ಸೆಲೆಬ್ರಿಟಿಗಳ ವೈಯಕ್ತಿಕ ಜೀವನದ ಕುರಿತು ಭವಿಷ್ಯ ಹೇಳುತ್ತಾ ಆಗಾಗ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗುವ ಜ್ಯೋತಿಷಿ ವೇಣುಸ್ವಾಮಿ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಕನ್ನಡದ ‘ಗಿಲ್ಲಿ’ ನಟಿ ರಕುಲ್ ಪ್ರೀತ್ ಸಿಂಗ್ (Rakul Preet Singh) ದಾಂಪತ್ಯ ಬದುಕು ಮುರಿದು ಬೀಳಲಿದೆ ಎಂದು ಸೆಲೆಬ್ರಿಟಿ ಜ್ಯೋತಿಷಿ ಭವಿಷ್ಯ ನುಡಿದಿದ್ದಾರೆ. ಇದನ್ನೂ ಓದಿ:ದರ್ಶನ್ ನೋಡಲು ಪುತ್ರನ ಜೊತೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹಲವು ವರ್ಷಗಳು ಪ್ರೀತಿಸಿ ಇತ್ತೀಚೆಗೆ ನಿರ್ಮಾಪಕ ಜಾಕಿ ಭಗ್ನಾನಿ ಜೊತೆ ರಕುಲ್ ಮದುವೆಯಾದರು. ಖುಷಿಯಿಂದ ಜೀವನ ಸಾಗಿಸುತ್ತಿರುವ ಈ ಜೋಡಿಯ ಬಗ್ಗೆ ವೇಣುಸ್ವಾಮಿ ಸ್ಪೋಷಕ ಭವಿಷ್ಯ ಹೇಳಿದ್ದಾರೆ. ರಕುಲ್ ದಾಂಪತ್ಯದಲ್ಲಿ ಬಿರುಕು ಮೂಡಲಿದೆ. ಸಾಲದ ಕಾರಣ ಇಬ್ಬರೂ ಬೇರೆಯಾಗುತ್ತಾರೆ. ರಕುಲ್‌ಗೆ ಪತಿಯೇ ಡಿವೋರ್ಸ್ ನೀಡಲಿದ್ದಾರೆ ಎಂದು ಜ್ಯೋತಿಷಿ ಹೇಳಿದ್ದಾರೆ.
ಇತ್ತೀಚೆಗೆ ಶೋಭಿತಾ ಜೊತೆಗಿನ ನಾಗಚೈತನ್ಯ ನಿಶ್ಚಿತಾರ್ಥದ ಬಗ್ಗೆ ಮಾತನಾಡಿದರು. ಈ ಮದುವೆ ಕೂಡ ಹೆಚ್ಚು ದಿನ ಬಾಳಲ್ಲ ಎಂದಿದ್ದರು. ಅವರ ಹೇಳಿಕೆ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿತ್ತು. ಆ ಕೋಪದ ಕಾವು ಮಾಸುವ ಮುನ್ನವೇ ರಕುಲ್ ಬಗ್ಗೆ ಜ್ಯೋತಿಷಿ ಮಾತನಾಡಿರೋದು ಫ್ಯಾನ್ಸ್‌ಗೆ ಕೋಪ ತರಿಸಿದೆ.
ಅಂದಹಾಗೆ, ಕೆಲ ವರ್ಷಗಳ ಹಿಂದೆ ನಾಗಚೈತನ್ಯ ಜೊತೆ ಸಮಂತಾ (Samantha) ಮದುವೆ ಸಮದರ್ಭದಲ್ಲಿ, ಇವರ ದಾಂಪತ್ಯದಲ್ಲಿ ಬಿರುಕಾಗಲಿದೆ ಎಂದಿದ್ದರು. ಅದರಂತೆಯೇ ಆಯಿತು. 2021ರಲ್ಲಿ ಇಬ್ಬರೂ ಡಿವೋರ್ಸ್ ಘೋಷಿಸಿದ್ದರು.
ಬಾಲಿವುಡ್ ಬೆಡಗಿ ರಕುಲ್ ಪ್ರೀತ್ ಸಿಂಗ್ (Rakul Preet Singh) ಪತಿ ಜಾಕಿ ಭಗ್ನಾನಿಗೆ (Jackky Bhagnani) ಸಂಕಷ್ಟ ಎದುರಾಗಿದೆ. ಮದುವೆಯಾಗಿ ಜಾಕಿ ಮನೆಗೆ ಕಾಲಿಟ್ಟ ಬೆನ್ನಲ್ಲೇ ನಟಿಯ ಕುಟುಂಬಕ್ಕೆ ಆರ್ಥಿಕ ಸಂಕಷ್ಟ ಎದುರಾಗಿದೆ. ಒಂದಲ್ಲ, ಎರಡಲ್ಲ ಬರೋಬ್ಬರಿ 250 ಕೋಟಿ ರೂ. ಸಾಲದ ಸುಳಿಯಲ್ಲಿ ಭಗ್ನಾನಿ ಕುಟುಂಬ ಸಿಲುಕಿದ್ದಾರೆ. ಇದನ್ನೂ ಓದಿ:ಸಮಂತಾ ಜೊತೆ ಶಾರುಖ್ ಖಾನ್ ರೊಮ್ಯಾನ್ಸ್
ನಟಿ ರಕುಲ್ ಮಾವ ವಶು ಭಗ್ನಾನಿ ನೇತೃತ್ವದ ಪೂಜಾ ಎಂಟೈನ್‌ಮೆಂಟ್ ಸಂಸ್ಥೆ ಅಡಿ ಕಳೆದ 30 ವರ್ಷಗಳಿಂದ ಸಾಕಷ್ಟು ಸಿನಿಮಾಗಳನ್ನು ನಿರ್ಮಾಣ ಮಾಡುತ್ತಾ ಬಂದಿದೆ. ಸಾಕಷ್ಟು ಹಿಟ್ ಸಿನಿಮಾಗಳನ್ನು ಕೊಟ್ಟಿದೆ. ಆದರೆ ಇತ್ತೀಚೆಗೆ ನಿರ್ಮಾಣ ಮಾಡಿದ 2 ಸಿನಿಮಾಗಳಿಂದ ಭಗ್ನಾನಿ ಕುಟುಂಬಕ್ಕೆ ನಷ್ಟವಾಗಿದೆ.
ಕಳೆದ ವರ್ಷ ಅಕ್ಟೋಬರ್‌ನಲ್ಲಿ ತೆರೆಕಂಡ ‘ಗಣಪತ್’ ಸಿನಿಮಾವನ್ನು ವಿಕಾಸ್ ಬಹ್ಲ್ ನಿರ್ದೇಶನ ಮಾಡಿದ್ದರೆ, ಟೈಗರ್ ಶ್ರಾಫ್ ಇದರ ಹೀರೋ ಆಗಿದ್ದರು. ಅದರಲ್ಲಿ ಬಿಗ್ ಬಿ ಪ್ರಮುಖ ಪಾತ್ರ ಮಾಡಿದ್ದರು. 190 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿದ್ದ ಈ ಸಿನಿಮಾವು ಕಲೆಕ್ಷನ್ ಮಾಡಿದ್ದು 15+ ಕೋಟಿ ರೂ. ಮಾತ್ರ ಗಳಿಸಿದೆ.
ಪೂಜಾ ಎಂಟರ್‌ಟೇನ್‌ಮೆಂಟ್ ಸಂಸ್ಥೆ ಚೇತರಿಸಿಕೊಳ್ಳುವುದಕ್ಕೂ ಸಮಯ ನೀಡಲಿಲ್ಲ ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾ. ಇದರಲ್ಲಿ ಅಕ್ಷಯ್ ಕುಮಾರ್, ಟೈಗರ್ ಶ್ರಾಫ್ ನಟಿಸಿದ್ದರು. 300 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ ಈ ಸಿನಿಮಾ ಕೇವಲ 100 ಕೋಟಿ ರೂ. ಕಲೆಕ್ಷನ್ ಮಾಡೋದ್ರಲ್ಲಿ ಸೋಸಿತ್ತು. ಈ ಪರಿಣಾಮ, ಭಗ್ನಾನಿ ಕುಟುಂಬವು ಈಗ ಸಂಕಷ್ಟ ಎದುರಿಸುತ್ತಿದೆ.
ಅದಕ್ಕಾಗಿ ಪೂಜಾ ಎಂಟೈನ್‌ಮೆಂಟ್ ಸಂಸ್ಥೆಯ 7 ಅಂತಸ್ತಿನ ಕಚೇರಿಯನ್ನೇ ಮಾಡಲಾಗಿದೆ ಎನ್ನಲಾಗಿದೆ. ಇದಷ್ಟೇ ಅಲ್ಲ, 80% ಉದ್ಯೋಗಿಗಳನ್ನು ಮನೆಗೆ ಕಳುಹಿಸಲಾಗಿದೆ. ಇದುವರೆಗೂ ಮಾಡಿದ ಕೆಲಸಕ್ಕೆ 2 ತಿಂಗಳಿನಿಂದ ಉದ್ಯೋಗಿಗಳಿಗೆ ಸರಿಯಾದ ಸಂಬಳ ನೀಡಿಲ್ಲ. ಇದರಿಂದ ನೌಕರರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಗೆ ಹಾಕಿದ್ದಾರೆ. ಭಗ್ನಾನಿ ಕುಟುಂಬದ ವಿರುದ್ಧ ತಿರುಗಿ ಬಿದ್ದಿದ್ದಾರೆ.
ಬಾಲಿವುಡ್ ನಟಿ ರಕುಲ್ ಪ್ರೀತ್ ಸಿಂಗ್ (Rakul Preet Singh) ಮತ್ತು ಜಾಕಿ ಭಗ್ನಾನಿ ಫೆ.21ರಂದು ಗೋವಾದಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದಾರೆ. ಈ ಬೆನ್ನಲ್ಲೇ ರಕುಲ್ ದಂಪತಿಗೆ ಅಯೋಧ್ಯೆಯಿಂದ ಪ್ರಸಾದ ಸಿಕ್ಕಿದೆ. ಈ ಬಗ್ಗೆ ನಟಿ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಮದುವೆ ಸಂಭ್ರಮ ಮುಗಿಸಿ ಇದೀಗ ರಕುಲ್ ದಂಪತಿ, ಮುಂಬೈ ನಿವಾಸಕ್ಕೆ ಮರಳಿದ್ದಾರೆ. ಮನೆಗೆ ಬರುತ್ತಿದ್ದಂತೆ ಅಯೋಧ್ಯೆಯಿಂದ ರಕುಲ್‌ಗೆ ಪ್ರಸಾದ ಸಿಕ್ಕಿದೆ. ಈ ಬಗ್ಗೆ ನಟಿ ಸಾಮಾಜಿಕ ಜಾಲತಾಣದಲ್ಲಿ ಸಂತಸ ಹಂಚಿಕೊಂಡಿದ್ದಾರೆ. ನಮ್ಮ ಮದುವೆಯ ನಂತರ ಅಯೋಧ್ಯೆಯಿಂದ ಪ್ರಸಾದ ಸ್ವೀಕರಿಸುತ್ತಿರೋದು ನಮಗೆ ಸಿಕ್ಕ ಆಶೀರ್ವಾದ. ನಮ್ಮ ಮುಂದಿನ ಹೆಜ್ಜೆಗೆ ದೈವಿಕ ಆರಂಭ ಎಂದು ರಕುಲ್ ಬರೆದುಕೊಂಡಿದ್ದಾರೆ.
‘ನನ್ನದು ಮತ್ತು ಎಂದೆಂದಿಗೂ’ ಎಂದು ಅಡಿಬರಹ ನೀಡಿ ಪತಿ ಜೊತೆಗಿನ ಮದುವೆಯ ಸುಂದರ ಫೋಟೋಗಳನ್ನು ರಕುಲ್ ಶೇರ್ ಮಾಡಿದ್ದರು. ಕ್ರೀಮ್- ಗೋಲ್ಡನ್ ಉಡುಗೆಯಲ್ಲಿ ರಕುಲ್ ದಂಪತಿ ಮಿಂಚಿದ್ದರು. ಫೆ.21ರಂದು ಎರಡು ಸಂಪ್ರದಾಯದಂತೆ ವಿವಾಹ ಜರುಗಿತ್ತು. ಸಿಖ್ ಮತ್ತು ಸಿಂಧಿ ಶೈಲಿಯಲ್ಲಿ ರಕುಲ್- ಜಾಕಿ ಮದುವೆಯಾಗಿದ್ದಾರೆ. ಇದನ್ನೂ ಓದಿ:ಬೆಂಗಳೂರಿನ ರಸ್ತೆಬದಿಯಲ್ಲಿ ತಿಂಡಿ ಸವಿದ ಕಾರ್ತಿಕ್ ಆರ್ಯನ್
ರಕುಲ್ ಮದುವೆಯಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್, ಟೈಗರ್ ಶ್ರಾಫ್, ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ, ಅರ್ಜುನ್ ಕಪೂರ್ ಸೇರಿದಂತೆ ಅನೇಕರು ಭಾಗಿಯಾಗಿ ಶುಭಕೋರಿದ್ದರು.
ಇತ್ತೀಚೆಗಷ್ಟೇ 31ನೇ ವರ್ಷದ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಈ ವೇಳೆ ತಮ್ಮ ವೈಯಕ್ತಿಕ ಜೀವನದ ಕುರಿತಾಗಿ ಕೆಲವು ವಿಚಾರಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ತಮ್ಮ ಜನ್ಮದಿನವನ್ನು ಭರ್ಜರಿಯಾಗಿ ನಟಿ ರಕುಲ್ ಪ್ರೀತ್ ಸಿಂಗ್ ಸೆಲೆಬ್ರೇಟ್ ಮಾಡಿದ್ದರು.
ಈ ಸಮಯದಲ್ಲಿ ರಕುಲ್ ಅವರ ಬಾಯ್‌ಫ್ರೆಂಡ್ ನಟ- ನಿರ್ಮಾಪಕ ಜಾಕಿ ಭಗ್ನಾನಿ ಫೋಟೋ ಶೇರ್ ಮಾಡಿ, ನೀನಿಲ್ಲದೆ ದಿನಗಳು ಎಂದಿನಂತೆ ದಿನಗಳಾಗಿರುವುದಿಲ್ಲ. ನೀನಿಲ್ಲದೆ ಎಂಥಾ ರುಚಿಕರ ತಿನಿಸನ್ನೂ ಆಸ್ವಾದಿಸಲಾಗುವುದಿಲ್ಲ. ನನ್ನ ಪಾಲಿಗೆ ಜಗತ್ತೇ ಆಗಿರುವ ಪ್ರೀತಿಯ ಪ್ರಿಯತಮೆಗೆ ಹುಟ್ಟುಹಬ್ಬದ ಶುಭಾಶಯಗಳು. ನಿಮ್ಮ ಈ ದಿನ ನಿಮ್ಮಂತೆಯೇ ಸುಂದರವಾಗಿರಲಿ, ನಿಮ್ಮ ನಗುವಿನಂತೆಯೇ ಪ್ರಜ್ವಲಿಸಲಿ. ಹ್ಯಾಪಿ ಬರ್ತ್ಡೇ ಮೈ ಲವ್ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ಆಗಲೇ ಮದುವೆ ವಿಚಾರವನ್ನೂ ಅವರು ಪ್ರಸ್ತಾಪಿಸಿದ್ದರು. ಥ್ಯಾಂಕ್ಯು ಮೈ ಲವ್. ಈ ವರ್ಷ ನನಗೆ ಸಿಕ್ಕ ಅತ್ಯುತ್ತಮ ಉಡುಗೊರೆ ನೀವೇ. ನನ್ನ ಬದುಕಿಗೆ ಬಣ್ಣಗಳನ್ನು ತುಂಬಿದ ನಿಮಗೆ ಧನ್ಯವಾದಗಳು. ನನ್ನನ್ನ ಸದಾ ನಗುವಂತೆ ಮಾಡುವ ನಿಮಗೆ ಧನ್ಯವಾದಗಳು ಎಂದು ಜಾಕಿ ಭಗ್ನಾನಿ ಅವರನ್ನು ಉಲ್ಲೇಖಿಸಿ ಸೋಷಿಯಲ್ ಮೀಡಿಯಾದಲ್ಲಿ ರಕುಲ್ ಪ್ರೀತ್ ಸಿಂಗ್ ಬರೆದುಕೊಳ್ಳುವ ಮೂಲಕವಾಗಿ ತಮ್ಮ ಬಾಯ್‌ಫ್ರೆಂಡ್ ಕುರಿತಾಗಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.
ಸ್ಯಾಂಡಲ್‌ವುಡ್, ಬಾಲಿವುಡ್ ಸಿನಿಮಾಗಳಲ್ಲಿ ರಕುಲ್ ನಟಿಸಿದ್ದಾರೆ. ಕನ್ನಡದ ‘ಗಿಲ್ಲಿ’ (Gilli Kannada Film) ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ರಕುಲ್ ಕಿಕ್ 2, ಸರೈನೋಡು, ನಾನಕು ಪ್ರೇಮತೋ ಮುಂತಾದ ಹಿಟ್ ಚಿತ್ರಗಳಲ್ಲಿ ಅಭಿನಯಿಸುವ ಮೂಲಕವಾಗಿ ಅಪಾರ ಅಭಿಮಾನಿಗಳ ಪ್ರೀತಿಯನ್ನು ಸಂಪಾದಿಸಿದ್ದಾರೆ.
ಕನ್ನಡದ ‘ಗಿಲ್ಲಿ’ ನಟಿ ರಕುಲ್ ಪ್ರೀತ್ ಸಿಂಗ್ (Rakul Preet Singh) ಮತ್ತು ಜಾಕಿ ಭಗ್ನಾನಿ (Jackky Bhagnani) ಜೋಡಿ ಇದೇ ಫೆ.21ರಂದು ಗೋವಾದಲ್ಲಿ ಅದ್ಧೂರಿಯಾಗಿ ಮದುವೆಯಾದರು. 5 ವರ್ಷಗಳ ಡೇಟಿಂಗ್ ನಂತರ ಮದುವೆಯ ಮುದ್ರೆ ಒತ್ತಿದ್ದರು. ಇದೀಗ ಮದುವೆ ಬಳಿಕ ಮೊದಲ ಬಾರಿಗೆ ಕ್ಯಾಮೆರಾ ಕಣ್ಣಿಗೆ ರಕುಲ್ ದಂಪತಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ:ಬರಲಿದೆ ‘ಜೈಲರ್ ಪಾರ್ಟ್ 2’- ತಲೈವಾ ಫ್ಯಾನ್ಸ್‌ಗೆ ಗುಡ್ ನ್ಯೂಸ್
ಜಾಕಿ ಭಗ್ನಾನಿ ಸಹೋದರ ನಿಕ್ಕಿ ಜೊತೆ ನವಜೋಡಿ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ. ವಧು ರಕುಲ್ ಮಾಡ್ರನ್ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ. ಮದುವೆ ನಂತರ ಮೊದಲ ಬಾರಿಗೆ ಕ್ಯಾಮೆರಾ ಎದುರಿಗೆ ರಕುಲ್ ಜೋಡಿ ಬಂದಿದ್ದಾರೆ.
‘ನನ್ನದು ಮತ್ತು ಎಂದೆಂದಿಗೂ’ ಎಂದು ಅಡಿಬರಹ ನೀಡಿದ್ದು, ಪತಿ ಜೊತೆಗಿನ ಮದುವೆಯ ಸುಂದರ ಫೋಟೋಗಳನ್ನು ರಕುಲ್ ಶೇರ್ ಮಾಡಿದ್ದರು. ಕ್ರೀಮ್- ಗೋಲ್ಡನ್ ಉಡುಗೆಯಲ್ಲಿ ರಕುಲ್ ದಂಪತಿ ಮಿಂಚಿದ್ದಾರೆ. ನವಜೋಡಿಗೆ ಫ್ಯಾನ್ಸ್ ಶುಭಹಾರೈಸುತ್ತಿದ್ದಾರೆ.
ಎರಡು ಸಂಪ್ರದಾಯದಂತೆ ವಿವಾಹ ನಡೆದಿದೆ. ಸಿಖ್ ಮತ್ತು ಸಿಂಧಿ ಶೈಲಿಯಲ್ಲಿ ರಕುಲ್- ಜಾಕಿ ಮದುವೆಯಾಗಿದ್ದಾರೆ ಎನ್ನಲಾಗಿದೆ. ಮದುವೆಯ ಶಾಸ್ತ್ರವೆಲ್ಲ ಫೆ.19ರಿಂದಲೇ ಆರಂಭವಾಗಿತ್ತು. ಫೆ.21ರಂದು ಗುರುಹಿರಿಯರು ಮತ್ತು ಆಪ್ತರ ಸಮ್ಮುಖದಲ್ಲಿ ರಕುಲ್- ಜಾಕಿ ಜೋಡಿ ಮದುವೆಯಾಗಿದ್ದಾರೆ.
ಇತ್ತೀಚೆಗಷ್ಟೇ 31ನೇ ವರ್ಷದ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಈ ವೇಳೆ ತಮ್ಮ ವೈಯಕ್ತಿಕ ಜೀವನದ ಕುರಿತಾಗಿ ಕೆಲವು ವಿಚಾರಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ತಮ್ಮ ಜನ್ಮದಿನವನ್ನು ಭರ್ಜರಿಯಾಗಿ ನಟಿ ರಕುಲ್ ಪ್ರೀತ್ ಸಿಂಗ್ ಸೆಲೆಬ್ರೇಟ್ ಮಾಡಿದ್ದರು.
ಈ ಸಮಯದಲ್ಲಿ ರಕುಲ್ ಪ್ರೀತಿ ಸಿಂಗ್ ಅವರ ಬಾಯ್‌ಫ್ರೆಂಡ್ ನಟ- ನಿರ್ಮಾಪಕ ಜಾಕಿ ಭಗ್ನಾನಿ ಫೋಟೋ ಶೇರ್ ಮಾಡಿ, ನೀನಿಲ್ಲದೆ ದಿನಗಳು ಎಂದಿನಂತೆ ದಿನಗಳಾಗಿರುವುದಿಲ್ಲ. ನೀನಿಲ್ಲದೆ ಎಂಥಾ ರುಚಿಕರ ತಿನಿಸನ್ನೂ ಆಸ್ವಾದಿಸಲಾಗುವುದಿಲ್ಲ. ನನ್ನ ಪಾಲಿಗೆ ಜಗತ್ತೇ ಆಗಿರುವ ಪ್ರೀತಿಯ ಪ್ರಿಯತಮೆಗೆ ಹುಟ್ಟುಹಬ್ಬದ ಶುಭಾಶಯಗಳು. ನಿಮ್ಮ ಈ ದಿನ ನಿಮ್ಮಂತೆಯೇ ಸುಂದರವಾಗಿರಲಿ, ನಿಮ್ಮ ನಗುವಿನಂತೆಯೇ ಪ್ರಜ್ವಲಿಸಲಿ. ಹ್ಯಾಪಿ ಬರ್ತ್ಡೇ ಮೈ ಲವ್ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ಆಗಲೇ ಮದುವೆ ವಿಚಾರವನ್ನೂ ಅವರು ಪ್ರಸ್ತಾಪಿಸಿದ್ದರು. ಥ್ಯಾಂಕ್ಯು ಮೈ ಲವ್. ಈ ವರ್ಷ ನನಗೆ ಸಿಕ್ಕ ಅತ್ಯುತ್ತಮ ಉಡುಗೊರೆ ನೀವೇ. ನನ್ನ ಬದುಕಿಗೆ ಬಣ್ಣಗಳನ್ನು ತುಂಬಿದ ನಿಮಗೆ ಧನ್ಯವಾದಗಳು. ನನ್ನನ್ನ ಸದಾ ನಗುವಂತೆ ಮಾಡುವ ನಿಮಗೆ ಧನ್ಯವಾದಗಳು ಎಂದು ಜಾಕಿ ಭಗ್ನಾನಿ ಅವರನ್ನು ಉಲ್ಲೇಖಿಸಿ ಸೋಷಿಯಲ್ ಮೀಡಿಯಾದಲ್ಲಿ ರಕುಲ್ ಪ್ರೀತ್ ಸಿಂಗ್ ಬರೆದುಕೊಳ್ಳುವ ಮೂಲಕವಾಗಿ ತಮ್ಮ ಬಾಯ್‌ಫ್ರೆಂಡ್ ಕುರಿತಾಗಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.
ಸ್ಯಾಂಡಲ್‌ವುಡ್, ಬಾಲಿವುಡ್ ಸಿನಿಮಾಗಳಲ್ಲಿ ರಕುಲ್ ಪ್ರೀತಿ ಸಿಂಗ್ ನಟಿಸಿದ್ದಾರೆ. ಕನ್ನಡದ ‘ಗಿಲ್ಲಿ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ರಕುಲ್ ಕಿಕ್ 2, ಸರೈನೋಡು, ನಾನಕು ಪ್ರೇಮತೋ, ಸ್ಪೇಡರ್ ಮುಂತಾದ ಹಿಟ್ ಚಿತ್ರಗಳಲ್ಲಿ ಅಭಿನಯಿಸುವ ಮೂಲಕವಾಗಿ ಅಪಾರ ಅಭಿಮಾನಿಗಳ ಪ್ರೀತಿಯನ್ನು ಸಂಪಾದಿಸಿದ್ದಾರೆ.
ಕನ್ನಡದ ‘ಗಿಲ್ಲಿ’ ನಟಿ ರಾಕುಲ್ ಪ್ರೀತ್ ಸಿಂಗ್ (Rakul Preet Singh) ಅವರು ಬಹುಕಾಲದ ಗೆಳೆಯ ಜಾಕಿ ಭಗ್ನಾನಿ (Jackky Bhagnani) ಜೊತೆ ಹೊಸ ಬಾಳಿಗೆ (Wedding) ಕಾಲಿಟ್ಟಿದ್ದಾರೆ. ಗೋವಾದಲ್ಲಿ ರಾಕುಲ್ ದಂಪತಿ ಅದ್ಧೂರಿಯಾಗಿ ಮದುವೆಯಾಗಿದ್ದಾರೆ.
‘ನನ್ನದು ಮತ್ತು ಎಂದೆಂದಿಗೂ’ ಎಂದು ಅಡಿಬರಹ ನೀಡಿದ್ದು, ಪತಿ ಜೊತೆಗಿನ ಮದುವೆಯ ಸುಂದರ ಫೋಟೋಗಳನ್ನು ರಾಕುಲ್ ಶೇರ್ ಮಾಡಿದ್ದಾರೆ. ಕ್ರೀಮ್- ಗೋಲ್ಡನ್ ಉಡುಗೆಯಲ್ಲಿ ರಾಕುಲ್ ದಂಪತಿ ಮಿಂಚಿದ್ದಾರೆ. ನವಜೋಡಿಗೆ ಫ್ಯಾನ್ಸ್ ಶುಭಹಾರೈಸುತ್ತಿದ್ದಾರೆ.
ಎರಡು ಸಂಪ್ರದಾಯದಂತೆ ವಿವಾಹ ನಡೆದಿದೆ. ಸಿಖ್ ಮತ್ತು ಸಿಂಧಿ ಶೈಲಿಯಲ್ಲಿ ರಾಕುಲ್- ಜಾಕಿ ಮದುವೆಯಾಗಿದ್ದಾರೆ ಎನ್ನಲಾಗಿದೆ. ಮದುವೆಯ ಶಾಸ್ತ್ರವೆಲ್ಲ ಫೆ.19ರಿಂದಲೇ ಆರಂಭವಾಗಿತ್ತು. ಫೆ.21ರಂದು ಗುರುಹಿರಿಯರು ಮತ್ತು ಆಪ್ತರ ಸಮ್ಮುಖದಲ್ಲಿ ರಾಕುಲ್- ಜಾಕಿ ಜೋಡಿ ಮದುವೆಯಾಗಿದ್ದಾರೆ.
ರಾಕುಲ್ ಮದುವೆಯಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್, ಟೈಗರ್ ಶ್ರಾಫ್, ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ, ಅರ್ಜುನ್ ಕಪೂರ್ ಸೇರಿದಂತೆ ಅನೇಕರು ಭಾಗಿಯಾಗಿ ಶುಭಕೋರಿದ್ದಾರೆ. ಇದನ್ನೂ ಓದಿ:ಧನುಷ್ ನಿರ್ದೇಶಿಸಿ, ನಟಿಸುತ್ತಿರುವ ಚಿತ್ರದ ಟೈಟಲ್ ಫಿಕ್ಸ್
ಇತ್ತೀಚೆಗಷ್ಟೇ 31ನೇ ವರ್ಷದ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಈ ವೇಳೆ ತಮ್ಮ ವೈಯಕ್ತಿಕ ಜೀವನದ ಕುರಿತಾಗಿ ಕೆಲವು ವಿಚಾರಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ತಮ್ಮ ಜನ್ಮದಿನವನ್ನು ಭರ್ಜರಿಯಾಗಿ ನಟಿ ರಾಕುಲ್ ಪ್ರೀತ್ ಸಿಂಗ್ ಸೆಲೆಬ್ರೇಟ್ ಮಾಡಿದ್ದರು.
ಈ ಸಮಯದಲ್ಲಿ ರಾಕುಲ್ ಪ್ರೀತಿ ಸಿಂಗ್ ಅವರ ಬಾಯ್‌ಫ್ರೆಂಡ್ ನಟ- ನಿರ್ಮಾಪಕ ಜಾಕಿ ಭಗ್ನಾನಿ ಫೋಟೋ ಶೇರ್ ಮಾಡಿ, ನೀನಿಲ್ಲದೆ ದಿನಗಳು ಎಂದಿನಂತೆ ದಿನಗಳಾಗಿರುವುದಿಲ್ಲ. ನೀನಿಲ್ಲದೆ ಎಂಥಾ ರುಚಿಕರ ತಿನಿಸನ್ನೂ ಆಸ್ವಾದಿಸಲಾಗುವುದಿಲ್ಲ. ನನ್ನ ಪಾಲಿಗೆ ಜಗತ್ತೇ ಆಗಿರುವ ಪ್ರೀತಿಯ ಪ್ರಿಯತಮೆಗೆ ಹುಟ್ಟುಹಬ್ಬದ ಶುಭಾಶಯಗಳು. ನಿಮ್ಮ ಈ ದಿನ ನಿಮ್ಮಂತೆಯೇ ಸುಂದರವಾಗಿರಲಿ, ನಿಮ್ಮ ನಗುವಿನಂತೆಯೇ ಪ್ರಜ್ವಲಿಸಲಿ. ಹ್ಯಾಪಿ ಬರ್ತ್ಡೇ ಮೈ ಲವ್ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ಆಗಲೇ ಮದುವೆ ವಿಚಾರವನ್ನೂ ಅವರು ಪ್ರಸ್ತಾಪಿಸಿದ್ದರು. ಥ್ಯಾಂಕ್ಯು ಮೈ ಲವ್. ಈ ವರ್ಷ ನನಗೆ ಸಿಕ್ಕ ಅತ್ಯುತ್ತಮ ಉಡುಗೊರೆ ನೀವೇ. ನನ್ನ ಬದುಕಿಗೆ ಬಣ್ಣಗಳನ್ನು ತುಂಬಿದ ನಿಮಗೆ ಧನ್ಯವಾದಗಳು. ನನ್ನನ್ನ ಸದಾ ನಗುವಂತೆ ಮಾಡುವ ನಿಮಗೆ ಧನ್ಯವಾದಗಳು ಎಂದು ಜಾಕಿ ಭಗ್ನಾನಿ ಅವರನ್ನು ಉಲ್ಲೇಖಿಸಿ ಸೋಷಿಯಲ್ ಮೀಡಿಯಾದಲ್ಲಿ ರಾಕುಲ್ ಪ್ರೀತ್ ಸಿಂಗ್ ಬರೆದುಕೊಳ್ಳುವ ಮೂಲಕವಾಗಿ ತಮ್ಮ ಬಾಯ್‌ಫ್ರೆಂಡ್ ಕುರಿತಾಗಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.
ಸ್ಯಾಂಡಲ್‌ವುಡ್, ಬಾಲಿವುಡ್ ಸಿನಿಮಾಗಳಲ್ಲಿ ರಾಕುಲ್ ಪ್ರೀತಿ ಸಿಂಗ್ ನಟಿಸಿದ್ದಾರೆ. ಕನ್ನಡದ ಗಿಲ್ಲಿ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ರಾಕುಲ್ ಕಿಕ್ 2, ಸರೈನೋಡು, ನಾನಕು ಪ್ರೇಮತೋ, ಸ್ಪೇಡರ್ ಮುಂತಾದ ಹಿಟ್ ಚಿತ್ರಗಳಲ್ಲಿ ಅಭಿನಯಿಸುವ ಮೂಲಕವಾಗಿ ಅಪಾರ ಅಭಿಮಾನಿಗಳ ಪ್ರೀತಿಯನ್ನು ಸಂಪಾದಿಸಿದ್ದಾರೆ.
ಕನ್ನಡದ ‘ಗಿಲ್ಲಿ’ (Gilli Kannada Film) ನಾಯಕಿ ರಾಕುಲ್ ಪ್ರೀತ್ ಸಿಂಗ್ (Rakul Preet Singh) ತಮ್ಮ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಬಾಲಿವುಡ್ ನಿರ್ಮಾಪಕ ಜಾಕಿ ಭಗ್ನಾನಿ (Jackky Bhagnani) ಜೊತೆ ಮದುವೆಗೆ (Wedding) ರಾಕುಲ್ ಸಜ್ಜಾಗಿದ್ದಾರೆ. ಅದಷ್ಟೇ ಅಲ್ಲ, ಮದುವೆಗೆ ಡೇಟ್ ಕೂಡ ಫಿಕ್ಸ್ ಆಗಿದೆ.
ನಟಿ ರಾಕುಲ್ ಅವರು ಬಹುಕಾಲದ ಗೆಳೆಯ ಜಾಕಿ ಭಗ್ನಾನಿ ಜೊತೆ ಫೆಬ್ರವರಿ 22ರಂದು ಮದುವೆಗೆ ಪ್ಲ್ಯಾನ್ ಮಾಡಿದ್ದಾರೆ. ಗೋವಾದಲ್ಲಿ ಅದ್ದೂರಿಯಾಗಿ ಮದುವೆಯಾಗಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ.
ಸದ್ಯ ರಾಕುಲ್ ಅವರು ಬಾಯ್‌ಫ್ರೆಂಡ್ ಜಾಕಿ ಜೊತೆ ವಿದೇಶದಲ್ಲಿದ್ದಾರೆ ಎನ್ನಲಾಗುತ್ತಿದೆ. ಹೊಸ ವರ್ಷದ ಆಚರಣೆಯ ಸಂಭ್ರಮದಲ್ಲಿದ್ದಾರೆ.
ಕನ್ನಡದ `ಗಿಲ್ಲಿ’ (Gilli Kannada Film) ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ನಟಿ ರಾಕುಲ್ ಪ್ರೀತ್ ಸಿಂಗ್ (Rakul Preet Singh) ಈಗ ಸೌತ್ ಮತ್ತು ಬಾಲಿವುಡ್ ಚಿತ್ರಗಳಲ್ಲಿ ಮಿಂಚ್ತಿದ್ದಾರೆ. ಇದೀಗ ತಮ್ಮ ಸತತ ಸಿನಿಮಾಗಳ ಸೋಲಿನ ಬಗ್ಗೆ ನಟಿ ಮೌನ ಮುರಿದಿದ್ದಾರೆ. ಇದನ್ನೂ ಓದಿ:`ಸಿಟಾಡೆಲ್’ ಫಸ್ಟ್ ಲುಕ್ ಔಟ್: ಆ್ಯಕ್ಷನ್ ಅವತಾರದಲ್ಲಿ ಪ್ರಿಯಾಂಕಾ ಚೋಪ್ರಾ
ರಾಕುಲ್ (Actress Rakul) ನಟನೆಯ ಅಟ್ಯಾಕ್, ರನ್‌ವೇ 34, ಕಟ್‌ಪುಟ್ಲಿ, ಡಾಕ್ಟರ್ ಜೀ, ಥ್ಯಾಂಕ್ ಗಾಡ್ ಸೇರಿದಂತೆ ಅನೇಕ ಸಿನಿಮಾಗಳು ರಿಲೀಸ್ ಆಗಿವೆ. ಆದರೆ ಯಾವುದೇ ಸಿನಿಮಾಗಳು ಹಿಟ್ ಆಗಿಲ್ಲ. ತಮ್ಮ ಸಾಲು ಸಾಲು ಸಿನಿಮಾಗಳ ಸೋಲಿನ ಬಗ್ಗೆ ಇತ್ತೀಚೆಗಷ್ಟೆ ಸಂದರ್ಶನದಲ್ಲಿ ಮಾತನಾಡಿದ ರಾಕುಲ್ ಪ್ರೀತ್ ಸಿಂಗ್ ಅನೇಕ ವಿಚಾರಗಳನ್ನು ಬಹಿರಂಗಪಡಿಸಿದ್ದಾರೆ. ಇಂಡಸ್ಟ್ರಿಯಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳುವಲ್ಲಿ ಬಾಕ್ಸಾಫೀಸ್ ಸಂಖ್ಯೆ ಎಷ್ಟು ಪ್ರಮುಖವಾಗುತ್ತದೆ ಎಂದು ನಿರೂಪಕಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾಕುಲ್, ಜನರ ಬಳಿ ಹಣವಿಲ್ಲ ಎಂದು ಹೇಳಿದ್ದಾರೆ. ಹಣವಿಲ್ಲದ ಕಾರಣ ಜನರು ತಿಂಗಳಿಗೆ ಒಂದು ಸಿನಿಮಾವನ್ನು ಮಾತ್ರ ಆಯ್ಕೆ ಮಾಡುತ್ತಾರೆ ಎಂದು ಹೇಳಿದ್ದಾರೆ.
ಪ್ರೇಕ್ಷಕರ ಪ್ರೀತಿಯೇ ಮುಖ್ಯ ಎಂದಿರುವ ರಾಕುಲ್ ಬಾಕ್ಸಾಫೀಸ್ ಸಂಖ್ಯೆ ಅಥವಾ ಜಡ್ಜಮೆಂಟ್ ಅಲ್ಲ ಎಂದು ಹೇಳಿದ್ದಾರೆ. ಜೊತೆಗೆ ಸೌತ್ ಸಿನಿಮಾಗಳ ಬಾಲಿವುಡ್‌ನಲ್ಲಿ ಸಕ್ಸಸ್ ಕಾಣುತ್ತಿರುವ ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಾದೇಶಿಕ ಮತ್ತು ಬಾಲಿವುಡ್ ಸಿನಿಮಾಗಳು ಎಲ್ಲವೂ ಭಾರತದ ಸಿನಿಮಾಗಳಾಗಿದೆ. ಚಿತ್ರವು ಉತ್ತಮವಾಗಿದ್ದರೆ ಅದು ಭಾಷೆಯ ಹೊರತಾಗಿ ತನ್ನ ಪ್ರೇಕ್ಷಕರನ್ನು ಕಂಡುಕೊಳ್ಳುತ್ತದೆ ಎಂದು ರಾಕುಲ್ ಮಾತನಾಡಿದ್ದಾರೆ.
ಇನ್ನೂ ನಿರ್ಮಾಪಕ ಜಾಕಿ ಭಗ್ನಾನಿ (Producer Jackky Bhagnani) ಜೊತೆ ರಾಕುಲ್ ಅವರು ಸಾಕಷ್ಟು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ. ಚಿತ್ರರಂಗದ ನಟ-ನಟಿಯರು ಇದೀಗ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ಶುಭ ವೇಳೆಯಲ್ಲಿ ಜಾಕಿ-ರಾಕುಲ್ ಜೋಡಿ ಕೂಡ ಮದುವೆಯ ಬಗ್ಗೆ ಸಿಹಿಸುದ್ದಿ ಕೊಡುತ್ತಾರಾ ಎಂಬುದನ್ನ ಕಾದುನೋಡಬೇಕಿದೆ.
ನಟಿ ಕಿಯಾರಾ-ಸಿದ್ (Kiara-Siddarth) ಮದುವೆಯ ಬೆನ್ನಲ್ಲೇ ಬಾಲಿವುಡ್‌ನ ಮತ್ತೊಂದು ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡಲು ರೆಡಿಯಾಗಿದ್ದಾರೆ. ಕನ್ನಡದ `ಗಿಲ್ಲಿ’ (Gilli Film) ಸಿನಿಮಾದ ನಟಿ ರಾಕುಲ್ ಸಿಂಗ್ ಪ್ರೀತ್ ಬಹುಕಾಲದ ಗೆಳೆಯನ ಜೊತೆ ಹೊಸ ಬಾಳಿಗೆ ಕಾಲಿಡಲು ರೆಡಿಯಾಗಿದ್ದಾರೆ.
ಚಿತ್ರರಂಗದಲ್ಲಿ ಗಟ್ಟಿವೇಳದ ಸೌಂಡ್ ಜೋರಾಗಿದೆ. ಅಥಿಯಾ ಶೆಟ್ಟಿ (Athiya Shetty) ಜೋಡಿ ನಂತರ ಸಿದ್-ಕಿಯಾರಾ ಮದುವೆಯಾಗುವ ಮೂಲಕ ಸಿಹಿ ಸುದ್ದಿ ನೀಡಿದ್ದರು. ಈಗ ಅದೇ ಹಾದಿಯಲ್ಲಿ ಬಹುಭಾಷಾ ನಟಿ ರಾಕುಲ್ ಪ್ರೀತ್ ಸಿಂಗ್ ಕೂಡ ಇದ್ದಾರೆ.
ಬಾಲಿವುಡ್‌ನ (Bollywood) ಯುವ ನಿರ್ಮಾಪಕ ಜಾಕಿ ಭಗ್ನಾನಿ(Jackky Bhagnani)- ರಾಕುಲ್ ಹಲವು ವರ್ಷಗಳಿಂದ ಡೇಟಿಂಗ್ ಮಾಡ್ತಿದ್ದಾರೆ. ಇತ್ತೀಚಿಗೆ ಗೆಳೆಯ ಜಾಕಿ ಬರ್ತಡೇ ಕೂಡ ರಾಕುಲ್ ಅದ್ದೂರಿಯಾಗಿ ಮುಂಬೈ ರೆಸಾರ್ಟ್‌ವೊಂದರಲ್ಲಿ ಆಚರಿಸಿದ್ದರು. ಇದನ್ನೂ ಓದಿ: ಬೆಡ್‌ರೂಮ್‌ನಿಂದಲೇ ವ್ಯಾಲೆಂಟೈನ್ ಸೀಕ್ರೆಟ್ ರಿವೀಲ್ ಮಾಡಿದ ರಶ್ಮಿಕಾ ಮಂದಣ್ಣ
ಈಗ ಸಿದ್-ಕಿಯಾರಾ ಮದುವೆಯ ಬೆನ್ನಲ್ಲೇ ಜಾಕಿ ಭಗ್ನಾನಿ-ರಾಕುಲ್ ಮದುವೆಯ (Wedding) ಸುದ್ದಿ ಮುಂಚೂಣಿಯಲ್ಲಿದೆ. ಮದುವೆಗೆ ತೆರೆಮರೆಯಲ್ಲಿ ಸಕಲ ಸಿದ್ಧತೆ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ ಅಷ್ಟಕ್ಕೂ ಈ ಸುದ್ದಿ ನಿಜಾನಾ ಎಂಬುದನ್ನ ಕಾದುನೋಡಬೇಕಿದೆ.
Live Tv
[brid partner=56869869 player=32851 video=960834 autoplay=true]
ಬಾಲಿವುಡ್ (Bollywood) ರಾಕುಲ್ ಪ್ರೀತ್ ಸಿಂಗ್ (Rakul Preet Singh) ತಮ್ಮ ಬಾಯ್‌ಫ್ರೆಂಡ್ ಜಾಕಿ ಭಗ್ನಾನಿ (Jackky Bhagnani) ಹುಟ್ಟುಹಬ್ಬಕ್ಕೆ ಶುಭಹಾರೈಸಿದ್ದಾರೆ. ನಟಿಯ ಸ್ಪೆಷಲ್ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ.
ರಾಕುಲ್ ಪ್ರೀತ್ ಸಿಂಗ್ ಡ್ರಗ್ಸ್ (Drugs) ವಿಚಾರವಾಗಿ ಇತ್ತೀಚೆಗೆ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದರು. ಈ ಬೆನ್ನಲ್ಲೇ ಬಾಯ್‌ಫ್ರೆಂಡ್ ಜಾಕಿ ಭಗ್ನಾನಿ ಬರ್ತ್‌ಡೇಗೆ ಸ್ಪೆಷಲ್ ಆಗಿ ಶುಭಹಾರೈಸಿದ್ದಾರೆ. ಈ ಮೂಲಕ ಇಬ್ಬರ ಡೇಟಿಂಗ್ ವಿಷ್ಯಕ್ಕೆ ಅಂತ್ಯ ಬಿದ್ದಿದೆ. ರೊಮ್ಯಾಂಟಿಕ್ ಫೋಟೋ ಶೇರ್ ಮಾಡಿ ವಿಶ್ ಮಾಡಿದ್ದಾರೆ. ಕ್ರಿಸ್‌ಮಸ್ ಹಬ್ಬದ ಜೊತೆ ಜಾಕಿ ಬರ್ತ್‌ಡೇಗೆ ಕೂಡ ಗ್ರ್ಯಾಂಡ್ ಆಗಿ ಸೆಲೆಬ್ರೇಟ್ ಮಾಡಿದ್ದಾರೆ.
ಸಾಂತಾ ನನಗೆ ಜೀವನಕ್ಕೆ ಉತ್ತಮವಾದ ಉಡುಗೊರೆಯನ್ನು ಕೊಟ್ಟಿದ್ದಾರೆ. ಹ್ಯಾಪಿ ಬರ್ತ್ಡೇ ಮೈ ಲವ್, ನನ್ನ ಜೀವನವನ್ನು ತುಂಬಾ ಸಂತೋಷದಿಂದ ಮತ್ತು ಶಾಂತಿಯಿಂದ ತುಂಬಿದ್ದಕ್ಕಾಗಿ ಧನ್ಯವಾದಗಳು. ನೀವು ಬಯಸುವ ಎಲ್ಲವನ್ನೂ ಜಯಿಸಬೇಕೆಂದು ನಾನು ಬಯಸುತ್ತೇನೆ. ಯಾವಾಗಲೂ ನಗುತ್ತೀರಿ ಎಂದು ಪ್ರಿಯಕರ ಜಾಕಿ ಭಗ್ನಾನಿ ನಟಿ ರಾಕುಲ್ ಪೋಸ್ಟ್ ಮಾಡಿದ್ದಾರೆ. ಈ ಮೂಲಕ ತಮ್ಮ ಪ್ರೀತಿಯ ವಿಚಾರವನ್ನು ಅಧಿಕೃತವಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಅಟಲ್ ಬಿಹಾರಿ ವಾಜಪೇಯಿ ರೋಲ್‌ನಲ್ಲಿ ಪಂಕಜ್ ತ್ರಿಪಾಠಿ: ಫಸ್ಟ್ ಲುಕ್ ಔಟ್