Tag: Jail Superintendent

  • ಜೈಲಲ್ಲಿ ನಿಲ್ಲದ ಕರ್ಮಕಾಂಡ – ಕಲಬುರಗಿ ಜೈಲು ಅಧೀಕ್ಷಕಿ ವಿರುದ್ಧ ವಿಡಿಯೋ ಮಸಲತ್ತು!

    ಜೈಲಲ್ಲಿ ನಿಲ್ಲದ ಕರ್ಮಕಾಂಡ – ಕಲಬುರಗಿ ಜೈಲು ಅಧೀಕ್ಷಕಿ ವಿರುದ್ಧ ವಿಡಿಯೋ ಮಸಲತ್ತು!

    ಕಲಬುರಗಿ: ರಾಜ್ಯದ ಜೈಲು ಕರ್ಮಕಾಂಡಗಳು ನಿಲ್ಲುತ್ತಿಲ್ಲ. ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ (Kalaburagi Central Jail) ಕಟ್ಟುನಿಟ್ಟಿನ ಕ್ರಮಗಳಿಗೆ ಮುಂದಾದ ಅಧೀಕ್ಷಕಿ ಅನಿತಾ ವಿರುದ್ಧ ಮಸಲತ್ತುಗಳು ಮುಂದುವರಿದಿವೆ.

    ಜೈಲು ಅಧೀಕ್ಷಕಿ ಅನಿತಾ ಭೇಟಿ ವೇಳೆಯೇ, ಕೈದಿಯೊಬ್ಬ ಕದ್ದುಮುಚ್ಚಿ ಮೊಬೈಲ್ ಬಳಕೆ ಮಾಡುವ ದೃಶ್ಯವನ್ನು ಜೈಲ್ ಮಾಫಿಯಾ ಮೊಬೈಲ್‌ನಲ್ಲಿ ಸೆರೆ ಹಿಡಿದು, ಅದನ್ನು ವೈರಲ್ ಮಾಡಿದೆ. ಅತ್ತ, ಬೆಳಗಾವಿಯ ಹಿಂಡಲಗಾ ಜೈಲಿನ 2ನೇ ಬ್ಯಾರಕ್‌ನಲ್ಲಿ ಕೈದಿಗಳು ಇಸ್ಪೀಟ್ ಆಡ್ತಿರುವ, ಮೊಬೈಲ್‌ನಲ್ಲಿ ರೀಲ್ಸ್ನಲ್ಲಿ ತೊಡಗಿರುವ, ಕುಟುಂಬದ ಜೊತೆ ವಿಡಿಯೋ ಕಾಲ್ ಮಾಡ್ತಿರುವ ವಿಡಿಯೋಗಳು ಹೊರಗೆ ಬಂದಿವೆ.

    ಹಿಂಡಲಗಾ ಜೈಲಲ್ಲಿ ದುಡ್ಡು ಕೊಟ್ರೆ ಎಲ್ಲಾ ವ್ಯವಸ್ಥೆಗಳನ್ನು ಅಧೀಕ್ಷಕ ಕೃಷ್ಣಮೂರ್ತಿ ಮಾಡ್ತಾರೆ ಎಂಬ ಆರೋಪಗಳು ಇವೆ. ಇದನ್ನೂ ಓದಿ: ಮುಡಾದಲ್ಲಿ 700 ಕೋಟಿ ಅವ್ಯವಹಾರ – ಬಡವರ ಸೈಟು ಶ್ರೀಮಂತರ ಪಾಲು: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ವಾಗ್ದಾಳಿ

    9 ಕೈದಿಗಳ ವಿರುದ್ಧ ಎಫ್‌ಐಆರ್‌:
    ಇತ್ತೀಚೆಗಷ್ಟೇ ಕೇಂದ್ರ ಕಾರಾಗೃಹದ ಅಧೀಕ್ಷಕಿ (Jail Superintendent) ಅನಿತಾ ಅವರ ಕಾರನ್ನು ಸ್ಫೋಟಿಸುವುದಾಗಿ ಬೇದರಿಕೆ ಹಾಕಿದ್ದ ಪ್ರಕರಣ ಸಂಬಂಧ ಇಬ್ಬರು ಮಹಿಳೆಯರು ಸೇರಿ 9 ಕೈದಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು. ಇದನ್ನೂ ಓದಿ: ಕೆನರಾ ಬ್ಯಾಂಕ್ ಜೊತೆಗೆ KKRTC ಒಪ್ಪಂದ – ಸಾರಿಗೆ ನೌಕರರಿಗೆ 1 ಕೋಟಿ ಅಪಘಾತ ವಿಮೆ ಯೋಜನೆ ಜಾರಿ

    ಮುಸ್ತಫಾ,ನಸೀರ್, ಬಚ್ಚನ್,ಅಲ್ತಾಫ್, ದೇವರಾಜ್, ನಾಗರಾಜ್, ಶ್ರೀಕಾಂತ್ ಸೇರಿ 9 ಕೈದಿಗಳ (Prisoners) ವಿರುದ್ಧ ಅಧೀಕ್ಷಕಿ ಅನಿತಾ ಎಫ್‌ಐಆರ್‌ ದಾಖಲಿಸಿದ್ದಾರೆ. ಜೈಲಿನಲ್ಲಿ ಬೀಡಿ, ಗುಟ್ಕಾ ಸಿಗರೇಟ್ ಬಂದ್ ಮಾಡಿದ್ದಕ್ಕೆ ಅನೀತಾ ವಿರುದ್ಧ ಕೈದಿಗಳು ಪ್ರತಿಭಟನೆ ನಡೆಸಿದ್ದರು. ಆ ಬಳಿಕ ದುಷ್ಕರ್ಮಿಯೊಬ್ಬನಿಂದ ಆಡಿಯೋ ರೂಪದಲ್ಲಿ ಬೆದರಿಕೆ ಸಂದೇಶ ಬಂದಿತ್ತು. ಇದನ್ನ ಜೈಲಿನಲ್ಲಿರುವ ಕೈದಿಗಳೇ ಕಳುಹಿಸಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿತ್ತು. ಇದೀಗ ಈ ಪ್ರಕರಣದ ಹಿಂದೆ 9 ಜನ ಕೈದಿಗಳ ಕೈವಾಡ ಇರುವುದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

  • ಕಲಬುರಗಿ ಸೆಂಟ್ರಲ್ ಜೈಲ್ ಅಧೀಕ್ಷಕಿಗೆ ಬೆದರಿಕೆ ಕೇಸ್‌ – 9 ಕೈದಿಗಳ ವಿರುದ್ಧ ಎಫ್‌ಐಆರ್‌

    ಕಲಬುರಗಿ ಸೆಂಟ್ರಲ್ ಜೈಲ್ ಅಧೀಕ್ಷಕಿಗೆ ಬೆದರಿಕೆ ಕೇಸ್‌ – 9 ಕೈದಿಗಳ ವಿರುದ್ಧ ಎಫ್‌ಐಆರ್‌

    ಕಲಬುರಗಿ: ಇಲ್ಲಿನ ಕೇಂದ್ರ ಕಾರಾಗೃಹದ (Kalaburagi Central Jail) ಅಧೀಕ್ಷಕಿ (Jail Superintendent) ಅನಿತಾ ಅವರ ಕಾರನ್ನು ಸ್ಫೋಟಿಸುವುದಾಗಿ ಬೇದರಿಕೆ ಹಾಕಿದ್ದ ಪ್ರಕರಣ ಸಂಬಂಧ ಇಬ್ಬರು ಮಹಿಳೆಯರು ಸೇರಿ 9 ಕೈದಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

    ಮುಸ್ತಫಾ,ನಸೀರ್, ಬಚ್ಚನ್,ಅಲ್ತಾಫ್, ದೇವರಾಜ್, ನಾಗರಾಜ್, ಶ್ರೀಕಾಂತ್ ಸೇರಿ 9 ಕೈದಿಗಳ (Prisoners) ವಿರುದ್ಧ ಅಧೀಕ್ಷಕಿ ಅನಿತಾ ಎಫ್‌ಐಆರ್‌ ದಾಖಲಿಸಿದ್ದಾರೆ. ಜೈಲಿನಲ್ಲಿ ಬೀಡಿ, ಗುಟ್ಕಾ ಸಿಗರೇಟ್ ಬಂದ್ ಮಾಡಿದ್ದಕ್ಕೆ ಅನೀತಾ ವಿರುದ್ಧ ಕೈದಿಗಳು ಪ್ರತಿಭಟನೆ ನಡೆಸಿದ್ದರು. ಆ ಬಳಿಕ ದುಷ್ಕರ್ಮಿಯೊಬ್ಬನಿಂದ ಆಡಿಯೋ ರೂಪದಲ್ಲಿ ಬೆದರಿಕೆ ಸಂದೇಶ ಬಂದಿತ್ತು. ಇದನ್ನ ಜೈಲಿನಲ್ಲಿರುವ ಕೈದಿಗಳೇ ಕಳುಹಿಸಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿತ್ತು. ಇದೀಗ ಈ ಪ್ರಕರಣದ ಹಿಂದೆ 9 ಜನ ಕೈದಿಗಳ ಕೈವಾಡ ಇರುವುದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮೋದಿ ಮನೆ ಹೊರಗಿನ ನಾಯಿಯಂತೆ ಚುನಾವಣಾ ಆಯೋಗ ವರ್ತಿಸುತ್ತಿದೆ: ನಾಲಿಗೆ ಹರಿಬಿಟ್ಟ ಕಾಂಗ್ರೆಸ್‌ ಎಂಎಲ್‌ಸಿ

    ಜೈಲಾಧಿಕಾರಿಗಳೇ ಎತ್ತಿಕಟ್ಟಿರುವ ಆರೋಪ:
    ಮತ್ತೊಂದೆಡೆ ಅನಿತಾ ಅವರ ಬ್ಲ್ಯಾಕ್‌ಮೇಲ್ ಪ್ರಕರಣದ ಹಿಂದೆ ಜೈಲಾಧಿಕಾರಿಗಳೇ ಇದ್ದಾರೆ ಅನ್ನೋ ಆರೋಪವೂ ಕೇಳಿಬಂದಿದೆ. ಜೈಲಿನಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸಿದ ಹಿನ್ನೆಲೆ ಅನಿತಾ ಅವರ ವಿರುದ್ಧ ಪಿತೂರಿ ನಡೆಸಲಾಗಿದೆ ಅನ್ನೋ ಆರೋಪ ಕೇಳಿಬಂದಿದೆ. ಈ ಬಗ್ಗೆಯೂ ತನಿಖೆ ನಡೆಯುತ್ತಿರುವುದಾಗಿ ಜೈಲಿನ ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಕೇಜ್ರಿವಾಲ್‌ ಮೇಲೆ ನಿಗೂಢ ದ್ರವ ಎಸೆತ – ದಾಳಿ ಹಿಂದೆ ಬಿಜೆಪಿ ಕೈವಾಡ ಎಂದು ಆರೋಪ

    ಏನಿದು ಪ್ರಕರಣ?
    ಕಲಬುರಗಿ ಸೆಂಟ್ರಲ್ ಜೈಲಿನ ಅಧೀಕ್ಷಕಿ ಅನಿತಾ ಅವರ ಕಾರನ್ನು ಸ್ಫೋಟಿಸುವುದಾಗಿ ದುಷ್ಕರ್ಮಿಯೊಬ್ಬ ಆಡಿಯೋ ಸಂದೇಶ ಕಳುಹಿಸಿದ್ದ ಪ್ರಕರಣ ಇದೇ ನವೆಂಬರ್‌ 28ರಂದು ಬೆಳಕಿಗೆ ಬಂದಿತ್ತು. ಅನಾಮದೇಯ ವ್ಯಕ್ತಿಯಿಂದ ಕಲಬುರಗಿ ನಗರದ ಪೊಲೀಸ್ ಇನ್ಸೆಪೆಕ್ಟರ್ ಮೊಬೈಲ್‍ಗೆ ಬೆದರಿಕೆ ಸಂದೇಶ ಬಂದಿತ್ತು. ಈ ಮಾಹಿತಿಯನ್ನು ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಇದರಿಂದ ಅಲರ್ಟ್ ಆದ ಅಧಿಕಾರಿಗಳು ಕಾರನ್ನು ಸಿಸಿಟಿವಿ ಇರುವೆಡೆ ಮಾತ್ರ ಪಾರ್ಕ್ ಮಾಡುವಂತೆ ಕಾರು ಚಾಲಕನಿಗೆ ಸೂಚಿಸಿದ್ದರು. ಇದನ್ನೂ ಓದಿ: ಹೈಬ್ರಿಡ್ ಮಾಡೆಲ್‌ನಲ್ಲಿ ಚಾಂಪಿಯನ್ಸ್ ಟ್ರೋಫಿಗೆ ಆಡಲು ಪಾಕಿಸ್ತಾನ ಒಪ್ಪಿಗೆ – ಆದ್ರೆ ಕಂಡೀಷನ್ ಅಪ್ಲೈ

    ಕಳೆದ ಒಂದೂವರೆ ತಿಂಗಳ ಹಿಂದೆಯಷ್ಟೆ ಕಲಬುರಗಿ ಜೈಲಿಗೆ ಅನಿತಾ ಅವರು ವರ್ಗಾವಣೆಯಾಗಿ ಬಂದಿದ್ದರು. ಜೈಲಿನಲ್ಲಿ ಚಾರ್ಜ್ ತೆಗೆದುಕೊಂಡ ದಿನವೆ ಕೈದಿಗಳ ಹೈಫೈ ಲೈಫ್ ಅನಾವರಣ ಆಗಿತ್ತು. ಇದನ್ನು ಗಂಭೀರವಾಗಿ ಅವರು ಪರಿಗಣಿಸಿದ್ದರು. ಇದಾದ ಬಳಿಕ ಕಾರಾಗೃಹ ಇಲಾಖೆ ಕಟ್ಟು ನಿಟ್ಟಿನ ಕ್ರಮಕ್ಕೆ ಮುಂದಾಗಿತ್ತು. ಜೈಲಿನಲ್ಲಿ ಬೀಡಿ, ಗುಟ್ಕಾ ಸಿಗರೇಟ್ ಬಂದ್ ಮಾಡಿದ್ದರು. ಇದರಿಂದ ಕೆರಳಿದ ಕೈದಿಗಳು ಅನೀತಾ ವಿರುದ್ಧ ಪ್ರತಿಭಟನೆ ಮಾಡಿದ್ದರು. ಇದನ್ನೂ ಓದಿ: ಫೆಂಗಲ್‌ ಅಬ್ಬರ; ಚೆನ್ನೈನ ಎಟಿಎಂ ಬಳಿ ವಿದ್ಯುತ್‌ ಪ್ರವಹಿಸಿ ವ್ಯಕ್ತಿ ಸಾವು – ಪ್ರವಾಹದ ನೀರಿನಲ್ಲಿ ತೇಲಿದ ಶವ

  • ಕಲಬುರಗಿ ಸೆಂಟ್ರಲ್ ಜೈಲ್ ಅಧೀಕ್ಷಕಿ ಕಾರು ಸ್ಫೋಟಿಸುವುದಾಗಿ ಬೆದರಿಕೆ – ದುಷ್ಕರ್ಮಿಯಿಂದ ಆಡಿಯೋ ಸಂದೇಶ

    ಕಲಬುರಗಿ ಸೆಂಟ್ರಲ್ ಜೈಲ್ ಅಧೀಕ್ಷಕಿ ಕಾರು ಸ್ಫೋಟಿಸುವುದಾಗಿ ಬೆದರಿಕೆ – ದುಷ್ಕರ್ಮಿಯಿಂದ ಆಡಿಯೋ ಸಂದೇಶ

    – ಸಿಸಿಟಿವಿ ಇರುವ ಕಡೆ ಮಾತ್ರ ಪಾರ್ಕಿಂಗ್‍ಗೆ ಸೂಚನೆ

    ಕಲಬುರಗಿ: ಇಲ್ಲಿನ ಸೆಂಟ್ರಲ್ ಜೈಲಿನ (Kalaburagi Central Jail) ಅಧೀಕ್ಷಕಿ (Jail Superintendent) ಅನಿತಾ ಅವರ ಕಾರನ್ನು ಸ್ಫೋಟಿಸುವುದಾಗಿ ದುಷ್ಕರ್ಮಿಯೊಬ್ಬ ಆಡಿಯೋ ಸಂದೇಶ ಕಳಿಸಿದ್ದಾನೆ.

    ಅನಾಮದೇಯ ವ್ಯಕ್ತಿಯಿಂದ ಕಲಬುರಗಿ ನಗರದ ಪೊಲೀಸ್ ಇನ್ಸೆಪೆಕ್ಟರ್ ಮೊಬೈಲ್‍ಗೆ ಬೆದರಿಕೆ ಸಂದೇಶ ಬಂದಿದೆ. ಈ ಮಾಹಿತಿಯನ್ನು ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಇದರಿಂದ ಅಲರ್ಟ್ ಆಗಿರುವ ಅಧಿಕಾರಿಗಳು ಕಾರನ್ನು ಸಿಸಿಟಿವಿ ಇರುವೆಡೆ ಮಾತ್ರ ಪಾರ್ಕ್ ಮಾಡುವಂತೆ ಕಾರು ಚಾಲಕನಿಗೆ ಸೂಚಿಸಿದ್ದಾರೆ.

    ಕಳೆದ ಒಂದೂವರೆ ತಿಂಗಳ ಹಿಂದೆಯಷ್ಟೆ ಕಲಬುರಗಿ ಜೈಲಿಗೆ ಅನಿತಾ ಅವರು ವರ್ಗಾವಣೆಯಾಗಿ ಬಂದಿದ್ದರು. ಜೈಲಿನಲ್ಲಿ ಚಾರ್ಜ್ ತೆಗೆದುಕೊಂಡ ದಿನವೆ ಕೈದಿಗಳ ಹೈ ಫೈ ಲೈಫ್ ಅನಾವರಣ ಆಗಿತ್ತು. ಇದನ್ನು ಗಂಭೀರವಾಗಿ ಅವರು ಪರಿಗಣಿಸಿದ್ದರು. ಇದಾದ ಬಳಿಕ ಕಾರಾಗೃಹ ಇಲಾಖೆ ಕಟ್ಟು ನಿಟ್ಟಿನ ಕ್ರಮಕ್ಕೆ ಮುಂದಾಗಿತ್ತು.

    ಜೈಲಿನಲ್ಲಿ ಬೀಡಿ, ಗುಟ್ಕಾ ಸಿಗರೇಟ್ ಬಂದ್ ಮಾಡಿದ್ದಕ್ಕೆ ಅನೀತಾ ವಿರುದ್ಧ ಕೈದಿಗಳು ಮಂಗಳವಾರ ಪ್ರತಿಭಟನೆ ಮಾಡಿದ್ದರು. ಕಟ್ಟು ನಿಟ್ಟಿನ ರೂಲ್ಸ್ ವಿರುದ್ಧ ಕೇರಳಿದ ಕೈದಿಗಳಿಂದ ಬಂದ ಬೆದರಿಕೆ ಆಡಿಯೋನಾ? ಹತ್ಯೆಗೆ ಸಂಚು ನಡೆದಿದೆಯೇ ಎಂಬ ಅನುಮಾನ ವ್ಯಕ್ತವಾಗಿದೆ.

  • ಖೈದಿಗಳನ್ನು ಮನೆ ಕೆಲಸಕ್ಕೆ ಬಳಸಿಕೊಂಡು ಜೈಲು ಅಧೀಕ್ಷಕನ ಅಂದಾ ದರ್ಬಾರ್

    ಖೈದಿಗಳನ್ನು ಮನೆ ಕೆಲಸಕ್ಕೆ ಬಳಸಿಕೊಂಡು ಜೈಲು ಅಧೀಕ್ಷಕನ ಅಂದಾ ದರ್ಬಾರ್

    ಬಾಗಲಕೋಟೆ: ಖೈದಿಗಳನ್ನು ಮನೆ ಕೆಲಸಕ್ಕೆ ಬಳಸಿಕೊಂಡು ಬಾಗಲಕೋಟೆ ಜಿಲ್ಲಾ ಕಾರಾಗೃಹ ಅಧೀಕ್ಷಕನೊಬ್ಬ ದರ್ಬಾರ್ ನಡೆಸುತ್ತಿದ್ದಾನೆ.

    ಜಿಲ್ಲಾ ಕಾರಾಗೃಹ ಅಧೀಕ್ಷಕ ದತ್ತಾತ್ರಿ ಮೇದಾ ವಿಚಾರಣಾಧೀನ ಖೈದಿಗಳಿಂದ ಮನೆ ಕೆಲಸ ಮಾಡಿಸಿಕೊಂಡು ಕಾನೂನು ಉಲ್ಲಂಘನೆ ಮಾಡಿದ್ದಾನೆ. ಮನೆ ಕೆಲಸ ಮಾಡಿ ಖೈದಿಗಳು ಹೊರಬರುತ್ತಿರುವ ವೀಡಿಯೋವನ್ನು ಬಾಗಲಕೋಟೆಯ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಾರ್ಯಕರ್ತರು ಸೆರೆ ಹಿಡಿದಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲಿ ಕೆಂಪು ಬಾವುಟ ಹಾರಿಸಲಿದ್ದಾರೆ ಕೇರಳ ಸಿಎಂ

    ಬಾಗಲಕೋಟೆಯ ನವನಗರದಲ್ಲಿರುವ ದತ್ತಾತ್ರಿ ಮೇದಾ ತನ್ನ ಮನೆ ಕೆಲಸ ಮಾಡಲು ನಾಲ್ಕರಿಂದ ಐದು ಜನ ಖೈದಿಗಳನ್ನು ಮನೆಗೆ ಕರೆಸಿಕೊಂಡಿದ್ದನು. ಈ ಬಗ್ಗೆ ಪ್ರಶ್ನಿಸಲು ಮುಂದಾಗ ಕರ್ನಾಟಕ ರಾಷ್ಟ್ರ ಸಮಿತಿ ಕಾರ್ಯಕರ್ತರಿಗೆ ಹೋಗಿ ಪ್ಲೀಜ್, ಅವರು ಯಾವಾಗಲೂ ಬರುವುದಿಲ್ಲ, ಯಾವಾಗಲೋ ಒಮ್ಮೆ ಕರೆದುಕೊಂಡು ಬರುತ್ತೇನೆ. ಅವರನ್ನೇಲ್ಲಾ ಕಳುಹಿಸಿದ್ದೇನೆ. ಸುಮ್ಮನೆ ಬಿಟ್ಟು ಬಿಡಿ ಎಂದು ಹೇಳಿದ್ದಾನೆ.

    ತಮ್ಮ ಈ ಮಾತಿನ ಮೂಲಕ ಖೈದಿಗಳನ್ನು ಮನೆ ಕೆಲಸಮಾಡಿಸಿಕೊಳ್ಳಲು ಬಳಸಿಕೊಂಡಿರುವುದಾಗಿ ದತ್ತಾತ್ರಿ ಮೇದಾ ಅವರು ಒಪ್ಪಿಕೊಂಡಿದ್ದಾರೆ. ಇದನ್ನೂ ಓದಿ: ಬೊಮ್ಮಾಯಿಯವರ ಬಂಡಲ್‍ನಿಂದಾಗಿ ಕಲ್ಯಾಣ ಕರ್ನಾಟಕ ಹಿನ್ನೆಡೆ – ಪ್ರಿಯಾಂಕ್ ಖರ್ಗೆ ಟೀಕೆ

    Live Tv
    [brid partner=56869869 player=32851 video=960834 autoplay=true]