Tag: ITI

  • ITI ವಿದ್ಯಾರ್ಥಿನಿಯರಿಗೆ ತಿಂಗಳಲ್ಲಿ 2 ದಿನ ಮುಟ್ಟಿನ ರಜೆ ಘೋಷಿಸಿದ ಕೇರಳ ಸರ್ಕಾರ

    ITI ವಿದ್ಯಾರ್ಥಿನಿಯರಿಗೆ ತಿಂಗಳಲ್ಲಿ 2 ದಿನ ಮುಟ್ಟಿನ ರಜೆ ಘೋಷಿಸಿದ ಕೇರಳ ಸರ್ಕಾರ

    ತಿರುವನಂತಪುರ: ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ (ITI) ವಿದ್ಯಾರ್ಥಿನಿಯರಿಗೆ ಪ್ರತಿ ತಿಂಗಳು ಎರಡು ದಿನಗಳ ಮುಟ್ಟಿನ ರಜೆ (Menstrual Leave) ನೀಡುವ ಮಹತ್ವದ ನಿರ್ಧಾರವನ್ನು ಕೇರಳ (Kerala) ಸರ್ಕಾರ ಗುರುವಾರ ಪ್ರಕಟಿಸಿದೆ.

    ರಾಜ್ಯ ಶಿಕ್ಷಣ ಸಚಿವ ವಿ ಶಿವನ್‌ಕುಟ್ಟಿ ಈ ನಿರ್ಧಾರವನ್ನು ಪ್ರಕಟಿಸಿದರು. ದೈಹಿಕ ಶ್ರಮ ಬೇಡುವ ಅನೇಕ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿನಿಯರು ಉತ್ತಮ ಸಾಧನೆ ಮಾಡಿದ್ದಾರೆ. ಇಂದಿನ ಯುಗದಲ್ಲಿ, ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲೂ ಸಕ್ರಿಯರಾಗಿದ್ದಾರೆ. ಈ ಅಂಶಗಳನ್ನು ಪರಿಗಣಿಸಿ ಐಟಿಐ ವಿದ್ಯಾರ್ಥಿನಿಯರಿಗೆ ಪ್ರತಿ ತಿಂಗಳು ಎರಡು ದಿನಗಳ ಋತುಚಕ್ರದ ರಜೆಯನ್ನು ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಜನವರಿಯಲ್ಲಿ ಸಂಪುಟಕ್ಕೆ ಸರ್ಜರಿ – ಕೆಪಿಸಿಸಿ ಪಟ್ಟ ಬಿಡಲು ಡಿಕೆಶಿ ಷರತ್ತು?

    ಕೇರಳದ 100ಕ್ಕೂ ಹೆಚ್ಚು ಐಟಿಐ ಕಾಲೇಜುಗಳಲ್ಲಿ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿನಿಯರು ಇದರ ಪ್ರಯೋಜನ ಪಡೆಯಲಿದ್ದಾರೆ. ಪ್ರಯೋಜನ ಪಡೆಯುವ ವಿದ್ಯಾರ್ಥಿಗಳ ನಿಖರ ಸಂಖ್ಯೆಯನ್ನು ಕಂಡುಹಿಡಿಯಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಚಿನ್ಮಯ್ ಕೃಷ್ಣ ದಾಸ್‌ರನ್ನು ಅನ್ಯಾಯವಾಗಿ ಬಂಧಿಸಲಾಗಿದೆ – ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಖಂಡನೆ

    ಇನ್ನು ಶನಿವಾರ ಎಲ್ಲಾ ಐಟಿಐ ಕಾಲೇಜುಗಳಿಗೆ ರಜೆ ನೀಡಲು ಕೇರಳ ಸರ್ಕಾರ ನಿರ್ಧರಿಸಿದೆ. ಈ ಹಿನ್ನೆಲೆ ತರಬೇತಿ ಸಮಯವನ್ನು ಸರಿದೂಗಿಸಲು, ಐಟಿಐ ಶಿಫ್ಟ್ಗಳನ್ನು ಮರುಹೊಂದಿಸಲಾಗುತ್ತದೆ. ಮೊದಲ ಪಾಳಿಯು ಬೆಳಿಗ್ಗೆ 7:30ರಿಂದ ಮಧ್ಯಾಹ್ನ 3 ರವರೆಗೆ ಮತ್ತು ಎರಡನೇ ಶಿಫ್ಟ್ ಬೆಳಿಗ್ಗೆ 10 ರಿಂದ ಸಂಜೆ 5:30 ರವರೆಗೆ ಇರುತ್ತದೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ. ಇದನ್ನೂ ಓದಿ: ಆರ್‌ಸಿಬಿ ಹಿಂದಿ ಒಲವಿಗೆ ಕನ್ನಡ ಅಭಿಮಾನಿಗಳ ಆಕ್ರೋಶ

  • ಪ್ರೀತಿ ನಿರಾಕರಿಸಿದ್ದಕ್ಕೆ ಹುಡುಗಿ ಕೊಂದು ತಾನೂ ಆತ್ಮಹತ್ಯೆ

    ಪ್ರೀತಿ ನಿರಾಕರಿಸಿದ್ದಕ್ಕೆ ಹುಡುಗಿ ಕೊಂದು ತಾನೂ ಆತ್ಮಹತ್ಯೆ

    ಕೊಪ್ಪಳ: ತನ್ನನ್ನು ಪ್ರೀತಿಸಲು (Love) ನಿರಾಕರಿಸಿದ್ದಕ್ಕೆ ಹುಡುಗಿಯನ್ನ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳ (Koppal) ಜಿಲ್ಲೆಯಲ್ಲಿ ನಡೆದಿದೆ.

    ಜಿಲ್ಲೆಯ ಕುಕನೂರು ತಾಲೂಕಿನ ಬಳಗೇರಿ ಗ್ರಾಮದಲ್ಲಿ ಘಟನೆ ನಡೆದಿದೆ. ಹುಡುಗಿಯನ್ನು ಕೊಂದ ಬಳಿಕ ಯುವಕ ತಾನೂ ಚಾಕುವಿನಿಂದ ಚುಚ್ಚಿಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಕಾರಲ್ಲ, ನಾಯಿ ಹೋಗಿ ಬಿದ್ದಿದ್ದರಿಂದ ವೃದ್ಧೆ ಸಾವು: ಶಾಸಕ ದಡೆಸುಗೂರ್‌

    ಮೃತ ಹುಡುಗಿ ಸುಮಾ ತೋಟದ (17) ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಅದೇ ಗ್ರಾಮದ ಮೃತ ಯುವಕ ಪ್ರಕಾಶ್ ಭಜಂತ್ರಿ ಪಿಯುಸಿ (PUC) ಮುಗಿಸಿ ಐಟಿಐ (ITI) ಓದುತ್ತಿದ್ದ. ಸುಮಾಳನ್ನ ಪ್ರೀತಿಸುವಂತೆ ಒತ್ತಾಯ ಮಾಡ್ತಿದ್ದ. ಆದ್ರೆ ಸುಮಾ ಪ್ರೀತಿ ನಿರಾಕರಿಸಿದ್ದಳು. ಇದನ್ನೂ ಓದಿ: ಮುಂದಿನ ಸಂಕ್ರಾಂತಿಗೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣ

    ಸುಮಾ ಕೊಲೆಯಾಗೋದಕ್ಕೂ ಮುನ್ನ ಪ್ರಕಾಶ್ ಚಾಕು ಹಿಡಿದುಕೊಂಡು ಆಕೆ ಮನೆಗೆ ಹೋಗೋದನ್ನ ಸ್ಥಳೀಯರು ನೋಡಿದ್ದಾರೆ. ಸದ್ಯ ಸ್ಥಳಕ್ಕೆ ಕುಕನೂರು ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಐಟಿಐ ವಿದ್ಯಾರ್ಥಿಗಳಿಗೆ ಆನ್‍ಲೈನ್ ಪರೀಕ್ಷೆ ಬೇಡ- ಎನ್‍ಎಸ್‍ಯುಐ ಆಗ್ರಹ

    ಐಟಿಐ ವಿದ್ಯಾರ್ಥಿಗಳಿಗೆ ಆನ್‍ಲೈನ್ ಪರೀಕ್ಷೆ ಬೇಡ- ಎನ್‍ಎಸ್‍ಯುಐ ಆಗ್ರಹ

    ಶಿವಮೊಗ್ಗ: ಐಟಿಐ ವಿದ್ಯಾರ್ಥಿಗಳಿಗೆ ಏಕಾಏಕಿ ಆನ್‍ಲೈನ್ ಪರೀಕ್ಷೆ ನಡೆಸುತ್ತಿರುವುದನ್ನು ರದ್ದು ಪಡಿಸುವಂತೆ ಆಗ್ರಹಿಸಿ ಜಿಲ್ಲಾ ಎನ್‍ಎಸ್‍ಯುಐ ಸಂಘಟನೆ ಮುಖಂಡರು ಮತ್ತು ವಿದ್ಯಾರ್ಥಿಗಳು ಶಿವಮೊಗ್ಗದಲ್ಲಿ ಇಂದು ಪ್ರತಿಭಟನೆ ನಡೆಸಿದರು.

    ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಿಗೆ ಮನವಿ ಸಲ್ಲಿಸಿದರು. ಕೇಂದ್ರ ಸರ್ಕಾರ ಯಾವುದೇ ಪೂರ್ವಭಾವಿ ತಯಾರಿ ಇಲ್ಲದೇ ಐಟಿಐ ವಿದ್ಯಾರ್ಥಿಗಳಿಗೆ ಏಕಾಏಕಿಯಾಗಿ ಸಂಯೋಜನೆ ಅಡಿ ಆನ್‍ಲೈನ್ ಪರೀಕ್ಷೆ ನಡೆಸಲು ಮುಂದಾಗಿರುವುದು ಸರಿಯಲ್ಲ ಎಂದು ವಿದ್ಯಾರ್ಥಿಗಳು ದೂರಿದರು.

    ಸಾಮಾನ್ಯವಾಗಿ ಐಟಿಐ ಕೋರ್ಸ್ ಗಳಿಗೆ ಪ್ರವೇಶ ಪಡೆಯುವುದು ಗ್ರಾಮೀಣ, ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳು. ಅಲ್ಲದೇ ಪ್ರೌಢಶಾಲೆಗಳಲ್ಲಿ ಅತ್ಯಂತ ಕಡಿಮೆ ಅಂಕ ಗಳಿಸಿದವರೇ ಹೆಚ್ಚಾಗಿ ಐಟಿಐ ಕೋರ್ಸ್ ಗಳಿಗೆ ಆಯ್ಕೆಯಾಗಿರುತ್ತಾರೆ. ಯಾವುದೇ ಪೂರ್ವಭಾವಿ ತಯಾರಿಯಿಲ್ಲದೇ ಐಟಿಐ ವಿದ್ಯಾರ್ಥಿಗಳಿಗೆ ಆನ್‍ಲೈನ್ ಪರೀಕ್ಷೆ ನಡೆಸಲು ಮುಂದಾಗಿರುವುದು ಅವರ ಕಲಿಕೆಯ ಮಟ್ಟಕ್ಕಿಂತ ಹೆಚ್ಚಿನ ಪರೀಕ್ಷೆ ನಡೆಸಿದಂತಾಗುತ್ತದೆ ಎಂದು ಪ್ರತಿಭಟನಾಕಾರರು ಹೇಳಿದರು.

    ಆನ್‍ಲೈನ್ ಪರೀಕ್ಷೆ ಎದುರಿಸಲು ಸತತವಾಗಿ ಕಂಪ್ಯೂಟರ್ ಮತ್ತು ಸ್ಮಾರ್ಟ್ ಫೋನ್‍ಗಳ ಅಭ್ಯಾಸ ನಡೆಸಬೇಕು. ಆದರೆ ಐಟಿಐ ವಿದ್ಯಾರ್ಥಿಗಳಿಗೆ ಈ ಬಗ್ಗೆ ಯಾವುದೇ ತರಬೇತಿ ನೀಡದೇ ಪರೀಕ್ಷೆ ಎದುರಿಸುವುದು ಕಷ್ಟವಾಗಲಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.

    ಅಭ್ಯಾಸ ನಡೆಸಲು ಬಡ, ಮಧ್ಯಮ ಮತ್ತು ಗ್ರಾಮೀಣ ವಿದ್ಯಾರ್ಥಿಗಳು ಗುಣಮಟ್ಟದ ಕಂಪ್ಯೂಟರ್, ಸ್ಮಾರ್ಟ್ ಫೋನ್ ಖರೀದಿಸಲು ಆಗುವುದಿಲ್ಲ. ಅಲ್ಲದೇ ಆನ್‍ಲೈನ್ ಪರೀಕ್ಷೆ ಎದುರಿಸುವ ತರಬೇತಿಯೂ ದೊರೆತಿಲ್ಲ. ಆದ್ದರಿಂದ ಏಕಾಏಕಿ ವಿದ್ಯಾರ್ಥಿಗಳ ಮೇಲೆ ಪ್ರಯೋಗ ನಡೆಸದೇ ಹಿಂದಿನ ಪದ್ಧತಿಯಲ್ಲೇ ಪರೀಕ್ಷೆ ನಡೆಸಲು ತಾಂತ್ರಿಕ ಶಿಕ್ಷಣ ಇಲಾಖೆಗೆ ಆದೇಶ ನೀಡಬೇಕೆಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಆಗ್ರಹಿದರು.

  • ಮಂಡ್ಯ ಐಟಿಐ ತರಬೇತಿ ಅಧಿಕಾರಿ ವಿದ್ಯಾರ್ಥಿಗಳಿಂದ ಲಂಚ ಪಡೆಯುತ್ತಿರುವ ವಿಡಿಯೋ ವೈರಲ್

    ಮಂಡ್ಯ ಐಟಿಐ ತರಬೇತಿ ಅಧಿಕಾರಿ ವಿದ್ಯಾರ್ಥಿಗಳಿಂದ ಲಂಚ ಪಡೆಯುತ್ತಿರುವ ವಿಡಿಯೋ ವೈರಲ್

    ಮಂಡ್ಯ: ಸರ್ಕಾರಿ ಐಟಿಐ ಕಾಲೇಜಿನ ತರಬೇತಿ ಅಧಿಕಾರಿ ವಿದ್ಯಾರ್ಥಿಗಳಿಂದ ಲಂಚ ಪಡೆಯುತ್ತಿದ್ದಾರೆಂದು ಆರೋಪಿಸಿ ಯುವಕನೊಬ್ಬ ವಿಡಿಯೋಮಾಡಿ ಫೇಸ್‍ಬುಕ್‍ನಲ್ಲಿ ಅಪ್‍ಲೋಡ್ ಮಾಡಿದ್ದು, ಈಗ ಆ ವಿಡಿಯೋ ಫುಲ್ ವೈರಲ್ ಆಗಿದೆ.

    ತಾಲೂಕಿನ ಬಸರಾಳು ಸರ್ಕಾರಿ ಐಟಿಐ ಕಾಲೇಜಿನ ಕಿರಿಯ ತರಬೇತಿ ಅಧಿಕಾರಿ ಸುರೇಶ್ ಕುಮಾರ್, ವಿದ್ಯಾರ್ಥಿಗಳಿಂದ ಕಾಲೇಜಿನಲ್ಲಿ ಟೇಬಲ್ ಮುರಿದಿದೆ ಟೇಬಲ್ ತರಬೇಕು, ಅದಕ್ಕೆ ಬೇಕು ಇದಕ್ಕೆ ಬೇಕು ಎಂದು ಸುಳ್ಳು ಹೇಳಿ ಹಣ ವಸೂಲಿ ಮಾಡಿ ವೈಯಕ್ತಿಕವಾಗಿ ಬಳಸಿಕೊಳ್ಳುತ್ತಿದ್ದರೆಂದು ಆರೋಪಿಸಿ ಮಂಜುನಾಥ್ ಪುನಿ ಎಂಬುವವರು ವಿಡಿಯೋ ಮಾಡಿ ಆ ವಿಡಿಯೋವನ್ನು ಫೇಸ್‍ಬುಕ್‍ಗೆ ಅಪ್‍ಲೋಡ್ ಮಾಡಿದ್ದಾರೆ. ಈ ವಿಡಿಯೋ ಶಿಕ್ಷಣ ಸಚಿವರಿಗೆ ತಲುಪುವವರೆಗೂ ಶೇರ್ ಮಾಡಿ ಎಂದು ಕೇಳಿಕೊಂಡಿದ್ದಾರೆ.

    ಫೇಸ್‍ಬುಕ್‍ಗೆ ಅಪ್‍ಲೋಡ್ ಆದ ವಿಡಿಯೋದಲ್ಲಿ, ಸುರೇಶ್ ಕುಮಾರ್ ಕೈಯಲ್ಲಿ ಹಣ ಹಿಡಿದುಕೊಂಡು ಹಣಕಾಸಿನ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಚರ್ಚಿಸುತ್ತಿರುವುದು ಕಾಣಿಸುತ್ತಿದೆ. ಈ ವಿಡಿಯೋವನ್ನು ಮಾಡಿರುವ ಮಂಜುನಾಥ್ ಈ ಹಿಂದೆ ಬಸರಾಳು ಐಟಿಐ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿದ್ದರು ಎಂದು ತಿಳಿದು ಬಂದಿದೆ.

    ಸ್ಥಳಿಯರು, ಕೂಡಲೇ ಶಿಕ್ಷಣ ಇಲಾಖೆ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು ಈ ವಿಡಿಯೋ ಬಗ್ಗೆ ಕೇಳಿ ಬಂದಿರುವ ಆರೋಪದ ಬಗ್ಗೆ ಸತ್ಯಾಸತ್ಯತೆ ಪರಿಶೀಲಿಸಬೇಕು. ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.

    https://youtu.be/z872f7VXQjo