Tag: jailer film

  • ನಿರ್ಮಾಣ ಸಂಸ್ಥೆ ಆರಂಭಿಸಿದ ‘ಜೈಲರ್’ ಡೈರೆಕ್ಟರ್

    ನಿರ್ಮಾಣ ಸಂಸ್ಥೆ ಆರಂಭಿಸಿದ ‘ಜೈಲರ್’ ಡೈರೆಕ್ಟರ್

    ಮಿಳಿನ ‘ಜೈಲರ್’ (Jailer) ಖ್ಯಾತಿಯ ನಿರ್ದೇಶಕ ನೆಲ್ಸನ್ ದಿಲೀಪ್ ಕುಮಾರ್ (Nelson Dileep Kumar) ಹೊಸ ಸಾಹಸಕ್ಕೆ ಕೈ ಹಾಕಿದ್ದಾರೆ. ಪ್ರೊಡಕ್ಷನ್ ಹೌಸ್ ಆರಂಭಿಸಿದ್ದು, ಹೊಸ ಸಿನಿಮಾ ಘೋಷಣೆ ಮಾಡುವುದಾಗಿ ಹೇಳಿದ್ದಾರೆ. ನೆಲ್ಸನ್ ಹೊಸ ಹೆಜ್ಜೆಗೆ ಅಭಿಮಾನಿಗಳು ಶುಭಕೋರಿದ್ದಾರೆ. ಇದನ್ನೂ ಓದಿ:‘ತಿಮ್ಮನ ಮೊಟ್ಟೆಗಳು’ ಚಿತ್ರಕ್ಕೆ ಫಾಲ್ಕೆ ಜ್ಯೂರಿ ಅವಾರ್ಡ್

    20ರ ಹರೆಯದಲ್ಲಿ ನನ್ನ ಸಿನಿಮಾ ಪಯಣ ಶುರುವಾಗಿದ್ದು, ಇಂಡಸ್ಟ್ರಿ ನನಗೆ ಹಲವು ವರ್ಷಗಳಿಂದ ಏರಿಳಿತಗಳನ್ನು ನೀಡಿದೆ. ಇವೆಲ್ಲವೂ ನನ್ನ ಬೆಳವಣಿಗೆಗೆ ಕಾರಣವಾಗಿವೆ. ಸ್ವಂತ ನಿರ್ಮಾಣ ಸಂಸ್ಥೆ ಆರಂಭಿಸಬೇಕು ಎಂಬುದು ನನ್ನ ಬಹುದಿನಗಳ ಕನಸು. ಆ ಕನಸು ಇದೀಗ ನನಸಾಗಿದೆ. ‘ಫಿಲಮೆಂಟ್ ಪಿಕ್ಚರ್ಸ್’ ಎಂಬ ನನ್ನ ಸ್ವಂತ ನಿರ್ಮಾಣ ಸಂಸ್ಥೆಯನ್ನು ಪ್ರಾರಂಭಿಸಲು ನಾನು ಹೆಮ್ಮೆಪಡುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಡೈರೆಕ್ಟರ್ ನೆಲ್ಸನ್ ಬರೆದುಕೊಂಡಿದ್ದಾರೆ.

    ಪ್ರೇಕ್ಷಕರನ್ನು ರಂಜಿಸಲು ಸೃಜನಶೀಲ ಮತ್ತು ಆಸಕ್ತಿದಾಯಕ ವಿಷಯವನ್ನು ಒದಗಿಸುವುದು ನಮ್ಮ ಕಂಪನಿಯ ಮುಖ್ಯ ಗುರಿಯಾಗಿದೆ ಎಂದು ಪ್ರಸ್ತಾಪಿಸಿದ ನೆಲ್ಸನ್, ಮೇ 3ರಂದು ತಮ್ಮ ನಿರ್ಮಾಣ ಕಂಪನಿಯ ಮೊದಲ ಚಿತ್ರದ ಮಾಹಿತಿಯನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ.

    ಕಳೆದ ವರ್ಷ ರಜನಿಕಾಂತ್ ನಟನೆಯ ‘ಜೈಲರ್’ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಿದ್ದರು. ಈ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಕೋಟಿ ಕೋಟಿ ಲೂಟಿ ಮಾಡಿತ್ತು. ಈಗ ಇದರ ಸೀಕ್ವೆಲ್‌ಗೆ ಸಿದ್ಧತೆ ನಡೆಯುತ್ತಿದೆ. ಸದ್ಯದಲ್ಲೇ ಚಿತ್ರೀಕರಣ ಶುರುವಾಗಲಿದೆ. ತಲೈವಾ ಚಿತ್ರಕ್ಕೆ ಸಾಥ್ ನೀಡಲಿದ್ದಾರೆ.

  • 12 ಎಕರೆ ಜಾಗದಲ್ಲಿ ಬಡವರಿಗಾಗಿ ಆಸ್ಪತ್ರೆ ನಿರ್ಮಾಣ ಮಾಡಲು ಮುಂದಾದ ರಜನಿಕಾಂತ್

    12 ಎಕರೆ ಜಾಗದಲ್ಲಿ ಬಡವರಿಗಾಗಿ ಆಸ್ಪತ್ರೆ ನಿರ್ಮಾಣ ಮಾಡಲು ಮುಂದಾದ ರಜನಿಕಾಂತ್

    ಸೂಪರ್ ಸ್ಟಾರ್ ರಜನಿಕಾಂತ್ (Rajanikanth) ಒಂದು ಮಹತ್ವದ ಕಾರ್ಯ ಮಾಡಲು ಮುಂದಾಗಿದ್ದಾರೆ. ಇದರ ಮೊದಲ ಹೆಜ್ಜೆ ಎಂಬಂತೆ ಚೆನ್ನೈ ಬಳಿಯ ಪ್ರಮುಖ ಜಿಲ್ಲೆಯೊಂದರಲ್ಲಿ ಬಹುದೊಡ್ಡ ಜಾಗ ಖರೀದಿಸಿದ್ದಾರೆ. ತಲೈವಾ ನಡೆಗೆ ಅಭಿಮಾನಿಗಳು ಭೇಷ್ ಎಂದಿದ್ದಾರೆ.

    ಹೆಸರು ಹಣ ಎಷ್ಟೇ ಇದ್ರೂ ಸರಳತೆಗೆ ಹೆಸರುವಾಸಿ ರಜನಿಕಾಂತ್. ಆಗಲೂ ಈಗಲೂ ಸೂಪರ್ ಸ್ಟಾರ್. ಕಂಡಕ್ಟರ್ ಆಗಿದ್ದವರು ಈಗ ಕೋಟ್ಯಾಧೀಶ. ಇದೇ ರಜನಿ ತಮಿಳಿಗರ ಆಸ್ತಿ. ಸದಾ ರಜನಿಕಾಂತ್‌ಗೆ ಏನಾದ್ರೊಂದು ಮಹತ್ವದ ಕಾಯಕ ಮಾಡೋ ಹಂಬಲ. ತಮಿಳುನಾಡಿನ ಚೆಂಗಲ್‌ಪೇಟ್ ಜಿಲ್ಲೆಯ ತಿರುಪರೂರ್ ರಿಜಿಸ್ಟರ್ ಕಚೇರಿಗೆ ಆಗಮಿಸಿದ್ದಾರೆ. ಯಾಕಂದ್ರೆ ಅದೇ ವ್ಯಾಪ್ತಿಗೆ ಬರೋ ಜಾಗದಲ್ಲಿ ಭರ್ತಿ 12 ಎಕರೆ ಭೂಮಿ ಖರೀದಿಸಿದ್ದಾರೆ ತಲೈವಾ. ಇದನ್ನೂ ಓದಿ:ಹೊಸ ಕಾರು ಖರೀದಿಸಿ ಕಂಡ ಕನಸನ್ನು ಈಡೇರಿಸಿಕೊಂಡ ತುಕಾಲಿ

    ಸಿನಿಮಾ ತಾರೆಗಳು ಜಾಗ ಖರೀದಿಸೋದು ಫಾರ್ಮ್ ಹೌಸ್ ನಿರ್ಮಿಸಿಕೊಳ್ಳೋದು ಸಾಮಾನ್ಯ. ಆದರೆ ರಜನಿ ಯಾವ ಉದ್ದೇಶಕ್ಕಾಗಿ ಭೂಮಿ ಖರೀದಿಸಿದ್ದಾರೆ ಅಂತ ಕೇಳಿದ್ರೆ ಆಶ್ಚರ್ಯ ಪಡ್ತೀರಿ. 12 ಎಕರೆ ಜಾಗದಲ್ಲಿ ತಲೈವಾ ಆಸ್ಪತ್ರೆ ನಿರ್ಮಿಸಲಿದ್ದಾರಂತೆ. ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಅಲ್ಲಿಯವರು ಚೆನ್ನೈಗೆ ಬರಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ಆ ಜಾಗದಲ್ಲಿ ತಲೈವಾ ಆಸ್ಪತ್ರೆ ನಿರ್ಮಿಸಲು ಯೋಜನೆ ರೂಪಿಸಿದ್ದಾರೆ.

    ಇದೇನು ಮೊದಲ ಬಾರಿ ಏನೇಲ್ಲ. ಸಿನಿಮಾ ಜೊತೆಗೆ ಸಮಾಜಮುಖಿ ಕಾರ್ಯ ಮಾಡುವ ಮೂಲಕ ಆಗಾಗ ರಜನಿಕಾಂತ್ ಅಭಿಮಾನಿಗಳ ಮನಗೆಲ್ಲುತ್ತಾರೆ.

  • ‘ಜೈಲರ್’ಗೆ ಸೆನ್ಸಾರ್ ಕಟ್, ರಜನಿ-ಶಿವಣ್ಣ ಸೀನ್‌ಗೆ ಬಿತ್ತಾ ಕತ್ತರಿ?

    ‘ಜೈಲರ್’ಗೆ ಸೆನ್ಸಾರ್ ಕಟ್, ರಜನಿ-ಶಿವಣ್ಣ ಸೀನ್‌ಗೆ ಬಿತ್ತಾ ಕತ್ತರಿ?

    ಜನಿಕಾಂತ್ ನಟನೆಯ ‘ಜೈಲರ್’ (Jailer) ಸಿನಿಮಾದಲ್ಲಿ ಬಹುಭಾಷಾ ಕಲಾವಿದರ ದಂಡೇ ಇದೆ. ಇದೇ ಆಗಸ್ಟ್ 10ಕ್ಕೆ ತೆರೆಗೆ ಬರೋದಕ್ಕೆ ಸಜ್ಜಾಗಿದೆ. ಹೀಗಿರುವಾಗ ‘ಜೈಲರ್’ ತಂಡಕ್ಕೆ ಸೆನ್ಸಾರ್ ಶಾಕ್ ಕೊಟ್ಟಿದೆ. ರಜನಿ- ಶಿವಣ್ಣ ಸೀನ್‌ಗೆ ಕತ್ತರಿ ಬಿದ್ದಿದೆ ಎಂದು ಹೇಳಲಾಗುತ್ತಿದೆ.

    ತಲೈವಾ ನಟನೆಯ ‘ಜೈಲರ್’ ಸಿನಿಮಾ ತೆರೆಗೆ ಬರುವ ಮುನ್ನವೇ ಸಿಕ್ಕಾಪಟ್ಟೆ ನಿರೀಕ್ಷೆ ಹುಟ್ಟು ಹಾಕಿದೆ. ಸಿನಿಮಾದ ಫಸ್ಟ್ ಲುಕ್, ಕಾವಾಲಾ (Kaavala) ಸಾಂಗ್ ಸೇರಿದಂತೆ ಜೈಲರ್ ಝಲಕ್ ಫ್ಯಾನ್ಸ್‌ಗೆ ಕಿಕ್ ಕೊಟ್ಟಿದೆ. ಇದೆಲ್ಲದರ ನಡುವೆ ಜೈಲರ್ ದೃಶ್ಯಗಳಿಗೆ ಸೆನ್ಸಾರ್ ಮಂಡಳಿ ಕತ್ತರಿ ಹಾಕಿದೆ.

    ಆ್ಯಕ್ಷನ್ ಎಂಟರ್‌ಟೈನರ್ ‘ಜೈಲರ್’ ಚಿತ್ರಕ್ಕೆ ಈಗಾಗಲೇ ಸೆನ್ಸಾರ್ ಮಂಡಳಿಯಿಂದ ಯು/ಎ ಸರ್ಟಿಫಿಕೇಟ್ ಸಿಕ್ಕಿದೆ. ಚಿತ್ರದಲ್ಲಿ ಹಿಂಸಾತ್ಮಕ ದೃಶ್ಯಗಳು ಹೆಚ್ಚಿದ್ದು ಅದನ್ನು ಕಮ್ಮಿ ಮಾಡುವಂತೆ ಸೆನ್ಸಾರ್ ಮಂಡಳಿ ಚಿತ್ರತಂಡಕ್ಕೆ ಸೂಚಿಸಿದೆಯಂತೆ. ಒಟ್ಟು 11 ಕಟ್ ಚಿತ್ರದಲ್ಲಿ ಮೋಹನ್ ಲಾಲ್ (Mohanlal) ಮ್ಯಾಥೂ ಆಗಿ ಕಾಣಿಸಿಕೊಂಡಿದ್ದಾರೆ. ಆದರೆ ಒಂದು ಮಲಯಾಳಂ ಪದವನ್ನು ಮ್ಯೂಟ್ ಮಾಡಲು ಸೆನ್ಸಾರ್ ಮಂಡಳಿ ಸೂಚಿಸಿದೆಯಂತೆ. ಇದನ್ನೂ ಓದಿ:ರಜನಿ ‘ಜೈಲರ್’ ಜೊತೆ ಜಗ್ಗೇಶ್ ‘ತೋತಾಪುರಿ 2’ ಸಿನಿಮಾ

    ‘ಜೈಲರ್’ ಚಿತ್ರದಲ್ಲಿ ಮುತ್ತುವೇಲ್ ಪಾಂಡಿಯನ್ ಆಗಿ ರಜನಿಕಾಂತ್(Rajanikanth), ನರಸಿಂಹ ಆಗಿ ಶಿವಣ್ಣ ಕಾಣಿಸಿಕೊಂಡಿದ್ದಾರೆ. ಕ್ಲೈಮ್ಯಾಕ್ಸ್‌ನಲ್ಲಿ ಮುತ್ತುವೇಲ್, ನರಸಿಂಹ ಹಾಗೂ ಮ್ಯಾಥ್ಯೂ ಮೂವರು ಸಿಗರೇಟ್ ಸೇದುವ ಸನ್ನಿವೇಶವೊಂದಿದೆಯಂತೆ. ಆ ದೃಶ್ಯದ ಕ್ಲೋಸ್‌ಅಪ್ ಶಾಟ್ಸ್ ಕತ್ತರಿಸುವಂತೆ ಸೆನ್ಸಾರ್ ಮಂಡಳಿ ಸೂಚಿಸಿದೆ ಎಂದು ಹೇಳಲಾಗುತ್ತಿದೆ. ಮ್ಯಾಥ್ಯೂ, ವ್ಯಕ್ತಿಯೊಬ್ಬನನ್ನು ಕೊಲ್ಲುವುದು ಸೇರಿದಂತೆ ಹಲವು ಸಣ್ಣ ದೃಶ್ಯಗಳಿಗೆ ಕತ್ತರಿ ಬಿದ್ದಿದೆಯಂತೆ.

    ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಸಿನಿಮಾದಲ್ಲಿ ರಜನಿಕಾಂತ್, ಶಿವಣ್ಣ(Shivarajkumar), ಮೋಹನ್‌ಲಾಲ್, ತಮನ್ನಾ, ರಮ್ಯಾ ಕೃಷ್ಣ, ಜಾಕಿ ಶ್ರಾಫ್, ಯೋಗಿ ಬಾಬು ನಟಿಸಿದ್ದಾರೆ. ‘ಜೈಲರ್’ ಸಿನಿಮಾ ಬರೋಬ್ಬರಿ 2 ಗಂಟೆ 49 ನಿಮಿಷ ಕಾಲಾವಧಿಯಲ್ಲಿ ಮೂಡಿ ಬಂದಿದೆ. ಕನ್ನಡದ ಜೊತೆ ಮೂರು ಭಾಷೆಗಳಲ್ಲಿ ಜೈಲರ್ ಸಿನಿಮಾ ರಿಲೀಸ್ ಆಗಲಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಾಟ್ ಆಗಿ ಕಾಣಿಸಿಕೊಂಡ ‘ಕಾವಾಲಾ’ ಬ್ಯೂಟಿ ತಮನ್ನಾ

    ಹಾಟ್ ಆಗಿ ಕಾಣಿಸಿಕೊಂಡ ‘ಕಾವಾಲಾ’ ಬ್ಯೂಟಿ ತಮನ್ನಾ

    ನ್ನಡದ ‘ಕೆಜಿಎಫ್’ (KGF) ನಟಿ ತಮನ್ನಾ(Tamanaah) ಅವರು ಇತ್ತೀಚಿಗೆ ತಮ್ಮ ಸಿನಿಮಾಗಳ ಮೂಲಕ ಸಿಕ್ಕಾಪಟ್ಟೆ ಚಾಲ್ತಿಯಲ್ಲಿದ್ದಾರೆ. ಲಸ್ಟ್ ಸ್ಟೋರಿಸ್ 2, ಜೀ ಕರ್ದಾ, ಕಾವಾಲಾ ಹಾಡಿನ ಸಕ್ಸಸ್ ನಂತರ ತಮನ್ನಾ ಬೇಡಿಕೆ ಜಾಸ್ತಿಯಾಗಿದೆ. ಈ ಬೆನ್ನಲ್ಲೇ ತಮನ್ನಾ ಹಾಟ್ ಹಾಟ್ ಫೋಟೋಶೂಟ್ ಮಾಡಿಸಿದ್ದಾರೆ.

    ಲಸ್ಟ್ ಸ್ಟೋರಿಸ್ 2, ಜೀ ಕರ್ದಾ ಪ್ರಾಜೆಕ್ಟ್‌ನಲ್ಲಿ ನಟಿ ತಮನ್ನಾ ಬೋಲ್ಡ್ ಆಗಿ ಕಾಣಿಸಿಕೊಳ್ಳುವ ಮೂಲಕ ಸಂಚಲನ ಮೂಡಿಸಿದ್ದರು. ತಮನ್ನಾ ಹಸಿ ಬಿಸಿ ದೃಶ್ಯಕ್ಕೆ ಕೆಲವರು ವಿರೋಧಿಸಿದ್ರೆ, ಇನ್ನೂ ಕೆಲವರು ಮೆಚ್ಚುಗೆ ಸೂಚಿಸಿದ್ದರು. ಇತ್ತೀಚಿಗೆ ರಜನಿಕಾಂತ್ (Rajanikanth) ನಟನೆಯ ‘ಜೈಲರ್’ ಸಿನಿಮಾದಲ್ಲಿ ತಮನ್ನಾ ಸಾಥ್ ನೀಡಿದ್ದರು. ಚಿತ್ರದ ಕಾವಾಲಾ ಹಾಡಿಗೆ ಅದ್ಭುತವಾಗಿ ಹೆಜ್ಜೆಗೆ ಹಾಕಿದ್ದರು. ಅವರ ಎಕ್ಸ್ಪ್ರೇಷನ್‌ಗೆ ಪಡ್ಡೆಹುಡುಗರು ಕಳೆದು ಹೋಗಿದ್ದರು.‌ ಇದನ್ನೂ ಓದಿ:ಪದೇ ಪದೇ ಪ್ರಭಾಸ್ ವಿರುದ್ದ ಕಿಡಿಕಾರುತ್ತಿರುವ ‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕ

    ಅಷ್ಟರ ಮಟ್ಟಿಗೆ ತಮನ್ನಾ ‘ಕಾವಾಲಾ’ (Kaavala) ಸಾಂಗ್ ಎಲ್ಲೆಲ್ಲೂ ವೈರಲ್ ಆಗುತ್ತಿದೆ. ಚಿಕ್ಕವರಿಂದ ದೊಡ್ಡವರ ತನಕ ಈ ಸಾಂಗ್‌ಗೆ ರೀಲ್ಸ್ ಮಾಡ್ತಿದ್ದಾರೆ. ಸದ್ಯ ಜೈಲರ್ (Jailer) ಸಿನಿಮಾದ ಕಾವಾಲಾ ರಿಲೀಸ್ ಈವೆಂಟ್‌ಗೆ ತಮನ್ನಾ ಭಾಗಿಯಾಗಿದ್ದಾರೆ. ಅದಕ್ಕಾಗಿ ಸಖತ್ ಹಾಟ್ & ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

    ಬಿಳಿ ಬಣ್ಣದ ಉಡುಗೆಯಲ್ಲಿ ಸಖತ್ ಗ್ಲ್ಯಾಮರಸ್  ಆಗಿ ತಮನ್ನಾ ಪೋಸ್ ನೀಡಿದ್ದಾರೆ. ಕಾವಾಲಾ ಬ್ಯೂಟಿಯ ನಯಾ ಲುಕ್ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ. ತಲೈವಾ ಫ್ಯಾನ್ಸ್ ‘ಜೈಲರ್’ ಸಿನಿಮಾ ನೋಡಬೇಕು ಅಂತಾ ಕಾಯ್ತಿದ್ದಾರೆ. ಕಾವಾಲಾ ಹಾಡಿನಲ್ಲಿ ತಮನ್ನಾ ಡ್ಯಾನ್ಸ್ ನೋಡಿದ ಸಿನಿಮಾ ಮೇಲಿನ ನಿರೀಕ್ಷೆ ಈಗ ಡಬಲ್ ಆಗಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಗಳ ಸಿನಿಮಾದಲ್ಲಿ ಮೊಹಿದ್ದೀನ್ ಭಾಯ್ ಆಗಿ ಬಂದ ತಲೈವಾ- ‌’ಲಾಲ್‌ ಸಲಾಂ’ ಪೋಸ್ಟರ್‌ ಔಟ್

    ಮಗಳ ಸಿನಿಮಾದಲ್ಲಿ ಮೊಹಿದ್ದೀನ್ ಭಾಯ್ ಆಗಿ ಬಂದ ತಲೈವಾ- ‌’ಲಾಲ್‌ ಸಲಾಂ’ ಪೋಸ್ಟರ್‌ ಔಟ್

    ಸೂಪರ್ ಸ್ಟಾರ್ ರಜನಿಕಾಂತ್ (Rajanikanth) ಸದ್ಯ ‘ಜೈಲರ್’ನಲ್ಲಿ (Jailer)  ಹೀರೋ ಆಗಿ ನಟಿಸುತ್ತಿದ್ದಾರೆ. ಇದರ ಜೊತೆ ಮಗಳು ಐಶ್ವರ್ಯ ನಿರ್ದೇಶನದ ‘ಲಾಲ್ ಸಲಾಂ’ (Lal Salam) ಚಿತ್ರದಲ್ಲಿ ಭಿನ್ನ ಪಾತ್ರದಲ್ಲಿ ನಟಿಸುವ ಮೂಲಕ ಚಿತ್ರತಂಡಕ್ಕೆ ಸಾಥ್ ನೀಡ್ತಿದ್ದಾರೆ. ಸದ್ಯ ಸಿನಿಮಾದಲ್ಲಿನ ತಲೈವಾ ಲುಕ್ ರಿವೀಲ್ ಆಗಿದೆ. ಇದನ್ನೂ ಓದಿ:‘ದಿ ಕೇರಳ ಸ್ಟೋರಿ’ ತಮಿಳು ನಾಡಿನಲ್ಲಿ ಪ್ರದರ್ಶನವಿಲ್ಲ

    ಲೈಕಾ ಪ್ರೋಡಕ್ಷನ್ಸ್ ಅಡಿಯಲ್ಲಿ ‘ಲಾಲ್ ಸಲಾಂ’ ಸಿನಿಮಾವನ್ನ ಐಶ್ವರ್ಯ ರಜಿನಿಕಾಂತ್ ನಿರ್ದೇಶನ ಮಾಡಿದ್ದಾರೆ. ತಲೈವಾ ಅವರು ಕೀ ರೋಲ್‌ನಲ್ಲಿ ಕಾಣಿಸಿಕೊಳ್ತಿದ್ದಾರೆ. ಚಿತ್ರದಲ್ಲಿ ಮೊಹಿದ್ದೀನ್ ಭಾಯ್ ಪಾತ್ರಕ್ಕೆ ತಲೈವಾ ಜೀವತುಂಬಿದ್ದಾರೆ. ಗಲಭೆ ಹಿನ್ನೆಲೆ, ಶೆರ್ವಾನಿಯಲ್ಲಿ ಸನ್ ಗ್ಲ್ಯಾಸ್ ಧರಿಸಿ ನಡೆದು ಬರುತ್ತಿರುವ ತಲೈವಾ ಲುಕ್‌ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಮುಂಬೈನಲ್ಲಿ ಭರ್ಜರಿಯಾಗಿ ನಡೆಯುತ್ತಿದೆ. ಸದ್ಯ ಸಿನಿಮಾದ ಪೋಸ್ಟರ್‌ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

    1995ರಲ್ಲಿ ಬಂದಿದ್ದ ‘ಬಾಷಾ’ ಚಿತ್ರದಲ್ಲಿ ಜನಸ್ನೇಹಿ ಡಾನ್ ಆಗಿ ರಜನಿಕಾಂತ್ ಅಬ್ಬರಿಸಿದ್ದರು. ಅದೇ ಚಿತ್ರದ ಪಾತ್ರವನ್ನು ‘ಲಾಲ್ ಸಲಾಂ’ ಮೊಹಿದ್ದೀನ್ ಭಾಯ್ ನೆನಪಿಸುತ್ತಿರುವುದು ಸುಳ್ಳಲ್ಲ. ‘ಲಾಲ್ ಸಲಾಂ’ ಸ್ಪೋರ್ಟ್ಸ್ ಡ್ರಾಮಾ ಸಿನಿಮಾ ಆಗಿದ್ದು ಕ್ರಿಕೆಟ್ ಹಿನ್ನೆಲೆಯಲ್ಲಿ ಕಥೆ ಸಾಗಲಿದೆ. ವಿಷ್ಣು ವಿಶಾಲ್ ಹಾಗೂ ವಿಕ್ರಾಂತ್ ಲೀಡ್ ರೋಲ್‌ಗಳಲ್ಲಿ ನಟಿಸುತ್ತಿದ್ದಾರೆ. ಜೀವಿತಾ ರಾಜಶೇಖರ್ ನಾಯಕಿಯಾಗಿ ಮಿಂಚಲಿದ್ದಾರೆ. ವಿಷ್ಣು ರಂಗಸ್ವಾಮಿ ಛಾಯಾಗ್ರಹಣ- ಎಆರ್ ರೆಹಮಾನ್ ಸಂಗೀತ ಈ ಚಿತ್ರಕ್ಕಿದೆ. ರಜನಿಕಾಂತ್ ಕಾರಣಕ್ಕೆ ಈ ಸಿನಿಮಾ ಭಾರೀ ನಿರೀಕ್ಷೆ ಹುಟ್ಟಾಕ್ಕಿದೆ.

    ದಾಂಪತ್ಯ ಜೀವನದಲ್ಲಿ ಸೋತಿರೋ ಐಶ್ವರ್ಯಗೆ ಈ ಸಿನಿಮಾದಿಂದ ಬಿಗ್ ಬ್ರೇಕ್ ಬೇಕಾಗಿದೆ. ರಜನಿಕಾಂತ್ ಚಿತ್ರದಲ್ಲಿ ನಟಿಸುತ್ತಿರುವ ಕಾರಣ, ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಾಗಿದೆ. ರಿಲೀಸ್ ಬಳಿಕ ಸಿನಿಮಾಗೆ ಯಾವ ರೀತಿ ರೆಸ್ಪಾನ್ಸ್ ಸಿಗಲಿದೆ ಕಾದುನೋಡಬೇಕಿದೆ.

  • ಭಾರತ- ಆಸ್ಟ್ರೇಲಿಯಾ ಏಕದಿನ ಪಂದ್ಯ ವೀಕ್ಷಿಸಿದ ರಜನಿಕಾಂತ್‌

    ಭಾರತ- ಆಸ್ಟ್ರೇಲಿಯಾ ಏಕದಿನ ಪಂದ್ಯ ವೀಕ್ಷಿಸಿದ ರಜನಿಕಾಂತ್‌

    ಕಾಲಿವುಡ್ (Kollywood) ಸೂಪರ್ ಸ್ಟಾರ್ ರಜನಿಕಾಂತ್ (Rajanikanth) ಅವರು ಸದಾ ಒಂದಲ್ಲಾ ಒಂದು ವಿಚಾರವಾಗಿ ಸುದ್ದಿಯಲ್ಲಿರುತ್ತಾರೆ. ಈಗ ಶೂಟಿಂಗ್ ಬ್ರೇಕ್ ಹಾಕಿ ಕ್ರಿಕೆಟ್ ವೀಕ್ಷಿಸಿದ್ದಾರೆ. ಭಾರತ- ಆಸ್ಟ್ರೇಲಿಯಾ ಮೊದಲ ಏಕದಿನ ಪಂದ್ಯವನ್ನ ವೀಕ್ಷಣೆ ಮಾಡಿದ್ದಾರೆ. ಈ ಕುರಿತ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ. ರಾಜಕುಮಾರನಂತೆಯೇ ಬಂದ ಪುನೀತ್, ಅಪ್ಪು ಕಲಾಕೃತಿಗೆ ಫ್ಯಾನ್ಸ್ ಫಿದಾ

    ಮುಂಬೈನ ವಾಂಖೆಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಡಿಯಾ -ಆಸ್ಟ್ರೇಲಿಯಾ ಮ್ಯಾಚ್ ವೀಕ್ಷಿಸಿದ್ದಾರೆ. ಈ ಮೂಲಕ ಇಂಡಿಯಾ ಟೀಂನ ತಲೈವಾ ಬೆಂಬಲಿಸಿದ್ದಾರೆ. ಪಂದ್ಯಕ್ಕೂ ಮುನ್ನ ಕೆಲ ಸಮಯಗಳ ಕಾಲ ಟೀಮ್ ಇಂಡಿಯಾದ ಆಟಗಾರರೊಂದಿಗೆ ತಲೈವಾ ಮಾತುಕಥೆ ನಡೆಸಿದ್ದಾರೆ. ರೋಹಿತ್ (Rohith) ಅನುಪಸ್ಥಿತಿಯಲ್ಲಿ ಈ ಪಂದ್ಯವನ್ನು ಹಾರ್ದಿಕ್ ಪಾಂಡ್ಯ (Hardik Pandya) ಮುನ್ನಡೆಸುತ್ತಿದ್ದಾರೆ.

    ಇನ್ನೂ ಸಿನಿಮಾ ವಿಚಾರಕ್ಕೆ ಬರೋದಾದ್ರೆ ನಟ ರಜನಿಕಾಂತ್ `ಜೈಲರ್’ (Jailer Film) ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಚಿತ್ರದಲ್ಲಿ ತಲೈವಾ ಜೊತೆ ಹ್ಯಾಟ್ರಿಕ್‌ ಹೀರೋ ಶಿವಣ್ಣ ಸಾಥ್‌ ನೀಡಿದ್ದಾರೆ.

  • `ಜೈಲರ್’ ಚಿತ್ರದ ಸೆಟ್‌ನಲ್ಲಿ ಶಿವಣ್ಣನನ್ನು ಭೇಟಿಯಾದ ಶಿವಕಾರ್ತಿಕೇಯನ್

    `ಜೈಲರ್’ ಚಿತ್ರದ ಸೆಟ್‌ನಲ್ಲಿ ಶಿವಣ್ಣನನ್ನು ಭೇಟಿಯಾದ ಶಿವಕಾರ್ತಿಕೇಯನ್

    ಜನಿಕಾಂತ್ (Rajanikanth) 169ನೇ ಚಿತ್ರ `ಜೈಲರ್’ (Jailer) ಸಿನಿಮಾ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಹ್ಯಾಟ್ರಿಕ್ ಹೀರೋ ಶಿವಣ್ಣ(Shivarajkumar) ಕೂಡ ತಲೈವಾ ಜೊತೆ ಕಾಣಿಸಿಕೊಳ್ಳುತ್ತಿದ್ದಾರೆ. ಈಗ ಈ ಚಿತ್ರದ ಸೆಟ್‌ನಲ್ಲಿ ಶಿವನನ್ನು ಶಿವಕಾರ್ತಿಕೇಯನ್ ಭೇಟಿಯಾಗಿದ್ದಾರೆ.

    ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದ `ಜೈಲರ್’ (Jailer)ಸಿನಿಮಾದಲ್ಲಿ ರಜನಿಕಾಂತ್ ಜೊತೆ ಕನ್ನಡದ ಸೂಪರ್ ಹೀರೋ ಶಿವಣ್ಣ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಶಿವಣ್ಣನ ಫಸ್ಟ್ ಲುಕ್ ಸಖತ್ ಸದ್ದು ಮಾಡಿತ್ತು. ಈ ಸಿನಿಮಾದ ಶೂಟಿಂಗ್‌ನಲ್ಲಿ ಪಾಲ್ಗೊಂಡಿರುವ ಶಿವನನ್ನು ತಮಿಳಿನ ಹೀರೋ ಶಿವಕಾರ್ತಿಕೇಯನ್ (Sivakarthikeyan) ಮೀಟ್ ಮಾಡಿದ್ದಾರೆ.

     

    View this post on Instagram

     

    A post shared by DrShivaRajkumar (@nimmashivarajkumar)

    `ಜೈಲರ್’ ಚಿತ್ರದಲ್ಲಿ ಶಿವಕಾರ್ತಿಕೇಯನ್ ಕೂಡ ಸ್ಪೆಷಲ್ ರೋಲ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ತಲೈವಾ ಬಹುನಿರೀಕ್ಷಿತ ಚಿತ್ರದಲ್ಲಿ ಶಿವಕಾರ್ತಿಕೇಯನ್ ಕೂಡ ಇರಲಿದ್ದಾರೆ. ಆದರೆ ಅವರ ಪಾತ್ರದ ಬಗ್ಗೆ ಗುಟ್ಟುನ್ನ ಚಿತ್ರತಂಡ ಬಿಟ್ಟು ಕೊಟ್ಟಿಲ್ಲ. ಶಿವಣ್ಣನನ್ನು ಮೀಟ್ ಆಗಿ ಯೋಗ ಕ್ಷೇಮ ವಿಚಾರಿಸಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ. ಇದನ್ನೂ ಓದಿ:ಎಂಗೇಜ್ ಆದ ಖುಷಿಯಲ್ಲಿ ಗೆಳೆಯನ ಜೊತೆ ಆಮೀರ್‌ ಖಾನ್‌ ಪುತ್ರಿಯ ಲಿಪ್‌ಲಾಕ್

    ತಲೈವಾ 169ನೇ ಸಿನಿಮಾವಾಗಿರುವ ಕಾರಣ ಚಿತ್ರದ ಬಗ್ಗೆ ಫ್ಯಾನ್ಸ್ ಸಿಕ್ಕಾಪಟ್ಟೆ ನಿರೀಕ್ಷೆಯನ್ನ ಇಟ್ಟುಕೊಂಡಿದ್ದಾರೆ. ಸದ್ಯದಲ್ಲೇ ಸಿನಿಮಾ ತೆರೆಗೆ ಬರಲಿದೆ.

    Live Tv
    [brid partner=56869869 player=32851 video=960834 autoplay=true]