Tag: Jairam Ramesh

  • ಮೋದಿ ಇಂದು ದಣಿದಿದ್ದಾರೆ, ನಾಳೆ ನಿವೃತ್ತಿ ಆಗ್ತಾರೆ – ಜೈರಾಮ್‌ ರಮೇಶ್‌

    ಮೋದಿ ಇಂದು ದಣಿದಿದ್ದಾರೆ, ನಾಳೆ ನಿವೃತ್ತಿ ಆಗ್ತಾರೆ – ಜೈರಾಮ್‌ ರಮೇಶ್‌

    ನವದೆಹಲಿ: 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೆಂಪು ಕೋಟೆಯಿಂದ ಪ್ರಧಾನಿ ನರೇಂದ್ರ ಮೋದಿ (PM Modi) ಮಾಡಿದ ಸ್ವಾತಂತ್ರ್ಯ ದಿನಾಚರಣೆಯ ಭಾಷಣವನ್ನ ವಿಪಕ್ಷವಾದ ಕಾಂಗ್ರೆಸ್‌ ಟೀಕಿಸಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘ (RSS)ವನ್ನು ಸಮಾಧಾನಪಡಿಸಲು, ಮೋದಿ ಸ್ವಾತಂತ್ರ್ಯೋತ್ಸವದ ಭಾಷಣವನ್ನ ರಾಜಕೀಯಗೊಳಿಸಿದ್ದಾರೆ ಕಿಡಿ ಕಾರಿವೆ.

    ರಾಷ್ಟ್ರೀಯ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ (Jairam Ramesh) ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಸುದೀರ್ಘ ಪೋಸ್ಟ್‌ವೊಂದನ್ನ ಹಂಚಿಕೊಂಡಿದ್ದಾರೆ. ಮೋದಿ ಭಾಷಣವನ್ನ ಅರ್ಥಹೀನ, ಹಳಸಿದ, ನೀರಸ ಹಾಗೂ ಬೂಟಾಟಿಕೆ ಎಂದು ಕರೆದಿದ್ದಾರೆ. ಇದರೊಂದಿಗೆ ಎಸ್ಪಿ ನಾಯಕ ಅಖಿಲೇಶ್‌ ಯಾದವ್‌, ಅಸಾದುದ್ದೀನ್‌ ಓವೈಸಿ ಸೇರಿದಂತೆ ಹಲವರು ಮೋದಿ ಭಾಷಣ ಖಂಡಿಸಿದ್ದಾರೆ. ಇದನ್ನೂ ಓದಿ: ರೈತರ ಕಾವಲಿಗೆ ನಾನು ತಡೆ ಗೋಡೆಯಂತೆ ನಿಂತಿದ್ದೇನೆ – ಕೆಂಪು ಕೋಟೆಯಿಂದ ಟ್ರಂಪ್‌ಗೆ ಮೋದಿ ಖಡಕ್ ಸಂದೇಶ

    ಆರ್‌ಎಸ್‌ಎಸ್‌ ಸಮಾಧಾನಪಡಿಸಲು ಕೆಂಪು ಕೋಟೆ ಭಾಷಣ
    2024ರ ಲೋಕಸಭಾ ಫಲಿತಾಂಶಗಳ ನಂತರ ನಿರ್ಣಾಯಕವಾಗಿ ದುರ್ಬಲಗೊಂಡಿರುವ ಪ್ರಧಾನಿ ಮೋದಿ, ತಮ್ಮ ಅಧಿಕಾರಾವಧಿಯ ವಿಸ್ತರಣೆಗಾಗಿ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಸಮಾಧಾನಪಡಿಸಲು ಕೆಂಪು ಕೋಟೆ (Red Fort) ಭಾಷಣವನ್ನ ಬಳಸಿಕೊಂಡಿದ್ದಾರೆ. ಪ್ರಧಾನಿಯವರ ಇಂದಿನ ಭಾಷಣದ ಅತ್ಯಂತ ತೊಂದರೆದಾಯಕ ಅಂಶವೆಂದರೆ, ಕೆಂಪುಕೋಟೆಯಿಂದ ಆರ್‌ಎಸ್‌ಎಸ್‌ನ ಹೆಸರನ್ನು ಉಲ್ಲೇಖಿಸಿರುವುದಾಗಿದೆ. ಇದು ಸಾಂವಿಧಾನಿಕ, ಜಾತ್ಯತೀತ ಗಣರಾಜ್ಯದ ಚೈತನ್ಯದ ಸ್ಪಷ್ಟ ಉಲ್ಲಂಘನೆಯಾಗಿದೆ. ಮುಂದಿನ ತಿಂಗಳು ಪ್ರಧಾನಿ ಮೋದಿ 75ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ಆರ್‌ಎಸ್‌ಎಸ್‌ನ ಉಲ್ಲೇಖ ಅಧಿಕಾರದಲ್ಲಿ ಮುಂದುವರೆಯುವ ಹತಾಶ ಪ್ರಯತ್ನವಲ್ಲದೇ ಬೇರೇನೂ ಅಲ್ಲ ಎಂದಿದ್ದಾರೆ. ಇದನ್ನೂ ಓದಿ: ಸತತ 12ನೇ ಧ್ವಜಾರೋಹಣ, 103 ನಿಮಿಷ ಸುದೀರ್ಘ ಭಾಷಣ – ಇಂದಿರಾ ಗಾಂಧಿ ದಾಖಲೆ ಮುರಿದ ಮೋದಿ

    ಅಲ್ಲದೇ ಚುನಾವಣಾ ಆಯೋಗದಂತಹ ನಮ್ಮ ಮೂಲಭೂತ ಸಾಂವಿಧಾನಿಕ ಸಂಸ್ಥೆಗಳ ಪತನಕ್ಕೆ ಪ್ರಧಾನಿಯೇ ಕಾರಣ ಮತ್ತು ಮಾಸ್ಟರ್ ಮೈಂಡ್ ಆಗಿದ್ದರೂ, ಏಕತೆ, ಸೇರ್ಪಡೆ ಮತ್ತು ಪ್ರಜಾಪ್ರಭುತ್ವದ ಕುರಿತು ಪ್ರಧಾನಿಯವರು ದೀರ್ಘ ಭಾಷಣ ಮಾಡಿದ್ದಾರೆ. ಚುನಾವಣಾ ಪ್ರಕ್ರಿಯೆಯ ವಿಶ್ವಾಸಾರ್ಹತೆಯ ಕುರಿತು ವಿರೋಧ ಪಕ್ಷದ ನಾಯಕರು ಎತ್ತಿದ ಮೂಲಭೂತ ಪ್ರಶ್ನೆಗಳಿಗೆ ಇನ್ನೂ ಉತ್ತರಿಸಿಲ್ಲ. ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಮೂಲಕ ಲಕ್ಷಾಂತರ ಮತದಾರರನ್ನು ಮತದಾನದಿಂದ ವಂಚಿತಗೊಳಿಸಲಾಗುತ್ತಿದೆ ಎಂದು ಆಕ್ಷೇಪಿಸಿದ್ದಾರೆ. ಇದನ್ನೂ ಓದಿ: 12 ಸ್ವಾತಂತ್ರ್ಯ ಸಂಭ್ರಮಗಳಲ್ಲಿ ಭಾಗಿ; 2014-2025ರ ವರೆಗೆ ಮೋದಿ ಪೇಟ, ವಿಭಿನ್ನ ಲುಕ್‌ ನೋಡಿ..

    ಸ್ವಾತಂತ್ರ್ಯ ದಿನವು ಒಂದು ದೃಷ್ಟಿಕೋನ, ಪ್ರಾಮಾಣಿಕತೆ ಮತ್ತು ಸ್ಫೂರ್ತಿಯ ಕ್ಷಣವಾಗಿರಬೇಕು. ಆದರೆ ಇಂದಿನ ಭಾಷಣವು ಸ್ವ-ಪ್ರಶಂಸೆ ಮತ್ತು ಆಯ್ದ ಕಥೆಗಳ ಮಂದ ಮಿಶ್ರಣವಾಗಿತ್ತು. ದೇಶದ ಆಳವಾದ ಆರ್ಥಿಕ ಬಿಕ್ಕಟ್ಟು, ನಿರುದ್ಯೋಗ ಬಿಕ್ಕಟ್ಟು ಮತ್ತು ವೇಗವಾಗಿ ಬೆಳೆಯುತ್ತಿರುವ ಆರ್ಥಿಕ ಅಸಮಾನತೆಯ ಬಗ್ಗೆ ಯಾವುದೇ ಪ್ರಾಮಾಣಿಕ ಉಲ್ಲೇಖವಿರಲಿಲ್ಲ ಎಂದು ಟೀಕಿಸಿದರಲ್ಲದೇ ಕೊನೆಯಲ್ಲಿ ಪ್ರಧಾನಿ ಇಂದು ದಣಿದಂತೆ ಕಾಣುತ್ತಿದ್ದರು. ಅವರು ಶೀಘ್ರದಲ್ಲೇ ನಿವೃತ್ತರಾಗಲಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: Photo Gallery | ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯೋತ್ಸವದ ಸಂಭ್ರಮ – ʻಆಪರೇಷನ್ ಸಿಂಧೂರʼ ಪ್ರತಿಬಿಂಬ

    ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು?
    ಈ ಕುರಿತು ಪಕ್ಷದ ಪ್ರಧಾನ ಕಚೇರಿಯಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ದಾರ್ಶನಿಕ ನಾಯಕರು ಬಲವಾದ ಭಾರತಕ್ಕೆ ಅಡಿಪಾಯ ಹಾಕಿದ್ದಾರೆ. ಆದರೆ ಬಿಜೆಪಿ ಅಧಿಕಾರದಲ್ಲಿ ಉಳಿಯಲು ಯಾವುದೇ ಮಟ್ಟದ ಅನೈತಿಕತೆಗೆ ಇಳಿಯಲು ಸಿದ್ಧವಾಗಿದೆ. ಭಾರತದ ಸ್ವಾತಂತ್ರ್ಯ ಹೋರಾಟದ ಕಥೆಯು ಕಾಂಗ್ರೆಸ್ಸಿನ ಕಥೆಗೆ ಸಮಾನಾರ್ಥಕವಾಗಿದೆ. ಆದರೆ ಸ್ವಾತಂತ್ರ್ಯ ವೀರರು ದೇಶಕ್ಕಾಗಿ ಕಂಡ ಕನಸು ಈಗ ಮತ್ತಷ್ಟು ದೂರ ಸರಿಯುತ್ತಿದೆ. ಬಿಜೆಪಿ ಅಧಿಕಾರದಲ್ಲಿ ಉಳಿಯಲು ಅನೈತಿಕ ಮಾರ್ಗವನ್ನು ಅನುಸರಿಸುತ್ತಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹರಿಹಾಯ್ದರು. ಇದನ್ನೂ ಓದಿ: ವರ್ಷಕ್ಕೆ 5 ಸಾವಿರ ಉಳಿತಾಯ – ವಾರ್ಷಿಕ ಟೋಲ್‌ ಪಾಸ್‌ | ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

    (more…)

  • ಪಹಲ್ಗಾಮ್‌ ದಾಳಿ, ಆಪರೇಷನ್‌ ಸಿಂಧೂರದ ಬಗ್ಗೆ ಅಧಿವೇಶನದಲ್ಲಿ ಚರ್ಚೆಯಾಗಲಿ: ಜೈರಾಮ್‌ ರಮೇಶ್‌ ಆಗ್ರಹ

    ಪಹಲ್ಗಾಮ್‌ ದಾಳಿ, ಆಪರೇಷನ್‌ ಸಿಂಧೂರದ ಬಗ್ಗೆ ಅಧಿವೇಶನದಲ್ಲಿ ಚರ್ಚೆಯಾಗಲಿ: ಜೈರಾಮ್‌ ರಮೇಶ್‌ ಆಗ್ರಹ

    ನವದೆಹಲಿ: ಪಹಲ್ಗಾಮ್ ದಾಳಿ, ಆಪರೇಷನ್ ಸಿಂಧೂರ ಮತ್ತು ಚೀನಾದ ಬಗೆಗಿನ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆ ಬಗ್ಗೆ ಜುಲೈ 21ರಿಂದ ಆರಂಭಗೊಳ್ಳಲಿರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಚರ್ಚೆಯಾಗಲಿ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ (Jairam Ramesh) ಆಗ್ರಹಿಸಿದ್ದಾರೆ.

    ಈ ಅಧಿವೇಶನದಲ್ಲಿ ಈ ಎಲ್ಲಾ ವಿಚಾರಗಳ ಕುರಿತ ಚರ್ಚೆಗೆ ಕನಿಷ್ಠ 2 ದಿನವಾದರೂ ಅವಕಾಶ ಕಲ್ಪಿಸಬೇಕು. ಅಲ್ಲದೇ ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಶೀಲನೆ (SIR) ಬಗ್ಗೆಯೂ ಅಧಿವೇಶನದಲ್ಲಿ ಚರ್ಚೆ ನಡೆಯಬೇಕು. ಅಲ್ಲದೇ ವಿಪಕ್ಷಗಳ ಎಲ್ಲಾ ಪ್ರಶ್ನೆಗಳಿಗೆ ಪ್ರಧಾನಿ ಮೋದಿ ಅವರು ಸದನದಲ್ಲಿ ಉತ್ತರಿಸಬೇಕು ಎಂದಿದ್ದಾರೆ. ಇದನ್ನೂ ಓದಿ: ಕೆಡಿಪಿ ಮೀಟಿಂಗ್‌ನಲ್ಲಿ ರಮ್ಮಿ ಆಡ್ತಿದ್ದ ಅರಣ್ಯಾಧಿಕಾರಿ – ಸಭೆಯಲ್ಲೇ ಗುಮ್ಮಿದ ಸಚಿವರು

    ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿರುವ ಭಯೋತ್ಪಾದಕರು ಇನ್ನು ಪತ್ತೆಯಾಗಿಲ್ಲ. ಆಪರೇಶನ್ ಸಿಂಧೂರ ಬಗ್ಗೆ ಮೊದಲು ಸೇನಾಪಡೆಗಳ ಮುಖ್ಯಸ್ಥ ಜನರಲ್ ಚೌಹಾಣ್, ಬಳಿಕ ಗ್ರೂಪ್ ಕ್ಯಾಪ್ಟನ್ ಶಿವಕುಮಾರ್ ತದನಂತರ ಲೆಫ್ಟಿನೆಂಟ್ ಜನರಲ್ ರಾಹುಲ್ ಸಿಂಗ್ ಮಹತ್ವದ ಹೇಳಿಯನ್ನು ನೀಡಿದ್ದಾರೆ ಇದರ ಬಗ್ಗೆಯೂ ಚರ್ಚೆಯಾಗಬೇಕು ಎಂದಿದ್ದಾರೆ. ಇದನ್ನೂ ಓದಿ: ಕೇಂದ್ರ ಬಿಜೆಪಿ ಐಸಿಯುನಲ್ಲಿದೆ, ಮೋದಿ ಏಕೆ ಬದಲಾವಣೆ ಆಗಬಾರದು – ಸಂತೋಷ್‌ ಲಾಡ್‌ ಪ್ರಶ್ನೆ

    ಅಲ್ಲದೇ ಮೇಕ್ ಇನ್ ಇಂಡಿಯಾವು ಮೇಡ್ ಇನ್ ಚೈನಾ ಮೇಲೆ ಅವಲಂಬಿತವಾಗಿದೆ ಎಂಬ ವಿಚಾರವೂ ಮಹತ್ವದಾಗಿದ್ದು, ಇವೆಲ್ಲದರ ಬಗ್ಗೆ ಚರ್ಚೆಯಾಗಬೇಕು ಹಾಗೂ ಪ್ರಧಾನಿಯವರು ಉತ್ತರವನ್ನು ನೀಡಬೇಕು. ಕಳೆದ 11 ವರ್ಷಗಳಲ್ಲಿ ಸಂಸತ್ತಿನಲ್ಲಿ ಒಮ್ಮತ ಮೂಡಿಸಿ, ಮುನ್ನಡೆಯುವಂತಹ ಯಾವುದೇ ಬೆಳವಣಿಗೆಗಳು ನಡೆದಿಲ್ಲ. ಬದಲಿಗೆ ಪ್ರಧಾನಿ ಮೋದಿ ಅವರು ತಮ್ಮದೇ ಪ್ರತ್ಯೇಕ ಹಾದಿಯಲ್ಲಿ ಮುನ್ನಡೆಯುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

  • ʻಆಪರೇಷನ್‌ ಸಿಂಧೂರʼವನ್ನ ಬಿಜೆಪಿ ರಾಜಕೀಯಗೊಳಿಸುತ್ತಿದೆ – ಕಾಂಗ್ರೆಸ್‌ ಆರೋಪ

    ʻಆಪರೇಷನ್‌ ಸಿಂಧೂರʼವನ್ನ ಬಿಜೆಪಿ ರಾಜಕೀಯಗೊಳಿಸುತ್ತಿದೆ – ಕಾಂಗ್ರೆಸ್‌ ಆರೋಪ

    ನವದೆಹಲಿ: ವಿಶ್ವ ವೇದಿಕೆಯಲ್ಲಿ ಪಾಕಿಸ್ತಾನದ (Pakistan) ಮುಖವಾಡ ಕಳಚಲು ಹಾಗೂ ಭಾರತದ ʻಆಪರೇಷನ್‌ ಸಿಂಧೂರʼ ಬಗ್ಗೆ ವಿದೇಶಗಳಿಗೆ ಮಾಹಿತಿ ನೀಡಲು ಕೇಂದ್ರ ಸರ್ಕಾರ ಸರ್ವಪಕ್ಷ ಸಂಸದೀಯ ನಿಯೋಗ ರಚನೆ ಮಾಡಿದೆ. ಈ ವಿಚಾರದಲ್ಲೂ ಈಗ ರಾಜಕೀಯ ಜಟಾಪಟಿ ಜೋರಾಗಿದೆ.

    ಸರ್ವಪಕ್ಷ ನಿಯೋಗಕ್ಕೆ ಕಾಂಗ್ರೆಸ್‌ ಸೂಚಿಸಿದ ನಾಲ್ಕು ಹೆಸರುಗಳಲ್ಲಿ ಒಬ್ಬರನ್ನು ಮಾತ್ರ ಆಯ್ಕೆ ಮಾಡಿದ ಬಳಿಕ, ಬಿಜೆಪಿ ʻಆಪರೇಷನ್ ಸಿಂಧೂರʼವನ್ನು (Operation Sindoor) ರಾಜಕೀಯಗೊಳಿಸುತ್ತಿದೆ ಎಂದು ಕಾಂಗ್ರೆಸ್ (Conress) ಆರೋಪಿಸಿದೆ. ಆದಾಗ್ಯೂ, ಕಾಂಗ್ರೆಸ್ ಪಕ್ಷವು ರಾಷ್ಟ್ರೀಯ ಹಿತಾಸಕ್ತಿಗೆ ಮೊದಲ ಆದ್ಯತೆ ನೀಡಲಿದ್ದು, ಈ ಹಂತದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಹೇಳಿದೆ.

    ಕೇಂದ್ರ ಸರ್ಕಾರವು ಯೋಚನೆ ಮೊದಲಿನಿಂದಲೂ ದುರುದ್ದೇಶಪೂರಿತವಾಗಿದೆ. ಆಪರೇಷನ್‌ ಸಿಂಧೂರವನ್ನು ರಾಜಕೀಯ ಗೊಳಿಸಲಾಗುತ್ತಿದೆ ಅನ್ನೋದು ಮೊದಲಿನಿಂದಲೂ ತಿಳಿದಿದೆ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ (Jairam Ramesh) ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಮುಜೀಬ್ ಬಯೋಪಿಕ್‌ನಲ್ಲಿ ಶೇಖ್ ಹಸೀನಾ ಪಾತ್ರದಲ್ಲಿ ನಟಿಸಿದ್ದ ಬಾಂಗ್ಲಾ ನಟಿ ಅರೆಸ್ಟ್

    ಪಕ್ಷದ ಹಿರಿಯ ನಾಯಕ ರಾಹುಲ್ ಗಾಂಧಿ (Rahul Gandhi), ಆನಂದ್ ಶರ್ಮಾ, ಗೌರವ್ ಗೊಗೊಯ್, ನಾಸಿರ್ ಹುಸೇನ್ ಮತ್ತು ರಾಜಾ ಬ್ರಾರ್ ನಾಲ್ಕು ಹೆಸರುಗಳ ಪಟ್ಟಿಯನ್ನು ಕಳುಹಿಸಿದ್ದರು. ಆದ್ರೆ ಆನಂದ್ ಶರ್ಮಾ ಒಬ್ಬರ ಹೆಸರನ್ನು ಮಾತ್ರ ನಿಯೋಗಕ್ಕೆ ಸೇರಿಸಲಾಗಿದೆ. ಶಶಿ ತರೂರ್‌ ಸೇರಿದಂತೆ ಇತರ ನಾಯಕರ ಹೆಸರು ಕಾಂಗ್ರೆಸ್‌ ನೀಡಿದ ಅಧಿಕೃತ ಪಟ್ಟಿಯಲ್ಲಿ ಇರಲಿಲ್ಲ ಎಂದು ಬೇಸರ ಹೊರಹಾಕಿದ್ದಾರೆ. ಇದನ್ನೂ ಓದಿ: 2006ರಲ್ಲಿ RSS ಕಚೇರಿ ಮೇಲಿನ ದಾಳಿಯ ಪ್ರಮುಖ ಸಂಚುಕೋರ, ಲಷ್ಕರ್ ಉಗ್ರ ಪಾಕ್‌ನಲ್ಲಿ ಹತ್ಯೆ

    ಆದಾಗ್ಯೂ, ರಾಷ್ಟ್ರೀಯ ಹಿತಾಸಕ್ತಿ ಅತ್ಯಂತ ಮುಖ್ಯ ಎಂದು ಕಾಂಗ್ರೆಸ್ ಪಕ್ಷ ನಂಬುತ್ತದೆ. ಸಂಸದರ ನಿಯೋಗ ಹೋಗಲಿ… ನಾವು ಅವರನ್ನು ತಡೆಯುವುದಿಲ್ಲ, ಈ ನಿಯೋಗವನ್ನು ಬಹಿಷ್ಕರಿಸುವುದಿಲ್ಲ. ಜೊತೆಗೆ ರಾಜಕೀಯಗೊಳಿಸುವುದೂ ಇಲ್ಲ ಎಂದು ತಿಳಿಸಿದ್ದಾರೆ.

    ಇನ್ನೂ‌ ವಿದೇಶಗಳಿಗೆ ಮಾಹಿತಿ ನೀಡಲು ರಚಿಸಲಾದ ಸರ್ವಪಕ್ಷ ನಿಯೋಗವನ್ನು ಕೇಂದ್ರ ಸಚಿವ ಕಿರಣ್‌ ರಿಜಿಜು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಪಾಕ್‌ ಪ್ರಧಾನಿ ನಿದ್ದೆಗೆಡಿಸಿದ ʻಆಪರೇಷನ್‌ ಸಿಂಧೂರʼ – ಶೆಹಬಾಜ್‌ಗೆ ಮಧ್ಯರಾತ್ರಿ ಕರೆ ಮಾಡಿದ್ಯಾರು?

  • Ceasefire | ಮೋದಿ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಕರೆಯುವಂತೆ ಕಾಂಗ್ರೆಸ್‌ ಆಗ್ರಹ

    Ceasefire | ಮೋದಿ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಕರೆಯುವಂತೆ ಕಾಂಗ್ರೆಸ್‌ ಆಗ್ರಹ

    ನವದೆಹಲಿ: ಪಹಲ್ಗಾಮ್‌ ಭಯೋತ್ಪಾದಕ ದಾಳಿ, ಆಪರೇಷನ್‌ ಸಿಂಧೂರ, ಭಾರತ ಮತ್ತು ಪಾಕ್‌ ನಡುವಿನ ಕದನ ವಿರಾಮ (Ceasefire) ಕುರಿತು ಪ್ರಧಾನಿ ಮೋದಿ (Narendra Modi) ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಕರೆಯಬೇಕು. ಜೊತೆಗೆ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ನಡೆಸಬೇಕು ಎಂದು ರಾಷ್ಟ್ರೀಯ ಕಾಂಗ್ರೆಸ್‌ ಆಗ್ರಹಿಸಿದೆ.

    ಈ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ (Jairam Ramesh) ತಮ್ಮ ಎಕ್ಸ್‌ ಖಾತೆಯಲ್ಲಿ ಆಗ್ರಹಿಸಿದ್ದಾರೆ. ಕೂಡಲೇ ಮೋದಿ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಹಾಗೂ ಸಂಸತ್‌ನಲ್ಲಿ ವಿಶೇಷ ಅಧಿವೇಶನ ಕರೆದರೆ ಈ ಎಲ್ಲ ವಿಷಯಗಳ ಬಗ್ಗೆ‌ ಸಮಗ್ರವಾಗಿ ಚರ್ಚಿಸಬಹುದು ಎಂದು ಹೇಳಿದ್ದಾರೆ.

    ಮುಂದುವರಿದು… ಭಾರತ ಮತ್ತು ಪಾಕಿಸ್ತಾನದ (Pakistan) ನಡುವಿನ ಕದನ ವಿರಾಮ ಕುರಿತ ಚರ್ಚೆಗೆ ʻತಟಸ್ಥ ವೇದಿಕೆʼಯ ಬಗ್ಗೆ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಪ್ರಸ್ತಾಪಿಸಿರುವುದು ಹಲವಾರು ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ರಾಷ್ಟ್ರೀಯ ಕಾಂಗ್ರೆಸ್ ನಂಬುತ್ತದೆ. ನಾವು ಶಿಮ್ಲಾ ಒಪ್ಪಂದವನ್ನು ಕೈಬಿಟ್ಟಿದ್ದೇವೆಯೇ? 3ನೇ ವ್ಯಕ್ತಿಯ ಮಧ್ಯಸ್ಥಿಕೆಗೆ ಆಹ್ವಾನ ಕೊಟ್ಟಿದ್ದೇವೆ ಎಂಬ ಅನುಮಾನ ಮೂಡಿದೆ ಅಂತ ಕಳವಳ ವ್ಯಕ್ತಪಡಿಸಿದ್ದಾರೆ.

    ಭಾರತ ಮತ್ತು ಪಾಕಿಸ್ತಾನ (India – Pakistan) ನಡುವೆ ರಾಜತಾಂತ್ರಿಕ ಮಾರ್ಗಗಳನ್ನು ಮತ್ತೆ ತೆರೆಯಲಾಗುತ್ತಿದೆಯೇ? ಎಂದು ಕಾಂಗ್ರೆಸ್ ಕೇಳಲು ಬಯಸುತ್ತದೆ. ನಾವು ಪಾಕಿಸ್ತಾನದಿಂದ ಯಾವ ಬದ್ಧತೆ ಬಯಸಿದ್ದೇವೆ, ಅದರಿಂದ ನಮಗೆ ಏನು ಸಿಕ್ಕಿದೆ? ಈ ಇಡೀ ಪರಿಸ್ಥಿತಿಯ ಕುರಿತು ದೇಶದ ಇಬ್ಬರು ಮಾಜಿ ಸೇನಾ ಮುಖ್ಯಸ್ಥರು ನೀಡಿದ ಹೇಳಿಕೆಗಳ ಬಗ್ಗೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಗಮನ ಸೆಳೆಯಲು ಬಯಸುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು, ಪ್ರಧಾನ ಮಂತ್ರಿಗಳೇ ಪ್ರತಿಕ್ರಿಯಿಸಬೇಕು ಎಂದು ಮನವಿ ಮಾಡಿದ್ದಾರೆ.

    ಕೊನೆಯದ್ದಾಗಿ, 1971 ರಲ್ಲಿ ಇಂದಿರಾ ಗಾಂಧಿಯವರು ಪ್ರದರ್ಶಿಸಿದ ಅಸಾಧಾರಣ ದಿಟ್ಟ ಮತ್ತು ದೃಢನಿಶ್ಚಯದ ನಾಯಕತ್ವವನ್ನು ದೇಶವು ನೆನಪಿಸಿಕೊಳ್ಳುವುದು ಸ್ವಾಭಾವಿಕ ಎಂದು ರಾಷ್ಟ್ರೀಯ ಕಾಂಗ್ರೆಸ್ ನಂಬುತ್ತದೆ ಎಂದು ಎಕ್ಸ್‌ನಲ್ಲಿ ಜೈರಾಮ್‌ ರಮೇಶ್‌ ತಿಳಿಸಿದ್ದಾರೆ.

    ಏಪ್ರಿಲ್‌ 22ರಂದು ನಡೆದ ಪಹಲ್ಗಾಮ್‌ ದಾಳಿ ಉದ್ದೇಶಿಸಿ ನಡೆದ ಮೊದಲ ಸರ್ವಪಕ್ಷ ಸಭೆ ಹಾಗೂ ಆಪರೇಷನ್‌ ಸಿಂಧೂರ ಬಗ್ಗೆ ನಡೆದ ಸರ್ವಪಕ್ಷ ಸಭೆಗಳಿಗೆ ಮೋದಿ ಗೈರಾಗಿದ್ದರು.

  • RSS ಹೊಗಳೋದ್ರಲ್ಲಿ ತಪ್ಪೇನು?, ಅವಿಶ್ವಾಸ ನಿರ್ಣಯ ಮಂಡಿಸಿರುವುದು ವಿಷಾದನೀಯ: ಕಿರಣ್ ರಿಜಿಜು

    RSS ಹೊಗಳೋದ್ರಲ್ಲಿ ತಪ್ಪೇನು?, ಅವಿಶ್ವಾಸ ನಿರ್ಣಯ ಮಂಡಿಸಿರುವುದು ವಿಷಾದನೀಯ: ಕಿರಣ್ ರಿಜಿಜು

    ನವದೆಹಲಿ: ರಾಜ್ಯಸಭೆಯ ಸಭಾಪತಿ ಜಗದೀಪ್ ಧನಕರ್ ಅವರ ಪದಚ್ಯುತಿಗೆ ಒತ್ತಾಯಿಸಿ ವಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಿರುವುದು ಅತ್ಯಂತ ವಿಷಾದನೀಯ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು (Kiren Rijiju) ಹೇಳಿದ್ದಾರೆ.

    ಮೇಲ್ಮನೆಯ ಸಭಾಪತಿಯಾಗಿ ಪಕ್ಷಪಾತ ಧೋರಣೆ ಪ್ರದರ್ಶಿಸಿದ್ದಾರೆ ಎಂದು ಆರೋಪಿಸಿ, ಧನಕ‌ರ್ (Jagdeep Dhankhar) ಅವರನ್ನು ಪದಚ್ಯುತಿಗೊಳಿಸಲು ರಾಜ್ಯಸಭೆಯಲ್ಲಿ ಗೊತ್ತುವಳಿ ಮಂಡಿಸಲು ಇಂಡಿಯಾ ಬಣದ ಪಕ್ಷಗಳ ಸದಸ್ಯರು ಮಂಗಳವಾರ ನೋಟಿಸ್‌ ನೀಡಿದ್ದಾರೆ. ಈ ಕುರಿತು ರಿಜಿಜು ಮಾತನಾಡಿದ್ದಾರೆ. ರಾಜ್ಯ ಪ್ರಧಾನ ಕಾರ್ಯದರ್ಶಿಗಳಿಗೆ ಸಲ್ಲಿಸಿದ ನೋಟಿಸ್‌ನಲ್ಲಿ ಈ ಹಿಂದೆ ಧನಕರ್‌ ಅವರು ಆರ್‌ಎಸ್‌ಎಸ್‌ ಅನ್ನು ಹೇಗೆ ಹೊಗಳಿದ್ದರು ಎಂಬ ಅಂಶವನ್ನು ಕಾಂಗ್ರೆಸ್‌ ಉಲ್ಲೇಖಿಸಿದೆ. ಅಲ್ಲದೇ ಧನಕರ್‌ ಆರ್‌ಎಸ್‌ಎಸ್‌ನ ಏಕಲವ್ಯ ಎಂದು ಬಣ್ಣಿಸಿದೆ. ಆರ್‌ಎಸ್‌ಎಸ್‌ ನಮ್ಮ ದೇಶದ ಹೆಮ್ಮೆಯ ಸಂಘಟನೆಯಾಗಿದೆ. ಆರ್‌ಎಸ್‌ಎಸ್‌ ಹೊಗಳೋದ್ರಲ್ಲಿ ತಪ್ಪೇನಿದೆ ಎಂದು ಪ್ರಶ್ನೆ ಮಾಡಿದ್ದಾರೆ.

    ಭಾರತ ದೇಶದ ಯಾವುದೇ ಸಂಘಟನೆಯನ್ನು ಹೊಗಳುವುದು ಕಾನೂನು ಬಾಹಿರ ಆಗುವುದಿಲ್ಲ. ಉಪರಾಷ್ಟ್ರಪತಿಗಳು ಆರ್‌ಎಸ್‌ಎಸ್ ಬಗ್ಗೆ ಒಳ್ಳೆಯ ಮಾತು ಆಡಿರುವುದನ್ನ ಅಪರಾಧ ಅಂತ ಹೇಗೆ ಪರಿಗಣಿಸಿದೆ ಎಂಬುದೇ ಆಶ್ಚರ್ಯವಾಗಿದೆ. ಗಾಂಧಿ ಕುಟುಂಬದೊಂದಿಗೆ ಜಾರ್ಜ್ ಸೊರೊಸ್ ಸಂಪರ್ಕದ ವಿಚಾರವನ್ನು ದಿಕ್ಕುತಪ್ಪಿಸಲು ಕಾಂಗ್ರೆಸ್‌ ತಂತ್ರ ಮಾಡಿದೆ ಎಂದು ರಿಜಿಜು ಹೇಳಿದ್ದಾರೆ.

    ಧನಕರ್ ಅವರು ಅತ್ಯಂತ ವೃತ್ತಿಪರ ಮತ್ತು ನಿಷ್ಪಕ್ಷಪಾತ ಧೋರಣೆ ಉಳ್ಳವರು. ಈ ಅವಿಶ್ವಾಸ ನಿರ್ಣಯ ಅಂಗೀಕಾರವಾಗಬೇಕಾದರೆ ಸರಳ ಬಹುಮತ ಬೇಕು. ಆದರೆ, ವಿಪಕ್ಷಗಳಿಗೆ ಅಷ್ಟು ಸದಸ್ಯರ ಬೆಂಬಲ ಇಲ್ಲ. ಆದರೂ ಸಂಸದೀಯ ಪ್ರಜಾಪ್ರಭುತ್ವಕ್ಕಾಗಿ ಹೋರಾಡಲು ಇದೊಂದು ಅಸ್ತ್ರ ಎಂದು ವಿಪಕ್ಷಗಳ ಸದಸ್ಯರು ಅಭಿಪ್ರಾಯಪಟ್ಟಿದ್ದಾರೆ.

    ಪದಚ್ಯುತಗೊಳಿಸಲು ರಾಜ್ಯಸಭೆಯಲ್ಲಿ ಗೊತ್ತುವಳಿ ಮಂಡಿಸಲು ಇಂಡಿಯಾ ಬಣದ ಪಕ್ಷಗಳ ಸದಸ್ಯರು ಮಂಗಳವಾರ ನೋಟಿಸ್‌ ನೀಡಿದ್ದಾರೆ. ಈ ಅವಿಶ್ವಾಸ ನಿರ್ಣಯ ಅಂಗೀಕಾರವಾಗಬೇಕಾದರೆ ಸರಳ ಬಹುಮತ ಬೇಕು. ಆದರೆ, ವಿಪಕ್ಷಗಳಿಗೆ ಅಷ್ಟು ಸದಸ್ಯರ ಬೆಂಬಲ ಇಲ್ಲ. ಆದರೂ ಸಂಸದೀಯ ಪ್ರಜಾಪ್ರಭುತ್ವಕ್ಕಾಗಿ ಹೋರಾಡಲು ಇದೊಂದು ಅಸ್ತ್ರ ಎಂದು ವಿಪಕ್ಷಗಳ ಸದಸ್ಯರು ಅಭಿಪ್ರಾಯಪಟ್ಟಿದ್ದಾರೆ.

    ಕಾಂಗ್ರೆಸ್, ಆರ್‌ಜೆಡಿ, ಟಿಎಂಸಿ, ಸಿಪಿಐ, ಸಿಪಿಐ-ಎಂ, ಜೆಂಎಂ, ಎಎಪಿ, ಸಮಾಜವಾದಿ ಪಕ್ಷಗಳ 60 ಸದಸ್ಯರು ಸಹಿ ಹಾಕಿದ್ದ ನೋಟಿಸ್ ಅನ್ನು ವಿಪಕ್ಷಗಳ ಪರವಾಗಿ ಕಾಂಗ್ರೆಸ್‌ ಸದಸ್ಯರಾದ ಜೈರಾಮ್ ರಮೇಶ್, ನಾಸಿ‌ರ್ ಹುಸೇನ್‌ ಅವರು ರಾಜ್ಯಸಭಾ ಪ್ರಧಾನ ಕಾರ್ಯದರ್ಶಿಗಳಿಗೆ ಸಲ್ಲಿಸಿದ್ದಾರೆ.

  • ಇದೇ ಮೊದಲ ಬಾರಿಗೆ ರಾಜ್ಯಸಭೆ ಸಭಾಪತಿ ವಿರುದ್ಧ ಅವಿಶ್ವಾಸ ಮಂಡನೆ!

    ಇದೇ ಮೊದಲ ಬಾರಿಗೆ ರಾಜ್ಯಸಭೆ ಸಭಾಪತಿ ವಿರುದ್ಧ ಅವಿಶ್ವಾಸ ಮಂಡನೆ!

    ನವದೆಹಲಿ: ಸಂಸತ್‌ನಲ್ಲಿಂದು ಮಹತ್ವದ ಬೆಳವಣಿಗೆ ನಡೆಯಿತು. ರಾಜ್ಯಸಭೆ ಸಭಾಪತಿ ಜಗದೀಪ್‌ ಧನಕರ್‌ (Jagdeep Dhankhar) ಅವರ ಪದಚ್ಯುತಿಗೆ ಒತ್ತಾಯಿಸಿ ವಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಿದವು.

    ಕಾಂಗ್ರೆಸ್‌, ಆರ್‌ಜೆಡಿ, ಟಿಎಂಸಿ, ಸಿಪಿಐ, ಸಿಪಿಐ-ಎಂ, ಜೆಎಂ, ಎಎಪಿ, ಸಮಾಜವಾಧಿ ಪಕ್ಷಗಳ ಸುಮಾರು 60 ಸದಸ್ಯರು ಸಹಿ ಹಾಕಿದ್ದ ನೋಟಿಸ್‌ ಅನ್ನು ವಿಪಕ್ಷಗಳ ಪರವಾಗಿ ಕಾಂಗ್ರೆಸ್‌ ಸದಸ್ಯರಾದ ಜೈರಾಮ್‌ ರಮೇಶ್‌ (Jairam Ramesh), ನಾಸಿರ್‌ ಹುಸೇನ್‌ ಅವರು ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿಗಳಿಗೆ ಸಲ್ಲಿಸಿದ್ದಾರೆ. ಇದನ್ನೂ ಓದಿ: 2028ಕ್ಕೆ ನಮಗೆ ಬೇಕಾದ ಸರ್ಕಾರ ತಂದು ಮೀಸಲಾತಿ ಪಡೆಯುತ್ತೇವೆ: ಜಯ ಮೃತ್ಯುಂಜಯ ಸ್ವಾಮೀಜಿ

    ಜಗದೀಪ್ ಧನಕರ್‌ ಅವರು ಪಕ್ಷಪಾತಿಯಾಗಿ ವ್ಯವಹರಿಸ್ತಿದ್ದಾರೆ, ವಿಪಕ್ಷಗಳ ಧ್ವನಿಯನ್ನು ಹತ್ತಿಕ್ಕುತ್ತಿದ್ದಾರೆ ಎಂದು ಆರೋಪಿಸಿದೆ. ಪ್ರತಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಿದವು. ರಾಜ್ಯಸಭೆಯಲ್ಲಿ ಉಪರಾಷ್ಟ್ರಪತಿ ಪದಚ್ಯುತಿಗೆ ಪ್ರಸ್ತಾವನೆ ತರಲು ನೋಟಿಸ್‌ ಮಂಡನೆಯಾಗುತ್ತಿರುವುದು ಇದೇ ಮೊದಲು. ಇದನ್ನೂ ಓದಿ: ‘ಪುಷ್ಪ 2’ ಭರ್ಜರಿ ಕಲೆಕ್ಷನ್- 922 ಕೋಟಿ ಗಳಿಕೆ ಮಾಡಿದ ರಶ್ಮಿಕಾ ಮಂದಣ್ಣ ಸಿನಿಮಾ

    ಕಳೆದ ಆಗಸ್ಟ್‌ನಲ್ಲೇ ಇಂಡಿಯಾ ಒಕ್ಕೂಟ ಎಲ್ಲ ಸದಸ್ಯರಿಗೆ ಅವಿಶ್ವಾಸ ನಿರ್ಣಯ ಮಂಡಿಸುವ ಕುರಿತು ಸಹಿ ಸಂಗ್ರಹಿಸಲು ಕರೆ ನೀಡಲಾಗಿತ್ತು. ನಂತರ ಧನಕರ್‌ ಅವರ ಮುಂದಿನ ನಡೆಯನ್ನು ಕಾದುನೋಡೋಣವೆಂದು ನಿರ್ಧಾರ ಕೈಬಿಟ್ಟಿದ್ದರು. ಇದೀಗ ಮತ್ತೆ ಉಪರಾಷ್ಟ್ರಪತಿಗಳು ಪಕ್ಷಪಾತಿಯಾಗಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ಅವಿಶ್ವಾಸ ನಿರ್ಣಯ ಮಂಡನೆ ಮಾಡಿವೆ. ಸಂಸದೀಯ ಪ್ರಜಾಪ್ರಭುತ್ವದ ಹಿತಾಸಕ್ತಿಯಿಂದ ಈ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿವೆ.

    ಹಿಂದಿನ ಘಟನೆಗಳು ನೆನಪಿದೆಯೇ?
    ಈ ಹಿಂದೆ ಲೋಕಸಭೆಯ ಸ್ಪೀಕರ್‌ ಪದಚ್ಯುತಿಗೆ ಅವಿಶ್ವಾಸ ನಿರ್ಣಯ ಮಂಡನೆ ಆಗಿತ್ತು. ಆದ್ರೆ ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಸಭಾಪತಿಗಳ ವಿರುದ್ಧ ಆಗಿರಲಿಲ್ಲ. ಲೋಕಸಭೆ ಸ್ಪೀಕರ್‌ಗಳ ವಿರುದ್ಧ ಈ ಹಿಂದೆ ಮೂರು ನಿರ್ಣಯಗಳು ಮಂಡನೆಯಾಗಿತ್ತು. 1954ರ ಡಿ.18ರಂದು ಜಿ.ವಿ ಮಾವಲಂಕರ್ ವಿರುದ್ಧ, 1966ರ ನ.24ರಂದು ಹುಕಮ್ ಸಿಂಗ್ ವಿರುದ್ಧ ಹಾಗೂ 1987ರ ಏಪ್ರಿಲ್ 15 ರಂದು ಬಲರಾಮ್ ಜಖರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಯಾಗಿತ್ತು. ಆದ್ರೆ ರಾಜ್ಯಸಭೆ ಸಭಾಪತಿ ವಿರುದ್ಧ ಇದೇ ಮೊದಲ ಬಾರಿಗೆ ನಿರ್ಣಯ ಮಂಡನೆಯಾಗಿದೆ. ಇದನ್ನೂ ಓದಿ: ರಾಜ್‌ಕುಮಾರ್ ಕಿಡ್ನಾಪ್ ವೇಳೆ ಸ್ಯಾಟ್‌ಲೈಟ್ ಫೋನ್‌ನಿಂದ ವೀರಪ್ಪನ್ ಜೊತೆ ಮಾತನಾಡಿದ್ದ ಎಸ್‌ಎಂಕೆ

  • ತೆಲಂಗಾಣ | ಜಾತಿಗಣತಿ ಆರಂಭಿಸಿದ ಕಾಂಗ್ರೆಸ್ ಸರ್ಕಾರ – 1.17 ಕೋಟಿ ಕುಟುಂಬಗಳ ಸಮೀಕ್ಷೆ

    ತೆಲಂಗಾಣ | ಜಾತಿಗಣತಿ ಆರಂಭಿಸಿದ ಕಾಂಗ್ರೆಸ್ ಸರ್ಕಾರ – 1.17 ಕೋಟಿ ಕುಟುಂಬಗಳ ಸಮೀಕ್ಷೆ

    ಹೈದರಾಬಾದ್‌: ತೆಲಂಗಾಣದಲ್ಲಿ ಮುಖ್ಯಮಂತ್ರಿ ರೇವಂತ್ ರೆಡ್ಡಿ (Revanth Reddy) ನೇತೃತ್ವದ ಕಾಂಗ್ರೆಸ್ ಸರ್ಕಾರ ತನ್ನ ಬಹುನಿರೀಕ್ಷಿತ ಜಾತಿ ಆಧಾರಿತ ಗಣತಿ (Caste Survey) ಕಾರ್ಯ ಆರಂಭಿಸಿದೆ.

    ಇದೊಂದು ಐತಿಹಾಸಿಕ ಮತ್ತು ಕ್ರಾಂತಿಕಾರಿ ಕ್ಷಣ ಅಂತ ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ (Jairam Ramesh) ಬಣ್ಣಿಸಿದ್ದಾರೆ. ಇದನ್ನೂ ಓದಿ: ಸಾಂಪ್ರದಾಯಿಕ ವಿಧಿವಿಧಾನಗಳೊಂದಿಗೆ ‘ಲಕ್ಕಿ’ ಕಾರ್ ಸಮಾಧಿ – ಅಂತ್ಯಸಂಸ್ಕಾರಕ್ಕೆ 4 ಲಕ್ಷ ಖರ್ಚು, 1,500 ಮಂದಿ ಭಾಗಿ

    ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಮಾಡಿರುವ ಜೈರಾಮ್ ರಮೇಶ್, ಮುಂದಿನ ಕೆಲವು ವಾರಗಳಲ್ಲಿ 80,000 ಗಣತಿದಾರರು ಮನೆ ಮನೆಗಳಿಗೆ ತೆರಳಿ ಜಾತಿ ಗಣತಿ ಕಾರ್ಯ ಮಾಡಲಿದ್ದಾರೆ. 33 ಜಿಲ್ಲೆಗಳಲ್ಲಿ 1.17 ಕೋಟಿ ಕುಟುಂಬಗಳನ್ನು ಗಣತಿ ಮಾಡಲಿದ್ದಾರೆ ಅಂತ ತಿಳಿಸಿದ್ದಾರೆ.

    1931 ರಿಂದ ತೆಲಂಗಾಣದಲ್ಲಿ ಇದೇ ಮೊದಲ ಬಾರಿಗೆ ಜಾತಿ ಆಧಾರಿತ ಗಣತಿ ಕಾರ್ಯ ನಡೀತಿದೆ. ರಾಹುಲ್ ಗಾಂಧಿ ಹೇಳಿದಂತೆ ಜಾತಿಗಣತಿ ನಡೀತಿದ್ದು, ಇದು ದೇಶದ ಜಾತಿಗಣತಿಯ ನೀಲನಕ್ಷೆಯಾಗಲಿದೆ ಎಂದಿದ್ದಾರೆ. ಇದನ್ನೂ ಓದಿ: ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಬರದಿದ್ದರೆ ಐಸಿಸಿ ಟೂರ್ನಿಗಳಿಗೆ ಬಹಿಷ್ಕಾರ: ಪಾಕ್‌

    ಜಾತಿಗಣತಿ ಪರಿಶಿಷ್ಟ ಜಾತಿ, ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳಿಗಿರುವ ಶೇ.50 ರಷ್ಟು ಮೀಸಲಾತಿಯ ಸುಪ್ರೀಂ ಕೋರ್ಟ್ ನಿರ್ಬಂಧವನ್ನು ರದ್ದುಗೊಳಿಸುವ ಕಾಂಗ್ರೆಸ್‌ಗೆ ದೂರ ದೃಷ್ಟಿಗೆ ಕೇಂದ್ರವಾಗಿದೆ ಅಂತಲೂ ಜೈರಾಮ್ ರಮೇಶ್ ಬಣ್ಣಿಸಿದ್ದಾರೆ. ಇದನ್ನೂ ಓದಿ: ನೀಟ್‌ ಆಕಾಂಕ್ಷಿಗಳ ಮೇಲೆ ವಿಜ್ಞಾನ ಶಿಕ್ಷಕರಿಂದ ತಿಂಗಳಾನುಗಟ್ಟಲೆ ರೇಪ್‌, ಬ್ಲ್ಯಾಕ್‌ಮೇಲ್‌ – ಕಾಮುಕರು ಅರೆಸ್ಟ್‌

  • ಹರಿಯಾಣ ಚುನಾವಣೆ ಫಲಿತಾಂಶವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ: ಕಾಂಗ್ರೆಸ್‌

    ಹರಿಯಾಣ ಚುನಾವಣೆ ಫಲಿತಾಂಶವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ: ಕಾಂಗ್ರೆಸ್‌

    ನವದೆಹಲಿ: ಹರಿಯಾಣದಲ್ಲಿನ (Haryana Election Results) ಚುನಾವಣಾ ಫಲಿತಾಂಶಗಳು ಅನಿರೀಕ್ಷಿತ ಮತ್ತು ಆಘಾತಕಾರಿ, ಕಾಂಗ್ರೆಸ್ (Congress) ಅದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಪಕ್ಷವು ತಿಳಿಸಿದೆ.

    ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ (Jairam Ramesh), ಹರಿಯಾಣದ ಫಲಿತಾಂಶಗಳು ಸಂಪೂರ್ಣವಾಗಿ ಅನಿರೀಕ್ಷಿತ, ಆಶ್ಚರ್ಯಕರವಾಗಿದೆ. ಇದು ವಾಸ್ತವಕ್ಕೆ ವಿರುದ್ಧವಾಗಿದೆ. ಇದು ಹರಿಯಾಣದ ಜನರು ಬದಲಾವಣೆ ಮತ್ತು ಪರಿವರ್ತನೆಗಾಗಿ ಮನಸ್ಸು ಮಾಡಿದ್ದಕ್ಕೆ ವಿರುದ್ಧವಾಗಿದೆ. ಹೀಗಿರುವಾಗ ಇಂದು ಪ್ರಕಟವಾಗಿರುವ ಫಲಿತಾಂಶವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಹರಿಯಾಣದಲ್ಲಿ ನಾವು ಇಂದು ನೋಡಿರುವುದು ಕುಶಲತೆಯ ಗೆಲುವು, ಜನರ ಇಚ್ಛೆಯನ್ನು ಬುಡಮೇಲು ಮಾಡಿದ ವಿಜಯವಾಗಿದೆ. ಇದು ಪಾರದರ್ಶಕ, ಪ್ರಜಾಸತ್ತಾತ್ಮಕ ಪ್ರಕ್ರಿಯೆಗಳ ಸೋಲು. ಹರಿಯಾಣದ ಅಧ್ಯಾಯ ಪೂರ್ಣವಾಗಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: Jammu Kashmir Results | ಚುನಾವಣೆಯಲ್ಲಿ ಸೋತರೂ ಮತಗಳಿಕೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿ

    ಮಧ್ಯಾಹ್ನದವರೆಗೆ ನಾನು ಚುನಾವಣಾ ಆಯೋಗದೊಂದಿಗೆ ಸಂಪರ್ಕದಲ್ಲಿದ್ದೆ. ನನ್ನ ದೂರುಗಳಿಗೆ ಅವರು ಉತ್ತರಿಸಿದ್ದಾರೆ. ಅವರ ಉತ್ತರಕ್ಕೆ ನಾನು ಪ್ರತಿಕ್ರಿಯಿಸಿದ್ದೇನೆ. ಹರಿಯಾಣದ ಕನಿಷ್ಠ ಮೂರು ಜಿಲ್ಲೆಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಎಣಿಕೆಯ ಪ್ರಕ್ರಿಯೆ ಮತ್ತು ಕಾರ್ಯನಿರ್ವಹಣೆಯ ಬಗ್ಗೆ ನಾವು ಗಂಭೀರ ದೂರುಗಳನ್ನು ಸ್ವೀಕರಿಸಿದ್ದೇವೆ. ಇನ್ನೂ ಹೆಚ್ಚಿನವುಗಳು ಬರುತ್ತಿವೆ. ಈ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. ಇದನ್ನು ಇಂದು ಅಥವಾ ಮರುದಿನ ಚುನಾವಣಾ ಆಯೋಗಕ್ಕೆ ಪ್ರಸ್ತುತಪಡಿಸುತ್ತೇವೆ ಎಂದು ತಿಳಿಸಿದ್ದಾರೆ.

    ಈಗ ಬಹುಮುಖ್ಯ ವಿಷಯವೆಂದರೆ ನಮ್ಮ ಗೆಲುವು ಕಿತ್ತುಕೊಳ್ಳಲಾಗಿದೆ. ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ. ಹರಿಯಾಣದಲ್ಲಿ ಕನಿಷ್ಠ 12-14 ಸ್ಥಾನಗಳಲ್ಲಿ ಅಭ್ಯರ್ಥಿಗಳು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ಇದು ಎಣಿಕೆ ಪ್ರಕ್ರಿಯೆಯ ಸಮಗ್ರತೆ ಮತ್ತು ಇವಿಎಂಗಳ ಕಾರ್ಯನಿರ್ವಹಣೆಯನ್ನು ಪ್ರಶ್ನಿಸುತ್ತದೆ ಎಂದು ಜೈರಾಮ್‌ ರಮೇಶ್‌ ದೂರಿದ್ದಾರೆ. ಇದನ್ನೂ ಓದಿ: Jammu Kashmir Election Results| ಉಗ್ರರಿಂದ ಹತ್ಯೆಯಾಗಿದ್ದ ವ್ಯಕ್ತಿಯ ಮಗಳಿಗೆ ಒಲಿದ ಜಯ

    ಹರಿಯಾಣ ವಿಧಾನಸಭಾ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದ್ದು, ಒಟ್ಟು 90 ಕ್ಷೇತ್ರಗಳ ಪೈಕಿ ಬಿಜೆಪಿ 48 ರಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಆ ಮೂಲಕ ಹ್ಯಾಟ್ರಿಕ್‌ ಜಯದ ಹೊಸ್ತಿಲಲ್ಲಿದೆ. ದಶಕಗಳ ಬಳಿಕ ಗೆಲುವಿನ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್‌ಗೆ ನಿರಾಸೆಯಾಗಿದ್ದು, 37 ರಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಐಎನ್‌ಎಲ್‌ಡಿ 2 ರಲ್ಲಿ ಮುಂದಿದೆ.

  • ಚುನಾವಣಾ ಫಲಿತಾಂಶದಲ್ಲಿ ಹಿನ್ನಡೆ – ಆಯೋಗದ ವೆಬ್‌ಸೈಟ್‌ ದೂರಿದ ಕಾಂಗ್ರೆಸ್‌

    ಚುನಾವಣಾ ಫಲಿತಾಂಶದಲ್ಲಿ ಹಿನ್ನಡೆ – ಆಯೋಗದ ವೆಬ್‌ಸೈಟ್‌ ದೂರಿದ ಕಾಂಗ್ರೆಸ್‌

    – ಹಳೆಯ ಅಂಕಿ ಅಂಶ ವೆಬ್‌ಸೈಟ್‌ನಲ್ಲಿ ಪ್ರಕಟ: ಜೈರಾಮ್‌ ರಮೇಶ್‌

    ನವದೆಹಲಿ: ಹರಿಯಾಣ ಹಾಗೂ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದೆ. ಹರಿಯಾಣದಲ್ಲಿ ಬಿಜೆಪಿ 47 ಸ್ಥಾನಗಳ ಮುನ್ನಡೆಯಲ್ಲಿದ್ದು, ಕಾಂಗ್ರೆಸ್‌ 33 ಸ್ಥಾನಗಳ ಮುನ್ನಡೆಯಲ್ಲಿದೆ. ಈ ನಡುವೆ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್‌ (Jairam Ramesh), ಫಲಿತಾಂಶದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

    ಮಾಧ್ಯಮದೊಂದಿಗೆ ಮಾತನಾಡಿರುವ ಜೈರಾಮ್‌ ರಮೇಶ್‌, ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ಆಕ್ರೋಶ. ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ (EC website) ಲೋಪವಾಗಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ವಕ್ಫ್ ಆಸ್ತಿ ದೇವರ ಆಸ್ತಿ, ಕಬಳಿಕೆ ಆಗಬಾರದು ರಕ್ಷಣೆ ಮಾಡಬೇಕು; ಸಚಿವ ಜಮೀರ್‌ ಕರೆ

    ಈಗಾಗಲೇ 10-11ನೇ ಸುತ್ತಿನ ಫಲಿತಾಂಶಗಳು ಹೊರಬಿದ್ದಿವೆ. ಆದ್ರೆ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಕೇವಲ 4-5 ಸುತ್ತುಗಳ ಫಲಿತಾಂಶ ಮಾತ್ರ ತೋರಿಸಲಾಗುತ್ತಿದೆ. ಲೋಕಸಭೆ ಮಾದರಿಯಲ್ಲಿ ಹಳೆಯ ಮತ್ತಯ ದಾರಿ ತಪ್ಪಿಸುವ ಫಲಿತಾಂಶ ತೋರಿಸಲಾಗುತ್ತಿದೆ. ಇದು ಆಡಳಿತದ ಮೇಲೆ ಒತ್ತಡ ಹೇರುವ ತಂತ್ರವಾಗಿದೆ. ಈ ಬಗ್ಗೆ ಜ್ಞಾಪಕ ಪತ್ರ ಸಲ್ಲಿಸುತ್ತಿದ್ದೇವೆ. ಆಯೋಗಕ್ಕೂ ದೂರು ಸಲ್ಲಿಸುತ್ತೇವೆ, ಚುನಾವಣಾ ಆಯೋಗ ನಮ್ಮ ಪ್ರಶ್ನೆಗಳಿಗೆ ಉತ್ತರಿಸಲಿದೆ ಎಂದು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

    ಅಲ್ಲದೇ ಹಿರಿಯ ನಾಯಕ ಪವನ್‌ ಖೇರಾ ಸಹ ಈ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಚುನಾವಣಾ ಟ್ರೆಂಡ್‌ಗಳನ್ನು ನವೀಕರಿಸುವಲ್ಲಿ ಆಯೋಗ ವಿಳಂಬ ಮಾಡುತ್ತಿದೆ. ಆಡಳಿತದ ಮೇಲೆ ಪ್ರಭಾವ ಬೀರಲು ಹಳೆಯ ಡೇಟಾವನ್ನೇ ಬಳಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಲಂಚದ ಆರೋಪ – ರಾಜ್ಯಾದ್ಯಂತ ವಿವಿಧೆಡೆ RTO ಚೆಕ್‌ಪೋಸ್ಟ್‌ಗಳ ಮೇಲೆ ಲೋಕಾಯುಕ್ತ ದಾಳಿ

    90 ಸದಸ್ಯ ಬಲದ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಬಹುಮತಕ್ಕೆ 46 ಸ್ಥಾನಗಳ ಅಗತ್ಯವಿದೆ.

  • ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ರಾಜೀನಾಮೆ ಕೊಡಬೇಕು: ಜೈರಾಮ್ ರಮೇಶ್ ಆಗ್ರಹ

    ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ರಾಜೀನಾಮೆ ಕೊಡಬೇಕು: ಜೈರಾಮ್ ರಮೇಶ್ ಆಗ್ರಹ

    – ನಕಲಿ ಕಂಪನಿಗಳ ಮೂಲಕವೂ ಬಿಜೆಪಿ ಚುನಾವಣಾ ಬಾಂಡ್ ಪಡೆದಿದೆ

    ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ರಾಜೀನಾಮೆ ಕೊಡಬೇಕು ಎಂದು ಚುನಾವಣಾ ಬಾಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ (Jairam Ramesh) ಆಗ್ರಹಿಸಿದ್ದಾರೆ.

    ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚುನಾವಣಾ ಬಾಂಡ್ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ ಮಾತುಗಳು ಇಂದು ಸತ್ಯವಾಗಿದೆ. ಒಂದು ವ್ಯವಸ್ಥಿತ ರೂಪದಲ್ಲಿ ಚುನಾವಣ ಬಾಂಡ್ ಬಿಜೆಪಿಗೆ ನೀಡಲಾಗಿದೆ. ಇಡಿ ದಾಳಿ ನಡೆಸಿದ ಕೂಡಲೇ ಅಥವಾ ಬಂಧನದ ಬಳಿಕ ಬಾಂಡ್ ಖರೀದಿಸಿದೆ. ಹಲವಾರು ಪ್ರಕರಣಗಳಲ್ಲಿ ಇದೇ ರೀತಿಯಾಗಿದೆ. ಹೈದರಾಬಾದ್ ಮೂಲದ ಗೇಮಿಂಗ್ ಕಂಪನಿ ಜೊತೆಗೂ ಇದೇ ಕಥೆಯಾಗಿದೆ. ಚುನಾವಣಾ ಬಾಂಡ್ ಖರೀದಿಸಿ ಬಿಜೆಪಿಗೆ ನೀಡಿದ ಮೇಲೆ ಇಡಿ ಮೌನವಾಗಿದೆ. ಇನ್ನೊಂದು ಕಂಪನಿ ಬಿಜೆಪಿಗೆ ಬಾಂಡ್ ನೀಡಿ ಕೇಂದ್ರ ಸರ್ಕಾರದಿಂದ ದಕ್ಷಿಣ ಭಾರತದಲ್ಲಿ ಸಾಕಷ್ಟು ಟೆಂಡರ್ ಪಡೆದುಕೊಂಡಿದೆ. 500 ಕೋಟಿಗೂ ಅಧಿಕ ಬಾಂಡ್‌ಗಳನ್ನು ಒಂದೊಂದು ಕಂಪನಿ ಖರೀದಿಸಿದೆ. ಈಗ ಬೆಂಗಳೂರಿನಲ್ಲಿ ಇದರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಎಫ್‌ಐಆರ್ ಸುಮ್ಮನೆ ಆಗಿಲ್ಲ, ಪ್ರಾಥಮಿಕ ತನಿಖೆ ಬಳಿಕ ನ್ಯಾಯಾಲಯ ಎಫ್‌ಐಆರ್ ದಾಖಲಿಸಲು ಸೂಚಿಸಿದೆ. ಹಣಕಾಸು ಸಚಿವರು ಮೊದಲ ಆರೋಪಿ, ಇಡಿ ಎರಡನೇ ಆರೋಪಿ, ರಾಜ್ಯ ಬಿಜೆಪಿ ನಾಯಕರು ಮೂರನೇ ಆರೋಪಿಯಾಗಿದ್ದಾರೆ. 8,000 ಕೋಟಿ ಬಾಂಡ್ ರೂಪದಲ್ಲಿ ಪಡೆಯಲಾಗಿದೆ. ಕಾರ್ಪೊರೇಟ್ ಕಂಪನಿಗಳ ಮೂಲಕ ಹಣ ಪಡೆಯಲಾಗಿದೆ ಎಂದು ಆರೋಪಿಸಿದರು.‌ ಇದನ್ನೂ ಓದಿ: ಕಾಂಗ್ರೆಸ್‌ಗೆ ಚುನಾವಣಾ ಬಾಂಡ್ ಸಿಕ್ಕಿಲ್ವಾ? ಮೊದಲು ಸೂಟ್‌ಕೇಸ್, ಮೂಟೆಯಲ್ಲಿ ಕದ್ದು ತೆಗೆದುಕೊಳ್ತಿದ್ರು: ಸಿ.ಟಿ.ರವಿ

    ಹಣಕಾಸು ಸಚಿವರು ಒಬ್ಬರೇ ಮಾಡಲು ಅವರಿಗೆ ಧೈರ್ಯ ಇಲ್ಲ. ಇದು ಯಾರ ಆದೇಶ, ಯಾರ ನಿರ್ದೇಶನದ ಮೇಲೆ ಆಗಿದೆ ಎಂದು ಎಲ್ಲರಿಗೂ ಗೊತ್ತಿದೆ. ಆರ್‌ಬಿಐ ಇದಕ್ಕೆ ಸಂಬಂಧಿಸಿದಂತೆ ಪತ್ರ ಬರೆದರೆ ಸರ್ಕಾರ ಅದನ್ನು ಕಸದ ಬುಟ್ಟಿಗೆ ಎಸೆಯಿತು. ಇದು ನಿಷ್ಪಕ್ಷಪಾತ ಚುನಾವಣೆ ಮೇಲೆ ಪರಿಣಾಮ ಬೀರಿದೆ. ಚುನಾವಣಾ ಮೂಲ ಉದ್ದೇಶದ ಮೇಲೆ ಪ್ರಹಾರ ಮಾಡುತ್ತದೆ. ಹೆಚ್ಚು ಹಣವಿರುವ ಪಕ್ಷ ಬಾಂಡ್ ಹಣವನ್ನು ಬಳಸಿಕೊಂಡು ಚುನಾವಣೆ ಗೆಲ್ಲುತ್ತದೆ. ತಿನ್ನುತ್ತೇನೆ, ಕದಿಯುತ್ತೇನೆ ಮತ್ತು ಹಣಕ್ಕಾಗಿ ಪೀಡಿಸುತ್ತೇನೆ ಎಂದು ಸ್ಲೋಗನ್ ಬದಲಿಸಬಹುದು. ಇಷ್ಟೆಲ್ಲ ಆದ್ಮೇಲೆ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಈ ಬ್ಲ್ಯಾಕ್‌ಮೇಲರ್ ಹೇಗೆ ಲೂಟಿ ಮಾಡಿದ್ದಾನೆ ಅಂತಾ ಹೇಳಿದ್ದೀನಿ: ಎಡಿಜಿಪಿ ಚಂದ್ರಶೇಖರ್ ವಿರುದ್ಧ ಹೆಚ್‌ಡಿಕೆ ಕಿಡಿ

    ಚೆಂದ ಕೊಡಿ ದಂಧೆ ತಗೊಳ್ಳಿ. ಟೆಂಡರ್ ತಗೊಳ್ಳಿ ಚೆಂದ ಕೊಡಿ. ಈ ಎರಡು ಮಾರ್ಗಗಳ ಮೂಲಕ ಬಿಜೆಪಿ ಹಣ ಪಡೆದಿದೆ. ಇದನ್ನು ನಾವು ಲಂಚ ಎನ್ನಬಹುದು. ಎಫ್‌ಐಆರ್ ಮೇಲೆ ಇನ್ನೊಂದು ಮಾರ್ಗ ಉಲ್ಲೇಖಿಸಬಹುದು. ಪೋಸ್ಟ್ ರೇಡ್, ಹಫ್ತಾ ವಸೂಲಿ ಅಂತಾ ಕರೆಯಬಹುದು. ಬಹಳಷ್ಟು ಕಂಪನಿಗಳ ಮೇಲೆ ಇಡಿ ರೇಡ್ ಆದ್ಮೇಲೆ ಬಾಂಡ್ ಖರೀದಿಸಿವೆ. ನಕಲಿ ಕಂಪನಿಗಳ ಮೂಲಕವೂ ಬಿಜೆಪಿ ಚುನಾವಣಾ ಬಾಂಡ್ ಪಡೆದಿದೆ. ಬಿಜೆಪಿ ಐದೂವರೆ ವರ್ಷದಲ್ಲಿ 6,000 ಕೋಟಿಗೂ ಅಧಿಕ ಹಣ ಸಂಗ್ರಹಿಸಿದೆ. ಧಮ್ಕಿ ಹಾಕಿ ಬಾಂಡ್ ಖರೀದಿಸುವಂತೆ ಮಾಡಲಾಗಿದೆ. ಇದರ ಬಗ್ಗೆ ಎಸ್‌ಐಟಿ ತನಿಖೆ ಆಗಲೇಬೇಕಿದೆ. ಜೆಪಿಸಿ ತನಿಖೆಗೆ ನಾವು ಒತ್ತಾಯ ಮಾಡಿದ್ದೆವು. ನಾವು ಹೇಳಿದಂತೆ ಬೆಂಗಳೂರಿನಲ್ಲಿ ಎಫ್‌ಐಆರ್ ಆಗಿಲ್ಲ. ಕೋರ್ಟ್ ನಿರ್ದೇಶನದಂತೆ ಎಫ್‌ಐಆರ್ ಆಗಿದೆ. ಕೇಂದ್ರ ಹಣಕಾಸು ಸಚಿವೆ ರಾಜೀನಾಮೆ ನೀಡಬೇಕು. ಹಣಕಾಸು ಸಚಿವೆಯ ರಾಜೀನಾಮೆ ಅನಿವಾರ್ಯವಾಗಿದೆ ಎಂದು ತಿಳಿಸಿದರು.