Tag: Jaipur

  • ಕೊರೊನಾ ಗೆದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ಕಾಂಗ್ರೆಸ್ ಶಾಸಕ ನಿಧನ

    ಕೊರೊನಾ ಗೆದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ಕಾಂಗ್ರೆಸ್ ಶಾಸಕ ನಿಧನ

    ಜೈಪುರ: ರಾಜಸ್ಥಾನ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಶಾಸಕ ಕೈಲಾಶ್ ಚಂದ್ರ ತ್ರಿವೇದಿ (65) ಇಂದು ನಿಧನರಾಗಿದ್ದಾರೆ.

    ಇತ್ತೀಚೆಗೆ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದ ಅವರು ಮತ್ತೆ ಅನಾರೋಗ್ಯಕ್ಕೆ ಒಳಗಾಗಿದ್ದರು. ಶ್ವಾಸಕೋಶದ ಅನಾರೋಗ್ಯದ ಸಮಸ್ಯೆಯಿಂದ ಬಳಲಿ ಕೈಲಾಶ್ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

    ಅನಾರೋಗ್ಯದಿಂದ ಬಳಲುತ್ತಿದ್ದ ಕೈಲಾಶ್ ಅವನ್ನು ಅಕ್ಟೋಬರ್ 2 ಏರ್ ಆಂಬುಲೆನ್ಸ್ ಮೂಲಕ ಗುರುಗ್ರಾಮದ ವೇದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಕಾರಿ ಆಗದೇ ಅಕ್ಟೋಬರ್ 5ರ ಮಧ್ಯರಾತ್ರಿ ಸಾವನ್ನಪ್ಪಿದ್ದರು. ಕಳೆದ ಒಂದು ತಿಂಗಳ ಹಿಂದೆ ಕೈಲಾಶ್ ಅವರು ಕೊರೊನಾ ಸೋಂಕಿಗೆ ತುತ್ತಾಗಿದ್ದರು.

    ಮೂರು ಬಾರಿ ಸಹಾರಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದರು. ಇವರ ಕುಟುಂಬ ಸದಸ್ಯರಲ್ಲಿ ಹೆಚ್ಚಿನವರು ಪಂಚಾಯಿತ್ ರಾಜ್ ಸಂಸ್ಥೆಗಳಿಗೆ ಆಯ್ಕೆಯಾದರು. ಇವರ ತಂದೆ ಭನ್ವರ್ ಲಾಲ್ ತ್ರಿವೇದಿ ರಾಯ್ಪುರದ ಪಂಚಾಯತ್ ಸಮಿತಿಗೆ ಆಯ್ಕೆಯಾಗಿದ್ದರು. ತಂದೆಯ ಬಳಿಕ ಕೈಲಾಶ್ ಅವರು ಪಂಚಾಯತ್ ಸಮಿತಿ ಅಧ್ಯಕ್ಷರಾಗಿದ್ದರು. 2003ರಲ್ಲಿ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಪಡೆದಿದ್ದರು. 2ನೇ ಬಾರಿ ಚುನಾವಣೆಯಲ್ಲಿ ಸೋಲುಂಡಿದ್ದ ಅವರು 2013 ಮತ್ತು 2018 ರಲ್ಲಿ ಎರಡು ಬಾರಿ ಗೆಲುವು ಪಡೆದಿದ್ದರು.

    ತ್ರಿವೇದಿ ಅವರ ಸಾವಿಗೆ ಸಿಎಂ ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಕಷ್ಟದ ಸಂದರ್ಭದಲ್ಲಿ ಅವರ ಕುಟುಂಬ ಸದಸ್ಯರು, ಬೆಂಬಲಿಗರಿಗೆ ಸೋವು ಭರಿಸುವ ಶಕ್ತಿ ನೀಡಲಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಬರೆದುಕೊಂಡಿದ್ದಾರೆ.

  • ಅಸೂಯೆಯಿಂದ ಗೆಳತಿಯನ್ನೇ ಕೊಂದ ಪಾಗಲ್ ಪ್ರೇಮಿ

    ಅಸೂಯೆಯಿಂದ ಗೆಳತಿಯನ್ನೇ ಕೊಂದ ಪಾಗಲ್ ಪ್ರೇಮಿ

    – ಪರೀಕ್ಷೆ ಬರೆದು ವಾಪಸ್ ಹೋಗುವಾಗ ಘಟನೆ
    – ಬೇರೆ ಯುವಕನ ಜೊತೆ ಇದ್ದುದ್ದೆ ತಪ್ಪಾಯ್ತು

    ಜೈಪುರ: ಯುವಕನೊಬ್ಬ ಅಸೂಯೆಯಿಂದ ತನ್ನ ಪ್ರಿಯತಮೆಗೆ ಚಾಕುವಿನಿಂದ ಇರಿದು ನಂತರ ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

    ಜೈಪುರದ ಯುವಕ ತನ್ನ ಗೆಳತಿಯನ್ನೇ ಕೊಲೆ ಮಾಡಿದ್ದಾನೆ. ತನ್ನ ಪ್ರೇಯಸಿ ಇನ್ನೊಬ್ಬ ಯುವಕನ ಜೊತೆ ಇದ್ದ ವಿಚಾರವನ್ನು ತಿಳಿದು  ಕೋಪಗೊಂಡ  ಆರೋಪಿ ಗೆಳತಿಯ ಮೇಲೆ ಹಲ್ಲೆ ನಡೆಸಿದ್ದಾನೆ.

    ಮೃತ ಯುವತಿ ಪರೀಕ್ಷೆಗೆ ಹಾಜರಾಗಿ ಮನೆಗೆ ವಾಪಸ್ ಹಿಂದಿರುಗುತಿದ್ದಾಗ ಈ ಘಟನೆ ನಡೆದಿದೆ. ಸೋಶಿಯಲ್ ಮೀಡಿಯಾದಲ್ಲಿ ಯುವತಿಯನ್ನು ಕರೆದುಕೊಂಡು ಹೋಗುತ್ತಿರುವ ವಿಡಿಯೋ ಹರಿದಾಡುತ್ತಿದೆ. ದ್ವಿಚಕ್ರ ವಾಹನದಲ್ಲಿ ಇಬ್ಬರು ಹುಡುಗರ ಮಧ್ಯದಲ್ಲಿ ಹುಡುಗಿ ಕುಳಿತಿರುವುದನ್ನು ಕಾಣಬಹುದಾಗಿದೆ. ಆದರೆ ಈ ವೇಳೆ ಹುಡುಗಿ ಪ್ರಜ್ಞಾಹೀನಳಾಗಿ ಬಿದ್ದಿರುವುದನ್ನು ವಿಡಿಯೋದಲ್ಲಿ ಕಾಣಹುದಾಗಿದೆ.

    ಆರೋಪಿ ಮೊದಲು ಯುವತಿಗೆ ಚಾಕುವಿನಿಂದ ಇರಿದಿದ್ದಾನೆ. ನಂತರ ಹತ್ತಿರದಿಂದ ಆಕೆಯ ತಲೆಗೆ ಗುಂಡು ಹಾರಿಸಿದ್ದಾನೆ. ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ. ಗೆಳತಿ ಬೇರೆ ಯುವಕನ ಜೊತೆ ಇದ್ದುದ್ದನ್ನು ನೋಡಿ ಅಸೂಯೆಯಿಂದ ಆರೋಪಿ ಈ ಕೃತ್ಯ ಎಸಗಿದ್ದಾನೆ.

    ಸದ್ಯಕ್ಕೆ ಪೊಲೀಸರು ವಿಡಿಯೋ ಆಧಾರದ ಮೇರೆಗೆ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಆದರೆ ಯಾರೂ ಕೂಡ ಇದುವರೆಗೂ ಕೊಲೆ ಪ್ರಕರಣವನ್ನು ದಾಖಲಿಸಿಲ್ಲ ಎಂದು ವರದಿಯಾಗಿದೆ.

  • ಕತ್ತು ಹಿಸುಕಿ ಪತಿಯ ಕೊಲೆ – ಹಾಸಿಗೆ ಕೆಳಗೆ ಮೃತದೇಹ ಬಚ್ಚಿಟ್ಟ ಪತ್ನಿ

    ಕತ್ತು ಹಿಸುಕಿ ಪತಿಯ ಕೊಲೆ – ಹಾಸಿಗೆ ಕೆಳಗೆ ಮೃತದೇಹ ಬಚ್ಚಿಟ್ಟ ಪತ್ನಿ

    – 28 ಗಂಟೆಯ ನಂತ್ರ ಪೊಲೀಸರಿಗೆ ಫೋನ್ ಮಾಡಿದ ಪತ್ನಿ

    ಜೈಪುರ: ಮಹಿಳೆಯೊಬ್ಬಳು ತನ್ನ ಪತಿಯನ್ನು ಕೊಲೆ ಮಾಡಿ ಮೃತದೇಹವನ್ನು ಹಾಸಿಗೆಯ ಕೆಳಗೆ ಸುಮಾರು 28 ಗಂಟೆಗಳ ಕಾಲ ಬಚ್ಚಿಟ್ಟಿದ್ದ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

    ಈ ಘಟನೆ ರಾಜಸ್ಥಾನದ ಹಮಿರ್ವಾಸ್ ಪಟ್ಟಣದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ನಿರ್ಮಲ್ ಸಿಂಗ್ ಎಂದು ಗುರುತಿಸಲಾಗಿದೆ. 28 ಗಂಟೆಗಳ ನಂತರ ಮಹಿಳೆ ಪೊಲೀಸರಿಗೆ ಫೋನ್ ಮಾಡಿ ನಡೆದ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾಳೆ.

    ನಿರ್ಮಲ್ ಸಿಂಗ್ ಮೃತದೇಹವು ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ಆರೋಪಿ ನೀರಜಾ ಪೊಲೀಸರಿಗೆ ಫೋನ್ ಮಾಡಿ ಪತಿಯ ಕೊಲೆಯ ಬಗ್ಗೆ ತಿಳಿಸಿದ್ದಾಳೆ. ನಿರ್ಮಲ್ ಸಿಂಗ್ ಮತ್ತು ನೀರಜಾಗೆ ಅನೇಕ ವರ್ಷಗಳ ಹಿಂದೆ ಮದುವೆಯಾಗಿದ್ದು, ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

    ದಂಪತಿ ಮಧ್ಯೆ ಆಗಾಗ ಜಗಳ ನಡೆಯುತ್ತಿತ್ತು. ಅದರಂತೆಯೇ ಎರಡು ದಿನಗಳ ಹಿಂದೆ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಇದರಿಂದ ಕೋಪಗೊಂಡ ಆರೋಪಿ ನೀರಜಾ ಪತಿಯ ಕತ್ತನ್ನು ಹಗ್ಗದಿಂದ ಹಿಸುಕಿ ಕೊಲೆ ಮಾಡಿದ್ದಾಳೆ. ಪತಿಯನ್ನು ಕೊಲೆ ಮಾಡಿದ ನಂತರ ಮೃತದೇಹವನ್ನು ಹಾಸಿಗೆಯ ಕೆಳಗೆ ಬಚ್ಚಿಟ್ಟಿದ್ದಾಳೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಮೊದಲಿಗೆ ಸಿಂಗ್ ಮೃತದೇಹವನ್ನು ಆತನ ಸಹೋದರ ಅಶೋಕ್ ಸಿಂಗ್ ನೋಡಿದ್ದಾರೆ. ಅಶೋಕ್ ತಮ್ಮನ ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಬಳಿಕ ನೀರಜಾ ಪೊಲೀಸರಿಗೆ ಫೋನ್ ಮಾಡಿ ತಿಳಿಸಿದ್ದಳು.

    ಸದ್ಯಕ್ಕೆ ಆರೋಪಿ ನೀರಜಾ ವಿರುದ್ಧ ಸಿಂಗ್ ಸಹೋದರ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ಪ್ರತಿದಿನ ರಾತ್ರಿ ನನ್ನ ಪತಿ ಹಲ್ಲೆ ಮತ್ತು ನಿಂದನೆ ಮಾಡುತ್ತಿದ್ದನು. ಹೀಗಾಗಿ ಕೊಲೆ ಮಾಡಿದೆ ಎಂದು ಆರೋಪಿ ನೀರಜಾ ಪೊಲೀಸರಿಗೆ ತಿಳಿಸಿದ್ದಾಳೆ.

  • ವಿವಾಹಿತೆ ಮೇಲೆ ಆರು ಮಂದಿಯಿಂದ ಗ್ಯಾಂಗ್‍ರೇಪ್ – ವಿಡಿಯೋ ರೆಕಾರ್ಡ್

    ವಿವಾಹಿತೆ ಮೇಲೆ ಆರು ಮಂದಿಯಿಂದ ಗ್ಯಾಂಗ್‍ರೇಪ್ – ವಿಡಿಯೋ ರೆಕಾರ್ಡ್

    – ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಅಪ್ಲೋಡ್

    ಜೈಪುರ: 45 ವರ್ಷದ ಮಹಿಳೆಯ ಮೇಲೆ ಆರು ಮಂದಿ ಕಾಮುಕರು ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಘಟನೆ ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ನಡೆದಿದೆ.

    ಆರೋಪಿಗಳು ಅತ್ಯಾಚಾರ ಎಸಗಿದ್ದಲ್ಲದೇ ಕೃತ್ಯದ ವಿಡಿಯೋವನ್ನು ಮೊಬೈಲಿನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾರೆ. ನಂತರ ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಸಂತ್ರಸ್ತೆ ಈ ಕುರಿತು ಪ್ರಕರಣ ದಾಖಲಿಸಿದ್ದಾರೆ. ವಿವಾಹಿತ ಮಹಿಳೆ ತನ್ನ ಸಂಬಂಧಿಯೊಂದಿಗೆ ಯಾರಿಗೋ ಸಾಲವನ್ನು ನೀಡಲು ಹೋಗುತ್ತಿದ್ದರು. ಸಂತ್ರಸ್ತೆ ಹಣವನ್ನು ನೀಡಿ ಮನೆಗೆ ಹಿಂದಿರುಗುತ್ತಿದ್ದಾಗ ಆರು ಮಂದಿ ಬೆಟ್ಟದ ಮೇಲೆ ತಡೆದಿದ್ದಾರೆ. ಆಗ ಆರೋಪಿಗಳು ಸಂತ್ರಸ್ತೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಅಲ್ಲದೇ ಜೊತೆಯಲ್ಲಿದ್ದ ಸಂಬಂಧಿಯ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಡಿಎಸ್‍ಪಿ ಕುಶಾಲ್ ಸಿಂಗ್ ಹೇಳಿದರು.

    ಒಬ್ಬ ವ್ಯಕ್ತಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಆಗ ಉಳಿದವರು ವಿಡಿಯೋವನ್ನು ರೇಕಾರ್ಡ್ ಮಾಡಿಕೊಂಡಿದ್ದಾರೆ. ಅಲ್ಲದೇ ಉಳಿದ ಐದು ಮಂದಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಬಳಿಕ ಆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಲ್ಲಿ ಅಪ್ಲೋಡ್ ಮಾಡಿದ್ದಾರೆ ಎಂದು ಸಿಂಗ್ ತಿಳಿಸಿದರು.

    ಸಂತ್ರಸ್ತೆ ನಡೆದ ಘಟನೆಯ ಬಗ್ಗೆ ಪತಿಗೆ ತಿಳಿಸಿದ್ದಾರೆ. ನಂತರ ಆಕೆ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದು, ಈಗಾಗಲೇ ಆರೋಪಿಗಳಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳನ್ನು ಬಂಧಿಸಲು ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

  • ನಾನು ಬದುಕುಳಿಯಲು ಕೊಲೆ ಮಾಡಿದೆ – ಮಲಗಿದ್ದ ಪತ್ನಿ, ಅತ್ತೆಯ ಕತ್ತು ಕೊಯ್ದ

    ನಾನು ಬದುಕುಳಿಯಲು ಕೊಲೆ ಮಾಡಿದೆ – ಮಲಗಿದ್ದ ಪತ್ನಿ, ಅತ್ತೆಯ ಕತ್ತು ಕೊಯ್ದ

    – ಕೊಲೆಯ ನಂತ್ರ ಮಕ್ಕಳೊಂದಿಗೆ ಪೊಲೀಸ್ ಠಾಣೆಗೆ ಹೋದ

    ಜೈಪುರ: ವ್ಯಕ್ತಿಯೊಬ್ಬ ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ. ಅಲ್ಲದೇ ಹೆಂಡತಿಯ ವಿವಾಹೇತರ ಸಂಬಂಧಕ್ಕೆ ಆಕೆಯ ತಾಯಿ ಕೂಡ ಸಪೋರ್ಟ್ ಮಾಡಿದ್ದಾಳೆ ಎಂದು ಅತ್ತೆಯನ್ನೂ ಕೊಲೆ ಮಾಡಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

    ಮಂಜು ಸೈನಿ ಮತ್ತು ಈಕೆಯ ತಾಯಿ ಗೌರ ದೇವಿ ಕೊಲೆಯಾವದರು. ಆರೋಪಿಯನ್ನು ರಾಮ್ ಕಿಶನ್ ಸೈನಿ ಎಂದು ಗುರುತಿಸಲಾಗಿದೆ. ಆರೋಪಿ ಕೊಲೆ ಮಾಡಿದ ನಂತರ ತನ್ನ ಮಕ್ಕಳೊಂದಿಗೆ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಆರೋಪಿ ಮಂಜು ಸೈನಿ ಜೊತೆ ಅನೇಕ ವರ್ಷಗಳ ಹಿಂದೆಯೇ ಮದುವೆಯಾಗಿದ್ದು, ಈ ದಂಪತಿಗೆ ಮೂವರು ಮಕ್ಕಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಆರೋಪಿ ಸೈನಿ ಮತ್ತು ಆತನ ಕುಟುಂಬವು ಚಾಂಡಲೈ ರಸ್ತೆಯ ಶಿವಂ ಕಾಲೋನಿಯಲ್ಲಿರುವ ಅತ್ತೆ ಮನೆಯಲ್ಲಿ ವಾಸಿಸುತ್ತಿದ್ದರು. ಸೋಮವಾರ ನಸುಕಿನ ಜಾವ ಸುಮಾರು 1 ಗಂಟೆಗೆ ಮಲಗಿದ್ದ ಪತ್ನಿ ಮಂಜು ಅತ್ತೆ ಗೌರ ದೇವಿಯ ಕತ್ತನ್ನು ಕೊಯ್ದು ಕೊಲೆ ಮಾಡಿದ್ದಾನೆ. ಈ ವೇಳೆ ಆರೋಪಿಯ ಮಕ್ಕಳು ಮಲಗಿದ್ದರು ಎಂದು ತಿಳಿದುಬಂದಿದೆ.

    ಕೊಲೆ ಮಾಡಿದ ನಂತರ ಆರೋಪಿ ಸೈನಿ ತನ್ನ ಮಕ್ಕಳೊಂದಿಗೆ ಚಕ್ಸು ಪೊಲೀಸ್ ಠಾಣೆಗೆ ಹೋಗಿ ತಾನು ಮಾಡಿದ ಅಪರಾಧವನ್ನು ಒಪ್ಪಿಕೊಂಡಿದ್ದಾನೆ. ತಕ್ಷಣ ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ವೇಳೆ ಆರೋಪಿ ತನ್ನ ಮಕ್ಕಳ ಮುಂದೆ ತಾನು ಮಾಡಿ ಅಪರಾಧವನ್ನು ಒಪ್ಪಿಕೊಂಡಿದ್ದಾನೆ.

    ಸದ್ಯಕ್ಕೆ ಐಪಿಸಿ ಸೆಕ್ಷನ್ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಹೇಳಿದ ನಂತರ ಪೊಲೀಸರು ಸ್ಥಳಕ್ಕೆ ಹೋಗಿ ನೋಡಿದ್ದು, ಮಲಗಿದ್ದ ಸ್ಥಳದಲ್ಲಿಯೇ ಮಂಜು ಮತ್ತು ಗೌರ ದೇವಿ ಶವ ಪತ್ತೆಯಾಗಿದೆ. ನಂತರ ಅವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಲ್ಲದೇ ವಿಧಿವಿಜ್ಞಾನ ತಂಡ ಮತ್ತು ಶ್ವಾನ ದಳದ ತಂಡವೂ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿವೆ.

    ನನ್ನ ಪತ್ನಿ ಅಕ್ರಮ ಸಂಬಂಧ ಹೊಂದಿದ್ದಳು, ಅದಕ್ಕೆ ನನ್ನ ಅತ್ತೆ ಕೂಡ ಬೆಂಬಲ ನೀಡುತ್ತಿದ್ದಳು. ಇಬ್ಬರು ಮಹಿಳೆಯರು ನನ್ನನ್ನು ಕೊಲೆ ಮಾಡಲು ಪ್ಲಾನ್ ಮಾಡಿದ್ದರು. ಹೀಗಾಗಿ ನಾನು ಬದುಕುಳಿಯಲು ಅವರನ್ನು ಕೊಲೆ ಮಾಡಿದೆ ಎಂದು ಆರೋಪಿ ಪೊಲೀಸರ ಬಳಿ ಹೇಳಿದ್ದಾನೆ. ಮಕ್ಕಳಿಗೂ ಈ ಕೊಲೆಗೂ ಸಂಬಂಧ ಇಲ್ಲ. ಅಲ್ಲದೇ ತಾನೇ ಕೊಲೆ ಮಾಡಿದ್ದೇನೆ ಎಂದು ಆರೋಪಿ ಒಪ್ಪಿಕೊಂಡಿದ್ದಾನೆ. ಮದುವೆಯಾಗಿದ್ದರು ಪತ್ನಿ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾಳೆ ಎಂದು ಅನುಮಾನ ಪಟ್ಟು ಈ ಕೊಲೆ ಮಾಡಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

  • ಹಣಕೊಟ್ಟು ಅಪ್ರಾಪ್ತೆಯನ್ನ ಖರೀದಿಸಿ ಮದ್ವೆಯಾದ – 7 ತಿಂಗಳು ಲೈಂಗಿಕ ಕಿರುಕುಳ

    ಹಣಕೊಟ್ಟು ಅಪ್ರಾಪ್ತೆಯನ್ನ ಖರೀದಿಸಿ ಮದ್ವೆಯಾದ – 7 ತಿಂಗಳು ಲೈಂಗಿಕ ಕಿರುಕುಳ

    – ಪ್ರವಾಸದ ನೆಪದಲ್ಲಿ ಕರ್ಕೊಂಡು ಬಂದು ಮಾರಿದ ಸಂಬಂಧಿ
    – 2.20 ಲಕ್ಷಕ್ಕೆ ಖರೀದಿಸಿದ 30ರ ವ್ಯಕ್ತಿ

    ಜೈಪುರ: 30 ವರ್ಷದ ವ್ಯಕ್ತಿಯೊಬ್ಬ 13 ವರ್ಷದ ಅಪ್ರಾಪ್ತೆಯನ್ನು ಹಣಕೊಟ್ಟು ಖರೀದಿಸಿ ಬಲವಂತವಾಗಿ ಮದುವೆಯಾಗಿದ್ದಾನೆ. ನಂತರ ಅನೇಕ ತಿಂಗಳು ಕಾಲ ಲೈಂಗಿಕ ಕಿರುಕುಳ ನೀಡಿರುವ ಘಟನೆ ರಾಜಸ್ಥಾನದ ಚಿತ್ತೋರ್‌ಗಢ ಜಿಲ್ಲೆಯಲ್ಲಿ ನಡೆದಿದೆ.

    ಜಿಲ್ಲೆಯ ಬಾಬ್ರಾನಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅಪ್ರಾಪ್ತೆಯನ್ನು ಉತ್ತರ ಪ್ರದೇಶದಿಂದ ಖರೀದಿಸಿ ಏಳು ತಿಂಗಳ ಹಿಂದೆ ಬಲವಂತವಾಗಿ ಮದುವೆಯಾಗಿದ್ದನು. ಅನೇಕ ತಿಂಗಳುಗಳ ನಂತರ ಅಪ್ರಾಪ್ತೆ ಮಕ್ಕಳ ಸಹಾಯವಾಣಿಗೆ ಫೋನ್ ಮಾಡಿದ್ದಾಳೆ. ನಂತರ ಆಕೆಯನ್ನು ರಕ್ಷಣೆ ಮಾಡಲಾಗಿದೆ. ರಾಜಸ್ಥಾನ ರಾಜ್ಯ ಮಕ್ಕಳ ಸಂರಕ್ಷಣಾ ಆಯೋಗದ ಸದಸ್ಯ ಡಾ.ಶೈಲೇಂದ್ರ ಪಾಂಡ್ಯ ಅವರಿಗೆ ಅಪ್ರಾಪ್ತೆ ನಡೆದ ಘಟನೆಯ ಬಗ್ಗೆ ವಿವರಿಸಿದ್ದಾಳೆ.

    ಏನಿದು ಪ್ರಕರಣ?
    ಅಪ್ರಾಪ್ತೆ ಉತ್ತರ ಪ್ರದೇಶದ ಮೂಲದವಳಾಗಿದ್ದು, ಅಲ್ಲಿ ತನ್ನ ಪೋಷಕರು, ಸಹೋದರ ಮತ್ತು ಇಬ್ಬರು ಸಹೋದರಿಯರೊಂದಿಗೆ ವಾಸಿಸುತ್ತಿದ್ದಳು. ಅಪ್ರಾಪ್ತೆಯ ಕುಟುಂಬದ ಸಂಬಂಧಿ ಲಕ್ಷ್ಮಿ ಎಂಬಾಕೆ ಸತ್ಯನಾರಾಯಣ್ ಜೊತೆ ಮದುವೆಯಾಗಿದ್ದಳು. ಫೆಬ್ರವರಿ 14 ರಂದು ಲಕ್ಷ್ಮಿ ಪ್ರವಾಸದ ನೆಪದಲ್ಲಿ ಅಪ್ರಾಪ್ತೆಯನ್ನು ಚಿತ್ತೋರ್‌ಗಢಕ್ಕೆ ಕರೆದುಕೊಂಡು ಬಂದಿದ್ದಾಳೆ. ಅಲ್ಲಿ ಆಕೆಯನ್ನು ಬಾಬ್ರಾನಾ ಗ್ರಾಮದ ಬಸಂತಿ ಲಾಲ್ ದಾದೀಚ್‍ಗೆ 2.70 ಲಕ್ಷ ರೂ.ಗೆ ಮಾರಾಟ ಮಾಡಿದ್ದಾಳೆ.

    ಹಣವನ್ನು ಪಾವತಿಸಿದ ನಂತರ ಬಸಂತಿ ಲಾಲ್ ದಾದೀಚ್ ಅಪ್ರಾಪ್ತೆಯನ್ನು ತನ್ನ ಹಳ್ಳಿಗೆ ಕರೆದುಕೊಂಡು ಹೋಗಿ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಮದುವೆಯಾಗಿದ್ದಾನೆ. ನಂತರ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪ್ರಾಪ್ತೆ ಪೋಷಕರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾಳೆ. ಇದನ್ನ ತಿಳಿದು ಆರೋಪಿ ಲಾಲ್ ಮತ್ತು ಆತನ ಸಹೋದರ ಆಕೆಯ ಮೇಲೆ ಹಲ್ಲೆ ಮಾಡಿದ್ದಾರೆ. ಆಗ ಪೋಷಕರು ಲಾಕ್‍ಡೌನ್ ನಿರ್ಬಂಧಗಳನ್ನು ತೆಗೆದುಹಾಕಿದ ನಂತರ ಮನೆಗೆ ಕರೆದುಕೊಂಡು ಬರುವುದಾಗಿ ಸಮಾಧಾನ ಮಾಡಿದ್ದಾರೆ ಎಂದು ಡಾ.ಶೈಲೇಂದ್ರ ಪಾಂಡ್ಯ ತಿಳಿಸಿದರು.

    ಕೊನೆಗೆ ಅಪ್ರಾಪ್ತೆ ಇವರ ಕಿರುಕುಳವನ್ನು ಸಹಿಸಲಾಗದೆ ಮಕ್ಕಳ ಸಹಾಯವಾಣಿಗೆ ಫೋನ್ ಮಾಡಿ ಮಾಹಿತಿ ತಿಳಿಸಿದ್ದಾಳೆ. ಮಾಹಿತಿ ತಿಳಿದು ತಕ್ಷಣ ಅಪ್ರಾಪ್ತೆಯನ್ನು ರಕ್ಷಣೆ ಮಾಡಲಾಗಿದೆ. ಸದ್ಯಕ್ಕೆ ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆ, ಬಾಲ್ಯವಿವಾಹ, ಮಕ್ಕಳ ಕಳ್ಳಸಾಗಣೆ ಸೇರಿದಂತೆ ಅನೇಕ ಪ್ರಕರಣವನ್ನು ದಾಖಲಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ. ಅವರ ವಿರುದ್ಧ ಕೂಡಲೇ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಪಾಂಡ್ಯ ಹೇಳಿದರು.

  • ಪ್ರಿಯಕರನ ಸಾವಿನ ಸುದ್ದಿ ತಿಳಿದು ಪ್ರಜ್ಞೆ ತಪ್ಪಿದ ಗಾಯಕಿ – ಸ್ಥಿತಿ ಗಂಭೀರ

    ಪ್ರಿಯಕರನ ಸಾವಿನ ಸುದ್ದಿ ತಿಳಿದು ಪ್ರಜ್ಞೆ ತಪ್ಪಿದ ಗಾಯಕಿ – ಸ್ಥಿತಿ ಗಂಭೀರ

    – ಎರಡು ಮಕ್ಕಳ ತಂದೆಯ ಜೊತೆ ಗಾಯಕಿ ಲವ್
    – ವಿಷ ಸೇವಿಸಿ ಗೆಳೆಯ ಆತ್ಮಹತ್ಯೆ

    ಜೈಪುರ: ಕಿರುತೆರೆಯ ‘ಇಂಡಿಯನ್ ಐಡಲ್ ಸೀಸನ್ 10’ನ ಸ್ಪರ್ಧಿ ರೇಣು ನಗರ್ ಅವರನ್ನು ರಾಜಸ್ಥಾನದ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಿಯಕರನ ಸಾವಿನ ಸುದ್ದಿ ತಿಳಿದ ತಕ್ಷಣ ಗಾಯಕಿ ಆಘಾತಕ್ಕೊಳಗಾಗಿದ್ದಾರೆ ಎಂದು ತಿಳಿದುಬಂದಿದೆ.

    ಪ್ರಿಯಕರನ ರವಿ ಶಂಕರ್ ಬುಧವಾರ ಮಧ್ನಾಹ್ನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ರಾತ್ರಿ ಸುಮಾರು 11 ಗಂಟೆಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

    ಗೆಳೆಯನ ಸಾವಿನ ಸುದ್ದಿ ತಿಳಿದು ತಕ್ಷಣ ಗಾಯಕಿ ರೇಣು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ತಕ್ಷಣ ಅವರನ್ನು ಮಿತ್ತಲ್ ಆಸ್ಪತ್ರೆಯಲ್ಲಿ ದಾಖಲಿಸಿದ್ದು, ಐಸಿಯುನಲ್ಲಿ ಚಿಕಿತ್ಸೆ ನಡೆಯುತ್ತಿದೆ. ಗಾಯಕಿ ರೇಣು ನಗರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

    ಮೃತ ರವಿ ತಮಲಾ ಕ್ಲಾಸ್ ಮಾಡಲು ಗಾಯಕಿ ರೇಣು ನಗರ್ ಮನೆಗೆ ಬರುತ್ತಿದ್ದರು. ರವಿ ತಗೆ ಈಗಾಗಲೇ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಆದರೂ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ನಂತರ ರೇಣು ಮತ್ತು ರವಿ ಇಬ್ಬರು ಜೂನ್ ತಿಂಗಳಿನಲ್ಲಿ ಮನೆಬಿಟ್ಟು ಓಡಿ ಹೋಗಿದ್ದರು. ಈ ಸಂಬಂಧ ರೇಣು ತಂದೆ ರವಿ ಶಂಕರ್ ವಿರುದ್ಧ ಪೊಲೀಸ್ ಸ್ಟೇಷನ್‍ನಲ್ಲಿ ದೂರು ದಾಖಲಿಸಿದ್ದರು. ನಂತರ ಮಗಳನ್ನು ಮನವೊಲಿಸಿ ಮನೆಗೆ ಕರೆದುಕೊಂಡು ಹೋಗಿದ್ದರು.

    ಐದು ದಿನಗಳ ಹಿಂದೆಯಷ್ಟೆ ಇಬ್ಬರು ತಮ್ಮ ತಮ್ಮ ಮನೆಗೆ ಹೋಗಿದ್ದರು. ಆದರೆ ಬುಧವಾರ ಮಧ್ಯಾಹ್ನ ರವಿ ವಿಷ ಸೇವಿಸಿದ್ದಾರೆ. ತಕ್ಷಣ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ರವಿ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ. ನಂತರ ರವಿ ಸಾವಿನ ಸುದ್ದಿ ತಿಳಿದು ರೇಣು ಆಘಾತಕ್ಕೊಳಗಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

  • ನಿಶ್ಚಿತಾರ್ಥವಾಗಿದ್ರೂ ಬೇರೆ ಹುಡುಗಿಯ ಜೊತೆ ಸುತ್ತಾಟ – ರಸ್ತೆಯಲ್ಲಿ ಭಾವಿ ಪತಿಗೆ ಥಳಿತ

    ನಿಶ್ಚಿತಾರ್ಥವಾಗಿದ್ರೂ ಬೇರೆ ಹುಡುಗಿಯ ಜೊತೆ ಸುತ್ತಾಟ – ರಸ್ತೆಯಲ್ಲಿ ಭಾವಿ ಪತಿಗೆ ಥಳಿತ

    – ಬೈಕಿನಲ್ಲಿ ಬರ್ತಿದ್ದಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ರು

    ಜೈಪುರ: ನಿಶ್ಚಿತಾರ್ಥ ಆಗಿದ್ದರೂ ಬೇರೆ ಹುಡುಗಿಯ ಜೊತೆ ಸುತ್ತಾಡುತ್ತಿದ್ದ ಭಾವಿ ಪತಿಗೆ ಯುವತಿ ನಡುರಸ್ತೆಯಲ್ಲೇ ಥಳಿಸಿರುವ ಘಟನೆ ರಾಜಸ್ಥಾನದ ಉದಯಪುರ್ ಜಿಲ್ಲೆಯಲ್ಲಿ ನಡೆದಿದೆ.

    ಜಿಲ್ಲೆಯ ರಿಷಭ್‍ದೇವ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಭಾವಿ ಪತಿಗೆ ರಸ್ತೆಯಲ್ಲಿ ಹೊಡೆಯುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕೆಲ ದಿನಗಳ ಹಿಂದೆ ಉದಯಪುರ್ ಜಿಲ್ಲೆಯ ಯುವತಿಗೆ ಯುವಕನೊಬ್ಬನ ಜೊತೆ ನಿಶ್ಚಿತಾರ್ಥವಾಗಿತ್ತು. ಆದರೆ ಎಂಗೇಜ್‍ಮೆಂಟ್ ಆಗಿದ್ದರೂ ಯುವಕ ಬೇರೆ ಹುಡುಗಿಯನ್ನು ಪ್ರೀತಿಸುತ್ತಿದ್ದನು.

    ಅಲ್ಲದೇ ಪ್ರತಿದಿನ ಆಕೆಯನ್ನು ಬೈಕಿನಲ್ಲಿ ಕೂರಿಸಿಕೊಂಡು ಸುತ್ತಾಡುತ್ತಿದ್ದಾನೆ ಎಂದು ನಿಶ್ಚಿತಾರ್ಥವಾಗಿದ್ದ ಯುವತಿಗೆ ಗೊತ್ತಾಗಿದೆ. ಇದರಿಂದ ಕೋಪಗೊಂಡ ಯುವತಿ ಅವರಿಬ್ಬರು ಓಡಾಡುತ್ತಿದ್ದ ರಸ್ತೆಯಲ್ಲಿ ಅವರು ಬರುವ ಮೊದಲೆ ಕಾದು ಕುಳಿತಿದ್ದಳು. ಅದೇ ಮಾರ್ಗವಾಗಿ ಯುವತಿಯ ಭಾವಿ ಪತಿ ಹುಡುಗಿಯನ್ನು ಬೈಕಿನಲ್ಲಿ ಕೂರಿಸಿಕೊಂಡು ಬಂದಿದ್ದಾನೆ. ಅಲ್ಲೇ ಕಾದು ಕುಳಿತಿದ್ದ ಯುವತಿ ಇಬ್ಬರನ್ನು ರೆಡ್ ಹ್ಯಾಂಡಾಗಿ ಹಿಡಿದಿದ್ದಾಳೆ.

    ಭಾವಿ ಪತಿ ಹುಡುಗಿಯ ಜೊತೆ ಬೈಕಿನಲ್ಲಿ ಕುಳಿತಿರುವಾಗಲೇ ಆತನಿಗೆ ಯುವತಿ ಹಿಗ್ಗಾಮುಗ್ಗಾ ಥಳಿಸಿದ್ದಾಳೆ. ತಕ್ಷಣ ಸ್ಥಳದಲ್ಲಿದ್ದವರು ಸ್ಥಳಕ್ಕೆ ಬಂದು ಏನಾಯಿತು ಎಂದು ವಿಚಾರಿಸಿದ್ದಾರೆ. ಆಗ ಯುವತಿ ನಡೆದ ಘಟನೆಯನ್ನು ವಿವರಿಸಿದ್ದಾಳೆ. ಕೊನೆಗೆ ಸ್ಥಳದಲ್ಲಿದ್ದವರು ಯುವತಿಗೆ ಸಮಾಧಾನ ಮಾಡಿ ಭಾವಿ ಪತಿಯ ಬೈಕ್‍ನಲ್ಲಿ ಮನೆಗೆ ಕಳುಹಿಸಿದ್ದಾರೆ.

    ಸ್ಥಳದಲ್ಲಿದ್ದವರು ಇದನ್ನು ರೆಕಾರ್ಡ್ ಮಾಡಿಕೊಂಡು ಸೋಶಿಯಲ್ ಮಿಡಿಯಾದಲ್ಲಿ ಅಪ್ಲೋಡ್ ಮಾಡಿದ್ದಾರೆ. ಆದರೆ ಇದುವರೆಗೂ ಈ ಕುರಿತು ಯಾವುದೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿಲ್ಲ.

  • ಜೈಪುರದಲ್ಲಿರುವ ಭಿಕ್ಷುಕರಲ್ಲಿ ಇಬ್ಬರು ಮಾಸ್ಟರ್ ಡಿಗ್ರಿ, 3 ಪದವೀಧರರು ಪತ್ತೆ

    ಜೈಪುರದಲ್ಲಿರುವ ಭಿಕ್ಷುಕರಲ್ಲಿ ಇಬ್ಬರು ಮಾಸ್ಟರ್ ಡಿಗ್ರಿ, 3 ಪದವೀಧರರು ಪತ್ತೆ

    – ಕೆಲಸ ನೀಡಿದರೆ ಮಾಡಲು ಸಿದ್ಧ

    ಜೈಪುರ: ರಾಜಸ್ತಾನದ ಜೈಪುರದಲ್ಲಿ ಪೊಲೀಸರು ಸಮೀಕ್ಷೆ ನಡೆಸಿದ್ದು, ನಗರದಲ್ಲಿರುವ 1,162 ಭಿಕ್ಷುಕರಲ್ಲಿ ಇಬ್ಬರು ಸ್ನಾತಕೋತ್ತರ ಮತ್ತು ಮೂವರು ಪದವೀಧರರನ್ನು ಪತ್ತೆ ಮಾಡಿದ್ದಾರೆ.

    ಜೈಪುರವನ್ನು ಭಿಕ್ಷುಕರಿಂದ ಮುಕ್ತವಾಗಿ ಮಾಡುವುದು ಮತ್ತು ಅವರಿಗೆ ಕೆಲವು ಉದ್ಯೋಗ ಕೌಶಲ್ಯಗಳನ್ನು ನೀಡುವುದು, ಇತರರನ್ನು ಕೌಶಲ್ಯರಹಿತ ಉದ್ಯೋಗಗಳಿಗೆ ಪರಿಚಯಿಸುವುದು ಈ ಸಮೀಕ್ಷೆಯ ಉದ್ದೇಶವಾಗಿದೆ. ಈ ಸಮೀಕ್ಷೆಯ ಪ್ರಕಾರ ಜೈಪುರದಲ್ಲಿ 825 ಭಿಕ್ಷಕರು ಅನಕ್ಷರಸ್ಥರು, 39 ಜನ ಅಕ್ಷರಸ್ಥರು ಮತ್ತು 193 ಜನ ಶಾಲೆಗೆ ಹೋಗಿದ್ದವರು ಸಿಕ್ಕಿದ್ದಾರೆ.

    ಸಮೀಕ್ಷೆಯ ಪ್ರಕಾರ, ಪದವೀಧರ ಭಿಕ್ಷುಕರು ಜೈಪುರದ ರಾಮ್ನಿವಾಸ್ ಬಾಗ್, ಸಿ-ಸ್ಕೀಮ್ ಮತ್ತು ವಾಲ್ಡ್ ಸಿಟಿಯಲ್ಲಿ ವಾಸಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ವಿದ್ಯಾವಂತ ಭಿಕ್ಷುಕರು ಅವಕಾಶ ನೀಡಿದರೆ ಗೌರವಯುತ ಜೀವನವನ್ನು ಕಟ್ಟಿಕೊಳ್ಳಲು ಸಿದ್ಧವಿದ್ದೇವೆ ಎಂದು ಹೇಳಿದ್ದಾರೆ ಎಂದು ಸಮೀಕ್ಷೆ ಮಾಡಿದ ಸಂಸ್ಥೆಯವರು ಹೇಳಿದ್ದಾರೆ. ಅಕ್ಷರಸ್ಥ ಐದು ಜನ ಭಿಕ್ಷುಕರಲ್ಲಿ ಇಬ್ಬರು 32 ಮತ್ತು 35 ವರ್ಷದೊಳಗಿನವರು, ಇನ್ನಿಬ್ಬರು 50 ರಿಂದ 55 ವರ್ಷದೊಳಗಿನವರು ಮತ್ತು ಒಬ್ಬರು 65 ವರ್ಷ ವಯಸ್ಸಿನವರು ಎಂದು ತಿಳಿದು ಬಂದಿದೆ.

    ಐದು ಉನ್ನತ ಮಟ್ಟದ ವಿದ್ಯಾವಂತ ಭಿಕ್ಷುಕರು ಹೋಟೆಲ್‍ಗಳು, ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಮತ್ತು ಇತರ ಕೌಶಲ್ಯರಹಿತ ಉದ್ಯೋಗಗಳಲ್ಲಿ ಕೆಲಸ ಮಾಡಲು ಸಿದ್ಧವಿದ್ದೇವೆ ಎಂದು ಸರ್ವೇಯರ್ ಗಳಿಗೆ ತಿಳಿಸಿದ್ದಾರೆ. ಒಟ್ಟು ಭಿಕ್ಷುಕರಲ್ಲಿ ಕನಿಷ್ಠ 419 ಮಂದಿ ಜನರು ಈ ಕೆಲಸವನ್ನು ಬಿಟ್ಟು ಒಳ್ಳೆಯ ಜೀವನವನ್ನು ಕಟ್ಟಿಕೊಳ್ಳಲು ಸಿದ್ಧರಿದ್ದಾರೆ. ಜೊತೆಗೆ 27 ಭಿಕ್ಷುಕರು ಅಧ್ಯಯನ ಮಾಡಲು ಇಚ್ಛೆ ವ್ಯಕ್ತಪಡಿಸಿದ್ದಾರೆ ಎಂದು ಸಮೀಕ್ಷೆಯಲ್ಲಿ ತಿಳಿದು ಬಂದಿದೆ.

    ಇದರಲ್ಲಿ ಓರ್ವ ಭಿಕ್ಷುಕ ಮಾತನಾಡಿ, ನಾನು ಝೂನ್‍ಝುನು ಮೂಲದವನು. 25 ವರ್ಷಗಳ ಹಿಂದೆ ಸರ್ಕಾರಿ ಕಾಲೇಜಿನಿಂದ ಪದವಿ ಪಡೆದಿದ್ದೇನೆ. ಉದ್ಯೋಗ ಹುಡುಕಲು ಜೈಪುರಕ್ಕೆ ಬಂದೆ ಆದರೆ ನನಗೆ ಇಲ್ಲಿ ಉದ್ಯೋಗ ಸಿಗಲಿಲ್ಲ. ಈ ಸಮಯದಲ್ಲಿ ನನಗೆ ತಿನ್ನಲು ಮತ್ತು ಮಲಗಲು ಸ್ಥಳವಿಲ್ಲದ ಪರಿಸ್ಥಿತಿ ನಿರ್ಮಾಣವಾಯಿತು. ನನಗೆ ಕುಟುಂಬದವರೆಂದು ಯಾರೂ ಇಲ್ಲ. ಆದ್ದರಿಂದ ಅನಿವಾರ್ಯವಾಗಿ ಬೀದಿಯಲ್ಲಿ ಭಿಕ್ಷೆ ಬೇಡಿ ಜೀವನ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.

    ನಮಗೆ ಅವಕಾಶ ಕೊಟ್ಟರೆ ಗೌರವಯುತ ಜೀವನವನ್ನು ಕಟ್ಟಿಕೊಳ್ಳಲು ಸಿದ್ಧವಿದ್ದೇವೆ. ನಾನು ಕಾರ್ಮಿಕ ಕೆಲಸ ಅಥವಾಸ ನಗರವನ್ನು ಸ್ವಚ್ಛ ಮಾಡುವ ಕೆಲಸವಾಗಲಿ ಮಾಡಲು ಸಿದ್ಧ. ನನಗೆ ದೈನಂದಿನ ಅಗತ್ಯಗಳನ್ನು ಖರೀದಿಸಲು ಮತ್ತು ಮನೆಗೆ ಬಾಡಿಗೆ ಪಾವತಿಸಲು ಸಾಧ್ಯವಾಗುವಷ್ಟು ಸಂಬಳ ನೀಡಿದರೆ ಸಾಕು. ಎಲ್ಲರೂ ಒಳ್ಳೆಯ ಜೀವನವನ್ನು ಬಯಸುತ್ತಾರೆ. ಹಾಗೆಯೇ ನಾವು ಕೂಡ ಗೌರವಯುತ ಜೀವನವನ್ನು ಬಯಸುತ್ತೇವೆ ಎಂದು ತಿಳಿಸಿದ್ದಾರೆ.

  • ರಾಜ್ಯಪಾಲರನ್ನು ಭೇಟಿ ಮಾಡಿದ ಸಿಎಂ ಅಶೋಕ್ ಗೆಹ್ಲೋಟ್- ರಾಜಭವನದಲ್ಲಿ ಘೋಷಣೆ ಕೂಗಿದ ಕಾಂಗ್ರೆಸ್ ಶಾಸಕರು

    ರಾಜ್ಯಪಾಲರನ್ನು ಭೇಟಿ ಮಾಡಿದ ಸಿಎಂ ಅಶೋಕ್ ಗೆಹ್ಲೋಟ್- ರಾಜಭವನದಲ್ಲಿ ಘೋಷಣೆ ಕೂಗಿದ ಕಾಂಗ್ರೆಸ್ ಶಾಸಕರು

    ಜೈಪುರ: ರಾಜಸ್ಥಾನ ಕಾಂಗ್ರೆಸ್ ಪಕ್ಷದ ಬಂಡಾಯದ ಮುನಿಸು ಮುಂದುವರಿದಿದ್ದು, ಇಂದು ಸಿಎಂ ಅಶೋಕ್ ಗೆಹ್ಲೋಟ್ ತಮ್ಮ ಪಕ್ಷದ ಶಾಸಕರೊಂದಿಗೆ ರಾಜಭವನಕ್ಕೆ ಭೇಟಿ ನೀಡಿ ಶಕ್ತಿ ಪ್ರದರ್ಶನ ನಡೆಸಿದರು.

    ಗವರ್ನರ್ ಭೇಟಿ ಮಾಡಿದ ಅಶೋಕ್ ಗೆಹ್ಲೋಟ್ ವಿಶೇಷ ಶಾಸನ ಸಭೆಯನ್ನು ಸಮಾವೇಶ ನಡೆಸಲು ಮನವಿ ಮಾಡಿದರು. ಇದಕ್ಕೂ ಮುನ್ನ ಫೈರ್ ಮೊಂಟ್ ಹೋಟೆಲ್ ನಲ್ಲಿ ತಂಗಿದ್ದ ಕಾಂಗ್ರೆಸ್ ಶಾಸಕರು ಹೋಟೆಲ್‍ನಿಂದ ಬಸ್ ಮೂಲಕ ರಾಜಭವನಕ್ಕೆ ಆಗಮಿಸಿದ್ದರು. ರಾಜಭವನದಲ್ಲಿ ರಾಜ್ಯಪಾಲ ಕಲ್‍ರಾಜ್ ಮಿಶ್ರಾ ಅವರ ಎದುರು ಹಾಜರಾದ ಶಾಸಕರು ವಿಧಾನಸಭಾ ಅಧಿವೇಶನ ನಡೆಸುವಂತೆ ಷೋಷಣೆ ಕೂಗಿದರು.

    ರಾಜ್ಯಪಾಲರ ಭೇಟಿಗೂ ಮುನ್ನ ಮಾತನಾಡಿದ ಸಿಎಂ ಅಶೋಕ್ ಗೆಹ್ಲೋಟ್, ನಮ್ಮ ಸರ್ಕಾರಕ್ಕೆ ಬಹುಮತ ಇದೆ. ಆದ್ದರಿಂದ ಬಹುಮತ ಸಾಬೀತು ಪಡಿಸಲು ಅವಕಾಶ ನೀಡುವಂತೆ ಮನವಿ ಮಾಡುವುದಾಗಿ ತಿಳಿಸಿದರು. ಅಲ್ಲದೇ ಗವರ್ನರ್ ಮೇಲೆ ಒತ್ತಡ ಬರುತ್ತಿರುವುದರಿಂದಲೇ ಅವರು ಯಾವುದೇ ನಿರ್ಣಯ ಕೈಗೊಳ್ಳುತ್ತಿಲ್ಲ ಎಂದು ಹೇಳಿದರು.

    ವಿಧಾನಸಭಾ ಅಧಿವೇಶನ ಕರೆಯಬೇಕು ಎಂದು ಗುರುವಾರ ಪತ್ರ ಬರೆದಿದ್ದು, ಇದುವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಇಷ್ಟು ಸರಳ ಪ್ರಕ್ರಿಯೆಯನ್ನು ಏಕೆ ತಡ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿಲ್ಲ. ನಮಗೆ ಪೂರ್ತಿ ಬಹುಮತವಿದೆ. ಸೋಮವಾರದಿಂದ ವಿಧಾನಸಭಾ ಅಧಿವೇಶನ ನಡೆಸಬೇಕಿದೆ. ರಾಜಸ್ಥಾನ ಜನರ ಬೆಂಬಲ ನಮ್ಮೊಂದಿಗೆ ಇದೆ. ಒಂದು ವೇಳೆ ಜನರು ರಾಜಭವನ ಎದುರು ಪ್ರತಿಭಟನೆ ನಡೆಸಿದೆ ನಾವು ಜವಾಬ್ದಾರಿ ವಹಿಸಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.

    ಇತ್ತ ಸದನ ಸಮಾವೇಶದ ಕುರಿತು ಪ್ರತಿಕ್ರಿಯೆ ನೀಡಿರುವ ರಾಜ್ಯಪಾಲ ಕಲ್‍ರಾಜ್ ಮಿಶ್ರಾ, ವಿಧಾನಸಭಾ ಅಧಿವೇಶನ ಕರೆಯುವ ಬಗ್ಗೆ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ. ಯಾವುದೇ ನಿರ್ಣಯ ಕೈಗೊಂಡರು ನಿಯಮಗಳ ಅನ್ವಯವೇ ತೆಗೆದುಕೊಳ್ಳುವುದಾಗಿ ಸ್ಪಷ್ಟಪಡಿಸಿದರು.