Tag: Jamkhandi

  • 5.71 ಲಕ್ಷ ನೀಡಿ ಮಾಳಿಂಗರಾಯ ಗದ್ದುಗೆಯ ತೆಂಗಿನಕಾಯಿ ಪಡೆದ ಭಕ್ತ

    5.71 ಲಕ್ಷ ನೀಡಿ ಮಾಳಿಂಗರಾಯ ಗದ್ದುಗೆಯ ತೆಂಗಿನಕಾಯಿ ಪಡೆದ ಭಕ್ತ

    ಬಾಗಲಕೋಟೆ: ಜಿಲ್ಲೆಯ ಜಮಖಂಡಿ (Jamkhandi)  ತಾಲೂಕಿನ ಚಿಕ್ಕಲಕಿ ಗ್ರಾಮದ ನಡೆದ ಮಾಳಿಂಗರಾಯ ಜಾತ್ರೆಯಲ್ಲಿ ದಾಖಲೆ ಮೊತ್ತಕ್ಕೆ ಮಾಳಿಂಗರಾಯ ಗದ್ದುಗೆಯ (Malingaraya-Gadduge)  ತೆಂಗಿನಕಾಯಿ ಹರಾಜು ಆಗಿದೆ.

    ವಿಜಯಪುರ ಜಿಲ್ಲೆಯ ತಿಕೋಟಾ ಗ್ರಾಮದ ಭಕ್ತನಾದ (Devotee) ಮಾಹಾವೀರ ಹರಕೆಯವರು ಹರಾಜಿನಲ್ಲಿ ದೇವರ ಮುಂದಿನ ಈ ತೆಂಗಿನಕಾಯಿಯನ್ನು 5,71,001 ರೂ.ಗೆ ಪಡೆದುಕೊಂಡಿದ್ದಾರೆ. ಈ ತೆಂಗಿನಕಾಯಿಯನ್ನು ಪಡೆಯಲು ಚಿಕ್ಕಲಕಿ ಗ್ರಾಮದ ಮುದುಕಪ್ಪ ಮಾಳಪ್ಪ ಪಟೇದ್ದಾರ ಮತ್ತು ಗೋಠೆ ಗ್ರಾಮದ ಸದಾಶಿವ ಮೈಗೂರರವರ ಮಧ್ಯೆ ಸ್ಪರ್ಧೆ ಏರ್ಪಟ್ಟಿತ್ತು. ಇದನ್ನೂ ಓದಿ: ಬುರುಡೆ ಕೇಸ್ ಎಸ್‌ಐಟಿಯಿಂದ ಸತತ 12 ಗಂಟೆ ತಿಮರೋಡಿ ಮನೆ ಶೋಧ

     

    ತೆಂಗಿನಕಾಯಿಯ ವಿಶೇಷ ಏನು?
    ಮಹಿಮಾಂತ ಮಾಳಿಂಗರಾಯ ದೇವರ ಗದ್ದುಗೆ ಮೇಲೆ ಈ ತೆಂಗಿನಕಾಯಿಯನ್ನು ಶ್ರಾವಣ ಮಾಸದ ಒಂದು ತಿಂಗಳ ಕಾಲ ಪೂಜಿಸಲಾಗಿರುತ್ತದೆ. ಇದೇ ತೆಂಗಿನ ಕಾಯಿಯನ್ನು ಹಿಂದೊಮ್ಮೆ ಮಾಹಾವೀರ ಹರಕೆಯವರು ಹರಾಜಿನಲ್ಲಿ 6,50,001 ರೂ.ಗೆ ಪಡೆದುಕೊಂಡಿದ್ದರು. ಈಗ ಮತ್ತೆ ದಾಖಲೆಯ ಮೊತ್ತಕ್ಕೆ ಮಹಾಳಿಂಗರಾಯನ ತೆಂಗಿನಕಾಯಿ ತಮ್ಮದಾಗಿಸಿಕೊಂಡು ವಿಶೇಷ ಭಕ್ತಿ ಪ್ರದರ್ಶಿಸಿದ್ದಾರೆ.

    ಈ ಸಂದರ್ಭದಲ್ಲಿ ಮಾಳಿಂಗರಾಯ ಪಟ್ಟದ ದೇವರು ಗುರು ಮುತ್ಯಾ ಬಬಲಾದಿ, ಮಾಳಿಂಗರಾಯ ದೇವರ ಅರ್ಚಕರಾದ ಸಿದ್ದಣ ಪೂಜಾರಿ, ಹಿರಿಯರಾದ ದುಂಡಪ್ಪ ಬಬಲಾದಿ, ಕಲ್ಲಪ್ಪ ಗಿಡಗಿಂಚಿ, ಗ್ರಾಮಪಂಚಾಯತ್ ಸದಸ್ಯರರಾದ ಬಸವರಾಜ ಆಲಗೂರ, ಸಂತೋಷ ಮಮದಾಪೂರ, ಜಾತ್ರೆಯಲ್ಲಿ ನೇರೆದಿದ್ದ ಭಕ್ತ ಸಮೂಹ ಉಪಸ್ಥಿತರಿದ್ದರು.

  • ಕಬ್ಬಿನ ಬಿಲ್ ಪಾವತಿಗೆ ಆಗ್ರಹಿಸಿ ಜಮಖಂಡಿ ಶುಗರ್ಸ್ ಫ್ಯಾಕ್ಟರಿ ಮುಂದೆ ರೈತರ ಅಹೋರಾತ್ರಿ ಧರಣಿ

    ಕಬ್ಬಿನ ಬಿಲ್ ಪಾವತಿಗೆ ಆಗ್ರಹಿಸಿ ಜಮಖಂಡಿ ಶುಗರ್ಸ್ ಫ್ಯಾಕ್ಟರಿ ಮುಂದೆ ರೈತರ ಅಹೋರಾತ್ರಿ ಧರಣಿ

    ಬಾಗಲಕೋಟೆ: ಕಬ್ಬಿನ ಬಿಲ್‌ (Sugar Cane Bill)  ಪಾವತಿಸದ್ದಕ್ಕೆ  ಜಮಖಂಡಿ ಶುಗರ್ಸ್ ಕಾರ್ಖಾನೆ (Jamkhandi Sugar Factory) ವಿರುದ್ಧ ರೈತರು (Farmers) ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ.

    ಜಮಖಂಡಿ ತಾಲೂಕಿನ ನಾಗನೂರು ಗ್ರಾಮದಲ್ಲಿರುವ ಕಾರ್ಖಾನೆ ಬಳಿ ಪ್ರತಿಭಟನೆ ಕುಳಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಖಾನೆ ಗೇಟ್ ಬಳಿ ಕಟ್ಟಿಗೆ ಸುಟ್ಟು, ಮಾಲೀಕರ ವಿರುದ್ಧ ಧಿಕ್ಕಾರ ಕೂಗಿದ್ದಾರೆ.  ಇದನ್ನೂ ಓದಿ: ಪತ್ನಿ ಮನೆಬಿಟ್ಟು ಹೋಗಿದ್ದಕ್ಕೆ ಬೇಸತ್ತು ಪತಿ ಆತ್ಮಹತ್ಯೆ

    ಪ್ರತಿಭಟನೆಯಲ್ಲಿ (Protest) ಜಮಖಂಡಿ ಹಾಗೂ ವಿಜಯಪುರ ಭಾಗದ ರೈತರು ಭಾಗಿಯಾಗಿದ್ದು, ಕೂಡಲೇ ಸಕ್ಕರೆ ಕಾರ್ಖಾನೆ  ಆಡಳಿತ ಮಂಡಳಿಯವರು ಬಿಲ್ ಪಾವತಿಸದಿದ್ದರೆ ಹೋರಾಟ ಉಗ್ರ ರೂಪ ಪಡೆದುಕೊಳ್ಳಲಿದೆ ಎಂಬ ಎಚ್ಚರಿಕೆ ನೀಡಿದ್ದಾರೆ.

    ಕಾರ್ಖಾನೆ ಅಧ್ಯಕ್ಷರಾಗಿರುವ ಮಾಜಿ ಶಾಸಕ ಆನಂದ್ ನ್ಯಾಮಗೌಡರಿಗೆ ಸಾಕಷ್ಟು ಬಾರಿ ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ. ಹೀಗಾಗಿ ನಾವು ಹೋರಾಟ ಹಾದಿ ಹಿಡಿದಿದ್ದೇವೆ ಎಂದು ಕಾರ್ಖಾನೆ ಆಡಳಿತ ಮಂಡಳಿ ವಿರುದ್ಧ ರೈತರು ಸಿಟ್ಟು ಹೊರ ಹಾಕಿದ್ದಾರೆ.

  • ಜಮಖಂಡಿಯಲ್ಲಿ ಚಿರತೆ ಪ್ರತ್ಯಕ್ಷ – ಆತಂಕದಲ್ಲಿ ಗ್ರಾಮಸ್ಥರು

    ಜಮಖಂಡಿಯಲ್ಲಿ ಚಿರತೆ ಪ್ರತ್ಯಕ್ಷ – ಆತಂಕದಲ್ಲಿ ಗ್ರಾಮಸ್ಥರು

    ಬಾಗಲಕೋಟೆ: ಜಮಖಂಡಿ (Jamkhandi) ‌ನಗರದ ಹೊರ ವಲಯದ ಬಳಿ ಚಿರತೆಯೊಂದು (Leopard) ಪ್ರತ್ಯಕ್ಷವಾಗಿ ಗ್ರಾಮಸ್ಥರಿಗೆ ಭಯ‌ ಮೂಡಿಸಿದೆ.

    ನಗರದ ಹೊರ ವಲಯದ ಕುಂಚನೂರು ರಸ್ತೆ ಬಳಿ ಗುರುವಾರ ರಾತ್ರಿ ಚಿರತೆ ಹೊಲದಿಂದ ಮತ್ತೊಂದು ಹೊಲಕ್ಕೆ ತೆರಳುವಾಗಿ, ಟ್ರ್ಯಾಕ್ಟರ್ ಚಾಲಕನ ಕಣ್ಣಿಗೆ ಬಿದ್ದಿದೆ. ಟ್ರ್ಯಾಕ್ಟರ್ ಲೈಟ್ ಬೆಳಕಿನ ಮಧ್ಯೆಯೂ ಚಿರತೆ ಮತ್ತೊಂದು ಹೊಲಕ್ಕೆ ನುಗ್ಗಿದೆ. ಇದನ್ನೂ ಓದಿ: ಸಿಂಧನೂರು | ಸರ್ಕಾರಿ ಹುದ್ದೆಗಾಗಿ ನಗರಸಭೆ ಅಧ್ಯಕ್ಷೆ ಸ್ಥಾನಕ್ಕೆ ರಾಜೀನಾಮೆ

    ಚಿರತೆಯನ್ನ ನೋಡಿದ ಟ್ರ್ಯಾಕ್ಟರ್ ಚಾಲಕ, ಟ್ರ್ಯಾಕ್ಟರ್ ನಿಲ್ಲಿಸಿ ಚಿರತೆಯ ವಿಡಿಯೋ ಮಾಡಿದ್ದಾರೆ. ಚಿರತೆಯ ವಿಡಿಯೋ ತುಣುಕು ಕಂಡ ಜಮಖಂಡಿ ಹಾಗೂ ಕುಂಚನೂರು ಗ್ರಾಮಸ್ಥರಿಗೆ ಭಯ ಆವರಸಿದೆ. ಇದನ್ನೂ ಓದಿ: ಐತಿಹಾಸಿಕ ಕ್ಷಣ; ಯುನೆಸ್ಕೋದ ʻಮೆಮೋರಿ ಆಫ್ ದಿ ವರ್ಲ್ಡ್ ರಿಜಿಸ್ಟರ್‌ʼಗೆ ಭಗವದ್ಗೀತೆ, ನಾಟ್ಯಶಾಸ್ತ್ರ ಸೇರ್ಪಡೆ

    ಚಿರತೆ ಸೆರೆಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಗ್ರಾಮಸ್ಥರು ಮನವಿ‌ ಮಾಡಿದ್ದಾರೆ. ಇತ್ತ ಚಿರತೆಯ ಸೆರೆಗೆ ಬಲೆ ಬೀಸಿರುವ ಅರಣ್ಯಾಧಿಕಾರಿಗಳು ಚಿರತೆಯ ಚಲನವಲನ ಗಮಿಸಲು ಅಲ್ಲಲ್ಲಿ ಸಿಸಿ ಕ್ಯಾಮರಾ ಅಳವಡಿಸಿದ್ದಾರೆ.

  • ಮದುವೆಯಾಗಲು ಬಂದ ಪ್ರೇಮಿಗಳಿಗೆ ಗೂಸಾ – ರಕ್ತ ಸುರಿಯುತ್ತಿದ್ದರೂ ಪ್ರಿಯಕರನತ್ತ ಕೈ ಸನ್ನೆ ಮಾಡಿದ ಯುವತಿ

    ಮದುವೆಯಾಗಲು ಬಂದ ಪ್ರೇಮಿಗಳಿಗೆ ಗೂಸಾ – ರಕ್ತ ಸುರಿಯುತ್ತಿದ್ದರೂ ಪ್ರಿಯಕರನತ್ತ ಕೈ ಸನ್ನೆ ಮಾಡಿದ ಯುವತಿ

    ಬಾಗಲಕೋಟೆ: ಮದುವೆಯಾಗಲು ಸಬ್ ರಿಜಿಸ್ಟ್ರಾರ್ ಕಚೇರಿಗೆ (Sub-Registrar Office) ಆಗಮಿಸಿದ್ದ ಪ್ರೇಮಿಗಳ ಮೇಲೆ ಯುವತಿ ಕಡೆಯುವರು ದಾಳಿ ನಡೆಸಿ ಯುವತಿಯನ್ನು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಶುಕ್ರವಾರ ಜಿಲ್ಲೆಯ ಜಮಖಂಡಿ (Jamkhandi ) ನಗರದಲ್ಲಿ ನಡೆದಿದೆ.

    ನಗರದ ಉಳ್ಳಾಗಡ್ಡಿ ಏರಿಯಾದ ಪ್ರೇಮಿಗಳಾದ ಗಾಣಿಗ ಸಮುದಾಯದ ಲಕ್ಷ್ಮೀ, ಮರಾಠಾ ಸಮುದಾಯದ ಅಪ್ಪಾಜಿ ಅಂತರ್ಜಾತಿ ವಿವಾಹಕ್ಕೆ ಬೆಳಿಗ್ಗೆ ರಿಜಿಸ್ಟರ್ ಮದುವೆ ಮಾಡಿಕೊಳ್ಳಲು ಜಮಖಂಡಿಯ ಸಬ್ ರಿಜಿಸ್ಟ್ರಾರ್ ಕಚೇರಿಗೆ ಆಗಮಿಸಿದ್ದರು. ಇದನ್ನೂ ಓದಿ: ಪ್ರಮೋದಾದೇವಿ ಒಡೆಯರ್‌ಗೆ ನಮ್ಮ ಗ್ರಾಮ ರಿಜಿಸ್ಟರ್‌ ಮಾಡಿಕೊಡಬೇಡಿ: ಡಿಸಿಗೆ ಗ್ರಾಮಸ್ಥರ ಮನವಿ

    ವಿಷಯ ತಿಳಿದು ಕಚೇರಿಗೆ ಧಾವಿಸಿದ ಯುವತಿಯ ಮನೆಕಡೆಯ ಪೋಷಕರು ಯುವತಿಗೆ ರಕ್ತ ಬರುವ ಹಾಗೆ ಹಲ್ಲೆ ಮಾಡಿದ್ದಾರೆ. ಮೂರ್ಛೆ ಹೋಗಿ ಬಿದ್ದರೂ ಬಿಡದ ಹುಡುಗಿಯ ಮನೆಯವರು ಯುವತಿಗೆ ನೀರು ಕುಡಿಸಿ, ಮನೆಗೆ ಎಳೆದುಕೊಂಡು ಹೋಗಿದ್ದಾರೆ. ಇದನ್ನೂ ಓದಿ: ಹೆಂಡತಿಯನ್ನು ಮನೆಗೆ ಕರೆದಿದ್ದಕ್ಕೆ ಚಾಕು ಇರಿದ ಬಾಮೈದ – ಆಸ್ಪತ್ರೆಯಲ್ಲಿ ಪ್ರಾಣಬಿಟ್ಟ ಪತಿ!

    ಈ ನಡುವೆ ರಿಕ್ಷಾದಲ್ಲಿದ್ದ ಯುವತಿ ಬಾಯಿಯಿಂದ ರಕ್ತ ಸುರಿಯುತ್ತಿದ್ದರೂ ಪ್ರಿಯಕರನತ್ತ ಕೈ ಸನ್ನೆ ಮಾಡುತ್ತಿದ್ದಳು. ಹಲ್ಲೆಗೆ ಒಳಗಾಗಿರುವ ಯುವತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

    ಜಮಖಂಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಿಯಕರ ಸ್ಥಳೀಯ ಜಮಖಂಡಿ ಪೊಲೀಸ್ ಠಾಣೆಯಲ್ಲಿ ತಂಗಿದ್ದಾನೆ.

  • ಜಮಖಂಡಿಯಲ್ಲಿ ಸರಣಿ ಅಪಘಾತ – ಮೂವರು ಸಾವು

    ಜಮಖಂಡಿಯಲ್ಲಿ ಸರಣಿ ಅಪಘಾತ – ಮೂವರು ಸಾವು

    ಬಾಗಲಕೋಟೆ: ಟಾಟಾ ಏಸ್, ಕಾರು, ಎರಡು ಬೈಕ್‍ಗಳ ನಡುವೆ ನಡೆದ ಸರಣಿ ಅಪಘಾತದಲ್ಲಿ (Accident) ಮೂವರು ಸಾವಿಗೀಡಾದ ಘಟನೆ ಜಮಖಂಡಿ (Jamkhandi) ತಾಲೂಕಿನ ಆಲಗೂರು ಗ್ರಾಮದಲ್ಲಿ ನಡೆದಿದೆ.

    ಜಮಖಂಡಿಯಿಂದ ವಿಜಯಪುರಕ್ಕೆ ತರಳುತ್ತಿದ್ದ ಟಾಟಾ ಏಸ್‍ಗೆ ವಿಜಯಪುರದಿಂದ ಜಮಖಂಡಿಗೆ ಬರುತ್ತಿದ್ದ ಕಾರು ಡಿಕ್ಕಿಯಾಗಿದೆ. ಇದೇ ವೇಳೆ ಟಾಟಾ ಏಸ್ ಹಿಂದೆ ಇದ್ದ ಎರಡು ಬೈಕ್‍ಗಳು ಡಿಕ್ಕಿಯಾಗಿವೆ. ಪರಿಣಾಮ ಟಾಟಾ ಏಸ್, ಕಾರು ಹಾಗೂ ಬೈಕ್‍ನಲ್ಲಿದ್ದ ತಲಾ ಒಬ್ಬೊಬ್ಬರು ಸಾವನ್ನಪ್ಪಿದ್ದಾರೆ.

    ಮೃತರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ. ಪೊಲೀಸರು ಮೃತರ ಗುರುತು ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.

    ಸ್ಥಳಕ್ಕೆ ಜಮಖಂಡಿ ಸಿಪಿಐ ಮಲ್ಲಪ್ಪ ಮಡ್ಡಿ, ಪಿಎಸ್‍ಐ ಗಂಗಾಧರ್ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

  • ಬಿಜೆಪಿ ಟಿಕೆಟ್ ಕೈ ತಪ್ಪಿದ್ದಕ್ಕೆ ಪಕ್ಷದ ಜವಾಬ್ದಾರಿಗೆ ಬಸವರಾಜ ಸಿಂಧೂರ ರಾಜೀನಾಮೆ?

    ಬಿಜೆಪಿ ಟಿಕೆಟ್ ಕೈ ತಪ್ಪಿದ್ದಕ್ಕೆ ಪಕ್ಷದ ಜವಾಬ್ದಾರಿಗೆ ಬಸವರಾಜ ಸಿಂಧೂರ ರಾಜೀನಾಮೆ?

    ಬಾಗಲಕೋಟೆ: ಜಮಖಂಡಿ ಉಪಚುನಾವಣೆ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಶಾಸಕ ಶ್ರೀಕಾಂತ್ ಕುಲಕರ್ಣಿ ಅವರ ಹೆಸರು ಘೋಷಣೆಯಾದ ಬೆನ್ನಲ್ಲೇ, ಪಕ್ಷದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಈ ಮೂಲಕ ಟಿಕೆಟ್ ಆಕಾಂಕ್ಷಿಯೊಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

    ಜಮಖಂಡಿಯ ಬಿಜೆಪಿ ಮುಖಂಡ ಬಸವರಾಜ ಸಿಂಧೂರ ಅವರು, ರಾಜ್ಯ ಬಿಜೆಪಿ ಕಬ್ಬು ಬೆಳೆಗಾರರ ಪ್ರಕೋಷ್ಟದ ಸಹಸಂಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಉಪಚುನಾವಣೆ ಟಿಕೆಟ್‍ನ ಪ್ರಬಲ ಆಕಾಂಕ್ಷಿಯಾಗಿದ್ದ ಅವರಿಗೆ ಭಾರೀ ನಿರಾಸೆ ಉಂಟಾಗಿದ್ದು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

    ಬಸವರಾಜ ಸಿಂಧೂರ ಅವರು ಕಳೆದ ಎರಡು ದಿನಗಳಿಂದ ಬೆಂಗಳೂರಲ್ಲಿ ಬೀಡು ಬಿಟ್ಟಿದ್ದರು. ಈ ವೇಳೆ ರಾಜ್ಯ ಬಿಜೆಪಿ ನಾಯಕರ ಮನವೊಲಿಕೆಗೆ ಪ್ರಯತ್ನಿಸಿ, ಟಿಕೆಟ್ ಗಿಟ್ಟಿಸಿಕೊಳ್ಳಲು ಯತ್ನಿಸಿದ್ದರು. ಅಷ್ಟೇ ಅಲ್ಲದೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ, ಟಿಕೆಟ್ ನೀಡುವಂತೆ ಮನವಿ ಮಾಡಿದ್ದರು.

    ಶ್ರೀಕಾಂತ್ ಕುಲಕರ್ಣಿ ಅವರಿಗೆ ಟಿಕೆಟ್ ನೀಡಿರುವ ವಿಚಾರದಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಕೂಡ ಅಸಹಾಯಕರಾಗಿದ್ದಾರೆ. ಇದರಿಂದಾಗಿ ಜಮಖಂಡಿಗೆ ಮರಳಿ ಬೆಂಬಲಿಗರ ಜೊತೆ ಚರ್ಚೆ ನಡೆಸುತ್ತೇನೆ. ಅವರ ಸಲಹೆ ಹಾಗೂ ನಿರ್ಧಾರದ ಮೇಲೆ ಮುಂದಿನ ನಡೆ ಎಂದು ಬಸವರಾಜ ಸಿಂಧೂರ ಅವರು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv