Tag: jaipura

  • ಕಣ ಕಣದಲ್ಲಿ ಕೇಸರಿ ಎಂದ ಮೂವರು ಬಾಲಿವುಡ್ ಸ್ಟಾರ್ ನಟರಿಗೆ ನೋಟಿಸ್

    ಕಣ ಕಣದಲ್ಲಿ ಕೇಸರಿ ಎಂದ ಮೂವರು ಬಾಲಿವುಡ್ ಸ್ಟಾರ್ ನಟರಿಗೆ ನೋಟಿಸ್

    ಜೈಪುರ: ಕಣ ಕಣದಲ್ಲಿ ಕೇಸರಿ ಎಂದು ಗುಟ್ಕಾ ಜಾಹೀರಾತು ನೀಡುತ್ತಿದ್ದ ಬಾಲಿವುಡ್ ನಟರಾದ ಶಾರುಖ್ ಖಾನ್ (Shah Rukh Khan), ಅಜಯ್ ದೇವಗನ್ (Ajay Devgn) ಮತ್ತು ಟೈಗರ್ ಶ್ರಾಫ್‌ಗೆ (Tiger Shroff) ಸಂಕಷ್ಟ ಎದುರಾಗಿದೆ. ಗಂಭೀರ ಕಾನೂನು ಪ್ರಕರಣವೊಂದರಲ್ಲಿ ಜೈಪುರ ಜಿಲ್ಲಾ ಗ್ರಾಹಕ ಆಯೋಗ ಸಂಖ್ಯೆ-2 ಮೂವರು ನಟರಿಗೆ ನೋಟಿಸ್ ಜಾರಿ ಮಾಡಿದೆ.

    ಮೂವರು ನಟರ ಜೊತೆಗೆ ಗುಟ್ಕಾ ತಯಾರಿಕಾ ಕಂಪನಿ ಜೆಬಿ ಇಂಡಸ್ಟ್ರೀಸ್‌ಗೆ ಸಹ ಸಮನ್ಸ್ ಕಳುಹಿಸಲಾಗಿದೆ. ಆಯೋಗವು ಎಲ್ಲರೂ ಇದೇ ಮಾರ್ಚ್ 19ರಂದು ಹಾಜರಾಗುವಂತೆ ಸೂಚನೆ ನೀಡಿದೆ.ಇದನ್ನೂ ಓದಿ: ನಾರಿ ಶಕ್ತಿಗೆ ನನ್ನ ನಮನ – ಮಹಿಳೆಯರಿಗೆ ಪ್ರಧಾನಿ ಸೇರಿ ಗಣ್ಯರಿಂದ ಶುಭಾಶಯ

    ಗುಟ್ಕಾ ಉತ್ಪನ್ನವು ಆರೋಗ್ಯಕ್ಕೆ ಹಾನಿಕಾರಕವಾಗಿದ್ದರೂ ಅದರಲ್ಲಿ ಕೇಸರಿ ಇದೆ ಎಂದು ದಾರಿತಪ್ಪಿಸುವ ಹೇಳಿಕೆಗಳನ್ನು ನೀಡುವ ಜಾಹೀರಾತು ಪ್ರಕಟಿಸಲಾಗುತ್ತಿದೆ ಎಂದು ಆರೋಪಿಸಿ ಜೈಪುರ ನಿವಾಸಿ ಯೋಗೇಂದ್ರ ಸಿಂಗ್ ಬಡಿಯಾಲ್ ಜಿಲ್ಲಾ ಗ್ರಾಹಕ ಆಯೋಗಕ್ಕೆ ದೂರು ನೀಡಿದ್ದು, ದೂರಿನ ಅನ್ವಯ ನೋಟಿಸ್ ನೀಡಲಾಗಿದೆ.

    ಮೂವರು ಬಾಲಿವುಡ್ ನಟರು ಈ ಗುಟ್ಕಾ ಬ್ರ‍್ಯಾಂಡ್ ಅನ್ನು ಪ್ರಚಾರ ಮಾಡುತ್ತಿದ್ದು, ಗ್ರಾಹಕರನ್ನು ಖರೀದಿಸುವಂತೆ ಆಕರ್ಷಿಸುತ್ತಿದ್ದಾರೆ. ಗುಟ್ಕಾ ಉತ್ಪನ್ನವು ಆರೋಗ್ಯಕ್ಕೆ ಹಾನಿಕಾರಕವಾಗಿದ್ದರೂ ಅದರಲ್ಲಿ ಕೇಸರಿ ಇದೆ ಎಂದು ದಾರಿತಪ್ಪಿಸುತ್ತಿದ್ದಾರೆ. ಈ ದಾರಿತಪ್ಪಿಸುವ ಜಾಹೀರಾತು ಗ್ರಾಹಕ ಸಂರಕ್ಷಣಾ ಕಾಯ್ದೆ 2019 ಅನ್ನು ಉಲ್ಲಂಘಿಸುತ್ತದೆ ಮತ್ತು ಸಾರ್ವಜನಿಕರನ್ನು ದಾರಿತಪ್ಪಿಸುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದೆ.

    ಈ ಮೂವರು ನಟರು ಬಹಳ ಸಮಯದಿಂದ ಪಾನ್ ಮಸಾಲಾ ಮತ್ತು ಗುಟ್ಕಾ ಕಂಪನಿಯ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಾರೆ. “ಟೇಸ್ಟ್ ಆಫ್ ಬಿಗ್ ಬ್ರಾಂಡ್ಸ್” ಎಂಬ ಟ್ಯಾಗ್‌ಲೈನ್ ಅಡಿಯಲ್ಲಿ ಈ ಜಾಹೀರಾತುಗಳು ಇದನ್ನು “ಕೇಸರ್” ಉತ್ಪನ್ನವೆಂದು ಪ್ರಚಾರ ಮಾಡುತ್ತವೆ. ಆದರೆ ವಾಸ್ತವದಲ್ಲಿ ಇದು ಗುಟ್ಕಾ ಉತ್ಪನ್ನಗಳ ಪ್ರಚಾರವಾಗಿದೆ ಎಂದು ಯೋಗೇಂದ್ರ ಸಿಂಗ್ ಹೇಳಿದ್ದಾರೆ.

    ಕಾನೂನು ಪರಿಣಾಮ ಏನಾಗಬಹುದು?
    ಆಯೋಗದಲ್ಲಿ ಆರೋಪ ಸಾಬೀತಾದರೆ, ಈ ಜಾಹೀರಾತುಗಳನ್ನು ನಿಷೇಧಿಸಬಹುದು. ಇದರೊಂದಿಗೆ, ಸೆಲೆಬ್ರಿಟಿಗಳ ಮೇಲೆ ಆರ್ಥಿಕ ದಂಡವನ್ನು ವಿಧಿಸಬಹುದು. ಅದೇ ಸಮಯದಲ್ಲಿ, ಗ್ರಾಹಕ ಸಂರಕ್ಷಣಾ ಕಾಯ್ದೆ 2019ರ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲು ಸಹ ಸಾಧ್ಯವಿದೆ.ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ಎರಡು ಬಣಗಳಿವೆ – ಪಕ್ಷದ ವೇದಿಕೆಯಲ್ಲೇ ರಾಹುಲ್ ಗಾಂಧಿ ಅಸಮಾಧಾನ

     

  • ವೃದ್ಧೆಯನ್ನು ಛತ್ರಿಯಿಂದ ಹೊಡೆದು ಕೊಂದ ವೃದ್ಧ!

    ವೃದ್ಧೆಯನ್ನು ಛತ್ರಿಯಿಂದ ಹೊಡೆದು ಕೊಂದ ವೃದ್ಧ!

    ಜೈಪುರ: ರಾಜಸ್ಥಾನದ ಉದಯಪುರದಲ್ಲಿ (Rajasthan’s Udaipur) 60 ವರ್ಷದ ವ್ಯಕ್ತಿಯೊಬ್ಬ 85 ವರ್ಷದ ವೃದ್ಧೆಯ ಮೇಲೆ ಛತ್ರಿಯಿಂದ ಮನಬಂದಂತೆ ಹಲ್ಲೆಗೈದು ಹತ್ಯೆ ಮಾಡಿರುವ ಆಘಾತಕಾರಿ ವೀಡಿಯೋವೊಂದು ವೈರಲ್ ಆಗಿದೆ.

    ಮೃತ ವೃದ್ಧೆಯನ್ನು ಕಲ್ಕಿ ಬಾಯಿ ಗಮೆತಿ ಎಂದು ಗುರುತಿಸಲಾಗಿದೆ. ವೃದ್ಧನು ವೃದ್ಧೆಯ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ಅಲ್ಲಿಯೇ ಇದ್ದ ಜನ ತಮ್ಮ ಮೊಬೈಲ್‍ನಲ್ಲಿ ಸೆರೆಹಿಡಿದಿದ್ದಾರೆ. ಇದೀಗ ಈ ವೀಡಿಯೋ ವೈರಲ್ (Viral Video) ಆಗುತ್ತಿದೆ. ಇಬ್ಬರು ಅಪ್ರಾಪ್ತರು ವೀಡಿಯೋ ಮಾಡಿವುದರಲ್ಲಿ ಬ್ಯುಸಿಯಗಿದ್ದರೇ ಹೊರತು ವೃದ್ಧೆಯನ್ನು ಉಳಿಸಲು ಪ್ರಯತ್ನ ಮಾಡಲಿಲ್ಲ. ಈ ಹಿನ್ನೆಲೆಯಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

    ಕುಡಿದ ಮತ್ತಿನಲ್ಲಿ ವೃದ್ಧ ಆರೋಪಿ ಪ್ರತಾಪ್ ಸಿಂಹ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ವೃದ್ಧೆಯ ಮೇಲೆ ಹಲ್ಲೆ ಮಾಡುವಾಗ ತಡೆಯಲು ಓರ್ವ ವ್ಯಕ್ತಿ ಯತ್ನಿಸಿದ್ದಾರೆ. ಆದರೆ ಸಿಂಗ್ ವ್ಯಕ್ತಿಯ ಮಾತನ್ನು ಕೇಳಿಸಿಕೊಳ್ಳದೇ ಛತ್ರಿಯಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾನೆ. ಇದನ್ನೂ ಓದಿ: ವಿರೋಧದ ನಡುವೆ ಅಂತರ್ಜಾತಿ ವಿವಾಹ- ಠಾಣೆ ಮೆಟ್ಟಿಲೇರಿದ ಜೋಡಿ

    ವೀಡಿಯೋದಲ್ಲೇನಿದೆ..?: ಕಂಠಪೂರ್ತಿ ಕುಡಿದಿದ್ದ ಆರೋಪಿಯು ಮಹಿಳೆ ಪಕ್ಕದಲ್ಲಿ ಕುಳಿತುಕೊಂಡು ತಾನು ಶಿವನ ಅನುಯಾಯಿಯಾಗಿದ್ದು, ಅವನು ನನ್ನನ್ನು ನಿನ್ನ ಬಳಿ ಕಳುಹಿಸಿದ್ದಾನೆ ಎಂದು ಹೇಳುವುದನ್ನು ಕಾಣಬಹುದಾಗಿದೆ. ಅಲ್ಲದೆ ನೀನು ಮಹಾರಾಣಿ ಎಂದು ಹೇಳುತ್ತಾನೆ. ಬಳಿಕ ಇದ್ದಕ್ಕಿದ್ದಂತೆ ಆಕೆಯ ಎದೆಯ ಮೇಲೆ ಛತ್ರಿಯಂದ ಹೊಡೆಯುತ್ತಾನೆ. ಈ ವೇಳೆ ವೃದ್ಧೆ ನೆಲದ ಮೇಲೆ ಬೀಳುತ್ತಾಳೆ. ಆಗ ಆರೋಪಿ ಆಕೆಯ ಕೂದಲನ್ನು ಹಿಡಿದು ಎಳೆದುಕೊಂಡು ಹೋಗುತ್ತಾನೆ.

    ದೂರದ, ಗುಡ್ಡಗಾಡು, ಬುಡಕಟ್ಟು ಪ್ರಾಬಲ್ಯದ ಪ್ರದೇಶವಾದ ಉದಯಪುರದ ಗೋಗುಂಡಾ ತಹಸಿಲ್‍ನಲ್ಲಿ ಈ ಪ್ರಕರಣ ನಡೆದಿದೆ. ವೃದ್ಧೆ ಒಬ್ಬರ ಮನೆಗೆ ಹೋಗುತ್ತಿದ್ದರು. ಆಗ ಪ್ರತಾಪ್ ಸಿಂಹ ಆಕೆಯನ್ನು ಭೇಟಿಯಾಗಿದ್ದಾನೆ. ಘಟನೆಯ ಸಂದರ್ಭದಲ್ಲಿ ಮತ್ತೊಬ್ಬ ವ್ಯಕ್ತಿ ಸ್ಥಳದಲ್ಲಿದ್ದರು ಎಂದು ಉದಯಪುರ ಪೊಲೀಸ್ ವರಿಷ್ಠಾಧಿಕಾರಿ ಭುವನ್ ಭೂಷಣ್ ತಿಳಿಸಿದ್ದಾರೆ.

    ಮಾಟಗಾತಿ ಎಂಬ ಶಂಕೆಯಿಂದ ಪ್ರತಾಪ್ ಸಿಂಹ ಆಕೆಯನ್ನು ಕೊಂದಿದ್ದಾನೆ ಎಂಬ ವದಂತಿ ಹಬ್ಬಿದ್ದು, ಆದರೆ ಇದನ್ನು ಪೊಲೀಸರು ತಳ್ಳಿಹಾಕಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಮಮಂದಿರ ಹೋರಾಟದ ಪ್ರಮುಖ, ಗೋವುಗಳ ರಕ್ಷಣೆಗೆ 52 ದಿನ ಉಪವಾಸವಿದ್ದ ಆಚಾರ್ಯ ಧರ್ಮೇಂದ್ರ ಇನ್ನಿಲ್ಲ

    ರಾಮಮಂದಿರ ಹೋರಾಟದ ಪ್ರಮುಖ, ಗೋವುಗಳ ರಕ್ಷಣೆಗೆ 52 ದಿನ ಉಪವಾಸವಿದ್ದ ಆಚಾರ್ಯ ಧರ್ಮೇಂದ್ರ ಇನ್ನಿಲ್ಲ

    ಜೈಪುರ: ರಾಮಂದಿರ (Rama Mandir) ಹೋರಾಟದ ಸಕ್ರಿಯರಾಗಿದ್ದ ಹಾಗೂ ಗೋವುಗಳ ರಕ್ಷಣೆಗಾಗಿ ಬರೋಬ್ಬರಿ 52 ದಿನಗಳ ಕಾಲ ಉಪವಾಸವಿದ್ದ ಆಚಾರ್ಯ ಧರ್ಮೇಂದ್ರ (Acharya Shri Dharmendra)  ಇಂದು ನಿಧನರಾಗಿದ್ದಾರೆ.

    80 ವರ್ಷದ ಆಚಾರ್ಯ ಧರ್ಮೇಂದ್ರ ಅವರು ಕರುಳಿನ ಕಾಯಿಲೆಯಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಜೈಪುರದ ಸವಾಯಿ ಮಾನ್ ಸಿಂಗ್ (Sawai Mansingh Hospital) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇದೀಗ ಅವರು ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.

    ತಮ್ಮ ಆವೇಶಭರಿತ ಭಾಷಣಗಳಿಗೆ ಹೆಸರಾದ ಧರ್ಮೇಂದ್ರ ಅವರು, ಗೋವುಗಳ ಕಲ್ಯಾಣಕ್ಕಾಗಿ ಧರ್ಮೇಂದ್ರ ಆಚಾರ್ಯ ಅವರು ಒಮ್ಮೆ 52 ದಿನಗಳ ಕಾಲ ಉಪವಾಸ ಮಾಡಿದ್ದರು. ದೇಶದಲ್ಲಿ ಈ ಹಿಂದೆ ನಡೆದಿದ್ದ ಬಾಬ್ರಿ (Babri Masjid) ಧ್ವಂಸ ಪ್ರಕರಣದಲ್ಲಿ ಆಚಾರ್ಯ ಧರ್ಮೇಂದ್ರ, ಲಾಲ್ ಕೃಷ್ಣ ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಕಲ್ಯಾಣ್ ಸಿಂಗ್ ಮತ್ತು ಉಮಾಭಾರತಿ ಅವರನ್ನು ಆರೋಪಿಗಳೆಂದು ಪರಿಗಣಿಸಲಾಗಿತ್ತು.

    ರಾಮ ಜನ್ಮಭೂಮಿ ಮಂದಿರ ಚಳವಳಿಯಲ್ಲಿ ಸಕ್ರಿಯ ಅಲ್ಲದೇ ಆಚಾರ್ಯ ಧರ್ಮೇಂದ್ರ ಅವರು ಮಹಾತ್ಮ ರಾಮಚಂದ್ರ ವೀರ ಮಹಾರಾಜರ ಪುತ್ರ ಆಚಾರ್ಯ ಧರ್ಮೇಂದ್ರ ಅವರು ರಾಮ ಜನ್ಮಭೂಮಿ ಮಂದಿರ ಚಳವಳಿಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಅವರು ತಮ್ಮ ಇಡೀ ಜೀವನವನ್ನು ಹಿಂದೂ, ಹಿಂದುತ್ವ ಮತ್ತು ಹಿಂದೂಸ್ತಾನದ ಪ್ರಗತಿಗೆ ಮುಡಿಪಾಗಿಟ್ಟಿದ್ದರು.

    ಸದ್ಯ ಹಿಂದೂ ಮುಖಂಡ ಆಚಾರ್ಯ ಧರ್ಮೇಂದ್ರ ಅವರ ನಿಧನಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರು ಸಂತಾಪ ಸೂಚಿಸಿದ್ದಾರೆ. ಶ್ರೀಮದ್ ಪಂಚಖಂಡ ಪೀಠಾಧೀಶ್ವರ ಆಚಾರ್ಯ ಧರ್ಮೇಂದ್ರ ಜಿ ಅವರ ನಿಧನ ಸನಾತನ ಧರ್ಮಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ. ಅದಲ್ಲದೇ ಆರ್‍ಎಸ್‍ಎಸ್ ಮುಂಡರು ಕೂಡ ಸಂತಾಪ ಸೂಚಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅತ್ಯಾಚಾರಕ್ಕೆ ವಿರೋಧಿಸಿದ ವೃದ್ಧೆಯ ಖಾಸಗಿ ಅಂಗಗಳ ಮೇಲೆ ಹಲ್ಲೆ ನಡೆಸಿ ಕೊಲೆಗೈದ!

    ಅತ್ಯಾಚಾರಕ್ಕೆ ವಿರೋಧಿಸಿದ ವೃದ್ಧೆಯ ಖಾಸಗಿ ಅಂಗಗಳ ಮೇಲೆ ಹಲ್ಲೆ ನಡೆಸಿ ಕೊಲೆಗೈದ!

    ಜೈಪುರ: ವೃದ್ಧೆಯೊಬ್ಬರ ಮೇಲೆ ಅತ್ಯಚಾರವೆಸಗಲು ಯತ್ನಿಸಿದ ವ್ಯಕ್ತಿಯೊಬ್ಬನ ಪ್ರಯತ್ನ ವಿಫಲವಾದ ಹಿನ್ನೆಲೆ ಆಕೆಯ ಖಾಸಗಿ ಅಂಗಗಳ ಮೇಲೆ ಹಲ್ಲೆಗೈದು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ರಾಜಸ್ಥಾನದ ಡುಂಗರಪುರನಲ್ಲಿ ನಡೆದಿದೆ.

    ಘಟನೆ ಕುರಿತು ವೃದ್ಧೆಯ ಮೊಮ್ಮಗಳು ಮಾತನಾಡಿ, ಆರೋಪಿಯು ಕುಡಿದ ಅಮಲಿನಲ್ಲಿ ನನ್ನ ಅಜ್ಜಿ ಮನೆಗೆ ನುಗ್ಗಿ ಅವರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಆಗ ಅವರು ಅದನ್ನು ವಿರೋಧಿಸಿದಾಗ ಚಾಕು ತೆಗೆದುಕೊಂಡು ಅವರಿಗೆ ಇರಿದಿದ್ದಲ್ಲದೇ ಅವರ ಖಾಸಗಿ ಅಂಗಗಳ ಮೇಲೆ ಹಲ್ಲೆಗೈದಿದ್ದಾನೆ. ಈ ವೇಳೆ ಅಜ್ಜಿಯ ಅಳಲು ಕೇಳಿಸಿ ನಾನು ಸ್ಥಳಕ್ಕೆ ಧಾವಿಸಿದಾಗ ಅವರು ರಕ್ತದ ಮಡವಿನಲ್ಲಿ ಬಿದ್ದು ಒದ್ದಾಡುತ್ತಿದ್ದರು. ನಂತರದಲ್ಲಿ ಆರೋಪಿಯು ಅಲ್ಲಿಂದ ಪರಾರಿಯಾಗಿದ್ದಾನೆ.

    ಘಟನೆಯ ನಂತರ, ಸಂತ್ರಸ್ತೆಯ ಮೊಮ್ಮಗಳು ತನ್ನ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದರು. ಗಾಯಗೊಂಡ ವೃದ್ಧೆಯನ್ನು ತಕ್ಷಣವೇ ಚಿಖಾಲಿಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ವೈದ್ಯರು ಅವಳನ್ನು ಸಗ್ವಾರಾ ಆಸ್ಪತ್ರೆಗೆ ಕಳುಹಿಸಿದರು. ತೀವ್ರ ಗಾಯಗೊಂಡಿದ್ದ ಆಕೆಯನ್ನು ಸಗ್ವಾರದ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

    ಕುವಾನ್ ಸ್ಟೇಷನ್ ಹೌಸ್ ಆಫೀಸರ್ ಮೊಹಮ್ಮದ್ ರಿಜ್ವಾನ್ ಖಾನ್ ಮಾತನಾಡಿ, ಆರೋಪಿ ಮತ್ತು ಸಂತ್ರಸ್ತೆಯ ನೆರೆಹೊರೆಯವರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

    ನಂತರ ಸಂತ್ರಸ್ತೆಯ ಸಂಬಂಧಿಕರು ಮೃತದೇಹವನ್ನು ಚಿಖಾಲಿಗೆ ತಂದರು. ಘಟನೆಯ ಬಗ್ಗೆ ಕುವಾನ್ ಪೆÇಲೀಸ್ ಠಾಣೆಗೆ ಮಾಹಿತಿ ನೀಡಿದರು. ಆರೋಪಿಗಳ ವಿರುದ್ಧ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

  • ರಾಜಸ್ಥಾನದಲ್ಲಿ ಮುಸ್ಲಿಂ ಏರಿಯಾಗಳಿಗೆ ದಿನದ 24 ಗಂಟೆ ನಿರಂತರ ವಿದ್ಯುತ್

    ರಾಜಸ್ಥಾನದಲ್ಲಿ ಮುಸ್ಲಿಂ ಏರಿಯಾಗಳಿಗೆ ದಿನದ 24 ಗಂಟೆ ನಿರಂತರ ವಿದ್ಯುತ್

    ಜೈಪುರ: ಕರ್ನಾಟಕದಲ್ಲಿ ಹಿಂದುತ್ವ ರಾಜಕಾರಣ ನಡೆಯುತ್ತಿದ್ದರೆ, ಕಾಂಗ್ರೆಸ್ ಆಡಳಿತವಿರುವ ರಾಜಸ್ಥಾನದಲ್ಲಿ ಮುಸ್ಲಿಮರ ಓಲೈಕೆ ಪಾಲಿಟಿಕ್ಸ್ ನಡೆಯುತ್ತಿದೆ. ರಾಜಸ್ಥಾನದ ಕಾಂಗ್ರೆಸ್ ಸರ್ಕಾರ ಹೊರಡಿಸಿರುವ ಆದೇಶವೊಂದು ವಿವಾದಕ್ಕೆ ಕಾರಣವಾಗಿದೆ.

    ರಂಜಾನ್ ತಿಂಗಳಲ್ಲಿ ಮುಸ್ಲಿಂ ಬಾಹುಳ್ಯದ ಪ್ರದೇಶಗಳಲ್ಲಿ ದಿನದ 24 ಗಂಟೆಯೂ ನಿರಂತರ ವಿದ್ಯುತ್ ಪೂರೈಸಬೇಕು ಎಂದು ಜೋಧ್‍ಪುರ ಡಿಸ್ಕಾಮ್ ಆದೇಶ ಹೊರಡಿಸಿದೆ. ಉಪವಾಸ ಇರುವ ಮುಸ್ಲಿಮರಿಗೆ ಬಿಸಿಲ ಬೇಗೆಯಿಂದ ಯಾವುದೇ ತೊಂದರೇ ಆಗಬಾರದು. ಹೀಗಾಗಿ ಎಲ್ಲೆಡೆ ಇಡೀ ತಿಂಗಳು ವಿದ್ಯುತ್ ಕಡಿತವಾಗದಂತೆ ನೋಡಿಕೊಳ್ಳಬೇಕು ಎಂದು ಸುತ್ತೋಲೆ ಕಳಿಸಿದೆ.  ಇದನ್ನೂ ಓದಿ: ಹನುಮಾನ್ ಚಾಲೀಸಾ ಹಾಕಲು ಲೌಡ್ ಸ್ಪೀಕರ್- ಬಿಜೆಪಿ ನಾಯಕನ ಆಫರ್

    ರಾಜಸ್ಥಾನ ಸರ್ಕಾರದ ಈ ಆದೇಶಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಅತ್ತ ದಕ್ಷಿಣ ದೆಹಲಿಯಲ್ಲಿ ನವರಾತ್ರಿ ಪ್ರಯುಕ್ತ ಏಪ್ರಿಲ್ 14ರವರೆಗೂ ಮಾಂಸದಂಗಡಿ ಬಂದ್ ಮಾಡಲಾಗಿದೆ. ಆದರೆ ಮಾಂಸವೇನು ಅಪವಿತ್ರ ಅಲ್ಲ, ಅದು ಆಹಾರ ಅಷ್ಟೇ. ಇಷ್ಟ ಇದ್ದವರು ತಿಂತಾರೆ. ಇಷ್ಟವಿಲ್ಲದವರು ತಿನ್ನಲ್ಲ. ಯಾಕೆ ಮಾಂಸದಂಗಡಿ ಬಂದ್ ಮಾಡಬೇಕು ಎಂದು ಅಸಾದುದ್ದೀನ್ ಓವೈಸಿ ಪ್ರಶ್ನಿಸಿದ್ದಾರೆ.

    ಇತ್ತ ಮಹಾರಾಷ್ಟ್ರದಲ್ಲೂ ಮೈಕ್ ದಂಗಲ್ ಜೋರಾಗಿದೆ. ದೇಗುಲಗಳಲ್ಲಿ ಹನುಮಾನ್ ಚಾಲೀಸಾ ಹಾಕಲು ಉಚಿತವಾಗಿ ಲೌಡ್ ಸ್ಪೀಕರ್ ಒದಗಿಸಲು ಸಿದ್ಧ ಎಂದು ಮಹಾರಾಷ್ಟ್ರದ ಬಿಜೆಪಿಯ ಧನಿಕ ನಾಯಕ ಮೋಹಿತ್ ಕಂಬೋಜ್ ಘೋಷಿಸಿದ್ದಾರೆ. ಇದನ್ನೂ ಓದಿ: ರಂಜಾನ್ ಸಮಯದಲ್ಲಿ ಮಧುಮೇಹ ನಿರ್ವಹಣೆ ಹೇಗೆ?

     

  • ಜೈಪುರದಲ್ಲಿ ಭೂಕಂಪ – 3.8 ತೀವ್ರತೆ ದಾಖಲು

    ಜೈಪುರ: ರಾಜಸ್ಥಾನದ ಜೈಪುರದಲ್ಲಿ ಭೂಕಂಕವಾಗಿದ್ದು, ರಿಕ್ಟರ್ ಮಾಪಕದಲ್ಲಿ 3.8 ತೀವ್ರತೆ ದಾಖಲಾಗಿದೆ.

    ಇಂದು ಬೆಳಗ್ಗೆ ಜೈಪುರದ ಸುತ್ತಮುತ್ತ 8:01 ಗಂಟೆ ಸುಮಾರಿಗೆ 5 ಕಿಮೀ ಆಳದಲ್ಲಿ ಸುಮಾರು 92 ಕಿಮೀ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ಶಾಸ್ತ್ರ ಕೇಂದ್ರ (NCS) ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಮಹಾರಾಷ್ಟ್ರದ ಥಾಣೆಯಲ್ಲಿ ಹಕ್ಕಿ ಜ್ವರ ಭೀತಿ – 25,000 ಕೋಳಿಗಳನ್ನು ಕೊಲ್ಲಲು ಆದೇಶ

    ಭೂಕಂಪದ ತೀವ್ರತೆ 3.8 ರಷ್ಟು ದಾಖಲಾಗಿದ್ದು, ಜೈಪುರದ ಈಶಾನ್ಯ ಭಾಗಗಳಲ್ಲಿ ಸುಮಾರು 92 ಕಿಮೀ. ವರೆಗೆ ವ್ಯಾಪಿಸಿದೆ ಎಂದು ಎನ್‍ಸಿಎ ಟ್ವಿಟ್ಟರ್ ಮೂಲಕ ತಿಳಿಸಿದೆ. ಭೂಕಂಪದಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ಆದರೆ ಜನ ಒಮ್ಮೆ ಭಯಬೀತರಾಗಿ ಮನೆಗಳಿಂದ ಹೊರ ಬಂದಿದ್ದಾರೆ ಎಂದು ಸ್ಥಳಿಯ ಮಧ್ಯಮಾವೊಂದು ವರದಿ ಮಾಡಿದೆ. ಇದನ್ನೂ ಓದಿ: ಹಿಜಬ್ ಬಳಿಕ ಸಿಂಧೂರ ವಿವಾದ – ಹಣೆಗೆ ಕುಂಕುಮ ಹಚ್ಚಿಕೊಂಡು ಬಂದ ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ

  • ಆಸ್ಪತ್ರೆಯಲ್ಲಿ 320 ಡೋಸ್ ಇರೋ ಕೊರೊನಾ ಲಸಿಕೆ ಕಾಣೆ..!

    ಆಸ್ಪತ್ರೆಯಲ್ಲಿ 320 ಡೋಸ್ ಇರೋ ಕೊರೊನಾ ಲಸಿಕೆ ಕಾಣೆ..!

    ಜೈಪುರ: ಮಹಾಮಾರಿ ಕೊರೊನಾಗೆ ಈಗಾಗಲೇ ಲಸಿಕೆ ಬಂದಿದ್ದು, ದೇಶಾದ್ಯಂತ ಪಡೆದುಕೊಳ್ಳಲಾಗುತ್ತಿದೆ. ಆದರೆ ಇದೀಗ ಈ ಲಸಿಕೆಯ ಮೇಲೂ ಕಳ್ಳರ ಕಣ್ಣು ಬಿದ್ದಿದೆ.

    ಹೌದು. ಜೈಪುರದ ಶಾಸ್ತ್ರಿನಗರದಲ್ಲಿರುವ ಕಾನ್ವಟಿಯಾ ಸರ್ಕಾರಿ ಆಸ್ಪತ್ರೆಯಲ್ಲಿ ಲಸಿಕೆ ಕಳ್ಳತನ ಪ್ರಕರಣ ನಡೆದಿರುವುದು ಬೆಳಕಿಗೆ ಬಂದಿದೆ. ಆಸ್ಪತ್ರೆಯ ಕೋಲ್ಡ್ ಸ್ಟೋರೇಜ್ ನಿಂದ ಲಸಿಕಾ ಕೇಂದ್ರಕ್ಕೆ ಸಾಗಿಸುವ ವೇಳೆ ಕೋವಾಕ್ಸಿನ್ ಕಳ್ಳತನ ನಡೆದಿದೆ ಎಂದು ಹೇಳಲಾಗುತ್ತಿದೆ.

    ಏಪ್ರಿಲ್ 12ರಂದು ಸಂಜೆ ಪರಿಶೀಲಿಸಿದಾಗ ಅದರಲ್ಲಿ ಕೋವಾಕ್ಸಿನ್ ನ 32 ವಯಲ್ ಗಳು ಕಾಣೆಯಾಗಿರುವುದು ಬೆಳಕಿಗೆ ಬಂದಿದೆ. ಒಮದು ವಯಲ್ ನಲ್ಲಿ 10 ಡೋಸ್ ಲಸಿಕೆ ಇರುತ್ತದೆ. ಹೀಗಾಗಿ 320 ಡೋಸ್ ಗಳ ಲಸಿಕೆ ನಷ್ಟವಾಗಿದೆ ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಲಸಿಕೆ ಕಾಣೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನಿಡಲಾಗಿದ್ದು, ಸೂಕ್ತ ತನಿಖೆ ನಡೆಸಲು ಮನವಿ ಮಾಡಲಾಗಿದೆ ಎಂದು ಆರೋಗ್ಯಾಧಿಕಾರಿ ಹೇಳಿದ್ದಾರೆ.

  • ದೀಪಾವಳಿಯಂದು ಪೂಜೆ ಮಾಡ್ತಿದ್ದ ಮಹಿಳೆ ಮೇಲೆ ಪೆಟ್ರೋಲ್ ಸುರಿದು ದೀಪ ಎಸೆದ!

    ದೀಪಾವಳಿಯಂದು ಪೂಜೆ ಮಾಡ್ತಿದ್ದ ಮಹಿಳೆ ಮೇಲೆ ಪೆಟ್ರೋಲ್ ಸುರಿದು ದೀಪ ಎಸೆದ!

    – ಮಹಿಳೆಯನ್ನು ಸುಟ್ಟು ಹಾಕಿದ ಅತ್ಯಾಚಾರಿ

    ಜೈಪುರ: ದೀಪಾವಳಿ ಹಬ್ಬದ ಪ್ರಯುಕ್ತ ಮಹಿಳೆಯೊಬ್ಬರು ಪೂಜೆ ಮಾಡುತ್ತಿದ್ದ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಆಕೆಯ ಮೇಲೆ ಪೆಟ್ರೋಲ್ ಸುರಿದು ದೀಪ ಎಸೆದ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

    ಆರೋಪಿಯನ್ನು ಲೇಖರಾಜ್ 3ಂದು ಗುರುತಿಸಲಾಗಿದೆ. ಈತ ಮಹಿಳೆಯ ಪಕ್ಕದ ಮನೆ ನಿವಾಸಿಯಾಗಿದ್ದಾನೆ. ಈ ಹಿಂದೆ ಇದೇ ಮಹಿಳೆಯನ್ನು ಅತ್ಯಾಚಾರ ಎಸಗಿ ನಂತರ ಬ್ಲಾಕ್‍ಮೇಲ್ ಮಾಡುತ್ತಿದ್ದನು. ಹೀಗಾಗಿ ಮಹಿಳೆ ಲೇಖರಾಜ್ ವಿರುದ್ಧ ಜೈಪುರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಿದ್ದರು. ಆದರೆ ಇದೂವರೆಗೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ.

    ಶನಿವಾರ ಅಂದರೆ ದೀಪಾವಳಿ ಹಬ್ಬದಂದು ರಾತ್ರಿ ಲೇಖರಾಜ್ ಏಕಾಏಕಿ ಮಹಿಳೆಯ ಮನೆಗೆ ನುಗ್ಗಿದ್ದಾನೆ. ಈ ವೇಳೆ ಪೂಜೆ ಮಾಡುತ್ತಿದ್ದ ಆಕೆಯ ಮೇಲೆ ಪೆಟ್ರೋಲ್ ಸುರಿದು ಉರಿಯುತ್ತಿದ್ದ ದೀಪವನ್ನು ಆಕೆಯ ಮೇಲೆ ಎಸೆದಿದ್ದಾನೆ. ಪರಿಣಾಮ ಮಹಿಳೆ ಬೆಂಕಿಗಾಹುತಿಯಾಗಿದ್ದಾರೆ.

    ಘಟನೆ ನಡೆದ ಕೂಡಲೇ ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಮಹಿಳೆಯ ಮನೆಗೆ ಜೈಪುರ ಪೊಲೀಸರು ಭದ್ರತೆ ಒದಗಿಸಿದ್ದಾರೆ. ಇತ್ತ ಪ್ರಕರಣ ಸಂಬಂಧ ಎಫ್‍ಐಆರ್ ದಾಖಲಿಸಿಕೊಂಡರೂ ಆರೋಪಿಯನ್ನು ಇದೂವರೆಗೆ ಬಂಧಿಸಿಲ್ಲ.

  • ಪ್ಲೀಸ್.. ನನ್ನ ಮದ್ವೆ ನಿಲ್ಲಿಸಿ- ಸಿಎಂ ಮನೆ ಬಾಗಿಲು ತಟ್ಟಿದ ಬಾಲಕಿ

    ಪ್ಲೀಸ್.. ನನ್ನ ಮದ್ವೆ ನಿಲ್ಲಿಸಿ- ಸಿಎಂ ಮನೆ ಬಾಗಿಲು ತಟ್ಟಿದ ಬಾಲಕಿ

    ಜೈಪುರ: 15 ವರ್ಷದ ಬಾಲಕಿ ತನ್ನ ಮದುವೆ ನಿಲ್ಲಿಸುವಂತೆ ಸಿಎಂ ಅಶೋಕ್ ಗೆಹ್ಲೋಟ್ ಅವರ ನಿವಾಸ ಬಾಗಿಲು ತಟ್ಟಿದ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

    ರಾಜಸ್ತಾನದ ಟೊಂಕ್ ಜಿಲ್ಲೆಯ ನಿವಾಸಿಯಾಗಿರುವ ಬಾಲಕಿ ಸೋಮವಾರ ನಡೆದ ಮುಖ್ಯಮಂತ್ರಿಗಳ ಅಹವಾಲು ಸ್ವೀಕಾರ ಕಾರ್ಯಕ್ರಮಕ್ಕೆ ಆಗಮಿಸಿದ್ದು, ಈ ವೇಳೆ ತನ್ನ ಮದುವೆ ನಿಲ್ಲಿಸುವಂತೆ ಸಿಎಂ ಅವರ ಎದುರು ಮನವಿ ಮಾಡಿದ್ದಾಳೆ.

    ಬಾಲಕಿ ತನ್ನ ಚಿಕ್ಕಪ್ಪನೊಂದಿಗೆ ಮುಖ್ಯಮಂತ್ರಿಗಳ ನಿವಾಸದ ಬಳಿ ಆಗಮಿಸಿದ್ದು, ಈ ವೇಳೆ ತನಗೆ ಬಲವಂತದ ಮದುವೆ ಮಾಡಲು ತಂದೆ ಮುಂದಾಗಿದ್ದಾರೆ ಎಂದು ಸಿಎಂ ಅವರಿಗೆ ತಿಳಿಸಿದ್ದಾಳೆ. ಇದೇ ವೇಳೆ ನನ್ನ ತಾಯಿ ನನಗೆ ಜನ್ಮ ನೀಡಿ ಸಾವನ್ನಪ್ಪಿದ್ದಾಳೆ. ನನಗೆ ತಾಯಿ ಇಲ್ಲ. ಆದ್ದರಿಂದ ತಂದೆ ಮದುವೆ ಮಾಡಲು ಮುಂದಾಗಿದ್ದಾರೆ ಎಂದು ವಿವರಿಸಿದ್ದಾಳೆ.

    ಬಾಲಕಿಯ ಮನವಿ ಕೇಳಿದ ಸಿಎಂ ಅವರು, ಆಕೆಗೆ ರಕ್ಷಣೆ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ಅಲ್ಲದೇ ಈ ಕುರಿತು ಸೂಕ್ತ ಕ್ರಮಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಆದೇಶಿಸಿದರು. ಬಾಲಕಿ ಓದಲು ಇಷ್ಟಪಡುವವರೆಗೂ ಉಚಿತ ಶಿಕ್ಷಣ ನೀಡಲು ಶಾರದಾ ಬಾಲಿಕಾ ವಸತಿ ಶಾಲಾ ಯೋಜನೆ ಅಡಿ ಅವಕಾಶ ನೀಡಿದರು. ಬಾಲಕಿಗೆ ಧೈರ್ಯದಿಂದ ಇರುವಂತೆ ಹೇಳಿದ ಸಿಎಂ ಅವರು, ನಮ್ಮ ಸರ್ಕಾರ ನಿನ್ನ ಬೆಂಬಲಕ್ಕೆ ನಿಲ್ಲುತ್ತದೆ ಎಂದು ಆತ್ಮವಿಶ್ವಾಸ ತುಂಬಿದ್ದಾರೆ.

    ಬಾಲಕಿಯ ತಾಯಿ ಮೃತರಾದ ಬಳಿಕ ನನ್ನ ಸಹೋದರ (ತಂದೆ) ಯಾವುದೇ ಜವಾಬ್ದಾರಿಯನ್ನು ತೆಗೆದುಕೊಳ್ಳದೆ ನಿರ್ಲಕ್ಷ ವಹಿಸಿದ್ದ. ಆದರೆ ನಾನು ಆಕೆಯನ್ನು ಸಾಕಿ ಬೆಳೆಸಿದ್ದೇನೆ. ಆದರೆ ಈಗ ಆತ ಬಂದು ಮದುವೆ ಮಾಡಲು ಮುಂದಾಗಿದ್ದಾನೆ. ಬಾಲಕಿಗೆ ಮದುವೆಯಾಗಲು ಇಷ್ಟವಿಲ್ಲ. ಹೆಚ್ಚಿನ ಶಿಕ್ಷಣ ಪಡೆಯುವ ಆಸೆ ಹೊಂದಿದ್ದಾಳೆ. ಆದ್ದರಿಂದ ಸಿಎಂ ಅವರ ಸಹಾಯ ಪಡೆಯಲು ಅವರ ಬಳಿ ಆಗಮಿಸಿದ್ದಾಗಿ ಬಾಲಕಿಯ ಚಿಕ್ಕಪ್ಪ ತಿಳಿಸಿದ್ದಾರೆ.

    ಇದೇ ವೇಳೆ ಸಿಎಂ ಅವರಿಗೆ ಧನ್ಯವಾದ ತಿಳಿಸಿದ ಅವರು, ನಮ್ಮ ಮನವಿಗೆ ಕೂಡಲೇ ಅವರು ಸ್ಪಂದಿಸಿದರು. ಅವರನ್ನು ಭೇಟಿ ಮಾಡಿದ್ದು ಸಂಸತ ತಂದಿದೆ. ಬಾಲಕಿಗೆ 18 ವರ್ಷ ಆದ ಬಳಿಕವೇ ಮದುವೆ ಮಾಡುತ್ತೇವೆ. ಆಕೆಗೆ ಇಂಜಿನಿಯರಿಂಗ್ ಓದುವ ಆಸೆ ಇದೆ ಎಂದರು.

  • ನಾವು ಶ್ರೀರಾಮನ ವಂಶಸ್ಥರು ಎಂದ ಬಿಜೆಪಿ ಸಂಸದೆ

    ನಾವು ಶ್ರೀರಾಮನ ವಂಶಸ್ಥರು ಎಂದ ಬಿಜೆಪಿ ಸಂಸದೆ

    ಜೈಪುರ: ಸುಪ್ರೀಂ ಕೋರ್ಟ್ ಶುಕ್ರವಾರ ಅಯೋಧ್ಯೆ ಕುರಿತು ವಿಚಾರಣೆ ನಡೆಸುತ್ತಿದ್ದ ವೇಳೆ “ಶ್ರೀರಾಮನ (ರಘುವಂಶಸ್ಥರು) ಎಲ್ಲಿದ್ದಾರೆ?” ಎಂದು ಪ್ರಶ್ನಿಸಿತ್ತು. ಇದೇ ಬೆನ್ನಲ್ಲಿ ರಾಜಸ್ಥಾನದ ಬಿಜೆಪಿ ಸಂಸದೆ ದಿಯಾ ಕುಮಾರಿ ಅವರು ನಮ್ಮದು ಶ್ರೀರಾಮಚಂದ್ರನ ವಂಶ ಎಂದು ಟ್ವೀಟ್ ಮಾಡಿದ್ದಾರೆ.

    ಸಂಸದೆಯ ಈ ಪ್ರತಿಪಾದನೆಗೆ ಕಾರಣ, ಸುಪ್ರೀಂ ಕೋರ್ಟಿನ ಶುಕ್ರವಾರದ ವಿಚಾರಣೆ ವೇಳೆ “ಶ್ರೀರಾಮನ (ರಘುವಂಶಸ್ಥರು) ಎಲ್ಲಿದ್ದಾರೆ? ಅಯೋಧ್ಯೆಯಲ್ಲಿ ಆತನ ಸಂಬಂಧಿಕರು ಯಾರಾದರೂ ಈಗ ಇದ್ದಾರಾ?” ಎಂದು ಸಿಜೆಐ ರಂಜನ್ ಗೊಗೋಯ್ ನೇತೃತ್ವದ ಪೀಠ ಪ್ರಶ್ನಿಸಿತ್ತು. ಇದಕ್ಕೆ ದಿಯಾ ಅವರು ಪ್ರತಿಕ್ರಿಯಿಸಿ, “ಶ್ರೀರಾಮ ವಿಶ್ವರೂಪಿ. ಜಗತ್ತಿನ ಎಲ್ಲಾ ಕಡೆ ಆತನ ವಂಶಸ್ಥರು ಇದ್ದಾರೆ. ನನ್ನದು ರಘುವಂಶ ಕುಟುಂಬ. ಶ್ರೀರಾಮನ ಪುತ್ರ ಕುಶ ನಮ್ಮ ಪೂರ್ವಜ” ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

    ರಾಜ ವಂಶಸ್ಥರ ಕುರಿತು ಇರುವ ಮನುಸ್ಮೃತಿ, ವಂಶವೃಕ್ಷ ಹಾಗೂ ವಂಶಾವಾಹಿ ದಾಖಲೆಗಳನ್ನು ಆಧಾರವಾಗಿ ಇಟ್ಟುಕೊಂಡೇ ತಾವು ಈ ಪ್ರತಿಪಾದನೆ ಮಾಡುತ್ತಿರುವುದಾಗಿ ದಿಯಾ ಅವರು ಹೇಳಿಕೊಂಡಿದ್ದಾರೆ. ರಾಮ ನಮ್ಮೆಲ್ಲರ ನಂಬಿಕೆಯ ದೈವ. ಹೀಗಾಗಿ ಆತನ ಜನ್ಮಭೂಮಿಗೆ ಸಂಬಂಧಿಸಿದ ಪ್ರಕರಣ ಕುರಿತು ಕೋರ್ಟ್ ತ್ವರಿತ ವಿಚಾರಣೆ ನಡೆಸಿ ತೀರ್ಪು ನೀಡಬೇಕು ಎಂದು ದಿಯಾ ಸುಪ್ರೀಂ ಕೋರ್ಟಿಗೆ ಮನವಿ ಮಾಡಿದ್ದಾರೆ.

    ಅಲ್ಲದೆ ನಮ್ಮ ಕುಟುಂಬ ಕುಶನ ವಂಶವೃಕ್ಷ ಹೊಂದಿದೆ ಎನ್ನುವುದಕ್ಕೆ ದಾಖಲೆಗಳು ಬೇಕಾದರೆ ನಾವು ನೀಡುತ್ತೇವೆ. ಆದರೆ ಅಯೋಧ್ಯೆ ಪ್ರಕರಣದ ಮಧ್ಯೆ ಬಂದು ಮುನ್ನಡೆಯನ್ನು ಪಡೆಯಲು ನಾವು ಇಚ್ಛಿಸುವುದಿಲ್ಲ ಎಂದಿದ್ದಾರೆ.