Tag: Jammu Kashmir Police

  • ಪಹಲ್ಗಾಮ್‌ ಉಗ್ರರಿಗೆ ಸಹಾಯ ಮಾಡಿದ್ದ ವ್ಯಕ್ತಿ ಅರೆಸ್ಟ್‌ – ಶಿಕ್ಷಕನಾಗಿ ಕೆಲಸ, ಲಷ್ಕರ್‌ ಗುಂಪಿನೊಂದಿಗೆ ಸಂಪರ್ಕ

    ಪಹಲ್ಗಾಮ್‌ ಉಗ್ರರಿಗೆ ಸಹಾಯ ಮಾಡಿದ್ದ ವ್ಯಕ್ತಿ ಅರೆಸ್ಟ್‌ – ಶಿಕ್ಷಕನಾಗಿ ಕೆಲಸ, ಲಷ್ಕರ್‌ ಗುಂಪಿನೊಂದಿಗೆ ಸಂಪರ್ಕ

    ಶ್ರೀನಗರ: ಏಪ್ರಿಲ್ 22 ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯ (Pahalgam Attack) ಉಗ್ರರಿಗೆ ಸಹಾಯ ಮಾಡಿದ್ದ ಜಮ್ಮು ಮತ್ತು ಕಾಶ್ಮೀರದ‌ ವ್ಯಕ್ತಿಯನ್ನ ಪೊಲೀಸರು ಬಂಧಿಸಿದ್ದಾರೆ.

    ಬಂಧಿತನನ್ನ 26 ವರ್ಷದ ಮೊಹಮ್ಮದ್ ಯೂಸುಫ್ ಕಟಾರಿ (Mohammad Yousuf Katari) ಎಂದು ಗುರುತಿಸಲಾಗಿದೆ. ಗುಪ್ತಚರ ಮಾಹಿತಿ ಮೇರೆಗೆ ದಕ್ಷಿಣ ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ಕಟಾರಿಯನ್ನ ಬಂಧಿಸಲಾಗಿದ್ದು, ವಿಚಾರಣೆ ವೇಳೆ ಜಮ್ಮು-ಕಾಶ್ಮೀರ ಪೊಲೀಸರು ಕಟಾರಿ ಬಗ್ಗೆ ಹಲವು ರಹಸ್ಯಗಳನ್ನು ಬಯಲಿಗೆಳೆದಿದ್ದಾರೆ.

    ಯೂಸೂಫ್‌ ಕಟಾರಿ ಯಾರು?
    ಕುಲ್ಗಾಮ್‌ ಜಿಲ್ಲೆಯಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಕಟಾರಿ, ಶಿಕ್ಷಕನಾಗಿಯೂ ಕೆಲಸ ಮಾಡ್ತಿದ್ದ. ಈತ ಪಾಕಿಸ್ತಾನದ ಲಷ್ಕರ್‌ ಎ ತೈಬಾ (LTE) ಭಯೋತ್ಪಾದಕ ಗುಂಪಿನೊಂದಿಗೆ ಸಂಪರ್ಕದಲ್ಲಿದ್ದ. ಏಪ್ರಿಲ್‌ 22ರಂದು ನಡೆದ ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಉಗ್ರರಿಗೆ ಎಲ್ಲಾ ರೀತಿಯ ಸಹಾಯ ಮಾಡಿದ್ದ ಅನ್ನೋದು ಗೊತ್ತಾಗಿದೆ.

    ಪಹಲ್ಗಾಮ್‌ ಉಗ್ರರನ್ನ ಕೆಲ ದಿನಗಳ ಹಿಂದೆ ನಡೆದ ಆಪರೇಷನ್‌ ಮಹಾದೇವ್‌ (Operation Mahadev) ಕಾರ್ಯಾಚರಣೆಯಲ್ಲಿ ಚಿನಾರ್‌ ಕಾರ್ಪ್ಸ್‌ ಬೆಟಾಲಿಯನ್‌ ಹತ್ಯೆಗೈದಿತ್ತು. ಆ ಬಳಿಕ ಉಗ್ರರಿಗೆ ಸೇರಿದ್ದ ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಇದೆಲ್ಲದರ ವಿಶ್ಲೇಷಣೆಯ ಬಳಿಕ ಕಟಾರಿಯನ್ನ ಬಂಧಿಸಲಾಗಿದೆ.

    ಆಪರೇಷನ್‌ ಮಹಾದೇವ್‌ನಲ್ಲಿ ಮಾಸ್ಟರ್‌ ಮೈಂಡ್‌ ಹತ್ಯೆ
    ಮೇ 22ರಿಂದ 2-3 ವಾರಗಳ ಕಾಲ ಸತತವಾಗಿ ಆಪರೇಷನ್‌ ಮಹಾದೇವ್‌ ಕಾರ್ಯಾಚರಣೆ ನಡೆಸಲಾಯಿತು. ಈ ವೇಳೆ ಶ್ರೀನಗರ ಬಳಿಯ ದಚಿಗಮ್‌ ಅರಣ್ಯ ಪ್ರದೇಶದಲ್ಲಿ ಉಗ್ರರನ್ನ ಹತ್ಯೆಗೈಯಲಾಗಿತ್ತು. ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೇರಿ ಮೂವರು ಭಯೋತ್ಪಾದಕರು ಕಾರ್ಯಾಚರಣೆಯಲ್ಲಿ ಹತ್ಯೆಯಾಗಿದ್ದರು. ಹತ್ಯೆಗೀಡಾದ ಉಗ್ರರ ಬಳಿಯಿದ್ದ ಎಕೆ-47 ರೈಫಲ್‌ ಹಾಗೂ M-9 ಅಸಾಲ್ಟ್‌ ರೈಫಲ್‌ಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಬಳಿಕ ಆ ರೈಫಲ್‌ಗಳನ್ನ ಪಹಲ್ಗಾಮ್‌ ದಾಳಿಯಲ್ಲಿ ಬಖಲೆ ಮಾಡಲಾಗಿದೆ ಅನ್ನೋದು ಚಂಡೀಗಢದ ಪ್ರಯೋಗಾಲಯದಲ್ಲಿ ಪರೀಕ್ಷೆ ನಡೆಸಿದ ಬಳಿಕ ಗೊತ್ತಾಯಿತು.

  • ಪಹಲ್ಗಾಮ್ ದಾಳಿಯ 3 ಉಗ್ರರ ಫೋಟೋ ರಿಲೀಸ್ – ಸುಳಿವು ಕೊಟ್ಟವರಿಗೆ 20 ಲಕ್ಷ ಬಹುಮಾನ

    ಪಹಲ್ಗಾಮ್ ದಾಳಿಯ 3 ಉಗ್ರರ ಫೋಟೋ ರಿಲೀಸ್ – ಸುಳಿವು ಕೊಟ್ಟವರಿಗೆ 20 ಲಕ್ಷ ಬಹುಮಾನ

    -ಪೋಸ್ಟರ್ ಅಂಟಿಸಿ ಉಗ್ರರ ಬೆನ್ನಟ್ಟಿದ ಜಮ್ಮು ಕಾಶ್ಮೀರ ಪೊಲೀಸರು

    ಶ್ರೀನಗರ: ಪಹಲ್ಗಾಮ್‌ನಲ್ಲಿ (Pahalgam) ನಡೆದ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ ಮೂವರು ಉಗ್ರರ ಪೋಸ್ಟರ್‌ಗಳನ್ನು ಜಮ್ಮು ಮತ್ತು ಕಾಶ್ಮೀರ (Jammu Kashmir) ಪೊಲೀಸರು ಬಿಡುಗಡೆಗೊಳಿಸಿದ್ದು, ಸುಳಿವು ಕೊಟ್ಟವರಿಗೆ 20 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.

    ಏ.22 ರಂದು ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ನಡೆದ ಹಿಂದೂಗಳ ನರಮೇಧದಲ್ಲಿ 26 ಜನರು ಸಾವನ್ನಪ್ಪಿದ್ದರು. ಈ ದಾಳಿಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕರನ್ನು ಪತ್ತೆ ಹಚ್ಚಲು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮೂವರು ಶಂಕಿತ ಪಾಕ್ ಉಗ್ರರ ಪೋಸ್ಟರ್‌ಗಳನ್ನು ಬಿಡುಗಡೆಗೊಳಿಸಿದ್ದಾರೆ. ಆ ಪೋಸ್ಟರ್‌ಗಳನ್ನು ಅಂಟಿಸಿ ಸುಳಿವು ಕೊಟ್ಟವರಿಗೆ 20 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. ಜೊತೆಗೆ ಸುಳಿವು ಕೊಟ್ಟವರ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು ಎಂದು ಉಲ್ಲೇಖಿಸಿದ್ದಾರೆ.ಇದನ್ನೂ ಓದಿ: ಅಮೆರಿಕದಲ್ಲಿ ಕಾರು ಅಪಘಾತ: ಇಬ್ಬರು ಭಾರತೀಯ ವಿದ್ಯಾರ್ಥಿಗಳು ದುರಂತ ಸಾವು

    ಸದ್ಯ ಜಮ್ಮು ಮತ್ತು ಕಾಶ್ಮೀರದಾದ್ಯಂತ `ಭಯೋತ್ಪಾದನೆ ಮುಕ್ತ ಕಾಶ್ಮೀರ’ ಎಂಬ ಸಂದೇಶಗಳನ್ನು ಒಳಗೊಂಡಿರುವ ಪೋಸ್ಟರ್‌ಗಳು ಕಾಣಿಸಿಕೊಂಡಿದ್ದು, ಅದರಲ್ಲಿ ಲಷ್ಕರ್-ಇ-ತೈಬಾದ (LET) ಮೂವರು ಭಯೋತ್ಪಾದಕರಾದ ಅನಂತ್‌ನಾಗ್ ನಿವಾಸಿ ಆದಿಲ್ ಹುಸೇನ್ ಥೋಕರ್ ಮತ್ತು ಪಾಕ್ ಪ್ರಜೆಗಳಾದ ಅಲಿ ಭಾಯ್ ಅಕಾ ತಲ್ಹಾ ಭಾಯ್ ಮತ್ತು ಹಶಿಮ್ ಮೂಸಾ ಅಕಾ ಸುಲೇಮಾನ್ ಫೋಟೋಗಳಿವೆ.

    ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಮೇ 7ರಂದು `ಆಪರೇಷನ್ ಸಿಂಧೂರ’ (Operation Sindoor) ಹೆಸರಿನಲ್ಲಿ ಪಾಕ್‌ನ 9 ಭಯೋತ್ಪಾದಕರ ನೆಲೆಗಳ ಮೇಲೆ ದಾಳಿ ನಡೆಸಿತು. ಅದಾದ ಬಳಿಕ ಪಾಕಿಸ್ತಾನ ಹಲವು ಬಾರಿ ಅಪ್ರಚೋದಿತ ದಾಳಿ ನಡೆಸಿದ್ದು, ಮೇ 10ರಂದು ಭಾರತ-ಪಾಕಿಸ್ತಾನ ಕದನ ವಿರಾಮ ಘೋಷಿಸಿವೆ.ಇದನ್ನೂ ಓದಿ: ಶಾರುಖ್ ಖಾನ್ ‘ಕಿಂಗ್’ ಸಿನಿಮಾದಲ್ಲಿ ಅನಿಲ್ ಕಪೂರ್