– ಶಿವರಾಜ್‌ಕುಮಾರ್‌ಗೆ ಸೊಂಡಿಲೆತ್ತಿ ಸೆಲ್ಯೂಟ್ ಮಾಡಿದ ಧನಂಜಯ
ಮೈಸೂರು: ಗುರುವಾರ ನಡೆದ ಮೈಸೂರು ದಸರಾ (Mysuru Dasara) ಮೆರವಣಿಗೆಯಲ್ಲಿ ನಟ ಶಿವರಾಜ್ ಕುಮಾರ್ (Shivarajkumar) ತಮಟೆ ಸದ್ದಿಗೆ ಭರ್ಜರಿ ಸ್ಟೆಪ್ ಹಾಕಿದ್ದಾರೆ.
ದಸರಾ ಜಂಬೂ ಸವಾರಿ ಮೆರವಣಿಗೆ ವೀಕ್ಷಣೆ ಮಾಡಲು ಹೈ ಸರ್ಕಲ್ ಬಳಿಯಿರುವ ಖಾಸಗಿ ಹೋಟೆಲ್ ಮುಂಭಾಗ ಶಿವರಾಜ ಕುಮಾರ್ ಕುಟುಂಬ ಸಮೇತ ಕುಳಿತಿದ್ದರು. ಆಗ ಮೆರವಣಿಗೆಯಲ್ಲಿ ಸಾಗಿ ಬಂದ ತಮಟೆಯ ಟೀಂನ ಸದ್ದಿಗೆ ಖುಷಿಯಿಂದಲೇ ತಾವು ಕುಳಿತಿದ್ದ ಜಾಗದಲ್ಲೇ ಎದ್ದು ನಿಂತು ಸ್ಟೆಪ್ ಹಾಕಿದರು. ಇದನ್ನೂ ಓದಿ: ಚಿತ್ರಗಳಲ್ಲಿ ಮೈಸೂರು ಜಂಬೂಸವಾರಿ ನೋಡಿ
ಇದೇ ವೇಳೆ ಮೆರವಣಿಗೆಯಲ್ಲಿ ಸಾಗಿ ಬಂದ ಧನಂಜಯ ಆನೆ ಶಿವರಾಜ್ ಕುಮಾರ್‌ಗೆ ಸೆಲ್ಯೂಟ್ ಮಾಡಿತು.
ಮೈಸೂರು ದಸರಾ ಜಂಬೂ ಸವಾರಿಯು ಗುರುವಾರ ಅದ್ಧೂರಿಯಾಗಿ ನೆರವೇರಿದೆ. ಸತತ 6ನೇ ಬಾರಿಗೆ ಚಿನ್ನದಂಬಾರಿ ಹೊತ್ತು ಅಭಿಮನ್ಯು ಯಶಸ್ವಿಯಾಗಿ ಜಂಬೂಸವಾರಿ ನಡೆಸಿಕೊಟ್ಟಿದ್ದಾನೆ. ಲಕ್ಷಾಂತರ ಜನರು ವಿಶ್ವವಿಖ್ಯಾತ ದಸರಾವನ್ನು ಕಣ್ತುಂಬಿಕೊಂಡಿದ್ದಾರೆ. ಇದನ್ನೂ ಓದಿ: ಮೈಸೂರು ದಸರಾ ಜಂಬೂಸವಾರಿಗೆ ಚಾಲನೆ
ತುಮಕೂರು: ತುಮಕೂರಿನ ಎರಡನೇ ವರ್ಷದ ದಸರಾ (Tumakuru Dasara) ವಿಜೃಂಭಣೆಯಿಂದ ನಡೆಯಿತು. ಅಂಬಾರಿ ಹೊತ್ತ ಆನೆ ಶ್ರೀರಾಮ ಶಾಂತತೆಯಿಂದ ಹೆಜ್ಜೆ ಹಾಕಿ ಎಲ್ಲರ ಕಣ್ಮನ ಸೆಳೆಯಿತು.
ಮಧ್ಯಾಹ್ನ 12 ಗಂಟೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ (G Parameshwar) ನಂದಿ ಧ್ವಜಕ್ಕೆ ಪೂಜೆ ನೆರವೇರಿಸುವ ಮೂಲಕ ದಸರಾ ಮೆರವಣಿಗೆಗೆ ಚಾಲನೆ ನೀಡಿದರು. ವಿವಿಧ ಕಲಾತಂಡಗಳು, 50ಕ್ಕೂ ಹೆಚ್ಚು ದೇವರುಗಳು, ಪೊಲೀಸ್ ಕುದುರೆ ಸವಾರಿ, ನಾಟಿ ಎತ್ತುಗಳ ಮೆರವಣಿಗೆಯು ನಗರದ ಬಿಜಿಎಸ್ (ಟೌನ್ ಹಾಲ್ ವೃತ್ತ) ವೃತ್ತದಿಂದ ಪ್ರಾರಂಭಗೊಂಡಿತು. ಇದನ್ನೂ ಓದಿ: 5 ವರ್ಷದ ಬಳಿಕ ಭಾರತ, ಚೀನಾ ಮಧ್ಯೆ ನೇರ ವಿಮಾನ ಸೇವೆ ಆರಂಭ
ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿ (Jamboo Savari) ವೀಕ್ಷಣೆ ವೇಳೆ ನೂಕುನುಗ್ಗಲು ಉಂಟಾಗಿ ಯುವತಿ ಅಸ್ವಸ್ಥಗೊಂಡಿರುವ ಘಟನೆ ಮೈಸೂರಿನಲ್ಲಿ (Mysuru) ನಡೆದಿದೆ.
ಜಂಬೂಸವಾರಿ ಕೆಆರ್ ಆಸ್ಪತ್ರೆ ಬಳಿ ತಲುಪುತ್ತಿದ್ದಂತೆ ತಾಯಿ ಚಾಮುಂಡೇಶ್ವರಿಯನ್ನು ಕಣ್ತುಂಬಿಕೊಳ್ಳಲು ಭಾರೀ ಸಂಖ್ಯೆಯಲ್ಲಿ ಭಕ್ತರು ಸೇರಿದ್ದರು. ಈ ವೇಳೆ ತಳ್ಳಾಟ-ನೂಕಾಟ ಉಂಟಾಗಿ ಯುವತಿ ಅಸ್ವಸ್ಥಗೊಂಡಿದ್ದಾಳೆ. ಇದನ್ನೂ ಓದಿ: ಶಿವಮೊಗ್ಗ ದಸರಾ | ಜಂಬೂ ಸವಾರಿಗೆ ಅದ್ದೂರಿ ಚಾಲನೆ
ಕೂಡಲೇ ಅಸ್ವಸ್ಥಗೊಂಡ ಯುವತಿಯನ್ನು ಬ್ಯಾರಿಕೇಡ್‌ನಿಂದ ಆಚೆ ತಂದ ಪೊಲೀಸರು ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಿದ್ದಾರೆ. ಇದನ್ನೂ ಓದಿ: ಮೈಸೂರು ದಸರಾ ಜಂಬೂಸವಾರಿಗೆ ಚಾಲನೆ
ಶಿವಮೊಗ್ಗ: ನಗರದಲ್ಲಿ (Shivamogga) ದಸರಾ (Dasara) ಜಂಬೂ ಸವಾರಿ ಆರಂಭಗೊಂಡಿದೆ. ಜಂಬೂ ಸವಾರಿಗೆ (Jamboo Savari) ಸಚಿವ ಮಧು ಬಂಗಾರಪ್ಪ ಚಾಲನೆ ನೀಡಿದರು. ನಾಡದೇವಿ ಚಾಮುಂಡೇಶ್ವರಿಯನ್ನು ಬೆಳ್ಳಿ ಅಂಬಾರಿಯಲ್ಲಿ ಹೊತ್ತು ಸಾಗರ ಆನೆ ಮೆರವಣಿಗೆಯಲ್ಲಿ ಸಾಗಿತು.
ಇದಕ್ಕೂ ಮೊದಲು ಶಿವಪ್ಪನಾಯಕ ಅರಮನೆ ಮುಂಭಾಗ ನಂದಿ ಕೋಲಿಗೆ ಸಚಿವ ಮಧು ಬಂಗಾರಪ್ಪ, ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಪೂಜೆ ಸಲ್ಲಿಸಿದರು. ಬಳಿಕ ದೇವಿಗೆ ಪುಷ್ಪ ನಮನ ಸಲ್ಲಿಸಿದರು. ಇದನ್ನೂ ಓದಿ: ಮೈಸೂರು ದಸರಾ ಜಂಬೂಸವಾರಿಗೆ ಚಾಲನೆ
ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ವಿಶ್ವವಿಖ್ಯಾತ ದಸರಾ (Mysuru Dasara) ಸಂಭ್ರಮ ಮನೆ ಮಾಡಿದೆ. ಸರ್ವಾಲಂಕಾರ ಭೂಷಿತಳಾಗಿ ತಾಯಿ ಚಾಮುಂಡೇಶ್ವರಿ ವಿರಾಜಮಾನಳಾಗುವ ಚಿನ್ನದಂಬಾರಿಯನ್ನು ಇಂದು ಗಜಪಡೆಯ ಕ್ಯಾಪ್ಟನ್ ಅಭಿಮನ್ಯು (Abhimanyu) ಹೊತ್ತು ಸಾಗಲಿದ್ದಾನೆ.
ಸತತ 6ನೇ ಬಾರಿಗೆ ಅಂಬಾರಿಯನ್ನು ಹೊತ್ತು ಅಭಿಮನ್ಯು ಜಂಬೂಸವಾರಿ (Jamboo Savari) ಮೆರವಣಿಗೆಯಲ್ಲಿ ಸಾಗಲಿದ್ದಾನೆ. ಅರ್ಜುನ ನಿವೃತ್ತಿ ಬಳಿಕ 2020ರಿಂದ ಅಂಬಾರಿ ಹೊರುವ ಜವಾಬ್ದಾರಿಯನ್ನು ಅಭಿಮನ್ಯು ನಿಭಾಯಿಸುತ್ತಿದ್ದಾನೆ. ಇದನ್ನೂ ಓದಿ: ಅರಮನೆ ನಗರಿಯಲ್ಲಿ ದಸರಾ ವೈಭವ – ವಿಶ್ವವಿಖ್ಯಾತ ಜಂಬೂಸವಾರಿಗೆ ಕ್ಷಣಗಣನೆ
ದಸರಾ ಗಜಪಡೆಯ ಕ್ಯಾಪ್ಟನ್ ಕೂಲ್ ಎಂದೇ ಅಭಿಮನ್ಯು ಖ್ಯಾತಿ ಹೊಂದಿದ್ದಾನೆ. ಗುರುವಾರ ನಡೆಯಲಿರುವ ಜಂಬೂಸವಾರಿ ಮೆರವಣಿಯಲ್ಲಿ ಅಂಬಾರಿ ಹೊರುವ ಅಭಿಮನ್ಯುವನ್ನು ಮಾವುತ ವಸಂತ ಮುನ್ನಡೆಸಲಿದ್ದಾರೆ. ಯಶಸ್ವಿಯಾಗಿ ಅಭಿಮನ್ಯು ಈ ಬಾರಿಯೂ ಜವಾಬ್ದಾರಿ ನಿರ್ವಹಿಸುವ ವಿಶ್ವಾಸವನ್ನು ಅರಣ್ಯ ಇಲಾಖೆ ವ್ಯಕ್ತಪಡಿಸಿದೆ.
ಅಭಿಮನ್ಯು ಇತಿಹಾಸ ಏನು?
1977 ರಲ್ಲಿ ಕೊಡಗು ಜಿಲ್ಲೆಯ ಹೆಬ್ಬಾಳ ಅರಣ್ಯ ಪ್ರದೇಶದಲ್ಲಿ ಅಭಿಮನ್ಯು ಆನೆಯನ್ನು ಸೆರೆಹಿಡಿಯಲಾಯಿತು. ಕಳೆದ 25 ವರ್ಷಗಳಿಂದ ದಸರಾದಲ್ಲಿ ಭಾಗಿಯಾಗುತ್ತಿದ್ದಾನೆ. 2015 ರ ವರೆಗೂ ಕರ್ನಾಟಕ ವಾದ್ಯಗೋಷ್ಠಿಯವರು ಕುಳಿತುಕೊಳ್ಳುವ ಗಾಡಿ ಎಳೆಯುವ ಕೆಲಸ ನಿರ್ವಹಣೆ ಮಾಡಿದ್ದಾನೆ. ಇದನ್ನೂ ಓದಿ: ವಿಜಯ ದಶಮಿ| ದುರ್ಗಾ ನಮಸ್ಕಾರ ಪೂಜೆ ಮಾಡೋದರ ಉದ್ದೇಶ ಏನು?
ಕಳೆದ 5 ವರ್ಷಗಳಿಂದ ದಸರಾ ಜಂಬೂಸವಾರಿಯಲ್ಲಿ ಅಂಬಾರಿ ಹೊರುವ ಜವಾಬ್ದಾರಿಯನ್ನು ಅಭಿಮನ್ಯು ನಿರ್ವಹಿಸಿದ್ದಾನೆ. ಕಾಡಾನೆ ಪಳಗಿಸುವ ಸಾಮರ್ಥ್ಯ ಹೊಂದಿರುವ ಆನೆ. ಸುಮಾರು 200 ಕ್ಕೂ ಹೆಚ್ಚು ಕಾಡಾನೆ, 80 ಹುಲಿ ಯಶಸ್ವಿ ಕಾರ್ಯಚರಣೆ ನಡೆಸಿದ್ದಾನೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಜಂಬೂಸವಾರಿಗೆ (Mysuru Dasara Jamboo Savari) ಒಂದು ದಿನ ಮಾತ್ರ ಬಾಕಿ ಇದ್ದು, ಅರಮನೆಯಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ.
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಜಂಬೂಸವಾರಿಗೆ ಕೌಂಟ್ ಡೌನ್ ಶುರುವಾಗಿದೆ. ಇದಕ್ಕೂ ಮುನ್ನ ಅಂಬಾವಿಲಾಸ ಅರಮನೆ ಒಳಭಾಗ ಅಂತಿಮ ಹಂತದ ಸಿದ್ಧತೆಗಳು ಭರದಿಂದ ಸಾಗಿದ್ದು, ನಾಳೆಯ ಜಂಬೂಸವಾರಿ ವೀಕ್ಷಣೆ ಸೇರಿದಂತೆ ನಾಳಿನ ಎಲ್ಲಾ ಕಾರ್ಯಕ್ರಮಗಳಿಗೆ ಸಿದ್ಧತೆಯಾಗಿದೆ. ಇದನ್ನೂ ಓದಿ: ಮುಂದಿನ ವರ್ಷವೂ ಯಾಕೆ ಪುಷ್ಪಾರ್ಚನೆ ಮಾಡಬಾರದು? Hope So ನಾನೇ ಮಾಡಬಹುದು: ಸಿಎಂ
ಈ ಬಾರಿ ಅಂಬಾವಿಲಾಸ ಅರಮನೆ ಆವರಣದಲ್ಲಿ 48 ಸಾವಿರ ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ಕಳೆದ ವರ್ಷ 60 ಸಾವಿರಕ್ಕೂ ಹೆಚ್ಚು ಜನರಿಗೆ ದಸರಾ ವೀಕ್ಷಣೆಗೆ ಅಂಬಾವಿಲಾಸ ಅರಮನೆ ಆವರಣದಲ್ಲಿ ಅವಕಾಶ ನೀಡಲಾಗಿತ್ತು. ಆದರೆ ಇತ್ತೀಚಿನ ಕೆಲ ಕಾಲ್ತುಳಿತ ಅವಘಢ ಹಿನ್ನೆಲೆ ಸರ್ಕಾರ ಮತ್ತು ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ವೀಕ್ಷಕರ ಸಂಖ್ಯೆ ಇಳಿಕೆ ಮಾಡಿದೆ. ಅಲ್ಲದೇ ಒಳಭಾಗ ಪೊಲೀಸ್ ಭದ್ರತೆ ಕೂಡ ಹೆಚ್ಚು ಮಾಡಿದೆ. ಇನ್ನೂ ಪಾಸ್ ಇದ್ದವರಿಗೆ ಮಾತ್ರ ಅರಮನೆ ಒಳಭಾಗ ದಸರಾ ವೀಕ್ಷಣೆಗೆ ಅವಕಾಶ ನೀಡಿಲಾಗಿದೆ. ಸಿಎಂ ಸೇರಿದಂತೆ ಹಲವು ಕ್ಯಾಬಿನೆಟ್ ಸಚಿವರು ಕೂಡ ಜಂಬೂಸವಾರಿಯಲ್ಲಿ ಭಾಗಿಯಾಗಲಿದ್ದಾರೆ. ಗಣ್ಯರು, ಅಧಿಕಾರಿಗಳು, ಸಾರ್ವಜನಿಕರು, ರಾಜಮನೆತನದ ಕುಟುಂಬಸ್ಥರು, ನ್ಯಾಯಾಧೀಶರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ಕರೂರ್ ಕಾಲುಳ್ತಿತ ದುರಂತ; 2 ವಾರ ತಮಿಳುನಾಡು ಪ್ರವಾಸ ರದ್ದಗೊಳಿಸಿದ ವಿಜಯ್
ಇನ್ನೂ ನಾಳೆ ಬೆಳಗ್ಗೆ 11 ಗಂಟೆ ನಂತರ ಪಾಸ್ ಹೊಂದಿರುವ ಸಾರ್ವಜನಿಕರಿಗೆ ಅರಮನೆ ಪ್ರವೇಶ ನೀಡಲಿದ್ದಾರೆ. ಈಗಾಗಲೇ ನಗರ ವ್ಯಾಪ್ತಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ನಗರದಾದ್ಯಂತ 9 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆಯಾಗಿದ್ದು, ಅಂಬಾರಿ ಸಾಗುವ ರಾಜ ಮಾರ್ಗ ಸೇರಿದಂತೆ ನಗರ ವ್ಯಾಪ್ತಿ ಹೆಚ್ಚಿನ ಸಿಸಿಟಿವಿ ಅಳವಡಿಕೆ ಮಾಡಲಾಗಿದ್ದು, ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಅಲ್ಲದೇ ಅಂಬಾರಿ ಸಾಗುವ ಮಾರ್ಗದುದ್ದಕ್ಕೂ ರಸ್ತೆ ಬದಿ ತಾತ್ಕಾಲಿಕ ತಡೆಗೋಡೆ ನಿರ್ಮಾಣ ಮಾಡಿದ್ದು, ಅಂಬಾರಿ ಸಾಗುವಾಗ ಜನ ದಾಟಿ ರಸ್ತೆಗೆ ಬಾರದಂತೆ ಕ್ರಮವಹಿಸಲಾಗಿದೆ. ಇದನ್ನೂ ಓದಿ: 1 ಪಂದ್ಯದ ಆಟದಿಂದ ಕೊಹ್ಲಿ, ಸಾಲ್ಟ್ ಹಿಂದಿಕ್ಕಿ ಟಿ20ಯಲ್ಲಿ ಅಭಿಷೇಕ್ ಶರ್ಮಾ ವಿಶ್ವದಾಖಲೆ
ಶಿವಮೊಗ್ಗ: ನಗರದಲ್ಲಿ ಸಂಭ್ರಮದ ದಸರಾ ಆಚರಣೆ ನಡೆಯುತ್ತಿದ್ದು, ಜಂಬೂಸವಾರಿಯಲ್ಲಿ ಭಾಗವಹಿಸಲು ಸಕ್ರೆಬೈಲಿನಿಂದ ಗಜಪಡೆ ಆಗಮಿಸಿದೆ.
ಮೂರು ಆನೆಗಳು ಶಿವಮೊಗ್ಗಕ್ಕೆ ಆಗಮಿಸಿದ್ದು, ಗಜಪಡೆಗೆ ಶಾಸಕ ಎಸ್.ಎನ್ ಚನ್ನಬಸಪ್ಪ ಹಾಗೂ ಆಯುಕ್ತ ಮಾಯಣ್ಣಗೌಡ ಆರತಿ ಎತ್ತಿ ಸ್ವಾಗತ ಕೋರಿದ್ದಾರೆ. ನಗರದ ವಾಸವಿ ಶಾಲೆ ಆವರಣದಲ್ಲಿ ಆನೆಗಳಿಗೆ ತಂಗಲು ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ರಾಜ್ಯದ 2ನೇ ದೊಡ್ಡ ದಸರಾ ಖ್ಯಾತಿಯ ಶಿವಮೊಗ್ಗ ದಸರಾಕ್ಕೆ ಚಾಲನೆ
ಶಿವಮೊಗ್ಗ ನಗರದಲ್ಲಿ ಗಜಪಡೆ ತಾಲೀಮು ಆರಂಭಿಸಿವೆ. ದಸರಾದ ಕೊನೆಯ ದಿನ ಅದ್ದೂರಿ ಜಂಬೂಸವಾರಿ ನಡೆಯಲಿದೆ. ಈ ಭಾರಿಯೂ ಸಾಗರ್ ಆನೆ ಅಂಬಾರಿ ಹೋರಲಿದೆ. ಸಾಗರ್‍ಗೆ ಬಾಲಣ್ಣ ಮತ್ತು ಬಹದ್ದೂರ್ ಆನೆಗಳು ಸಾಥ್ ನೀಡಲಿವೆ. 650 ಕೆಜಿ ಬೆಳ್ಳಿಯ ಅಂಬಾರಿಯಲ್ಲಿ ನಾಡದೇವಿ ಚಾಮುಂಡಿಯನ್ನು ಕೂರಿಸಿ ಮೆರವಣಿಗೆ ಮಾಡಲಾಗುತ್ತದೆ.
ಬೆಂಗಳೂರು: ಈ ಬಾರಿಯೂ ಅಭಿಮನ್ಯು ದಸರಾ (Mysuru Dasara) ಅಂಬಾರಿ ಹೊರಲಿದ್ದು, ಆಗಸ್ಟ್ 4ರಂದು ಹುಣಸೂರು ಬಳಿಯ ವೀರನಹೊಸಳ್ಳಿಯಿಂದ ವಿದ್ಯುಕ್ತವಾಗಿ ಗಜಪಯಣಕ್ಕೆ ಚಾಲನೆ ನೀಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ (Eshwar Khandre) ತಿಳಿಸಿದ್ದಾರೆ.
ವಿಕಾಸಸೌಧದಲ್ಲಿಂದು 2025ನೇ ಸಾಲಿನ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಒಟ್ಟು 14 ಆನೆಗಳ ಪೈಕಿ 9 ಆನೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ಅವರು, 2020ರಿಂದ ವಿಜಯ ದಶಮಿಯ ದಿನದಂದು ಜಂಬೂಸವಾರಿಯಲ್ಲಿ ನಾಡದೇವಿ ಚಾಮುಂಡೇಶ್ವರಿ ವಿಗ್ರಹವಿರುವ ಚಿನ್ನದ ಅಂಬಾರಿ ಹೊರುತ್ತಿರುವ ಅಭಿಮನ್ಯುವೇ ಕ್ಯಾಪ್ಟನ್ ಆಗಲಿದ್ದಾನೆ ಎಂದು ತಿಳಿಸಿದರು. ಇದನ್ನೂ ಓದಿ: Madikeri | ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಶವ ಪತ್ತೆ – ಕೊಲೆ ಶಂಕೆ, ಕುಟುಂಬಸ್ಥರಿಂದ ದೂರು
ಈ ಬಾರಿಯ ಜಂಬೂಸವಾರಿಯಲ್ಲಿ ಮತ್ತಿಗೋಡು ಶಿಬಿರದ ಭೀಮ (25 ವರ್ಷ), ದುಬಾರೆ ಶಿಬಿರದ ಕಂಜನ್ (24), ಧನಂಜಯ (44) ಮತ್ತು ಪ್ರಶಾಂತ್ (53), ಬಳ್ಳೆ ಶಿಬಿರದ ಮಹೇಂದ್ರ (42), ದೊಡ್ಡಹರವೆ ಶಿಬಿರದ ಏಕಲವ್ಯ (40) ಗಂಡಾನೆಗಳು ಹಾಗೂ ದುಬಾರೆ ಶಿಬಿರದ ಕಾವೇರಿ (45) ಹಾಗೂ ಬಳ್ಳೆಯ ಲಕ್ಷ್ಮೀ (53) ಹೆಣ್ಣಾನೆಗಳು ಮೊದಲ ಹಂತದಲ್ಲಿ ಮೈಸೂರಿಗೆ ಆಗಮಿಸಲಿವೆ ಎಂದು ತಿಳಿಸಿದರು. ಇದನ್ನೂ ಓದಿ: ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ `ಮಾಸ್ಟರ್ ಪ್ಲ್ಯಾನ್’ – ಕಾಮಗಾರಿಗೆ ಸರ್ಕಾರದಿಂದ 215 ಕೋಟಿ ಅನುಮೋದನೆ
ಮೈಸೂರು: ಐತಿಹಾಸಿಕ ಮೈಸೂರು ಜಂಬೂಸವಾರಿ (Jamboo Savari) ಯಶಸ್ವಿಯಾಗಿ ನೆರವೇರಿದೆ. 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ (Ambari) ನಾಡಿನ ಅಧಿದೇವತೆ ಚಾಮುಂಡೇಶ್ವರಿ ಲಕ್ಷ ಲಕ್ಷ ಮಂದಿಗೆ ದರ್ಶನ ಭಾಗ್ಯ ಕರುಣಿಸಿದ್ದಾರೆ. ಚಿನ್ನದ ಅಂಬಾರಿಯಲ್ಲಿ ವಿರಾಜಮಾನರಾಗಿದ್ದ ನಾಡದೇವತೆ ಕಂಡು ಲಕ್ಷಾಂತರ ಜನ ಪುನೀತರಾದರು. ನೀಲಿ ರೇಷ್ಮೆ ಸೀರೆ, ಹೂ ಅಲಂಕಾರದಲ್ಲಿ ಚಾಮುಂಡಿ ತಾಯಿ ನೋಡಲು ಎರಡು ಕಣ್ಣು ಸಾಲದಾಗಿತ್ತು.
ಶುಭ ಕುಂಭ ಲಗ್ನದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡಿದರು. ಬಳಿಕ ಐದನೇ ಬಾರಿಗೆ ಚಿನ್ನದ ಅಂಬಾರಿ ಹೊತ್ತ ಕ್ಯಾಪ್ಟನ್ ಅಭಿಮನ್ಯು ರಾಜಗಾಂಭೀರ್ಯದಿಂದ ಹೆಜ್ಜೆ ಹಾಕಿದ. ಮೈಸೂರು ಅರಮನೆ (Mysuru Palace) ಆವರಣದಿಂದ ಬನ್ನಿಮಂಟಪದವರೆಗೂ ಉತ್ಸವ ಮೂರ್ತಿ ಹೊತ್ತು ಗಜಪಡೆ ಹೆಜ್ಜೆ ಹಾಕಿತು. ನಿಶಾನೆ ಆನೆಯಾಗಿ ಧನಂಜಯ, ನೌಫತ್ ಆನೆಯಾಗಿ ಗೋಪಿ, ಕುಮ್ಕಿ ಆನೆಗಳಾಗಿ ಲಕ್ಷ್ಮಿ, ಹಿರಣ್ಯ ಆನೆಗಳು ಕ್ಯಾಪ್ಟನ್ ಅಭಿಮನ್ಯುಗೆ ಸಾಥ್ ನೀಡಿದವು.
ಅರಮನೆಯ ಉತ್ತರ ದಿಕ್ಕಿನಲ್ಲಿರುವ ಬಲರಾಮ ದ್ವಾರದ ಮೂಲಕ ರಾಜಬೀದಿಗೆ ಜಂಬೂಸವಾರಿ ಸಾಗಿತು. ಕೆಆರ್ ಸರ್ಕಲ್, ಬಂಬೂ ಬಜಾರ್, ಹೈವೇ ಸರ್ಕಲ್ ಮೂಲಕ ಸಾಗಿ ಬನ್ನಿ ಮಂಟಪ ತಲುಪಿತು. ಆಗಾಗ ಸುರಿಯುತ್ತಿದ್ದ ಮಳೆ ನಡುವೆಯೂ ದೇಶ ವಿದೇಶಗಳಿಂದ ಬಂದಿದ್ದ ಲಕ್ಷಾಂತರ ಮಂದಿ ಜಂಬೂಸವಾರಿ ನೋಡಲು ಕಿಕ್ಕಿರಿದು ಸೇರಿದ್ದರು.
ದಸರಾ ಉತ್ಸವಕ್ಕೆ ಕಲಾತಂಡಗಳ ಮೆರುಗು:
ಮೈಸೂರು ಅರಮನೆ ಆವರಣದಲ್ಲಿ ವಿವಿಧ ಸ್ತಬ್ಧಚಿತ್ರಗಳು, ಕಲಾ ತಂಡಗಳ ಮೆರವಣಿಗೆ ಸಾಗಿತ್ತು. ಮೆರವಣಿಗೆ ವೇಳೆ ಜೋರು ಮಳೆ ಬಂದರೂ ಜನರು ಕಲಾ ಸಂಸ್ಕೃತಿಯನ್ನು ಆಸ್ವಾದಿಸಿದರು. ಡೊಳ್ಳು ಕುಣಿತ, ಲಂಬಾಣಿ ನೃತ್ಯ, ಕೊಡವರ ಕುಣಿತ, ಗೊರವರ ಕುಣಿತ, ಪೂಜಾ ಕುಣಿತ, ವೀರಭದ್ರ ಕುಣಿತ, ನಂದಿ ಕೋಲು, ನವಿಲು ನೃತ್ಯ, ಬೀಸು ಕಂಸಾಳೆ, ಗಾರುಡಿ ಗೊಂಬೆ ಹೀಗೆ ಹತ್ತು ಹಲವು ಕಲಾತಂಡಗಳು ರಾಜ್ಯ ಕಲಾ ಸಂಸ್ಕೃತಿಯನ್ನು ಸಾರಿದವು. ಕೀಲು ಕುದುರೆ, ಹುಲಿ ವೇಷ, ಚಂಡೇ ವಾದನ, ಹಕ್ಕಿಪಿಕ್ಕಿ ನೃತ್ಯ, ದೊಣ್ಣೆ ವರಸೆಯಂತೂ ಕನ್ನಡ ನಾಡಿನ ವೈಭವವನ್ನು ಮತ್ತೆ ನೆನಪಿಸಿತು.
ಇನ್ನು ಸ್ತಬ್ಧಚಿತ್ರಗಳಲ್ಲಿ ಪ್ರಮುಖವಾಗಿ ಕೆಎಂಎಫ್‌ನ ಕ್ಷೀರೋತ್ಸವ, ವಿಜಯನಗರ ಸಾಮ್ರಾಜ್ಯದ ವೈಭವ ಸಾರುವ ಟ್ಯಾಬ್ಲೋ, ಮುರುಡೇಶ್ವರದ ಶಿವನ ಮೂರ್ತಿ, ಬೆಂಗಳೂರು ಗ್ರಾಮಾಂತರದ ಟ್ಯಾಬ್ಲೋ, ಬಾಗಲಕೋಟೆಯಿಂದ ರನ್ನನ ಕಾವ್ಯ ಗದಾಯುದ್ಧ ಟ್ಯಾಬ್ಲೋ ಸೇರಿದಂತೆ ಹಲವು ಸ್ತಬ್ಧಚಿತ್ರಗಳು ಎಲ್ಲರ ಗಮನ ಸೆಳೆಯಿತು.
ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ:
ಮೈಸೂರು ಜಂಬೂ ಸವಾರಿಗೆ ಚಾಲನೆ ನೀಡುವ ಮೊದಲು ಸಿಎಂ ಸಿದ್ದರಾಮಯ್ಯ (Siddaramaiah) ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದರು. ನಂದಿಧ್ವಜಕ್ಕೆ ಪೂಜೆ ನೆರವೇರಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆಶಿ ಈಡುಗಾಯಿ ಹೊಡೆದರು.
ನಂದಿಧ್ವಜ ಪೂಜೆ ಬಳಿಕ ಸಿಎಂ ಸಿದ್ದರಾಮಯ್ಯ ಮಾತನಾಡಿ, ನಾಡಿನ ಜನತೆಗೆ ದಸರಾ ಹಬ್ಬದ ಶುಭಾಶಯ ಕೋರಿದರು. ವಿಶೇಷವಾಗಿ ದುಷ್ಟಶಕ್ತಿಗಳ ಸಂಹಾರವಾಗಲಿ, ದುಷ್ಟಶಕ್ತಿಗಳ ವಿನಾಶವಾಗಲಿ ಎಂದರು. ಒಟ್ಟಿನಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) ಯಶಸ್ವಿಯಾಗಿ ನೆರವೇರಿತು. ಮೈಸೂರಿನಲ್ಲಿ ದೀಪಾಲಂಕಾರ 10 ದಿನಗಳ ಕಾಲ ಮುಂದುವರಿಯಲಿದೆ.
ಮೈಸೂರು: ದಸರಾ ಸಂಭ್ರಮ (Mysuru Dasara) ಮಹೋತ್ಸವದ ನಡುವೆ ಮೈಸೂರಿನಲ್ಲಿ ವರುಣ ಎಂಟ್ರಿ ಕೊಟ್ಟಿದ್ದಾನೆ. ಮಳೆ ನಡುವೆಯೂ ಜನರು ಉತ್ಸಾಹದಿಂದ ದಸರಾ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ.
ದಸರಾ ಹಬ್ಬದ ಕೊನೆಯ ದಿನ ವಿಜಯದಶಮಿಯಂದು ಜಂಬೂ ಸವಾರಿ (Jamboo Savari) ಕಣ್ತುಂಬಿಕೊಳ್ಳುವ ಸಲುವಾಗಿ ಮೈಸೂರು ಅರಮನೆಯ ಸುತ್ತಲೂ ಕಿಕ್ಕಿರಿದು ಜನ ಸೇರಿದ್ದಾರೆ. ಈ ವೇಳೆ ಮಳೆರಾಯ ಕೂಡ ಕೃಪೆ ತೋರಿದ್ದಾನೆ. ಮಳೆ ನಡುವೆಯೇ ಮೆರವಣಿಗೆ ಸಾಗುತ್ತಿದೆ. ಜಾನಪದ ಕಲಾ ತಂಡಗಳು, ಟ್ಯಾಬ್ಲೋಗಳು ಮಳೆಯಲ್ಲೇ ಮುಂದೆ ಸಾಗುತ್ತಿವೆ. ದಸರಾ ವೀಕ್ಷಣೆಗೆಂದು ಆಗಮಿಸಿರುವ ಜನರು ಸಹ ಮಳೆಯಲ್ಲೇ ಮೆರವಣಿಗೆ ವೀಕ್ಷಿಸುತ್ತಿದ್ದಾರೆ. ಇದನ್ನೂ ಓದಿ: ಮಡಿಕೇರಿ ದಸರಾಕ್ಕೆ ಕ್ಷಣಗಣನೆ – ದಶಮಂಟಪಗಳ ಪ್ರದರ್ಶನದ ವೀಕ್ಷಣೆಗೆ ದೂರದ ಊರುಗಳಿಂದ ಜನರು
ಅಂಬಾರಿ ಕಟ್ಟುವ ಜಾಗಕ್ಕೆ ಕ್ಯಾಪ್ಟನ್ ಅಭಿಮನ್ಯುವನ್ನು ಕರೆತರಲಾಗಿತ್ತು. ಮಳೆ ಹಿನ್ನೆಲೆ ಅಂಬಾರಿ ಕಟ್ಟುವ ಜಾಗದಿಂದ ಅಭಿಮನ್ಯುವನ್ನು ನೆರಳಿಗೆ ಕರೆದುಕೊಂಡು ಹೋಗಲಾಯಿತು. ಮಳೆ ನಡುವೆಯೇ ಅಂಬಾರಿ ಕಟ್ಟುವ ಕೆಲಸ ಮುಂದುವರೆದಿದೆ. ಇದನ್ನೂ ಓದಿ: ಕಾರ್ಖಾನೆ ಕಾಮಗಾರಿ ವೇಳೆ ಗೋಡೆ ಕುಸಿತ – 7 ಕಾರ್ಮಿಕರು ದುರ್ಮರಣ