Tag: Jammu and Kashmir

  • ಕದನ ವಿರಾಮ ಉಲ್ಲಂಘಿಸಿದ ಪಾಕ್ – ಲೀಪಾ ಕಣಿವೆಯ ಎಲ್‌ಒಸಿ ಉದ್ದಕ್ಕೂ ಗುಂಡಿನ ದಾಳಿ

    ಕದನ ವಿರಾಮ ಉಲ್ಲಂಘಿಸಿದ ಪಾಕ್ – ಲೀಪಾ ಕಣಿವೆಯ ಎಲ್‌ಒಸಿ ಉದ್ದಕ್ಕೂ ಗುಂಡಿನ ದಾಳಿ

    ನವದೆಹಲಿ: ಜಮ್ಮು ಮತ್ತು ಕಾಶ್ಮೀರದ (Jammu And Kashmir) ಲೀಪಾ ಕಣಿವೆಯಲ್ಲಿ (Leepa valley) ಎಲ್‌ಒಸಿ ಉದ್ದಕ್ಕೂ ಪಾಕಿಸ್ತಾನಿ ಸೇನೆ (Pakistani Army) ಕದನ ವಿರಾಮವನ್ನು ಉಲ್ಲಂಘಿಸಿ (Ceasefire Violation) ಭಾರತೀಯ ಪೋಸ್ಟ್‌ಗಳ ಮೇಲೆ ಗುಂಡು ಹಾರಿಸಿದೆ ಎಂದು ಮೂಲಗಳು ತಿಳಿಸಿವೆ. ಅಕ್ಟೋಬರ್ 26-27ರ ಮಧ್ಯರಾತ್ರಿ ಪಾಕಿಸ್ತಾನ ಸಣ್ಣ ಶಸ್ತ್ರಾಸ್ತ್ರಗಳನ್ನು ಮತ್ತು ಮಾರ್ಟರ್ ಶೆಲ್ಲಿಂಗ್ ಬಳಸಿ ದಾಳಿ ನಡೆಸಿದೆ.

    ಪಾಕಿಸ್ತಾನದ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆಯು ಸೂಕ್ತ ಪ್ರತ್ಯುತ್ತರ ನೀಡಿದೆ ಎಂದು ಮೂಲಗಳು ತಿಳಿಸಿವೆ. ಲೀಪಾ 9 ಕಿ.ಮೀ ಎತ್ತರದ ಕಣಿವೆಯಾಗಿದ್ದು, ಇದು ಕಾಜಿನಾಗ್ ಸ್ಪ್ರಿಂಗ್ ಮೂಲಕ ಹಾದುಹೋಗುತ್ತದೆ ಮತ್ತು ಇದು ಬಹಳ ಹಿಂದಿನಿಂದಲೂ ಒಳನುಸುಳುವಿಕೆ ಪ್ರಯತ್ನಗಳಿಗೆ ಪ್ರಮುಖ ಮಾರ್ಗವಾಗಿದೆ. ಇದನ್ನೂ ಓದಿ: ಮಹಿಳೆಯರಿಗೆ ಪ್ರತಿ ತಿಂಗಳು 2,500 ರೂ., 25 ಲಕ್ಷ ವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ: ಬಿಹಾರಿಗಳಿಗೆ ಮಹಾಘಟಬಂಧನ್ ‘ಗ್ಯಾರಂಟಿ’

    ಮೂರು ದಿನಗಳ ಯುದ್ಧದ ನಂತರ ಪಾಕಿಸ್ತಾನವು ಕದನ ವಿರಾಮಕ್ಕಾಗಿ ಭಾರತಕ್ಕೆ ಮನವಿ ಮಾಡಿದ ಹಿನ್ನೆಲೆ ಕಳೆದ ಮೇ 10ರಿಂದ ಎಲ್‌ಒಸಿ ಕದನ ವಿರಾಮ ಘೋಷಿಸಿತ್ತು. ಆಗಸ್ಟ್ನಲ್ಲಿ ಪೂಂಚ್ ಪ್ರದೇಶದಲ್ಲಿ ಪಾಕಿಸ್ತಾನ ಗುಂಡು ಹಾರಿಸುವ ಮೂಲಕ ಕದನ ವಿರಾಮವನ್ನು ಉಲ್ಲಂಘಿಸಿದೆ ಎಂಬ ವರದಿಗಳು ಬಂದವು. ಆದರೆ, ಸೇನೆಯು ಈ ವರದಿಗಳನ್ನು ನಿರಾಕರಿಸಿತ್ತು. ಇದನ್ನೂ ಓದಿ: ಬೆಳಗಾವಿ | ಭಿಕ್ಷೆ ಬೇಡುತ್ತಾ ರಸ್ತೆ ದಾಟುತ್ತಿದ್ದ ವೃದ್ಧನ ಮೇಲೆ ಹರಿದ ಲಾರಿ – ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

  • ಜಮ್ಮು ರಾಷ್ಟ್ರೀಯ ಹೆದ್ದಾರಿ ಬಂದ್ – ಸೇಬು ಪೂರೈಕೆಯಲ್ಲಿ ವ್ಯತ್ಯಯ, 40% ಬೆಲೆ ಕುಸಿತ

    ಜಮ್ಮು ರಾಷ್ಟ್ರೀಯ ಹೆದ್ದಾರಿ ಬಂದ್ – ಸೇಬು ಪೂರೈಕೆಯಲ್ಲಿ ವ್ಯತ್ಯಯ, 40% ಬೆಲೆ ಕುಸಿತ

    ಶ್ರೀನಗರ: ಜಮ್ಮು (Jammu And Kashmir) ರಾಷ್ಟ್ರೀಯ ಹೆದ್ದಾರಿ ಬಂದ್ ಹಿನ್ನೆಲೆ ಸೇಬು (Kashmir Apple) ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಇದರಿಂದಾಗಿ 40% ರಷ್ಟು ಬೆಲೆ ಕುಸಿತವಾಗಿದ್ದು, ಸೇಬು ಬೆಳೆಗಾರರಿಗೆ ತೀವ್ರ ತೊಂದರೆಯಾಗಿದೆ.

    ಮಳೆ, ಪ್ರವಾಹದಿಂದಾಗಿ ಆಗಸ್ಟ್ ಅಂತ್ಯದಿಂದ ಸೆಪ್ಟೆಂಬರ್ ಮಧ್ಯದವರೆಗೆ ಮೂರು ವಾರಗಳ ಕಾಲ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಾಗಿತ್ತು. ಈ ಪರಿಣಾಮ ಟ್ರಕ್‍ಗಳಲ್ಲಿ ತುಂಬಿದ್ದ ಸೇಬು ಹಣ್ಣುಗಳು ಕೊಳೆತುಹೋಗಿವೆ. ಇದರ ನಡುವೆ ಕೇಂದ್ರ ಸರ್ಕಾರವು ಕಣಿವೆ ರಾಜ್ಯದ ಆರ್ಥಿಕತೆಯನ್ನು ಉದ್ದೇಶಪೂರ್ವಕವಾಗಿ ದುರ್ಬಲಗೊಳಿಸುತ್ತಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: ಉತ್ತರಾಖಂಡದ ಚಮೋಲಿಯಲ್ಲಿ ಭೂಕುಸಿತಕ್ಕೆ ತಾಯಿ, ಇಬ್ಬರು ಮಕ್ಕಳು ಬಲಿ – ಕಂದಮ್ಮಗಳನ್ನು ಅಪ್ಪಿಕೊಂಡೇ ಪ್ರಾಣಬಿಟ್ಟ ಅಮ್ಮ

    ಕಾಶ್ಮೀರದಲ್ಲಿ ವಾರ್ಷಿಕ 20 ಲಕ್ಷ ಮೆಟ್ರಿಕ್‍ಟನ್‍ಗಳಿಗಿಂತ ಹೆಚ್ಚು ಸೇಬು ಬೆಳೆಯುತ್ತಾರೆ. ಕಾಶ್ಮೀರದಿಂದ ದೆಹಲಿ, ಮುಂಬೈ, ಬೆಂಗಳೂರು, ಅಹಮದಾಬಾದ್ ಸೇರದಂತೆ ಹಲವು ರಾಜ್ಯಗಳಿಗೆ ರಫ್ತು ಮಾಡಲಾಗುತ್ತೆ. ಇದನ್ನೂ ಓದಿ: ನವರಾತ್ರಿಯಿಂದ ದೇಶದಲ್ಲಿ ಜಿಎಸ್‌ಟಿ ಉಳಿತಾಯ ಉತ್ಸವ – ಸ್ವದೇಶಿ ವಸ್ತುಗಳನ್ನು ಖರೀದಿಸಿ: ಮೋದಿ ಕರೆ

  • ಕಾಶ್ಮೀರದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ – ಮತ್ತಿಬ್ಬರು ಅಡಗಿರುವ ಶಂಕೆ, ತೀವ್ರ ಶೋಧ

    ಕಾಶ್ಮೀರದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ – ಮತ್ತಿಬ್ಬರು ಅಡಗಿರುವ ಶಂಕೆ, ತೀವ್ರ ಶೋಧ

    – ಮೂವರು ಯೋಧರಿಗೆ ಗಾಯ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಪಾಕಿಸ್ತಾನ (Pakistan) ಮೂಲದ ಲಷ್ಕರ್-ಎ-ತೈಬಾ (LeT) ಸಂಘಟನೆಯ ಪ್ರಮುಖ ಉಗ್ರ (Terrorists) ಸೇರಿದಂತೆ ಇಬ್ಬರು ಭಯೋತ್ಪಾದಕರು ಹತ್ಯೆಗೀಡಾಗಿದ್ದಾರೆ. ಗುಂಡಿನ ಚಕಮಕಿಯಲ್ಲಿ ಮೂವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ.

    ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಿರ್ದಿಷ್ಟ ಗುಪ್ತಚರ ಮಾಹಿತಿಯನ್ನು ಸೇನೆಗೆ ನೀಡಿದ್ದರು. ಈ ಮಾಹಿತಿ ಆಧರಿಸಿ ಭಾರತೀಯ ಸೇನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಸಿಆರ್‌ಪಿಎಫ್ ಜಂಟಿಯಾಗಿ ಕಾರ್ಯಾಚರಣೆ ನಡೆಸಿವೆ. ಈ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಪ್ರತಿಯಾಗಿ ಭದ್ರತಾ ಸಿಬ್ಬಂದಿ ಸಹ ಗುಂಡು ಹಾರಿಸಿದ್ದಾರೆ. ಸೇನೆ ನಡೆಸಿದ ದಾಳಿಯಿಂದ ಇಬ್ಬರು ಉಗ್ರರು ಸಾವಿಗೀಡಾಗಿದ್ದಾರೆ. ಇದನ್ನೂ ಓದಿ: ಅಮಿತ್‌ ಶಾ ಜಮ್ಮು ಕಾಶ್ಮೀರದಲ್ಲಿದ್ದಾಗಲೇ ಒಳನುಸುಳಲು ಯತ್ನ – ಶಂಕಿತ ಉಗ್ರರ ಮೇಲೆ ಗುಂಡಿನ ದಾಳಿ

    ಹತ್ಯೆಯಾದ ಎಲ್‌ಇಟಿಯ ಪ್ರಮುಖ ಉಗ್ರನನ್ನು ರೆಹಮಾನ್ ಭಾಯ್ ಎಂದು ಗುರುತಿಸಲಾಗಿದೆ. ಆತನ ಮೃತದೇಹವನ್ನು ಗುಡ್ಡಾರ್ ಅರಣ್ಯ ಪ್ರದೇಶದಲ್ಲಿ ಸೇನೆ ಪತ್ತೆ ಹಚ್ಚಿದೆ.

    ಕಾರ್ಯಾಚರಣೆಯಲ್ಲಿ ಜೂನಿಯರ್ ಕಮಿಷನ್ಡ್ ಅಧಿಕಾರಿ ಸೇರಿದಂತೆ ಮೂವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಈ ಪ್ರದೇಶದಲ್ಲಿ ಇನ್ನೂ ಎರಡರಿಂದ ಮೂರು ಭಯೋತ್ಪಾದಕರು ಅಡಗಿರಬಹುದು ಎಂಬ ಶಂಕೆ ಇದೆ. ಈ ಭಾಗದಲ್ಲಿ ಹೆಚ್ಚುವರಿ ಸೇನಾ ಪಡೆಗಳನ್ನು ನಿಯೋಜಿಸಲಾಗಿದೆ. ಎನ್‌ಕೌಂಟರ್ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: Jammu Kashmir | ಅಕ್ರಮವಾಗಿ ಗಡಿ ನುಸುಳಲು ಯತ್ನ – ಇಬ್ಬರು ಉಗ್ರರ ಎನ್‌ಕೌಂಟರ್

  • ಜಮ್ಮು-ಕಾಶ್ಮೀರದಲ್ಲಿ ಮೇಘಸ್ಫೋಟ; ಒಂದೇ ಕುಟುಂಬದ 7 ಮಂದಿ ಸೇರಿ 11 ಜನ ದುರ್ಮರಣ

    ಜಮ್ಮು-ಕಾಶ್ಮೀರದಲ್ಲಿ ಮೇಘಸ್ಫೋಟ; ಒಂದೇ ಕುಟುಂಬದ 7 ಮಂದಿ ಸೇರಿ 11 ಜನ ದುರ್ಮರಣ

    ಶ್ರೀನಗರ: ರಾಂಬನ್ ಮತ್ತು ರಿಯಾಸಿ ಜಿಲ್ಲೆಗಳ ರಾಜ್‌ಗಢ ಮತ್ತು ಮಹೋರ್ ಪ್ರದೇಶಗಳಲ್ಲಿ ಶನಿವಾರ ಮಧ್ಯರಾತ್ರಿ ಎರಡು ಬಾರಿ ಮೇಘಸ್ಫೋಟ ಸಂಭವಿಸಿದ್ದು, ಒಂದೇ ಕುಟುಂಬದ ಏಳು ಸದಸ್ಯರು ಸೇರಿದಂತೆ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ. ಒಬ್ಬರು ಕಾಣೆಯಾಗಿದ್ದಾರೆ.

    ಶನಿವಾರ ಮಧ್ಯರಾತ್ರಿ 12:30 ರ ಸುಮಾರಿಗೆ ರಾಜ್‌ಗಢದಲ್ಲಿ ಮೇಘಸ್ಫೋಟ ಸಂಭವಿಸಿದೆ. ಎರಡು ಮನೆಗಳು ಮತ್ತು ಒಂದು ಶಾಲಾ ಕಟ್ಟಡಕ್ಕೆ ಹಾನಿಯಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಉತ್ತರಾಖಂಡದಲ್ಲಿ ಮೇಘಸ್ಫೋಟ – 6 ಜನ ಸಾವು, 11 ಮಂದಿ ನಾಪತ್ತೆ

    ಜಮ್ಮು-ಕಾಶ್ಮೀರದ ರಿಯಾಸಿಯ ಮಹೋರ್ ಪ್ರದೇಶದ ಬದ್ದರ್ ಗ್ರಾಮದಲ್ಲಿ ಭಾರಿ ಭೂಕುಸಿತ ಸಂಭವಿಸಿ ಒಂದೇ ಕುಟುಂಬದ ಏಳು ಮಂದಿ ಸಾವನ್ನಪ್ಪಿದ್ದಾರೆ. ಶುಕ್ರವಾರ ರಾತ್ರಿ ಮೇಘಸ್ಫೋಟದಿಂದಾಗಿ ಅವರು ಮಣ್ಣಿನ ಮನೆ ಅವಶೇಷಗಳ ಅಡಿಯಲ್ಲಿ ಹೂತು ಮೃತಪಟ್ಟಿದ್ದಾರೆ. ಸ್ಥಳೀಯ ಗ್ರಾಮಸ್ಥರು ತ್ವರಿತವಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿ ಏಳು ಶವಗಳನ್ನು ಹೊರತೆಗೆದರು. ಮೃತರನ್ನು ನಜೀರ್ ಅಹ್ಮದ್, ವಜೀರಾ ಬೇಗಂ, ಬಿಲಾಲ್ ಅಹ್ಮದ್, ಮೊಹಮ್ಮದ್ ಮುಸ್ತಫಾ, ಮೊಹಮ್ಮದ್ ಆದಿಲ್, ಮೊಹಮ್ಮದ್ ಮುಬಾರಕ್ ಮತ್ತು ಮೊಹಮ್ಮದ್ ವಾಸಿಂ ಎಂದು ಗುರುತಿಸಲಾಗಿದೆ.

    ಮತ್ತೊಂದು ಘಟನೆಯಲ್ಲಿ ರಂಬನ್ ಜಿಲ್ಲೆಯ ರಾಜ್‌ಗಡ್ ಪ್ರದೇಶದಲ್ಲಿ ಮೇಘಸ್ಫೋಟದಿಂದಾಗಿ ಮೂವರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ. ಇಂದು 12:30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಪ್ರಸ್ತುತ ಪ್ರದೇಶದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಘಟನೆಯಲ್ಲಿ ಸಾವನ್ನಪ್ಪಿದ ಮೂವರ ಶವಗಳನ್ನು ರಕ್ಷಣಾ ಕಾರ್ಯಕರ್ತರು ಹೊರತೆಗೆದಿದ್ದಾರೆ. ಇದನ್ನೂ ಓದಿ: ದೆಹಲಿಯ ಕಲ್ಕಾಜಿ ದೇಗುಲದಲ್ಲಿ ಪ್ರಸಾದ ವಿಚಾರಕ್ಕೆ ಗಲಾಟೆ – 15 ವರ್ಷಗಳಿಂದ ಸೇವಕನಾಗಿದ್ದ ವ್ಯಕ್ತಿಯ ಹತ್ಯೆ

    ಉತ್ತರಾಖಂಡದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಚಮೋಲಿ ಜಿಲ್ಲೆಯಲ್ಲಿ ರಾತ್ರಿಯಿಡೀ ಭಾರೀ ಮಳೆಯಾಗಿದೆ. ಐದು ಸ್ಥಳಗಳಲ್ಲಿ ಬದರಿನಾಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿದೆ. ಜೋಶಿಮಠ ಮತ್ತು ಅನಿಮಮಠ ಬಳಿ ಸಂಭವಿಸಿದ ಬೃಹತ್ ಪರ್ವತ ಕುಸಿತವು ರಸ್ತೆಗೆ ಅವಶೇಷಗಳನ್ನು ತಂದು ಹಾಕಿದೆ. ಯಾತ್ರಾರ್ಥಿಗಳು ಮತ್ತು ಸ್ಥಳೀಯರ ಸಂಚಾರವನ್ನು ಸ್ಥಳಿಯ ಆಡಳಿತ ಕಡಿತಗೊಳಿಸಿತು. ರಾಜ್ಯಾದ್ಯಂತ ಮೇಘಸ್ಫೋಟ ಮತ್ತು ಭೂಕುಸಿತಗಳು ವ್ಯಾಪಕ ವಿನಾಶಕ್ಕೆ ಕಾರಣವಾಗಿ ರಾಜ್ಯದ್ಯಾಂರ ಆರು ಜನರು ಸಾವನ್ನಪ್ಪಿದರು. 11 ಜನರು ನಾಪತ್ತೆಯಾಗಿದ್ದಾರೆ.

  • ಜಮ್ಮು & ಕಾಶ್ಮೀರ | ಕಾನ್ಸ್‌ಟೇಬಲ್‌ಗೆ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ್ದ 6 ಪೊಲೀಸರು ಅರೆಸ್ಟ್‌

    ಜಮ್ಮು & ಕಾಶ್ಮೀರ | ಕಾನ್ಸ್‌ಟೇಬಲ್‌ಗೆ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ್ದ 6 ಪೊಲೀಸರು ಅರೆಸ್ಟ್‌

    – ಪ್ರಕರಣದ ತನಿಖೆ ಸಿಬಿಐಗೆ ಒಪ್ಪಿಸಿದ್ದ ಸುಪ್ರೀಂ ಕೋರ್ಟ್‌
    – ತಿಂಗಳೊಳಗೆ ಆರೋಪಿಗಳ ಬಂಧನಕ್ಕೆ ಆದೇಶಿಸಿದ್ದ ನ್ಯಾಯಾಲಯ

    ಶ್ರೀನಗರ: ಕಾಶ್ಮೀರದ ಪೊಲೀಸ್ ಕಾನ್ಸ್​ಟೇಬಲ್​ ಒಬ್ಬರಿಗೆ‌ ಕಸ್ಟಡಿಯಲ್ಲಿ​​ ಚಿತ್ರಹಿಂಸೆ (Custodial Violence) ನೀಡಿದ ಆರೋಪದ ಮೇಲೆ ಪೊಲೀಸ್ ಉಪ ವರಿಷ್ಠಾಧಿಕಾರಿ ಮತ್ತು ಇನ್ಸ್‌ಪೆಕ್ಟರ್ ಸೇರಿದಂತೆ 6 ಪೊಲೀಸರನ್ನು ಹಾಗೂ ಇಬ್ಬರು ನಾಗರಿಕರನ್ನು ಕೇಂದ್ರ ತನಿಖಾ ದಳ (CBI) ಬಂಧಿಸಿದೆ.

    ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಕಾನ್ಸ್​ಟೇಬಲ್ ಖುರ್ಷೀದ್ ಅಹ್ಮದ್ ಚೌಹಾಣ್‌ ಅವರ ಮೇಲೆ ನಡೆದಿದ್ದ ಚಿತ್ರಹಿಂಸೆಯನ್ನು ಗಂಭೀರವಾಗಿ ಪರಿಗಣಸಿದ್ದ ಸುಪ್ರೀಂ ಕೋರ್ಟ್ (Supreme Court)​ ಜು.21ರಂದು ಬಂಧನಕ್ಕೆ ನಿರ್ದೇಶನ ನೀಡಿತ್ತು. ಕೋರ್ಟ್‌ನ ಆದೇಶದ ಅನ್ವಯ ಕುಪ್ವಾರಾದ ಜಂಟಿ ವಿಚಾರಣಾ ಕೇಂದ್ರದ ಡಿಎಸ್​ಪಿ ಐಜಾಜ್ ಅಹ್ಮದ್ ನಾಯ್ಕು ಮತ್ತು ಸಬ್ ಇನ್ಸ್‌ಪೆಕ್ಟರ್ ರಿಯಾಜ್ ಅಹ್ಮದ್, ಜಹಾಂಗೀರ್ ಅಹ್ಮದ್, ಇಮ್ತಿಯಾಜ್ ಅಹ್ಮದ್, ಮೊಹಮ್ಮದ್ ಯೂನಿಸ್ ಮತ್ತು ಶಾಕಿರ್ ಅಹ್ಮದ್ ಸೇರಿದಂತೆ ಇಬ್ಬರು ನಾಗರೀಕರನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಜಮ್ಮು ಕಾಶ್ಮೀರದ ಪೇದೆಗೆ ಕಸ್ಟಡಿಯಲ್ಲಿ ಚಿತ್ರಹಿಂಸೆ – ಸಿಬಿಐ ತನಿಖೆಗೆ ಆದೇಶಿಸಿದ ಸುಪ್ರೀಂ ಕೋರ್ಟ್

    ಕಾನ್ಸ್‌ಟೇಬಲ್‌ ಖುರ್ಷೀದ್ ಅಹ್ಮದ್ ಚೌಹಾಣ್, ತಮ್ಮನ್ನು 2023 ರಲ್ಲಿ ಕುಪ್ವಾರಾದಲ್ಲಿ ಹಲವಾರು ದಿನಗಳ ಕಾಲ ಅಕ್ರಮವಾಗಿ ಬಂಧಿಸಲಾಗಿತ್ತು. ಈ ಸಮಯದಲ್ಲಿ ಖಾಸಗಿ ಭಾಗಗಳನ್ನು ವಿರೂಪಗೊಳಿಸುವುದು ಸೇರಿದಂತೆ, ಅಮಾನವೀಯವಾಗಿ ಅಧಿಕಾರಿಗಳು ವರ್ತಿಸಿದ್ದರು ಎಂದು ಆರೋಪಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದರು.

    ಏನಿದು ಪ್ರಕರಣ?
    ಮಾದಕವಸ್ತು ಪ್ರಕರಣದಲ್ಲಿ ಸಮನ್ಸ್​ ನೀಡಿದ ಬಳಿಕ ತಮ್ಮ ಪತಿಯನ್ನು ಅಕ್ರಮವಾಗಿ ಬಂಧಿಸಿ 6 ದಿನಗಳ ಕಾಲ ಚಿತ್ರ ಹಿಂಸೆ ನೀಡಲಾಗಿತ್ತು ಎಂದು ಚೌಹಣ್​ ಅವರ ಪತ್ನಿ ರುಬೀನಾ ಅಖ್ತರ್​ ದೂರು ದಾಖಲಿಸಿದ್ದರು. ಅಲ್ಲದೇ ಪತಿ ಮೇಲೆ ಕಬ್ಬಿಣದ ಸಲಾಕೆ ಹಾಗೂ ಕಟ್ಟಿಗೆಯಿಂದ ಹಲ್ಲೆ ಮಾಡಿದ್ದರು. ಎಲೆಕ್ಟ್ರಿಕ್​ ಶಾಕ್​ ನೀಡಲಾಗಿತ್ತು ಎಂದು ಆರೋಪಿಸಿದ್ದರು. ಈ ಪ್ರಕರಣದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಕಳೆದ ಜುಲೈನಲ್ಲಿ ವಿಚಾರಣೆ ನಡೆಸಿತ್ತು.

    ಈ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದ ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠ, ಕಸ್ಟಡಿ ಹಿಂಸಾಚಾರದಲ್ಲಿ ಭಾಗಿಯಾದ ಆರೋಪಿ ಅಧಿಕಾರಿಗಳನ್ನು ಒಂದು ತಿಂಗಳೊಳಗೆ ಬಂಧಿಸಬೇಕು. ಅಲ್ಲದೇ ತನಿಖೆಯನ್ನು 3 ತಿಂಗಳಲ್ಲಿ ಪೂರ್ಣಗೊಳಿಸಬೇಕು ಎಂದು ಆದೇಶಿಸಿತ್ತು. ಇದನ್ನೂ ಓದಿ: ಪೋಕ್ಸೊ ಪ್ರಕರಣದಲ್ಲಿ ಮಹಿಳೆಗೆ 20 ವರ್ಷ ಜೈಲು

  • ಜಮ್ಮು ಕಾಶ್ಮೀರದ ಚಶೋತಿಯಲ್ಲಿ ಮೇಘಸ್ಫೋಟ – ದಿಢೀರ್‌ ಪ್ರವಾಹಕ್ಕೆ 10 ಸಾವು

    ಜಮ್ಮು ಕಾಶ್ಮೀರದ ಚಶೋತಿಯಲ್ಲಿ ಮೇಘಸ್ಫೋಟ – ದಿಢೀರ್‌ ಪ್ರವಾಹಕ್ಕೆ 10 ಸಾವು

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಚಶೋತಿ (Chashoti) ಪ್ರದೇಶದಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಭಾರಿ ಮೇಘಸ್ಫೋಟದಿಂದ (Massive Cloudburst) ಹಠಾತ್ ಪ್ರವಾಹ ಉಂಟಾಗಿ ಭಾರೀ ಸಾವು, ನೋವು ಸಂಭವಿಸಿದೆ.

    ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು ಯಾತ್ರಿಕರನ್ನು ಸ್ಥಳಾಂತರ ಮಾಡುತ್ತಿದ್ದಾರೆ. ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಮಚೈಲ್ ಮಾತಾ ಯಾತ್ರೆಯ ಆರಂಭಿಕ ಸ್ಥಳ ಚಶೋತಿಯಾಗಿದೆ. ಹಠಾತ್ ಪ್ರವಾಹದ ನಂತರ ವಾರ್ಷಿಕ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಮಚೈಲ್ ಮಾತಾ ಯಾತ್ರೆಯ ಆರಂಭಿಕ ಸ್ಥಳವಾದ ಕಿಶ್ತ್ವಾರ್‌ನ ಚಶೋತಿ ಪ್ರದೇಶದಲ್ಲಿ ಹಠಾತ್ ಪ್ರವಾಹ ಸಂಭವಿಸಿದೆ. ರಕ್ಷಣಾ ಕಾರ್ಯಾಚರಣೆಗಳನ್ನು ಪ್ರಾರಂಭಿಸಲಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ನರೇಶ್ ಸಿಂಗ್ ಹೇಳಿದ್ದಾರೆ. ಇದನ್ನೂ ಓದಿ: ದರ್ಶನ್‌ಗೆ VIP ಟ್ರೀಟ್‌ಮೆಂಟ್ ಕೊಟ್ರೆ ಹುಷಾರ್ ಜೈಲಾಧಿಕಾರಿಗಳಿಗೆ ಸುಪ್ರೀಂ ಎಚ್ಚರಿಕೆ

    ಮೇಘಸ್ಫೋಟ ಪೀಡಿತ ಪ್ರದೇಶಕ್ಕೆ ಎರಡು ತಂಡಗಳನ್ನು ರವಾನಿಸಲಾಗಿದೆ ಎಂದು ಎನ್‌ಡಿಆರ್‌ಎಫ್‌ (NDRF) ತಿಳಿಸಿದೆ.

    ಜಮ್ಮು ಮತ್ತು ಕಾಶ್ಮೀರದ ಉಧಂಪುರ್‌ನ ಸಂಸದರೂ ಆಗಿರುವ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಮಾತನಾಡಿ, ಮೇಘಸ್ಫೋಟವು ಭಾರೀ ಪ್ರಮಾಣದಲ್ಲಿ ಸಂಭವಿಸಿದೆ. ಶೀಘ್ರದಲ್ಲೇ ನಮಗೆ ಹೆಚ್ಚಿನ ವಿವರಗಳು ತಿಳಿಯಲಿವೆ. ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುವುದು. ವೈದ್ಯಕೀಯ ಚಿಕಿತ್ಸೆಗಾಗಿ ಆಡಳಿತವು ಹೆಲಿ-ರಕ್ಷಣಾ ವ್ಯವಸ್ಥೆಗಳನ್ನು ಸಹ ಮಾಡುತ್ತದೆ ಎಂದಿದ್ದಾರೆ.

  • ಕಾಶ್ಮೀರದಲ್ಲಿ 11ನೇ ದಿನಕ್ಕೆ ಕಾಲಿಟ್ಟ ಸೇನಾ ಕಾರ್ಯಾಚರಣೆ – ಉಗ್ರರ ಗುಹೆಗಳು ಉಡೀಸ್‌

    ಕಾಶ್ಮೀರದಲ್ಲಿ 11ನೇ ದಿನಕ್ಕೆ ಕಾಲಿಟ್ಟ ಸೇನಾ ಕಾರ್ಯಾಚರಣೆ – ಉಗ್ರರ ಗುಹೆಗಳು ಉಡೀಸ್‌

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕಿಶ್ತ್ವಾರ್‌ನಲ್ಲಿ (Indian Army) ಭಯೋತ್ಪಾದಕರು ಅಡುಗುತಾಣಗಳನ್ನಾಗಿ ಬಳಸಿಕೊಂಡಿದ್ದಾರೆ ಎಂದು ಶಂಕಿಸಲಾದ ಗುಹೆಗಳನ್ನು ಭಾರತೀಯ ಸೇನೆ (Indian Army) ಸ್ಫೋಟಿಸಿದೆ.

    ಕಿಶ್ತ್ವಾರ್ ಜಿಲ್ಲೆಯ ಪರ್ವತ ಪ್ರದೇಶದಲ್ಲಿ ಭಾನುವಾರದಿಂದ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಯುತ್ತಿದೆ. ಈ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿ ಸಿಕ್ಕ ಬಳಿಕ ಕಾರ್ಯಾಚರಣೆ ಆರಂಭಿಸಲಾಗಿತ್ತು. ಕಾರ್ಯಾಚರಣೆ ವೇಳೆ, ಭಾರೀ ಗುಂಡಿನ ದಾಳಿ ಮತ್ತು ಸ್ಫೋಟಗಳು ಸಂಭವಿಸಿವೆ.

    ಕಾರ್ಯಾಚರಣೆ ಸಮಯದಲ್ಲಿ ಪರ್ವತಗಳಲ್ಲಿ ಇರುವ ಉಗ್ರರ ಅಡಗು ತಾಣಗಳಾಗಿ ಬಳಸಿಕೊಳ್ಳುತ್ತಿದ್ದರು ಎಂದು ಶಂಕಿಸಲಾದ ನೈಸರ್ಗಿಕ ಗುಹೆಯನ್ನು ಸ್ಫೋಟಿಸಲಾಯಿತು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಸ್ಫೋಟ ಸಂಭವಿದಾಗ ಭಾರೀ ಬೆಂಕಿ ಮತ್ತು ಹೊಗೆ ಕಾಣಿಸಿಕೊಂಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಕಾರ್ಯಾಚರಣೆಯಲ್ಲಿ ಉಗ್ರರು ಸಾವನ್ನಪ್ಪಿದ್ದಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಇದನ್ನೂ ಓದಿ: ಆಪರೇಷನ್‌ ಸಿಂಧೂರದಲ್ಲಿ ಭಾರತ ಪರಾಕ್ರಮ – ಪಾಕ್‌ನ 6 ಯುದ್ಧ ವಿಮಾನಗಳು ಉಡೀಸ್‌; ವಾಯುಪಡೆ ಮುಖ್ಯಸ್ಥ

    ಪಾಕಿಸ್ತಾನದಲ್ಲಿ ತರಬೇತಿ ಪಡೆದು ಬಂದ ಉಗ್ರರು ಕಿಶ್ತ್ವಾರ್ ಜಿಲ್ಲೆಯಲ್ಲಿ ಅಡಗಿಕೊಂಡು ಭಯೋತ್ಪಾದನಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಇದು ಜಮ್ಮು ಸೇರಿದಂತೆ ಏಳು ಜಿಲ್ಲೆಗಳಿಗೆ ಭದ್ರತಾ ಸವಾಲಾಗಿ ಪರಿಣಮಿಸಿದೆ. ಇದೇ ಕಾರಣಕ್ಕೆ ಸೇನೆ ಈ ಭಾಗದಲ್ಲಿ ಭಾರೀ ಕಾರ್ಯಾಚರಣೆ ಕೈಗೊಂಡಿದೆ.

    ಆ.1 ರಿಂದ ಆರಂಭಗೊಂಡ ಕಾರ್ಯಾಚರಣೆ ಇಂದು (ಸೋಮವಾರ) 11 ನೇ ದಿನಕ್ಕೆ ಕಾಲಿಟ್ಟಿದೆ. ಈ ಸುದೀರ್ಘ ಕಾರ್ಯಾಚರಣೆಯಲ್ಲಿ ಶನಿವಾರ ಭಾರತೀಯ ಸೇನೆಯ ಇಬ್ಬರು ಸೈನಿಕರು ಹುತಾತ್ಮರಾಗಿದ್ದರು. ಎನ್‌ಕೌಂಟರ್ ಸಮಯದಲ್ಲಿ ಇಲ್ಲಿಯವರೆಗೆ 10 ಭದ್ರತಾ ಪಡೆಗಳ ಸಿಬ್ಬಂದಿ ಗಾಯಗೊಂಡಿದ್ದಾರೆ. ಓರ್ವ ಸ್ಥಳೀಯ ಉಗ್ರನನ್ನು ಸೇನೆ ಹತ್ಯೆಗೈದಿದೆ. ಇದನ್ನೂ ಓದಿ: ಆಪರೇಷನ್ ಅಖಾಲ್ | ಭದ್ರತಾ ಸಿಬ್ಬಂದಿ, ಉಗ್ರರ ನಡುವೆ ಗುಂಡಿನ ಚಕಮಕಿ – ಇಬ್ಬರು ಯೋಧರು ಹುತಾತ್ಮ

  • ಕಂದಕಕ್ಕೆ ಬಿದ್ದ ಸಿಆರ್‌ಪಿಎಫ್ ವಾಹನ – ಮೂವರು ಹುತಾತ್ಮ, 16 ಮಂದಿಗೆ ಗಾಯ

    ಕಂದಕಕ್ಕೆ ಬಿದ್ದ ಸಿಆರ್‌ಪಿಎಫ್ ವಾಹನ – ಮೂವರು ಹುತಾತ್ಮ, 16 ಮಂದಿಗೆ ಗಾಯ

    ಶ್ರೀನಗರ: ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ವಾಹನ ಅಪಘಾತಕ್ಕೀಡಾಗಿ ಕಂದಕಕ್ಕೆ ಉರುಳಿದ ಪರಿಣಾಮ ಮೂವರು ಹುತಾತ್ಮರಾಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಬಸಂತ್‌ಗಢದ (Basantgarh) ಕಾಂಡ್ವಾ (Kadwa) ಬಳಿ ನಡೆದಿದೆ.

    ಗುರುವಾರ ಬೆಳಗ್ಗೆ 10:30ರ ಸುಮಾರಿಗೆ ಬಸಂತ್‌ಗಢದಿಂದ ಕಾರ್ಯಾಚರಣೆ ಮುಗಿಸಿ ಸಿಬ್ಬಂದಿ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. 187ನೇ ಬೆಟಾಲಿಯನ್‌ಗೆ ಸೇರಿದ ವಾಹನದಲ್ಲಿ 23 ಸಿಬ್ಬಂದಿ ಇದ್ದರು. ಇದನ್ನೂ ಓದಿ: ಸುಧಾಕರ್ ಹೆಸರು ಬರೆದಿಟ್ಟು ಚಾಲಕ ಆತ್ಮಹತ್ಯೆ – ರಾಜಕೀಯ ಒತ್ತಡ ಇಲ್ಲದೆ ತನಿಖೆ: ಎಂ.ಸಿ ಸುಧಾಕರ್

    ಅಪಘಾತದಲ್ಲಿ ಮೂವರು ಸಿಆರ್‌ಪಿಎಫ್ ಸಿಬ್ಬಂದಿ ಮೃತಪಟ್ಟಿದ್ದು 16 ಮಂದಿ ಗಾಯಗೊಂಡಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಎಂದು ಹೆಚ್ಚುವರಿ ಎಸ್‌ಪಿ ಉಧಂಪುರ ಸಂದೀಪ್ ಭಟ್ ಅವರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಅನಾಮಿಕ ಉಜಿರೆಯ ವ್ಯಕ್ತಿಯ ಮನೆಯಲ್ಲಿ ಉಳಿಯುತ್ತಿದ್ದಾನೆ, ನಿಮ್ಮ ವಶಕ್ಕೆ ಪಡೆಯಿರಿ: SITಗೆ ಮನವಿ

    ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಸಿಆರ್‌ಪಿಎಫ್ ಸಿಬ್ಬಂದಿಯ ಸಾವಿಗೆ ದುಃಖ ವ್ಯಕ್ತಪಡಿಸಿದ್ದಾರೆ. ಎಲ್‌ಜಿ ಕಚೇರಿಯ ಎಕ್ಸ್ ಪೋಸ್ಟ್‌ನಲ್ಲಿ, ಉಧಮ್‌ಪುರ ಬಳಿ ಅಪಘಾತದಲ್ಲಿ ಸಿಆರ್‌ಪಿಎಫ್ ಸಿಬ್ಬಂದಿಯ ಸಾವಿನಿಂದ ದುಃಖಿತನಾಗಿದ್ದೇನೆ. ರಾಷ್ಟ್ರಕ್ಕೆ ಅವರ ಅನುಕರಣೀಯ ಸೇವೆಯನ್ನು ನಾವು ಎಂದಿಗೂ ಮರೆಯುವುದಿಲ್ಲ. ಹುತಾತ್ಮರ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಅಲ್ಲದೇ ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಸಾಧ್ಯವಾದಷ್ಟು ಉತ್ತಮ ಆರೈಕೆ ಮತ್ತು ಸಹಾಯವನ್ನು ಖಚಿತಪಡಿಸಿಕೊಳ್ಳಲು ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದಿದ್ದಾರೆ.

    ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಕಾಂಡ್ವಾ-ಬಸಂತ್‌ಗಢ ಪ್ರದೇಶದಲ್ಲಿ ಸಿಆರ್‌ಪಿಎಫ್ ವಾಹನಕ್ಕೆ ಅಪಘಾತ ಸಂಭವಿಸಿದ ಸುದ್ದಿ ಕೇಳಿ ಬೇಸರವಾಯಿತು. ವಾಹನದಲ್ಲಿ ಹಲವಾರು ಧೈರ್ಯಶಾಲಿ ಸಿಆರ್‌ಪಿಎಫ್ ಯೋಧರು ಇದ್ದರು. ನಾನು ಇದೀಗ ಜಿಲ್ಲಾಧಿಕಾರಿ ಸಲೋನಿ ರೈ ಅವರೊಂದಿಗೆ ಮಾತನಾಡಿದ್ದೇನೆ, ಅವರು ಪರಿಸ್ಥಿತಿಯನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ ಮತ್ತು ನನಗೆ ಮಾಹಿತಿ ನೀಡುತ್ತಿದ್ದಾರೆ. ರಕ್ಷಣಾ ಕ್ರಮಗಳನ್ನು ತಕ್ಷಣವೇ ಪ್ರಾರಂಭಿಸಲಾಗಿದೆ. ಸ್ಥಳೀಯರು ಸ್ವಯಂಪ್ರೇರಣೆಯಿಂದ ಸಹಾಯ ಮಾಡಲು ಮುಂದೆ ಬಂದಿದ್ದಾರೆ. ಸಾಧ್ಯವಿರುವ ಎಲ್ಲ ಸಹಾಯವನ್ನು ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

  • ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ – ಆ.8ರಂದು ಸುಪ್ರೀಂ ಕೋರ್ಟ್ ವಿಚಾರಣೆ

    ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ – ಆ.8ರಂದು ಸುಪ್ರೀಂ ಕೋರ್ಟ್ ವಿಚಾರಣೆ

    ನವದೆಹಲಿ: ಜಮ್ಮು ಕಾಶ್ಮೀರಕ್ಕೆ (Jammu Kashmir) ಮರಳಿ ರಾಜ್ಯದ ಸ್ಥಾನಮಾನ ದೊರಕಿಸಿಕೊಡುವಂತೆ ಕೋರಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ (Supreme Court) ಆ.8ರಂದು ನಡೆಸಲಿದೆ.

    ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣನ್ ಅವರು ಇಂದು (ಆ.6) ಸಿಜೆಐ ಬಿಆರ್ ಗವಾಯಿ ಅವರ ನೇತೃತ್ವದ ಪೀಠದ ಎದುರು ಪ್ರಕರಣವನ್ನು ಪ್ರಸ್ತಾಪಿಸಿದ್ದು, ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡಲು ಸುಪ್ರೀಂ ಕೋರ್ಟ್ ಸಮ್ಮತಿಸಿದೆ.ಇದನ್ನೂ ಓದಿ: ಅಮಿತ್ ಶಾ ವಿರುದ್ಧದ ಮಾನಹಾನಿ ಕೇಸ್ – ರಾಹುಲ್ ಗಾಂಧಿಗೆ ಜಾಮೀನು ಮಂಜೂರು

    ಕಳೆದ ವರ್ಷ ಜಮ್ಮು ಮತ್ತು ಕಾಶ್ಮೀರದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಲೇಜು ಅಧ್ಯಾಪಕ ಜಹೂರ್ ಅಹ್ಮದ್ ಭಟ್ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ ರಾಜ್ಯದ ಸ್ಥಾನಮಾನ ಮರುಸ್ಥಾಪಿಸದೇ ಇರುವುದರಿಂದ ಕಾಶ್ಮೀರದ ಜನರ ಹಕ್ಕುಗಳ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿದೆ ಎಂದು ಉಲ್ಲೇಖಿಸಿದ್ದರು. ರಾಜ್ಯದ ಸ್ಥಾನಮಾನ ನೀಡುವ ಮೊದಲೇ ಚುನಾವಣೆ ನಡೆಸಿ ಶಾಸಕಾಂಗ ಸಭೆ ರಚಿಸಲು ಹೊರಡುವುದು ಒಕ್ಕೂಟ ವ್ಯವಸ್ಥೆಯ ಪರಿಕಲ್ಪನೆಯನ್ನು ಉಲ್ಲಂಘಿಸುತ್ತದೆ ಎಂದು ತಿಳಿಸಿದ್ದರು.

    ಕಾಂಗ್ರೆಸ್ ಮತ್ತು ವಿಧಾನಸಭೆಯ ಕೆಲವು ಸ್ವತಂತ್ರ್ಯ ಸದಸ್ಯರ ಬೆಂಬಲದೊಂದಿಗೆ ನ್ಯಾಷನಲ್ ಕಾನ್ಫರೆನ್ಸ್ ನೇತೃತ್ವದ ಸರ್ಕಾರ ಪ್ರಸ್ತುತ ಕಾಶ್ಮೀರದಲ್ಲಿ ಅಧಿಕಾರ ನಡೆಸುತ್ತಿದೆ. ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿ ಕೆಲ ವರ್ಷಗಳ ಹಿಂದೆಯೇ ರದ್ದಾಗಿ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ರೂಪಿಸಲಾಗಿತ್ತು. ಅದೇ ರಾಜ್ಯದಿಂದ ಲಡಾಖ್ ಪ್ರದೇಶವನ್ನು ಮತ್ತೊಂದು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಲಾಗಿತ್ತು ಎಂದಿದ್ದರು.

    ಆರ್ಟಿಕಲ್ 370 ರದ್ದತಿ ಎತ್ತಿಹಿಡಿದು 2023ರ ಡಿಸೆಂಬರ್‌ನಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ಮರುಪರಿಶೀಲಿಸಲು ಕೋರಿ ಹಲವು ಅರ್ಜಿಗಳ ಸಲ್ಲಿಕೆಯಾಗಿತ್ತು. ಬಳಿಕ ಸುಪ್ರೀಂ ಕೋರ್ಟ್ 2024ರ ಮೇನಲ್ಲಿ ವಿಚಾರಣೆ ನಡೆಸಿ, ಅರ್ಜಿಗಳನ್ನು ವಜಾಗೊಳಿಸಿತ್ತು. ಇದೇ ವೇಳೆ ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ತಾತ್ಕಾಲಿಕವಾದದ್ದು. ಈ ಪ್ರದೇಶಕ್ಕೆ ಮರಳಿ ರಾಜ್ಯದ ಸ್ಥಾನಮಾನ ನೀಡಲಾಗುವುದು ಎಂದಿದ್ದ ಭಾರತದ ಸಾಲಿಸಿಟರ್ ಜನರಲ್ (ಎಸ್‌ಜಿ) ತುಷಾರ್ ಮೆಹ್ತಾ ಅವರ ಹೇಳಿಕೆಯನ್ನು ಕೋರ್ಟ್ ದಾಖಲಿಸಿಕೊಂಡಿತ್ತು.ಇದನ್ನೂ ಓದಿ: Shivamogga | ಕಳಚಿದ ತಾಳಗುಪ್ಪ – ಮೈಸೂರು ರೈಲು ಬೋಗಿ; ತಪ್ಪಿದ ಭಾರೀ ಅನಾಹುತ

  • ಕಾಶ್ಮೀರದಲ್ಲಿ ನೆಲಬಾಂಬ್ ಸ್ಫೋಟ – ಅಗ್ನಿವೀರ್ ಹುತಾತ್ಮ, ಇಬ್ಬರು ಸೈನಿಕರಿಗೆ ಗಾಯ

    ಕಾಶ್ಮೀರದಲ್ಲಿ ನೆಲಬಾಂಬ್ ಸ್ಫೋಟ – ಅಗ್ನಿವೀರ್ ಹುತಾತ್ಮ, ಇಬ್ಬರು ಸೈನಿಕರಿಗೆ ಗಾಯ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪೂಂಚ್ (Poonch) ಜಿಲ್ಲೆಯ ನಿಯಂತ್ರಣ ರೇಖೆಯ ಬಳಿ ನೆಲಬಾಂಬ್ ಸ್ಫೋಟಗೊಂಡು ಓರ್ವ ಅಗ್ನಿವೀರ್‌ (Agniveer) ಸಾವನ್ನಪ್ಪಿದ್ದು, ಇಬ್ಬರು ಯೋಧರು ಗಾಯಗೊಂಡಿದ್ದಾರೆ.

    ಕೃಷ್ಣ ಘಾಟಿಯ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದಾಗ, ಸ್ಫೋಟ ಸಂಭವಿಸಿದೆ. ಪರಿಣಾಮ ಅಗ್ನಿವೀರ್‌ ಲಲಿತ್ ಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಸೈನಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಿಲಿಟರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತು ಸ್ಥಿರವಾಗಿದ್ದಾರೆ ಎಂದು ಅವರು ಹೇಳಿದರು. ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಗ್ನಿವೀರ್ ರದ್ದು, ಒಪಿಎಸ್ ಜಾರಿ: ನಾಸಿರ್ ಹುಸೇನ್

    ಕರ್ತವ್ಯದಲ್ಲಿದ್ದಾಗ ಪ್ರಾಣ ತ್ಯಾಗ ಮಾಡಿದ 7 ಜೆಎಟಿ ರೆಜಿಮೆಂಟ್‌ನ ಅಗ್ನಿವೀರ್ ಲಲಿತ್ ಕುಮಾರ್ ಅವರಿಗೆ ಜಿಒಸಿ ವೈಟ್ ನೈಟ್ ಕಾರ್ಪ್ಸ್ ಮತ್ತು ಎಲ್ಲಾ ಶ್ರೇಣಿಗಳು ಗೌರವ ಸಲ್ಲಿಸುತ್ತವೆ. ದುಃಖದ ಈ ಸಮಯದಲ್ಲಿ ನಾವು ಮೃತರ ಕುಟುಂಬದೊಂದಿಗೆ ನಿಲ್ಲುತ್ತೇವೆ ಎಂದು ವೈಟ್ ನೈಟ್ ಕಾರ್ಪ್ಸ್ ಎಕ್ಸ್‌ನಲ್ಲಿ ತಿಳಿಸಿದೆ. ಇದನ್ನೂ ಓದಿ: ಅಗ್ನಿವೀರರಿಗೆ ಪೊಲೀಸ್, ಸರ್ಕಾರಿ ಇಲಾಖೆಗಳಲ್ಲಿ ಉದ್ಯೋಗ ನೀಡಲು ಉತ್ತರಾಖಂಡ ಸರ್ಕಾರ ನಿರ್ಧಾರ: ಸಿಎಂ ಧಾಮಿ