ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu Kashmir) ಜೈಶ್-ಎ-ಮೊಹಮ್ಮದ್ (Jaish-e-Mohammed) ಸಂಘಟನೆ ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಇದೇ ವೇಳೆ ನಾಲ್ವರು ಶಂಕಿತ ಉಗ್ರರನ್ನು ಭದ್ರತಾ ಪಡೆ ವಶಕ್ಕೆ ಪಡೆದುಕೊಂಡಿದೆ.
ಶುಕ್ರವಾರ (ಸೆ.20) ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ದೋಡಾ-ಉಧಂಪುರ ಗಡಿಯ ಬಳಿ ಗುಂಡಿನ ಚಕಮಕಿ ನಡೆದಿದ್ದು, ದಾಳಿಯಲ್ಲಿ ಗಾಯಗೊಂಡಿದ್ದ ಓರ್ವ ಸೈನಿಕ ಹುತಾತ್ಮರಾಗಿದ್ದಾರೆ. ಇದೇ ವೇಳೆ ಜೈಶ್-ಎ-ಮೊಹಮ್ಮದ್ ಸಂಘಟನೆಯವರು ಎನ್ನಲಾದ ನಾಲ್ವರು ಶಂಕಿತ ಉಗ್ರರು ಭದ್ರತಾ ಪಡೆಯ ಬಲೆಗೆ ಬಿದ್ದಿದ್ದಾರೆ.ಇದನ್ನೂ ಓದಿ: ಕ್ರಿಶ್ಚಿಯನ್ ಕುರುಬ ಅಂತ ನಾವು ಬರೆಸಿಲ್ಲ, ಜನರೇ ಬರೆಸಿದ್ದಾರೆ: ಶಿವರಾಜ ತಂಗಡಗಿ
ಈ ಕುರಿತು ಸೇನೆ ಮಾಹಿತಿ ನೀಡಿದ್ದು, ಭದ್ರತಾ ಪಡೆ ಹಾಗೂ ಪೊಲೀಸರು ನಿರ್ದಿಷ್ಟ ಮಾಹಿತಿಯ ಮೇರೆಗೆ ದೋಡಾ-ಉಧಂಪುರ ಗಡಿಯ ದುಡು ಬಸಂತ್‌ಗಢದ ಎತ್ತರ ಪ್ರದೇಶಕ್ಕೆ ತಲುಪಿದಾಗ ಗುಂಡಿನ ಚಕಮಕಿ ನಡೆದಿದೆ. ದಾಳಿ ವೇಳೆ ಯೋಧರೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ಪೂಂಚ್‌ನಲ್ಲಿ (Poonch) ಒಳನುಸುಳಲು ಪ್ರಯತ್ನಿಸುತ್ತಿದ್ದ ಶಂಕಿತ ಉಗ್ರರ ಮೇಲೆ ಭಾರತೀಯ ಸೇನೆ (Indian Army) ಗುಂಡಿನ ದಾಳಿ ನಡೆಸಿದೆ.
ಕಳೆದೊಂದು ತಿಂಗಳ ಅವಧಿಯಲ್ಲಿ ಭಾರೀ ಮಳೆಯಿಂದಾಗಿ ಹಠಾತ್ ಪ್ರವಾಹ ಉಂಟಾಗಿ ಜಮ್ಮು ಹಾಗೂ ಕಾಶ್ಮೀರದಲ್ಲಿ ತೀವ್ರ ಹಾನಿಯಾಗಿದೆ. ಈ ಹಿನ್ನೆಲೆ ಪ್ರವಾಹ ಪೀಡಿತ ಪ್ರದೇಶಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit shah) ಅವರು ಸೋಮವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಇದೇ ವೇಳೆ ಉಗ್ರರು ಒಳನುಸುಳಲು ಪ್ರಯತ್ನಿಸಿರುವುದಾಗಿ ತಿಳಿದುಬಂದಿದೆ.
ಸೋಮವಾರ ಬೆಳಿಗ್ಗೆ 5:30ರ ಸುಮಾರಿಗೆ ಬಾಲಕೋಟ್‌ನ ವೈಟ್ ನೈಟ್ ಕಾರ್ಪ್ಸ್ ಪಡೆಗಳು ಎಲ್‌ಒಸಿ ಬಳಿ ಅನುಮಾನಾಸ್ಪದ ಚಲನೆಯನ್ನು ಗಮನಿಸಿದರು. ತಕ್ಷಣವೇ ಗುಂಡಿನ ದಾಳಿ ನಡೆಸಿದ್ದಾರೆ. ಬಳಿಕ ಎರಡು ಕಡೆಯಿಂದಲೂ ಗುಂಡಿನ ಚಕಮಕಿ ನಡೆದಿದ್ದು, ಯಾವುದೇ ಸಾವು-ನೋವು ವರದಿಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.
ಶ್ರೀನಗರ: ಕಳೆದ ವಾರ ಜಮ್ಮು ಮತ್ತು ಕಾಶ್ಮೀರದಲ್ಲಿ (Jammu Kashmir) ಅಕ್ರಮವಾಗಿ ಒಳನುಸುಳಲು ಯತ್ನಿಸಿದ ಇಬ್ಬರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ. ಮೃತ ಇಬ್ಬರ ಪೈಕಿ ‘ಮಾನವ ಜಿಪಿಎಸ್’ (Human GPS)ಎಂದೇ ಕುಖ್ಯಾತಿ ಪಡೆದಿರುವ ಬಾಗು ಖಾನ್ (Bagu Khan) ಹತ್ಯೆಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಸಮಂದರ್ ಚಾಚಾ’ ಎಂದೂ ಕರೆಯಲ್ಪಡುವ ಬಾಗು ಖಾನ್, 1995ರಿಂದ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನೆಲೆಸಿದ್ದ. ಭಾರತದ ಒಳಗೆ ಉಗ್ರರನ್ನು ಕಳುಹಿಸಲು ಸಹಾಯ ಮಾಡುವ ಅತ್ಯಂತ ಹಳೇ ಹಾಗೂ ಪ್ರಮುಖ ಮಾಸ್ಟರ್ ಮೈಂಡ್ ಆಗಿದ್ದ. ಭದ್ರತಾ ಮೂಲಗಳ ಪ್ರಕಾರ, ಗುರೇಜ್ ವಲಯದ ವಿವಿಧ ಪ್ರದೇಶಗಳಿಂದ 100ಕ್ಕೂ ಹೆಚ್ಚು ನುಸುಳುಕೋರತನದ ಯತ್ನಗಳಿಗೆ ಬಾಗು ಖಾನ್ ಕಾರಣನಾಗಿದ್ದ. ಇಲ್ಲಿನ ಕಠಿಣ ಭೂಪ್ರದೇಶ ಮತ್ತು ರಹಸ್ಯ ಮಾರ್ಗಗಳ ಬಗ್ಗೆ ಆತನಿಗೆ ಇದ್ದ ಆಳವಾದ ಜ್ಞಾನದಿಂದ ಹೆಚ್ಚಿನ ಉಗ್ರರನ್ನು ಭಾರತಕ್ಕೆ ಕಳುಹಿಸಲು ಯಶಸ್ವಿಯಾಗಿದ್ದ. ಇದೇ ಕಾರಣಕ್ಕೆ ಆತ ಎಲ್ಲಾ ಉಗ್ರಗಾಮಿ ಗುಂಪುಗಳಿಗೂ ವಿಶೇಷ ವ್ಯಕ್ತಿಯಾಗಿದ್ದ. ಇದನ್ನೂ ಓದಿ: ಪಾಕ್ ಹುಟ್ಟಡಗಿಸಲು ಐಎಎಫ್ ಬಳಸಿದ್ದು 50ಕ್ಕಿಂತಲೂ ಕಡಿಮೆ ಶಸ್ತ್ರಾಸ್ತ್ರ: ವಾಯುಪಡೆಯ ಉಪಮುಖ್ಯಸ್ಥ ಮಾಹಿತಿ
ಬಾಗು ಖಾನ್ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್ ಆಗಿದ್ದರೂ, ನಿಯಂತ್ರಣ ರೇಖೆಯುದ್ದಕ್ಕೂ ಇರುವ ಗುರೇಜ್ ಮತ್ತು ಅದರ ನೆರೆಯ ವಲಯಗಳಿಂದ ಉಗ್ರರ ಒಳನುಸುಳಿವಿಕೆ ಯಶಸ್ವಿಯಾಗಲು ಪ್ರತಿಯೊಂದು ಉಗ್ರ ಸಂಘಟನೆಗೂ ಸಹಾಯ ಮಾಡುತ್ತಿದ್ದ. ಬಾಗು ಖಾನ್ ಭಯೋತ್ಪಾದಕ ಹಿಜ್ಬುಲ್ ಮುಜಾಹಿದ್ದೀನ್‌ನೊಂದಿಗೆ ಸಹ ಸಂಬಂಧ ಹೊಂದಿದ್ದ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: 7 ವರ್ಷಗಳ ನಂತರ ಚೀನಾಗೆ ಪ್ರಧಾನಿ ಮೋದಿ ಭೇಟಿ
ಒಳನುಸುಳುವಿಕೆ ಪ್ರಯತ್ನದ ಬಗ್ಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ನೀಡಿದ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಗುರೆಜ್ ಸೆಕ್ಟರ್‌ನಲ್ಲಿ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಈ ವೇಳೆ ಭಯೋತ್ಪಾದಕರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿದಾಳಿಯಾಗಿ ಭದ್ರತಾ ಪಡೆ ಕೂಡ ಗುಂಡಿನ ದಾಳಿ ನಡೆಸಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದೆ ಎಂದು ಚಿನಾರ್ ಕಾರ್ಪ್ಸ್ ಎಕ್ಸ್ನಲ್ಲಿ ತಿಳಿಸಿದೆ. ಬಾಗು ಖಾನ್ ಜೊತೆ ಹತ್ಯೆಯಾದ ಇನ್ನೊಬ್ಬ ಭಯೋತ್ಪಾದಕ ಕೂಡ ಪಾಕಿಸ್ತಾನಿ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೋಟಾ 85%ಗೆ ಏರಿಕೆ: ತೇಜಸ್ವಿ ಯಾದವ್
– ಆಪರೇಷನ್ ಸಿಂಧೂರ ಯಶೋಗಾಥೆಯ ಮತ್ತಷ್ಟು ಸ್ಫೋಟಕ ವಿಚಾರ ಬಹಿರಂಗ
ನವದೆಹಲಿ: ಪಹಲ್ಗಾಮ್ ದಾಳಿಗೆ (Pahalgam Terror Attack) ಪ್ರತೀಕಾರವಾಗಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (PoK) ದಲ್ಲಿನ ಉಗ್ರರ ಅಡಗು ತಾಣಗಳ ಮೇಲೆ ಭಾರತ ನಡೆಸಿ ದಾಳಿಯ 3 ತಿಂಗಳ ಬಳಿಕ ವಾಯುಪಡೆಯ ಉಪ ಮುಖ್ಯಸ್ಥರು ʻಆಪರೇಷನ್ ಸಿಂಧೂರʼ (Operation Sindoor) ಎಕ್ಸ್‌ಕ್ಲೂಸಿವ್ ದೃಶ್ಯಗಳನ್ನ ಹಂಚಿಕೊಂಡಿದ್ದಾರೆ ಜೊತೆಗೆ, ಇದುವರೆಗೆ ಕೇಳಿರದ ಒಂದಷ್ಟು ಮಾಹಿತಿಗಳನ್ನ ಹಂಚಿಕೊಂಡರು.
ಖಾಸಗಿ ವಾಹಿನಿಯೊಂದರ ಕಾನ್‌ಕ್ಲೈವ್‌ನಲ್ಲಿ ಮಾತನಾಡಿದ ಏರ್ ಮಾರ್ಷಲ್ ನರ್ಮದೇಶ್ವರ ತಿವಾರಿ, ಪಾಕಿಸ್ತಾನವನ್ನು ಕದನ ವಿರಾಮಕ್ಕೆ ತರಲು ಆಪರೇಷನ್ ಸಿಂಧೂರ ಸಮಯದಲ್ಲಿ ಭಾರತೀಯ ವಾಯುಪಡೆ (IAF) 50ಕ್ಕಿಂತ ಕಡಿಮೆ ಶಸ್ತ್ರಾಸ್ತ್ರಗಳು ಮತ್ತು ಕ್ಷಿಪಣಿಗಳನ್ನು ಹಾರಿಸಿತು ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಆಪರೇಷನ್ ಸಿಂಧೂರ ಯಶಸ್ಸಿನ ಹಿಂದೆ ಬೆಂಗಳೂರಿನ ತಂತ್ರಜ್ಞಾನವಿದೆ: ಮೋದಿ ಅಭಿನಂದನೆ
ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಮೇಲೆ ದಾಳಿ ಮಾಡಲು ಐಎಎಫ್ ಹೆಚ್ಚಿನ ಸಂಖ್ಯೆಯ ಗುರಿಗಳನ್ನು ನಿಗದಿಪಡಿಸಿತ್ತು. ಅಂತಿಮವಾಗಿ ಪ್ರಮುಖ ತಾಣಗಳನ್ನು ಪಟ್ಟಿ ಮಾಡಿ 9ಕ್ಕೆ ಇಳಿಸಲಾಗಿತು. ಆದ್ರೆ 50 ಕ್ಕಿಂತಲೂ ಕಡಿಮೆ ಶಸ್ತ್ರಾಸ್ತ್ರಗಳಲ್ಲಿ, ಭಾರತೀಯ ರಕ್ಷಣಾ ಪಡೆಗಳು ಸಂಘರ್ಷ ನಿರ್ಮೂಲನೆ ಮಾಡಿ ಪ್ರಾಬಲ್ಯ ಸಾಧಿಸಲು ಸಾಧ್ಯವಾಯಿತು. ಹಿಂದೆಂದೂ ಈ ರೀತಿ ನಡೆದೇ ಇಲ್ಲ ಎಂಬುದೇ ನಮಗೆ ದೊಡ್ಡ ಸಾಧನೆ ಎಂದು ಬಣ್ಣಿಸಿದರು. ಇದನ್ನೂ ಓದಿ: ಆಪರೇಷನ್ ಸಿಂಧೂರದಲ್ಲಿ ಭಾರತ ಪರಾಕ್ರಮ – ಪಾಕ್‌ನ 6 ಯುದ್ಧ ವಿಮಾನಗಳು ಉಡೀಸ್; ವಾಯುಪಡೆ ಮುಖ್ಯಸ್ಥ
ಮೊದಲು ನಾವು ಉಗ್ರರ ಅಡಗು ತಾಣಗಳನ್ನು ಮಾತ್ರ ಗುರಿಯಾಗಿಸಿ ದಾಳಿ ನಡೆಸಿದ್ದವು. ಆದ್ರೆ ಮೇ 9, 10ರ ರಾತ್ರಿ ಮುಖ್ಯ ದಾಳಿ ನಡೆಸಿದಾಗ ತೀಕ್ಷ್ಣ ಪ್ರತಿಕ್ರಿಯೆ ಕೊಡಲೇಬೇಕೆಂದು ನಿರ್ಧರಿಸಿದೆವು. ಹಾಗಾಗಿ ಪಾಕ್ ಮೇಲೆ ಪ್ಯಾನಲ್ ಫ್ರಂಟ್ ಅಟ್ಯಾಕ್ ಮಾಡಿದೆವು. ಪ್ರತಿಯೊಂದು ಶಸ್ತ್ರಾಸ್ತ್ರವನ್ನು ಗಣನೆಗೆ ತೆಗೆದುಕೊಂಡಿದ್ದೇವೆ. 1971ರ ಯುದ್ಧದ ಸಮಯದಲ್ಲೂ ಮಾದಲಾರದಂತಹ ದಾಳಿಯನ್ನ ನಾವು ಮಾಡಿದ್ದೇವೆ. ಪಾಕ್‌ನ ಸಾಮರ್ಥ್ಯಕ್ಕೆ ದೊಡ್ಡ ಹೊಡೆತ ಕೊಟ್ಟಿದ್ದೇವೆ. ಪಾಕಿಸ್ತಾನದ ಸಾಮರ್ಥ್ಯವನ್ನು ಬಹಿರಂಗಪಡಿಸುವುದು ಸಹ ಈ ದಾಳಿಯ ಹಿಂದಿನ ಉದ್ದೇಶವಾಗಿತ್ತು ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ಆಪರೇಷನ್ ಸಿಂಧೂರ ನಡೆಸಿದ್ದು ಏಕೆ?
ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭೀಕರ ಭಯೋತ್ಪಾದಕ ದಾಳಿ ನಡೆದಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯ ಭಾರತೀಯ ರಕ್ಷಣಾ ಪಡೆಗಳು ಮೇ 7ರ ಬೆಳಗ್ಗಿನ ಜಾವ ಪಾಕ್ ಮತ್ತು ಪಿಒಕೆಯಲ್ಲಿನ ಉಗ್ರರ ಅಡಗು ತಾಣಗಳ ಮೇಲೆ ದಾಳಿ ನಡೆಸಿದ್ದವು. ಈ ದಾಳಿಯಲ್ಲಿ ಜೈಶ್-ಎ-ಮೊಹಮ್ಮದ್ (ಜೆಇಎಂ) ಮುಖ್ಯಸ್ಥ ಮಸೂದ್ ಅಜರ್ ಕುಟುಂಬದ 10 ಸದಸ್ಯರು ಮತ್ತು ನಾಲ್ವರು ಆಪ್ತ ಸಹಾಯಕರು ಸೇರಿದಂತೆ 100ಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದರು. ಇದನ್ನೂ ಓದಿ: ಆಪರೇಷನ್ ಸಿಂಧೂರಕ್ಕೆ ಜೈಶ್ ನೆಲೆಗಳು ಉಡೀಸ್ – ಪುನರ್ ನಿರ್ಮಾಣಕ್ಕೆ ನಿಧಿ ಕೋರಿದ ಉಗ್ರ ಸಂಘಟನೆ
ಶ್ರೀನಗರ: ಜಮ್ಮು ಕಾಶ್ಮೀರದ (Jammu and Kashmir) ಬಂಡಿಪೋರಾ (Bandipora) ಜಿಲ್ಲೆಯ ಗುರೆಜ್ ಸೆಕ್ಟರ್‌ನ ಗಡಿ ನಿಯಂತ್ರಣಾ ರೇಖೆಯಲ್ಲಿ (LoC) ಅಕ್ರಮವಾಗಿ ಗಡಿ ನುಸುಳಲು ಯತ್ನಿಸಿದ ಇಬ್ಬರು ಉಗ್ರರನ್ನು (Terrorists) ಭದ್ರತಾ ಪಡೆ ಹೊಡೆದುರುಳಿಸಿದೆ.
ಉಗ್ರರ ಒಳನುಸುಳುವಿಕೆಯ ಬಗ್ಗೆ ಗುಪ್ತಚರ ಮಾಹಿತಿ ಆಧರಿಸಿ ಸೇನಾ ಸಿಬ್ಬಂದಿ ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ಹಿನ್ನೆಲೆ ಭದ್ರತಾ ಪಡೆ ಕೂಡ ಪ್ರತಿದಾಳಿ ನಡೆಸಿ ಇಬ್ಬರು ಉಗ್ರರನ್ನು ಎನ್‌ಕೌಂಟರ್ ಮಾಡಿದ್ದಾರೆ ಎಂದು ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ. ಇದನ್ನೂ ಓದಿ: ಉಕ್ರೇನ್ ರಷ್ಯಾ ಯುದ್ಧವನ್ನು ಮೋದಿ ಯುದ್ಧ ಎಂದು ಕರೆದ ಅಮೆರಿಕ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu Kashmir) ಕಳೆದ ಎರಡು ದಿನಗಳಿಂದ ನಿರಂತರ ಮಳೆಯಿಂದಾಗಿ ಹಲವೆಡೆ ಭಾರೀ ಹಾನಿ ಸಂಭವಿಸಿದೆ. ಕಳೆದ ಎರಡು ದಿನಗಳಲ್ಲಿ 41 ಮಂದಿ ಸಾವನ್ನಪ್ಪಿದ್ದಾರೆ.
ವೈಷ್ಣೋದೇವಿ ಯಾತ್ರಾ (Vaishno Devi Yatra) ಮಾರ್ಗದಲ್ಲಿ ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ 36ಕ್ಕೆ ಏರಿದೆ. 20 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮತ್ತಷ್ಟು ಜನ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆಯಿದ್ದು, ರಕ್ಷಣಾ ಕಾರ್ಯ ಮುಂದುವರಿದೆ. ವೈಷ್ಣೋದೇವಿ ದೇಗುಲಕ್ಕೆ ಹೋಗುವ ಮಾರ್ಗದ ಅರ್ಧಕುವರಿಯಲ್ಲಿರುವ ಇಂದರ್ಪ್ರಸ್ಥ ಭೋಜನಾಲಯದ ಬಳಿ ಭೂ ಕುಸಿತ ಸಂಭವಿಸಿತ್ತು. ದೋಡಾ ಜಿಲ್ಲೆಯಲ್ಲಿ ಮೇಘಸ್ಫೋಟ ಸಂಭವಿಸಿ ನಾಲ್ವರು ಮೃತರಾಗಿದ್ದಾರೆ.
ನೂರಾರು ಮನೆಗಳು, ಸೇತುವೆಗಳು, ನೀರಿನಲ್ಲಿ ಕೊಚ್ಚಿ ಹೋಗಿವೆ. ಎಲ್ಲಾ ಜಲಾಶಯಗಳು ತುಂಬಿ ತುಳುಕುತ್ತಿದ್ದು ನದಿಗಳಿಗೆ ನೀರು ಬಿಡಲಾಗಿದೆ. ನದಿಪಾತ್ರಗಳು ಮುಳುಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಮೊಬೈಲ್ ಟವರ್‌ಗಳು ಮತ್ತು ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದರಿಂದ ಮೂಲಸೌಕರ್ಯ ತೀವ್ರವಾಗಿ ಹಾನಿಗೊಳಗಾಗಿದೆ. ಇದನ್ನೂ ಓದಿ: ವೈಷ್ಣೋದೇವಿ ಯಾತ್ರಾ ಮಾರ್ಗದಲ್ಲಿ ಮತ್ತೆ ಭೂಕುಸಿತ – ಸಾವಿನ ಸಂಖ್ಯೆ 30ಕ್ಕೆ ಏರಿಕೆ
ಪಂಜಾಬ್‌ನ ಪ್ರವಾಹ ಪೀಡಿತ ಗ್ರಾಮದಿಂದ 22 ಸಿಆರ್‌ಪಿಎಫ್ ಸಿಬ್ಬಂದಿ ಮತ್ತು ಮೂವರು ನಾಗರಿಕರನ್ನು ಸೇನಾ ಹೆಲಿಕಾಪ್ಟರ್‌ನಲ್ಲಿ ರಕ್ಷಣೆ ಮಾಡಲಾಗಿದೆ. ಸೇನಾ ಹೆಲಿಕಾಪ್ಟರ್ ತೆರಳುತ್ತಲೇ ಇತ್ತ ಯೋಧರು ಆಶ್ರಯ ಪಡೆದಿದ್ದ ಕಟ್ಟಡ ಕೆಲವೇ ಕ್ಷಣಗಳಲ್ಲಿ ಕುಸಿದಿದೆ. ಗುರುದಾಸ್‌ಪುರದ ಕರ್ತಾರಪುರ ಕಾರಿಡಾರ್ ಮುಳುಗಡೆಯಾಗಿದೆ. ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ಬಿಯಾಸ್ ನದಿಯ ಪ್ರವಾಹದ ಆತಂಕ ತರಿಸಿದೆ. ಉತ್ತರಾಖಂಡ್‌ನಲ್ಲಿ ಜೀವಗಂಗೆ, ಯಮುನೆಯ ರುದ್ರತಾಂಡವ ಹೇಳತೀರದಾಗಿದೆ.
ಜಮ್ಮು ಮತ್ತು ಕಾಶ್ಮೀರದ ಸಿಎಂ ಒಮರ್ ಅಬ್ದುಲ್ಲಾ ಶ್ರೀನಗರದಿಂದ ಜಮ್ಮುವಿಗೆ ಧಾವಿಸಿ ಈ ಪ್ರದೇಶದ ಪರಿಸ್ಥಿತಿಯನ್ನು ವೈಯಕ್ತಿಕವಾಗಿ ಪರಿಶೀಲಿಸಿದ್ದಾರೆ. ಜಮ್ಮು ಪ್ರದೇಶದಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಉಂಟಾದ ಪರಿಸ್ಥಿತಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ವೈಷ್ಣೋದೇವಿ ದೇಗುಲಕ್ಕೆ ಹೋಗುವ ಮಾರ್ಗದಲ್ಲಿ ಭೂಕುಸಿತ; ಐವರು ಸಾವು – ಯಾತ್ರೆ ಸ್ಥಗಿತ
ಆಂಧ್ರ ಪ್ರದೇಶದಲ್ಲೂ ವರ್ಷಧಾರೆ; ಭಾರೀ ಅವಾಂತ
ಆಂಧ್ರ ಪ್ರದೇಶದಲ್ಲೂ ವರ್ಷಧಾರೆ ಭಾರಿ ಅವಾಂತರ ಸೃಷ್ಟಿಸಿದೆ. ಕಾಮಾರೆಡ್ಡಿ ರೆಡ್ಡಿ ಜಿಲ್ಲೆಯ ನಿಜಾಮ್ ಸಾಗರದ ಬಳಿ ಬ್ರಿಡ್ಜ್ ಕಾಮಗಾರಿಯ ವಾಟರ್ ಟ್ಯಾಂಕರ್‌ಹೊಳೆಯಲ್ಲಿ ಕೊಚ್ಚಿ ಹೋಗಿದೆ. ಟ್ಯಾಂಕ್ ಏರಿ ಕಾರ್ಮಿಕರು ರಕ್ಷಣೆಗೆ ಅಂಗಲಾಚಿದ್ದಾರೆ.
ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ (Jammu Kashmir) ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕತ್ರಾದಲ್ಲಿರುವ ವೈಷ್ಣೋದೇವಿ ಯಾತ್ರಾ ಮಾರ್ಗದಲ್ಲಿ (Vaishno Devi Route) ಮತ್ತೆ ಭಾರಿ ಭೂಕುಸಿತ (Landslide) ಉಂಟಾಗಿದ್ದು, 30ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ.
ಮಂಗಳವಾರ (ಆ.26) ವೈಷ್ಣೋದೇವಿ ದೇಗುಲಕ್ಕೆ ಹೋಗುವ ಮಾರ್ಗದಲ್ಲಿ ಅರ್ಧಕುವರಿಯಲ್ಲಿರುವ ಇಂದ್ರಪ್ರಸ್ಥ ಭೋಜನಾಲಯದ ಬಳಿ ಭೂಕುಸಿತ ಸಂಭವಿಸಿತ್ತು. ಈ ವೇಳೆ ಎಂಟು ಮಂದಿ ಮೃತಪಟ್ಟಿದ್ದರು. ಇದಕ್ಕೂ ಮುನ್ನ ಜಮ್ಮುವಿನ ದೋಡಾ ಜಿಲ್ಲೆಯಲ್ಲಿ ಮೇಘಸ್ಫೋಟ ಸಂಭವಿಸಿ, ನಾಲ್ವರು ಸಾವನ್ನಪ್ಪಿದ್ದಾರೆ.
ಶ್ರೀನಗರ: ತ್ರಿಕೂಟ ಬೆಟ್ಟಗಳ ಮೇಲಿರುವ ಮಾತಾ ವೈಷ್ಣೋದೇವಿ ದೇಗುಲಕ್ಕೆ (Mata Vaishno Devi) ಹೋಗುವ ಮಾರ್ಗದಲ್ಲಿ ಭೂಕುಸಿತ ಸಂಭವಿಸಿ ಐವರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ.
ಬೆಟ್ಟದ ತುದಿಯಲ್ಲಿರುವ ದೇವಾಲಯಕ್ಕೆ ಸುಮಾರು 12 ಕಿ.ಮೀ. ಪಾದಯಾತ್ರೆಯ ಅರ್ಧ ದಾರಿಯಲ್ಲೇ, ಮಧ್ಯಾಹ್ನ 3 ಗಂಟೆ ಸುಮಾರಿಗೆ ಭೂಕುಸಿತ ಸಂಭವಿಸಿದ ಅಧ್ಕ್ವರಿಯಲ್ಲಿರುವ ಇಂದರ್ಪ್ರಸ್ಥ ಭೋಜನಾಲಯದ ಬಳಿ ಬೃಹತ್ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಜಮ್ಮು ಮತ್ತು ಕಾಶ್ಮೀರದ ಹಲವು ಭಾಗಗಳಲ್ಲಿ ಸತತ ಮೂರು ದಿನಗಳ ಭಾರೀ ಮಳೆಯಿಂದಾಗಿ ಅಪಾರ ಹಾನಿಯಾಗಿದೆ. ಇಂದು ಮುಂಜಾನೆ ದೋಡಾ ಜಿಲ್ಲೆಯಲ್ಲಿ ಮೇಘಸ್ಫೋಟಕ್ಕೆ ನಾಲ್ವರು ಸಾವನ್ನಪ್ಪಿದ್ದು, 24 ಗಂಟೆಗಳಲ್ಲಿ ಒಟ್ಟು ಸಾವುಗಳ ಸಂಖ್ಯೆ 9 ಕ್ಕೆ ತಲುಪಿದೆ. ಹಠಾತ್ ತೀವ್ರವಾದ ಮಳೆಯಿಂದಾಗಿ ದಿಢೀರ್ ಪ್ರವಾಹ ಉಂಟಾಗಿ, ಈ ಪ್ರದೇಶದಲ್ಲಿ 10 ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ.
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ (Jammu Kashmir) ದೋಡಾ ಜಿಲ್ಲೆಯಲ್ಲಿ ಸಂಭವಿಸಿದ ಮೇಘಸ್ಫೋಟದಿಂದಾಗಿ (Cloudburst) 10ಕ್ಕೂ ಹೆಚ್ಚು ಮನೆಗಳಿಗೆ ನಾಶವಾಗಿವೆ.
ಇತ್ತೀಚಿಗಷ್ಟೇ ಹವಾಮಾನ ಇಲಾಖೆಯು (IMD ಕಥುವಾ, ಸಾಂಬಾ, ದೋಡಾ, ಜಮ್ಮು, ರಾಂಬನ್ ಮತ್ತು ಕಿಶ್ತ್ವಾರ್ ಜಿಲ್ಲೆಗಳು ಸೇರಿದಂತೆ ಜಮ್ಮುವಿನ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿತ್ತು. ಅದರ ಬೆನ್ನಲ್ಲೇ ಮೇಘಸ್ಫೋಟ ಸಂಭವಿಸಿದೆ. ಮೇಘಸ್ಫೋಟದಲ್ಲಿ 10ಕ್ಕೂ ಅಧಿಕ ಮನೆಗಳು ನಾಶವಾಗಿದ್ದು, ಈವರೆಗೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ.ಇದನ್ನೂ ಓದಿ: ಉಚ್ಛಾಟನೆಗೆ ಹೆದರಿ ಕ್ಷಮೆಯಾಚಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್: ಜೆಡಿಎಸ್ ಲೇವಡಿ
ಈ ಕುರಿತು ಅಧಿಕಾರಿಯೊಬ್ಬರು ಮಾತನಾಡಿ, ಪ್ರತಿಕೂಲ ಹವಾಮಾನದ ಹಿನ್ನೆಲೆ ಜಮ್ಮುವಿನಾದ್ಯಂತ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜೊತೆಗೆ ಜಮ್ಮುವಿನಲ್ಲಿ ಪ್ರವಾಹದ ಎಚ್ಚರಿಕೆ ನೀಡಲಾಗಿದ್ದು, ಜನರು ಭೂಕುಸಿತ ಪೀಡಿತ ಪ್ರದೇಶಗಳಿಂದ ದೂರವಿರಲು ಸೂಚಿಸಲಾಗಿದೆ. ತಾವಿ ನದಿ ಸೇರಿದಂತೆ ಅನೇಕ ನದಿಗಳು ಮತ್ತು ಹೊಳೆಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ರಾತ್ರಿ ವೇಳೆ ನೀರಿನ ಪ್ರಮಾಣದಲ್ಲಿ ಗಮನಾರ್ಹ ಏರಿಕೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ.
ಇನ್ನೂ ಕಾಶ್ಮೀರದ ದಕ್ಷಿಣ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಎತ್ತರದ ಪ್ರದೇಶಗಳಲ್ಲಿ ಮಳೆ ಪ್ರಮಾಣದಲ್ಲಿ ಏರಿಕೆಯಾಗಿದೆ. ಝೀಲಂ ನದಿಗೆ ಯಾವುದೇ ಪ್ರವಾಹ ಎಚ್ಚರಿಕೆ ನೀಡಲಾಗಿಲ್ಲವಾದರೂ, ನೀರಿನ ಮಟ್ಟ ಏರಿಕೆಯಾಗುವ ನಿರೀಕ್ಷೆಯಿದೆ. ಮಧ್ಯ ಕಾಶ್ಮೀರದಲ್ಲಿ ಹಗುರದಿಂದ ಮಧ್ಯಮ ಮಳೆಯಾಗಿದ್ದರೆ, ಉತ್ತರ ಕಾಶ್ಮೀರದಲ್ಲಿ ಹಗುರ ಮಳೆ ಅಥವಾ ಒಣ ಹವಾಮಾನ ಕಂಡುಬಂದಿದೆ.
ಆ.27ರವರೆಗೆ ಎತ್ತರದ ಪ್ರದೇಶಗಳಲ್ಲಿ ಮೇಘಸ್ಫೋಟ, ಹಠಾತ್ ಪ್ರವಾಹ ಮತ್ತು ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ. ದುರ್ಬಲ ಪ್ರದೇಶಗಳಲ್ಲಿ ರಕ್ಷಣಾ ತಂಡಕ್ಕೆ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.ಇದನ್ನೂ ಓದಿ: ಹಬ್ಬಕ್ಕೆ ಬಟ್ಟೆ ಖರೀದಿಸುತ್ತಿದ್ದಾಗ ಕುಸಿದು ಬಿದ್ದು 17ರ ವಿದ್ಯಾರ್ಥಿ ಸಾವು
ಪಾಕಿಸ್ತಾನವು ಭಾರತ ಗಡಿಭಾಗಕ್ಕೆ ವಿವಿಧ ಸಂದೇಶಗಳನ್ನು ಹೊತ್ತ ಬಲೂನ್, ಧ್ವಜಗಳು ಮತ್ತು ಪಾರಿವಾಳಗಳನ್ನು ಕಳುಹಿಸುತ್ತಿದೆ. ಆದರೆ ಬೆದರಿಕೆ ಪತ್ರವನ್ನು ಹೊತ್ತ ಪಾರಿವಾಳವನ್ನು ಸೆರೆಹಿಡಿಯುತ್ತಿರುವುದು ಇದೇ ಮೊದಲು ಎಂದಿದ್ದಾರೆ. ಹೀಗಾಗಿ ಭದ್ರತಾ ಸಂಸ್ಥೆಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿವೆ.