Tag: Jairam Thakur

  • ಹಿಮಾಚಲ ಪ್ರದೇಶ: 15 ಬಿಜೆಪಿ ಶಾಸಕರ ಅಮಾನತುಗೊಳಿಸಿದ ಸ್ಪೀಕರ್‌

    ಹಿಮಾಚಲ ಪ್ರದೇಶ: 15 ಬಿಜೆಪಿ ಶಾಸಕರ ಅಮಾನತುಗೊಳಿಸಿದ ಸ್ಪೀಕರ್‌

    ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ (Himachal Pradesh) ರಾಜ್ಯಸಭಾ ಚುನಾವಣೆ ಫಲಿತಾಂಶದ ಬಳಿಕ ಅನಿರೀಕ್ಷಿತ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಹಿಮಾಚಲ ಪ್ರದೇಶ ವಿಧಾನಸಭೆ ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ (Kuldeep Singh Pathania) ಅವರು ಸ್ಪೀಕರ್ ಚೇಂಬರ್‌ನಲ್ಲಿ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ಪ್ರತಿಪಕ್ಷ ನಾಯಕ ಜೈರಾಮ್ ಠಾಕೂರ್ ಸೇರಿದಂತೆ 15 ಬಿಜೆಪಿ ಶಾಸಕರನ್ನು ಬುಧವಾರ ಅಮಾನತುಗೊಳಿಸಿದ್ದಾರೆ.

    ವಿಪಿನ್ ಸಿಂಗ್ ಪರ್ಮಾರ್, ರಣಧೀರ್ ಶರ್ಮಾ, ಲೋಕೇಂದರ್ ಕುಮಾರ್, ವಿನೋದ್ ಕುಮಾರ್, ಹನ್ಸ್ ರಾಜ್, ಜನಕ್ ರಾಜ್, ಬಲ್ಬೀರ್ ವರ್ಮಾ, ತ್ರಿಲೋಕ್ ಜಮ್ವಾಲ್, ಸುರೇಂದರ್ ಶೋರಿ, ದೀಪ್ ರಾಜ್, ಪುರಣ್ ಠಾಕೂರ್, ಇಂದರ್ ಸಿಂಗ್ ಗಾಂಧಿ, ದಿಲೀಪ್ ಠಾಕೂರ್ ಮತ್ತು ಇಂದರ್ ಸಿಂಗ್ ಅಮಾನತುಗೊಂಡಿದ್ದಾರೆ. ಇದನ್ನೂ ಓದಿ: ಹಿಮಾಚಲ ಪ್ರದೇಶ ಸಚಿವ ವಿಕ್ರಮಾದಿತ್ಯ ಸಿಂಗ್ ರಾಜೀನಾಮೆ

    ರಾಜ್ಯಸಭಾ ಚುನಾವಣೆಯು ಕಾಂಗ್ರೆಸ್ ಸರ್ಕಾರ ಅಲ್ಪಮತದಲ್ಲಿದೆ ಎಂದು ಸ್ಪಷ್ಟಪಡಿಸಿದೆ. ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ರಾಜೀನಾಮೆ ನೀಡಬೇಕು ಎಂದು ಜೈರಾಮ್ ಠಾಕೂರ್ ಒತ್ತಾಯಿಸಿದ್ದರು.

    ಹಿಮಾಚಲ ಪ್ರದೇಶದ ಏಕೈಕ ರಾಜ್ಯಸಭಾ ಸ್ಥಾನವನ್ನು ಮಂಗಳವಾರ ಬಿಜೆಪಿ ಗೆದ್ದುಕೊಂಡಿದೆ. ಈ ಅನಿರೀಕ್ಷಿತ ಫಲಿತಾಂಶದಿಂದ ಕಾಂಗ್ರೆಸ್‌ಗೆ ಆಘಾತ ಎದುರಾಗಿದೆ. ಬಿಜೆಪಿಯು ವಿಶ್ವಾಸಮತಕ್ಕೆ ಒತ್ತಾಯಿಸಲಿದೆಯೇ ಎಂಬ ಪ್ರಶ್ನೆ ಉದ್ಭವಿಸಿದ್ದು, ಹಿಮಾಚಲ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಜೈರಾಮ್ ಠಾಕೂರ್ ಅವರು ಇಂದು ಬೆಳಗ್ಗೆ ರಾಜ್ಯಪಾಲರನ್ನು ಭೇಟಿ ಮಾಡಿದ್ದರು. ಇದನ್ನೂ ಓದಿ:

  • ಸಿಂಘ್ವಿಗೆ ಸೋಲು, ಬಿಜೆಪಿಗೆ ಗೆಲುವು – ಹಿಮಾಚಲದಲ್ಲಿ ಅಲ್ಪ ಮತಕ್ಕೆ ಕುಸಿದ ಕಾಂಗ್ರೆಸ್‌ ಸರ್ಕಾರ

    ಸಿಂಘ್ವಿಗೆ ಸೋಲು, ಬಿಜೆಪಿಗೆ ಗೆಲುವು – ಹಿಮಾಚಲದಲ್ಲಿ ಅಲ್ಪ ಮತಕ್ಕೆ ಕುಸಿದ ಕಾಂಗ್ರೆಸ್‌ ಸರ್ಕಾರ

    ಶಿಮ್ಲಾ: ಹಿಮಾಚಲ ಪ್ರದೇಶದ (Himachal Pradesh) ಒಂದು ರಾಜ್ಯಸಭೆ (Rajya Sabha) ಸ್ಥಾನಕ್ಕೆ ಇಂದು ಭಾರೀ ಹೈಡ್ರಾಮಾ ನಡೆದಿದ್ದು ಬಿಜೆಪಿ (BJP) ಜಯಗಳಿಸಿದೆ. 9 ಶಾಸಕರು ಕಾಂಗ್ರೆಸ್ಸಿಗೆ (Congress) ಕೈಕೊಟ್ಟ ಕಾರಣ ಅಲ್ಲಿ ಬಿಜೆಪಿ ಗೆದ್ದಿದೆ. ಕಾಂಗ್ರೆಸ್ಸಿನ ಅಭಿಷೇಕ್ ಮನು ಸಿಂಘ್ವಿ (Abhishek Manu Singhvi ) ಸೋಲನುಭವಿಸಿದ್ದಾರೆ.

    ರಾಜ್ಯಸಭಾ ಚುನಾವಣೆಯ ಸೋಲಿನಿಂದಾಗಿ ಸುಖವಿಂದರ್ ಸಿಂಗ್ ಸುಖು (Sukhvinder Singh Sukhu) ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅಲ್ಪಮತಕ್ಕೆ ಕುಸಿದಿದ್ದು, ಪತನದ ಅಂಚಿನಲ್ಲಿದೆ.

    ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಬಹುಮತ ಕಳೆದುಕೊಂಡಿದೆ, ವಿಶ್ವಾಸಮತ ಯಾಚಿಸುವಂತೆ ಸಿಎಂ ಸುಕ್ಕುಗೆ ಮಾಜಿ ಮುಖ್ಯಮಂತ್ರಿ ಜೈರಾಮ್ ಠಾಕೂರ್ (Jairam Thakur) ಆಗ್ರಹಿಸಿದ್ದಾರೆ. 2022ರ ವಿಧಾನಸಭಾ ಚುನಾವಣೆಯಲ್ಲಿ, 68 ಸ್ಥಾನಗಳಲ್ಲಿ ಕಾಂಗ್ರೆಸ್ 40 ಸ್ಥಾನಗಳನ್ನು ಗೆದ್ದರೆ ಬಿಜೆಪಿ 25 ಸ್ಥಾನ ಗೆದ್ದುಕೊಂಡಿತ್ತು. ಇದನ್ನೂ ಓದಿ: ಗೆದ್ದ ಬೆನ್ನಲ್ಲೇ ನಾಸೀರ್ ಹುಸೇನ್ ಬೆಂಬಲಿಗರಿಂದ ಪಾಕಿಸ್ತಾನ್ ಜಿಂದಾಬಾದ್‌ ಘೋಷಣೆ

    ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಅಭಿಷೇಕ್ ಮನು ಸಿಂಘ್ವಿ ವಿರುದ್ಧ ಬಿಜೆಪಿ ಹರ್ಷ ಮಹಾಜನ್ ಅವರನ್ನು ಕಣಕ್ಕಿಳಿಸಿತ್ತು. ಹಲವು ಕಾಂಗ್ರೆಸ್ ಶಾಸಕರು ಸಿಂಘ್ವಿ ಅವರನ್ನು ಕಣಕ್ಕೆ ಇಳಿಸಿದ್ದಕ್ಕೆ ಅಸಮಾಧಾನಗೊಂಡಿದ್ದರು. ವಿಶ್ವಾಸಮತ ಯಾಚನೆಗೆ ಮುಂದಾದರೆ ಕಾಂಗ್ರೆಸ್‌ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಯಿದೆ.

    ಸಿಂಘ್ವಿ ವಿರುದ್ಧ ಕಣಕ್ಕಿಳಿದಿದ್ದ ಬಿಜೆಪಿ ಅಭ್ಯರ್ಥಿ ಹರ್ಷ್ ಮಹಾಜನ್ ಅವರು, ಕಾಂಗ್ರೆಸ್‌ ಪಕ್ಷದ ಎಲ್ಲಾ ಶಾಸಕರು ಚುನಾವಣೆಗೂ ಮುನ್ನ ತಮ್ಮೊಂದಿಗೆ ಸಂಪರ್ಕದಲ್ಲಿದ್ದರು ಎಂದು ಹೇಳಿದ್ದರು.

  • ಹಿಮಾಚಲ ಅಸೆಂಬ್ಲಿ ಗೇಟ್‌ನಲ್ಲಿ ಖಲಿಸ್ತಾನ್ ಧ್ವಜ – ಸಿಎಂ ಜೈರಾಮ್ ಠಾಕೂರ್ ಕಿಡಿ

    ಹಿಮಾಚಲ ಅಸೆಂಬ್ಲಿ ಗೇಟ್‌ನಲ್ಲಿ ಖಲಿಸ್ತಾನ್ ಧ್ವಜ – ಸಿಎಂ ಜೈರಾಮ್ ಠಾಕೂರ್ ಕಿಡಿ

    ಶಿಮ್ಲಾ: ಭಾನುವಾರ ಬೆಳಗ್ಗೆ ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿರುವ ವಿಧಾನಸಭೆಯ ಮುಖ್ಯ ಗೇಟ್ ಹಾಗೂ ಗೋಡೆಯ ಮೇಲೆ ಖಲಿಸ್ತಾನ್ ಧ್ವಜಗಳನ್ನು ಕಟ್ಟಿರುವುದು ಕಂಡುಬಂದಿದೆ.

    ಭಾನುವಾರ ಮುಂಜಾನೆ ಗೇಟ್‌ಗಳ ಮೇಲೆ ಖಲಿಸ್ತಾನ್ ಧ್ವಜಗಳನ್ನು ಕಟ್ಟಿರುವ ಬಗ್ಗೆ ಕಾಂಗ್ರಾ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು, ಅಸೆಂಬ್ಲಿ ಗೋಡೆಗಳ ಹೊರವಲಯದಲ್ಲಿ ಖಲಿಸ್ತಾನ್ ಪರ ಘೋಷಣೆಗಳೂ ಕಂಡುಬಂದಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಡಾ. ನಿಪುನ್ ಜಿಂದಾಲ್ ಘಟನೆಯನ್ನು ಖಚಿತಪಡಿಸಿಕೊಂಡು, ಆರೋಪಿಗಳ ಪತ್ತೆಗೆ ಸುತ್ತಮುತ್ತಲಿನ ಸಿಸಿಟಿವಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹುತಾತ್ಮ ಯೋಧ ಹರ್ದೀಪ್ ಸಿಂಗ್ ಕುಟುಂಬಕ್ಕೆ 1 ಕೋಟಿ ಪರಿಹಾರ ಘೋಷಿಸಿದ ಭಗವಂತ್ ಮಾನ್

    ಕೆಲವು ದುಷ್ಕರ್ಮಿಗಳು ತಾಪಿವನ್‌ನಲ್ಲಿರುವ ರಾಜ್ಯ ವಿಧಾನಸಭೆಯ ಗೇಟ್‌ನ ಹೊರಭಾಗದಲ್ಲಿ ಐದಾರು ಖಲಿಸ್ತಾನ್ ಧ್ವಜಗಳನ್ನು ಹಾಕಿದ್ದು, ಗೋಡೆಯ ಮೇಲೆ ಖಲಿಸ್ತಾನ್ ಜಿಂದಾಬಾದ್ ಘೋಷಣೆಗಳನ್ನೂ ಬರೆದಿದ್ದಾರೆ. ಇದೀಗ ಧ್ವಜಗಳನ್ನು ಹಾಗೂ ಬರಹಗಳನ್ನು ತೆರವುಗೊಳಿಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ನಡುರಸ್ತೆಯಲ್ಲಿ ಗೂಂಡಾಗಳಿಂದ 15 ಬಾರಿ ಫೈರಿಂಗ್ – ಇಬ್ಬರಿಗೆ ಗಾಯ

    ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಕೃತ್ಯವನ್ನು ಖಂಡಿಸಿ, ನಿಮಗೆ ಧೈರ್ಯವಿದ್ದರೆ ರಾತ್ರಿ ಹೊತ್ತಲ್ಲ, ಹಗಲಿನಲ್ಲಿ ಈ ಕೆಲಸ ಮಾಡಬೇಕಿತ್ತು ಎಂದು ಕಿಡಿಕಾರಿದ್ದಾರೆ. ಇದು ಪಂಜಾಬ್‌ನ ಕೆಲವು ಪ್ರವಾಸಿಗರ ಕೃತ್ಯದಂತೆ ಮೇಲ್ನೋಟಕ್ಕೆ ತೋರುತ್ತಿದೆ. ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

  • ದೆಹಲಿ ಮಾದರಿ ಎಂದರೆ ಪ್ರಾಮಾಣಿಕ ಸರ್ಕಾರ: ಕೇಜ್ರಿವಾಲ್

    ದೆಹಲಿ ಮಾದರಿ ಎಂದರೆ ಪ್ರಾಮಾಣಿಕ ಸರ್ಕಾರ: ಕೇಜ್ರಿವಾಲ್

    ನವದೆಹಲಿ: ದೆಹಲಿ ಮಾದರಿ ಎಂದರೆ ಪ್ರಾಮಾಣಿಕ ಸರ್ಕಾರವಾಗಿದೆ. ಇದು ಮುಂದಿನ ದಿನಗಳಲ್ಲಿ ಹಿಮಾಚಲ ಪ್ರದೇಶಕ್ಕೂ ಸಿಗಲಿದೆ ಎಂದು ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಮ್ ಠಾಕೂರ್‌ಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತಿರುಗೇಟು ನೀಡಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿ ಮಾದರಿ ಎಂದರೆ ಪ್ರಾಮಾಣಿಕ ಸರ್ಕಾರ. ಸಾಮಾಜಿಕ ಮತ್ತು ರಾಜಕೀಯ ಪರಿಸ್ಥಿತಿಗಳು ವಿಭಿನ್ನವಾಗಿರುವುದರಿಂದ ಹಿಮಾಚಲ ಪ್ರದೇಶದಲ್ಲಿ ಪ್ರಾಮಾಣಿಕ ಸರ್ಕಾರ ಇರಲು ಸಾಧ್ಯವಿಲ್ಲ. ಆದರೆ ಪಂಜಾಬ್ ಹಾಗೂ ದೆಹಲಿಯಂತೆ ಹಿಮಾಚಲ ಪ್ರದೇಶದಲ್ಲೂ ಆಪ್ ಪಕ್ಷ ಪ್ರಾಮಾಣಿಕ ಸರ್ಕಾರವನ್ನು ನೀಡುತ್ತದೆ ಎಂದರು. ಇದನ್ನೂ ಓದಿ: ಇಮ್ಲಿವಾಲಿ ಮಸೀದಿ ಮುಂದೆ ನಮಾಜ್ ಮಾಡಿದ 150 ಮಂದಿ ವಿರುದ್ಧ FIR

    ಈ ಹಿಂದೆ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಮಾತನಾಡಿ, ಅರವಿಂದ್ ಕೇಜ್ರಿವಾಲ್ ಅವರು ಇಲ್ಲಿ ಆಪ್ ಪಕ್ಷವನ್ನು ತರಲು ಪ್ರಯತ್ನಿಸುತ್ತಿದ್ದಾರೆ. ಅವರ ಭೇಟಿಯೂ ಚುನಾವಣೆ ಬರುವವರೆಗೂ ಮುಂದುವರೆಯುತ್ತದೆ. ಆದರೆ ಹಿಮಾಚಲ ಪ್ರದೇಶವನ್ನು ದೆಹಲಿ ಮಾದರಿಗೆ ಹೋಲಿಸುವುದು ಸರಿಯಲ್ಲ. ಇಲ್ಲಿನ ಸಾಮಾಜಿಕ ಮತ್ತು ರಾಜಕೀಯ ಸನ್ನಿವೇಶಗಳು ವಿಭಿನ್ನವಾಗಿವೆ ಎಂದು ಹೇಳಿದ್ದರು. ಇದನ್ನೂ ಓದಿ: ಉತ್ತರಪ್ರದೇಶದಲ್ಲಿ ಕೊರೊನಾ ಸೋಂಕು ಶೇ.50ಕ್ಕೆ ಏರಿಕೆ – ಕಠಿಣ ಕ್ರಮಕ್ಕೂ ಬಗ್ಗದ ಜನ

    ಹಿಮಾಚಲ ಪ್ರದೇಶವು ಮೂರನೇ ವ್ಯಕ್ತಿಗೆ ಸ್ಥಾನ ಅಥವಾ ಗೌರವ ನೀಡಲ್ಲ. ಹೀಗಾಗಿ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಶತಸಿದ್ಧ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.

  • ಬಿಜೆಪಿ ಬಲೆಗೆ ಬೀಳದಿರಿ – ಕೊಟ್ಟ ಕೊಡುಗೆಗಳನ್ನೂ ಹಿಂಪಡೆಯುತ್ತದೆ: ಸಿಸೋಡಿಯಾ

    ಬಿಜೆಪಿ ಬಲೆಗೆ ಬೀಳದಿರಿ – ಕೊಟ್ಟ ಕೊಡುಗೆಗಳನ್ನೂ ಹಿಂಪಡೆಯುತ್ತದೆ: ಸಿಸೋಡಿಯಾ

    ನವದೆಹಲಿ: ಹಿಮಾಚಲ ಪ್ರದೇಶದಲ್ಲಿ ಅಧಿಕಾರದ ಗದ್ದುಗೆ ಹಿಡಿಯಲು ಮುಂದಾಗುತ್ತಿರುವ ಆಮ್ ಆದ್ಮಿ ಪಕ್ಷ ಇದೀಗ ಹಿಮಾಚಲ ಪ್ರದೇಶದತ್ತ ತನ್ನ ಗಮನಹರಿಸಿದೆ. ಅದಕ್ಕಾಗಿ ಪ್ರಮುಖ ನಾಯಕರನ್ನು ಆಪ್‌ಗೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದು, ಬಿರುಸಿನ ಪ್ರಚಾರ ನಡೆಸಲು ಮುಂದಾಗುತ್ತಿದೆ.

    ಈ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿರುವ ದೆಹಲಿ ಉಪಮುಖ್ಯಮಂತ್ರಿ ಮನಿಷ್ ಸಿಸೋಡಿಯಾ, ಎಎಪಿಗೆ ಮತ ನೀಡಿ ಬೆಂಬಲಿಸುವಂತೆ ಕೋರಿದ್ದು, ಬಿಜೆಪಿಯ ಬಲೆಗೆ ಬೀಳದಂತೆಯೂ ಎಚ್ಚರಿಸಿದರು. ಇದನ್ನೂ ಓದಿ: ಹಿಮಾಚಲ ಪ್ರದೇಶದ ಸರ್ಕಾರಿ ಬಸ್‍ಗಳಲ್ಲಿ ಪ್ರಯಾಣಿಸುವ ಮಹಿಳೆಯರಿಗೆ 50% ರಿಯಾಯಿತಿ: ಸಿಎಂ ಠಾಕೂರ್

    AAP 01

    ಬಿಜೆಪಿ ಸೋಲುವ ಭಯದಿಂದ ಹತ್ತು ಹಲವು ಉಚಿತ ಕೊಡುಗೆಗಳನ್ನು ಘೋಷಿಸುತ್ತಿದೆ. ಇದಕ್ಕೆ ಮಣಿಯದೇ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಮತ ಹಾಕುವಂತೆ ಮನವಿ ಮಾಡಿದರು.

    ಬಿಜೆಪಿ ಮತ್ತೆ ಹಿಮಾಚಲ ಪ್ರದೇಶದಲ್ಲಿ ಸರ್ಕಾರ ರಚಿಸಿದರೆ, ವಿದ್ಯುತ್, ಸಾರಿಗೆ ದರ ಸೇರಿದಂತೆ ಎಲ್ಲ ಉಚಿತ ಕೊಡುಗೆಗಳನ್ನು ಹಿಂಪಡೆಯುತ್ತದೆ, ಇದು ಸತ್ಯ. ಜನರಿಗೆ ಅಗತ್ಯವಸ್ತುಗಳನ್ನು ಕಡಿಮೆ ದರದಲ್ಲಿ ಒದಗಿಸಬೇಕು ಎಂಬ ಪರಿಕಲ್ಪನೆ ಎಂದಿಗೂ ಬಿಜೆಪಿಗೆ ಇಲ್ಲ. ಇದೀಗ ಆಪ್‌ನೊಂದಿಗೆ ಹೋರಾಡಲು ಹೆದರಿ ಬಿಜೆಪಿ ಉಚಿತ ಕೊಡುಗೆಗಳನ್ನು ನೀಡುತ್ತಿದೆ ಎಂದು ಸಿಸೋಡಿಯಾ ಹೇಳಿದ್ದಾರೆ. ಇದನ್ನೂ ಓದಿ: ಅಮಿತ್ ಶಾ ಆಗಮನದ ವೇಳೆ ಕೇಬಲ್ ವಯರ್ ಸ್ಫೋಟ – ವರದಿ ಕೇಳಿದ ಗೃಹ ಸಚಿವಾಲಯ

    ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರು, ಹಿಮಾಚಲ ಪ್ರದೇಶದ ನಿವಾಸಿಗಳಿಗೆ 125 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಿದ್ದೇವೆ. ಶೂನ್ಯದಿಂದ 125 ಯೂನಿಟ್ ವಿದ್ಯುತ್ ಬಳಸುವ ಕುಟುಂಬಗಳು ಇನ್ನುಮುಂದೆ ಬಿಲ್ ಪಾವತಿಸಬೇಕಾಗಿಲ್ಲ. ಒಟ್ಟು 11.5 ಲಕ್ಷ ಕುಟುಂಬಗಳು ಇದರ ಪ್ರಯೋಜನ ಪಡೆಯಲಿವೆ. ಅಲ್ಲದೆ, ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಬಿಲ್‌ಗಳನ್ನು ಮನ್ನಾ ಮಾಡಲಾಗುವುದು ಎಂದು ಘೋಷಿಸಿದರು.

    ವರ್ಷದ ಕೊನೆಯಲ್ಲಿ ಹಿಮಾಚಲ ಪ್ರದೇಶದಲ್ಲಿ ಚುನಾವಣೆ ನಡೆಯಲಿದ್ದು, ಬಿಜೆಪಿ ಸತತ 2ನೇ ಬಾರಿಗೆ ಅಧಿಕಾರ ಉಳಿಸಿಕೊಳ್ಳುವ ಗುರಿ ಹೊಂದಿದೆ. ಇದಕ್ಕೆ ಜನತೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.

  • Exclusive: ಕರ್ನಾಟಕದ ಅಳಿಯ ಈಗ ಹಿಮಾಚಲ ಪ್ರದೇಶದ ಸಿಎಂ!

    Exclusive: ಕರ್ನಾಟಕದ ಅಳಿಯ ಈಗ ಹಿಮಾಚಲ ಪ್ರದೇಶದ ಸಿಎಂ!

    ಬೆಂಗಳೂರು: ಹಿಮಾಚಲ ಪ್ರದೇಶದ ಸಿಎಂ ಆಗಿ ಜೈರಾಮ್ ಠಾಕೂರ್ ಆಯ್ಕೆಯಾಗಿದ್ದು, ಇಂದು ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಜೈರಾಮ್ ಠಾಕೂರ್ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ.

    ಮುಖ್ಯಮಂತ್ರಿ ಪಟ್ಟವನ್ನು ಏರಲಿರುವ ಜೈರಾಮ್ ಠಾಕೂರ್ ಅವರಿಗೆ ಕನ್ನಡ ನಂಟು ಇದೆ. 28 ವರ್ಷಕ್ಕೆ ಶಾಸಕರಾಗಿ ಆಯ್ಕೆ ಆಗಿದ್ದ ಜೈರಾಮ್ ಠಾಕೂರ್ ಅವರ ಪತ್ನಿ ಡಾ. ಸಾಧನಾ ಠಾಕೂರ್ ಅವರು ಓರ್ವ ಕನ್ನಡತಿಯಾಗಿದ್ದು, ಮೂಲತ: ಶಿವಮೊಗ್ಗದವರು.

    ಡಾ. ಸಾಧನಾ ಅವರ ಅಜ್ಜ ಉದ್ಯಮಮಿಯಾಗಿದ್ದು, ಹಲವು ವರ್ಷಗಳ ಕಾಲ ಬೆಂಗಳೂರನಲ್ಲಿ ನೆಲೆಸಿದ್ದರು. ನಂತರದಲ್ಲಿ ಜೈಪುರಕ್ಕೆ ವಲಸೆ ಹೋಗಿದ್ದರು. ಈ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿರುವ ಡಾ. ಸಾಧನಾ ಠಾಕೂರ್, ತಮ್ಮ ಪತಿ ಮುಖ್ಯಮಂತ್ರಿಯಾಗಿ ಆಯ್ಕೆ ಆಗಿರುವುದಕ್ಕೆ ಹರ್ಷ ವ್ಯಕ್ತಪಡಿಸಿದ್ದಾರೆ.

    ತಮ್ಮ ಪತಿ 1998 ರಿಂದಲೇ ಚುನಾವಣೆಯಲ್ಲಿ ಸ್ಪರ್ಧಿಸುವ ಮೂಲಕ ನಿರಂತರವಾಗಿ ಶಾಸಕರಾಗಿ ಆಯ್ಕೆ ಆಗಿದ್ದರು. ಅನಂತರದಲ್ಲಿ ಸತತವಾಗಿ 5 ಬಾರಿ ಶಾಸಕರಾಗಿ ಆಯ್ಕೆ ಆಗಿದ್ದು, ಈ ಹಿಂದೆಯೇ ಹಿಮಾಚಲ ಪ್ರದೇಶದ ಸಿಎಂ ಅಭ್ಯರ್ಥಿ ಕಣದಲ್ಲಿದ್ದರು ಎಂದು ತಿಳಿಸಿದ್ದಾರೆ. 

    ರಾಜ್ಯದ ಮುಖ್ಯ ಮಂತ್ರಿ ಅವರ ಪತ್ನಿಯಾಗಿ ಅವರ ಜವಾಬ್ದಾರಿಗಳನ್ನು ಅರಿಯುವ ಅವಶ್ಯಕತೆ ಇದ್ದು, ಜನರ ಸೇವೆಯನ್ನು ಮಾಡುವ ಶಕ್ತಿಯನ್ನು ದೇವರು ನೀಡಲಿ ಎಂದು ಕೋರಿದರು. ಇನ್ನು ತಮ್ಮ ಮದುವೆ ಬಗ್ಗೆ ತಿಳಿಸಿದ ಅವರು, ತಮ್ಮದು ಕುಟುಂಬ ಸದಸ್ಯರ ನಿರ್ಣಯದಂತೆ ಮದುವೆ ನಡೆದಿದ್ದು, ನಾವಿಬ್ಬರು ಎವಿಬಿಪಿ ಸಂಘಟನೆಯಲ್ಲಿ ಸಕ್ರಿಯರಾಗಿದ್ದೇವು. ನಮ್ಮ ಮದುವೆ ನಂತರ ನಾನು ಹರಿಯಾಣಕ್ಕೆ ತೆರಳಿದೆ ಎಂದು ಹೇಳಿದರು.

    ತಮ್ಮ ಪತಿಯ ಮೇಲೆ ಅಪಾರ ನಿರೀಕ್ಷೆ ಇದ್ದು, ರಾಜ್ಯದಲ್ಲಿ ಯುವ ಜನಾಂಗದವರಿಗೆ ಉದ್ಯೋಗ ಸೃಷ್ಟಿಸಲು ಹೆಚ್ಚಿನ ಒತ್ತು ನೀಡಲಿದ್ದಾರೆ. ಅಲ್ಲದೇ ಹಿಮಾಚಲ ಪ್ರದೇಶ ನಿಸರ್ಗದತ್ತ ಪ್ರದೇಶವಾಗಿರುವುದರಿಂದ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಲು ಹೆಚ್ಚಿನ ಗಮನ ನೀಡಲಿದ್ದಾರೆ ಎಂದು ತಿಳಿಸಿದರು.

  • ಹಿಮಾಚಲ ಪ್ರದೇಶದಲ್ಲಿ ಸಿಎಂ ಪಟ್ಟ ಏರಲಿದ್ದಾರೆ ಜೈರಾಮ್ ಠಾಕೂರ್

    ಹಿಮಾಚಲ ಪ್ರದೇಶದಲ್ಲಿ ಸಿಎಂ ಪಟ್ಟ ಏರಲಿದ್ದಾರೆ ಜೈರಾಮ್ ಠಾಕೂರ್

    ಶಿಮ್ಲಾ: ಹಿಮಾಚಲ ಪ್ರದೇಶದ ಬಿಜೆಪಿಯ ಶಾಸಕಾಂಗ ನಾಯಕರಾಗಿ ಜೈರಾಮ್ ಠಾಕೂರ್ ಆಯ್ಕೆಯಾಗಿದ್ದು, ಡಿ. 27ರಂದು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

    ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಪಡೆದ ಬಿಜೆಪಿಯ ನೂತನ ಸದಸ್ಯರ ಶಾಸಕಾಂಗ ಸಭೆಯಲ್ಲಿ ಈ ಆಯ್ಕೆ ಮಾಡಲಾಗಿದೆ. ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಣೆಯಾಗಿದ್ದ ಪ್ರೇಮ್ ಕುಮಾರ್ ಧುಮಾಲ್ ಅವರು ಚುನಾವಣೆಯಲ್ಲಿ ಸೋತಿದ್ದರು. ಹೀಗಾಗಿ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎನ್ನುವುದರ ಬಗ್ಗೆ ಹಲವರ ಹೆಸರು ತೇಲಿ ಬಂದಿತ್ತು.

    ಭಾನುವಾರ ನಡೆದ ಸಭೆಯಲ್ಲಿ ಪ್ರೇಮ್ ಕುಮಾರ್ ಅವರು ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಜೈರಾಮ್ ಠಾಕೂರ್ ಅವರ ಹೆಸರನ್ನು ಸೂಚಿಸಿದರು. ಸನತ್ ಕುಮಾರ್, ಜೆ.ಪಿ. ನಡ್ಡಾ, ಸುರೇಶ್ ಭಾರದ್ವಾಜ್ ಮತ್ತು ಮಹೇಂದರ್ ಸಿಂಗ್ ಸೇರಿದಂತೆ ಎಲ್ಲ ಶಾಸಕರು ಬೆಂಬಲ ಸೂಚಿಸಿದ ಪರಿಣಾಮ ಮುಖ್ಯಮಂತ್ರಿ ಪಟ್ಟವನ್ನು ಅಲಂಕರಿಸಲಿದ್ದಾರೆ.

    ನೂತನ ಮುಖ್ಯಮಂತ್ರಿಯಾಗಿ ಡಿ.27ರಂದು ಜೈರಾಮ್ ಠಾಕೂರ್ ಪ್ರಮಾಣ ವಚನ ಸ್ವೀಕರಿಸಲಿದ್ದು, ಈ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಭಾಗಹಿಸಲಿದ್ದಾರೆ. ವಿಧಾನಸಭಾ ಚುನಾವಣೆಯ ಒಟ್ಟು 68 ಸ್ಥಾನಗಳ ಪೈಕಿ ಬಿಜೆಪಿ 44, ಕಾಂಗ್ರೆಸ್ 21, ಪಕ್ಷೇತರರು 2, ಸಿಪಿಐ(ಎಂ)1 ಸ್ಥಾನವನ್ನು  ಗೆದ್ದುಕೊಂಡಿತ್ತು.