ ಕೇಳಿದ ಪ್ರಶ್ನೆಗಳು ಏನು?

    ಕಾಲೇಜಿನ ಹಣಕಾಸಿನ ವ್ಯವಹಾರದ ಬಗ್ಗೆ ಕೇಳಿದ ಪ್ರಶ್ನೆಗೆ ನಾವು ಮಾಡಿಕೊಂಡಿರುವುದು ಎಜ್ಯುಕೇಶನ್ ಟ್ರಸ್ಟ್ ಅಂತ ಅಲ್ಲಿ ಹಣಕಾಸಿನ ವ್ಯವಹಾರ ಬರುವುದಿಲ್ಲ ಎಂದು ಹೇಳಿದ್ದಾರೆ.ಕೋರ್ಸ್ ಗಳಿಗೆ ಶುಲ್ಕ ನಿಗದಿಯನ್ನು ನಿಮ್ಮ ಟ್ರಸ್ಟ್ ಮಾಡುತ್ತಾ ಎಂದು ಕೇಳಿದ್ದಕ್ಕೆ ನಾವು ಬೇರೆ ಬೇರೆ ಕಾಲೇಜಿನ ಮಾಹಿತಿ ಹೇಳ್ತೀವಿ. ಶುಲ್ಕ ನಿಗದಿ ಮಾಡೋದು ನಿರ್ದೇಶಕರು ಎಂದು ಉತ್ತರಿಸಿದ್ದಾರೆ.

    ವಿದೇಶದಲ್ಲಿ ನಿಮ್ಮ ತಂದೆ ನಿಮ್ಮ ಹೆಸರಲ್ಲಿ ಆಸ್ತಿ ಮಾಡಿದ್ದಾರೆ ಎನ್ನುವ ಪ್ರಶ್ನೆಗೆ ಇಲ್ಲ ಇದುವರೆಗೂ ನನಗೆ ಆ ಮಾಹಿತಿಗಳನ್ನು ನೀಡಿಲ್ಲ ಎಂದು ಹೇಳಿದ್ದಾರೆ.

    ಇದನ್ನೂ ಓದಿ: ನಾನು ತೆರೆದ ಪುಸ್ತಕ, ಯಾವುದಕ್ಕೂ ಭಯಪಡಲ್ಲ: ಡಿಕೆ ಶಿವಕುಮಾರ್

    ಇದನ್ನೂ ಓದಿ:  Exclusive: ಡಿಕೆ ಶಿವಕುಮಾರ್ ತಾಯಿ ಗೌರಮ್ಮಗೆ ಐಟಿ ಕೇಳಿದ ಪ್ರಶ್ನೆಗಳು ಏನು..?

    ಇದನ್ನೂ ಓದಿ: ಡಿಕೆಶಿ ಮೇಲೆ ಐಟಿ ದಾಳಿಗೆ ಪ್ಲ್ಯಾನ್ ನಡೆದಿದ್ದು ಹೀಗೆ

    ,

  • Exclusive: ಡಿಕೆ ಶಿವಕುಮಾರ್ ಪತ್ನಿ ಉಷಾಗೆ ಐಟಿ ಕೇಳಿದ ಪ್ರಶ್ನೆಗಳು ಏನು?

    Exclusive: ಡಿಕೆ ಶಿವಕುಮಾರ್ ಪತ್ನಿ ಉಷಾಗೆ ಐಟಿ ಕೇಳಿದ ಪ್ರಶ್ನೆಗಳು ಏನು?

    ಬೆಂಗಳೂರು: ನಾನು ಆಸ್ತಿಯ ವಿಚಾರಕ್ಕೆ ಜಾಸ್ತಿ ತಲೆ ಕೆಡಿಸಿಕೊಳ್ಳುವುದಿಲ್ಲ. ಅವರ ಬಳಿ ಜಾಸ್ತಿ ಕೇಳುವುದಿಲ್ಲ ಎಂದು ಇಂಧನ ಸಚಿವ ಡಿಕೆ ಶಿವಕುಮಾರ್ ಪತ್ನಿ ಉಷಾ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸಿದ್ದಾರೆ.

    ಇಂಧನ ಸಚಿವ ಡಿಕೆ ಶಿವಕುಮಾರ್ ಕುಟುಂಬದವರನ್ನು ಸೋಮವಾರ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ವಿಚಾರಣೆ ನಡೆಸಿ ಪ್ರಶ್ನೆ ಕೇಳಿದ್ದಾರೆ. ತಾಯಿ ಗೌರಮ್ಮ, ಪತ್ನಿ ಉಷಾ, ಪುತ್ರಿ ಐಶ್ವರ್ಯ ಮಧ್ಯಾಹ್ನ ಕ್ವೀನ್ಸ್ ರಸ್ತೆಯಲ್ಲಿರುವ ಕಚೇರಿಯಲ್ಲಿ ಪ್ರತ್ಯೇಕವಾಗಿ ವಿಚಾರಣೆಗೆ ಹಾಜರಾಗಿ ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸಿದ್ದಾರೆ. ಹೀಗಾಗಿ ಏನು ಪ್ರಶ್ನೆ ಕೇಳಿದ್ದಾರೆ ಅದಕ್ಕೆ ಉತ್ತರ ಏನು ನೀಡಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಪತ್ನಿ ಉಷಾ ಉತ್ತರಿಸಿದ್ದು ಹೀಗೆ?
    ಆರಂಭದಲ್ಲಿ ಅಧಿಕಾರಿಗಳು ನಿಮ್ಮ ಯಜಮಾನರು ಎಷ್ಟು ಆಸ್ತಿಯನ್ನು ಹೊಂದಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ನಾನು ಆಸ್ತಿಯ ವಿಚಾರಕ್ಕೆ ಜಾಸ್ತಿ ತಲೆ ಕೆಡಿಸಿಕೊಂಡಿಲ್ಲ. ನಾನು ಅವರ ಬಳಿ ಜಾಸ್ತಿ ಕೇಳುವುದಿಲ್ಲ ಎಂದು ಉತ್ತರಿಸಿದ್ದಾರೆ. ನಿಮ್ಮ ಹೆಸರಲ್ಲಿ ಎಷ್ಟು ಆಸ್ತಿ ಇದೆ ಎಂಬುದರ ಬಗ್ಗೆ ನಿಮಗೆ ಗೊತ್ತಾ ಎಂದು ಕೇಳಿದ್ದಕ್ಕೆ ನಾಲ್ಕು ಕಡೆಯಲ್ಲಿ ಜಾಗ ತೆಗೆದುಕೊಂಡಿದ್ದಾರೆ. ಆ ಜಾಗದ ನೊಂದಣಿಗೆ ನಾನೇ ಹೋಗಿದ್ದೆ ಎಂದು ಹೇಳಿದ್ದಾರೆ.

    ಅಪಾರ್ಟೆಮೆಂಟ್ ಗಳೆಲ್ಲ ನಿಮ್ಮ ಹೆಸರಲ್ಲಿ ಇರೋದಾ ಎನ್ನುವ ಪ್ರಶ್ನೆಗೆ ಬೆಂಗಳೂರಿನ ಸುಜಾತ ಬಳಿಯಲ್ಲಿ ಇರುವ ಒಂದು ಅಪಾರ್ಟ್ ಮೆಂಟ್ ಗೆ ನನ್ನ ಮಾಲೀಕತ್ವ ಇದೆ. ಅದಕ್ಕೆ ನಾವು ಪ್ರತಿ ವರ್ಷ ತೆರಿಗೆ ನೀಡುತ್ತೇವೆ ಎಂದು ಉತ್ತರಿಸಿದ್ದಾರೆ.

    4 ಕಾಲೇಜುಗಳಲ್ಲಿ ನಿಮ್ಮ ಷೇರ್ ಎಷ್ಟು ಎಂದು ಕೇಳಿದ್ದಕ್ಕೆ ಗ್ಲೋಬಲ್ ಅಕಾಡಮಿ ಆಫ್ ಟೆಕ್ನಾಲಜಿಯಲ್ಲಿ ನನ್ನ ಪಾಲುದಾರಿಕೆ ಇದೆ. 11 ಜನ ನಿರ್ದೇಶಕರಲ್ಲಿ ನಾನು ಒಬ್ಬಳು ಎಂದು ಹೇಳಿದ್ದಾರೆ. ಇದೇ ವೇಳೆ 5 ಕಾಲೇಜಿನಲ್ಲಿ ಪ್ರತಿ ವರ್ಷ ಶುಲ್ಕ ಪಡೆಯುವಾಗ ಯಾವ ಮಾನದಂಡ ಇರುತ್ತದೆ? ಎಷ್ಟು ಶುಲ್ಕ ನಿಗದಿ ಮಾಡುತ್ತೀರಿ ಎಂದು ಕೇಳಿದಾಗ ಅದೆಲ್ಲವನ್ನು ಗ್ಲೋಬಲ್ ಕಾಲೇಜು ನಿರ್ದೇಶಕ ನಂದೀಶ್ ನೋಡಿಕೊಳ್ಳುತ್ತಾರೆ ಎಂದು ಹೇಳಿಕೆ ನೀಡಿದ್ದಾರೆ.

    ನಂದೀಶ್ ಮನೆಯಲ್ಲಿ ಐಟಿ ದಾಳಿ ಆದಾಗ ನಿಮ್ಮ ಆಸ್ತಿಗಳ ವಿವರ ಸಿಕ್ಕಿದೆ ಎಂದಾಗ ಅದು ನನಗೆ ಗೊತ್ತಿಲ್ಲ ನೀವೆ ಹೇಳಬೇಕು ಎಂದು ತಿಳಿಸಿದ್ದಾರೆ. ಗ್ಲೋಬಲ್ ಕಾಲೇಜಿನಲ್ಲಿ ಅತಿಯಾದ ಶುಲ್ಕ ಪಡೆದು ಐಟಿಗೆ ವಂಚನೆ ಮಾಡುತ್ತಿದ್ದೀರಿ ಎನ್ನುವ ಪ್ರಶ್ನೆಗೆ ಇಲ್ಲ ಪ್ರತಿ ವರ್ಷ ಕೂಡ ಐಟಿಗೆ ಸರಿಯಾಗಿ ತೆರಿಗೆ ಪಾವತಿ ಮಾಡುತ್ತಿದ್ದೇವೆ. ಮೋಸ ಮಾಡಿಲ್ಲ ಎಂದು ಉತ್ತರ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಇದನ್ನೂ ಓದಿ: ನಾನು ತೆರೆದ ಪುಸ್ತಕ, ಯಾವುದಕ್ಕೂ ಭಯಪಡಲ್ಲ: ಡಿಕೆ ಶಿವಕುಮಾರ್

    ಇದನ್ನೂ ಓದಿ:  Exclusive: ಡಿಕೆ ಶಿವಕುಮಾರ್ ತಾಯಿ ಗೌರಮ್ಮಗೆ ಐಟಿ ಕೇಳಿದ ಪ್ರಶ್ನೆಗಳು ಏನು..?

    ಇದನ್ನೂ ಓದಿ: ಡಿಕೆಶಿ ಮೇಲೆ ಐಟಿ ದಾಳಿಗೆ ಪ್ಲ್ಯಾನ್ ನಡೆದಿದ್ದು ಹೀಗೆ

     

     

  • Exclusive: ಡಿಕೆ ಶಿವಕುಮಾರ್ ತಾಯಿ ಗೌರಮ್ಮಗೆ ಐಟಿ ಕೇಳಿದ ಪ್ರಶ್ನೆಗಳು ಏನು..?

    Exclusive: ಡಿಕೆ ಶಿವಕುಮಾರ್ ತಾಯಿ ಗೌರಮ್ಮಗೆ ಐಟಿ ಕೇಳಿದ ಪ್ರಶ್ನೆಗಳು ಏನು..?

    ಬೆಂಗಳೂರು: ಇಂಧನ ಸಚಿವ ಡಿಕೆ ಶಿವಕುಮಾರ್ ಕುಟುಂಬದವರನ್ನು ಸೋಮವಾರ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.

    ತಾಯಿ ಗೌರಮ್ಮ, ಪತ್ನಿ ಉಷಾ, ಪುತ್ರಿ ಐಶ್ವರ್ಯ ಪ್ರತ್ಯೇಕವಾಗಿ ವಿಚಾರಣೆಗೆ ಹಾಜರಾಗಿ ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸಿದ್ದಾರೆ. ಹೀಗಾಗಿ ಏನು ಪ್ರಶ್ನೆ ಕೇಳಿದ್ದಾರೆ ಅದಕ್ಕೆ ಉತ್ತರ ಏನು ನೀಡಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ತಾಯಿಗೆ ಗೌರಮ್ಮ ಉತ್ತರಿಸಿದ್ದು ಹೀಗೆ:
    ತಾಯಿ ಗೌರಮ್ಮ ಅವರಿಗೆ ಕನಕಪುರದ ಆಸ್ತಿಯ ಬಗ್ಗೆ ವಿಚಾರಿಸಿದ್ದಾರೆ. ಇದಕ್ಕೆ ನನ್ನ ಮಗ ಐದು ವರ್ಷದ ಹಿಂದೆ ತೆಗೆದುಕೊಟ್ಟಿದ್ದಾನೆ. ಅದರ ಬೆಲೆ ನನಗೇನು ಗೊತ್ತಿಲ್ಲ ಎಂದು ಉತ್ತರಿಸಿದ್ದಾರೆ. ಕೃಷಿ ಭೂಮಿಯ ಬಗ್ಗೆ ನಿಮಗೇನಾದ್ರೂ ಮಾಹಿತಿ ಇದೆಯೇ ಎಂದು ಪ್ರಶ್ನಿಸಿದ್ದಕ್ಕೆ ನಮ್ಮ ಯಜಮಾನ್ರು ಬದುಕಿದ್ದಾಗ ಎಷ್ಟು ಆಸ್ತಿ ನನ್ನ ಹೆಸರಲ್ಲಿ ಇತ್ತು ಅಷ್ಟೇ ಆಸ್ತಿ ಈಗಲೂ ಇದೆ ಎಂದು ಹೇಳಿದ್ದಾರೆ.

    ಭೂಮಿಯಿಂದ ನಿಮಗೆ ವರ್ಷಕ್ಕೆ ಆದಾಯ ಎಷ್ಟು ಬರುತ್ತೆ ಎಂದು ಕೇಳಿದ್ದಕ್ಕೆ ನಾವು ಪೂರ್ತಿ ಜಮೀನನ್ನು ನೋಡಿಕೊಳ್ಳುತ್ತಿಲ್ಲ. ನನ್ನಿಂದ ಎಷ್ಟು ಸಾಧ್ಯವಾಗುತ್ತದೆ ಅಷ್ಟನ್ನು ಮಾತ್ರ ನೋಡಿಕೊಳ್ಳುತ್ತೇವೆ. ವರ್ಷಕ್ಕೆ ಮೂರರಿಂದ ನಾಲ್ಕು ಲಕ್ಷ ಬರಬಹುದು ಎಂದು ಮಾಹಿತಿ ನೀಡಿದ್ದಾರೆ. ಕನಕಪುರದಲ್ಲಿ ಇರುವ ವಾಣಿಜ್ಯ ಕಟ್ಟಡದ ಬಾಡಿಗೆ ತಿಂಗಳಿಗೆ ಎಷ್ಟು ಎನ್ನುವ ಪ್ರಶ್ನೆಗೆ ನನ್ನ ಕಿರಿ ಮಗ 15 ಲಕ್ಷ ರೂ. ಬಾಡಿಗೆ ಬರುತ್ತದೆ ಅಮ್ಮ ಎಂದು ಯಾವಾಗ್ಲೋ ಹೇಳಿದ್ದ ನೆನಪು. ಅದನ್ನು ನಾನು ಪಡೆದುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

    ನಿಮ್ಮ ಹೆಸರಿನಲ್ಲಿ ಬ್ಯಾಂಕ್ ಅಕೌಂಟ್ ಎಷ್ಟು ಇದೆ ಎಂದು ಕೇಳಿದ್ದಕ್ಕೆ ನನ್ನ ಮಗ ತಿಂಗಳಿಗೆ ಹಣ ಹಾಕೋದಕ್ಕೆ ಅಂತ ಒಂದು ಅಕೌಂಟ್ ಮಾಡಿಸಿಕೊಟ್ಟಿದ್ದಾನೆ ಅದನ್ನು ಮಾತ್ರ ನಾನು ಉಪಯೋಗಿಸುತ್ತಿದ್ದೇನೆ ಎಂದು ಉತ್ತರಿಸಿದಾಗ ಅಧಿಕಾರಿಗಳು ಸಾಕಷ್ಟು ಬ್ಯಾಂಕ್ ಗಳಲ್ಲಿ ಕೋಟ್ಯಾಂತರ ರೂಪಾಯಿ ವಹಿವಾಟು ಮಾಡಿಲ್ಲವೇ ಎಂದು ಮರು ಪ್ರಶ್ನೆ ಹಾಕಿದ್ದಾರೆ. ಇದಕ್ಕೆ ನನಗೆ ಏನು ಗೊತ್ತಿಲ್ಲ ಎಂದು ಉತ್ತರಿಸಿದ್ದಾರೆ.

    ಕನಕಪುರದಲ್ಲಿ 70 ಕೋಟಿ ರೂ. ಆಸ್ತಿ ನಿಮ್ಮ ಹೆಸರಲ್ಲೇ ಇರೋದು ಅಲ್ಲವೇ ಎಂದು ಪ್ರಶ್ನಿಸಿದಾಗ ಜಮೀನು ಬಿಟ್ಟರೆ ನನಗೇನು ಗೊತ್ತಿಲ್ಲ ಎಂದು ಗೌರಮ್ಮ ಉತ್ತರಿಸಿದ್ದಾರೆ.

    ಇದನ್ನೂ ಓದಿ: ನಾನು ತೆರೆದ ಪುಸ್ತಕ, ಯಾವುದಕ್ಕೂ ಭಯಪಡಲ್ಲ: ಡಿಕೆ ಶಿವಕುಮಾರ್

    ಇದನ್ನೂ ಓದಿ: ಸಿಎಂ ವಿರುದ್ಧ ಕಿಡಿಕಾರಿದ ಡಿಕೆ ಶಿವಕುಮಾರ್ ತಾಯಿ

    ಇದನ್ನೂ ಓದಿ: ಡಿಕೆಶಿ ಮೇಲೆ ಐಟಿ ದಾಳಿಗೆ ಪ್ಲ್ಯಾನ್ ನಡೆದಿದ್ದು ಹೀಗೆ

  • ನಾನು ತೆರೆದ ಪುಸ್ತಕ, ಯಾವುದಕ್ಕೂ ಭಯಪಡಲ್ಲ: ಡಿಕೆ ಶಿವಕುಮಾರ್

    ನಾನು ತೆರೆದ ಪುಸ್ತಕ, ಯಾವುದಕ್ಕೂ ಭಯಪಡಲ್ಲ: ಡಿಕೆ ಶಿವಕುಮಾರ್

    ಬೆಂಗಳೂರು: ನಾನು ತೆರೆದ ಪುಸ್ತಕ, ನಾನು ಸಾಕಷ್ಟು ವಿಚಾರಣೆ ನೋಡಿದ್ದೇನೆ. ಜಾರಿ ನಿರ್ದೇಶನಾಲಯ(ಇಡಿ), ಸಿಬಿಐ ಕೊಡಬೇಕು ಎಂದು ಇದ್ದರೆ ಕೊಡಲಿ. ನಾನು ಯಾವುದಕ್ಕೂ ಭಯ ಪಡುವುದಿಲ್ಲ ಎಂದು ಇಂಧನ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.

    ಆದಾಯ ತೆರಿಗೆ ದಾಳಿ ನಡೆದ ಬಳಿಕ ಸೋಮವಾರ ಮಧ್ಯಾಹ್ನ ಕ್ವೀನ್ಸ್ ರಸ್ತೆಯಲ್ಲಿರುವ ಐಟಿ ಕಚೇರಿಗೆ ಕುಟುಂಬ ಸಮೇತ ಹಾಜರಾಗಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ತನಿಖೆಗೆ ನಾನು ನನ್ನ ಕುಟುಂಬದವರು ಸಹಕಾರ ನೀಡಿದ್ದೇವೆ. ನ್ಯಾಯಯುತವಾಗಿ ತನಿಖೆ ನಡೆಯುವ ವಿಶ್ವಾಸವಿದೆ ಎಂದರು.

    ನಾವು ಸಂವಿಧಾನ ಒಪ್ಪಿದ್ದೇವೆ. ಕಾನೂನಿಗೆ ಗೌರವ ಕೊಡುತ್ತೇನೆ. ನಾನೊಬ್ಬ ಜವಾಬ್ದಾರಿಯುತ ವ್ಯಕ್ತಿಯಾಗಿದ್ದು ಯಾವುದನ್ನು ಮುಚ್ಚಿಡಲ್ಲ. ಅಧಿಕಾರಿಗಳ ಪ್ರಶ್ನೆಗೆ ಉತ್ತರ ನೀಡುವುದು ನಮ್ಮ ಕರ್ತವ್ಯ. ಐಟಿ ಅಧಿಕಾರಿಗಳಿಗೆ ನಾವು ಈ ಹಿಂದೆ ನೀಡಿದ ಮಾಹಿತಿ ಸಾಲದೇ ಇದ್ದಿದ್ದಕ್ಕೆ ಇಂದು ನಮ್ಮನ್ನು ವಿಚಾರಣೆಗೆ ಕರೆಸಿದ್ದಾರೆ ಎಂದರು.

    ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಐಟಿ ಬಳಸಿ ನಿಮ್ಮ ವಿರುದ್ಧ ಷಡ್ಯಂತ್ರ ನಡೆಸಿದೆ ಎಂದು ಹೇಳುತ್ತಿರಾ ಎನ್ನುವ ಪ್ರಶ್ನೆಗೆ, ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ನನಗೆ ಪಕ್ಷ ಸಂಘಟನೆ ಮಾಡಬೇಕಿತ್ತು. ಆದರೆ ಇದು ನನ್ನ ವೈಯಕ್ತಿಕ ವಿಚಾರವಾಗಿದ್ದ ಕಾರಣ ನಾನು ಹಾಜರಾಗಿದ್ದೇನೆ. ನಾನು ಮಂತ್ರಿಯಲ್ಲ. ನಾನೊಬ್ಬ ಸಾಮಾನ್ಯ ವ್ಯಕ್ತಿಯಾಗಿದ್ದು, ಆದಾಯ ತೆರಿಗೆ ಇಲಾಖೆ, ಚುನವಣಾ ಆಯೋಗಕ್ಕೂ ಲೆಕ್ಕ ಕೊಟ್ಟಿದ್ದೇನೆ. ನನ್ನ ವ್ಯವಹಾರದ ಬದುಕು ಮತ್ತು ರಾಜಕೀಯದ ಬದುಕು ಬೇರೆ, ನಾನು ಯಾವುದಕ್ಕೂ ಹೆದರುವುದಿಲ್ಲ ಎಂದರು.

    ನಾಳೆ ನನ್ನನ್ನು ಮಾತ್ರ ವಿಚಾರಣೆಗೆ ಕರೆದಿದ್ದಾರೆ. ಇವತ್ತು ನನ್ನ ಕುಟುಂಬದವರು ಸೇರಿ 15 ಜನ ವಿಚಾರಣೆಗೆ ಹಾಜರಾಗಿದ್ದರು ಎಂದು ಡಿಕೆಶಿ ತಿಳಿಸಿದರು.

    ಯಾರೆಲ್ಲ ಹಾಜರಾಗಿದ್ರು?
    ಇಂದಿನ ವಿಚಾರಣೆಯಲ್ಲಿ ಡಿಕೆಶಿ ಪತ್ನಿ ಉಷಾ, ಸಹೋದರ ಡಿ ಕೆ ಸುರೇಶ್, ತಾಯಿ ಗೌರಮ್ಮ, ಇಬ್ಬರು ಪುತ್ರಿಯರು ವಿಚಾರಣೆಗೆ ಹಾಜರಾಗಿದ್ದರು. ಶನಿವಾರವೇ ಆದಾಯ ತೆರಿಗೆ ನೋಟಿಸ್ ಜಾರಿ ಮಾಡಿತ್ತು. ಅಲ್ಲದೇ ವಿಚಾರಣೆಗೆ ಲೆಕ್ಕ ಪರಿಶೋಧಕರನ್ನು ಜೊತೆಯಲ್ಲಿ ಕರೆತರಬಾರದು ಎಂದು ಸೂಚಿಸಿತ್ತು. ಇಂದು ಐಟಿ ಅಧಿಕಾರಿಗಳು ಎಲ್ಲರನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಿದ್ದಾರೆ.

    ಎಂಎಲ್‍ಸಿ ರವಿ, ಡಿಕೆಶಿ ಮಾವನ ಮಗ, ಡಿಕೆಶಿ ತಾಯಿ ಗೌರಮ್ಮ ಅವರ ಅಣ್ಣನ ಮಗ, ದವನಂ ಜ್ಯುವೆಲ್ಲರ್ಸ್ ಮಾಲೀಕ ಹರೀಶ್, ಶರ್ಮಾ ಟ್ರಾವೆಲ್ಸ್ ಮಾಲೀಕ ಸುನಿಲ್ ಶರ್ಮಾ, ಗ್ಲೋಬಲ್ ಕಾಲೇಜು ನಿರ್ದೇಶಕ ನಂದೀಶ್ ಸೇರಿ ಒಟ್ಟು 15 ಮಂದಿ ವಿಚಾರಣೆಗೆ ಹಾಜರಾಗಿ ಐಟಿ ಅಧಿಕಾರಿಗಳ ಪ್ರಶ್ನೆ ಉತ್ತರ ನೀಡಿದ್ದಾರೆ.