Tag: IT Rules

  • ರಶ್ಮಿಕಾ ಅರೆಬೆತ್ತಲೆ ಫೇಕ್ ವಿಡಿಯೋ: ಕಿಡಿಗೇಡಿಗಳಿಗೆ ರಾಜೀವ್‌ ಚಂದ್ರಶೇಖರ್‌ ಖಡಕ್‌ ವಾರ್ನಿಂಗ್‌

    ರಶ್ಮಿಕಾ ಅರೆಬೆತ್ತಲೆ ಫೇಕ್ ವಿಡಿಯೋ: ಕಿಡಿಗೇಡಿಗಳಿಗೆ ರಾಜೀವ್‌ ಚಂದ್ರಶೇಖರ್‌ ಖಡಕ್‌ ವಾರ್ನಿಂಗ್‌

    ನವದೆಹಲಿ: ನ್ಯಾಷನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ (Rashmika Mandanna) ಅವರದ್ದು ಎನ್ನಲಾದ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಇತ್ತೀಚೆಗಷ್ಟೇ ವೈರಲ್‌ ಆಗಿದ್ದು, ಬಿಸಿ ಬಿಸಿ ಚರ್ಚೆಯಲ್ಲಿದೆ. ವೀಡಿಯೋದಲ್ಲಿ ರಶ್ಮಿಕಾ ಅವರ ಎದೆ ಭಾಗ ಕಾಣಿಸುವಂತೆ ಬಟ್ಟೆ ಹಾಕಿರುವ ವಿಡಿಯೋವನ್ನು ಹಲವರು ಹಂಚಿಕೊಂಡಿದ್ದರು. ಆದರೀಗ ಅದು ರಶ್ಮಿಕಾ ಅವರ ವಿಡಿಯೋ ಅಲ್ಲವೆಂಬ ಸತ್ಯ ಬಯಲಾಗಿದೆ.

    ಸೋಶಿಯಲ್‌ ಮೀಡಿಯಾ ಬಳಕೆದಾರರೊಬ್ಬರು ಮೂಲ ವೀಡಿಯೋವನ್ನ ಪತ್ತೆ ಮಾಡಿ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವೀಡಿಯೋ ವಾಸ್ತವಾಂಶ ಬಯಲಾದ ಬಳಿಕ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ (Rajeev Chandrasekha) ಪ್ರತಿಕ್ರಿಯಿಸಿದ್ದಾರೆ. ಜೊತೆಗೆ ದೇಶದ ಐಟಿ ನಿಯಮಗಳನ್ನು ಉಲ್ಲಂಘಿಸುವ ಯಾವುದೇ ವೀಡಿಯೋ ಮತ್ತು ಇತರ ವಿಷಯಗಳನ್ನು ತೆಗೆದುಹಾಕುವಂತೆ ಖಡಕ್‌ ವಾರ್ನಿಂಗ್‌ ಕೊಟ್ಟಿದ್ದಾರೆ.

    ಇದರೊಂದಿಗೆ ತಮ್ಮ ಪೋಸ್ಟ್‌ನಲ್ಲಿ, ಯಾವುದೇ ವೇದಿಕೆಯಲ್ಲಿ ತಪ್ಪು ಮಾಹಿತಿ ಪೋಸ್ಟ್‌ ಮಾಡಿದ್ರೆ, ಅದನ್ನ 36 ಗಂಟೆಗಳ ಒಳಗೆ ತೆಗೆದುಹಾಕಬೇಕು. ಇಲ್ಲದಿದ್ದರೇ ನೊಂದ ವ್ಯಕ್ತಿ ಪ್ರಕರಣವನ್ನು ನ್ಯಾಯಾಲಯಕ್ಕೆ ಕೊಂಡೊಯ್ಯಬಹುದು ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಅರೆಬೆತ್ತಲೆ ಫೇಕ್ ವಿಡಿಯೋ: ಅಮಿತಾಭ್ ಕಿಡಿಕಿಡಿ

    ನರೇಂದ್ರ ಮೋದಿಜೀ ಅವರ ಸರ್ಕಾರವೂ ಇಂಟರ್ನೆಟ್‌ ಬಳಸುವ ಎಲ್ಲಾ ಡಿಜಿಟಲ್‌ ನಾಗರಿಕೆ ಸುರಕ್ಷತೆ ಮತ್ತು ನಂಬಿಕೆ ಉಳಿಸಿಕೊಳ್ಳಲು ಬದ್ಧವಾಗಿದೆ. ಏಪ್ರಿಲ್, 2023 ರಲ್ಲಿ ಸೂಚಿಸಲಾದ ಐಟಿ ನಿಯಮಗಳ ಅಡಿಯಲ್ಲಿ – ಇದು ಪ್ಲಾಟ್‌ಫಾರ್ಮ್‌ಗಳಿಗೆ ಕಾನೂನು ಬಾಧ್ಯತೆಯಾಗಿದೆ. ಯಾವುದೇ ಬಳಕೆದಾರರು ಮತ್ತು ಪ್ಲಾಟ್‌ಫಾರ್ಮ್‌ಗಳು ಇದನ್ನು ಅನುಸರಿಸದಿದ್ದರೆ 36 ಗಂಟೆಗಳಲ್ಲಿ ತಪ್ಪು ಮಾಹಿತಿಗಳನ್ನು ತೆಗೆದುಹಾಕಬೇಕಾಗುತ್ತದೆ. ಇಲ್ಲದಿದ್ದಲ್ಲಿ ಇದು ಐಟಿ ನಿಯಮ 7ರ (IT rules Seven) ಅಡಿಯಲ್ಲಿ ಕಾನೂನು ಉಲ್ಲಂಘನೆಯಾಗಲಿದ್ದು, ಐಪಿಸಿಯ ನಿಬಂಧನೆಗಳ ಅಡಿಯಲ್ಲಿ ಬಾಧಿತ ವ್ಯಕ್ತಿಯಿಂದ ವೇದಿಕೆಗಳನ್ನು ನ್ಯಾಯಾಲಯಕ್ಕೆ ಕೊಂಡೊಯ್ಯಬಹುದು ಎಂದು ಎಚ್ಚರಿದ್ದಾರೆ. ಇಂತಹ ಹಾನಿಕಾರಕ ತಪ್ಪು ಮಾಹಿತಿಗಳನ್ನು ವೇದಿಕೆಗಳ ಮೂಲಕ ವ್ಯವಹರಿಸಬೇಕು ಎಂದೂ ಹೇಳಿದ್ದಾರೆ. ಇದನ್ನೂ ಓದಿ: Bigg Boss: ತನಿಷಾ, ವರ್ತೂರು ಸಮ್‌ಥಿಂಗ್‌ ಸಮ್‌ಥಿಂಗ್‌ ಬಗ್ಗೆ ಸುದೀಪ್‌ ರಿಯಾಕ್ಷನ್

    ಏನಿದು ವೈರಲ್‌ ವೀಡಿಯೋ ಸ್ಟೋರಿ?
    ರಶ್ಮಿಕಾ ಮಂದಣ್ಣ ಅವರದ್ದು ಎಂದು ಹೇಳಲಾದ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಅದು ಅಸಲಿಯೋ ಅಥವಾ ನಕಲಿಯೋ (Fake Video) ಎಂದು ಪತ್ತೆ ಹಚ್ಚುವಲ್ಲಿ ಹಲವರು ನಿರತರಾಗಿದ್ದರು. ಆ ವಿಡಿಯೋ ಖಂಡಿತಾ ರಶ್ಮಿಕಾ ಅವರದ್ದು ಅಲ್ಲ ಎಂದು ಕೆಲವರು ಹೇಳಿದ್ದರು. ಕೊನೆಗೂ ಅಭಿಷೇಕ್ ಅಸಲಿ ಮತ್ತು ನಕಲಿ ಎರಡೂ ವಿಡಿಯೋವನ್ನ ಹಂಚಿಕೊಂಡಿದ್ದಾರೆ. ವೈರಲ್ ಆಗಿರುವ ವಿಡಿಯೋ ಝರಾ ಪಟೀಲ್ (Zara Patel) ಎನ್ನುವವರದ್ದು ಎಂದು ಅಭಿಷೇಕ್ ಬರೆದುಕೊಂಡಿದ್ದಾರೆ. ಝರಾ ಪಟೇಲ್ ಅವರು ಆ ವೀಡಿಯೋವನ್ನ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಶೇರ್‌ ಮಾಡಿದ್ದರು. ಕಿಡಿಗೇಡಿಗಳು ಆ ವಿಡಿಯೋಗೆ ರಶ್ಮಿಕಾ ತಲೆಯನ್ನು ಮಾರ್ಫಿಂಗ್‌ ಮಾಡಿ ಹರಿಬಿಟ್ಟಿದ್ದರು. ಈ ವಿಡಿಯೋ ಕೂಡ ಸಾಕಷ್ಟು ವೈರಲ್ ಆಗಿತ್ತು.

  • ಭಾರತದ 74 ಲಕ್ಷ ವಾಟ್ಸಪ್ ಖಾತೆಗಳು ನಿಷೇಧ

    ಭಾರತದ 74 ಲಕ್ಷ ವಾಟ್ಸಪ್ ಖಾತೆಗಳು ನಿಷೇಧ

    ನವದೆಹಲಿ: ಮೆಸೇಜಿಂಗ್ ಪ್ಲಾಟ್‍ಫಾರ್ಮ್ ವಾಟ್ಸಪ್ (WhatsApp) ಆಗಸ್ಟ್‌ನಲ್ಲಿ ಭಾರತದ (India) 74.2 ಲಕ್ಷ ಖಾತೆಗಳನ್ನು ನಿಷೇಧಿಸಿದೆ. 2021ರ ಹೊಸ ಐಟಿ ನಿಯಮಗಳಿಗೆ (IT Rules) ಅನುಸಾರವಾಗಿ ವಾಟ್ಸಪ್ ಈ ಖಾತೆಗಳನ್ನು ನಿಷೇಧಿಸಿದೆ.

    ಭಾರತದಲ್ಲಿ ಈಗ ಒಟ್ಟಾರೆ ನಿಷೇಧಿತ ವಾಟ್ಸಪ್ ಖಾತೆಗಳ ಸಂಖ್ಯೆ 3,506,905 ಆಗಿದೆ. ಇದರಲ್ಲಿ 3.1 ಲಕ್ಷ ಖಾತೆಗಳನ್ನು ಪೂರ್ವಭಾವಿಯಾಗಿ ನಿಬರ್ಂಧಿಸಲಾಗಿದೆ. ಅಹಿತಕರ ಸಂದೇಶ ತಡೆಗಟ್ಟುವಲ್ಲಿ ಮತ್ತು ಎದುರಿಸುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ನಮ್ಮ ಸುರಕ್ಷತಾ ವೈಶಿಷ್ಟ್ಯತೆಗಳು ಮತ್ತು ನಿಯಂತ್ರಣಗಳ ಜೊತೆಗೆ ಈ ಪ್ರಯತ್ನಗಳನ್ನು ಮೇಲ್ವಿಚಾರಣೆ ಮಾಡಲು ಇಂಜಿನಿಯರ್‌ಗಳು, ಡೇಟಾ ವಿಜ್ಞಾನಿಗಳು, ವಿಶ್ಲೇಷಕರು, ಸಂಶೋಧಕರು ಮತ್ತು ಕಾನೂನು ತಜ್ಞರನ್ನು ನೆಮಿಸಿಕೊಳ್ಳುವುದಾಗಿ ವಾಟ್ಸಪ್ ತಿಳಿಸಿದೆ.

    `ಅಕೌಂಟ್ಸ್ ಆಕ್ಷನ್ಡ್’ ವರದಿಯ ಆಧಾರದ ಮೇಲೆ ಕಂಪನಿಯು ಈ ನಿರ್ಧಾರ ತೆಗೆದುಕೊಂಡಿದೆ. ಇದರ ಅಡಿಯಲ್ಲಿ ಖಾತೆಯನ್ನು ನಿಷೇಧಿಸುವುದು ಹಾಗೂ ಹಿಂದೆ ನಿಷೇಧಿಸಲಾದ ಖಾತೆಯನ್ನು ಮರುಸ್ಥಾಪಿಸಲಾಗುವುದು. ಅಲ್ಲದೆ ಆನ್‍ಲೈನ್ ವಿವಾದ ಪರಿಹಾರಕ್ಕೆ ತೊಂದರೆಗೊಳಗಾದ ಬಳಕೆದಾರರು ಹೊಸ ಪೋರ್ಟಲ್ ಮೂಲಕ ತಮ್ಮ ಮನವಿ ಅಥವಾ ದೂರನ್ನು ಸಲ್ಲಿಸಬಹುದು ಎಂದು ವಾಟ್ಸಪ್ ಪ್ರಕಟಣೆಯಲ್ಲಿ ತಿಳಿಸಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 67 ಪೋರ್ನ್ ವೆಬ್‌ಸೈಟ್‌ಗಳು ಬ್ಲಾಕ್ – ಕೇಂದ್ರ ಆದೇಶ

    67 ಪೋರ್ನ್ ವೆಬ್‌ಸೈಟ್‌ಗಳು ಬ್ಲಾಕ್ – ಕೇಂದ್ರ ಆದೇಶ

    ನವದೆದಲಿ: 2021ರ ಐಟಿ ನಿಯಮ (IT Rules) ಉಲ್ಲಂಘಿಸಿದ್ದಕ್ಕಾಗಿ 67 ಪೋರ್ನ್ ವೆಬ್‌ಸೈಟ್‌ಗಳನ್ನು (Pornographic Websites) ಬ್ಲಾಕ್ ಮಾಡಿವಂತೆ ಕೇಂದ್ರ ಸರ್ಕಾರ (Central Government) ಇಂರ್ಟರ್‌ನೆಟ್ ಸೇವಾ ಪೂರೈಕೆದಾರರಿಗೆ ನೋಟಿಸ್ ನೀಡಿದೆ.

    ಭಾರತದಲ್ಲಿ ಅಶ್ಲೀಲ ಅಥವಾ ಪೋರ್ನ್ ವೆಬ್‌ಸೈಟ್‌ಗಳನ್ನು ಪ್ರಕಟಿಸುವುದು ಅಥವಾ ವೀಕ್ಷಿಸುವುದು ಕಾನೂನು ಬಾಹಿರ. ಆದರೂ ವಿವಿಧ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 67 ಪೋರ್ನ್ ವೆಬ್‌ಸೈಟ್‌ಗಳನ್ನು ಬ್ಲಾಕ್ ಮಾಡಲು ಕೇಂದ್ರ ಸರ್ಕಾರ ಆದೇಶಿಸಿದೆ. ಇದನ್ನೂ ಓದಿ: ಸೂಕ್ತ ಒಳಉಡುಪು ಧರಿಸಲೇಬೇಕು – ಪಾಕ್ ವಿಮಾನಯಾನ ಸಂಸ್ಥೆ ಆದೇಶ

    ಪುಣೆ ನ್ಯಾಯಾಲಯದ (Pune Court) ಆದೇಶದ ಆಧಾರದ ಮೇಲೆ 63 ವೆಬ್‌ಸೈಟ್‌ಗಳು ಹಾಗೂ ಉತ್ತರಾಖಂಡ ಹೈಕೋರ್ಟ್ (Uttarakhand High court) ಆದೇಶದ ಆಧಾರದ ಮೇಲೆ 4 ವೆಬ್‌ಸೈಟ್‌ಗಳನ್ನು ನಿರ್ಬಂಧಿಸುವಂತೆ ಟೆಲಿಕಾಂ ಸಂಸ್ಥೆ (DOT) ಇಮೇಲ್ ಮೂಲಕ ಇಂಟರ್ನೆಟ್ ಸೇವಾ ಪೂರೈಕೆದಾರ ಕಂಪೆನಿಗಳಿಗೆ ಸೂಚಿಸಿದೆ. ಇದನ್ನೂ ಓದಿ: ದೇಗುಲಕ್ಕೆ 8 ಕೋಟಿ ಮೌಲ್ಯದ ನೋಟುಗಳಿಂದ ಅಲಂಕಾರ – ಗೋಡೆ, ನೆಲದಲ್ಲೆಲ್ಲ ನೋಟಿನ ದರ್ಬಾರ್

    ನ್ಯಾಯಾಲಯದ ಆದೇಶಗಳನ್ನು ಅನುಸರಿಸಿ ಮತ್ತು 2021ರಲ್ಲಿ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯ ಹೊಸ ಐಟಿ ನಿಯಮಗಳ ಉಲ್ಲಂಘನೆಗಾಗಿ ಒಟ್ಟು 67 ಪೋರ್ನ್ ವೆಬ್‌ಸೈಟ್‌ಗಳಿಗೆ ಪ್ರವೇಶವನ್ನು ನಿರ್ಬಂಧಿಸಲು ಇಂಟರ್ನೆಟ್ ಸೇವಾ ಪೂರೈಕೆದಾರರಿಗೆ ಸರ್ಕಾರ ಆದೇಶಿಸಿದ್ದು, ಈ ಕುರಿತು ಕೂಡಲೇ ಕ್ರಮಕೈಗೊಳ್ಳುವಂತೆ ಸೂಚಿಸಲಾಗಿದೆ. ಇಂಟರ್ನೆಟ್ ಸರ್ವೀಸ್ ಪ್ರೊವೈಡರ್‌ಗಳಿಗೆ ವೆಬ್‌ಸೈಟ್‌ಗಳ ಮಾಹಿತಿ, ಯೂಆರ್‌ಎಲ್ ನೀಡಿರುವ ಸರ್ಕಾರ, ಈ ವೆಬ್‌ಸೈಟ್‌ನಲ್ಲಿ ಮಹಿಳೆಯರ ಘನತೆಗೆ ಕಳಂಕ ತರುವ ಅಶ್ಲೀಲ ವೀಡಿಯೋಗಳು ಇವೆ. ಈ ವೀಡಿಯೋಗಳು ಮಾರ್ಫ್ ಮಾಡಲಾಗಿರುವ ವೀಡಿಯೋಗಳಾಗಿವೆ ಎಂದು ನೋಟಿಸ್‌ನಲ್ಲಿ ಹೇಳಿದೆ.

    Live Tv
    [brid partner=56869869 player=32851 video=960834 autoplay=true]

  • ಹೊಸ ಐಟಿ ನಿಯಮ – ಸಾಮಾಜಿಕ ಮಾಧ್ಯಮಗಳಿಗೆ ಸರ್ಕಾರದಿಂದ 105 ಆದೇಶ

    ಹೊಸ ಐಟಿ ನಿಯಮ – ಸಾಮಾಜಿಕ ಮಾಧ್ಯಮಗಳಿಗೆ ಸರ್ಕಾರದಿಂದ 105 ಆದೇಶ

    ನವದೆಹಲಿ: ಹೊಸ ಮಾಹಿತಿ ತಂತ್ರಜ್ಞಾನ(ಐಟಿ) ನಿಯಮಗಳ ಅಡಿಯಲ್ಲಿ ಸಾಮಾಜಿಕ ಮಾಧ್ಯಮದ ವಿಷಯವನ್ನು ನಿರ್ಬಂಧಿಸಲು ಸರ್ಕಾರ 105 ಆದೇಶಗಳನ್ನು ಹೊರಡಿಸಿದೆ.

    ಕಳೆದ ವರ್ಷ ಫೆಬ್ರವರಿಯಲ್ಲಿ ಜಾರಿಗೆ ಬಂದ ಹೊಸ ಐಟಿ ನಿಯಮಗಳ ಅಡಿಯಲ್ಲಿ ವಿಷಯವನ್ನು ನಿರ್ಬಂಧಿಸಲು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಿಗೆ ಕೇಂದ್ರ ಸರ್ಕಾರ 105 ಆದೇಶಗಳನ್ನು ನೀಡಿದೆ. ಈ ಬಗ್ಗೆ ಕೇಂದ್ರ ಎಲೆಕ್ಟ್ರಾನಿಕ್ಸ್ ಹಾಗೂ ಮಾಹಿತಿ ತಂತ್ರಜ್ಞಾನ ಖಾತೆಯ ಸಹಾಯಕ ಸಚಿವ ರಾಜೀವ್ ಚಂದ್ರಶೇಖರ್ ರಾಜ್ಯಸಭೆಯಲ್ಲಿ ಲಿಖಿತ ಪ್ರತಿಕ್ರಿಯಲ್ಲಿ ಮಾಹಿತಿ ನೀಡಿದ್ದಾರೆ.

    ರಾಜೀವ್ ಚಂದ್ರಶೇಖರ್ ನೀಡಿರುವ ಮಾಹಿತಿಯಲ್ಲಿ, ಡಿಸೆಂಬರ್ 2021 ಹಾಗೂ ಏಪ್ರಿಲ್ 2022ರ ನಡುವೆ ಯೂಟ್ಯೂಬ್‌ಗೆ ವಿಷಯಗಳನ್ನು ನಿರ್ಬಂಧಿಸುವ 94 ನಿರ್ದೇಶನಗಳನ್ನು ನೀಡಲಾಗಿದೆ. ಇದರೊಂದಿಗೆ ಹೊಸ ಐಟಿ ನಿಯಮಗಳ ಅಡಿಯಲ್ಲಿ ಟ್ವಿಟ್ಟರ್‌ಗೆ 5 ಹಾಗೂ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ಗೆ ತಲಾ 3 ನಿರ್ದೇಶನಗಳನ್ನು ನೀಡಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: ‘ಬಿಗ್ ಬಾಸ್’ ಮನೆಯ ಪರಿಚಯವನ್ನು ಸ್ವತಃ ಸುದೀಪ್ ಅವರಿಂದಲೇ ಕೇಳಿ..

    ಬಳಕೆದಾರರ ಸುರಕ್ಷತೆಯನ್ನು ಹೆಚ್ಚಿಸಲು ಸಾಮಾಜಿಕ ಮಾಧ್ಯಮಗಳು ಸೇರಿದಂತೆ ಮಧ್ಯವರ್ತಿಗಳನ್ನು ಜವಾಬ್ದಾರಿಯುತರನ್ನಾಗಿ ಮಾಡಲು ಸರ್ಕಾರ ಐಟಿ ನಿಯಮವನ್ನು 2021ರ ಫೆಬ್ರವರಿ 25ರಂದು ಜಾರಿಗೆ ತಂದಿದೆ ಎಂದು ತಿಳಿಸಿದರು.

    ಜೂನ್‌ನಲ್ಲಿ ಕೇಂದ್ರ ಐಟಿ ಮತ್ತು ಸಂವಹನ ಸಚಿವ ಅಶ್ವಿನಿ ವೈಷ್ಣವ್ ಅವರು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳನ್ನು ಹೆಚ್ಚು ಜವಾಬ್ದಾರಿಯುತವಾಗಿಸಲು ಸರ್ಕಾರ ಕಾನೂನು ಬದಲಾವಣೆ ಹಾಗೂ ನಿಯಮಗಳನ್ನು ತರಲಿದೆ ಎಂದು ಭರವಸೆ ನೀಡಿದ್ದರು. ಇದನ್ನೂ ಓದಿ: ಗಲ್ಲು ಶಿಕ್ಷೆ ಕಾನೂನಿನ ಬಳಿಕ ಮಹಿಳೆಯರ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣಗಳು ಹೆಚ್ಚುತ್ತಿವೆ: ಗೆಹ್ಲೋಟ್

    Live Tv
    [brid partner=56869869 player=32851 video=960834 autoplay=true]

  • ಟ್ವಿಟ್ಟರ್‌ ಖಾತೆ ಮತ್ತೆ ಸಕ್ರಿಯ – ಸತ್ಯಮೇವ ಜಯತೇ ಎಂದ ಕಾಂಗ್ರೆಸ್‌

    ಟ್ವಿಟ್ಟರ್‌ ಖಾತೆ ಮತ್ತೆ ಸಕ್ರಿಯ – ಸತ್ಯಮೇವ ಜಯತೇ ಎಂದ ಕಾಂಗ್ರೆಸ್‌

    ನವದೆಹಲಿ: ರಾಹುಲ್‌ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವಿಟ್ಟರ್ ಖಾತೆ ಮತ್ತೆ ಸಕ್ರಿಯಗೊಂಡಿದೆ.

    ಅತ್ಯಾಚಾರಕ್ಕೀಡಾಗಿ ಕೊಲೆಯಾದ 9 ವರ್ಷದ ಬಾಲಕಿಯ ಕುಟುಂಬಸ್ಥರ ಫೋಟೋವನ್ನು ಶೇರ್ ಮಾಡಿ ಕಾನೂನನ್ನು ಉಲ್ಲಂಘಿಸಿದ್ದಾರೆ ಎಂಬ ಕಾರಣ ನೀಡಿ ರಾಹುಲ್ ಗಾಂಧಿಯವರ ಟ್ವಿಟ್ಟರ್ ಖಾತೆಯನ್ನು ಕಳೆದ ವಾರ ಬ್ಲಾಕ್ ಮಾಡಿತ್ತು. ಇದಾದ ಬಳಿಕ ಈಗ ಪಕ್ಷದ ಖಾತೆಯ ಜೊತೆಗೆ ಹಲವು ನಾಯಕರ ಮತ್ತು ಪಕ್ಷದ ಅಧಿಕೃತ ಟ್ವಿಟ್ಟರ್ ಖಾತೆಯನ್ನು ಬ್ಲಾಕ್ ಮಾಡಲಾಗಿತ್ತು.

    ಇಂದು ಕಾಂಗ್ರೆಸ್‌ ಪಕ್ಷದ ಟ್ವಿಟ್ಟರ್‌ ಖಾತೆ ಸಕ್ರಿಯಗೊಂಡಿದ್ದು, ಸತ್ಯಮೇವ ಜಯತೇ ಎಂದು ಬರೆದು ಟ್ವೀಟ್‌ ಮಾಡಿದೆ. ಎಲ್ಲ ಕಾಂಗ್ರೆಸ್‌ ಖಾತೆಯಗಳು ಅನ್‌ಲಾಕ್‌ ಆಗಿದೆ. ಅನ್‌ಲಾಕ್‌ ಆಗಲು ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ ಎಂದು ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಮುಖ್ಯಸ್ಥ ರೋಹನ್ ಗುಪ್ತ ತಿಳಿಸಿದ್ದಾರೆ.

    ಶನಿವಾರ ರಾಹುಲ್‌ ಗಾಂಧಿ ಟ್ವಿಟ್ಟರ್‌ ವಿರುದ್ಧ ಕಿಡಿ ಕಾರಿದ್ದರು. ‌ ಇದು ನಮ್ಮ ಪ್ರಜಾಪ್ರಭುತ್ವದ ಮೇಲಿನ ದಾಳಿಯಾಗಿದೆ. ನಮಗೆ ಸಂಸತ್‍ನಲ್ಲಿ ಮಾತನಾಡಲು ಅವಕಾಶ ಕೊಟ್ಟಿಲ್ಲ. ಭರವಸೆ ಬೆಳಕಾಗಿ ಟ್ವಿಟ್ಟರ್ ಇದೆ ಎಂದು ಭಾವಿಸಿದ್ದೆ. ಆದರೆ ಟ್ವಿಟ್ಟರ್ ಆ ರೀತಿ ಇಲ್ಲ. ಸರ್ಕಾರದ ಪರವಾಗಿ ಟ್ವಿಟ್ಟರ್‌ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದ್ದರು.

    ಯಾರೆಲ್ಲ ಖಾತೆ ಬ್ಲಾಕ್ ಆಗಿತ್ತು?
    ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ, ಕೆ ಸಿ ವೇಣುಗೋಪಾಲ್, ಅಜಯ್ ಮಕೇನ್, ಪಕ್ಷದ ಸಚೇತಕ ಮಣಿಕ್ಕಮ್ ಠಾಕೋರ್, ಅಸ್ಸಾಂ ಕಾಂಗ್ರೆಸ್ ಉಸ್ತುವಾರಿ ಮತ್ತು ಕೇಂದ್ರದ ಮಾಜಿ ಸಚಿವ ಜಿತೇಂದ್ರ ಸಿಂಗ್ ಮತ್ತು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಶ್ಮಿತಾ ದೇವ್ ಅವರ ಟ್ವಿಟ್ಟರ್ ಖಾತೆಗಳನ್ನು ಸಹ ಬ್ಲಾಕ್ ಮಾಡಲಾಗಿತ್ತು.

    ಕಳೆದ ವಾರ ರಾಹುಲ್ ಗಾಂಧಿ 9 ವರ್ಷದ ಅತ್ಯಾಚಾರಕ್ಕೀಡಾಗಿ ಹತ್ಯೆಗೀಡಾದ ಬಾಲಕಿಯ ಕುಟುಂಬಸ್ಥರ ಫೋಟೋವನ್ನು ಪ್ರಕಟಿಸಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ರಾಷ್ಟ್ರೀಯ ಮಕ್ಕಳ ಹಕ್ಕು ಆಯೋಗ ಟ್ವಿಟ್ಟರ್ ಸಂಸ್ಥೆಗೆ ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿತ್ತು. ಈ ದೂರಿನ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಯವರ ಖಾತೆಯನ್ನು ಬ್ಲಾಕ್ ಮಾಡಲಾಗಿತ್ತು. ಇದನ್ನೂ ಓದಿ: ವಾಜಪೇಯಿ ಹೆವೀ ಡ್ರಿಂಕರ್ – ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ

    ಭಾರತದಲ್ಲಿ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತರ ಫೋಟೋ, ಹೆಸರು, ಪೋಷಕರ ಫೋಟೋಗಳನ್ನು ಪ್ರಕಟಿಸುವಂತಿಲ್ಲ. ಇದು ಕಾನೂನಿನ ಉಲ್ಲಂಘನೆ. 2018ರಲ್ಲಿ ಜಮ್ಮು ಕಾಶ್ಮೀರ ಕಥುವಾದ 8 ವರ್ಷದ ಬಾಲಕಿಯ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯ ಗುರುತನ್ನು ಮಾಧ್ಯಮ ಸಂಸ್ಥೆಗಳು ಪ್ರಕಟಿಸಿತ್ತು.

    ಈ ಸಂಬಂಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಡ ದೆಹಲಿ ಹೈಕೋರ್ಟ್ ವಿಚಾರಣೆ ನಡೆಸಿ 12 ಮಾಧ್ಯಮ ಸಂಸ್ಥೆಗಳಿಗೆ ತಲಾ 10 ಲಕ್ಷ ರೂ. ದಂಡವನ್ನು ವಿಧಿಸಿತ್ತು.