Tag: Jammu and Kashmir Police

  • ದೋಡಾ ಟೆರರಿಸ್ಟ್ ಅಟ್ಯಾಕ್ – 4 ಉಗ್ರರ ರೇಖಾಚಿತ್ರ ಬಿಡುಗಡೆ

    ದೋಡಾ ಟೆರರಿಸ್ಟ್ ಅಟ್ಯಾಕ್ – 4 ಉಗ್ರರ ರೇಖಾಚಿತ್ರ ಬಿಡುಗಡೆ

    -ಸುಳಿವು ಕೊಟ್ಟವರಿಗೆ 20 ಲಕ್ಷ ರೂ. ಬಹುಮಾನ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ದೋಡಾದಲ್ಲಿ ಸೇನೆಯ ಚೆಕ್‍ಪೋಸ್ಟ್ ಮೇಲೆ ನಡೆದ ದಾಳಿಯಲ್ಲಿ (Doda terrorist attack) ಭಾಗಿಯಾಗಿದ್ದ ನಾಲ್ವರು ಉಗ್ರರ ರೇಖಾಚಿತ್ರವನ್ನು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಬಿಡುಗಡೆ ಮಾಡಿದ್ದಾರೆ. ಭಯೋತ್ಪಾದಕರ ಬಂಧನಕ್ಕೆ ಸುಳಿವು ನೀಡಿದವರಿಗೆ 20 ಲಕ್ಷ ರೂ. ಬಹುಮಾನ ನೀಡುವುದಾಗಿ ಕಾಶ್ಮೀರ ಪೊಲೀಸರು (Jammu and Kashmir Police) ಘೋಷಿಸಿದ್ದಾರೆ.

    ಮಂಗಳವಾರ (ಜೂ.11) ಭದೇರ್ವಾಹ್‍ನ ಚಟರ್‌ಗಲ್ಲದಲ್ಲಿ 4 ರಾಷ್ಟ್ರೀಯ ರೈಫಲ್ಸ್ ಮತ್ತು ಪೊಲೀಸರ ಜಂಟಿ ಚೆಕ್‍ಪೋಸ್ಟ್ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದರು. ಅಲ್ಲದೇ ಜಿಲ್ಲೆಯ ಗಂಡೋ ಪ್ರದೇಶದಲ್ಲಿ ಬುಧವಾರ ಶೋಧ ಕಾರ್ಯದ ವೇಳೆ ಉಗ್ರರು ದಾಳಿ ನಡೆಸಿದ್ದರು. ಈ ವೇಳೆ ಓರ್ವ ಪೊಲೀಸ್ ಸಿಬ್ಬಂದಿ ಸೇರಿ ಆರು ಭದ್ರತಾ ಸಿಬ್ಬಂದಿ (Indian Army) ಗಾಯಗೊಂಡಿದ್ದರು. ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಎನ್‌ಕೌಂಟರ್‌; ಸೇನಾ ದಾಳಿಗೆ ಇಬ್ಬರು ಉಗ್ರರು ಬಲಿ

    ಉಗ್ರರು ಭದರ್ವಾ, ಥಾತ್ರಿ, ಗಂಡೋಹ್‍ನ ಮೇಲ್ಭಾಗದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಪ್ರತಿ ಭಯೋತ್ಪಾದಕರ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ನಗದು ಬಹುಮಾನವನ್ನೂ ಘೋಷಿಸಲಾಗಿದೆ. ಈ ಭಯೋತ್ಪಾದಕರ ಉಪಸ್ಥಿತಿ ಮತ್ತು ಚಲನವಲನದ ಬಗ್ಗೆ ಮಾಹಿತಿ ನೀಡುವಂತೆ ಜನರಿಗೆ ಮಾಹಿತಿ ನೀಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.‌

    ಮಂಗಳವಾರ ರಾತ್ರಿ ರಿಯಾಸಿ ಜಿಲ್ಲೆಯಲ್ಲಿ ಮಾತಾ ವೈಷ್ಣೋ ದೇವಿ ದೇಗುಲಕ್ಕೆ ತೆರಳುತ್ತಿದ್ದ ಯಾತ್ರಾರ್ಥಿಗಳಿದ್ದ ಬಸ್ ಮೇಲೆ ಉಗ್ರರು ದಾಳಿ ನಡೆಸಿದ್ದರು. ಈ ವೇಳೆ ಬಸ್ ಆಳವಾದ ಕಮರಿಗೆ ಉರುಳಿ 9 ಜನ ಸಾವನ್ನಪ್ಪಿ, 41 ಮಂದಿ ಗಾಯಗೊಂಡಿದ್ದರು. ಈ ಬಗ್ಗೆಯೂ ಪೊಲೀಸರು ಹಾಗೂ ಸೇನೆ ಉಗ್ರರ ಮಾಹಿತಿ ಕಲೆ ಹಾಕುತ್ತಿದೆ. ಈ ಸಂಬಂಧ ಉಗ್ರರ ಮಾಹಿತಿ ನೀಡಿದವರಿಗೆ ಸೂಕ್ತ ಬಹುಮಾನ ನೀಡುವುದಾಗಿ ಪೊಲೀಸರು ಘೋಷಿಸಿದ್ದಾರೆ. ಇದನ್ನೂ ಓದಿ: ಜಮ್ಮು ಕಾಶ್ಮೀರದ ದೋಡಾದ ಸೇನಾ ಪೋಸ್ಟ್‌ ಮೇಲೆ ಉಗ್ರರ ದಾಳಿ

  • 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿಯನ್ನು ಬಂಧಿಸಿದ ಕಾಶ್ಮೀರ ಪೊಲೀಸರು

    16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿಯನ್ನು ಬಂಧಿಸಿದ ಕಾಶ್ಮೀರ ಪೊಲೀಸರು

    ಶ್ರೀನಗರ: 2008ರಲ್ಲಿ ಸರಪಂಚ್ ಒಬ್ಬರನ್ನು ಹತ್ಯೆಗೈದಿದ್ದ ಆರೋಪಿಯನ್ನು 16 ವರ್ಷಗಳ ಬಳಿಕ ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪೊಲೀಸರು ಕಿಶ್ತ್ವಾರ್ ಜಿಲ್ಲೆಯಲ್ಲಿ ಇಂದು (ಜೂ.2) ಬಂಧಿಸಿದ್ದಾರೆ.

    ಬಂಧಿತ ಆರೋಪಿಯನ್ನು ಕೇಶ್ವಾನ್‍ನ ನಿವಾಸಿ ಮೀರ್ ಹುಸೇನ್ ಎಂದು ಗುರುತಿಸಲಾಗಿದೆ. ಮೋಸ್ಟ್ ವಾಂಟೆಡ್ ಪರಾರಿಯಾಗಿದ್ದು, ಈತ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಆರೋಪಿ ಕಿಶ್ತ್ವಾರ್‌ನಲ್ಲಿ ಅಡಗಿರುವ ನಿರ್ದಿಷ್ಟ ಮಾಹಿತಿಯ ಮೇರೆಗೆ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಮುಂಬೈ ಸರಣಿ ಬಾಂಬ್‌ ಸ್ಫೋಟ ಕೇಸ್‌ – ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಜೈಲಿನಲ್ಲೇ ಹತ್ಯೆ!

    ಬಂಧಿತ ಆರೋಪಿ 16 ವರ್ಷಗಳ ಹಿಂದೆ ನಾಗ್ನಿ ಘಡ್ ಕೇಶ್ವಾನ್ ಪ್ರದೇಶದ ಅಂದಿನ ಸರಪಂಚ್ ಬಶೀರ್ ಅಹ್ಮದ್ ಅವರನ್ನು ಅಪಹರಿಸಿ ಕೊಲೆಗೈದಿದ್ದ. ಬಳಿಕ ಹುಸೇನ್ ಭುಗತನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

    ಅವರ ವಿರುದ್ಧ ರಣಬೀರ್ ದಂಡ ಸಂಹಿತೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಸಂಬಂಧಿತ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಪ್ರಕರಣದ ವಿಚಾರಣೆಗಾಗಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಪೋರ್ಶೆ ಕಾರು ಅಪಘಾತ ಪ್ರಕರಣ – ಆರೋಪಿಯ ಪೋಷಕರಿಗೆ ಜೂ.5 ರವರೆಗೆ ಪೊಲೀಸ್ ಕಸ್ಟಡಿ

  • ಐವರು ಸೈನಿಕರ ದುರ್ಮರಣದ ಹಿಂದೆ ಪಾಕ್‌ ಕೈವಾಡ – ಡ್ರೋನ್‌ ಮೂಲಕ ಶಸ್ತ್ರಾಸ್ತ್ರ ಪೂರೈಕೆ

    ಐವರು ಸೈನಿಕರ ದುರ್ಮರಣದ ಹಿಂದೆ ಪಾಕ್‌ ಕೈವಾಡ – ಡ್ರೋನ್‌ ಮೂಲಕ ಶಸ್ತ್ರಾಸ್ತ್ರ ಪೂರೈಕೆ

    – ತನಿಖೆ ವೇಳೆ ಸ್ಫೋಟಕ ಮಾಹಿತಿ ಬಯಲು

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪೂಂಚ್ ಜಿಲ್ಲೆಯಲ್ಲಿ ನಡೆದ ಉಗ್ರರ ದಾಳಿ (Poonch Attack) ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ.

    ದಾಳಿಯ ಒಂದು ವಾರದ ನಂತರ ಭಯೋತ್ಪಾದಕರು ಪಾಕಿಸ್ತಾನದಿಂದ (Pakistan) ಡ್ರೋನ್‌ಗಳ ಮೂಲಕ ಶಸ್ತ್ರಾಸ್ತ್ರ (Weapons) ಪೂರೈಕೆ ಮಾಡಿಕೊಳ್ಳುತ್ತಿದ್ದಾರೆ. ಸುಮಾರು 12 ಮಂದಿ ಭಯೋತ್ಪಾದಕರು ಈ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಸೈನಿಕರ ವಾಹನದ ಮೇಲೆ ದಾಳಿ ಪ್ರಕರಣ – 12 ಶಂಕಿತರು ವಶಕ್ಕೆ

    ಪೂಂಚ್‌ ಜಿಲ್ಲೆಯಲ್ಲಿ ಸೈನಿಕರು ಸಂಚರಿಸುತ್ತಿದ್ದ ವಾಹನದ ಮೇಲೆ ದಾಳಿ ನಡೆಸಿದಾಗ ಐವರು ಸೈನಿಕರು ಸಾವನ್ನಪ್ಪಿದರು. ಮರುದಿನ 12 ಜನ ಶಂಕಿತರನ್ನು ವಶಕ್ಕೆ ಪಡೆಯಲಾಗಿತ್ತು. ಬಳಿಕ ಘಟನೆಗೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ನೇತೃತ್ವದ ತಂಡ ಕಳೆದ ಒಂದು ವಾರದಿಂದಲೂ ಭಯೋತ್ಪಾದಕರನ್ನ ಸದೆಬಡಿಯಲು ಬಿಗಿ ಕಾರ್ಯಾಚರಣೆ ನಡೆಸುತ್ತಿದ್ದು, ಇದೀಗ ಮಾಹಿತಿ ಬೆಳಕಿಗೆ ಬಂದಿದೆ. ವಶಕ್ಕೆ ಪಡೆಯಲಾದ ಶಂಕಿತರ ಪೈಕಿ ನಾಸಿರ್‌ ಅಹ್ಮದ್‌ ಭಯೋತ್ಪಾದಕರಿಗೆ ಆಶ್ರಯ ನೀಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

    ನಾಸಿರ್‌ ಅಹ್ಮದ್‌ನನ್ನ ಮತ್ತಷ್ಟು ವಿಚಾರಣೆಗೆ ಒಳಪಡಿಸಿದಾಗ ಮತ್ತಷ್ಟು ಮಹತ್ವದ ಮಾಹಿತಿ ತಿಳಿದು ಬಂದಿದೆ. ಇದೇ ವೇಳೆ ಈ ಪ್ರದೇಶದಲ್ಲಿ ನೆಲೆಸಿರುವ ಭಯೋತ್ಪಾದಕರಿಗೆ ಪಾಕಿಸ್ತಾನದಿಂದ ಡ್ರೋನ್‌ ಮೂಲಕ ಶಸ್ತ್ರಾಸ್ತ್ರ ಪೂರೈಕೆಯಾಗುತ್ತಿದೆ ಅನ್ನೋದು ಗೊತ್ತಾಗಿದೆ. ಆದ್ರೆ ಅವರನ್ನು ಪತ್ತೆಹಚ್ಚಲು ಮಾಹಿತಿ ಸಹಾಯಕವಾಗಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: `ಮೋದಿ ವಿಷ ಸರ್ಪ, ಸೋನಿಯಾ ವಿಷಕನ್ಯೆ’ ಹೇಳಿಕೆ – ಖರ್ಗೆ, ಯತ್ನಾಳ್ ವಿರುದ್ಧ ದೂರು

    ಈಗಾಗಲೇ 12 ಜನ ಶಂಕಿತರನ್ನ ವಶಕ್ಕೆ ಪಡೆದಿದ್ದು, 200ಕ್ಕೂ ಹೆಚ್ಚು ಜನರನ್ನ ವಿಚಾರಣೆಗೆ ಕರೆಸಲಾಗಿದೆ. ದಾಳಿಕೋರರನ್ನ ಪತ್ತೆಹಚ್ಚಲು ಸತತ ಕಾರ್ಯಾಚರಣೆ ಮುಂದುವರಿದಿದೆ ಎಂದು ಮಾಹಿತಿ ನೀಡಿದ್ದಾರೆ.

    ಏನಿದು ಘಟನೆ?
    ಸೈನಿಕರು ಸಂಚರಿಸುತ್ತಿದ್ದ ವಾಹನದ ಮೇಲೆ ದಾಳಿ ನಡೆಸಿ ಐವರು ಸೈನಿಕರ ಸಾವನ್ನಪ್ಪಿದ್ದರು. ದಾಳಿಯ ನಂತರ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಹಾಗೂ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ಅವರು ತನಿಖೆಯ ಮೇಲ್ವಿಚಾರಣೆಗಾಗಿ ನೆರೆಯ ರಜೌರಿ ಜಿಲ್ಲೆಯಲ್ಲಿ ಮೊಕ್ಕಾಂ ಹೂಡಿದ್ದರು. ಇಬ್ಬರು ಅಧಿಕಾರಿಗಳು ಸಹ ಸ್ಥಳಕ್ಕೆ ಭೇಟಿ ನೀಡಿದ್ದರು. ಡೆಪ್ಯುಟಿ ಇನ್ಸ್‍ಪೆಕ್ಟರ್ ಜನರಲ್ ಶ್ರೇಣಿಯ ಅಧಿಕಾರಿಯ ನೇತೃತ್ವದ ರಾಷ್ಟ್ರೀಯ ತನಿಖಾ ಸಂಸ್ಥೆಯ ತಂಡ ಸ್ಥಳದಲ್ಲಿ ಪರಿಶೀಲನೆ ನಡೆಸಿತ್ತು.

    ಪ್ರಾಥಮಿಕ ವರದಿಯಲ್ಲಿ ಸುಮಾರು ಐವರು ಭಯೋತ್ಪಾದಕರು ದಾಳಿಯಲ್ಲಿ ಭಾಗವಹಿಸಿದ ಬಗ್ಗೆ ಮಾಹಿತಿ ಇತ್ತು. ಸೇನಾ ಟ್ರಕ್ ಮೇಲೆ ಮೂರು ಕಡೆಗಳಿಂದ ದಾಳಿ ನಡೆದಿತ್ತು. ದಾಳಿಯ ನಂತರ, ಭಯೋತ್ಪಾದಕರು ಗ್ರೆನೇಡ್‍ಗಳು ಮತ್ತು ಬಾಂಬ್‍ಗಳನ್ನು ಬಳಸಿ ವಾಹನವನ್ನು ಸುಟ್ಟು ಹಾಕಿದ್ದರು. ದಾಳಿ ನಡೆಸಿದವರು ಒಂದು ವರ್ಷಕ್ಕೂ ಹೆಚ್ಚು ಕಾಲ ರಜೌರಿ ಮತ್ತು ಪೂಂಚ್‍ನಲ್ಲಿ ವಾಸವಾಗಿದ್ದರು. ಇಂತಹ ಕಠಿಣವಾದ ಭೂಪ್ರದೇಶದ ಬಗ್ಗೆ ಸಾಕಷ್ಟು ಜ್ಞಾನವನ್ನು ಹೊಂದಿದ್ದರು. ಪ್ರಸ್ತುತ ಈ ಪ್ರದೇಶದಲ್ಲಿ 3 ರಿಂದ 4 ಭಯೋತ್ಪಾದಕ ಗುಂಪುಗಳು ಸಕ್ರಿಯವಾಗಿವೆ ಎಂದು ತೀಳಿದು ಬಂದಿತ್ತು. ಜೈಶ್-ಎ-ಮೊಹಮ್ಮದ್‍ನ ಪೀಪಲ್ಸ್ ಆಂಟಿ-ಫ್ಯಾಸಿಸ್ಟ್ ಫ್ರಂಟ್ ನಿಷೇಧಿತ ಭಯೋತ್ಪಾದಕ ಗುಂಪು ದಾಳಿಯ ಹೊಣೆಯನ್ನು ಹೊತ್ತುಕೊಂಡಿತ್ತು. ಇದು ನಿಷೇಧಿತ ಲಷ್ಕರ್-ಎ-ತೊಯ್ಬಾ ಗುಂಪಿನ ಕೈವಾಡ ಎನ್ನಲಾದ ಮಾಹಿತಿ ಇದೆ ಎಂದೂ ತಿಳಿದುಬಂದಿತ್ತು.

  • ಭಾರತದ ಪ್ರತಿಷ್ಠೆ ಹಾಳುಮಾಡಲು ದಿವಾಳಿ ಪಾಕಿಸ್ತಾನ ಸಂಚು- ಇಂಟಲಿಜೆನ್ಸ್ ರಿಪೋರ್ಟ್

    ಭಾರತದ ಪ್ರತಿಷ್ಠೆ ಹಾಳುಮಾಡಲು ದಿವಾಳಿ ಪಾಕಿಸ್ತಾನ ಸಂಚು- ಇಂಟಲಿಜೆನ್ಸ್ ರಿಪೋರ್ಟ್

    ಶ್ರೀನಗರ: ಈಗಾಗಲೇ ಆರ್ಥಿಕ ಬಿಕ್ಕಟ್ಟಿನಿಂದ (Economic Crisis) ದಿವಾಳಿಯಾಗಿರುವ ಪಾಕಿಸ್ತಾನ (Pakistan) ಇದೀಗ ಭಾರತದ (India) ವಿರುದ್ಧ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿಭಟನೆ ನಡೆಸಲು ಹಾಗೂ ಭಾರತೀಯ ಸಶಸ್ತ್ರ ಪಡೆಗಳನ್ನು ನಾಶ ಮಾಡಲು ಸಂಚು ರೂಪಿಸಿದೆ ಎಂದು ಭಾರತೀಯ ಗುಪ್ತಚರ ಏಜೆನ್ಸಿಗಳು (Intelligence Agencies) ವರದಿ ನೀಡಿವೆ.

    ಕಾಶ್ಮೀರದ (Jammu and Kashmir) ಕಣಿವೆಯಲ್ಲಿ ಭಾರತ ಸರ್ಕಾರದ ಪ್ರತಿಷ್ಠೆಯನ್ನು ಹಾಳುಮಾಡುವ ರೀತಿಯಲ್ಲಿ ಸಂಚು ರೂಪಿಸಲು ಪಾಕಿಸ್ತಾನವು ಪ್ರಪಂಚದಾದ್ಯಂತದ ತನ್ನ ರಾಯಭಾರ ಕಚೇರಿಗಳನ್ನು ಕೇಳಿದ್ದು, ಸಂಚು ರೂಪಿಸುವ ರಹಸ್ಯ ಟಿಪ್ಪಣಿಯನ್ನು ರಾಯಭಾರ ಕಚೇರಿಗಳಿಗೆ ಕಳುಹಿಸಿದೆ ಎನ್ನಲಾಗಿದೆ. ಇದನ್ನೂ ಓದಿ: US Fighter Jet Attack: ಚೀನಾ ಬೇಹುಗಾರಿಕಾ ಬಲೂನ್ ಹೊಡೆದುರುಳಿಸಿದ ಅಮೆರಿಕ

    `ಕಾಶ್ಮೀರ ಒಗ್ಗಟ್ಟಿನ ದಿನ’ದಂದು (ಫೆಬ್ರವರಿ 5 ರಂದು ಪಾಕಿಸ್ತಾನವು ಆಚರಿಸುವ ದಿನ), ಇಸ್ಲಾಮಾಬಾದ್‌ನಲ್ಲಿರುವ ಪಾಕಿಸ್ತಾನ ಹೈ ಕಮಿಷನ್ ತನ್ನ ಎಲ್ಲಾ ರಾಯಭಾರ ಕಚೇರಿಗಳಿಗೆ ಫ್ಯಾಕ್ಸ್ ಮತ್ತು ಇಮೇಲ್‌ಗಳನ್ನು ಕಳುಹಿಸಿದೆ. ಅದರಲ್ಲಿ ಭಾರತೀಯ ಸಶಸ್ತ್ರ ಪಡೆಗಳನ್ನು ನಾಶ ಮಾಡುವ ಯೋಜನೆಗಳ ಬಗ್ಗೆ ವಿವರಿಸಿದೆ ಎಂದು ಗುಪ್ತಚರ ಏಜೆನ್ಸಿ ವಿವರಿಸಿದೆ. ಇದನ್ನೂ ಓದಿ: Shark Attackː ಸ್ವಿಮ್ಮಿಂಗ್‌ಗೆ ತೆರಳಿದ್ದ 16ರ ಬಾಲಕಿ ಶಾರ್ಕ್ ದಾಳಿಗೆ ಬಲಿ

    ಈ ಕುರಿತು ಪ್ರಾಥಮಿಕ ತನಿಖೆ ನಡೆಸಿದಾಗ ಜಮ್ಮು ಮತ್ತು ಕಾಶ್ಮೀರದ ಕೆಲವು ಪೊಲೀಸರು ಭಯೋತ್ಪಾದಕರು ಹಾಗೂ ಜೈಶ್ ಎ ಮೊಹಮ್ಮದ್ (JEM) ನಿಷೇಧಿತ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದಾರೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ಭಯೋತ್ಪಾದಕ ನಿರ್ವಾಹಕರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂಬುದು ತಿಳಿದುಬಂದಿದೆ.

    ಈ ನಡುವೆ ಶುಕ್ರವಾರ ಭಾರತೀಯ ಸೇನೆ ಹಾಗೂ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ನಿಷೇಧಿತ ಜೈಶ್ ಎ ಮೊಹಮ್ಮದ್ (ಜೆಇಎಂ) ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ 6 ಭಯೋತ್ಪಾದಕರನ್ನ ಬಂಧಿಸಿದೆ. ಅವರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದೆ. ಇದನ್ನೂ ಓದಿ: ದಿವಾಳಿ ಪಾಕಿಸ್ತಾನ ರೂಪಾಯಿ ಮೌಲ್ಯ ಪಾತಾಳಕ್ಕೆ- ಆಹಾರ ಪದಾರ್ಥಗಳ ಬೆಲೆ ಮತ್ತಷ್ಟೂ ದುಬಾರಿ.!

    ಬಂಧಿತ ಆರೋಪಿಗಳು ಗ್ರೆನೇಡ್ ದಾಳಿ, ಅಮಾಯಕ ನಾಗರಿಕರನ್ನು ಬೆದರಿಸುವುದು, ಪಿಆರ್‌ಐ ಸದಸ್ಯರು, ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ಗುಂಡಿನ ದಾಳಿ ನಡೆಸುವ ಮೂಲಕ ಕುಲ್ಗಾಮ್ ಜಿಲ್ಲೆಯಲ್ಲಿ ಶಾಂತಿಯುತ ವಾತಾವರಣವನ್ನು ಹಾಳುಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k