Tag: Jamia Mosque

  • ಭೋಗಸ್ ಬೋರ್ಡ್ ಆಗಿರುವ ವಕ್ಫ್ ಬೋರ್ಡ್ ರದ್ದು ಮಾಡಬೇಕು: ಮುತಾಲಿಕ್

    ಭೋಗಸ್ ಬೋರ್ಡ್ ಆಗಿರುವ ವಕ್ಫ್ ಬೋರ್ಡ್ ರದ್ದು ಮಾಡಬೇಕು: ಮುತಾಲಿಕ್

    ಧಾರವಾಡ: ಭೋಗಸ್ ಬೋರ್ಡ್ ಆಗಿರುವ ವಕ್ಫ್ ಬೋರ್ಡ್ ಅನ್ನು ರದ್ದು ಮಾಡಬೇಕು. ಮೊದಲು ಮದರಸಾಗಳಲ್ಲಿ ಓದುತ್ತಿರುವವರನ್ನು ಹೊರಗಾಕಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ.

    ಜಾಮಿಯಾ ಮಸೀದಿಯಲ್ಲಿ ಪುಸ್ತಕ ಪತ್ತೆಯಾಗಿರುವ ಸಂಬಂಧ ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್ ಬೋರ್ಡ್ ಅನ್ನು ರದ್ದು ಮಾಡಿ, ಮಸೀದಿಯನ್ನ ತೆರವುಗೊಳಿಸಬೇಕು. ಪ್ರತಿ ಶನಿವಾರ ಅಲ್ಲಿ ಆಂಜನೇಯ ದೇವರ ಪೂಜೆಗೆ ಅವಕಾಶ ಕೊಡಬೇಕು. ದಾಖಲೆ ಸಮೇತ ಅವರನ್ನ ಹೊರಗೆ ಹಾಕಬೇಕು ಅನ್ನೋದೇ ನಮ್ಮ ಬೇಡಿಕೆ ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಶ್ರೀರಂಗಪಟ್ಟಣ ಜಾಮಿಯಾ ವಿವಾದಕ್ಕೆ ಪುಸ್ತಕದಿಂದ ಟ್ವಿಸ್ಟ್ – ಅರ್ಚಕರ ಕೈ ಕತ್ತರಿಸಿ ಕಾವೇರಿಗೆ ವಿಗ್ರಹ ಎಸೆಯಲಾಗಿತ್ತು!

    ಅಲ್ಲದೆ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ದೇವಸ್ಥಾನ ಅನ್ನೋ ದಾಖಲೆ ಹೊರಬಿದ್ದಿದೆ. ಅದು ದೇವಸ್ಥಾನ ಅನ್ನೋದಕ್ಕೆ ಸಾಕ್ಷಿಯಾಗಿ ದಾಖಲೆ ದೊರೆತಿದೆ. ಅಲ್ಲಿ ನಾಗರ ಚಿಹ್ನೆ, ಕಲ್ಯಾಣಿ, ಗರುಡ ಚಿಹ್ನೆಯೂ ಇದೆ. ಅದರ ಜೊತೆಗೆ ಟಿಪ್ಪು ಸುಲ್ತಾನನೇ ಕೆಡವಿದ್ದು ಅನ್ನೋದಕ್ಕೆ ಮತ್ತೊಂದು ಪೂರಕ ದಾಖಲೆ ಸಿಕ್ಕಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪಠ್ಯ ಪರಿಷ್ಕರಣೆ ನೆಪದಲ್ಲಿ ಬಿಜೆಪಿ ಸರ್ಕಾರದಿಂದ ಸಾಂಸ್ಕೃತಿಕ ಅತ್ಯಾಚಾರ: ಡಿಕೆಶಿ

    ಮೂಡಲ ಆಂಜನೇಯ ದೇವಸ್ಥಾನದ `ಸುಪ್ರಭಾತ’ ಅನ್ನೋ ಪುಸ್ತಕ ಈಗ ಪತ್ತೆಯಾಗಿದೆ. ಅದರಲ್ಲಿ ಎಲ್ಲ ಮಾಹಿತಿಯೂ ದಾಖಲಾಗಿದೆ. 70 ವರ್ಷಗಳ ಹಿಂದೆ ಪ್ರಕಟವಾದ ಈ ಪುಸ್ತಕದಲ್ಲಿ ಆಂಜನೇಯ ದೇವಸ್ಥಾನದ ಚಿತ್ರ ಇದೆ. ಅಲ್ಲದೆ ದೇವಸ್ಥಾನದಿಂದ ನಾರಾಯಣ ಮೂರ್ತಿ ಎನ್ನುವವರ ಕೈ ಕತ್ತರಿಸಿ, ಅಲ್ಲಿದ್ದ ಮೂರ್ತಿಯನ್ನ ನೀರಿನ ಗುಂಡಿಯಲ್ಲಿ ಎಸೆದಿದ್ದಾರೆ. ಇದೆಲ್ಲವೂ ದಾಖಲೆಯಾಗಿದೆ ಮತ್ತೇನು ಬೇಕು. ಈ ದಾಖಲೆಗಳನ್ನೇ ಆಧಾರವಾಗಿಟ್ಟುಕೊಂಡು ಪರಿಶೀಲನೆ ಮಾಡಬೇಕು ಎಂದು ಮುತಾಲಿಕ್ ಒತ್ತಾಯಿಸಿದ್ದಾರೆ.

    ಟಿಪ್ಪು ಸುಲ್ತಾನ್ 7 ಕೊಪ್ಪರಿಗೆ ಚಿನ್ನಾಭರಣ ಕದ್ದು ಅದರಿಂದಲೇ ಮಸೀದಿ ಕಟ್ಟಿದ್ದಾನೆ. ವಿಜಯನಗರದ ತಿಮ್ಮಣ್ಣ ನಾಯಕ ಅದನ್ನ ಕಟ್ಟಿದ ಅನ್ನೋ ಉಲ್ಲೇಖ ಇದೆ ಎಂದು ಹೇಳಿದ್ದಾರೆ.

  • ಶ್ರೀರಂಗಪಟ್ಟಣ ಜಾಮಿಯಾ ಮಸೀದಿಯಲ್ಲಿ ಆಂಜನೇಯಸ್ವಾಮಿ ಪ್ರಾರ್ಥನೆ- ವೀಡಿಯೋ ವೈರಲ್

    ಶ್ರೀರಂಗಪಟ್ಟಣ ಜಾಮಿಯಾ ಮಸೀದಿಯಲ್ಲಿ ಆಂಜನೇಯಸ್ವಾಮಿ ಪ್ರಾರ್ಥನೆ- ವೀಡಿಯೋ ವೈರಲ್

    ಮಂಡ್ಯ: ಜಾಮಿಯಾ ಮಸೀದಿಯಲ್ಲಿ ಇಬ್ಬರು ಹನುಮ ಭಕ್ತರು ಆಂಜನೇಯಸ್ವಾಮಿ ಪ್ರಾರ್ಥನೆ ಮಾಡಿರುವ ವೀಡಿಯೋ ಇದೀಗ ಭಾರೀ ವೈರಲ್ ಆಗುತ್ತಿದೆ.

    ಶನಿವಾರ ಶ್ರೀರಂಗಪಟ್ಟಣ ಚಲೋಗೆ ಕರೆ ಹಿನ್ನೆಲೆಯಲ್ಲಿ ನಗರದಲ್ಲಿ 144 ಸೆಕ್ಷನ್ ಜಾರಿ ಮಾಡಿ ಪೊಲೀಸ್ ಕಟ್ಟೆಚ್ಚರ ವಹಿಸಿದ್ದರು. ಆದರೂ ನೂರಾರು ಹಿಂದೂ ಕಾರ್ಯಕರ್ತರು ಬೈಕ್ ಮೂಲಕ ಶ್ರೀರಾಮ ಘೋಷಣೆ ಕೂಗುತ್ತಾ ಶ್ರೀರಂಗಪಟ್ಟಣಕ್ಕೆ ಆಗಮಿಸಿದ್ದರು. ಆದರೆ ಪೊಲೀಸರು ಹಿಂದೂ ಕಾರ್ಯಕರ್ತರನ್ನು ಕಿರಂಗೂರು ಬಳಿ ತಡೆದಿದ್ದರು.

    ಆದರೂ ಅಲ್ಲೇ ಇರುವ ಬನ್ನಿಮಂಟಪದಲ್ಲಿ ಆಂಜನೇಯಸ್ವಾಮಿ ಪೂಜೆ ಸಲ್ಲಿಸಿ, ನಾವೆಲ್ಲಾ ಹಿಂದೂ ನಾವೆಲ್ಲಾ ಒಂದು. ಜೈ ಶ್ರೀರಾಮ್, ಜೈ ಆಂಜನೇಯ ಎಂದು ಘೋಷಣೆ ಕೂಗಿಕೊಂಡು ಹಿಂದೂ ಕಾರ್ಯಕರ್ತರು ಕುಣಿದು, ಮಂಗಳಾರತಿ ಮಾಡಿ ಪೂಜೆ ಮಾಡಿದರು. ಆದರೆ ಇಬ್ಬರು ಹನುಮ ಭಕ್ತರು ಮಸೀದಿಯ ಒಳಗಡೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ಪ್ರಾರ್ಥನೆ ಮಾಡಿರುವ ವೀಡಿಯೋವನ್ನು ಹಿಂದೂ ಮುಖಂಡರು ಹಂಚಿಕೊಂಡಿದ್ದಾರೆ.

    ಈ ಬಗ್ಗೆ ಹಿಂದೂ ಸಂಘಟನೆ ಮುಖಂಡರು ಮಾತನಾಡಿ, ಮೂಡಲಬಾಗಿಲು ಆಂಜನೇಯ ದೇವಾಲಯದಲ್ಲಿ ಹನುಮಾನ್ ಚಾಲೀಸಾವನ್ನು ನಾವು ಪಠಿಸಿದ್ದೇವೆ. ಇಬ್ಬರು ಹಿಂದೂ ಸಂಘಟನೆ ಮುಖಂಡರು ದೇವಾಲಯದ ಒಳಗೆ ಕೂತು ಹನುಮಾನ್ ಚಾಲೀಸಾ ಪಠಿಸಿದ್ದಾರೆ. ನಾವು ಈ ಹೋರಾಟದಲ್ಲಿ ಮೊದಲು ಗೆಲವು ಸಾಧಿಸಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಮಸೀದಿಯೋ, ಮಂದಿರವೋ ಕೋರ್ಟ್‍ನಲ್ಲಿ ನೋಡುತ್ತೇವೆ – ಮೊದಲು ಅಕ್ರಮವಾಗಿ ನಡೆಸುತ್ತಿರುವ ಮದರಸಾವನ್ನು ನಿಲ್ಲಿಸಿ

    ಶ್ರೀರಂಗಪಟ್ಟಣ ಚಲೋ ಇಂದಿಗೆ ಅಂತ್ಯವಲ್ಲ. ದೇವಾಲಯ ನಮ್ಮ ವಶಕ್ಕೆ ಪಡೆಯುವವರೆಗೂ ಹೋರಾಟ ಇರುತ್ತೆ. ಮೂಡಲಬಾಗಿಲುನಲ್ಲಿ ಆಂಜನೇಯ ದೇವಸ್ಥಾನ ನಿರ್ಮಾಣ ಮಾಡುತ್ತೇವೆ ಎಂದು ಹಿಂದೂ ಮುಖಂಡರು ಘೋಷಣೆ ಕೂಗಿದರು.

    ಜೂನ್ ತಿಂಗಳ ಅಂತ್ಯಕ್ಕೆ ನಮ್ಮ ಬೇಡಿಕೆ ಈಡೇರದಿದ್ದರೆ ನಾಡಿನಾದ್ಯಂತ ಎಲ್ಲಾ ಕಡೆಯಿಂದ ಹನುಮ ಭಕ್ತರು ದೇವಸ್ಥಾನಕ್ಕೆ ಬರಲಿದ್ದಾರೆ. ಮದರಸಾ ಬಂದ್ ಆಗಲೇಬೇಕು. ಇಲ್ಲದೆ ಇದ್ದರೆ ಯಾವುದೇ ಸೂಚನೆ ಕೊಡದೇ ದೇವಸ್ಥಾನಕ್ಕೆ ಬಂದು ಮದರಸಾ ಖಾಲಿ ಮಾಡಿಸುತ್ತೇವೆ. ಅವತ್ತು ನಡೆಯುವ ಎಲ್ಲಾ ಘಟನೆಗಳಿಗೂ ಮಂಡ್ಯ ಜಿಲ್ಲಾಡಳಿತ ಹೊಣೆ ಎಂದು ಹಿಂದೂ ಸಂಘಟನೆ ಮುಖಂಡರು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಮದರಸಾ ತೆರವು ಮಾಡದೆ ಇದ್ದರೆ ನಾವೇ ಅವರ ಕೊರಳಪಟ್ಟಿ ಹಿಡಿದು ಹೊರ ಹಾಕ್ತಿವಿ: ಹಿಂದೂ ಸಂಘಟನೆಗಳು

    ಶ್ರೀರಂಗಪಟ್ಟಣ ಮಂದಿರ ಚಲೋ ಕರೆ ಹಿನ್ನೆಲೆಯಲ್ಲಿ ಜಾಮಿಯಾ ಮಸೀದಿಗೆ ಸಾರ್ವಜನಿಕ ನಿರ್ಬಂಧ ಹೇರಲಾಗಿತ್ತು. ಈ ಇತಿಹಾಸ ಪ್ರಸಿದ್ಧ ಮಸೀದಿಯನ್ನು ವೀಕ್ಷಿಸಲು ರಾಜ್ಯವಲ್ಲದೆ ಹೊರ ರಾಜ್ಯದಿಂದಲೂ ನೂರಾರು ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಿದ್ದರು. ಆದರೆ ಇಂದಿನಿಂದ ನಾಳೆ ಮಧ್ಯಾಹ್ನ 12 ಗಂಟೆವರೆಗೂ ಮಸೀದಿಗೆ ಸಾರ್ವಜನಿಕರ ನಿರ್ಬಂಧ ಹೇರಲಾಗಿದೆ.

  • ಮಸೀದಿಯೋ, ಮಂದಿರವೋ ಕೋರ್ಟ್‍ನಲ್ಲಿ ನೋಡುತ್ತೇವೆ – ಮೊದಲು ಅಕ್ರಮವಾಗಿ ನಡೆಸುತ್ತಿರುವ ಮದರಸಾವನ್ನು ನಿಲ್ಲಿಸಿ

    ಮಸೀದಿಯೋ, ಮಂದಿರವೋ ಕೋರ್ಟ್‍ನಲ್ಲಿ ನೋಡುತ್ತೇವೆ – ಮೊದಲು ಅಕ್ರಮವಾಗಿ ನಡೆಸುತ್ತಿರುವ ಮದರಸಾವನ್ನು ನಿಲ್ಲಿಸಿ

    ಮಂಡ್ಯ: ಶ್ರೀರಂಗಪಟ್ಟಣದ ಜಾಮಿಯಾ ಮಸೀದಿಯ ವಿವಾದ ತಾರಕಕ್ಕೆ ಏರಿದ್ದು, ಮಸೀದಿಯ ಒಳಭಾಗದಲ್ಲಿ ಅಕ್ರಮವಾಗಿ ಮದರಸಾದ ಮಾದರಿಯಲ್ಲಿ 100 ರಿಂದ 200 ಮಂದಿಗೆ ಅರೇಬಿಕ್ ಮತ್ತು ಇಸ್ಲಾಮಿಕ್ ಶಿಕ್ಷಣ ನೀಡುತ್ತಿರುವುದು ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ.

    ಹಿಂದೂ ಸಂಘಟನೆಗಳು ಹಮ್ಮಿಕೊಂಡಿರುವ ಶ್ರೀರಂಗಪಟ್ಟಣ ಚಲೋದಲ್ಲಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದು, ಜಾಮಿಯಾ ಮಸೀದಿಯೋ ಅಥವಾ ಮಂದಿರವೋ ಎಂದು ನಾವು ಕೋರ್ಟ್‍ನಲ್ಲಿ ತೀರ್ಮಾನ ಮಾಡಿಕೊಳ್ಳುತ್ತೇವೆ. ಆದ್ರೆ ಈ ಜಾಮಿಯಾ ಮಸೀದಿಯಲ್ಲಿ ಅಕ್ರಮವಾಗಿ ನಡೆಸುತ್ತಿರುವ ಮದರಸಾವನ್ನು ನಿಲ್ಲಿಸಿ ಆ ವಿದ್ಯಾರ್ಥಿಗಳನ್ನು ಹೊರ ಹಾಕಬೇಕು ಎಂದು ಹಿಂದೂಪರ ಸಂಘಟನೆಗಳು ಇಂದು ಹಮ್ಮಿಕೊಂಡಿದ್ದ ಶ್ರೀರಂಗಪಟ್ಟಣ ಚಲೋದಲ್ಲಿ ಕಿಡಿಕಾರಿದೆ. ಇದನ್ನೂ ಓದಿ: ಶ್ರೀರಂಗಪಟ್ಟಣ ಮಸೀದಿ ವಿವಾದ – ಹಿಂದೂ, ಮುಸ್ಲಿಮರ ವಾದ ಏನು?

    ಜಾಮಿಯಾ ಮಸೀದಿ ಕೇಂದ್ರ ಪುರಾತತ್ವ ಇಲಾಖೆ ಸೇರದ ಸ್ಮಾರಕವಾಗಿದೆ. ಇಲ್ಲಿ ಯಾವುದೇ ರೀತಿಯ ಚಟುವಟಿಕೆಗಳನ್ನು ನಡೆಸುವ ಹಾಗೆ ಇಲ್ಲ. ಈ ಸ್ಮಾರಕ ಪುರಾತತ್ವ ಇಲಾಖೆಗೆ ಸೇರಿದ್ದರೂ ನಿರ್ವಹಣೆಯನ್ನು ವಕ್ಫ್ ಬೋರ್ಡ್‍ಗೆ ನೀಡಲಾಗಿದೆ. ಹೀಗಾಗಿ ವಕ್ಫ್ ಬೋರ್ಡ್ ಮದರಸಾ ಮಾಡಲು ಅವಕಾಶ ಕಲ್ಪಸಿದೆ. ಇಲ್ಲಿ ದೇಶದ ನಾನಾ ಭಾಗಗಳಿಂದ 150ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅರೇಬಿಕ್ ಮತ್ತು ಇಸ್ಲಾಂ ಶಿಕ್ಷಣವನ್ನು ಹೇಳಿಕೊಡುತ್ತಿದ್ದಾರೆ. ಅಲ್ಲದೇ ಇಲ್ಲಿಯೇ ಅವರೇಲ್ಲರೂ ವಾಸ್ತವ್ಯ ಹೂಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಖಾಕಿ ಚಡ್ಡಿ ಏನು ಈ ದೇಶದ ರಾಷ್ಟ್ರಧ್ವಜವೇ: ಎನ್‍ಎಸ್‍ಯುಐ ಉಪಾಧ್ಯಕ್ಷೆ

    ಭಾರತೀಯ ಪುರಾತತ್ವ ಇಲಾಖೆಗೆ ಸೇರಿದ ಸ್ಮಾರಕಗಳಲ್ಲಿ ಈ ರೀತಿಯ ಚಟುವಟಿಕೆಗಳನ್ನು ನಡೆಸುವ ಹಾಗೆ ಇಲ್ಲ. ಆದ್ರೆ ಐತಿಹಾಸಿಕ ಸ್ಮಾರಕವಾಗಿರುವ ಜಾಮಿಯಾದಲ್ಲಿ ಈ ರೀತಿ ಚಟುವಟಿಕೆ ಮಾಡುತ್ತಿರುವುದು ಸರಿಯಲ್ಲ. ಅಲ್ಲಿರುವರನ್ನು ಇಲ್ಲಿಂದ ಕಳುಹಿಸಬೇಕೆಂದು ನೂರಾರು ಸಂಖ್ಯೆಯಲ್ಲಿದ್ದ ಹಿಂದೂ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಒಟ್ಟಾರೆ ಜಾಮಿಯಾ ಮಸೀದಿಯಲ್ಲಿ ಮದರಸಾ ಮಾಡಿಕೊಂಡಿರುವುದು ಕಾನೂನು ಪ್ರಕಾರ ತಪ್ಪು. ಹೀಗಾಗಿ ಜಿಲ್ಲಾಡಳಿತ ಈ ಬಗ್ಗೆ ಗಮನವರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.

     

  • ಶ್ರೀರಂಗಪಟ್ಟಣದಲ್ಲಿ ಹೈ ಅಲರ್ಟ್ – ಜಾಮೀಯಾ ಮಸೀದಿ ಸುತ್ತ 144 ನಿಷೇಧಾಜ್ಞೆ ಜಾರಿ

    ಶ್ರೀರಂಗಪಟ್ಟಣದಲ್ಲಿ ಹೈ ಅಲರ್ಟ್ – ಜಾಮೀಯಾ ಮಸೀದಿ ಸುತ್ತ 144 ನಿಷೇಧಾಜ್ಞೆ ಜಾರಿ

    ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಜಾಮಿಯಾ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಂಗದ ಮೆಟ್ಟಿಲೇರುವುದಕ್ಕೆ ಹಿಂದೂಪರ ಸಂಘಟನೆಗಳು ಕಾರ್ಯಪ್ರೌವೃತ್ತವಾಗಿವೆ. ಇನ್ನೊಂದು ಕಡೆ ವಿಶ್ವ ಹಿಂದೂ ಪರಿಷತ್ ಜೂನ್ 4 ರಂದು ಶ್ರೀರಂಗಪಟ್ಟಣ ಚಲೋಗೆ ಕರೆ ನೀಡಿದೆ.

    ಜಾಮಿಯಾ ಮಸೀದಿ ಈ ಹಿಂದೆ ಮೂಡಲಬಾಗಿಲು ಆಂಜನೇಯಸ್ವಾಮಿ ದೇವಸ್ಥಾನವಾಗಿತ್ತು, ಟಿಪ್ಪು ಸುಲ್ತಾನ್ ದೇವಸ್ಥಾನದ ಮೇಲೆ ಈ ಜಾಮಿಯಾ ಮಸೀದಿಯನ್ನು ನಿರ್ಮಾಣ ಮಾಡಿದ್ದಾನೆ. ಇಂದಿಗೂ ಜಾಮಿಯಾ ಮಸೀದಿಯಲ್ಲಿ ದೇವಸ್ಥಾನದ ಹಲವು ಕುರುಹುಗಳು ಇವೆ. ಇಲ್ಲಿ ಮೂಡಲಬಾಗಿಲು ಆಂಜನೇಯಸ್ವಾಮಿ ದೇವಸ್ಥಾನದ ಗರ್ಭಗುಡಿ ಇದೆ ಈ ನಿಟ್ಟಿನಲ್ಲಿ ನಮಗೆ ಅಲ್ಲಿ ಪೂಜೆ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಿ ಎಂದು ಜಿಲ್ಲಾಧಿಕಾರಿಗೆ ವಿಹೆಚ್‌ಪಿ ಮನವಿ ಸಲ್ಲಿಸಿತ್ತು.

    ಜಿಲ್ಲಾಧಿಕಾರಿಗಳು ಈ ಮನವಿಗೆ ಪೂರಕವಾಗಿ ಸ್ಪಂದಿಸದ ಕಾರಣ ವಿಹೆಚ್‌ಪಿ ಹಾಗೂ ಭಜರಂಗ ದಳದ ಪದಾಧಿಕಾರಿಗಳು ಜೂನ್ 4 ರಂದು ಶ್ರೀರಂಗಪಟ್ಟಣ ಚಲೋಗೆ ಕರೆ ನೀಡಿದ್ದಾರೆ. ಈ ಚಲೋದಲ್ಲಿ ಸಾವಿರಾರು ಮಂದಿ ಹನುಮನ ಭಕ್ತರು ಪಾಲ್ಗೊಳ್ಳುವ ಸಾಧ್ಯತೆ ಇದ್ದು, ಅಂದು ಹನುಮ ಭಕ್ತರು ಮಸೀದಿಯ ಒಳಗಡೆ ಪ್ರವೇಶ ಮಾಡಿ ಆಂಜನೇಯಸ್ವಾಮಿ ಪೂಜೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

    Aswathi

    ಜೂನ್ 4 ರಂದು ಶ್ರೀರಂಗಪಟ್ಟಣ ಚಲೋ ಹಿನ್ನೆಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಜಾಮಿಯಾ ಮಸೀದಿ ಸುತ್ತಲೂ ಪೊಲೀಸರ ಕಣ್ಗಾವಲು ಇರಿಸಲಾಗಿದ್ದು, ಅಹಿತಕರ ಘಟನೆ ಜರುಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಮಸೀದಿಯ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಿದ್ದು ಜೂನ್ 3 ಮತ್ತು 4ರಂದು ಜಾಮಿಯಾ ಮಸೀದಿ ಸುತ್ತ 144 ಸೆಕ್ಷನ್ ಜಾರಿಗೆ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ.

  • ಮುಸ್ಲಿಂ ರಾಜರ ಆಳ್ವಿಕೆಯಲ್ಲಿ ಹಿಂದೂ ದೇವಾಲಯದ ಮೇಲೆ ಮಸೀದಿ ಕಟ್ಟಿದ್ದಾರೆ: ಸಿ.ಟಿ.ರವಿ

    ಮುಸ್ಲಿಂ ರಾಜರ ಆಳ್ವಿಕೆಯಲ್ಲಿ ಹಿಂದೂ ದೇವಾಲಯದ ಮೇಲೆ ಮಸೀದಿ ಕಟ್ಟಿದ್ದಾರೆ: ಸಿ.ಟಿ.ರವಿ

    -ಕಾಂಗ್ರೆಸ್‍ನಿಂದ ಪ್ರಾಮಾಣಿಕತೆ ನಿರೀಕ್ಷಿಸಬೇಡಿ
    -ಖರ್ಗೆ ಸಂವಿಧಾನ ನನಗೆ ಗೊತ್ತಿಲ್ಲ

    ಕಲಬುರಗಿ: ಅಂಗೈ ಹುಣ್ಣಿಗೆ ಸಾಕ್ಷಿ ನೋಡಬೇಕಾದ ಅವಶ್ಯಕತೆ ಇಲ್ಲ. ಮುಸ್ಲಿಂ ರಾಜರ ಆಳ್ವಿಕೆಯಲ್ಲಿ ಹಿಂದೂ ದೇವಾಲಯದ ಮೇಲೆ ಮಸೀದಿ ಕಟ್ಟಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.

    ಕಲಬುರಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜ್ಞಾನವ್ಯಾಪಿ ಮಸೀದಿ ಬಗ್ಗೆ ಸರ್ವೇಕ್ಷಣಾ ನಡೆಯುತ್ತಿದೆ. ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ ಮೇಲೆ ಸತ್ಯ ಗೊತ್ತಾಗಲಿದೆ. ಅಂಗೈ ಹುಣ್ಣಿಗೆ ಸಾಕ್ಷಿ ನೋಡಬೇಕಾದ ಅವಶ್ಯಕತೆ ಇಲ್ಲ. ಮುಸ್ಲಿಂ ರಾಜರ ಆಳ್ವಿಕೆಯಲ್ಲಿ ಹಿಂದೂ ದೇವಾಲಯದ ಮೇಲೆ ಮಸೀದಿ ಕಟ್ಟಿದ್ದಾರೆ. ಸ್ವತಂತ್ರ ಭಾರತದಲ್ಲಿ ಸತ್ಯಕ್ಕೂ ಸಾಕ್ಷಿ ಬೇಕು. ಹಾಗಾಗಿ ಸಾಕ್ಷಿ ಒದಗಿಸುವ ಕೆಲಸ ನಡೆಯುತ್ತಿದೆ ಎಂದರು.

    ಶ್ರೀರಂಗಪಟ್ಟಣ ಮೂಡಲಬಾಗಿಲಿನಲ್ಲಿ ಆಂಜನೇಯ ದೇವಸ್ಥಾನ ಇದ್ದ ಬಗ್ಗೆ ಸಾಕ್ಷಿ ಇದೆ. ಟಿಪ್ಪು ಅದರ ಮೇಲೆ ಜಾಮೀಯಾ ಮಸೀದಿ ಕಟ್ಟಿರುವುದು. ಅಲ್ಲಿನ ಮಕ್ಕಳಿಗೂ ಗೊತ್ತಿದೆ. ಅಲ್ಲಿನ ಸರ್ವೇಕ್ಷಣ ಮಾಡಿದರೆ, ಸತ್ಯ ಗೊತ್ತಾಗುತ್ತದೆ. ಟಿಪ್ಪು ಕನ್ನಡ ಪ್ರೇಮಿ ಅಂತಾರೆ, ಆದರೆ ಆತ ಆಡಳಿತ ಭಾಷೆಯನ್ನು ಪರ್ಷಿಯನ್ ಭಾಷೆ ಮಾಡಿದ್ದ. ಹಾಗಾಗಿ ಮೇಲಿನ ತೆರೆ ಸರಿಸಿದರೆ ಸತ್ಯ ಗೊತ್ತಾಗುತ್ತದೆ ಎಂದು ಹೇಳಿದರು.

    ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಸಾಯಿ ಶಂಕರ ಶಾಲೆಯಲ್ಲಿ ಭಜರಂಗದಳ ನೂರಾರು ಯುವಕರಿಗೆ ಶಸ್ತ್ರಾಸ್ತ್ರ ತರಬೇತಿ ನೀಡುತ್ತಿದ್ದು, ಈ ವಿಚಾರವಾಗಿ ಮಾತನಾಡಿದ ಅವರು, ಭಜರಂಗದಳ ಪ್ರತಿ ವರ್ಷ ಅಭ್ಯಾಸ ವರ್ಗ ನಡೆಸುತ್ತದೆ. ಪೊಲೀಸ್ ಇಲಾಖೆ ಕೂಡಾ ತರಬೇತಿ ನೀಡುತ್ತದೆ. ಆದರೆ ಬಾಂಬ್ ಹಾಕುವ ತರಬೇತಿ ಕೊಟ್ಟಿಲ್ಲ. ಬದಲಾಗಿ ಏರ್ ಗನ್ ತರಬೇತಿ ನೀಡಿದೆ. ಅದರಲ್ಲಿ ತಪ್ಪೇನಿಲ್ಲ ಎಂದರು. ಇದನ್ನೂ ಓದಿ: ಬೆಳಗಾವಿಯಲ್ಲಿ ಐಟಿ ಪಾರ್ಕ್ ಸ್ಥಾಪನೆಗೆ ಪರಿಸರವಾದಿಗಳ ತೀವ್ರ ವಿರೋಧ

    ಕಾಂಗ್ರೆಸ್‍ಗೆ ನಿಯಮ ಮಾಡುವುದು ಗೊತ್ತು ಅದನ್ನು ಬೈಪಾಸ್ ಮಾಡುವುದು ಗೊತ್ತು. ಐದು ವರ್ಷ ಕಾರ್ಯಕರ್ತನಾಗಿ ದುಡಿದಿದ್ದರೆ, ಟಿಕೆಟ್ ನೀಡಬಹುದು ಎನ್ನುವ ಪರ್ಯಾಯ ಮಾರ್ಗವನ್ನು ಹುಡುಕಿ ಕೊಂಡಿದ್ದಾರೆ. ಕಾಂಗ್ರೆಸ್‍ನಿಂದ ಪ್ರಾಮಾಣಿಕತೆ, ದೇಶಭಕ್ತಿ ನಿರೀಕ್ಷೆ ಮಾಡಲೇಬೇಡಿ. ವಂಶವಾಹಿನಿ ಹೊರತಾದ ರಾಜಕಾರಣ. ಮತಿಯ ಓಲೈಕೆ ಇಲ್ಲದ ರಾಜಕಾರಣ, ಭ್ರಷ್ಟಾಚಾರ ರಹಿತ ಆಡಳಿತ ಕಾಂಗ್ರೆಸ್ ನಿಂದ ನಿರೀಕ್ಷೆ ಮಾಡಿದರೆ ಭ್ರಮ ನಿರಸನವಾಗುತ್ತದೆ ಎಂದು ವ್ಯಂಗ್ಯವಾಡಿದರು.

    ಇದೇ ವೇಳೆ ಬಿಜೆಪಿಯವರಿಗೆ ಸಂವಿಧಾನ ಕಲಿಸಬೇಕಾಗಿದೆ ಎಂಬ ಪ್ರಿಯಾಂಕ ಖರ್ಗೆ ಹೇಳಿಕೆ ಕುರಿತಂತೆ ಮಾತನಾಡಿದ ಅವರು, ನಮಗೆ ಅಂಬೇಡ್ಕರ್ ಸಂವಿಧಾನದ ಬಗ್ಗೆ ಗೊತ್ತು. ಆದರೆ ಪ್ರಿಯಾಂಕ್ ಖರ್ಗೆ ಅವರ ಸಂವಿಧಾನದ ಬಗ್ಗೆ ಗೊತ್ತಿಲ್ಲ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ:  ಅಶ್ವತ್ಥನಾರಾಯಣ ಪ್ರಯೋಗ ಫೇಲ್ಯೂರ್ – ಹೈಕಮಾಂಡ್ ಅಸಮಾಧಾನದಿಂದ ಏಕಾಂಗಿಯಾದ ಸಚಿವ

    ಚಿಕ್ಕಮಗಳೂರು ದತ್ತ ಪೀಠದ ಘೋರಿಗಳಿಗೆ ಮಾಂಸ ನೈವೇದ್ಯ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಇದು ಅಕ್ಷಮ್ಯ ಅಪರಾಧ. ಇದರ ಹಿಂದೆ ಯಾರೇ ಇದ್ದರೂ ಕ್ರಮ ಆಗಬೇಕು. ನಿನ್ನೆ ರಾತ್ರಿಯಷ್ಟೇ ಈ ವಿಚಾರ ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಜಿಲ್ಲಾಧಿಕಾರಿಗೆ ವಾಟ್ಸಪ್ ಸಂದೇಶ ಕಳುಹಿಸಿದ್ದೇನೆ. 300 ಮೀಟರ್ ವ್ಯಾಪ್ತಿಯಲ್ಲಿ ಪ್ರಾಣಿ ಬಲಿ ನಿಶ್ಯಿದ್ಧವಾಗಿದೆ. ಆದರೂ ಹೇಗೆ ಅವಕಾಶ ಕೊಟ್ಟರೋ ಗೊತ್ತಿಲ್ಲ. ಪ್ರಾಣಿ ಬಲಿ ಮಾಡಿದವರ ವಿರುದ್ಧ ಮತ್ತು ನಿರ್ಲಕ್ಷ್ಯ ತೋರಿದ ಮುಜರಾಯಿ ಇಲಾಖೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಇದರ ಹಿಂದೆ ಯಾರಿದ್ದಾರೆ, ಅವರ ವಿರುದ್ಧವೂ ಸೂಕ್ತ ಕ್ರಮ ಆಗಬೇಕು. ನಿಯಂತ್ರಣ ಜವಾಬ್ದಾರಿ ಹೊತ್ತವರು ನಿರ್ಲಕ್ಷ್ಯತನ ಮಾಡಿದ್ದು ಸರಿಯಲ್ಲ. ಈ ಬಗ್ಗೆ ಸೂಕ್ತ ತನಿಖೆ ಆಗಬೇಕು. ನಾನು ಊರಲ್ಲಿ ಇಲ್ಲದ ಸಮಯ ಈ ಘಟನೆ ನಡೆದಿದೆ. ನಾನು ಹೋದ ಮೇಲೆ ಪರಿಶೀಲಿಸುವೆ ಎಂದರು