Tag: Jacqueline Fernandez

  • ಸುಕೇಶ್-ಜಾಕ್ವೆಲಿನ್ ಲವ್ ಸ್ಟೋರಿ ಸಿನಿಮಾ : ಏನೆಲ್ಲ ವಿಷಯಗಳಿವೆ ಗೊತ್ತಾ?

    ಸುಕೇಶ್-ಜಾಕ್ವೆಲಿನ್ ಲವ್ ಸ್ಟೋರಿ ಸಿನಿಮಾ : ಏನೆಲ್ಲ ವಿಷಯಗಳಿವೆ ಗೊತ್ತಾ?

    ಹುಕೋಟಿ ವಂಚನೆ ಆರೋಪದಲ್ಲಿ ಜೈಲು ಪಾಲಾಗಿರುವ, ಬೆಂಗಳೂರು ಮೂಲದ ಸುಕೇಶ್ ಚಂದ್ರಶೇಖರ್‌ (Sukesh Chandrasekhar) ಮತ್ತು ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಲವ್‌ಸ್ಟೋರಿ (Love Story) ಕುರಿತು ಸಿನಿಮಾ (Cinema) ಮಾಡುವುದಾಗಿ ಹಿಂದಿ ನಿರ್ದೇಶಕ ಆನಂದ್ ಎನ್ನುವವರು ಘೋಷಿಸಿದ್ದಾರೆ. ಈ ಸಂಬಂಧ ಅವರು ಜೈಲಿನಲ್ಲಿರುವ ಸುಕೇಶ್ ಅವರನ್ನೂ ಭೇಟಿ ಮಾಡಿ ಬಂದಿದ್ದಾರೆ.

    ಸುಕೇಶ್ ಮತ್ತು ಜಾಕ್ವೆಲಿನ್ ಡೇಟಿಂಗ್ ವಿಚಾರ ಹಲವು ತಿಂಗಳಿಂದ ನಡೆಯುತ್ತಿದ್ದರೂ, ಅದು ಬೆಳಕಿಗೆ ಬಂದಿದ್ದು ಸುಕೇಶ್ ಬಂಧನವಾದ ನಂತರ. ವಂಚನೆಯ ಹಣವನ್ನು ಈತ ಯಾರಿಗೆಲ್ಲ ಖರ್ಚು ಮಾಡಿದ್ದಾನೆ ಎಂದು ತನಿಖೆಗೆ ಇಳಿದಾಗ ಅದರಲ್ಲಿ ಜಾಕ್ವೆಲಿನ್ ಹೆಸರು ಪತ್ತೆಯಾಗಿತ್ತು. ಹಲವು ದುಬಾರಿ ವಸ್ತುಗಳನ್ನು ಈಕೆಗೆ ಸುಕೇಶ್ ನೀಡಿದ್ದಾನೆ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದ್ದರು. ಇದನ್ನೂ ಓದಿ: ಪವನ್ ಕಲ್ಯಾಣ್‌ಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಆರ್.ಚಂದ್ರು

    ತಾನು ಸುಕೇಶ್‌ನನ್ನು ಭೇಟಿಯಾಗಿದ್ದು ಕಡಿಮೆ. ಆತ ನನಗೇನೂ ಕೊಡಿಸಿಲ್ಲ ಎಂದು ಜಾಕ್ವೆಲಿನ್ ಹೇಳಿಕೊಂಡಿದ್ದರೂ, ತಾನು ಆತನನ್ನು ಪ್ರೀತಿಸುತ್ತಿಲ್ಲ ಎಂದು ಪದೇ ಪದೇ ಹೇಳಿಕೆ ಕೊಡುತ್ತಿದ್ದರೂ, ಸುಕೇಶ್ ಮಾತ್ರ ಅದನ್ನು ಒಪ್ಪುತ್ತಿಲ್ಲ. ಈಗಲೂ ಜಾಕ್ವೆಲಿನ್‌ಳನ್ನು ಪ್ರೀತಿಸುತ್ತಿದ್ದೇನೆ ಎಂದು ಜೈಲಿನಿಂದಲೇ ಸಂದೇಶ ಕಳುಹಿಸುತ್ತಿದ್ದಾನೆ. ಅಲ್ಲದೇ ಪ್ರೇಮಿಗಳ ದಿನದಂದು ಅವನು ವಿಶ್ ಮಾಡಿದ್ದ.

    ಸುಕೇಶ್ ಮತ್ತು ಜಾಕ್ವೆಲಿನ್ ಪ್ರೇಮ ಎಂಥದ್ದು, ಇಬ್ಬರೂ ಪ್ರೀತಿಸುತ್ತಿದ್ದರಾ? ಉಡುಗೊರೆ ವಿನಿಮಯದ ಕಥೆ ಏನು? ಹೀಗೆ ಹತ್ತು ಹಲವು ಸಂಗತಿಗಳನ್ನು ಇಟ್ಟುಕೊಂಡು ಆನಂದ್ ಎನ್ನುವವರು ಹಿಂದಿಯಲ್ಲಿ ಸಿನಿಮಾ ಮಾಡಲಿದ್ದಾರಂತೆ. ಸದ್ಯಕ್ಕೆ ಸ್ಕ್ರಿಪ್ಟ್ ಕೆಲಸ ನಡೆದಿದೆ ಎಂದು ಹೇಳಲಾಗುತ್ತಿದೆ.

  • ಬೆಳ್ಳಿತೆರೆಯಲ್ಲಿ ಮೂಡಿ ಬರಲಿದೆ ಸುಕೇಶ್- ಜಾಕ್ವೆಲಿನ್ ಲವ್ ಸ್ಟೋರಿ

    ಬೆಳ್ಳಿತೆರೆಯಲ್ಲಿ ಮೂಡಿ ಬರಲಿದೆ ಸುಕೇಶ್- ಜಾಕ್ವೆಲಿನ್ ಲವ್ ಸ್ಟೋರಿ

    ಸಿನಿಮಾರಂಗದಲ್ಲಿ ನೈಜ ಕಥೆಗೆ ಡಿಮ್ಯಾಂಡ್ ಜಾಸ್ತಿಯಾಗುತ್ತಿದೆ. ನಿಜ ಕಥೆಯನ್ನೇ ತೆರೆಯ ಮೇಲೆ ನೋಡಲು ಅಭಿಮಾನಿಗಳು ಇಷ್ಟಪಡುತ್ತಿದ್ದಾರೆ. ಹೀಗಿರುವಾಗ ಖತರ್ನಾಕ್ ಕಿಲಾಡಿ ಸುಕೇಶ್ ಕಥೆಯನ್ನೇ ಸಿನಿಮಾ ಮಾಡಲು ಬಿಟೌನ್ ನಿರ್ದೇಶಕರೊಬ್ಬರು ಮುಂದಾಗಿದ್ದಾರೆ. ಕೋಟಿ ಕೋಟಿ ಲೂಟಿ ಮಾಡಿದ್ದ ಸುಕೇಶ್, ಬಾಲಿವುಡ್ (Bollywood) ನಟಿಮಣಿಯರನ್ನ ಬುಟ್ಟಿಗೆ ಹಾಕಿಕೊಂಡ ಕಥೆಯನ್ನ ಈಗ ಸಿನಿಮಾ ಮಾಡ್ತಿದ್ದಾರೆ.

    ಕಳ್ಳನ ಜೀವನ ಇದೀಗ ಸಿನಿಮಾ ಆಗಲಿದ್ದು, ಸುಕೇಶ್‌ನ ವಂಚನೆ ಪ್ರಕರಣಗಳ ಜೊತೆಗೆ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ (Jacqueline Fernandez) ಲವ್ ಸ್ಟೋರಿಯನ್ನ ಮುಖ್ಯವಾಗಿರಿಸಿಕೊಂಡು ಸಿನಿಮಾ ಮಾಡಲು ಬಾಲಿವುಡ್ ನಿರ್ದೇಶಕರೊಬ್ಬರು ರೆಡಿಯಾಗಿದ್ದಾರೆ. ಇದನ್ನೂ ಓದಿ: ಕನ್ನಡ ಮಾತನಾಡಿ ಎಂದಿದ್ದಕ್ಕೆ ನಟ ಸಲ್ಮಾನ್ ಆಕ್ರೋಶ

    ತಿಹಾರ್ ಜೈಲಿನ ಜೈಲರ್ ದೀಪಕ್ ಶರ್ಮಾ (Deepak Sharma) ಅವರನ್ನ ಇತ್ತೀಚಿಗೆ ನಿರ್ದೇಶಕ ಆನಂದ್ ಕುಮಾರ್ (Anand Kumar) ಭೇಟಿಯಾಗಿದ್ದಾರೆ. ಸುಕೇಶ್‌ನ ಕಥೆಯನ್ನು ಸಿನಿಮಾ ಮಾಡಲು ಯೋಜನೆ ರೂಪಿಸಿದ್ದಾರೆ ಎನ್ನಲಾಗುತ್ತಿದೆ. ದೀಪಕ್ ಶರ್ಮಾ ಅವರು ನಿರ್ದೇಶಕ ಆನಂದ್ ಜೊತೆಗಿನ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಈ ಸುದ್ದಿಗೆ ಇನ್ನಷ್ಟು ಪುಷ್ಠಿ ನೀಡಿದೆ.

     

    View this post on Instagram

     

    A post shared by Deepak Sharma (@deepaksharma_jailor)

    ಆನಂದ್ ಕಳೆದೊಂದು ವರ್ಷದಿಂದಲೂ ಸುಕೇಶ್ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ ಎನ್ನಲಾಗಿದೆ. ಸುಕೇಶ್ ವಿರುದ್ಧದ ಚಾರ್ಜ್‌ಶೀಟ್‌ಗಳು, ಹೇಳಿಕೆಗಳು ಇತರೆ ವಿಷಯಗಳನ್ನು ಸಂಗ್ರಹಿಸಿ ಅವುಗಳ ಮಾಹಿತಿ ಆಧರಿಸಿ ಕತೆಯನ್ನು ಸಿದ್ಧಪಡಿಸುತ್ತಿದ್ದಾರೆ. ಸುಕೇಶ್‌ರ ಕೆಲ ಆಪ್ತರನ್ನು ಸಹ ಆನಂದ್ ಈಗಾಗಲೇ ಸಂಪರ್ಕಿಸಿದ್ದಾರೆ ಎನ್ನಲಾಗುತ್ತಿದೆ. ಸಿನಿಮಾವು ಸುಕೇಶ್‌ನ ಜೀವನದ ವಿಷಯಗಳ ಬಗ್ಗೆ ಇರಲಿದ್ದು, ಜಾಕ್ವೆಲಿನ್ ಫರ್ನಾಂಡಿಸ್ ರಿಯಲ್ ಕಥೆ ಸಿನಿಮಾದ ಪ್ರಧಾನ ಅಂಶವಾಗಿರಲಿದೆ.

    ಸುಕೇಶ್ ಚಂದ್ರಶೇಖರ್ (Sukesh Chandrashekar) ಒಬ್ಬ ವಂಚಕ. ಬೆಂಗಳೂರು ಮೂಲದ ಈತ ತನ್ನ 17ನೇ ವಯಸ್ಸಿನಿಂದಲೇ ವಂಚನೆ ಆರಂಭಿಸಿದ್ದ. ಫೋರ್ಟಿಸ್ ಆಸ್ಪತ್ರೆ ಮುಖ್ಯಸ್ಥ ಶಿವೇಂಧರ್ ಪತ್ನಿಯಿಂದ 200 ಕೋಟಿ ವಸೂಲಿ ಮಾಡಿದ್ದ. ಈ ಪ್ರಕರಣ ಬೆಳಕಿಗೆ ಬಂದ ಬಳಿಕ ಆತನಿಗೆ ಬಾಲಿವುಡ್ ನಟಿಯರೊಟ್ಟಿಗೆ ಇದ್ದ ಸಂಬಂಧ, ಅವನ ಐಶಾರಾಮಿ ಜೀವನದ ಮಾಹಿತಿಗಳು ಹೊರಬಿದ್ದವು. ಸದ್ಯ ತಿಹಾರ್ ಜೈಲಿನಲ್ಲಿ ಸುಕೇಶ್ ಬಂಧಿಯಾಗಿದ್ದಾರೆ.

  • ವಿಕ್ರಾಂತ್ ರೋಣ ಬೆಡಗಿ ಜಾಕ್ವೆಲಿನ್ ಡ್ರೆಸ್ ಗೆ ಫ್ಯಾನ್ಸ್ ಫಿದಾ

    ವಿಕ್ರಾಂತ್ ರೋಣ ಬೆಡಗಿ ಜಾಕ್ವೆಲಿನ್ ಡ್ರೆಸ್ ಗೆ ಫ್ಯಾನ್ಸ್ ಫಿದಾ

    ಬಾಲಿವುಡ್ (Bollywood) ನಟಿ, ಸುದೀಪ್ ನಟನೆಯ ವಿಕ್ರಾಂತ್ ರೋಣ (Vikrant Rona) ಸಿನಿಮಾದಲ್ಲಿ ‘ರಾ ರಾ ರಕ್ಕಮ್ಮ’ (Rakkamma) ಹಾಡಿಗೆ ಹೆಜ್ಜೆ ಹಾಕಿರುವ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ನಿನ್ನೆಯಷ್ಟೇ ‘ಟೆಲ್ ಇಟ್ ಲೈಕ್ ಎ ವುಮೆನ್’ ಸಿನಿಮಾದ ಡಿನ್ನರ್ ಪಾರ್ಟಿಗೆ ಆಗಮಿಸಿದ್ದರು. ಈ ಪಾರ್ಟಿಗೆ ಬಂದಾಗ ಅವರು ಧರಿಸಿದ್ದ ಡ್ರೆಸ್ (Dress) ಎಲ್ಲರ ಗಮನ ಸೆಳೆದಿತ್ತು. ವಿಶೇಷ ರೀತಿಯ ವಿನ್ಯಾಸ ಹೊಂದಿದ್ದ ಈ ಬಟ್ಟೆ ತೊಟ್ಟ ಚಿಟ್ಟಿಕಂಡು ಫ್ಯಾನ್ಸ್ ಫಿದಾ ಆಗಿದ್ದಾರೆ.

    ಆ ಫೋಟೋವನ್ನು ಅವರು ಇನ್ಸ್ಟಾಗ್ರಾಮ್ ನಲ್ಲಿ ಫೋಸ್ಟ್ ಮಾಡಿದ್ದು, ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಕೆಲವರು ಈ ಡ್ರೆಸ್ ಬಗ್ಗೆ ನೆಗೆಟಿವ್ ಕಾಮೆಂಟ್ ಕೂಡ ಮಾಡಿದ್ದಾರೆ. ನೀಲಿ ಬಣ್ಣದ ಬಟ್ಟೆಯಲ್ಲಿ ಕಂಗೊಳಿಸಿರುವ ಜಾಕ್ವೆಲಿನ್ ಸಖತ್ ಹಾಟ್ ಹಾಟ್ ಆಗಿ ಕಂಡಿದ್ದಾರೆ. ಹೀಗಾಗಿ ಫೋಟೋ ಕೂಡ ವೈರಲ್ ಆಗಿದೆ. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ `ಜೊತೆ ಜೊತೆಯಲಿ’ ಶಿಲ್ಪಾ ಅಯ್ಯರ್

    ಟೆಲ್ ಇಟ್ ಲೈಕ್ ಎ ವುಮೆನ್ ಸಿನಿಮಾ ತಂಡ ವಿಶೇಷವಾದ ಪಾರ್ಟಿಯನ್ನು ಆಯೋಜನೆ ಮಾಡಲಾಗಿತ್ತು. ಈ ಸಿನಿಮಾಗೆ ಆಸ್ಕರ್ ಪ್ರಶಸ್ತಿ ಕೂಡ ಬಂದಿದ್ದು, ಹಲವು ಕಡೆ ಪ್ರದರ್ಶನ ಮತ್ತು ಪಾರ್ಟಿಗಳನ್ನು ಮಾಡುತ್ತಿದ್ದಾರೆ. ಕೆಲವು ಸೆಲಿಬ್ರಿಟಿಗಳನ್ನು ಆಹ್ವಾನಿಸುತ್ತಿದ್ದಾರೆ. ಇಂಥದ್ದೊಂದು ಆಹ್ವಾನ ಜಾಕ್ವೆಲಿನ್ ಗೆ ಬಂದಿದೆ. ಹಾಗಾಗಿ ಪಾಲ್ಗೊಂಡಿದ್ದಾರೆ. ಆ ನೆನಪುಗಳನ್ನು ಅವರು ಹಂಚಿಕೊಂಡಿದ್ದಾರೆ.

    ಜಾಕ್ವೆಲಿನ್ ಫರ್ನಾಂಡಿಸ್ ಗೆ ಒಂದು ಕಡೆ ಈ ರೀತಿಯ ಗೌರವಗಳು ದೊರೆಯುತ್ತಿದ್ದರೆ, ಮತ್ತೊಂದು ಕಡೆ ಜೈಲಿನಲ್ಲಿರುವ ಸುಕೇಶ್ ಚಂದ್ರಶೇಖರ್ ಕಡೆಯಿಂದ ನಾನಾ ರೀತಿಯ ಸಂದೇಶಗಳು ಬರುತ್ತಿವೆ. ಮೊನ್ನೆಯಷ್ಟೇ ಇನ್ನೂ ಜಾಕ್ವೆಲಿನ್ ನನ್ನು ಪ್ರೀತಿಸುತ್ತಿರುವ ವಿಚಾರವನ್ನು ಸುಕೇಶ್ ಹಂಚಿಕೊಂಡಿದ್ದಾರೆ. ಪ್ರೇಮಿಗಳ ದಿನಕ್ಕೆ ವಿಶ್ ಕೂಡ ಮಾಡಿದ್ದರು. ಈ ಎಲ್ಲ ಸಂಗತಿಗಳನ್ನು ಜಾಕ್ವೆಲಿನ್ ಬ್ಯಾಲೆನ್ಸ್ ಮಾಡಿಕೊಂಡು ಹೋಗುತ್ತಿದ್ದಾರೆ.

  • ಜೈಲಿನಿಂದ ಜಾಕ್ವೆಲಿನ್ ಗೆ ಲವ್ ಲೆಟರ್ ಬರೆದ ಸುಕೇಶ್ ಚಂದ್ರಶೇಖರ್

    ಹುಕೋಟಿ ವಂಚನೆಯ ಆರೋಪಿ, ಬೆಂಗಳೂರು ಮೂಲದ ಸುಕೇಶ್ ಚಂದ್ರಶೇಖರ್ (Sukesh Chandrasekhar) ಜೈಲಿನಲ್ಲಿದ್ದುಕೊಂಡೇ (Jail) ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಗೆ ಪ್ರೇಮ ಪತ್ರ (Love Letter) ಬರೆದಿದ್ದಾನೆ. ನಿನಗಾಗಿ ನಾನು ಎಂತಹ ರಿಸ್ಕ್ ತಗೆದುಕೊಳ್ಳಲೂ ರೆಡಿ ಇರುವುದಾಗಿ ತಿಳಿಸಿದ್ದಾನೆ. ಈ ಪತ್ರವನ್ನು ಜಾಕ್ವೆಲಿನ್ ಯಾವ ರೀತಿಯಲ್ಲಿ ಸ್ವೀಕರಿಸುತ್ತಾರೋ ಗೊತ್ತಿಲ್ಲ. ಆದರೆ, ಪತ್ರವನ್ನಂತೂ ಬರೆದು, ಜಾಕ್ವೆಲಿನ್ ಗೆ ಪೋಸ್ಟ್ ಮಾಡಿದ್ದಾರೆ.

    ಜಾಕ್ವೆಲಿನ್ ಫರ್ನಾಂಡಿಸ್ ಮತ್ತು ಸುಕೇಶ್ ಚಂದ್ರಶೇಖರ್ ಡೇಟಿಂಗ್ ವಿಚಾರ ಗುಟ್ಟಾಗಿ ಉಳಿದಿರಲಿಲ್ಲ. ಇಬ್ಬರೂ ಜೊತೆಯಾಗಿ ಕಳೆದ ಖಾಸಗಿ ಫೋಟೋಗಳು ಕೂಡ ವೈರಲ್ ಆಗಿದ್ದವು. ಇವರ ಪ್ರೇಮಕ್ಕೆ ಸಾಕ್ಷಿ ಎನ್ನುವಂತೆ ಕೋಟಿ ಬೆಲೆಬಾಳುವ ಗಿಫ್ಟ್ ಪಡೆದಿದ್ದಳು ಜಾಕ್ವೆಲಿನ್. ಈ ಉಡುಗೊರೆಗಳೇ ಕೊನೆಗೆ ನಟಿಗೆ ಮುಳುವಾದವು. ಕೋರ್ಟ್ ಮೆಟ್ಟಿಲು ಕೂಡ ಹತ್ತಿಸಿದವು. ಇದನ್ನೂ ಓದಿ: ಬ್ಯಾಕ್‌ಲೆಸ್ ಫೋಟೋ ಶೇರ್‌, ಇಂಟರ್‌ನೆಟ್‌ಗೆ ಬೆಂಕಿ ಹಚ್ಚಿದ `ಸಲಾರ್’ ನಟಿ

    ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಕೇಶ್ ಬಂಧನವಾಗುತ್ತಿದ್ದಂತೆಯೇ ಜಾಕ್ವೆಲಿನ್ ಗೂ ಕೂಡ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿತ್ತು. ವಂಚನೆಯ ಹಣದಲ್ಲೇ ನಟಿಗೆ ಉಡುಗೊರೆ ನೀಡಿದ್ದಾನೆ ಎಂದು ಆರೋಪಿಸಲಾಗಿತ್ತು. ಜಾಕ್ವೆಲಿನ್ ಕೂಡ ಬಂಧನವಾಗುತ್ತಾರೆ ಎಂದು ಹೇಳಲಾಗಿತ್ತು. ಆದರೆ, ನಟಿ ಮಧ್ಯಂತರ ಜಾಮೀನು  ಪಡೆದುಕೊಂಡರು. ಆದರೂ, ವಿಚಾರಣೆಗೆ ಹೋಗುವುದು ತಪ್ಪಲಿಲ್ಲ.

    ನಂತರದ ದಿನಗಳಲ್ಲಿ ಸುಕೇಶ್ ಗೂ ತಮಗೂ ಸಂಬಂಧವಿಲ್ಲ. ಅವನಿಂದಾಗಿ ನನ್ನ ಜೀವನ ಹಾಳಾಯಿತು ಎಂದು ಜಾಕ್ವೆಲಿನ್ ಆರೋಪಿಸಿದರು. ಈಕೆ ಏನೇ ಆರೋಪ ಮಾಡಿದರೂ, ಸುಕೇಶ್ ಮಾತ್ರ ಇನ್ನೂ ಜಾಕ್ವೆಲಿನ್ ಜಪ ಮಾಡುತ್ತಿದ್ದಾರೆ. ಮೊನ್ನೆಯಷ್ಟೇ ಪ್ರೇಮಿಗಳ ದಿನದಂದು ವಿಶ್ ಮಾಡಿದ್ದ. ಹೋಳಿ ಹಬ್ಬಕ್ಕೂ ಸುಕೇಶ್ ಶುಭಾಶಯಗಳನ್ನು ಹೇಳಿದ್ದಾನೆ. ಜೊತೆಗೆ ಪ್ರೇಮ ಸಂದೇಶ ಕಳುಹಿಸಿದ್ದಾನೆ.

  • ಜಾಕ್ವೆಲಿನ್ ಮೇಲೆ ಮತ್ತೆ ಲವ್? : ಜೈಲಿನಿಂದಲೇ ಸಂದೇಶ ಕಳುಹಿಸಿದ ಸುಕೇಶ್

    ಹುಕೋಟಿ ವಂಚನೆ ಆರೋಪಿ ಸುಕೇಶ್ ಚಂದ್ರಶೇಖರ್ (Sukesh Chandrasekhar) ಜೈಲಿನಲ್ಲಿದ್ದುಕೊಂಡೇ ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಪರ ಬ್ಯಾಟ್ ಮಾಡುತ್ತಿದ್ದಾನೆ. ಮೊನ್ನೆಯಷ್ಟೇ ಕೋರ್ಟಿಗೆ ಬಂದಿದ್ದ ಸುಕೇಶ್, ನಟಿಯ ಬಗ್ಗೆ ಅಚ್ಚರಿ ಎನ್ನುವಂತಹ ಮಾತುಗಳನ್ನು ಆಡಿದ್ದಾನೆ. ತನ್ನ ಮೇಲಿರುವ ಆರೋಪಕ್ಕೂ ಜಾಕ್ವೆಲಿನ್ ಗೂ ಯಾವುದೇ ಸಂಬಂಧವಿಲ್ಲ. ಆಕೆ ಅಮಾಯಕಿ ಎನ್ನುವ ಅರ್ಥದಲ್ಲಿ ಹೇಳಿಕೆ ನೀಡಿದ್ದಾನೆ.

    ಕೋರ್ಟಿನಲ್ಲಿ ಜಾಕ್ವೆಲಿನ್ ಪರ ಮಾತನಾಡಿದ್ದ ಸುಕೇಶ್, ಆಚೆ ಬಂದ ನಂತರ ಪ್ರೇಮಿಗಳ ದಿನಕ್ಕೆ ಆ ನಟಿಗೆ ಶುಭಾಶಯ ಕೋರಿದ್ದ. ಜಾಕ್ವೆಲಿನ್ ತುಂಬಾ ಒಳ್ಳೆಯ ಹುಡುಗಿ. ಆಕೆ ಯಾವ ತಪ್ಪು ಮಾಡಿಲ್ಲ. ಆಕೆಯ ಮೇಲೆ ಸುಖಾಸುಮ್ಮನೆ ಆರೋಪ ಮಾಡಲಾಗುತ್ತಿದೆ. ಅದಲ್ಲೆವನ್ನೂ ಎದುರಿಸುವ ಶಕ್ತಿ ಆಕೆಗೆ ಇದೆ ಎಂದು ಹೊಗಳಿದ್ದ. ಈ ಕೇಸ್ ನಲ್ಲಿ ಆಕೆ ಗೆದ್ದು ಬರುತ್ತಾಳೆ ಎನ್ನುವ ವಿಶ್ವಾಸವನ್ನೂ ವ್ಯಕ್ತ ಪಡಿಸಿದ್ದ. ಇದನ್ನೂ ಓದಿ: ಹೊಂಬಾಳೆ ಫಿಲ್ಮ್ ಯುವ ಚಿತ್ರಕ್ಕೆ ರುಕ್ಮಿಣಿ ವಸಂತ್ ನಾಯಕಿನಾ? ಸ್ಪಷ್ಟನೆ ನೀಡಿದ ನಟಿ

    ಇದೀಗ ಜೈಲಿನಿಂದ ಮತ್ತೊಂದು ಸಂದೇಶವನ್ನು ಸುಕೇಶ್ ಕಳುಹಿಸಿದ್ದಾನೆ. ‘ಮುಂದಿನ ವರ್ಷ ನಾನು ಚುನಾವಣೆಗೆ ನಿಲ್ಲುತ್ತೇನೆ. ನಾನು ನಿನ್ನನ್ನು ರಕ್ಷಿಸುತ್ತೇನೆ’ ಎಂದು ಅಭಯ ನೀಡಿದ್ದಾನೆ. ಸುಕೇಶ್ ಪ್ರಕರಣದಿಂದಾಗಿ ಜಾಕ್ವೆಲಿನ್ ಕೂಡ ಪೊಲೀಸ್ ಠಾಣೆ ಮೆಟ್ಟಿಲು ಏರಿದ್ದರು. ಕೋರ್ಟಿಗೂ ಅಲೆದಾಡುತ್ತಿದ್ದಾರೆ. ಅಲ್ಲದೇ, ಹಲವು ರೀತಿಯಲ್ಲೂ ಅವಮಾನ ಎದುರಿಸಿದ್ದಾರೆ. ಅಲ್ಲದೇ, ಸುಕೇಶ್ ವಿರುದ್ಧವೇ ಅವರು ಮಾತನಾಡಿದ್ದಾರೆ. ಆದರೂ, ಸುಕೇಶ್ ಜೈಲಿನಿಂದಲೇ ಜಾಕ್ವೆಲಿನ್ ಪರ ಮಾತನಾಡಿದ್ದಾನೆ.

    ಜಾಕ್ವೆಲಿನ್   ಮತ್ತು ಸುಕೇಶ್ ಇಬ್ಬರೂ ಡೇಟಿಂಗ್ ಮಾಡುತ್ತಿದ್ದರು ಎನ್ನುವ ಕಾರಣಕ್ಕಾಗಿ ಬಹುಕೋಟಿ ವಂಚನೆ ಪ್ರಕರಣದಲ್ಲಿ ಜಾಕ್ವೆಲಿನ್ ಹೆಸರು ಕೇಳಿ ಬಂದಿತ್ತು. ಜಾರಿ ನಿರ್ದೇಶನಾಲಯವು ಜಾಕ್ಲಿನ್ ಮೇಲೆಯೂ ಆರೋಪ ಮಾಡಿತ್ತು. ತನಿಖೆಯನ್ನೂ ನಡೆಸಿತ್ತು. ನಿರಂತರವಾಗಿ ಇಬ್ಬರ ಮೇಲೂ ತನಿಖೆ ನಡೆದಿದೆ. ಹೀಗಾಗಿ ಜಾಕ್ವೆಲಿನ್ ಪರ ಸುಕೇಶ್ ನಿಂತುಕೊಂಡಿದ್ದಾನೆ.

  • ವ್ಯಾಲೆಂಟೈನ್ ದಿನದಂದು ವಿಶ್ ಮಾಡಿ ನಟಿ ಜಾಕ್ವೆಲಿನ್ ಗೆ ಶಾಕ್ ಕೊಟ್ಟ ಸುಕೇಶ್

    ವ್ಯಾಲೆಂಟೈನ್ ದಿನದಂದು ವಿಶ್ ಮಾಡಿ ನಟಿ ಜಾಕ್ವೆಲಿನ್ ಗೆ ಶಾಕ್ ಕೊಟ್ಟ ಸುಕೇಶ್

    ಹುಕೋಟಿ ವಂಚನೆ ಆರೋಪದಲ್ಲಿ ಜೈಲುವಾಸ ಅನುಭವಿಸುತ್ತಿರುವ ಸುಕೇಶ್ ಚಂದ್ರಶೇಖರ್ ಪ್ರೇಮಿಗಳ ದಿನದಂದು ಗೆಳತಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಶುಭಾಶಯ ಕೋರಿ ಶಾಕ್ ಕೊಟ್ಟಿದ್ದಾರೆ. ಸುಕೇಶ್ ಮತ್ತು ಜಾಕ್ವೆಲಿನ್ ಡೇಟಿಂಗ್ ಮಾಡುತ್ತಿದ್ದರು ಎನ್ನುವ ವಿಚಾರವೇನೂ ಗುಟ್ಟಾಗಿ ಉಳಿದಿರಲಿಲ್ಲ. ಆದರೆ, ಜಾರಿ ನಿರ್ದೇಶನಾಲಯ ಸುಕೇಶ್ ಮೇಲೆ ಪ್ರಕರಣ ದಾಖಲಿಸುತ್ತಿದ್ದಂತೆ ಜಾಕ್ವೆಲಿನ್ ಅಂತರ ಕಾಪಾಡಿಕೊಂಡಿದ್ದರು.

    ವಂಚನೆ ಮಾಡಿರುವ ಬಹುಕೋಟಿ ಹಣದಲ್ಲಿ ನಟಿ, ಗೆಳತಿ ಜಾಕ್ವೆಲಿನ್ ಗೆ ಆರೋಪಿ ಸುಕೇಶ್ ಹಲವು ವಸ್ತುಗಳನ್ನು ಉಡುಗೊರೆಯಾಗಿ ಕೊಡಿಸಿದ್ದಾನೆ ಎಂದು ಜಾರಿ ನಿರ್ದೇಶನಾಲಯ ಪತ್ತೆ ಮಾಡಿತ್ತು. ವಿಚಾರಣೆಗೆ ಬರುವಂತೆ ಜಾಕ್ವೆಲಿನ್ ಗೂ ನೋಟಿಸ್ ಜಾರಿ ಮಾಡಿತ್ತು. ಕೋರ್ಟಿಗೂ ಚಾರ್ಜ್ ಶೀಟ್ ಸಲ್ಲಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಕ್ವೆಲಿನ್ ಜಾಮೀನು ಕೂಡ ಪಡೆದುಕೊಂಡಿದ್ದರು. ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಸುಕೇಶ್ ನಿಂದ ಜಾಕ್ವೆಲಿನ್ ಅಂತರ ಕಾಪಾಡಿಕೊಂಡಿದ್ದರು. ಇದನ್ನೂ ಓದಿ: ವಿಶೇಷ ಫೋಟೋ ಶೇರ್‌ ಮಾಡಿ ತಮನ್ನಾ ಜೊತೆಗಿನ ಪ್ರೀತಿ ಅಧಿಕೃತಗೊಳಿಸಿದ ವಿಜಯ್ ವರ್ಮಾ

    ಸುಕೇಶ್ ಹಾಗೂ ಆತನ ಮತ್ತೋರ್ವ ಗೆಳತಿಯಿಂದಾಗಿ ತನಗೆ ಮೋಸವಾಗಿದೆ ಎಂದು ಮೊನ್ನೆಯಷ್ಟೇ ಜಾಕ್ವೆಲಿನ್ ಹೇಳಿಕೆ ನೀಡಿದ್ದರು. ಹಲವು ಆರೋಪಗಳನ್ನೂ ಮಾಡಿದ್ದರು. ಸುಕೇಶ್ ಮೇಲೆ ಏನೇ ಆರೋಪ ಮಾಡಿದರೂ, ಇನ್ನೂ ತಾನು ಜಾಕ್ವೆಲಿನ್ ನನ್ನು ಪ್ರೀತಿಸುತ್ತಿರುವ ವಿಚಾರವನ್ನು ವಿಶ್ ಮಾಡುವ ಮೂಲಕ ಸುಕೇಶ್ ಸಾಬೀತು ಪಡಿಸಿದ್ದಾರೆ. ಮಾಧ್ಯಮಗಳ ಮುಂದೆಯೇ ಶುಭಾಶಯ ಕೋರಿದ್ದಾರೆ.

    ಸುಕೇಶ್ ಹೇಳಿರುವ ಶುಭಾಶಯವನ್ನು ಜಾಕ್ವೆಲಿನ್ ಹೇಗೆ ಸ್ವೀಕರಿಸುತ್ತಾರೋ ಗೊತ್ತಿಲ್ಲ. ಆದರೆ, ಸುಕೇಶ್ ನಿಂದಾಗಿ ತಮಗೆ ಸಾಕಷ್ಟು ತೊಂದರೆ ಆಗಿದೆ ಎನ್ನುವುದನ್ನು ಪದೇ ಪದೇ ಅವರು ಹೇಳುತ್ತಲೇ ಇರುತ್ತಾರೆ. ಸುಕೇಶ್ ಮಾತಿಗೆ ಜಾಕ್ವೆಲಿನ್ ಏನು ಹೇಳುತ್ತಾರೆ ಎನ್ನುವುದನ್ನು ಕಾದು ನೋಡಬೇಕು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಜಾಕ್ವೆಲಿನ್ ಕಂಡರೆ ನೋರಾಗೆ ಆಗಲ್ಲ: ಜೈಲಿನಿಂದಲೇ ಸುಕೇಶ್ ಪತ್ರ

    ಜಾಕ್ವೆಲಿನ್ ಕಂಡರೆ ನೋರಾಗೆ ಆಗಲ್ಲ: ಜೈಲಿನಿಂದಲೇ ಸುಕೇಶ್ ಪತ್ರ

    ಹುಕೋಟಿ ವಂಚನೆ ಆರೋಪದಲ್ಲಿ ಜೈಲುಪಾಲಾಗಿರುವ ಬೆಂಗಳೂರು ಮೂಲದ ಸುಕೇಶ್ ಚಂದ್ರಶೇಖರ್ (Sukesh Chandrasekhar), ತಮ್ಮ ಇಬ್ಬರು ಗರ್ಲ್ ಫ್ರೆಂಡ್ ಬಗ್ಗೆ ಪತ್ರವೊಂದನ್ನು ಬರೆದಿದ್ದಾನೆ. ಆ ಪತ್ರವನ್ನು ಮಾಧ್ಯಮ ಪ್ರಕಟಣೆಗೆ ನೀಡಿದ್ದಾರೆ. ಸುಕೇಶ್ ಬರೆದ ಪತ್ರದಲ್ಲಿ ನಟಿಯರಾದ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಮತ್ತು ನೋರಾ (Nora) ಬಗೆಗಿನ ಸಂಬಂಧವನ್ನು ಹೇಳಿಕೊಂಡಿದ್ದಾನೆ. ಜಾಕ್ವೆಲಿನ್ ಕಂಡರೆ ನೋರಾಗೆ ಹೊಟ್ಟೆಉರಿ. ಹಾಗಾಗಿ ಜಾಕ್ವೆಲಿನ್ ಬಗ್ಗೆ ಸಲ್ಲದ ಆರೋಪಗಳನ್ನು ಆಕೆ ಮಾಡುತ್ತಿದ್ದಾಳೆ ಎಂದು ಹೇಳಿದ್ದಾನೆ.

    ಮೂರು ದಿನಗಳ ಹಿಂದೆಯಷ್ಟೇ ಕೋರ್ಟ್ ಮೆಟ್ಟಿಲು ಏರಿದ್ದ ಜಾಕ್ವೆಲಿನ್, ಬಾಯ್ ಫ್ರೆಂಡ್ ಸುಕೇಶ್ ಬಗ್ಗೆ ಒಂದಷ್ಟು ಆರೋಪ ಮಾಡಿದ್ದಳು. ತನ್ನ ವೈಯಕ್ತಿಕ ಜೀವನ ಹಾಗೂ ವೃತ್ತಿ ಜೀವನ ಹಾಳಾಗಿದ್ದು ಸುಕೇಶ್ ನಿಂದ. ಅವನು ಮಹಾ ಮೋಸಗಾರ ಎಂದೂ ಮಾತನಾಡಿದ್ದರು. ಈತನ ಬಗ್ಗೆ ಎಲ್ಲವೂ ಗೊತ್ತಿದ್ದರೂ, ನೂರಾ ಅದೆಲ್ಲವನ್ನೂ ಬಚ್ಚಿಟ್ಟಿದ್ದಳು ಎಂದು ಆಕೆಯ ಮೇಲೂ ಹರಿಹಾಯ್ದಿದ್ದಳು. ಇದನ್ನೂ ಓದಿ: ಹುಟ್ಟುಹಬ್ಬದಂದು ಸಿಹಿಸುದ್ದಿ ಕೊಟ್ಟ ನಟ ನಿಖಿಲ್ ಕುಮಾರಸ್ವಾಮಿ

    ಜಾಕ್ವೆಲಿನ್ ಮಾತನಾಡಿದ ಬೆನ್ನಲ್ಲೇ ಸುಕೇಶ್ ಪತ್ರವೊಂದನ್ನು ತಮ್ಮ ವಕೀಲರ ಮೂಲಕ ಬಿಡುಗಡೆ ಮಾಡಿಸಿದ್ದಾರೆ. ‘ಜಾಕ್ವೆಲಿನ್ ಜೊತೆ ನನ್ನ ಸ್ನೇಹ ಮುರಿಯಬೇಕು ಎಂದು ಹಲವಾರು ಬಾರಿ ನೋರಾ ಪ್ರಯತ್ನಿಸಿದಳು. ಜಾಕ್ವೆಲಿನ್ ಜೊತೆ ನಾನು ಇರುವುದು ಆಕೆಗೆ ಇಷ್ಟವಿರಲಿಲ್ಲ. ಜಾಕ್ವೆಲಿನ್ ಜೊತೆ ಹೋಗಲು ನೋರಾ ಬಿಡುತ್ತಿರಲಿಲ್ಲ. ನಾನು ಕಾಲ್ ರಿಸೀವ್ ಮಾಡದೇ ಇದ್ದರೆ ಪದೇ ಪದೇ ಕಾಲ್ ಮಾಡುತ್ತಿದ್ದಳು. ಜಾಕ್ವೆಲಿನ್ ಜೊತೆಗಿನ ಸ್ನೇಹವನ್ನು ಮುರಿದುಕೋ ಎಂದು ಹೇಳುತ್ತಿದ್ದಳು’ ಎಂದು ಪತ್ರದಲ್ಲಿ ಸುಕೇಶ್ ಬರೆದಿದ್ದಾನೆ.

    ನೋರಾ ಏನೆಲ್ಲ ಇಷ್ಟ ಪಡುತ್ತಿದ್ದಳೋ ಅದೆಲ್ಲವನ್ನೂ ಕೊಟ್ಟಿರುವುದಾಗಿಯೂ ಪತ್ರದಲ್ಲಿ ಉಲ್ಲೇಖಿಸಿದ್ದಾನೆ ಸುಕೇಶ್. ಬ್ಯಾಗ್, ಒಡವೆ ಇತ್ಯಾದಿ ಫೋಟೋಗಳನ್ನು ನೋರಾ ಕಳುಹಿಸುತ್ತಿದ್ದಳು. ಆಕೆ ಏನೆಲ್ಲ ಕೇಳುತ್ತಿದ್ದಳೋ ಅದೆಲ್ಲವನ್ನೂ ನಾನು ಕಳುಹಿಸಿದ್ದೇನೆ. ಎರಡು ಕೋಟಿ ರೂಪಾಯಿಗೂ ಅಧಿಕ ವಸ್ತುಗಳನ್ನು ನೋರಾಗೆ ಕೊಟ್ಟಿದ್ದೇನೆ ಎಂದು ಅವನು ಪತ್ರದಲ್ಲಿ ಬರೆದಿದ್ದಾನೆ.  ಈ ಪತ್ರ ಬರೆಯುವುದರ ಹಿಂದಿನ ಉದ್ದೇಶವನ್ನು ಸ್ಪಷ್ಟ ಪಡಿಸದೇ ಇದ್ದರೂ, ಪತ್ರವಂತೂ ಭಾರೀ ಸದ್ದು ಮಾಡುತ್ತಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಗೆಳೆಯನ ವಿರುದ್ಧವೇ ಹೇಳಿಕೆ ದಾಖಲಿಸಿದ ನಟಿ ಜಾಕ್ವೆಲಿನ್ ಫರ್ನಾಂಡಿಸ್

    ಗೆಳೆಯನ ವಿರುದ್ಧವೇ ಹೇಳಿಕೆ ದಾಖಲಿಸಿದ ನಟಿ ಜಾಕ್ವೆಲಿನ್ ಫರ್ನಾಂಡಿಸ್

    ವಿಕ್ರಾಂತ್ ರೋಣ ಸಿನಿಮಾದಲ್ಲಿ ‘ರಾ ರಾ ರಕ್ಕಮ್ಮ’ ಹಾಡಿಗೆ ಸೊಂಟ ಬಳುಕಿಸಿದ್ದ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಇದೀಗ ಗೆಳೆಯನ ವಿರುದ್ಧವೇ ದೂರು ದಾಖಲಿಸಿದ್ದಾರೆ. ಬಹುಕೋಟಿ ವಂಚನೆ ಪ್ರಕರಣದಲ್ಲಿ ಜೈಲುವಾಸ ಅನುಭವಿಸುತ್ತಿರುವ ಸುಖೇಶ್ ಚಂದ್ರಶೇಖರ್ ವಿರುದ್ಧವೇ ದೆಹಲಿ ಪಟಿಯಾಲಾ ಹೌಸ್ ಕೋರ್ಟಿನಲ್ಲಿ ಹೇಳಿಕೆ ದಾಖಲಿಸಿದ್ದಾರೆ. ಬಹುಕೋಟಿ ವಂಚನೆಯ ಆರೋಪಿ ಆಗಿರುವ ಸುಖೇಶ್ ಚಂದ್ರಶೇಖರ್ ಕಡೆಯಿಂದ ದುಬಾರಿ ಬೆಲೆಯ ಗಿಫ್ಟ್ ಪಡೆದುಕೊಂಡಿದ್ದಾರೆ ಎನ್ನುವ ಕಾರಣಕ್ಕಾಗಿ ಜಾಕ್ವೆಲಿನ್ ಇಡಿ ವಿಚಾರಣೆಯನ್ನು ಎದುರಿಸಿದರು.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಕೋರ್ಟ್ ಮುಂದೆ ಹಾಜರಾಗಿದ್ದ ಜಾಕ್ವೆಲಿನ್ ಕಣ್ಣೀರಿಟ್ಟಿದ್ದಾರೆ. ಆತನ ಸ್ನೇಹದಿಂದಾಗಿ ನೆಮ್ಮದಿ ಕಳೆದುಕೊಂಡೆ ಹಾಗೂ ಅವನು ನನ್ನ ಭಾವನೆಗಳೊಂದಿಗೆ ಆಟವಾಡಿ, ಜೀವನವನ್ನೇ ನರಕ ಮಾಡಿದ್ದಾನೆ ಎಂದು ಅವರು ಹೇಳಿಕೊಂಡಿದ್ದಾರೆ. ಜೀವನವನ್ನು ಮಾತ್ರವಲ್ಲ, ವೃತ್ತಿ ಜೀವನವನ್ನೇ ಅವನು ಹದಗೆಡಿಸಿಬಿಟ್ಟಿದ್ದಾನೆ ಎಂದು ದೂರಿದ್ದಾರೆ. ಸುಖೇಶ್ ತಮಗೆ ಪರಿಚಯವಾಗಿದ್ದು ಪಿಂಕಿ ಇರಾನಿ ಎನ್ನುವ ಮಹಿಳೆಯಿಂದ ಎಂದು ಅವರು ಹೇಳಿಕೆ ಕೊಟ್ಟಿದ್ದಾರೆ. ಇದನ್ನೂ ಓದಿ: ರಶ್ಮಿಕಾ ಬೀಚ್ ಫೋಟೋ: ದೇವರಕೊಂಡ ಕ್ಲಿಕ್ಕಿಸಿದ್ದಾ ಎಂದ ನೆಟ್ಟಿಗರು

    ಪಿಂಕಿ ಇರಾನಿ ಎನ್ನುವ ಹೆಣ್ಣುಮಗಳು ಸುಖೇಶ್ ನನ್ನು ಗೃಹ ಸಚಿವಾಲಯದ ಅಧಿಕಾರಿ ಎಂದು ಪರಿಚಯಿಸಿದರು. ಈ ಪರಿಚಯ ಸ್ನೇಹವಾಯಿತು. ಆತ್ಮೀಯತೆ ಬೆಳೆಯಿತು. ಸುಖೇಶ್ ನಿಂದ ಕೆಲವು ಗಿಫ್ಟ್ ಗಳು ಬಂದಿದ್ದು ಪಿಂಕಿ ಇರಾನಿ ಕಡೆಯಿಂದ. ಸುಖೇಶ್ ಬಗ್ಗೆ ವಿಷಯ ಗೊತ್ತಿದ್ದರೂ, ಆಕೆ ನನ್ನಿಂದ ಎಲ್ಲವನ್ನೂ ಮುಚ್ಚಿಟ್ಟರು. ಅವನು ನನ್ನ ದೊಡ್ಡ ಅಭಿಮಾನಿ ಎಂದು ಸುಳ್ಳು ಹೇಳಿದ್ದರು ಎಂದು ಕೋರ್ಟ್ ನಲ್ಲಿ ಹೇಳಿದ್ದಾರೆ ಎಂದು ಹೇಳಲಾಗುತ್ತಿದೆ.

    ಸುಖೇಶ್ ಪ್ರಕರಣದಿಂದಾಗಿ ಜಾಕ್ವೆಲಿನ್ ಹೈರಾಣಾಗಿದ್ದಾರೆ. ಈ ಕಡೆ ಜಾರಿ ನಿರ್ದೇಶನಾಲಯದ ತನಿಖೆ, ಆ ಕಡೆ ಮರ್ಯಾದೆ ಎರಡನ್ನೂ ಕಳೆದುಕೊಂಡಿದ್ದು ಸುಸ್ತಾಗಿದ್ದಾರಂತೆ. ಪಾಸ್ಟ್ ಪೋರ್ಟ್ ಪೊಲೀಸ್ ವಶದಲ್ಲಿ ಇರುವುದರಿಂದ ನೆಮ್ಮೆದಿಯಿಂದ ಹೊರದೇಶಕ್ಕೂ ಅವರಿಗೆ ಹೋಗಲು ಆಗುತ್ತಿಲ್ಲವಂತೆ. ಒಟ್ನಲ್ಲಿ ಸುಖೇಶ್ ಪ್ರಕರಣ ಅವರನ್ನು ನಿದ್ದೆಗೆಡಿಸಿದ್ದಂತೂ ನಿಜ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಅವನು ನನ್ನ ಜೀವನ ನರಕವಾಗಿಸಿದ : ನಟಿ ಜಾಕ್ವೆಲಿನ್ ಫರ್ನಾಂಡಿಸ್

    ಅವನು ನನ್ನ ಜೀವನ ನರಕವಾಗಿಸಿದ : ನಟಿ ಜಾಕ್ವೆಲಿನ್ ಫರ್ನಾಂಡಿಸ್

    ರ್ನಾಟಕ ಮೂಲದ ಸುಖೇಶ್ ಚಂದ್ರಶೇಖರ್ (Sukhesh Chandrasekhar) ಸ್ನೇಹದಿಂದಾಗಿ ನಾನು ನೆಮ್ಮದಿ ಕಳೆದುಕೊಂಡೆ ಎಂದಿದ್ದಾರೆ ಬಾಲಿವುಡ್ ನಟಿ ಹಾಗೂ ಕನ್ನಡದ ವಿಕ್ರಾಂತ್ ರೋಣ ಚಿತ್ರದ ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez). ಬಹುಕೋಟಿ ವಂಚನೆಯ ಆರೋಪಿ ಆಗಿರುವ ಸುಖೇಶ್ ಚಂದ್ರಶೇಖರ್ ಕಡೆಯಿಂದ ದುಬಾರಿ ಬೆಲೆಯ ಗಿಫ್ಟ್ ಪಡೆದುಕೊಂಡಿದ್ದಾರೆ ಎನ್ನುವ ಕಾರಣಕ್ಕಾಗಿ ಜಾಕ್ವೆಲಿನ್ ಇಡಿ ವಿಚಾರಣೆಯನ್ನು ಎದುರಿಸಿದರು.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಕೋರ್ಟ್ ಮುಂದೆ ಹಾಜರಾಗಿದ್ದ ಜಾಕ್ವೆಲಿನ್ ಕಣ್ಣೀರಿಟ್ಟಿದ್ದಾರೆ. ಆತನ ಸ್ನೇಹದಿಂದಾಗಿ ನೆಮ್ಮದಿ ಕಳೆದುಕೊಂಡೆ ಹಾಗೂ ಅವನು ನನ್ನ ಭಾವನೆಗಳೊಂದಿಗೆ ಆಟವಾಡಿ, ಜೀವನವನ್ನೇ ನರಕ ಮಾಡಿದ್ದಾನೆ ಎಂದು ಅವರು ಹೇಳಿಕೊಂಡಿದ್ದಾರೆ. ಜೀವನವನ್ನು ಮಾತ್ರವಲ್ಲ, ವೃತ್ತಿ ಜೀವನವನ್ನೇ ಅವನು ಹದಗೆಡಿಸಿಬಿಟ್ಟಿದ್ದಾನೆ ಎಂದು ದೂರಿದ್ದಾರೆ. ಸುಖೇಶ್ ತಮಗೆ ಪರಿಚಯವಾಗಿದ್ದು ಪಿಂಕಿ ಇರಾನಿ ಎನ್ನುವ ಮಹಿಳೆಯಿಂದ ಎಂದು ಅವರು ಹೇಳಿಕೆ ಕೊಟ್ಟಿದ್ದಾರೆ. ಇದನ್ನೂ ಓದಿ: ಖ್ಯಾತ ನಟ ವಿಜಯ್ ಆಂಟನಿ ಅಪಘಾತ: ಸ್ಥಿತಿ ಚಿಂತಾಜನಕ

    ಪಿಂಕಿ ಇರಾನಿ (Pinky Irani) ಎನ್ನುವ ಹೆಣ್ಣುಮಗಳು ಸುಖೇಶ್ ನನ್ನು ಗೃಹ ಸಚಿವಾಲಯದ ಅಧಿಕಾರಿ ಎಂದು ಪರಿಚಯಿಸಿದರು. ಈ ಪರಿಚಯ ಸ್ನೇಹವಾಯಿತು. ಆತ್ಮೀಯತೆ ಬೆಳೆಯಿತು. ಸುಖೇಶ್ ನಿಂದ ಕೆಲವು ಗಿಫ್ಟ್ ಗಳು ಬಂದಿದ್ದು ಪಿಂಕಿ ಇರಾನಿ ಕಡೆಯಿಂದ. ಸುಖೇಶ್ ಬಗ್ಗೆ ವಿಷಯ ಗೊತ್ತಿದ್ದರೂ, ಆಕೆ ನನ್ನಿಂದ ಎಲ್ಲವನ್ನೂ ಮುಚ್ಚಿಟ್ಟರು. ಅವನು ನನ್ನ ದೊಡ್ಡ ಅಭಿಮಾನಿ ಎಂದು ಸುಳ್ಳು ಹೇಳಿದ್ದರು ಎಂದು ಕೋರ್ಟ್ ನಲ್ಲಿ ಹೇಳಿದ್ದಾರೆ ಎಂದು ಹೇಳಲಾಗುತ್ತಿದೆ.

    ಸುಖೇಶ್ ಪ್ರಕರಣದಿಂದಾಗಿ ಜಾಕ್ವೆಲಿನ್ ಹೈರಾಣಾಗಿದ್ದಾರೆ. ಈ ಕಡೆ ಜಾರಿ ನಿರ್ದೇಶನಾಲಯದ ತನಿಖೆ, ಆ ಕಡೆ ಮರ್ಯಾದೆ ಎರಡನ್ನೂ ಕಳೆದುಕೊಂಡಿದ್ದು ಸುಸ್ತಾಗಿದ್ದಾರಂತೆ. ಪಾಸ್ಟ್ ಪೋರ್ಟ್ ಪೊಲೀಸ್ ವಶದಲ್ಲಿ ಇರುವುದರಿಂದ ನೆಮ್ಮೆಯಿಂದ ಹೊರದೇಶಕ್ಕೂ ಅವರಿಗೆ ಹೋಗಲು ಆಗುತ್ತಿಲ್ಲವಂತೆ. ಒಟ್ನಲ್ಲಿ ಸುಖೇಶ್ ಪ್ರಕರಣ ಅವರನ್ನು ನಿದ್ದೆಗೆಡಿಸಿದ್ದಂತೂ ನಿಜ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • 200 ಕೋಟಿ ವಂಚನೆ ಕೇಸ್ : ‘ವಿಕ್ರಾಂತ್ ರೋಣ’ ಬೆಡಗಿಯ ವಿರುದ್ಧ ಮಾನನಷ್ಟ ಮೊಕದ್ದಮೆ

    200 ಕೋಟಿ ವಂಚನೆ ಕೇಸ್ : ‘ವಿಕ್ರಾಂತ್ ರೋಣ’ ಬೆಡಗಿಯ ವಿರುದ್ಧ ಮಾನನಷ್ಟ ಮೊಕದ್ದಮೆ

    ಕನ್ನಡದ ವಿಕ್ರಾಂತ್ ರೋಣ ಸಿನಿಮಾದ ‘ರಾ ರಾ ರಕ್ಕಮ್ಮ’ ಹಾಡಿಗೆ ಸೊಂಟ ಬಳುಕಿಸಿದ್ದ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಿರುದ್ಧ, ಬಾಲಿವುಡ್ ನಟಿ ನೋರಾ ಫತೇಹಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಈ ಇಬ್ಬರೂ ನಟಿಯರು ಸುಕೇಶ್ ಚಂದ್ರಶೇಖರ್ ವಿರುದ್ಧದದ 200 ಕೋಟಿ ವಂಚನೆ ಪ್ರಕರಣದ ಆರೋಪಿಗಳಾಗಿದ್ದಾರೆ ಎನ್ನುವುದು ವಿಶೇಷ. ಇದೇ ಕಾರಣಕ್ಕಾಗಿಯೇ ಜಾಕ್ವೆಲಿನ್ ಮೇಲೆ ನೋರಾ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

    ಸುಕೇಶ್ ವಂಚನೆ ಪ್ರಕರಣದಲ್ಲಿ ಈ ನಟಿಯರ ಹೆಸರು ಕೇಳಿ ಬಂದಿತ್ತು. ಜಾರಿ ನಿರ್ದೇಶನಾಲಯ ಕೂಡ ಇಬ್ಬರನ್ನೂ ಕರೆಯಿಸಿ ವಿಚಾರಣೆಗೆ ಒಳಪಡಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನೋರಾ ಫತೇಹಿ ವಿರುದ್ಧ ಜಾಕ್ವೆಲಿನ್ ಮಾನಹಾನಿ ಆಗುವಂತಹ ಮತ್ತು ದುರುದ್ದೇಶಪೂರಿತ ಕಾರಣಗಳನ್ನು ನೀಡುತ್ತಿದ್ದಾರಂತೆ. ಅದರಿಂದಾಗಿ ತಮಗೆ ಮಾನ ಹಾನಿ ಆಗುತ್ತಿದೆ ಎಂದು ನೋರಾ ಆರೋಪಿಸಿದ್ದಾರೆ. ಇದನ್ನೂ ಓದಿ: ‘ಸೀತಾ ಸರ್ಕಲ್ ಶ್ರೀ ಕೃಷ್ಣನ್ ಮನೆ’ ಸಿನಿಮಾ ಫಸ್ಟ್ ಲುಕ್ ರಿಲೀಸ್

    ಈ ಇಬ್ಬರೂ ನಟಿಯರು ಮೂಲತಃ ವಿದೇಶಿಗರಾಗಿದ್ದು, ಬಾಲಿವುಡ್ ನಲ್ಲಿ ತಮ್ಮದೇ ಆದ ಅಭಿಮಾನಿ ಬಳಗ ಹೊಂದಿದ್ದಾರೆ. ಈ ಕಾರಣದಿಂದಾಗಿಯೇ ಇವರು ಸುಕೇಶ್ ಸಂಪರ್ಕಕ್ಕೂ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಹಲವು ಬಾರಿ ಈ ನಟಿಯರನ್ನು ಜಾರಿ ನಿರ್ದೇಶನಾಲಯವು ವಿಚಾರಣೆಗಾಗಿ ಕರೆದಿದೆ. ಆದರೆ, ಈ ಕೇಸ್ ಗೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ನಟಿಯರು ಹೇಳಿಕೆ ಕೊಡುತ್ತಲೇ ಬಂದಿದ್ದಾರೆ. ಸುಕೇಶ್ ತಮಗೆ ನೇರವಾಗಿ ಪರಿಚಯವೇ ಇಲ್ಲವೆಂದು ನೋರಾ ಹೇಳಿದ್ದರೆ, ಅವನಿಂದ ಯಾವುದೇ ಉಡುಗೊರೆ ಪಡೆದಿಲ್ಲ ಎಂದು ಜಾಕ್ವೆಲಿನ್ ವಾದಿಸಿದ್ದಾರೆ.

    ಈ ಇಬ್ಬರೂ ನಟಿಯರು ಏನೇ ಹೇಳಿದರೂ, ಈಗಾಗಲೇ ಕೋರ್ಟ್ ಕಟಕಟೆಯಲ್ಲಿ ನಿಂತು ಬಂದಿದ್ದಾರೆ. ಜಾರಿ ನಿರ್ದೇಶನಾಲಯವು ಇಬ್ಬರ ಮೇಲೂ ಗುರುತರ ಆರೋಪ ಮಾಡಿ ಜಾರ್ಜ್ ಶೀಟ್ ಕೂಡ ಸಲ್ಲಿಸಲಾಗಿದೆ. ನೂರಾರು ಕೋಟಿಯ ವಂಚನೆಯ ಪ್ರಕರಣ ಇದಾಗಿದ್ದರಿಂದ, ಗಂಭೀರವಾಗಿ ಈ ಪ್ರಕರಣವನ್ನು ತಗೆದುಕೊಳ್ಳಲಾಗಿದೆ. ಇಬ್ಬರೂ ಇಕ್ಕಟ್ಟಿಗೆ ಸಿಲುಕಿದ್ದರೂ, ಒಬ್ಬರ ಮೇಲೆ ಒಬ್ಬರು ಆರೋಪ ಮಾಡಿ, ಬೇರೆ ಕಾರಣಗಳಿಂದಾಗಿ ಮತ್ತೆ ಕೋರ್ಟ್ ಮೆಟ್ಟಿಲು ಹತ್ತುವಂತಾಗಿದೆ.

    Live Tv
    [brid partner=56869869 player=32851 video=960834 autoplay=true]