Tag: jagdeep dhankar

  • ಕುಮಾವೂನ್ ವಿವಿ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಮೂರ್ಛೆ ಹೋದ ಜಗದೀಪ್ ಧನಕರ್

    ಕುಮಾವೂನ್ ವಿವಿ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಮೂರ್ಛೆ ಹೋದ ಜಗದೀಪ್ ಧನಕರ್

    ಡೆಹ್ರಾಡೂನ್: ಉತ್ತರಾಖಂಡದ (Uttarakhand) ನೈನಿತಾಲ್‌ನ ಕುಮಾವೂನ್ ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವದಲ್ಲಿ ಭಾಗವಹಿಸಿದ್ದ ವೇಳೆ ಉಪರಾಷ್ಟ್ರಪತಿ ಜಗದೀಪ್ ಧನಕರ್ (Jagdeep Dhankhar) ಮೂರ್ಛೆ ಹೋಗಿದ್ದಾರೆ.

    ನೈನಿತಾಲ್‌ನ ಕುಮಾವೂನ್ ವಿಶ್ವವಿದ್ಯಾಲಯದಲ್ಲಿ (Nainital Kumaon University) ನಡೆದ ಸುವರ್ಣ ಮಹೋತ್ಸವ ಸಮಾರಂಭದಲ್ಲಿ, ಉಪರಾಷ್ಟ್ರಪತಿ ಧನಕರ್ ಮುಖ್ಯ ಅತಿಥಿಯಾಗಿ 45 ನಿಮಿಷಗಳ ಭಾಷಣ ಮಾಡಿದರು. ಭಾಷಣದ ನಂತರ, ಉಪರಾಷ್ಟ್ರಪತಿ ವೇದಿಕೆಯಿಂದ ಇಳಿದ ತಕ್ಷಣ ಅವರ ಆರೋಗ್ಯ ಏರುಪೇರಾಗಿದ್ದು, ಅವರ ಜೊತೆ ಇದ್ದ ಮಾಜಿ ಸಂಸದ ಡಾ. ಮಹೇಂದ್ರ ಸಿಂಗ್ ಪಾಲ್ ಅವರ ಮೇಲೆಯೇ ಕುಸಿದು ಬಿದ್ದರು. ಕೂಡಲೇ ಸ್ಥಳದಲ್ಲೇ ಇದ್ದ ವೈದ್ಯರ ತಂಡ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದೆ. ಇದನ್ನೂ ಓದಿ: ಮಂಗಳೂರಲ್ಲಿ ‘ನೋಂದಣಿ’ ಗೋಲ್ಮಾಲ್ – ಕೋಟಿ ಬೆಲೆಯ ಕಾರಿಗೆ ಲಕ್ಷ ಬೆಲೆಯ ಕಾರಿನ ಮಾಡೆಲ್ ನಂಬರ್

    ನಂತರ ಅವರನ್ನು ರಾಜ್ಯಪಾಲ ಗುರ್ಮಿತ್ ಸಿಂಗ್ ಅವರೊಂದಿಗೆ ರಾಜಭವನಕ್ಕೆ ಕರೆದೊಯ್ಯಲಾಯಿತು. ನಂತರ ವೈದ್ಯರು ಉಪರಾಷ್ಟ್ರಪತಿಯವರ ಆರೋಗ್ಯ ಸ್ಥಿತಿ ಈಗ ಸ್ಥಿರವಾಗಿದೆ ಎಂದು ದೃಢಪಡಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ಗೆ ದೇಶ ಮೊದಲು, ಕೆಲವರಿಗೆ ಮೋದಿ ಮೊದಲು: ಶಶಿ ತರೂರ್‌ಗೆ ಖರ್ಗೆ ಟಾಂಗ್

  • ಧನಕರ್‌ಜೀ ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತೇನೆ – ಉಪರಾಷ್ಟ್ರಪತಿ ಆರೋಗ್ಯ ವಿಚಾರಿಸಿದ ಮೋದಿ

    ಧನಕರ್‌ಜೀ ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತೇನೆ – ಉಪರಾಷ್ಟ್ರಪತಿ ಆರೋಗ್ಯ ವಿಚಾರಿಸಿದ ಮೋದಿ

    ನವದೆಹಲಿ: ಎದೆನೋವು ಕಾಣಿಸಿಕೊಂಡು ಉಪರಾಷ್ಟ್ರಪತಿ ಜಗದೀಪ್ ಧನಕರ್ (Jagdeep Dhankar) ಅವರು ಆಸ್ಪತ್ರೆಗೆ ದಾಖಲಾದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ (PM Modi) ಇಂದು ದೆಹಲಿಯ ಏಮ್ಸ್‌ಗೆ ಭೇಟಿ ನೀಡಿದ್ದಾರೆ. ಈ ವೇಳೆ ಧನಕರ್‌ ಅವರ ಆರೋಗ್ಯ ವಿಚಾರಿಸಿದ್ದಾರೆ.

    ಈ ಕುರಿತು ತಮ್ಮ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಮೋದಿ, ಏಮ್ಸ್‌ಗೆ (AIIMS) ಹೋಗಿ ಉಪರಾಷ್ಟ್ರಪತಿ ಜಗದೀಪ್ ಧನಕರ್‌ ಜೀ ಅವರ ಆರೋಗ್ಯ ವಿಚಾರಿಸಿದೆ. ಅವರ ಉತ್ತಮ ಆರೋಗ್ಯ ಮತ್ತು ಶೀಘ್ರ ಚೇತರಿಕೆಗಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

    73 ವಯಸ್ಸಿನ ಜಗದೀಪ್‌ ಧನಕರ್‌ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ನಸುಕಿನ 2 ಗಂಟೆ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಲಾಯಿತು. ಎಐಐಎಂಎಸ್‌ನಲ್ಲಿ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ.ರಾಜಿವ್ ನಾರಾಂಗ್ ಅವರು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಇದನ್ನೂ ಓದಿ: 3 ವಾರಗಳ ಹಿಂದೆ ಅಪ್ರಾಪ್ತ ಬಾಲಕಿ ನಾಪತ್ತೆ – 42 ವರ್ಷದ ವ್ಯಕ್ತಿಯ ಜೊತೆ ಶವವಾಗಿ ಪತ್ತೆ

    ಧನಕರ್‌ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ವೈದ್ಯರ ತಂಡವು ಅವರ ಆರೋಗ್ಯವನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದೆ. ಇದನ್ನೂ ಓದಿ: BMW ಕಾರಿನಿಂದ ಇಳಿದು ರಸ್ತೆಯಲ್ಲೇ ಮೂತ್ರ ವಿಸರ್ಜನೆ – ಬಳಿಕ ತಾನೇ ಪೊಲೀಸರಿಗೆ ಶರಣಾದ ಯುವಕ

  • ಹಠಾತ್‌ ಎದೆನೋವು – ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಆಸ್ಪತ್ರೆಗೆ ದಾಖಲು

    ಹಠಾತ್‌ ಎದೆನೋವು – ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಆಸ್ಪತ್ರೆಗೆ ದಾಖಲು

    ನವದೆಹಲಿ: ಎದೆಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರನ್ನು ದೆಹಲಿಯ ಏಮ್ಸ್‌ ಆಸ್ಪತ್ರೆಗೆ ಭಾನುವಾರ ಮುಂಜಾನೆ ದಾಖಲಿಸಲಾಗಿದೆ.

    73 ವಯಸ್ಸಿನ ಅವರನ್ನು ತಡರಾತ್ರಿ 2 ಗಂಟೆ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಲಾಯಿತು. ಎಐಐಎಂಎಸ್‌ನಲ್ಲಿ ಕಾರ್ಡಿಯಾಲಜಿ ವಿಭಾಗದ ಮುಖ್ಯಸ್ಥ ಡಾ.ರಾಜಿವ್ ನಾರಾಂಗ್ ಅವರು ಮೇಲ್ವಿಚಾರಣೆ ಮಾಡುತ್ತಿದ್ದಾರೆ.

    ಧನಕರ್‌ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ವೈದ್ಯರ ತಂಡವು ಅವರ ಆರೋಗ್ಯವನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದೆ.

  • ಬಿಜೆಪಿಯನ್ನು ನಾಯಿ, ಇಲಿ ಎಂದು ಟೀಕಿಸಿದ ಖರ್ಗೆ ಜೊತೆ ಊಟ ಮಾಡಿದ ಮೋದಿ

    ಬಿಜೆಪಿಯನ್ನು ನಾಯಿ, ಇಲಿ ಎಂದು ಟೀಕಿಸಿದ ಖರ್ಗೆ ಜೊತೆ ಊಟ ಮಾಡಿದ ಮೋದಿ

    ನವದೆಹಲಿ: ಬಿಜೆಪಿಯನ್ನು (BJP) ನಾಯಿ ಹಾಗೂ ಇಲಿ ಎಂದು ಟೀಕಿಸಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದು ಔತಣ ಕೂಟದಲ್ಲಿ ಭಾಗಿಯಾಗಿ ಸಿರಿಧಾನ್ಯ ಖಾದ್ಯ ಭೋಜನ ಸವಿದಿದ್ದಾರೆ.

    2023ರ ರಾಗಿ ವರ್ಷದ ಅಂಗವಾಗಿ ಸಂಸತ್ತಿನಲ್ಲಿ ಕೃಷಿ ಸಚಿವ ನರೇಂದ್ರ ತೋಮರ್ (Narendra Tomar) ಅವರು ಆಯೋಜಿಸಿದ್ದ ಸಿರಿಧಾನ್ಯ ಖಾದ್ಯ ಭೋಜನ ಕೂಟದಲ್ಲಿ ಭಾಗವಹಿಸಿದ್ದರು. ಈ ವೇಳೆ ಉಪರಾಷ್ಟ್ರಪತಿ ಜಗದೀಪ್ ಧನಕರ್, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ (HD Devegowda) ಹಾಗೂ ಇತರ ಸಂಸದರೂ ಹಾಜರಿದ್ದರು.

    ಔತಣ ಕೂಟದಲ್ಲಿ ಖಿಚಡಿ, ರಾಗಿ ದೋಸೆ, ರಾಗಿ ರೊಟ್ಟಿ, ಜೋಳದ ರೊಟ್ಟಿ, ಹಲ್ದಿ ಸಬ್ಜಿ, ಬಾಜ್ರಾ, ಕುರ್ಮಾ ಹಾಗೂ ರಾಗಿಯಿಂದ ಸಿಹಿ ತಿನಿಸುಗಳನ್ನು ಸಿದ್ಧಪಡಿಸಲಾಗಿತ್ತು. ವಿಶೇಷ ಖಾದ್ಯಗಳನ್ನು ತಯಾರಿಸಲು ಕರ್ನಾಟಕದಿಂದ ಬಾಣಸಿಗರನ್ನು ಕರೆತರಲಾಗಿತ್ತು. ಇದನ್ನೂ ಓದಿ: ಈ ದೇಶಕ್ಕಾಗಿ BJP ನಾಯಕನ ಮನೆ ನಾಯಿಯೂ ಸತ್ತಿಲ್ಲ – ಕೋಲಾಹಲ ಎಬ್ಬಿಸಿದ ಖರ್ಗೆ ಹೇಳಿಕೆ

    ಬಳಿಕ ಪ್ರಧಾನಿ ಮೋದಿ ಅವರು, 2023 ಅನ್ನು ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷವೆಂದು ಆಚರಿಸಲು ತಯಾರಿ ನಡೆಸುತ್ತಿರುವಾಗ, ಸಂಸತ್ತಿನಲ್ಲಿ ಸಿರಿಧಾನ್ಯ ಭೋಜನಕೂಟದಲ್ಲಿ ಭಾಗವಹಿಸಿದ್ದೇವೆ. ಪಕ್ಷಾತೀತವಾಗಿ ಭಾಗವಹಿಸುತ್ತಿರುವುದು ಸಂತಸ ತಂದಿದೆ ಎಂದು ಹೇಳಿಕೊಂಡಿದ್ದಾರೆ. ಅಲ್ಲದೇ ಊಟದ ಕೆಲವು ಚಿತ್ರಗಳನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಪ್ರಧಾನಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ – 33 ಲಕ್ಷ ಚಂದಾದಾರರಿದ್ದ 3 ಯೂಟ್ಯೂಬ್ ಚಾನೆಲ್ ಪತ್ತೆ

    ಪ್ರಧಾನಿ ನರೇಂದ್ರ ಮೋದಿಯವರ ಉಪಕ್ರಮದ ಮೇರೆಗೆ ವಿಶ್ವಸಂಸ್ಥೆಯು 2023ನೇ ವರ್ಷವನ್ನು ಅಂತರರಾಷ್ಟ್ರೀಯ ರಾಗಿ ವರ್ಷ ಎಂದು ಘೋಷಿಸಿದೆ. ಭಾರತ ಸರ್ಕಾರವು 2018ರಲ್ಲಿ ರಾಗಿಯನ್ನು ಪೌಷ್ಠಿಕ ಧಾನ್ಯವೆಂದು ಘೋಷಿಸಿತ್ತು. ಜೊತೆಗೆ ಪೋಷಣ್ ಮಿಷನ್ ಅಭಿಯಾನದಲ್ಲಿ ಸೇರಿಸಲಾಯಿತು. ರಾಷ್ಟ್ರೀಯ ಆಹಾರ ಭದ್ರತಾ ಮಿಷನ್ ಅಡಿಯಲ್ಲಿ 14 ರಾಜ್ಯಗಳ 212 ಜಿಲ್ಲೆಗಳಲ್ಲಿ ರಾಗಿಗಾಗಿ ಪೌಷ್ಟಿಕ ಏಕದಳ ಘಟಕವನ್ನು ಅಳವಡಿಸಲಾಗಿದೆ.

    `ಭಾರತ್ ಜೋಡೋ ಯಾತ್ರೆ’ ರ‍್ಯಾಲಿಯನ್ನು ಟೀಕಿಸಿದ್ದ ಬಿಜೆಪಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಅವರು ಹರಿಹಾಯ್ದಿದ್ದರು. ಸ್ವಾತಂತ್ರ‍್ಯ ಹೋರಾಟಕ್ಕಾಗಿ ಬಿಜೆಪಿಯ ಒಂದು ನಾಯಿ ಕೂಡ ಸತ್ತಿಲ್ಲ ಎಂದು ಟೀಕಿಸಿದ್ದರು. ಇದರಿಂದ ಮಂಗಳವಾರ ಸಂಸತ್ ಅಧಿವೇಶನದಲ್ಲಿ ಕೋಲಾಹಲ ಸೃಷ್ಟಿಯಾಯಿತು. ಖರ್ಗೆ ಅವರ ಹೇಳಿಕೆಯನ್ನು ಖಂಡಿಸಿದ ಬಿಜೆಪಿ, ರಾಜ್ಯಸಭೆ ಕಲಾಪದ ವೇಳೆ ಕ್ಷಮೆ ಕೋರುವಂತೆ ಖರ್ಗೆ ಅವರನ್ನು ಒತ್ತಾಯಿಸಿತು. ಆದರೆ, ಸಂಸತ್ತಿನ ಹೊರಗೆ ಆಡಿದ ಮಾತುಗಳಿಗೆ ಕ್ಷಮೆ ಕೋರುವುದಿಲ್ಲ ಎಂದು ಖರ್ಗೆ ಹೇಳಿದ್ದಕ್ಕೆ ಭಾರೀ ಗಲಾಟೆಯೇ ನಡೆದಿತ್ತು.

    Live Tv
    [brid partner=56869869 player=32851 video=960834 autoplay=true]

  • ಈ ದೇಶಕ್ಕಾಗಿ BJP ನಾಯಕನ ಮನೆ ನಾಯಿಯೂ ಸತ್ತಿಲ್ಲ – ಕೋಲಾಹಲ ಎಬ್ಬಿಸಿದ ಖರ್ಗೆ ಹೇಳಿಕೆ

    ಈ ದೇಶಕ್ಕಾಗಿ BJP ನಾಯಕನ ಮನೆ ನಾಯಿಯೂ ಸತ್ತಿಲ್ಲ – ಕೋಲಾಹಲ ಎಬ್ಬಿಸಿದ ಖರ್ಗೆ ಹೇಳಿಕೆ

    – ಬಿಜೆಪಿಯದ್ದು ಸಿಂಹದಂತೆ ಘರ್ಜನೆ, ಇಲಿಯ ವರ್ತನೆ ಎಂದ ಕಾಂಗ್ರೆಸ್ ಅಧ್ಯಕ್ಷ
    – ಸಂಸತ್ ಚಳಿಗಾಲ ಅಧಿವೇಶನದಲ್ಲಿ ಕೋಲಾಹಲ

    ನವದೆಹಲಿ: ಕಾಂಗ್ರೆಸ್ (Congress) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ನೀಡಿದ ಹೇಳಿಕೆ ಸಂಸತ್‌ನ ಚಳಿಗಾಲದ ಅಧಿವೇಶನದಲ್ಲಿ ಕೋಲಾಹಲಕ್ಕೆ ಕಾರಣವಾಯಿತು. ಆಡಳಿತಾರೂಢ ಬಿಜೆಪಿ (BJP) ಸದಸ್ಯರು ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದು, ಖರ್ಗೆ ನಿರಾಕರಿಸಿದ್ದಾರೆ.

    `ಭಾರತ್ ಜೋಡೋ ಯಾತ್ರೆ’ಯನ್ನು (Bharat Jodo Yatra) `ಭಾರತ್ ತೋಡೋ’ಎಂದು ಬಿಜೆಪಿ ಲೇವಡಿ ಮಾಡಿದ್ದಕ್ಕಾಗಿ ತಿರುಗೇಟು ನೀಡುವ ಸಂದರ್ಭದಲ್ಲಿ ಖರ್ಗೆ `ನಾಯಿ’ (Dog) ಎನ್ನುವ ಪದ ಬಳಕೆ ಮಾಡಿದ್ದು, ಅಧಿವೇಶನ ಗದ್ದಲಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಸರ್ಕಾರಿ ಹಣದಲ್ಲಿ AAP ಜಾಹೀರಾತು – 97 ಕೋಟಿ ವಸೂಲಿಗೆ LG ಆದೇಶ

    ರಾಜಸ್ಥಾನದ (Rajasthan) ಅಲ್ವಾರ್‌ನಲ್ಲಿ ಮಾತನಾಡಿದ್ದ ಖರ್ಗೆ, ದೇಶಕ್ಕೆ ಕಾಂಗ್ರೆಸ್ ಸ್ವಾತಂತ್ರ‍್ಯವನ್ನು ತಂದುಕೊಟ್ಟಿದೆ. ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಸೇರಿದಂತೆ ಅನೇಕರು ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ. ಆದ್ರೆ ಈ ದೇಶಕ್ಕಾಗಿ ಕಡೇ ಪಕ್ಷ ನಿಮ್ಮ ಮನೆಯ ನಾಯಿಯಾದರೂ ಸತ್ತಿದೆಯೇ? ಹಾಗಿದ್ದರೂ ಅವರು ದೇಶಭಕ್ತರು ಎಂದು ಹೇಳಿಕೊಳ್ಳುತ್ತಾರೆ. ನಾವೇನಾದರೂ ಮಾತನಾಡಿದ್ರೆ ನಮ್ಮನ್ನು ದೇಶದ್ರೋಹಿ ಎಂದು ಕರೆಯುತ್ತಾರೆ ಎಂದು ಗುಡುಗಿದ್ದಾರೆ.

    ಅಲ್ಲದೇ ಚೀನಾದೊಂದಿಗಿನ (China Border Clash) ಗಡಿ ಘರ್ಷಣೆಯ ಬಗ್ಗೆ ಸಂಸತ್ತಿನಲ್ಲಿ ಚರ್ಚೆಗೆ ಅವಕಾಶ ನೀಡದಿದ್ದಕ್ಕಾಗಿ ಖರ್ಗೆ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಅವರು, ಬಿಜೆಪಿ ಸರ್ಕಾರ ಹೊರನೋಟಕ್ಕೆ ಸಿಂಹದಂತೆ ಮಾತನಾಡುತ್ತಾರೆ. ಆದರೆ ಒಳಗೆ ಇಲಿಯಂತೆ ವರ್ತಿಸುತ್ತಾರೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಇಂಗ್ಲಿಷ್‌ ಮೀಡಿಯಂ ಶಾಲೆಗಳ ಪರ ರಾಹುಲ್ ಗಾಂಧಿ ಬ್ಯಾಟಿಂಗ್‌

    ಖರ್ಗೆ ಕ್ಷಮೆಗೆ ಆಗ್ರಹ:
    ಖರ್ಗೆ ಅವರ ಹೇಳಿಕೆ ಬಿಜೆಪಿ ಸದಸ್ಯರನ್ನ ಕೆರಳಿಸಿದೆ. ಇಂದು ರಾಜ್ಯಸಭೆಯಲ್ಲಿ ಕಲಾಪ ಆರಂಭವಾಗುತ್ತಿದ್ದಂತೆಯೇ ಖರ್ಗೆ ಅವರಿಂದ ಕ್ಷಮಾಪಣೆಗೆ ಆಗ್ರಹಿಸಿದ್ದಾರೆ. ಅಲ್ವಾರ್‌ನಲ್ಲಿ ನಿಂದನಾತ್ಮಕ ಭಾಷೆ ಬಳಸಿರುವುದಕ್ಕಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಕ್ಷಮೆ ಕೋರಬೇಕು ಎಂದು ರಾಜ್ಯಸಭೆಯಲ್ಲಿ ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಆಗ್ರಹಿಸಿದ್ದಾರೆ. ಈ ಬೇಡಿಕೆ ಸದನದಲ್ಲಿ ಕೋಲಾಹಲಕ್ಕೆ ಕಾರಣವಾಯಿತು.

    Mallikarjun Kharge

    ಈ ಹೇಳಿಕೆಯನ್ನು ಕಲಾಪದ ಹೊರಗಡೆ ಹೇಳಿದ್ದಾರೆ. ದೇಶದ 135 ಕೋಟಿ ಜನರು ನಮ್ಮನ್ನು ನೋಡಿ ನಗುತ್ತಿದ್ದಾರೆ. ನಾವೇನು ಚಿಕ್ಕ ಮಕ್ಕಳಲ್ಲ. ಯಾರೋ ಒಬ್ಬರು ಹೊರಗೆ ಏನೋ ಹೇಳಿರಬಹುದು. ಅದಕ್ಕೆ ಸದನದಲ್ಲಿ ಅನುಚಿತವಾಗಿ ವರ್ತಸುವುದು ಸರಿಯಲ್ಲ ಎಂದು ಉಪ ರಾಷ್ಟ್ರಪತಿ ಹಾಗೂ ರಾಜ್ಯಸಭೆ ಅಧ್ಯಕ್ಷ ಜಗದೀಪ್ ಧನಕರ್ (Jagdeep Dhankar) ಸದಸ್ಯರಿಗೆ ತಿಳಿಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಉಪರಾಷ್ಟ್ರಪತಿಯಾಗಿ ಜಗದೀಪ್‌ ಧನಕರ್‌ ಆಯ್ಕೆ

    ಉಪರಾಷ್ಟ್ರಪತಿಯಾಗಿ ಜಗದೀಪ್‌ ಧನಕರ್‌ ಆಯ್ಕೆ

    ನವದೆಹಲಿ: ಸಂಸತ್‌ನಲ್ಲಿ ಶನಿವಾರ ನಡೆದ ಚುನಾವಣೆಯಲ್ಲಿ ಉಪರಾಷ್ಟ್ರಪತಿಯಾಗಿ ಎನ್‌ಡಿಎ ಅಭ್ಯರ್ಥಿ ಜಗದೀಪ್‌ ಧನಕರ್‌ ಗೆಲುವು ಸಾಧಿಸಿದ್ದಾರೆ.

    ಬೆಳಿಗ್ಗೆ 10 ಗಂಟೆಯಿಂದ 5 ಗಂಟೆವರೆಗೆ ನಡೆದ ಉಪರಾಷ್ಟ್ರಪತಿ ಚುನಾವಣೆಯ ಮತ ಎಣಿಕೆ ಸಂಸತ್ ಭವನದಲ್ಲಿ ನಡೆಯಿತು. ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್ (71) ಅವರು 528 ಮತಗಳನ್ನು ಪಡೆಯುವ ಮೂಲಕ ಗೆಲುವು ದಾಖಲಿಸಿದ್ದಾರೆ. ವಿಪಕ್ಷಗಳ ಅಭ್ಯರ್ಥಿ ಮಾರ್ಗರೇಟ್ ಆಳ್ವಾ(80) ಅವರು 182 ಮತಗಳನ್ನಷ್ಟೇ ಪಡೆದು 346 ಮತಗಳ ಅಂತರದಿಂದ ಸೋಲನುಭವಿಸಿದ್ದಾರೆ. ಇದನ್ನೂ ಓದಿ: ಟಿಕ್‍ಟಾಕ್ ಪ್ರಿಯರಿಗೆ ಶುಭ ಸುದ್ದಿ – ಭಾರತದಲ್ಲಿ ಮತ್ತೆ ಆ್ಯಪ್ ಆರಂಭ?

    ಉಪರಾಷ್ಟ್ರಪತಿ ಚುನಾವಣೆಯಲ್ಲಿ ಶೇಕಡ 93ರಷ್ಟು ಮತದಾನವಾಗಿತ್ತು. 50ಕ್ಕೂ ಅಧಿಕ ಸಂಸದರು ಮತದಾನದಿಂದ ದೂರ ಉಳಿದಿದ್ದರು. ಲೋಕಸಭೆ ಮತ್ತು ರಾಜ್ಯಸಭೆ ಸೇರಿ ಒಟ್ಟು 780 ಸಂಸದರಿದ್ದು, ಸಂಜೆ 5 ಗಂಟೆ ವೇಳೆಗೆ 725 ಮಂದಿ ಮತದಾನ ಮಾಡಿದ್ದರು.

    23 ಲೋಕಸಭಾ ಸದಸ್ಯರು ಸೇರಿ ಟಿಎಂಸಿಯ 39 ಸಂಸದರು ಮತದಾನ ಮಾಡಲಿಲ್ಲ. ಬಿಜೆಪಿಯು ಲೋಕಸಭೆಯಲ್ಲಿ ಸಂಪೂರ್ಣ ಬಹುಮತ ಹೊಂದಿದ್ದು, ರಾಜ್ಯಸಭೆಯಲ್ಲಿ 91 ಸದಸ್ಯರ ಬಲವಿದೆ. ಹೀಗಾಗಿ ಧನಕರ್‌ ಸುಲಭ ಗೆಲುವು ದಾಖಲಿಸಿದ್ದಾರೆ. ಹಾಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿಯು ಆಗಸ್ಟ್ 10 ರಂದು ಕೊನೆಗೊಳ್ಳಲಿದೆ. ಇದನ್ನೂ ಓದಿ: 75ನೇ ಸ್ವಾತಂತ್ರ್ಯೋತ್ಸವಕ್ಕೆ ಅಮೆರಿಕದ ಗಾಯಕಿ ಮೇರಿ ಮಿಲಬೆನ್‌ ಅತಿಥಿ

    Live Tv
    [brid partner=56869869 player=32851 video=960834 autoplay=true]