Tag: jai shree ram

  • ಮೆಟ್ರೋದಲ್ಲಿ ಶ್ರೀರಾಮನ ಭಜನೆ; ಇದು ಸಾರ್ವಜನಿಕ ಸ್ಥಳದ ದುರುಪಯೋಗ ಎಂದ ಬಿಗ್‌ ಬಾಸ್‌ ತಾರೆಗೆ ತರಾಟೆ

    ಮೆಟ್ರೋದಲ್ಲಿ ಶ್ರೀರಾಮನ ಭಜನೆ; ಇದು ಸಾರ್ವಜನಿಕ ಸ್ಥಳದ ದುರುಪಯೋಗ ಎಂದ ಬಿಗ್‌ ಬಾಸ್‌ ತಾರೆಗೆ ತರಾಟೆ

    ಮುಂಬೈ: ನವರಾತ್ರಿ ಆಚರಣೆಯ ಭಾಗವಾಗಿ ಹೌರಾದ ಮೆಟ್ರೋ ರೈಲ್ಲಿನಲ್ಲಿ ʻಜೈ ಶ್ರೀರಾಮ್‌ʼ (Jai Shree Ram) ಘೋಷಣೆ ಕೂಗುತ್ತಾ ಭಜನೆ ಮಾಡಲಾಗುತ್ತಿತ್ತು. ಈ ದೃಶ್ಯವನ್ನು ಕಂಡು ತೀವ್ರವಾಗಿ ಟೀಕಿಸಿದ್ದ ಬಿಗ್ ಬಾಸ್ ತಾರೆ ಪೂಜಾ ಭಟ್‌ಗೆ (Pooja Bhatt) ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.

    ಮೆಟ್ರೋ ರೈಲಿಯಲ್ಲಿ (Mumbai Metro Train) ಶ್ರೀರಾಮನ ಭಜನೆ ಮಾಡುತ್ತಿದ್ದ ವೀಡಿಯೋವನ್ನು ತನ್ನ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದ ನಟಿ, ಇದು ಸಾರ್ವಜನಿಕ ಸ್ಥಳದ ದುರುಪಯೋಗ. ಇಂತಹದ್ದಕ್ಕೆ ಟ್ರೈನ್‌ಗಳಲ್ಲಿ ಏಕೆ ಅನುಮತಿ ನೀಡುತ್ತೀರಿ ಎಂದು ಪ್ರಶ್ನೆ ಮಾಡಿದ್ದರು. ನಟಿ ಟ್ವೀಟ್‌ ಮಾಡಿದ ಬಳಿಕ ಕೆಲ ನೆಟ್ಟಿಗರು ಆಕೆಯನ್ನ ತರಾಟೆಗೆ ತೆಗೆದುಕೊಂಡಿದ್ದಾರೆ, ಹಿಗ್ಗಾಮುಗ್ಗಾ ಟ್ರೋಲ್‌ ಮಾಡಿದ್ದಾರೆ. ಇದನ್ನೂ ಓದಿ: ದುರ್ಗಾದೇವಿ ಮೂರ್ತಿ ವಿರ್ಸಜನೆ| ಮಸೀದಿ ಎದುರು ಹಾಡು ಹಾಕಿದ್ದಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ

    ಪೂಜಾ ಭಟ್‌ ಹೇಳಿದ್ದೇನು?
    ಸಾರ್ವಜನಿಕ ಸ್ಥಳದಲ್ಲಿ ಇದನ್ನು ಹೇಗೆ ಅನುಮತಿಸಲಾಗಿದೆ? ಅದು ಹಿಂದುತ್ವದ ಪಾಪ್, ಕ್ರಿಸ್‌ಮಸ್ ಕರೋಲ್‌ಗಳು, ಬಾಲಿವುಡ್ ಬ್ಲಾಕ್‌ಬಸ್ಟರ್‌ಗಳು ಅಥವಾ ಯಾವುದೇ ಸಂಗೀತ ಆಗಿರಲಿ, ಸಾರ್ವಜನಿಕ ಸ್ಥಳಗಳನ್ನು ಈ ರೀತಿ ದುರುಪಯೋಗಪಡಿಸಿಕೊಳ್ಳುವಂತಿಲ್ಲ. ಅಧಿಕಾರಿಗಳು ಇದನ್ನು ಹೇಗೆ ಮತ್ತು ಏಕೆ ಅನುಮತಿಸುತ್ತಿದ್ದಾರೆ? ಎಂದು ಹೇಳಿದ್ದರು. ಇದನ್ನೂ ಓದಿ: Uttar Pradesh | ದುರ್ಗಾದೇವಿ ಮೂರ್ತಿ ವಿರ್ಸಜನೆ ವೇಳೆ ಕೋಮು ಸಂಘರ್ಷ – ಲಾಠಿ ಚಾರ್ಜ್, 30 ಮಂದಿ ಬಂಧನ

    ನಟಿಯ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿರುವ ಕುನಾಲ್ ಪುರೋಹಿತ್ ಎಂಬವರು, ನವರಾತ್ರಿ ಆಚರಣೆಗಾಗಿಯೇ ಹಿಂದುತ್ವದ ಪಾಪ್ ಸಂಗೀತವನ್ನು ವಿನ್ಯಾಸಗೊಳಿಸಲಾಗಿದೆ. ಇದು ಗ್ರಾಮೀಣ ಮತ್ತು ನಗರಗಳಾದ್ಯಂತ ವಿವಿಧ ವರ್ಗಗಳ ಜನರನ್ನ ಸುಲಭವಾಗಿ ಆಕರ್ಷಿಸುತ್ತದೆ. ಮೆಟ್ರೋದಲ್ಲಿ ಇದನ್ನ ಹಾಡುವುದರಿಂದ ಯಾವುದೇ ತೊಂದರೆ ಆಗುವುದಿಲ್ಲ. ಅಲ್ಲದೇ ಮುಂಚಿತವಾಗಿ ಇದಕ್ಕಾಗಿಯೇ ಮೆಟ್ರೋವನ್ನ ಕಾಯ್ದಿರಿಸಲಾಗಿತ್ತು ಎಂದೂ ಸ್ಪಷ್ಟನೆ ನೀಡಿದ್ದಾರೆ.

    ನಟಿ ಪೂಜಾ ಭಟ್‌ ಬಿಗ್‌ ಬಾಸ್‌ ಒಟಿಟಿ-2 ರಿಯಾಲಿಟಿ ಶೋ ಮೂಲಕ ಸಿನಿ ಜಗತ್ತಿಗೆ ಪ್ರವೇಶಿಸಿದರು. ನಂತರ ಬಿಗ್ ಗರ್ಲ್ಸ್ ಡೋಂಟ್ ಕ್ರೈ ಶೋ ವೆಬ್‌ಸಿರೀಸ್‌ ಕಾಣಿಸಿಕೊಂಡರು. ಇದನ್ನೂ ಓದಿ: ಕಾಂಗ್ರೆಸ್‌ ಸರ್ಕಾರಕ್ಕೆ ಭಯೋತ್ಪಾದಕರೇ ಬಿಗ್ ಬಾಸ್, ಸಿದ್ದರಾಮಯ್ಯ ಮುಸಲ್ಮಾನರ ಬಿಗ್‌ ಬಾಸ್: ಅಶೋಕ್‌ ಲೇವಡಿ

  • ಕಾಲೇಜಿನಲ್ಲಿ ಜೈ ಶ್ರೀರಾಮ್‌ ಹಾಡು ಹಾಕಿದ್ದಕ್ಕೆ ಮಾರಾಮಾರಿ- 17ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ FIR

    ಕಾಲೇಜಿನಲ್ಲಿ ಜೈ ಶ್ರೀರಾಮ್‌ ಹಾಡು ಹಾಕಿದ್ದಕ್ಕೆ ಮಾರಾಮಾರಿ- 17ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ FIR

    ಬೀದರ್: ಕಾಲೇಜಿನಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದ ವೇಳೆ ಜೈ ಶ್ರೀರಾಮ್ ಹಾಡು ಹಾಕಿದ್ದಕ್ಕೆ 2 ಸ್ಟೂಡೆಂಟ್ಸ್ ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ.

    ನಗರದ ಜಿಎನ್ ಡಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಇಂದು ಮಧ್ಯಾಹ್ನ ವಿದ್ಯಾರ್ಥಿಗಳ ಗುಂಪಿನ ನಡುವೆ ನಡೆದ ಮಾರಾಮಾರಿಯ ಬಗ್ಗೆ ನಿಮ್ಮ ಪಬ್ಲಿಕ್ ಟಿವಿ ಎಕ್ಸಕ್ಲೂಸಿವ್ ಸುದ್ದಿ ಬಿತ್ತರಿಸಿತ್ತು. ಇದನ್ನೂ ಓದಿ: ಹಗ್ಗಜಗ್ಗಾಟದಲ್ಲಿ ಚೀನಿಯರನ್ನು ಸೋಲಿಸಿದ ಭಾರತೀಯ ಸೈನಿಕರು

    ಹಲ್ಲೆ ಮಾಡಿ ಪರಾರಿಯಾಗಿದ್ದ ಬಶೀರ್ ಖಾನ್, ಗಫರಾನ್, ಶೇಕ್ ಪಾಷಾ, ಬಿಲಾಲ್ ಸೇರಿದಂತೆ 17 ಕ್ಕೂ ಹೆಚ್ಚು ಅನ್ಯ ಗುಂಪಿನ ಸ್ಟೂಡೆಂಟ್ಸ್ ಮೇಲೆ ಎಫ್ಐಆರ್ ದಾಖಲಾಗಿದೆ. ಹಲ್ಲೆಗೊಳಗಾದ ಇಂಜಿನಿಯರಿಂಗ್ ವಿದ್ಯಾರ್ಥಿ ನಟರಾಜ್ ನೀಡಿದ ದೂರಿನ ಮೇಲೆ ಈ ಎಫ್ಐಆರ್ ದಾಖಲಾಗಿದೆ.

    ಘಟನೆ ವಿವರ: ಕಾಲೇಜು ಫೆಸ್ಟ್‌ನಲ್ಲಿ ಜೈ ಶ್ರೀರಾಮ್ ಹಾಡು ಹಾಕಲಾಗಿತ್ತು. ಈ ವೇಳೆ ಉದ್ದೇಶ ಪೂರ್ವಕವಾಗಿ ಅನ್ಯ ಕೋಮಿನ ಸ್ಟೂಡೆಂಟ್ಸ್ ನಮ್ಮ ಮೇಲೆ ಹಲ್ಲೆ ಮಾಡಿದ್ದಾರೆ. ಕೈಯಲ್ಲಿದ್ದ ಖಡ್ಗ ಹಾಗೂ ಕೈಯಿಂದ ತಲೆ, ಮೂಗು, ಹಣೆ ಮೇಲೆ ಮನಬಂದಂತೆ ಥಳಿಸಿದ್ದಾರೆ ಎಂದು ಗಾಂಧಿಗಂಜ್ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ ಎಫ್‌ಐಆರ್‌ನಲ್ಲಿ ವಿದ್ಯಾರ್ಥಿ ನಟರಾಜ್ ಉಲ್ಲೇಖ ಮಾಡಿದ್ದಾರೆ.

  • ಜೈ ಶ್ರೀರಾಮ್ ಅಂದಿದ್ದಕ್ಕೆ ಕಿರಿಕ್- ಅಲ್ಲಾಹು ಮಾತ್ರ ಕೂಗಬೇಕು ಅಂತೇಳಿ ಅಟ್ಯಾಕ್

    ಜೈ ಶ್ರೀರಾಮ್ ಅಂದಿದ್ದಕ್ಕೆ ಕಿರಿಕ್- ಅಲ್ಲಾಹು ಮಾತ್ರ ಕೂಗಬೇಕು ಅಂತೇಳಿ ಅಟ್ಯಾಕ್

    ಬೆಂಗಳೂರು: ಜೈ ಶ್ರೀರಾಮ್ (Jai Shree Ram) ಅಂತಾ ಘೋಷಣೆ ಕೂಗಿದ್ದಕ್ಕೆ ಕಿರಿಕ್ ಮಾಡಿದ ಇಬ್ಬರು ಅಪ್ರಾಪ್ತರು ಸೇರಿ ನಾಲ್ವರನ್ನು ವಿದ್ಯಾರಣ್ಯ ಪೊಲೀಸರಿಂದ ಬಂಧಿಸಲಾಗಿದೆ. ಬಂಧಿತರನ್ನು ಫರ್ಮಾನ್, ಸಮೀರ್ ಎಂದು ಗುತಿಸಲಾಗಿದೆ.

    ಆಗಿದ್ದೇನು..?: ಬೆಂಗಳೂರಿನ ವಿದ್ಯಾರಣ್ಯಪುರ ಬಳಿಯ ಚಿಕ್ಕಬೆಟ್ಟಹಳ್ಳಿಯಲ್ಲಿ ಶ್ರೀರಾಮನವಮಿ ಪ್ರಯುಕ್ತ ಕಾರಿನಲ್ಲಿ ಹೋಗುತ್ತಿದ್ದ ಮೂವರು ಯುವಕರು ಬಾವುಟ ಹಿಡಿದು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಾರೆ. ಈ ವೇಳೆ ಬೈಕ್‍ನಲ್ಲಿ ಬಂದ ಇಬ್ಬರು ಯುವಕರು ಕಾರನ್ನು ಅಡ್ಡಗಟ್ಟಿ ಗಲಾಟೆ ಮಾಡಿದ್ದಾರೆ. ಅಲ್ಲದೇ ಜೈ ಶ್ರೀರಾಮ್ ಕೂಗಬಾರದು, ಅಲ್ಲಾಹು ಅಕ್ಬರ್ ಅಂತಾ ಮಾತ್ರ ಕೂಗಬೇಕು ಎಂದು ತಗಾದೆ ತೆಗೆದಿದ್ದಾರೆ.

    ಈ ವೇಳೆ ಮಾತಿಗೆ ಮಾತು ಬೆಳೆದು ಅನ್ಯಕೋಮಿನ ಯುವಕರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಇದನ್ನೂ ಓದಿ: ಗುರುವಾರ ಶ್ರೀರಂಗಪಟ್ಟಣದಲ್ಲಿ ದ್ವಾರಕೀಶ್ ಅಸ್ಥಿ ವಿಸರ್ಜನೆ

  • ನೀವು ಜೈಶ್ರೀರಾಮ್‌ ಜಪಿಸುತ್ತಾ ಹಸಿವಿನಿಂದ ಸಾಯಬೇಕೆಂದು ಪ್ರಧಾನಿ ಬಯಸುತ್ತಾರೆ: ರಾಗಾ ಟೀಕೆ

    ನೀವು ಜೈಶ್ರೀರಾಮ್‌ ಜಪಿಸುತ್ತಾ ಹಸಿವಿನಿಂದ ಸಾಯಬೇಕೆಂದು ಪ್ರಧಾನಿ ಬಯಸುತ್ತಾರೆ: ರಾಗಾ ಟೀಕೆ

    ಭೋಪಾಲ್:‌ ನೀವು ಜೈಶ್ರೀರಾಮ್‌ ಜಪಿಸುತ್ತಾ ಹಸಿವಿನಿಂದ ಸಾಯಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರು ಬಯಸುತ್ತಾರೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರು ಟೀಕಿಸಿದ್ದಾರೆ.

    ಜೈ ಶ್ರೀರಾಮ್ ಕೂಗಿದ ಬಿಜೆಪಿ ಕಾರ್ಯಕರ್ತರು: ಇಂದು ಮಧ್ಯಪ್ರದೇಶದ (Madhya Pradesh) ಸಾರಂಗ್‌ಪುರದಿಂದ ಪುನರಾರಂಭಗೊಂಡ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ (Bharat Jodo Nyay Yatre) ಮಾತನಾಡುತ್ತಾ, ದೇಶದಲ್ಲಿ ನಿರುದ್ಯೋಗದ ಬಗ್ಗೆ ಪ್ರಧಾನಿ ವಿರುದ್ಧ ವಾಗ್ದಾಳಿಗಳನ್ನು ನಡೆಸಿದ್ದಾರೆ. ರಾಹುಲ್‌ ಗಾಂಧಿಯನ್ನು ಬಿಜೆಪಿ ಕಾರ್ಯಕರ್ತರು ಮೋದಿ.. ಮೋದಿ.. ಮತ್ತು ಜೈ ಶ್ರೀರಾಮ್ (Jai Shree Ram) ಘೋಷಣೆಗಳನ್ನು ಕೂಗುವ ಮೂಲಕ ಸ್ವಾಗತಿಸಿದ್ದಾರೆ. ಜೊತೆಗೆ ಕಾಂಗ್ರೆಸ್ ನಾಯಕನಿಗೆ ಆಲೂಗೆಡ್ಡೆಯನ್ನು ನೀಡಿ, ಬದಲಾಗಿ ಚಿನ್ನ ನೀಡುವಂತೆ ಕೇಳಿಕೊಂಡ ಪ್ರಸಂಗವೂ ನಡೆಯಿತು.

    ಬಿಜೆಪಿ ಕಾರ್ಯಕರ್ತರ ಘೋಷಣೆಗಳನ್ನು ಸ್ವಾಗತಿಸಿದ ರಾಹುಲ್ (Rahul Gandhi), ನಿರುದ್ಯೋಗದ ವಿರುದ್ಧ ಪ್ರಧಾನಿಯನ್ನು ಟೀಕಿಸಿದರು. ಯುವ ನಿರುದ್ಯೋಗಿಗಳು ಸೋಶಿಯಲ್‌ ಮೀಡಿಯಾದಲ್ಲಿ ದಿನವಿಡೀ ರೀಲ್‌ಗಳನ್ನು ನೋಡುತ್ತಿರುತ್ತಾರೆ ಎಂದು ಹೇಳಿದರು. ನೀವು ದಿನವಿಡೀ ನಿಮ್ಮ ಫೋನ್‌ಗಳನ್ನು ನೋಡಬೇಕು, ಜೈ ಶ್ರೀ ರಾಮ್ ಎಂದು ಜಪಿಸಬೇಕು. ಜೊತೆಗೆ ಹಸಿವಿನಿಂದ ಸಾಯಬೇಕು ಎಂದು ಪ್ರಧಾನಿ ಬಯಸುತ್ತಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಕ್ಷಿಪಣಿ ದಾಳಿಗೆ ಕೇರಳ ಮೂಲದ ವ್ಯಕ್ತಿ ಸಾವು – ಇಸ್ರೇಲ್‌ನಲ್ಲಿರುವ ಭಾರತೀಯರಿಗೆ ಎಚ್ಚರಿಕೆ ಸಂದೇಶ

    ಇದೇ ವೇಳೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಅಗ್ನಿವೀರ್ ಯೋಜನೆ ಕುರಿತು ಪ್ರತಿಕ್ರಿಯಿಸಿ, ಹಿಂದೆ ಸಶಸ್ತ್ರ ಪಡೆಗಳು ಯುವಕರಿಗೆ ಒಂದೆರಡು ಗ್ಯಾರಂಟಿಗಳನ್ನು ನೀಡುತ್ತಿದ್ದವು. ಮೊದಲನೆಯದಾಗಿ ಯುವಕರಿಗೆ ಪಿಂಚಣಿ ಹಾಗೂ ಎರಡನೆಯದಾಗಿ ಒಂದು ವೇಳೆ ಪ್ರಾಣ ಕಳೆದುಕೊಂಡರೂ ಗೌರವ ಸಿಗುತ್ತಿತ್ತು. ಆದರೆ ಈಗ ಅಗ್ನಿವೀರ್ ಯೋಜನೆಯನ್ನು ಜಾರಿಗೆ ತರಲಾಗಿದೆ. ಇದರ ಅಡಿಯಲ್ಲಿ ನಾಲ್ಕು ಜನರನ್ನು ಸೇರ್ಪಡೆಗೊಳಿಸಲಾಗುವುದು. ಈ ನಾಲ್ವರಲ್ಲಿ ಮೂವರು ರಿಲೀವ್ ಆಗುತ್ತಾರೆ. ಈ ಮೂರು ಜನರು SC, ST ಮತ್ತು OBC ಆಗಿರುತ್ತಾರೆ ಎಂದು ಅವರು ಹೇಳಿದರು.

    ಮೂರು ದಿನಗಳಲ್ಲಿ ಇದು ಎರಡನೇ ಬಾರಿಗೆ ರಾಹುಲ್ ಗಾಂಧಿ ನಿರುದ್ಯೋಗದ ಬಗ್ಗೆ ಪ್ರಧಾನಿಯನ್ನು ಟೀಕಿಸಿದ್ದಾರೆ. ಭಾನುವಾರ ಗ್ವಾಲಿಯರ್‌ನಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆ ವೇಳೆ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ರಾಗಾ, ಪಾಕಿಸ್ತಾನಕ್ಕೆ ಹೋಲಿಸಿದರೆ ಭಾರತದಲ್ಲಿ ನಿರುದ್ಯೋಗ ದುಪ್ಪಟ್ಟು ಇದೆ. ದೇಶದಲ್ಲಿ ನಿರುದ್ಯೋಗಿ ಯುವಕರ ಸಂಖ್ಯೆ ಬಾಂಗ್ಲಾದೇಶ ಮತ್ತು ಭೂತಾನ್‌ಗಿಂತಲೂ ಜಾಸ್ತಿ ಇದೆ. ಭಾರತದ ನಿರುದ್ಯೋಗವು ಕಳೆದ 40 ವರ್ಷಗಳಲ್ಲಿ ಅತ್ಯಧಿಕವಾಗಿದೆ ಎಂದು ಅವರು ಹೇಳಿದರು.

  • ಜೈ ಶ್ರೀರಾಮ್ ಅನ್ನೋರು ರಾಕ್ಷಸರು: ರಶೀದ್ ಅಲ್ವಿ

    ಜೈ ಶ್ರೀರಾಮ್ ಅನ್ನೋರು ರಾಕ್ಷಸರು: ರಶೀದ್ ಅಲ್ವಿ

    ನವದೆಹಲಿ: ರಾಮರಾಜ್ಯ, ಜೈ ಶ್ರೀರಾಮ್ ಘೋಷಣೆ ಕೂಗುವವರು ರಾಕ್ಷಸರು ಎಂದು ಕಾಂಗ್ರೆಸ್ ನಾಯಕ ರಶೀದ್ ಅಲ್ವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಉತ್ತರಪ್ರದೇಶದ ಸಂಭಾಲ್ ಜಿಲ್ಲೆಯ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ್ದ ರಶೀದ್ ಅಲ್ವಿ, ಈ ದೇಶದಲ್ಲಿ ರಾಮರಾಜ್ಯ ಆಗಬೇಕು ಎನ್ನುವುದು ನಮಗೂ ಇದೆ. ಮೇಕೆಗಳು ಮತ್ತು ಸಿಂಹಗಳು ನೀರು ಕುಡಿಯುವ ರಾಜ್ಯದಲ್ಲಿ ದ್ವೇಷ ಹೇಗೆ ಉಂಟಾಗುತ್ತದೆ? ಈ ದೇಶದಲ್ಲಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗುವ ಮೂಲಕಜನರನ್ನು ದಾರಿ ತಪ್ಪಿಸುವವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದಿದ್ದಾರೆ. ಇದನ್ನೂ ಓದಿ  ದೇಶ ವಿಭಜನೆಗೆ ಅಂದಿನ ಕಾಂಗ್ರೆಸ್ ನಾಯಕರೇ ಕಾರಣ: ಓವೈಸಿ

    ರಾಮರಾಜ್ಯ ಇದೆ ಎಂದು ಹೇಳುತ್ತೇವೆ. ಆದರೆ ರಾಮರಾಜ್ಯ ಹೇಗೆ ಇರಬೇಕು? ಜೈ ಶ್ರೀರಾಮ್ ಎಂದು ಘೋಷಣೆ ಕೂಗುವವರು ರಾಮಾಯಣದ ಕಾಲನೇಮಿ ರಾಕ್ಷಸರು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಅಲ್ವಿ ಹೇಳಿಕೆಯ ವೀಡಿಯೋವನ್ನು ಟ್ವೀಟ್ ಮಾಡಿರುವ ಬಿಜೆಪಿ ವಕ್ತಾರ ಅಮಿತ್ ಮಾಳವಿಯಾ, ಸಲ್ಮಾನ್ ಖುರ್ಷಿದ್ ನಂತರ ಕಾಂಗ್ರೆಸ್ ನಾಯಕ ರಶೀದ್ ಅಲ್ವಿ ಜೈ ಶ್ರೀರಾಮ್ ಹೇಳುವವರನ್ನು ನಿಶಾಚರರು ಎಂದು ಕರೆಯುತ್ತಾರೆ. ಭಕ್ತರ ಬಗ್ಗೆ ಕಾಂಗ್ರೆಸ್ಸಿನ ಚಿಂತನೆಗಳಲ್ಲಿ ಎಷು ವಿಷ ಬೆರೆತಿದೆ ಎಂದು ಆಕ್ರೋಶವನ್ನು ಸೋಶಿಯಲ್ ಮೀಡಿಯಾದಲ್ಲಿ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪೇಂಟಿಂಗ್‌ ಕೆಲಸಕ್ಕೆ ಬಂದು ಬೀಗ ಹಾಕಿದ ಮನೆಗಳಲ್ಲಿ ಕಳ್ಳತನ- ಖತರ್ನಾಕ್‌ ಕಳ್ಳ ಅಂದರ್‌!