ಚಿಕ್ಕೋಡಿ: ಹಿರೇಕೋಡಿ ನಂದಿ ಪರ್ವತ ಆಶ್ರಮದ (Nandi Parvatha Ashram) ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳಿಗೆ ಜುಲೈ 21 ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಎ1 ಆರೋಪಿ ನಾರಾಯಣ ಮಾಳಿ, ಎ2 ಆರೋಪಿ ಹಸನ್ ದಲಾಯತ್‌ಗೆ ನ್ಯಾಯಾಂಗ ಬಂಧನ ವಿಧಿಸಿ ಚಿಕ್ಕೋಡಿ ಪ್ರಧಾನ ದಿವಾಣಿ ನ್ಯಾಯಾಲಯ ನ್ಯಾಯಾಧೀಶ ಚಿದಾನಂದ ಬಡಿಗೇರ ಆದೇಶ ಹೊರಡಿಸಿದ್ದಾರೆ.
ಚಿಕ್ಕೋಡಿ: ಜೈನಮುನಿ (Jain Muni) ಕಾಮಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಸೋಮವಾರ) ಆರೋಪಿಗಳ 7 ದಿನಗಳ ಪೊಲೀಸ್ ಕಸ್ಟಡಿ (Police Custody) ಅಂತ್ಯವಾಗಲಿದೆ. ಇಂದು ಮತ್ತೆ ಆರೋಪಿಗಳನ್ನು ಪೊಲೀಸರು ನ್ಯಾಯಾಲಯದ (Court) ಮುಂದೆ ಹಾಜರು ಪಡಿಸಲಿದ್ದಾರೆ.
ಈ 7 ದಿನಗಳಲ್ಲಿ ಆರೋಪಿಗಳಿಂದ ಪಿನ್ ಟು ಪಿನ್ ಮಾಹಿತಿಯನ್ನು ಪೊಲೀಸರು ಸಂಗ್ರಹಿಸಿದ್ದಾರೆ. ಪೊಲೀಸ್ ತನಿಖೆಯಲ್ಲಿ ಬಗೆದಷ್ಟು ರಹಸ್ಯ ಪತ್ತೆಯಾಗಿದ್ದು, ಚಿಕ್ಕೋಡಿ (Chikkodi) ಡಿವೈಎಸ್ಪಿ ಬಸವರಾಜ ಯಲಿಗಾರ ನೇತೃತ್ವದಲ್ಲಿ ತನಿಖೆ ನಡೆದಿದೆ. ಎ1 ಆರೋಪಿ ನಾರಾಯಣ ಮಾಳಿ ಹಾಗೂ ಎ2 ಆರೋಪಿ ಹಸನಸಾಬ್ ಡಾಲಾಯತ್‌ನನ್ನು ತೀವ್ರ ವಿಚಾರಣೆ ಮಾಡಲಾಗಿದೆ. ಪೊಲೀಸರ ಕೈಯಲ್ಲಿ ಸಿಕ್ಕಿಹಾಕಿಕೊಳ್ಳಬಾರದು ಎಂದು ಆರೋಪಿಗಳು ಹತ್ಯೆ ಮಾಡಿ ಬಂದು ತಮ್ಮ ಬಟ್ಟೆಗಳನ್ನೆಲ್ಲಾ ಸುಟ್ಟು ಹಾಕಿರುವ ರಹಸ್ಯವೊಂದು ತನಿಖೆ ವೇಳೆ ಬಯಲಾಗಿದೆ. ಇದನ್ನೂ ಓದಿ: ಕ್ಯಾಸಿನೋಗಾಗಿ ಕಳ್ಳತನ – ಮೂವರು ಆರೋಪಿಗಳು ಅರೆಸ್ಟ್
ಸಾಕ್ಷ್ಯ ನಾಶ ಮಾಡಲು ಖತರ್ನಾಕ್ ಐಡಿಯಾ ಮಾಡಿದ್ದ ಹಂತಕರು, ಸ್ವಾಮೀಜಿಯ ಹತ್ಯೆ ಮಾಡಿ ಮಧ್ಯರಾತ್ರಿ 3 ಗಂಟೆಗೆ ಹೀರೆಕೋಡಿ (Hirekodi) ಗ್ರಾಮಕ್ಕೆ ಬಂದಿದ್ದರು. ಚಿಕ್ಕೋಡಿ ತಾಲೂಕಿನ ಹೀರೆಕೋಡಿ ಗ್ರಾಮದಿಂದ ರಾಯಬಾಗ ತಾಲೂಕಿನ ಖಟಕಬಾವಿ ಗ್ರಾಮದವರೆಗೆ ಸ್ವಾಮೀಜಿಯ ಶವ ಸಾಗಿಸಿ ಬಳಿಕ ಅವರ ಮೃತದೇಹವನ್ನು ಪೀಸ್ ಪೀಸ್ ಮಾಡಿ ಕೊಳವೆ ಬಾವಿಗೆ ಎಸೆದಿದ್ದರು. ಇದನ್ನೂ ಓದಿ: ಉಯ್ಯಾಲೆ ಆಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಬಿಗಿದು ಬಾಲಕ ದುರ್ಮರಣ
ನಂತರ ಎ1 ಆರೋಪಿ ನಾರಾಯಣ ಮಾಳಿ ಮನೆಗೆ ಬಂದು ಅಂಡರ್‌ವೇರ್ ಸಹಿತ ಕೊಲೆ ಮಾಡಲು ಬಳಸಿದ್ದ ಎಲ್ಲಾ ಬಟ್ಟೆಗಳಿಗೆ ಬೆಂಕಿ ಹಾಕಿ ಸುಟ್ಟಿದ್ದಾನೆ. ಬಳಿಕ ಬೇರೆ ಬಟ್ಟೆ ತೊಟ್ಟು ಚಿಕ್ಕೋಡಿಯ ಎ2 ಆರೋಪಿ ಹಸನ್ ಡಾಲಾಯತ್ ಮನೆಗೆ ತೆರಳಿದ್ದ. ಸಾಕ್ಷಿ ನಾಶ ಮಾಡಿದ ಬಟ್ಟೆ ಹಾಗೂ ಡೈರಿಯ ಬೂದಿಯನ್ನು ಪೊಲೀಸರು ಎಫ್‌ಎಸ್‌ಎಲ್‌ಗೆ ಕಳುಹಿಸಿದ್ದಾರೆ. ಇದನ್ನೂ ಓದಿ: ಕೊಪ್ಪಳದಲ್ಲಿ ಪೋಲಿ ಹುಡುಗರ ಹಾವಳಿ- ವಿದ್ಯಾರ್ಥಿನಿಯರನ್ನೇ ಗುರಿಯಾಗಿಸಿ ಅಶ್ಲೀಲ ಬರಹ
ತಾವೇ ಕೊಂದು ಸ್ವಾಮೀಜಿ ಹುಡುಕಾಟದ ನಾಟಕವಾಡಲು ಹೋಗಿ ಆರೋಪಿಗಳು ಪೊಲೀಸರಿಗೆ ಸಿಕ್ಕಿ ಬಿದ್ದಿದ್ದರು. ಸಾಕ್ಷಿ ನಾಶ ಮಾಡಿದ ಕುರಿತು ಮಾಹಿತಿ ಸಂಗ್ರಹಿಸಿ ಪುರಾವೆಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ. ತನಿಖೆ ವೇಳೆ ಕೊಲೆ ಮಾಡಿದ್ದ ಕುಡಗೋಲು ಕಾಲುವೆಯಲ್ಲಿ ಪತ್ತೆಯಾಗಿದ್ದು, ಎಲ್ಲಾ ದಾಖಲೆಗಳನ್ನು ವಶಕ್ಕೆ ಪಡೆದು ಆರೋಪಿಗಳಿಗೆ ಕಠಿಣ ಶಿಕ್ಷೆ ಕೊಡಿಸಲು ಪೊಲೀಸರು ಸಾಕ್ಷಿ ಸಂಗ್ರಹ ಮಾಡಿದ್ದಾರೆ. ಇದನ್ನೂ ಓದಿ: 15 ಸಾವಿರಕ್ಕಾಗಿ ಭಾರತೀಯ ಸೇನೆ ರಹಸ್ಯ ಮಾಹಿತಿಯನ್ನ ಪಾಕಿಸ್ತಾನಕ್ಕೆ ಕೊಡ್ತಿದ್ದ ವ್ಯಕ್ತಿ ಅರೆಸ್ಟ್
ಜೈನಮುನಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ನಾರಾಯಣ ಮಾಳಿ ಮತ್ತು ಎ2 ಆರೋಪಿ ಹಸನ್ ದಲಾಯತ್‌ನನ್ನು ಜುಲೈ 17ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಈ ಹಿನ್ನೆಲೆ ಡಿವೈಎಸ್ಪಿ ಬಸವರಾಜ್ ಯಲಿಗಾರ ಅವರ ನೇತೃತ್ವದಲ್ಲಿ ಆರೋಪಿಗಳ ತೀವ್ರ ವಿಚಾರಣೆಯನ್ನು ನಡೆಸುತ್ತಿದ್ದು, ಈಗಾಗಲೇ ಚಿಕ್ಕೋಡಿ ಪೊಲೀಸರು ಹಲವು ಟೆಕ್ನಿಕಲ್ ಎವಿಡೆನ್ಸ್‌ಗಳನ್ನು ಸಂಗ್ರಹಿಸಿದ್ದಾರೆ. ಇದನ್ನೂ ಓದಿ: ಬಾಲಕಿಯ ಅಪಹರಣಕ್ಕೆ ಯತ್ನಿಸಿದ್ದ ಆರೋಪಿ ಅರೆಸ್ಟ್ – ಕೃತ್ಯದ ಉದ್ದೇಶ ಕೇಳಿ ಪೊಲೀಸರೇ ಶಾಕ್
ಆರೋಪಿಗಳು ಸ್ವಾಮೀಜಿಯ ಹತ್ಯೆ ಮಾಡಿದ್ದಲ್ಲದೇ ಅವರ ಡೈರಿಯನ್ನೂ ಸುಟ್ಟು ಹಾಕಿದ್ದರು. ಈ ಕುರಿತು ತೀವ್ರ ವಿಚಾರಣೆ ನಡೆಸಿದಾಗ ಆರೋಪಿಗಳು ಜೈನಮುನಿಯ ಪರ್ಸನಲ್ ಡೈರಿಯನ್ನು ಸುಟ್ಟು ಹಾಕಿದ ಸ್ಥಳವನ್ನು ತೋರಿಸಿದ್ದಾರೆ. ಈ ಹಿನ್ನೆಲೆ ಸುಟ್ಟ ಡೈರಿಯ ಬೂದಿಯನ್ನು ಎಫ್‌ಎಸ್‌ಎಲ್‌ಗೆ (FSL) ರವಾನಿಸಲು ಸಿದ್ಧತೆ ಮಾಡಲಾಗಿದೆ. ಬೆಂಗಳೂರಿನ (Bengaluru) ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಡೈರಿಯ ಬೂದಿಯನ್ನು ರವಾನಿಸಲು ಸಿದ್ಧತೆ ನಡೆಸಿದ್ದು, ಅದರೊಂದಿಗೆ ನಾಲ್ಕು ಮೊಬೈಲ್ ಫೋನ್‌ಗಳನ್ನು ಸಹಾ ಪ್ರಯೋಗಾಲಯಕ್ಕೆ ರವಾನೆ ಮಾಡಲು ನಿರ್ಧರಿಸಿದ್ದಾರೆ. ಇದನ್ನೂ ಓದಿ: ಪತ್ನಿಯನ್ನು ಕೇಳದೆ ಅಡುಗೆಗೆ ಟೊಮೆಟೊ ಬಳಸಿದ ಪತಿ – ಕೋಪಗೊಂಡು ಮಗಳೊಂದಿಗೆ ಮನೆಬಿಟ್ಟ ಹೆಂಡತಿ
ಜೈನಮುನಿಗಳು ಬಳಸುತ್ತಿದ್ದ ಎರಡು ಮೊಬೈಲ್ ಹಾಗೂ ಇಬ್ಬರು ಆರೋಪಿಗಳ ತಲಾ ಒಂದೊಂದು ಮೊಬೈಲ್ ಅನ್ನು ಎಫ್‌ಎಸ್‌ಎಲ್‌ಗೆ ರವಾನಿಸಲು ಸಿದ್ಧತೆ ನಡೆಸಲಾಗಿದೆ. ಮೊಬೈಲ್‌ನಲ್ಲಿ ಏನಾದರೂ ಸಾಕ್ಷ್ಯ ಇದೆಯಾ? ಯಾವಾಗೆಲ್ಲಾ ಕರೆ ಮಾಡಿದ್ದರು ಎಂಬ ಬಗ್ಗೆ ಪೊಲೀಸರು ಪಿನ್ ಟು ಪಿನ್ ಮಾಹಿತಿ ಪಡೆಯುತ್ತಿದ್ದಾರೆ. ಹಣಕಾಸಿನ ವ್ಯವಹಾರ, ಸಾಮಾಜಿಕ ಜಾಲತಾಣ ಬಳಕೆ ಹಾಗೂ ಕಾಲ್ ರೆಕಾರ್ಡ್, ಪೋಟೋ ಮತ್ತು ವಿಡಿಯೋ ಪತ್ತೆಗಾಗಿ ಮೊಬೈಲ್‌ಗಳನ್ನು ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿದೆ. ಇದನ್ನೂ ಓದಿ: ಐಷಾರಾಮಿ ಜೀವನಕ್ಕಾಗಿ ಲಾರಿ ಕಳ್ಳತನ – ಆರೋಪಿ ಅರೆಸ್ಟ್
ಆರೋಪಿಗಳನ್ನು ಕಸ್ಟಡಿಗೆ ಪಡೆದು ಇಂದಿಗೆ (ಗುರುವಾರ) ಮೂರು ದಿನಗಳಾಗಿದ್ದು, ಮೂರನೇ ದಿನವೂ ಪೊಲೀಸರು ತನಿಖೆ ಮುಂದುವರೆಸುತ್ತಿದ್ದಾರೆ. ಬುಧವಾರ ಆರೋಪಿಗಳನ್ನು ಕರೆದೊಯ್ದು ಪೊಲೀಸರು ಸ್ಥಳ ಮಹಜರು ಮಾಡಿದ್ದರು. ಅಲ್ಲದೇ ಇಡೀ ದಿನ ಘಟನೆ ನಡೆದ ಸ್ಥಳ, ಮೃತದೇಹ ರವಾನಿಸಿದ ಮಾರ್ಗ ಜೈನಮುನಿಗಳ ದೇಹ ತುಂಡರಿಸಿದ ಸ್ಥಳ, ಕಟಕಬಾವಿಯ ಕೊಳವೆಬಾವಿ ಇದ್ದ ಗದ್ದೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಸುಟ್ಟು ಹಾಕಿದ ಡೈರಿಯಲ್ಲಿ ಏನಿತ್ತು ಎಂಬ ಬಗ್ಗೆ ಎ1 ಆರೋಪಿ ನಾರಾಯಣ್ ಇಲ್ಲಿಯವರೆಗೂ ಬಾಯ್ಬಿಟ್ಟಿಲ್ಲ. ಈ ಹಿನ್ನೆಲೆ ಹಿರೇಕೋಡಿ ಆಶ್ರಮದಿಂದ ಕಟಕಬಾವಿಯ ಕೊಳವೆಬಾವಿ ಇದ್ದ ಗದ್ದೆಯವರೆಗೂ ಹೋಗಿದ್ದ ಮಾರ್ಗವನ್ನು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. 35 ಕಿಲೋಮೀಟರ್ ರಸ್ತೆ ಮಾರ್ಗದಲ್ಲಿ ಇರುವ ಸಿಸಿ ಕ್ಯಾಮೆರಾಗಳ ಪರಿಶೀಲನೆ ನಡೆಸಿದ್ದು, ಹಂತಕರು ಸಿಸಿಟಿವಿಯಲ್ಲಿ ಸೆರೆ ಸಿಕ್ಕಿದ್ದಾರಾ ಎಂಬ ಬಗ್ಗೆ ಪೊಲೀಸರು ಸಾಕ್ಷ್ಯ ಕಲೆ ಹಾಕುತ್ತಿದ್ದಾರೆ. ಇದನ್ನೂ ಓದಿ: ಅನಾರೋಗ್ಯ ಹಿನ್ನೆಲೆ ಪೊಲೀಸ್ ಕಾನ್ಸ್‌ಟೇಬಲ್ ನೇಣಿಗೆ ಶರಣು
ಹುಬ್ಬಳ್ಳಿ: ಬಿಜೆಪಿಯವರೇನು (BJP) ಸಾಚಾಗಳಲ್ಲ. ಸಿಬಿಐ (CBI) ಅನ್ನೋದು ಬುರುಡೆ. ಇವರು ಅಧಿಕಾರದಲ್ಲಿದ್ದಾಗ ಕೊಲೆ ಕೇಸ್‌ಗಳನ್ನು ಸಿಬಿಐಗೆ ಕೊಟ್ಟರು ಏನಾಯಿತು? ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ (Pramod Muthalik) ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ಹೀರೆಕುಡಿ (Hirekudi) ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ (Hubballi) ತಾಲೂಕಿನ ವರೂರ್ ಜೈನ್ ಮಂದಿರಕ್ಕೆ ಭೇಟಿ ನೀಡಿದ ಮುತಾಲಿಕ್ ಜೈನಮುನಿ ಗುಣಧರನಂದಿ ಮಹಾರಾಜ್ ಅವರಿಗೆ ಸಾಂತ್ವನ ಹೇಳಿದರು. ಈ ವೇಳೆ ಮೃತ ಕಾಮಕುಮಾರ ನಂದಿ ಶ್ರೀಗಳ ಹಿನ್ನೆಲೆ ಬಗ್ಗೆ ಚರ್ಚೆ ಮಾಡಿದ ಅವರು, ಜೈನ ಧರ್ಮದ ಜೊತೆಗೆ ಹಿಂದೂಪರ ಸಂಘಟನೆಗಳು ಇವೆ ಎಂಬ ಭರವಸೆಯನ್ನು ನೀಡಿದರು. ಇದನ್ನೂ ಓದಿ: ವೇಣುಗೋಪಾಲ್ ಹತ್ಯೆಯ ಹಿಂದೆ ಮಹದೇವಪ್ಪ ಪುತ್ರ ಸುನಿಲ್ ಬೋಸ್ ಕೈವಾಡ: ಸೂಲಿಬೆಲೆ
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರೇನು ಸಾಚಾಗಳಲ್ಲ. ಇವರು ಅಧಿಕಾರದಲ್ಲಿದ್ದಾಗ ಕೊಲೆ ಕೇಸ್‌ಗಳನ್ನು ಸಿಬಿಐಗೆ ಕೊಟ್ಟರು, ಏನಾಯಿತು? 22 ಕೇಸ್‌ಗಳಿಗೆ ನ್ಯಾಯ ಸಿಕ್ಕಿದೆಯಾ? ಪರಮೇಶ್ ಮೇಸ್ತಾ ಕೇಸ್ ಏನಾಯಿತು? ಬಿಜೆಪಿಯವರು ಇದೀಗ ಸಿಬಿಐಗೆ ವಹಿಸಿ ಎನ್ನುತ್ತಿದ್ದಾರೆ. ಇವರೇನು ಸಾಚಾಗಳ? ರಾಜಕಾರಣಿಗಳು ನಿರ್ಲಜ್ಜರು. ನಾನು ಹಿಂದುತ್ವ ಉಳಿಸಲು ಏನು ಮಾಡುತ್ತೇವೆ ನೋಡಿ ಎಂದು ಹರಿಹಾಯ್ದರು. ಇದನ್ನೂ ಓದಿ: 2024ರ ಚುನಾವಣೆಯಲ್ಲಿ ತಮಿಳುನಾಡಿನ ರಾಮನಾಥಪುರಂನಿಂದ ಮೋದಿ ಸ್ಪರ್ಧೆ?
ಜೈನ ಸ್ವಾಮೀಜಿಯ ಹತ್ಯೆ ನಾವು ಖಂಡಿಸುತ್ತೇವೆ. ನಾನು ಅಲ್ಲಿಗೆ ಭೇಟಿ ಕೊಟ್ಟು ಬಂದಿದ್ದೇನೆ. ಮಠದಲ್ಲಿ ಸ್ವಾಮೀಜಿ ಒಬ್ಬರೇ ಇರುತ್ತಿದ್ದರು. ಹೀರೆಕುಡಿಯಿಂದ ಮಠ ಸುಮಾರು 2 ಕಿಲೋ ಮೀಟರ್ ದೂರ ಇದೆ. ಒಂಟಿತನ ನೋಡಿ ವ್ಯವಸ್ಥಿತವಾಗಿ ಕೊಲೆ ಮಾಡಿದ್ದಾರೆ. ಈ ಕೊಲೆ ಸಾಮಾನ್ಯ ಕೊಲೆ ಅಲ್ಲ. ಕುರಿ, ಕೋಳಿ ಕತ್ತರಿಸುವ ರೀತಿಯಲ್ಲಿ ಹತ್ಯೆ ಮಾಡಿದ್ದಾರೆ. ಈ ರೀತಿ ಮಾಡಿದವರನ್ನು ಸರ್ಕಾರ ಹೊರಹಾಕಬೇಕು. ಇದರ ಹಿಂದೆ ಹಣದ ಕಾರಣ ಇಲ್ಲ. ಬೇರೆ ಏನೋ ಷಡ್ಯಂತ್ರ ಇದೆ ಎಂದರು. ಇದನ್ನೂ ಓದಿ: ಭಾರೀ ಮಳೆ.. ಹಿಮಪಾತ – ಲಡಾಕ್‌ನಲ್ಲಿ ಬೆಂಗಳೂರಿಗರು ಲಾಕ್
ನಾನು ಇದನ್ನು ಸಿಬಿಐಗೆ ವಹಿಸಿ ಅಂತಾ ಹೇಳಲ್ಲ. ಬಿಜೆಪಿಯವರೇ ಬಾಯಿ ಮುಚ್ಚಿ. ಕರ್ನಾಟಕ ಪೊಲೀಸರು ಕೇವಲ ನಾಲ್ಕು ಗಂಟೆಯಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ. ಕಠಿಣ ಶಿಕ್ಷೆ ಎಂದರೆ ಏನು? ನಮ್ಮ ಸಿಸ್ಟಮ್ ಸರಿ ಇಲ್ಲ. ಒಂದು ವರ್ಷದಲ್ಲಿ ಅವರು ಹೊರಗೆ ಬರುತ್ತಾರೆ. ಉತ್ತರಪ್ರದೇಶ (Uttara Pradesh) ಮಾದರಿಯಲ್ಲಿ ಮೂವರು ಆರೋಪಿಗಳ ಮನೆಗೆ ಬುಲ್ಡೋಜರ್ ಹತ್ತಿಸಬೇಕು. ಕ್ರೌರ್ಯ ಕ್ರೌರ್ಯವೇ. ಅವರು ಯಾರೇ ಆಗಲಿ ಅವರ ಮನೆ ಮೇಲೆ ಬುಲ್ಡೋಜರ್ ಹತ್ತಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಕಳಪೆ ರಸ್ತೆ ಕಾಮಗಾರಿ ಆರೋಪ – ಎಂಜಿನಿಯರ್‌ಗೆ ಕಲ್ಲೇಟು
ಸನ್ಯಾಸಿಯನ್ನು ಕೊಲ್ಲಲು ಅವರಿಗೆ ಯಾವ ಮಾನಸಿಕತೆ ಇದೆ. ಇದು ಕರ್ನಾಟಕಕ್ಕೆ ಕಳಂಕ. ಯಾರಾದರೂ ಇವರನ್ನು ರಕ್ಷಣೆ ಮಾಡಿದರೆ ಇದೇ ಮಚ್ಚು ನಾಳೆ ನಿಮ್ಮ ಮನೆಗೆ ಬರುತ್ತದೆ. ಯಾರೂ ಯಾವುದೇ ಒತ್ತಾಯಕ್ಕೆ ಮಣಿಯಬಾರದು. ಯೋಗಿ ಮಾದರಿಯಲ್ಲಿ ಅವರ ಮೇಲೆ ಕ್ರಮ ಆಗಬೇಕು. ಯಾರೂ ಅವರ ಪರ ವಕಾಲತ್ತು ಮಾಡಬಾರದು ಎಂದು ನಾನು ವಕೀಲರ ಸಂಘಕ್ಕೆ ಮನವಿ ಮಾಡುತ್ತೇನೆ. ಅಕಸ್ಮಾತ್ ವಕಾಲತ್ತು ಮಾಡಿದರೆ ಅವರ ಕ್ರೌರ್ಯಕ್ಕೆ ಸಹಾಯ ಮಾಡಿದ ಹಾಗೆ ಆಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಮನಾಲಿ ಪ್ರವಾಸಕ್ಕೆಂದು ತೆರಳಿದ್ದ ಮೈಸೂರಿನ ಪ್ರವಾಸಿಗರು ನಾಪತ್ತೆ
ಇದು ತಾಲಿಬಾನ್ ಮನಸ್ಥಿತಿ. ಇದರಲ್ಲಿ ಮುಚ್ಚುಮರೆ ಮಾಡಿದರೆ ದೇಶಕ್ಕೇ ಅಪಾಯಕಾರಿ. ಪೊಲೀಸರು ಯಾರನ್ನೂ ಮುಚ್ಚುಮರೆ ಮಾಡಬಾರದು. ಅಕಸ್ಮಾತ್ ಮುಚ್ಚುಮರೆ ಮಾಡಿದರೆ ಅವರು ಪೊಲೀಸರನ್ನೂ ಬಿಡಲ್ಲ. ಪೊಲೀಸ್ ಇಲಾಖೆಯ ಮೂಲಕ ದಿಕ್ಕು ತಪ್ಪಿಸುವ ಕೆಲಸ ಆಗುತ್ತಿದೆ. ಈಗಾಗಲೇ ದಿಕ್ಕು ತಪ್ಪಿಸಿದ್ದಾರೆ. ಇದರ ಹಿಂದೆ ಬಲವಾದ ಕಾರಣವಿದೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಎಲ್ಲಾ ಬಾಯಿಮುಚ್ಚಿ ಮುಕ್ತ ತನಿಖೆಗೆ ಅವಕಾಶ ಮಾಡಿಕೊಡಿ ಎಂದು ಮೂರು ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಯುವಬ್ರಿಗೇಡ್ ಕಾರ್ಯಕರ್ತನ ಹತ್ಯೆ ಕೇಸ್ – ಸತ್ಯ ಶೋಧನೆಗಿಳಿದಿದ್ದ ಬಿಜೆಪಿಗೆ ಶಾಕ್!
ಚಿಕ್ಕೋಡಿ: ಜೈನ ಮುನಿ (Jain Muni) ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದ್ದು, ಇದೀಗ ಎಫ್‌ಐಆರ್ (FIR) ಮೂಲಕ ಜೈನಮುನಿಯ ಕೊಲೆ ರಹಸ್ಯ ಬಯಲಾಗಿದೆ.
ಕರೆಂಟ್ ಶಾಕ್ ನೀಡಿ ಸ್ವಾಮೀಜಿಯ ಹತ್ಯೆಗೈದ ಹಂತಕರು ಬಳಿಕ ಅವರ ದೇಹವನ್ನು ತುಂಡು ತುಂಡು ಮಾಡಿ ಕೊಳವೆ ಬಾವಿಗೆ ಎಸೆದಿದ್ದರು. ಕೊಲೆ ಮಾಡಿದ್ದು ನಾರಾಯಣ ಮಾಳಿ ಮಾತ್ರ ಎಂದು ಬಿಂಬಿಸುವ ಕಾರ್ಯ ನಡೆದಿತ್ತು. ಆದರೆ ಸದ್ಯ ಹಸನ್ ಡಾಲಾಯತ್ ಹಾಗೂ ನಾರಾಯಣ ಮಾಳಿ ಇಬ್ಬರು ಸೇರಿ ಜೈನಮುನಿಯ ಹತ್ಯೆ ಮಾಡಿದ್ದಾರೆ ಎಂಬ ಸ್ಫೋಟಕ ಸುದ್ದಿ ಎಫ್‌ಐಆರ್ ಮೂಲಕ ಬಹಿರಂಗವಾಗಿದೆ. ಕರೆಂಟ್ ಶಾಕ್ ಕೊಟ್ಟರೂ ಸ್ವಾಮೀಜಿ ಪ್ರಾಣ ಪಕ್ಷಿ ಹಾರಿ ಹೋಗಿರಲಿಲ್ಲ. ಕರೆಂಟ್ ಶಾಕ್ ಕೊಟ್ಟು ಚಿತ್ರ ಹಿಂಸೆ ನೀಡಿದ ನಂತರ ಸ್ವಾಮೀಜಿಯ ಟವೆಲ್‌ನಿಂದಲೇ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾರೆ. ಇದನ್ನೂ ಓದಿ: ಕರೆಂಟ್ ಶಾಕ್ ಕೊಟ್ಟು, ಕತ್ತು ಹಿಸುಕಿ ಜೈನಮುನಿ ಹತ್ಯೆ – ಆರೋಪಿಗಳು ಸಿಕ್ಕಿಬಿದ್ದಿದ್ದು ಹೇಗೆ?
ಹಣ ವಾಪಸ್ ನೀಡುವಂತೆ ಪದೇ ಪದೇ ಸ್ವಾಮೀಜಿ ಪೀಡಿಸುತ್ತಿದ್ದು, ಇದರಿಂದ ಕೋಪಗೊಂಡ ನಾರಾಯಣ ಮಾಳಿ ತನ್ನ ಸ್ನೇಹಿತ ಹಸನ್ ಡಾಲಾಯತ್ ಜೊತೆ ಸೇರಿ ಕೊಲೆ ಮಾಡಿದ್ದಾನೆ. ಕೋಣೆಯಲ್ಲಿ ಜೈನ ಮುನಿಗೆ ಮೊದಲು ಕರೆಂಟ್ ಶಾಕ್ ನೀಡಿ ಚಿತ್ರ ಹಿಂಸೆ ನೀಡಿದ್ದು, ಬಳಿಕ ಕೊಲೆ ಮಾಡಿ ಗೋಣಿ ಚೀಲದಲ್ಲಿ ಶವ ಸಾಗಿಸಿದ್ದಾರೆ. ಇದನ್ನೂ ಓದಿ: ಖಟಕಬಾವಿ ಗದ್ದೆಯ ಕೊಳವೆಬಾವಿಯಲ್ಲಿ ಜೈನಮುನಿ ಮೃತದೇಹ ಪತ್ತೆ – ಪೀಸ್ ಪೀಸ್ ಮಾಡಿ ಎಸೆದ ಹಂತಕರು
ಚಿಕ್ಕೋಡಿ: ಹಿರೇಕೋಡಿ ನಂದಿಪರ್ವತ ಆಶ್ರಮದ (Nandi Parvatha Ashram) ಕಾಮಕುಮಾರನಂದಿ ಮಹಾರಾಜರ ಹತ್ಯೆ ಪ್ರಕರಣವನ್ನು ಸಿಬಿಐ (CBI) ತನಿಖೆಗೆ ವಹಿಸುವಂತೆ ಬಿಜೆಪಿ ಮುಖಂಡರೂ (BJP Leader) ಆಗಿರುವ ಮಾಜಿ ಎಂಎಲ್‌ಸಿ ಮಹಾಂತೇಶ ಕವಟಗಿಮಠ ಒತ್ತಾಯಿಸಿದ್ದಾರೆ.
ಚಿಕ್ಕೋಡಿಯಲ್ಲಿ (Chikkodi) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕವಟಗಿಮಠ, ಕಾಮಕುಮಾರ ನಂದಿ ಮಹಾರಾಜರ ಹತ್ಯೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ. ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಲೇಬೇಕೆಂದು ಚಿಕ್ಕೋಡಿ ಬಿಜೆಪಿ ಘಟಕ ಒತ್ತಾಯಿಸುತ್ತದೆ. ಸ್ವಾಮೀಜಿಗಳಿಗೆ ರಕ್ಷಣೆ ನೀಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸುತ್ತೇವೆ ಎಂದು ಹೇಳಿದರು.
ಸ್ವಾಮೀಜಿಗಳು ನಾಪತ್ತೆಯಾದ ದಿನವೇ ಪೊಲೀಸರು (Police) ತಕ್ಷಣ ಕ್ರಮ ಕೈಗೊಂಡಿದ್ದರೆ ಈ ರೀತಿ ಆಗುತ್ತಿರಲಿಲ್ಲ. ಪೊಲೀಸರಿಗೆ ಗ್ರೌಂಡ್ ರಿಯಾಲಿಟಿ ಗೊತ್ತಿರುತ್ತೆ, ಪ್ರಾಥಮಿಕ ಮಾಹಿತಿಗಳೂ ಸಿಕ್ಕಿರುತ್ತೆ. ಅವರು ಮನಸ್ಸು ಮಾಡಿದ್ದರೆ, ಸ್ವಾಮೀಜಿ ಹತ್ಯೆಯಾಗೋದನ್ನ ತೆಡೆಯಬಹುದಿತ್ತು. ಸರ್ಕಾರ ಸರ್ವಪಕ್ಷ ಸಭೆ ಕರೆದು ಸ್ವಾಮೀಜಿಗಳ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು, ಆರೋಪಿಗಳನ್ನ ಕಠಿಣವಾಗಿ ಶಿಕ್ಷಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಜೈನಮುನಿ ಕೊಲೆ ಖಂಡಿಸಿ ಇಂದು ರಾಜ್ಯದೆಲ್ಲೆಡೆ ಪ್ರತಿಭಟನೆ
ಜಿನಸೇನ ಭಟ್ಟಾರಕ, ಧರ್ಮಸೇನ ಭಟ್ಟಾರಕ, ಲಕ್ಷ್ಮೀಸೇನ ಭಟ್ಟಾರಕ ನೇತೃತ್ವದಲ್ಲಿ ನಡೆದ ಮೌನ ಪ್ರತಿಭಟನೆಯಲ್ಲಿ ಪ್ರತಿಭಟನೆಯಲ್ಲಿ 10 ಸಾವಿರ ಜನ ಭಾಗಯಾಗಿದ್ದರು. ಇದನ್ನೂ ಓದಿ: ಜೈನ ಧರ್ಮ ಸಂಪ್ರದಾಯದಂತೆ ಜೈನಮುನಿ ಅಂತ್ಯಸಂಸ್ಕಾರ
ಇದೇ ತಿಂಗಳ ಜುಲೈ 6ರಂದು ನಂದಿ ಪರ್ವತ ಆಶ್ರಮದ ಜೈನಮುನಿಗಳು ನಾಪತ್ತೆಯಾಗಿದ್ದರು. ಸ್ವಾಮೀಜಿಯ ನಾಪತ್ತೆಯ ಕುರಿತು ಭಕ್ತರು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆ ತನಿಖೆ ಕೈಗೊಂಡ ಪೊಲೀಸರು ಅನುಮಾನದ ಮೇಲೆ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ವಿಚಾರಣೆ ವೇಳೆ ಸ್ವಾಮೀಜಿಯನ್ನು ಹತ್ಯೆ ಮಾಡಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದರು. ಬಳಿಕ ಜೈನಮುನಿಗಳ ಮೃತದೇಹವನ್ನು ಖಟಕಬಾವಿಯ ಗದ್ದೆಯಲ್ಲಿದ್ದ ತೆರೆದ ಕೊಳವೆಬಾವಿಯಲ್ಲಿ ಪೊಲೀಸರು ಪತ್ತೆ ಹಚ್ಚಿದ್ದರು.
ಚಿಕ್ಕೋಡಿ/ಧಾರವಾಡ: ಜೈನಮುನಿ (Jain Muni) ಆಚಾರ್ಯ ಕಾಮಕುಮಾರ ನಂದಿ ಮಹಾರಾಜರ (Kamakumara Nandi Maharaja) ಕೊಲೆ ಖಂಡಿಸಿ ಸೋಮವಾರ ರಾಜ್ಯದೆಲ್ಲೆಡೆ ಪ್ರತಿಭಟನೆ ಮಾಡಲು ನಿರ್ಧಾರ ಮಾಡಲಾಗಿದೆ.
ಚಿಕ್ಕೋಡಿ (Chikkodi) ಪಟ್ಟಣದ ಆರ್‌ಡಿ ಹೈಸ್ಕೂಲ್ ಹತ್ತಿರವಿರುವ ಮೈದಾನದಲ್ಲಿ ಸೇರುವ ಜೈನಸಮುದಾಯದ ಜನರು ಹಾಗೂ ಸ್ವಾಮೀಜಿಗಳು ಮೌನ ಪ್ರತಿಭಟನೆ ಮಾಡಿ, ಬಳಿಕ ಮೆರವಣಿಗೆ ಮಾಡಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಪ್ರಕರಣದ ತನಿಖೆ ಮಾಡಿ ಹಂತಕರಿಗೆ ಶಿಕ್ಷೆ ನೀಡುವಂತೆ ಮನವಿ ಮಾಡಲಿದ್ದಾರೆ.
ಹುಬ್ಬಳ್ಳಿಯಲ್ಲಿ ಕಾಮಕುಮಾರ ನಂದಿ ಮಹಾರಾಜರ ಕೊಲೆ ಖಂಡಿಸಿ ಸಿಎಂ ಸಿದ್ದರಾಮಯ್ಯ ಸ್ಪಂದಿಸಲಿಲ್ಲವೆಂದು ಹಾಗೂ ಜೈನ ಮುನಿಗಳಿಗೆ ರಕ್ಷಣೆ ನೀಡುವಂತೆ ಆಗ್ರಹಿಸಿ ವರೂರಿನ ಜೈನಮುನಿ ಗುಣಧರನಂದಿ ಮಹಾರಾಜ್ ಸ್ವಾಮೀಜಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು. ಗೃಹ ಸಚಿವರ ದೂರವಾಣಿ ಕರೆಮಾಡಿ ಬೇಡಿಕೆ ಈಡೇರಿಕೆ ಭರವಸೆ ನೀಡಿದ ಬಳಿಕ ಗುಣಧರನಂದಿ ಸ್ವಾಮೀಜಿ ಉಪವಾಸ ಕೈಬಿಟ್ಟಿದ್ದಾರೆ. ಇದನ್ನೂ ಓದಿ: ಉತ್ತರ ಭಾರತದಲ್ಲಿ ಮಳೆಯಿಂದ ಜಲಪ್ರಳಯ – ಈವರೆಗೆ 19 ಬಲಿ, ಇಂದೂ ಭಾರೀ ಮಳೆ ಸಾಧ್ಯತೆ
ಹತ್ಯೆ ಖಂಡಿಸಿ ಸಮುದಾಯದಿಂದ ಮೌನ ಪ್ರತಿಭಟನೆ ಮಾಡಲು ಮುಂದಾಗಿದೆ. ಧಾರವಾಡದಲ್ಲಿ ಶ್ರೀ ಅಮಿತಂಜನ ಕೀರ್ತಿ ಮುನಿ ಮಹಾರಾಜರ ಸಾನ್ನಿಧ್ಯದಲ್ಲಿ ಜೈನ ಸಮುದಾಯದ ವಿವಿಧ ಸಂಘಟನೆಗಳು ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆ ಮೂಲಕ ತೆರಳಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ತನಿಖೆಗೆ ಆಗ್ರಹಿಸಲಿದ್ದಾರೆ. ಅಲ್ಲದೆ ಜೈನಮುನಿ ಆಚಾರ್ಯ ಕಾಮಕುಮಾರ ನಂದಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇವಲ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಒಂದು ಸಮುದಾಯದ ಆರೋಪಿಯನ್ನು ಸಂರಕ್ಷಣೆ ಮಾಡುತ್ತಿದ್ದಾರೆ. ಹೀಗಾಗಿ ಪ್ರಕರಣವನ್ನು ಸಿಬಿಐಗೆ ವಹಿಸಿದರೆ ಸತ್ಯ ಬಹಿರಂಗವಾಗಲಿದೆ ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಅನ್ನಭಾಗ್ಯಕ್ಕೆ ಇಂದು ಚಾಲನೆ- ಬಿಪಿಎಲ್ ಕಾರ್ಡ್‍ದಾರರ ಅಕೌಂಟ್‍ಗೆ ರೇಷನ್ ದುಡ್ಡು
ಸ್ವಾಮೀಜಿ ಹತ್ಯೆ ಖಂಡಿಸಿ ಸೋಮವಾರ ಮೌನ ಪ್ರತಿಭಟನೆಗೆ ಜೈನ ಸಮುದಾಯ ಮುಂದಾಗಿದೆ. ಸ್ವಾಮೀಜಿಯವರ ಸಾವಿಗೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಸ್ವಾಮೀಜಿಯವರ ಹತ್ಯೆಗೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದ್ದಾರೆ.
ಜುಲೈ 6ರಿಂದ ನಂದಿ ಪರ್ವತ ಆಶ್ರಮದ ಜೈನಮುನಿಗಳು ನಾಪತ್ತೆಯಾಗಿದ್ದರು. ಸ್ವಾಮೀಜಿಯ ನಾಪತ್ತೆಯ ಕುರಿತು ಭಕ್ತರು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆ ತನಿಖೆ ಕೈಗೊಂಡ ಪೊಲೀಸರು ಅನುಮಾನದ ಮೇಲೆ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ವಿಚಾರಣೆ ವೇಳೆ ಸ್ವಾಮೀಜಿಯನ್ನು ಹತ್ಯೆ ಮಾಡಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದರು. ಬಳಿಕ ಜೈನಮುನಿಗಳ ಮೃತದೇಹವನ್ನು ಖಟಕಬಾವಿಯ ಗದ್ದೆಯಲ್ಲಿದ್ದ ತೆರೆದ ಕೊಳವೆಬಾವಿಯಲ್ಲಿ ಪೊಲೀಸರು ಪತ್ತೆ ಹಚ್ಚಿದ್ದರು. ಇದನ್ನೂ ಓದಿ: ಚಿಕ್ಕೋಡಿಯಲ್ಲಿ ನಾಪತ್ತೆಯಾಗಿದ್ದ ಜೈನಮುನಿ ಹತ್ಯೆ – ಭಕ್ತರ ದೂರಿನ ಬಳಿಕ ಪ್ರಕರಣ ಬೆಳಕಿಗೆ
ಬೆಳಗಾವಿ ಜಿಲ್ಲೆಯ ಜನಪ್ರತಿನಿಧಿಗಳು, ಉಸ್ತುವಾರಿ ಸಚಿವರು ಸುಮ್ಮನೆ ಕೂರಬಾರದು. ಸರ್ಕಾರ ತಕ್ಷಣವೇ ಆ ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಮುನಿಗಳ ಹಂತಕರನ್ನ ಗಲ್ಲಿಗೇರಿಸಬೇಕು. ಮುನಿಗಳ ಹತ್ಯೆ ವಿಚಾರದಲ್ಲಿ ಸರ್ಕಾರ ಎಚ್ಚರವಹಿಸಬೇಕು ಎಂದು ತಿಳಿಸಿದ್ದಾರೆ. ಅಲ್ಲದೇ ಹಿರಿಯ ಮುನಿಗಳು, ಜೈನ ಸಮುದಾಯದ ಭಕ್ತರು ನಡೆಸುತ್ತಿರುವ ಹೋರಾಟಕ್ಕೆ ಸರ್ಕಾರ ಸ್ಪಂದಿಸಬೇಕು ಎಂದು ಶ್ರೀಗಳು ಒತ್ತಾಯಿಸಿದ್ದಾರೆ.
ಜುಲೈ 6ರಿಂದ ನಂದಿ ಪರ್ವತ ಆಶ್ರಮದ ಜೈನಮುನಿಗಳು ನಾಪತ್ತೆಯಾಗಿದ್ದರು. ಸ್ವಾಮೀಜಿಯ ನಾಪತ್ತೆಯ ಕುರಿತು ಭಕ್ತರು ಚಿಕ್ಕೋಡಿ ಪೊಲೀಸ್ (Police) ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆ ತನಿಖೆ ಕೈಗೊಂಡ ಪೊಲೀಸರು ಅನುಮಾನದ ಮೇಲೆ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ವಿಚಾರಣೆ ವೇಳೆ ಸ್ವಾಮೀಜಿಯನ್ನು ಹತ್ಯೆ ಮಾಡಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ. ಜೈನಮುನಿಯ ಮೃತದೇಹವನ್ನು ಖಟಕಬಾವಿಯ ಗದ್ದೆಯಲ್ಲಿದ್ದ ತೆರೆದ ಕೊಳವೆಬಾವಿಗೆ ಹಾಕಿರುವುದಾಗಿ ಮಾಹಿತಿ ನೀಡಿದ್ದರು. ಇದನ್ನೂ ಓದಿ: ಕರೆಂಟ್ ಶಾಕ್ ಕೊಟ್ಟು, ಕತ್ತು ಹಿಸುಕಿ ಜೈನಮುನಿ ಹತ್ಯೆ – ಆರೋಪಿಗಳು ಸಿಕ್ಕಿಬಿದ್ದಿದ್ದು ಹೇಗೆ?
ಆರೋಪಿಗಳು ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ಶುಕ್ರವಾರ ರಾತ್ರಿಯಿಂದ ಖಟಕಬಾವಿಯಲ್ಲಿ ಶೋಧಕಾರ್ಯ ನಡೆಸಿದ್ದರು. ಸ್ವಾಮೀಜಿ ಮೃತದೇಹ ಪತ್ತೆಯಾಗದ ಹಿನ್ನೆಲೆ ಶನಿವಾರವೂ ಜೆಸಿಬಿ ಸಹಾಯದಿಂದ ಶೋಧ ಕಾರ್ಯ ಮುಂದುವರೆಸಿ ಕೊಳವೆ ಬಾವಿಯ 20 ಅಡಿ ಆಳದಲ್ಲಿ ಸ್ವಾಮೀಜಿ ಮೃತದೇಹ ಇರುವುದನ್ನು ಪತ್ತೆ ಹಚ್ಚಿದ್ದಾರೆ. ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಬೆಂಗಳೂರು: ಬೆಳಗಾವಿಯಲ್ಲಿ (Belagavi) ಜೈನಮುನಿ (Jain Muni) ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಮಾಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದ್ದಾರೆ.
ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಜೈನಮುನಿಗಳ ಹತ್ಯೆ ಖಂಡನೀಯ. ಇದನ್ನು ಸರ್ಕಾರ ಸಹಿಸುವುದಿಲ್ಲ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಯಾರೊಬ್ಬರೂ ಪ್ರಚೋದನೆಗೆ ಒಳಗಾಗಬಾರದು. ಬೇರೆಯವರನ್ನು ಪ್ರಚೋದಿಸಬಾರದು. ಶಾಂತಿ ಸುವ್ಯವಸ್ಥೆ ಕಾಪಾಡಬೇಕು ಎಂದಿದ್ದಾರೆ. ಇದನ್ನೂ ಓದಿ: ಖಟಕಬಾವಿ ಗದ್ದೆಯ ಕೊಳವೆಬಾವಿಯಲ್ಲಿ ಜೈನಮುನಿ ಮೃತದೇಹ ಪತ್ತೆ – ಪೀಸ್ ಪೀಸ್ ಮಾಡಿ ಎಸೆದ ಹಂತಕರು
ಹುಬ್ಬಳ್ಳಿ ಬಳಿಯ ವರೂರು ಶ್ರೀ ಗುಣಧರ ನಂದಿ ಮಹಾರಾಜ ಸ್ವಾಮೀಜಿಗಳು, ಎಲ್ಲಾ ಸ್ವಾಮೀಜಿಗಳಿಗೆ ಭದ್ರತೆ ನೀಡಬೇಕು ಎಂದು ಅನ್ನ, ನೀರು ತ್ಯಜಿಸಿ ಪ್ರತಿಭಟನೆಗೆ ಮುಂದಾಗಿರುವ ಮಾಹಿತಿ ಬಂದಿದೆ. ಸ್ವಾಮೀಜಿಗಳಿಗೆ ಭದ್ರತೆ ನೀಡುವ ಕೆಲಸ ಮಾಡುತ್ತೇವೆ. ಕೂಡಲೇ ಅವರು ತಮ್ಮ ಪ್ರತಿಭಟನೆ ಕೈಬಿಡಬೇಕು ಎಂದು ಮನವಿ ಮಾಡಿದ್ದಾರೆ.
ಸ್ವಾಮೀಜಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಲು ಪ್ರಯತ್ನಿಸುತ್ತಿದ್ದೇನೆ. ಆದರೆ ಸಂಪರ್ಕ ಸಾಧ್ಯವಾಗಿಲ್ಲ. ಹೀಗಾಗಿ ಸ್ಥಳೀಯ ಶಾಸಕರು, ಮಂತ್ರಿಗಳ ಜೊತೆಯೂ ಈ ವಿಚಾರವಾಗಿ ಮಾತನಾಡಿದ್ದೇನೆ ಎಂದಿದ್ದಾರೆ.
ಜುಲೈ 6ರಿಂದ ನಂದಿ ಪರ್ವತ ಆಶ್ರಮದ ಜೈನಮುನಿಗಳು ನಾಪತ್ತೆಯಾಗಿದ್ದರು. ಸ್ವಾಮೀಜಿಯ ನಾಪತ್ತೆಯ ಕುರಿತು ಭಕ್ತರು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆ ತನಿಖೆ ಕೈಗೊಂಡ ಪೊಲೀಸರು ಅನುಮಾನದ ಮೇಲೆ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ವಿಚಾರಣೆ ವೇಳೆ ಸ್ವಾಮೀಜಿಯನ್ನು ಹತ್ಯೆ ಮಾಡಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದರು. ಬಳಿಕ ಜೈನಮುನಿಗಳ ಮೃತದೇಹವನ್ನು ಖಟಕಬಾವಿಯ ಗದ್ದೆಯಲ್ಲಿದ್ದ ತೆರೆದ ಕೊಳವೆಬಾವಿಯಲ್ಲಿ ಪೊಲೀಸರು ಪತ್ತೆ ಹಚ್ಚಿದ್ದರು. ಇದನ್ನೂ ಓದಿ: ಕರೆಂಟ್ ಶಾಕ್ ಕೊಟ್ಟು, ಕತ್ತು ಹಿಸುಕಿ ಜೈನಮುನಿ ಹತ್ಯೆ – ಆರೋಪಿಗಳು ಸಿಕ್ಕಿಬಿದ್ದಿದ್ದು ಹೇಗೆ?