ಬೆಂಗಳೂರು: ಇಂದು ನಗರದ ಮಣಿಪಾಲ್ ಸಂಸ್ಥೆಗಳ(Manipal Groups) ಮೇಲೆ ಏಕಕಾಲಕ್ಕೆ ಐಟಿ(IT) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ನಾಲ್ಕು ಇನ್ನೋವಾ ವಾಹನದಲ್ಲಿ ಆಗಮಿಸಿರುವ ಅಧಿಕಾರಿಗಳು ಹೈಗ್ರೌಂಡ್ಸ್ ಪೊಲೀಸ್ ಠಾಣೆ ಬಳಿ ಇರುವ ಮಣಿಪಾಲ್ ಆಸ್ಪತ್ರೆಗೆ ದಾಳಿ ನಡೆಸಿದ್ದಾರೆ. ಬೆಳಗಿನ ಜಾವ 6 ಗಂಟೆಗೆ ಐಟಿ(Income Tax) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ನಡೆಸಿದ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ:ಸದನದಲ್ಲೇ ಹೃದಯಾಘಾತದಿಂದ ನಿಧನರಾಗಿದ್ದ ಉಮೇಶ್ ಕತ್ತಿ ತಂದೆ
200 ಕ್ಕೂ ಹೆಚ್ಚು ಐಟಿ ಅಧಿಕಾರಿಗಳಿಂದ ಒಟ್ಟು 20 ಕಡೆಗಳಲ್ಲಿ ದಾಳಿ ನಡೆದಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಓಲ್ಡ್ ಏರ್ ಪೋರ್ಟ್ ರೋಡ್, ಕನ್ನಿಂಗ್ ಹ್ಯಾಮ್ ರೋಡ್, ಯಶವಂತಪುರ, ಏರ್ ಪೋರ್ಟ್ ರೋಡ್ ಸೇರಿದಂತೆ 20 ಕಡೆ ದಾಳಿ ನಡೆದಿದೆ. ಐಟಿ ಅಧಿಕಾರಿಗಳು ಬೆಳಗ್ಗೆಯಿಂದ ಕಾರ್ಯಾಚರಣೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಉಮೇಶ್ ಕತ್ತಿ ನಿಧನ: ಸಂಜೆ ಬೆಲ್ಲದ ಬಾಗೇವಾಡಿ ತೋಟದಲ್ಲಿ ಅಂತ್ಯಕ್ರಿಯೆ
Live Tv
[brid partner=56869869 player=32851 video=960834 autoplay=true]
ಚಿಕ್ಕಬಳ್ಳಾಪುರ: ಬಿಜೆಪಿಯವರ ಭ್ರಷ್ಟಾಚಾರ ನೋಡಿದ್ರೆ, ರಾಜ್ಯಕ್ಕೆ ಒಂದು ಪರಪ್ಪನ ಆಗ್ರಹಾರ ಸಾಲುವುದಿಲ್ಲ, 10-15 ಪರಪ್ಪನ ಅಗ್ರಹಾರ ಜೈಲುಗಳು ಬೇಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅವರು ಪಾಪ ಸಿಸೋಡಿಯಾನ ಇಡ್ಕೊಂಡು ಹೊರಟಿದ್ದೀರಿ. ಅದು ಅಬಕಾರಿ ಪಾಲಿಸಿಯಲ್ಲಿ ಒಂದು ಕೋಟಿ ವರ್ಗಾವಣೆ ಆಗಿದೆ ಅಂತ. ಹಾಗಾದ್ರೆ ಕರ್ನಾಟಕದಲ್ಲಿ ನೀವು ಏನು ಮಾಡ್ತಿದ್ದೀರಿ? ಅಂತಹ ಲಕ್ಷಾಂತರ ಕೇಸ್‌ಗಳನ್ನು ಉದಾಹರಣೆಯಾಗಿ ಕೊಡಬಹುದು ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಸ್ಥಾಪನೆಯಾಗಲಿದೆ 8 ವಿವಿ – ಕಾಯ್ದೆ ತಿದ್ದುಪಡಿಗೆ ಸಚಿವ ಸಂಪುಟ ಒಪ್ಪಿಗೆ
ಕರ್ನಾಟಕದಲ್ಲಿ ನಡಿತಿರೋ ಆಕ್ರಮಗಳು ಇ.ಡಿ, ಕೇಂದ್ರ ಸರ್ಕಾರ, ಅಥವಾ ಐಟಿ ಅವರಿಗೆ ಗೊತ್ತಿಲ್ವಾ? ಕೇಂದ್ರದ ಗೃಹ ಇಲಾಖೆಗೆ ಗೊತ್ತಿಲ್ವಾ? ಒಬ್ಬೊಬ್ಬ ಅಧಿಕಾರಿಯನ್ನ ನೇಮಕ ಮಾಡಲು ಮಂತ್ಲಿ ಲೆಕ್ಕಾಚಾರ ನಡೀತಿದೆ. ಬೌರಿಂಗ್ ಆಸ್ಪತ್ರೆಗೆ ಅಸಿಸ್ಟೆಂಟ್ ಪ್ರೋಫೆಸರ್ ನೇಮಕ ಮಾಡಬೇಕು ಅಂದ್ರೇನೆ 2 ವರ್ಷದ ಸ್ಯಾಲರಿ ಕೊಡಿ ಅಂತಾರೆ, ಅಪಾಯಿಂಟ್ ಮೆಂಟ್‌ಗೂ ದುಡ್ಡು ಕೊಡಿ ಅನ್ನೋ ದಾರಿದ್ರ್ಯ ಬಂದಿದೆ. ಇದೆಲ್ಲಾ ಕೇಂದ್ರ ಸರ್ಕಾರಕ್ಕೆ ಗೊತ್ತಿಲ್ವಾ? ಅನಾಗರೀಕವಾಗಿ ಸರ್ಕಾರ ನಡೆಯುತ್ತಿದೆ ಇಂತಹ ಲಕ್ಷಾಂತರ ಉದಾಹರಣೆ ಕೊಡಬಲ್ಲೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಸಾವಿನಲ್ಲೂ ಸಾರ್ಥಕತೆ ಮೆರೆದ ಕೂಲಿ ಕಾರ್ಮಿಕರು- ಮೃತಪಟ್ಟ 9 ಮಂದಿಯಲ್ಲಿ 6 ಜನರ ನೇತ್ರದಾನ
ಕರ್ನಾಟಕದಲ್ಲಿ ಬಿಜೆಪಿ ಅವರು ಮಾಡುತ್ತಿರೋ ಭ್ರಷ್ಟಾಚಾರ ನೋಡಿದ್ರೆ ರಾಜ್ಯದಲ್ಲಿ 1 ಪರಪ್ಪನ ಅಗ್ರಹಾರ ಜೈಲು ಸಾಲುವುದಿಲ್ಲ 10-15 ಪರಪ್ಪನ ಅಗ್ರಹಾರ ಜೈಲುಗಳು ಬೇಕಾಗುತ್ತದೆ ಎಂದು ಟೀಕಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: 2020ರ ಅಕ್ಟೋಬರ್ 5ರಂದು ನಡೆದಿದ್ದ ಸಿಬಿಐ ದಾಳಿ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಪ್ತ ವಿಜಯ್ ಮುಳಗುಂದ್‌ಗೆ ಸಿಬಿಐ ನೋಟಿಸ್ ನೀಡಿದೆ.
ಡಿಕೆಶಿಗೆ ಮತ್ತೆ ಸಂಕಷ್ಟ: ಆಪ್ತನಿಗೆ ಸಿಬಿಐ ನೋಟಿಸ್ ಕೊಟ್ಟ ಬೆನ್ನಲ್ಲೇ ಆದಾಯಕ್ಕಿಂತ ಹೆಚ್ಚಿನ ಆಸ್ತಿಗಳಿಸಿದ ಕೇಸ್‌ನಲ್ಲಿ ಸಿಬಿಐಯಿಂದ ಮತ್ತೆ ಡಿಕೆಶಿಗೆ ಬುಲಾವ್ ಸಾಧ್ಯತೆಯಿದೆ
2013 ರಿಂದ 2018ರ ವರೆಗೆ ಶಾಸಕರಾಗಿದ್ದ ವೇಳೆ ಅಕ್ರಮ ಆಸ್ತಿ ಸಂಗ್ರಹಿಸಿದ್ದ ಆರೋಪದ ಮೇಲೆ 2020ರ ಅಕ್ಟೋಬರ್ 5 ರಂದು ಡಿಕೆಶಿ ಹಾಗೂ ಆಪ್ತರ ಮನೆಗಳ ಮೇಲೆ ಸಿಬಿಐ ದಾಳಿಯಾಗಿತ್ತು. ಡಿಎ ಕೇಸ್ ನಡಿ ಎಫ್‌ಐಆರ್ ದಾಖಲಿಸಿ ಸಿಬಿಐ ರೇಡ್ ಮಾಡಿತ್ತು. 74.93 ಕೋಟಿ ಅಕ್ರಮ ಆಸ್ತಿ ಗಳಿಸಿದ್ದಾರೆ ಎಂದು ಆರೋಪಿಸಿತ್ತು.
2017ರ ಆಗಸ್ಟ್ 30 ರಂದು ಡಿಕೆಶಿ ಹಾಗೂ ಆಪ್ತರ ಮನೆಗಳ ಮೇಲೆ ಐಟಿ ದಾಳಿಯೂ ನಡೆದಿತ್ತು. ಐಟಿ ದಾಳಿ ಬಳಿಕ ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ಜಾರಿ ನಿರ್ದೇಶನಾಲಯ(ಇ.ಡಿ) ಸಹ ಎಂಟ್ರಿ ಕೊಟ್ಟಿತ್ತು. ಈ ಬೆನ್ನಲ್ಲೇ ಸಿಬಿಐ ಸಹ ದಾಳಿ ನಡೆಸಿ ಡಿಕೆಶಿ 73.93 ಕೋಟಿ ಅಕ್ರಮ ಆಸ್ತಿಗಳಿಸಿದ್ದಾರೆ ಎಂದು ಕೇಸ್ ದಾಖಲಿಸಿತ್ತು. ಇದೀಗ ಹಳೆ ಕೇಸ್‌ಗೆ ಮರುಜೀವ ಕೊಡಲು ಮುಂದಾಗಿರುವ ಸಿಬಿಐ ಡಿಕೆಶಿ ಆಪ್ತ ವಿಜಯ್ ಮುಳುಗುಂದಗೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಇದನ್ನೂ ಓದಿ: ಪ್ರಧಾನಿ ಮೋದಿ ಭದ್ರತಾ ವೈಫಲ್ಯಕ್ಕೆ ಪೊಲೀಸ್ ವರಿಷ್ಠಾಧಿಕಾರಿ ನೇರ ಕಾರಣ – ಸುಪ್ರೀಂಗೆ ಸಮಿತಿ ವರದಿ
ಈ ಕುರಿತು ಹೇಳಿಕೆ ನೀಡಿರುವ ವಿಜಯ್ ಮುಳುಗುಂದ ಅವರು, ಇದು ಯಾವ ಪ್ರಕರಣ ಅನ್ನೋದೇ ಗೊತ್ತಿಲ್ಲ. ಸಿಬಿಐನವರಿಗೆ ಎಲ್ಲಾ ರೀತಿಯ ಸಹಕಾರ ಕೊಡುತ್ತೇನೆ. ಈ ಹಿಂದೆ ಕರೆದಿದ್ದಾಗಲೂ ಉತ್ತರ ಕೊಟ್ಟು ಬಂದಿದ್ದೇನೆ. ಈಗ ಯಾಕೆ ಕರೆದಿದ್ದಾರೋ ಗೊತ್ತಿಲ್ಲ. ಯಾವ ಪ್ರಕರಣ ಏನೂ ಅನ್ನೋದೂ ಗೊತ್ತಿಲ್ಲ. ರಾಜಕೀಯ ಕಾರಣಕ್ಕಾಗಿ ಹೀಗೆ ಮಾಡುತ್ತಿದ್ದಾರೆ. ನಮ್ಮ ಅಧ್ಯಕ್ಷರಿಗೆ ತೊಂದರೆ ಕೊಡಲು ಹೀಗೆಲ್ಲಾ ಮಾಡುತ್ತಿದ್ದಾರೆ. ಧೈರ್ಯವಾಗಿ ಹೋಗುತ್ತೇನೆ, ಏನು ಕೇಳುತ್ತಾರೋ ಅದಕ್ಕೆ ಉತ್ತರ ಕೊಡುತ್ತೇನೆ. ಎಲ್ಲವನ್ನ ಎದುರಿಸುತ್ತೇವೆ ಎಂದು ಹೇಳಿದರು.
Live Tv
[brid partner=56869869 player=32851 video=960834 autoplay=true]
ನವದೆಹಲಿ: ಆದಾಯ ತೆರಿಗೆ ರಿಟರ್ನ್ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದ್ದು, ಸಲ್ಲಿಸದೇ ಇದ್ದರೆ ದಂಡ ಪಾವತಿಸಬೇಕಾಗುತ್ತದೆ.
ಈ ಹಿಂದಿನ 2 ವರ್ಷಗಳಲ್ಲಿ ವೆಬ್‌ಸೈಟ್ ಸಮಸ್ಯೆ, ಕೋವಿಡ್ ಅಲೆ ಇತ್ಯಾದಿ ಕಾರಣಗಳಿಂದ ರಿಟರ್ನ್ ಸಲ್ಲಿಕೆಯ ಅವಧಿಯನ್ನು ಹಲವು ಬಾರಿ ವಿಸ್ತರಣೆ ಮಾಡಲಾಗಿತ್ತು. ಕಳೆದ ವರ್ಷ ಡಿ.31 ಅಂತಿಮ ಡೆಡ್‌ಲೈನ್ ನೀಡಲಾಗಿತ್ತು. ಆದರೆ ಈ ವರ್ಷ ಗಡುವು ದಿನಾಂಕವನ್ನು ವಿಸ್ತರಣೆ ಮಾಡುವುದಿಲ್ಲ ಎಂದು ಕೇಂದ್ರ ಸರ್ಕಾರ ಈಗಾಗಲೇ ಪ್ರಕಟಿಸಿದೆ. ಇದನ್ನೂ ಓದಿ: ಪ್ರವೀಣ್ ಕುಟುಂಬಕ್ಕೆ ಸಹಾಯದ ನೆಪದಲ್ಲಿ ಹಣ ವಸೂಲಿ: ಚಕ್ರವರ್ತಿ ಸೂಲಿಬೆಲೆ ಗಂಭೀರ ಆರೋಪ
ಕಳೆದ ವರ್ಷ ಒಟ್ಟು 5.89 ಕೋಟಿ ಜನ ರಿಟರ್ನ್ ಫೈಲ್ ಮಾಡಿದ್ದರು. ಈ ವರ್ಷ ಗುರುವಾರ ಸಂಜೆಯವರೆಗೆ 4 ಕೋಟಿ ಜನ ರಿಟರ್ನ್ಸ್ ಸಲ್ಲಿಕೆ ಮಾಡಿದ್ದು, ನಂತರ ನಿತ್ಯ 30 ಲಕ್ಷ ಜನರು ಸಲ್ಲಿಕೆ ಮಾಡುತ್ತಿದ್ದಾರೆ. ಜು.31ರ ಬಳಿಕವೂ ಸಲ್ಲಿಕೆ ಮಾಡಲು ಅವಕಾಶ ಇದೆಯಾದರೂ ದಂಡ ಪಾವತಿಸಬೇಕಾಗುತ್ತದೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ನಡೆದ ವಂಚನೆಯ ಆಘಾತಕಾರಿ ಅಂಶವೊಂದು ಬೆಳಕಿಗೆ ಬಂದಿದ್ದು, ಡೋಲೋ-650 ಮಾತ್ರೆಯ ಪ್ರಚಾರಕ್ಕಾಗಿ 1 ಸಾವಿರ ಕೋಟಿ ರೂ. ಮೌಲ್ಯದ ಉಡುಗೊರೆಗಳನ್ನು ವೈದ್ಯರು ಮತ್ತು ವೈದ್ಯಕೀಯ ವೃತ್ತಿಪರರಿಗೆ ನೀಡಲಾಗಿದೆ ಎಂಬ ಆತಂಕಕಾರಿ ಅಂಶ ತನಿಖೆ ವೇಳೆ ಬಯಲಾಗಿದೆ.
ಕೋವಿಡ್ ಸಾಂಕ್ರಾಮಿಕದ ವೇಳೆ ದೇಶಾದ್ಯಂತ ಬಹುತೇಕ ಸೋಂಕಿತರಿಗೆ ವೈದ್ಯರು ಮತ್ತು ಮೆಡಿಕಲ್ ಶಾಪ್‌ಗಳಲ್ಲಿ ಬೆಂಗಳೂರು ಮೂಲಕದ ಮೈಕ್ರೋಲ್ಯಾಬ್ ಕಂಪೆನಿ ಉತ್ಪಾದಿಸುವ ಡೋಲೋ-650 ಮಾತ್ರೆಗಳನ್ನು ಪ್ರಮುಖವಾಗಿ ಶಿಫಾರಸು ಮಾಡಲಾಗಿತ್ತು. ಆದರೆ ಇದೇ ಕಂಪೆನಿ ತನ್ನ ಉತ್ಪನ್ನವನ್ನೇ ಹೆಚ್ಚಾಗಿ ಮಾರಾಟ ಮಾಡಲು ವೈದ್ಯರು ಹಾಗೂ ವೃದ್ಯಕೀಯ ಅಧಿಕಾರಿ ವರ್ಗದವರಿಗೆ 1 ಸಾವಿರ ಕೋಟಿ ಮೌಲ್ಯದ ಉಡುಗೊರೆಗಳನ್ನು ನೀಡಿತ್ತು ಎಂಬ ಸ್ಫೋಟಕ ವಿಚಾರ ತನಿಖೆ ವೇಳೆ ಕಂಡುಬಂದಿದೆ.
ಬೆಂಗಳೂರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ಮೈಕ್ರೋಲ್ಯಾಬ್ಸ್ಗೆ ಸೇರಿದ 9 ರಾಜ್ಯಗಳ 36 ಸ್ಥಳಗಳ ಮೇಲೆ ಜು.6ರಂದು ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳ ತಂಡ ಏಕಕಾಲದಲ್ಲಿ ದಾಳಿ ನಡೆಸಿತ್ತು. ಈ ವೇಳೆ 1.20 ಕೋಟಿ ರೂ. ಲೆಕ್ಕ ತೋರಿಸದ ನಗದು ಹಣ ಹಾಗೂ 1.40 ಕೋಟಿ ವಜ್ರಾಭರಣ ಪತ್ತೆಯಾಗಿತ್ತು. ಸಾಕಷ್ಟು ಮಹತ್ವದ ದಾಖಲೆಗಳನ್ನೂ ವಶಪಡಿಸಿಕೊಳ್ಳಲಾಗಿತ್ತು. ವಶಪಡಿಸಿಕೊಳ್ಳಲಾದ ದಾಖಲೆ ಪರಿಶೀಲನೆ ಮಾರಾಟದ ವೇಳೆ `ಮಾರಾಟ ಮತ್ತು ಪ್ರಚಾರ’ ಎಂಬ ಶೀರ್ಷಿಕೆ ಅಡಿಯಲ್ಲಿ ವೈದ್ಯರು ಮತ್ತು ವೃತ್ತಿಪರರಿಗೆ ಉಚಿತ ಉಡುಗೊರೆ, ಪ್ರಯಾಣವೆಚ್ಚ ಹಾಗೂ ಪ್ರಚಾರಕ್ಕಾಗಿ ಸಭೆ ಆಯೋಜಿಸುವುದಕ್ಕಾಗಿ 1 ಸಾವಿರ ಕೋಟಿ ರೂ. ವೆಚ್ಚ ಮಾಡಿದ್ದು ಬೆಳಿಕೆಗೆ ಬಂದಿದೆ ಎಂದು ಕೇಂದ್ರೀಯ ನೇರ ತೆರಿಗೆ ಮಂಡಳಿ ಮಾಹಿತಿ ನೀಡಿದೆ.
ವರ್ಷದಲ್ಲಿ 400 ಕೋಟಿ ವಹಿವಾಟು: ಕೋವಿಡ್ ಸಮಯದಲ್ಲಿ ಡೋಲೋ-650 ಮಾತ್ರೆ ಸುಮಾರು 350 ಕೋಟಿ ರೂ.ಗಳಷ್ಟು ವಹಿವಾಟು ನಡೆದಿತ್ತು. ಒಂದೇ ವರ್ಷದಲ್ಲಿ 400 ಕೋಟಿ ಆದಾಯ ಸಂಗ್ರಹಿಸಿರುವುದಾಗಿ ಇತ್ತೀಚೆಗೆ ವ್ಯವಸ್ಥಾಪಕ ದಿಲೀಪ್ ಸುರಾನಾ ಹೇಳಿಕೊಂಡಿದ್ದರು.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬಿಸಿನೆಸ್‌ಮೆನ್‍ಗಳಿಗೆ ಬಿಸಿ ಮುಟ್ಟಿಸಿದ್ದು, ರಾಜ್ಯಾದ್ಯಂತ ಏಕಕಾಲದಲ್ಲಿ 50ಕ್ಕೂ ಹೆಚ್ಚು ಕಡೆ ದಾಳಿ ಮಾಡಿ, ಶೋಧ ಕಾರ್ಯ ನಡೆಸಿದೆ.
ಆದಾಯ ಮರೆಮಾಚಿ ಐಟಿ ರಿಟರ್ನ್ಸ್ ಸಲ್ಲಿಕೆ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಅನೇಕ ಬಿಸಿನೆಸ್‍ಮೆನ್‍ಗಳ ಮನೆ ಹಾಗೂ ಕಚೇರಿಗಳ ಮೇಲೆ 600ಕ್ಕೂ ಹೆಚ್ಚು ಅಧಿಕಾರಿಗಳ ತಂಡವು ದಾಳಿ ನಡೆಸಿದೆ. ಐಟಿ ರಿಟರ್ನ್ಸ್ ಸಲ್ಲಿಕೆಗಿಂತ ಹೆಚ್ಚಿನ ಆದಾಯ ಹೊಂದಿರುವವರನ್ನು ಪತ್ತೆ ಮಾಡಿ ಈ ದಾಳಿ ನಡೆಸಿದ್ದಾರೆ. ಮನೆಗಳ ಮೇಲೆ ಸರ್ಚ್ ವಾರೆಂಟ್ ತಂದು ಐಟಿ ಅಧಿಕಾರಿಗಳು ದಾಖಲೆ ಪರಿಶೀಲಿಸುತ್ತಿದ್ದಾರೆ. ಇದನ್ನೂ ಓದಿ: ಪಠ್ಯದಲ್ಲಿರುವ ತಮ್ಮ ಕವಿತೆ ವಾಪಸ್ ಪಡೆದ ಮತ್ತೊಬ್ಬ ಸಾಹಿತಿ
ಗೋವಾ – ಕರ್ನಾಟಕ ಅಧಿಕಾರಿಗಳ ತಂಡದಿಂದ ಈ ದಾಳಿ ನಡೆಸಿದೆ. ಈಗಾಗಲೇ ಲೆಕ್ಕಪತ್ರಗಳ ಶೋಧನೆ ನಡೆಸುತ್ತಿರುವ ಅಧಿಕಾರಿಗಳು ಶೋಧ ಕಾರ್ಯವನ್ನು ಮುಂದುವರಿಸಿದ್ದಾರೆ. ಸದಾಶಿವನಗರದ ಎಂಬೆಸ್ಸಿ ಆರ್ಕೆಡ್ ಅಪಾರ್ಟ್ ಮೆಂಟ್ ಮೇಲೆ ದಾಳಿ ನಡೆಸಿದ ನಾಲ್ವರು ಅಧಿಕಾರಿಗಳು ಮನೆಯಲ್ಲಿ ತಪಾಸಣೆ ನಡೆಸುತ್ತಿದ್ದಾರೆ. ಒಟ್ಟಾರೆಯಾಗಿ ಬೆಂಗಳೂರಿನಲ್ಲಿಯೇ 37 ಕಡೆ ಐಟಿ ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ನಮ್ಮ ಕುಟುಂಬದಿಂದ ಮೂರನೇ ವ್ಯಕ್ತಿ ಚುನಾವಣೆಗೆ ಸ್ಪರ್ಧಿಸಿದ್ರೆ ರಾಜೀನಾಮೆ ಕೊಟ್ತೇನೆ: ನಿರಾಣಿ
ಚಾಮರಾಜನಗರ: ಬಿಜೆಪಿ ಬಳಿ ಯಾವುದೇ ಅಸ್ತ್ರ ಇಲ್ಲದೆ ಮತ್ತೆ ಹಿಜಬ್ ಸಂಘರ್ಷ ಹುಟ್ಟು ಹಾಕಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಆರೋಪಿಸಿದರು.
ಚಾಮರಾಜನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಆಡಳಿತವಿದೆ. ಜನರಲ್ಲಿ ಸಾಮರಸ್ಯ ಮೂಡಿಸುವುದು ಸರ್ಕಾರದ ಕರ್ತವ್ಯವಾಗಿದೆ. ಕಾನೂನು ಸುವ್ಯವಸ್ಥೆ ಸರಿಯಾಗಿ ಕಾಪಾಡಬೇಕು. ಧರ್ಮ-ಧರ್ಮಗಳ ನಡುವೆ ಕಂದಕ ಮೂಡಿಸಬಾರದು. ಎಂಇಎಸ್ ಪುಂಡಾಟ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪುಡಾಂಟಿಕೆ ಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಕನ್ನಡಿಗರ ರಕ್ಷಣೆ ಸರ್ಕಾರದ ಜವಾಬ್ದಾರಿ. ಈ ಸರ್ಕಾರವೇನು ಮಲಗಿದಿಯಾ? ಗೃಹ ಸಚಿವರು ಏನ್ ಮಾಡ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ರೋಮಿಯೋನ ಭಾವನೆಗಳ ಕಥನ – ಡೈಲಾಗ್‍ನಲ್ಲಿ ಕಾಮಿಡಿ ಹೂರಣ
ಕರ್ನಾಟಕದಲ್ಲಿ ಕನ್ನಡಿಗರ ರಕ್ಷಣೆ ಇಲ್ಲ ಅಂದ್ರೆ ಹೇಗೆ? ಯಾರೂ ಗಲಾಟೆ ಮಾಡ್ತಾರೋ ಅಂತಹವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. ಐಟಿ, ಇಡಿ, ಸಿಬಿಐಗಳು ಬಿಜೆಪಿಯ ಅಂಗಸಂಸ್ಥೆಗಳಾಗಿದ್ದು, ಇವುಗಳನ್ನು ಬಳಸಿಕೊಂಡು ವಿರೋಧ ಪಕ್ಷಗಳನ್ನು ಸದೆ ಬಡಿಯುವ ಕೆಲಸ ಆಗುತ್ತಿದೆ ಎಂದು ಕಿಡಿಕಾರಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇದನ್ನೆಲ್ಲ ಕಾನೂನಾತ್ಮಕವಾಗಿ ಎದುರಿಸುತ್ತಿದ್ದಾರೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಿಎಂ ಹುದ್ದೆಗೆ 2,500 ಕೋಟಿ ರೂ. ಕೊಡಬೇಕು. ಈಗಿನ ಮಂತ್ರಿಮಂಡಲದಲ್ಲಿ ಮಂತ್ರಿಯೊಬ್ಬರು 100 ಕೋಟಿ ರೂ. ಕೊಟ್ಟಿದ್ದಾರೆ. ಅಂದ್ರು ಮೊದಲು ಅವರಿಗೆ ನೋಟಿಸ್ ಕೊಡಬೇಕಿತ್ತು, ತನಿಖೆ ಮಾಡಬೇಕಿತ್ತು. ಈ ಬಗ್ಗೆ ಮಾತ್ರ ಯಾರೂ ಚಕಾರ ತೆಗೆಯುವುದಿಲ್ಲ. ಪ್ರಿಯಾಂಕಾ ಖರ್ಗೆ ಪಿಎಸ್‍ಐ ಪರೀಕ್ಷೆ ಅಕ್ರಮ ಬಯಲಿಗೆಳೆದರು ಅಂತ ಅವರಿಗೆ ನೋಟೀಸ್ ಕೊಡ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಸ್ಕಿಡ್ ಆಗಿ ಕಮರಿಗೆ ಬಿದ್ದ ಸೈನಿಕರ ವಾಹನ: ಮೃತಪಟ್ಟ 7 ಯೋಧರು ಉತ್ತರ ಪ್ರದೇಶದಲ್ಲಿ ಅಖಿಲೇಶ್ ಯಾದವ್‍ಗೆ ಸಪೋರ್ಟ್ ಮಾಡಿದವರ ಮನೆ ಮೇಲೆ ದಾಳಿ ಮಾಡ್ತಾರೆ. ಚುನಾವಣೆಯಲ್ಲಿ ಅವರನ್ನು ಬಗ್ಗು ಬಡಿಯುವ ಕೆಲಸವಾಯ್ತು. ಬಿಜೆಪಿ, ವಿರೋಧ ಪಕ್ಷದವರನ್ನ ಗುರಿಯಾಗಿಸಿಕೊಂಡು ಈ ರೀತಿ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಹೀಗೆಲ್ಲ ಮಾಡಿರಲಿಲ್ಲ ಇದೊಂದು ದೊಡ್ಡ ದುರಂತ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮಂಡ್ಯ: ಸಕ್ಕರೆ ನಾಡಿನಲ್ಲಿ ಬೆಳಗಿನ ಜಾವ 4 ಗಂಟೆಗೆ ಸ್ಟಾರ್ ಗ್ರೂಪ್ಸ್ ಮಾಲೀಕ ಮತ್ತು ಅವರ ಸಹೋದರರ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಉದ್ಯಮಿ ಅಮಿರುಲ್ ಮುರ್ತುಜಾ ಸೇರಿದಂತೆ ಅಮ್ಜಾ, ಶಹಬಾಜ್, ಶಿರೋಜ್ ನಿವಾಸಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಮಿರುಲ್ ಅವರ ಸಹೋದರರು ನಾಗಮಂಗಲದ ಪ್ರಖ್ಯಾತ ಉದ್ಯಮಿಗಳಾಗಿದ್ದಾರೆ. ಸ್ಟಾರ್ ಗ್ರೂಪ್ಸ್ ಹೆಸರಿನಲ್ಲಿ ಪೌಲ್ಟ್ರಿ ಫಾರ್‍ಂ, ಹೋಟೆಲ್, ಪೆಟ್ರೋಲ್ ಉದ್ಯಮ ಸೇರಿದಂತೆ ಹಲವಾರು ಉದ್ಯಮ ನಡೆಸುತ್ತಿದ್ದಾರೆ. ಇದನ್ನೂ ಓದಿ:ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗೆಲುವು ಸಾಧಿಸಿದ ತೃತೀಯಲಿಂಗಿ
ನಸುಕಿನ 4 ಗಂಟೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ 10ಕ್ಕೂ ಹೆಚ್ಚು ಕಾರುಗಳಲ್ಲಿ ಬಂದ ಅಧಿಕಾರಿಗಳಿಂದ ದಾಳಿ ನಡೆಸಲಾಗಿದೆ. ಅಧಿಕಾರಿಗಳು 10ಕ್ಕೂ ಹೆಚ್ಚು ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿ, ಆಸ್ತಿ-ಪಾಸ್ತಿ, ಕಡತ, ಹಣ, ಚಿನ್ನಾಭರಣಗಳನ್ನು ಪರಿಶೀಲನೆ ಮಾಡಿದ್ದಾರೆ. ಇದನ್ನೂ ಓದಿ:ಮೆಲಾನಿಯಾ ಟ್ರಂಪ್, ಕೇಜ್ರಿವಾಲ್ ಶಾಲೆಯನ್ನು ಮಾತ್ರ ನೋಡಬೇಕೆಂದಿದ್ದರು: ದೆಹಲಿ ಸಿಎಂ
ಭೋಪಾಲ್: ಮಧ್ಯಪ್ರದೇಶದ ಉದ್ಯಮಿಯೊಬ್ಬರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ದಾಳಿ ನಡೆಸಿದ್ದು, ಬರೋಬ್ಬರಿ 8 ಕೋಟಿಯನ್ನು ವಶಪಡಿಸಿಕೊಂಡಿದ್ದಾರೆ. ಕಂತೆ ಕಂತೆ ಹಣವನ್ನು ಬ್ಯಾಗ್‌ನಲ್ಲಿ ತುಂಬಿ ಮನೆಯ ಸುರಂಗದ ವಾಟರ್ ಟ್ಯಾಂಕ್‌ನಲ್ಲಿ ಬಚ್ಚಿಡಲಾಗಿತ್ತು.
ದಾಮೋಹ್ ಜಿಲ್ಲೆಯ ಉದ್ಯಮಿ ಶಂಕರ್ ರೈ ಮತ್ತು ಆತನ ಕುಟುಂಬದವರ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಉದ್ಯಮಿ ಮನೆಯಿಂದ ವಶಕ್ಕೆ ಪಡೆಯಲಾದ ಅಘೋಷಿತ 8 ಕೋಟಿಯಲ್ಲಿ 1 ಕೋಟಿ ನಗದು ಆಗಿತ್ತು. ಅದನ್ನು ಬ್ಯಾಗ್‌ನಲ್ಲಿ ತುಂಬಿ ಸುರಂಗದ ವಾಟರ್ ಟ್ಯಾಂಕ್‌ನಲ್ಲಿ ಬಚ್ಚಿಡಲಾಗಿತ್ತು. ಜೊತೆಗೆ 3 ಕೆ.ಜಿ. ಚಿನ್ನಾಭರಣವನ್ನೂ ವಶಪಡಿಸಿಕೊಳ್ಳಲಾಗಿದೆ. ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗುತ್ತಿದೆ.
ಉದ್ಯಮಿಯ ಮನೆ ಮೇಲೆ ಗುರುವಾರ ಸಂಜೆ 5 ಗಂಟೆ ಸಮಯದಲ್ಲಿ ದಾಳಿ ನಡೆಸಲಾಗಿತ್ತು. ಸತತ 39 ಗಂಟೆಗಳ ಕಾಲ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದರು. ಮಧ್ಯಪ್ರದೇಶ ಅಥವಾ ಇನ್ಯಾವುದೇ ಸ್ಥಳದಲ್ಲಿರುವ ರಾಯ್ ಕುಟುಂಬದ ಆಸ್ತಿ ಬಗ್ಗೆ ಹೆಚ್ಚಿನ ಮಾಹಿತಿ ನೀಡುವವರಿಗೆ 10,000 ಬಹುಮಾನವನ್ನು ಇಲಾಖೆ ಘೋಷಿಸಿದೆ. ಇದನ್ನೂ ಓದಿ: ಹಿಮದಲ್ಲಿ ದೃಢವಾಗಿ ನಿಂತ ಯೋಧನಿಗೆ ಒಂದು ಸೆಲ್ಯೂಟ್ – ವೀಡಿಯೋ ವೈರಲ್
ಉದ್ಯಮಿ ಶಂಕರ್, ಕಾಂಗ್ರೆಸ್ ಬೆಂಬಲದೊಂದಿಗೆ ದಾಮೋಹ್ ನಗರ ಪಾಲಿಕೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಸಹೋದರ ಕಮಲ್ ರೈ ಈ ಹಿಂದೆ ಬಿಜೆಪಿಯ ಬೆಂಬಲದೊಂದಿಗೆ ಪಾಲಿಕೆ ಉಪಾಧ್ಯಕ್ಷರಾಗಿದ್ದರು.
ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಸೇರಿದ್ದು ಎನ್ನಲಾದ ಸುಮಾರು 1,000 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಆದಾಯ ತೆರಿಗೆ (ಐಟಿ) ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಜಪ್ತಿ ಮಾಡಿದ್ದಾರೆ.
ಕಳೆದ ತಿಂಗಳು ಅಜಿತ್ ಪವಾರ್ ಅವರ ಸಹೋದರಿಯ ನಿವಾಸಗಳು ಹಾಗೂ ಸಂಸ್ಥೆಗಳಲ್ಲಿ ತೆರಿಗೆಗೆ ಸಂಬಂಧಿಸಿದ ದಾಖಲೆಗಳ ಪರಿಶೀಲನೆ ಕೈಗೊಳ್ಳಲಾಗಿತ್ತು.
ಐಟಿ ದಾಳಿ ಕುರಿತು ಪ್ರತಿಕ್ರಿಯಿಸಿದ್ದ ಪವಾರ್ ಅವರು, “ಪ್ರತಿ ವರ್ಷ ತೆರಿಗೆಯನ್ನು ಪಾವತಿಸುತ್ತಿದ್ದೇವೆ. ನಾನು ಹಣಕಾಸು ಸಚಿವ. ಹೀಗಾಗಿ ತೆರಿಗೆ ಪಾವತಿ ಸಂಬಂಧ ಬದ್ಧತೆ ಇದೆ. ತಮಗೆ ಸಂಬಂಧಿಸಿದ ಎಲ್ಲಾ ಘಟಕಗಳು ನಿಯಮಿತವಾಗಿ ತೆರಿಗೆ ಪಾವತಿಸಿವೆ” ಎಂದು ತಿಳಿಸಿದ್ದರು. ಇದನ್ನೂ ಓದಿ: ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ – ಬಿಜೆಪಿ ನಾಯಕನ ವಿರುದ್ಧ FIR
ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಗಂಭೀರ ಆರೋಪ ಮಾಡಿರುವ ಪವಾರ್,”ನನ್ನ ಸಹೋದರಿ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿರುವುದಕ್ಕೆ ಬೇಸರವಾಗಿದೆ. ನನ್ನ ಸಂಬಂಧಿ ಎಂಬ ಕಾರಣಕ್ಕೆ ನಡೆದಿರುವ ದಾಳಿ ಬಗ್ಗೆ ಜನರೇ ಆಲೋಚಿಸಬೇಕಿದೆ. ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.