Tag: jalalabad

  • ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ – 622 ಮಂದಿ ಸಾವು, 500ಕ್ಕೂ ಹೆಚ್ಚು ಜನರಿಗೆ ಗಾಯ

    ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ – 622 ಮಂದಿ ಸಾವು, 500ಕ್ಕೂ ಹೆಚ್ಚು ಜನರಿಗೆ ಗಾಯ

    • ಭೂಕಂಪದ ತೀವ್ರತೆಗೆ 3 ಹಳ್ಳಿಗಳು ಸಂಪೂರ್ಣ ನಾಶ

    ಕಾಬುಲ್‌: ಅಫ್ಘಾನಿಸ್ತಾನದಲ್ಲಿ (Afghanistan) ಭಾನುವಾರ ರಾತ್ರಿ (ಆ.31) ಸಂಭವಿಸಿದ 6.0 ತೀವ್ರತೆಯ ಭೂಕಂಪದಲ್ಲಿ (Earthquake) ಕನಿಷ್ಠ 622 ಮಂದಿ ಸಾವನ್ನಪ್ಪಿದ್ದು, 500ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

    ಸ್ಥಳೀಯ ಕಾಲಮಾನ ರಾತ್ರಿ 11:47ಕ್ಕೆ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದುವು ಆಗ್ನೇಯ ಅಫ್ಘಾನಿಸ್ತಾನದಲ್ಲಿ 160 ಕಿ.ಮೀ ಆಳ, 34.50N ಅಕ್ಷಾಂಶ ಮತ್ತು 70.81E ರೇಖಾಂಶದಲ್ಲಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ. ಇದನ್ನೂ ಓದಿ: ಸುನಾಮಿ ಎಂದರೇನು? ಭೂಕಂಪಕ್ಕೂ ಇದಕ್ಕೂ ಏನು ಸಂಬಂಧ?

    ಭೂಕಂಪದಿಂದ ಕುನಾರ್ ಪ್ರಾಂತ್ಯದ ಮೂರು ಹಳ್ಳಿಗಳು ಸಂಪೂರ್ಣವಾಗಿ ನೆಲಸಮಗೊಂಡಿವೆ. ಇನ್ನೂ ಹಲವಾರು ಹಳ್ಳಿಗಳಲ್ಲಿ ಭಾರೀ ಹಾನಿ ಸಂಭವಿಸಿದೆ. ಒಂದೇ ಗ್ರಾಮದಲ್ಲಿ 30 ಮಂದಿ ಸಾವಿಗೀಡಾಗಿದ್ದಾರೆ. ಸಾವುನೋವುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಫ್ಘಾನ್ ಆರೋಗ್ಯ ಸಚಿವಾಲಯ ವಕ್ತಾರ ಶರಫತ್ ಜಮಾನ್ ತಿಳಿಸಿದ್ದಾರೆ.

    ತೀವ್ರ ಹಾನಿಗೊಳಗಾದ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಇಲ್ಲಿಯವರೆಗೆ ಬೇರೆ ದೇಶಗಳು ರಕ್ಷಣಾ ಅಥವಾ ಪರಿಹಾರ ಕಾರ್ಯಗಳಿಗೆ ಬೆಂಬಲ ನೀಡಲು ಮುಂದೆ ಬಂದಿಲ್ಲ ಎಂದು ಅಫ್ಘಾನಿಸ್ತಾನದ ವಿದೇಶಾಂಗ ಕಚೇರಿಯ ವಕ್ತಾರರು ತಿಳಿಸಿದ್ದಾರೆ.

    ಪಾಕಿಸ್ತಾನ ಮತ್ತು ಉತ್ತರ ಭಾರತದ ಕೆಲವು ಪ್ರದೇಶಗಳಲ್ಲಿಯೂ ಭೂಕಂಪದ ಅನುಭವವಾಗಿದೆ. ದೆಹಲಿ ಎನ್‌ಸಿಆರ್ ಮತ್ತು ಇತರ ನಗರಗಳ ನಿವಾಸಿಗಳು ಕಂಪನದ ಅನುಭವದಿಂದ ಭಯದಿಂದ ಕಟ್ಟಡಗಳಿಂದ ಹೊರಗೆ ಓಡಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಹಿಮಾಚಲ ಪ್ರದೇಶ | ನಿರಂತರ ಹಿಮಸ್ಫೋಟದ ನಡುವೆಯೂ ಚಂಬಾದಲ್ಲಿ ಎರಡು ಬಾರಿ ಭೂಕಂಪನ

  • ಉತ್ತರ ಪ್ರದೇಶದ ಜಲಾಲಾಬಾದ್ ಪಟ್ಟಣಕ್ಕೆ ಪರಶುರಾಮಪುರಿ ಎಂದು ಮರುನಾಮಕರಣ

    ಉತ್ತರ ಪ್ರದೇಶದ ಜಲಾಲಾಬಾದ್ ಪಟ್ಟಣಕ್ಕೆ ಪರಶುರಾಮಪುರಿ ಎಂದು ಮರುನಾಮಕರಣ

    ಲಕ್ನೋ: ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲೆಯ ಜಲಾಲಾಬಾದ್ ಪಟ್ಟಣವನ್ನು `ಪರಶುರಾಮಪುರಿ’ ಎಂದು ಮರುನಾಮಕರಣ ಮಾಡಲಾಗಿದೆ.ಇದನ್ನೂ ಓದಿ: ವಿಧಾನ ಪರಿಷತ್‌ನಲ್ಲಿ ಬಾಲ್ಯವಿವಾಹ, ದೇವದಾಸಿ ಪದ್ಧತಿ ನಿಷೇಧ ಕಾಯ್ದೆ ಪಾಸ್

    ಈ ಕುರಿತು ಉತ್ತರ ಪ್ರದೇಶದ ಮುಖ್ಯ ಕಾರ್ಯದರ್ಶಿ ಅವರು ಹೆಸರು ಬದಲಾಯಿಸುವ ವಿಚಾರವಾಗಿ ಗೃಹ ಸಚಿವಾಲಯಕ್ಕೆ ಪ್ರಸ್ತಾವನೆ ಸಲ್ಲಿಸಿ, ಅನುಮೋದಿಸುವಂತೆ ಒತ್ತಾಯಿಸಿ ಪತ್ರದಲ್ಲಿ ಉಲ್ಲೇಖಿಸಿದ್ದರು. ಸದ್ಯ ಗೃಹ ಸಚಿವ ಅಮಿತ್ ಶಾ ಅವರು ಪಟ್ಟಣದ ಮರುನಾಮಕರಣಕ್ಕೆ ಅನುಮೋದನೆ ನೀಡಿದ್ದಾರೆ.

    ಜಲಾಲಾಬಾದ್ ಪಟ್ಟಣವನ್ನು ಪರಶುರಾಮಪುರಿ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಯಾವುದೇ ಆಕ್ಷೇಪಣೆ ಇಲ್ಲ ಎಂದು ಗೃಹ ಸಚಿವಾಲಯ ತಿಳಿಸಿದೆ. ಈ ಬೇಡಿಕೆ ಬಹಳ ದಿನಗಳಿಂದ ಬಾಕಿ ಉಳಿದಿದ್ದು, ಈ ಕ್ರಮವನ್ನು ಬಿಜೆಪಿಯವರು ಶ್ಲಾಘಿಸಿದ್ದಾರೆ.

    ಮೂಲಗಳ ಪ್ರಕಾರ, ಯುಪಿ ಸರ್ಕಾರವು ಗೃಹ ಸಚಿವಾಲಯಕ್ಕೆ ಸಲ್ಲಿಸಿದ ಪತ್ರದಲ್ಲಿ, ಜಲಾಲಾಬಾದ್ ಪಟ್ಟಣವು ದೈವಿಕ ಸಂತ ಭಗವಾನ್ ಪರಶುರಾಮರ ಜನ್ಮಸ್ಥಳ ಎಂದು ಕರೆಯಲ್ಪಡುತ್ತಿತ್ತು. ಈ ಪ್ರದೇಶದಲ್ಲಿ ಪರಶುರಾಮರ ಪ್ರಾಚೀನ ದೇವಾಲಯವಿತ್ತು ಎಂದು ತಿಳಿಸಿತ್ತು.ಇದನ್ನೂ ಓದಿ: ಅಗ್ನಿ 5 ಖಂಡಾಂತರ ಕ್ಷಿಪಣಿ ಪರೀಕ್ಷೆ ಯಶಸ್ವಿ