Tag: jaishankar

  • ತಮಿಳುನಾಡಿನ 47 ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ – ಕ್ರಮಕ್ಕೆ ಒತ್ತಾಯಿಸಿ ಕೇಂದ್ರಕ್ಕೆ ಪತ್ರ ಬರೆದ ಸ್ಟಾಲಿನ್

    ತಮಿಳುನಾಡಿನ 47 ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ – ಕ್ರಮಕ್ಕೆ ಒತ್ತಾಯಿಸಿ ಕೇಂದ್ರಕ್ಕೆ ಪತ್ರ ಬರೆದ ಸ್ಟಾಲಿನ್

    ಚೆನ್ನೈ: ಮನ್ನಾರ್ ಮತ್ತು ಡೆಲ್ಫ್ಟ್ ಸಮುದ್ರ ಪ್ರದೇಶದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ತಮಿಳುನಾಡಿನ 47 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ (Lankan Navy) ಬಂಧಿಸಿದೆ. ಅಲ್ಲದೇ 5 ಮೀನುಗಾರಿಕಾ ಬೋಟ್‌ಗಳನ್ನು ವಶಕ್ಕೆ ಪಡೆದಿದೆ.

    ಶ್ರೀಲಂಕಾ (Sri Lanka) ಗಡಿ ಪ್ರವೇಶಿಸಿ ಅಕ್ರಮ ಮೀನುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಮೀನುಗಾರರನ್ನು ಬಂಧಿಸಲಾಗಿದೆ. ಉತ್ತರ ಶ್ರೀಲಂಕಾದ ತಲೈಮನ್ನಾರ್‌ನಲ್ಲಿ ಬಂಧಿಸಲಾಗಿದೆ ಎಂದು ಶ್ರೀಲಂಕಾ ನೌಕಾಪಡೆಯ ವಕ್ತಾರರು ತಿಳಿಸಿದ್ದಾರೆ. ಮೀನುಗಾರರ ಬಿಡುಗಡೆಗೆ ಕ್ರಮಕೈಗೊಳ್ಳುವಂತೆ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ (MK Stalin) ಅವರು ಕೇಂದ್ರ ಸಚಿವ ಎಸ್ ಜೈಶಂಕರ್ (Jaishankar) ಅವರಿಗೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಅರಬ್ಬಿ ಸಮುದ್ರದಲ್ಲಿ ಮೀನುಗಾರರ ಬೋಟ್ ವಶಕ್ಕೆ – ನೌಕಾದಳದಿಂದ ಆರು ಮೀನುಗಾರರ ಬಂಧನ

    ಒಂದು ತಿಂಗಳ ಹಿಂದೆ ಉತ್ತರ ಶ್ರೀಲಂಕಾದ ಜಾಫ್ನಾ ಬಳಿ 12 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಪಡೆ ಬಂಧಿಸಿತ್ತು. ಭಾರತ ಮತ್ತು ಶ್ರೀಲಂಕಾ ನಡುವಿನ ಸಂಬಂಧದಲ್ಲಿ ಮೀನುಗಾರರಿಗೆ ಸಂಬಂಧಿಸಿದ ವಿಷಯ ವಿವಾದವಾಗಿಯೇ ಉಳಿದಿದೆ. ಶ್ರೀಲಂಕಾ ನೌಕಾಪಡೆಯು ಕೆಲವು ಸಂದರ್ಭಗಳಲ್ಲಿ ಭಾರತೀಯ ಮೀನುಗಾರರ ಮೇಲೆ ಗುಂಡು ಹಾರಿಸಿದೆ.

    ಈ ಬಗ್ಗೆ ರಾಜತಾಂತ್ರಿಕ ಚರ್ಚೆಗಳ ನಡೆಯುತ್ತಿವೆ. ಇಷ್ಟಾದರೂ ಮೀನುಗಾರಿಕೆ ವಿವಾದವು ಉಭಯ ದೇಶಗಳ ನಡುವೆ ದೀರ್ಘಕಾಲದಿಂದ ಬಾಕಿ ಉಳಿದಿದೆ. ಇದನ್ನೂ ಓದಿ: ಶ್ರೀಲಂಕಾ ನೌಕಾಪಡೆಯಿಂದ 37 ಭಾರತೀಯ ಮೀನುಗಾರರ ಬಂಧನ – 5 ದೋಣಿಗಳು ವಶ

  • ಪಾಕ್ ಭಯೋತ್ಪಾದನೆಗೆ ಶಾಶ್ವತ ಬೆಂಬಲ ತ್ಯಜಿಸುವವರೆಗೆ ಸಿಂಧೂ ಜಲ ಒಪ್ಪಂದ ಅಮಾನತು: ಜೈಶಂಕರ್

    ಪಾಕ್ ಭಯೋತ್ಪಾದನೆಗೆ ಶಾಶ್ವತ ಬೆಂಬಲ ತ್ಯಜಿಸುವವರೆಗೆ ಸಿಂಧೂ ಜಲ ಒಪ್ಪಂದ ಅಮಾನತು: ಜೈಶಂಕರ್

    ನವದೆಹಲಿ: ರಕ್ತ ಮತ್ತು ನೀರು ಒಟ್ಟಿಗೆ ಹರಿಯುವುದಿಲ್ಲ, ಪಾಕಿಸ್ತಾನ (Pakistan) ಭಯೋತ್ಪಾದನೆಗೆ ತನ್ನ ಬೆಂಬಲವನ್ನು ಶಾಶ್ವತವಾಗಿ ತ್ಯಜಿಸುವವರೆಗೆ ಸಿಂಧೂ ನದಿ (Sindhu River) ಜಲ ಒಪ್ಪಂದವನ್ನು ಸ್ಥಗಿತಗೊಳಿಸಲಾಗುವುದು ಎಂದು ವಿದೇಶಾಂಗ ಸಚಿವ ಜೈಶಂಕರ್ (S Jaishankar) ತಿಳಿಸಿದ್ದಾರೆ.

    `ಆಪರೇಷನ್ ಸಿಂಧೂರ’ದ (Operation Sindoor) ಚರ್ಚೆಯ ಭಾಗವಾಗಿ ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಸಿಂಧೂ ಜಲ ಒಪ್ಪಂದವು ಬಹಳ ವಿಶಿಷ್ಟವಾದ ಒಪ್ಪಂದವಾಗಿದೆ. ನಾನು ಈವರೆಗೂ ಯಾವುದೇ ಒಂದು ದೇಶವು ತನ್ನ ಪ್ರಮುಖ ನದಿಗಳನ್ನು ಯಾವುದೇ ಹಕ್ಕುಗಳಿಲ್ಲದೆ ಬೇರೊಂದು ದೇಶಕ್ಕೆ ಅನುಮತಿಸಿದ್ದನ್ನು ನಾನು ನೋಡಿಲ್ಲ. ಆದ್ದರಿಂದ ಇದು ಅಸಾಧಾರಣ ಒಪ್ಪಂದವಾಗಿತ್ತು. ನಾವು ಈ ಒಪ್ಪಂದವನ್ನು ಸ್ಥಗಿತಗೊಳಿಸಿದರೆ ಈ ಘಟನೆ ನಮ್ಮ ನೆನಪಿಗೆ ಬರುತ್ತದೆ ಅದು ತುಂಬಾ ಮುಖ್ಯವಾದದ್ದು ಎಂದರು.ಇದನ್ನೂ ಓದಿ: ತೆಂಗು ಮತ್ತು ಮೆಕ್ಕೆಜೋಳಕ್ಕೆ ರೋಗ – ವಿಶೇಷ ಪ್ಯಾಕೇಜ್ ನೀಡಲು ಕೇಂದ್ರಕ್ಕೆ ಸಂಸದ ಶ್ರೇಯಸ್ ಪಟೇಲ್ ಒತ್ತಾಯ

    ಮಂಗಳವಾರ ಕೆಲವರು ಹೇಳುವುದನ್ನು ನಾನು ಕೇಳಿಸಿಕೊಂಡೆ, ಜನರು ಇತಿಹಾಸವನ್ನು ಅಹಿತಕರ ಎಂದುಕೊಳ್ಳುತ್ತಾರೆ. ಜೊತೆಗೆ ಇತಿಹಾಸದ ವಿಷಯಗಳನ್ನು ಮರೆತುಬಿಡಬೇಕೆಂದುಕೊಳ್ಳುತ್ತಾರೆ. ಹೌದು, ಅವರು ಕೇವಲ ಕೆಲವು ವಿಷಯಗಳನ್ನು ಮಾತ್ರ ನೆನಪಿಸಿಕೊಳ್ಳಲು ಇಷ್ಟಪಡುತ್ತಾರೆ ಎಂದು ಕಾಂಗ್ರೆಸ್ ನಾಯಕರನ್ನು ಟೀಕಿಸಿದರು.

    ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಗ್ಗೆ ಮಾತನಾಡಿದ ಜೈಶಂಕರ್, ಭಯೋತ್ಪಾದನೆ ಮಿತಿಮೀರಿ ಹೋಗಿದೆ. ಹೀಗಾಗಿ ಇದು ಸ್ವೀಕಾರಾರ್ಹವಲ್ಲ, ಕಳೆದ ದಶಕದಲ್ಲಿ ಭಾರತವು ಭಯೋತ್ಪಾದನೆಯನ್ನು ಎಸ್‌ಸಿಓ, ಬ್ರಿಕ್ಸ್ ಹಾಗೂ ಕ್ವಾಡ್‌ನಂತಹ ಜಾಗತಿಕ ಮಟ್ಟದಲ್ಲಿ ಪ್ರಸ್ತಾಪಿಸಿತು.ಇದನ್ನೂ ಓದಿ: ಭಾರತದ ಜೊತೆ ಟ್ರೇಡ್ ಡೀಲ್ ಫೈನಲ್ ಆಗಿಲ್ಲ; 20-25% ಟ್ಯಾರಿಫ್ ಹಾಕ್ತೀನಿ ಎಂದ ಟ್ರಂಪ್

  • ಅಫ್ಘಾನಿಸ್ತಾನ ಅಭಿವೃದ್ಧಿಗೆ ನೆರವು ನೀಡಿ: ಎಸ್‌ಸಿಒ ಸಭೆಯಲ್ಲಿ ಜೈಶಂಕರ್‌ ಒತ್ತಾಯ

    ಅಫ್ಘಾನಿಸ್ತಾನ ಅಭಿವೃದ್ಧಿಗೆ ನೆರವು ನೀಡಿ: ಎಸ್‌ಸಿಒ ಸಭೆಯಲ್ಲಿ ಜೈಶಂಕರ್‌ ಒತ್ತಾಯ

    ಬೀಜಿಂಗ್:‌ ಅಫ್ಘಾನಿಸ್ತಾನಕ್ಕೆ (Afghanistan) ಹೆಚ್ಚಿನ ಅಭಿವೃದ್ಧಿ ನೆರವು ನೀಡಲು ಸಹಕರಿಸುವಂತೆ ಎಸ್‌ಸಿಒ (ಶಾಂಘೈ ಸಹಕಾರ ಸಂಸ್ಥೆ) ಸದಸ್ಯ ರಾಷ್ಟ್ರಗಳಿಗೆ ವಿದೇಶಾಂಗ ಸಚಿವ ಎಸ್.ಜೈಶಂಕರ್‌ (Jaishankar) ಕರೆ ನೀಡಿದ್ದಾರೆ.

    ಟಿಯಾಂಜಿನ್‌ನಲ್ಲಿ ನಡೆದ ಎಸ್‌ಸಿಒ ವಿದೇಶಾಂಗ ಸಚಿವರ ಸಭೆಯಲ್ಲಿ ಮಾತನಾಡಿದ ಜೈಶಂಕರ್, ಪ್ರಾದೇಶಿಕ ಶಾಂತಿಗೆ ಭಾರತದ ದೀರ್ಘಕಾಲದ ಬದ್ಧತೆ ಮತ್ತು ಅಫ್ಘಾನ್ ಜನರ ಯೋಗಕ್ಷೇಮವನ್ನು ಪುನರುಚ್ಚರಿಸಿದ್ದಾರೆ. ಇದನ್ನೂ ಓದಿ: ನಗುಮುಖದಲ್ಲಿ ಕ್ಯಾಪ್ಸುಲ್‌ನಿಂದ ಹೊರಬಂದು ಕೈಬೀಸಿದ ಶುಭಾಂಶು ಶುಕ್ಲಾ

    ಇಂದು ಜಗತ್ತು ಬಹು-ಧ್ರುವೀಯತೆಯತ್ತ ಸಾಗುತ್ತಿದೆ. ಇದು ರಾಷ್ಟ್ರೀಯ ಸಾಮರ್ಥ್ಯಗಳ ಪುನರ್ವಿತರಣೆಯ ವಿಷಯದಲ್ಲಿ ಮಾತ್ರವಲ್ಲ, SCO ನಂತಹ ಪರಿಣಾಮಕಾರಿ ಗುಂಪುಗಳ ಹೊರಹೊಮ್ಮುವಿಕೆಯಲ್ಲೂ ಇದೆ. ವಿಶ್ವ ವ್ಯವಹಾರಗಳನ್ನು ರೂಪಿಸುವಲ್ಲಿ ನಮ್ಮ ಕೊಡುಗೆಯ ಸಾಮರ್ಥ್ಯವು ಸ್ವಾಭಾವಿಕವಾಗಿ ನಾವು ಹಂಚಿಕೆಯ ಕಾರ್ಯಸೂಚಿಯಲ್ಲಿ ಎಷ್ಟು ಚೆನ್ನಾಗಿ ಒಟ್ಟಿಗೆ ಬರುತ್ತೇವೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ. ಅಂದರೆ ಎಲ್ಲರನ್ನೂ ಮಂಡಳಿಯಲ್ಲಿ ತೆಗೆದುಕೊಳ್ಳುವುದು ಎಂದು ತಿಳಿಸಿದ್ದಾರೆ.

    2020 ರಲ್ಲಿ ಗಾಲ್ವಾನ್ ಕಣಿವೆ ಘರ್ಷಣೆಯ ನಂತರ ಎಸ್‌ಸಿಒ ವಿದೇಶಾಂಗ ಸಚಿವರ ಸಭೆಗಾಗಿ ಜೈಶಂಕರ್ ಚೀನಾಕ್ಕೆ ಅಧಿಕೃತ ಭೇಟಿ ನೀಡಿದ ಸಂದರ್ಭದಲ್ಲಿ ಹೇಳಿಕೆಗಳು ಬಂದಿವೆ. ಸಿಂಗಾಪುರ ಭೇಟಿ ನಂತರ ಜೈಶಂಕರ್‌ ಬೀಜಿಂಗ್‌ಗೆ ಆಗಮಿಸಿದರು. ಇದನ್ನೂ ಓದಿ: ಕೇರಳ ನರ್ಸ್ ನಿಮಿಷಾ ಪ್ರಿಯಾಗೆ ಮರಣದಂಡನೆ ಮುಂದೂಡಿಕೆ

    ಇದಕ್ಕೂ ಮುನ್ನ ಜೈಶಂಕರ್, ಇತರ SCO ವಿದೇಶಾಂಗ ಮಂತ್ರಿಗಳೊಂದಿಗೆ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಭೇಟಿಯಾದರು. ಜೂನ್‌ನಲ್ಲಿ SCO ಸಂಬಂಧಿತ ಕಾರ್ಯಕ್ರಮಗಳಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ (NSA) ಅಜಿತ್ ದೋವಲ್ ಅವರು ಚೀನಾಕ್ಕೆ ಭೇಟಿ ನೀಡಿದ್ದರು.

    ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಕೂಡ ಮುಂದಿನ ತಿಂಗಳು ಭಾರತಕ್ಕೆ ಭೇಟಿ ನೀಡಿ ಎನ್ಎಸ್ಎ ಅಜಿತ್ ದೋವಲ್ ಅವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ. ಈ ಸಭೆಯು ವಿಶೇಷ ಪ್ರತಿನಿಧಿಗಳ (ಎಸ್ಆರ್) ಸಂವಾದ ಕಾರ್ಯವಿಧಾನದ ಭಾಗವಾಗಿದ್ದು, ಉಭಯ ದೇಶಗಳ ನಡುವಿನ ದೀರ್ಘಕಾಲದ ಗಡಿ ವಿವಾದವನ್ನು ಪರಿಹರಿಸುವ ಗುರಿಯನ್ನು ಹೊಂದಿದೆ.

  • ಇರಾನ್‌ನಲ್ಲಿ ಸಿಲುಕಿದ್ದಾರೆ ಕರ್ನಾಟಕದ 9 ವಿದ್ಯಾರ್ಥಿಗಳು – ಭಾರತಕ್ಕೆ ಕರೆತರುವಂತೆ ಮನವಿ

    ಇರಾನ್‌ನಲ್ಲಿ ಸಿಲುಕಿದ್ದಾರೆ ಕರ್ನಾಟಕದ 9 ವಿದ್ಯಾರ್ಥಿಗಳು – ಭಾರತಕ್ಕೆ ಕರೆತರುವಂತೆ ಮನವಿ

    ಬೆಂಗಳೂರು: ಇರಾನ್ (Iran) ಮತ್ತು ಇಸ್ರೇಲ್ (Israel) ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು ರಾಜ್ಯದ (Karnataka) 9 ವಿದ್ಯಾರ್ಥಿಗಳು ಇರಾನ್‌ನಲ್ಲಿ ಸಿಲುಕಿಕೊಂಡಿದ್ದಾರೆ.

    ರಾಜಧಾನಿ ಟೆಹರಾನ್‌ನಲ್ಲಿ (Tehran) ಜಫ್ರಾನಿಯಾ ಪ್ರದೇಶದ ತೌಫಿಕ್ ಅಲ್ಲೆಯಲ್ಲಿ 9 ಮಂದಿ ವೈದ್ಯಕೀಯ ಶಿಕ್ಷಣ ಓದುತ್ತಿದ್ದರು. ಈ 9 ವಿದ್ಯಾರ್ಥಿಗಳನ್ನು ಸ್ಥಳಾಂತರಿಸುವಂತೆ ಕರ್ನಾಟಕ ನಾನ್ ರೆಸಿಡೆನ್ಸಿ ಪೋರಂ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ.  ಇದನ್ನೂ ಓದಿ: ನಮ್ಮ ತಂಟೆಗೆ ಬಂದ್ರೆ ಹಿಂದೆಂದೂ ನೋಡಿರದ ಮಿಲಿಟರಿ ಬಲವನ್ನು ಎದುರಿಸಬೇಕಾಗುತ್ತೆ – ಇರಾನ್‌ಗೆ ಟ್ರಂಪ್‌ ಬಿಗ್‌ ವಾರ್ನಿಂಗ್‌

     
    ಪೋರಂನ ಡೆಪ್ಯುಟಿ ಚೇರ್‌ಮನ್ ಡಾ. ಆರತಿ ಕೃಷ್ಣ ಅವರು ವಿದೇಶಾಂಗ ಸಚಿವ ಜೈಶಂಕರ್‌ (Jaishankar) ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಹೆದರಿ ಬಂಕರ್‌ನಲ್ಲಿ ಕುಳಿತಿದ್ದೆವು, ರಸ್ತೆಗೆ ಇಳಿಯಲ್ಲ – ಇರಾನ್ ದಾಳಿಯ ಭೀಕರತೆ ಬಿಚ್ಚಿಟ್ಟ ಕರ್ನಾಟಕದ ಮಹಿಳೆ

    ಸದ್ಯ ಭಾರತಕ್ಕೆ ಮರಳಲು ಸಹಾಯ ಮಾಡಲು ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮತ್ತು ವಿದೇಶಾಂಗ ಸಚಿವಾಲಯದ ಕರ್ನಾಟಕದ ವಿದ್ಯಾರ್ಥಿಗಳಾದ ನದೀಮ್ ಹುಸೇನ್, ಮೀರ್ ನಾಸರ್ ಹುಸೇನ್, ಸೈಯದ್ ಮೊಹಮ್ಮದ್ ಟಕಿ, ಮೀರ್ ಎಸಾಮ್ ರೆಜಾ, ಅಬ್ಬಾಸ್ ಅಸ್ಕರಿ, ಸೈಯದ್ ಮೊಹ್ಸಿನ್ ರೆಜಾ, ಮರ್ಯಮ್ ಫಾತಿಮಾ, ಡೇನಿಯಾ ಉಲ್ಫಾಟ್, ಅಬ್ಬಾಸ್ ಅಲಿ ಅವರು ತುರ್ತು ಸಹಾಯಕ್ಕೆ ಮನವಿ ಮಾಡಿದ್ದಾರೆ.

  • ಮೊದಲು ಉಗ್ರರನ್ನು ಹಸ್ತಾಂತರಿಸಿ – ಪಾಕ್‌ನ ಸಿಂಧೂ ನದಿ ಒಪ್ಪಂದ ಮನವಿಗೆ ಜೈಶಂಕರ್‌ ಮಾತು

    ಮೊದಲು ಉಗ್ರರನ್ನು ಹಸ್ತಾಂತರಿಸಿ – ಪಾಕ್‌ನ ಸಿಂಧೂ ನದಿ ಒಪ್ಪಂದ ಮನವಿಗೆ ಜೈಶಂಕರ್‌ ಮಾತು

    ನವದೆಹಲಿ: ಅಮಾನತಿನಲ್ಲಿಟ್ಟಿರುವ ಸಿಂಧೂ ನದಿ ಒಪ್ಪಂದವನ್ನು (Indus Treaty) ಪುನರ್‌ ಪರಿಶೀಲಿಸುವಂತೆ ಪಾಕಿಸ್ತಾನ (Pakistan) ಬೇಡಿಕೊಂಡಿದೆ ಎಂದು ವಿದೇಶಾಂಗ ಸಚಿವ ಜೈಶಂಕರ್‌ (Jaishankar) ಹೇಳಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪಾಕಿಸ್ತಾನದ ಜೊತೆ ಕೇವಲ ಭಯೋತ್ಪಾದನೆ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರ (POK) ಕುರಿತ ಚರ್ಚೆ ಮಾತ್ರ ಇರಲಿದೆ. ಹಸ್ತಾಂತರಿಸಬೇಕಾದ ಭಯೋತ್ಪಾದಕರ ಪಟ್ಟಿಯನ್ನು ಪಾಕಿಸ್ತಾನ ಬಳಿಯಿದೆ. ಗಡಿ ಭಯೋತ್ಪಾದನೆ ನಿಲ್ಲಿಸುವವರೆಗೂ ಸಿಂಧೂ ನದಿ ಒಪ್ಪಂದ ರದ್ದು ಮುಂದುವರಿಯಲಿದೆ ಎಂದು ಪಟ್ಟು ಹಿಡಿದಿದ್ದಾರೆ.

    ಉಗ್ರ ನೆಲೆಗಳನ್ನು ಧ್ವಂಸಗೊಳಿಸುವ ಗುರಿಯಲ್ಲಿ ನಾವು ಯಶಸ್ಸು ಸಾಧಿಸಿದ್ದೇವೆ. ಉಗ್ರ ನೆಲೆಗಳ ಮೇಲೆ ನಾವು ದಾಳಿ ಮಾಡುತ್ತಿದ್ದೇವೆ ಎಂಬ ಸಂದೇಶವನ್ನು ಕಳುಹಿಸಿದ್ದೆವು. ನಾವು ಸೇನೆಯನ್ನು ಗುರಿಯಾಗಿಸಿ ದಾಳಿ ಮಾಡಿರಲಿಲ್ಲ. ಅವರು ಈ ಉತ್ತಮ ಸಲಹೆಯನ್ನು ಸ್ವೀಕರಿಸಲಿಲ್ಲ. ಒಮ್ಮೆ ಕೆಟ್ಟ ಹೊಡೆತ ಬಿದ್ದಮೇಲೆ ಕದನ ವಿರಾಮಕ್ಕೆ ಗೋಗರೆಯಿತು ಎಂದು ಹೇಳಿದರು. ಇದನ್ನೂ ಓದಿ: ರಾಕ್ಷಸ ರಾಷ್ಟ್ರದ ಕೈಯಲ್ಲಿ ಪರಮಾಣು ಶಸ್ತ್ರಾಸ್ತ್ರಗಳು ಸುರಕ್ಷಿತವೇ? – ರಾಜನಾಥ್ ಸಿಂಗ್

    ನಾವು ಎಷ್ಟು ಹಾನಿ ಮಾಡಿದ್ದೇವೆ ಎಂಬುದನ್ನು ಉಪಗ್ರಹ ಚಿತ್ರಗಳು ಹೇಳುತ್ತಿವೆ. ನಮ್ಮ ಮತ್ತು ಪಾಕಿಸ್ತಾನ ಮಧ್ಯೆ ಮಾತುಕತೆ ದ್ವಿಪಕ್ಷೀಯಯವಾಗಿರುತ್ತದೆ. ಈ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು.

    ಒಪ್ಪಂದವನ್ನು ಅಮಾನತಿನಲ್ಲಿಟ್ಟ ಕಾರಣ ಭಾರತ ಸಿಂಧೂ ನದಿಯ ಉಪನದಿಗಳಿಗೆ ಅಡ್ಡಲಾಗಿ ಕಟ್ಟಲಾಗಿದ್ದ ಜಲಾಶಯದಿಂದ ಯಾವಾಗ ಬೇಕಾದರೂ ನೀರು ಬಿಡಬಹುದು ಮತ್ತು ಯಾವಾಗ ಬೇಕಾದರೂ ನೀರನ್ನು ತಡೆದು ಹಿಡಿಯಬಹುದು. ಒಪ್ಪಂದ ಜಾರಿಯಲ್ಲಿದ್ದಾಗ ಜಲಾಶಯದಿಂದ ನೀರನ್ನು ಹೊರಗೆ ಹರಿಸುವಾಗ ಭಾರತ ಪಾಕಿಸ್ತಾನಕ್ಕೆ ತಿಳಿಸಬೇಕಿತ್ತು. ಆದರೆ ಈಗ ಭಾರತ ತನಗೆ ಇಷ್ಟ ಬಂದ ಸಮಯದಲ್ಲಿ ನೀರನ್ನು ಜಲಾಶಯದಿಂದ ಹರಿಸುತ್ತಿದೆ.

    ರಕ್ತ ಮತ್ತು ನೀರು ಜೊತೆಯಾಗಿ ಹರಿಯಲು ಸಾಧ್ಯವಿಲ್ಲ. ಭಯೋತ್ಪಾದಕತೆ ಮತ್ತು ಮಾತುಕತೆ ಎರಡು ಜೊತೆಯಾಗಿ ಸಾಗುವುದಿಲ್ಲ. ಉಗ್ರರ ವಿರುದ್ಧ ಪಾಕ್‌ ಕಠಿಣ ಕ್ರಮ ಕೈಗೊಳ್ಳುವವರೆಗೂ ಈ ಒಪ್ಪಂದ ಅಮಾನತಿನಲ್ಲಿ ಇರಲಿದೆ ಎಂದು ಭಾರತ ಹೇಳಿತ್ತು. ಇದನ್ನೂ ಓದಿ: ಈಗ U Turn – ಕದನ ವಿರಾಮ ಬಿಲ್ಡಪ್ ಕೊಟ್ಟು ಈಗ ತಣ್ಣಗಾದ ಟ್ರಂಪ್‌!

    ಬೇಸಿಗೆಯಲ್ಲಿ ಭಾರತ ಕೆಲ ದಿನಗಳ ಕಾಲ ನೀರನ್ನು ಹಿಡಿದಿಟ್ಟುಕೊಳ್ಳಬಹುದು. ಆದರೆ ದೀರ್ಘ ಸಮಯದವರೆಗೆ ನೀರನ್ನು ಸಂಗ್ರಹಿಸಲು ಸಾಧ್ಯವಿಲ್ಲ. ಹೀಗಾಗಿ ಪಾಕಿಸ್ತಾನಕ್ಕೆ ಹರಿಯುವ ನೀರನ್ನು ಸಂಪೂರ್ಣವಾಗಿ ನಿಲ್ಲಿಸಲು ಭಾರತ ಈಗ ಮತ್ತೆ ಎರಡು ಜಲಾಶಯ ನಿರ್ಮಾಣಕ್ಕೆ ಮುಂದಾಗಿದೆ.

  • ಜೈಶಂಕರ್‌ ಸುದ್ದಿಗೋಷ್ಠಿ ಪ್ರಸಾರ – ಕೆನಡಾದಲ್ಲಿ ಆಸ್ಟ್ರೇಲಿಯಾ ಟುಡೇ ಬ್ಯಾನ್‌

    ಜೈಶಂಕರ್‌ ಸುದ್ದಿಗೋಷ್ಠಿ ಪ್ರಸಾರ – ಕೆನಡಾದಲ್ಲಿ ಆಸ್ಟ್ರೇಲಿಯಾ ಟುಡೇ ಬ್ಯಾನ್‌

    ನವದೆಹಲಿ: ಆಸ್ಟ್ರೇಲಿಯಾದಲ್ಲಿ ಭಾರತ-ಕೆನಡಾ (India-Canada) ರಾಜತಾಂತ್ರಿಕ ಬಿಕ್ಕಟ್ಟಿನ ಬಗ್ಗೆ ಹೇಳಿಕೆ ನೀಡಿದ ವಿದೇಶಾಂಗ ಸಚಿವ ಜೈಶಂಕರ್‌(S Jaishankar) ಅವರ ಸುದ್ದಿಗೋಷ್ಠಿಯನ್ನು ಪ್ರಸಾರ ಮಾಡಿದ್ದಕ್ಕೆ ಅಸ್ಟ್ರೇಲಿಯಾ ಟುಡೇಯನ್ನು (Australia Today) ಕೆನಡಾ ನಿಷೇಧಿಸಿದೆ.

    ಸಿಡ್ನಿಯಲ್ಲಿ ಜೈಶಂಕರ್ ಮತ್ತು ಆಸ್ಟ್ರೇಲಿಯಾದ ವಿದೇಶಾಂಗ ವ್ಯವಹಾರಗಳ ಖಾತೆಯ ಸಚಿವೆ ಪೆನ್ನಿ ವಾಂಗ್ ಅವರ ಜಂಟಿ ಮಾಧ್ಯಮಗೋಷ್ಠಿಯನ್ನು ಆಸ್ಟ್ರೇಲಿಯಾ ಟುಡೇ ಪ್ರಸಾರ ಮಾಡಿತ್ತು. ಮಾಧ್ಯಮಗೋಷ್ಠಿ ಪ್ರಸಾರವಾದ ಕೆಲವೇ ಗಂಟೆಗಳಲ್ಲಿ ಜಸ್ಟಿನ್‌ ಟ್ರುಡೋ ನೇತೃತ್ವದ ಕೆನಡಾ ಸರ್ಕಾರ ಆಸ್ಟ್ರೇಲಿಯಾ ಟುಡೇಯನ್ನು ನಿಷೇಧಿಸಿದೆ.


    ಈ ವಿಚಾರದ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು ಪ್ರತಿಕ್ರಿಯಿಸಿ, ಆಸ್ಟ್ರೇಲಿಯಾ ಟುಡೇಯನ್ನು ನಿಷೇಧಿಸಿದ ಕೆನಡಾ (Canada) ನಿರ್ಧಾರ ಆಶ್ಚರ್ಯ ತಂದಿದೆ. ವಾಕ್‌ ಸ್ವಾತಂತ್ರ್ಯದ ಬಗ್ಗೆ ಮಾತನಾಡುವ ಕೆನಡಾದ ಬೂಟಾಟಿಕೆಯನ್ನು ಇದು ತೋರಿಸುತ್ತದೆ ಎಂದು ಕಿಡಿಕಾರಿದರು.

    ಸಾಮಾಜಿಕ ಮಾಧ್ಯಮದ ಹ್ಯಾಂಡಲ್‌ಗಳು ಮತ್ತು ವೆಬ್‌ಸೈಟ್‌ ಅನ್ನು ನಿರ್ಬಂಧಿಸಲಾಗಿದೆ. ಕೆನಡಾದ ವೀಕ್ಷಕರಿಗೆ ಈ ವೆಬ್‌ಸೈಟ್‌ ಲಭ್ಯವಿಲ್ಲ ಎನ್ನುವುದನ್ನು ನಾವು ಅರ್ಥಮಾಡಿಕೊಂಡಿದ್ದೇವೆ. ಜೈಶಂಕರ್‌ ಸುದ್ದಿಗೋಷ್ಠಿ ನಡೆಸಿದ ಕೆಲ ಗಂಟೆಯಲ್ಲಿ ಕೆನಡಾ ಈ ನಿರ್ಧಾರ ಕೈಗೊಂಡಿದೆ ಎಂದು ದೂರಿದರು.

    ಎಸ್‌ ಜೈಶಂಕರ್‌ ಅವರು ಸುದ್ದಿಗೋಷ್ಠಿಯಲ್ಲಿ, ಯಾವುದೇ ನಿರ್ದಿಷ್ಟ ಪುರಾವೆಗಳಿಲ್ಲದೆ ನಮ್ಮ ಮೇಲೆ ಕೆನಡಾ ಆರೋಪಗಳನ್ನು ಮಾಡುತ್ತಿದೆ. ಭಾರತೀಯ ರಾಜತಾಂತ್ರಿಕರ ಮೇಲೆ ಕೆನಡಾ ಕಣ್ಗಾವಲು ಇರಿಸಿದೆ. ಕೆನಡಾದಲ್ಲಿ ಭಾರತ ವಿರೋಧಿ ವ್ಯಕ್ತಿಗಳಿಗೆ ರಾಜಕೀಯವಾಗಿ ಆಶ್ರಯ ನೀಡಲಾಗಿದೆ ಎಂದು ವಾಗ್ದಾಳಿ ನಡೆಸಿದ್ದರು.

     

  • ಚೀನಾದ ತಾಳಕ್ಕೆ ಕುಣಿಯುತ್ತಿದ್ದರೂ ಮಾನವೀಯ ನೆರವು – ಭಾರತದ ಸಹಾಯಕ್ಕೆ ಧನ್ಯವಾದ ಹೇಳಿದ ಮಾಲ್ಡೀವ್ಸ್‌

    ಚೀನಾದ ತಾಳಕ್ಕೆ ಕುಣಿಯುತ್ತಿದ್ದರೂ ಮಾನವೀಯ ನೆರವು – ಭಾರತದ ಸಹಾಯಕ್ಕೆ ಧನ್ಯವಾದ ಹೇಳಿದ ಮಾಲ್ಡೀವ್ಸ್‌

    – ಅಗತ್ಯ ವಸ್ತುಗಳನ್ನು ಪೂರೈಸಲು ಒಪ್ಪಿಗೆ
    – ಭಾರತಕ್ಕೆ ಥ್ಯಾಂಕ್ಸ್‌ ಹೇಳಿದ ವಿದೇಶಾಂಗ ಸಚಿವ

    ನವದೆಹಲಿ: ಚೀನಾದ (China) ತಾಳಕ್ಕೆ ಕುಣಿಯುತ್ತಿದ್ದರೂ ದ್ವೀಪ ರಾಷ್ಟ್ರ ಮಾಲ್ಡೀವ್ಸ್‌ಗೆ (Maldives) ಭಾರತ (India) ನೆರವಿನ ಹಸ್ತ ನೀಡುವುದನ್ನು ಮುಂದುವರಿಸಿದ್ದು ಅಗತ್ಯ ವಸ್ತುಗಳನ್ನು ಪೂರೈಸಲು ಒಪ್ಪಿಕೊಂಡಿದೆ.

    ಭಾರತ ಮತ್ತು ಮಾಲ್ಡೀವ್ಸ್‌ ನಡುವಿನ ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಅಡಿಯಲ್ಲಿ 2024-2025 ರ ಅವಧಿಯಲ್ಲಿ ಸರ್ಕಾರವು ಮೊಟ್ಟೆ, ಆಲೂಗಡ್ಡೆ, ಈರುಳ್ಳಿ, ಅಕ್ಕಿ, ಗೋಧಿ, ಹಿಟ್ಟು, ಸಕ್ಕರೆ, ಧಾನ್ಯ, ನದಿ ಮರಳನ್ನು ಒಳಗೊಂಡಂತೆ ಕೆಲವು ಪ್ರಮಾಣದ ಅಗತ್ಯ ವಸ್ತುಗಳನ್ನು ಮಾಲ್ಡೀವ್ಸ್‌ಗೆ ರಫ್ತು (Export) ಮಾಡಲು ಒಪ್ಪಿಗೆ ನೀಡಿದೆ.

    ಈ ವಸ್ತುಗಳ ರಫ್ತು 2024-25 ಅವಧಿಯಲ್ಲಿ ಅಸ್ತಿತ್ವದಲ್ಲಿರುವ ಅಥವಾ ಭವಿಷ್ಯದ ಯಾವುದೇ ನಿರ್ಬಂಧ/ನಿಷೇಧದಿಂದ ವಿನಾಯಿತಿ ಪಡೆಯುತ್ತದೆ. ಇದನ್ನೂ ಓದಿ: ಯಾವೊಬ್ಬ ಭಾರತೀಯ ಸೈನಿಕ ದೇಶದಲ್ಲಿ ಇರಕೂಡದು: ಮಾಲ್ಡೀವ್ಸ್‌ ಅಧ್ಯಕ್ಷ

    ಅನುಮತಿಸಲಾದ ನಿರ್ದಿಷ್ಟ ಪ್ರಮಾಣದಲ್ಲಿ ಭಾರತ ಆಲೂಗಡ್ಡೆ (21,513.08 ಟನ್), ಈರುಳ್ಳಿ (35,749.13 ಟನ್), ಅಕ್ಕಿ (1,24,218.36 ಟನ್), ಗೋಧಿ ಹಿಟ್ಟು (1,09,162.96 ಟನ್), ಸಕ್ಕರೆ (64,494.33 ಟನ್), ನದಿ ಮರಳು (ಒಂದು ಮಿಲಿಯನ್ ಟನ್) ರಫ್ತು ಮಾಡಲಿದೆ.

    ಭಾರತಕ್ಕೆ ಧನ್ಯವಾದ:
    ಭಾರತದ ನೆರವಿನ ಹಸ್ತಕ್ಕೆ ಮಾಲ್ಡೀವ್ಸ್‌ ಧನ್ಯವಾದ ಹೇಳಿದೆ. ಭಾರತದಿಂದ ಅಗತ್ಯ ಸರಕುಗಳನ್ನು ಆಮದು ಮಾಡಿಕೊಳ್ಳಲು ಒಪ್ಪಂದವನ್ನು ನವೀಕರಣಗೊಳಿಸಿದ್ದಕ್ಕೆ ವಿದೇಶಾಂಗ ಸಚಿವ ಎಸ್‌ ಜೈಶಂಕರ್‌ ಮತ್ತು ಭಾರತ ಸರ್ಕಾರಕ್ಕೆ ಧನ್ಯವಾದಗಳು. ಇದು ನಿಜವಾಗಿಯೂ ದೀರ್ಘಕಾಲದ ಸ್ನೇಹವನ್ನು ಸೂಚಿಸುತ್ತದೆ.

    ಎರಡು ದೇಶಗಳ ನಡುವಿನ ದ್ವಿಪಕ್ಷೀಯ ವ್ಯಾಪಾರ ಮತ್ತು ವಾಣಿಜ್ಯವನ್ನು ಮತ್ತಷ್ಟು ವಿಸ್ತರಿಸುವ ಬಲವಾದ ಬದ್ಧತೆಯನ್ನು ಇದು ಸೂಚಿಸುತ್ತದೆ ಎಂದು ಮಾಲ್ಡೀವ್ಸ್‌ ವಿದೇಶಾಂಗ ಸಚಿವ ಮೂಸಾ ಜಮೀರ್ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.  ಇದನ್ನೂ ಓದಿ: ಭಯೋತ್ಪಾದಕರನ್ನು ಬಿಡಲ್ಲ, ಪಾಕಿಸ್ತಾನಕ್ಕೆ ನುಗ್ಗಿ ಕೊಲ್ಲುತ್ತೇವೆ: ರಾಜನಾಥ್‌ ಸಿಂಗ್‌ ಎಚ್ಚರಿಕೆ

     

    ಈ ಪೋಸ್ಟ್‌ಗೆ ವಿದೇಶಾಂಗ ಸಚಿವ ಎಸ್‌ ಜೈಶಂಕರ್‌ ( S Jaishankar) ಪ್ರತಿಕ್ರಿಯಿಸಿ, ನಿಮಗೆ ಸ್ವಾಗತ. ಭಾರತ ತನ್ನ ನೆರೆ ರಾಷ್ಟ್ರಗಳಿಗೆ ಮೊದಲ ಆದ್ಯತೆ ನೀಡುತ್ತದೆ. ಸಾಗರ ನೀತಿಗಳಿಗೆ ದೃಢವಾಗಿ ಬದ್ಧವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

    1981ರಲ್ಲಿ ಭಾರತ ಮತ್ತು ಮಾಲ್ಡೀವ್ಸ್ ಮಧ್ಯೆ ವ್ಯಾಪಾರ ಒಪ್ಪಂದ ನಡೆದಿದೆ. ಭಾರತವು 2022 ರಲ್ಲಿ ಮಾಲ್ಡೀವ್ಸ್‌ನ ಎರಡನೇ ಅತಿದೊಡ್ಡ ವ್ಯಾಪಾರ ಪಾಲುದಾರನಾಗಿ ಹೊರಹೊಮ್ಮಿದರೆ 2023 ರಲ್ಲಿ ಅತಿ ದೊಡ್ಡ ಪಾಲುದಾರನಾಗಿ ಹೊರಹೊಮ್ಮಿದೆ.

    ಮಾಲ್ಡೀವ್ಸ್‌ನಿಂದ ಭಾರತ ಸ್ಕ್ರ್ಯಾಪ್ ಲೋಹಗಳು ಆಮದು ಮಾಡುತ್ತದೆ. ಆದರೆ ಮಾಲ್ಡೀವ್ಸ್‌ಗೆ ಭಾರತ ವಿವಿಧ ಎಂಜಿನಿಯರಿಂಗ್ ಮತ್ತು ಕೈಗಾರಿಕಾ ಉತ್ಪನ್ನಗಳು, ಔಷಧಗಳು, ರಾಡಾರ್ ಉಪಕರಣಗಳು, ಸಿಮೆಂಟ್, ಕೃಷಿ ಉತ್ಪನ್ನಗಳಾದ ಅಕ್ಕಿ, ಸಾಂಬಾರ ಪದಾರ್ಥಗಳು, ಹಣ್ಣುಗಳು, ತರಕಾರಿಗಳು ಮತ್ತು ಕೋಳಿ ಉತ್ಪನ್ನಗಳನ್ನು ರಫ್ತು ಮಾಡುತ್ತದೆ.

    ಶುಕ್ರವಾರದ ಪ್ರಕಟಣೆಯ ಪ್ರಕಾರ, ಮೊಟ್ಟೆ, ಆಲೂಗಡ್ಡೆ, ಈರುಳ್ಳಿ, ಸಕ್ಕರೆ, ಅಕ್ಕಿ, ಗೋಧಿ ಹಿಟ್ಟು ಮತ್ತು ಬೇಳೆಕಾಳುಗಳ ಕೋಟಾದಲ್ಲಿ 5% ರಷ್ಟು ಹೆಚ್ಚಳವಾಗಿದೆ.

     

  • ಗಾಜಾಕ್ಕೆ ಸೂಕ್ತ ಪರಿಹಾರ ಕ್ರಮದ ಅಗತ್ಯವಿದೆ: ಜೈಶಂಕರ್‌

    ಗಾಜಾಕ್ಕೆ ಸೂಕ್ತ ಪರಿಹಾರ ಕ್ರಮದ ಅಗತ್ಯವಿದೆ: ಜೈಶಂಕರ್‌

    ಕಂಪಾಲ (ಉಗಾಂಡಾ): ವಿದೇಶಾಂಗ ಸಚಿವ ಎಸ್. ಜೈಶಂಕರ್ (Jai Shankar) ಅವರು ಇಂದು ಉಗಾಂಡಾದ (Uganda) ಕಂಪಾಲಾದಲ್ಲಿ ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ (Ranil Wickremesinghe) ಮತ್ತು ಪ್ಯಾಲೆಸ್ತೀನ್ ವಿದೇಶಾಂಗ ಸಚಿವ ಡಾ.ರಿಯಾದ್ ಅಲ್-ಮಲಿಕಿ (Riyad al-Maliki) ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

    ಶುಕ್ರವಾರ ಆರಂಭವಾದ ಅಲಿಪ್ತ ಚಳವಳಿಯ (NAM) ಎರಡು ದಿನಗಳ ಶೃಂಗಸಭೆಯಲ್ಲಿ ಭಾರತವನ್ನು ಪ್ರತಿನಿಧಿಸಲು ಜೈಶಂಕರ್ ಉಗಾಂಡಾದ ರಾಜಧಾನಿ ಕಂಪಾಲಾದಲ್ಲಿದ್ದಾರೆ. ಈ ಕುರಿತು ತಮ್ಮ ಎಕ್ಸ್‌ ಪೋಸ್ಟ್‌ನಲ್ಲಿ ಬರೆದುಕೊಂಡಿರುವ ಜೈಶಂಕರ್ ಅವರು, ಡಾ. ರಿಯಾದ್ ಅಲ್-ಮಲಿಕಿ ಅವರನ್ನು ಭೇಟಿಯಾಗಲು ಸಂತೋಷವಾಯಿತು ಎಂದಿದ್ದಾರೆ. ಗಾಜಾದಲ್ಲಿ ನಡೆಯುತ್ತಿರುವ ಸಂಘರ್ಷದ ಕುರಿತು ಅವರೊಂದಿಗೆ ಸಮಗ್ರ ಚರ್ಚೆ ನಡೆಸಲಾಯಿತು. ಅವರು ಕೂಡ ಸಂಘರ್ಷದ ಮಾನವೀಯ ಮತ್ತು ರಾಜಕೀಯ ಆಯಾಮಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.

    ಮಾನವೀಯ ಬಿಕ್ಕಟ್ಟಿನಿಂದ ಜರ್ಜರಿತವಾಗಿರುವ ಗಾಜಾಕ್ಕೆ ಸೂಕ್ತ ಪರಿಹಾರ ಕ್ರಮದ ಅಗತ್ಯವಿದ್ದು, ಇದು ಯುದ್ಧ ಸಂತ್ರಸ್ತರಿಗೆ ತಕ್ಷಣದ ಪರಿಹಾರ ನೀಡುವಂತಿರಬೇಕು ಎಂದು ಜೈಶಂಕರ್‌ ತಿಳಿಸಿದ್ದಾರೆ. ಇದನ್ನೂ ಓದಿ: ಅಗ್ನಿ ತೀರ್ಥ ಕಡಲತೀರದಲ್ಲಿ ನರೇಂದ್ರ ಮೋದಿ ಪವಿತ್ರ ಸ್ನಾನ

    ಶ್ರೀಲಂಕಾ ಅಧ್ಯಕ್ಷ ರಾನಿಲ್ ವಿಕ್ರಮ್ ಸಿಂಗ್ ಅವರೊಂದಿಗೆ ದ್ವಿಪಕ್ಷೀಯ ಉಪಕ್ರಮಗಳ ಪ್ರಗತಿಯನ್ನು ಚರ್ಚಿಸಿದರು. ಕಂಪಲಾದಲ್ಲಿ ನಡೆದ NAM ಶೃಂಗಸಭೆಯ ಸಂದರ್ಭದಲ್ಲಿ ಶ್ರೀಲಂಕಾದ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರನ್ನು ಭೇಟಿಯಾಗಲು ಸಂತೋಷವಾಗಿದೆ ಎಂದು ಜೈಶಂಕರ್ ಅವರು ಪೋಸ್ಟ್ ಮಾಡಿದ್ದಾರೆ. ವಿದೇಶಿ ವಿನಿಮಯ ಮೀಸಲುಗಳ ತೀವ್ರ ಕೊರತೆಯಿಂದಾಗಿ 2022 ರಲ್ಲಿ ಶ್ರೀಲಂಕಾವು ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿತ್ತು. ದೇಶವು ಬಿಕ್ಕಟ್ಟನ್ನು ಎದುರಿಸುತ್ತಿರುವಾಗ ಭಾರತವು ತನ್ನ ‘ನೈಬರ್‌ಹುಡ್ ಫಸ್ಟ್’ ನೀತಿಗೆ ಅನುಗುಣವಾಗಿ ಸಾಲ ಸೌಲಭ್ಯಗಳು ಮತ್ತು ಕರೆನ್ಸಿ ಬೆಂಬಲದ ಮೂಲಕ ಬಹು ಆಯಾಮದ ಸಹಾಯವನ್ನು ನೀಡಿತು ಎಂದರು.

    ಒಟ್ಟಿನಲ್ಲಿ NAM ಶೃಂಗಸಭೆಯಲ್ಲಿ ಅತ್ಯುತ್ತಮ ವ್ಯವಸ್ಥೆಗಳಿಗಾಗಿ ಜೈಶಂಕರ್‌ ಅವರು ಧನ್ಯವಾದಗಳನ್ನು ತಿಳಿಸಿದರು. ಉಗಾಂಡಾದ ಅಧ್ಯಕ್ಷ ಸ್ಥಾನಕ್ಕೆ ಭಾರತದ ಸಂಪೂರ್ಣ ಬೆಂಬಲದ ಭರವಸೆ ನೀಡಿದರು. ಶ್ರೀಲಂಕಾ, ಪ್ಯಾಲೆಸ್ಟೇನ್‌ ಜೊತೆಗೆ ಬಹ್ರೇನ್, ಸರ್ಬಿಯಾ, ಬೊಲಿವಿಯಾ, ಅಜೆರ್ಬೈಜಾನ್ ಮತ್ತು ವೆನೆಜುವೆಲಾದ ತಮ್ಮ ಸಹವರ್ತಿಗಳೊಂದಿಗೆ ಕೂಡ ದ್ವಿಪಕ್ಷೀಯ ಸಭೆಗಳನ್ನು ನಡೆಸಿದರು.

  • ಮಿತ್ರ ಮೋದಿಯವರನ್ನು ರಷ್ಯಾದಲ್ಲಿ ನೋಡಲು ಹರ್ಷಿಸುತ್ತೇವೆ: ಪುಟಿನ್ ಆಹ್ವಾನ

    ಮಿತ್ರ ಮೋದಿಯವರನ್ನು ರಷ್ಯಾದಲ್ಲಿ ನೋಡಲು ಹರ್ಷಿಸುತ್ತೇವೆ: ಪುಟಿನ್ ಆಹ್ವಾನ

    ಮಾಸ್ಕೋ: ಪ್ರಧಾನಿ ನರೇಂದ್ರ ಮೋದಿಯವರನ್ನು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಆಹ್ವಾನಿಸಿದ್ದಾರೆ.

    ವಿದೇಶಾಂಗ ಸಚಿವ ಎಸ್.ಜೈಶಂಕರ್ (S. Jaishankar) ಅವರು ಸದ್ಯ ರಷ್ಯಾ ಪ್ರವಾಸದಲ್ಲಿದ್ದಾರೆ. ಪುಟಿನ್ ಅವರು ತಮ್ಮ ಅಧಿಕೃತ ನಿವಾಸದಲ್ಲಿ ಜೈಶಂಕರ್ ಅವರ ಜೊತೆ ಮಾತನಾಡುತ್ತಾ, ನಮ್ಮ ಆತ್ಮೀಯ ಮಿತ್ರರಾಗಿರುವ ನರೇಂದ್ರ ಮೋದಿಯವರನ್ನು ರಷ್ಯಾದಲ್ಲಿ ನೋಡಲು ನಾವು ಸಂತೋಷ ಪಡುತ್ತೇವೆ ಎಂದು ಹೇಳಿದ್ದಾರೆ.

    ನಮಗೆ ಪ್ರಧಾನಿ ಮೋದಿಯವರ (Narendra Modi) ನಿಲುವು ತಿಳಿದಿದೆ. ಅಲ್ಲದೆ ಈ ಬಗ್ಗೆ ಹಲವು ಬಾರಿ ಮಾತುಕತೆ ನಡೆಸಿದ್ದೇವೆ. ನಾನು ಅವರಿಗೆ ಉಕ್ರೇನ್‍ನ ಸ್ಥಿತಿಗತಿಯ ಬಗ್ಗೆ ವಿವರಿಸಿದ್ದೇನೆ. ಸಂಘರ್ಷವಿಲ್ಲದೆ ಶಾಂತಿಯ ಮೂಲಕ ಈ ಸಮಸ್ಯೆಯನ್ನು ಪರಿಹರಿಸಲು ಅವರ ಪ್ರಯತ್ನದ ಬಗ್ಗೆ ನನಗೆ ತಿಳಿದಿದೆ ಎಂದು ಪುಟಿನ್ ಹೇಳಿದರು. ಇದನ್ನೂ ಓದಿ: ಶಸ್ತ್ರಚಿಕಿತ್ಸೆ ವೇಳೆ ವೃದ್ಧೆಯ ತಲೆಗೆ 3 ಬಾರಿ ಪಂಚ್‌ ಕೊಟ್ಟ ವೈದ್ಯ- ಮುಂದೇನಾಯ್ತು?

    ಮೋದಿಯವರಿಗೆ ನನ್ನ ಶುಭಾಶಯಗಳನ್ನು ತಿಳಿಸಿ. ರಷ್ಯಾದಲ್ಲಿ ಭೇಟಿಯಾಗಲು ನಾವು ಕಾಯುತ್ತಿದ್ದೇವೆ ಎಂದು ದಯವಿಟ್ಟು ಅವರಿಗೆ ತಿಳಿಸಿ. ಹಾಗೆಯೇ ಭಾರತದಲ್ಲಿರುವ ನಮ್ಮ ಸ್ನೇಹಿತರಿಗೆ ನಾವು ಯಶಸ್ಸನ್ನು ಬಯಸುತ್ತೇವೆ ಎಂದು ಪುಟಿನ್ ಅವರು ಜೈಶಂಕರ್ ಗೆ ಹೇಳಿದರು.

    ಮಾತುಕತೆಯ ನಂತರ ಸಚಿವ ಲಾವ್ರೊವ್ ಅವರೊಂದಿಗೆ ಜಂಟಿ ಮಾಧ್ಯಮದಲ್ಲಿ ಕಾಣಿಸಿಕೊಂಡ ಜೈಶಂಕರ್, ಮುಂದಿನ ವರ್ಷ ವಾರ್ಷಿಕ ಶೃಂಗಸಭೆಗಾಗಿ ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಪುಟಿನ್ ಭೇಟಿಯಾಗುತ್ತಾರೆ ಎಂಬ ವಿಶ್ವಾಸವಿದೆ ಎಂದರು.

  • ದ್ವಿಪಕ್ಷೀಯ ಸಂಬಂಧಗಳು ಹಾಳಾಗಲು ಚೀನಾ ಕಾರಣ: ಜೈಶಂಕರ್

    ದ್ವಿಪಕ್ಷೀಯ ಸಂಬಂಧಗಳು ಹಾಳಾಗಲು ಚೀನಾ ಕಾರಣ: ಜೈಶಂಕರ್

    ಕೋಲ್ಕತ್ತಾ: ದ್ವಿಪಕ್ಷೀಯ ಸಂಬಂಧಗಳು ಹಾಳಾಗಲು ಚೀನಾ (China) ಕಾರಣವೇ ಹೊರತು ಭಾರತವಲ್ಲ (India) ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ (Jaishankar) ಹೇಳಿದ್ದಾರೆ.

    ಕೋಲ್ಕತ್ತಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಚಪ್ಪಾಳೆ ತಟ್ಟಲು ಎರಡು ಕೈಗಳು ಬೇಕಾಗುತ್ತವೆ. ಸಂಬಂಧ ಉಳಿಯಬೇಕಾದರೆ ಭಾರತದ ಒಂದು ಕೈ ಜೊತೆ ಚೀನಾ ಕೂಡ ನಂಬಿಕೆ ಇಡಬೇಕು. ಆಗ ಮಾತ್ರ ದ್ವಿಪಕ್ಷೀಯ ಸಂಬಂಧ ಸರಿಯಾದ ಮಾರ್ಗದಲ್ಲಿರುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಆನ್‍ಲೈನ್ ಶಾಪಿಂಗ್‍ನಲ್ಲಿ ಬೆಂಗಳೂರಿಗರೇ ಮುಂದು – ಸರಾಸರಿ ಖರೀದಿಯಲ್ಲಿ ಮುಂಬೈ ಫಸ್ಟ್

    ಎರಡೂ ದೇಶಗಳ ಸಂಬಂಧ ದೊಡ್ಡ ಶಕ್ತಿಯಾಗಿ ಹೊರಹೊಮ್ಮುವಾಗ ಸ್ಥಿರತೆಯನ್ನು ಬಯಸುತ್ತದೆ. ಆ ಸ್ಥಿರತೆಯನ್ನು ಕಾಯ್ದುಕೊಳ್ಳದ ಹಿನ್ನಲೆ ಭಾರತ ಮತ್ತು ಚೀನಾ ಸಂಬಂಧ ಹಳಸಲು ಕಾರಣವಾಗಿದೆ. ಎರಡು ದೇಶಗಳ ಸಂಬಂಧಗಳು ಪರಸ್ಪರ ತಿಳುವಳಿಕೆಯನ್ನು ಹೊಂದಿರಬೇಕು ಎಂಬುದನ್ನು ಚೀನಾ ಅರ್ಥಮಾಡಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.

    ಪ್ರಮುಖ ದೇಶಗಳ ನಡುವಿನ ಸಂಬಂಧಗಳು ಪರಸ್ಪರ ಆಸಕ್ತಿ, ಸೂಕ್ಷ್ಮತೆ ಮತ್ತು ಗೌರವವನ್ನು ಆಧರಿಸಿದ್ದಾಗ ಮಾತ್ರ ಅದು ಕೆಲಸ ಮಾಡುತ್ತದೆ. ಇದನ್ನು ಚೀನಾ ಅರ್ಥ ಮಾಡಿಕೊಂಡಿಲ್ಲ. ಗಡಿ ಪ್ರದೇಶಗಳಲ್ಲಿ ನಾವು ಕೆಲವು ಸಮಸ್ಯೆಗಳನ್ನು ಪರಿಹರಿಸಿದ್ದೇವೆ. ಎಲ್ಲಿ ಸಮಸ್ಯೆಗಳಿಲ್ಲ? ರಾಜತಾಂತ್ರಿಕತೆಯ ಮೂಲಕ ಬಗೆಹರಿಸಬೇಕು. ಅದನ್ನು ನಾವು ಎಂದಿಗೂ ಬಿಟ್ಟುಕೊಡುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಹಿಂದೂಗಳ ಪವಿತ್ರ ‘ಅಮರನಾಥ ಯಾತ್ರೆ’ ಆರಂಭ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]