Tag: Jagalur

  • ತೆಪ್ಪ ಮಗುಚಿಬಿದ್ದು ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ಸಾವು

    ತೆಪ್ಪ ಮಗುಚಿಬಿದ್ದು ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ಸಾವು

    ದಾವಣಗೆರೆ: ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ದಾವಣಗೆರೆ (Davanagere) ಜಿಲ್ಲೆಯ ಜಗಳೂರು (Jagalur) ತಾಲೂಕಿನ ತುಪ್ಪದಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಕಿತ್ತೂರು ಗ್ರಾಮದ ನಿವಾಸಿ ಮೂರ್ತಿ (40) ಮೃತ ದುರ್ದೈವಿ. ಮೂರ್ತಿ ನಿತ್ಯ ಮೀನು (Fish) ಹಿಡಿದು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು. ಅದೇ ರೀತಿ ಎಂದಿನಂತೆ ಮೂರ್ತಿ ಮೀನು ಹಿಡಿಯಲು ತೆಪ್ಪದಲ್ಲಿ (Raft) ಹೋಗಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ತೆಪ್ಪ ಮಗುಚಿ ಬಿದ್ದು ಮೀನಿಗೆ ಹಾಕಿದ್ದ ಬಲೆ ಕಾಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಕೇಸ್‌ – ಬಾಂಬರ್‌ ಬಳ್ಳಾರಿಯಿಂದ ಭಟ್ಕಳಕ್ಕೆ ತೆರಳಿರುವ ಶಂಕೆ

    ಮೀನಿನ ಬಲೆ ಕಾಲಿಗೆ ಸಿಲುಕಿದ ಹಿನ್ನೆಲೆ ಮೂರ್ತಿ ನೀರಿನಲ್ಲಿ ಮುಳುಗಿ ಕೊನೆಯುಸಿರೆಳೆದಿದ್ದಾರೆ. ಸ್ಥಳೀಯರು ಮೂರ್ತಿ ಅವರ ಮೃತದೇಹವನ್ನು ಹೊರತೆಗೆದಿದ್ದಾರೆ. ಸ್ಥಳಕ್ಕೆ ಬಿಳಚೋಡು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ವಿಶ್ವಪ್ರಸಿದ್ಧ ಯಾಣದಲ್ಲಿ ದೇಶದ ಮೊದಲ WiFi-7 ಸೇವೆ

  • RRR ಸಿನಿಮಾದಲ್ಲಿ ತಾಂತ್ರಿಕ ದೋಷ- ಥಿಯೇಟರ್‌ ಗಾಜು ಹೊಡೆದ ಫ್ಯಾನ್ಸ್‌, ಟಿಕೆಟ್‌ ದರ ವಾಪಸ್‌

    RRR ಸಿನಿಮಾದಲ್ಲಿ ತಾಂತ್ರಿಕ ದೋಷ- ಥಿಯೇಟರ್‌ ಗಾಜು ಹೊಡೆದ ಫ್ಯಾನ್ಸ್‌, ಟಿಕೆಟ್‌ ದರ ವಾಪಸ್‌

    ದಾವಣಗೆರೆ: ತ್ರಿಬಲ್ ಆರ್ ಸಿನಿಮಾ ಭಾರತದಾತ್ಯಂತ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿದೆ. ಆದರೆ ದಾವಣಗೆರೆಯಲ್ಲಿ ಸಿನಿಮಾ ಪ್ರದರ್ಶನದ ವೇಳೆ ತಾಂತ್ರಿಕ ದೋಷ ಕಂಡುಬಂದು ಅಭಿಮಾನಿಗಳು ಗಲಾಟೆ ಮಾಡಿದ್ದಾರೆ. ಈ ಹಿನ್ನೆಲೆ ಇಡೀ ಚಿತ್ರಮಂದಿರದ ಗಾಜನ್ನು ಪುಡಿ-ಪುಡಿ ಮಾಡಿರುವ ಘಟನೆ ಶುಕ್ರವಾರ(ನಿನ್ನೆ) ರಾತ್ರಿ ಜಗಳೂರಿನ ಭಾರತ ಚಿತ್ರಮಂದಿರದಲ್ಲಿ ನಡೆದಿದೆ.

    ಜಗಳೂರು ತಾಲೂಕಿನ ಭಾರತ ಚಿತ್ರಮಂದಿರದಲ್ಲಿ ಕಳೆದ ದಿನ ಬೆಳಗ್ಗೆಯಿಂದ ಮೂರ್ನಾಲ್ಕು ಶೋ ತ್ರಿಬಲ್ ಆರ್ ಸಿನಿಮಾ ಉತ್ತಮವಾಗಿ ಪ್ರದರ್ಶನ ಕಂಡಿತ್ತು. ಕಳೆದ ದಿನ ಮೂರನೇ ಶೋ ಪ್ರದರ್ಶನದ ವೇಳೆ ತಾಂತ್ರಿಕ ದೋಷದಿಂದ ವೀಡಿಯೋ ಕಟ್ ಕಟ್ ಆಗಿ ಬರುವುದಲ್ಲದೆ ಸೌಂಡ್ ಎಫೆಕ್ಟ್ ಬಾರದಿರುವುದಕ್ಕೆ ಅಭಿಮಾನಿಗಳು ಕೋಪಗೊಂಡಿದ್ದಾರೆ. ಪರಿಣಾಮ ಚಿತ್ರಮಂದಿರದ ಪಿಓಪಿ ಶೀಟ್ ಹಾಗೂ ಕೆಲವು ವಸ್ತುಗಳನ್ನು ಮುರಿದು ಹಾಕಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಇದನ್ನೂ ಓದಿ:  ಸಂಚಾರಿ ವಿಜಯ್ ‘ತಲೆದಂಡ’ ನೆನೆದ ಮಾಲಿವುಡ್ ಸೂಪರ್ ಸ್ಟಾರ್

    ಅಭಿಮಾನಿಗಳ ಗಲಾಟೆಯಿಂದ ಚಿತ್ರಮಂದಿರದ ಸಿಬ್ಬಂದಿ ಕ್ಷಮೆಯಾಚಿಸುವ ಮೂಲಕ ಅಂದಿನ ರಾತ್ರಿಯ ಶೋ ರದ್ದು ಮಾಡಿದ್ದಾರೆ. ಅಲ್ಲದೇ ಟಿಕೆಟ್ ದರವನ್ನು ವಾಪಸ್ ನೀಡಿ ಅಭಿಮಾನಿಗಳನ್ನು ಕಳುಹಿಸಿದ್ದಾರೆ. ಇದಲ್ಲದೆ 20 ರಿಂದ 30 ಕಿಲೋಮೀಟರ್‌ಗಳು ಕ್ರಮಿಸಿ ಚಿತ್ರ ವೀಕ್ಷಿಸಲು ಆಗಮಿಸಿದ್ದ ಅಭಿಮಾನಿಗಳು ನಿರಾಸೆಯಿಂದ ಮನೆ ಕಡೆ ಮುಖ ಮಾಡಿದ್ದಾರೆ.

  • ಜಗಳೂರಿನಲ್ಲಿ ಭೀಕರ ರಸ್ತೆ ಅಪಘಾತ – ಡಿವೈಡರ್‌ಗೆ ಕಾರು ಡಿಕ್ಕಿ, 7 ಸಾವು

    ಜಗಳೂರಿನಲ್ಲಿ ಭೀಕರ ರಸ್ತೆ ಅಪಘಾತ – ಡಿವೈಡರ್‌ಗೆ ಕಾರು ಡಿಕ್ಕಿ, 7 ಸಾವು

    ದಾವಣಗೆರೆ: ಬೆಳ್ಳಂಬೆಳಗ್ಗೆ ನಡೆದ ಭೀಕರ ರಸ್ತೆ ದುರಂತಕ್ಕೆ ಏಳು ಜನರು ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನಲ್ಲಿ ನಡೆದಿದೆ.

    ತಾಲೂಕಿನ ಕಾನನಕಟ್ಟೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಇಂಡಿಕಾ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಏಳು ಮಂದಿ ಮೃತಪಟ್ಟಿದ್ದಾರೆ. ಮೃತರ ವಿವರ ತಿಳಿದು ಬಂದಿಲ್ಲ. ಇದನ್ನೂ ಓದಿ: ಸಮನ್ವಿ ತುಂಬಾ ಪ್ರತಿಭಾವಂತೆ, ಮಾಡೆಲ್‌ ಥರಾನೆ ಇದ್ದಳು: ಪುಟಾಣಿ ನೆನೆದು ತಾರಾ ಕಂಬನಿ

    ಅಪಘಾತದ ತೀವ್ರತೆಗೆ ಆರು ಜನ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರೆ ಓರ್ವ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾನೆ. ಯಾದಗಿರಿ ಜಿಲ್ಲೆಯ ಶಾಪುರ್ ಮೂಲದ ಇವರು ಬೆಂಗಳೂರಿಗೆ ತೆರಳುತ್ತಿದ್ದಾಗ ದುರ್ಘಟನೆ ನಡೆದಿದೆ.

    ಬೆಳಿಗ್ಗೆ 5 ಗಂಟೆಯ ವೇಳೆಗೆ ನಿದ್ದೆಯ ಮಂಪರಿನಲ್ಲಿ ಚಾಲಕ ಡಿವೈಡರ್‌ಗೆ ಕಾರನ್ನು ಗುದ್ದಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ದಾವಣಗೆರೆ ಎಸ್ಪಿ ಸಿಬಿ ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಮೀಟೂ ಕೇಸಲ್ಲಿ ಅರ್ಜುನ್ ಸರ್ಜಾಗೆ ರಿಲೀಫ್

  • ಸೊಕ್ಕೆ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ

    ಸೊಕ್ಕೆ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ

    ದಾವಣಗೆರೆ: ಜಗಳೂರು ತಾಲೂಕಿನ ಸೊಕ್ಕೆ ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಚುನಾವಣೆ ಇಲ್ಲದೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

    ಬಿಜೆಪಿ 16 ಕಾಂಗ್ರೆಸ್ ಒಂದು ಇದರಲ್ಲಿ ಕಾಂಗ್ರೆಸ್ ಕೈ ಜೋಡಿಸಿದ್ದು ಸ್ವಾತಿ ತಿಪ್ಪೇಸ್ವಾಮಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಮತ್ತು ಉಪಾಧ್ಯಕ್ಷರಾಗಿ ಮಂಜುನಾಥ್ ಅವರನ್ನು ಆಯ್ಕೆ ಮಾಡಲಾಗಿದೆ.