Tag: ITRaid

  • ಡೋಲೋ 650 ಮಾತ್ರೆ ತಯಾರಿಕಾ ಸಂಸ್ಥೆ ಮೈಕ್ರೋ ಲ್ಯಾಬ್ಸ್ ಮೇಲೆ ಐಟಿ ದಾಳಿ

    ಡೋಲೋ 650 ಮಾತ್ರೆ ತಯಾರಿಕಾ ಸಂಸ್ಥೆ ಮೈಕ್ರೋ ಲ್ಯಾಬ್ಸ್ ಮೇಲೆ ಐಟಿ ದಾಳಿ

    ಬೆಂಗಳೂರು: ಡೋಲೋ 650 ಮಾತ್ರೆ ತಯಾರಿಕಾ ಸಂಸ್ಥೆ ಮೈಕ್ರೋ ಲ್ಯಾಬ್ಸ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

    ಕೋವಿಡ್ ಸಂದರ್ಭದಲ್ಲಿ ಮೈಕ್ರೋ ಲ್ಯಾಬ್ಸ್ ನೂರಾರು ಕೋಟಿಯ ಡೋಲೋ -650 ಮಾತ್ರೆ ಮಾರಾಟ ಮಾಡುವ ಮೂಲಕ ಅತೀ ಹೆಚ್ಚು ವ್ಯಾಪಾರ ವಹಿವಾಟು ನಡೆಸಿತ್ತು. ಆ ವೇಳೆ ತೆರಿಗೆ ವಂಚಿಸಿದ್ದ ಆರೋಪ ಹಿನ್ನೆಲೆ ರೇಸ್ ಕೋರ್ಸ್ ರಸ್ತೆಯಲ್ಲಿರುವ ಮೈಕ್ರೋ ಲ್ಯಾಬ್ಸ್ ಕೇಂದ್ರ ಕಚೇರಿ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಚೇರಿ ಅಲ್ಲದೇ ಸಿಎಂಡಿ ದಿಲೀಪ್ ಸುರಾನಾ, ಡೈರೆಕ್ಟರ್ ಆನಂದ್ ಸುರಾನ ನಿವಾಸದ ಮೇಲೂ ದಾಳಿ ನಡೆಸಲಾಗಿದೆ.  ಇದನ್ನೂ ಓದಿ:  ಐಸಿಯುವಿನಲ್ಲಿ ಲಾಲು ಪ್ರಸಾದ್ ಯಾದವ್‍ಗೆ ಚಿಕಿತ್ಸೆ – ಆರೋಗ್ಯ ವಿಚಾರಿಸಿದ ಮೋದಿ

    ಮೈಕ್ರೋ ಲ್ಯಾಬ್ಸ್ ಫಾರ್ಮಾಸಿಟಿಕಲ್‍ನ ಬೆಂಗಳೂರಿನ ಕೇಂದ್ರ ಕಚೇರಿ ಜೊತೆಗೆ ತಮಿಳುನಾಡು, ಗೋವಾ, ಪಂಜಾಬ್, ಮುಂಬೈ, ದೆಹಲಿ, ಸಿಕ್ಕಿಂ ಸೇರಿದಂತೆ ದೇಶದ 40 ಕಡೆಗಳಲ್ಲಿ ಸುಮಾರು 200ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಬೆಳಗ್ಗೆ 7 ಗಂಟೆಯಿಂದಲೇ 25ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ:  ಬೆಲೆ ಏರಿಕೆ ಬಿಸಿ – ಗೃಹಬಳಕೆಯ LPG ಸಿಲಿಂಡರ್ ಬೆಲೆ 50 ರೂ. ಏರಿಕೆ

    Live Tv
    [brid partner=56869869 player=32851 video=960834 autoplay=true]

  • ಐಟಿ‌ ದಾಳಿಗೆ ನಾವು ಹೆದರಲ್ಲ – ಶಾಸಕಿ ಲಕ್ಷ್ಮಿ‌ ಹೆಬ್ಬಾಳ್ಕರ್‌

    ಐಟಿ‌ ದಾಳಿಗೆ ನಾವು ಹೆದರಲ್ಲ – ಶಾಸಕಿ ಲಕ್ಷ್ಮಿ‌ ಹೆಬ್ಬಾಳ್ಕರ್‌

    ಹುಬ್ಬಳ್ಳಿ:  ಕಾಂಗ್ರೆಸ್ ಕಾರ್ಯಕರ್ತರಲ್ಲಿ ಭಯ ಸೃಷ್ಟಿ ಮಾಡಲು ಐಟಿ, ಇಡಿ ದಾಳಿ ಮಾಡಲಾಗುತ್ತಿದೆ. ಇದಕ್ಕೆಲ್ಲ ನಾವು ಹೆದರುವುದಿಲ್ಲ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

    ಹುಬ್ಬಳ್ಳಿಯಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಕಾರ್ಯಕರ್ತರಲ್ಲಿ ಭಯ ಸೃಷ್ಟಿ ಮಾಡಲು ರಾಜಕಾರಣ ಮಾಡುತ್ತಿದ್ದಾರೆ. ಎಲ್ಲ ರಾಜ್ಯಗಳಲ್ಲಿ ಈ ರೀತಿ ಆಗುತ್ತಿದೆ. ಇಡಿ, ಐಟಿಗೆ ನಾವು ಹೆದರುವುದಿಲ್ಲ. ಇದು ಯಾವುದು ಕೂಡ ಚುನಾವಣಾ ಫಲಿತಾಂಶದ ಮೇಲೆ ಪರಿಣಾಮ ಬೀರುವುದಿಲ್ಲ ಎಂದರು.

    ಈಗ ಐಟಿ ದಾಳಿ ಮಾಡಿರುವ ಯು.ಬಿ. ಶೆಟ್ಟಿ ಮೊದಲಿಂದಲೂ ಡಿ.ಕೆ. ಶಿವಕುಮಾರ್ ಜೊತೆ ಇದ್ದಾರೆ. ನಮ್ಮ ಕಾರ್ಯಕರ್ತರ ನೈತಿಕತೆ ಕಡಿಮೆ ಮಾಡಲು ಈ ರೀತಿ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಮಗನಿಗೆ ಬೇಲ್ ಸಿಕ್ಕ ಖುಷಿಗೆ ವಕೀಲರ ತಂಡದೊಂದಿಗೆ ಫೋಟೋಗೆ ಪೋಸ್ ಕೊಟ್ಟ ಶಾರೂಖ್ ಖಾನ್

    ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಪ್ತ, ಧಾರವಾಡದ ಎ-1 ಗುತ್ತಿಗೆದಾರ, ಉದ್ಯಮಿ ಆಗಿರುವ ಯು.ಬಿ. ಶೆಟ್ಟಿಯ ಮನೆ ಮೇಲೆ ದಾಳಿಯಾಗಿದೆ. ಗೋವಾ ಮೂಲದ ಐಟಿ ಅಧಿಕಾರಿಗಳಿಂದ ಯುಬಿ ಶೆಟ್ಟಿಗೆ ಸಂಬಂಧಿಸಿದ ಧಾರವಾಡದ ಮನೆ ಮತ್ತು ಉಡುಪಿಯ ಬೈಂದೂರು ತಾಲೂಕಿನ ಸ್ವಗ್ರಾಮ ಉಪ್ಪುಂದದ ಮನೆ ಮೇಲೆ ರೇಡ್ ಆಗಿದೆ. ಇದನ್ನೂ ಓದಿ: ಡಿಕೆ ಶಿವಕುಮಾರ್ ಆಪ್ತನ ಮನೆ ಮೇಲೆ ಐಟಿ ದಾಳಿ