Tag: jai ram ramesh

  • ಡಿ.19 ರಂದು ಇಂಡಿಯಾ ಒಕ್ಕೂಟದ ಸಭೆ: ಜೈರಾಮ್‌ ರಮೇಶ್‌

    ಡಿ.19 ರಂದು ಇಂಡಿಯಾ ಒಕ್ಕೂಟದ ಸಭೆ: ಜೈರಾಮ್‌ ರಮೇಶ್‌

    ನವದೆಹಲಿ: ಇಂಡಿಯಾ ಒಕ್ಕೂಟದ (INDIA Bloc) ನಾಲ್ಕನೇ ಸಭೆಯನ್ನು ಮತ್ತೆ ಮುಂದೂಡಲಾಗಿದ್ದು, ಡಿಸೆಂಬರ್ 19 ರಂದು ದೆಹಲಿಯಲ್ಲಿ ನಡೆಯಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ (Jai Ram Ramesh) ಭಾನುವಾರ ಹೇಳಿದ್ದಾರೆ.

    ಈ ಹಿಂದೆ ಡಿಸೆಂಬರ್ 17 ರಂದು ಸಭೆ ನಿಗದಿಯಾಗಿತ್ತು. ಆದರೆ ಇದೀಗ ಮತ್ತೆ ಈ ಸಭೆಯನ್ನು ಮುಂದೂಡಿದ್ದು, ಇದಕ್ಕೆ ಕಾರಣ ತಿಳಿದುಬಂದಿಲ್ಲ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸೇರಿದಂತೆ ಮೈತ್ರಿಕೂಟದ ಉನ್ನತ ನಾಯಕರು ನಿರ್ಧರಿಸಿದ ಹಿನ್ನೆಲೆಯಲ್ಲಿ ಡಿ.6ರಂದು ನಿಗದಿಯಾಗಿದ್ದ ಸಭೆಯನ್ನು ಡಿ. 17 ಕ್ಕೆ ಮುಂದೂಡಲಾಗಿತ್ತು.

    ಮಧ್ಯಪ್ರದೇಶ, ಛತ್ತೀಸ್‌ಗಢ, ತೆಲಂಗಾಣ ಮತ್ತು ರಾಜಸ್ಥಾನಗಳ ಚುನಾವಣಾ ಫಲಿತಾಂಶ ಪ್ರಕಟವಾದ ದಿನವೇ ಡಿಸೆಂಬರ್ 6 ರಂದು ಕಾಂಗ್ರೆಸ್ ಸಭೆಯನ್ನು (Comgress Meeting) ಕರೆದಿತ್ತು . ಆದರೆ ಮೂರು ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದ್ದಂತೆಯೇ ಪ್ರತಿಪಕ್ಷಗಳ ಸಭೆಯನ್ನು ಘೋಷಿಸಲಾಯಿತು. ಇದನ್ನೂ ಓದಿ: ಸೋದರಳಿಯನನ್ನು ರಾಜಕೀಯ ಉತ್ತರಾಧಿಕಾರಿಯಾಗಿ ಘೋಷಿಸಿದ ಮಾಯಾವತಿ

    27 ಮೈತ್ರಿ ಪಕ್ಷಗಳ ಕೊನೆಯ ಸಭೆಯು ಮುಂಬೈನಲ್ಲಿ ನಡೆಯಿತು. ಶಿವಸೇನಾ (ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಐದು ರಾಜ್ಯಗಳ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಇದನ್ನು ಆಯೋಜನೆ ಮಾಡಲಾಗಿತ್ತು. ಈ ವೇಳೆ ಪ್ರಮುಖ ಚುನಾವಣಾ ವಿಷಯಗಳ ಚರ್ಚೆಯ ಜೊತೆಗೆ ಸಮನ್ವಯ ಸಮಿತಿಯನ್ನು ರಚಿಸಿತು. ಅಲ್ಲದೇ 2024 ರ ಭಾರತೀಯ ಸಾರ್ವತ್ರಿಕ ಚುನಾವಣೆಗಳನ್ನು ಸಾಧ್ಯವಾದಷ್ಟು ಒಟ್ಟಾಗಿ ಎದುರಿಸಲು ಮೂರು ಅಂಶಗಳ ನಿರ್ಣಯವನ್ನು ಅಂಗೀಕರಿಸಿತು.

    ಬೆಂಗಳೂರಿನಲ್ಲಿ ನಡೆದ ಎರಡನೇ ಸಭೆಯಲ್ಲಿ ಮೈತ್ರಿಕೂಟದ ಹೆಸರು ಇಂಡಿಯನ್ ನ್ಯಾಷನಲ್ ಡೆವಲಪ್‌ಮೆಂಟ್ ಇನ್‌ಕ್ಲೂಸಿವ್ ಅಲೈಯನ್ಸ್ (ಇಂಡಿಯಾ) ಅನ್ನು ಘೋಷಿಸಲಾಯಿತು. ಮೊದಲ ಸಭೆಯನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಪಾಟ್ನಾದಲ್ಲಿ ಆಯೋಜಿಸಿದ್ದರು . ಈ ವೇಳೆ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಒಟ್ಟಾಗಿ ಹೋರಾಡಲು ಪಕ್ಷಗಳು ನಿರ್ಧರಿಸಿದವು.

  • ರಾಜ್ಯಸಭೆ ಸದಸ್ಯರಾಗಿ ಜಗ್ಗೇಶ್, ಲೆಹರ್ ಸಿಂಗ್, ಜೈರಾಮ್ ರಮೇಶ್, ನಿರ್ಮಲಾ ಸೀತಾರಾಮನ್ ಪ್ರಮಾಣ ವಚನ ಸ್ವೀಕಾರ

    ರಾಜ್ಯಸಭೆ ಸದಸ್ಯರಾಗಿ ಜಗ್ಗೇಶ್, ಲೆಹರ್ ಸಿಂಗ್, ಜೈರಾಮ್ ರಮೇಶ್, ನಿರ್ಮಲಾ ಸೀತಾರಾಮನ್ ಪ್ರಮಾಣ ವಚನ ಸ್ವೀಕಾರ

    ನವದೆಹಲಿ: ವಿವಿಧ ರಾಜ್ಯಗಳಿಂದ ರಾಜ್ಯಸಭೆಗೆ ಚುನಾಯಿತರಾದ 24 ಮಂದಿ ಸದಸ್ಯರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ಕರ್ನಾಟಕದಿಂದ ಆಯ್ಕೆಯಾದ ಜಗ್ಗೇಶ್, ಲೆಹರ್ ಸಿಂಗ್, ಜೈರಾಮ್ ರಮೇಶ್, ನಿರ್ಮಲಾ ಸೀತರಾಮನ್ ಇದೇ ವೇಳೆ ಪ್ರಮಾಣ ವಚನ ಸ್ವೀಕರಿಸಿದರು‌.

    ನಟ ಜಗ್ಗೇಶ್ ಕನ್ನಡದಲ್ಲಿ‌ ಹಾಗೂ ರಾಘವೇಂದ್ರ ಸ್ವಾಮಿಗಳ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಬಳಿಕ ಬಿಜೆಪಿ ಹಿರಿಯ ನಾಯಕ ಲೆಹರ್ ಸಿಂಗ್ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಇಂಗ್ಲಿಷ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಇದನ್ನೂ ಓದಿ: ಕಾಂಗ್ರೆಸ್ ನಾಯಕ ಆನಂದ್ ಶರ್ಮಾ, ಜೆಪಿ ನಡ್ಡಾ ಭೇಟಿ- ಬಿಜೆಪಿ ಸೇರ್ಪಡೆ?

    ಪಿಯೂಷ್ ಗೋಯೆಲ್, ಮುಕುಲ್ ವಾಸ್ನಿಕ್, ಸುರೇಂದ್ರ ಕುಮಾರ್, ಲಕ್ಷ್ಮಿಕಾಂತ್ ಬಾಜಪೇಯ್, ನಾಬುರಾವ್ ನಿಶಾದ್, ಧನಜಯ್ ಮಧು, ಘನಶಾಮ್ ತಿವಾರಿ ಸೇರಿ 24 ಮಂದಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಸಭಾಧ್ಯಕ್ಷ ವೆಂಕಯ್ಯನಾಯ್ಡು ಉಪಸ್ಥಿತರಿದ್ದರು.

    Live Tv
    [brid partner=56869869 player=32851 video=960834 autoplay=true]

  • ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್‍ನಿಂದ ಜೈರಾಮ್ ರಮೇಶ್‍ಗೆ ಟಿಕೆಟ್

    ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್‍ನಿಂದ ಜೈರಾಮ್ ರಮೇಶ್‍ಗೆ ಟಿಕೆಟ್

    ನವದೆಹಲಿ: ಬಿಜೆಪಿ ಟಿಕೆಟ್ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್ ನಿಂದಲೂ ರಾಜ್ಯಸಭಾ ಚುನಾವಣೆಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಕೈ ಪಾಳಯದಿಂದ ಜೈರಾಮ್ ರಮೇಶ್ ಮುಂದುವರಿಸಲು ಹೈಕಮಾಂಡ್ ನಿರ್ಧಾರ ಮಾಡಿದೆ.

    ಕಾಂಗ್ರೆಸ್ ನಿಂದ ಜೈರಾಮ್ ರಮೇಶ್ ಅಂತಿಮವಾದ್ರೆ, ಬಿಜೆಪಿಯಿಂದ ನಿರ್ಮಲಾ ಸೀತರಾಮನ್ ಮತ್ತು ನಟ ಜಗ್ಗೇಶ್ ಅಂತಿಮ ಹೆಸರು ಘೋಷಣೆ ಮಾಡಲಾಗಿದೆ. ರಾಜ್ಯದ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ಮೂವರು ಅಭ್ಯರ್ಥಿಗಳ ಹೆಸರು ಅಂತಿಮವಾಗಿದೆ. ನಾಲ್ಕನೇ ಸ್ಥಾನಕ್ಕೆ ಅಭ್ಯರ್ಥಿಯ ಯಾರು ಅನ್ನೋದು ಇನ್ನು ಕುತೂಹಲವಾಗಿಯೇ ಉಳಿದಿದೆ. ನಾಲ್ಕನೇ ಅಭ್ಯರ್ಥಿಗೆ ಕಾಂಗ್ರೆಸ್ ಬಿಜೆಪಿಯಿಂದ ಯಾರೇ ಅಭ್ಯರ್ಥಿಯಾದ್ರು ಜೆಡಿಎಸ್ ಬೆಂಬಲ ಬೇಕಿದೆ. ಇದನ್ನೂ ಓದಿ: ರಾಜ್ಯಸಭಾ ಚುನಾವಣೆ: ಜಗ್ಗೇಶ್, ನಿರ್ಮಲಾ ಸೀತಾರಾಮನ್‍ಗೆ ಸಿಕ್ತು ಬಿಜೆಪಿ ಟಿಕೆಟ್

    ಒಂದು ವೇಳೆ ಜೆಡಿಎಸ್ ಅಭ್ಯರ್ಥಿ ಹೆಸರು ಘೋಷಿಸಿದ್ರು ಕಾಂಗ್ರೆಸ್ ಅಥವಾ ಬಿಜೆಪಿಯ ಬೆಂಬಲ ಬೇಕಿದೆ. ಆದರೆ ಈವರೆಗೂ ಮೈತ್ರಿ ಮಾತುಕತೆ ಅಂತಿಮವಾಗದ ಕಾರಣ ನಾಲ್ಕನೇ ಅಭ್ಯರ್ಥಿ ಯಾರು ಅನ್ನೋದು ಕುತೂಹಲವಾಗಿಯೇ ಉಳಿದಿದೆ. ಬಿಜೆಪಿ ಉದ್ಯಮಿ ಪ್ರಕಾಶ್ ಶೆಟ್ಟಿ ಮತ್ತು ಲಹರಿ ವೇಲು ಹೆಸರು ಮುಂಚೂಣಿಯಲ್ಲಿ ತಂದಿದ್ದರೇ ಜೆಡಿಎಸ್ ಕುಪೇಂದ್ರ ರೆಡ್ಡಿ ಹೆಸರನ್ನು ಪ್ರಸ್ತಾಪಿಸಿದೆ. ಕುಪೇಂದ್ರ ರೆಡ್ಡಿ ಬಿಜೆಪಿ ಬದಲು ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತಿದ್ದು, ಬಿಜೆಪಿ ಕಾದು ನೋಡುವ ತಂತ್ರಕ್ಕೆ ಮುಂದಾಗಿದೆ. ಹೀಗಾಗಿ ನಾಲ್ಕನೇ ಅಭ್ಯರ್ಥಿ ಯಾರಾಗಬಹುದು, ಯಾವ್ಯಾವ ಪಕ್ಷಗಳ ನಡುವೆ ಮೈತ್ರಿಯಾಗಲಿದೆ ಎಂದು ಇಂದು ಗೊತ್ತಾಗಲಿದೆ.

    ಒಟ್ಟಿನಲ್ಲಿ ಜೂನ್ 10ರಂದು ಕರ್ನಾಟಕ ಸೇರಿದಂತೆ 15 ರಾಜ್ಯಗಳಲ್ಲಿನ 57 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಉತ್ತರ ಪ್ರದೇಶವೊಂದರಲ್ಲೇ 11 ಸ್ಥಾನಗಳಿವೆ. ತಮಿಳುನಾಡು ಮತ್ತು ಮಹಾರಾಷ್ಟ್ರದಲ್ಲಿ 6 ಸ್ಥಾನಗಳಿವೆ. ಬಿಹಾರದಲ್ಲಿ 5, ಕರ್ನಾಟಕ, ಆಂಧ್ರಪ್ರದೇಶ ಮತ್ತು ರಾಜಸ್ಥಾನದಲ್ಲಿ 4 ಸ್ಥಾನಗಳು ತೆರವಾಗಿದ್ದು, ಚುನಾವಣೆ ನಡೆಯಲಿದೆ. ಈ 57 ಸ್ಥಾನಗಳ ಪೈಕಿ ಕಾಂಗ್ರೆಸ್  8 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಲ್ಲಿದೆ. ಇದನ್ನೂ ಓದಿ: ಜಗ್ಗೇಶ್‍ಗೆ ರಾಜ್ಯಸಭಾ ಟಿಕೆಟ್- ರಾಯರ ಕೃಪೆ, ಪವಾಡಕ್ಕೆ ಧನ್ಯ ಅಂದ್ರು ನವರಸ ನಾಯಕ

    ರಾಜಸ್ಥಾನದಲ್ಲಿ 2, ಛತ್ತೀಸ್‍ಗಡದಲ್ಲಿ 2, ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು ಮತ್ತು ಮಧ್ಯಪ್ರದೇಶದಲ್ಲಿ ತಲಾ ಒಂದೊಂದು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆ ಇದೆ. ರಾಜಸ್ಥಾನದಲ್ಲಿ ಬಿಜೆಪಿಯೇತರ ಎಲ್ಲಾ ಪಕ್ಷಗಳ ಬೆಂಬಲ ಸಿಕ್ಕರೆ ಒಂದು ಹೆಚ್ಚುವರಿ ಸ್ಥಾನ ಕೂಡ ಕಾಂಗ್ರೆಸ್‍ಗೆ ಸಿಗುವ ಸಾಧ್ಯತೆಗಳಿವೆ.