Tag: it

  • ಆಸ್ಪತ್ರೆಗೆ ಅಡ್ಮಿಟ್ ಮಾಡೋದು, ಬಿಡೋದು ನಮ್ಮ ವೈಯಕ್ತಿಕ ವಿಚಾರ- ಡಿ.ಕೆ.ಸುರೇಶ್ ಗರಂ

    ಆಸ್ಪತ್ರೆಗೆ ಅಡ್ಮಿಟ್ ಮಾಡೋದು, ಬಿಡೋದು ನಮ್ಮ ವೈಯಕ್ತಿಕ ವಿಚಾರ- ಡಿ.ಕೆ.ಸುರೇಶ್ ಗರಂ

    ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಆಗುತ್ತಿದೆ. ಆಸ್ಪತ್ರೆಗೆ ಅಡ್ಮಿಟ್ ಮಾಡುವುದು, ಬಿಡುವುದು ನಮ್ಮ ವೈಯಕ್ತಿಕ ವಿಚಾರ ಎಂದು ಸಂಸದ ಡಿ.ಕೆ.ಸುರೇಶ್ ಮಾಧ್ಯಮಗಳ ವಿರುದ್ಧ ಗರಂ ಆಗಿ ಪ್ರತಿಕ್ರಿಯೆ ನೀಡಿದ್ದಾರೆ.

    ಕನಕಪುರದಿಂದ ಸದಾಶಿವನಗರ ನಿವಾಸಕ್ಕೆ ಡಿ.ಕೆ.ಶಿವಕುಮಾರ್ ಆಗಮಿಸಿದ್ದ ಬೆನ್ನಲ್ಲೇ ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ.ಸುರೇಶ್, ಇಬ್ಬರು ವೈದ್ಯರು ಮನೆಯಲ್ಲೇ ಇದ್ದು ಡಿ.ಕೆ.ಶಿವಕುಮಾರ್ ಅವರ ಆರೋಗ್ಯ ನೋಡಿಕೊಳ್ಳುತ್ತಿದ್ದಾರೆ. ವಿಶ್ರಾಂತಿ ತೆಗೆದುಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಒಂದು ವೇಳೆ ಆರೋಗ್ಯದಲ್ಲಿ ಚೇತರಿಕೆ ಕಾಣದಿದ್ದರೆ ಆಸ್ಪತ್ರೆಗೆ ದಾಖಲಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

    ಡಿ.ಕೆ.ಶಿವಕುಮಾರ್ ಹಾಗೂ ನನ್ನ ವಿರುದ್ಧ ಯಾವುದೇ ನೋಟಿಸ್ ಬಂದಿಲ್ಲ, ಯಾವುದೇ ಅಧಿಕಾರಿಗಳು ಮಾಹಿತಿ ನೀಡಿಲ್ಲ. ಆದರೆ ನೋಟಿಸ್ ಬರುತ್ತದೆ ಅಂತಾ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರ ಆಗುತ್ತಿದೆ ಎಂದು ಹೇಳಿದರು.

    ಬೆಂಗಳೂರು ನಿವಾಸಕ್ಕೆ ಡಿ.ಕೆ.ಶಿವಕುಮಾರ್ ಆಗಮಿಸುತ್ತಿದ್ದಂತೆ ಅವರ ಮನೆಗೆ ಕಿಮ್ಸ್ ಜನರಲ್ ಸರ್ಜನ್ ಡಾ.ಬಿ.ಸಿ.ಭಗವಾನ್ ಅವರು ದೌಡಾಯಿಸದರು. ಕಿಟ್ ಸಹಿತ ಬಂದಿದ್ದ ವೈದ್ಯರು, ಬಳಿಕ ಸಚಿವ ಆರೋಗ್ಯ ತಪಾಸಣೆ ಮಾಡಿದ್ದಾರೆ.

    ಡಿಕೆಶಿಗೆ ಫುಡ್ ಪಾಯ್ಸನ್:
    ಕಲಬುರಗಿಯಲ್ಲಿ ಪ್ರವಾಸ ಮುಗಿಸಿದ ಬಳಿಕ ಡಿ.ಕೆ.ಶಿವಕುಮಾರ್ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಡಿದ್ದು, ಬೆಂಗಳೂರಿಗೆ ಬಂದ ಬಳಿಕ ತೀವ್ರವಾಗಿ ವಾಂತಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಕನಕಪುರ ಕಾರ್ಯಕ್ರಮ ರದ್ದುಗೊಳಿಸಿ, ಕಗ್ಗಲೀಪುರ ಪ್ರಾಥಾಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಹೈದರಾಬಾದ್‍ನಿಂದ ಬೆಂಗಳೂರಿಗೆ ಆಗಮಿಸಿದ ವಿಮಾನದಲ್ಲಿ ಸ್ಯಾಂಡ್ ವಿಚ್ ತಿಂದ ಪರಿಣಾಮ ಸಚಿವರ ಆರೋಗ್ಯದಲ್ಲಿ ಏರುಪೇರಾಗಿದೆ. ನಿತ್ರಾಣಗೊಂಡಿರುವ ಶಿವಕುಮಾರ್ ಅವರಿಗೆ ವೈದ್ಯರು ಗ್ಲುಕೋಸ್ ಹಾಕಿ, ಚಿಕಿತ್ಸೆ ನೀಡುತ್ತಿದ್ದರು. ಆದರೆ ಈಗ ಅವರನ್ನು ಬೆಂಗಳೂರಿಗೆ ಕರೆತರಲಾಗಿದೆ.

    ಬಂಧನ ಭೀತಿ ತಪ್ಪಿಸಿಕೊಳ್ಳಲು ಪ್ಲಾನ್:
    ಜಾರಿ ನಿರ್ದೇಶನಾಲಯ ಬಂಧನ ಭೀತಿಯಿಂದ ತಪ್ಪಿಸಿಕೊಳ್ಳಲು ಸಚಿವ ಡಿ.ಕೆ.ಶಿವಕುಮಾರ್ ಮಾಸ್ಟರ್ ಪ್ಲಾನ್ ನಡೆಸಿದ್ದಾರೆ. ಒಂದು ವೇಳೆ ಇಡಿ ವಿಚಾರಣೆಗೆ ಕರೆದ್ರೆ, ಯಾವ ರೀತಿ ಉತ್ತರ ನೀಡಬೇಕು ಅನ್ನೋದರ ಬಗ್ಗೆ ಹಿರಿಯ ವಕೀಲರಿಂದ ಸಲಹೆ ಪಡೆದುಕೊಳ್ಳುತ್ತಿದ್ದಾರೆ. ಒಂದು ವೇಳೆ ಇಡಿ ಬಂಧಿಸಲು ಮುಂದಾದ್ರೆ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸುವ ಸಾಧ್ಯತೆಗಳಿವೆ. ಇಡಿಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಹಿರಿಯ ವಕೀಲರಿಗೆ ಯಾವಾಗ ಏನು ಬೇಕಾದರೂ ಆಗುವ ಸಾಧ್ಯತೆಗಳಿವೆ. ಕಾನೂನಾತ್ಮಕವಾಗಿ ಎಲ್ಲದಕ್ಕೂ ಸಿದ್ಧರಾಗಿರಿ ಎಂದು ಆಪ್ತ ವಕೀಲರಿಗೆ ಡಿ.ಕೆ.ಶಿವಕುಮಾರ್ ಸಂದೇಶ ರವಾನಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನು ಓದಿ: ಇಡಿಯ ಮುಂದಿನ ಕಾನೂನು ಪ್ರಕ್ರಿಯೆ ಏನು? ಡಿಕೆಶಿ ಆಗ್ತಾರಾ ಅರೆಸ್ಟ್? ಮುಂದಿರುವ ದಾರಿ ಏನು?

    ಬುಧವಾರ ಡಿ.ಕೆ.ಶಿವಕುಮಾರ್ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆಗಳಿವೆ. ಈ ಸಂಬಂಧ ಘಟಾನುಘಟಿ ವಕೀಲರೊಂದಿಗೆ ಸಚಿವರು ನಿರಂತರ ಸಂಪರ್ಕದಲ್ಲಿದ್ದಾರೆ ಎನ್ನಲಾಗುತ್ತಿದೆ. ಇಂದು ಮಧ್ಯಾಹ್ನ ಕನಕಪುರದಲ್ಲಿ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸಚಿವರು ಭಾಗಿಯಾಗಬೇಕಿತ್ತು. ಆದ್ರೆ ಸಚಿವರು ಕಾರ್ಯಕ್ರಮಕ್ಕೆ ಡಿ.ಕೆ.ಸಹೋದರರು ಗೈರಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಇಡಿ ಬಂಧನದಿಂದ ತಪ್ಪಿಸಿಕೊಳ್ಳಲು ಡಿಕೆಶಿಯಿಂದ ಮಾಸ್ಟರ್ ಪ್ಲಾನ್..?

    ಇಡಿ ಬಂಧನದಿಂದ ತಪ್ಪಿಸಿಕೊಳ್ಳಲು ಡಿಕೆಶಿಯಿಂದ ಮಾಸ್ಟರ್ ಪ್ಲಾನ್..?

    ಬೆಂಗಳೂರು: ಪ್ರಭಾವಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಬಂಧನ ಭೀತಿ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಇಡಿಯಿಂದ ತಪ್ಪಿಸಿಕೊಳ್ಳಲು ಡಿಕೆಶಿ ಮಾಡಿದ್ದಾರೆ ಮಾಸ್ಟರ್ ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ.

    ಈ ಕುರಿತು ಸಚಿವರು ಈಗಾಗಲೇ ವಕೀಲರು, ನುರಿತ ಆಡಿಟರ್ ಗಳ  ಜೊತೆ ನಿರಂತರ ಸಂಪರ್ಕ ಹೊಂದಿದ್ದಾರೆ. ಇ.ಡಿ ವಿಚಾರಣೆಗೆ ಕರೆದರೆ ಹೇಗೆ ಉತ್ತರಿಸಬೇಕು ಅನ್ನೋದರ ಬಗ್ಗೆ ಕೂಡ ಮಾಹಿತಿ ಪಡೆದಿದ್ದಾರೆ. ಅಲ್ಲದೇ ಯಾವಾಗ ಏನ್ ಬೇಕಾದ್ರು ಆಗಬಹುದು. ಇದಕ್ಕೆ ಸಜ್ಜಾಗಿರಿ ಅಂತ ಹೇಳಿದ್ದಾರೆ ಎಂಬುದಾಗಿ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ. ಇದನ್ನು ಓದಿ: ಬಿಜೆಪಿ ಅವರೆಲ್ಲ ನನ್ನ ಗೆಳೆಯರು – ಡಿಕೆಶಿ

    ಇ.ಡಿ. ಬಂಧಿಸದೇ ಹೋದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಕೆ ಸಾಧ್ಯತೆಗಳಿವೆ. ಒಟ್ಟಿನಲ್ಲಿ ಆ್ಯಂಟಸಿಪೇಟರಿ ಬೇಲ್‍ಗಾಗಿ ಘಟಾನುಘಟಿ ವಕೀಲರ ಜೊತೆ ನಿಕಟ ಸಂಪರ್ಕ ಹೊಂದಿರುವ ಸಚಿವರು, ಐಟಿ ಕೇಸ್‍ನಲ್ಲಿ ಬಚಾವ್ ಮಾಡಿದ್ದ ಹಿರಿಯ ವಕೀಲರ ಜೊತೆಗೂ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

    ಸೋಮವಾರ ಬೆಳಗ್ಗೆ 11 ಗಂಟೆಯೊಳಗೆ ಡಿ.ಕೆ. ಶಿವಕುಮಾರ್ ಬಂಧನ ಸಾಧ್ಯತೆಗಳು ಹೆಚ್ಚಿವೆ. ಒಂದು ವೇಳೆ ಡಿಕೆಶಿ ಬಂಧನವಾದ್ರೆ ಇಡಿ ಅಧಿಕಾರಿಗಳು ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ. ಬಂಧಿಸದಿದ್ದರೆ ಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸುವ ಸಾಧ್ಯತೆಗಳಿವೆ. ಇದಕ್ಕಾಗಿ ಐಟಿ ಕೇಸ್‍ನಲ್ಲಿ ಬಚಾವ್ ಮಾಡಿದ್ದ ಹಿರಿಯ ವಕೀಲರ ಸಂಪರ್ಕದಲ್ಲಿದ್ದಾರೆ. ಇದನ್ನು ಓದಿ: ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ದ್ವೇಷದ ರಾಜಕಾರಣ, ಭಯದಿಂದ ತುರ್ತು ಸುದ್ದಿಗೋಷ್ಠಿ ಕರೆದಿಲ್ಲ: ಡಿಕೆ ಸುರೇಶ್

    ಇತ್ತ ಅಣ್ಣ ಶಿವಕುಮಾರ್ ಜೊತೆ ರಾತ್ರಿಯೆಲ್ಲಾ ಇದ್ದ ಸಹೋದರ ಸುರೇಶ್ ತಡರಾತ್ರಿ 11.30ರ ವೇಳೆಗೆ ಡಿಕೆಶಿ ಮನೆಗೆ ಭೇಟಿ ನೀಡಿದ್ದರು. ಅಣ್ಣನ ಜೊತೆ ನಾನು ಮಾತನಾಡಲು ಬಂದಿದ್ದೇನೆ. ಶುಕ್ರವಾರ ಬೆಳಗ್ಗೆ ದೆಹಲಿಗೆ ಹೋಗಬೇಕಿತ್ತು. ಆದ್ರೆ ಮಾಧ್ಯಮಗಳಲ್ಲಿ ವದಂತಿ ಬಂದ ಹಿನ್ನಲೆ ಇಲ್ಲೇ ಉಳಿದುಕೊಂಡಿದ್ದಾರೆ. ಬಿಜೆಪಿಯವರು ವಾಮಮಾರ್ಗದ ಮೂಲಕ ಅಧಿಕಾರ ಹಿಡಿಯಲು ಮುಂದಾಗಿದ್ದಾರೆ. ಇ.ಡಿ ಎಫ್‍ಐಆರ್ ಮಾಡ್ಲಿ. ನಾನಾಗ್ಲಿ, ಡಿಕೆ ಶಿವಕುಮಾರ್ ಆಗ್ಲಿ ಭಯ ಪಡುವ ಪ್ರಮೇಯವೇ ಇಲ್ಲ. ಸರ್ಕಾರ ಹಾಗೂ ನಾವು ಇದನ್ನು ಫೇಸ್ ಮಾಡ್ತೀವಿ ಅಂತ ಸಂಸದ ಡಿಕೆ ಸುರೇಶ್ ಅವರು ಮಾಧ್ಯಮಗಳ ಜೊತೆ ಮಾತನಾಡುತ್ತಾ ಖಡಕ್ಕಾಗಿ ನುಡಿದಿದ್ದರು.

    ಏನಿದು ಪ್ರಕರಣ..?
    * 2017ರ ಆಗಸ್ಟ್ 02ರಂದು ಡಿಕೆಶಿ ಮನೆ, ಕಚೇರಿಗಳ ಮೇಲೆ ಐಟಿ ದಾಳಿ
    * ಸಚಿವ ಡಿಕೆ ಶಿವಕುಮಾರ್ ಉಳಿದುಕೊಂಡಿದ್ದ ಈಗಲ್‍ ಟನ್ ರೆಸಾರ್ಟ್ ಮೇಲೆ ರೇಡ್
    * ಡಿ.ಕೆ.ಶಿವಕುಮಾರ್‍ಗೆ ಸೇರಿದ ದೆಹಲಿಯ ಸಫ್ದರ್‍ಜಂಗ್ ನಿವಾಸ ಮೇಲೆಯೂ ದಾಳಿ
    * ದೆಹಲಿಯ ಡಿಕೆಶಿ ಮತ್ತು ಆಪ್ತನ ನಿವಾಸಗಳಲ್ಲಿ 8.59 ಕೋಟಿ ರೂ. ಹಣ ಪತ್ತೆ
    * ಐಟಿ ದಾಳಿ ವೇಳೆ ಸಿಕ್ಕ ಹಣದ ಮೂಲದ ಬಗ್ಗೆ ಸುಳ್ಳು ಮಾಹಿತಿ ನೀಡಿದ ಆರೋಪ
    * ಹವಾಲ ಮೂಲಕ ಹೈಕಮಾಂಡ್‍ಗೆ ಹಣ ವರ್ಗಾವಣೆ ಸಾಧ್ಯತೆ ಬಗ್ಗೆ ಐಟಿ ದೂರು
    * ದೆಹಲಿಯಲ್ಲಿ ಹಣ ಸಿಕ್ಕ ಕಾರಣ ಜಾರಿ ನಿರ್ದೇಶನಾಲಯಕ್ಕೆ ಮಾಹಿತಿ
    * ಜಾರಿ ನಿರ್ದೇಶನಾಲಯದಿಂದ ತನಿಖೆ, ಎಫ್‍ಐಆರ್ ಸಾಧ್ಯತೆ


    ಜಾರಿ ನಿರ್ದೇಶನಾಲಯ ಸಚಿವ ಡಿಕೆ ಶಿವಕುಮಾರ್ ವಿರುದ್ಧ ಎಫ್‍ಐಆರ್ ದಾಖಲಿಸಿಕೊಂಡ್ರೆ ಮುಂದೆ ಏನಾಗಬಹುದು?
    * ಡಿ.ಕೆ.ಶಿವಕುಮಾರ್ ಬಂಧನ ಆಗಬಹುದು
    * ಸಚಿವ ಸ್ಥಾನಕ್ಕೆ ಡಿಕೆಶಿ ರಾಜೀನಾಮೆ ಕೊಡಬಹುದು
    * ಡಿಕೆಶಿ ಹೆಸರಲ್ಲಿರುವ ಆಸ್ತಿ-ಪಾಸ್ತಿ ಮುಟ್ಟುಗೋಲು ಹಾಕಿಕೊಳ್ಳಬಹುದು
    * ಆರೋಪ ಸಾಬೀತಾದ್ರೆ 3 ರಿಂದ 7 ವರ್ಷದವರೆಗೆ ಜೈಲು ಶಿಕ್ಷೆ ಆಗಬಹುದು

    ಸಮ್ಮಿಶ್ರ ಸರ್ಕಾರದ ಪ್ರಭಾವಿ ಸಚಿವ ಡಿ ಕೆ ಶಿವಕುಮಾರ್ ಅವರೇ ಕೇಂದ್ರ ಸರ್ಕಾರದ ಟಾರ್ಗೆಟ್ ಯಾಕೆ?
    * ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ರಚನೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದು
    * ಬಹುಮತ ಸಾಬೀತು ವೇಳೆ `ಕೈ’ಗೆ ಸಿಗದಿದ್ದ ಶಾಸಕರನ್ನು ಕರೆತರುವಲ್ಲಿ ಯಶಸ್ವಿಯಾಗಿದ್ದು
    * ಗುಜರಾತ್‍ನಿಂದ ರಾಜ್ಯಸಭೆಗೆ ನಡೆದ ಚುನಾವಣೆ ವೇಳೆ `ಕೈ’ ಶಾಸಕರನ್ನು ರೆಸಾರ್ಟ್ ನಲ್ಲಿ ರಕ್ಷಿಸಿದ್ದು
    * ಸೋನಿಯಾ ಆಪ್ತ ಅಹ್ಮದ್ ಪಟೇಲ್ ಗೆಲುವಿಗೆ ಡಿಕೆಶಿ ರಣತಂತ್ರ ಕಾರಣವಾಗಿತ್ತು

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ದ್ವೇಷದ ರಾಜಕಾರಣ, ಭಯದಿಂದ ತುರ್ತು ಸುದ್ದಿಗೋಷ್ಠಿ ಕರೆದಿಲ್ಲ: ಡಿಕೆ ಸುರೇಶ್

    ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ದ್ವೇಷದ ರಾಜಕಾರಣ, ಭಯದಿಂದ ತುರ್ತು ಸುದ್ದಿಗೋಷ್ಠಿ ಕರೆದಿಲ್ಲ: ಡಿಕೆ ಸುರೇಶ್

    ಬೆಂಗಳೂರು: ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ಎಫ್‍ಐಆರ್ ದಾಖಲಿಸುವ ಪ್ರಯತ್ನ ನಡೆಸುತ್ತಿದ್ದ ಬೆನ್ನಲ್ಲೇ ಸಹೋದರ ಸಂಸದ ಡಿ.ಕೆ. ಸುರೇಶ್ ಅವರು ನಗರದಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿ ರಾಜ್ಯ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಇಂದು ಸಿಬಿಐ, ಇಡಿ ಮತ್ತು ಆದಾಯ ತೆರಿಗೆ ಇಲಾಖೆಯನ್ನ ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳತ್ತಿದೆ. ನಾನು ಯಾವುದಕ್ಕೂ ಹೆದರುವುದಿಲ್ಲ. ನಾವು ಈಗಾಗಲೇ ಹಿರಿಯ ಅಧಿಕಾರಿಗಳನ್ನ ಮತ್ತು ವಕೀಲರನ್ನು ಭೇಟಿ ಮಾಡಿ ಸತ್ಯಾಸತ್ಯತೆಯ ಬಗ್ಗೆ ಚರ್ಚೆ ಮಾಡಿದ್ದೇವೆ. ನಾವು ಯಾವುದೇ ತಪ್ಪು ಮಾಡಿಲ್ಲ. ನಮ್ಮ ಬಳಿ ಇರುವ ಎಲ್ಲ ಲೆಕ್ಕಗಳಿಗೆ ಐಟಿಗೆ ಉತ್ತರ ಕೊಟ್ಟಿದ್ದೇವೆ ಎಂದು ಹೇಳಿದರು.

    ಸದ್ಯಕ್ಕೆ ಯಾವುದೇ ನೋಟಿಸ್ ಬಂದಿಲ್ಲ. ಕಾನೂನು, ಸಂವಿಧಾನದ ಮೇಲೆ ಗೌರವವಿದೆ. ಭಯದಿಂದ ಈ ಸುದ್ದಿಗೋಷ್ಠಿ ಮಾಡುತ್ತಿಲ್ಲ. ಬಿಜೆಪಿ ಅವರ ದುರಾಡಳಿತ, ಅವರು ಯಾವ ರೀತಿ ವಿರೋಧ ಪಕ್ಷದ ಮೇಲೆ ಗದಾಪ್ರಹಾರ ಮತ್ತು ಅಧಿಕಾರ ದುರುಪಯೋಗ ಮಾಡುತ್ತಿದ್ದಾರೆ ಎಂಬುದನ್ನು ಈ ರಾಜ್ಯದ ಜನರಿಗೆ ತಿಳಿಸುವ ಪ್ರಯತ್ನವನ್ನು ಮಾಡುತ್ತಿದ್ದೇನೆ ಎಂದರು.

    ಸೋನಿಯಾ ಗಾಂಧಿ, ಮಮತಾ ಬ್ಯಾನರ್ಜಿ ಹೀಗೆ ದೇಶದ ಎಲ್ಲ ನಾಯಕರ ಮೇಲೂ ಕೇಸು ಹಾಕಿದ್ದಾರೆ. ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸುವ ಯತ್ನ ಮಾಡುತ್ತಿದ್ದಾರೆ. ಗುಜರಾತ್ ರಾಜ್ಯಸಭಾ ಚುನಾವಣೆ ನಂತರ ಈ ಸೇಡಿನ ರಾಜಕಾರಣ ಜಾಸ್ತಿಯಾಗಿದೆ. ಡಿ.ಕೆ ಶಿವಕುಮಾರ್ ಮೇಲೆ ಕಂಪ್ಲೇಂಟ್ ಕೊಟ್ಟಿದ್ದಾರೆ. ಸರ್ಕಾರವನ್ನು ಅಸ್ಥಿರ ಮಾಡಲು, ಅಧಿಕಾರವನ್ನು ಪಡೆಯಲು ಬಿಜೆಪಿಯವರು ಈ ರೀತಿ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೇ ಡಿ.ಕೆ ಶಿವಕುಮಾರ್ ಅವರನ್ನು ಅರೆಸ್ಟ್ ಮಾಡಿಸುತ್ತೇವೆ ಎಂದು ಬಿಜೆಪಿ ನಾಯಕರೇ ಹೇಳಿದ್ದಾರೆ ಎಂದು ಆರೋಪಿಸಿದರು.

    ದ್ವೇಷದ ರಾಜಕಾರಣ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಬೆಳೆದಿದೆ. ಅದರಲ್ಲೂ ಕೂಡ ಕರ್ನಾಟಕ ಬಿಜೆಪಿಯ ಟಾರ್ಗೆಟ್ ಆಗಿದೆ. ಇಲ್ಲಿ ಬಿಜೆಪಿಗೆ ಸಡ್ಡು ಹೊಡೆದು ಸಮ್ಮಿಶ್ರ ಸರ್ಕಾರ ರಚನೆ ಆಗಿದೆ. ಈ ಸಂದರ್ಭದಲ್ಲಿ ಕೆಲವೊಂದು ವಿದ್ಯಮಾನಗಳು ಕೇಂದ್ರ ಸರ್ಕಾರದ ಅಧೀನದಲ್ಲಿರುವ ಐಟಿ, ಇಡಿ, ಸಿಬಿಐಯನ್ನ ಬಳಸಿಕೊಂಡು ರಾಜ್ಯ ಸರ್ಕಾರಕ್ಕೆ ಬೆಂಬಲವಾಗಿರುವವರನ್ನ ಬಂಧಿಸುವ ಪ್ರಯತ್ನವನ್ನು ಬಿಜೆಪಿಯ ರಾಜ್ಯ, ರಾಷ್ಟ್ರ ನಾಯಕರು ಮಾಡುತ್ತಿದ್ದಾರೆ ಎಂದರು.

    ಕಳೆದು ಒಂದು ವರ್ಷದ ಹಿಂದೆ ನನ್ನ ಸಹೋದರರ ಮನೆ, ಕಚೇರಿ, ಸಂಬಂಧಿಕರ ಮೇಲೆ ಸುಮಾರು 68 ಕಡೆ ಐಟಿ ದಾಳಿ ನಡೆಸಿತ್ತು. ಅದು ಮುಂದುವರಿದು 80 ಕಡೆ ದಾಳಿ ನಡೆದಿತ್ತು. ಈಗಾಗಲೇ ಐಟಿ ಅಧಿಕಾರಿಗಳು ಪ್ರಾಷಿಕ್ಯೂಷನ್ ಕೇಸ್ ಅನ್ನು ಡಿ.ಕೆ ಶಿವಕುಮಾರ್ ಮೇಲೆ ಹಾಕಿದ್ದಾರೆ. ಆದರೆ ಕೇಸ್ ಹಾಕಿದ್ದರಿಂದ ಯಾವುದೇ ಪ್ರಯೋಜನವಾಗಿಲ್ಲ ಎಂದು ಗೊತ್ತಾದ ಮೇಲೆ ಮತ್ತೊಂದು ಪ್ರಯತ್ನವನ್ನು ಹಿಂಬಾಗಿಲಿನಿಂದ ಶಿವಕುಮಾರ್ ಮೇಲೆ ಒತ್ತಡ ತರಬೇಕು ಎಂದು ಬಿಜೆಪಿ ನಾಯಕರು ಮಾಡುತ್ತಿದ್ದಾರೆ ಎಂದು ದೂರಿದರು.

    ಪ್ರಧಾನಿ ಮಂತ್ರಿ ಅವರಿಗೆ ಇದರ ಬಗ್ಗೆ ಮಾಹಿತಿ ಇದೆಯೋ ಇಲ್ಲವೋ ಗೊತ್ತಿಲ್ಲ. ಪ್ರಧಾನಿ ಮಂತ್ರಿಯ ಕಚೇರಿಯನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಸರ್ಕಾರದ ಅದೀನ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿರುವ ಈ ವಿಚಾರ ಗೊತ್ತಿದೆಯೋ ಇಲ್ಲವೋ ತಿಳಿದಿಲ್ಲ. ಹಾಗಾಗಿ ಪ್ರಧಾನಿ ಮೋದಿ ಅವರು ಮಧ್ಯೆ ವಹಿಸಬೇಕು ಎಂದು ಒತ್ತಾಯಿಸುತ್ತೇನೆ. ಇದರ ಬಗ್ಗೆ ಮಾತನಾಡಲು ಅವರನ್ನು ಖುದ್ದಾಗಿ ಭೇಟಿ ಮಾಡಿ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು.

    ಡಿ.ಕೆ. ಶಿವಕುಮಾರ್ ಅಪರಾಧ ಎಸಗಿದರೆ ಮಾತ್ರ ಜಾರಿ ನಿರ್ದೇಶನಾಲಯಕ್ಕೆ ರೆಫರ್ ಮಾಡಲು ಅವಕಾಶ ಇರುತ್ತದೆ. ಆದರೆ ಇದು ಸಿಬಿಐ ಅಲ್ಲಾ ಸಿಬಿಐ ಮೋರ್ಚಾ, ಐಟಿ ಮೋರ್ಚಾ ಮತ್ತು ಇಡಿ ಮೋರ್ಚಾವಾಗಿ ಕೆಲಸ ಮಾಡುತ್ತಿದೆ. ಇದಕ್ಕೆಲ್ಲಾ ಕಾರಣ ಬಿಜೆಪಿ ನಾಯಕರ ಒತ್ತಡವಾಗಿದೆ. 1 ತಿಂಗಳಲ್ಲಿ ಸರ್ಕಾರ ಉರುಳುತ್ತದೆ ಅಂತ ಎಲ್ಲ ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಅದರ ಅರ್ಥ ಏನು ಅಂತ ಎಲ್ಲರಿಗು ಗೊತ್ತಾಗಿದೆ. ಬಿಜೆಪಿಯವರು ಹೀಗೆ ಒತ್ತಡ ಹೇರುವ ಮೂಲಕ ಸರ್ಕಾರ ಬೀಳಿಸುವ ಯತ್ನ ನಡೆಸುತ್ತಿದ್ದಾರೆ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬಿಜೆಪಿಗೆ ಬಂದ್ರೆ ಎಲ್ಲಾ ಸಮಸ್ಯೆ ಪರಿಹಾರ ಎಂಬ ಆಫರ್ ಬಂದಿತ್ತು : ಡಿಕೆ ಸುರೇಶ್

    ಬಿಜೆಪಿಗೆ ಬಂದ್ರೆ ಎಲ್ಲಾ ಸಮಸ್ಯೆ ಪರಿಹಾರ ಎಂಬ ಆಫರ್ ಬಂದಿತ್ತು : ಡಿಕೆ ಸುರೇಶ್

    ಬೆಂಗಳೂರು: ನೀವು ಬಿಜೆಪಿಗೆ ಬಂದರೆ ನಿಮ್ಮ ಎಲ್ಲಾ ಸಮಸ್ಯೆಗಳು ಪರಿಹಾರ ಆಗುತ್ತೆ ಎಂದು ಬಿಜೆಪಿ ನಾಯಕರು, ಕೆಲ ಆಪ್ತರು ನಮಗೆ ಬಿಜೆಪಿ ಸೇರ್ಪಡೆಗೆ ಆಫರ್ ನೀಡಿದ್ದರು ಎಂದು ಸಂಸದ ಡಿಕೆ ಸುರೇಶ್ ಹೇಳಿದ್ದಾರೆ.

    ಪಬ್ಲಿಕ್ ಟಿವಿಗೆ ವಿಶೇಷ ಸಂದರ್ಶನ ನೀಡಿ ಮಾತನಾಡಿದ ಸಂಸದ ಡಿಕೆ ಸುರೇಶ್ ಅವರು, ರಾಜ್ಯದ ಇತರೆ ನಾಯಕರಿಗೆ ಆಫರ್ ನೀಡಿದಂತೆ ನಮಗೂ ಬಿಜೆಪಿ ನಾಯಕರು ಆಫರ್ ನೀಡಿದ್ದರು. ನಾವು ಸ್ವಲ್ಪ ಸ್ಟ್ರಾಂಗ್ ಇದ್ದೀವಿ ಎನ್ನುವ ಕಾರಣಕ್ಕೆ ಹೆಚ್ಚು ಒತ್ತಡ ತಂದಿದ್ದರು. ಅಲ್ಲದೇ ಐಟಿ, ಇಡಿ, ಸಿಬಿಐ ಎಲ್ಲಾ ಸಮಸ್ಯೆ ಪರಿಹಾರ ಅಗುತ್ತೆ ಎಂಬ ಆಫರ್ ನೀಡಿದ್ದಾಗಿ ಹೇಳಿದ್ದಾರೆ.

    ನಮ್ಮ ಪಕ್ಷ ಮುಖಂಡರು ನಿರಂತರವಾಗಿ ನಮಗೆ ಬೆಂಬಲ ನೀಡಿದ್ದಾರೆ. ನಮ್ಮ ಮೇಲೆ ಪಕ್ಷ ಹೆಚ್ಚಿನ ಜವಾಬ್ದಾರಿ ನೀಡಿದೆ. ನಾವು ನಂಬಿರುವ ತತ್ವ, ಸಿದ್ಧಾಂತ, ಜನಸೇವೆ ಮಾಡಲು ಪಕ್ಷದಲ್ಲೇ ಮುಂದುವರೆಯುತ್ತೆವೆ. ಬೇರೆ ಪಕ್ಷಕ್ಕೆ ಹೋಗಿ ನಾವು ಮಾಡುವಂತಹದ್ದು ಏನು ಇಲ್ಲ. ಕಾಂಗ್ರೆಸ್ ನಲ್ಲಿದೇ ಜನ ಸೇವೆ ಮುಂದುವರೆಸುತ್ತೇವೆ. ನಾವು ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿ ಯಾವುದೇ ಭಯ ಇಲ್ಲಾ ಎಂದು ಹೇಳಿದರು.

    ಕಾಂಗ್ರೆಸ್ ಪಕ್ಷದಲ್ಲಿ ನಿಮ್ಮನ್ನು ನಿರ್ಲಕ್ಷ ಮಾಡಿದ್ದರಾ ಎಂಬ ಪ್ರಶ್ನೆಗೆ ಉತ್ತರಿಸಿ, ಪಕ್ಷ ನೀಡಿದ ಜವಾಬ್ದಾರಿಯನ್ನು ಡಿಕೆ ಶಿವಕುಮಾರ್ ಸೇರಿದಂತೆ ನಾನು ಮಾಡುತ್ತಿದ್ದು, ಪಕ್ಷ ಯಾವುದೇ ಜವಾಬ್ದಾರಿ ನೀಡದೆ ಇದ್ದರೆ ಎಲ್ಲಾ ಶಾಸಕರ ಹಾಗೇ ಜನರ ಸೇವೆ ಮಾಡುತ್ತೇವೆ. ಆದರೆ ಯಾರ ಮೇಲೆ ಬಿದ್ದು ಯಾವುದೇ ಸ್ಥಾನ ನೀಡಿ ಎಂದು ಇದುವರೆಗೂ ಹೋಗಿಲ್ಲ, ಮುಂದೆ ಹೋಗುವ ಸಂದರ್ಭವೂ ಬರಲ್ಲ ಎಂದರು.

  • ಡಿಕೆಶಿ ಮೇಲೆ ಸಿಬಿಐ, ಐಟಿ ದಾಳಿ ನಿಲ್ಲದೇ ಹೋದ್ರೆ ಒಕ್ಕಲಿಗ ಸಂಘದಿಂದ ರಾಜ್ಯಾದ್ಯಂತ ಪ್ರತಿಭಟನೆ!

    ಡಿಕೆಶಿ ಮೇಲೆ ಸಿಬಿಐ, ಐಟಿ ದಾಳಿ ನಿಲ್ಲದೇ ಹೋದ್ರೆ ಒಕ್ಕಲಿಗ ಸಂಘದಿಂದ ರಾಜ್ಯಾದ್ಯಂತ ಪ್ರತಿಭಟನೆ!

    ಬೆಂಗಳೂರು: ಡಿ.ಕೆ.ಶಿವಕುಮಾರ್ ಮೇಲೆ ಸಿಬಿಐ, ಐಟಿ ದಾಳಿ ನಿಲ್ಲದೇ ಹೋದ್ರೆ ರಾಜ್ಯಾದ್ಯಂತ ಒಕ್ಕಲಿಗರ ಸಂಘ ಪ್ರತಿಭಟನೆಗೆ ನಿರ್ಧಾರ ಮಾಡಿದೆ ಎಂದು ಒಕ್ಕಲಿಗರ ಸಂಘದ ಅಧ್ಯಕ್ಷ ಬೆಟ್ಟೇಗೌಡ ಹೇಳಿದ್ದಾರೆ.

    ಮೋದಿ ವಿರುದ್ದ ಪ್ರತಿಭಟನೆ ಗೆ ನಿರ್ಧಾರ ಮಾಡಿರುವ ರಾಜ್ಯ ಒಕ್ಕಲಿಗರ ಸಂಘ ಇದೇ ರೀತಿ ದಾಳಿ ಮುಂದುವರಿದಲ್ಲಿ ದೆಹಲಿಯಲ್ಲಿ ಪ್ರತಿಭಟನೆ ಮಾಡುವ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು. ಇದೇ ವೇಳೆ ಡಿ.ಕೆ.ಶಿವಕುಮಾರ್ ಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯ ಮಾಡಿದರು.

    ನೋಟು ನಿಷೇಧಗೊಂಡ ಸಂದರ್ಭದಲ್ಲಿ ಅವ್ಯವಹಾರ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಸಿಬಿಐ ವಿಶೇಷ ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ನಿನ್ನೆ ಬೆಂಗಳೂರು ಸೇರಿದಂತೆ ರಾಜ್ಯದ 11 ಕಡೆ ದಾಳಿ ನಡೆಸಿದ್ದರು. ರಾಮನಗರ ಕಾರ್ಪೋರೇಶನ್ ಬ್ಯಾಂಕ್ ಮ್ಯಾನೇಜರ್ ಬಿ ಪ್ರಕಾಶ್ ಮನೆ ಹಾಗೂ ಕಚೇರಿಗಳ ಮೇಲೆ ಕೂಡ ದಾಳಿ ಮಾಡಿದ್ದರು.

  • ತುರ್ತು ಸುದ್ದಿಗೋಷ್ಠಿ ಕರೆದು ಹೊಸ ಬಾಂಬ್ ಸಿಡಿಸಿದ ಡಿ.ಕೆ.ಬ್ರದರ್ಸ್

    ತುರ್ತು ಸುದ್ದಿಗೋಷ್ಠಿ ಕರೆದು ಹೊಸ ಬಾಂಬ್ ಸಿಡಿಸಿದ ಡಿ.ಕೆ.ಬ್ರದರ್ಸ್

    ಬೆಂಗಳೂರು: ಇಂದು ಬೆಳಗ್ಗೆ ಸಂಸದ ಡಿ.ಕೆ.ಸುರೇಶ್ ಮತ್ತು ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿ ನಡೆಸಿ, ಹೊಸ ರಾಜಕೀಯ ಬಾಂಬ್ ಸಿಡಿಸಿದ್ದಾರೆ.

    ಕಳೆದ 15 ದಿನಗಳಲ್ಲಿ ರಾಜ್ಯ ರಾಜಕೀಯ ಸಾಕಷ್ಟು ಬದಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ರಚಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮತ್ತು ನನ್ನನ್ನು ಬಿಜೆಪಿ ಟಾರ್ಗೆಟ್ ಮಾಡಿಕೊಂಡಿದೆ. ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ದ್ವೇಷದ ರಾಜಕಾರಣಕ್ಕೆ ಮುಂದಾಗಿದೆ ಅಂತಾ ಡಿ.ಕೆ.ಸುರೇಶ್ ಆರೋಪಿಸಿದರು.

    ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯ ನಿರ್ವಹಿಸುವ ಐಟಿ, ಇಡಿ ಮೂಲಕ ನಮ್ಮನ್ನು ಸದೆಬಡಿಯುವ ಪ್ರಯತ್ನ ಮಾಡಲಾಗುತ್ತಿದೆ. ಇಲಾಖೆಗಳನ್ನು ದುರಪಯೋಗ ಮಾಡಿಕೊಂಡ ಕೇಂದ್ರ ಸರ್ಕಾರ ನಮ್ಮ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ 11 ಜನರ ಮೇಲೆ ದಾಳಿ ನಡೆಸಲು  ಸಿಬಿಐ ಮತ್ತು ಇಡಿ ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆಯಲಾಗಿದೆ ಎಂಬ ಮಾಹಿತಿಗಳು ನಮಗೆ ಲಭ್ಯವಾಗಿವೆ ಅಂತಾ ತಿಳಿಸಿದ್ರು.

    ಬಿಜೆಪಿಯ ಬೆದರಿಕೆ ಮತ್ತು ಆಮಿಷಗಳಿಗೆ ನಾವು ಬಗ್ಗಲ್ಲ. ಈ ಸಂಬಂಧ ಕಾನೂನು ರೀತಿಯಲ್ಲಿ ನಾವು ಹೋರಾಡುತ್ತೇವೆ. ಬಿಜೆಪಿ ಕೀಳುಮಟ್ಟದ ರಾಜಕೀಯ ಮಾಡುತ್ತಿರೋದನ್ನು ನಾವು ಜನರಿಗೆ ತಿಳಿಸಿದ್ದೇವೆ. ಅಧಿಕಾರಿಗಳು ಯಾವ ಪ್ರಕರಣದಡಿಯಲ್ಲಿ ನಮ್ಮನ್ನು ಟಾರ್ಗೆಟ್ ಮಾಡ್ತಿದ್ದಾರೆ ಎಂಬುವುದ ನಮಗೆ ಗೊತ್ತಾಗಿಲ್ಲ ಎಂದು ಡಿ.ಕೆ.ಸುರೇಶ್ ಹೇಳಿದ್ದಾರೆ.

    ಇದೇ ವೇಳೆ ಮಾತನಾಡಿದ ಮಾಜಿ ಸಚಿವ ಡಿ.ಕೆ.ಶಿವಕುಮಾರ್, ನಿನ್ನೆ ರಾತ್ರಿ ನಮಗೆ ಈ ಎಲ್ಲ ಮಾಹಿತಿಗಳು ಲಭ್ಯವಾಗಿದೆ. ಹಳ್ಳಿಯಿಂದ ಬಂದು ರಾಜಕಾರಣ ಮಾಡುತ್ತಿದ್ದೇವೆ. ಬಿಜೆಪಿ ನೇರವಾಗಿ ನನ್ನ ಹಾಗು ಡಿಕೆ ಸುರೇಶ್ ಕುಟುಂಬವನ್ನು ಟಾರ್ಗೆಟ್ ಮಾಡುತ್ತಿದೆ. ನಾವು ಕಾನೂನಿನ ಚೌಕಟ್ಟಿನಲ್ಲಿಯೇ ಕೆಲಸ ಮಾಡಿದ್ದೇವೆ. ಕೇಂದ್ರ ಯಾವುದೇ ಇಲಾಖೆಗಳನ್ನು ನಮ್ಮ ಮೇಲೆ ಬಿಟ್ಟರೂ ನಾವು ಯಾವುದಕ್ಕೂ ಹೆದರಲ್ಲ. ನಮ್ಮ ರಾಜಕೀಯ ಬೆಳವಣಗೆಯನ್ನು ಕಟ್ಟಿ ಹಾಕಲು ಬಿಜೆಪಿ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದ್ರು.

  • ಬದಾಮಿ ಕಾಂಗ್ರೆಸ್‍ಗೆ ಮಿಡ್‍ನೈಟ್ ಐಟಿ ಶಾಕ್!

    ಬದಾಮಿ ಕಾಂಗ್ರೆಸ್‍ಗೆ ಮಿಡ್‍ನೈಟ್ ಐಟಿ ಶಾಕ್!

    ಬಾಗಲಕೋಟೆ: ಮತದಾನಕ್ಕೆ ಇರೋದು ಕೇವಲ ನಾಲ್ಕು ದಿನ ಮಾತ್ರ. ಈ ಹಂತದಲ್ಲಿ ಕಾಂಗ್ರೆಸ್‍ಗೆ ಮತ್ತೊಮ್ಮೆ ಬಿಗ್ ಶಾಕ್ ನೀಡಿದೆ ಐಟಿ ಇಲಾಖೆ.

    ಹೈವೋಲ್ಟೇಜ್ ಕಣ ಬದಾಮಿಯಲ್ಲಿ ಕಾಂಗ್ರೆಸ್ ನಾಯಕರು ಉಳಿದುಕೊಂಡಿದ್ದ ರೆಸಾರ್ಟ್ ಮೇಲೆ ರಾತ್ರೋರಾತ್ರಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

    ಬದಾಮಿ ಹೊರವಲಯದಲ್ಲಿರುವ ಶಾಸಕ ಆನಂದ್‍ಸಿಂಗ್‍ಗೆ ಸೇರಿದ ಕೃಷ್ಣ ಹೆರಿಟೇಜ್ ರೆಸಾರ್ಟ್ ಮೇಲೆ ರಾತ್ರಿ 11ರ ಸುಮಾರಿಗೆ 10ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ಲಗ್ಗೆ ಹಾಕಿದೆ. ದಾಖಲೆಗಳ ಪರಿಶೀಲನೆ ನಡೆಸಿದೆ. ದಾಳಿ ವೇಳೆ ಸಿಎಂ ಸಿದ್ದರಾಮಯ್ಯ ಆಪ್ತ ಸಿಎಂ ಇಬ್ರಾಹಿಂ ಕೂಡ ಇದ್ರು. ಆದ್ರೆ ನಸುಕಿನಜಾವ 2 ಗಂಟೆಗೆ ಸಿಎಂ ಇಬ್ರಾಹಿಂ ರೆಸಾರ್ಟ್‍ನಿಂದ ಹೊರಬಂದ್ದಿದ್ದರು.

    ಬಳಿಕ ಮಾತನಾಡಿದ ಅವರು, `ಈ ರೆಸಾರ್ಟ್‍ನಲ್ಲಿ ನಾನು ವಾಸ್ತವ್ಯ ಹೂಡಿರಲಿಲ್ಲ. ಊಟಕ್ಕೆಂದು ಈ ರೆಸಾರ್ಟ್‍ಗೆ ಬಂದಿದ್ದೆ. ನಾನು ಎಸ್.ಆರ್ ಪಾಟೀಲ್ ಇಬ್ಬರು ಊಟಕ್ಕೆಂದು ಬಂದಿದ್ವಿ ಅಷ್ಟೇ. ಐಟಿ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ. ಆದ್ರೆ ನನ್ನನ್ನು ಏನೂ ಪ್ರಶ್ನೆ ಮಾಡಲಿಲ್ಲ. ಒಳಗಡೆ ಏನ್ ಸಿಗುತ್ತೆ ಅಲ್ಲಿ. ಏನೂ ಇಲ್ಲ. ಐಟಿ ಅಧಿಕಾರಿಗಳು ಸುಮ್ಮನೆ ಕೂತಿದ್ದಾರೆ’ ಅಂದ್ರು.

    ಸದ್ಯ ರೆಸಾರ್ಟ್‍ನಲ್ಲಿ ಶೋಧ ಕಾರ್ಯ ಮುಂದುವರೆದಿದೆ. ರೆಸಾರ್ಟ್‍ಗೆ ಸಿಆರ್‍ಪಿಎಫ್ ಹಾಗೂ ಬದಾಮಿ ಪೊಲೀಸರು ಭದ್ರತೆ ಒದಗಿಸಿದ್ದಾರೆ. ಈ ಬೆಳವಣಿಗೆಯಿಂದಾಗಿ ಬದಾಮಿ ಕಾಂಗ್ರೆಸ್‍ನಲ್ಲಿ ತಳಮಳ ಉಂಟಾಗಿದೆ.

  • ಐಟಿ ದಾಳಿ ತಡೆಯಲು 10 ಕೋಟಿ ರೂ. ಹಣ ಕೇಳಿದ್ದ ನಕಲಿ ಅಧಿಕಾರಿಗಳ ಬಂಧನ

    ಐಟಿ ದಾಳಿ ತಡೆಯಲು 10 ಕೋಟಿ ರೂ. ಹಣ ಕೇಳಿದ್ದ ನಕಲಿ ಅಧಿಕಾರಿಗಳ ಬಂಧನ

    ಬೆಂಗಳೂರು: ಹಾಲಿ ಸಿಎಂ ಮತ್ತು ಮಾಜಿ ಸಿಎಂ ನಿನ್ನ ಬಳಿ ಹಣ ಇಟ್ಟಿದ್ದಾರೆ. ನಿನ್ನ ಮನೆಯ ಮೇಲೆ ಐಟಿ ದಾಳಿ ಮಾಡೋದಕ್ಕೆ ದೆಹಲಿಯಿಂದ ತಂಡ ಬಂದಿದೆ ಎಂದು ಬೆದರಿಕೆ ಹಾಕಿದ್ದ ನಕಲಿ ಐಟಿ ಅಧಿಕಾರಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಜ್ಯೋತಿಷಿ ಗಣೇಶ್ ದೀಕ್ಷಿತ್ ಅವರಿಗೆ ಬೆದರಿಕೆ ಹಾಕಿದ್ದ ನಕಲಿ ಅಧಿಕಾರಿಗಳು, ಐಟಿ ದಾಳಿಯನ್ನು ತಡೆಯಲು ಹತ್ತು ಕೋಟಿ ರೂ. ವನ್ನು ತಮಿಳುನಾಡಿನ ಹೊಸೂರಿಗೆ ತಂದುಕೊಡುವಂತೆ ಬೆದರಿಕೆ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಹಣ ಕೊಡುವ ಸೋಗಿನಲ್ಲಿ ಹೋದ ಉತ್ತರ ವಿಭಾಗ ಪೊಲೀಸರು, ಆರೋಪಿಗಳಾದ ವೆಂಕಟೇಶ್ ಸೇರಿದಂತೆ ಮೂವರು ನಕಲಿ ಐಟಿ ಅಧಿಕಾರಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ದೀಕ್ಷಿತ್ ಅವರು ಕೇಂದ್ರ ಸಚಿವ ಸದಾನಂದಗೌಡ, ಸಿಎಂ ಸಿದ್ದರಾಮಯ್ಯ ಜೊತೆಯಲ್ಲಿ ಗುರುತಿಸಿಕೊಂಡಿದ್ದರು. ಇವರಿಬ್ಬರು ಹಣವನ್ನು ದೀಕ್ಷಿತ್ ಅವರ ಮನೆಯಲ್ಲಿ ಇಟ್ಟಿದ್ದಾರೆ ಅಂತ ಆರೋಪಿಗಳು ಬೆದರಿಕೆ ಹಾಕಿದ್ದರು.

  • ಖಾನಾಪುರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗೆ ಐಟಿ ಶಾಕ್

    ಖಾನಾಪುರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗೆ ಐಟಿ ಶಾಕ್

    ಬೆಳಗಾವಿ: ಖಾನಾಪುರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಿಢೀರ್ ದಾಳಿ ಮಾಡುವ ಮೂಲಕ ಶಾಕ್ ಕೊಟ್ಟಿದ್ದಾರೆ.

    ಖಾನಾಪುರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಾಸೀರ ಭಾಗವಾನ್ ಮನೆ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಖಾನಾಪುರ ತಾಲೂಕಿನ ಗಂದಿಗವಾಡ ಗ್ರಾಮದಲ್ಲಿ ಇರುವ ಮನೆ ಮತ್ತು ಹುಬ್ಬಳ್ಳಿಯಲ್ಲಿರುವ ಮನೆಯ ಮೇಲೂ 13 ಮಂದಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

    ನಾಸೀರ ಭಾಗವಾನ್ ಕರ್ನಾಟಕ ಚುನಾವಣೆ ನಾಮಪತ್ರ ಸಲ್ಲಿಕೆ ಮಾಡುವ ವೇಳೆ ಸುಮಾರು 191 ಕೋಟಿ ಮೌಲ್ಯದ ಆಸ್ತಿಯನ್ನು ಘೋಷಣೆ ಮಾಡಿದ್ದರು. ಅಷ್ಟೇ ಅಲ್ಲದೇ ತಮ್ಮ ಬಳಿ ಯಾವುದೇ ವಾಹನ ಇಲ್ಲ ಎಂದು ಹೇಳಿದ್ದರು. ಅಂದು ಹೇಳಿದ್ದ ಹೇಳಿಕೆಯೇ ಇಂದು ಅವರಿಗೆ ಮುಳುವಾಗಿದೆ ಎನ್ನಲಾಗಿದೆ.

    ಆದ್ರೆ ಇತ್ತ ಅಧಿಕಾರಿಗಳು ಮಾತ್ರ ಇನ್ನು ಯಾವುದೇ ಮಾಹಿತಿಯನ್ನು ಬಹಿರಂಗ ಪಡಿಸಲಿಲ್ಲ.

  • ಚುನಾವಣೆ ಹೊತ್ತಲ್ಲೇ ಐಟಿಯಿಂದ ಕಾಂಗ್ರೆಸ್‍ಗೆ ಬಿಗ್‍ಶಾಕ್

    ಚುನಾವಣೆ ಹೊತ್ತಲ್ಲೇ ಐಟಿಯಿಂದ ಕಾಂಗ್ರೆಸ್‍ಗೆ ಬಿಗ್‍ಶಾಕ್

    ಬೆಂಗಳೂರು: ರಾಜ್ಯ ಚುನಾವಣೆಯ ಪ್ರಚಾರದಲ್ಲಿರೋ ಕಾಂಗ್ರೆಸ್ ನಾಯಕರಿಗೆ ಐಟಿ ಶಾಕ್ ನೀಡಿದೆ. ಕಂಟ್ರಾಕ್ಟರ್ ಪೇಮೆಂಟ್ ಗೋಲ್ಮಾಲ್ ಬಗ್ಗೆ ಆದಾಯ ತೆರಿಗೆ ಇಲಾಖೆಗೆ ಮಹತ್ವದ ಸುಳಿವೊಂದು ಸಿಕ್ಕಿದೆ ಅಂತ ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭಿಸಿದೆ.

    ಈ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಐಟಿ ಅಧಿಕಾರಿ ಬಾಲಕೃಷ್ಣನ್ ಪತ್ರ ಬರೆದಿದ್ದು, ಮೂರು ತಿಂಗಳ ಅವಧಿಯಲ್ಲಿ ವಿವಿಧ ಇಲಾಖೆಗಳ ಕಂಟ್ರಾಕ್ಟರ್‍ಗಳ ಟೆಂಡರ್ ಮೊತ್ತದ ಬಗ್ಗೆ ದಾಖಲೆ ನೀಡುವಂತೆ ಹೇಳಿದ್ದಾರೆ ಎನ್ನಲಾಗಿದೆ.

    ಚುನಾವಣೆಗಾಗಿ ಕಂಟ್ರಾಕ್ಟರ್‍ಗಳಿಗೆ ಬಿಗ್ ಪೇಮೆಂಟ್ ನೀಡಿರುವ ಬಗ್ಗೆ ಅನುಮಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಇಲಾಖೆ ಜನವರಿಯಿಂದ ಮಾರ್ಚ್‍ವರೆಗೆ ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮೊತ್ತದ ಪೇಮೆಂಟ್ ಬಗ್ಗೆ ಸಂಪೂರ್ಣ ವಿವರ ನೀಡಿ. ವಿದ್ಯುತ್ ಇಲಾಖೆ, ಜಲಸಂಪನ್ಮೂಲ, ಪಶುಪಾಲನಾ, ಮೀನುಗಾರಿಕೆ, ಲೋಕೋಪಯೋಗಿ ಇಲಾಖೆಯ ಟೆಂಡರ್ ಮಾಹಿತಿ ಬೇಗ ನೀಡಿ. 1 ವರ್ಷದಿಂದ ಪದೇಪದೇ ಟೆಂಡರ್ ಪಡೆದ ಕಂಟ್ರಾಕ್ಟರ್‍ಗಳ ಸಂಪೂರ್ಣ ವಿವರ ಕೊಡಿ ಅಂತ ಐಟಿ ಅಧಿಕಾರಿ ಬಾಲಕೃಷ್ಣನ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.