Tag: it

  • ನನ್ನನ್ನು ಸೇರಿಸಿ 50 ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳ ಮೇಲೆ ಲೋಕಾ, ಐಟಿ ದಾಳಿಯಾಗಲಿದೆ: ಹೆಬ್ಬಾಳ್ಕರ್ ಆರೋಪ

    ನನ್ನನ್ನು ಸೇರಿಸಿ 50 ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳ ಮೇಲೆ ಲೋಕಾ, ಐಟಿ ದಾಳಿಯಾಗಲಿದೆ: ಹೆಬ್ಬಾಳ್ಕರ್ ಆರೋಪ

    ಬೆಳಗಾವಿ: ಚುನಾವಣೆ ಹೊಸ್ತಿಲಲ್ಲಿ ನನ್ನನ್ನು ಸೇರಿಸಿ 50 ಕಾಂಗ್ರೆಸ್ (Congress) ಹಾಗೂ ಜೆಡಿಎಸ್ (JDS) ಅಭ್ಯರ್ಥಿಗಳ ಮೇಲೆ ಲೋಕಾಯುಕ್ತ (Lokayukta) ಹಾಗೂ ಐಟಿ (IT) ದಾಳಿಯ ಸಂಚು ರೂಪಿಸಲಾಗಿದೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಆರೋಪಿಸಿದ್ದಾರೆ.

    ಬೆಳಗಾವಿಯ (Belagavi) ಕುವೆಂಪು ನಗರದ ಗೃಹಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಸಾರ್ವತ್ರಿಕ ಚುನಾವಣೆಗೆ 10 ದಿನ ಉಳಿದಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಇರುವುದು ಜನರ ಭಾವನೆಯಿಂದ ಗೊತ್ತಾಗುತ್ತಿದೆ. ರಾಜ್ಯದ ಜನರು ಕಾಂಗ್ರೆಸ್ ಸರ್ಕಾರ ತರಲು ಬಯಸಿದ್ದಾರೆ ಎನಿಸುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿಯೂ ಕಾಂಗ್ರೆಸ್ ಪರ ಒಳ್ಳೆಯ ವಾತಾವರಣ ಇದೆ. ಬೆಲೆ ಏರಿಕೆಯಿಂದ ತತ್ತರಿಸಿದ ಸಂದರ್ಭದಲ್ಲಿ ಜನರಲ್ಲಿ ನವಚೈತನ್ಯ ತರಬೇಕೆಂದು ಕಾಂಗ್ರೆಸ್‌ನ ಗ್ಯಾರಂಟಿ ಸ್ಕೀಮ್ ಇದೆ. ಇವು ಜನಪ್ರಿಯ ಯೋಜನೆಗಳು ಆಗುವ ಎಲ್ಲಾ ಲಕ್ಷಣಗಳಿವೆ ಎಂದು ತಿಳಿಸಿದರು.

    ಆದರೆ ಬಿಜೆಪಿಯವರು ಹತಾಶರಾಗಿ ಕರ್ನಾಟಕದಲ್ಲಿ ವಾಮಮಾರ್ಗ ಹಿಡಿಯುವ ಸುದ್ದಿ ತಲುಪಿದೆ. 50 ಅಭ್ಯರ್ಥಿಗಳು, ಅವರ ಸಂಬಂಧಿಕರ ಮೇಲೆ ಲೋಕಾಯುಕ್ತ ದಾಳಿ ನಡೆಸುವ ಸಾಧ್ಯತೆ ಇದೆ. ಚುನಾವಣೆ ಸಂದರ್ಭದಲ್ಲಿ ಇನ್ನು ಒಂದೆರಡು ದಿನಗಳಲ್ಲಿ ಮಾಡುವ ಮುನ್ಸೂಚನೆ ಸಿಕ್ಕಿದೆ. ದೇಶದಲ್ಲಿ ಯಾವುದೇ ರಾಜ್ಯದಲ್ಲಿ ಚುನಾವಣೆ ಸಂದರ್ಭದಲ್ಲಿ ಈ ರೀತಿ ವಿಪಕ್ಷಗಳನ್ನು ಹೆದರಿಸುವುದು ಸರ್ವೇಸಾಮಾನ್ಯವಾಗಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಸ್ಪಷ್ಟವಾಗಿ ಕನ್ನಡ ಮಾತಾಡಿ ಬೇಷ್ ಎನಿಸಿಕೊಂಡ ಯೋಗಿ ಆದಿತ್ಯನಾಥ್

    ಬಿಜೆಪಿಯವರು ಏನು ಮಾಡುತ್ತಿದ್ದಾರೆ ಇದೇ ಅವರಿಗೆ ತಿರುಗು ಬಾಣ ಆಗಲಿದೆ. ಸಮಯ ಕಡಿಮೆ ಇದೆ, ಇಂತಹ ಸಂದರ್ಭದಲ್ಲಿ ಅವರು ಇದನ್ನು ಬಿಡಬೇಕು. ರಾಜ್ಯದ ಜನರು ಇವೆಲ್ಲವನ್ನು ಗಮನಿಸುತ್ತಿದ್ದಾರೆ. ನಾನು ರಾಜ್ಯ ಕಾಂಗ್ರೆಸ್ ವಕ್ತಾರೆ, ರಾಜ್ಯ ಕಾಂಗ್ರೆಸ್ ಸೂಚನೆ ಮೇರೆಗೆ ಸುದ್ದಿಗೋಷ್ಠಿ ನಡೆಸುತ್ತಿದ್ದೇನೆ. ಗೆಲ್ಲುವುದನ್ನು ತಡೆಯುವುದು ಯಾರ ಕೈಯಲ್ಲೂ ಇಲ್ಲ. ಅದು ಮತದಾರರ ಕೈಯಲ್ಲಿ ಇದೆ ಎಂದರು.

    ನಮ್ಮ ಜಿಲ್ಲೆಯಲ್ಲಿಯೂ ಮೂವರು ಅಭ್ಯರ್ಥಿಗಳನ್ನು ಟಾರ್ಗೆಟ್ ಮಾಡಿದ್ದಾರೆ. 50 ಅಭ್ಯರ್ಥಿಗಳಲ್ಲಿ ಕಾಂಗ್ರೆಸ್ ಜೆಡಿಎಸ್ ಎರಡೂ ಪಕ್ಷದವರಿದ್ದಾರೆ. ಯಾರ ಮೇಲೆ ಪ್ರೀತಿ ಜಾಸ್ತಿ ಇದೆ ಅಂತಹವರು 3 ಜನ ಇದ್ದಾರೆ. ಜನರ ಭಾವನೆಯನ್ನು ಕಲುಕುವುದು, ಈ ರೀತಿ ವಾತಾವರಣ ಸೃಷ್ಟಿ ಮಾಡುವುದು, ಬೇರೆ ಎಲ್ಲಾ ಅಸ್ತ್ರಗಳನ್ನು ಈಗ ಅವರು ಬಳಸಿದ್ದಾರೆ. ಈ ಮೊದಲೂ ನಮ್ಮ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುದ್ದಿಗೋಷ್ಠಿ ನಡೆಸಿದರು. ಒಂದು ವಾರದ ಹಿಂದೆ ಸುದ್ದಿಗೋಷ್ಠಿ ನಡೆಸಿ ಸಾವಿರ ಜನ ಐಟಿ ಅಧಿಕಾರಿಗಳು ಬಂದಿದ್ದನ್ನು ಹೇಳಿದ್ದರು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು. ಇದನ್ನೂ ಓದಿ: ಮೋದಿ ಸಿದ್ಧರಿದ್ರೆ ಅವರೊಂದಿಗೆ ಓಟದ ಸ್ಪರ್ಧೆಗೆ ನಾನು ರೆಡಿ: ಸಿದ್ದರಾಮಯ್ಯ

  • ಶೂಟಿಂಗ್ ನಿಲ್ಲಿಸಿದ ಪುಷ್ಪ 2 ಟೀಮ್ : ಇಡಿ, ಐಟಿ ದಾಳಿ ಎಫೆಕ್ಟ್

    ಶೂಟಿಂಗ್ ನಿಲ್ಲಿಸಿದ ಪುಷ್ಪ 2 ಟೀಮ್ : ಇಡಿ, ಐಟಿ ದಾಳಿ ಎಫೆಕ್ಟ್

    ಲ್ಲು ಅರ್ಜುನ್ (Allu Arjun) ನಾಯಕನಾಗಿ ನಟಿಸುತ್ತಿರುವ ಪುಷ್ಪ 2 (Pushpa 2) ಸಿನಿಮಾದ ಶೂಟಿಂಗ್ (Shooting) ನಿಲ್ಲಿಸಿದ್ದಾರೆ ಎಂದು ವರದಿಯಾಗಿದೆ. ಈ ಸಿನಿಮಾದ ನಿರ್ಮಾಪಕರು ಹಾಗೂ ನಿರ್ದೇಶಕರ ಮನೆ ಹಾಗೂ ಕಚೇರಿಯ ಮೇಲೆ ಇಡಿ ಹಾಗೂ ಐಟಿ ದಾಳಿ ನಡೆದ ಹಿನ್ನೆಲೆಯಲ್ಲಿ ಶೂಟಿಂಗ್ ಸ್ಥಗಿತ ಮಾಡಲಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ.

    ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ ಮೈತ್ರಿ ಮೂವಿ ಮೇಕರ್ಸ್ (Mythri Movie Makers)ಈ ಸಿನಿಮಾವನ್ನು ನಿರ್ಮಾಣ ಮಾಡಿತ್ತು. ನವೀನ್ ಯೆರ್ನೇನಿ ಹಾಗೂ ಯಲಮಂಚಿಲಿ ರವಿಶಂಕರ್ ಈ ಸಂಸ್ಥೆಯ ನಿರ್ಮಾಪಕರು. ಮೊನ್ನೆ ಬೆಳಗಿನ ಜಾವ ಇವರ ಮನೆ ಹಾಗೂ ಕಚೇರಿಯಲ್ಲಿ ಇಡಿ (ED) ಅಧಿಕಾರಿಗಳು ದಾಳಿ ಮಾಡಿದ್ದು. ಇದನ್ನೂ ಓದಿ:ನಯನತಾರಾ ಬಗ್ಗೆ ಕನ್ನಡದ ‘ಗೂಳಿ’ ನಟಿ ಶಾಕಿಂಗ್ ಹೇಳಿಕೆ

    ವಾಲ್ತೇರು ವೀರಯ್ಯ, ವೀರಸಿಂಹ ರೆಡ್ಡಿ ಅಂತ ಬಹುಕೋಟಿ ವೆಚ್ಚದ ಸಿನಿಮಾಗಳನ್ನು ಈ ಸಂಸ್ಥೆ ನಿರ್ಮಾಣ ಮಾಡಿದ್ದು ವಿದೇಶಗಳಲ್ಲಿ ದೊಡ್ಡಬಜೆಟ್ ನ ಚಿತ್ರಗಳನ್ನು ವಿತರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಹವಾಲಾ ಮಾರ್ಗದಲ್ಲಿ ಹಣದ ಸಂಗ್ರಹಣೆ ಮೂಲಕ ಪ್ರಮೋಟರ್ಸ್ ಮನಿ ಲ್ಯಾಂಡರಿಂಗ್ ಗೆ ಮುಂದಾಗಿರುವ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ಹೇಳಲಾಗುತ್ತಿದೆ.

    ಇಷ್ಟೇ ಅಲ್ಲದೇ ಆದಾಯ ತೆರಿಗೆ (IT) ಪಾವತಿಯಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗುತ್ತಿದ್ದು ಇಡಿ ಅಧಿಕಾರಿಗಳ ಜೊತೆ ಐಟಿ ಅಧಿಕಾರಿಗಳು ಕೂಡ ಜೊತೆಯಾಗಿ ಶೋಧ ಕಾರ್ಯ ನಡೆಸಿದ್ದರು ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಸಿನಿಮಾ ನಿರ್ಮಾಣ ಸಂಸ್ಥೆಯ ಜೊತೆಗೆ ಪುಷ್ಪ ಚಿತ್ರದ ಸುಕುಮಾರನ್ ಮನೆಯಲ್ಲೂ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದರು.

  • ಕೆಜಿಎಫ್ ಬಾಬು ಮನೆ ಮೇಲೆ ಐಟಿ ದಾಳಿ – ಸಾವಿರಾರು ಸೀರೆ, ಡಿಮಾಂಡ್ ಡ್ರಾಫ್ಟ್ ವಶಕ್ಕೆ

    ಕೆಜಿಎಫ್ ಬಾಬು ಮನೆ ಮೇಲೆ ಐಟಿ ದಾಳಿ – ಸಾವಿರಾರು ಸೀರೆ, ಡಿಮಾಂಡ್ ಡ್ರಾಫ್ಟ್ ವಶಕ್ಕೆ

    ಬೆಂಗಳೂರು: ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ತುರುಸುನ ಸಿದ್ಧತೆ ನಡೆಸುತ್ತಿದ್ದು, ಈ ನಡುವೆ ಐಟಿ (IT) ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ಬುಧವಾರ ಬೆಂಗಳೂರಿನ (Bengaluru) ಕೆಜಿಎಫ್ ಬಾಬು (KGF Babu) ಮನೆ ಸೇರಿದಂತೆ ರಾಜ್ಯಾದ್ಯಂತ 50 ಕಡೆಗಳಲ್ಲಿ ಐಟಿ ದಾಳಿ ನಡೆಸಿದೆ. ಈ ವೇಳೆ ಅಧಿಕಾರಿಗಳಿಗೆ ಅಕ್ರಮವಾಗಿ ಸಂಗ್ರಹಿಸಿಟ್ಟ ಕೋಟ್ಯಂತರ ಮೌಲ್ಯದ ವಸ್ತುಗಳು ದೊರಕಿವೆ.

    ಕೆಜಿಎಫ್ ಬಾಬುಗೆ ಸಂಬಂಧಪಟ್ಟ ಬೆಂಗಳೂರಿನ ಹೈಗ್ರೌಂಡ್ ಬಳಿ ಇರುವ ರುಕ್ಸಾನಾ ಪ್ಯಾಲೆಸ್ ಮೇಲೆ ಬುಧವಾರ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ 2,000ಕ್ಕೂ ಹೆಚ್ಚು ಡಿಮಾಂಡ್ ಡ್ರಾಫ್ಟ್ (ಡಿಡಿ), 5,000ಕ್ಕೂ ಹೆಚ್ಚು ರೇಶ್ಮೆ ಸೀರೆಗಳು ದೊರಕಿವೆ.

    ಕೆಜಿಎಫ್ ಬಾಬು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಬಯಸಿ ಪ್ರಚಾರವನ್ನು ನಡೆಸಿದ್ದರು. ಆದರೆ ಕಾಂಗ್ರೆಸ್‌ನಿಂದ ಟಿಕೆಟ್ ಸಿಕ್ಕಿರದ ಕಾರಣ ಅವರ ಪತ್ನಿಯನ್ನು ಪಕ್ಷೇತರ ಅಭ್ಯರ್ಥಿಯಾಗಿ ಕೆಜಿಎಫ್ ಬಾಬು ಕಣಕ್ಕೆ ಇಳಿಸಿದ್ದಾರೆ. ಐಟಿ ದಾಳಿ ವೇಳೆ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ 1,925 ವೋಟರ್ ಐಡಿಗಳು ಪತ್ತೆಯಾಗಿವೆ. ಪ್ರತಿ ವೋಟರ್ ಐಡಿಗಳನ್ನು ತಲಾ 5,000 ರೂ. ಚೆಕ್‌ಗಳೊಂದಿಗೆ ಶೇಖರಿಸಿಡಲಾಗಿತ್ತು ಎನ್ನಲಾಗಿದೆ. ಇದನ್ನೂ ಓದಿ: ವರಿಷ್ಠರ ಆಯ್ಕೆಯನ್ನು ಯಾರು ಪ್ರಶ್ನೆ ಮಾಡುವ ಹಾಗೆ ಇಲ್ಲ : ಈಶ್ವರಪ್ಪ

    ನಿವಾಸದ ಮೊದಲ ಮಹಡಿಯ ಕೊಠಡಿಯಲ್ಲಿ ವೋಟರ್ ಐಡಿ ಹಾಗೂ ಚೆಕ್‌ಗಳು ದೊರೆತರೆ, ಮನೆಯ ನೆಲಮಹಡಿಯಲ್ಲಿ ಸುಮಾರು 26 ಬ್ಯಾಗ್‌ಗಳಲ್ಲಿ ಸೀರೆಗಳು ದೊರಕಿವೆ. ಸುಮಾರು 5,000 ಸೀರೆಗಳು ಪತ್ತೆಯಾಗಿದ್ದು, ಕಾಂಚಿಪುರಂ ರೇಷ್ಮೆ ಸೀರೆಗಳು ಇವಾಗಿವೆ ಎನ್ನಲಾಗಿದೆ.

    ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಈ ಎಲ್ಲಾ ವಸ್ತುಗಳ ಮೇಲೆ ಕೆಜಿಎಫ್ ಬಾಬು ಅವರಿಂದ ಉಡುಗೊರೆ ಎಂದು ಬರೆಯಲಾಗಿದ್ದು, ಅವರ ಫೋಟೋಗಳು ಕೂಡಾ ಕಂಡುಬಂದಿದೆ. ಈ ಎಲ್ಲಾ ವಸ್ತುಗಳನ್ನು ಮತದಾರರಿಗೆ ಹಂಚಲು ಸಂಗ್ರಹಿಸಿಡಲಾಗಿದ್ದು, ಇದೀಗ ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಹಿನ್ನೆಲೆ ಶಿವಾಜಿನಗರ ವಲಯ ಚುನಾವಣಾ ಉಸ್ತುವಾರಿಯಿಂದ ಹೈ ಗ್ರೌಡ್ಸ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್‌ನ ಅಂತಿಮ ಪಟ್ಟಿ ಬಿಡುಗಡೆ – 5 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆ

  • ‘ಪುಷ್ಪ’ ಟೀಮ್ ಗೆ ED ಶಾಕ್: ನಿರ್ದೇಶಕ, ನಿರ್ಮಾಪಕರ ಕಚೇರಿ ಮೇಲೆ ಅಧಿಕಾರಿಗಳು ದಾಳಿ

    ‘ಪುಷ್ಪ’ ಟೀಮ್ ಗೆ ED ಶಾಕ್: ನಿರ್ದೇಶಕ, ನಿರ್ಮಾಪಕರ ಕಚೇರಿ ಮೇಲೆ ಅಧಿಕಾರಿಗಳು ದಾಳಿ

    ಲ್ಲು ಅರ್ಜುನ್ ನಟನೆಯ ‘ಪುಷ್ಪ’ (Pushpa) ಸಿನಿಮಾ ಭಾರತೀಯ ಸಿನಿಮಾ ರಂಗದಲ್ಲಿ ಭಾರೀ ಸದ್ದು ಮಾಡಿತ್ತು. ಸಾವಿರಾರು ಕೋಟಿ ಕಲೆಕ್ಷನ್ ಮಾಡುವ ಮೂಲಕ ದಾಖಲೆ ಬರೆದಿತ್ತು. ಈ ಗೆಲುವಿನ ಖುಷಿಯಲ್ಲೇ ನಿರ್ದೇಶಕ ಸುಕುಮಾರನ್ (Sukumaran) ‘ಪುಷ್ಪ 2’ ಸಿನಿಮಾವನ್ನು ಶುರು ಮಾಡಿದ್ದರು. ಈಗಾಗಲೇ ಹಲವು ಹಂತದ ಚಿತ್ರೀಕರಣ ಕೂಡ ಮುಗಿದಿದೆ. ಈ ಸಮಯದಲ್ಲಿ ಜಾರಿ ನಿರ್ದೇಶನಾಲಯ (Enforcement Directorate) ಅಧಿಕಾರಿಗಳು ನಿರ್ಮಾಪಕರ ಮತ್ತು ನಿರ್ದೇಶಕರ ಮನೆ ಹಾಗೂ ಕಚೇರಿ ಮೇಲೆ ದಾಳಿ ಮಾಡಿದ್ದಾರೆ.

    ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ ಮೈತ್ರಿ ಮೂವಿ ಮೇಕರ್ಸ್ (Mythri Movie Makers)ಈ ಸಿನಿಮಾವನ್ನು ನಿರ್ಮಾಣ ಮಾಡಿತ್ತು. ನವೀನ್ ಯೆರ್ನೇನಿ ಹಾಗೂ ಯಲಮಂಚಿಲಿ ರವಿಶಂಕರ್ ಈ ಸಂಸ್ಥೆಯ ನಿರ್ಮಾಪಕರು. ಬೆಳಗಿನ ಜಾವ ಇವರ ಮನೆ ಹಾಗೂ ಕಚೇರಿಯಲ್ಲಿ ಇಡಿ (ED) ಅಧಿಕಾರಿಗಳು ಶೋಧ ಕಾರ್ಯ ಶುರು ಮಾಡಿದ್ದಾರೆ. ಇನ್ನೂ ಪರಿಶೀಲನೆ ನಡೆಯುತ್ತಿದೆ ಎಂದು ವರದಿ ಆಗಿದೆ. ಇದನ್ನೂ ಓದಿ:‘ಎಂದೆಂದಿಗೂ ಆರ್‌ಸಿಬಿ’ ಎಂದ ನಟಿ ದಿವ್ಯಾ ಉರುಡುಗ

    ವಾಲ್ತೇರು ವೀರಯ್ಯ, ವೀರಸಿಂಹ ರೆಡ್ಡಿ ಅಂತ ಬಹುಕೋಟಿ ವೆಚ್ಚದ ಸಿನಿಮಾಗಳನ್ನು ಈ ಸಂಸ್ಥೆ ನಿರ್ಮಾಣ ಮಾಡಿದ್ದು ವಿದೇಶಗಳಲ್ಲಿ ದೊಡ್ಡಬಜೆಟ್ ನ ಚಿತ್ರಗಳನ್ನು ವಿತರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಹವಾಲಾ ಮಾರ್ಗದಲ್ಲಿ ಹಣದ ಸಂಗ್ರಹಣೆ ಮೂಲಕ ಪ್ರಮೋಟರ್ಸ್ ಮನಿ ಲ್ಯಾಂಡರಿಂಗ್ ಗೆ ಮುಂದಾಗಿರುವ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ಹೇಳಲಾಗುತ್ತಿದೆ.

    ಇಷ್ಟೇ ಅಲ್ಲದೇ ಆದಾಯ ತೆರಿಗೆ (IT) ಪಾವತಿಯಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗುತ್ತಿದ್ದು ಇಡಿ ಅಧಿಕಾರಿಗಳ ಜೊತೆ ಐಟಿ ಅಧಿಕಾರಿಗಳು ಕೂಡ ಜೊತೆಯಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಸಿನಿಮಾ ನಿರ್ಮಾಣ ಸಂಸ್ಥೆಯ ಜೊತೆಗೆ ಪುಷ್ಪ ಚಿತ್ರದ ಸುಕುಮಾರನ್ ಮನೆಯಲ್ಲೂ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರಂತೆ.

  • ಕಾಂಗ್ರೆಸ್ ಕಳ್ಳತನ ಮಾಡಿದೆ, ಅದಕ್ಕೆ ಐಟಿಗೆ ಭಯ ಬೀಳ್ತಿದೆ – ಸಿಎಂ ಬೊಮ್ಮಾಯಿ

    ಕಾಂಗ್ರೆಸ್ ಕಳ್ಳತನ ಮಾಡಿದೆ, ಅದಕ್ಕೆ ಐಟಿಗೆ ಭಯ ಬೀಳ್ತಿದೆ – ಸಿಎಂ ಬೊಮ್ಮಾಯಿ

    ಬೆಂಗಳೂರು: ಕಾಂಗ್ರೆಸ್‌ನವರು (Congress) ಕಳ್ಳತನ ಮಾಡಿದ್ದಾರೆ. ಅದಕ್ಕೆ ಐಟಿಗೆ (IT) ಭಯ ಬೀಳುತ್ತಿದ್ದಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ (Basavaraj Bommai) ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಕಾಂಗ್ರೆಸ್ ವಿರುದ್ದ ಸೋಲುವ ಭಯದಲ್ಲಿ ಬಿಜೆಪಿ (BJP) ಐಟಿ ದಾಳಿ ಮಾಡಿಸಲು ಸಿದ್ಧವಾಗಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅದಕ್ಕೂ ಇದಕ್ಕೂ ಯಾವುದೇ ಸಂಬಂಧ ಇಲ್ಲ. ಕಾಂಗ್ರೆಸ್ ಸೋಲುವುದು ನಿಶ್ಚಿತ. ನಮಗೆ ಗೆಲ್ಲುವ ವಿಶ್ವಾಸವಿದೆ. ಕಳ್ಳನ ಜೀವ ಉಳ್ಳುಳ್ಳಗೆ ಅಂತಾರಲ್ಲ. ಹಾಗೇ ಕಾಂಗ್ರೆಸ್ ಅವರು ಕಳ್ಳತನ ಮಾಡಿದ್ದಾರೆ. ಅದಕ್ಕೆ ಈ ರೀತಿ ಭಯ ಬೀಳುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಸುದೀಪ್ ಬಂದ್ರೆ ಪಕ್ಷಕ್ಕೆ ಲಾಭ ಆಗುತ್ತೆ: ಶ್ರೀರಾಮುಲು 

    ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಯಾಕೆ ಮುಟ್ಟಿ ನೋಡಿಕೊಳ್ಳಬೇಕು. ಚುನಾವಣೆ ಆಯೋಗದ ಅಧೀನದಲ್ಲಿ ಎಲ್ಲವೂ ನಡೆಯುತ್ತವೆ. ಅವರೇ ಎಲ್ಲವೂ ಮಾನಿಟರ್ ಮಾಡುತ್ತಿದ್ದಾರೆ. ಈಗಾಗಲೇ ಅಧಿಕೃತವಾಗಿ ಐಟಿ ಅಧಿಕಾರಿಗಳು ಪ್ರತೀ ಜಿಲ್ಲೆಯಲ್ಲಿ ಇದ್ದಾರೆ. ಚುನಾವಣಾ ಆಯೋಗ ಕೂಡಾ ದಾಳಿ ಮಾಡುತ್ತಿದೆ. ಎಲ್ಲಾ ಪಕ್ಷಗಳ ವಸ್ತುಗಳನ್ನು ಸೀಜ್ ಮಾಡುತ್ತಿದ್ದಾರೆ. ಚುನಾವಣಾ ಆಯೋಗ ಒಂದು ಸ್ವಾಯತ್ತತೆ ಸಂಸ್ಥೆ. ಅದರ ಕೆಲಸ ಅದು ಮಾಡುತ್ತದೆ. ಐಟಿ ದಾಳಿ ಆಗುತ್ತಿರುವುದಕ್ಕೆ ಕಾಂಗ್ರೆಸ್‌ಗೆ ಭಯ ಶುರುವಾಗಿದೆ ಎಂದರು. ಇದನ್ನೂ ಓದಿ: 10ನೇ ತರಗತಿಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ – ಬಿಜೆಪಿಯ ಬಂಡಿ ಸಂಜಯ್ ಕುಮಾರ್ ಬಂಧನ 

    ಇಷ್ಟು ವರ್ಷ ಕಾಂಗ್ರೆಸ್ ಸಾಕಷ್ಟು ಹಣ ಮಾಡಿದೆ. ಕಾಂಗ್ರೆಸ್‌ನವರಿಗೆ ಕಪ್ಪು ಹಣ (Black Money) ಹೊರಬರುತ್ತದೆ ಎನ್ನುವ ಭಯ. ಕಾಂಗ್ರೆಸ್‌ನವರು ದಾಳಿ ಮಾಡುತ್ತಾರೆ ಎಂದು ಮುಂಚಿತವಾಗಿ ಹೇಳಿ ದಾಳಿಯ ತೀವ್ರತೆ ಕಡಿಮೆ ಮಾಡುವ ಉಪಾಯ ಮಾಡುತ್ತಿದ್ದಾರೆ. ಅಧಿಕಾರಿಗಳ ಮೇಲೆ ಒತ್ತಡ ಹಾಕಲು ಹೀಗೆ ಮಾಡುತ್ತಿದ್ದಾರೆ. ಇವೆಲ್ಲ ನಡೆಯುವುದಿಲ್ಲ. ಯಾರು ಕಳ್ಳರಿದ್ದಾರೆ ಅವರು ಸಿಕ್ಕಿಹಾಕಿಕೊಳ್ಳುತ್ತಾರೆ ಎಂದು ಹರಿಹಾಯ್ದರು. ಇದನ್ನೂ ಓದಿ: ಕಾಂಗ್ರೆಸ್‌ನಿಂದ ಗುಬ್ಬಿ ಟಿಕೆಟ್ ಆಕಾಂಕ್ಷಿ ಪ್ರಸನ್ನಕುಮಾರ್ ಉಚ್ಚಾಟನೆ

  • ಮಾಡಾಳ್ ಭ್ರಷ್ಟಾಚಾರ ಪಕ್ಷಕ್ಕೆ ಮುಜುಗರ; ಆರೋಪಿಗಳ ಪರ ಜೈಕಾರ ಹಾಕೋದು ಡಿಕೆಶಿ ಸಂಸ್ಕೃತಿ – ಸಿ.ಟಿ ರವಿ

    ಮಾಡಾಳ್ ಭ್ರಷ್ಟಾಚಾರ ಪಕ್ಷಕ್ಕೆ ಮುಜುಗರ; ಆರೋಪಿಗಳ ಪರ ಜೈಕಾರ ಹಾಕೋದು ಡಿಕೆಶಿ ಸಂಸ್ಕೃತಿ – ಸಿ.ಟಿ ರವಿ

    ಯಾದಗಿರಿ: ಶಾಸಕ ಮಾಡಾಳ್ ವಿರೂಪಾಕ್ಷಪ್ಪ (Maadal Virupakshappa) ಭ್ರಷ್ಟಾಚಾರ ಪ್ರಕರಣ ನಮ್ಮ ಪಕ್ಷಕ್ಕೆ ಮುಜುಗರ ತಂದಿದೆ ಎಂದು ಬಿಜೆಪಿ (BJP) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ (CT Ravi) ಬೇಸರ ವ್ಯಕ್ತಪಡಿಸಿದ್ದಾರೆ.

    ಯಾದಗಿರಿಯ ಶಹಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಡಾಳ್ ವಿರೂಪಾಕ್ಷಪ್ಪ ಪ್ರಕರಣದಲ್ಲಿ ಕಾನೂನು ತನ್ನ ಕೆಲಸ ಮಾಡ್ತಿದೆ. ಯಾರನ್ನೂ ರಕ್ಷಿಸುವ ಅಥವಾ ಟಾರ್ಗೆಟ್ ಮಾಡೋ ಕೆಲಸ ಮಾಡಲ್ಲ. ಇದೇ ಪರಿಸ್ಥಿತಿ ಕಾಂಗ್ರೆಸ್ (Congress) ಶಾಸಕರಿಗೆ ಆಗಿದ್ದರೆ ಇ.ಡಿ, ಐಟಿ, ಸಿಬಿಐ (CBI) ಆಯ್ತು ಈಗ ಲೋಕಾಯುಕ್ತಗೂ ಛೂ ಬಿಟ್ಟಿದ್ದಾರೆ ಅಂತಿದ್ರು. ಯಾರೇ ತಪ್ಪು ಮಾಡಿದ್ರೂ ಶಿಕ್ಷೆ ಅನುಭವಿಸ್ತಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾಪತ್ತೆಯಾಗಿದ್ದ ಮಾಡಾಳ್‌ ಮನೆಗೆ ವಾಪಸ್‌ – ತೆರೆದ ವಾಹನದಲ್ಲಿ ಮೆರವಣಿಗೆ

    KSDL Corruption Case BJP MLA Madal Virupakshappa returns home

    ಮಾಡಾಳ್ ಅಂತಹವರ ಪರ ಜೈಕಾರ ಹಾಕಿ ಸಂಭ್ರಮಿಸೋದು ನಮ್ಮ ಪಕ್ಷದ ಸಂಸ್ಕೃತಿ ಅಲ್ಲ. ಅದು ಡಿಕೆ ಶಿವಕುಮಾರ್ (DK Shivakumar), ಕಾಂಗ್ರೆಸ್ ಸಂಸ್ಕೃತಿ, ಅದನ್ನ ಯಾರೂ ಅನುಸರಿಸಬಾರದು. ಡಿಕೆಶಿ ಜೈಲಿನಿಂದ ಹೊರ ಬಂದಾಗ ಅವರ ಬೆಂಬಲಿಗರು ಈ ರೀತಿ ಸಂಭ್ರಮಿಸಿದ್ದರು. ಆ ರೀತಿ ವೈಭವಿಕರಿಸೋದು ತಪ್ಪು. ಅದನ್ನ ಯಾರೂ ಮಾಡಬಾರದು ಎಂದು ಪಕ್ಷದ ಕಾರ್ಯಕರ್ತರಿಗೆ ಹಾಗೂ ಮಾಡಾಳ್ ಬೆಂಬಲಿಗರಿಗೆ ಖಡಕ್ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಪಾಕ್ ಇತಿಹಾಸ ಪುಸ್ತಕಗಳಲ್ಲಿ ಭಾರತ, ಹಿಂದೂ ವಿರೋಧಿ ನಿಲುವು – ಪಠ್ಯದಲ್ಲಿ ಗಾಂಧಿ ಹಿಂದೂ ನಾಯಕ ಎಂದು ಪರಿಚಯ

    Congress 1

    ಸಂಸದೆ ಸುಮಲತಾ (Sumalatha) ಬಿಜೆಪಿ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿ.ಟಿ ರವಿ, ಅದಕ್ಕಿನ್ನೂ 24 ಗಂಟೆ ಸಮಯವಿದೆ. ಗೊತ್ತಿಲ್ಲದ ಮಾಹಿತಿಯ ಬಗ್ಗೆ ನಾನು ಹ್ಹಾ ಅಂತಾನೂ ಹೇಳಲ್ಲ, ಹೂ ಅಂತಾನೂ ಹೇಳಲ್ಲ. ಪ್ರತಿಯೊಬ್ಬ ವ್ಯಕ್ತಿಗೂ ತನ್ನದೇ ಸಾಮರ್ಥ್ಯ ಇರುತ್ತೆ. ಸಾಮರ್ಥ್ಯ ಇದ್ದವರು ಸೇರಿದಾಗ ಪಕ್ಷಕ್ಕೆ ಸಹಾಯ ಆಗುತ್ತೆ ಎಂದ ಅವರು, ಸೋಮಣ್ಣ ಪಕ್ಷ ಬಿಡ್ತಾರೆ ಅನ್ನೋದು ಊಹಾಪೋಹ. ಅದಕ್ಕೆ ನಾನು ಉತ್ತರಿಸಲ್ಲ ಎಂದು ಜಾರಿಕೊಂಡರು.

  • ದೆಹಲಿ, ಮುಂಬೈನಲ್ಲಿರುವ BBC ಕಚೇರಿಗಳಲ್ಲಿ ಐಟಿ ಪರಿಶೀಲನೆ – ಸಿಬ್ಬಂದಿ ಮೊಬೈಲ್‌, ಲ್ಯಾಪ್‌ಟಾಪ್‌ ವಶ

    ದೆಹಲಿ, ಮುಂಬೈನಲ್ಲಿರುವ BBC ಕಚೇರಿಗಳಲ್ಲಿ ಐಟಿ ಪರಿಶೀಲನೆ – ಸಿಬ್ಬಂದಿ ಮೊಬೈಲ್‌, ಲ್ಯಾಪ್‌ಟಾಪ್‌ ವಶ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಕುರಿತು ಸಾಕ್ಷ್ಯಚಿತ್ರ ಹೊರತಂದು ವಿವಾದಕ್ಕೆ ಸಿಲುಕಿರುವ ಬಿಬಿಸಿ ಕಚೇರಿ ಮೇಲೆ ಆದಾಯ ತೆರಿಗೆ (Income Tax) ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ದೆಹಲಿ (New Delhi) ಹಾಗೂ ಮುಂಬೈನಲ್ಲಿರುವ (Mumbai) ಬಿಬಿಸಿ ಕಚೇರಿಗಳಲ್ಲಿ ಸರ್ವೇ ನಡೆಸಲಾಗಿದೆ.

    BBC (ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್) ಒಳಗೊಂಡಿರುವ ಅಂತಾರಾಷ್ಟ್ರೀಯ ತೆರಿಗೆ ಮತ್ತು ಅಕ್ರಮಗಳ ಆರೋಪದ ಮೇಲೆ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮತಾಂಧತೆಯನ್ನ ಭಯೋತ್ಪಾದನೆಗೆ ಕಚ್ಛಾವಸ್ತುವಿನಂತೆ ಬಳಕೆ ಮಾಡಿಕೊಳ್ತಿತ್ತು- PFI ನಿಷೇಧ ಸಮರ್ಥಿಸಿಕೊಂಡ ಶಾ

    ಬಿಬಿಸಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅನೇಕ ಪತ್ರಕರ್ತರ ಮೊಬೈಲ್ ಹಾಗೂ ಲ್ಯಾಪ್‌ಟಾಪ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದು ಕೇವಲ ಸರ್ವೇ ಅಷ್ಟೆ. ನಮ್ಮ ಅಧಿಕಾರಿಗಳು, ಬಿಬಿಸಿ ಕಚೇರಿಯ ಅಕೌಂಟ್‌ ಬುಕ್‌ ಪರಿಶೀಲನೆ ಮಾಡಿದ್ದಾರೆ ಎಂದು ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.

    2002ರ ಗುಜರಾತ್‌ ಗಲಭೆ ಕುರಿತು ‘ಇಂಡಿಯಾ: ದಿ ಮೋದಿ ಕ್ವೆಶ್ಚನ್‌’ ಎಂಬ ಸಾಕ್ಷ್ಯಚಿತ್ರ ನಿರ್ಮಿಸಿ ಬಿಬಿಸಿ ವಿವಾದಕ್ಕೆ ಸಿಲುಕಿತ್ತು. ಸೋಷಿಯಲ್‌ ಮೀಡಿಯಾದಲ್ಲಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಕ್ರಮವಹಿಸಿತ್ತು. ಈ ಸಂಬಂಧ ಯೂಟ್ಯೂಬ್‌, ಟ್ವಿಟ್ಟರ್‌ಗೆ ನಿರ್ದೇಶನ ನೀಡಿತ್ತು. ಅಷ್ಟೇ ಅಲ್ಲದೇ, ಬಿಬಿಸಿ ನಿಷೇಧಿಸಬೇಕು ಎಂದು ಹಿಂದೂಪರ ಸಂಘಟನೆಯ ಸದಸ್ಯರೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿತ್ತು. ಇದನ್ನೂ ಓದಿ: ರಾಗಾ ವಿಮಾನವನ್ನು ವಾರಣಾಸಿಯಲ್ಲಿ ಬೇಕೆಂದೇ ಇಳಿಸಲು ನಿರಾಕರಿಸಲಾಗಿದೆ: ಕಾಂಗ್ರೆಸ್ ಆರೋಪ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬಡವರು ಬಡವರಾಗೇ ಇರ‍್ಲಿ, ಶ್ರೀಮಂತರಾದ್ರೆ ಐಟಿ, ಇಡಿ, ಸಿಬಿಐ ಸಂಕಷ್ಟ : ಕೆಜಿಎಫ್ ಬಾಬು

    ಬಡವರು ಬಡವರಾಗೇ ಇರ‍್ಲಿ, ಶ್ರೀಮಂತರಾದ್ರೆ ಐಟಿ, ಇಡಿ, ಸಿಬಿಐ ಸಂಕಷ್ಟ : ಕೆಜಿಎಫ್ ಬಾಬು

    ನವದೆಹಲಿ: ಬಡವನೊಬ್ಬ ಶ್ರಮವಹಿಸಿ ದುಡಿದು ಕಾನೂನು ಬದ್ಧವಾಗಿಯೇ ಶ್ರೀಮಂತನಾದರೂ ದೇಶದ ತನಿಖಾ ಸಂಸ್ಥೆಗಳು ವಿಚಾರಣೆ ಹೆಸರಿನಲ್ಲಿ ಮಾನಸಿಕ ಕಿರುಕುಳ ನೀಡುತ್ತವೆ. ಹೀಗಾಗಿ ಬಡವರು ಯಾವ ಕೆಲಸ ಮಾಡುತ್ತಿದ್ದೀರಿ, ಅದೇ ಕೆಲಸ ಮಾಡಿಕೊಂಡು ಬಡವರಾಗಿದ್ದು ಬಿಡಿ ಎಂದು ಕೆಜಿಎಫ್ ಬಾಬು (KGF Babu) ಅಸಮಾಧಾನ ವ್ಯಕ್ತಪಡಿಸಿದರು.

    6ನೇ ಬಾರಿಗೆ ವಿಚಾರಣೆಯ ಹಿನ್ನೆಲೆಯಲ್ಲಿ ದೆಹಲಿಯ ಇಡಿ ಕೇಂದ್ರ ಕಚೇರಿಗೆ ಆಗಮಿಸಿದ್ದ ಕೆಜಿಎಫ್ ಬಾಬು ಮಾಧ್ಯಮಗಳ ಜೊತೆಗೆ ಮಾತನಾಡಿ, ನನಗೂ ಇಡಿಗೂ (ED) ಸಂಬಂಧ ಇಲ್ಲ, ಯಾಕೆ ಕರೆದಿದ್ದಾರೆ ನನಗೆ ಗೊತ್ತಿಲ್ಲ, ಈವರೆಗೂ 6 ಬಾರಿ ಕರೆದಿದ್ದಾರೆ. ನನ್ನ ಜೊತೆಗೆ ವ್ಯವಹಾರ ಮಾಡಿದ ಆರೇಳು ಜನಕ್ಕೆ ನೋಟಿಸ್ ನೀಡಿ ವಿಚಾರಣೆ ನಡೆಸುತ್ತಿದ್ದಾರೆ ಎಂದರು.

    ಇಡಿ ಅಧಿಕಾರಿಗಳು ಯಾವುದನ್ನು ಅಧಿಕೃತವಾಗಿ ತನಿಖೆ ನಡೆಸುತ್ತಿಲ್ಲ ಎನಿಸುತ್ತಿದೆ. ನನಗೆ ಸಮನ್ಸ್ ನೀಡದೆ ವಿಚಾರಣೆಗೆ ಕರೆಯುತ್ತಿದ್ದಾರೆ. ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ನನ್ನ ಆದಾಯದ ಮೂಲ ಕೇಳುತ್ತಿದ್ದಾರೆ. ಆದಾಯ ತೆರಿಗೆ ಇಲಾಖೆ ಮಾಡುವ ಕೆಲಸವನ್ನು ಇಡಿ ಮಾಡಲು ಆರಂಭಿಸಿದೆ. 2019ವರೆಗೂ ಐಟಿಯೇ (IT) ನನ್ನ ಆಸ್ತಿ ಅಂದಾಜು ಮಾಡಿ, ಟ್ಯಾಕ್ಸ್ ಕಟ್ಟಿಸಿಕೊಂಡಿದೆ. ಹಾಗಾದ್ರೆ ಐಟಿ ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಪ್ರಶ್ನಿಸಿದರು.

    ವಿಚಾರಣೆ ಹೆಸರಿನಲ್ಲಿ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ. ಹೀಗೆ ಕಿರುಕುಳ ನೀಡುವ ಬದಲು ಒಮ್ಮೆ ಜೈಲಿಗೆ ಹಾಕಿ ಬಿಡಿ ಎಂದು ಆಕ್ರೋಶ ಹೊರಹಾಕಿದ ಅವರು, ಯಾರು ಸ್ಲಂನಲ್ಲಿದ್ದೀರಿ ಅವರು ಅಲ್ಲೇ ಇರಿ, ಬಡವರು ದುಡ್ಡಿನವರು ಆದರೆ ಇದೇ ಸಮಸ್ಯೆ ಇರಲಿದೆ. ಶ್ರೀಮಂತರು ಶ್ರೀಮಂತರಾಗಿರಬೇಕು, ಬಡವರು ಶ್ರೀಮಂತರಾದ್ದಾರೆ ಇಡಿ ಸಿಬಿಐ (CBI) ಎಲ್ಲರೂ ಬರ್ತಾರೆ ಎಂದು ಹೇಳಿದರು. ಇದನ್ನೂ ಓದಿ: ಮಾರ್ಚ್‌ನಲ್ಲಿ ದಶಪಥ ರಸ್ತೆ ಲೋಕಾರ್ಪಣೆ, 250 ರೂ. ಟೋಲ್ ನಿಗದಿ ಸಾಧ್ಯತೆ: ಪ್ರತಾಪ್ ಸಿಂಹ

    ನನ್ನ ವ್ಯವಹಾರ ರಾಜಕಾರಣಿಗಳು ಸೇರಿ ಎಲ್ಲರ ಜೊತೆಗೆ ಇದೆ. ಜಮೀರ್ ಅಹ್ಮದ್‌ಗೆ 3.70 ಕೋಟಿ ಕೈಸಾಲ ನೀಡಿ ಸಿಕ್ಕಿ ಹಾಕಿಕೊಂಡೆ, ಸಾಲವನ್ನು ನೀಡಿದ್ದನ್ನು ಧೃಢಿಕರಿಸಿದ ಬಳಿಕ ನೋಟಿಸ್, ವಿಚಾರಣೆ ಆರಂಭವಾಯಿತು. ಇದರಲ್ಲಿ ಮಾಜಿ ಶಾಸಕ ಆರ್.ವಿ ದೇವರಾಜ್ ಕೈವಾಡವೂ ಇದೆ ಎನ್ನುವ ಅನುಮಾನವಿದೆ. ಮನೆಗೆ ಬೆಂಕಿ ಇಟ್ಟಿರುವ ದೇವರಾಜ್ ನನ್ನನ್ನು ರಾಜಕೀಯವಾಗಿ ಮುಗಿಸಲು ಎಲ್ಲ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಶಾಲೆಗಳಲ್ಲಿ ಮೊಟ್ಟೆ ಕೊಡುವುದು ನಿಲ್ಲಿಸುವುದಿಲ್ಲ: ಬಿ.ಸಿ ನಾಗೇಶ್

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮದುವೆ ಮನೆಗೆ ಬಂದವರಂತೆ ಬಂದ ಅಧಿಕಾರಿಗಳು- ಕೈ ಮುಖಂಡೆ, ಅಳಿಯನ ಮನೆ ಮೇಲೆ ಐಟಿ ರೇಡ್

    ಮದುವೆ ಮನೆಗೆ ಬಂದವರಂತೆ ಬಂದ ಅಧಿಕಾರಿಗಳು- ಕೈ ಮುಖಂಡೆ, ಅಳಿಯನ ಮನೆ ಮೇಲೆ ಐಟಿ ರೇಡ್

    ಚಿಕ್ಕಮಗಳೂರು/ಹಾಸನ: ಕಾಂಗ್ರೆಸ್ (Congress) ನಾಯಕಿ ಗಾಯತ್ರಿ ಶಾಂತೇಗೌಡ (Gayatri Shante Gowda) ಹಾಗೂ ಹಾಸನದಲ್ಲಿರುವ (Hassan) ಅವರ ಅಳಿಯನ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ (Raid) ನಡೆಸಿದ್ದಾರೆ.

    ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಮುಖಂಡೆ ಹಾಗೂ ಅವರ ಅಳಿಯನಿಗೆ ಐಟಿ (IT) ಶಾಕ್ ನೀಡಿದೆ. ಚಿಕ್ಕಮಗಳೂರು ನಗರದ ಹೂವಿನ ಮಾರ್ಕೆಟ್ ರಸ್ತೆಯಲ್ಲಿರುವ ನಿವಾಸ ಹತ್ತಕ್ಕೂ ಹೆಚ್ಚು ವಾಹನಗಳಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇನ್ನೂ ಚಿಕ್ಕಮಗಳೂರು ತಾಲೂಕಿನ ಮರ್ಲೆ ಕಲ್ಲಿನ ಕ್ರಷರ್, ಗಾಯಿತ್ರಿ ಶಾಂತೇಗೌಡ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮೂವರ ಮನೆ ಹಾಗೂ ಬೇಲೂರಿನಲ್ಲಿರುವ ಅಳಿಯನ ನಿವಾಸದ ಮೇಲೂ ಐಟಿ ಅಧಿಕಾರಿಗಳ ದಾಳಿ ನಡೆಸಿದ್ದಾರೆ.

    ಮಾಜಿ ಎಂಎಲ್ಸಿ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿರುವ ಗಾಯತ್ರಿ ಶಾಂತೇಗೌಡ ಅವರು ಸದ್ಯ ತಿರುಪತಿ ತೀರ್ಥ ಯಾತ್ರೆಯಲ್ಲಿದ್ದಾರೆ. ಮೂರು ದಿನಗಳ ಹಿಂದೆ ಗಾಯತ್ರಿ ಶಾಂತೇಗೌಡ ದೇವರ ದರ್ಶನಕ್ಕೆ ಹೋಗಿದ್ದಾರೆ.

    ಇನ್ನೂ ಹಾಸನದಲ್ಲಿರುವ ಗಾಯತ್ರಿ ಶಾಂತೇಗೌಡ ಅವರ ಅಳಿಯ ಸಂತೋಷ್‍ಗೂ ಐಟಿ ಅಧಿಕಾರಿಗಳು ಬೆಳ್ಳಂ ಬೆಳಗ್ಗೆ ಶಾಕ್ ನೀಡಿದ್ದಾರೆ. ಬೆಳಿಗ್ಗೆ ಸುಮಾರು 5.30 ರ ಸಮಯದಲ್ಲಿ ಎರಡು ಕಾರುಗಳಿಗೆ ಅಭಿನವ್ ವೆಡ್ಸ್ ದೀಪಿಕಾ ಎಂದು ಸ್ಟಿಕರ್ ಅಂಟಿಸಿಕೊಂಡು ಮದುವೆ ಮನೆಗೆ ಬಂದವರಂತೆ ಬಂದ ಐವರು ಐಟಿ ಅಧಿಕಾರಿಗಳು ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಚನ್ನಕೇಶವೇಗೌಡ್ರು ಬೀದಿಯಲ್ಲಿರುವ ಸಂತೋಷ್ ಮನೆಗೆ ದಾಳಿ ಮಾಡಿದ್ದಾರೆ. ಇದನ್ನೂ ಓದಿ: ಟೋಲ್ ಬೂತ್ ಸಿಬ್ಬಂದಿಗೆ ಕಪಾಳಮೋಕ್ಷ – ಎಎಪಿ ನಾಯಕನ ವಿರುದ್ಧ FIR

    ಸಂತೋಷ್ ತಂದೆ ದಿ.ಮಂಜುನಾಥ್ ಜೆಡಿಎಸ್‍ನ ಪ್ರಭಾವಿ ಮುಖಂಡರಾಗಿದ್ದರು. ಸಂತೋಷ್ ತಾಯಿ ಹೇಮಾವತಿ ಮಂಜುನಾಥ್ ಹಾಸನ ಜಿ.ಪಂ. ಮಾಜಿ ಅಧ್ಯಕ್ಷೆ. ಚಿಕ್ಕಮಗಳೂರಿನಲ್ಲಿ ಗಾಯಿತ್ರಿ ಶಾಂತೇಗೌಡರ ಮನೆಯ ಮೇಲೆ ಐಟಿ ರೇಡ್ ಆಗಿದ್ದರೆ, ಬೇಲೂರಿನಲ್ಲಿ ಅವರ ಅಳಿಯ ಸಂತೋಷ್ ಮೇಲೆ ದಾಳಿ ಮಾಡಿರುವ ಅಧಿಕಾರಿಗಳು ದಾಖಲೆ ಪತ್ರ, ನಗದು, ಇತರೆ ವಸ್ತುಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ರಿಮ್ಸ್ ಆಸ್ಪತ್ರೆಯಲ್ಲಿ ಬೀದಿ ನಾಯಿಗಳ ದರ್ಬಾರ್ – ಸಿಬ್ಬಂದಿ ನಿರ್ಲಕ್ಷ್ಯಕ್ಕೆ ರೋಗಿಗಳಿಂದ ಆಕ್ರೋಶ

    ಮನೆಯಲ್ಲಿ ಸಂತೋಷ್, ಪತ್ನಿ ಕಾವ್ಯಾ ಹಾಗೂ ಸಂತೋಷ್ ತಾಯಿ ಹೇಮಾವತಿ ಮಂಜುನಾಥ್ ಇದ್ದಾರೆ. ಮನೆಯಿಂದ ಯಾರು ಹೊರಗೆ ಹೋಗದಂತೆ ಮನೆಗೆ ತಿಂಡಿ ತರಿಸಿಕೊಂಡು ಪರಿಶೀಲನೆ ಮುಂದುವರಿಸಿದ್ದಾರೆ. ಮನೆ ಕೆಲಸದವರನ್ನು ಕೂಡ ಐಟಿ ಅಧಿಕಾರಿಗಳು ಮನೆಗೆ ಒಳಗೆ ಬಿಟ್ಟಿಲ್ಲ. ಇದೀಗ ಇನ್ನಿಬ್ಬರು ಐಟಿ ಅಧಿಕಾರಿಗಳು ಸಂತೋಷ್ ಮನೆಗೆ ಆಗಮಿಸಿದ್ದು, ತೀವ್ರ ತಪಾಸಣೆ ನಡೆಸುತ್ತಿದ್ದಾರೆ. ಸಂತೋಷ್ ಬೇಲೂರಿನಲ್ಲಿರುವ ಕಲ್ಯಾಣ ಮಂಟಪ ಹಾಗೂ ಸುಮುಖ ಗ್ರ್ಯಾಂಡ್ ಹೋಟೆಲ್‍ನ ಮಾಲೀಕರಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]