Tag: Jacqueline Fernandes

  • ಜೈಲಿನಿಂದ ಜಾಕ್ವೆಲಿನ್ ಗೆ ಪತ್ರ ಬರೆದಿಲ್ಲ: ಉಲ್ಟಾ ಹೊಡೆದ ಸುಕೇಶ್

    ಜೈಲಿನಿಂದ ಜಾಕ್ವೆಲಿನ್ ಗೆ ಪತ್ರ ಬರೆದಿಲ್ಲ: ಉಲ್ಟಾ ಹೊಡೆದ ಸುಕೇಶ್

    ಹುಕೋಟಿ ವಂಚನೆ ಆರೋಪಿ ಸುಕೇಶ್ ಚಂದ್ರಶೇಖರ್ ತಮಗೆ ಜೈಲಿನಿಂದ ಪತ್ರ ಹಾಗೂ ವಾಟ್ಸಪ್ ಸಂದೇಶ ಕಳುಹಿಸುತ್ತಿದ್ದಾನೆ ಎಂದು ಖ್ಯಾತ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಆರೋಪ ಮಾಡಿದ್ದರು. ಈ ಕುರಿತಂತೆ ಕೋರ್ಟಿಗೆ ಮೊರೆ ಹೋಗುವುದಾಗಿ ತಿಳಿಸಿದ್ದರೆ. ಈ ಘಟನೆಯ ಬೆನ್ನಲ್ಲೇ ಸುಕೇಶ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ತಾವು ಯಾವುದೇ ಕಾರಣಕ್ಕೂ ಪತ್ರವನ್ನು ಮತ್ತು ಸಂದೇಶವನ್ನು ಕಳುಹಿಸಿಲ್ಲ. ಯಾರೂ ಈ ಕೃತ್ಯ ಮಾಡುತ್ತಿದ್ದಾರೆ. ನಾನು ಈ ಕುರಿತಂತೆ ಯಾವುದೇ ತನಿಖೆಗೆ ಸಿದ್ಧ ಎಂದು ಹೇಳಿದ್ದಾರೆ.

    ಸುಕೇಶ್ ಚಂದ್ರಶೇಖರ್ ಜೈಲಿನಿಂದಲೇ (Jail) ತಮಗೆ ಬೆದರಿಕೆ ಹಾಕುತ್ತಿದ್ದಾನೆ ಎಂದು ಜಾಕ್ವೆಲಿನ್ ಆರೋಪ ಮಾಡಿದ್ದರು. ಜೈಲಿನಿಂದ ಪ್ರೇಮ ಪತ್ರ ಕಳುಹಿಸುತ್ತಿದ್ದರು, ಇದೀಗ ಬೆದರಿಕೆಯ ಪತ್ರ ಬರೆಯುತ್ತಿದ್ದಾರೆ ಎಂದು ಆರೋಪ ಮಾಡಿದ್ದರು. ಈ ಕುರಿತಂತೆ ಸುಕೇಶ್ ತನ್ನ ವಿರುದ್ಧ ಕ್ರಮಕ್ಕೆ ಮುಂದಾದರೆ, ನಿನ್ನ ಬಣ್ಣ ಬಯಲು ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಹೇಳಿದ್ದರು.

    ಅಷ್ಟಕ್ಕೂ ಸುಕೇಶ್ ಇಷ್ಟೊಂದು ಗರಂ ಆಗೋಕೆ ಕಾರಣ, ಜಾಕ್ವೆಲಿನ್ ಕಾನೂನು ಕ್ರಮಕ್ಕೆ ಮುಂದಾಗಿರೋದು. ಮೊನ್ನೆಯಷ್ಟೇ ಬಹುಕೋಟಿ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ಮೇಲಿನ ಮೊಕದ್ದಮೆಯನ್ನು ಹಿಂಪಡೆಯಬೇಕು ಎಂದು ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಕೋರ್ಟ್ ಮೆಟ್ಟಿಲು ಏರಿದ್ದರು. ಸುಕೇಶ್ ಚಂದ್ರಶೇಖರ್ (Sukesh Chandrasekhar) ಮಾಡಿದ್ದಾರೆ ಎನ್ನಲಾದ ಬಹುಕೋಟಿ ವಂಚನೆ ಪ್ರಕರಣಕ್ಕೂ ತಮಗೂ ಸಂಬಂಧವಿಲ್ಲ ಎಂದು ಅವರು ಹೇಳಿಕೊಂಡಿದ್ದರು. ಇದೀಗ ಸುಕೇಶ್ ವಿರುದ್ಧ ಮತ್ತೆ ಜಾಕ್ವೆಲಿನ್ ಕೋರ್ಟ್ ಮೆಟ್ಟಿಲು ಏರುತ್ತಿದ್ದಾರೆ.

    ಜಾಕ್ವೆಲಿನ್ ಗೆ ಸಂಬಂಧಿಸಿದಂತೆ ಸುಕೇಶ್ ತಿಂಗಳಿಗೊಂದಾದರೂ ಮಾಧ್ಯಮ ಹೇಳಿಕೆಯನ್ನು ನೀಡುತ್ತಿದ್ದಾನೆ. ಇನ್ನೂ ಜಾಕ್ವೆಲಿನ್ ಅನ್ನು ಪ್ರೀತಿಸುತ್ತಿರುವುದಾಗಿ ಸುಕೇಶ್ ಹೇಳಿಕೊಂಡಿದ್ದಾರೆ. ಹುಟ್ಟು ಹಬ್ಬಕ್ಕೆ, ಹಬ್ಬ ಹರಿದಿನಗಳಿಗೆ ಪ್ರೇಮ ಸಂದೇಶವನ್ನು ಕಳುಹಿಸುತ್ತಲೇ ಇದ್ದಾನೆ. ಇದನ್ನು ತಡೆಗಟ್ಟಬೇಕು ಎಂದು ನಟಿ ಕೋರ್ಟಿಗೆ ಮನವಿ ಮಾಡಿಕೊಂಡಿದ್ದಾರೆ.

     

    ಮಾಧ್ಯಮಗಳಿಗೆ ತಮ್ಮ ಬಗ್ಗೆ ಯಾವುದೇ ಹೇಳಿಕೆಯನ್ನು ಸುಕೇಶ್ ನೀಡದಂತೆ ಆದೇಶ ನೀಡಬೇಕು ಎಂದು ಜಾಕ್ವೆಲಿನ್ ಮನವಿ ಮಾಡಿದ್ದಾರೆ. ಈ ಮೂಲಕ ಸುಕೇಶ್ ಗೂ ತಮಗೂ ಯಾವುದೇ ಸಂಬಂಧವಿಲ್ಲ ಎನ್ನುವುದನ್ನು ಸಾಬೀತು ಪಡಿಸುವ ಯತ್ನಕ್ಕೆ ಜಾಕ್ವೆಲಿನ್ ಕೈ ಹಾಕಿದ್ದಾರೆ.

  • ಆಸ್ಕರ್ ಪಾರ್ಟಿಯಲ್ಲಿ ಕಂಗೊಳಿಸಿದ ರಾ ರಾ ರಕ್ಕಮ್ಮ

    ಆಸ್ಕರ್ ಪಾರ್ಟಿಯಲ್ಲಿ ಕಂಗೊಳಿಸಿದ ರಾ ರಾ ರಕ್ಕಮ್ಮ

    ಬಾಲಿವುಡ್ (Bollywood) ಬ್ಯೂಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಅವರು ಫ್ಯಾಷನ್‌ಗೆ ಹೆಚ್ಚು ಒತ್ತು ಕೊಡುವ ನಟಿ. ಆಗಾಗ ಬಗೆ ಬಗೆಯ ಲುಕ್‌ನಿಂದ ಪಡ್ಡೆಹುಡುಗರ ಹಾರ್ಟ್ ಬೀಟ್ ಏರಿಸುತ್ತಿರುತ್ತಾರೆ. ಇದೀಗ ಆಸ್ಕರ್ ಪಾರ್ಟಿಯಲ್ಲಿ (Oscar Party) ಜಾಕ್ವೆಲಿನ್ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.

    ಕಿಚ್ಚ ಸುದೀಪ್ ಜೊತೆ ರಕ್ಕಮ್ಮಳಾಗಿ ಹೆಜ್ಜೆ ಹಾಕಿ ಗಮನ ಸೆಳೆದ ಜಾಕ್ವೆಲಿನ್ ಬಾಲಿವುಡ್‌ನ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈಗ ತನ್ನ ನಯಾ ಲುಕ್‌ನಿಂದ ಪಡ್ಡೆಹುಡುಗರ ನಿದ್ದೆ ಕದ್ದಿದ್ದಾರೆ. ಇದನ್ನೂ ಓದಿ:ಹಾಲಿವುಡ್ ಎಂಟ್ರಿ ಬಗ್ಗೆ ಶಾರುಖ್‌ಗೆ ತಿರುಗೇಟು ಕೊಟ್ಟ ಪ್ರಿಯಾಂಕಾ ಚೋಪ್ರಾ

    ಕನ್ನಡದ ರಾ ರಾ ರಕ್ಕಮ್ಮ ಈಗ ಆಸ್ಕರ್ (Oscars 2023) ಅಂಗಳದಲ್ಲಿ ದರ್ಬಾರ್ ಶುರು ಮಾಡಿದ್ದಾರೆ. ಕಪ್ಪು ಬಣ್ಣ ಮಾಡ್ರನ್ ಡ್ರೆಸ್ ತೊಟ್ಟು ಜಾಕ್ವೆಲಿನ್ ಕಂಗೊಳಿಸಿದ್ದಾರೆ. ರಕ್ಕಮ್ಮಳ ನೋಟ ಮತ್ತು ಮೈ ಮಾಟಕ್ಕೆ ಪಡ್ಡೆ ಹೈಕ್ಳು ಬೋಲ್ಡ್ ಆಗಿದ್ದಾರೆ. ಈ ಸದ್ಯ ಜಾಕ್ವೆಲಿನ್ ಹೊಸ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

  • ಬಹುಕೋಟಿ ವಂಚನೆ ಪ್ರಕರಣ : ನಟಿ ಜಾಕ್ವೇಲಿನ್ ಫರ್ನಾಂಡಿಸ್ ಗೆ ಷರತ್ತುಬದ್ಧ ಜಾಮೀನು

    ಬಹುಕೋಟಿ ವಂಚನೆ ಪ್ರಕರಣ : ನಟಿ ಜಾಕ್ವೇಲಿನ್ ಫರ್ನಾಂಡಿಸ್ ಗೆ ಷರತ್ತುಬದ್ಧ ಜಾಮೀನು

    ನ್ನಡವೂ ಸೇರಿದಂತೆ ಬಾಲಿವುಡ್ ನ ಹಲವು ಸಿನಿಮಾಗಳಲ್ಲಿ ನಟಿಸಿರುವ ಜಾಕ್ವೇಲಿನ್ ಫರ್ನಾಂಡಿಸ್ (Jacqueline Fernandes) ಅವರಿಗೆ ಕೊನೆಗೂ ಜಾಮೀನು ಸಿಕ್ಕಿದೆ.

    2 ಲಕ್ಷ ರೂಪಾಯಿ ಮೌಲ್ಯದ ವೈಯಕ್ತಿಕ ಬಾಂಡ್ ಹಾಗೂ ಒಬ್ಬರ ಶ್ಯೂರಿಟಿ ನೀಡುವಂತೆ ಷರತ್ತು ವಿಧಿಸಿ ದೆಹಲಿಯ ಪಟಿಯಾಲ ಹೌಸ್ ಕೋರ್ಟ್‌ ನಟಿಗೆ ಜಾಮೀನು (Bail) ಮಂಜೂರು ಮಾಡಿದೆ.

    ನಟಿ ಜಾಕ್ವೆಲಿನ್ ಫರ್ನಾಂಡೀಸ್ ಮತ್ತು ಸ್ನೇಹಿತ ಸುಕೇಶ್ ಚಂದ್ರಶೇಖರ್ (Sukesh Chandrasekhar) ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ತಿಂಗಳುಗಳಿಂದ ಜಾಕ್ವೆಲಿನ್  ಅವರ  ವಿಚಾರಣೆಯನ್ನು ಇಡಿ ನಡೆಸುತ್ತಿದೆ.  ಈ ಕಾರಣಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದ ಜಾಕ್ವೇಲಿನ್ ದೆಹಲಿಯ ಪಟಿಯಾಲ ಹೌಸ್ ಕೋರ್ಟ್‌ಗೆ ಖುದ್ದಾಗಿ ಹಾಜರಾಗಿದ್ದರು.

    ಇದನ್ನೂ ಓದಿ:ಡಿವೋರ್ಸ್ ವದಂತಿಯ ನಡುವೆ ಸಾನಿಯಾ ಮಿರ್ಜಾ ಬರ್ತ್‌ಡೇಗೆ ಶೋಯೆಬ್ ಮಲಿಕ್ ವಿಶ್

    200 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟಿ, ಇದರ ಪ್ರಮುಖ ಕಿಂಗ್ ಪಿನ್ ಸುಕೇಶ್ ಚಂದ್ರಶೇಖರ್ ಜೊತೆ ಜಾಕ್ವೆಲಿನ್ ಸ್ನೇಹ ಹೊಂದಿದ್ದರು. ಅಲ್ಲದೇ, ಈ ಹಣದಲ್ಲೇ ನಟಿಗೆ ದುಬಾರಿ ವಸ್ತುಗಳನ್ನು ಸುಕೇಶ್ ನೀಡಿದ್ದಾರೆ ಎನ್ನುವ ಆರೋಪವಿದೆ. ಕುದುರೆ, ಕಾರು, ವಾಚ್, ದುಬಾರಿ ಬ್ಯಾಗ್ ಸೇರಿದಂತೆ ಹಲವು ವಸ್ತುಗಳನ್ನು ಜಾಕ್ವೆಲಿನ್ ಪಡೆದುಕೊಂಡಿದ್ದರು ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.

    ಈ ಎಲ್ಲ ಆರೋಪಗಳನ್ನೂ ಜಾಕ್ವೇಲಿನ್ ತಳ್ಳಿ ಹಾಕಿದ್ದಾರೆ. ಸುಕೇಶ್ ಜೊತೆಗೆ ಯಾವುದೇ ಸಂಬಂಧವಿಲ್ಲ ಎಂದು ಅವರು ಹೇಳಿಕೊಂಡಿದ್ದಾರೆ. ಅಲ್ಲದೇ, ಬಹುತೇಕ ವಸ್ತುಗಳನ್ನು ತಾವೇ ತಮ್ಮ ಸ್ವಂತ ಹಣದಲ್ಲೇ ಖರೀದಿಸಿರುವುದಾಗಿ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಜಾಕ್ವೆಲಿನ್‌ಗೆ ತಾತ್ಕಾಲಿಕ್ ರಿಲೀಫ್ :  ಜಾಮೀನು ಅರ್ಜಿ ನವೆಂಬರ್ 15ಕ್ಕೆ ಮುಂದೂಡಿಕೆ

    ಜಾಕ್ವೆಲಿನ್‌ಗೆ ತಾತ್ಕಾಲಿಕ್ ರಿಲೀಫ್ : ಜಾಮೀನು ಅರ್ಜಿ ನವೆಂಬರ್ 15ಕ್ಕೆ ಮುಂದೂಡಿಕೆ

    ಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರ ಜಾಮೀನು ಅರ್ಜಿ ವಿಚಾರಣೆ ನವೆಂಬರ್ 15ಕ್ಕೆ ಮುಂದೂಡಲಾಗಿದೆ. ಅಲ್ಲಿವರೆಗೂ ನಟಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು, ನವೆಂಬರ್ 15ರಂದು ಏನಾಗಲಿದೆ ಎನ್ನುವ ಆತಂಕ ಜಾಕ್ವೆಲಿನ್‌ಗೆ ಶುರುವಾಗಿದೆ. ವಂಚನೆಯ ಆರೋಪಿ ಸುಕೇಶ್ ಚಂದ್ರಶೇಖರ್ ಜೈಲಿನಲ್ಲಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಹಲವರನ್ನು ಬಂಧಿಸಲಾಗಿದೆ. ಆದರೆ, ಜಾಕ್ವೆಲಿನ್ ಬಂಧನ ಯಾಕಾಗಿಲ್ಲ ಎಂದು ಕೋರ್ಟ್ ನಿನ್ನೆಯಷ್ಟೇ ಪ್ರಶ್ನೆ ಮಾಡಿತ್ತು.

    ಕನ್ನಡವೂ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಮತ್ತು ಸ್ನೇಹಿತ ಸುಕೇಶ್ ಚಂದ್ರಶೇಖರ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊನ್ನೆಯಿಂದ ಜಾಕ್ವೆಲಿನ್ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಯುತ್ತಿದೆ. ಹಾಗಾಗಿ ಮೊನ್ನೆಯಷ್ಟೇ ಜಾಕ್ವೆಲಿನ್ ದೆಹಲಿಯ ಪಟಿಯಾಲ ಹೌಸ್ ಕೋರ್ಟ್‌ಗೆ ಖುದ್ದಾಗಿ ಹಾಜರಾಗಿದ್ದರು. ಇದನ್ನೂ ಓದಿ:ಭಾರತಕ್ಕೆ ಬೈ ಹೇಳಿದ ಬೆನ್ನಲ್ಲೇ ಕ್ರಿಸ್‌ಮಸ್‌ಗೆ ಪ್ರಿಯಾಂಕಾ ಚೋಪ್ರಾ ತಯಾರಿ

    200 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟಿ, ಇದರ ಪ್ರಮುಖ ಕಿಂಗ್ ಪಿನ್ ಸುಕೇಶ್ ಚಂದ್ರಶೇಖರ್ ಜೊತೆ ಜಾಕ್ವೆಲಿನ್ ಸ್ನೇಹ ಹೊಂದಿದ್ದರು. ಅಲ್ಲದೇ, ಈ ಹಣದಲ್ಲೇ ನಟಿಗೆ ದುಬಾರಿ ವಸ್ತುಗಳನ್ನು ಸುಕೇಶ್ ನೀಡಿದ್ದಾರೆ ಎನ್ನುವ ಆರೋಪವಿದೆ. ಕುದುರೆ, ಕಾರು, ವಾಚ್, ದುಬಾರಿ ಬ್ಯಾಗ್ ಸೇರಿದಂತೆ ಹಲವು ವಸ್ತುಗಳನ್ನು ಜಾಕ್ವೆಲಿನ್ ಪಡೆದುಕೊಂಡಿದ್ದರು ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.

    ಈ ಎಲ್ಲ ಆರೋಪಗಳನ್ನೂ ಜಾಕ್ವೆಲಿನ್ ತಳ್ಳಿ ಹಾಕಿದ್ದಾರೆ. ಸುಕೇಶ್ ಜೊತೆಗೆ ಯಾವುದೇ ಸಂಬಂಧವಿಲ್ಲ ಎಂದು ಅವರು ಹೇಳಿಕೊಂಡಿದ್ದಾರೆ. ಅಲ್ಲದೇ, ಬಹುತೇಕ ವಸ್ತುಗಳನ್ನು ತಾವೇ ತಮ್ಮ ಸ್ವಂತ ಹಣದಲ್ಲೇ ಖರೀದಿಸಿರುವುದಾಗಿ ತಿಳಿಸಿದ್ದಾರೆ. ಹೀಗಾಗಿಯೇ ಜಾಮೀನಿಗೆ ಅವರು ಅರ್ಜಿ ಕೂಡ ಸಲ್ಲಿಸಿದ್ದಾರೆ. ಆ ಅರ್ಜಿಯ ವಿಚಾರಣೆಯು ಮೊನ್ನೆಯಿಂದ ನಡೆಯುತ್ತಿದೆ. ಇದೀಗ ನವೆಂಬರ್ 15ಕ್ಕೆ ಮುಂದೂಡಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ದೆಹಲಿ ಕೋರ್ಟ್ ನಲ್ಲಿ ‘ವಿಕ್ರಾಂತ್ ರೋಣ’ ನಟಿ ಜಾಕ್ವೆಲಿನ್ ಫರ್ನಾಂಡೀಸ್

    ದೆಹಲಿ ಕೋರ್ಟ್ ನಲ್ಲಿ ‘ವಿಕ್ರಾಂತ್ ರೋಣ’ ನಟಿ ಜಾಕ್ವೆಲಿನ್ ಫರ್ನಾಂಡೀಸ್

    ನ್ನಡವೂ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಇಂದು ದೆಹಲಿಯ ಪಟಿಯಾಲ ಹೌಸ್ ಕೋರ್ಟಿಗೆ ಆಗಮಿಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜಾಕ್ವೆಲಿನ್ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಯುತ್ತಿದ್ದು, ಹಾಗಾಗಿ ದೆಹಲಿಯ ಪಟಿಯಾಲ ಹೌಸ್ ಕೋರ್ಟ್‌ನಲ್ಲಿ ನಟಿ ಹಾಜರಿದ್ದಾರೆ.

    200 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟಿ, ಇದರ ಪ್ರಮುಖ ಕಿಂಗ್ ಪಿನ್ ಸುಕೇಶ್ ಚಂದ್ರಶೇಖರ್ ಜೊತೆ ಜಾಕ್ವೆಲಿನ್ ಸ್ನೇಹ ಹೊಂದಿದ್ದರು. ಅಲ್ಲದೇ, ಈ ಹಣದಲ್ಲೇ ನಟಿಗೆ ದುಬಾರಿ ವಸ್ತುಗಳನ್ನು ಸುಕೇಶ್ ನೀಡಿದ್ದಾರೆ ಎನ್ನುವ ಆರೋಪವಿದೆ. ಕುದುರೆ, ಕಾರು, ವಾಚ್, ದುಬಾರಿ ಬ್ಯಾಗ್ ಸೇರಿದಂತೆ ಹಲವು ವಸ್ತುಗಳನ್ನು ಜಾಕ್ವೆಲಿನ್ ಪಡೆದುಕೊಂಡಿದ್ದರು ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ:ನಟನೆಯತ್ತ ʻಕಾಂತಾರʼ ಹೀರೋ ರಿಷಬ್ ಪತ್ನಿ ಪ್ರಗತಿ ಶೆಟ್ಟಿ

    ಈ ಎಲ್ಲ ಆರೋಪಗಳನ್ನೂ ಜಾಕ್ವೇಲಿನ್ ತಳ್ಳಿ ಹಾಕಿದ್ದಾರೆ. ಸುಕೇಶ್ ಜೊತೆಗೆ ಯಾವುದೇ ಸಂಬಂಧವಿಲ್ಲ ಎಂದು ಅವರು ಹೇಳಿಕೊಂಡಿದ್ದಾರೆ. ಅಲ್ಲದೇ, ಬಹುತೇಕ ವಸ್ತುಗಳನ್ನು ತಾವೇ ತಮ್ಮ ಸ್ವಂತ ಹಣದಲ್ಲೇ ಖರೀದಿಸಿರುವುದಾಗಿ ತಿಳಿಸಿದ್ದಾರೆ. ಹೀಗಾಗಿಯೇ ಜಾಮೀನಿಗೆ ಅವರು ಅರ್ಜಿ ಕೂಡ ಸಲ್ಲಿಸಿದ್ದಾರೆ. ಆ ಅರ್ಜಿಯ ವಿಚಾರಣೆಯು ಇಂದು ನಡೆಯುತ್ತಿದೆ. ಹಾಗಾಗಿ ಅವರು ಕೋರ್ಟಿಗೆ ಆಗಮಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅಕ್ಟೋಬರ್ 15 ರಂದು ಜೀ ಕನ್ನಡ ವಾಹಿನಿಯಲ್ಲಿ ‘ವಿಕ್ರಾಂತ್ ರೋಣ’

    ಅಕ್ಟೋಬರ್ 15 ರಂದು ಜೀ ಕನ್ನಡ ವಾಹಿನಿಯಲ್ಲಿ ‘ವಿಕ್ರಾಂತ್ ರೋಣ’

    ವಿಕ್ರಾಂತ್ ರೋಣ (Vikrant Rona) ಕನ್ನಡ ಸಿನಿ ಪ್ರಿಯರು ಹಿಂದೆಂದೂ ಕಾಣದಂತ 3D ಅನುಭವ ನೀಡಿದಂತ ಅತ್ಯದ್ಭುತ ದೃಶ್ಯ ವೈಭವ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kiccha Sudeep) ಅಭಿನಯದ ಈ ಚಿತ್ರ ಒಂದು ವಿಭಿನ್ನ ಸಸ್ಪೆನ್ಸ್ ಥ್ರಿಲ್ಲರ್ ಕಥೆಯ ಮೂಲಕ ಹೊಸತೊಂದು ಪ್ಯಾಂಟಸಿ ಲೋಕಕ್ಕೆ ಪ್ರೇಕ್ಷಕರನ್ನು ಕರೆದುಕೊಂಡ ಹೋದ ಹೆಗ್ಗಳಿಕೆ ಹೊಂದಿದೆ. ಇದೀಗ ಕನ್ನಡದ ನಂಬರ್ 1 ಮನರಂಜನಾ ವಾಹಿನಿ  ಜೀ ಕನ್ನಡ ಇದೇ ಅಕ್ಟೋಬರ್ 15 ಶನಿವಾರ ರಾತ್ರಿ 7.30ಕ್ಕೆ ಈ ಸಿನಿಮಾವನ್ನು ಅದ್ಧೂರಿಯಾಗಿ World Television premiere ಮಾಡಲಿದೆ.

    ಏಕಕಾಲಕ್ಕೆ ಹಲವಾರು ಭಾಷೆಗಳಲ್ಲಿ ತೆರೆಕಂಡು ಅದ್ಭುತ ಯಶಸ್ಸುಗಳಿಸಿರುವ ಈ ಸಿನಿಮಾ ಕೂಡ ಕನ್ನಡ ಚಿತ್ರರಂಗದ ಶಕ್ತಿ ಪ್ರದರ್ಶನ ಮಾಡಿದ ಶ್ರೇಯಸ್ಸನ್ನು ತನ್ನದಾಗಿಸಿಕೊಂಡಿದೆ. ರಂಗಿತರಂಗ ಖ್ಯಾತಿಯ ನಿರ್ದೇಶಕ ಅನೂಪ್ ಭಂಡಾರಿ (Anoop Bhandari) ಇದರ ನಿರ್ದೇಶನದ ಜವಾಬ್ದಾರಿ ಹೊತ್ತು ಯಶಸ್ವಿಯಾಗಿದ್ದರೇ ಜಾಕ್ ಮಂಜು ಅವರು ಹಣಹೂಡಿಕೆ ಮಾಡಿದ್ದಾರೆ. ಇದನ್ನೂ ಓದಿ:‘ಆದಿಪುರುಷ್’ ಸಿನಿಮಾ ಟೀಮ್ ಮೇಲೆ ಬಿತ್ತು ಕೇಸ್: ಅ.27ಕ್ಕೆ ವಿಚಾರಣೆ ನಿಗದಿ

    ಚಂದನವನದ ಸದ್ಯದ ಟ್ರೆಂಡ್ ಸೆಟ್ಟಿಂಗ್ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರ ಸಂಗೀತ  ಸಂಯೋಜನೆ ಹಾಗೂ ವಿಲಿಯಮ್ ಡೇವಿಡ್ ಅವರ ಭರ್ಜರಿ ಛಾಯಾಗ್ರಹಣವಿದೆ. ಬಹುಕೋಟಿ ವೆಚ್ಚದ ಈ ಚಿತ್ರದ ಹಂಚಿಕೆ ಜವಾಬ್ದಾರಿಯನ್ನು ದೇಶದ ಅತಿದೊಡ್ಡ ಮನರಂಜನಾ ಸಂಸ್ಥೆಯಾದ ಜೀ ಸ್ಟುಡಿಯೋಸ್ ವಹಿಸಿದ್ದು ವಿಶೇಷ .

    ಇನ್ನು ವಿಕ್ರಾಂತ್ ರೋಣ ಚಿತ್ರ ಶ್ರೀಮಂತ ತಾರಾಗಣಕ್ಕೆ ಸಾಕ್ಷಿಯಾಗಿದ್ದು ಕಿಚ್ಚ ಸುದೀಪ್ ಸೇರಿದಂತೆ  ನಿರೂಪ್ ಭಂಡಾರಿ , ನೀತಾ ಅಶೋಕ್, ಜಾಕ್ವೆಲಿನ್ ಫರ್ನಾಂಡಿಸ್ ಹಾಗೂ ಇನ್ನು ಅನೇಕರು ಇದರ ಭಾಗವಾಗಿದ್ದಾರೆ. ಅಷ್ಟೇ ಅಲ್ಲದೆ ವಿಶ್ವದ ಅತಿದೊಡ್ಡ ಕಟ್ಟಡವಾದ ಬುರ್ಜ್ ಖಲೀಫಾದ ಮೇಲೆ ಕನ್ನಡದ ಬಾವುಟ ಹಾರಿಸಿದ ಹೆಮ್ಮೆಯ ವಿಷಯಕ್ಕೆ ಪಾತ್ರವಾಗಿದೆ ಈ ಚಿತ್ರತಂಡ.

    ಇನ್ನು ಕಿಚ್ಚ ಸುದೀಪ್ ಅವರು ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandes)  ಜೊತೆ ಹೆಜ್ಜೆ ಹಾಕಿರುವ ʼರಾರಾ ರಕ್ಕಮ್ಮ ಹಾಡುʼ ಇಡೀ ದೇಶದಲ್ಲೇ ಸಂಚಲನ ಮೂಡಿಸಿದ್ದು ಈಗಲೂ ಸೋಷಿಯಲ್ ಮೀಡಿಯಾದಲ್ಲಿ, ರೀಲ್ಸ್ ಗಳಲ್ಲಿ ಅತಿಹೆಚ್ಚು ಬಳಕೆಯಲ್ಲಿದೆ. ಇದೇ ಅಕ್ಟೋಬರ್ 15 ಶನಿವಾರ ರಾತ್ರಿ 7.30ಕ್ಕೆ ಈ ಸಿನಿಮಾ ಅದ್ಧೂರಿಯಾಗಿ World Television premiere ಆಗುತ್ತಿದ್ದು, ಮನೆಮಂದಿಯೆಲ್ಲಾ ಕೂತು ನೋಡಿ ವಿಶೇಷವಾದ ಪ್ಯಾಂಟಸಿ ಲೋಕಕ್ಕೆ ಹೋಗಿ.

    Live Tv
    [brid partner=56869869 player=32851 video=960834 autoplay=true]

  • ಜಾಕ್ವೆಲಿನ್ ಫರ್ನಾಂಡಿಸ್ ಗೆ ಮಧ್ಯಂತರ ಜಾಮೀನು: ನಿಟ್ಟುಸಿರಿಟ್ಟ ರಾ ರಾ ರಕ್ಕಮ್ಮ ನಟಿ

    ಜಾಕ್ವೆಲಿನ್ ಫರ್ನಾಂಡಿಸ್ ಗೆ ಮಧ್ಯಂತರ ಜಾಮೀನು: ನಿಟ್ಟುಸಿರಿಟ್ಟ ರಾ ರಾ ರಕ್ಕಮ್ಮ ನಟಿ

    ಸುಕೇಶ್ ಚಂದ್ರಶೇಖರ್ ಮಾಡಿದ್ದಾರೆ ಎನ್ನಲಾದ 200 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandes) ಸತತವಾಗಿ ವಿಚಾರಣೆಗೆ ಹಾಜರಾಗುತ್ತಿದ್ದರು. ಜಾರಿ ನಿರ್ದೇಶನಾಲಯದ (Directorate of Enforcement) ಅಧಿಕಾರಿಗಳಿಗೆ ಕೋರ್ಟಿಗೆ ಸಲ್ಲಿಸಿರುವ ಚಾರ್ಜಶೀಟ್ ನಲ್ಲಿ ಜಾಕ್ವೆಲಿನ್ ಹೆಸರು ಕೂಡ ಇತ್ತು. ಹೀಗಾಗಿ ಬಂಧನದ ಭೀತಿಯೂ ಅವರಿಗಿತ್ತು. ಹಾಗಾಗಿಯೇ ಜಾಮೀನಿಗಾಗಿ ನಟಿ ಕೋರ್ಟ್ ಮೊರೆ ಹೋಗಿದ್ದರು. ಸದ್ಯ ಅವರಿಗೆ ಮಧ್ಯಂತರ ಜಾಮೀನು ದೊರೆಕಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 22ಕ್ಕೆ ಮುಂದೂಡಲಾಗಿದೆ.

    ತಮಗೆ ಮಧ್ಯಂತರ ಜಾಮೀನು (Bail) ಸಿಗುತ್ತಿದ್ದಂತೆಯೇ ನಿಟ್ಟುಸಿರಿಟ್ಟಿರುವ ಜಾಕ್ವೆಲಿನ್, ಈ ಪ್ರಕರಣಕ್ಕೂ ತಮಗೂ ಸಂಬಂಧವಿಲ್ಲ ಎನ್ನುವುದನ್ನು ಆಧಾರ ಸಹಿತ ಕೋರ್ಟ್ ಗೆ ಸಾಬೀತು ಪಡಿಸಬೇಕಾಗಿದೆ. ಅಲ್ಲದೇ, ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಪ್ರಕರಣದ ಗಂಭೀರತೆಯನ್ನು ವಿವರಿಸಿದ್ದರಿಂದ ಜಾಕ್ವೆಲಿನ್ ತಮ್ಮನ್ನು ತಾವು ಸಮರ್ಥಿಸಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ. ಇದನ್ನೂ ಓದಿ: ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಆಸ್ಪತ್ರೆ ದಾಖಲು: ಅಭಿಮಾನಿಗಳಿಗೆ ಹೆಚ್ಚಿದೆ ಆತಂಕ

    ಬೆಂಗಳೂರು ಮೂಲದ ಸುಕೇಶ್ ಚಂದ್ರಶೇಖರ್ (Sukesh Chandrasekhar), ಉದ್ಯಮಿಯೊಬ್ಬರಿಗೆ 200 ಕೋಟಿ ವಂಚಿಸಿದ ಪ್ರಕರಣದಲ್ಲಿ ಜಾಕ್ವೆಲಿನ್ ಹೆಸರು ತಳುಕು ಹಾಕಿಕೊಂಡಿದ್ದು, ಆತನಿಂದ ಇವರು ಗಿಫ್ಟ್ ಪಡೆದಿದ್ದಾರೆ ಎನ್ನುವ ಕಾರಣಕ್ಕಾಗಿ. ಸುಕೇಶ್ ನಿಂದ ಪಡೆದ ಗಿಫ್ಟ್, ಆ ಹಣದಿಂದಲೇ ಖರೀದಿಸಿದ್ದು ಎಂದು ಹೇಳಲಾಗುತ್ತಿದೆ. ಅಲ್ಲದೇ ದುಬಾರಿ ಗಿಫ್ಟ್ ಗಳನ್ನೇ ಸುಕೇಶ್ ಕೊಡಿಸಿದ್ದಾನೆ ಎಂದೂ ಹೇಳಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • 200 ಕೋಟಿ ರೂ. ಸುಲಿಗೆ ಪ್ರಕರಣದಲ್ಲಿ ನಟಿ ನೋರಾ ಫತೇಹಿ ವಿಚಾರಣೆ

    200 ಕೋಟಿ ರೂ. ಸುಲಿಗೆ ಪ್ರಕರಣದಲ್ಲಿ ನಟಿ ನೋರಾ ಫತೇಹಿ ವಿಚಾರಣೆ

    ಬಾಲಿವುಡ್ ನಟಿ ನೋರಾ ಫತೇಹಿಗೆ ಕಂಟಕವೊಂದು ಎದುರಾಗಿದೆ. 200 ಕೋಟಿ ರೂ. ಸುಲಿಗೆ ಪ್ರಕರಣದಲ್ಲಿ ಜಾಕ್ವೆಲಿನ್‌ ವಿಚಾರಣೆಯ ನಂತರ ಇದೀಗ ನೋರಾ ಫತೇಹಿ ಅವರನ್ನ  ಆರ್ಥಿಕ ಅಪರಾಧ ವಿಭಾಗ ವಿಚಾರಣೆಗೆ  ಒಳಪಡಿಸಿದ್ದಾರೆ.

    ಸುಕೇಶ್ ಚಂದ್ರಶೇಖರ್ ಅವರ 200 ಕೋಟಿ ರೂ. ಸುಲಿಗೆ ಪ್ರಕರಣದಲ್ಲಿ ಇದೀಗ ಜಾಕ್ವೆಲಿನ್ ನಂತರ ನೋರಾ ಫತೇಹಿ ವಿಚಾರಣೆಗೆ ಕರೆಯಲಾಗಿದೆ. 200 ಕೋಟಿ ರೂ. ಸುಲಿಗೆ ಪ್ರಕರಣದಲ್ಲಿ ನೋರಾ ಕೂಡ ಭಾಗಿಯಾಗಿರುವ ಬಗ್ಗೆಯೂ ಮತ್ತೆ ವಿಚಾರಣೆ ನಡೆಸುತ್ತಿದೆ.ಇದನ್ನೂ ಓದಿ:ಸುದೀಪ್ ಹುಟ್ಟು ಹಬ್ಬಕ್ಕೆ ಯಾಕೆ ಸಿನಿಮಾ ಘೋಷಣೆ ಇಲ್ಲ?: ಅನುಮಾನ ಮೂಡಿಸಿದ ಕಿಚ್ಚನ ನಡೆ

    ಜೈಲು ಸೇರಿರುವ ಸುಕೇಶ್ ಚಂದ್ರಶೇಖರ್ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ (ಸೆ.3) ಶುಕ್ರವಾರ ಆರ್ಥಿಕ ಅಪರಾಧ ವಿಭಾಗ ನೋರಾ ಅವರನ್ನ 4 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ಇನ್ನು ವಿಚಾರಣೆಯ ವೇಳೆ ತಮಗೆ ಐಫೋನ್‌ ಮತ್ತು ಬಿಎಂಡಬ್ಲ್ಯೂ ಕಾರನ್ನ ಉಡುಗೊರೆ  ಕೊಡುವುದಾಗಿ ಲೀನಾ ಹೇಳಿದ್ದರೆಂದು ವಿಚಾರಣೆಯ ವೇಳೆ ನೋರಾ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • 200 ಕೋಟಿ ವಂಚನೆ ಪ್ರಕರಣದಲ್ಲಿ ಹೆಸರು ಕೇಳಿ ಬಂದ ಬೆನ್ನಲ್ಲೇ ಜಾಕ್ವೆಲಿನ್ ರಿಯಾಕ್ಷನ್

    200 ಕೋಟಿ ವಂಚನೆ ಪ್ರಕರಣದಲ್ಲಿ ಹೆಸರು ಕೇಳಿ ಬಂದ ಬೆನ್ನಲ್ಲೇ ಜಾಕ್ವೆಲಿನ್ ರಿಯಾಕ್ಷನ್

    `ವಿಕ್ರಾಂತ್ ರೋಣ’ ಬ್ಯೂಟಿ ಜಾಕ್ವೆಲಿನ್ ಫರ್ನಾಂಡಿಸ್, ಸುಖೇಶ್ ಚಂದ್ರಶೇಖರ್ ಪ್ರಕರಣದ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಇದೀಗ ಕೋರ್ಟ್ ಮೆಟ್ಟಿಲು ಹತ್ತುವಂತಾಗಿದೆ. ಬರೋಬ್ಬರಿ 215 ಕೋಟಿ ರೂಪಾಯಿ ಹಣ ವಸೂಲಿ ಮತ್ತು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇವರನ್ನು ಆರೋಪಿಯನ್ನಾಗಿ ಇಡಿ ಅಧಿಕಾರಿಗಳು ಇಂದು ದೆಹಲಿ ಇಡಿ ವಿಶೇಷ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಈ ಬೆನ್ನಲ್ಲೇ ಈ ಕುರಿತು ಜಾಕ್ವೆಲಿನ್, ಸೋಷಿಯಲ್ ಮೀಡಿಯಾದಲ್ಲಿ ರಿಯಾಕ್ಟ್ ಮಾಡಿದ್ದಾರೆ.

    215 ಕೋಟಿ ವಂಚನೆ ಪ್ರಕರಣದಲ್ಲಿ ಸುಖೇಶ್ ಜೊತೆ ಜಾಕ್ವೆಲಿನ್ ಕೂಡ ಆರೋಪ ಎದುರಿಸುತ್ತಿದ್ದಾರೆ. ಇದೀಗ ಈ ಕುರಿತು ನಟಿ ಕೂಡ ರಿಯಾಕ್ಟ್ ಮಾಡಿದ್ದಾರೆ. ನಾನು ಎಲ್ಲಾ ಒಳ್ಳೆಯದಕ್ಕೆ ಅರ್ಹನಾಗಿದ್ದೇನೆ, ನಾನು ಶಕ್ತಿಶಾಲಿಯಾಗಿದ್ದೇನೆ, ನಾನು ನನ್ನನ್ನು ಒಪ್ಪಿಕೊಳ್ಳುತ್ತೇನೆ, ಎಲ್ಲವೂ ಸರಿಯಾಗುತ್ತದೆ, ನಾನು ಬಲಶಾಲಿಯಾಗಿದ್ದೇನೆ, ನನ್ನ ಗುರಿ ಮತ್ತು ಕನಸುಗಳನ್ನು ಸಾಧಿಸುತ್ತೇನೆ,ನಾನು ಅದನ್ನು ಮಾಡಬಲ್ಲೇ ಎಂದು ಜಾಕ್ವೆಲಿನ್ ಬರೆದುಕೊಂಡಿದ್ದಾರೆ. ಈ ಪೋಸ್ಟ್ ಸದ್ಯ ವೈರಲ್ ಆಗುತ್ತಿದೆ. ಇದನ್ನೂ ಓದಿ:ರಾ..ರಾ. ರಕ್ಕಮ್ಮ ಬೆಡಗಿ ಜಾಕ್ವೆಲಿನ್ ಇದೀಗ 215 ಕೋಟಿ ಹಣದ ಪ್ರಕರಣದಲ್ಲಿ ಆರೋಪಿ

    ಬೆಂಗಳೂರು ಮೂಲದ ಸುಖೇಶ್ ಚಂದ್ರಶೇಖರ್ ಮತ್ತು ಜಾಕ್ವೆಲಿನ್ ಇಬ್ಬರೂ ಸ್ನೇಹಿತರು ಎಂದು ಹೇಳಲಾಗುತ್ತಿದ್ದು, ಈ ಸುಖೇಶ್ ಬರೋಬ್ಬರಿ 215 ಕೋಟಿ ರೂಪಾಯಿಯನ್ನು ವಂಚಿಸಿದ್ದಾರೆ ಎನ್ನಲಾಗುತ್ತಿದೆ. ಜೈಲಿನಲ್ಲಿರುವ ಖೈದಿಯೊಬ್ಬರನ್ನು ಬಿಡುಗಡೆ ಮಾಡಿಸಲು ಈ ಪ್ರಮಾಣದ ಹಣವನ್ನು ಉದ್ಯಮಿಯ ಪತ್ನಿಗೆ ಕೇಳಿದ್ದರು. ನಂಬಿಸಿ ವಸೂಲಿ ಕೂಡ ಮಾಡಿದ್ದರು. ಆ ನಂತರ ಉದ್ಯಮಿ ಪತ್ನಿಗೆ ಇದು ಮೋಸ ಎಂದು ಗೊತ್ತಾಗಿ ಪ್ರಕರಣ ದಾಖಲಿಸಿದ್ದರು.

    215 ಕೋಟಿ ಹಣದಲ್ಲಿ ಸುಖೇಶ್, ಬಾಲಿವುಡ್ ನಟಿ ಜಾಕ್ವೆಲಿನ್ ಗೆ ದುಬಾರಿ ಕಾರು, ಡೈಮೆಂಡ್, ವಾಚ್, ಬ್ಯಾಗ್ ಗಳು ಮತ್ತು ದುಬಾರಿ ಕುದುರೆಯೊಂದನ್ನು ಉಡುಗೊರೆಯಾಗಿ ನೀಡಿದ್ದರು ಎನ್ನುವ ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ಇಡಿ ತನಿಖೆ ಆರಂಭಿಸಿತ್ತು. ಇದೀಗ ಅದು ನಿಜವಾಗಿದೆ ಎಂದು ಇಡಿ ಚಾರ್ಜ್‌ಶೀಟ್ ನಲ್ಲಿ ಉಲ್ಲೇಖಿಸಿದ್ದಾರೆ ಎಂದು ಹೇಳಾಗುತ್ತಿದೆ. ಹಾಗಾಗಿ ಜಾರಿ ನಿರ್ದೇಶನಾಲಯವು ಕೋರ್ಟ್ ಗೆ ಜಾಕ್ವೆಲಿನ್ ಹೆಸರೂ ಸೇರಿಸಿದ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಸುಖೇಶ್ ಮಾಡಿದ ತಪ್ಪಿಗೆ ಇದೀಗ ಈ ನಟಿ ಕೋರ್ಟ್ ಕಟಕಟೆಯಲ್ಲಿ ನಿಲ್ಲುವ ಪರಿಸ್ಥಿತಿ ಎದುರಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಹಾಲಿವುಡ್‌ನತ್ತ ಮುಖ ಮಾಡಿದ ದಕ್ಷಿಣದ ಸ್ಟಾರ್ಸ್‌

    ಹಾಲಿವುಡ್‌ನತ್ತ ಮುಖ ಮಾಡಿದ ದಕ್ಷಿಣದ ಸ್ಟಾರ್ಸ್‌

    ಲಾವಿದರಿಗೆ ಭಾಷೆಯ ಬೇಲಿಯಿಲ್ಲ ಎಂಬ ಮಾತು ಸತ್ಯ ಎಂಬುದನ್ನು ಈ ಸ್ಟಾರ್ಸ್ ಮತ್ತೊಮ್ಮೆ ಪ್ರೂವ್ ಮಾಡಿದ್ದಾರೆ. ಸದ್ಯ ತಾವು ಇರುವ ಚಿತ್ರರಂಗದಲ್ಲಿ ಗಟ್ಟಿ ನೆಲೆ ಕಂಡುಕೊಂಡಿರುವ ಕಲಾವಿದರಿಗೆ ಸಖತ್ ಡಿಮ್ಯಾಂಡ್ ಇರಬೇಕಾದರೆ ಪಕ್ಕದ ಹಾಲಿವುಡ್‌ನತ್ತ ಮುಖ ಮಾಡಿದ್ದಾರೆ. ದಕ್ಷಿಣದ ಸ್ಟಾರ್ಸ್ ಈಗ ಹಾಲಿವುಡ್‌ನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

    ಬಾಲಿವುಡ್ ರಾಧೆ ಆಲಿಯಾ ಭಟ್ ಇತ್ತೀಚೆಗಷ್ಟೇ ಹಾಲಿವುಡ್‌ನ `ಹಾರ್ಟ್ ಆಫ್ ಸ್ಟೋನ್’ ಸಿನಿಮಾದ ಚಿತ್ರೀಕರಣ ಮುಗಿಸಿ, ಮನೆಗೆ ಮರಳಿದ್ದರು. ಬೇಬಿ ಬಂಪ್ ಲುಕ್ ಮೂಲಕ ಸಖತ್ ವೈರಲ್ ಆಗಿದ್ದರು. ಸದ್ಯ ಹಾಲಿವುಡ್‌ನಲ್ಲಿ ತಮ್ಮ ಚೊಚ್ಚಲ ಚಿತ್ರ ಮುಗಿಸಿರುವ ಆಲಿಯಾಗೆ ಬಾಲಿವುಡ್‌ನಲ್ಲಿ ಸಾಲು ಸಾಲು ಸಿನಿಮಾ ಅವಕಾಶಗಳಿವೆ. ಇದನ್ನೂ ಓದಿ:ರಾಮ್ ಗೋಪಾಲ್ ವರ್ಮಾ ‘ಲಡಕಿ’ ನೋಡಿ ಬೆಚ್ಚಿ ಬಿದ್ದರಂತೆ ಸೆನ್ಸಾರ್ ಟೀಮ್

    ಕಾಲಿವುಡ್ ರಂಗದಲ್ಲಿ ಹೆಸರುವಾಸಿಯಾಗಿರುವ ಧನುಷ್ `ದಿ ಗ್ರೇ ಮ್ಯಾನ್’ ಚಿತ್ರದ ಮೂಲಕ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಧನುಷ್ ನಟನೆಯ ಚೊಚ್ಚಲ ಚಿತ್ರ ಇದೇ ಜುಲೈ 22ಕ್ಕೆ ತೆರೆಗೆ ಅಪ್ಪಳಿಸಲಿದೆ.

    `ವಿಕ್ರಾಂತ್ ರೋಣ’ ಬೆಡಗಿ ರಾ ರಾ ರಕ್ಕಮ್ಮ ಕೂಡ `ಟೆಲ್ ಇಟ್ ಲೈಕ್ ಎ ವುಮೆನ್’ ಎಂಬ ಹಾಲಿವುಡ್ ಸಿನಿಮಾದಲ್ಲಿ ನಟಿಸಿ ಬಂದಿದ್ದಾರೆ. ಈ ಚಿತ್ರವನ್ನು 8 ಮಹಿಳಾ ನಿರ್ದೇಶಕರು ನಿರ್ದೇಶನ ಮಾಡಿರೋದು ವಿಶೇಷ.

    `ದಿ ಫ್ಯಾಮಿಲಿ ಮೆನ್ 2′ ಮತ್ತು `ಪುಷ್ಪ’ ಸಕ್ಸಸ್ ನಂತರ `ಅರೆಂಜ್‌ಮೆಂಟ್ ಆಫ್ ಲವ್’ ಚಿತ್ರದ ಮೂಲಕ ಹಾಲಿವುಡ್‌ನಲ್ಲಿ ಮಿಂಚಲು ರೆಡಿಯಾಗಿದ್ದಾರೆ. ಎಂದೂ ಕಾಣಿಸಿಕೊಂಡಿರದ ಪಾತ್ರದಲ್ಲಿ ಮಿಂಚಲು ರೆಡಿಯಾಗಿದ್ದಾರೆ.

    ಟಾಲಿವುಡ್ ನಟಿ ಶೋಭಿತಾ ಧುಲಿಪಾಲ ಕೂಡ ಹಾಲಿವುಡ್‌ನ ಥ್ರಿಲರ್ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. `ಮಂಕಿ ಮ್ಯಾನ್’ ಎಂಬ ಚಿತ್ರದಲ್ಲಿ ಶೋಭಿತಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.ಈ ಮೂಲಕ ನಟನೆಗೆ ಭಾಷೆಯ ಬೇಲಿಯಿಲ್ಲ ಅಂತಾ ಪ್ರೂವ್ ಮಾಡಿ, ಸಿಕ್ಕ ಅವಕಾಶವನ್ನ ಸರಿಯಾಗಿ ಸದುಪಯೋಗ ಪಡಿಸಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]