Tag: Jambu Savari

  • ಅರಮನೆ ನಗರಿಯಲ್ಲಿ ದಸರಾ ವೈಭವ – ವಿಶ್ವವಿಖ್ಯಾತ ಜಂಬೂಸವಾರಿಗೆ ಕ್ಷಣಗಣನೆ

    ಅರಮನೆ ನಗರಿಯಲ್ಲಿ ದಸರಾ ವೈಭವ – ವಿಶ್ವವಿಖ್ಯಾತ ಜಂಬೂಸವಾರಿಗೆ ಕ್ಷಣಗಣನೆ

    -415ನೇ ದಸರಾ ಮಹೋತ್ಸವಕ್ಕೆ ಸಜ್ಜಾದ ಮೈಸೂರು
    -ಸತತ 6ನೇ ಬಾರಿಗೆ ಅಂಬಾರಿ ಹೊರಲಿರುವ ಅಭಿಮನ್ಯು

    ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ (Mysuru Dasara) ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿದ್ದು, ಅರಮನೆಯಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. ವಿಶ್ವವಿಖ್ಯಾತ ದಸರಾ ಜಂಬೂಸವಾರಿ ಕಣ್ತುಂಬಿಕೊಳ್ಳಲು ಜನ ಕಾತರರಾಗಿದ್ದಾರೆ.

    ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಜಂಬೂ ಸವಾರಿಗೆ ಕೌಂಟ್‌ಡೌನ್ ಶುರುವಾಗಿದೆ. ಇದಕ್ಕೂ ಮುನ್ನ ಅಂಬಾವಿಲಾಸ ಅರಮನೆ ಒಳಭಾಗ ಅಂತಿಮ ಹಂತದ ಸಿದ್ಧತೆಗಳು ಭರದಿಂದ ಸಾಗಿವೆ. ಜಂಬೂಸವಾರಿ ವೀಕ್ಷಣೆ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳಿಗೆ ಸಿದ್ಧತೆಯಾಗಿದೆ.ಇದನ್ನೂ ಓದಿ: ವಿಜಯ ದಶಮಿ| ದುರ್ಗಾ ನಮಸ್ಕಾರ ಪೂಜೆ ಮಾಡೋದರ ಉದ್ದೇಶ ಏನು?

    415ನೇ ದಸರಾ ಮಹೋತ್ಸವಕ್ಕೆ ಅರಮನೆ ನಗರಿ ಮೈಸೂರು ಸಜ್ಜಾಗಿದೆ. ಬೆಳಗ್ಗೆ 9:30ರಿಂದ 10ಕ್ಕೆ ಪಟ್ಟದ ಆನೆ, ಕುದುರೆ, ಹಸು ಮತ್ತು ಖಾಸಾ ಆಯುಧಗಳೊಂದಿಗೆ ಅರಮನೆ ವಾಹನಗಳಿಗೆ ಪೂಜೆ ಸಲ್ಲಿಸಲಾಗುತ್ತದೆ ಬೆಳಗ್ಗೆ 9:45ಕ್ಕೆ ವಜ್ರಮುಷ್ಠಿ ಕಾಳಗ ನಡೆಯಲಿದೆ. ಬೆಳಗ್ಗೆ 10:50ರಿಂದ 11:10ಕ್ಕೆ ಬನ್ನಿಪೂಜೆ ನಡೆಯಲಿದೆ. ಬಳಿಕ ಅರಮನೆ ಅಂಗಳದಲ್ಲಿರುವ ಭುವನೇಶ್ವರಿ ದೇಗುಲಕ್ಕೆ ವಿಜಯಯಾತ್ರೆ ನಡೆಯಲಿದೆ. ಬಳಿಕ ವಿಜಯಯಾತ್ರೆ ಅರಮನೆಗೆ ವಾಪಸ್ಸಾಗಲಿದೆ.

    ಬೆಳಗ್ಗೆ 10ರಿಂದ 10:30ರ ಸುಮಾರಿಗೆ ಚಾಮುಂಡಿಬೆಟ್ಟದಿಂದ ತಾಯಿ ವಿಗ್ರಹ ಅರಮನೆಗೆ ಬರಲಿದೆ. ಮಧ್ಯಾಹ್ನ 1ರಿಂದ 1:8ರ ಶುಭ ಧನುರ್ ಲಗ್ನದಲ್ಲಿ ಸಿಎಂ ಸಿದ್ದರಾಮಯ್ಯ ನಂದಿಧ್ವಜಕ್ಕೆ ಪೂಜೆ ನೆರವೇರಿಸಲಿದ್ದಾರೆ. ಮಧ್ಯಾಹ್ನ 3:40ರ ಬಳಿಕ ಚಿನ್ನದ ಅಂಬಾರಿ ಕಟ್ಟಲಾಗುತ್ತೆ. ಸಂಜೆ 4:42ರಿಂದ 5:06 ಗಂಟೆಗೆ ಪುಷ್ಪಾರ್ಚನೆ ನೆರವೇರಲಿದೆ. ಅರಮನೆಯಿಂದ ಬನ್ನಿಮಂಟಪದವರೆಗೆ ಜಂಬೂಸವಾರಿ ನಡೆಯಲಿದ್ದು, ಕ್ಯಾಪ್ಟನ್ ಅಭಿಮನ್ಯು ಅಂಬಾರಿ ಹೊರಲಿದ್ದಾನೆ. ಸಂಜೆ 7 ಗಂಟೆಗೆ ಪಂಜಿನ ಕವಾಯತು ನಡೆಯಲಿದೆ.

    ಇನ್ನು ಕ್ಯಾಪ್ಟನ್ ಅಭಿಮನ್ಯು ಅಂಬಾರಿ ಹೊರಲು ರೆಡಿಯಾಗಿದ್ದು, ಸತತ ಆರನೇ ಬಾರಿಗೆ ರಾಜಗಾಂಭೀರ್ಯದಲ್ಲಿ ಅಂಬಾರಿ ಹೊತ್ತು ಹೆಜ್ಜೆ ಹಾಕಲಿದ್ದಾನೆ. ಅಭಿಮನ್ಯು ಸೇರಿ ಇತರ ಆನೆಗಳು ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿವೆ. ಇದನ್ನೂ ಓದಿ: Navratri 2025: ವಿಜಯದಶಮಿಯ ಪೌರಾಣಿಕ ಮಹತ್ವವೇನು?

    ದಸರಾ ಗಜಪಡೆ
    ಅಂಬಾರಿ ಆನೆ : ಕ್ಯಾಪ್ಟನ್ ಅಭಿಮನ್ಯು, 59 ವರ್ಷ, 6ನೇ ಬಾರಿ ಅಂಬಾರಿ
    ಕುಮ್ಕಿ ಆನೆ : ಕಾವೇರಿ ಮತ್ತು ರೂಪ
    ನಿಶಾನೆ ಆನೆ : ಧನಂಜಯ , 45 ವರ್ಷ
    ನೌಪತ್ ಆನೆ : ಗೋಪಿ, 42 ವರ್ಷ
    ಸಾಲಾನೆ : ಭೀಮ, 25 ವರ್ಷ
    ಪಟ್ಟದ ಆನೆ : ಶ್ರೀಕಂಠ ಮತ್ತು ಲಕ್ಷ್ಮಿ
    ಸಾಲಾನೆಗಳು: ಮಹೇಂದ್ರ, ಭೀಮ, ಕಂಜನ್, ಏಕಲವ್ಯ, ಪ್ರಶಾಂತ, ಸುಗ್ರೀವ, ಹೇಮಾವತಿ ಈ ಆನೆಗಳು ಜಂಬೂ ಸವಾರಿಯಲ್ಲಿ ಹೆಜ್ಜೆ ಹಾಕಲಿವೆ.

    ಈ ಬಾರಿ ಅಂಬಾವಿಲಾಸ ಅರಮನೆ ಆವರಣದಲ್ಲಿ 48 ಸಾವಿರ ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ಕಳೆದ ವರ್ಷ 60 ಸಾವಿರಕ್ಕೂ ಹೆಚ್ಚು ಜನರಿಗೆ ದಸರಾ ವೀಕ್ಷಣೆಗೆ ಅಂಬಾ ವಿಲಾಸ ಅರಮನೆ ಆವರಣದಲ್ಲಿ ಅವಕಾಶ ನೀಡಲಾಗಿತ್ತು. ಆದರೆ ಇತ್ತೀಚಿನ ಕೆಲ ಕಾಲ್ತುಳಿತ ಅವಘಢ ಹಿನ್ನೆಲೆ ಸರ್ಕಾರ ಮತ್ತು ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ವೀಕ್ಷಕರ ಸಂಖ್ಯೆ ಇಳಿಕೆ ಮಾಡಿದೆ. ಅಲ್ಲದೇ ಒಳಭಾಗದಲ್ಲಿ ಪೊಲೀಸ್ ಭದ್ರತೆ ಕೂಡ ಹೆಚ್ಚು ಮಾಡಿದೆ. ಇನ್ನೂ ಪಾಸ್ ಇದ್ದವರಿಗೆ ಮಾತ್ರ ಅರಮನೆ ಒಳಭಾಗ ದಸರಾ ವೀಕ್ಷಣೆಗೆ ಅವಕಾಶ ನೀಡಿಲಾಗಿದೆ. ಸಿಎಂ ಸೇರಿದಂತೆ ಹಲವು ಕ್ಯಾಬಿನೆಟ್ ಸಚಿವರು ಕೂಡ ಜಂಬೂಸವಾರಿಯಲ್ಲಿ ಭಾಗಿಯಾಗಲಿದ್ದಾರೆ. ಗಣ್ಯರು, ಅಧಿಕಾರಿಗಳು, ಸಾರ್ವಜನಿಕರು, ರಾಜಮನೆತನದ ಕುಟುಂಬಸ್ಥರು, ನ್ಯಾಯಾಧೀಶರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಲಾಗಿದೆ.

    ಬೆಳಗ್ಗೆ 11ಗಂಟೆ ನಂತರ ಪಾಸ್ ಹೊಂದಿರುವ ಸಾರ್ವಜನಿಕರಿಗೆ ಅರಮನೆ ಪ್ರವೇಶ ನೀಡಲಾಗುತ್ತೆ. ಈಗಾಗಲೇ ನಗರ ವ್ಯಾಪ್ತಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ನಗರದಾದ್ಯಂತ 9 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆಯಾಗಿದ್ದು, ಅಂಬಾರಿ ಸಾಗುವ ರಾಜಮಾರ್ಗ ಸೇರಿದಂತೆ ನಗರ ವ್ಯಾಪ್ತಿ ಹೆಚ್ಚಿನ ಸಿಸಿಟಿವಿ ಅಳವಡಿಸಲಾಗಿದೆ. ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಅಲ್ಲದೇ ಅಂಬಾರಿ ಸಾಗುವ ಮಾರ್ಗದುದ್ದಕ್ಕೂ ರಸ್ತೆಬದಿ ತಾತ್ಕಾಲಿಕ ತಡೆಗೋಡೆ ನಿರ್ಮಾಣ ಮಾಡಿದ್ದು, ಅಂಬಾರಿ ಸಾಗುವಾಗ ಜನ ದಾಟಿ ರಸ್ತೆಗೆ ಬಾರದಂತೆ ಕ್ರಮವಹಿಸಲಾಗಿದೆ.

    ಒಟ್ಟಾರೆ ಜಂಬೂಸವಾರಿಗೆ ಸಕಲ ಸಿದ್ಧತೆಗಳೆಲ್ಲಾ ಆಗಿದ್ದು, ಅಂಬಾರಿ ಹೊತ್ತು ಸಾಗುವ ಅಭಿಮನ್ಯು ರಾಜಗಾಂಭೀರ್ಯತೆಯೊಂದಿಗೆ ತಾಯಿ ಚಾಮುಂಡೇಶ್ವರಿ ಆಶೀರ್ವಾದಕ್ಕೂ ಜನ ಕಾತುರದಿಂದ ಕಾಯುತ್ತಿದ್ದಾರೆ.ಇದನ್ನೂ ಓದಿ: ದಸರಾ ಜಂಬೂಸವಾರಿಗೆ ಕೌಂಟ್ ಡೌನ್ – ಭರದಿಂದ ಸಾಗಿದ ತಯಾರಿ

  • ಶಿವಮೊಗ್ಗ ದಸರಾ ಜಂಬೂ ಸವಾರಿಗೆ ಆಗಮಿಸಿದ್ದ ನೇತ್ರಾವತಿ ಆನೆ ಹೆಣ್ಣು ಮರಿಗೆ ಜನ್ಮ

    ಶಿವಮೊಗ್ಗ ದಸರಾ ಜಂಬೂ ಸವಾರಿಗೆ ಆಗಮಿಸಿದ್ದ ನೇತ್ರಾವತಿ ಆನೆ ಹೆಣ್ಣು ಮರಿಗೆ ಜನ್ಮ

    ಶಿವಮೊಗ್ಗ: ದಸರಾ ಜಂಬೂ ಸವಾರಿಗೆ (Jambu Savari) ಗಮಿಸಿದ್ದ ಸಕ್ರೆಬೈಲಿನ ನೇತ್ರಾವತಿ ಆನೆ ಹೆಣ್ಣು ಮರಿಗೆ ಜನ್ಮ ನೀಡಿದೆ. ಸೋಮವಾರ ರಾತ್ರಿ ನಗರದ ವಾಸವಿ ಶಾಲೆ ಆವರಣದಲ್ಲಿ ನೇತ್ರಾವತಿ ಆನೆ (Elephant) ಜನ್ಮ ನೀಡಿದ್ದು, ತಾಯಿ ಮತ್ತು ಮರಿ ಎರಡು ಆರೋಗ್ಯವಾಗಿವೆ.

    ಶಿವಮೊಗ್ಗ ದಸರಾ (Shivamogga Dasara) ಜಂಬೂ ಸವಾರಿಗೆ ಸಾಗರ್, ಹೇಮಾವತಿ ಹಾಗೂ ನೇತ್ರಾವತಿ ಆನೆಗಳನ್ನು ಕರೆತರಲಾಗಿತ್ತು. ವಾಸವಿ ಶಾಲೆ ಆವರಣದಲ್ಲಿ ಆನೆಗಳು ತಂಗಿದ್ದವು. ನೇತ್ರಾವತಿ ಆನೆ ಹೆಣ್ಣು ಮರಿಗೆ ಜನ್ಮ ನೀಡಿದ ವಿಷಯ ತಿಳಿಯುತ್ತಿದ್ದಂತೆ ಅರಣ್ಯಾಧಿಕಾರಿಗಳು, ವೈದ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ಪ್ರೆಗ್ನೆನ್ಸಿ ಟೆಸ್ಟ್‌ನಲ್ಲಿ ನೇತ್ರಾವತಿ ಆನೆ ಗರ್ಭವತಿ ಎನ್ನುವುದು ಗೊತ್ತಾಗಿರಲಿಲ್ಲ. ಮೈಸೂರು ದಸರಾ ಜಂಬೂ ಸವಾರಿಗೆ ಆನೆಗಳ ಆಯ್ಕೆ ಪ್ರಕ್ರಿಯೆ ನಡೆದಿತ್ತು. ಆ ಸಂದರ್ಭ ನೇತ್ರಾವತಿ ಆನೆಯ ಪ್ರೆಗ್ನೆನ್ಸಿ ಪರೀಕ್ಷೆ ಮಾಡಿಸಲಾಗಿತ್ತು. ಆಗ ನೇತ್ರಾವತಿ ಗರ್ಭವತಿ ಎನ್ನುವುದು ಗೊತ್ತಾಗಿರಲಿಲ್ಲ. ಅಲ್ಲದೇ ಶಿವಮೊಗ್ಗ ದಸರಾ ಹಿನ್ನೆಲೆಯಲ್ಲಿ ನೇತ್ರಾವತಿಯನ್ನು ಮೈಸೂರಿಗೆ ಕಳುಹಿಸಿರಲಿಲ್ಲ. ಇದನ್ನೂ ಓದಿ: ಐತಿಹಾಸಿಕ ಮೈಸೂರು ದಸರಾ ಮಹೋತ್ಸವ- ಜಂಬೂಸವಾರಿ ಕಣ್ತುಂಬಿಕೊಳ್ಳಲು ಕಾತುರ

    ಕಳೆದ 3 ದಿನದ ಹಿಂದೆ ಆನೆಗಳನ್ನು ಶಿವಮೊಗ್ಗಕ್ಕೆ ಕರೆ ತರಲಾಗಿತ್ತು. ಜಂಬೂ ಸವಾರಿಯ ತಾಲೀಮು ಸಹ ನಡೆಸಲಾಗಿತ್ತು. ತಾಲೀಮು ಮುಗಿಸಿಕೊಂಡು ಬಂದ ನೇತ್ರಾವತಿ ಆನೆ ಹೆಣ್ಣು ಮರಿಗೆ ಜನ್ಮ ನೀಡಿದೆ.

    ಮರಿಗೆ ಜನ್ಮ ನೀಡಿದ ನೇತ್ರಾವತಿ ಆನೆ ಹಾಗೂ ಮರಿಯನ್ನು ಸಕ್ರೆಬೈಲು ಬಿಡಾರಕ್ಕೆ ಕರೆದೊಯ್ಯಲಾಗಿದೆ. ನೇತ್ರಾವತಿ ಆನೆ ಗರ್ಭವತಿ ಆಗಿರುವುದು ಅರಣ್ಯ ಸಿಬ್ಬಂದಿಗೆ, ವೈದ್ಯರಿಗೆ ತಿಳಿಯದಿರುವುದು ಆಶ್ಚರ್ಯ ಉಂಟು ಮಾಡಿದೆ. ಗರ್ಭವತಿಯಾಗಿದ್ದ ಆನೆಯನ್ನು ದಸರಾ ಜಂಬೂ ಸವಾರಿ ತಾಲೀಮಿನಲ್ಲಿ ಬಳಸಿದ್ದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಇದನ್ನೂ ಓದಿ: ದಸರಾ ಜಂಬೂ ಸವಾರಿಗೆ ಮೆರಗು ನೀಡಲಿವೆ 49 ವಿಶೇಷ ಸ್ತಬ್ಧ ಚಿತ್ರಗಳು – ಯಾವ್ಯಾವ ಜಿಲ್ಲೆಯಿಂದ ಏನೇನು?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದಸರಾ ಜಂಬೂಸವಾರಿಗೆ ಚಾಲನೆ – ರಾಜಗಾಂಭಿರ್ಯದಿಂದ ಹೆಜ್ಜೆ ಹಾಕುತ್ತಿದ್ದಾನೆ ಅಭಿಮನ್ಯು

    ದಸರಾ ಜಂಬೂಸವಾರಿಗೆ ಚಾಲನೆ – ರಾಜಗಾಂಭಿರ್ಯದಿಂದ ಹೆಜ್ಜೆ ಹಾಕುತ್ತಿದ್ದಾನೆ ಅಭಿಮನ್ಯು

    ಮೈಸೂರು: ಎರಡು ವರ್ಷಗಳ ಬಳಿಕ ವಿಜೃಭಣೆಯಿಂದ ನಡೆಯುತ್ತಿರುವ ವಿಶ್ವ ವಿಖ್ಯಾತ ಮೈಸೂರು ದಸರಾ (Mysuru Dasara) ಮಹೋತ್ಸವದ ಐತಿಹಾಸಿಕ ಜಂಬೂ ಸವಾರಿ (Jambu Savari) ಮೆರವಣಿಗೆಗೆ ಚಾಲನೆ ದೊರೆತಿದೆ. 750 ಕೆ.ಜಿ ತೂಕದ ಅಂಬಾರಿಯಲ್ಲಿ ಚಾಮುಂಡಿದೇವಿಯನ್ನು (Chamundeshwari) ಹೊತ್ತುಕೊಂಡು ಅಭಿಮನ್ಯು ಬನ್ನಿ ಮಂಟಪದತ್ತ ರಾಜಗಾಂಭಿರ್ಯದಿಂದ ಹೆಜ್ಜೆ ಹಾಕುತ್ತಿದ್ದಾನೆ.

    ಸಾಂಸ್ಕೃತಿಕ ರಾಜಧಾನಿ ಮೈಸೂರು (Mysuru) ಮತ್ತೊಮ್ಮೆ ರಾಜ ವೈಭೋಗಕ್ಕೆ ಸಾಕ್ಷಿಯಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಸಂಜೆ 5.40ಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡಿದರು.

    1610ರಲ್ಲಿ ಆರಂಭಗೊಂಡ ದಸರಾ ಮಹೋತ್ಸವಕ್ಕೆ 4 ದಶಕಗಳ ಭವ್ಯ ಇತಿಹಾಸವಿದೆ. ಮೈಸೂರು ದಸರಾ ದೇಶದಲ್ಲಿ ಮಾತ್ರವಲ್ಲದೇ ಇಡೀ ವಿಶ್ವದಲ್ಲೇ ಚಿರಪರಿಚಿತ ಹಾಗೂ ಪ್ರಖ್ಯಾತಿ ಪಡೆದಿದೆ. ಆದರೆ ಕೊರೊನಾ ಕಾರಣಕ್ಕೆ ಎರಡು ವರ್ಷಗಳಿಂದ ದಸರಾ ಸೊರಗಿತ್ತು. ಆದರೆ ಈ ವರ್ಷ ಅತ್ಯಂತ ಸಡಗರದಿಂದ ದಸರಾ ದಿಬ್ಬಣ ನೆರವೇರಿದೆ. ಸಾಲಂಕೃತ ಗಜಪಡೆಯ ನೇತೃತ್ವ ವಹಿಸಿದ್ದ ಕ್ಯಾಪ್ಟನ್ ಅಭಿಮನ್ಯು ಅಂಬಾರಿ ಹೊತ್ತು ಮೈಸೂರಿನ ಪ್ರಮುಖ ಬೀದಿಗಳಲ್ಲಿ ಹೆಜ್ಜೆ ಹಾಕುತ್ತಿದ್ದಾನೆ.

    ಬೆಳಗ್ಗೆಯಿಂದಲೂ ಅಂಬಾವಿಲಾಸ ಅರಮನೆ ಆವರಣದಲ್ಲಿ ಸಂಪ್ರದಾಯ ಬದ್ಧ ಕಾರ್ಯಕ್ರಮಗಳು ನಡೆಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂಪುಟ ಸಹೋದ್ಯೋಗಿಗಳ ಜೊತೆಗೆ ಐರಾವತ ಬಸ್ ಮೂಲಕ ಆಗಮಿಸಿ ಮಧ್ಯಾಹ್ನ 2:50ಕ್ಕೆ ನಂದಿ ಧ್ವಜಕ್ಕೆ ಪೂಜೆ ಮಾಡುವ ಮೂಲಕ ದಸರಾ ದಿಬ್ಬಣಕ್ಕೆ ಚಾಲನೆ ನೀಡಿದರು.

    ಮುಖ್ಯಮಂತ್ರಿಗಳು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುತ್ತಿದ್ದಂತೆ ಕಲಾ ತಂಡಗಳ ಹಾಗೂ ಟ್ಯಾಬ್ಲೋಗಳ ಮೆರವಣಿಗೆ ಆರಂಭವಾಯಿತು. ಕೀಲುಗೊಂಬೆ, ಪೂಜಾ ಕುಣಿತ, ಡೊಳ್ಳು ಕುಣಿತ, ವೀರಗಾಸೆ ಹೀಗೆ ಹತ್ತು ಹಲವು ಬಗೆಯ ಕಲಾ ಪಾಂಡಿತ್ಯ ಪ್ರದರ್ಶನಗೊಂಡಿದೆ. ಸ್ತಬ್ಧ ಚಿತ್ರಗಳ ಯಾತ್ರೆಯಲ್ಲಂತೂ ಪುನೀತ್ ರಾಜ್ ಕುಮಾರ್ ಟ್ಯಾಬ್ಲೋ ವಿಶೇಷ ಸ್ಥಾನ ಪಡೆದಿದೆ. ಪೊಲೀಸ್ ಬ್ಯಾಂಡ್ ಸಹ ವೀಕ್ಷಕರಿಗೆ ಮುದ ನೀಡುತ್ತಿದೆ.

    3ನೇ ಬಾರಿಗೆ ಅಂಬಾರಿ ಹೊತ್ತ ಅಭಿಮನ್ಯುಗೆ ನಿಶಾನೆ ಆನೆಯಾಗಿ ಅರ್ಜುನ, ನೌಫತ್ ಮತ್ತು ಸಾಲಾನೆಯಾಗಿ ಗೋಪಿ, ಧನಂಜಯ, ಮಹೇಂದ್ರ, ಭೀಮ, ಗೋಪಾಲಸ್ವಾಮಿ ಸಾಥ್ ನೀಡಿದರೆ, ಕಾವೇರಿ ಮತ್ತು ಚೈತ್ರ ಎಂಬ ಹೆಣ್ಣಾನೆಗಳು ಕುಮ್ಕಿ ಆನೆಗಳ ಪಾತ್ರವಹಿಸಿದೆ. ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ ಕಾಂಗ್ರೆಸ್ಸಿಗರ ಭಾರತ ಬಿಟ್ಟು ಓಡೋ ಯಾತ್ರೆ: ನಳೀನ್ ಕುಮಾರ್ ಕಟೀಲ್

    ಕೊರೊನಾ ಹಿನ್ನೆಲೆಯಲ್ಲಿ ಎರಡು ವರ್ಷದಿಂದ ಜಂಬೂ ಸವಾರಿ ಅರಮನೆ ಆವರಣಕ್ಕೆ ಮಾತ್ರ ಸೀಮಿತವಾಗಿತ್ತು. ಈ ಬಾರಿ ಅರಮನೆ ಆವರಣ ದಾಟಿದ ಜಂಬೂ ಸವಾರಿ ರಾಜಪಥದಲ್ಲಿ ಸಾಗಿ ದಸರಾ ಮೆರಗು ಹೆಚ್ಚಿಸಿದೆ. ಸಾವಿರಾರು ಮಂದಿ ಕಣ್ತುಂಬಿಕೊಂಡು ಸಂತಸ ಪಡುತ್ತಿದ್ದಾರೆ. ಸುಮಾರು 25 ಸಾವಿರ ಜನಕ್ಕೆ ಆಸನ ವ್ಯವಸ್ಥೆ ಮಾಡಲಾಗಿತ್ತು. ಆದರೆ ಈ ಬಾರಿ ನೀರಿಕ್ಷೆಗೂ ಮೀರಿ ಜನ ಸೇರಿದ್ದಾರೆ. ಇದನ್ನೂ ಓದಿ: ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ವಿ.ಎಸ್ ಅಭಿಷೇಕ್‌ ನಾಯ್ಡು ರಾಜೀನಾಮೆ

    Live Tv
    [brid partner=56869869 player=32851 video=960834 autoplay=true]

  • ಜಂಬೂ ಸವಾರಿ ಭದ್ರತೆಗೆ ವಿಶೇಷ ಆದ್ಯತೆ- 5000 ಪೊಲೀಸರ ನಿಯೋಜನೆ

    ಜಂಬೂ ಸವಾರಿ ಭದ್ರತೆಗೆ ವಿಶೇಷ ಆದ್ಯತೆ- 5000 ಪೊಲೀಸರ ನಿಯೋಜನೆ

    ಮೈಸೂರು: ವಿಶ್ವ ವಿಖ್ಯಾತ ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಜಂಬೂಸವಾರಿ ವೇಳೆ ಭದ್ರತೆಗೆ ವಿಶೇಷ ಆದ್ಯತೆ ನೀಡಲಾಗುತ್ತಿದ್ದು, ಸುಮಾರು 5 ಸಾವಿರ ಪೊಲೀಸರನ್ನು ಈಗಾಗಲೇ ನಿಯೋಜಿಸಲಾಗಿದೆ.

    ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ನೇತೃತ್ವದಲ್ಲಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಜಂಬೂ ಸವಾರಿ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ನಿಗಾ ವಹಿಸಲಿದ್ದಾರೆ. ಇದನ್ನೂ ಓದಿ: ಐತಿಹಾಸಿಕ ಜಂಬೂ ಸವಾರಿಗೆ ಕ್ಷಣಗಣನೆ- ಅಂಬಾರಿ ಹೊರಲು ಕ್ಯಾಪ್ಟನ್ ಅಭಿಮನ್ಯು ರೆಡಿ

    ಮೆರವಣಿಗೆಯ ಭದ್ರತೆಗಾಗಿ ಮೈಸೂರು ನಗರದ 1,255 ಪೊಲೀಸರು, ಹೊರ ಜಿಲ್ಲೆಯಿಂದ 3,580, ಗೃಹ ರಕ್ಷಕ ದಳದ 650 ಸಿಬ್ಬಂದಿ ಇರಲಿದ್ದಾರೆ. ಹೀಗೆ ಒಟ್ಟು 5,485 ಅಧಿಕಾರಿ ಮತ್ತು ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಮನೆ, ಖಾಸಗಿ ಸಂಸ್ಥೆಗಳು ಸೇರಿ 13 ಸಾವಿರ ಸಿಸಿ ಟಿವಿ ಕ್ಯಾಮೆರಾಗಳು ಹಾಗೂ ಅಂಬಾರಿ ಮಾರ್ಗಕ್ಕೆ ಪೊಲೀಸ್ ಇಲಾಖೆಯಿಂದ ಹೆಚ್ಚುವರಿ 59 ಸಿಸಿ ಕ್ಯಾಮೆರಾ ಅಳವಡಿಕೆ ಮಾಡಲಾಗಿದೆ.

    ಹೆಚ್ಚುವರಿಯಾಗಿ ಮೆರವಣಿಗೆ ನಡೆಯುವ ಜಾಗದಲ್ಲಿ 110 ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಅನುಚಿತವಾಗಿ ವರ್ತಿಸುವವರ ವಿರುದ್ಧ ಸಿಸಿಟಿವಿ ಜೊತೆ ಮೊಬೈಲ್ ಕಮಾಂಡಿಂಗ್ ವಾಹನದ ಮೂಲಕ ಹದ್ದಿನ ಕಣ್ಣು ಇಡಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಐತಿಹಾಸಿಕ ಜಂಬೂ ಸವಾರಿಗೆ ಕ್ಷಣಗಣನೆ- ಅಂಬಾರಿ ಹೊರಲು ಕ್ಯಾಪ್ಟನ್ ಅಭಿಮನ್ಯು ರೆಡಿ

    ಐತಿಹಾಸಿಕ ಜಂಬೂ ಸವಾರಿಗೆ ಕ್ಷಣಗಣನೆ- ಅಂಬಾರಿ ಹೊರಲು ಕ್ಯಾಪ್ಟನ್ ಅಭಿಮನ್ಯು ರೆಡಿ

    ಮೈಸೂರು: ವಿಶ್ವ ವಿಖ್ಯಾತ ದಸರಾ (Mysuru Dasara 2022) ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಜಂಬೂ ಸವಾರಿಯ ಪ್ರಮುಖ ಆಕರ್ಷಣೆ ಗಜ ಪಡೆಯ ಕ್ಯಾಪ್ಟನ್ ಅಭಿಮನ್ಯು (Abhimanyu) ಕೂಡ ಅಂಬಾರಿ ಹೊರಲು ಫಿಟ್ ಆಗಿ ಸಿದ್ಧನಾಗಿದ್ದಾನೆ.

    ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಅಂಬಾರಿ ಹೊತ್ತು ರಾಜಮಾರ್ಗದಲ್ಲಿ ಸಾಗಲು ಗಜಪಡೆ ಸಿದ್ಧವಾಗಿದೆ. ಅರಮನೆ (Mysuru Palace) ಗೆ ಆಗಮಿಸಿದ್ದ ಗಜ ತಂಡದಲ್ಲಿ ಜಂಬೂ ಸವಾರಿಯಲ್ಲಿ ಭಾಗಿಯಾಗುತ್ತಿರೋದು 9 ಆನೆಗಳು ಮಾತ್ರ. ಈ ಬಾರಿ ಜಾನಪದ ತಂಡ, ಸ್ತಬ್ಧ ಚಿತ್ರಗಳು ಹೆಚ್ಚು ಇರುವ ಕಾರಣ ಮೆರವಣಿಗೆಯಲ್ಲಿ ಹೆಚ್ಚು ಆನೆಗಳು (Elephant) ಭಾಗಿಯಾಗಲು ಕಷ್ಟವಾಗುವ ಹಿನ್ನೆಲೆ 9 ಆನೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.

    ಜಂಬೂ ಸವಾರಿ ಆನೆಗಳು:
    * ಕ್ಯಾಪ್ಟನ್ – ಅಭಿಮನ್ಯು
    * ನಿಶಾನೆ ಆನೆ – ಅರ್ಜುನ
    * ನೌಫತ್ ಆನೆ- ಗೋಪಿ
    * ಕುಮ್ಕಿ ಆನೆಗಳು – ಕಾವೇರಿ ಮತ್ತು ಚೈತ್ರ
    * ಧನಂಜಯ, ಮಹೇಂದ್ರ
    * ಭೀಮ, ಗೋಪಾಲಸ್ವಾಮಿ ಆನೆಗಳು ಭಾಗಿ ಆಗಲಿವೆ. ಗಜಪಡೆ ಯಶಸ್ವಿಯಾಗಿ ಜಂಬೂ ಸವಾರಿ ಮುಗಿಸುವ ಬಗ್ಗೆ ಡಿಸಿಎಫ್ ಕರಿಕಾಳನ್ ಕೂಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಯುವಕನಿಗೆ ರಾಜ್ಯದ ಮುಖ್ಯಮಂತ್ರಿ ಸ್ಥಾನ – ಕಾರ್ಣಿಕ ನುಡಿದ ಗೊರವಯ್ಯ

    ಜಂಬೂ ಸವಾರಿ ಪ್ರಮುಖ ಆಕರ್ಷಣೆ ಕ್ಯಾಪ್ಟನ್ ಕೂಲ್ ಅಭಿಮನ್ಯು ಮೂರನೇ ಬಾರಿಗೆ ಅಂಬಾರಿ ಹೊರಲಿದ್ದಾನೆ. ಜಂಬೂ ಸವಾರಿ ವೇಳೆ ಆನೆಗಳ ಆರೋಗ್ಯ ಸುರಕ್ಷತೆ ದೃಷ್ಠಿಯಿಂದ ನಾಲ್ಕು ವೈದ್ಯರ ತಂಡಗಳ ನಿಯೋಜಿಸಲಾಗಿದೆ. ರಾಜ ಮಾರ್ಗದಲ್ಲಿ ಜಂಬೂ ಸವಾರಿ ಹಾದು ಹೋಗುವ ಸರ್ಕಲ್‍ಗಳಾದ ಕೆ.ಆರ್ ಸರ್ಕಲ್, ಆರ್.ಎಂ.ಸಿ ಸರ್ಕಲ್ ಹಾಗೂ ಹೈವೆ ಸರ್ಕಲ್ ಗಳಲ್ಲಿ ವೈದ್ಯರ ತಂಡ ಇರಲಿದೆ. ಮತ್ತೊಂದು ತಂಡ ಗಜಪಡೆ ಜೊತೆಯಲ್ಲೆ ಹೆಜ್ಜೆ ಹಾಕಲಿದೆ. ಬೆಳಗ್ಗೆ 9 ಗಂಟೆ ವೇಳೆಗೆ ಎಲ್ಲಾ ತಂಡಗಳು ನಿಗದಿತ ಸರ್ಕಲ್‍ಗಳಲ್ಲಿ ನಿಯೋಜನೆ ಗೊಳ್ಳಲಿವೆ.

    ಒಟ್ಟಾರೆ ಇದೇ ಮೊದಲ ಬಾರಿಗೆ ದೀಪಾಲಂಕಾರಗಳ ನಡುವೆ ಜಂಬೂ ಸವಾರಿ ಸಾಗಲಿದ್ದು, ವಿದ್ಯುತ್ ದೀಪಾಲಂಕಾರಗಳ ನಡುವೆ ಅಭಿಮನ್ಯುವಿನ ಗಾಂಭೀರ್ಯದ ಹೆಜ್ಜೆ ಹಾಕುತ್ತಾ ಹೇಗೆ ನಾಡದೇವತೆಯನ್ನು ಮೆರವಣಿಗೆ ಮಾಡ್ತಾನೆ ಅನ್ನೋದನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಮಂದಿ ತುದಿಗಾಲಲ್ಲಿ ನಿಂತು ಕಾಯುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕೊರೋನಾ ಬಳಿಕ ಅದ್ದೂರಿ ದಸರಾ- ವಿದ್ಯುತ್ ದೀಪಾಲಂಕಾರದ ಬೆಳಕಲ್ಲಿ ಸಾಗಲಿದೆ ಅಂಬಾರಿ

    ಕೊರೋನಾ ಬಳಿಕ ಅದ್ದೂರಿ ದಸರಾ- ವಿದ್ಯುತ್ ದೀಪಾಲಂಕಾರದ ಬೆಳಕಲ್ಲಿ ಸಾಗಲಿದೆ ಅಂಬಾರಿ

    ಮೈಸೂರು: ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ (Mysuru Dasara-2022) ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿ ಮೆರವಣಿಗೆಗೆ ದಿನ ಗಣನೆ ಆರಂಭವಾಗಿದೆ. ಈ ಬಾರಿ ಜಂಬೂ ಸವಾರಿ ಮೆರವಣಿಗೆ ವಿದ್ಯುತ್ ದೀಪಾಲಂಕಾರದ ನಡುವೆ ಸಾಗಲಿರುವುದು ವಿಶೇಷ. ಮೆರವಣಿಗೆಗಾಗಿ ಕ್ಯಾಪ್ಟನ್ ಅಭಿಮನ್ಯು (Abhimanyu) ಮತ್ತು ಟೀಂ ಭರ್ಜರಿ ತಾಲೀಮು ನಡೆಸುತ್ತಿವೆ.

    ಹೌದು. ಕಳೆದ 2 ವರ್ಷಗಳ ಹಿಂದೆ ಇಡೀ ರಾಷ್ಟ್ರವನ್ನು ಬಿಟ್ಟು ಬಿಡದೇ ಕಾಡುತ್ತಿದ್ದ ಕೊರೋನಾದಿಂದ ದಸರಾ ಮಹೋತ್ಸವದ ಸಂಭ್ರಮ ಮಂಕಾಗಿ ಹೋಗಿತ್ತು. ದಸರಾ ಮಹೋತ್ಸವದ ಎಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳು ರದ್ದಾಗಿದ್ದವು. ಅಲ್ಲದೇ ದಸರಾ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿ ಮೆರವಣಿಗೆ ಕೇವಲ ಅರಮನೆ ಆವರಣಕ್ಕೆ ಮಾತ್ರ ಸೀಮಿತವಾಗಿತ್ತು. ಆದರೆ ಈ ಬಾರಿ ಕೊರೋನಾ (Corona Virus) ಮಹಾಮಾರಿಯಿಂದ ನಾವುಗಳು ದೂರವಾಗಿರುವ ಕಾರಣ ದಸರಾ ಮಹೋತ್ಸವ ಎಂದಿನಂತೆ ವಿಜೃಂಭಣೆಯಿಂದ ಜರುಗಲಿದೆ.

    ಪ್ರತಿ ವರ್ಷದಂತೆ ಈ ಬಾರಿಯೂ ಅರಮನೆಯ ಆವರಣದಿಂದ ಬನ್ನಿಮಂಟಪದವರೆಗೆ ಸಾಗಲಿದೆ. ಮೂರನೇ ಬಾರಿಗೆ ಅಂಬಾರಿ ಹೊರುತ್ತಿರುವ ಅಭಿಮನ್ಯು 6.30 ಕಿಲೋಮೀಟರ್ ಜಂಬೂಸವಾರಿ ಮೆರವಣಿಗೆಯಲ್ಲಿ ಗಾಂಭೀರ್ಯದ ರಾಜನಡಿಗೆ ಹಾಕಲಿದ್ದಾನೆ. ಇದನ್ನೂ ಓದಿ: ಸೆ.26ರಿಂದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆ

    ಅಕ್ಟೋಬರ್ 5ರಂದು ಇಡೀ ವಿಶ್ವವೇ ಸಾಂಸ್ಕೃತಿಕ ನಗರಿ ಮೈಸೂರಿನ ಕಡೆಗೆ ತಿರುಗಿ ನೋಡಲಿದೆ. ಯಾಕಂದ್ರೆ ಅಂದು ವಿಶ್ವವಿಖ್ಯಾತ ಜಂಬೂ ಸವಾರಿ ಮೆರವಣಿಗೆ ಜರುಗಲಿದೆ. ಅಂದು ಸಂಜೆ 5 ಗಂಟೆ 7ನಿಮಿಷದಿಂದ 5.18ರ ವರೆಗೆ ಸಲ್ಲುವ ಶುಭ ಮೀನಾ ಲಗ್ನದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹಾಗೂ ಗಣ್ಯರು ಅಂಬಾರಿಯಲ್ಲಿ ಕೂತ ನಾಡದೇವತೆ ಚಾಮುಂಡೇಶ್ವರಿ (Chamundeshwari)ಗೆ ಪುಷ್ಪಾರ್ಚಾನೆ ಸಲ್ಲಿಸಿ, ಜಂಬೂ ಸವಾರಿ ಮೆರವಣಿಗೆ ಚಾಲನೆ ನೀಡಲಿದ್ದಾರೆ.

    6.30 ಕಿಲೋಮೀಟರ್ ದೂರವನ್ನು ಕ್ರಮಿಸಲು ಅಭಿಮನ್ಯು & ಟೀಮ್‍ಗೆ 2 ಗಂಟೆಗಳು ಬೇಕಾಗುತ್ತದೆ. ಅಂದ್ರೆ 5.20 ರಿಂದ 7.30ರ ವರೆಗೆ ಜಂಬೂ ಸವಾರಿ ಮೆರವಣಿಗೆ ಜರುಗಲಿದೆ. ಅಷ್ಟೊತ್ತಿಗೆ ಸೂರ್ಯ ಮುಳುಗಿದ ಕಾರಣ ಕತ್ತಲು ಆವರಿಸಿರುತ್ತದೆ. ಹೀಗಾಗಿ ಜಂಬೂ ಸವಾರಿ ಮೆರವಣಿಗೆ ವಿದ್ಯುತ್ ದೀಪಾಲಂಕಾರದ ನಡುವೆ ಸಾಗಬೇಕಾಗಿದೆ. ಅಂದು ದಸರಾ ಗಜಪಡೆಗೆ ವಿದ್ಯುತ್ ದೀಪಾಲಂಕಾರಕ್ಕೆ ಬೆದರಬಾರದೆಂದು ಸದ್ಯ ವಿದ್ಯುತ್ ದೀಪಾಲಂಕಾರದ ನಡುವೆ ತಾಲೀಮು ಮಾಡಿಸಲಾಗುತ್ತಿದೆ.

    ಒಟ್ಟಾರೆ ಕೊರೋನಾ ರಣಕೇಕೆಯಿಂದ ಮಂಕಾಗಿದ್ದ ಕಳೆದ ಎರಡು ವರ್ಷದ ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆ ಈ ಬಾರಿ ವಿದ್ಯುತ್ ದೀಪಾಲಂಕಾರದ ನಡುವೆ ಇಡೀ ವಿಶ್ವವನ್ನೇ ತನ್ನತ್ತ ಸೆಳೆಯಲಿದೆ.

    Live Tv
    [brid partner=56869869 player=32851 video=960834 autoplay=true]

  • ಮೈಸೂರು ಅರಮನೆಯಲ್ಲಿ ನಾಳೆ ಸಾಂಕೇತಿಕವಾಗಿ ಜಂಬೂಸವಾರಿ ಆಚರಣೆ

    ಮೈಸೂರು ಅರಮನೆಯಲ್ಲಿ ನಾಳೆ ಸಾಂಕೇತಿಕವಾಗಿ ಜಂಬೂಸವಾರಿ ಆಚರಣೆ

    – 300 ಮಂದಿಗಷ್ಟೇ ಪಾಲ್ಗೊಳ್ಳಲು ಅವಕಾಶ
    – ನಾಳೆ ಏನಿರುತ್ತೆ? ಏನಿರಲ್ಲ?

    ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಎಂದರೇ ಥಟ್ಟಂತಾ ಕಣ್ಮುಂದೆ ಬರೋದು ಮೈಸೂರಿನ ಪ್ರಮುಖ ಬೀದಿಯಲ್ಲಿ ನಡೆಯೋ ಅದ್ಧೂರಿ ಜಂಬೂ ಸವಾರಿ.. ಈ ಬಾರಿಯೂ ಅಂದರೆ ನಾಳೆ ವಿಜಯದಶಮಿಯಂದು ಜಂಬೂ ಸವಾರಿ ಇದೆ. ಆದ್ರೆ ಮೈಸೂರಿನ ಪ್ರಮುಖ ರಸ್ತೆಗಳಲ್ಲಿ ಅಲ್ಲ. ಕೊರೊನಾ ಕಾರಣದಿಂದ ಕೇವಲ ಅರಮನೆ ಆವರಣಕ್ಕಷ್ಟೇ ಜಂಬೂ ಸವಾರಿ ಸೀಮಿತವಾಗಿ, ಸರಳವಾಗಿ ನಡೆಯಲಿದೆ. ಇದಕ್ಕಾಗಿ ರಾಜ್ಯ ಸರ್ಕಾರ ಸಕಲ ಸಿದ್ಧತೆಗಳನ್ನು ನಡೆಸಿದೆ.

    ಸರಳ ದಸರಾ ಹಿನ್ನೆಲೆಯಲ್ಲಿ ಹೆಚ್ಚು ಮಂದಿ ಸೇರಬಾರದು ಎಂದು ಸರ್ಕಾರ ಆದೇಶ ಹೊರಡಿಸಿದೆ. ಇಂದು ಮೈಸೂರು ರಾಜವಂಶಸ್ಥರಾದ ಯದುವೀರ್ ಅರಮನೆಯಲ್ಲಿ ಇಂದು ಆಯುಧಪೂಜೆ ನೆರವೇರಿಸಿದರು. ಪಟ್ಟದ ಆನೆ, ಕುದುರೆ, ಹಸು, ಒಂಟೆ, ರಾಜವಂಶಸ್ಥರು ಬಳಸುವ ವಾಹನ, ಆಯುಧಗಳಿಗೆ ವಿಶೇಷ ಪೂಜೆ ಸಲ್ಲಿಸಿದರು. ಚಂಡಿಕಾ ಹೋಮ ನಡೆಸಿದರು.

    ಅರಮನೆಯ ಕೋಡಿ ಸೋಮೇಶ್ವರ ದೇವಸ್ಥಾನದ ಬಳಿ ಜಂಬೂಸವಾರಿ ಗಜಪಡೆಗೆ ಉಸ್ತುವಾರಿ ಮಂತ್ರಿ ಎಸ್.ಟಿ.ಸೋಮಶೇಖರ್ ನೇತೃತ್ವದಲ್ಲಿ ಪೂಜೆ ನೆರವೇರಿತು. ಸೇವಂತಿಗೆ ಹೂಗಳಿಂದ ಸಿಂಗರಿಸಲಾಗಿದ್ದ ಆನೆಗಳಿಗೆ ಮಂತ್ರಿಗಳು ಕಬ್ಬು, ಬಾಳೆಹಣ್ಣು, ತೆಂಗಿನಕಾಯಿ, ಹಣ್ಣು ಬೆಲ್ಲ ತಿನ್ನಿಸಿ ಸತ್ಕರಿಸಿದರು. ನಾಳೆಯ ಜಂಬೂಸವಾರಿ ಹಿನ್ನೆಲೆಯಲ್ಲಿ ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಅರಮನೆ ಸುತ್ತಮುತ್ತ 144 ಸೆಕ್ಷನ್ ಜಾರಿಯಲ್ಲಿದೆ. ಪ್ರವಾಸಿಗರ ಸಂಖ್ಯೆ ಎಂದಿಗಿಂತ ಕಡಿಮೆ ಇದೆ.

    ನಾಳೆ ಏನಿರುತ್ತೆ? ಏನಿರಲ್ಲ..?
    * ಭುವನೇಶ್ವರಿ ದೇವಾಲಯದಲ್ಲಿ ಯದುವೀರ್ ಅವರಿಂದ ಬನ್ನಿಪೂಜೆ.
    * ಮಧ್ಯಾಹ್ನ 2.59 ರಿಂದ 3.20ಕ್ಕೆ ಮುಖ್ಯಮಂತ್ರಿಗಳಿಂದ ನಂದಿಧ್ವಜಕ್ಕೆ ಪೂಜೆ.
    * ಸಂಜೆ 4.15ರೊಳಗೆ ಮುಖ್ಯಮಂತ್ರಿಗಳಿಂದ ಪುಷ್ಪಾರ್ಚನೆ (ಶುಭ ಕುಂಭ ಲಗ್ನದಲ್ಲಿ)
    * ಅರಮನೆ ಆವರಣದಲ್ಲಿ ಜಂಬೂ ಸವಾರಿ ಆರಂಭ.
    * ಕೇವಲ 300 ಮೀಟರ್ ಜಂಬೂ ಸವಾರಿಗಷ್ಟೇ ಅವಕಾಶ (ಇಷ್ಟು ವರ್ಷ 5 ಕಿ.ಮೀ. ಬನ್ನಿ ಮಂಟಪದವರೆಗೂ ಇರುತ್ತಿತ್ತು)
    * ಜಂಬೂಸವಾರಿ ವೀಕ್ಷಿಸಲು ಕೇವಲ 300 ಮಂದಿಗಷ್ಟೇ ಅವಕಾಶ.
    * 2 ಟ್ಯಾಬ್ಲೋ, ಕೆಲವೇ ಜನಪದ ಕಲಾತಂಡಗಳು ಪಾಲ್ಗೊಳ್ಳಲಿವೆ.
    * ಬನ್ನಿ ಮಂಟಪದಲ್ಲಿ ಪಂಜಿನ ಕವಾಯತು ಈ ಬಾರಿ ಇರುವುದಿಲ್ಲ .

  • ಕಾಡಿನತ್ತ ಹೊರಟ ದಸರಾ ಗಜಪಡೆ-ವಿಶೇಷ ಗೌರವದೊಂದಿಗೆ ಆನೆಗಳಿಗೆ ಬೀಳ್ಕೊಟ್ಟ ಅರಮನೆ ಸಿಬ್ಬಂದಿ

    ಕಾಡಿನತ್ತ ಹೊರಟ ದಸರಾ ಗಜಪಡೆ-ವಿಶೇಷ ಗೌರವದೊಂದಿಗೆ ಆನೆಗಳಿಗೆ ಬೀಳ್ಕೊಟ್ಟ ಅರಮನೆ ಸಿಬ್ಬಂದಿ

    ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಆಕರ್ಷಣೆಯ ಕೇಂದ್ರಬಿಂದುವಾಗಿದ್ದ ಜಂಬೂಸವಾರಿಯ ಆನೆಗಳು ಕಾಡಿನತ್ತ ಪ್ರಯಾಣ ಬೆಳೆಸಿವೆ.

    ಅದ್ಧೂರಿಯಾಗಿ ದಸರಾ ಜಂಬೂಸವಾರಿಯನ್ನು ನಡೆಸಿಕೊಟ್ಟಿದ್ದ ಕ್ಯಾಪ್ಟನ್ ಅರ್ಜುನ್ ಅಂಡ್ ಟೀಂನ ಆನೆಗಳು ಇಂದು ಕಾಡಿನತ್ತ ಪ್ರಯಾಣ ಬೆಳೆಸಿವೆ. ಆನೆಗಳಿಗೆ ಅರಮನೆ ಮಂಡಳಿ ಹಾಗೂ ಅರಣ್ಯ ಇಲಾಖೆ ವತಿಯಿಂದ ಅರಮನೆ ಆವರಣದಲ್ಲಿ ವಿಶೇಷ ಪೂಜೆ ನೇರವೇರಿದ್ದು, ಮಾವುತರು ಸೇರಿದಂತೆ ಕಾವಾಡಿಗರಿಗೆ ವಿಶೇಷ ಗೌರವ ನೀಡಿ ಬೀಳ್ಕೊಡಲಾಯಿತು.

    ಸೋಮವಾರ ಅರಮನೆಯಲ್ಲಿ ರಾಜಮನೆತನದ ದಸರಾದ ಅಂತಿಮ ಆಚರಣೆ ಹಿನ್ನೆಲೆಯಲ್ಲಿ ಮೂರು ಆನೆಗಳನ್ನು ಅರಮನೆಯಲ್ಲೇ ಉಳಿಸಿಕೊಳ್ಳಲಾಗಿದೆ. ಹೀಗಾಗಿ ವಿಕ್ರಂ, ಗೋಪಿ ಹಾಗೂ ವಿಜಯ ಆನೆಗಳು ನಾಳೆ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿವೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿಸಿಎಫ್ ಸಿದ್ದರಾಮಪ್ಪ, ರಾಜಮನೆತನದವರಿಂದ ಪೂಜಾ ಕಾರ್ಯಕ್ರಮದ ನಿಮಿತ್ತ ಮೂರು ಆನೆಗಳನ್ನು ಅರಮನೆಯಲ್ಲೇ ಉಳಿಸಿಕೊಂಡು, ಇನ್ನುಳಿದ 9 ಆನೆಗಳು ವಿಶೇಷ ಲಾರಿಗಳಲ್ಲಿ ಕಾಡಿನತ್ತ ಪ್ರಯಾಣ ಬೆಳಸಲಿವೆ ಎಂದು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಜಂಬೂಸವಾರಿ ಆರಂಭ: ರಾಜಗಾಂಭೀರ್ಯದಿಂದ ಹಜ್ಜೆ ಹಾಕುತ್ತಿದ್ದಾನೆ ಅರ್ಜುನ

    ಜಂಬೂಸವಾರಿ ಆರಂಭ: ರಾಜಗಾಂಭೀರ್ಯದಿಂದ ಹಜ್ಜೆ ಹಾಕುತ್ತಿದ್ದಾನೆ ಅರ್ಜುನ

    ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ವಿಜಯದಶಮಿಯಂದು ನಡೆಯುವ ಜಂಬೂಸವಾರಿ ಮೆರವಣಿಗೆಗೆ ಚಾಲನೆ ಸಿಕ್ಕಿದೆ. 750 ಕೆಜಿ ತೂಕದ ಅಂಬಾರಿಯಲ್ಲಿ ಚಾಮುಂಡಿದೇವಿಯನ್ನು ಹೊತ್ತುಕೊಂಡು ಅರ್ಜುನ ಬನ್ನಿ ಮಂಟಪದತ್ತ ಹೆಜ್ಜೆ ಹಾಕುತ್ತಿದ್ದಾನೆ.

    ಅರಮನೆ ಉತ್ತರ ದ್ವಾರವಾದ ಬಲರಾಮ ದ್ವಾರದಲ್ಲಿ ಶುಭ ಕುಂಭ ಲಗ್ನದಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ ಸಂಜೆ 4.14ರ ಸಮಯದಲ್ಲಿ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿ ಮೆರವಣಿಗೆಗೆ ಸಿಎಂ ಎಚ್.ಡಿ.ಕುಮಾರಸ್ವಾಮಿ ಚಾಲನೆ ನೀಡಿದರು.

    ಜಂಬೂ ಸವಾರಿಯಲ್ಲಿ 7 ನೇ ಬಾರಿಗೆ ಅರ್ಜುನ 750 ಕೆಜಿ ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಠಾಪಿಸಿರುವ ನಾಡದೇವತೆ ಚಾಮುಂಡೇಶ್ವರಿಯನ್ನು ಹೊತ್ತು ರಾಜ ಗಾಂಭೀರ್ಯದಿಂದ ಸಾಗುತ್ತಿದ್ದಾನೆ. ಅರ್ಜುನನಿಗೆ ಕಾವೇರಿ ಮತ್ತು ವರಲಕ್ಷ್ಮಿ ಆನೆಗಳು ಸಾಥ್ ನೀಡಿವೆ. ನಿಶಾನೆ ಮತ್ತು ನೌಪತ್ ಆನೆಗಳಾಗಿ ಅಭಿಮನ್ಯು, ಬಲರಾಮ, ಕ್ರಮ, ದ್ರೋಣ, ಕಾವೇರಿ, ವಿಜಯ, ಚೈತ್ರ, ಗೋಪಿ ಪ್ರಶಾಂತ, ನಂಜಯ ಆನೆಗಳು ಮೆರವಣಿಗೆಯಲ್ಲಿ ಹೆಜ್ಜೆ ಹಾಕುತ್ತಿವೆ.

    ಈ ಜಂಬೂಸವಾರಿಯಲ್ಲಿ 42 ಸ್ತಬ್ಧ ಚಿತ್ರಗಳು, 40 ವಿವಿಧ ಜಾನಪದ ಕಲಾತಂಡಗಳು, 10 ವಿಶೇಷ ಕಲಾ ತಂಡ, ಉತ್ತರ ಭಾರತದ ವಿವಿಧ ರಾಜ್ಯಗಳ 5 ಕಲಾ ತಂಡ, 1, 675 ಕಲಾವಿದರು ಸೇರಿದಂತೆ ಒಟ್ಟು 2 ಸಾವಿರ ಮಂದಿ ಭಾಗಿಯಾಗಿದ್ದಾರೆ.

    ಖಾಕಿ ಕಣ್ಣು:
    ಅರಮನೆ ಹಾಗೂ ಜಂಬೂ ಸವಾರಿ ಮೆರವಣಿಗೆ 70 ಮಂದಿ ಕಮಾಂಡೋಗಳ ನಿಯೋಜನೆ ಮಾಡಲಾಗಿದ್ದು, ಮೆರವಣಿಗೆ ಮಾರ್ಗದಲ್ಲಿ 86 ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. 11 ಎಸ್‍ಪಿ, ಡಿಸಿಪಿ, 43 ಎಸಿಪಿ, 131 ಪೊಲೀಸ್ ಇನ್ಸ್ ಪೆಕ್ಟರ್, 328 ಸಬ್ ಇನ್ಸ್ ಪೆಕ್ಟರ್, 521 ಸಹಾಯಕ ಸಬ್ ಇನ್ಸ್ ಪೆಕ್ಟರ್, 304 ಮಹಿಳಾ ಪೊಲೀಸರು, 1,600 ಹೋಂ ಗಾರ್ಡ್, 3,944 ಮಂದಿ ಪೊಲೀಸ್ ಪೇದೆಗಳನ್ನು ನಿಯೋಜನೆ ಮಾಡಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv