Tag: jammu kashmir

  • ಜಮ್ಮುವಿನ ಬಂಡಿಪೋರಾದಲ್ಲಿ ಪ್ರಪಾತಕ್ಕೆ ಬಿದ್ದ ಸೇನಾ ವಾಹನ – ನಾಲ್ವರು ಯೋಧರು ಹುತಾತ್ಮ!

    ಜಮ್ಮುವಿನ ಬಂಡಿಪೋರಾದಲ್ಲಿ ಪ್ರಪಾತಕ್ಕೆ ಬಿದ್ದ ಸೇನಾ ವಾಹನ – ನಾಲ್ವರು ಯೋಧರು ಹುತಾತ್ಮ!

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡೀಪೋರಾ (Bandipore) ಜಿಲ್ಲೆಯಲ್ಲಿ ಶನಿವಾರ ಸೇನಾ ವಾಹನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ (Army Vehicle Falls) ಪರಿಣಾಮ ನಾಲ್ವರು ಯೋಧರು ಹುತಾತ್ಮರಾಗಿದ್ದು, ಮೂವರು ಗಾಯಗೊಂಡಿದ್ದಾರೆ.

    ಮಧ್ಯಾಹ್ನ 2.30ರ ಸುಮಾರಿಗೆ ಎಸ್‌ಕೆ ಪೇಯೆನ್ ಪ್ರದೇಶದ ಬಳಿ ಕೆಟ್ಟ ಹವಾಮಾನ ಪರಿಸ್ಥಿತಿಯಿಂದ ವಾಹನವು ಚಾಲಕನ ನಿಯಂತ್ರಣ ತಪ್ಪಿ, ದುರಂತ ಸಂಭವಿಸಿದೆ. ಕೂಡಲೇ ಗಂಭೀರವಾಗಿ ಗಾಯಗೊಂಡಿದ್ದ ಯೋಧರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ಚಿಕಿತ್ಸೆ ಫಲಕಾರಿಯಾಗದೇ ನಾಲ್ವರು ಸಾವನ್ನಪ್ಪಿದ್ದಾರೆ. ಮೂವರ ಸ್ಥಿತಿ ಸ್ಥಿರವಾಗಿದ್ದು, ಅವರಿಗೆ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.

    ಅಪಘಾತ ಸ್ಥಳದಲ್ಲಿ ಭದ್ರತಾ ಪಡೆಗಳು ಮತ್ತು ಪೊಲೀಸ್‌ ಸಿಬ್ಬಂದಿಯನ್ನ ಮೇಲ್ವಿಚಾರಣೆಗೆ ನಿಯೋಜಿಸಲಾಗಿದೆ. ಇದನ್ನೂ ಓದಿ: 32 ವರ್ಷಗಳಿಂದ ಸ್ನಾನವನ್ನೇ ಮಾಡದ ಛೋಟಾ ಬಾಬಾ – ‘ಕುಂಭ ಮೇಳ’ದ ಆಕರ್ಷಣೆ ಕೇಂದ್ರಬಿಂದು ಇವರೇ!

    ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನಾ ವಾಹನ ಅಪಘಾತಕ್ಕೀಡಾಗಿರುವುದು ಇದೇ ಮೊದಲೇನಲ್ಲ. ಇತ್ತೀಚೆಗೆ 2024ರ ಡಿಸೆಂಬರ್‌ 24ರಂದು ಪೂಂಚ್‌ನಲ್ಲಿ ಸೇನಾವಾಹನ 350 ಆಳದ ಪ್ರಪಾತಕ್ಕೆ ಬಿದ್ದು, ಐವರು ಸೈನಿಕರು ಸಾವನ್ನಪ್ಪಿದ್ದರು ಮತ್ತು ಐವರು ಗಾಯಗೊಂಡಿದ್ದರು. ಈ ಪೈಕಿ ಕರ್ನಾಟಕದ ಮೂವರು ಯೋಧರು ಹುತಾತ್ಮರಾದರು. ಇದನ್ನೂ ಓದಿ: Delhi Assembly Election | 29 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬಿಜೆಪಿ

    ಇದಕ್ಕೂ ಮುನ್ನ 2024ರ ನವೆಂಬರ್‌ 4ರಂದು ರಜೌರಿ ಜಿಲ್ಲೆಯಲ್ಲಿ ಸೇನಾ ವಾಹನವು ರಸ್ತೆಯಿಂದ ಸ್ಕಿಡ್ ಆಗಿ ಕಮರಿಗೆ ಬಿದ್ದು ಓರ್ವ ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದರು, ಮತ್ತೊಬ್ಬರು ಗಾಯಗೊಂಡಿದ್ದರು. ನವೆಂಬರ್‌ 2ರಂದು ರಿಯಾಸಿ ಜಿಲ್ಲೆಯಲ್ಲಿ ಕಾರೊಂದು ಕಮರಿಗೆ ಬಿದ್ದು 10 ತಿಂಗಳ ಮಗು ಸೇರಿ ಮೂವರು ಸಾವನ್ನಪ್ಪಿದ್ದರು ಹಾಗೂ ಮೂವರು ಗಂಭೀರವಾಗಿ ಗಾಯಗೊಂಡಿದ್ದರು. ಇದನ್ನೂ ಓದಿ: ಕೆಲವರು ಗ್ರಾಮೀಣ ಭಾಗದಲ್ಲಿ ಜಾತಿ ರಾಜಕಾರಣದ ಹೆಸರಿನಲ್ಲಿ ಶಾಂತಿ ಕದಡಲು ಯತ್ನಿಸುತ್ತಿದ್ದಾರೆ: ಮೋದಿ

  • ಜಮ್ಮು-ಕಾಶ್ಮೀರದ ಸೋಷಿಯಲ್‌ ಮೀಡಿಯಾ ಸ್ಟಾರ್‌ ಶವವಾಗಿ ಪತ್ತೆ – ಆತ್ಮಹತ್ಯೆ ಶಂಕೆ

    ಜಮ್ಮು-ಕಾಶ್ಮೀರದ ಸೋಷಿಯಲ್‌ ಮೀಡಿಯಾ ಸ್ಟಾರ್‌ ಶವವಾಗಿ ಪತ್ತೆ – ಆತ್ಮಹತ್ಯೆ ಶಂಕೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಮೂಲದ ಸೋಷಿಯಲ್‌ ಮೀಡಿಯಾ ಸ್ಟಾರ್‌ (Social Media Star) ಹಾಗೂ ರೇಡಿಯೋ ಜಾಕಿ ಸಿಮ್ರಾನ್‌ ಸಿಂಗ್‌ (25) ಗುರುಗ್ರಾಮ್‌ನಲ್ಲಿ ಶವವಾಗಿ ಪತ್ತೆಯಾಗಿದ್ದು, ಪೊಲೀಸರು ಇದೊಂದು ಆತ್ಮಹತ್ಯೆ ಪ್ರಕರಣ ಎಂದು ಶಂಕಿಸಿದ್ದಾರೆ.

    ಇನ್‌ಸ್ಟಾಗ್ರಾಮ್‌ನಲ್ಲಿ (Instagram) ಸುಮಾರು 7 ಲಕ್ಷ ಅಭಿಮಾನಿಗಳನ್ನು ಒಳಗೊಂಡಿದ್ದ ಸಿಮ್ರಾನ್‌, ಇದೇ ತಿಂಗಳ ಡಿಸೆಂಬರ್‌ 13ರಂದು ಕೊನೆಯದ್ದಾಗಿ ರೀಲ್ಸ್‌ವೊಂದನ್ನ ಪೋಸ್ಟ್‌ ಮಾಡಿದ್ದರು. ಬಳಿಕ ನಾಪತ್ತೆಯಾಗಿದ್ದರು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಚಾಕು ಇರಿದು ಗೆಳತಿಯ ಹತ್ಯೆ – ಕೊಲೆ ಬಳಿಕ ತಾನು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಪಾಗಲ್‌ ಪ್ರೇಮಿ

    ಮಾಹಿತಿ ಪ್ರಕಾರ, ಸಿಮ್ರಾನ್‌ ಗುರುಗ್ರಾಮ್‌ ಸೆಕ್ಟರ್‌-47ರಲ್ಲಿರುವ ಅಪಾರ್ಟ್‌ಮೆಂಟ್‌ವೊಂದರಲ್ಲಿ ಶವವಾಗಿ ಪತ್ತೆಯಾಗಿರುವುದಾಗಿ ಆಕೆಯ ಸ್ನೇಹಿತನೊಬ್ಬ ಪೊಲೀಸರಿಗೆ ಮಾಹಿತಿ ನೀಡಿದ್ದು, ನಂತರ ಪ್ರಕರಣ ಬೆಳಕಿಗೆ ಬಂದಿದೆ. ಮರಣೋತ್ತರ ಪರೀಕ್ಷೆ ಬಳಿಕ ಆಕೆಯ ಮೃತದೇಹವನ್ನ ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ. ಇದನ್ನೂ ಓದಿ: ಇನ್ಮುಂದೆ 5, 8ನೇ ತರಗತಿ ವಿದ್ಯಾರ್ಥಿಗಳು ಫೇಲ್‌ ಆಗ್ತಾರಾ?; ಏನಿದು ‘ನೋ-ಡಿಟೆನ್ಷನ್‌ ಪಾಲಿಸಿ’?

    ಜಮ್ಮು ಪ್ರದೇಶದ ನಿವಾಸಿಯಾಗಿರುವ ಆಕೆಯನ್ನ ಅವರ ಅಭಿಮಾನಿಗಳು ʻಜಮ್ಮು ಕಿ ಧಡ್ಕನ್ (ಜಮ್ಮುವಿನ ಹೃದಯ ಬಡಿತ)ʼ ಎಂದು ಕರೆಯುತ್ತಿದ್ದರು. ಇದನ್ನೂ ಓದಿ: ಅತ್ಯಾಚಾರಕ್ಕೆ ವಿರೋಧಿಸಿದ ಬಾಲಕಿಯ ತಲೆಗೆ ಕಲ್ಲಿನಿಂದ ಹೊಡೆದು ಹತ್ಯೆ – ಕಾಮುಕನಿಗೆ ಗುಂಡೇಟು ನೀಡಿ ಬಂಧಿಸಿದ ಪೊಲೀಸರು

  • ಉಡುಪಿಗೆ ಆಗಮಿಸಿದ ಯೋಧ ಅನೂಪ್ ಪಾರ್ಥಿವ ಶರೀರ – ಅಂತಿಮ ನಮನ ಸಲ್ಲಿಸಿದ ಚೌಟ, ಕೋಟ

    ಉಡುಪಿಗೆ ಆಗಮಿಸಿದ ಯೋಧ ಅನೂಪ್ ಪಾರ್ಥಿವ ಶರೀರ – ಅಂತಿಮ ನಮನ ಸಲ್ಲಿಸಿದ ಚೌಟ, ಕೋಟ

    ಉಡುಪಿ: ಜಮ್ಮು ಕಾಶ್ಮೀರದ (Jammu Kashmir) ಪೂಂಚ್‌ನಲ್ಲಿ (Poonch) ನಡೆದ ಸೇನಾ ವಾಹನ ಅಪಘಾತದಲ್ಲಿ ಮೃತಪಟ್ಟ ಐವರ ಪೈಕಿ ಕರ್ನಾಟಕದ ಕುಂದಾಪುರ (Kundapura) ತಾಲೂಕಿನ ಬೀಜಾಡಿಯವರಾದ ಯೋಧ ಅನೂಪ್ (Hawaldar Anoop Poojari) ಪಾರ್ಥಿವ ಶರೀರ ಉಡುಪಿಗೆ ಆಗಮಿಸಿದೆ.

    ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ (Captain Brijesh Chowta) ಹಾಗೂ ಉಡುಪಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ (Kota Srinivas Poojari) ಸೇನಾಧಿಕಾರಿಗಳಿಂದ ಅನೂಪ್ ಪಾರ್ಥಿವ ಶರೀರ ಪಡೆದು ಅಂತಿಮ ನಮನ ಸಲ್ಲಿಸಿದರು. ಕೆಲವೇ ಕ್ಷಣಗಳಲ್ಲಿ ಉಡುಪಿ ನಗರದಿಂದ ಕುಂದಾಪುರಕ್ಕೆ ಮೃತದೇಹ ರವಾನೆಯಾಗಲಿದೆ. ಬೀಜಾಡಿ ಪಡು ಸರ್ಕಾರಿ ಶಾಲಾ ಮೈದಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ಸಿದ್ಧತೆ ನಡೆದಿದೆ. ಬೀಜಾಡಿ ಕಡಲ ಕಿನಾರೆಯಲ್ಲಿ ಇಂದು ಸಂಜೆ ವೇಳೆಗೆ ಅಂತ್ಯಕ್ರಿಯೆ ನಡೆಯಲಿದ್ದು, ಸಕಲ ತಯಾರಿಗಳನ್ನು ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ: ಬೆಂಗಳೂರು| ರೈಲಿಗೆ ಸಿಲುಕಿ ಇಬ್ಬರು ಯುವಕರು ದಾರುಣ ಸಾವು

    ಕಳೆದ 13 ವರ್ಷಗಳಿಂದ ಸೈನ್ಯದಲ್ಲಿರುವ ಅನೂಪ್ 33ನೇ ವಯಸ್ಸಿಗೆ ಹವಾಲ್ದಾರ್ ಆಗಿ ಭಡ್ತಿ ಹೊಂದಿದ ವೀರ ಯೋಧ. ಅನೂಪ್ ಸಾವಿನಿಂದ ಇಡೀ ಕುಟುಂಬ ದಿಗ್ಬ್ರಾಂತಗೊಂಡಿದೆ. ಬಡತನದ ನಡುವೆ ಭಾರತಾಂಬೆಯ ಸೇವೆ ಮಾಡಬೇಕೆಂದು ಹಠದಿಂದ ಸೈನ್ಯ ಸೇರಿದ್ದ ಅನೂಪ್ 14 ವರ್ಷ ಸೇವೆ ಸಲ್ಲಿಸಿದ್ದಾರೆ. 2022ರಲ್ಲಿ ಅನೂಪ್‌ಗೆ ವಿವಾಹವಾಗಿತ್ತು. ಎರಡು ವರ್ಷದ ಪುಟ್ಟ ಮಗುವಿದ್ದು, ಇಬ್ಬರು ಸಹೋದರಿಯರು, ಅಪಾರ ಬಂಧು ಮಿತ್ರರು, ಗ್ರಾಮಸ್ಥರು, ಗೆಳೆಯರನ್ನು ಬಿಟ್ಟು ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಮೂರು ವರ್ಷ ಮತ್ತೆ ಸೇನೆಯಲ್ಲಿ ಕೆಲಸ ಮಾಡಿ ನಿವೃತ್ತಿಯಾಗುವ ಆಲೋಚನೆಯನ್ನು ಅನೂಪ್ ಹೊಂದಿದ್ದರು. ಈ ನಡುವೆ ಕಾಶ್ಮೀರದ ಪೂಂಚ್‌ನಲ್ಲಿ ದುರ್ಘಟನೆಯಾಗಿದೆ. 20 ದಿನದ ರಜೆಗೆ ಬಂದಿದ್ದ ಅನೂಪ್, ಶನಿವಾರವಷ್ಟೇ ಕಾಶ್ಮೀರಕ್ಕೆ ವಾಪಸ್ ಆಗಿದ್ದರು. ಘಟನೆಯಿಂದ ಕುಟುಂಬ ಕಣ್ಣೀರಾಗಿದೆ. ಮಗನನ್ನು ಕಳೆದುಕೊಂಡ ತಾಯಿ, ಸೋದರಿಯ ನೋವಿಗೆ ಕಣ್ಣೀರ ಮಾತೇ ಸಾಕ್ಷಿಯಾಗಿದೆ. ಇದನ್ನೂ ಓದಿ: ಕಾರವಾರ| 10 ಸಾವಿರ ಪಿಗ್ಮಿ ಹಣಕ್ಕಾಗಿ ವೃದ್ದೆ ಕತ್ತು ಹಿಸುಕಿ ಹತ್ಯೆ

    ಯೋಧ ಅನೂಪ್ ಪಾರ್ಥಿವ ಶರೀರ ಸ್ವಗ್ರಾಮ ತಲುಪಲಿದ್ದು, ಕುಂದಾಪುರದ ಬೀಜಾಡಿವರೆಗೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅನೂಪ್ ಅಂತಿಮ ಯಾತ್ರೆ ನಡೆಸಲು ತೀರ್ಮಾನಿಸಲಾಗಿದೆ. 5,000ಕ್ಕೂ ಹೆಚ್ಚು ಮಂದಿ ಭಾಗಿ ಆಗುವ ನಿರೀಕ್ಷೆ ಇದ್ದು, ಅಂತಿಮ ಯಾತ್ರೆ ಬಳಿಕ ಪಾರ್ಥಿವ ಶರೀರವನ್ನು ಕುಟುಂಬಕ್ಕೆ ಹಸ್ತಾಂತರ ಮಾಡಲಾಗುತ್ತದೆ. ಇದನ್ನೂ ಓದಿ: ನನಗೇನಾದ್ರೂ ಆದ್ರೆ ಸಿಎಂ ಹೊಣೆ: ಸ್ನೇಹಮಯಿ ಕೃಷ್ಣ

    ಸ್ವಗ್ರಾಮದ ಬೀಜಾಡಿ ಪಡು ಸರಕಾರಿ ಶಾಲೆಯಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು.. ಸಕಲ ಸೇನೆ ಮತ್ತು ಸರ್ಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರ ನಡೆಯಲಿದೆ. ಇದನ್ನೂ ಓದಿ: ನಾನು ಧರ್ಮಸ್ಥಳಕ್ಕೂ ಹೋಗ್ತೀನಿ, ಸವದತ್ತಿ ಯಲ್ಲಮ್ಮನ ಬಳಿಯೂ ಹೋಗ್ತೀನಿ: ಸಿ.ಟಿ ರವಿ

  • ದೇಶ ಸೇವೆ ಕನಸು ಹೊತ್ತು ಸೇನೆಗೆ ಸೇರ್ಪಡೆ – 7 ವರ್ಷಗಳ ಸೇವೆ ವೀರ ಮರಣದಲ್ಲಿ ಅಂತ್ಯ

    ದೇಶ ಸೇವೆ ಕನಸು ಹೊತ್ತು ಸೇನೆಗೆ ಸೇರ್ಪಡೆ – 7 ವರ್ಷಗಳ ಸೇವೆ ವೀರ ಮರಣದಲ್ಲಿ ಅಂತ್ಯ

    ಬಾಗಲಕೋಟೆ: ದೇಶ ಸೇವೆಯ ಕನಸು ಹೊತ್ತು ಭಾರತೀಯ ಸೇನೆಗೆ (Indian Army) ಸೇರಿದ್ದರು.  ಹಿಮಾಚಲ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದ ಯೋಧನಿಗೆ ಜಮ್ಮು ಕಾಶ್ಮೀರಕ್ಕೆ (Jammu Kashmir) ವರ್ಗಾವಣೆ ಆಗಿತ್ತು. ವರ್ಗಾವಣೆ ಬಳಿಕ ಜೊತೆಗೆ ಇದ್ದ ಪತ್ನಿಯನ್ನು ಊರಿಗೆ ಕಳಿಸಿ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದ್ದರು. ಪತ್ನಿ ಬೆಳಿಗ್ಗೆಯಷ್ಟೇ ಮನೆಗೆ ಬಂದು ಸೇರಿದರೆ ಸಂಜೆ ವೇಳೆಗೆ ಪತಿ ರಸ್ತೆ ಅಪಘಾತದಲ್ಲಿ ಮೃತಪಟ್ಟು ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ.

    ಜಮ್ಮು ಕಾಶ್ಮೀರದಲ್ಲಿ ಸೇನಾ ವಾಹನ ಪ್ರಪಾತಕ್ಕೆ ಬಿದ್ದು ಅಪಘಾತದಲ್ಲಿ ಬೆಳಗಾವಿ ಪಂತ ಬಾಳೇಕುಂದ್ರಿ ದಯಾನಂದ ತಿರಕನ್ನವರ್, ಮುಧೋಳದ ಮಹಾಲಿಂಗಪುರದ ಮಹೇಶ್ ಮರಿಗೊಂಡ, ಕುಂದಾಪುರ ಬೀಜಾಡಿಯ ಅನುಪ್‌ ಮೃತರಾಗಿದ್ದಾರೆ. ಇದನ್ನೂ ಓದಿ: ಪೂಂಚ್‌ನಲ್ಲಿ 300 ಅಡಿ ಕಂದಕಕ್ಕೆ ಉರುಳಿದ ಸೇನಾ ವಾಹನ : ಕರ್ನಾಟಕದ ಮೂವರು ಸೈನಿಕರು ಹುತಾತ್ಮ

    ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪುರದ 25 ವರ್ಷದ ಮಹೇಶ್ ನಾಗಪ್ಪ ಮರಿಗೊಂಡ (Mahesh Nagappa) 11ನೇ ಮರಾಠಾ ರೆಜಿಮೆಂಟ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಸೇನೆಗೆ ಸೇರಿ 6 ವರ್ಷ 6 ತಿಂಗಳು ಆಗಿತ್ತು. ಮಹೇಶ್ ಅವರು ಮೂರು ವರ್ಷದ ಹಿಂದೆ ಲಕ್ಷ್ಮೀ ಅವರ ಕೈ ಹಿಡಿದಿದ್ದರು. ಮಂಗಳವಾರ ಬೆಳಗ್ಗೆ ಲಕ್ಷ್ಮೀ ಅವರು ಮಹಾಲಿಂಗಪುರಕ್ಕೆ ಬಂದಿದ್ದಾರೆ. ಆ ಬಳಿಕ ಪೋನ್‌ನಲ್ಲಿ ಮಹೇಶ್ ಜೊತೆ ಮಾತನಾಡಿದ್ದಾರೆ. ಆದರೆ ಸಂಜೆ ವಾಹನದೊಂದಿಗೆ ಪ್ರಪಾತಕ್ಕೆ ಬಿದ್ದು ಯೋಧ ಮಹೇಶ್ ಹುತಾತ್ಮರಾಗಿದ್ದಾರೆ.

    ಮಹೇಶ್ ಹಿರಿಯ ಪುತ್ರನಾಗಿದ್ದು ಕುಟುಂಬವೇ ಅವರ ಮೇಲೆ ಅವಲಂಬಿಸಿತ್ತು. ಇದೀಗ ಮಗನನ್ನು ಕಳೆದುಕೊಂಡು ತಾಯಿ, ಅಜ್ಜಿ ಸೇರಿದಂತೆ ಕುಟುಂಬಸ್ಥರು ಕಣ್ಣೀರಿಡುತ್ತಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸಂಬಂಧಿಕರು ಬಂಧುಗಳು ಮನೆ ಬಳಿ ಜಮಾವಣೆಗೊಂಡಿದ್ದಾರೆ.

     

    ಶಾಸಕ ಸಿದ್ದು ಸವದಿ, ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಸೇರಿದಂತೆ ಹಲವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಸಂಜೆ ಮಹಾಲಿಂಗಪುರದಲ್ಲಿ ಸಾರ್ವಜನಿಕ ದರ್ಶನದ ಬಳಿಕ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಸಾಂತ್ವನ ಹೇಳಿದ ಸಚಿವ ತಿಮ್ಮಾಪುರ ಕುಟುಂಬಕ್ಕೆ ಸರಕಾರದಿಂದ ಸೇರಬೇಕಾದ ಎಲ್ಲ ಪರಿಹಾರ ಕೊಡಿಸುವ ಭರವಸೆ ನೀಡಿದರು.

    ಮನೆಗೆ ಮಗನನ್ನು ಕಳೆದುಕೊಂಡು ಕುಟುಂಬಸ್ಥರು ಕಣ್ಣೀರುಡುತ್ತಿದ್ದು. ಇಂದು ಪಾರ್ಥಿವ ಶರೀರ ಸ್ವಗ್ರಾಮ ತಲುಪಿದ್ದು ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.

     

  • ತವರಿಗೆ ಹುತಾತ್ಮ ಯೋಧರ ಪಾರ್ಥಿವ ಶರೀರ; ಗುರುವಾರ ಕುಂದಾಪುರದಲ್ಲಿ ಸೈನಿಕ ಅನೂಪ್‌ ಅಂತ್ಯಸಂಸ್ಕಾರ

    ತವರಿಗೆ ಹುತಾತ್ಮ ಯೋಧರ ಪಾರ್ಥಿವ ಶರೀರ; ಗುರುವಾರ ಕುಂದಾಪುರದಲ್ಲಿ ಸೈನಿಕ ಅನೂಪ್‌ ಅಂತ್ಯಸಂಸ್ಕಾರ

    ಉಡುಪಿ: ಜಮ್ಮು ಕಾಶ್ಮೀರದ (Jammu Kashmir) ಪೂಂಚ್‌ನಲ್ಲಿ ನಡೆದ ದುರಂತದಲ್ಲಿ ಹುತಾತ್ಮರಾದ ಕರ್ನಾಟಕದ (Karnataka) ಸೈನಿಕರ ಪಾರ್ಥಿವ ಶರೀರಗಳು ತವರಿಗೆ ತಲುಪಲಿವೆ.

    ಇಂದು ತಡರಾತ್ರಿ ಉಡುಪಿಯ ಅನೂಪ್ ಪೂಜಾರಿ ಅವರ ಪಾರ್ಥಿವ ಶರೀರ ಕೂಡ ತವರಿಗೆ ಬರಲಿದೆ. ರಾತ್ರಿ 3 ಗಂಟೆ ನಂತರ ಉಡುಪಿಗೆ ಆಗಮನ ಸಾಧ್ಯತೆ ಇದೆ. ಅಜ್ಜರಕಾಡು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಪಾರ್ಥಿವ ಶರೀರ ಇರಿಸಲಾಗುವುದು.

    ದಯಾನಂದ ತಿರಕನ್ನವರ್, ಅನುಪ್‌, ಮಹೇಶ್ ಮರಿಗೊಂಡ ಮೃತ ಸೈನಿಕರು

    ಬೆಳಗ್ಗೆ ಕುಂದಾಪುರ ತಾಲೂಕಿಗೆ ರವಾನೆಯಾಗಲಿದೆ. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಅನೂಪ್ ಅಂತಿಮ ಯಾತ್ರೆ ನಡೆಯಲಿದೆ. ಕುಂದಾಪುರದ ಬೀಜಾಡಿ ವರೆಗೆ ಪಾರ್ಥಿವ ಶರೀರ ಮೆರವಣಿಗೆ ಸಾಗಲಿದೆ. ಸುಮಾರು 5,000 ಜನ ಭಾಗಿಯಾಗುವ ನಿರೀಕ್ಷೆ ಇದೆ. ಅಂತಿಮ ಯಾತ್ರೆ ಮುಗಿಸಿ ಹುತಾತ್ಮ ಯೋಧನ ದೇಹವನ್ನು ಕುಟುಂಬಕ್ಕೆ ಹಸ್ತಾಂತರ ಮಾಡಲಾಗುವುದು.

    ಬೀಜಾಡಿ ಗ್ರಾಮದ ಮನೆಯಲ್ಲಿ ಅಂತಿಮ ವಿಧಿವಿಧಾನ ನಡೆಯಲಿದ್ದು, ಕುಟುಂಬದ ಆಪ್ತರಿಗೆ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೀಜಾಡಿ ಪಡು ಸರ್ಕಾರಿ ಶಾಲೆ ಮೈದಾನದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಇರಲಿದೆ. ಆಪ್ತರು, ಸಾರ್ವಜನಿಕರು, ಜನಪ್ರತಿನಿಧಿಗಳಿಗೆ ಅಂತಿಮ ನಮನಕ್ಕೆ ಅವಕಾಶ ಕಲ್ಪಿಸಲಾಗುವುದು.

    ಬೀಜಾಡಿ ಕಡಲ ತೀರದಲ್ಲಿ ಅನೂಪ್ ಅಂತ್ಯಸಂಸ್ಕಾರ ನಡೆಯಲಿದೆ. ಸಮುದ್ರ ತೀರದ ಸರ್ಕಾರಿ ಜಮೀನಿನಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಮುದ್ರ ತೀರದಲ್ಲಿ ಅನೂಪ್ ಪಾರ್ಥಿವ ಶರೀರಕ್ಕೆ ಅಗ್ನಿಸ್ಪರ್ಶ ಮಾಡಲಾಗುವುದು. ಅಂತಿಮ ವಿಧಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್, ಸೇನಾ ಸಿಬ್ಬಂದಿ ಭಾಗಿಯಾಗಲಿದ್ದಾರೆ. ಗುರುವಾರ ಮಧ್ಯಾಹ್ನ ಅಂತ್ಯಸಂಸ್ಕಾರ ಪ್ರಕ್ರಿಯೆ ನಡೆಯಲಿದೆ.

  • ಪೂಂಚ್‌ನಲ್ಲಿ 300 ಅಡಿ ಕಂದಕಕ್ಕೆ ಉರುಳಿದ ಸೇನಾ ವಾಹನ : ಕರ್ನಾಟಕದ ಮೂವರು ಸೈನಿಕರು ಹುತಾತ್ಮ

    ಪೂಂಚ್‌ನಲ್ಲಿ 300 ಅಡಿ ಕಂದಕಕ್ಕೆ ಉರುಳಿದ ಸೇನಾ ವಾಹನ : ಕರ್ನಾಟಕದ ಮೂವರು ಸೈನಿಕರು ಹುತಾತ್ಮ

    ಬೆಳಗಾವಿ/ ಉಡುಪಿ/ ಬಾಗಲಕೋಟೆ: ಜಮ್ಮು ಕಾಶ್ಮೀರ (Jammu Kashmir) ಪೂಂಚ್‌ನಲ್ಲಿ ನಡೆದ ದುರಂತದಲ್ಲಿ ಕರ್ನಾಟದ (Karnataka) ಮೂವರು ಸೈನಿಕರು ಹುತಾತ್ಮರಾಗಿದ್ದಾರೆ.

    ಮಂಗಳವಾರ ಸಂಜೆ 5:30ಕ್ಕೆ 300 ಅಡಿ ಕಂದಕಕ್ಕೆ ಸೇನಾ ವಾಹನ ಬಿದ್ದು ಮರಾಠಾ ರೆಜಿಮೆಂಟ್‌ನ (Maratha Light Infantry) ಐವರು ಮೃತಪಟ್ಟಿದ್ದರು. ಐವರು ಪೈಕಿ ಮೂವರು ಕರ್ನಾಟಕದವರಾಗಿದ್ದಾರೆ.

    ಬೆಳಗಾವಿ ಪಂತ ಬಾಳೇಕುಂದ್ರಿ ದಯಾನಂದ ತಿರಕನ್ನವರ್, ಮುಧೋಳದ ಮಹಾಲಿಂಗಪುರದ ಮಹೇಶ್ ಮರಿಗೊಂಡ, ಕುಂದಾಪುರ ಬೀಜಾಡಿಯ ಅನುಪ್‌ ಮೃತರಾಗಿದ್ದಾರೆ. ಸೈನಿಕರು ಮೃತಪಟ್ಟ ಬಗ್ಗೆ ಭಾರತೀಯ ಸೇನೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದೆ.

    ಅನೂಪ್ ಕುಟುಂಬಕ್ಕೆ ಸೇನಾಧಿಕಾರಿಗಳಿಂದ ಮಾಹಿತಿ ಲಭ್ಯವಾಗಿದೆ. ಕಳೆದ 13 ವರ್ಷಗಳಿಂದ ಅನೂಪ್ ಸೇನೆಯಲ್ಲಿದ್ದು 2 ವರ್ಷದ ಹಿಂದೆ ವಿವಾಹವಾಗಿತ್ತು. ದಂಪತಿಗೆ 1 ವರ್ಷದ ಮಗುವಿದೆ. ಜಿಲ್ಲಾಡಳಿತ, ಜಿಲ್ಲಾ ಪೊಲೀಸರಿಗೂ ಸೇನೆಯಿಂದ ಮಾಹಿತಿ ಕಳುಹಿಸಲಾಗಿದೆ.

    ಮಹೇಶ್ ನಾಗಪ್ಪ ಮಾರಿಗೊಂಡ (25) ರಬಕವಿ ಬನಹಟ್ಟಿ ತಾಲ್ಲೂಕಿನ ಮಹಾಲಿಂಗಪುರ ನಿವಾಸಿಯಾಗಿದ್ದರು. 7 ವರ್ಷಗಳಿಂದ ಸೇನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮಹೇಶ್ ಅವರಿಗೆ ಮೂರು ವರ್ಷದ ಹಿಂದೆ ಮದುವೆಯಾಗಿತ್ತು. ನಾಳೆ ಬೆಳಗಾವಿ ಮೂಲಕ ಮಹಾಲಿಂಗಪುರಕ್ಕೆ ಪಾರ್ಥಿವ ಶರೀರ ಬರಲಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಸೇನಾ ಟ್ರಕ್ ರಸ್ತೆಯಿಂದ ಸ್ಕಿಡ್ ಆಗಿ ಕಂದಕಕ್ಕೆ ಬಿದ್ದಿತ್ತು. ಘರೋವಾ ಪ್ರದೇಶದಲ್ಲಿ ಸಂಜೆ 5:20 ರ ಸುಮಾರಿಗೆ ಆರು ವಾಹನಗಳ ಬೆಂಗಾವಲು ಪಡೆಯ ಭಾಗವಾಗಿದ್ದ ಸೇನಾ ವಾಹನವು ಜಿಲ್ಲೆಯ ಬನೋಯ್‌ಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿತ್ತು.

  • ಪೂಂಚ್‌ನಲ್ಲಿ ದುರಂತ – 300 ಅಡಿಯ ಆಳದ ಕಣಿವೆಗೆ ಬಿದ್ದ ಸೇನಾ ವಾಹನ, 5 ಮಂದಿ ಬಲಿ

    ಪೂಂಚ್‌ನಲ್ಲಿ ದುರಂತ – 300 ಅಡಿಯ ಆಳದ ಕಣಿವೆಗೆ ಬಿದ್ದ ಸೇನಾ ವಾಹನ, 5 ಮಂದಿ ಬಲಿ

    ಶ್ರೀನಗರ: 18 ಸೈನಿಕರು ಪ್ರಯಾಣಿಸುತ್ತಿದ್ದ ಸೇನಾ ವಾಹನ (Army Vehicle) 300 ಅಡಿ ಆಳದ ಕಣಿವೆಗೆ ಉರುಳಿದ ಘಟನೆ ಜಮ್ಮು ಮತ್ತು ಕಾಶ್ಮೀರದ (Jammu And Kashmir) ಪೂಂಚ್ ಜಿಲ್ಲೆಯ ಬಲ್ನೋಯಿ ಪ್ರದೇಶದಲ್ಲಿ ನಡೆದಿದೆ.

    ಮೆಂಧಾರ್‌ನ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ನಡೆದ ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದು ಸದ್ಯ 5 ಮಂದಿ ಮೃತಪಟ್ಟ ಬಗ್ಗೆ ಮಾಹಿತಿ ಲಭ್ಯವಾಗಿದೆ. ಗಾಯಗೊಂಡವರ ಪೈಕಿ ಹಲವು ಸೈನಿಕರ ಸ್ಥಿತಿ ಗಂಭೀರವಾಗಿದ್ದು ಸಾವು, ನೋವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಹೊಸ ಧಾರ್ಮಿಕ ವಿವಾದ ಕೆದಕಬೇಡಿ ಎಂದಿದ್ದಕ್ಕೆ ಸಿಟ್ಟು – ಭಾಗವತ್ ವಿರುದ್ಧ ಸ್ವಾಮೀಜಿಗಳ ಆಕ್ರೋಶ

    ಜಮ್ಮು ಮತ್ತು ಕಾಶ್ಮೀರದಲ್ಲಿನ ಕಡಿದಾದ, ಪರ್ವತಮಯ ಭೂಪ್ರದೇಶದ ಕಾರಣದಿಂದಾಗಿ ಕಾರುಗಳು ಮತ್ತು ಇತರ ವಾಹನಗಳು ಕಣಿವೆ ಉರುಳುವುದು ಸಾಮಾನ್ಯ. ಆದರೆ ಇಂದು ನಡೆದ  ಘಟನೆಗೆ ನಿಜವಾದ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ.

  • ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಐವರು ಉಗ್ರರು ಬಲಿ, ಇಬ್ಬರು ಸೈನಿಕರಿಗೆ ಗಾಯ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಐವರು ಉಗ್ರರು ಬಲಿ, ಇಬ್ಬರು ಸೈನಿಕರಿಗೆ ಗಾಯ

    ಶ್ರೀನಗರ: ಭದ್ರತಾ ಪಡೆ (Security Force) ಮತ್ತು ಭಯೋತ್ಪಾದಕರ (Terrorits) ನಡುವೆ ನಡೆದ ಎನ್‌ಕೌಂಟರ್‌ನಲ್ಲಿ (Encounter) ಐವರು ಉಗ್ರರು ಬಲಿಯಾಗಿದ್ದು, ಇಬ್ಬರು ಭದ್ರತಾ ಪಡೆ ಸಿಬ್ಬಂದಿ ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ (Jammu And Kashmir) ಕುಲ್ಗಾಮ್ (Kulgam) ಜಿಲ್ಲೆಯಲ್ಲಿ ನಡೆದಿದೆ.

    ಬುಧವಾರ ರಾತ್ರಿ, ಜಿಲ್ಲೆಯ ಬೆಹಿಬಾಗ್ ಪ್ರದೇಶದ ಕಡ್ಡರ್‌ನಲ್ಲಿ ಶಂಕಿತ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಗುಪ್ತಚರ ಮಾಹಿತಿ ಪಡೆದ ತಕ್ಷಣ ಭದ್ರತಾ ಪಡೆ ಸಿಬ್ಬಂದಿ ಹಾಗೂ ಜಮ್ಮು ಕಾಶ್ಮೀರ ಪೊಲೀಸರು ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು. ಇದನ್ನೂ ಓದಿ: Mumbai Boat Accident | ಸ್ಪೀಡ್‌ ಬೋಟ್‌ ಫೆರ್ರಿಗೆ ಡಿಕ್ಕಿ ಹೊಡೆಯಲು ಕಾರಣ ಏನು? ದುರಂತ ಹೇಗಾಯ್ತು?

    ಗುರುವಾರ ಮುಂಜಾನೆ ಭಯೋತ್ಪಾದಕರು ಏಕಾಏಕಿ ಭದ್ರತಾ ಪಡೆಯ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಗುಂಡಿನ ಚಕಮಕಿ ನಡೆಸಿ ಐವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಈ ವೇಳೆ ಇಬ್ಬರು ಭದ್ರತಾ ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ಎಕ್ಸ್‌ನಲ್ಲಿ ತಿಳಿಸಿದೆ. ಇದನ್ನೂ ಓದಿ: ಮುಂದಿನ ಮೂರು ದಿನಗಳ ಕಾಲ ಭಾರೀ ಶೀತಗಾಳಿ – ಬೀದರ್‌ನಲ್ಲಿ ರೆಡ್ ಅಲರ್ಟ್ ಘೋಷಣೆ

  • ಜಮ್ಮು ಕಾಶ್ಮೀರದ ಕಥುವಾದಲ್ಲಿ ಮನೆಗೆ ಬೆಂಕಿ – ಮಾಜಿ ಡಿಎಸ್‌ಪಿ ಸೇರಿ 6 ಮಂದಿ ಸಾವು

    ಜಮ್ಮು ಕಾಶ್ಮೀರದ ಕಥುವಾದಲ್ಲಿ ಮನೆಗೆ ಬೆಂಕಿ – ಮಾಜಿ ಡಿಎಸ್‌ಪಿ ಸೇರಿ 6 ಮಂದಿ ಸಾವು

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕಥುವಾದಲ್ಲಿ (Kathua) ಮನೆಗೆ ಬೆಂಕಿ ತಗುಲಿದ ಪರಿಣಾಮ ಮಾಜಿ ಡಿಎಸ್ಪಿ ಸೇರಿದಂತೆ ಒಟ್ಟು 6 ಮಂದಿ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ.

    ಮೃತರನ್ನು ಡಿಎಸ್‌ಪಿ ಅವತಾರ್ ಕೃಷ್ಣ ರೈನಾ (81), ಮಗಳು ಬರ್ಖಾ ರೈನಾ (25), ಮಗ ತಕಾಶ್ (3), ಗಂಗಾ ಭಗತ್ (17), ಡ್ಯಾನಿಶ್ ಭಗತ್ (15) ಮತ್ತು ಅದ್ವಿಕ್ (6) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಹಾಲಿನ ಪ್ರೊತ್ಸಾಹ ಧನ ಸದ್ಯಕ್ಕೆ ಹೆಚ್ಚಳ ಇಲ್ಲ: ವೆಂಕಟೇಶ್‌

    ಬುಧವಾರ ನಸುಕಿನ ಜಾವ 2:30ರ ಸುಮಾರಿಗೆ ಘಟನೆ ಸಂಭವಿಸಿದ್ದು, ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮನೆಯೊಳಗೆ ದಟ್ಟ ಹೊಗೆ ಆವರಿಸಿದ ಪರಿಣಾಮ ಮಲಗಿದ್ದವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಈ ವೇಳೆ ಇಬ್ಬರು ಅಪ್ರಾಪ್ತರು ಸೇರಿದಂತೆ ಒಟ್ಟು ಆರು ಜನ ಸಾವನ್ನಪ್ಪಿದ್ದಾರೆ. ಸದ್ಯ 4 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಪ್ರಾಥಾಮಿಕ ತನಿಖೆಯ ಪ್ರಕಾರ, ಉಸಿರಾಟದ ಸಮಸ್ಯೆಯಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಬೆಂಕಿ ಹೊತ್ತಿಕೊಳ್ಳಲು ನಿಖರವಾದ ಕಾರಣವನ್ನು ಕಂಡುಹಿಡಿಯಲು ತನಿಖೆ ನಡೆಸುತ್ತಿದ್ದಾರೆ.ಇದನ್ನೂ ಓದಿ:ವಕ್ಫ್ ವಿಚಾರದಲ್ಲಿ ರಕ್ಷಿಸಲು ಕಾಂಗ್ರೆಸ್ ನಾಯಕರು ವಿಜಯೇಂದ್ರ ಸಂಬಂಧಿಗಳೇ?: ಎಂಪಿ ರೇಣುಕಾಚಾರ್ಯ

  • ಜಮ್ಮು-ಕಾಶ್ಮೀರದ ದಾಲ್ ಸರೋವರದಲ್ಲಿ ಮೊದಲ ಜಲ ಸಾರಿಗೆ ಆರಂಭಿಸಿದ ಉಬರ್ – ಬುಕ್ಕಿಂಗ್‌ ಹೇಗೆ?

    ಜಮ್ಮು-ಕಾಶ್ಮೀರದ ದಾಲ್ ಸರೋವರದಲ್ಲಿ ಮೊದಲ ಜಲ ಸಾರಿಗೆ ಆರಂಭಿಸಿದ ಉಬರ್ – ಬುಕ್ಕಿಂಗ್‌ ಹೇಗೆ?

    ಪ್ರಕೃತಿಯ ಮಧ್ಯೆ ವಿಶ್ರಾಂತಿ ಪಡೆಯಲು ಬಯಸುವ ಪ್ರತಿಯೊಬ್ಬರಿಗೂ ಕನಸಿನ ತಾಣ ಕಾಶ್ಮೀರ. ಕಾಶ್ಮೀರದ ಪ್ರವಾಸ ಶ್ರೀನಗರದಿಂದ ಆರಂಭವಾದರೆ ಸೂಕ್ತ. ಅತಿ ಸುಂದರವಾಗಿರುವ ಈ ನಗರವು ಹೂಬಿಡುವ ಉದ್ಯಾನಗಳು, ಸ್ಫಟಿಕ ಸ್ಪಷ್ಟ ಸರೋವರಗಳು, ಭವ್ಯವಾದ ರಚನೆಗಳಿಂದ ಕೂಡಿದೆ. ಇಂತಹ ವರ್ಣರಂಜಿತ ಸ್ಥಳದಲ್ಲಿ ಶಿಕಾರ ರೈಡ್’ಗೆ ಹೋಗುವುದು ಇನ್ನು ಮಜಾವಾಗಿರುತ್ತದೆ. ಸಾಮಾನ್ಯವಾಗಿ ದಾಲ್ ಸರೋವರ ಮತ್ತು ಶ್ರೀನಗರದ ನಾಗಿನ್ ಸರೋವರದಲ್ಲಿ ಶಿಕಾರ ಸವಾರಿ ಕಂಡುಬರುತ್ತದೆ, ಇದು ನಗರದಲ್ಲಿ ಮೋಡಿಮಾಡುವ ಆಕರ್ಷಣೆಗಳಲ್ಲಿ ಒಂದಾಗಿದೆ. ಹಳೆಯ ಪ್ರಪಂಚದ ಮೋಡಿಯನ್ನು ಮರಳಿ ಪಡೆಯುವಂತೆ ಮಾಡುವ ಶಿಕಾರ, ಕಾಶ್ಮೀರದ ಸೌಂದರ್ಯವನ್ನು ಅನುಭವಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ.

    ಇದೀಗ ಉಬರ್‌ ಕಂಪನಿ ಏಷ್ಯಾದ ಮೊದಲ ಜಲ ಸಾರಿಗೆ ಸೇವೆ ʼಉಬರ್ ಶಿಕಾರʼವನ್ನು ಜಮ್ಮು ಮತ್ತು ಕಾಶ್ಮೀರದ ದಾಲ್ ಸರೋವರದಲ್ಲಿ ಪರಿಚಯಿಸಿದೆ. ಈ ಮೂಲಕ ಪ್ರವಾಸಿಗರು ಮುಂಚಿತವಾಗಿ ಮುಂಗಡ ಬಕ್ಕಿಂಗ್‌ ಮಾಡಿ ತಮ್ಮ ಪ್ರಯಾಣವನ್ನು ಕಾಯ್ದಿರಿಸಬಹುದಾಗಿದೆ. ಹಾಗಿದ್ರೆ ಏನಿದು ಉಬರ್‌ ಶಿಕಾರ? ಬುಕ್ಕಿಂಗ್‌ ಮಾಡುವುದು ಹೇಗೆ ಎಂಬುದರ ಕುರಿತು ಇಲ್ಲಿ ವಿವರಿಸಲಾಗಿದೆ. ಅದಕ್ಕೂ ಮುನ್ನ ದಾಲ್‌ ಸರೋವರದ ವಿಶೇಷತೆ ಹಾಗೂ ಶಿಕಾರದ ಕುರಿತು ಒಂದಿಷ್ಟು ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

    ದಾಲ್‌ ಸರೋವರದ ಬಗ್ಗೆ:
    ದಾಲ್ ಸರೋವರವು ಸುಮಾರು 18 ಚದರ ಕಿಲೋಮೀಟರ್ ಪ್ರದೇಶದಲ್ಲಿ ಹರಡಿದೆ. ಇದರ ಅಗಲ ಸುಮಾರು 3.5 ಕಿಲೋಮೀಟರ್ ಮತ್ತು ಗರಿಷ್ಠ ಆಳ 20 ಅಡಿ. ದಾಲ್ ಸರೋವರವು ಬೋಡ್ ದಾಲ್, ನಾಗಿನ್, ಗಾಗ್ರಿಬಲ್ ಮತ್ತು ಲೋಕುತ್ ದಾಲ್ ಎಂಬ ನಾಲ್ಕು ಜಲಾನಯನ ಪ್ರದೇಶಗಳನ್ನು ಹೊಂದಿದೆ. ಮೊಘಲರ ಕಾಲದಲ್ಲಿ ನಿರ್ಮಿಸಲಾದ ಉದ್ಯಾನವನಗಳು ಮತ್ತು ಸುಂದರವಾದ ಉದ್ಯಾನವನಗಳು ಈ ಸರೋವರದ ಸೌಂದರ್ಯವನ್ನು ಹೆಚ್ಚಿಸಿವೆ.

    ಹೆಸರು ಹೇಗೆ ಬಂತು?
    ದಾಲ್ ಲೇಕ್ ಎಂಬ ಪದವು ಪ್ರಾದೇಶಿಕ ಭಾಷೆ ಮತ್ತು ಸಂಸ್ಕೃತಿಯನ್ನು ಪ್ರತಿನಿಧಿಸುತ್ತದೆ. ಕಾಶ್ಮೀರಿ ಭಾಷೆಯಲ್ಲಿ ‘ದಳ’ ಎಂಬ ಪದದ ಅರ್ಥವೇ ಸರೋವರ. ಇದುವೇ ಅಪಭ್ರಂಶಗೊಂಡು ‘ದಾಲ್’ ಆಗಿದ್ದು ಕಾಲಾನಂತರದಲ್ಲಿ ಅದರ ಜತೆ ‘ಲೇಕ್’ ಪದವು ಸೇರಿಕೊಂಡಿತು. ನಂತರ ಅದು ‘ದಾಲ್ ಲೇಕ್’ ಆಯಿತು.

    ದಾಲ್ ಸರೋವರವನ್ನು ಕಾಶ್ಮೀರದ ರತ್ನ ಅಥವಾ ಶ್ರೀನಗರದ ಆಭರಣ ಎಂದೂ ಕರೆಯಲಾಗುತ್ತದೆ. ಜುಲೈ-ಆಗಸ್ಟ್ ತಿಂಗಳಿನಲ್ಲಿ ಇಲ್ಲಿನ ಉದ್ಯಾನಗಳ ಸೌಂದರ್ಯ ಕಣ್ಮನ ಸೆಳೆಯುತ್ತದೆ.

    ದಾಲ್ ಸರೋವರ ಪ್ರಸಿದ್ಧ ಏಕೆ?
    ಈ ಸರೋವರವು ಪ್ರವಾಸೋದ್ಯಮ ಮತ್ತು ಮನರಂಜನೆಗೆ ಪ್ರಮುಖ ತಾಣವಾಗಿದೆ. ಪ್ರವಾಸೋದ್ಯಮವನ್ನು ಹೊರತುಪಡಿಸಿ, ಮೀನುಗಾರಿಕೆ ಇಲ್ಲಿ ಎರಡನೇ ದೊಡ್ಡ ವ್ಯಾಪಾರವಾಗಿದೆ. ಇದು ಸ್ಥಳೀಯ ಜನರ ಜೀವನೋಪಾಯಕ್ಕೆ ಆಧಾರವಾಗಿದೆ.

    ಶಿಕಾರ ಎಂದರೇನು?
    ಶಿಕಾರ ಎಂಬುದು ಭಾರತದ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ದಾಲ್ ಸರೋವರ ಮತ್ತು ಸಮೀಪದ ಸರೋವರಗಳಲ್ಲಿ ಕಂಡುಬರುವ ಒಂದು ರೀತಿಯ ಮರದ ದೋಣಿ. ಶಿಕಾರಗಳು ವೈವಿಧ್ಯಮಯ ಗಾತ್ರದಲ್ಲಿದ್ದು, ಜನರ ಸಾಗಣೆ ಸೇರಿದಂತೆ ಅನೇಕ ಉದ್ದೇಶಗಳಿಗಾಗಿ ಬಳಸಲಾಗುತ್ತದೆ. ಸಾಮಾನ್ಯವಾಗಿ ಶಿಕಾರದಲ್ಲಿ ಅರ್ಧ ಡಜನ್ ಜನರನ್ನು ಕೂರಿಸಬಹುದು. ಡ್ರೈವರ್ ಹಿಂಭಾಗದಲ್ಲಿ ಪ್ಯಾಡ್ಲಿಂಗ್ ಮಾಡುತ್ತಾನೆ. ವೆನೆಷಿಯನ್ ಗೊಂಡೊಲಾಗಳಂತೆ, ಶಿಕಾರವು ಕಾಶ್ಮೀರದ ಸಾಂಸ್ಕೃತಿಕ ಸಂಕೇತವಾಗಿದೆ.

     

    ಶಿಕಾರ ದೋಣಿ ಕೇರಳದಲ್ಲೂ ಲಭ್ಯವಿದೆ. ಅಲೆಪ್ಪಿಯಲ್ಲಿನ ಶಿಕಾರಾ ಗಾತ್ರದಲ್ಲಿ ಚಿಕ್ಕದಾಗಿದ್ದು, ಇದು 4 – 20 ಜನರು ಕುಳಿತುಕೊಳ್ಳುವ ಸಾಮರ್ಥ್ಯವನ್ನು ಹೊಂದಿದೆ. ನೀವು ಬಯಸಿದಲ್ಲಿ ಅಲೆಪ್ಪೆಯ ಹಿನ್ನೀರಿನ ಕಿರಿದಾದ ಕಾಲುವೆಗಳ ಮೂಲಕ ಶಿಕಾರಾದಲ್ಲಿ ಹೋಗಬಹುದು. ಕೇರಳದ ಶಿಕಾರಾದ ಮೇಲ್ಛಾವಣಿ ಮತ್ತು ಗೋಡೆಗಳನ್ನು ಬಿದಿರಿನ ಹಾಳೆಗಳಿಂದ ಕೆತ್ತಲಾಗಿರುತ್ತದೆ.

    ಶಿಕಾರ ನಿರ್ಮಾಣ ಹೇಗೆ?
    ಶಿಕಾರ ಕರಕುಶಲತೆಯು ಡಿಯೋಡರ್ ಮರದ ಮೇಲೆ ಅವಲಂಬಿತವಾಗಿರುತ್ತದೆ. ಇದು ನೀರಿನಲ್ಲಿ ಕೊಳೆಯುವುದಿಲ್ಲ. ಸುಮಾರು 25 ರಿಂದ 41 ಅಡಿ ಉದ್ದವಿರುತ್ತದೆ. ಮರದ ಹಲಗೆಗಳು ಪ್ರತಿಯೊಂದು ಬದಿಯಲ್ಲಿ 1.5 ಅಡಿಗಳಷ್ಟು ಲಂಬವಾಗಿ ಎತ್ತರದಲ್ಲಿರುತ್ತವೆ. ದೋಣಿಯನ್ನು 10 ರಿಂದ 12 ದಿನಗಳಲ್ಲಿ ರಚಿಸಲಾಗುತ್ತದೆ. ಅಂತಿಮವಾಗಿ ಶಿಕಾರಗಳನ್ನು ಗಾಢ ಬಣ್ಣಗಳಲ್ಲಿ ಚಿತ್ರಿಸಲಾಗುತ್ತದೆ. ಕೆಲವರು ಮತ್ತಷ್ಟು ಹೊಳಪು ನೀಡಿದರೆ, ಮತ್ತೆ ಕೆಲವರು ಕೆತ್ತನೆಗೆ ಪ್ರಾಮುಖ್ಯತೆ ಕೊಡುತ್ತಾರೆ.

    ವಿಶ್ರಾಂತಿ ಕಳೆಯುವುದನ್ನು ಹೊರತುಪಡಿಸಿ ಕಾಶ್ಮೀರದ ಶಿಕಾರವನ್ನು ಇತರ ಉದ್ದೇಶಗಳಿಗಾಗಿಯೂ ಬಳಸಲಾಗುತ್ತದೆ. ಮುಖ್ಯವಾಗಿ ಸ್ಥಳೀಯರು ಈ ದೋಣಿಯನ್ನು ಸಾರಿಗೆ, ಕಡಲಕಳೆ ಕೊಯ್ಲು ಮತ್ತು ಮೀನುಗಾರಿಕೆಗಾಗಿ ಬಳಸುತ್ತಾರೆ. ಇದನ್ನು ತೇಲುವ ಮಾರುಕಟ್ಟೆ ಬಳಕೆಗೂ ಬಳಸಲಾಗುತ್ತಿದ್ದು, ಬಹಳಷ್ಟು ವಿಶಿಷ್ಟವಾಗಿದೆ.

    ಇದೀಗ ದಾಲ್‌ ಸರೋವರದಲ್ಲಿ ಉಬರ್‌ ತನ್ನ ಮೊದಲ ಜಲ ಸಾರಿಗೆಯನ್ನು ಆರಂಭಿಸಿದೆ. ಜಮ್ಮು ಕಾಶ್ಮೀರದ ದಾಲ್‌ ಸರೋವರಕ್ಕೆ ಭೇಟಿ ನೀಡುವವರು ಉಬರ್‌ ಅಪ್ಲಿಕೇಷನ್‌ ಮೂಲಕ 12 ಗಂಟೆಗಳಿಂದ ಹಿಡಿದು 15 ದಿನಗಳವರೆಗೆ ಮುಂಚಿತವಾಗಿ ಶಿಕಾರ ರೈಡ್‌ಗಳನ್ನು ಬುಕ್‌ ಮಾಡಬಹುದಾಗಿದೆ.

    ಉಬರ್ ಇಂಡಿಯಾ ಮತ್ತು ದಕ್ಷಿಣ ಏಷ್ಯಾ ಅಧ್ಯಕ್ಷ ಪ್ರಭಜೀತ್ ಸಿಂಗ್ ಅವರು ಈ ಸೇವೆಯನ್ನು ಪ್ರಾರಂಭಿಸಿದರು. ಉಬರ್‌ ಶಿಕಾರ ಪ್ರಸ್ತುತ ಏಳು ಸ್ಥಳೀಯ ಶಿಕಾರಾ ಆಪರೇಟರ್‌ಗಳೊಂದಿಗೆ ಸಹಯೋಗ ಹೊಂದಿದೆ. ಬೇಡಿಕೆಯ ಆಧಾರದ ಮೇಲೆ ಈ ಸಂಖ್ಯೆಯನ್ನು ವಿಸ್ತರಿಸಲು ಕಂಪನಿ ಯೋಜಿಸಿದೆ. ದಾಲ್ ಸರೋವರದ ಸುಂದರವಾದ ಸ್ಥಳವಾದ ನೆಹರು ಪಾರ್ಕ್‌ನಲ್ಲಿ ಶಿಕಾರಗಳು ನೆಲೆಗೊಂಡಿವೆ.

    ಬೆಲೆ ಮತ್ತು ಸಮಯ:
    ಉಬರ್ ಶಿಕಾರಾ ರೈಡ್‌ಗಳಿಗೆ ಸರ್ಕಾರ-ನಿಯಂತ್ರಿತ ಬೆಲೆಗೆ ಬದ್ಧವಾಗಿದೆ. ಸೇವೆಯು ಶಿಕಾರ ಆಪರೇಟರ್‌ಗಳಿಗೆ ಹೆಚ್ಚುವರಿ ಶುಲ್ಕವನ್ನು ವಿಧಿಸುವುದಿಲ್ಲ. ಪ್ರತಿ ಉಬರ್ ಶಿಕಾರ ನಾಲ್ಕು ಪ್ರಯಾಣಿಕರಿಗೆ ಅವಕಾಶ ಕಲ್ಪಿಸುತ್ತದೆ. ಸೇವೆಯು ಪ್ರತಿದಿನ ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ಕಾರ್ಯನಿರ್ವಹಿಸುತ್ತದೆ.

    ಉಬರ್ ಕಾಲಾನಂತರದಲ್ಲಿ ಶಿಕಾರಗಳ ಸಮೂಹವನ್ನು ಬೆಳೆಸಲು ಉದ್ದೇಶಿಸಿದೆ. ವಿಸ್ತರಣೆಯು ಗ್ರಾಹಕರ ಪ್ರತಿಕ್ರಿಯೆ ಮತ್ತು ಬೇಡಿಕೆಯ ಮಟ್ಟವನ್ನು ಅವಲಂಬಿಸಿರುತ್ತದೆ. ಈ ಪಾಲುದಾರಿಕೆಯಿಂದ ಪ್ರವಾಸೋದ್ಯಮ ಮತ್ತು ಆದಾಯ ಹೆಚ್ಚುತ್ತದೆ. ಉಬರ್ ಇಟಲಿಯ ವೆನಿಸ್‌ನಂತಹ ಇತರ ನಗರಗಳಲ್ಲಿ ಇದೇ ರೀತಿಯ ಜಲ ಸಾರಿಗೆ ಸೇವೆಗಳನ್ನು ಪ್ರಾರಂಭಿಸಿದೆ.

    ಬುಕ್ಕಿಂಗ್‌ ಹೇಗೆ?
    *ಮೊದಲು ಉಬರ್‌ ಅಪ್ಲಿಕೇಷನ್‌ ಅನ್ನು ಅಪ್ಡೇಟ್‌ ಮಾಡಿಕೊಳ್ಳಿ.
    *ಬಳಿಕ ಆಪ್‌ ಓಪನ್‌ ಮಾಡಿ ಪ್ರಾರಂಭ ಸ್ಥಳವನ್ನು ಶಿಕಾರ ಘಾಟ್‌ ಸಂಖ್ಯೆ 16ಕ್ಕೆ ಇರಿಸಿ ಉಬರ್‌ ಶಿಕಾರ ಆಯ್ಕೆಯನ್ನು ಆರಿಸಿ.
    *ನಂತರ ನಿಮ್ಮ ಪ್ರಯಾಣದ ದಿನಾಂಕ ಮತ್ತು ಸಮಯವನ್ನು ಆಯ್ಕೆ ಮಾಡಿ.
    *ಬಳಿಕ ಪಿಕಪ್‌ ಸ್ಥಳವನ್ನು ದೃಢೀಕರಿಸುವ ಬಟನ್‌ ಕ್ಲಿಕ್‌ ಮಾಡುವ ಮೂಲಕ ನಿಮ್ಮ ಸವಾರಿಯನ್ನು ಖಚಿತಪಡಿಸಿಕೊಳ್ಳಿ.