Tag: Jaipur

  • ಚಲಿಸುತ್ತಿದ್ದ ಬೈಕ್‌ ಮೇಲೆ ಕುಳಿತು ಪ್ರಿಯಕರನೊಂದಿಗೆ ಲಿಪ್‌ ಲಾಕ್‌ – ಪೊಲೀಸರು ಕೊಟ್ರು ಶಾಕ್

    ಚಲಿಸುತ್ತಿದ್ದ ಬೈಕ್‌ ಮೇಲೆ ಕುಳಿತು ಪ್ರಿಯಕರನೊಂದಿಗೆ ಲಿಪ್‌ ಲಾಕ್‌ – ಪೊಲೀಸರು ಕೊಟ್ರು ಶಾಕ್

    ಜೈಪುರ: ಪ್ರೇಮಿಗಳಿಗೆ (Lovers) ಜಗತ್ತೇ ಕುರುಡಾಗಿರುತ್ತದೆ. ಕೆಲ ಪ್ರೇಮಿಗಳಂತೂ ಅಕ್ಕ-ಪಕ್ಕ ಯಾರಿರುತ್ತಾರೆ ಎಂಬ ಅರಿವೇ ಇಲ್ಲದೇ ಸಾರ್ವಜನಿಕ ಪ್ರದೇಶಗಳಲ್ಲೂ ಹುಚ್ಚಾಟ ಮರೆಯುವುದನ್ನು ನೋಡಿರುತ್ತೇವೆ. ಅದೇ ರೀತಿ ಪ್ರೇಮಿಗಳಿಬ್ಬರು ಹಾಡಹಗಲೇ ನಡುರಸ್ತೆಯಲ್ಲಿ ಬೈಕ್ ಮೇಲೆ ಕುಳಿತು ರೊಮ್ಯಾನ್ಸ್ ಮಾಡಿಕೊಂಡು ಚಲಿಸುತ್ತಿರುವ ವೀಡಿಯೋ ಜಾಲತಾಣದಲ್ಲಿ ಭಾರೀ ಸದ್ದು ಮಾಡ್ತಿದೆ.

    ರಾಜಸ್ಥಾನದ (Rajasthan) ಜೈಪುರದಲ್ಲಿ ಯುವ ಪ್ರೇಮಿಗಳಿಬ್ಬರು ಹಾಡಹಗಲೇ ಬೈಕ್ ಮೇಲೆ ರಾಜಾರೋಷವಾಗಿ ತಬ್ಬಿಕೊಂಡು ಹೋಗುತ್ತಿದ್ದಾರೆ, ಈ ವೇಳೆ ಯುವಕ ಹಿಂಬದಿಗೆ ತಿರುಗಿ ಪರಸ್ಪರ ಲಿಪ್‌ಲಾಕ್‌ ಮಾಡಿ ಚುಂಬಿಸಿದ್ದಾರೆ. ಈ ವೀಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವೀಡಿಯೋ ಜಾಲತಾಣದಲ್ಲಿ (Social Media) ಹರಿದಾಡುತ್ತಿದ್ದಂತೆ ಜೈಪುರದ ಸಂಚಾರ ಪೊಲೀಸರು ದಂಡದ ಬಿಸಿ ಮುಟ್ಟಿಸಿದ್ದಾರೆ. ಇದನ್ನೂ ಓದಿ: ಗುಡ್ಡೆಯಂಗಡಿಯಲ್ಲಿ ಗೌಪ್ಯವಾಗಿ ನಿರ್ಮಾಣವಾಗುತ್ತಿದ್ದ ಮನೆ ಯಾರದ್ದು? ಚೈತ್ರಾ ಪ್ರಕರಣಕ್ಕೆ ಇದೆಯಂತೆ ಲಿಂಕ್

    ಬೈಕ್‌ ಸವಾರರು ಹೆಲ್ಮೆಟ್‌ ಧರಿಸಿರಲಿಲ್ಲ, ಜೊತೆಗೆ ಸಂಚಾರ ನಿಯಮ ಉಲ್ಲಂಘಿಸಿದ್ದಾರೆ ಎಂದು ಸಂಚಾರ ಪೊಲೀಸರು ದಂಡ ವಿಧಿಸಿದ್ದಾರೆ. ಮೋಟಾರು ವಾಹನ ಕಾಯ್ದೆ (ಎಂವಿ)-1988 (Motor Vehicle Act-1988) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಯುವಕನಿಗೆ ದಂಡ ವಿಧಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇದನ್ನೂ ಓದಿ: SIIMA 2023: ರಾರಾ ರಕ್ಕಮ್ಮ ಸೇರಿ ವಿಕ್ರಾಂತ್ ರೋಣಕ್ಕೆ ಎರಡು ಪ್ರಶಸ್ತಿ

    ಬೈಕ್‌ ಮೇಲೆ ಕುಳಿತು ಪ್ರೇಮಿಗಳು ಹುಚ್ಚಾಟ ಮೆರೆದಿರುವುದು ಇದೇ ಮೊದಲೇನಲ್ಲ. ಈ ಹಿಂದೆ ದೆಹಲಿಯಲ್ಲಿ ರಾತ್ರಿ ವೇಳೆ ಪ್ರೇಮಿಗಳಿಬ್ಬರು ನಡು ರಸ್ತೆಯಲ್ಲಿ ರೊಮ್ಯಾನ್ಸ್ ಮಾಡಿಕೊಂಡು ಹೋಗುತ್ತಿದ್ದದ್ದು, ರಾಜ್ಯಾದ್ಯಂತ ಭಾರೀ ಸದ್ದು ಮಾಡಿತ್ತು. ಕರ್ನಾಟಕದ ಚಾಮರಾಜನಗರ ಜಿಲ್ಲೆಯಲ್ಲೂ ಇಂತಹದ್ದೇ ಕೇಸ್ ಬೆಳಕಿಗೆ ಬಂದಿತ್ತು. ಹೋಳಿ ಹಬ್ಬದಂದು ಜೈಪುರದಲ್ಲೇ ಇದೇ ರೀತಿ ಘಟನೆ ವರದಿಯಾಗಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 7 ಮಂದಿ ಸಾವು

    ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 7 ಮಂದಿ ಸಾವು

    ಜೈಪುರ: ಬಸ್‍ಗೆ  ವ್ಯಾನ್ (Van-Bus Accident) ಮುಖಾಮುಖಿ ಡಿಕ್ಕಿ ಹೊಡೆದು ಒಂದೇ ಕುಟುಂಬದ 7 ಮಂದಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ (Rajasthan) ದಿಡ್ವಾನಾ-ಕುಚಮನ್ ಜಿಲ್ಲೆಯಲ್ಲಿ ನಡೆದಿದೆ.

    ಖುಂಖುನಾ ಪೊಲೀಸ್ ಠಾಣಾ ವ್ಯಾಪ್ತಿಯ ಬಂಥಾಡಿ ಗ್ರಾಮದ ಬಳಿ ಈ ಘಟನೆ ನಡೆದಿದೆ ಎಂದು ಡಿಎಸ್ಪಿ ಧರಂಚಂದ್ ಬಿಷ್ಣೋಯ್ ಹೇಳಿದ್ದಾರೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಬಂಗಾರ್ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಜೈಪುರಕ್ಕೆ ರವಾನಿಸಲಾಗಿದೆ ಎಂದು ಹೇಳಿದರು.

    ಮೃತರೆಲ್ಲರೂ ವ್ಯಾನ್‍ನಲ್ಲಿ ಮದುವೆ ಸಮಾರಂಭದಲ್ಲಿ ಭಾಗವಹಿಸಲು ಸಿಕಾರ್ ನಿಂದ ನಾಗೌರ್ ಗೆ ಪ್ರಯಾಣಿಸುತ್ತಿದ್ದರು. ಅಪಘಾತಕ್ಕೆ ನಿಖರ ಕಾರಣವೇನೆಂದು ತಿಳಿದುಬಂದಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಭೀಕರ ಅಪಘಾತ- ಒಂದೇ ಕುಟುಂಬದ ನಾಲ್ವರ ದುರ್ಮರಣ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹನಿಮೂನ್‍ಗೆ ಬಂದು ಪತಿಯನ್ನು ಹೋಟೆಲ್‍ನಲ್ಲೇ ಬಿಟ್ಟು ಹೋದ ಪತ್ನಿ!

    ಹನಿಮೂನ್‍ಗೆ ಬಂದು ಪತಿಯನ್ನು ಹೋಟೆಲ್‍ನಲ್ಲೇ ಬಿಟ್ಟು ಹೋದ ಪತ್ನಿ!

    ಜೈಪುರ: ಹೊಸದಾಗಿ ಮದುವೆಯಾದ ಜೋಡಿಯೊಂದು ಹನಿಮೂನ್ (Honeymoon) ಬಂದು, ಪತಿಯನ್ನು ಹೋಟೆಲ್‍ನಲ್ಲಿಯೇ ಪತ್ನಿ ಬಿಟ್ಟು ಹೋಗಿರುವ ಅಚ್ಚರಿಯ ಪ್ರಕರಣವೊಂದು ರಾಜಸ್ಥಾನದ ಜೈಪುರದಿಂದ ಬೆಳಕಿಗೆ ಬಂದಿದೆ.

    ಪತಿಯೊಂದಿಗೆ ಹೋಟೆಲ್ (Hotel) ವಿಚಾರವಾಗಿ ಈಕೆ ಪತಿ ಜೊತೆ ಮುನಿಸಿಕೊಂಡಿದ್ದೇ ಈ ಘಟನೆಗೆ ಕಾರಣ ಎನ್ನಲಾಗಿದೆ. ರಿಂಗಾಸ್‍ನಲ್ಲಿರುವ ಬಾಬಾ ಖತುಶ್ಯಾಮ್ ಜಿ ದೇವಸ್ಥಾನಕ್ಕೆ ಭೇಟಿ ನೀಡಲೆಂದು ವಾಹನ ಬುಕ್ ಮಾಡಲು ಪತಿ ಹೋದಾಗ ಆತನನ್ನು ಕೋಪದಿಂದ ಪತ್ನಿ ಬಿಟ್ಟು ಹೋಗಿದ್ದಾಳೆ.

    ಮಧ್ಯಪ್ರದೇಶದ (Madhyapradesh) ಭೋಪಾಲ್ ಮೂಲದ ದಂಪತಿ ಜುಲೈ 29 ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆಯ ಬಳಿಕ ಹನುಮೂನಿಗೆಂದು ಆಗಸ್ಟ್ 5 ರಂದು ಜೈಪುರಕ್ಕೆ ಬಂದಿದ್ದು, ಚೌಮು ಪುಲಿಯಾ ಸಮೀಪದ ಹೋಟೆಲ್‍ನಲ್ಲಿ ತಂಗಿದ್ದರು. ಮರುದಿನ ಬೆಳಗ್ಗೆ ದಂಪತಿ ಜೈಪುರ ಸುತ್ತಾಡಿ ನಂತರ ಅಮೇರ್ ಫೋರ್ಟ್‍ಗೆ ಭೇಟಿ ನೀಡಿದರು.

    ಸಂಜೆ 3 ಗಂಟೆ ಸುಮಾರಿಗೆ ಹೋಟೆಲ್‍ಗೆ ಹಿಂದಿರುಗಿದರು. ಇದಾದ ಬಳಿಕ ಅವರು ಬಾಬಾ ಖತುಶ್ಯಾಮ್ ಜಿ ದೇವಸ್ಥಾನಕ್ಕೆ ಭೇಟಿ ನೀಡಲು ಯೋಜಿಸಿದ್ದರು. ಅಂತೆಯೇ ಪತಿ ವಾಹನ ಬುಕ್ ಮಾಡಲು ತೆರಳಿದರು. ಹೀಗೆ ಹೋದವನು ವಾಪಸ್ ರೂಮಿಗೆ ಬರುವಾಗ ಪತ್ನಿ ತನ್ನ ಲಗೇಜ್‍ನೊಂದಿಗೆ ಕಾಣೆಯಾಗಿದ್ದಳು. ಇದನ್ನು ಕಂಡ ಪತಿ ದಿಗ್ಭ್ರಮೆಗೊಂಡನು. ಇದನ್ನೂ ಓದಿ: ಪೈಗಂಬರ್ ಬಗ್ಗೆ ಅವಹೇಳನ ಮಾಡಿದವರ ತಲೆ ತೆಗೆಯಿರಿ – ಪೋಸ್ಟ್ ಹಾಕಿದ ಯುವಕರು ಅರೆಸ್ಟ್

    ಆಕೆಗಾಗಿ ಇಡೀ ಹೋಟೆಲ್‍ನಲ್ಲಿ ಹುಡುಕಾಟ ನಡೆಸಿದನು. ಎಲ್ಲಯೂ ಸಿಗದೇ ಇದ್ದಾಗ ಆಕೆಯ ಮೊಬೈಲ್ ನಂಬರಿಗೆ ಕರೆ ಮಾಡಿದ್ದಾನೆ. ಆದರೆ ಆಕೆ ಕರೆ ಸ್ವೀಕರಿಸುತ್ತಿರಲಿಲ್ಲ. ಬಳಿಕ ಅವರು ಹೋಟೆಲ್‍ನ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದರು. ಈ ವೇಳೆ ಆಕೆ ಫೋನ್‍ನಲ್ಲಿ ಮಾತನಾಡುತ್ತಾ ಹೋಟೆಲ್‍ನಿಂದ ಹೊರಟು ಹೋಗಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಪತಿ ಝೋತ್ವಾರಾ ಪೊಲೀಸ್ ಠಾಣೆಯಲ್ಲಿ ಪತ್ನಿ ನಾಪತ್ತೆಯಗಿದ್ದಾರೆ ಎಂದು ದೂರು ದಾಖಲಿಸಿದ್ದಾರೆ.

    ಈ ಸಂಬಂಧ ಅಲ್ಲಿನ ಎಎಸ್‍ಐ ಬಜರಂಗಲಾಲ್ ಶರ್ಮಾ ಮಾತನಾಡಿ, ಹನಿಮೂನ್‍ಗೆ ಭೋಪಾಲ್ ಮೂಲದ ದಂಪತಿ ಆಗಸ್ಟ್ 5ರಂದು ಬಂದಿದ್ದರು. ಕೆಲ ವಿಚಾರಗಳಿಗೆ ಹೊಟೇಲ್‍ನಲ್ಲಿ ಪತಿ-ಪತ್ನಿ ನಡುವೆ ವಾಗ್ವಾದ ನಡೆದಿದೆ. ಬಳಿಕ ಪತಿ ಕ್ಯಾಬ್ ಬುಕ್ ಮಾಡಲು ಕೆಳಗಿಳಿದಿದ್ದು, ಕೋಪಗೊಂಡ ಪತ್ನಿ ಹೋಟೆಲ್‍ನಿಂದ ಹೊರಟು ಹೋಗಿದ್ದಾರೆ.

    ಸದ್ಯ ಕಾಣೆಯಾದ ಪತ್ನಿಯನ್ನು ಸಂಪರ್ಕಿಸಲು ಯತ್ನಿಸುತ್ತಿದ್ದಾರೆ. ಪತಿ-ಪತ್ನಿಯರ ನಡುವೆ ಜಗಳ ನಡೆದ ಬಳಿಕವೇ ಪತ್ನಿ ಕೋಪಗೊಂಡು ಹೋಟೆಲ್ ತೊರೆದಿದ್ದು, ನಾವು ಅವರನ್ನು ಪತ್ತೆ ಮಾಡಲು ಪ್ರಯತ್ನಿಸುತ್ತಿದ್ದು, ಮತ್ತು ಶೀಘ್ರದಲ್ಲೇ ಹುಡಕುತ್ತೇವೆ ಎಂದು ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇನ್‌ಸ್ಟಾ ಸ್ನೇಹಿತನ ಭೇಟಿಗಾಗಿ ಪಾಕಿಸ್ತಾನಕ್ಕೆ ಹೊರಟಿದ್ದ ಅಪ್ರಾಪ್ತೆ ಪೊಲೀಸರ ವಶಕ್ಕೆ

    ಇನ್‌ಸ್ಟಾ ಸ್ನೇಹಿತನ ಭೇಟಿಗಾಗಿ ಪಾಕಿಸ್ತಾನಕ್ಕೆ ಹೊರಟಿದ್ದ ಅಪ್ರಾಪ್ತೆ ಪೊಲೀಸರ ವಶಕ್ಕೆ

    – ಜೈಪುರ ವಿಮಾನ ನಿಲ್ದಾಣದಲ್ಲಿ ಹೈಡ್ರಾಮಾ

    ಜೈಪುರ: ಇನ್ಸ್ಟಾಗ್ರಾಂ (Instagram) ಸ್ನೇಹಿತನನ್ನು ಭೇಟಿ ಮಾಡುವ ಸಲುವಾಗಿ ಪಾಸ್‌ಪೋರ್ಟ್ (Passport) ಮತ್ತು ವೀಸಾ (Visa) ಇಲ್ಲದೆ ಪಾಕಿಸ್ತಾನಕ್ಕೆ (Pakistan) ತೆರಳಲು ಮುಂದಾಗಿದ್ದ 16 ವರ್ಷದ ಅಪ್ರಾಪ್ತ (Minor) ಬಾಲಕಿಯನ್ನು ಜೈಪುರ (Jaipur) ವಿಮಾನ ನಿಲ್ದಾಣದಲ್ಲಿ (Airport) ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ವಶಕ್ಕೆ ಪಡೆದ ಬಾಲಕಿಯನ್ನು ಗಜಲ್ ಪರ್ವಿನ್ ಎಂದು ಗುರುತಿಸಲಾಗಿದೆ. ಈಕೆ ರಾಜಸ್ಥಾನದ ಸಿಕಾರ್‌ನ ಶ್ರೀಮಧೋಪುರದ ನಿವಾಸಿಯಾಗಿದ್ದು, ಪಾಕಿಸ್ತಾನಕ್ಕೆ ತೆರಳಲು ಬೇಕಾದ ಅಗತ್ಯ ದಾಖಲೆಗಳನ್ನು ಆಕೆ ಹೊಂದಿರಲಿಲ್ಲ ಎಂದು ವಿಮಾನ ನಿಲ್ದಾಣದ ಠಾಣಾಧಿಕಾರಿ ದಿಗ್ಪಾಲ್ ಸಿಂಗ್ ಹೇಳಿದ್ದಾರೆ. ತನ್ನ ಇನ್ಸ್ಟಾಗ್ರಾಂ ಸ್ನೇಹಿತನನ್ನು ಭೇಟಿ ಮಾಡಲು ಪಾಕಿಸ್ತಾನದ ಲಾಹೋರ್‌ಗೆ ತೆರಳಲು ನಿರ್ಧರಿಸಿ ವಿಮಾನ ನಿಲ್ದಾಣಕ್ಕೆ ಬಂದಿರುವುದಾಗಿ ವಿಚಾರಣೆ ವೇಳೆ ಬಾಲಕಿ ಪೊಲೀಸರಿಗೆ ತಿಳಿಸಿದ್ದಾಳೆ ಎಂದು ಅಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಮಣಿಪುರ ಹಿಂಸಾಚಾರದಲ್ಲಿ ವಿದೇಶಿ ಏಜೆನ್ಸಿಗಳ ಹಸ್ತಕ್ಷೇಪ: ಮಾಜಿ ಸೇನಾ ಮುಖ್ಯಸ್ಥ

    ಈ ಕುರಿತು ಆಕೆಯ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದು, ಆಕೆಯನ್ನು ಅವರಿಗೆ ಒಪ್ಪಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಪಾಕಿಸ್ತಾನಕ್ಕೆ ಟಿಕೆಟ್ ಪಡೆಯುವ ಸಲುವಾಗಿ ಈಕೆ ಸುಳ್ಳು ಕಥೆಯೊಂದನ್ನು ಹೆಣೆದಿದ್ದು, ವಿಚಾರಣೆ ವೇಳೆ ನಿಜಾಂಶ ಹೊರಬಿದ್ದಿದೆ. ಇದನ್ನೂ ಓದಿ: ಬಂಗಾಳಕೊಲ್ಲಿಯಲ್ಲಿ ಸಿಲುಕಿದ್ದ 36 ಭಾರತೀಯ ಮೀನುಗಾರರ ರಕ್ಷಣೆ

    ವಿಮಾನ ನಿಲ್ದಾಣಕ್ಕೆ ಇಬ್ಬರು ಹುಡುಗರೊಂದಿಗೆ ಬಂದ ಬಾಲಕಿ ತಾನು ಪಾಕಿಸ್ತಾನದ ನಿವಾಸಿಯಾಗಿದ್ದು, ಮೂರು ವರ್ಷಗಳ ಹಿಂದೆ ಚಿಕ್ಕಮ್ಮನೊಂದಿಗೆ ಭಾರತಕ್ಕೆ ಬಂದು ಸಿಕಾರ್‌ನ ಶ್ರೀಮಧೋಪುರದಲ್ಲಿ ನೆಲೆಸಿದ್ದೆ. ಇದೀಗ ಆಕೆಯ ಜೊತೆ ಹೊಂದಾಣಿಕೆಯಾಗದೆ ವಾಪಸ್ ಪಾಕಿಸ್ತಾನಕ್ಕೆ ತೆರಳುವ ಸಲುವಾಗಿ ಇಲ್ಲಿಗೆ ಬಂದಿದ್ದೇನೆ ಎಂದು ವಿಮಾನ ನಿಲ್ದಾಣದಲ್ಲಿ ಬಾಲಕಿ ಹೈಡ್ರಾಮ ಮಾಡಿದ್ದಳು. ಆದರೆ ಆಕೆಯ ಬಳಿ ಯಾವುದೇ ವೀಸಾ ಮತ್ತು ಪಾಸ್‌ಪೋರ್ಟ್ ಇಲ್ಲದ ಹಿನ್ನೆಲೆ ಆಕೆಯನ್ನು ಪೊಲೀಸರಿಗೆ ಒಪ್ಪಿಸಲಾಗಿತ್ತು. ಇದನ್ನೂ ಓದಿ: ಪಟಾಕಿ ಗೋದಾಮಿನಲ್ಲಿ ಸ್ಫೋಟ – ಒಂದೇ ಕುಟುಂಬದ ನಾಲ್ವರು ಸೇರಿ 9 ಮಂದಿ ಸಾವು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜೈಪುರದಲ್ಲಿ ಮುಂಜಾನೆ 3 ಬಾರಿ ನಡುಗಿದ ಭೂಮಿ- ಗಾಢ ನಿದ್ದೆಯಲ್ಲಿದ್ದ ಮಂದಿಗೆ ಶಾಕ್

    ಜೈಪುರದಲ್ಲಿ ಮುಂಜಾನೆ 3 ಬಾರಿ ನಡುಗಿದ ಭೂಮಿ- ಗಾಢ ನಿದ್ದೆಯಲ್ಲಿದ್ದ ಮಂದಿಗೆ ಶಾಕ್

    ಜೈಪುರ: ಸುಮಾರಿಗೆ ರಾಜಸ್ಥಾನದ ಜೈಪುರದಲ್ಲಿ (Jaipur Earthquake)  ಇಂದು (ಶುಕ್ರವಾರ) ಮುಂಜಾನೆ 4 ಗಂಟೆ ಸುಮಾರಿಗೆ ಪ್ರಬಲ ಭೂಕಂಪನ (Earthquake) ಸಂಭವಿಸಿದೆ. ಭೂಕಂಪನದ ತೀವ್ರತೆಯನ್ನು 4.4 ರಿಕ್ಟರ್ ಮಾಪಕದಲ್ಲಿ ಅಳೆಯಲಾಗಿದೆ. ದೆಹಲಿ-ಎನ್‍ಸಿಆರ್ ನಲ್ಲೂ ಭೂಕಂಪನದ ಅನುಭವವಾಗಿದೆ.

    ಭೂಕಂಪನಗಳನ್ನು ಮೇಲ್ವಿಚಾರಣೆ ಮಾಡುವ ಸಂಸ್ಥೆಯಾದ ರಾಷ್ಟ್ರೀಯ ಭೂಕಂಪನಶಾಸ್ತ್ರದ ಪ್ರಕಾರ, ಮುಂಜಾನೆ 4:10ಕ್ಕೆ ಮೊದಲ ಬಾರಿ (3.01 ತೀವ್ರತೆ), 4:23ಕ್ಕೆ 2ನೇ ಬಾರಿ (3.4 ತೀವ್ರೆತೆ) ಹಾಗೂ 4:25ಕ್ಕೆ ಮೂರನೇ ಬಾರಿ (4.4 ತೀವ್ರತೆ) ಭೂಮಿ ಕಂಪಿಸಿದೆ.  ಜೈಪುರದ ಜನರು ಈ ವೇಳೆ ಗಾಢ ನಿದ್ದೆಯಲ್ಲಿದ್ದರು. ಇದೇ ಸಂದರ್ಭದಲ್ಲಿ ಇಡೀ ನಗರ ನಡುಗಿದ್ದು, ಜನ ಭಯದಿಂದ ಮನೆಗಳಿಂದ ಹೊರಬಂದಿದ್ದಾರೆ.

    ರಾಸ್ಪ್ಬೆರಿ ಶೇಕ್ ಎಂಬ ಖಾಸಗಿ ಭೂಕಂಪನ ಸಂಸ್ಥೆಯ ಪ್ರಕಾರ, ಜೈಪುರದಿಂದ ಸುಮಾರು 10 ಕಿ.ಮೀ. ದೂರದಲ್ಲಿ ಭೂಕಂಪನದ ಕೇಂದ್ರಬಿಂದು ಇದೆ. ಇದರ ಅನುಭವವು ಸುಮಾರು 35 ಕಿಮೀ ದೂರದಲ್ಲಿರುವ ಬಾಸಿ, 51 ಕಿಮೀ ದೂರದಲ್ಲಿರುವ ಸಂಭಾರ್, 53 ಕಿಮೀ ದೂರದಲ್ಲಿರುವ ಮನೋಹರಪುರ ಮತ್ತು 55 ಕಿಮೀ ದೂರದಲ್ಲಿರುವ ರಿಂಗಾಸ್‍ನಲ್ಲಿಯೂ ಆಗಿದೆ. ಇದರೊಂದಿಗೆ ದೂರದ ದೌಸಾ, ಶಹಪುರ, ನಿವಾಯಿ ಮುಂತಾದ ಪ್ರದೇಶಗಳಲ್ಲಿಯೂ ಕಂಪನದ ಅನುಭವವಾಗಿದೆ. ಸದ್ಯ ಈ ಭೂಕಂಪನದ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಜಸ್ಥಾನದಲ್ಲಿ ಭಾರೀ ಮಳೆ – 2 ದಿನದಲ್ಲಿ 13 ಬಲಿ

    ರಾಜಸ್ಥಾನದಲ್ಲಿ ಭಾರೀ ಮಳೆ – 2 ದಿನದಲ್ಲಿ 13 ಬಲಿ

    ಜೈಪುರ: ಕಳೆದ ಎರಡು ದಿನಗಳಲ್ಲಿ ರಾಜಸ್ಥಾನದಲ್ಲಿ (Rajasthan) ಮಳೆ (Rain) ಮತ್ತು ಚಂಡಮಾರುತದ (Thunderstorms) ಹೊಡೆತಕ್ಕೆ ಒಟ್ಟು 13 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ.

    ಪೂರ್ವ ರಾಜಸ್ಥಾನದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಿದ್ದು, ರಾಜ್ಯದ ವಿವಿಧೆಡೆ ಗುಡುಗು ಸಹಿತ ಬಿರುಗಾಳಿ ಬೀಸಿ ಮಳೆಯಾಗಿತ್ತು. ಕಳೆದ ಎರಡು ದಿನಗಳಲ್ಲಿ 13 ಮಂದಿ ಮಳೆಗೆ ಸಾವನ್ನಪ್ಪಿದ್ದು, 10 ಮಂದಿ ಟೋಂಕ್‌ನಲ್ಲಿ ಸಾವನ್ನಪ್ಪಿದ್ದಾರೆ. ಉಳಿದ ಮೂವರು ಅಲ್ವಾರ್, ಜೈಪುರ ಮತ್ತು ಬಿಕಾನೇರ್‌ನಲ್ಲಿ ಮೃತಪಟ್ಟಿದ್ದಾರೆ ಎಂದು ವಿಪತ್ತು ನಿರ್ವಹಣಾ ಮತ್ತು ಪರಿಹಾರ ಇಲಾಖೆ ತಿಳಿಸಿದೆ. ಇದನ್ನೂ ಓದಿ: 1 ಲಕ್ಷದ ಮೊಬೈಲ್‍ಗಾಗಿ ಡ್ಯಾಂನ 21 ಲಕ್ಷ ಲೀ. ನೀರನ್ನೇ ಖಾಲಿ ಮಾಡಿಸಿದ ಅಧಿಕಾರಿ!

    ಭಿಲ್ವಾರದ ಮಂಡಲ್‌ನಲ್ಲಿ 11 ಸೆಂ.ಮೀ ಮಳೆಯಾಗಿದ್ದು, ಹನುಮಾನ್‌ಗಢದ ರಾವತ್ಸರ್‌ನಲ್ಲಿ 6 ಸೆಂ.ಮೀ ಮಳೆ ದಾಖಲಾಗಿದೆ. ಅಷ್ಟೇ ಅಲ್ಲದೇ ಉಳಿದ ಪ್ರದೇಶಗಳಲ್ಲಿ ಸರಾಸರಿ 3 ಸೆಂ.ಮೀ ಮಳೆಯಾಗಿದೆ. ಜೂನ್‌ನಿಂದ ಸೆಪ್ಟೆಂಬರ್‌ವರೆಗಿನ ಮುಂಗಾರು ಋತುವಿನಲ್ಲಿ ಸರಾಸರಿ 96% ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ಕೃಷಿ, ಜಲ ಸಂಪನ್ಮೂಲ ಅಭಿವೃದ್ಧಿಯಲ್ಲಿ ದೇಶದಲ್ಲೇ ರಾಯಚೂರಿಗೆ ಫಸ್ಟ್ ರ‍್ಯಾಂಕ್

    ಅಲ್ಲದೇ ಜೂನ್ ತಿಂಗಳಿನಲ್ಲಿ ರಾಜಸ್ಥಾನದ ಹೆಚ್ಚಿನ ಭಾಗಗಳಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಸಿಬಿಐ ನಿರ್ದೇಶಕರಾಗಿ ಪ್ರವೀಣ್ ಸೂದ್ ಅಧಿಕಾರ ಸ್ವೀಕಾರ

  • ರಾಜಸ್ಥಾನ ಸರ್ಕಾರಿ ಕಟ್ಟಡದಲ್ಲಿ 2.1 ಕೋಟಿ ರೂ. ಹಣ, 1 ಕೆಜಿ ಚಿನ್ನ ಪತ್ತೆ

    ರಾಜಸ್ಥಾನ ಸರ್ಕಾರಿ ಕಟ್ಟಡದಲ್ಲಿ 2.1 ಕೋಟಿ ರೂ. ಹಣ, 1 ಕೆಜಿ ಚಿನ್ನ ಪತ್ತೆ

    ಜೈಪುರ: ರಾಜಸ್ಥಾನದ (Rajasthan) ಜೈಪುರದಲ್ಲಿರುವ (Jaipur) ಸರ್ಕಾರಿ ಕಟ್ಟಡದ ಯೋಜನ ಭವನದ ನೆಲಮಾಳಿಗೆಯಲ್ಲಿ ಬೀಗ ಹಾಕಲಾಗಿದ್ದ ಕಪಾಟಿನಲ್ಲಿ 2.31 ಕೋಟಿ ರೂ.ಗೂ ಅಧಿಕ ನಗದು ಹಾಗೂ 1 ಕೆಜಿ ಚಿನ್ನ ಪತ್ತೆಯಾಗಿದ್ದು, ಅದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ನೆಲಮಾಳಿಗೆಗೆ (Basement) ಪ್ರವೇಶ ಹೊಂದಿರುವ ಯೋಜನಾ ಭವನದ ಏಳು ಉದ್ಯೋಗಿಗಳನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ. ಕಪಾಟಿನಲ್ಲಿ ಇರಿಸಲಾಗಿದ್ದ ಟ್ರಾಲಿ ಸೂಟ್‌ಕೇಸ್‌ನಲ್ಲಿ 2,000 ರೂ. ಹಾಗೂ 500 ರೂ. ಮುಖಬೆಲೆಯ ನೋಟುಗಳು ಪತ್ತೆಯಾಗಿದ್ದು, ಆರ್‌ಬಿಐ 2,000 ರೂ. ಕರೆನ್ಸಿ ಚಲಾವಣೆ ಹಿಂತೆಗೆದುಕೊಂಡ ದಿನ ಈ ಘಟನೆ ನಡೆದಿದೆ. ನಗದು ಹಾಗೂ ಚಿನ್ನವನ್ನು ವಶಪಡಿಸಿಕೊಂಡ ಪೊಲೀಸರು ಈ ಕುರಿತು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot) ಅವರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: MIG-21 ಫೈಟರ್‌ ಜೆಟ್‌ ಹಾರಾಟ ಬಂದ್ – IAF ಮಹತ್ವದ ನಿರ್ಧಾರ

    ಮುಖ್ಯ ಕಾರ್ಯದರ್ಶಿ ಉಷಾ ಶರ್ಮಾ, ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ಉಮೇಶ್ ಮಿಶ್ರಾ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ದಿನೇಶ್ ಎಂಎನ್ ಮತ್ತು ಜೈಪುರ ಕಮಿಷನರ್ ಆನಂದ ಶ್ರೀವಾಸ್ತವ ಅವರು ಶುಕ್ರವಾರ ತಡರಾತ್ರಿ ಸಚಿವಾಲಯದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೈಪುರ ಕಮೀಷನರ್ ಶ್ರೀವಾಸ್ತವ, ಕಪಾಟಿನಲ್ಲಿ ಅನೇಕ ಫೈಲ್‌ಗಳು ಮತ್ತು ಟ್ರಾಲಿ ಸೂಟ್‌ಕೇಸ್‌ನಲ್ಲಿ ಚಿನ್ನ ಮತ್ತು ನಗದು ತುಂಬಿದೆ ಎಂದು ಅಲ್ಲಿನ ನೌಕರರು ಅಶೋಕ್ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ ಎಂದರು. ಇದನ್ನೂ ಓದಿ: ಆರ್ಥಿಕ ತಜ್ಞ ಮೋದಿಯವರೇ 500 ನೋಟು ಹಿಂಪಡೆಯುತ್ತೀರಾ?: ಓವೈಸಿ ಪ್ರಶ್ನೆ

    ಇ-ಫೈಲಿಂಗ್ ಯೋಜನೆಯಡಿ ಕಡತಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಣಗೊಳಿಸಲಾಗುತ್ತಿದೆ. ಅಲ್ಲದೇ ಬೀಗ ಹಾಕಿದ್ದ ಎರಡು ಕಪಾಟುಗಳ ಕೀಗಳು ಪತ್ತೆಯಾದ ನಂತರ ಅವುಗಳನ್ನು ತೆರೆಯಲಾಗಿದೆ. ಏಳು ಮಂದಿ ನೌಕರರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಸಂಪೂರ್ಣ ಪ್ರಕರಣದ ತನಿಖೆಯನ್ನು ಪ್ರಾರಂಭಿಸಿ ಸಂಪೂರ್ಣ ವಿಷಯವನ್ನು ಬಹಿರಂಗಪಡಿಸಲಾಗುವುದು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಪಾಕಿಸ್ತಾನದಿಂದ ಭಾರತಕ್ಕೆ ಡ್ರಗ್ಸ್ ಸಾಗಾಟ – ಎರಡು ಡ್ರೋನ್ ಹೊಡೆದುರುಳಿಸಿದ ಬಿಎಸ್‌ಎಫ್

    ನಗದು ಮತ್ತು ಚಿನ್ನವನ್ನು ವಶಪಡಿಸಿಕೊಂಡ ಕಪಾಟಿಗೆ ಹಲವು ತಿಂಗಳುಗಳಿಂದ ಬೀಗ ಹಾಕಲಾಗಿತ್ತು. ಆಧಾರ್-ಯುಐಡಿ-ಸಂಯೋಜಿತ ಸಿಬ್ಬಂದಿಯ ಸಹಾಯದಿಂದ ನೆಲಮಾಳಿಗೆಯನ್ನು ಪ್ರವೇಶಿಸಿದ ಪೊಲೀಸರು ನೆಲಮಾಳಿಗೆಗೆ ಪ್ರವೇಶವಿರುವ ಉದ್ಯೋಗಿಗಳನ್ನು ಈ ಕುರಿತು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: 2,000 ರೂ. ಮುಖಬೆಲೆಯ ನೋಟ್‌ ಬ್ಯಾನ್‌ ಮಾಡಿದ RBI

    ಯಾರ ಹಣ? ಹೇಗೆ ಬಂತು ಎಂದು ತನಿಖೆ ನಡೆಸುತ್ತಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡಲಾಗುತ್ತಿದೆ. ಈ ಘಟನೆಯ ಬಳಿಕ ಪ್ರತಿಪಕ್ಷವಾದ ಬಿಜೆಪಿ ಈ ವಿಷಯದ ಬಗ್ಗೆ ಕಾಂಗ್ರೆಸ್ ಸರ್ಕಾರವನ್ನು ಗುರಿಯಾಗಿಸಿದೆ. ವಿರೋಧ ಪಕ್ಷದ ನಾಯಕ ರಾಜೇಂದ್ರ ರಾಥೋಡ್, ಇದು ಗೆಹ್ಲೋಟ್ ಸರ್ಕಾರ ಭ್ರಷ್ಟಾಚಾರದ ರಕ್ಷಕ ಎಂಬುವುದಕ್ಕೆ ಸಾಕ್ಷಿಯಾಗಿದೆ ಎಂದು ತಮ್ಮ ಟ್ವಿಟ್ಟರ್‌ನಲ್ಲಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಅಲ್ಲದೇ ಯೋಜನಾ ಭವನಕ್ಕೆ ಇಷ್ಟು ದೊಡ್ಡ ಮೊತ್ತದ ನಗದು ಮತ್ತು ಚಿನ್ನ ಹೇಗೆ ತಲುಪಿತು ಎಂಬುದನ್ನು ಮುಖ್ಯಮಂತ್ರಿಗಳು ಉತ್ತರಿಸಬೇಕು ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಷೇರು ವಿವಾದ; ಅದಾನಿ ಗ್ರೂಪ್‌ಗೆ ಸುಪ್ರೀಂ ಕೋರ್ಟ್ ಸಮಿತಿ ಕ್ಲೀನ್ ಚಿಟ್

  • ವಿವಾಹಿತೆ ಜೊತೆ ಓಡಿಹೋಗಿದ್ದಕ್ಕೆ ವ್ಯಕ್ತಿಯ ಮೂಗನ್ನೇ ಕತ್ತರಿಸಿದ್ರು!

    ವಿವಾಹಿತೆ ಜೊತೆ ಓಡಿಹೋಗಿದ್ದಕ್ಕೆ ವ್ಯಕ್ತಿಯ ಮೂಗನ್ನೇ ಕತ್ತರಿಸಿದ್ರು!

    – ಐವರ ಬಂಧನ

    ಜೈಪುರ: ವಿವಾಹಿತೆ ಜೊತೆ ಪರಾರಿಯಾಗಿದ್ದಕ್ಕೆ ವ್ಯಕ್ತಿಯೊಬ್ಬನ ಮೂಗ (Nose Cut) ನ್ನೇ ಕತ್ತರಿಸಿದ ಪ್ರಕರಣ ಸಂಬಂಧ ಇದೀಗ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಘಟನೆ ನಾಗ್ಪುರ ಜಿಲ್ಲೆಯಲ್ಲಿ ನಡೆದಿದ್ದು, ಆರೋಪಿಗಳ ಕೃತ್ಯದ ವೀಡಿಯೋ ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಸಖತ್ ವೈರಲ್ ಆಗಿದೆ.

    ಪರ್ಬಾಸ್ತಾರ್ ನಿವಾಸಿ ಹಮೀದ್ ಜನವರಿ ತಿಂಗಳಲ್ಲಿ ವಿವಾಹಿತೆ ಜೊತೆ ಪರಾರಿಯಾಗಿ ಅಜ್ಮೀರ್‍ನಲ್ಲಿ ವಾಸವಾಗಿದ್ದ. ಈ ವಿಚಾರ ತಿಳಿದ ಮಹಿಳೆಯ ಕಡೆಯವರು, ಅಜ್ಮೀರ್ ಗೆ ತೆರಳಿ ಹಮೀದ್‍ನನ್ನು ಅಪಹರಿಸಿ ಕೃಷಿಗೆ ಬಳಸುವ ಮೆಶಿನ್‍ನಿಂದ ಮೂಗನ್ನು ಕತ್ತರಿಸಿದ್ದಾರೆ. ಇದನ್ನೂ ಓದಿ: ಪ್ರಿಯಕರನೊಂದಿಗೆ 6 ವರ್ಷವಿದ್ದು ಮಗು ಮಾಡಿಕೊಂಡಿದ್ದ ಮಹಿಳೆ – ವಿಷಯ ತಿಳಿಯುತ್ತಲೇ ಪತಿಯಿಂದ ಪತ್ನಿ ಕೊಲೆ

    ಈ ಸಂಬಂಧ ಸಂತ್ರಸ್ತ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಗಳು ಮೊದಲು ನನಗೆ ಕೋಲು ಹಾಗೂ ಕಬ್ಬಿಣದ ರಾಡ್‍ನಿಂದ ಮನಬಂದಂತೆ ಥಳಿಸಿದ್ದಾರೆ. ನಂತರ ಹತ್ತಿರದ ಕೆರೆಯ ಬಳಿ ಕರೆದೊಯ್ದು ಮೂಗು ಕತ್ತರಿಸಿದ್ದಾರೆ. ಅಲ್ಲದೆ ಈ ದೃಶ್ಯವನ್ನು ತಮ್ಮ ಮೊಬೈಲ್‍ನಲ್ಲಿ ಸೆರೆಹಿಡಿದಿದ್ದಾರೆ.

    ಮಹಿಳೆಯ ಸಹೋದರ ಹಾಗೂ ಆತನ ಸಂಬಂಧಿಕರು ನನ್ನ ಅಪಹರಿಸಿ ನಾಗ್ಪುರ ಜಿಲ್ಲೆಗೆ ಕರೆದೊಯ್ದು ಮೂಗು ಕತ್ತರಿಸಿರುವುದಾಗಿ ಸಂತ್ರಸ್ತ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾನೆ.

    ಇತ್ತ ಸಾಮಾಜಿಕ ಜಾಲತಾಣದಲ್ಲಿ ಕೃತ್ಯದ ವೀಡಿಯೋ ವೈರಲ್ ಆಗುತ್ತಿದ್ದಂತೆಯೇ ಪೊಲೀಸರು ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಪ್ರಕರಣ ಸಂಬಂಧ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಅಜ್ಮೀರ್‍ನ ಗೊಗ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಯುವಕನ ಹೊಟ್ಟೆಯಿಂದ 56 ಬ್ಲೇಡ್‍ಗಳನ್ನು ಹೊರತೆಗೆದ ವೈದ್ಯರು!

    ಯುವಕನ ಹೊಟ್ಟೆಯಿಂದ 56 ಬ್ಲೇಡ್‍ಗಳನ್ನು ಹೊರತೆಗೆದ ವೈದ್ಯರು!

    ಜೈಪುರ: 26 ವರ್ಷದ ಯುವಕನೊಬ್ಬ ಬರೋಬ್ಬರಿ 56 ಬ್ಲೇಡ್‍ (blades) ಗಳನ್ನು ನುಂಗಿರುವ ಅಚ್ಚರಿ ಹಾಗೂ ಆಘಾತಕಾರಿ ಘಟನೆಯೊಂದು ರಾಜಸ್ಥಾನ (Rajasthan) ದಲ್ಲಿ ಬೆಳಕಿಗೆ ಬಂದಿದೆ.

    ಯುವಕನನ್ನು ಯಶಪಾಲ್ ಸಿಂಗ್ ಎಂದು ಗುರುತಿಸಲಾಗಿದೆ. ರಾಜಸ್ಥಾನದ ಸಂಚೋರ್ ಪಟ್ಟಣದ ಖಾಸಗಿ ಕಂಪನಿಯೊಂದರಲ್ಲಿ ಅಕೌಂಟೆಂಟ್ ಆಗಿ ನಿರ್ವಹಿಸುತ್ತಿದ್ದ ಯಶಪಾಲ್ ಸಿಂಗ್, ತನ್ನ ನಾಲ್ವರು ಸ್ನೇಹಿತರೊಂದಿಗೆ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದನು. ಇತ್ತೀಚೆಗೆ ಯಶಪಾಲ್ ವಿಪರೀತವಾಗಿ ರಕ್ತವಾಂತಿ ಮಾಡುತ್ತಿದ್ದ ಪರಿಣಾಮ ಕೂಡಲೇ ಗೆಳೆಯರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವೇಳೆ ಆತನನ್ನು ವೈದ್ಯರು ಪರೀಕ್ಷೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

    ಖಾಸಗಿ ಆಸ್ಪತ್ರೆಯ ವೈದ್ಯ ಡಾ.ನರಸಿ ರಾಮ್ ದೇವಸಿ ನಡೆಸಿದ ಸ್ಕ್ಯಾನಿಂಗ್ ರಿಪೋರ್ಟ್‍ನಲ್ಲಿ ಆತನ ಹೊಟ್ಟೆಯೊಳಗೆ ಲೋಹದ ಅಂಶ ಪತ್ತೆಯಾಗಿದೆ. ಸಮಸ್ಯೆಯನ್ನು ಸ್ಪಷ್ಟವಾಗಿ ಅರ್ಥಮಾಡಿಕೊಳ್ಳಲು, ವೈದ್ಯರು ಸೋನೋಗ್ರಫಿ (Sonography) ಮತ್ತು ಎಂಡೋಸ್ಕೋಪಿ ಪರೀಕ್ಷೆ ನಡೆಸಿದ್ದಾರೆ. ವ್ಯಕ್ತಿಯ ಹೊಟ್ಟೆಯಲ್ಲಿ ಲೋಹದ ಬ್ಲೇಡ್‍ಗಳಿವೆ ಎಂದು ಪರೀಕ್ಷೆಗಳಲ್ಲಿ ಸ್ಪಷ್ಟವಾಗಿ ತಿಳಿದುಬಂದಿದೆ. ತಕ್ಷಣ ಆಪರೇಷನ್ ನಡೆಸಿ ಹೊಟ್ಟೆಯಿಂದ 56 ಬ್ಲೇಡ್‍ಗಳನ್ನು ಹೊರತೆಗೆಯಲಾಗಿದೆ. ಇದನ್ನೂ ಓದಿ: ಗರ್ಭದಲ್ಲಿರುವ ಮಗು ಹೃದಯಕ್ಕೆ ಯಶಸ್ವಿ ಶಸ್ತ್ರಚಿಕಿತ್ಸೆ – ಏಮ್ಸ್ ವೈದ್ಯರ ಸಾಧನೆ

    ಈತ ಪೇಪರ್ ಕವರ್ ಗಳ ಸಮೇತ ಬ್ಲೇಡ್ ನುಂಗಿದ್ದು, ಪ್ರಾರಂಭದಲ್ಲಿ ಆತನಿಗೆ ಗೊತ್ತಾಗಲ್ಲಿಲ್ಲ. ಹೊಟ್ಟೆಯೊಳಗೆ ಪೇಪರ್ ಕರಗಿದಂತೆ, ಅದು ಹಾನಿಯನ್ನುಂಟುಮಾಡಲು ಪ್ರಾರಂಭಿಸಿದೆ. ನಂತರ ನೋವು, ವಾಂತಿ ಪ್ರಾರಂಭವಾಗಿದೆ. ಬ್ಲೇಡ್‍ಗಳನ್ನು ಇಬ್ಭಾಗ ಮಾಡಿ ತಿಂದಿದ್ದಾನೆ. ಸದ್ಯ ಆತನ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ವಿವರಿಸಿದ್ದಾರೆ.

  • ಸೋನಿಯಾ ಗಾಂಧಿ ತಿರುಚಿದ ವಿಡಿಯೋ ಪೋಸ್ಟ್ – ವ್ಯಕ್ತಿ ಬಂಧನ

    ಸೋನಿಯಾ ಗಾಂಧಿ ತಿರುಚಿದ ವಿಡಿಯೋ ಪೋಸ್ಟ್ – ವ್ಯಕ್ತಿ ಬಂಧನ

    ಜೈಪುರ: ಅಖಿಲ ಭಾರತ ಕಾಂಗ್ರೆಸ್ (Congress) ಸಮಿತಿಯ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರ ತಿರುಚಿದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ರಾಜಸ್ಥಾನದ (Rajasthan) ಪ್ರತಾಪಗಢ ಮೂಲದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಘಟನೆಯು ಬೆಳಕಿಗೆ ಬಂದಂತೆ ಪೊಲೀಸ್ ಸೈಬರ್ ಕ್ರೈಂ (Police Cyber Crime) ವಿಭಾಗವು ಆರೋಪಿ ಬಿಪಿನ್ ಕುಮಾರ್ ಸಿಂಗ್ ಶಾಂಡಿಲ್ಯನನ್ನು ಪತ್ತೆಹಚ್ಚಿ ಬಂಧಿಸಿ ಆತನನ್ನು ನ್ಯಾಯಾಲಯಕ್ಕೆ (Court) ಹಾಜರುಪಡಿಸಿದೆ. ನ್ಯಾಯಾಲಯವು ಆರೋಪಿಯನ್ನು ಮಾರ್ಚ್ 14ರ ವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ. ಇದನ್ನೂ ಓದಿ: ಮೋದಿ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಹೆದ್ದಾರಿಯಲ್ಲಿ ಸಂಚಾರಕ್ಕೆ ಅನುಮತಿ  

    ಈ ಹಿಂದೆಯೇ ಸಾಮಾಜಿಕ ಮಾಧ್ಯಮ ವೇದಿಕೆಯು ಆರೋಪಿಯಲ್ಲಿ ವಿಡಿಯೋವನ್ನು ತೆಗೆದುಹಾಕುವಂತೆ ಸೂಚಿಸಿತ್ತು. ಆದರೆ ಆರೋಪಿ ಸೂಚನೆಯನ್ನು ಧಿಕ್ಕರಿಸಿ ಕೃತ್ಯವನ್ನು ಮುಂದುವರಿಸಿದ್ದ ಎಂದು ತಿಳಿದು ಬಂದಿದೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ಈ ವಿಚಾರದಲ್ಲಿ ಮಧ್ಯ ಪ್ರವೇಶಿಸಿ ಪೋಸ್ಟ್ ಮಾಡಿರುವ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಿಂದ ತೆಗೆದುಹಾಕಿ ಆರೋಪಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಆಸ್ಕರ್ ಪ್ರಶಸ್ತಿ ಪ್ರದಾನಕ್ಕೆ ಕ್ಷಣಗಣನೆ : ಭಾರತದ ಯಾವ ಚಿತ್ರಕ್ಕೆ ಸಿಗತ್ತೆ ಆಸ್ಕರ್?