Tag: Jaipur

  • ಜಮೀನು ವಿವಾದ – ಕಾರ್ಮಿಕನ ಕಾಲಿನ ಮೇಲೆ ಟ್ರ್ಯಾಕ್ಟರ್ ಹರಿಸಿ ಹತ್ಯೆ

    ಜಮೀನು ವಿವಾದ – ಕಾರ್ಮಿಕನ ಕಾಲಿನ ಮೇಲೆ ಟ್ರ್ಯಾಕ್ಟರ್ ಹರಿಸಿ ಹತ್ಯೆ

    ಜೈಪುರ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ 9 ಮಂದಿಯ ಗುಂಪು ಕಾರ್ಮಿಕನೊಬ್ಬರನ್ನು ರಾಡ್ ಮತ್ತು ದೊಣ್ಣೆಗಳಿಂದ ಹೊಡೆದು ಅವರ ಕಾಲುಗಳ ಮೇಲೆ ಟ್ರ್ಯಾಕ್ಟರ್ ಹರಿಸಿ ಕೊಂದಿರುವ ಘಟನೆ ರಾಜಸ್ಥಾನದ ಬುಂಡಿ ಜಿಲ್ಲೆಯಲ್ಲಿ ನಡೆದಿದೆ.

    ಚಂದಾ ಕಾ ತಾಲಾಬ್ ನಿವಾಸಿ ಸುಖಲಾಲ್ ಗುರ್ಜರ್ (40) ಕೊಲೆಗಿಡಾದ ವ್ಯಕ್ತಿ. ಸುಖಲಾಲ್ ಅವರು ಸರ್ಕಾರದ ಗ್ರಾಮೀಣ ಉದ್ಯೋಗ ಯೋಜನೆ (ಎಮ್‍ಜಿಎನ್‍ಆರ್‍ಇಜಿಎ) ಅಡಿಯಲ್ಲಿ ಕಾರ್ಮಿಕರಾಗಿದ್ದರು. ಅರಣ್ಯ ಹುಲ್ಲುಗಾವಲು ಜಾಗವನ್ನು ಆಕ್ರಮಿಸಿಕೊಳ್ಳುವ ಬಗ್ಗೆ ಗುರ್ಜರ್ ಕೆಲವು ಗ್ರಾಮಸ್ಥರೊಂದಿಗೆ ವಿವಾದವನ್ನು ಹೊಂದಿದ್ದರು. ಈ ಹಿನ್ನೆಲೆ ಅವರು ಭಾನುವಾರ ಬೆಳಗ್ಗೆ ತನ್ನ ಬೈಕಿನಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಆರೋಪಿಗಳು ಅವರ ಮೇಲೆ ದಾಳಿ ಮಾಡಿದ್ದಾರೆ. ಏಳು ತಿಂಗಳ ಹಿಂದೆ ಎರಡು ಕಡೆ ಜಗಳವಾಗಿ ಅವರ ಮೂಳೆ ಮುರಿದಿತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ವಿಷಯ ತಿಳಿದ ನಂತರ ಕುಟುಂಬ ಸದಸ್ಯರು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಕೋಟಾದ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ವೈದ್ಯರು ಬರುವಾಗಲೇ ಅವರು ಸಾವನ್ನಪ್ಪಿದ್ದಾರೆ.

    ಒಂಬತ್ತು ಜನರ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು, ಪ್ರಮುಖ ಆರೋಪಿಗಳನ್ನು ಗುಜರಾಜ್ ಗುರ್ಜರ್ ಮತ್ತು ಭೋಜರಾಜ್ ಗುರ್ಜರ್ ಎಂದು ಗುರುತಿಸಲಾಗಿದ್ದು, ಉಳಿದ ಆರೋಪಿಗಳನ್ನು ಹಿಡಿಯಲು ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.

  • ತಂದೆಯ ಸ್ನೇಹಿತನಿಂದಲೇ ಅಪ್ರಾಪ್ತೆಯ ಮೇಲೆ ರೇಪ್

    ತಂದೆಯ ಸ್ನೇಹಿತನಿಂದಲೇ ಅಪ್ರಾಪ್ತೆಯ ಮೇಲೆ ರೇಪ್

    ಜೈಪುರ: ಬಾಲಕಿಯೊಬ್ಬಳ ಮೇಲೆ ಆಕೆಯ ತಂದೆಯ ಸ್ನೇಹಿತ ಅತ್ಯಾಚಾರಗೈದು ಪರಾರಿಯಾದ ಘಟನೆ ತಹ್ಲಾ ಪೊಲೀಸ್ ಠಾಣೆ ವ್ಯಾಪ್ತಿಯ ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ನಡೆದಿದೆ.

    ಬಾಲಕಿಯು ಸಂಜೆ 7 ಗಂಟೆ ಸುಮಾರಿಗೆ ತರಕಾರಿ ಖರೀದಿಸಲು ಹೋಗಿದ್ದಳು. ಈ ವೇಳೆ ಆರೋಪಿಯು ಆಕೆಯನ್ನು ಅಡ್ಡಗಟ್ಟಿ ಎಲ್ಲಿಗೆ ಹೋಗುತ್ತಿದ್ದೀಯ್ಯಾ ಎಂದು ಪ್ರಶ್ನಿಸಿದ್ದಾನೆ. ತರಕಾರಿ ಖರೀದಿಸಲು ಹೋಗುತ್ತಿದ್ದೇನೆ ಅಂತ ಬಾಲಕಿ ಉತ್ತರಿಸಿದಾಗ, ಹಾಗಾದರೆ ನಾನು ನಿನ್ನ ಜೊತೆ ಬರುವೆ ನಡೆ ಅಂತ ಹೇಳಿ ಆರೋಪಿಯು ಆಕೆಯನ್ನು ತರಕಾರಿ ತರಲು ತನ್ನೊಂದಿಗೆ ಕರೆದೊಯ್ದಿದ್ದಾನೆ.

    ಬಳಿಕ ಆ ವ್ಯಕ್ತಿ ಬಾಲಕಿಯನ್ನು ನಿರ್ಜನ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಅದೇ ಸಮಯದಲ್ಲಿ ಸಮೀಪದ ಪ್ರದೇಶವೊಂದರಲ್ಲಿ ದಾಟಿ ಹೋಗುತ್ತಿದ್ದ ಕೆಲವು ಯುವಕರು, ಹುಡುಗಿಯ ಕಿರುಚಾಟವನ್ನು ಕೇಳಿ ಸ್ಥಳಕ್ಕೆ ಧಾವಿಸಿದ್ದಾರೆ. ಈ ವೇಳೆ ಯುವಕರು ತಮ್ಮನ್ನು ರಕ್ಷಿಸಿಕೊಳ್ಳಲು ಘಟನೆಯನ್ನು ರೆಕಾರ್ಡ್ ಮಾಡಿ ಘಟನೆಯ ಬಗ್ಗೆ ಸ್ಥಳೀಯರಿಗೆ ತಿಳಿಸಿದ್ದಾರೆ. ಯುವಕರನ್ನು ಕಂಡ ಆರೋಪಿಯು ಸ್ಥಳದಿಂದ ಪರಾರಿಯಾಗಿದ್ದಾನೆ. ಇದನ್ನೂ ಓದಿ: ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ – ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

    ಬಾಲಕಿಯನ್ನು ವೈದ್ಯಕೀಯ ಚಿಕಿತ್ಸೆಗಾಗಿ ತಹ್ಲಾದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದ್ದು ರಾಜ್‍ಗಢಕ್ಕೆ ಸ್ಥಳಾಂತರಿಸಲಾಗಿದೆ. ಆಕೆಯ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಘಟನೆ ಬಳಿಕ ಸಂತ್ರಸ್ತೆಯ ಸಂಬಂಧಿಕರು ಪೊಲೀಸರಿಗೆ ದೂರು ನೀಡಿ ಆರೋಪಿಯ ವಿರುದ್ಧ ದೂರು ದಾಖಲಿಸಿದ್ದಾರೆ. ಪೊಲೀಸರು ಆರೋಪಿಯ ವಿರುದ್ಧ ಪೋಕ್ಸೊ ಕಾಯ್ದೆಯ ಇತರ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: ಬಾಲಚಂದ್ರ ಜಾರಕಿಹೊಳಿ ಬದಲು ಆಪ್ತ ಕಾರ್ಯದರ್ಶಿಗಳಿಂದ ಕಾಮಗಾರಿ ಉದ್ಘಾಟನೆ : ಕಾಂಗ್ರೆಸ್

    ಈ ಬಗ್ಗೆ ಅಲ್ವಾರ್ ಎಸ್ಪಿ ತೇಜಸ್ವಿ ಗೌತಮ್ ಮಾತನಾಡಿ, ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಶೀಘ್ರದಲ್ಲೇ ಆರೋಪಿಯನ್ನು ಬಂಧಿಸುತ್ತೇವೆ ಎಂದು ಹೇಳಿದರು.

  • ಪೊಲೀಸರಿಂದ ಕೊಲೆಯ ಸಾಕ್ಷ್ಯಾಧಾರಗಳನ್ನು ಕದ್ದ ಕೋತಿ!

    ಪೊಲೀಸರಿಂದ ಕೊಲೆಯ ಸಾಕ್ಷ್ಯಾಧಾರಗಳನ್ನು ಕದ್ದ ಕೋತಿ!

    ಜೈಪುರ: ಕೊಲೆ ಮಾಡುವುದು ಅಪರಾಧ. ಕೊಲೆಗೆ ಸಹಕರಿಸುವುದು, ಸಾಕ್ಷ್ಯಾಧಾರಗಳನ್ನೇ ಕಳವು ಮಾಡಿ ಬಚ್ಚಿಡುವುದು, ಅದಕ್ಕಿಂತಲೂ ದೊಡ್ಡ ಅಪರಾಧ. ಆದರಿಲ್ಲಿ ಕೋತಿಯೊಂದು ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದ ಮುಖ್ಯ ಸಾಕ್ಷ್ಯಾಧಾರಗಳನ್ನೇ ಕದ್ದು ಪರಾರಿಯಾಗಿರುವ ಅಪರೂಪದ ಘಟನೆ ರಾಜಾಸ್ಥಾನದ ಜೈಪುರದಲ್ಲಿ ಬೆಳಕಿಗೆ ಬಂದಿದೆ.

    MONKEY (1)

    ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು ಸಾಕ್ಷ್ಯಾಧಾರಗಳನ್ನು ಹಾಜರುಪಡಿಸುವಂತೆ ಸೂಚನೆ ನೀಡಿದಾಗ ಆರೋಪಿಗಳು ಕೊಲೆಗೆ ಬಳಸಿದ್ದ ಚಾಕು ಹಾಗೂ ಇತರ 15 ಸಾಕ್ಷ್ಯಾಧಾರಗಳಿದ್ದ ಬ್ಯಾಗ್ ಅನ್ನು ಕೋತಿ ಕದ್ದಿರುವ ಸತ್ಯ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಮರ್ಯಾದಾ ಹತ್ಯೆ – ತಹಶೀಲ್ದಾರ್ ಕಚೇರಿಯಲ್ಲೇ ಚಾಕುವಿನಿಂದ ಇರಿದು ವ್ಯಕ್ತಿ ಬರ್ಬರ ಕೊಲೆ

    ಯಾವ ಪ್ರಕರಣದ ಸಾಕ್ಷ್ಯ?: 2016ರಲ್ಲಿ ಶಶಿಕಾಂತ್ ಶರ್ಮಾ ಎಂಬ ವ್ಯಕ್ತಿಯು ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮೃತಪಟ್ಟಿದ್ದರು. ಈ ಸಂಬಂಧ ಚಾಂದ್ವಾಜಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡಿದ್ದ ಪೊಲೀಸರು, ಶವ ಪತ್ತೆಯಾದ ನಂತರ, ಮೃತರ ಸಂಬಂಧಿಕರು ಈ ಬಗ್ಗೆ ತನಿಖೆಗೆ ಒತ್ತಾಯಿಸಿ ಜೈಪುರ-ದೆಹಲಿ ಹೆದ್ದಾರಿಯಲ್ಲಿ ರಸ್ತೆತಡೆ ಪ್ರತಿಭಟನೆಯನ್ನೂ ನಡೆಸಿದ್ದರು. ಇದನ್ನೂ ಓದಿ: ಕ್ಷುಲ್ಲಕ ವಿಚಾರಕ್ಕೆ ಪತ್ನಿಯ ಕತ್ತು ಹಿಸುಕಿ ಕೊಲೆ?

    MONKEY (1)

    ಇದರಿಂದ ತನಿಖೆ ಚುರುಕುಗೊಳಿಸಿದ್ದ ಪೊಲೀಸರು 5 ದಿನಗಳ ಹಿಂದೆಯಷ್ಟೇ ರಾಹುಲ್ ಕಂದೆರಾ ಮತ್ತು ಮೋಹನ್‌ಲಾಲ್ ಕಂದೇರಾ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಕೊಲೆ ಪ್ರಕರಣ ದಾಖಲಿಸಿ, ಇಬ್ಬರು ಆರೋಪಿಗಳನ್ನು ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರ ಎದುರು ಹಾಜರುಪಡಿಸಬೇಕಿತ್ತು. ಈ ಹೊತ್ತಿನಲ್ಲೇ ಆರೋಪಿಗಳಿಂದ ಸಂಗ್ರಹಿಸಲಾಗಿದ್ದ ಸಾಕ್ಷ್ಯಾಧಾರಗಳ ಬ್ಯಾಗ್‌ನ್ನು ಕೋತಿಯೊಂದು ಹೊತ್ತೊಯ್ದಿದೆ. ಕೊಲೆ ಮಾಡಲು ಬಳಸಿದ್ದ ಪ್ರಾಥಮಿಕ ಸಾಕ್ಷ್ಯವಾದ ಚಾಕು ಸಹ ಇದೇ ಬ್ಯಾಗ್‌ನಲ್ಲಿತ್ತು ಎಂದು ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿ: ಕ್ಷುಲ್ಲಕ ವಿಚಾರಕ್ಕೆ ಪತ್ನಿಯ ಕತ್ತು ಹಿಸುಕಿ ಕೊಲೆ?

    CRIME 2

    ಬ್ಯಾಗ್ ಕದ್ದದ್ದು ಹೇಗೆ?: ಕೊಲೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಕರೆದೊಯ್ಯುತ್ತಿದ್ದ ಪೊಲೀಸರು ಕೊಲೆಗೆ ಬಳಸಿದ ಚಾಕು ಹಾಗೂ ಇತರ 15 ಮುಖ್ಯ ಸಾಕ್ಷ್ಯಾಧಾರಗಳನ್ನು ಬ್ಯಾಗ್‌ವೊಂದರಲ್ಲಿಟ್ಟಿದ್ದರು. ಮಲ್ಖಾನದಲ್ಲಿ (ಸಾಕ್ಷ್ಯಾಧಾರಗಳನ್ನು ಸಂಗ್ರಹಿಸುವ ಕೊಠಡಿ) ಸ್ಥಳಾವಕಾಶದ ಕೊರತೆ ಇದ್ದುದರಿಂದ ಬ್ಯಾಗ್ ಅನ್ನು ಮರದ ಕೆಳಗೆ ಇಡಲಾಗಿತ್ತು. ಈ ವೇಳೆ ಕೋತಿ ಅದನ್ನು ಹೊತ್ತಿಕೊಂಡು ಓಡಿಹೋಗಿದೆ. ನ್ಯಾಯಾಲಕ್ಕೆ ಸಾಕ್ಷ್ಯವನ್ನು ಹಾಜರುಪಡಿಸುವಂತೆ ಸೂಚನೆ ನೀಡಿದಾಗ ಪೊಲೀಸರು ಈ ವಿಷಯವನ್ನು ತಿಳಿಸಿದ್ದಾರೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.

  • ಸಾಮೂಹಿಕ ಅತ್ಯಾಚಾರ ಮಾಡಿ ಮಹಿಳೆಯನ್ನು ಕೊಲೆಗೈದ ಪಾಪಿಗಳು

    ಸಾಮೂಹಿಕ ಅತ್ಯಾಚಾರ ಮಾಡಿ ಮಹಿಳೆಯನ್ನು ಕೊಲೆಗೈದ ಪಾಪಿಗಳು

    ಜೈಪುರ: ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ, ಆಕೆಯನ್ನು ಕೊಲೆಗೈದಿರುವ ಘಟನೆ ರಾಜಸ್ಥಾನದ ದೌಸಾದಲ್ಲಿ ನಡೆದಿದೆ. ಈ ಹಿನ್ನೆಲೆ  ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

    ರಾಜಸ್ಥಾನದ ದೌಸಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಭಾನುವಾರ 35 ವರ್ಷದ ಮಹಿಳೆ ಮೇಲೆ ಗ್ಯಾಂಗ್ ರೇಪ್ ಮಾಡಿದ ಪಾಪಿಗಳು, ಆಕೆಯನ್ನು ಕೊಲೆ ಮಾಡಿದ್ದರು. ಈ ಪರಿಣಾಮ ಪೊಲೀಸರು ಆರೋಪಿಗಳಿಗಾಗಿ ಬಲೆ ಹಾಕಿದ್ದು, ಸೋಮವಾರ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಇತರ ಆರೋಪಿಗಳನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಮಾಲೀಕನ ಅನುಮತಿ ಇಲ್ಲದೇ ಸಮೋಸಾ ತಿಂದಿದ್ದಕ್ಕೆ ಕೊಲೆ

    KILLING CRIME

    ನಡೆದಿದ್ದೇನು?
    ಈ ಕುರಿತು ದೌಸಾದ ಪೊಲೀಸ್ ಅಧೀಕ್ಷಕ ರಾಜ್‍ಕುಮಾರ್ ಗುಪ್ತಾ ವಿವರಿಸಿದ್ದು, ಮಹಿಳೆ ಭಾನುವಾರ ಬೆಳಗ್ಗೆ ಜೈಪುರದಿಂದ ದೌಸಾಗೆ ಬಸ್ಸಿನಲ್ಲಿ ಹೋಗುತ್ತಿದ್ದಳು. ಬಸ್ಸನ್ನು ಇಳಿದು ತನ್ನ ಪೋಷಕರ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಆರೋಪಿಗಳು ತಮ್ಮ ಕಾರಿನಲ್ಲಿ ಲಿಫ್ಟ್ ನೀಡುವುದಾಗಿ ಹತ್ತಿಸಿಕೊಂಡಿದ್ದಾರೆ.

    ಮಹಿಳೆ ಕೇಳಿದ ಜಾಗಕ್ಕೆ ಬಿಟ್ಟು ಬೇರೆ ಪ್ರದೇಶಕ್ಕೆ ಕರೆದುಕೊಂಡು ಹೋದ ಆರೋಪಿಗಳು, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ನಂತರ ಆರೋಪಿಗಳು ಮಹಿಳೆಯನ್ನು ಕೊಂದು ಆಕೆಯ ದೇಹವನ್ನು ಬಾವಿಗೆ ಎಸೆದು ಪರಾರಿಯಾಗಿದ್ದಾರೆ. ಇದನ್ನೂ ಓದಿ:  ಮಹಿಳಾ ಪೊಲೀಸ್ ಮೇಲೆ ಹಲ್ಲೆ ಆರೋಪ – ಜಿಗ್ನೇಶ್ ಮೇವಾನಿ ವಿರುದ್ಧ ಮತ್ತೊಂದು ಕೇಸ್

    ಸೋಮವಾರ ಬೆಳಗ್ಗೆ ಮಹಿಳೆಯ ಶವವನ್ನು ಬಾವಿಯಿಂದ ಹೊರತೆಗೆಯಲಾಯಿತು. ಪ್ರಸ್ತುತ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಅಪರಾಧಕ್ಕೆ ಬಳಸಿದ ಕಾರನ್ನು ಗುರುತಿಸಲಾಗಿದೆ. ಈ ಆಧಾರ ಮೇಲೆ ಆರೋಪಿಗಳನ್ನು ಹುಡುಕುತ್ತಿದ್ದೇವೆ ಎಂದು ಹೇಳಿದ್ದಾರೆ.

  • ಮಲಗಿದ್ದ ಕೂಲಿಕಾರ್ಮಿಕರ ಮೇಲೆ ಹರಿದ ಕಾರು – ಮುಂದೇನಾಯ್ತು ನೋಡಿ

    ಮಲಗಿದ್ದ ಕೂಲಿಕಾರ್ಮಿಕರ ಮೇಲೆ ಹರಿದ ಕಾರು – ಮುಂದೇನಾಯ್ತು ನೋಡಿ

    ಜೈಪುರ: ವೇಗವಾಗಿ ಬಂದ ಕಾರೊಂದು ಫುಟ್‌ಪಾತ್ (ಪಾದಚಾರಿ ಮಾರ್ಗ)ದಲ್ಲಿ ಮಲಗಿದ್ದವರ ಮೇಲೆ ಹರಿದು, ಓರ್ವ ಮೃತಪಟ್ಟಿರುವ ಘಟನೆ ರಾಜಾಸ್ಥಾನದ ಕೋಟಾ ಜಿಲ್ಲೆಯಲ್ಲಿ ನಡೆದಿದೆ.

    ಕೋಟಾದ ಜೆ.ಕೆ.ಲೋನ್ ಆಸ್ಪತ್ರೆಯ ಮುಂಭಾಗದ ಫುಟ್‌ಪಾತ್‌ನಲ್ಲಿ ಮಲಗಿದ್ದ ಕೂಲಿ ಕಾರ್ಮಿಕರ ಕುಟುಂಬದ ಸದಸ್ಯರ ಮೇಲೆ ಅತಿವೇಗವಾಗಿ ಕಾರು ಹರಿದಿದೆ. ಘಟನೆ ಬಳಿಕ ಸ್ಥಳದಲ್ಲೇ ಕಾರನ್ನು ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಇದನ್ನೂ ಓದಿ: ಟೀ ಜೊತೆಗೆ ಟಿಫನ್ ಕೊಡದಿದ್ದಕ್ಕೆ ಸೊಸೆಗೆ ಗುಂಡಿಟ್ಟ ಮಾವ

    CRIME 2

    ಘಟನೆಯಲ್ಲಿ ಕೂಲಿ ಕಾರ್ಮಿಕ ದಿನೇಶ್ ಸ್ಥಳದಲ್ಲೇ ಮೃತಪಟ್ಟಿದ್ದು, ಪತ್ನಿ ಮತ್ತು ಮಗ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಚಾಲಕನ ಪತ್ತೆಗಾಗಿ ಶೋಧ ನಡೆಸುತ್ತಿದ್ದಾರೆ.

  • ಪರಿಸ್ಥಿತಿಯನ್ನು ಕೆರಳಿಸಲು ಬಂದಿದ್ದಾರೆ –  ತೇಜಸ್ವಿ ಸೂರ್ಯ ಮೇಲೆ ಅಶೋಕ್ ಗೆಹ್ಲೋಟ್ ಕಿಡಿ

    ಪರಿಸ್ಥಿತಿಯನ್ನು ಕೆರಳಿಸಲು ಬಂದಿದ್ದಾರೆ – ತೇಜಸ್ವಿ ಸೂರ್ಯ ಮೇಲೆ ಅಶೋಕ್ ಗೆಹ್ಲೋಟ್ ಕಿಡಿ

    ಜೈಪುರ: ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಅವರು ಕರೌಲಿಗೆ ಬಂದಿರುವುದು ಪರಿಸ್ಥಿತಿಯನ್ನು ಮತ್ತಷ್ಟು ಕೆರಳಿಸಲು ಎಂದು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಕಿಡಿಕಾರಿದ್ದಾರೆ.

    ತೇಜಸ್ವಿ ಸೂರ್ಯ ಹಿಂಸಾಚಾರ ಪೀಡಿತ ಕರೌಲಿಗೆ ಭೇಟಿ ವಿಚಾರವಾಗಿ ಮಾತನಾಡಿದ ಅವರು, ಹೆಸರು ತೇಜಸ್ವಿ ಸೂರ್ಯ ಆದರೆ ಅವರು ಇಲ್ಲಿಗೆ ಬಂದಿದ್ದನ್ನು ನೋಡಿ, ಕರೌಲಿಯಲ್ಲಿ ನಡೆದ ಘಟನೆ ದುರದೃಷ್ಟಕರ. ಈ ಜನರು ಪರಿಸ್ಥಿತಿಯನ್ನು ಮತ್ತಷ್ಟು ಕೆರಳಿಸಲು ಬಂದಿದ್ದಾರೆ ಎಂದು ನಾನು ಈಗಾಗಲೇ ಹೇಳಿದ್ದೇನೆ. ಕರೌಲಿಯಂತಹ ಘಟನೆಗಳು ನಡೆಯಬಾರದು ಎಂದು ಹೇಳಿದರು. ಇದನ್ನೂ ಓದಿ: ಎಲೋನ್ ಮಸ್ಕ್ ಟ್ವಿಟ್ಟರ್ ಮಂಡಳಿಯ ಭಾಗವಲ್ಲ: ಪರಾಗ್ ಅಗರ್ವಾಲ್

    ಇತರ ರಾಜ್ಯಗಳಲ್ಲಿ ಗಲಭೆಗಳು ನಡೆದಾಗ, ಸರ್ಕಾರಗಳು ಮನೆಗಳನ್ನು ನೆಲಸಮಗೊಳಿಸಿದವು. ಯಾವುದೇ ತನಿಖೆಯಿಲ್ಲದೆ ಇಂತಹ ಕ್ರಮ ಕೈಗೊಳ್ಳಲು ಪ್ರಧಾನಿ ಅಥವಾ ಸಿಎಂಗೆ ಯಾವುದೇ ಹಕ್ಕಿಲ್ಲ. ಹಾಗೆ ಮಾಡಲು ಕಾನೂನಿಗೆ ಮಾತ್ರ ವಿಶೇಷ ಅಧಿಕಾರವಿದೆ. ಅದು ತನ್ನದೇ ಆದ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಹೇಳಿದರು. ಇದನ್ನೂ ಓದಿ: ಪ್ರಧಾನಿ ಒಂದೇ ಒಂದು ಮಾತು – ಈಶ್ವರಪ್ಪ ದಿಢೀರ್‌ ರಾಜೀನಾಮೆ

    ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಮತ್ತು ಸಂಸದ ತೇಜಸ್ವಿ ಸೂರ್ಯ, ಪಕ್ಷದ ರಾಜಸ್ಥಾನ ಮುಖ್ಯಸ್ಥ ಸತೀಶ್ ಪೂನಿಯಾ ಮತ್ತು ಇತರರನ್ನು ಬುಧವಾರ ಹಿಂಸಾಚಾರ ಪೀಡಿತ ಕರೌಲಿಗೆ ಭೇಟಿ ನೀಡುವುದನ್ನು ತಡೆಯಲಾಯಿತು. ಅವರನ್ನು ದೌಸಾ-ಕರೌಲಿ ಗಡಿಯಲ್ಲಿ ತಡೆಹಿಡಿಯಲಾಯಿತು. ಆದರೆ ಹಿಂದೂ ಹೊಸ ವರ್ಷವನ್ನು ಆಚರಿಸಲು ನಡೆಸುತ್ತಿದ್ದ ಬೈಕ್ ರ್ಯಾಲಿಯಲ್ಲಿ ಕಲ್ಲು ತೂರಾಟ ನಡೆಸಿದ ನಂತರ ಭುಗಿಲೆದ್ದ ಏಪ್ರಿಲ್ 2 ಹಿಂಸಾಚಾರದ ಸಂತ್ರಸ್ತರನ್ನು ಭೇಟಿ ಮಾಡಲು ಅವರಿಗೆ ಅವಕಾಶ ನೀಡಬೇಕೆಂದು ಒತ್ತಾಯಿಸಿದರು. ಹಿಂಸಾಚಾರದಲ್ಲಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

    ಕರೌಲಿ ಗಲಭೆಗಳು ರಾಜಸ್ಥಾನದಲ್ಲಿ ಸ್ಪಷ್ಟ ಕಾನೂನುಬಾಹಿರತೆಯನ್ನು ಸೂಚಿಸುತ್ತವೆ. ರಾಮನವಮಿ ಶೋಭಾ ಯಾತ್ರೆಗೆ ಅಡ್ಡಿಪಡಿಸುವ ಉದ್ದೇಶಪೂರ್ವಕ ಪ್ರಯತ್ನ ಮತ್ತು ಗಲಭೆಕೋರರರ ವಿರುದ್ಧ ಕ್ರಮ ಕೈಗೊಳ್ಳಲು ಕಾಂಗ್ರೆಸ್ ಸರ್ಕಾರ ಮುಂದಾಗದಿರುವುದು ಶೋಚನೀಯ ಎಂದು ಬಿಜೆಪಿಯ ಯುವ ಘಟಕವಾದ ಬಿಜೆವೈಎಂ ಮುಖ್ಯಸ್ಥರೂ ಆಗಿರುವ ಸೂರ್ಯ ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ.

  • ಪ್ರಾಣ ಪಣಕ್ಕಿಟ್ಟು ಮಗುವನ್ನು ರಕ್ಷಿಸಿದ ಪೊಲೀಸ್ ಪೇದೆ: ಫೋಟೋ ವೈರಲ್

    ಪ್ರಾಣ ಪಣಕ್ಕಿಟ್ಟು ಮಗುವನ್ನು ರಕ್ಷಿಸಿದ ಪೊಲೀಸ್ ಪೇದೆ: ಫೋಟೋ ವೈರಲ್

    ಜೈಪುರ್: ಪೊಲೀಸ್ ಪೇದೆಯೊಬ್ಬರು ಗಲಭೆಕೋರರು ಸುಟ್ಟುಹಾಕಿದ ಸುಡುವ ಕಟ್ಟಡಗಳ ಹಿಂದಿನ ಕಿರಿದಾದ ಕಾಲುದಾರಿಯ ಮೂಲಕ ಮಗುವೊಂದನ್ನು ರಕ್ಷಿಸಿ ಮಾನವೀಯತೆ ಮೆರೆದ ಘಟನೆ ರಾಜಸ್ಥಾನದ ಕರೌಲಿಯಲ್ಲಿ ನಡೆದಿದೆ.

    31 ವರ್ಷ ವಯಸ್ಸಿನ ಪೇದೆ ನೇತ್ರೇಶ್ ಶರ್ಮಾ ಕೋಮು ಗಲಭೆ ಹಿಂಸಾಚಾರ ಪೀಡಿತ ಪ್ರದೇಶದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಈ ವೇಳೆ ಇಡೀ ಊರಿಗೆ ಬೆಂಕಿ ಬಿದ್ದಿತ್ತು. ಆಗ ಒಂದು ಮನೆಯೊಳಗೆ ಇಬ್ಬರು ಮಹಿಳೆಯರು ಬೆಂಕಿಯಲ್ಲಿ ಸಿಲುಕಿದ್ದರು. ಅವರ ಜೊತೆಗೆ ಒಂದು ಮಗುವೂ ಇತ್ತು. ಈ ವೇಳೆ ಶರ್ಮಾ ಅವರು ಮಗುವನ್ನು ಒಂದು ಬಟ್ಟೆಯಲ್ಲಿ ಸುತ್ತಿಕೊಂಡು ಅದನ್ನು ತನ್ನ ಎದೆಗೆ ಅಪ್ಪಿಕೊಂಡು ಸುರಕ್ಷಿತ ಪ್ರದೇಶಕ್ಕೆ ತಲುಪಿಸಲು ಓಡಿದರು. ಆ ವೇಳೆ ತೆಗೆದ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ: ಬಿಜೆಪಿ, ಅವರ ದೊಡ್ಡ ಪರಿವಾರದವರು ಅನೇಕ ಭಾವನಾತ್ಮಕ ವಿಚಾರಗಳನ್ನು ಎತ್ತುತ್ತಿದ್ದಾರೆ: ರಾಮಲಿಂಗಾ ರೆಡ್ಡಿ

    ಘಟನೆ ಕುರಿತ ಈ ಚಿತ್ರವನ್ನು ಐಪಿಎಸ್ ಅಧಿಕಾರಿ ಸುಕೀರ್ತಿ ಮಾಧವ್ ಮಿಶ್ರಾ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅಮೂಲ್ಯವಾದ ಜೀವವೊಂದನ್ನು ಉಳಿಸಿದ್ದಕ್ಕಾಗಿ ಪೋಲೀಸ್ ಪೇದೆ ನೇತ್ರೇಶ್ ಅವರಿಗೆ ಧನ್ಯವಾದವನ್ನು ತಿಳಿಸಿದ್ದಾರೆ. ಇದನ್ನೂ ಓದಿ: ಸಕಾಲ ಯೋಜನೆಯಲ್ಲಿ ಶೀಘ್ರವೇ ತತ್ಕಾಲ್ ಸೇವೆ- ಬಿ.ಸಿ. ನಾಗೇಶ್

    ಶನಿವಾರ ರಾಜಸ್ಥಾನದ ಕರೌಲಿ ಪ್ರದೇಶದಲ್ಲಿ ನಡೆದ ಕೋಮುಗಲಭೆಯ ಸಂದರ್ಭದಲ್ಲಿ ಈ ಚಿತ್ರವನ್ನು ಸೆರೆಹಿಡಿಯಲಾಗಿದೆ. ಏಪ್ರಿಲ್ 2 ರಂದು ರಾಜಸ್ಥಾನದ ಕರೌಲಿಯಲ್ಲಿ ಧಾರ್ಮಿಕ ಮೆರವಣಿಗೆಯ ಭಾಗವಾಗಿ ತೆಗೆದ ಮೋಟಾರ್‌ ಸೈಕಲ್ ರ್‍ಯಾಲಿ ಮೇಲೆ ಕೆಲವು ಅಪರಿಚಿತ ವ್ಯಕ್ತಿಗಳು ಕಲ್ಲು ತೂರಾಟ ನಡೆಸಿದ್ದರಿಂದ ನಾಲ್ವರು ಪೊಲೀಸ್ ಸಿಬ್ಬಂದಿ ಸೇರಿದಂತೆ ಕನಿಷ್ಠ 42 ಜನರು ಗಾಯಗೊಂಡಿದ್ದಾರೆ.

    ಹಿಂದೂ ಹೊಸ ವರ್ಷದ ಮೊದಲ ದಿನವಾದ ಯುಗಾದಿ ಹಬ್ಬದ ಸಂದರ್ಭದಲ್ಲಿ ಮೋಟಾರ್ ಬೈಕ್ ರ್ಯಾಲಿಯೊಂದನ್ನು ಎರ್ಪಡಿದ್ದರು. ರ್‍ಯಾಲಿಯಲ್ಲಿ ಉಂಟಾದ ಹಿಂಸಾಚಾರವು ಗಲಭೆಕೋರರಿಂದ ಅಂಗಡಿಗಳು ಮತ್ತು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಇಲ್ಲಿಯವರೆಗೆ 30 ಜನರನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಹವಾ ಸಿಂಗ್ ಘುಮಾರಿಯಾ ತಿಳಿಸಿದ್ದಾರೆ.

  • ಸರಿಸ್ಕಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅಗ್ನಿ ಅವಘಡ- ಅಪಾಯದಲ್ಲಿ ವನ್ಯಜೀವಿಗಳು

    ಸರಿಸ್ಕಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅಗ್ನಿ ಅವಘಡ- ಅಪಾಯದಲ್ಲಿ ವನ್ಯಜೀವಿಗಳು

    ಜೈಪುರ್: ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಸರಿಸ್ಕಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ವನ್ಯಜೀವಿಗಳು ಅಪಾಯಕ್ಕೆ ಸಿಲುಕಿವೆ.

    ಎರಡು ದಿನಗಳ ಹಿಂದೆ ನಗರದ ಸಮೀಪದಲ್ಲೇ ಇರುವ ಬುರಾ ಸಿಂಗ್ ಬೆಟ್ಟದಲ್ಲಿ ಹೊತ್ತಿಕೊಂಡಿದ್ದ ಬೆಂಕಿ ಗಾಳಿಯ ರಭಸಕ್ಕೆ ಕಾಡಿಗೂ ಹೊತ್ತಿಕೊಂಡಿದೆ. ಕಾಡಿನ ಗುಡ್ಡಗಾಡು ಪ್ರದೇಶಕ್ಕೆ ಬೆಂಕಿ ವ್ಯಾಪಿಸಿರುವುದರಿಂದ ಅಗ್ನಿಶಾಮಕ ದಳ ಅಲ್ಲಿಗೆ ತಲುಪಲು ಸಾಧ್ಯವಾಗಿಲ್ಲ. ಹಾಗಾಗಿ ಅರಣ್ಯಾಧಿಕಾರಿಗಳು ಹಸಿರು ಎಲೆಗಳಿಂದ ಪ್ರದೇಶವನ್ನು ಪ್ರತ್ಯೇಕಿಸಲು ಪ್ರಯತ್ನಿಸುತ್ತಿದ್ದಾರೆ. ಇದನ್ನೂ ಓದಿ: ಪರ್ವತಕ್ಕೆ ಅಪ್ಪಳಿಸಿದ 133 ಪ್ರಯಾಣಿಕರಿದ್ದ ಚೀನಾ ವಿಮಾನ – ಹೊತ್ತಿ ಉರಿದ ಅರಣ್ಯ ಪ್ರದೇಶ

    FIRE

    ಬೆಂಕಿಯ ಅಗಾಧತೆ ನೋಡಿ ಅಕ್ಬರ್‌ಪುರ, ಸದರ್ ಮತ್ತು ಅಲ್ವಾರ್ ಬಫರ್ ವಲಯಗಳಿಂದ 200 ಮಂದಿ ಹೆಚ್ಚುವರಿ ಅರಣು ಸಿಬ್ಬಂದಿಯನ್ನು ಸಜ್ಜುಗೊಳಿಸಲಾಗಿತ್ತು. ಇಲ್ಲಿನ ವಿಪರೀತ ಗಾಳಿ ಪರಿಸ್ಥಿತಿಯು ಅರಣ್ಯಾಧಿಕಾರಿಗಳ ಪ್ರಯತ್ನಗಳಿಗೆ ಅಡ್ಡಿಯಾಗುತ್ತಿದೆ. ಜೊತೆಗೆ ಎಸ್‌ಟಿ-17 ಎಂಬ ಹೆಸರಿನ ಹೆಣ್ಣು ಹುಲಿಯ ಭೀತಿಯಿಂದ ಅರಣ್ಯಾಧಿಕಾರಿಗಳು ಮುಂದೆ ಸಾಗಲು ಹಿಂದೇಟು ಹಾಕುತ್ತಿದ್ದಾರೆ. ಇದು ಬೆಂಕಿ ವ್ಯಾಪಿಸಲು ಕಾರಣವಾಗಿದ್ದು ಅರಣ್ಯ ಇಲಾಖೆ ಮಿಲಿಟರಿ ಸೇನಾ ಸಹಾಯ ಕೋರಿದೆ. ಇದನ್ನೂ ಓದಿ: ಪ್ರಾದೇಶಿಕ ಅರಣ್ಯಾಧಿಕಾರಿಗಳ ಎರಡು ಮನೆಗಳ ಮೇಲೆ ಎಸಿಬಿ ದಾಳಿ 

    ಅರಣ್ಯಾಧಿಕಾರಿಗಳು ಬೆಂಕಿನಂದಿಸಲು ವಿಫಲವಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸೇನಾ ಸಹಾಯ ಕೋರಿದೆ. ಇಂದು ಸೇನಾ ದಳ ಬೆಂಕಿ ನಂದಿಸುವ ಕೆಲಸಕ್ಕೆ ಮುಂದಾದ್ದು, 2 ಹೆಲಿಕಾಪ್ಟರ್‌ಗಳು ಹೈಡ್ರಾಲಿಕ್ ವ್ಯವಸ್ಥೆಯನ್ನು ಬಳಸಿ ನೀರು ಹರಡಿ ಬೆಂಕಿಯನ್ನು ಹತೋಟಿಗೆ ತರಲು ಪ್ರಯತ್ನಿಸುತ್ತಿವೆ.

     

  • ಗ್ಯಾಂಗ್ ನೋಡಿ ಸ್ಥಳದಿಂದ ಕಾಲ್ಕಿತ್ತ ಪತಿ- ಮಕ್ಕಳ ಮುಂದೆಯೇ ದಲಿತ ಮಹಿಳೆ ಮೇಲೆ ಸಾಮೂಹಿಕ ರೇಪ್

    ಜೈಪುರ: ಕಿಡಿಕೇಡಿಗಳ ಗುಂಪೊಂದು ತಮ್ಮ ಬಳಿ ಬರುತ್ತಿರುವುದನ್ನು ತಿಳಿದುಕೊಂಡ ಪತಿ ಭಯಗೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ. ಇದನ್ನೆ ಕಾಯುತ್ತಿದ್ದ ಕಿಡಿಕೇಡಿಗಳು ಮಕ್ಕಳ ಮುಂದೆಯೇ ತಾಯಿಯನ್ನು ಅತ್ಯಾಚಾರ ಮಾಡಿರುವ ಭಯಾನಕ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

    ಮಾರ್ಚ್ 17 ರಂದು ಧೋಲ್‍ಪುರ ಜಿಲ್ಲೆಯಲ್ಲಿ ದಲಿತ ಮಹಿಳೆಯೊಬ್ಬರು ಜಮೀನಿನಿಂದ ತನ್ನ ನಿವಾಸಕ್ಕೆ ಮರಳುತ್ತಿದ್ದಾಗ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ. 26 ವರ್ಷದ ಸಂತ್ರಸ್ತೆ ತನ್ನ ಪತಿ ಮತ್ತು ಮಕ್ಕಳೊಂದಿಗೆ ತಮ್ಮ ಮನೆಗೆ ತೆರಳುತ್ತಿದ್ದಾಗ ಆರೋಪಿಗಳು ದಂಪತಿಯನ್ನು ತಡೆದು ಥಳಿಸಿದ್ದಾರೆ. ತನ್ನನ್ನು ಉಳಿಸಿಕೊಳ್ಳುವ ಪ್ರಯತ್ನದಲ್ಲಿ, ಪತಿ ಕಂಟ್ರಿಮೇಡ್ ಪಿಸ್ತೂಲ್‍ನಿಂದ ಹೊಡೆದ ಸ್ಥಳದಿಂದ ಪರಾರಿಯಾಗಿದ್ದಾನೆ. ಇದನ್ನೂ ಓದಿ: ದತ್ತು ಪುತ್ರಿ ನಿರ್ಲಕ್ಷ್ಯ – ಟ್ರೋಲಿಗರ ಕಣ್ಣಿಗೆ ಗುರಿಯಾದ ಸನ್ನಿ ಉತ್ತರವೇನು?

    ಪತ್ನಿ ಮತ್ತು ಮಕ್ಕಳು ಸ್ಥಳದಲ್ಲೇ ಇರುವುದನ್ನು ಗಮನಿಸಿದ ಆರೋಪಿಗಳು ಮಕ್ಕಳಿಗೆ ಬಂದೂಕು ತೋರಿಸಿ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ತನಿಖೆ ಬಳಿಕ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಆರೋಪಿಗಳನ್ನು ಲಾಲು ಠಾಕೂರ್, ಧನ್ ಸಿಂಗ್ ಠಾಕೂರ್, ವಿಪಿನ್ ಠಾಕೂರ್, ಮೋಹಿತ್ ಠಾಕೂರ್, ಸಚಿನ್ ಠಾಕೂರ್ ಮತ್ತು ಲೋಕೇಂದ್ರ ಸಿಂಗ್ ಠಾಕೂರ್ ಎಂದು ಅಧಿಕಾರಿಗಳು ಗುರುತಿಸಿದ್ದಾರೆ.

    ಈ ಪ್ರಕರಣ ತಿಳಿದ ತಕ್ಷಣ ರಾಷ್ಟ್ರೀಯ ಮಹಿಳಾ ಆಯೋಗವು(NCW) ಅಪರಿಚಿತ ಆರೋಪಿಗಳ ವಿರುದ್ಧ ಎಫ್‍ಐಆರ್ ದಾಖಲಿಸುವಂತೆ ಎನ್‍ಸಿಡಬ್ಲ್ಯು ರಾಜಸ್ಥಾನದ ಡಿಜಿಪಿಗೆ ಪತ್ರ ಬರೆದಿತ್ತು.

    ಈ ಮನವಿಯ ಮೇರೆಗೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376-ಡಿ(ಗ್ಯಾಂಗ್ ರೇಪ್) ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ(ದೌರ್ಜನ್ಯ ತಡೆ) ಕಾಯ್ದೆ, 1989ರ ಅಡಿಯಲ್ಲಿ ಕಾಂಚನ್‍ಪುರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ. ಘಟನೆಯಲ್ಲಿ ಬದುಕುಳಿದಿರುವವರು ಮತ್ತು ಪ್ರಕರಣದ ಆರೋಪಿಗಳು ಅದೇ ಗ್ರಾಮದವರು. ಪ್ರಕರಣದ ತನಿಖೆ ನಡೆಯುತ್ತಿದೆ. ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ಧೋಲ್‍ಪುರದ ಸರ್ಕಲ್ ಅಧಿಕಾರಿ ವಿಜಯ್ ಕುಮಾರ್ ಸಿಂಗ್ ಹೇಳಿದ್ದಾರೆ. ಇದನ್ನೂ ಓದಿ: ಲೈಂಗಿಕ ಆಸೆ ತೀರಿಸಿಕೊಳ್ಳಲು ಹೋಗಿ ಮಹಿಳೆ ಎಡವಟ್ಟು- ಎಕ್ಸ್‌ರೇ ನೋಡಿ ದಂಗಾದ ವೈದ್ಯರು!

  • ಒಬ್ಬನನ್ನು ರಕ್ಷಿಸಲು ಹೋಗಿ 6 ಯುವಕರು ನೀರುಪಾಲು – ಮೂವರ ಮೃತದೇಹಕ್ಕಾಗಿ ಹುಡುಕಾಟ

    ಒಬ್ಬನನ್ನು ರಕ್ಷಿಸಲು ಹೋಗಿ 6 ಯುವಕರು ನೀರುಪಾಲು – ಮೂವರ ಮೃತದೇಹಕ್ಕಾಗಿ ಹುಡುಕಾಟ

    ಭುವನೇಶ್ವರ: ಸ್ನಾನ ಮಾಡಲೆಂದು ನದಿಗೆ ಇಳಿದಿದ್ದ 6 ಯುವಕರು ನೀರುಪಾಲಾಗಿರುವ ಘಟನೆ ಓಡಿಶಾದ ಜೈಪುರದಲ್ಲಿ ನಡೆದಿದ್ದು, ಅವರಲ್ಲಿ ಮೂರು ಯುವಕರ ಮೃತದೇಹವನ್ನು ಪತ್ತೆಹಚ್ಚಲಾಗಿದೆ. ಉಳಿದ ಮೂವರು ಯುವಕರ ಮೃತದೇಹ ಪತ್ತೆಹಚ್ಚಲು ಶೋಧಕಾರ್ಯ ನಡೆಸಲಾಗುತ್ತಿದೆ.

    ಶನಿವಾರ ಓಡಿಶಾದ ಜೈಪುರದಲ್ಲಿ ಹೋಳಿಹಬ್ಬ ಆಚರಿಸಲಾಯಿತು. ಸಂಭ್ರಮಾಚರಣೆಯ ಬಳಿಕ ಇಲ್ಲಿನ ಖರಾಸೋತ್ರ ಸರೋವರಕ್ಕೆ ಸ್ಥಾನ ಮಾಡಲು ತೆರಳಿದ್ದ ವೇಳೆ ಅನಾಹುತ ಆಗಿದೆ. ಇದನ್ನೂ ಓದಿ: ವರ್ಷಾಂತ್ಯಕ್ಕೆ ನಿರ್ದೇಶನದ ಹೊಸ ಪಯಣ ಮಾಡಲು ರೆಡಿಯಾಗುತ್ತಿದ್ದಾರೆ ಕೃಷ್ಣ ಅಜಯ್ ರಾವ್

    ಈ ಸಂಬಂಧ ಮಾಹಿತಿ ನೀಡಿರುವ ಜಿಲ್ಲಾ ಸಹಾಯಕ ಅಗ್ನಿಶಾಮಕ ಅಧಿಕಾರಿ ಪೂರ್ಣ ಚಂದ್ರ ಮರಾಂಡಿ, ನಾವು ಆಗಮಿಸುವ ಮೊದಲೇ ಸ್ಥಳೀಯರು ಒಬ್ಬ ಯುವಕನ ಮೃತದೇಹ ಹೊರತೆಗೆದಿದ್ದರು. ಬಳಿಕ ನಮ್ಮ ತಂಡವು ಕಾರ್ಯಾಚರಣೆ ನಡೆಸಿ, ಮತ್ತಿಬ್ಬರ ಮೃತದೇಹ ಪತ್ತೆಹಚ್ಚಲಾಯಿತು. ಆದರೆ, ಶನಿವಾರ ತಡರಾತ್ರಿ ವಿದ್ಯುತ್ ಬೆಳಕು ಕಡಿಮೆಯಿದ್ದ ಕಾರಣ ಇನ್ನೂ ಮೂವರ ಮೃತದೇಹವನ್ನು ಪತ್ತೆಹಚ್ಚಲು ಶೋಧಕಾರ್ಯ ನಡೆಸಲಾಗುತ್ತಿದೆ. ಶನಿವಾರ ರಾತ್ರಿ ಕಡಿಮೆ ಬೆಳಕಿನಿಂದ ಶೋಧ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು. ಅಗ್ನಿಶಾಮಕ ಇಲಾಖೆ ಮತ್ತು ಒಡಿಶಾ ವಿಪತ್ತು ಕ್ಷಿಪ್ರ ಕಾರ್ಯಾಚರಣೆ ಪಡೆ ಭಾನುವಾರ ಬೆಳಿಗ್ಗೆ ಮತ್ತೆ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದೆ ಎಂದು ಮಾಹಿತಿ ನೀಡಿದ್ದಾರೆ.

    ಇಷ್ಟಕ್ಕೂ ನಡೆದಿದ್ದೇನು?
    ಮೃತನ ತಂದೆ ಸತ್ಯ ಚಂದ್ರ ಜೆನಾ ಮಾಹಿತಿ ನೀಡಿರುವ ಪ್ರಕಾರ, `ಶನಿವಾರ ಹೋಳಿ ಆಡಿದ ನಂತರ ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದರು. ಅವರಲ್ಲಿ ಒಬ್ಬ ಸ್ನೇಹಿತ ಮುಳುಗುತ್ತಿರುವುದನ್ನು ಗಮನಿಸಿ, ಉಳಿದವರೂ ಒಬ್ಬೊಬ್ಬರಾಗಿ ರಕ್ಷಿಸುವ ಪ್ರಯತ್ನದಲ್ಲಿ ಮುಳುಗಿದರು. ಕೊನೆಯದಾಗಿ ರಕ್ಷಿಸಲು ಹೋದ ನನ್ನ ಮಗನೂ ನದಿಯಲ್ಲಿ ಮುಳುಗಿದನು ಎಂದು ತಿಳಿಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಕುಲಪತಿಗಳ ಸರ್ಕಾರಿ ಬಂಗಲೆಗೆ ಬೇಕಾಬಿಟ್ಟಿ ಖರ್ಚು – ಕುಲಪತಿ ಮೇಲೆ ಗಂಭೀರ ಆರೋಪ