Tag: Jairam Ramesh

  • ಪಿತ್ರೋಡಾ ಹೇಳಿಕೆ ಪಕ್ಷದ ಹೇಳಿಕೆಯಲ್ಲ- ಅಂತರ ಕಾಯ್ದುಕೊಂಡ ಕಾಂಗ್ರೆಸ್‌

    ಪಿತ್ರೋಡಾ ಹೇಳಿಕೆ ಪಕ್ಷದ ಹೇಳಿಕೆಯಲ್ಲ- ಅಂತರ ಕಾಯ್ದುಕೊಂಡ ಕಾಂಗ್ರೆಸ್‌

    ನವದೆಹಲಿ: ಭಾರತೀಯ ಸಾಗರೋತ್ತರ ಕಾಂಗ್ರೆಸ್ (Congress) ಅಧ್ಯಕ್ಷ ಸ್ಯಾಮ್‌ ಪಿತ್ರೋಡಾ (Sam Pitroda) ಹೇಳಿಕೆಯಿಂದ ಕಾಂಗ್ರೆಸ್‌ (Congress) ಅಂತರವನ್ನು ಕಾಯ್ದುಕೊಂಡಿದೆ. ಅವರ ವೈಯಕ್ತಿ ಅಭಿಪ್ರಾಯವೇ ಹೊರತು ಕಾಂಗ್ರೆಸ್‌ ಅಭಿಪ್ರಾಯವಲ್ಲ ಎಂದು ವಕ್ತಾರ ಜೈರಾಂ ರಮೇಶ್‌ (Jairam Ramesh) ಸ್ಪಷ್ಟಪಡಿಸಿದ್ದಾರೆ.

    ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಅವರು ಪಿತ್ರೋಡಾ ಮುಕ್ತವಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಾರೆ. ಪ್ರಜಾಪ್ರಭುತ್ವದಲ್ಲಿ ಒಬ್ಬ ವ್ಯಕ್ತಿಗೆ ತನ್ನ ವೈಯಕ್ತಿಕ ಅಭಿಪ್ರಾಯಗಳನ್ನು ಚರ್ಚಿಸಲು, ವ್ಯಕ್ತಪಡಿಸಲು ಮತ್ತು ಚರ್ಚಿಸಲು ಸ್ವಾತಂತ್ರ್ಯವಿದೆ. ಆದರೆ ಅದರ ಅರ್ಥ ಅವರ ಅಭಿಪ್ರಾಯಗಳು ಯಾವಾಗಲೂ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಹೇಳಿಕೆಯನ್ನು ಪ್ರತಿಬಿಂಬಿಸುತ್ತದೆ ಎಂದರ್ಥವಲ್ಲ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಮಸ್ಕ್‌ಗೆ ಭಾರತದ ಮಾರುಕಟ್ಟೆ ಮೇಲೇಕೆ ಕಣ್ಣು? 

    ಪ್ರಧಾನಿ ನರೇಂದ್ರ ಮೋದಿ ಅವರ ದುರುದ್ದೇಶಪೂರಿತ ಮತ್ತು ಕಿಡಿಗೇಡಿತನದ ಚುನಾವಣಾ ಪ್ರಚಾರವನ್ನು ತಿರುಗಿಸಲು ಪಿತ್ರೋಡಾ ಅವರ ಹೇಳಿಕೆಯನ್ನು ತಿರುಚಲಾಗುತ್ತಿದೆ ಎಂದು ಹೇಳಿದ್ದಾರೆ.

    ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು?
    ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್‌ ಪಿತ್ರೋಡಾ ಅವರು ಅವರು ಅಮೆರಿಕದ ಉತ್ತರಾಧಿಕಾರ ತೆರಿಗೆ (Inheritance Tax) ಬಗ್ಗೆ ಪ್ರಸ್ತಾಪಿಸಿ ಸಂಪತ್ತಿನ ಮರು ಹಂಚಿಕೆಯನ್ನು ಸಮರ್ಥಿಸಿಕೊಂಡಿದ್ದರು. ಅಮೇರಿಕಾದ ಸಂಯುಕ್ತ ಸಂಸ್ಥಾನದಲ್ಲಿ ಪಿತ್ರಾರ್ಜಿತ ತೆರಿಗೆ ಇದೆ. ವ್ಯಕ್ತಿಯ ಸಂಪತ್ತಿನ ಮೇಲೆ 55% ತೆರಿಗೆ ಹಾಕಲಾಗುತ್ತದೆ. ವ್ಯಕ್ತಿಯ ಮಕ್ಕಳು, ಕುಟುಂಬಕ್ಕೆ ಕೇವಲ 45 ಪ್ರತಿಶತ ಪಾಲನ್ನು ವರ್ಗಾಯಿಸಬಹುದು.

     

  • ಚುನಾವಣೆಗೂ ಮುನ್ನವೇ ಖಾತೆ ತೆರೆದ ಬಿಜೆಪಿ – ʻಮ್ಯಾಚ್‌ ಫಿಕ್ಸಿಂಗ್‌ʼ ಎಂದ ಕಾಂಗ್ರೆಸ್‌

    ಚುನಾವಣೆಗೂ ಮುನ್ನವೇ ಖಾತೆ ತೆರೆದ ಬಿಜೆಪಿ – ʻಮ್ಯಾಚ್‌ ಫಿಕ್ಸಿಂಗ್‌ʼ ಎಂದ ಕಾಂಗ್ರೆಸ್‌

    – ಸರ್ವಾಧಿಕಾರಿಯ ಮತ್ತೊಂದು ಮುಖ ಎಂದ ರಾಗಾ

    ಗಾಂಧಿನಗರ (ಸೂರತ್‌): 2024ರ ಲೋಕಸಭಾ ಚುನಾವಣೆ ಮುಗಿಯುವ ಮುನ್ನವೇ ಸೂರತ್‌ನಲ್ಲಿ (Surat Lok Sabha Seat) ಬಿಜೆಪಿ ಮೊದಲ ಗೆಲುವಿನ ಖಾತೆ ತೆರಿದಿದೆ. ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಫಲಿತಾಂಶ ಹೊರಬೀಳುತ್ತಿದ್ದಂತೆ ಕಾಂಗ್ರೆಸ್‌ ನಾಯಕರು ಬಿಜೆಪಿ ವಿರುದ್ಧ ಮ್ಯಾಚ್‌‌ ಫಿಕ್ಸಿಂಗ್‌ ಎಂದು ವಾಗ್ದಾಳಿ ನಡೆಸಿದ್ದಾರೆ.

    ಬಿಜೆಪಿ ಬಗ್ಗೆ ಜನರಿಗೆ ಕೋಪವೂ ಇದೆ, ಭಯವೂ ಇದೆ. ಹಾಗಾಗಿ ಈಗಿನಿಂದಲೇ ಬಿಜೆಪಿ ಮ್ಯಾಚ್‌ ಫಿಕ್ಸಿಂಗ್‌ ಮಾಡಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಜೈರಾಮ್ ರಮೇಶ್ (Jairam Ramesh) ಆರೋಪಿಸಿದ್ದಾರೆ.

    ಮೋದಿ ಅವರ ಅನ್ಯಾಯ ಕಾಲದಲ್ಲಿ ಎಂಎಸ್‌ಎಂಇ ಮಾಲೀಕರು ಮತ್ತು ಉದ್ಯಮಿಗಳು ಎದುರಿಸುತ್ತಿರುವ ಸಂಕಷ್ಟ ಮತ್ತು ಅವರ ಆಕ್ರೋಶ ಬಿಜೆಪಿಯನ್ನು ಯಾವ ಹಂತಕ್ಕೆ ಕೊಂಡೊಯ್ದಿದೆ ಎಂದರೆ, ಅವರು 1984ರಿಂದ ಲೋಕಸಭೆ ಚುನಾವಣೆಯಲ್ಲಿ ಸತತವಾಗಿ ಗೆಲ್ಲುತ್ತಾ ಬಂದಿರುವ ಸೂರತ್ ಕ್ಷೇತ್ರದಲ್ಲಿ ʻಮ್ಯಾಚ್-ಫಿಕ್ಸ್ʼ ಮಾಡಲು ಪ್ರಯತ್ನಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

    ಸರ್ವಾಧಿಕಾರಿಯ ಮತ್ತೊಂದು ಮುಖ:
    ಇನ್ನೂ ಈ ಬಗ್ಗೆ ಅಕ್ಷೇಪ ವ್ಯಕ್ತಪಡಿಸಿದ ರಾಹುಲ್‌ ಗಾಂಧಿ (Rahul Gandhi), ಸರ್ವಾಧಿಕಾರಿಯ ನಿಜವಾದ ಮುಖ ಮತ್ತೊಮ್ಮೆ ದೇಶದ ಮುಂದಿದೆ. ಜನರ ನಾಯಕನನ್ನು ಆಯ್ಕೆ ಮಾಡುವ ಹಕ್ಕನ್ನು ಕಸಿದುಕೊಳ್ಳುವುದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನವನ್ನು ನಾಶಪಡಿಸುವ ಮತ್ತೊಂದು ಹೆಜ್ಜೆ ಎಂದು ದೂರಿದ್ದಾರೆ.

    ಸೂರತ್‌ ಅಭ್ಯರ್ಥಿ ಅವಿರೋಧ ಆಯ್ಕೆಯಾಗಿದ್ದೇಗೆ?
    2024ರ ಲೋಕಸಭಾ ಚುನಾವಣೆಯಲ್ಲಿ ಸೂರತ್‌ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ನೀಲೇಶ್‌ ಕುಂಭಾಣಿ ಅವರ ನಾಮಪತ್ರ ತಿರಸ್ಕೃತಗೊಂಡಿತ್ತು. ಅಲ್ಲದೇ ನಾಮಪತ್ರ ಸಲ್ಲಿಸಿದ್ದ ಉಳಿದ 8 ಮಂದಿ ಸ್ವತಂತ್ರ ಅಭ್ಯರ್ಥಿಗಳೂ ಹಿಂದೆ ಸರಿದಿದ್ದರು. ಹೀಗಾಗಿ ಮತದಾನ ನಡೆಯದೇ ಗೆಲುವು ಬಿಜೆಪಿ ಪಾಲಾಯಿತು. ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವರು ಅವಿರೋಧವಾಗಿ ಆಯ್ಕೆಯಾದರು.

    ಕಾಂಗ್ರೆಸ್‌ ಅಭ್ಯರ್ಥಿಯ ನಾಮಪತ್ರ ತಿರಸ್ಕೃತವಾಗಿದ್ದು ಯಾಕೆ?
    ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರು ನಾಮಪತ್ರ ಸಲ್ಲಿಸಿದ್ದರು. ಆದರೆ ನಾಮಪತ್ರದಲ್ಲಿನ ಸಹಿಗಳು ತಮ್ಮದಲ್ಲ ಎಂದು ಮೂವರು ಸೂಚಕರು ವಕೀಲರ ಮೂಲಕ ಚುನಾವಣಾಧಿಕಾರಿಗೆ ಪ್ರಮಾಣ ಪತ್ರ ಸಲ್ಲಿಸಿದ್ದರು. ಈ ಮನವಿಯನ್ನು ಪುರಸ್ಕರಿಸಿದ್ದ ಚುನಾವಣಾಧಿಕಾರಿಗಳು ಸಹಿಯನ್ನು ಪರಿಶೀಲಿಸಿದ್ದರು. ಪರಿಶೀಲಿಸಿದ ಬಳಿಕ ನಾಮಪತ್ರಗಳಲ್ಲಿನ ಸೂಚಕರ ಸಹಿಯಲ್ಲಿ ವ್ಯತ್ಯಾಸಗಳಿದ್ದವು ಮತ್ತು ಅವು ನಿಜವಲ್ಲ ಎಂದು ತಿಳಿದುಬಂದಿದ್ದರಿಂದ ನಾಮಪತ್ರಗಳನ್ನು ತಿರಸ್ಕರಿಸಲಾಗಿದೆ ಎಂದು ಚುನಾವಣಾಧಿಕಾರಿ ಸೌರಭ್ ಪರ್ಧಿ ತಿಳಿಸಿದರು. ತನ್ನ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕೋರ್ಟ್ ಮೊರೆ ಹೋಗುವುದಾಗಿ ತಿಳಿಸಿದೆ.

  • `ಕೈ’ಗೆ ಶಾಕ್‌ ಮೇಲೆ ಶಾಕ್‌; 1,800 ಕೋಟಿ ರೂ. ಡಿಮ್ಯಾಂಡ್‌ ನೋಟಿಸ್‌ ಬೆನ್ನಲ್ಲೇ ಐಟಿಯಿಂದ ಮತ್ತೆರಡು ನೋಟಿಸ್!

    `ಕೈ’ಗೆ ಶಾಕ್‌ ಮೇಲೆ ಶಾಕ್‌; 1,800 ಕೋಟಿ ರೂ. ಡಿಮ್ಯಾಂಡ್‌ ನೋಟಿಸ್‌ ಬೆನ್ನಲ್ಲೇ ಐಟಿಯಿಂದ ಮತ್ತೆರಡು ನೋಟಿಸ್!

    ನವದೆಹಲಿ: 1,800 ಕೋಟಿ ರೂಪಾಯಿಗೂ ಹೆಚ್ಚು ತೆರಿಗೆ ನೋಟಿಸ್ ಸ್ವೀಕರಿಸಿದ ಒಂದು ದಿನದ ನಂತರ ಶುಕ್ರವಾರ ರಾತ್ರಿ ಆದಾಯ ತೆರಿಗೆ ಇಲಾಖೆಯಿಂದ (Income Tax Department) ಮತ್ತೆ ಎರಡು ನೋಟಿಸ್‌ಗಳು ಬಂದಿವೆ ಎಂದು ರಾಷ್ಟ್ರೀಯ ಕಾಂಗ್ರೆಸ್ (AICC) ಶನಿವಾರ ಹೇಳಿದೆ.

    ಈ ಸಂಬಂಧ ಶನಿವಾರ (ಇಂದು) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ (Jairam Ramesh), ಶುಕ್ರವಾರ ರಾತ್ರಿ ನಮಗೆ ಮತ್ತೆರಡು ನೋಟಿಸ್ ಕಳುಹಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ನಮ್ಮ ಕುಟುಂಬ ಮೊಸಳೆ ಕಣ್ಣೀರು ಹಾಕಲ್ಲ: ನಿಖಿಲ್ ಕುಮಾರಸ್ವಾಮಿ

    ಕಾಂಗ್ರೆಸ್ ಪಕ್ಷವು ʻತೆರಿಗೆ ಭಯೋತ್ಪಾದನೆʼಗೆ ಗುರಿಯಾಗಿದೆ ಎಂದು ರಮೇಶ್ ಪುನರುಚ್ಚರಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧ ಪಕ್ಷಗಳನ್ನು ನಿಷ್ಕ್ರಿಯಗೊಳಿಸಲು ಬಯಸುತ್ತಿದ್ದಾರೆ ಎಂದು ಆರೋಪಿಸಿದರು. ಈ‌ ನಡುವೆ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಆದಾಯ ತೆರಿಗೆ ಇಲಾಖೆಯಿಂದ ನೋಟಿಸ್ ಪಡೆದಿದ್ದಾರೆ ಎಂದು ಹೇಳಿದರು.

    ಆದಾಯ ತೆರಿಗೆ ಇಲಾಖೆಯಿಂದ ನಿನ್ನೆ (ಶುಕ್ರವಾರ) ರಾತ್ರಿ ನನಗೆ ನೋಟಿಸ್ ಬಂದಿದೆ. ನಾನು ಆಘಾತಕ್ಕೊಳಗಾಗಿದ್ದೇನೆ, ವಿಷಯ ಈಗಾಗಲೇ ಮುಚ್ಚಿಹೋಗಿದೆ. ಬಿಜೆಪಿ ಕಾಂಗ್ರೆಸ್ ಮತ್ತು I.N.D.I.A ಒಕ್ಕೂಟಕ್ಕೆ ಹೆದರುತ್ತಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ಗೆ ಮತ್ತೊಂದು ಶಾಕ್‌ – ‘ಕೈ’ ನಾಯಕನ ಸೊಸೆ ಬಿಜೆಪಿ ಸೇರ್ಪಡೆ

    ಕಳೆದ ಗುರುವಾರ ದೆಹಲಿ ಹೈಕೋರ್ಟ್ ತನ್ನ ವಿರುದ್ಧ ತೆರಿಗೆ ಅಧಿಕಾರಿಗಳು 4 ವರ್ಷಗಳ ಅವಧಿಗೆ ತೆರಿಗೆ ಮರುಮೌಲ್ಯಮಾಪನ ಪ್ರಕ್ರಿಯೆಗಳನ್ನು ಪ್ರಾರಂಭಿಸುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಸಲ್ಲಿಸಿದ ಅರ್ಜಿಗಳನ್ನು ತಿರಸ್ಕರಿಸಿತ್ತು. ನ್ಯಾ. ಯಶವಂತ್ ವರ್ಮಾ ಮತ್ತು ಪುರುಷೇಂದ್ರ ಕುಮಾರ್ ಕೌರವ್ ಅವರ ಪೀಠವು ಮರುಮೌಲ್ಯಮಾಪನವನ್ನು ಇನ್ನೊಂದು ವರ್ಷದವರೆಗೆ ತೆರೆಯಲು ಮಧ್ಯಪ್ರವೇಶಿಸಲು ನಿರಾಕರಿಸಿತ್ತು.

  • 3 ದಿನದ ಒಳಗಡೆ ಜನತೆ ಮುಂದೆ ಕ್ಷಮೆ ಕೇಳಿ – ಖರ್ಗೆಗೆ ಗಡ್ಕರಿ ಲೀಗಲ್‌ ನೋಟಿಸ್‌

    3 ದಿನದ ಒಳಗಡೆ ಜನತೆ ಮುಂದೆ ಕ್ಷಮೆ ಕೇಳಿ – ಖರ್ಗೆಗೆ ಗಡ್ಕರಿ ಲೀಗಲ್‌ ನೋಟಿಸ್‌

    ನವದೆಹಲಿ: ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ (Nitin Gadkari) ಅವರು ತನ್ನ ಹೇಳಿಕೆಯನ್ನು ತಿರುಚಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪ್ರಕಟಿಸಿದ್ದಕ್ಕೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ (Jairam Ramesh) ಅವರಿಗೆ ಲೀಗಲ್ ನೋಟಿಸ್ ಕಳುಹಿಸಿ ಮೂರು ದಿನಗಳ ಒಳಗಡೆ ಜನತೆ ಮುಂದೆ ಕ್ಷಮೆ ಕೇಳುವಂತೆ ಡೆಡ್‌ಲೈನ್‌ ನೀಡಿದ್ದಾರೆ.

    ಮಲ್ಲಿಕಾರ್ಜುನ ಖರ್ಗೆ ಮತ್ತು ಜೈರಾಮ್ ರಮೇಶ್ ಅವರು ತಮ್ಮ ಸಂದರ್ಶನದ ತಿರುಚಿದ ವಿಡಿಯೋ ಅಪ್ಲೋಡ್‌ ಮಾಡಿ ಉದ್ದೇಶಪೂರ್ವಕವಾಗಿ ನನಗೆ ಮತ್ತು ಬಿಜೆಪಿಯ ಇಮೇಜ್‌ಗೆ ಅಪಖ್ಯಾತಿ ತಂದಿದಿದ್ದಾರೆ ಎಂದು ಗಡ್ಕರಿ ದೂರಿದ್ದಾರೆ.

    ಲೀಗಲ್ ನೋಟಿಸ್ ಸ್ವೀಕರಿಸಿದ 24 ಗಂಟೆಗಳ ಒಳಗೆ ಪೋಸ್ಟ್ ಅನ್ನು ಅಳಿಸುವಂತೆ ಮತ್ತು ಮೂರು ದಿನಗಳಲ್ಲಿ ಲಿಖಿತವಾಗಿ ಕ್ಷಮೆಯಾಚಿಸಬೇಕು ಎಂದು ಸೂಚಿಸಿದ್ದಾರೆ. ಡಿಲೀಟ್‌ ಮಾಡದೇ ಕ್ಷಮೆ ಕೇಳದೇ ಇದ್ದರೆ ಇಬ್ಬರ ವಿರುದ್ಧವೂ ಸಿವಿಲ್ ಮತ್ತು ಕ್ರಿಮಿನಲ್ ಮಾನನಷ್ಟ ಕೇಸ್‌ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.  ಇದನ್ನೂ ಓದಿ: ಪೊಲೀಸರಿಗೆ ಯಾಮಾರಿಸಲು ಶರ್ಟ್, ಪ್ಯಾಂಟ್ ಬದಲಿಸಿ ಹೋದ ಶಂಕಿತ

    ಸುದ್ದಿ ಪೋರ್ಟಲ್‌ಗೆ ನೀಡಿದ ಸಂದರ್ಶನದಲ್ಲಿ ಗಡ್ಕರಿ ಅವರು ಗ್ರಾಮೀಣ ಭಾಗದ ಸಮಸ್ಯೆಗಳ ಬಗ್ಗೆ ಅದನ್ನು ಪರಿಹಾರ ಮಾಡುವ ಬಗ್ಗೆ ಮಾತನಾಡಿದ್ದರು. ಇಂದು ಹಳ್ಳಿಗಳಲ್ಲಿ ಕೂಲಿಕಾರ್ಮಿಕರು, ರೈತರು ದುಃಖಿತರಾಗಿದ್ದಾರೆ. ಹಳ್ಳಿಗಳಲ್ಲಿ ಉತ್ತಮ ರಸ್ತೆಗಳಿಲ್ಲ. ಶುದ್ಧ ಕುಡಿಯುವ ನೀರಿಲ್ಲ. ಉತ್ತಮ ಆಸ್ಪತ್ರೆಯಿಲ್ಲ ಎಂದು ಗಡ್ಕರಿ ಹೇಳಿದ್ದರು.

    ಈ ವಿಡಿಯೋವನ್ನು ಮಲ್ಲಿಕಾರ್ಜುನ ಖರ್ಗೆ ಮತ್ತು ಜೈರಾಂ ರಮೇಶ್‌ ಅಪ್ಲೋಡ್‌ ಮಾಡಿದ್ದರು. ಹಳ್ಳಿಗಳು, ಕಾರ್ಮಿಕರು ಮತ್ತು ರೈತರು ಇಂದು ಅತೃಪ್ತರಾಗಿದ್ದಾರೆ. ಹಳ್ಳಿಗಳಲ್ಲಿ ಸಮರ್ಪಕ ರಸ್ತೆಗಳು, ಶಾಲೆಗಳಿಲ್ಲ ನಿತಿನ್ ಗಡ್ಕರಿ, ನರೇಂದ್ರ ಮೋದಿ ಸರ್ಕಾರದ ಸಚಿವ ಎಂದು ವಿಡಿಯೋಗೆ ಕ್ಯಾಪ್ಶನ್‌ ನೀಡಲಾಗಿತ್ತು.

    ನಮ್ಮ ಸರ್ಕಾರ ಬಡವರು, ರೈತರು ಮತ್ತು ಹಳ್ಳಿಗಳಿಗಳ ಅಭಿವೃದ್ಧಿಗೆ ನಡೆಸಿದ ಪ್ರಯತ್ನಗಳು ಉತ್ತಮ ಫಲಿತಾಂಶವನ್ನು ನೀಡಿದೆ ಎಂದು ಗಡ್ಕರಿ ಲೀಗಲ್‌ ನೋಟಿಸ್‌ನಲ್ಲಿ ತಿಳಿಸಿದ್ದಾರೆ.

  • ಜ.22 ರಂದು ಅಯೋಧ್ಯೆಗೆ ಸೋನಿಯಾ ಗಾಂಧಿ ಹೋಗ್ತಾರಾ? – ಉತ್ತರ ನೀಡಿದ ಜೈರಾಂ ರಮೇಶ್‌

    ಜ.22 ರಂದು ಅಯೋಧ್ಯೆಗೆ ಸೋನಿಯಾ ಗಾಂಧಿ ಹೋಗ್ತಾರಾ? – ಉತ್ತರ ನೀಡಿದ ಜೈರಾಂ ರಮೇಶ್‌

    ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ (Sonia Gandhi) ಅಯೋಧ್ಯೆ ರಾಮ ಮಂದಿರ (Ayodhya Ram Mandir) ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೋ ಇಲ್ಲವೋ ಎನ್ನುವುದನ್ನು ಸರಿಯಾದ ಸಮಯದಲ್ಲಿ ಬಹಿರಂಗಪಡಿಸಲಾಗುತ್ತದೆ ಎಂದು ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್‌ (Jairam Ramesh) ಹೇಳಿದ್ದಾರೆ.

    ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರದ ಶಂಕುಸ್ಥಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಮತ್ತು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಆಹ್ವಾನ ಬಂದಿದೆ ಎಂದು ಅವರು ತಿಳಿಸಿದರು.  ಇದನ್ನೂ ಓದಿ: ಆ ’84 ಸೆಕೆಂಡ್‌’ ನಡುವೆಯೇ ಶ್ರೀರಾಮನ ಪ್ರಾಣಪ್ರತಿಷ್ಠಾಪನೆ ಯಾಕೆ?

    ಗುರುವಾರ, ತಿರುವನಂತಪುರಂನ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಅಯೋಧ್ಯೆಯಲ್ಲಿ ಭಗವಾನ್ ರಾಮನ ಪ್ರತಿಷ್ಠಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳುವುದು ವೈಯಕ್ತಿಕ ಆಯ್ಕೆಯಾಗಿದೆ ಎಂದು ಹೇಳಿದ್ದರು.

    ಅಯೋಧ್ಯೆಯಲ್ಲಿ ಜನವರಿ 16 ರಿಂದ ಧಾರ್ಮಿಕ ಕಾರ್ಯಗಳು ಆರಂಭವಾಗಲಿದ್ದು ಜ.22 ರಂದು ರಾಮನ ಪ್ರಾಣಪ್ರತಿಷ್ಠೆ ನಡೆಯಲಿದೆ. ರಾಮ ಮಂದಿರ ಟ್ರಸ್ಟ್‌ ಅಥವಾ ಸರ್ಕಾರ ಯಾರಿಗೆ ಅಧಿಕೃತ ಆಹ್ವಾನ ನೀಡಿದೆಯೋ ಅವರಿಗೆ ಮಾತ್ರ ಜ.22ರಂದು ಅಯೋಧ್ಯೆಗೆ ಅನುಮತಿ ನೀಡಲಾಗುತ್ತದೆ. ಇದನ್ನೂ ಓದಿ: ರಾಮ ವಿಗ್ರಹ ಇಂದು ಆಯ್ಕೆ: ಕರ್ನಾಟಕದ ಕಲಾವಿದರ ಕೈಚಳಕ ಗೆಲ್ಲುತ್ತಾ ಮನ..?

    ಪ್ರಧಾನಿ ನರೇಂದ್ರ ಮೋದಿ (PM Narendra Modi), ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್‌ ಸೇರಿದಂತೆ ಒಟ್ಟು 6 ಸಾವಿರ ಗಣ್ಯರು ಪ್ರಾಣಪ್ರತಿಷ್ಠೆ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.

     

  • Breaking – ಕೆಜಿಎಫ್ ಹಾಡು ದುರ್ಬಳಕೆ : ರಾಹುಲ್ ಗಾಂಧಿ ಮತ್ತೆ ಸಂಕಷ್ಟ

    Breaking – ಕೆಜಿಎಫ್ ಹಾಡು ದುರ್ಬಳಕೆ : ರಾಹುಲ್ ಗಾಂಧಿ ಮತ್ತೆ ಸಂಕಷ್ಟ

    ಭಾರತ್‌ ಜೋಡೋ ಸಮಯದಲ್ಲಿ ತನ್ನ ಪ್ರಚಾರಕ್ಕೆ ಕೆಜಿಎಫ್‌ ಹಾಡನ್ನು ಬಳಿಸಿದ್ದ ರಾಹುಲ್‌ ಗಾಂಧಿ ಮತ್ತು ಕಾಂಗ್ರೆಸ್‌ ನಾಯಕರಿಗೆ ಸಂಕಷ್ಟ ಎದುರಾಗಿದೆ.

    ಕಾಂಗ್ರೆಸ್ ಮುಖಂಡರು ಪ್ರಕರಣವನ್ನು ರದ್ದು ಮಾಡಬೇಕು ಎಂದು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್  ನ್ಯಾ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಪ್ರಕರಣವನ್ನು ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ಆದೇಶ ನೀಡಿದೆ.

    ಜೂನ್‌ 23 ರಂದು ಎರಡು ಕಡೆಯ ವಾದ, ಪ್ರತಿವಾದ ಆಲಿಸಿದ್ದ ಕೋರ್ಟ್‌ ಇಂದಿಗೆ ತೀರ್ಪು ಕಾಯ್ದಿರಿಸಿತ್ತು. ಇದನ್ನೂ ಓದಿ:ಹೊಸ ಸಿನಿಮಾ ಮುನ್ನ ಫ್ಯಾಮಿಲಿ ಜೊತೆ ರಾಜಮೌಳಿ ಟ್ರಿಪ್

    ಏನಿದು ಪ್ರಕರಣ?

    ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು, ಸಂಸ್ಥೆಯ ಅನುಮತಿ ಇಲ್ಲದೇ ಹಾಡುಗಳನ್ನು ಯಾತ್ರೆಯಲ್ಲಿ ಬಳಸಿದ್ದಾರೆ. ಕೆಜಿಎಫ್ ಸಿನಿಮಾದ ‘ಸುಲ್ತಾನಾ..’ ಹಾಡನ್ನು ಯಾತ್ರೆಯಲ್ಲಿ ಬಳಸಿದ್ದಕ್ಕಾಗಿ ಕೆಜಿಎಫ್ ಚಿತ್ರದ ಹಾಡುಗಳ ಪ್ರಸಾರ ಹಕ್ಕು ಹೊಂದಿದ್ದ MRT ಸಂಸ್ಥೆಯು ರಾಹುಲ್ ಗಾಂಧಿ (Rahul Gandhi) , ಸೋಷಿಯಲ್ ಮೀಡಿಯಾ ಮುಖ್ಯಸ್ಥೆ ಸುಪ್ರಿಯಾ (Supriya) ಹಾಗೂ ಭಾರತ್ ಜೋಡೋ ಯಾತ್ರೆಯ ಉಸ್ತುವಾರಿ ವಹಿಸಿಕೊಂಡಿರುವ ಜೈರಾಂ ರಮೇಶ್ (Jairam Ramesh) ವಿರುದ್ಧ ದೂರು ದಾಖಲಿಸಿತ್ತು. ನ್ಯಾಯಾಲಯದ ನಿರ್ದೇಶನದ ಮೇರೆಗೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ (FIR) ದಾಖಲಾಗಿತ್ತು.

    ಕೆಜಿಎಫ್‌ ಹಾಡನ್ನು ಕಾಗ್ರೆಸ್ ಪಕ್ಷದ ಅಧಿಕೃತ ಸೋಷಿಯಲ್ ಮೀಡಿಯಾ ಖಾತೆಗಳಾದ ಟ್ಟಿಟ್ಟರ್‌, ಯೂಟ್ಯೂಬ್‌, ಫೇಸ್‌ಬುಕ್‌, ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಬಳಸಲಾಗಿದೆ. ನಮ್ಮ ಸಂಸ್ಥೆಯ ಅನುಮತಿ ಪಡೆಯದೇ ಕಾಪಿರೈಟ್‌ ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಿ ಎಂಆರ್‌ಟಿ ಸಂಸ್ಥೆ ಕೋರ್ಟ್‌ ಮೊರೆ ಹೋಗಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶತಮಾನ ಪೂರೈಸಿದ ಗೀತಾ ಪ್ರೆಸ್‌ಗೆ ಗಾಂಧಿ ಶಾಂತಿ ಪ್ರಶಸ್ತಿ – ಸಾವರ್ಕರ್, ಗೋಡ್ಸೆಗೆ ನೀಡಿದಂತೆ ಎಂದು ಕಾಂಗ್ರೆಸ್ ಕಿಡಿ

    ಶತಮಾನ ಪೂರೈಸಿದ ಗೀತಾ ಪ್ರೆಸ್‌ಗೆ ಗಾಂಧಿ ಶಾಂತಿ ಪ್ರಶಸ್ತಿ – ಸಾವರ್ಕರ್, ಗೋಡ್ಸೆಗೆ ನೀಡಿದಂತೆ ಎಂದು ಕಾಂಗ್ರೆಸ್ ಕಿಡಿ

    – 1 ಕೋಟಿ ನಗದು ಬಹುಮಾನ ನಿರಾಕರಿಸಿದ ಗೀತಾ ಪ್ರೆಸ್

    ನವದೆಹಲಿ: 2021ನೇ ಸಾಲಿನ ಗಾಂಧಿ ಶಾಂತಿ ಪ್ರಶಸ್ತಿಯನ್ನು (Gandhi Peace Prize) ಗೋರಖ್‌ಪುರದ ಗೀತಾ ಪ್ರೆಸ್‌ಗೆ (Gita Press) ನೀಡುವುದಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯ ಭಾನುವಾರ ತಿಳಿಸಿದೆ. ಆದರೆ ಕೇಂದ್ರದ ನಿಲುವನ್ನು ಕಾಂಗ್ರೆಸ್ ಟೀಕಿಸಿದ್ದು, ಸಾವರ್ಕರ್ ಹಾಗೂ ಗೋಡ್ಸೆಗೆ ಈ ಪ್ರಶಸ್ತಿ ನೀಡಿದಂತೆ ಎಂದು ಹೇಳಿದೆ. ಈ ವಿವಾದಗಳ ನಡುವೆ ಗೀತಾ ಪ್ರೆಸ್ 1 ಕೋಟಿ ರೂ. ನಗದು ಬಹುಮಾನವನ್ನು ನಿರಾಕರಿಸಿದೆ.

    ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ತೀರ್ಪುಗಾರರ ಸಮಿತಿ ಭಾನುವಾರ ಗೀತಾ ಪ್ರೆಸ್‌ಗೆ ಪ್ರಶಸ್ತಿ ನೀಡಲು ಆಯ್ಕೆ ಮಾಡಿರುವುದಾಗಿ ಸರ್ವಾನುಮತದಿಂದ ನಿರ್ಧರಿಸಲಾಯಿತು. ಈ ಬಗ್ಗೆ ಟ್ವೀಟ್ ಮಾಡಿರುವ ಮೋದಿ, 2021ರ ಗಾಂಧಿ ಶಾಂತಿ ಪ್ರಶಸ್ತಿಯನ್ನು ಪಡೆದಿರುವ ಗೋರಖ್‌ಪುರದ ಗೀತಾ ಪ್ರೆಸ್ ಅನ್ನು ನಾನು ಅಭಿನಂದಿಸುತ್ತೇನೆ. ಇದು 100 ವರ್ಷಗಳಲ್ಲಿ ಸಾಮಾಜಿಕ ಮತ್ತು ಸಾಂಸ್ಕೃತಿಕ ಪರಿವರ್ತನೆಗಳನ್ನು ಹೆಚ್ಚಿಸಲು ಶ್ಲಾಘನೀಯ ಕೆಲಸ ಮಾಡಿದೆ ಎಂದು ಬರೆದುಕೊಂಡಿದ್ದಾರೆ.

    ಆದರೆ ಕೇಂದ್ರದ ಈ ನಿರ್ಧಾರವನ್ನು ಕಾಂಗ್ರೆಸ್ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಟೀಕಿಸಿವೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಗೀತಾ ಪ್ರೆಸ್‌ಗೆ ಗಾಂಧಿ ಶಾಂತಿ ಪ್ರಶಸ್ತಿಯನ್ನು ನೀಡುತ್ತಿರುವುದು ಹಾಸ್ಯಾಸ್ಪದವಾಗಿದ್ದು, ಸಾವರ್ಕರ್ ಹಾಗೂ ಗೋಡ್ಸೆಗೆ ನೀಡಿದಂತೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಪರಿಷತ್‌ ಉಪಚುನಾವಣೆ: ಶೆಟ್ಟರ್‌, ಬೋಸರಾಜು, ತಿಪ್ಪಣ್ಣಪ್ಪಗೆ ಕಾಂಗ್ರೆಸ್‌ ಟಿಕೆಟ್‌

    ರಾಜಕೀಯವಾಗಿ, ಧಾರ್ಮಿಕವಾಗಿ ಹಾಗೂ ಹಲವು ಸಾಮಾಜಿಕ ವಿಚಾರಗಳಲ್ಲಿ ಮಹಾತ್ಮ ಗಾಂಧೀಜಿ ಅವರೊಂದಿಗೆ ಗೀತಾ ಪ್ರೆಸ್ ಸಂಸ್ಥೆ ಸಂಘರ್ಷ ನಡೆಸಿತ್ತು. 2015ರಲ್ಲಿ ಅಕ್ಷಯ ಮುಕುಲ್ ಬರೆದಿರುವ ಪುಸ್ತಕದಲ್ಲಿ ಈ ಎಲ್ಲಾ ವಿಚಾರವನ್ನು ಬಹಿರಂಗಪಡಿಸಿದ್ದಾರೆ ಎಂದು ಜೈರಾಮ್ ರಮೇಶ್ (Jairam Ramesh) ಟ್ವೀಟ್‌ನಲ್ಲಿ ಬರೆದಿದ್ದಾರೆ.

    ಈ ವಿವಾದಗಳ ನಡುವೆ ಗೀತಾ ಪ್ರೆಸ್ 1 ಕೋಟಿ ರೂ. ನಗದು ಬಹುಮಾನವನ್ನು ನಿರಾಕರಿಸಿದೆ. ಗಾಂಧಿ ಶಾಂತಿ ಪ್ರಶಸ್ತಿಯ ಪುರಸ್ಕಾರ ಮಾತ್ರ ಸಾಕು. ಸರ್ಕಾರ ನಗದು ಬಹುಮಾನದ ಮೊತ್ತವನ್ನು ಅಗತ್ಯವಿರುವ ಕಾರ್ಯಗಳಿಗೆ ಬಳಸಿಕೊಳ್ಳಲಿ ಎಂದು ಮನವಿ ಮಾಡಿದೆ. ಗಾಂಧಿ ಶಾಂತಿ ಪುರಸ್ಕಾರದ ಪ್ರಶಸ್ತಿ ಪತ್ರದ ಜೊತೆಗೆ ಫಲಕ ಹಾಗೂ ಕೈಮಗ್ಗದ ಅಲಂಕಾರಿಕ ವಸ್ತುಗಳನ್ನು ಕೂಡಾ ನೀಡಲಾಗುತ್ತದೆ. ಆದರೆ ತಮಗೆ ಪ್ರಶಸ್ತಿ ಪತ್ರ ಮಾತ್ರ ಸಾಕು ಎಂದು ಗೀತಾ ಪ್ರೆಸ್ ಹೇಳಿದೆ. ಇದನ್ನೂ ಓದಿ: ಅಲ್-ಹಕೀಮ್ ಮಸೀದಿಗೆ ಭೇಟಿ ನೀಡಲಿದ್ದಾರೆ ಪ್ರಧಾನಿ ಮೋದಿ

  • ಹೊಸ ಸಂಸತ್‌ನಲ್ಲಿ `ಸೆಂಗೋಲ್’ ಸಮರ – ಅಧಿಕಾರ ಹಸ್ತಾಂತರದ ರಾಜದಂಡಕ್ಕೆ ಸಾಕ್ಷ್ಯವೇ ಇಲ್ಲ ಅಂತಿದೆ ಕಾಂಗ್ರೆಸ್

    ಹೊಸ ಸಂಸತ್‌ನಲ್ಲಿ `ಸೆಂಗೋಲ್’ ಸಮರ – ಅಧಿಕಾರ ಹಸ್ತಾಂತರದ ರಾಜದಂಡಕ್ಕೆ ಸಾಕ್ಷ್ಯವೇ ಇಲ್ಲ ಅಂತಿದೆ ಕಾಂಗ್ರೆಸ್

    ನವದೆಹಲಿ: ಹೊಸ ಸಂಸತ್ ಭವನ ಉದ್ಘಾಟನೆ ವಿವಾದದ ಜೊತೆಗೆ ಈಗ ರಾಜದಂಡ `ಸೆಂಗೋಲ್‌ʼ (Sengol) ವಿವಾದವೂ ಸೇರ್ಪಡೆಯಾಗಿದೆ. ಕಳೆದ 7 ದಶಕಗಳಿಂದ ಅಲಹಾಬಾದ್ ಮ್ಯೂಸಿಯಂನಲ್ಲಿದ್ದ (Allahabad Museum) ಚಿನ್ನದ ರಾಜದಂಡವನ್ನು ಸಂಸತ್‌ಭವನ ಉದ್ಘಾಟನೆ ವೇಳೆಯೇ ಸ್ಪೀಕರ್ ಆಸನದ ಬಳಿ ಸ್ಥಾಪಿಸಲಾಗ್ತಿದೆ.

    1947ರಲ್ಲಿ ಬ್ರಿಟಿಷ್ ಆಳ್ವಿಕೆಯಿಂದ ಭಾರತ ಸ್ವಾತಂತ್ರ್ಯ ಪಡೆದಾಗ ಅಧಿಕಾರದ ಹಸ್ತಾಂತರದ ಸಂಕೇತವಾಗಿ ಲಾರ್ಡ್ ಮೌಂಟ್ ಬ್ಯಾಟನ್ ದೇಶದ ಮೊದಲ ಪ್ರಧಾನಿ ನೆಹರು ಅವರಿಗೆ ಈ ಚಿನ್ನದ ರಾಜದಂಡ ಕೊಟ್ಟಿದ್ದರು. ಭಾರತದ ಕೊನೆಯ ಗವರ್ನರ್ ಜನರಲ್ ಸಿ ರಾಜಗೋಪಾಲಾಚಾರಿ ಅವರು ಬ್ರಿಟಿಷರಿಂದ ಭಾರತಕ್ಕೆ ಅಧಿಕಾರದ ಹಸ್ತಾಂತರದ ಸಂಕೇತವಾಗಿ ರಾಜದಂಡವನ್ನು ಸ್ವೀಕರಿಸುವಂತೆ ನೆಹರು ಅವರಿಗೆ ಸಲಹೆ ನೀಡಿದ್ದರು. ಇದನ್ನೂ ಓದಿ: ನೂತನ ಸಂಸತ್ ಭವನದಲ್ಲಿ ಇಡಲಾಗುತ್ತದೆ ಚಿನ್ನದ ರಾಜದಂಡ – ಸೆಂಗೊಲ್ ವಿಶೇಷತೆ ಏನು?

    ಇದನ್ನು, 1950ರಲ್ಲಿ ಅಲಹಾಬಾದ್ ಮ್ಯೂಸಿಯಂಗೆ ಸ್ಥಳಾಂತರಿಸಲಾಗಿತ್ತು ಎನ್ನಲಾಗಿದೆ. ಆದ್ರೆ ಲಾರ್ಡ್ ಮೌಂಟ್ ಬ್ಯಾಟನ್ – ರಾಜಗೋಪಾಲಾಚಾರಿ-ನೆಹರೂ ಅವರಿಗೆ ಅಧಿಕಾರ ಹಸ್ತಾಂತರದ ಸಂಕೇತವಾಗಿ ಈ ರಾಜದಂಡವನ್ನು ಕೊಡಲಾಗಿತ್ತು ಅನ್ನೋದೇ ಬೋಗಸ್. ಯಾವುದೇ ಸಾಕ್ಷ್ಯ ಇಲ್ಲ ಅಂತಾ ಕಾಂಗ್ರೆಸ್‌ನ ಜೈರಾಮ್ ರಮೇಶ್ ಲೇವಡಿ ಮಾಡಿದ್ದಾರೆ. ಇದಕ್ಕೆ ಕೇಂದ್ರ ಸಚಿವರು ತಿರುಗೇಟು ಕೊಟ್ಟಿದ್ದಾರೆ. ಇದನ್ನೂ ಓದಿ: ಮೋದಿ ಆಡಳಿತಕ್ಕೆ 9 ವರ್ಷ, ಕಾಂಗ್ರೆಸ್‌ನಿಂದ 9 ಪ್ರಶ್ನೆ – ಮೌನ ಮುರಿದು ಉತ್ತರಿಸುವಂತೆ ಒತ್ತಾಯ

    ಗೃಹ ಸಚಿವ ಅಮಿತ್ ಶಾ (Amit Shah) ಟ್ವೀಟ್ ಮಾಡಿ, ಇದು ಸಂಸ್ಕೃತಿ ಸಂಪ್ರದಾಯಗಳನ್ನು ಆಧುನಿಕತೆಯೊಂದಿಗೆ ಸಂಯೋಜಿಸುತ್ತದೆ. ಕ್ರಿಸ್ತಪೂರ್ವ 3ನೇ ಶತಮಾನದಲ್ಲಿ ಆಡಳಿತ ನಡೆಸಿದ್ದ ಚೋಳ ರಾಜನ ಅವಧಿಯಲ್ಲಿ ಮಹತ್ವ ಪಡೆದ ರಾಜದಂಡ ಇದಾಗಿದೆ. ಈ ರಾಜದಂಡದ ಬಗ್ಗೆ ಪ್ರಧಾನಿ ಮೋದಿ (Narendra Modi) ಅವರಿಗೆ ಗೊತ್ತಾಗುತ್ತಿದ್ದಂತೆ ಅದನ್ನು ನೂತನ ಸಂಸತ್ ಭವನದಲ್ಲಿ ಸ್ಥಾಪಿಸಲು ನಿರ್ಧರಿಸಿದ್ದಾರೆ. ಸೆಂಗೋಲ್ ಎಂದರೆ ತಮಿಳಿನ ಭಾಷೆಯಲ್ಲಿ `ಸಮೃದ್ಧ, ಸಂಪತ್ತು’ ಎಂದರ್ಥ ಎಂದು ಅಮಿತ್ ಶಾ ಹೇಳಿದ್ದಾರೆ. ಸ್ವಾತಂತ್ರ್ಯದ ಸಂಕೇತವಾದ ಈ ರಾಜದಂಡವನ್ನು ನೆಹರು ಅವರ ಊರುಗೋಲು ಅಂತಾ ಕತ್ತಲೆಯಲ್ಲಿ ಇಡಲಾಗಿತ್ತು ಎಂದು ಸ್ಮೃತಿ ಇರಾನಿ ಕೂಡ ವಾಗ್ದಾಳಿ ನಡೆಸಿದ್ದಾರೆ.

  • ಮೋದಿ ಆಡಳಿತಕ್ಕೆ 9 ವರ್ಷ, ಕಾಂಗ್ರೆಸ್‌ನಿಂದ 9 ಪ್ರಶ್ನೆ – ಮೌನ ಮುರಿದು ಉತ್ತರಿಸುವಂತೆ ಒತ್ತಾಯ

    ಮೋದಿ ಆಡಳಿತಕ್ಕೆ 9 ವರ್ಷ, ಕಾಂಗ್ರೆಸ್‌ನಿಂದ 9 ಪ್ರಶ್ನೆ – ಮೌನ ಮುರಿದು ಉತ್ತರಿಸುವಂತೆ ಒತ್ತಾಯ

    * ಸಾರ್ವಜನಿಕ ಆಸ್ತಿಯನ್ನೇಕೆ ಮೋದಿಯವರ ಸ್ನೇಹಿತರಿಗೆ ಮಾರಾಟ ಮಾಡ್ತಿದ್ದಾರೆ
    * ಕಳೆದ 9 ವರ್ಷಗಳಲ್ಲಿ ರೈತರ ಆದಾಯ ಏಕೆ ದುಪ್ಪಟ್ಟಾಗಲಿಲ್ಲ?
    * ಕಳ್ಳರನ್ನು ತಪ್ಪಿಸಿಕೊಳ್ಳಲು ಏಕೆ ಬಿಡುತ್ತಿದ್ದೀರಿ? – ಕಾಂಗ್ರೆಸ್‌ ನಾಯಕರ ಪ್ರಶ್ನೆ

    ನವದೆಹಲಿ: ಕೇಂದ್ರದಲ್ಲಿ ಬಿಜೆಪಿ ಸರ್ಕಾರ (BJP Government) ಅಧಿಕಾರಕ್ಕೆ ಬಂದು ಪ್ರಧಾನಿ ನರೇಂದ್ರ ಮೋದಿ (Narendra Modi) 9 ವರ್ಷ ಆಡಳಿತ ಪೂರೈಸಿದ ಸಂಭ್ರಮದಲ್ಲಿದ್ದಾರೆ. ಈ ನಡುವೆ ಕಾಂಗ್ರೆಸ್‌ 9 ಪ್ರಶ್ನೆಗಳನ್ನ (Congress 9 Question) ಪ್ರಧಾನಿ ಮೋದಿ ಅವರ ಮುಂದಿಟ್ಟಿದ್ದು, ಮೌನ ಮುರಿದು ಉತ್ತರಿಸುವಂತೆ ಒತ್ತಾಯಿಸಿದೆ. ಮಾತ್ರವಲ್ಲ, ಒಂಬತ್ತು ವರ್ಷ ಪೂರೈಸಿದ ದಿನವನ್ನು ʻಮಾಫಿ ದಿವಸʼ ಎಂದು ಆಚರಿಸಬೇಕು ಎಂದೂ ಕಾಂಗ್ರೆಸ್ ಒತ್ತಾಯಿಸಿದೆ.

    ಎಐಸಿಸಿ ಪ್ರಧಾನ ಕಚೇರಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ (Jairam Ramesh), ಪವನ್ ಖೇರಾ, ಸುಪ್ರಿಯಾ ಶ್ರೀನೇತ ಮುಂತಾದವರು ‘ನೌ ಸಾಲ್, ನೌ ಸವಾಲ್’ (9 ವರ್ಷ, 9 ಪ್ರಶ್ನೆ) ಎಂಬ ಪುಸ್ತಕ ಬಿಡುಗಡೆ ಮಾಡಿ 9 ಪ್ರಶ್ನೆಗಳನ್ನ ಕೇಳಿದ್ದಾರೆ.

    ನಾವು ಉತ್ತರಕ್ಕಾಗಿ ಬೇಡಿಕೆ ಇಟ್ಟಾಗ 900 ವರ್ಷಗಳ ಹಿಂದೆ ಹೋಗಬೇಡಿ, ನೀವು ಒಂಬತ್ತು ವರ್ಷಗಳಲ್ಲಿ ಏನು ಮಾಡಿದ್ದೀರಿ ಎಂದು ಪ್ರತಿಯೊಬ್ಬರೂ ತಿಳಿಯಲು ಬಯಸುತ್ತಿದ್ದಾರೆ. ಪ್ರಧಾನಿ ಮೋದಿ ಮೌನ ಮುರಿದು ಈ 9 ಪ್ರಶ್ನೆಗಳಿಗೆ ಉತ್ತರಿಸಬೇಕು ಹಾಗೂ ತಮ್ಮ ಅಧಿಕಾರಾವಧಿಯಲ್ಲಿ ಮಾಡಿದ ದ್ರೋಹಕ್ಕಾಗಿ ಕ್ಷಮೆಯಾಚಿಸಬೇಕು ಜೈರಾಮ್‌ ರಮೇಶ್ ಆಗ್ರಹಿಸಿದ್ದಾರೆ.

    9‌ ಪ್ರಶ್ನೆಗಳಿವು….

    1. ಭಾರತದಲ್ಲಿ ಹಣದುಬ್ಬರ ಮತ್ತು ನಿರುದ್ಯೋಗ ಏಕೆ ಗಗನಕ್ಕೇರುತ್ತಿದೆ? ಶ್ರೀಮಂತರು ಏಕೆ ಶ್ರೀಮಂತರಾಗಿದ್ದಾರೆ ಮತ್ತು ಬಡವರು ಬಡವರಾಗಿದ್ದಾರೆ? ಆರ್ಥಿಕ ಅಸಮಾನತೆಗಳು ಹೆಚ್ಚುತ್ತಿರುವಾಗ ಸಾರ್ವಜನಿಕ ಆಸ್ತಿಯನ್ನ ಪ್ರಧಾನಿ ಮೋದಿಯವರ ಸ್ನೇಹಿತರಿಗೆ ಏಕೆ ಮಾರಾಟ ಮಾಡಲಾಗುತ್ತಿದೆ?

    2. ಮೂರು ಕೃಷಿ ಕಾನೂನುಗಳನ್ನ ರದ್ದುಗೊಳಿಸುವಾಗ ರೈತರೊಂದಿಗೆ ಮಾಡಿದ ಒಪ್ಪಂದಗಳನ್ನ ಏಕೆ ಗೌರವಿಸಲಾಗಿಲ್ಲ? ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನುಬದ್ಧವಾಗಿ ಏಕೆ ಖಾತ್ರಿಪಡಿಸಲಾಗಿಲ್ಲ? ಕಳೆದ 9 ವರ್ಷಗಳಲ್ಲಿ ರೈತರ ಆದಾಯ ಏಕೆ ದುಪ್ಪಟ್ಟಾಗಲಿಲ್ಲ?

    3. ಎಲ್ಐಸಿ ಮತ್ತು ಎಸ್‌ಬಿಐನಲ್ಲಿ ಜನರು ಕಷ್ಟಪಟ್ಟು ಸಂಪಾದಿಸಿದ ಉಳಿತಾಯವನ್ನ ಪ್ರಧಾನಿ ತಮ್ಮ “ಸ್ನೇಹಿತ” ಅದಾನಿಗೆ ಲಾಭವಾಗುವಂತೆ ಏಕೆ ಅಪಾಯಕ್ಕೆ ಸಿಲುಕಿಸುತ್ತಿದ್ದಾರೆ? ಕಳ್ಳರನ್ನು ತಪ್ಪಿಸಿಕೊಳ್ಳಲು ಏಕೆ ಬಿಡುತ್ತಿದ್ದೀರಿ? ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ವ್ಯಾಪಕ ಭ್ರಷ್ಟಾಚಾರದ ಬಗ್ಗೆ ನೀವು ಏಕೆ ಮೌನವಾಗಿದ್ದೀರಿ ಮತ್ತು ಭಾರತೀಯರನ್ನು ತೊಂದರೆ ಅನುಭವಿಸಲು ಏಕೆ ಬಿಡುತ್ತಿದ್ದೀರಿ?

    4. 2020 ರಲ್ಲಿ ಚೀನಾಕ್ಕೆ ಕ್ಲೀನ್ ಚಿಟ್ ನೀಡಿದ ನಂತರವೂ ಅವರು ಭಾರತೀಯ ಭೂಪ್ರದೇಶವನ್ನು ಆಕ್ರಮಿಸುವುದನ್ನು ಏಕೆ ಮುಂದುವರಿಸಿದ್ದಾರೆ?

    5. ಚುನಾವಣಾ ಲಾಭಕ್ಕಾಗಿ ಉದ್ದೇಶಪೂರ್ವಕ ದ್ವೇಷದ ರಾಜಕೀಯವನ್ನು ಏಕೆ ಬಳಸಲಾಗುತ್ತಿದೆ ಮತ್ತು ಸಮಾಜದಲ್ಲಿ ಭಯದ ವಾತಾವರಣವನ್ನು ಉತ್ತೇಜಿಸಲಾಗುತ್ತಿದೆ?

    6. ಮಹಿಳೆಯರು, ದಲಿತರು, ಎಸ್ಸಿ, ಎಸ್ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳ ಬಗ್ಗೆ ನೀವು ಏಕೆ ಮೌನವಾಗಿದ್ದೀರಿ? ಜಾತಿ ಜನಗಣತಿಯ ಬೇಡಿಕೆಯನ್ನು ನೀವು ಏಕೆ ನಿರ್ಲಕ್ಷಿಸುತ್ತಿದ್ದೀರಿ?

    7. ಬಡವರು, ನಿರ್ಗತಿಕರು ಮತ್ತು ಬುಡಕಟ್ಟು ಜನರ ಕಲ್ಯಾಣಕ್ಕಾಗಿ ಅವರ ಬಜೆಟ್‌ಗಳನ್ನ ಕಡಿತಗೊಳಿಸುವ ಮೂಲಕ ಮತ್ತು ನಿರ್ಬಂಧಿತ ನಿಯಮಗಳನ್ನು ಮಾಡುವ ಮೂಲಕ ಸರ್ಕಾರವು ಯೋಜನೆಗಳನ್ನು ಏಕೆ ದುರ್ಬಲಗೊಳಿಸಿದೆ?

    8. ಕಳೆದ ಒಂಬತ್ತು ವರ್ಷಗಳಲ್ಲಿ ನಮ್ಮ ಸಾಂವಿಧಾನಿಕ ಮೌಲ್ಯಗಳು ಮತ್ತು ಪ್ರಜಾಪ್ರಭುತ್ವ ಸಂಸ್ಥೆಗಳನ್ನು ಏಕೆ ದುರ್ಬಲಗೊಳಿಸಲಾಗಿದೆ? ನೀವು ವಿರೋಧ ಪಕ್ಷಗಳು ಮತ್ತು ನಾಯಕರ ವಿರುದ್ಧ ಸೇಡಿನ ರಾಜಕೀಯವನ್ನು ಏಕೆ ಮಾಡುತ್ತಿದ್ದೀರಿ ಮತ್ತು ಜನರಿಂದ ಆಯ್ಕೆಯಾದ ಸರ್ಕಾರಗಳನ್ನು ಅಸ್ಥಿರಗೊಳಿಸಲು ನೀವು ಹಣದ ಶಕ್ತಿಯನ್ನು ಏಕೆ ಬಳಸುತ್ತಿದ್ದೀರಿ?

    9. ಕೋವಿಡ್ -19ನಿಂದಾಗಿ 40 ಲಕ್ಷಕ್ಕೂ ಹೆಚ್ಚು ಜನರು ದುರಂತ ಸಾವಿಗೀಡಾದರೂ, ಮೋದಿ ಸರ್ಕಾರ ಅವರ ಕುಟುಂಬಗಳಿಗೆ ಪರಿಹಾರ ನೀಡಲು ಏಕೆ ನಿರಾಕರಿಸಿದೆ? ನೀವು ಇದ್ದಕ್ಕಿದ್ದಂತೆ ಲಾಕ್​ಡೌನ್​ ಏಕೆ ವಿಧಿಸಿದಿರಿ, ಅದು ಲಕ್ಷಾಂತರ ಕಾರ್ಮಿಕರನ್ನು ಮನೆಗೆ ಮರಳುವಂತೆ ಮಾಡಿತು ಮತ್ತು ಯಾವುದೇ ಸಹಾಯವನ್ನೂ ಮಾಡಲಿಲ್ಲ? ಇದಕ್ಕೆಲ್ಲಾ ನೀವು ಮೌನ ಮುರಿದು ಉತ್ತರಿಸಲೇಬೇಕು ಎಂದು ಆಗ್ರಹಿಸಿದ್ದಾರೆ.

  • ಭಾರತ್‌ ಜೋಡೋ ಯಾತ್ರೆ ಆಯ್ತು.. ಈಗ ಪೂರ್ವದಿಂದ ಪಶ್ಚಿಮಕ್ಕೆ ಯಾತ್ರೆಗೆ ಕಾಂಗ್ರೆಸ್‌ ಪ್ಲಾನ್‌

    ಭಾರತ್‌ ಜೋಡೋ ಯಾತ್ರೆ ಆಯ್ತು.. ಈಗ ಪೂರ್ವದಿಂದ ಪಶ್ಚಿಮಕ್ಕೆ ಯಾತ್ರೆಗೆ ಕಾಂಗ್ರೆಸ್‌ ಪ್ಲಾನ್‌

    ನವದೆಹಲಿ: ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ (ದಕ್ಷಿಣದಿಂದ ಉತ್ತರ) ಭಾರತ್‌ ಜೋಡೋ ಯಾತ್ರೆ (Bharat Jodo Yatra) ಮೂಲಕ ದೇಶದ ಗಮನ ಸೆಳೆದಿದ್ದ ಕಾಂಗ್ರೆಸ್‌ (Congress) ಈಗ ಪೂರ್ವದಿಂದ ಪಶ್ಚಿಮಕ್ಕೆ (East to West) ಮತ್ತೊಂದು ಯಾತ್ರೆ ಕೈಗೊಳ್ಳಲು ಪ್ಲಾನ್‌ ಮಾಡಿದೆ.

    ಕಾಂಗ್ರೆಸ್‌ನ ಮತ್ತೊಂದು ಯಾತ್ರೆ ಬಗ್ಗೆ ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ (Jairam Ramesh) ಮಾಹಿತಿ ಹಂಚಿಕೊಂಡಿದ್ದಾರೆ. ಸಾಕಷ್ಟು ಉತ್ಸಾಹ ಮತ್ತು ಶಕ್ತಿ ಇದೆ. ವೈಯಕ್ತಿಕವಾಗಿ ಇದು ಅಗತ್ಯವಿದೆ ಎಂದು ನಾನು ಭಾವಿಸುತ್ತೇನೆ. ಆದರೆ ಪೂರ್ವದಿಂದ ಪಶ್ಚಿಮಕ್ಕೆ ಕೈಗೊಳ್ಳುವ ಯಾತ್ರೆಯ ಸ್ವರೂಪವು, ದಕ್ಷಿಣದಿಂದ ಉತ್ತರಕ್ಕೆ ಕೈಗೊಂಡಿದ್ದ ಭಾರತ್ ಜೋಡೋ ಯಾತ್ರೆಯ ಸ್ವರೂಪಕ್ಕಿಂತ ಭಿನ್ನವಾಗಿರಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನನಗೀಗ 52 ವಯಸ್ಸು.. ಈಗಲೂ ಸ್ವಂತ ಮನೆಯೇ ಇಲ್ಲ: ರಾಹುಲ್‌ ಗಾಂಧಿ

    ಪೂರ್ವದಿಂದ ಪಶ್ಚಿಮಕ್ಕೆ ಕೈಗೊಳ್ಳುವ ಯಾತ್ರೆಯು ಬಹುಶಃ ಅರುಣಾಚಲ ಪ್ರದೇಶದ ಪಾಸಿಘಾಟ್‌ನಿಂದ ಗುಜರಾತ್‌ನ ಪೋರಬಂದರ್‌ವರೆಗೆ ನಡೆಯಬಹುದು ಎಂದು ಜೈರಾಮ್‌ ಸುಳಿವು ಕೊಟ್ಟಿದ್ದಾರೆ.

    ಈ ಮಾರ್ಗದಲ್ಲಿ ಕಾಡುಗಳು, ನದಿಗಳು ಹೆಚ್ಚಾಗಿವೆ. ಪ್ರಮುಖವಾಗಿ ಇದು ಪಾದಯಾತ್ರೆಯಾಗಲಿದೆ. ಹೊಸ ಯಾತ್ರೆಯ ಕುರಿತು ಹೆಚ್ಚಿನ ವಿವರಗಳನ್ನು ಹಂಚಿಕೊಂಡ ಜೈರಾಮ್ ರಮೇಶ್, ಮುಂಬರುವ ಏಪ್ರಿಲ್ ಮತ್ತು ನವೆಂಬರ್‌ನಲ್ಲಿ ರಾಜ್ಯಗಳಿಗೆ ಚುನಾವಣೆಗಳು ನಡೆಯಬಹುದು. ಹೀಗಾಗಿ ಜೂನ್‌ಗಿಂತ ಮೊದಲು ಅಥವಾ ನವೆಂಬರ್‌ಗಿಂತ ಮೊದಲು ಯಾತ್ರೆಯನ್ನು ಕೈಗೊಳ್ಳಬಹುದು ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಈ ವರ್ಷದಲ್ಲೇ ಮೋದಿ ಪಾಕಿಸ್ತಾನವನ್ನ ಸಂಕಷ್ಟದಿಂದ ಪಾರು ಮಾಡ್ತಾರೆ – RAW ಮಾಜಿ ನಿರ್ದೇಶಕ

    ಈ ಯಾತ್ರೆಯು ಭಾರತ್ ಜೋಡೋ ಯಾತ್ರೆಗಿಂತ ಕಡಿಮೆ ಅವಧಿಯದ್ದಾಗಿದ್ದು, ಮುಂದಿನ ಕೆಲವು ವಾರಗಳಲ್ಲಿ ಈ ಬಗ್ಗೆ ಹೆಚ್ಚಿನ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.