Tag: Jagalur

  • ಫಸಲಿಗೆ ಬಂದಿದ್ದ 300ಕ್ಕೂ ಹೆಚ್ಚು ಅಡಿಕೆ ಗಿಡ ಕಡಿದ ದುಷ್ಕರ್ಮಿಗಳು – ಕಣ್ಣೀರಿಟ್ಟ ರೈತ

    ಫಸಲಿಗೆ ಬಂದಿದ್ದ 300ಕ್ಕೂ ಹೆಚ್ಚು ಅಡಿಕೆ ಗಿಡ ಕಡಿದ ದುಷ್ಕರ್ಮಿಗಳು – ಕಣ್ಣೀರಿಟ್ಟ ರೈತ

    ದಾವಣಗೆರೆ: ಫಸಲಿಗೆ ಬಂದಿದ್ದ 300ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು (Arecanut Trees) ದುಷ್ಕರ್ಮಿಗಳು ಕಡಿದು ಹಾಕಿರುವ ಘಟನೆ ಜಗಳೂರು (Jagalur) ತಾಲೂಕಿನ ಕಾಟೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ರೈತ (Farmer) ಅಜ್ಜಪ್ಪ ಎಂಬವರಿಗೆ ಸೇರಿದ ನಾಲ್ಕು ವರ್ಷದ ಅಡಿಕೆ ಗಿಡಗಳನ್ನು ದುಷ್ಕರ್ಮಿಗಳು ಕಡಿದು ಹಾಕಿದ್ದಾರೆ. ಅವರು ಬೆಳಗ್ಗೆ ಜಮೀನಿಗೆ ಬಂದಾಗ ದುಷ್ಕರ್ಮಿಗಳ ಕೃತ್ಯ ಬೆಳಕಿಗೆ ಬಂದಿದೆ. ಫಸಲಿಗೆ ಬಂದಿದ್ದ ಅಡಿಕೆ ಗಿಡಗಳನ್ನು ಕಳೆದುಕೊಂಡು ರೈತ ಕಣೀರಿಟ್ಟಿದ್ದಾನೆ. ಇದನ್ನೂ ಓದಿ: ಉಡುಪಿ | ಕಾಂತಾರ ಚಿತ್ರದ ಕಂಬಳದ ದೃಶ್ಯದಲ್ಲಿ ಕಾಣಿಸಿಕೊಂಡಿದ್ದ ಅಪ್ಪು ಕೋಣ ಇನ್ನಿಲ್ಲ

    ಸ್ಥಳಕ್ಕೆ ಜಗಳೂರು ಪೊಲೀಸ್ ಠಾಣೆಯ ಸಿಪಿಐ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ದುಷ್ಕರ್ಮಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಬಾಗಲಕೋಟೆ | ಸಹಪಾಠಿಗಳಿಂದ ರ‍್ಯಾಗಿಂಗ್ – ಡೆತ್‌ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

  • ಕಾಡು ಹಂದಿಗಳು ಬೆಳೆ ನಾಶ ಮಾಡಿದ್ದಕ್ಕೆ ಫಾರೆಸ್ಟ್ ವಾಚರ್ ಮೇಲೆ ಮಾರಣಾಂತಿಕ ಹಲ್ಲೆ

    ಕಾಡು ಹಂದಿಗಳು ಬೆಳೆ ನಾಶ ಮಾಡಿದ್ದಕ್ಕೆ ಫಾರೆಸ್ಟ್ ವಾಚರ್ ಮೇಲೆ ಮಾರಣಾಂತಿಕ ಹಲ್ಲೆ

    ದಾವಣಗೆರೆ: ಕಾಡು ಹಂದಿಗಳು ಜಮೀನಿಗೆ ನುಗ್ಗಿ ಬೆಳೆ ನಾಶ ಮಾಡಿದ್ದಕ್ಕೆ ಆಕ್ರೋಶಗೊಂಡ ರೈತರು ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಘಟನೆ ಜಗಳೂರು ತಾಲೂಕಿನ ರಂಗಯ್ಯನದುರ್ಗದಲ್ಲಿ ನಡೆದಿದೆ.

    ಅರಣ್ಯದ ಅಂಚಿನಲ್ಲಿರುವ ಗೋಡೆ ಗ್ರಾಮದ ಜಮೀನಿನಲ್ಲಿ ಕಾಡು ಹಂದಿಗಳು ಬೆಳೆ ಹಾನಿ ಮಾಡಿವೆ. ಇದರಿಂದ ಸಿಟ್ಟಿಗೆದ್ದ ಗ್ರಾಮದ ರಂಗಪ್ಪ ಮತ್ತು ಆತನ ಪುತ್ರ ಬಸವರಾಜ್ ಸೇರಿ ಫಾರೆಸ್ಟ್ ವಾಚರ್ ತಿಪ್ಪೇಶ್ ಮೇಲೆ ಹೊಲದಲ್ಲಿ ಹಲ್ಲೆ ನಡೆಸಿದ್ದಾರೆ. ಇದನ್ನೂ ಓದಿ: ಕೋಲ್ಕತ್ತಾ | ಬಾಯ್ಸ್‌ ಹಾಸ್ಟೆಲ್‌ನಲ್ಲಿ ಯುವತಿಯ ರೇಪ್‌ ಕೇಸ್ – ಬಾಗಲಕೋಟೆ ಯುವಕ ಅರೆಸ್ಟ್‌

    ರಂಗಯ್ಯದುರ್ಗ ಅರಣ್ಯದ ಪ್ರದೇಶಕ್ಕೆ ಹೊಂದಿಕೊಂಡು ಈ ರೈತರ ಜಮೀನುಗಳಿವೆ. ಜಮೀನುಗಳಿಗೆ ಕಾಡು ಹಂದಿ ಸೇರಿದಂತೆ ಹಲವು ಕಾಡು ಪ್ರಾಣಿಗಳು ನುಗ್ಗಿ ಬೆಳೆ ನಾಶ ಮಾಡುತ್ತಿದ್ದವು. ಇದರಿಂದ ಅಕ್ರೋಶಗೊಂಡ ರೈತ ರಂಗಪ್ಪ ಹಾಗೂ ಆತನ ಮಗ ಬಸವರಾಜ್ ಫಾರೆಸ್ಟ್ ವಾಚರ್ ತಿಪ್ಪೇಶ್‍ಗೆ ಅವಾಚ್ಯವಾಗಿ ನಿಂದಿಸಿ, ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ. ಅಲ್ಲದೇ ಕೊಲೆಗೆ ಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

    ಈ ವೇಳೆ ಸ್ಥಳೀಯರು ಆಗಮಿಸಿ ತಿಪ್ಪೇಶ್ ಅವರನ್ನು ರಕ್ಷಣೆ ಮಾಡಿದ್ದಾರೆ. ಅವರನ್ನು ಜಗಳೂರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಪ್ರಕಣರ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ಇದನ್ನೂ ಓದಿ: ಬೈಕ್‌ಗೆ ಡಿಕ್ಕಿಯಾಗಿ ಕಾಲುವೆಗೆ ಪಲ್ಟಿಯಾದ ಕಾರು – 7 ಮಂದಿ ದುರ್ಮರಣ

  • Davanagere| ಗ್ಯಾಸ್ ಸೋರಿಕೆಯಾಗಿ ಕಾಣಿಸಿಕೊಂಡ ಬೆಂಕಿ – ಕಿರಾಣಿ ಅಂಗಡಿ ಸುಟ್ಟು ಕರಕಲು

    Davanagere| ಗ್ಯಾಸ್ ಸೋರಿಕೆಯಾಗಿ ಕಾಣಿಸಿಕೊಂಡ ಬೆಂಕಿ – ಕಿರಾಣಿ ಅಂಗಡಿ ಸುಟ್ಟು ಕರಕಲು

    – ಲಕ್ಷಾಂತರ ರೂ. ನಷ್ಟ

    ದಾವಣಗೆರೆ: ಸಿಲಿಂಡರ್‌ನಲ್ಲಿ ಗ್ಯಾಸ್ ಸೋರಿಕೆಯಾಗಿ (Gas Leakage) ಬೆಂಕಿ ಕಾಣಿಸಿಕೊಂಡ ಪರಿಣಾಮ ಕಿರಾಣಿ ಅಂಗಡಿ (Grocery Shop) ಸುಟ್ಟು ಕರಕಲಾದ ಘಟನೆ ದಾವಣಗೆರೆ (Davanagere) ಜಿಲ್ಲೆಯ ಜಗಳೂರು ತಾಲೂಕಿನ ಹನುಮಂತಾಪುರ ಗೊಲ್ಲರಹಟ್ಟಿಯಲ್ಲಿ ನಡೆದಿದೆ.

    ಗ್ರಾಮದ ಕುಮಾರ್ ಎನ್ನುವರಿಗೆ ಸೇರಿದ ಕಿರಾಣಿ ಅಂಗಡಿ ಇದಾಗಿದ್ದು, ಅಂಗಡಿಯಲ್ಲಿ ಇರಿಸಿದ್ದ ಸಿಲಿಂಡರ್ ಸೋರಿಕೆಯಾಗಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಜನರು ಹೊರ ಓಡಿಬಂದಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಇದನ್ನೂ ಓದಿ: ಕೋಲಾರ| ಒಂಟಿ ಸಲಗ ದಾಳಿಗೆ ರೈತ ಮಹಿಳೆ ಬಲಿ

    ಘಟನೆಯಿಂದ ಅಂಗಡಿಯಲ್ಲಿದ್ದ ಎಲ್ಲಾ ಸಾಮಗ್ರಿಗಳು ಸುಟ್ಟು ಕರಕಲಾಗಿದ್ದು, ಅಂಗಡಿ ಮಾಲೀಕ ಲಕ್ಷಾಂತರ ರೂ. ನಷ್ಟ ಅನುಭವಿಸಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಅಭಿವೃದ್ಧಿಯಲ್ಲಿ ಭಾರತವನ್ನು ಪಾಕಿಸ್ತಾನ ಸೋಲಿಸದಿದ್ದರೆ ನನ್ನ ಹೆಸರು ಶೆಹಬಾಜ್‌ ಷರೀಫ್‌ ಅಲ್ಲ: ಪಾಕ್‌ ಪ್ರಧಾನಿ ಸವಾಲು

  • ದಾವಣಗೆರೆ| ಜಾತ್ರೆಗೆ ಒಂದು ದಿನ ಇರುವಾಗಲೇ ದೇವಾಲಯದ ಹುಂಡಿ ಕಳವು!

    ದಾವಣಗೆರೆ| ಜಾತ್ರೆಗೆ ಒಂದು ದಿನ ಇರುವಾಗಲೇ ದೇವಾಲಯದ ಹುಂಡಿ ಕಳವು!

    – 3ನೇ ಬಾರಿ ಕಳ್ಳತನ, ಆಡಳಿತ ಮಂಡಳಿ ವಿರುದ್ಧ ಭಕ್ತರ ಆಕ್ರೋಶ

    ದಾವಣಗೆರೆ: ಜಾತ್ರಾ ಮಹೋತ್ಸವಕ್ಕೆ ಒಂದು ದಿನ ಇರುವಾಗಲೇ ಕಳ್ಳರು ಹುಂಡಿ ಕಳವು ಮಾಡಿದ ಘಟನೆ ಜಗಳೂರು (Jagalur) ತಾಲೂಕಿನ ಹಿರೇಮಲ್ಲನಹೊಳೆ ಗ್ರಾಮದ ಹೊರವಲಯದಲ್ಲಿರುವ ಮಾದಲಿಂಗೇಶ್ವರ ಸ್ವಾಮಿ ದೇವಸ್ಥಾನದಲ್ಲಿ (Temple) ನಡೆದಿದೆ.

    ದೇವಸ್ಥಾನದಲ್ಲಿ ಸುಮಾರು 1 ಲಕ್ಷ ರೂ.ಗೂ ಹೆಚ್ಚು ನಗದನ್ನು ಕಳವು ಮಾಡಲಾಗಿದೆ. ಪ್ರತಿ ವರ್ಷವೂ ಜಾತ್ರೆಗೂ ಮುನ್ನ ಫೆಬ್ರವರಿ ತಿಂಗಳಿನಲ್ಲಿ ಹುಂಡಿಯನ್ನು ತೆರೆದು ಹಣವನ್ನು ಎಣಿಕೆ ಮಾಡಲಾಗುತ್ತಿತ್ತು. ಅದೇ ರೀತಿ ಈ ವರ್ಷ ಸಹ ಹುಂಡಿ ತೆರೆದು ಹಣ ಎಣಿಸಲು ತೀರ್ಮಾನಿಸಲಾಗಿತ್ತು. ಆದರೆ ಭಾನುವಾರ ರಾತ್ರಿ ಕಳ್ಳರು ದೇವಸ್ಥಾನದ ಮುಂಭಾಗದಲ್ಲಿದ್ದ ಹುಂಡಿ ಒಡೆದು ಹಣ ದೋಚಿ ಪರಾರಿಯಾಗಿದ್ದಾರೆ.

    ಈ ದೇವಸ್ಥಾನದಲ್ಲಿ ಮೂರನೇ ಬಾರಿಗೆ ಹುಂಡಿ ಕಳವು ಮಾಡಲಾಗಿದೆ. ಆದರೂ ದೇವಸ್ಥಾನದ ಆಡಳಿತ ಮಂಡಳಿ ಗಂಭೀರವಾಗಿ ಪರಿಗಣಿಸದಿರುವುದಕ್ಕೆ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದೊಂದು ತಿಂಗಳಿನಲ್ಲಿ ತಾಲೂಕಿನ ಸಿದ್ದಮ್ಮನಹಳ್ಳಿ, ಅಣಬೂರು ಗೊಲ್ಲರಹಟ್ಟಿ ಗ್ರಾಮದಲ್ಲಿನ ದೇವಸ್ಥಾನಗಳಲ್ಲಿಯೂ ಹುಂಡಿ ಕಳ್ಳತನ ನಡೆದಿತ್ತು.

    ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿ ದೇಗುಲದ ಕಳ್ಳತನಕ್ಕೆ ಬ್ರೇಕ್ ಹಾಕಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

  • ಸ್ನೇಹಿತರ ಹೆಸರಲ್ಲಿ ನಕಲಿ ಚಿನ್ನ ಅಡವಿಟ್ಟು 49 ಲಕ್ಷ ವಂಚನೆ – ಫೈನಾನ್ಸ್ ಮ್ಯಾನೇಜರ್ ಅರೆಸ್ಟ್‌

    ಸ್ನೇಹಿತರ ಹೆಸರಲ್ಲಿ ನಕಲಿ ಚಿನ್ನ ಅಡವಿಟ್ಟು 49 ಲಕ್ಷ ವಂಚನೆ – ಫೈನಾನ್ಸ್ ಮ್ಯಾನೇಜರ್ ಅರೆಸ್ಟ್‌

    ದಾವಣಗೆರೆ: ಸ್ನೇಹಿತರ ಹೆಸರಿನಲ್ಲಿ ಖಾತೆ ತೆರೆದು ನಕಲಿ ಚಿನ್ನ ಅಡವಿಟ್ಟು 42 ಲಕ್ಷ ರೂ. ವಂಚಿಸಿದ್ದ ಜಗಳೂರಿನ (Jagalur) ಕೆ.ಎಲ್.ಎಂ. ಆಕ್ಸಿವ ಫಿನ್ ವೆಸ್ಟ್ ಫೈನಾನ್ಸ್ ವ್ಯವಸ್ಥಾಪಕ ಅರವಿಂದ್ ಹನುಮಂತ ರೆಡ್ಡಿಯನ್ನು ಪೊಲೀಸರು ಚಿತ್ರದುರ್ಗದಲ್ಲಿ ಬಂಧಿಸಿದ್ದಾರೆ.

    ಗ್ರಾಹಕರ ಚಿನ್ನವನ್ನು (Gold) ಅಡವಿಟ್ಟುಕೊಂಡು ಸಾಲ ನೀಡುವ ಕೆ.ಎಲ್.ಎಂ. ಆಕ್ಸಿವ ಫಿನ್ ವೆಸ್ಟ್ ಪೈನಾನ್ಸ್ ವ್ಯವಸ್ಥಾಪಕ ಅರವಿಂದ ರೆಡ್ಡಿ ತಾನು ಕಾರ್ಯನಿರ್ವಹಿಸುವ ಸಂಸ್ಥೆಗೆ ವಂಚಿಸಿ ತಲೆಮರೆಸಿಕೊಂಡಿದ್ದ.

    ಅವ್ಯವಹಾರ ನಡೆದಿರುವ ಬಗ್ಗೆ ಸಂಸ್ಥೆಯ ಪ್ರಾದೇಶಿಕ ವ್ಯವಸ್ಥಾಪಕ ಜಗಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಮೇರೆಗೆ ಚಿತ್ರದುರ್ಗದ ಬಸ್ ನಿಲ್ದಾಣದಲ್ಲಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

    ಆರೋಪಿ ಅರವಿಂದ್ ಹನುಮಂತ ರೆಡ್ಡಿಯನ್ನು ನ್ಯಾಯಾಂಗದ ಬಂಧನಕ್ಕೆ ಒಪ್ಪಿಸಲಾಗಿದೆ.

  • ಸ್ನೇಹಿತರ ಹೆಸರಲ್ಲಿ ನಕಲಿ ಚಿನ್ನ ಅಡವಿಟ್ಟು 49 ಲಕ್ಷ ವಂಚಿಸಿದ ಬ್ಯಾಂಕ್ ಮ್ಯಾನೇಜರ್!

    ಸ್ನೇಹಿತರ ಹೆಸರಲ್ಲಿ ನಕಲಿ ಚಿನ್ನ ಅಡವಿಟ್ಟು 49 ಲಕ್ಷ ವಂಚಿಸಿದ ಬ್ಯಾಂಕ್ ಮ್ಯಾನೇಜರ್!

    ದಾವಣಗೆರೆ: ಬ್ಯಾಂಕ್ (Bank) ಮ್ಯಾನೇಜರ್ ಒಬ್ಬ ಸ್ನೇಹಿತರ ಹೆಸರಲ್ಲಿ ನಕಲಿ ಚಿನ್ನ (Gold) ಅಡವಿಟ್ಟು ಬರೋಬ್ಬರಿ 49 ಲಕ್ಷ ರೂ. ವಂಚನೆ ಮಾಡಿದ ಪ್ರಕರಣ ಜಗಳೂರಿನಲ್ಲಿ (Jagalur) ನಡೆದಿದೆ.

    ಜಗಳೂರು ಪಟ್ಟಣದಲ್ಲಿರುವ ಕೆಎಲ್‍ಎಂ ಆಕ್ಸಿವಾ ಫಿನ್ ವೆಸ್ಟ್ ಬ್ಯಾಂಕ್ ಈ ವಂಚನೆ ನಡೆದಿದೆ. ಬ್ಯಾಂಕ್‍ನ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಅರವಿಂದ್ ರೆಡ್ಡಿ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ.

    ಅರವಿಂದ್ ರೆಡ್ಡಿ, 2024ರ ನವೆಂಬರ್‌ನಲ್ಲಿ ತನ್ನ 9 ಮಂದಿ ಸ್ನೇಹಿತರ ಹೆಸರಿನಲ್ಲಿ 84.5 ತೊಲ ನಕಲಿ ಬಂಗಾರ ಅಡವಿಟ್ಟು, ಬರೋಬ್ಬರಿ 49 ಲಕ್ಷ ರೂ.ಗೂ ಹೆಚ್ಚಿನ ಹಣವನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡು ಕಣ್ಮರೆಯಾಗಿದ್ದ.

    ಮ್ಯಾನೇಜರ್‌ನ ಸ್ನೇಹಿತರಿಗೆ ಅಕ್ಸಿವಾ ಬ್ಯಾಂಕ್‍ನಿಂದ ಬಡ್ಡಿ ಹಣ ಕಟ್ಟುವಂತೆ ನೋಟಿಸ್ ಬಂದಾಗ ಪ್ರಕರಣ ಬಯಲಿಗೆ ಬಂದಿದೆ. ತಾವು ಯಾವುದೇ ಬಂಗಾರ ಅಡವಿಟ್ಟಿಲ್ಲ ಎಂದು ಬ್ಯಾಂಕ್‍ಗೆ 9 ಜನ ಸ್ನೇಹಿತರು ಬಂದಿದ್ದಾರೆ. ಈ ವೇಳೆ ವಂಚನೆ ನಡೆದಿರುವುದು ಗೊತ್ತಾಗಿದೆ.

    ಈ ಸಂಬಂಧ ಬ್ಯಾಂಕ್‍ನ ಸಹಾಯಕ ವ್ಯವಸ್ಥಾಪಕ ವಸಂತ್ ಕುಮಾರ್, ಜಗಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

  • ದಾವಣಗೆರೆ | ಕೆರೆ ಕೋಡಿ ಬಿದ್ದಿದ್ದನ್ನು ನೋಡಲು ಹೋಗಿದ್ದ ವ್ಯಕ್ತಿ ನೀರು ಪಾಲು

    ದಾವಣಗೆರೆ | ಕೆರೆ ಕೋಡಿ ಬಿದ್ದಿದ್ದನ್ನು ನೋಡಲು ಹೋಗಿದ್ದ ವ್ಯಕ್ತಿ ನೀರು ಪಾಲು

    ದಾವಣಗೆರೆ: ಕೆರೆ ಕೋಡಿ ಬಿದ್ದಿದ್ದನ್ನು ನೋಡಲು ಹೋಗಿದ್ದ ವ್ಯಕ್ತಿ ನೀರಿನಲ್ಲಿ ಕೊಚ್ಚಿ ಹೋದ ಘಟನೆ ಜಗಳೂರು (Jagalur) ತಾಲೂಕಿನ ಸಂಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಭರಮ ಸಾಗರ ಮೂಲದ ಜಯಣ್ಣ (45) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಸಂಗೇನಹಳ್ಳಿ ಕೆರೆ ಕೋಡಿ ಬಿದ್ದಿದ್ದನ್ನು ನೋಡಲು ಜಯಣ್ಣ ಹೋಗಿದ್ದರು. ಬಳಿಕ ತಂಗಿಯ ಮನೆಗೆ ತೆರಳುವಾಗ ಹಳ್ಳದಲ್ಲಿ ಕೊಚ್ಚಿ ಹೋಗಿದ್ದಾರೆ. ಇದನ್ನೂ ಓದಿ: ಪತಿಯನ್ನು ಕಂಬಕ್ಕೆ ಕಟ್ಟಿಹಾಕಿ, ಆತನ ಎದುರೇ ಪತ್ನಿ ಮೇಲೆ ಗ್ಯಾಂಗ್‌ ರೇಪ್‌

    ಗುರುವಾರ ರಾತ್ರಿ ಹಳ್ಳದಲ್ಲಿ ಜಯಣ್ಣ ಕೊಚ್ಚಿ ಹೋಗಿದ್ದರು. ಶುಕ್ರವಾರ ಅವರ ಮೃತದೇಹ ಪತ್ತೆಯಾಗಿದೆ. ಸಂಗೇನಹಳ್ಳಿ ಗ್ರಾಮಕ್ಕೆ ಬೇರೆ ಕಡೆ ದಾರಿಯಿಲ್ಲದೆ ಹಳ್ಳ ದಾಟಲು ಅವರು ಯತ್ನಿಸಿದ್ದರು. ಮೃತ ದೇಹವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹೊರತೆಗೆದಿದ್ದಾರೆ.

    ದಾವಣಗೆರೆ (Davanagere) ಸುತ್ತಮುತ್ತ ಭಾರೀ (Rain) ಮಳೆಯಾಗುತ್ತಿದ್ದು, ಕೆರೆಗಳು ತುಂಬಿ ಹರಿಯುತ್ತಿವೆ. ಇತ್ತೀಚೆಗೆ ಜಗಳೂರಿನಲ್ಲಿ ಜಮೀನುಗಳಿಗೂ ಕೆರೆ ನೀರು ನುಗ್ಗುವ ಆತಂಕ ಎದುರಾಗಿತ್ತು. ಇದರಿಂದ ರೈತರಿಗೆ ಜಮೀನುಗಳಿಗೆ ತೆರಳದಂತೆ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದರು. ಇದನ್ನೂ ಓದಿ: ಬಸ್‌ ಸೀಟಿಗಾಗಿ ಚಪ್ಪಲಿಯಲ್ಲಿ ಬಡಿದಾಡಿದ ಮಹಿಳೆಯರು

  • 26 ವರ್ಷಗಳ ಬಳಿಕ ಕೋಡಿ ಬಿದ್ದ ಹಿರೇಮಲ್ಲನಹೊಳೆ ಕೆರೆ – 30ಕ್ಕೂ ಹೆಚ್ಚು ಮನೆಗಳು ಜಲಾವೃತ

    26 ವರ್ಷಗಳ ಬಳಿಕ ಕೋಡಿ ಬಿದ್ದ ಹಿರೇಮಲ್ಲನಹೊಳೆ ಕೆರೆ – 30ಕ್ಕೂ ಹೆಚ್ಚು ಮನೆಗಳು ಜಲಾವೃತ

    ದಾವಣಗೆರೆ: ಜಿಲ್ಲೆಯ (Davanagere) ಜಗಳೂರು (Jagalur) ತಾಲೂಕಿನಲ್ಲಿ ಭಾರೀ ಮಳೆಯಾಗಿದ್ದು (Rain), ಹಿರೇಮಲ್ಲನಹೊಳೆ ಗ್ರಾಮದ ಕೆರೆ ಕೋಡಿ ಬಿದ್ದು ಸುಮಾರು 30ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ.

    ಭಾರೀ ಮಳೆಯಿಂದ ಏಕಾಏಕಿ ನೀರು ಮನೆಗಳಿಗೆ ನುಗ್ಗಿದ ಪರಿಣಾಮ ಮನೆಯಲ್ಲಿದ್ದ ದಿನ ಬಳಕೆ ವಸ್ತುಗಳು ಹಾಳಾಗಿವೆ. ಮನೆಯಲ್ಲಿದ್ದ ವಸ್ತುಗಳನ್ನು ಜನ ಬೇರೆಡೆಗೆ ಸಾಗಿಸುತ್ತಿದ್ದಾರೆ. 30ಕ್ಕೂ ಹೆಚ್ಚು ಕುಟುಂಬಗಳನ್ನು ಗ್ರಾಮಸ್ಥರು ಬೇರೆ ಕಡೆಗೆ ಕರೆತಂದು ಆಶ್ರಯದ ವ್ಯವಸ್ಥೆ ಮಾಡಿದ್ದಾರೆ.

    ಸುಮಾರು 26 ವರ್ಷಗಳ ನಂತರ ಹಿರೇಮಲ್ಲನಹೊಳೆ ಕೆರೆ ಕೋಡಿ ಬಿದ್ದಿದೆ. ಊರಿಗೆ ನುಗ್ಗಿದ ನೀರನ್ನು ಹೊರ ಹೋಗುವಂತೆ ಮಾಡಲು ಜೆಸಿಬಿ ಬಳಸಿ ಕಾರ್ಯಾಚರಣೆ ಮಾಡಲಾಗುತ್ತಿದೆ.

    ಬರದ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದು, ಈ ಬಾರಿ ಬಹುತೇಕ ಕೆರೆಗಳು ಕೋಡಿ ಬಿದ್ದಿವೆ. ಒಂದೆಡೆ ಕೆರೆ ಕೋಡಿಯಿಂದ ರೈತರ ಮೊಗದಲ್ಲಿ ಸಂಭ್ರಮ ಮನೆ ಮಾಡಿದರೆ, ಇನ್ನೊಂದೆಡೆ ಮಳೆಯ ಅವಾಂತರದಿಂದ ಜನ ಕಂಗಾಲಾಗಿದ್ದಾರೆ.

  • Davanagere | ಕೃಷಿಹೊಂಡಕ್ಕೆ ಬಿದ್ದು ಇಬ್ಬರು ಬಾಲಕಿಯರ ದುರ್ಮರಣ

    Davanagere | ಕೃಷಿಹೊಂಡಕ್ಕೆ ಬಿದ್ದು ಇಬ್ಬರು ಬಾಲಕಿಯರ ದುರ್ಮರಣ

    ದಾವಣಗೆರೆ: ಕೃಷಿ ಹೊಂಡಕ್ಕೆ (Agricultural Pond) ಬಿದ್ದು ಇಬ್ಬರು ಬಾಲಕಿಯರು ಸಾವನ್ನಪ್ಪಿದ ಮನಕಲಕುವ ಘಟನೆ ಜಗಳೂರಿನ (Jagalur) ಅಸಗೋಡು ಗ್ರಾಮದಲ್ಲಿ ನಡೆದಿದೆ.

    ಮೃತ ಬಾಲಕಿಯರನ್ನು ಗಂಗಮ್ಮ (12) ಹಾಗೂ ಕಾವ್ಯ (8) ಎಂದು ಗುರುತಿಸಲಾಗಿದೆ. ಜಮೀನಿನಲ್ಲಿ ಆಟವಾಡುತ್ತಿದ್ದ ವೇಳೆ ಕಾಲು ಜಾರಿ ಮಕ್ಕಳು ಕೃಷಿ ಹೊಂಡಕ್ಕೆ ಬಿದ್ದಿದ್ದಾರೆ. ಈ ವೇಳೆ ಅಲ್ಲಿದ್ದ ಪೋಷಕರು ಮಕ್ಕಳ ರಕ್ಷಣೆಗೆ ಧಾವಿಸಿದ್ದಾರೆ. ಅಷ್ಟರಲ್ಲಾಗಲೇ ಬಾಲಕಿಯರು ಮೃತಪಟ್ಟಿದ್ದಾರೆ. ಮಕ್ಕಳ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ದಾಸರಹಳ್ಳಿಯಲ್ಲಿ ತಲೆಯೆತ್ತಿದ್ದ ಗುಂಡಿ ಸಮಸ್ಯೆ – ಡೆಡ್‌ಲೈನ್ ಮುಗಿದರೂ ದುರಸ್ತಿಯಿಲ್ಲ

    ಈ ಸಂಬಂಧ ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ವಿದ್ಯಾರ್ಥಿನಿಯರಿಗೆ ಅಶ್ಲೀಲ ವೀಡಿಯೋ ತೋರಿಸಿ ಕಿರುಕುಳ – ಕಾಮುಕ ಶಿಕ್ಷಕ ಅರೆಸ್ಟ್‌

  • ತಾಯಿಯ ಆತ್ಮಹತ್ಯೆಗೆ ಕಾರಣನಾದ ತಂದೆಯ ಹತ್ಯೆಗೈದ ಮಗ

    ತಾಯಿಯ ಆತ್ಮಹತ್ಯೆಗೆ ಕಾರಣನಾದ ತಂದೆಯ ಹತ್ಯೆಗೈದ ಮಗ

    ದಾವಣಗೆರೆ: ತಾಯಿಯ ಆತ್ಮಹತ್ಯೆಗೆ ಕಾರಣನಾದ ತಂದೆಯ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆಗೈದ ಘಟನೆ ಜಗಳೂರಿನ (Jagalur) ಲಕ್ಕಿಂಪುರದಲ್ಲಿ ನಡೆದಿದೆ.

    ಗ್ರಾಮದ ತಪ್ಪಮ್ಮ (52) ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದು, ಅಂಜನಪ್ಪ (60) ಮಗನಿಂದ ಕೊಲೆಯಾದ ದುರ್ದೈವಿ ಎಂದು ತಿಳಿದು ಬಂದಿದೆ. ಕೊಲೆಗೈದ ಆರೋಪಿಯನ್ನು ರಮೇಶ್ (30) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ರೈಲಿಗೆ ಸಿಲುಕಿ ಮೂವರು ಯುವಕರ ದಾರುಣ ಸಾವು

    ಕೊಲೆಯಾದ ಅಂಜನಪ್ಪ ನಿತ್ಯ ಕುಡಿದು ಬಂದು ಮನೆಯಲ್ಲಿ ಪತ್ನಿಯೊಂದಿಗೆ ಜಗಳವಾಡುತ್ತಿದ್ದ. ಇದರಿಂದ ಬೇಸತ್ತು ತಪ್ಪಮ್ಮ ಆತ್ಮಹತ್ಯೆಗೆ ಶರಣಾಗಿದ್ದಾಳೆ. ವಿಚಾರ ತಿಳಿದ ರಮೇಶ್ ನೇರವಾಗಿ ಮನೆಗೆ ಬಂದು ತಂದೆ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಆತನನ್ನು ಹತ್ಯೆಗೈದಿದ್ದಾನೆ ಎಂದು ತಿಳಿದು ಬಂದಿದೆ.

    ಸ್ಥಳಕ್ಕೆ ಜಗಳೂರು ಠಾಣೆ ಪೊಲೀಸರು (Jagalur Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಹಾಲಿವುಡ್ #MeToo ಅಭಿಯಾನಕ್ಕೆ ಹಿನ್ನಡೆ: ಹಾರ್ವಿಗೆ ವಿಧಿಸಿದ್ದ ಶಿಕ್ಷೆ ರದ್ದು