ಬೆಂಗಳೂರು: ಬೆಳಗಾವಿ ಜಿಲ್ಲೆ ಚಿಕ್ಕೋಡಿಯ (Chikkodi) ಜೈನ ಮುನಿ (Jain Muni) ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಅವರು ತಿಳಿಸಿದ್ದಾರೆ.
ಈ ಸಂಬಂಧ ಮಾಧ್ಯಮ ಪ್ರಕಟಣೆಯನ್ನು ನಳಿನ್ ಕುಮಾರ್ ಕಟೀಲ್ ಹೊರಡಿಸಿದ್ದು, ಈ ಹತ್ಯೆಯ ಸಮಗ್ರ ತನಿಖೆ ನಡೆಸಬೇಕು. ಕೊಲೆಗಡುಕರನ್ನು ಶೀಘ್ರವೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಮುನಿಗಳ ಹತ್ಯೆ ಮನಸ್ಸಿಗೆ ಅತ್ಯಂತ ಅಘಾತ ತಂದಿದೆ ಎಂದು ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ನಾಡಿನ ಸಾಧು ಸಂತರಿಗೆ ರಕ್ಷಣೆ ಒದಗಿಸುವಂತೆ ಅವರು ಆಗ್ರಹಿಸಿದ್ದಾರೆ. ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಕೊಲೆಗಡುಕರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದಿದ್ದಾರೆ. ಇದನ್ನೂ ಓದಿ: ಕರೆಂಟ್ ಶಾಕ್ ಕೊಟ್ಟು, ಕತ್ತು ಹಿಸುಕಿ ಜೈನಮುನಿ ಹತ್ಯೆ – ಆರೋಪಿಗಳು ಸಿಕ್ಕಿಬಿದ್ದಿದ್ದು ಹೇಗೆ?
ಚಿಕ್ಕೋಡಿ: ಹೀರೇಕುಡಿ (Hirekudi) ನಂದಿ ಪರ್ವತ ಆಶ್ರಮದ (Nandi Parvatha Ashram) ಜೈನಮುನಿ (Jain Muni) ಹತ್ಯೆ ಪ್ರಕರಣ ಜನತೆಯನ್ನು ಬೆಚ್ಚಿ ಬೀಳಿಸಿದೆ. ಕೊಟ್ಟ ಹಣವನ್ನು ವಾಪಸ್ ಕೇಳಿದ್ದಕ್ಕಾಗಿ ಹಂತಕರು ಜೈನಮುನಿಯ ಹತ್ಯೆ ನಡೆಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಜೈನಮುನಿಯ ಹತ್ಯೆಯನ್ನು ಎಷ್ಟೊಂದು ಭೀಕರವಾಗಿ ನಡೆಸಿದ್ದಾರೆ ಎಂಬ ಸತ್ಯವನ್ನು ಎಳೆಎಳೆಯಾಗಿ ಬಾಯಿಬಿಟ್ಟಿದ್ದಾರೆ.
ನಾಪತ್ತೆಯಾಗಿದ್ದ ಚಿಕ್ಕೋಡಿಯ ಹಿರೇಕೋಡಿ ಆಶ್ರಮದ ಜೈನಮುನಿ ಕಾಮಕುಮಾರ ನಂದಿಮಹಾರಾಜರ ದೇಹ ಪೀಸ್ ಪೀಸ್ ಆಗಿ ಪತ್ತೆಯಾಗಿದೆ. ಸ್ವಾಮೀಜಿಗೆ ಕರೆಂಟ್ ಶಾಕ್ ಕೊಟ್ಟು ಟಾರ್ಚರ್ ನೀಡಿ ಬಳಿಕ ತುಂಡು ತುಂಡಾಗಿ ಕತ್ತರಿಸಲಾಗಿದೆ ಎಂದು ತಿಳಿದು ಬಂದಿದೆ. ಜುಲೈ 5ರಂದು ನಾಪತ್ತೆಯಾಗಿದ್ದ ಸ್ವಾಮೀಜಿ ಬಗ್ಗೆ ಜುಲೈ 7ರಂದು ನಾಪತ್ತೆ ಪ್ರಕರಣ ದಾಖಲಿಸಿದ್ದ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದರು.
ತೀವ್ರ ವಿಚಾರಣೆ ಬಳಿಕ ರಾಯಬಾಗ ತಾಲೂಕಿನ ಖಟಕಭಾವಿ ಗ್ರಾಮದ ಕೊಳವೆ ಬಾವಿಯಲ್ಲಿ ಶವ ಎಸೆದಿದ್ದಾಗಿ ಆರೋಪಿಗಳಾದ ನಾರಾಯಣ ಮಾಳಿ(35) ಹುಸೇನ್(34) ಒಪ್ಪಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆಯಿಂದ ಸಾಯಂಕಾಲದವರೆಗೆ 10 ಗಂಟೆಗಳ ಕಾಲ ಕೊಳವೆ ಬಾವಿಯಲ್ಲಿ ಶವ ಶೋಧ ಕಾರ್ಯಾಚರಣೆ ಮಾಡಿ ಶವ ಹೊರತೆರೆಯಲಾಗಿದೆ. ಎ1 ಆರೋಪಿಯಾದ ನಾರಾಯಣನ ಜೊತೆ ಸ್ವಾಮೀಜಿಗೆ ಉತ್ತಮ ಸಂಬಂಧ ಇತ್ತು. ಸ್ವಾಮೀಜಿ 6 ಲಕ್ಷ ರೂ. ಹಣಕಾಸಿನ ಸಹಾಯ ಮಾಡಿದ್ದರು. ಈ ಹಣವನ್ನು ವಾಪಸ್ ನೀಡುವಂತೆ ಒತ್ತಾಯಿಸಿದ ಕಾರಣಕ್ಕೆ ಕೊಲೆ ಮಾಡಲಾಗಿದೆ.
ಕೊಳವೆ ಬಾವಿಯ 30 ಅಡಿ ಆಳದಲ್ಲಿ ಸ್ವಾಮೀಜಿ ಪಾರ್ಥಿವ ಶರೀರ ದೊರೆತಿದೆ. ಇಬ್ಬರು ಆರೋಪಿಗಳನ್ನು ಬಂಧಿಸಿದ್ದೇವೆ. ಮರಣೋತ್ತರ ಪರೀಕ್ಷೆ ಬಳಿಕ ಪ್ರಕರಣದ ತನಿಖೆ ಮುಂದುವರಿಯಲಿದೆ ಎಂದು ಬೆಳಗಾವಿ ಎಸ್‌ಪಿ ಡಾ. ಸಂಜೀವ್ ಪಾಟೀಲ್ ತಿಳಿಸಿದ್ದಾರೆ. ಜೈನಮುನಿಗಳ ಸಾವಿನಿಂದಾಗಿ ನಂದಿ ಪರ್ವತ ಆಶ್ರಮದಲ್ಲಿ ಭಕ್ತರು ಕಣ್ಣೀರಿನ ಕೋಡಿ ಹರಿಸಿದ್ದಾರೆ. ಆರೋಪಿಗಳಿಗೆ ಕಠಿಣಾತಿಕಠಿಣ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದ್ದಾರೆ.
ಆರೋಪಿಗಳು ಸಿಕ್ಕಿಬಿದ್ದಿದ್ದು ಹೇಗೆ?
ಸ್ವಾಮೀಜಿ ಹತ್ಯೆ ಬಳಿಕ ಪೊಲೀಸರ ಮುಂದೆ ಹಂತಕರು ಹೈಡ್ರಾಮಾ ನಡೆಸಿದ್ದರು. ಜುಲೈ 5ರ ರಾತ್ರಿ ನಂದಿ ಪರ್ವತ ಆಶ್ರಮದ ಕೋಣೆಯಲ್ಲಿ ಹತ್ಯೆ ನಡೆಸಿದ್ದರು. ಜುಲೈ 6 ರಂದು ಸ್ವಾಮೀಜಿಗಾಗಿ ಭಕ್ತರು, ಸಂಬಂಧಿಕರು ಹುಡುಕಾಟ ನಡೆಸುತ್ತಿದ್ದರು. ಈ ವೇಳೆ ಸ್ವಾಮೀಜಿಯನ್ನು ಅಪಹರಣ ಮಾಡಲಾಗಿದೆ ಎಂದು ತಿಳಿಸಿದ್ದರು. ಹೀಗಾಗಿ ಪೊಲೀಸರು ಅಪಹರಣ ಮಾಡಿದವರು ಚಹರೆ ಹೇಗಿತ್ತು ಚಿತ್ರ ಬಿಡಿಸಿ ಎಂದು ಸೂಚಿಸಿದ್ದಾರೆ. ಈ ವೇಳೆ ಇಬ್ಬರ ಹೇಳಿಕೆಗಳಿಗೆ ಸಾಮ್ಯತೆ ಇರಲಿಲ್ಲ. ಈ ಕಾರಣಕ್ಕೆ ಇಬ್ಬರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ. ಪೊಲೀಸರ ವಿಚಾರಣೆಯ ವೇಳೆ ಅವರಿಬ್ಬರು ದಿಕ್ಕು ತಪ್ಪಿಸಲು ಯತ್ನಿಸಿದ್ದರು. ಒಮ್ಮೆ ನದಿಯಲ್ಲಿ ಶವ ಎಸೆದಿರುವುದಾಗಿ ಮತ್ತೊಮ್ಮೆ ಕೊಳವೆ ಭಾವಿಯಲ್ಲಿ ಶವ ಎಸೆದಿರುವುದಾಗಿ ಹೇಳಿಕೆ ನೀಡಿದ್ದರು. ತೀವ್ರ ವಿಚಾರಣೆ ಬಳಿಕ ಕೊಲೆ ಮಾಡಿದ್ದನ್ನು ಆರೋಪಿಗಳು ಒಪ್ಪಿಕೊಂಡಿದ್ದು ಎಳೆ ಎಳೆಯಾಗಿ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ. ಇದನ್ನೂ ಓದಿ: ಕೊಲೆಗಡುಕರಿಗೆ ಶಿಕ್ಷೆ; ಸರ್ಕಾರ ಲಿಖಿತ ಭರವಸೆ ಕೊಡೋವರೆಗೆ ಅನ್ನಾಹಾರ ತ್ಯಾಗ – ಜೈನಮುನಿ ಗುಣಧರ ನಂದಿ ಮಹಾರಾಜ
ಕೊಲೆ ಮಾಡಿದ್ದು ಹೇಗೆ?
ಜುಲೈ 5 ರಂದು ಸ್ವಾಮೀಜಿಯನ್ನು ಕೊಲೆ ಮಾಡಲಾಗಿದೆ. ಅಡುಗೆ ಸಹಾಯಕಿ ಕೆಲಸ ಮುಗಿಸಿ ಹೋಗ್ತಿದ್ದಂತೆ ಆರೋಪಿಗಳು ಕೊಲೆಗೆ ಸ್ಕೆಚ್ ಹಾಕಿದ್ದಾರೆ. ವಿದ್ಯುತ್ ಶಾಕ್ ನೀಡಿ ಕತ್ತು ಹಿಸುಕಿ ಆರೋಪಿ ನಾರಾಯಣ ಕೊಂದಿದ್ದಾನೆ. ಬಳಿಕ ಸ್ನೇಹಿತ ಹುಸೇನ್‌ಗೆ ಕರೆಮಾಡಿ ಕರೆಸಿಕೊಂಡಿದ್ದಾನೆ. ಬಳಿಕ ಸ್ವಾಮೀಜಿ ಶವವನ್ನು ಇಬ್ಬರು ಜೊತೆಗೂಡಿ ಬೈಕ್‌ನಲ್ಲಿ ತೆಗೆದುಕೊಂಡು ಹೋಗಿದ್ದಾರೆ. ಹಂತಕರು ಹಿರೇಕೋಡಿಯಿಂದ ಖಟಕಬಾವಿಯವರೆಗೂ 39 ಕಿ.ಮೀ ಬೈಕ್ ಮೇಲೆಯೇ ಶವವನ್ನು ಸಾಗಾಟ ಮಾಡಿದ್ದಾರೆ.
ಎ1 ಆರೋಪಿ ನಾರಾಯಣ ಮಾಳಿಯ ಸ್ವಗ್ರಾಮ ಖಟಕಬಾವಿ. ಮೊದಲು ಶವವನ್ನು ತನ್ನ ಜಮೀನಿನಲ್ಲೇ ಹೂಳಲು ನಾರಾಯಣ ಪ್ಲ್ಯಾನ್ ಮಾಡಿದ್ದ. ಆದರೆ ಶವ ಹೂತರೆ ಪೊಲೀಸರ ಕೈಗೆ ಸಿಕ್ಕಿಬೀಳುವ ಸಾಧ್ಯತೆ ಹೆಚ್ಚೆಂದು ಭಾವಿಸಿ ಕೊಳವೆ ಬಾವಿಯಲ್ಲಿ ಶವ ಎಸೆಯಲು ಆರೋಪಿಗಳು ಪ್ಲ್ಯಾನ್ ಮಾಡಿದ್ದರು. ಕೊಳವೆ ಬಾವಿಯಲ್ಲಿ ಶವ ಹೋಗದ ಕಾರಣ ಸ್ವಾಮೀಜಿಯ ದೇಹವನ್ನು ಪೀಸ್ ಪೀಸ್ ಮಾಡಿ, ಕೈ, ಕಾಲು, ತಲೆ ಬೇರ್ಪಡಿಸಿ ಬಳಿಕ ಶವ ತಂದಿದ್ದ ಸೀರೆಯಲ್ಲಿಯೇ ಸುತ್ತಿ ಕೊಳವೆ ಬಾವಿಗೆ ಹಾಕಿದ್ದರು. ಇದನ್ನೂ ಓದಿ: ಜೈನಮುನಿ ಹತ್ಯೆ: ಅಘಾತ ವ್ಯಕ್ತಪಡಿಸಿದ ಸಿಎಂ – ಸಮಗ್ರ ತನಿಖೆಗೆ ಸೂಚನೆ
ಬೆಂಗಳೂರು: ಹಿರೇಕೋಡಿಯ ಜೈನಮುನಿ (Jain Muni) ಹತ್ಯೆ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ಆರೋಪಿಗಳಿಗೆ ನ್ಯಾಯಾಲಯದಲ್ಲಿ ಶಿಕ್ಷೆ ಆಗುವಂತೆ ಕಾನೂನು ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸೂಚಿಸಿದ್ದಾರೆ.
ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಅವರು, ಕಾನೂನುಬಾಹಿರ ಕೃತ್ಯ ಎಸಗುವವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಕಾನೂನು ಕೈಗೆತ್ತಿಕೊಳ್ಳುವ ಹಕ್ಕು ಯಾರಿಗೂ ಇಲ್ಲ. ತಪ್ಪು ಯಾರೇ ಮಾಡಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಖಟಕಬಾವಿ ಗದ್ದೆಯ ಕೊಳವೆಬಾವಿಯಲ್ಲಿ ಜೈನಮುನಿ ಮೃತದೇಹ ಪತ್ತೆ – ಪೀಸ್ ಪೀಸ್ ಮಾಡಿ ಎಸೆದ ಹಂತಕರು
ಈಗಾಗಲೇ ನಮ್ಮ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಯಾವುದೇ ಆರೋಪಿ ಕಾನೂನಿನಿಂದ ತಪ್ಪಿಸಿಕೊಳ್ಳಬಾರದು ಎಂದು ಖಡಕ್ ಎಚ್ಚರಿಕೆ ರವಾನಿಸಿದ್ದಾರೆ.
ಜುಲೈ 6ರಿಂದ ನಂದಿ ಪರ್ವತ (Nandi Parvatha Ashram) ಆಶ್ರಮದ ಜೈನಮುನಿಗಳು ನಾಪತ್ತೆಯಾಗಿದ್ದರು. ಸ್ವಾಮೀಜಿಯ ನಾಪತ್ತೆಯ ಕುರಿತು ಭಕ್ತರು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆ ತನಿಖೆ ಕೈಗೊಂಡ ಪೊಲೀಸರು ಅನುಮಾನದ ಮೇಲೆ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ವಿಚಾರಣೆ ವೇಳೆ ಸ್ವಾಮೀಜಿಯನ್ನು ಹತ್ಯೆ ಮಾಡಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ. ಜೈನಮುನಿಯ ಮೃತದೇಹವನ್ನು ಖಟಕಬಾವಿಯ ಗದ್ದೆಯಲ್ಲಿದ್ದ ತೆರೆದ ಕೊಳವೆಬಾವಿಗೆ ಹಾಕಿರುವುದಾಗಿ ಮಾಹಿತಿ ನೀಡಿದ್ದರು.
ಆರೋಪಿಗಳು ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ಶುಕ್ರವಾರ ರಾತ್ರಿಯಿಂದ ಖಟಕಬಾವಿಯಲ್ಲಿ ಶೋಧಕಾರ್ಯ ನಡೆಸಿದ್ದರು. ಸ್ವಾಮೀಜಿ ಮೃತದೇಹ ಪತ್ತೆಯಾಗದ ಹಿನ್ನೆಲೆ ಶನಿವಾರವೂ ಜೆಸಿಬಿ ಸಹಾಯದಿಂದ ಶೋಧ ಕಾರ್ಯ ಮುಂದುವರೆಸಿ ಕೊಳವೆ ಬಾವಿಯ 20 ಅಡಿ ಆಳದಲ್ಲಿ ಸ್ವಾಮೀಜಿ ಮೃತದೇಹ ಇರುವುದನ್ನು ಪತ್ತೆ ಹಚ್ಚಿದ್ದಾರೆ. ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಸುಧಾಕರ್ ಚಾಲೆಂಜ್ ಸ್ವೀಕರಿಸಿ ಪ್ರತಿ ಸವಾಲು ಎಸೆದ ಶಾಸಕ ಪ್ರದೀಪ್ ಈಶ್ವರ್
ಜುಲೈ 6ರಿಂದ ನಂದಿ ಪರ್ವತ ಆಶ್ರಮದ ಜೈನಮುನಿಗಳು ನಾಪತ್ತೆಯಾಗಿದ್ದು, ಸ್ವಾಮೀಜಿಯ ನಾಪತ್ತೆಯ ಕುರಿತು ಭಕ್ತರು ಚಿಕ್ಕೋಡಿ (Chikkodi) ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆ ತನಿಖೆ ಕೈಗೊಂಡ ಪೊಲೀಸರು ಅನುಮಾನದ ಮೇಲೆ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ವಿಚಾರಣೆ ವೇಳೆ ಸ್ವಾಮೀಜಿಯನ್ನು ಹತ್ಯೆ ಮಾಡಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದು, ಜೈನಮುನಿಯ ಮೃತದೇಹವನ್ನು ಖಟಕಬಾವಿಯ ಗದ್ದೆಯಲ್ಲಿದ್ದ ತೆರೆದ ಕೊಳವೆಬಾವಿಗೆ ಹಾಕಿರುವುದಾಗಿ ಮಾಹಿತಿ ನೀಡಿದ್ದರು. ಇದನ್ನೂ ಓದಿ: ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಜೈನಮುನಿ ಕೊಲೆ- ಆರೋಪಿಗಳಿಂದ ತಪ್ಪೊಪ್ಪಿಗೆ
ಆರೋಪಿಗಳು ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ಶುಕ್ರವಾರ ರಾತ್ರಿಯಿಂದ ಖಟಕಬಾವಿಯಲ್ಲಿ ಶೋಧಕಾರ್ಯ ನಡೆಸಿದ್ದರು. ಸ್ವಾಮೀಜಿ ಮೃತದೇಹ ಪತ್ತೆಯಾಗದ ಹಿನ್ನೆಲೆ ಶನಿವಾರವೂ ಜೆಸಿಬಿ ಸಹಾಯದಿಂದ ಶೋಧ ಕಾರ್ಯ ಮುಂದುವರೆಸಿದ್ದು, ಕೊಳವೆ ಬಾವಿಯ 20 ಅಡಿ ಆಳದಲ್ಲಿ ಸ್ವಾಮೀಜಿ ಮೃತದೇಹ ಪತ್ತೆಯಾಗಿದೆ. ಸ್ವಾಮೀಜಿಗೆ ಕರೆಂಟ್ ಶಾಕ್ (Current Shock) ನೀಡಿ ಹತ್ಯೆಗೈದ ಹಂತಕರು ಅವರ ಮೃತದೇಹವನ್ನು ಪೀಸ್ ಪೀಸ್ ಮಾಡಿ ಬಟ್ಟೆಯಲ್ಲಿ ಸುತ್ತಿ ಗಂಟುಕಟ್ಟಿ ಕೊಳವೆ ಬಾವಿಯಲ್ಲಿ ಎಸೆದಿದ್ದಾರೆ. ನಿರಂತರ 10 ಗಂಟೆಗಳ ಕಾರ್ಯಾಚರಣೆಯ ಬಳಿಕ ಕೊಳವೆಬಾವಿಯಲ್ಲಿ ಸ್ವಾಮೀಜಿ ಮೃತದೇಹವಿರುವ ಗಂಟು ಪತ್ತೆಯಾಗಿದ್ದು, ಎಸ್‌ಡಿಆರ್‌ಎಫ್ ಸಿಬ್ಬಂದಿ, ಎಫ್‌ಎಸ್‌ಎಲ್ ತಂಡದ ಸಹಾಯದೊಂದಿಗೆ ಪೊಲೀಸರು ಮೃತದೇಹವನ್ನು ಮೇಲಕ್ಕೆತ್ತುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಜೈನಮುನಿ ಹತ್ಯೆ ಪ್ರಕರಣ – ಸ್ವಾಮೀಜಿ ನೆನೆದು ಭಕ್ತರ ಕಣ್ಣೀರು, ಆಶ್ರಮದಲ್ಲಿ ನೀರವ ಮೌನ
ಹಣಕಾಸಿನ (Money) ವಿಚಾರವಾಗಿ ಸ್ವಾಮೀಜಿಯನ್ನು ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡ ಆರೋಪಿಗಳು, ಅವರ ಮೃತದೇಹವನ್ನು ಸುಮಾರು 400 ಅಡಿ ಉದ್ದದ ಕೊಳವೆ ಬಾವಿಯಲ್ಲಿ ಎಸೆದಿರುವುದಾಗಿ ಮಾಹಿತಿಯನ್ನು ನೀಡಿದ್ದರು. ಈ ಹಿನ್ನೆಲೆ 400 ಅಡಿ ಉದ್ದದ ಕೊಳವೆಬಾವಿಯಲ್ಲಿ 40 ಅಡಿಗೆ ಕೇಸಿಂಗ್ ಪೈಪ್ ಅಳವಡಿಸಿದ್ದು, ಸುಮಾರು 20 ಅಡಿ ಆಳದಲ್ಲಿ ಪತ್ತೆಯಾದ ಸ್ವಾಮೀಜಿ ಮೃತದೇಹವನ್ನು ಹೊರತೆಗೆಯಲಾಗಿದೆ. ಇದನ್ನೂ ಓದಿ: ಚಿಕ್ಕೋಡಿಯಲ್ಲಿ ನಾಪತ್ತೆಯಾಗಿದ್ದ ಜೈನಮುನಿ ಹತ್ಯೆ – ಭಕ್ತರ ದೂರಿನ ಬಳಿಕ ಪ್ರಕರಣ ಬೆಳಕಿಗೆ
ಚಿಕ್ಕೋಡಿ: ಹೀರೆಕುಡಿ (Hirekudi) ನಂದಿ ಪರ್ವತ ಆಶ್ರಮದ (Nandi Parvatha Ashram) ಜೈನಮುನಿ (Jain Muni) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೊಟ್ಟ ಹಣ (Money) ವಾಪಸ್ ಕೇಳಿದ್ದಕ್ಕಾಗಿ ಹತ್ಯೆ ಮಾಡಲಾಗಿದೆ ಎಂದು ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.
ಈ ಕುರಿತು ಖಟಕಬಾವಿ ಗ್ರಾಮದಲ್ಲಿ ಹೇಳಿಕೆ ನೀಡಿದ ಎಸ್ಪಿ ಸಂಜೀವ್ ಪಾಟೀಲ್, ಬುಧವಾರ ರಾತ್ರಿಯಿಂದ ಸ್ವಾಮೀಜಿ ನಾಪತ್ತೆಯಾಗಿದ್ದರು ಎಂದು ಭಕ್ತರು ದೂರು ನೀಡಿದ್ದರು. ಭಕ್ತರ ದೂರಿನ ಮೇರೆಗೆ ತನಿಖೆ ಕೈಗೊಳ್ಳಲಾಗಿದೆ. ತನಿಖೆ ವೇಳೆ ಆಶ್ರಮಕ್ಕೆ ಯಾರು ಬಂದು ಹೋಗಿದ್ದರು ಎಂಬ ಬಗ್ಗೆ ವಿಚಾರಣೆ ನಡೆಸಿದ್ದು, ಸ್ವಾಮೀಜಿಗೆ ಪರಿಚಯವಿದ್ದ ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಿದೆವು. ಈ ಸಂದರ್ಭದಲ್ಲಿ ಆತ ಆಶ್ರಮದಲ್ಲಿ ಹತ್ಯೆ ಮಾಡಿ ಖಟಕಬಾವಿ ಗದ್ದೆಯಲ್ಲಿ ತೆರೆದ ಕೊಳವೆ ಬಾವಿಯಲ್ಲಿ ಮೃತದೇಹ ಎಸೆದ ಬಗ್ಗೆ ಮಾಹಿತಿ ನೀಡಿದ್ದಾನೆ ಎಂದು ತಿಳಿಸಿದರು. ಇದನ್ನೂ ಓದಿ: ಜೈನಮುನಿ ಹತ್ಯೆ ಪ್ರಕರಣ – ಸ್ವಾಮೀಜಿ ನೆನೆದು ಭಕ್ತರ ಕಣ್ಣೀರು, ಆಶ್ರಮದಲ್ಲಿ ನೀರವ ಮೌನ
ಸ್ವಾಮೀಜಿಯ ಹತ್ಯೆಗೆ ಸಹಕಾರ ನೀಡಿದ ಇಬ್ಬರನ್ನು ಬಂಧಿಸಿದ್ದೇವೆ. ವಿಚಾರಣೆ ಸಂದರ್ಭದಲ್ಲಿ ಹಣ ವಾಪಸ್ ಕೇಳಿದ್ದಕ್ಕೆ ಕೊಲೆ ಮಾಡಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಸಾಕ್ಷ್ಯಾಧಾರ ಕಲೆಹಾಕಿ ನ್ಯಾಯಾಲಯಕ್ಕೆ ನೀಡಬೇಕಿರುವ ಹಿನ್ನೆಲೆ ಸದ್ಯಕ್ಕೆ ಕಾರ್ಯಾಚರಣೆ ಸ್ಥಳದಲ್ಲಿ ಯಾರಿಗೂ ಪ್ರವೇಶವಿಲ್ಲ. ಪ್ರಕರಣದ ತನಿಖೆ ಮುಂದುವರಿದಿದೆ. ಬೇರೆ ವ್ಯವಹಾರ ಏನಾದರೂ ಇತ್ತಾ ಎಂಬ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ವೈಯಕ್ತಿಕ ಕಾರಣಕ್ಕೆ ಹತ್ಯೆ ನಡೆದಿದೆ. ಆರೋಪಿಗಳು ಹೇಳಿದ ಹಲವು ಪ್ರದೇಶಗಳಲ್ಲಿ ಶೋಧ ಮಾಡಿದ್ದೇವೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಚಿಕ್ಕೋಡಿಯಲ್ಲಿ ನಾಪತ್ತೆಯಾಗಿದ್ದ ಜೈನಮುನಿ ಹತ್ಯೆ – ಭಕ್ತರ ದೂರಿನ ಬಳಿಕ ಪ್ರಕರಣ ಬೆಳಕಿಗೆ
ಹತ್ಯೆಯ ಬಗ್ಗೆ ಆರೋಪಿಗಳು ನೀಡಿರುವ ಮಾಹಿತಿಯ ಮೇರೆಗೆ ಬೆಳಗಾವಿ (Belagavi) ಜಿಲ್ಲೆ ರಾಯಬಾಗ ತಾಲೂಕಿನ ಖಟಕಬಾವಿ – ಮುಗಳಖೋಡ ರಸ್ತೆಯ ಪಕ್ಕದ ಗದ್ದೆಯಲ್ಲಿ ಮೃತದೇಹಕ್ಕಾಗಿ ಜೆಸಿಬಿಗಳ ಸಹಾಯದಿಂದ ಶೋಧಕಾರ್ಯ ಮುಂದುವರಿದಿದೆ. ಭಕ್ತರು ದೂರು ನೀಡಿದ ನಾಲ್ಕೇ ಗಂಟೆಗಳಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ದು, ವಿಚಾರಣೆ ವೇಳೆ ಜೈನಮುನಿ ಹತ್ಯೆ ಪ್ರಕರಣ ಬಯಲಾಗಿದೆ. ಇದನ್ನೂ ಓದಿ: ವ್ಯಕ್ತಿಯ ಮೇಲೆ ಮೂತ್ರ ಮಾಡಿದ್ದು RSS ಕಾರ್ಯಕರ್ತವೆಂದ ಗಾಯಕಿ ವಿರುದ್ಧ FIR!
ಚಿಕ್ಕೋಡಿ (ಬೆಳಗಾವಿ): ಹೀರೆಕುಡಿ (Hirekudi) ನಂದಿ ಪರ್ವತ ಆಶ್ರಮದಿಂದ (Nandi Parvatha Ashram) ನಾಪತ್ತೆಯಾಗಿದ್ದ ಜೈನಮುನಿ (Jain Muni) ಬರ್ಬರವಾಗಿ ಹತ್ಯೆಯಾಗಿದ್ದು, ಸುದ್ದಿ ತಿಳಿದ ಭಕ್ತರು (Devotees) ಸ್ವಾಮೀಜಿಯನ್ನು ನೆನೆದು ಕಣ್ಣೀರು ಹಾಕುತ್ತಿದ್ದಾರೆ. ಸ್ವಾಮಿಜಿ ಹತ್ಯೆಯಿಂದ ನಿತ್ಯ ಭಕ್ತರಿಂದ ತುಂಬಿ ತುಳುಕುತ್ತಿದ್ದ ಆಶ್ರಮದಲ್ಲಿ ಇಂದು (ಶನಿವಾರ) ನೀರವ ಮೌನ ಆವರಿಸಿದೆ.
ಜುಲೈ 6ರಂದು ಹೀರೆಕುಡಿಯ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ನಂದಿ ಪರ್ವತ ಆಶ್ರಮದಿಂದ ನಾಪತ್ತೆಯಾಗಿದ್ದರು. ನಾಪತ್ತೆಯಾದ ಹಿನ್ನೆಲೆ ಭಕ್ತರು ಆಶ್ರಮದ ಸುತ್ತಮುತ್ತ ಸ್ವಾಮೀಜಿಗಾಗಿ ಹುಡುಕಾಡಿದ್ದು, ಎಲ್ಲಿಯೂ ಪತ್ತೆಯಾಗದ ಹಿನ್ನೆಲೆ ಚಿಕ್ಕೋಡಿ (Chikkodi) ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆ ತನಿಖೆ ಕೈಗೊಂಡ ಪೊಲೀಸರು ಅನುಮಾನದ ಮೇಲೆ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ರಹಸ್ಯ ಬಯಲಾಗಿದೆ. ಇದನ್ನೂ ಓದಿ: ಚಿಕ್ಕೋಡಿಯಲ್ಲಿ ನಾಪತ್ತೆಯಾಗಿದ್ದ ಜೈನಮುನಿ ಹತ್ಯೆ – ಭಕ್ತರ ದೂರಿನ ಬಳಿಕ ಪ್ರಕರಣ ಬೆಳಕಿಗೆ
ಕಳೆದ 15 ವರ್ಷಗಳಿಂದ ನಂದಿ ಪರ್ವತ ಆಶ್ರಮದಲ್ಲಿ ವಾಸವಿದ್ದ ಜೈನಮುನಿಗೆ ಅವರ ಸೇವಕಿ ಕುಸುಮಾ ಗೌರಾಜ್ ನಿತ್ಯ ಆಹಾರದ ವ್ಯವಸ್ಥೆ ಮಾಡುತ್ತಿದ್ದರು. ಸ್ವಾಮೀಜಿಯ ಹತ್ಯೆಯ ಸುದ್ದಿ ಬಳಿಕ ಕುಸುಮಾ ಗೌರಾಜ್ ಅವರನ್ನು ನೆನೆದು ಬಿಕ್ಕಿ ಬಿಕ್ಕಿ ಅಳುತ್ತಿದ್ದಾರೆ. ಇತ್ತ ಕೊಲೆ ರಹಸ್ಯ ಬಾಯ್ಬಿಟ್ಟ ಆರೋಪಿಗಳು ಸ್ವಾಮಿಜಿಯ ಶವವನ್ನು ರಾಯಬಾಗ ತಾಲೂಕಿನ ಖಟಕಬಾವಿ ಗ್ರಾಮದ ಹೊರವಲಯದ ತೆರೆದ ಕೊಳವೆ ಬಾವಿಗೆ ಹಾಕಿರುವುದಾಗಿ ಮಾಹಿತಿ ನೀಡಿದ್ದಾರೆ. ಮಾಹಿತಿ ದೊರೆತ ಹಿನ್ನೆಲೆ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹಕ್ಕಾಗಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಮೆಟ್ರೋ ಕಾಮಗಾರಿ ವೇಳೆ ಕ್ರೇನ್ ಪಲ್ಟಿ- ಸಿಲ್ಕ್ ಬೋರ್ಡ್ ಬಳಿ ತಪ್ಪಿದ ಅನಾಹುತ
ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಖಟಕಬಾವಿ ಗ್ರಾಮದಲ್ಲಿ ಶೋಧಕಾರ್ಯ ಮುಂದುವರಿಯುತ್ತಿರುವ ಹಿನ್ನೆಲೆ ಗದ್ದೆಗೆ ತೆರಳುವ ಎರಡೂ ಬದಿಯಲ್ಲಿ ಬ್ಯಾರಿಕೇಡ್ ಹಾಕಿ ರಸ್ತೆ ಸಂಪರ್ಕವನ್ನು ಕಡಿತಗೊಳಿಸಲಾಗಿದೆ. ಖಟಕಬಾವಿ – ಮುಗಳಖೋಡ ರಸ್ತೆಯನ್ನು ಬಂದ್ ಮಾಡಿರುವ ಪೊಲೀಸರು ಶೋಧಕಾರ್ಯವನ್ನು ಮುಂದುವರಿಸುತ್ತಿದ್ದಾರೆ. ಕಾರ್ಯಾಚರಣೆ ಸ್ಥಳದಲ್ಲಿ ಸಾರ್ವಜನಿಕರು ಮತ್ತು ಮಾಧ್ಯಮಗಳಿಗೆ ನಿರ್ಬಂಧ ಹೇರಿದ್ದು, ಎಸ್‌ಪಿ ಡಾ.ಸಂಜೀವ್ ಪಾಟೀಲ್ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ಇದನ್ನೂ ಓದಿ: ಎಣ್ಣೆ ಏಟಿನಲ್ಲಿ ಪತಿ ಪ್ರತಿನಿತ್ಯ ಜಗಳ- ನೇಣಿಗೆ ಕೊರಳೊಡ್ಡಿದ ಪತ್ನಿ
ಚಿಕ್ಕೋಡಿ (ಬೆಳಗಾವಿ): ಹೀರೆಕುಡಿ (Hirekudi) ಗ್ರಾಮದಿಂದ ನಾಪತ್ತೆಯಾಗಿದ್ದ ಜೈನಮುನಿಯನ್ನು (Jain Muni) ಬರ್ಬರವಾಗಿ ಹತ್ಯೆಗೈದಿದ್ದು, ಭಕ್ತರ ದೂರಿನ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಈ ಹಿನ್ನೆಲೆ ತನಿಖೆ ಕೈಗೊಂಡ ಪೊಲೀಸರು ಅನುಮಾನದ ಮೇಲೆ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದಿದ್ದಾರೆ.
ಜಿಲ್ಲೆಯ ಹೀರೆಕುಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನ ಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ಬರ್ಬರವಾಗಿ ಹತ್ಯೆಯಾಗಿದ್ದಾರೆ. ಕಳೆದ 15 ವರ್ಷಗಳಿಂದ ನಂದಿ ಪರ್ವತ ಆಶ್ರಮದಲ್ಲಿ ವಾಸವಿದ್ದ ಇವರು ಜುಲೈ 6ರಿಂದ ಆಶ್ರಮದಿಂದ ನಾಪತ್ತೆಯಾಗಿದ್ದರು. ಈ ಕುರಿತು ಜುಲೈ 6ರಂದು ಭಕ್ತರು ಆಶ್ರಮದ ಸುತ್ತಮುತ್ತ ಶೋಧ ನಡೆಸಿದ್ದರು. ಇದನ್ನೂ ಓದಿ: ದೊಡ್ಡಪ್ಪನ ಮಗಳಿಗೆ ಲೈಂಗಿಕ ದೌರ್ಜನ್ಯ: ಯುವಕನಿಗೆ 20 ವರ್ಷ ಕಠಿಣ ಶಿಕ್ಷೆ
ಎಲ್ಲಿಯೂ ಪತ್ತೆಯಾಗದ ಹಿನ್ನೆಲೆ ಶುಕ್ರವಾರ ಚಿಕ್ಕೋಡಿ (Chikkodi) ಪೊಲೀಸ್ ಠಾಣೆಗೆ ಜೈನಮುನಿ ನಾಪತ್ತೆಯಾದ ಬಗ್ಗೆ ದೂರು ನೀಡಲಾಗಿತ್ತು. ಆಚಾರ್ಯ ಕಾಮಕುಮಾರನಂದಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಭೀಮಪ್ಪ ಉಗಾರೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದರು. ತನಿಖೆ ಸಂದರ್ಭ ಅನುಮಾನದ ಮೇಲೆ ಇಬ್ಬರನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ವೇಳೆ ಜೈನಮುನಿ ಹತ್ಯೆಯ ರಹಸ್ಯ ಬಯಲಾಗಿದೆ. ಇದನ್ನೂ ಓದಿ: ಬೀದರ್ ಪೊಲೀಸರ ದಾಳಿ – 50 ಲಕ್ಷ ರೂ. ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಅರೆಸ್ಟ್
ಆರೋಪಿಗಳು ಹತ್ಯೆ ಮಾಡಿರುವ ಬಗ್ಗೆ ಪೊಲೀಸರ ಬಳಿ ಬಾಯ್ಬಿಟ್ಟಿದ್ದು, ಕೊಲೆ ಮಾಡಿದ ಬಳಿಕ ಶವವನ್ನು ಎಲ್ಲಿ ಬಿಸಾಕಿದ್ದಾರೆ ಎನ್ನುವ ಬಗ್ಗೆ ಸರಿಯಾದ ಮಾಹಿತಿ ನೀಡದೆ ಪೊಲೀಸರನ್ನು ಸತಾಯಿಸಿದ್ದಾರೆ. ಒಂದು ಬಾರಿ ಕೊಲೆ ಮಾಡಿ ಮೃತದೇಹವನ್ನು ಕತ್ತರಿಸಿ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಖಟಕಬಾವಿ ಗ್ರಾಮದ ಗದ್ದೆಯ ತೆರೆದ ಕೊಳವೆ ಬಾವಿಯಲ್ಲಿ ಎಸೆದಿದ್ದೇವೆ ಎಂದ ಆರೋಪಿಗಳು ಮತ್ತೊಂದು ಬಾರಿ ಮೃತದೇಹವನ್ನು ಬಟ್ಟೆಯಲ್ಲಿ ಸುತ್ತಿ ನದಿಗೆ ಎಸೆದಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ವಿದೇಶಿ ಮಹಿಳೆಯರಿಂದ ಪಿಎಸ್‍ಐ ಸೇರಿ ನಾಲ್ವರ ಮೇಲೆ ಹಲ್ಲೆ
ಸ್ಪಷ್ಟ ಮಾಹಿತಿ ದೊರೆಯದ ಹಿನ್ನೆಲೆ ನಂದಿ ಮಹಾರಾಜರ ಮೃತದೇಹಕ್ಕಾಗಿ ಪೊಲೀಸರು ರಾತ್ರಿಯಿಡೀ ಶೋಧ ನಡೆಸಿದ್ದಾರೆ. ಖಟಕಬಾವಿ ಗ್ರಾಮ ಸೇರಿದಂತೆ ಹಲವೆಡೆ ಶೋಧ ನಡೆಸಿದ ಪೊಲೀಸರು ಮೃತದೇಹ ಸಿಗದ ಕಾರಣ ಶನಿವಾರ ಬೆಳಗ್ಗೆ 6:30ರಿಂದ ಶೋಧ ಕಾರ್ಯ ನಡೆಸಲು ಮುಂದಾಗಿದ್ದಾರೆ. ಇದನ್ನೂ ಓದಿ: ಗುಂಡು ಹಾರಿಸಿಕೊಂಡು ಕೊಯಮತ್ತೂರು ಡಿಐಜಿ ಆತ್ಮಹತ್ಯೆ
ಚಿಕ್ಕೋಡಿ (ಬೆಳಗಾವಿ): ಯಮಸಲ್ಲೇಖನ ವ್ರತ ಕೈಗೊಂಡಿದ್ದ ರಾಷ್ಟ್ರಸಂತ, ಜೈನ ಮುನಿ ಚಿನ್ಮಯಸಾಗರ ಮಹಾರಾಜರು ದೇಹತ್ಯಾಗ ಮಾಡಿದ್ದಾರೆ.
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜುಗುಳ ಗ್ರಾಮದಲ್ಲಿ ಚಿನ್ಮಯಸಾಗರ ಮಹಾರಾಜರು ಸೆಪ್ಟೆಂಬರ್ 19ರಿಂದ ಅಕ್ಟೋಬರ್ 12 ರವರೆಗೆ ಊಟ ತ್ಯಜಿಸಿ ನೀರು ಮಾತ್ರ ಸೇವಿಸುತ್ತಿದ್ದರು. ವಿಜಯದಶಮಿ ದಿನದಂದು ಕೊನೆಯ ಉಪದೇಶ ನೀಡಿದ್ದ ಚಿನ್ಮಯಸಾಗರ ಮಹಾರಾಜರು, ‘ಮನುಷ್ಯ ಜೀವಿಯು ತನ್ನ ದುರಾಚಾರಗಳೊಂದಿಗೆ ಹೋರಾಡಿ ವಿಜಯ ಸಾಧಿಸಿ ಭಗವಂತನಾಗಲು ಪ್ರಯತ್ನಿಸಬೇಕು’ ಎಂದು ತಮ್ಮ ಕೊನೆಯ ಉಪದೇಶ ನೀಡಿದ್ದರು.
ಚಿನ್ಮಯಸಾಗರ ಮಹಾರಾಜರು ಅಕ್ಟೋಬರ್ 12ರಿಂದ ನೀರು ಸೇವನೆಯನ್ನು ನಿಲ್ಲಿಸಿ ಯಮಸಲ್ಲೇಖನ ವ್ರತ ಸ್ವೀಕರಿಸಿದ್ದರು. ರಾಷ್ಟ್ರಸಂತ ಚಿನ್ಮಯಸಾಗರ ಮಹಾರಾಜರು ದೇಹತ್ಯಾಗ ಮಾಡಿದ ಸುದ್ದಿ ಕೇಳಿ ಅಪಾರ ಸಂಖ್ಯೆಯ ಭಕ್ತ ಸಮೂಹ ದರ್ಶನಕ್ಕೆ ಜುಗೂಳ ಗ್ರಾಮಕ್ಕೆ ಆಗಮಿಸುತ್ತಿದ್ದಾರೆ.
ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಸೋಮವಾರ ಜುಗುಳ ಗ್ರಾಮಕ್ಕೆ ಭೇಟಿ ನೀಡಿ, ಚಿನ್ಮಯಸಾಗರ ಮಹಾರಾಜರ ದರ್ಶನ ಪಡೆದಿದ್ದರು. ಈ ವೇಳೆ ಮಾತನಾಡಿ, ಮುನಿ ಮಹಾರಾಜರು ತಮ್ಮ ಜೀವನದುದ್ದಕ್ಕೂ ಅಹಿಂಸಾ ತತ್ವಗಳನ್ನು ಸಾರಿ ಹೇಳುತ್ತಾ ದುಷ್ಟ ಚಟಗಳಿಗೆ ಅಂಟಿಕೊಂಡ ಅನೇಕರಿಗೆ ಬೋಧನೆ ಮಾಡಿ, ಅದರಿಂದ ಮುಕ್ತಗೊಳಿಸಿದ್ದಾರೆ. ಸರ್ಕಾರ ಈ ಸೇವೆ ಕಂಡು ಡಾಕ್ಟರೇಟ್ ಪದವಿ ನೀಡಿದೆ. ಅವರು ಒಬ್ಬ ಮಹಾನ್ ಸಂತ. ಚಿನ್ಮಯಸಾಗರ ಮಹಾರಾಜರ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಆರ್ಥಿಕ ನೆರವು ನೀಡಲಿದೆ ಎಂದು ಸವದಿ ಹೇಳಿದ್ದರು.
ಭೋಪಾಲ್: ಇಂದು ಸಮಾಜದಲ್ಲಿ ನಡೆಯುತ್ತಿರುವ ಅಪರಾಧ ಘಟನೆಗಳಲ್ಲಿ ಶೇ.95 ರಷ್ಟು ಮಹಿಳೆಯರ ತಪ್ಪಿದೆ ಎಂದು ಜೈನ ಮುನಿಗಳಾದ ವಿಶ್ರಾಂತ್ ಸಾಗರ್ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ.
ಜೈನ ಮುನಿಗಳಾದ ಮಧ್ಯ ಪ್ರದೇಶ ರಾಜ್ಯದ ಸಿಕಾರ ಜಿಲ್ಲೆಯ ಮುಖ್ಯಾಲಯದಲ್ಲಿ ಚತುರ್ಮಾಸ ಆಚರಣೆಯಲ್ಲಿ ತೊಡಗಿಕೊಂಡಿದ್ದಾರೆ. ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂದು ಹುಡುಗಿಯರು ಸಮಾಜದಲ್ಲಿ ಅತ್ಯಂತ ಎಚ್ಚರಿಕೆಯಿಂದಿರಬೇಕು. ಹೆತ್ತ ಮನೆ ಮತ್ತು ಕೊಟ್ಟ ಮನೆಗೆ ಗೌರವ ತರುವ ಜವಾಬ್ದಾರಿ ಅವರ ಮೇಲಿದ್ದು, ಸುಸಂಸ್ಕೃತರಾಗಿ ಜೀವನ ನಡೆಸಬೇಕಿದೆ.
ಇಂದು ದೇಶದಲ್ಲಿ ನಡೆಯುತ್ತಿರುವ ಹೆಚ್ಚಿನ ಅಹಿತಕರ ಘಟನೆಗಳಿಗೆ ಶೇ.95 ರಷ್ಟು ಮಹಿಳೆಯರೇ ಕಾರಣ. ಮಹಿಳೆಯರಿಗೆ ಸಂಬಂಧಿಸಿದಂತೆ ಹೆಚ್ಚಿನ ಸಂಖ್ಯೆಯಲ್ಲಿಯೇ ಅಹಿತಕರ ಘಟನೆಗಳು ನಡೆಯುತ್ತಿವೆ. ಇಂದಿನ ಯುವತಿಯರು ಪಾಶ್ಚಾತ್ಯ ಸಂಸ್ಕೃತಿಯ ಪ್ರಭಾವಕ್ಕೆ ಒಳಗಾಗಿ, ದೇಶದ ಪರಂಪರೆಯನ್ನು ಮರೆಯುತ್ತಿದ್ದಾರೆ. ಈ ಕಾರಣದಿಂದಲೇ ದೇಶದಲ್ಲಿ ಶಾಂತಿ ಕದಡುವ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಹೇಳುವ ಮೂಲಕ ಹೊಸ ವಿವಾದಕ್ಕೊಂದು ಜೈನ ಮುನಿಗಳು ನಾಂದಿ ಹಾಡಿದ್ದಾರೆ.