Tag: jammu kashmir

  • Jammu Kashmir Election |ಕುಟುಂಬದ ಹಿರಿಯ ಮಹಿಳೆಗೆ 10 ಸಾವಿರ, 2 ಸಿಲಿಂಡರ್‌ ಫ್ರೀ : ಬಿಜೆಪಿ ಘೋಷಣೆ

    Jammu Kashmir Election |ಕುಟುಂಬದ ಹಿರಿಯ ಮಹಿಳೆಗೆ 10 ಸಾವಿರ, 2 ಸಿಲಿಂಡರ್‌ ಫ್ರೀ : ಬಿಜೆಪಿ ಘೋಷಣೆ

    ಶ್ರೀನಗರ: ಕರ್ನಾಟಕದಲ್ಲಿ (Karnataka) ಗ್ಯಾರಂಟಿ ಯೋಜನೆಯನ್ನು (Guarantee Scheme) ವಿರೋಧಿಸುತ್ತಿರುವ ಬಿಜೆಪಿ (BJP) ಕಣಿವೆ ರಾಜ್ಯವನ್ನು ಗೆಲ್ಲಲು ಭರವಸೆಗಳ ಮಹಾಪೂರವನ್ನೇ ಹರಿಸಿದೆ.

    ಕುಟುಂಬದ ಹಿರಿಯ ಮಹಿಳೆಗೆ ವರ್ಷಕ್ಕೆ 18 ಸಾವಿರ ರೂ. ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ 10 ಸಾವಿರ ರೂ., ವಿದ್ಯಾರ್ಥಿಗಳಿಗೆ ವರ್ಷಕ್ಕೆ 3 ಸಾವಿರ ರೂ., ಪಿಯು ಮಕ್ಕಳಿಗೆ ಲ್ಯಾಪ್‌ಟಾಪ್, ವರ್ಷಕ್ಕೆರಡು ಗ್ಯಾಸ್ ಸಿಲಿಂಡರ್., ಆಯುಷ್ಮಾನ್ ಭಾರತ್ ಯೋಜನೆಯಡಿ ಐದು ಲಕ್ಷ ರೂ.ವರೆಗೂ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಭರವಸೆ ನೀಡಿದೆ.

    ಜಮ್ಮುವಿನಲ್ಲಿ ಪಕ್ಷದ ಪ್ರಣಾಳಿಕೆ ಸಂಕಲ್ಪ ಪತ್ರವನ್ನು ಬಿಡುಗಡೆ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ, 370 ನೇ ವಿಧಿಯನ್ನು ರದ್ದುಗೊಳಿಸಿದ್ದರಿಂದ ಶಾಂತಿ ವಾತಾವರಣ ನಿರ್ಮಾಣವಾಗಿ ರಾಜ್ಯ ಪ್ರಗತಿಯತ್ತ ಸಾಗುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ತಿಂಗಳಿಗೆ 10 ಸಾವಿರ ಕೊಡ್ತೀನಿ, ಲಿವ್‌ಇನ್ ರಿಲೇಷನ್‌ಶಿಪ್‌ನಲ್ಲಿ ಇರ್ತೀಯಾ ಅಂತ ಕೇಳಿದ್ದ ರೇಣುಕಾ – ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ

     

    ಪ್ರಮುಖ ಭರವಸೆಗಳು
    – ‘ಮಾ ಸಮ್ಮಾನ್ ಯೋಜನೆ’ ಮೂಲಕ ಪ್ರತಿ ಮನೆಯ ಹಿರಿಯ ಮಹಿಳೆಗೆ ವರ್ಷಕ್ಕೆ 18,000 ರೂ.
    – ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಪ್ರತಿ ವರ್ಷ 2 ಉಚಿತ ಎಲ್‌ಪಿಜಿ ಸಿಲಿಂಡರ್‌
    – 3 ಪಂಡಿತ್ ಪ್ರೇಮ್ ನಾಥ್ ಡೋಗ್ರಾ ರೋಜ್ಗಾರ್ ಯೋಜನೆ (PPNDRY) ಮೂಲಕ ಜಮ್ಮು ಮತ್ತು ಕಾಶ್ಮೀರದಲ್ಲಿ 5 ಲಕ್ಷ ಉದ್ಯೋಗಾವಕಾಶಗಳನ್ನು ಸೃಷ್ಟಿ.
    – ‘ಪ್ರಗತಿ ಶಿಕ್ಷಾ ಯೋಜನೆ’ ಅಡಿಯಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಯಾಣ ಭತ್ಯೆಯಾಗಿ DBT ಮೂಲಕ ವಾರ್ಷಿಕ 3,000 ರೂ.

    – ದೂರದ ಪ್ರದೇಶಗಳಲ್ಲಿ ಹೈಯರ್ ಸೆಕೆಂಡರಿ ತರಗತಿಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್‌ಗಳು/ಲ್ಯಾಪ್‌ಟಾಪ್‌.
    – ಶ್ರೀನಗರ ನಗರದ ದಾಲ್ ಸರೋವರವನ್ನು ವಿಶ್ವ ದರ್ಜೆಯ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸುವುದು ಮತ್ತು ಜಲ ಕ್ರೀಡೆಗಳಿಗೆ ಉತ್ತೇಜನ.
    – ಶ್ರೀನಗರದ ಟ್ಯಾಟೂ ಮೈದಾನದಲ್ಲಿ ಅಮ್ಯೂಸ್‌ಮೆಂಟ್ ಪಾರ್ಕ್ ಸ್ಥಾಪನೆ. ಜಮ್ಮು ನಗರದಲ್ಲಿ ವಿಶೇಷ ಆರ್ಥಿಕ ವಲಯ (SEZ) ಆಗಿ IT ಹಬ್ ನಿರ್ಮಾಣ.
    – ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ ರೈತರಿಗೆ ಈಗ ನೀಡಲಾಗುತ್ತಿರುವ 6,000 ರೂ. ಜೊತೆಗೆ ಹೆಚ್ಚುವರಿಯಾಗಿ 4,000 ರೂ. ಪಾವತಿ.

    – ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಬಡ್ತಿಯಲ್ಲಿ ಮೀಸಲಾತಿ.
    – ಸರ್ಕಾರಿ ಉದ್ಯೋಗಗಳು ಮತ್ತು ಪೊಲೀಸ್ ನೇಮಕಾತಿಯಲ್ಲಿ ಅಗ್ನಿವೀರ್‌ಗಳಿಗೆ 20% ಕೋಟಾ.
    – ಪಾಳುಬಿದ್ದ ದೇವಾಲಯಗಳ ಜೀರ್ಣೋದ್ಧಾರ, ನ್ಯಾಯಯುತ ಜನಗಣತಿ.

     

  • ಮಳೆಯ ನಡುವೆ ಶ್ರೀ ಶಂಕರಾಚಾರ್ಯ ಬೆಟ್ಟದ ಮೆಟ್ಟಿಲು ಹತ್ತಿ ಶಿವನ ದರ್ಶನ ಪಡೆದ ಮಾಜಿ ಪ್ರಧಾನಿ

    ಮಳೆಯ ನಡುವೆ ಶ್ರೀ ಶಂಕರಾಚಾರ್ಯ ಬೆಟ್ಟದ ಮೆಟ್ಟಿಲು ಹತ್ತಿ ಶಿವನ ದರ್ಶನ ಪಡೆದ ಮಾಜಿ ಪ್ರಧಾನಿ

    – ಇತಿಹಾಸ ಪ್ರಸಿದ್ಧ ಶ್ರೀನಗರದ ಶ್ರೀ ಜ್ಯೇಷ್ಟೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
    – ಆ ಶಿವನೇ ಇಲ್ಲಿಗೆ ಕರೆಸಿಕೊಂಡಿದ್ದಾನೆ ಎಂದು ಭಾವುಕ

    ಶ್ರೀನಗರ: ಎರಡು ದಿನಗಳಿಂದ ಕಾಶ್ಮೀರ (Jammu Kashmir) ಪ್ರವಾಸದಲ್ಲಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ (H.D.Deve Gowda) ಅವರು, ಶುಕ್ರವಾರ ಇಲ್ಲಿನ ಶ್ರೀ ಶಂಕರಾಚಾರ್ಯ ಬೆಟ್ಟದಲ್ಲಿರುವ ಶ್ರೀ ಜ್ಯೇಷ್ಟೇಶ್ವರ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು.

    ಶಿವನ ದೇವಸ್ಥಾನವೆಂದೇ ಕರೆಯಲ್ಪಡುವ ಈ ಪವಿತ್ರ ಶಂಕರಾಚಾರ್ಯ ದೇವಸ್ಥಾನದಲ್ಲಿ ದೇವರ ದರ್ಶನ‌ ಪಡೆದು ಪ್ರಾಥನೆ ಸಲ್ಲಿಸಿದ ಮಾಜಿ ಪ್ರಧಾನಿ, ಈ ಕ್ಷಣ ನನ್ನ ಬದುಕಿನ ಅನನ್ಯ ಕ್ಷಣ. ಶಿವ ದರ್ಶನದಿಂದ ಧನ್ಯನಾಗಿದ್ದೇನೆ ಎಂದು ಭಾವುಕರಾದರು. ಇದನ್ನೂ ಓದಿ: ವಾಧ್ವಾನ್ ಪೋರ್ಟ್ ಪ್ರಾಜೆಕ್ಟ್ ಉದ್ಘಾಟನೆ, ಗ್ಲೋಬಲ್ ಫಿನ್‌ಟೆಕ್ ಫೆಸ್ಟ್‌ನಲ್ಲಿ ಭಾಗಿಯಾದ ಪ್ರಧಾನಿ ಮೋದಿ

    ನನ್ನನ್ನು ಇಲ್ಲಿಗೆ ಆ ಶಿವನೇ ಕರೆಸಿಕೊಂಡಿದ್ದಾನೆ ಎಂದು ಹೇಳಿದ ಮಾಜಿ ಪ್ರಧಾನಿಗಳು, ಬಹಳ ಹೊತ್ತು ದೇವಾಲಯದಲ್ಲಿಯೇ ಇದ್ದರು. ಮಳೆಯ ನಡುವೆಯೇ CRPF ಪೊಲೀಸರು ಹಾಗೂ ಕಾಶ್ಮೀರ ಪೊಲೀಸರ ಸಹಾಯದಿಂದ ಮೆಟ್ಟಿಲು ಹತ್ತಿದ ಹೆಚ್‌ಡಿಡಿ, ಶಿವನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

    ಇಲ್ಲಿಗೆ ಭೇಟಿ ನೀಡಿ ಶಿವನ‌‌ ದರ್ಶನ ಪಡೆಯಬೇಕೆಂಬುದು ನನ್ನ ಜೀವಮಾನದ ಆಸೆಯಾಗಿತ್ತು. ಇವತ್ತು ನನ್ನ ಆಸೆ ನೆರವೇರಿದೆ. ನನ್ನನ್ನು ಇಲ್ಲಿಗೆ ಕರೆಸಿಕೊಂಡ ಆ ದೇವರಿಗೆ ಆಭಾರಿಯಾಗಿದ್ದೇನೆ ಎಂದು ಅವರು ಹೇಳಿದರು. ಇದನ್ನೂ ಓದಿ: ಅಸ್ಸಾಂ ವಿಧಾನಸಭೆಯ ಶುಕ್ರವಾರದ 2 ಗಂಟೆ ಅವಧಿಯ ನಮಾಜ್ ಬ್ರೇಕ್‌ಗೆ ತಡೆಯೊಡ್ಡಿದ ಸಿಎಂ ಶರ್ಮಾ

    ದೇಗುಲಕ್ಕೆ ತೆರಳಿದ ಸಂದರ್ಭದಲ್ಲಿ ಮಾಜಿ ಪ್ರಧಾನಿಗಳಿಗೆ CRPF ಪೊಲೀಸರು ಹಾಗೂ ಕಾಶ್ಮೀರ ಪೊಲೀಸರು ಭದ್ರತೆ ಒದಗಿಸಿದ್ದರು. ಗುರುವಾರ ಉರಿಯ ಜಲವಿದ್ಯುತ್ ಸ್ಥಾವರಕ್ಕೆ ಭೇಟಿ ನೀಡಿದ್ದ ದೇವೇಗೌಡರು, ಅಲ್ಲಿಗೆ ತೆರಳಲು ಶ್ರೀನಗರದಿಂದ ಬಾರಮುಲ್ಲಾವರೆಗೂ ರೈಲಿನಲ್ಲಿ ಪ್ರಯಾಣ ಮಾಡಿದ್ದರು.

    ಮಾಜಿ ಪ್ರಧಾನಿಗಳು ಇಲ್ಲಿನ ದಾಲ್ ಸರೋವರಕ್ಕೂ ಭೇಟಿ ನೀಡುವ ಕಾರ್ಯಕ್ರಮವಿತ್ತು. ಆದರೆ, ಮಳೆಯ ಕಾರಣ ಅಲ್ಲಿಗೆ ಭೇಟಿ ನೀಡಲಾಗಲಿಲ್ಲ. ಮುಂದಿನ ಮಾರ್ಚ್ ತಿಂಗಳಿನಲ್ಲಿ ಮತ್ತೆ ಇಲ್ಲಿಗೆ ಬರುವೆ ಎಂದು ತಿಳಿಸಿದರು. ಇದನ್ನೂ ಓದಿ: ಛತ್ರಪತಿ ಶಿವಾಜಿ ಪ್ರತಿಮೆ ಕುಸಿತ – ಕ್ಷಮೆಯಾಚಿಸಿದ ಪ್ರಧಾನಿ ಮೋದಿ

  • Jammu Kashmir Election | ಘೋಷಿಸಿದ ಪಟ್ಟಿ ಹಿಂಪಡೆದು ಕೊನೆಗೂ 15 ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಮಾಡಿದ ಬಿಜೆಪಿ

    Jammu Kashmir Election | ಘೋಷಿಸಿದ ಪಟ್ಟಿ ಹಿಂಪಡೆದು ಕೊನೆಗೂ 15 ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಮಾಡಿದ ಬಿಜೆಪಿ

    ನವದೆಹಲಿ: ಜಮ್ಮು ಮತ್ತು ಕಾಶ್ಮೀರ (Jammu Kashmir) ವಿಧಾನಸಭೆಯ ಮೊದಲ ಹಂತದ ಚುನಾವಣೆ ಹಿನ್ನಲೆ 15 ಕ್ಷೇತ್ರಗಳಿಗೆ ಬಿಜೆಪಿ (BJP) ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಇದಕ್ಕೂ ಮೊದಲು ಮೂರು ಹಂತದ ಚುನಾವಣೆಗೆ ಒಟ್ಟು 44 ಅಭ್ಯರ್ಥಿಗಳನ್ನು ಘೋಷಿಸಿತ್ತು. ಘೋಷಣೆಯಾದ ಕೆಲವೇ ಹೊತ್ತಲ್ಲಿ ಪಟ್ಟಿಯನ್ನು ತಡೆಹಿಡಿದು ಬಳಿಕ ಮೊದಲ ಹಂತಕ್ಕೆ ಮಾತ್ರ 15 ಅಭ್ಯರ್ಥಿಗಳನ್ನು ಘೋಷಿಸಿದೆ.

    ಅಭ್ಯರ್ಥಿಗಳ ಆಯ್ಕೆ ಹಿನ್ನಲೆ ಭಾನುವಾರ ಕೇಂದ್ರ ಚುನಾವಣಾ ಸಮಿತಿ ನಡೆಸಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಸೇರಿ ಎಲ್ಲ ಸದಸ್ಯರು ಭಾಗಿಯಾಗಿದ್ದರು. ಸಭೆ ಬೆನ್ನಲೆ ಇಂದು ಮೊದಲ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ.ಇದನ್ನೂ ಓದಿ: ಜಮ್ಮು ಕಾಶ್ಮೀರ ಚುನಾವಣೆ: ಇಂದು ಬೆಳಗ್ಗೆ ಬಿಡುಗಡೆ ಮಾಡಿದ್ದ ಮೊದಲ ಪಟ್ಟಿ ಹಿಂಪಡೆದ ಬಿಜೆಪಿ

    ಕಾಶ್ಮೀರದ ಅನಂತನಾಗ್ ಪೂರ್ವ-ಶಾಂಗುಸ್‌ನಿಂದ ಕಾಶ್ಮೀರಿ ಪಂಡಿತ ಸಮುದಾಯದ ವೀರ್ ಸರಾಫ್ ಟಿಕೆಟ್ ನೀಡಿದೆ. ಇದು ಪಂಡಿತ್ ಸಮುದಾಯಕ್ಕೆ ಗಮನಾರ್ಹವಾದ ಆದ್ಯತೆ ಎನ್ನಲಾಗಿದೆ. ಮೊದಲ ಪಟ್ಟಿಯಲ್ಲಿ ಶಗುನ್ ಪರಿಹಾರ್ ಹೆಸರಿನ ಓರ್ವ ಮಹಿಳೆಗೆ ಟಿಕೆಟ್ ನೀಡಿದ್ದು ಅವರು ಕಿಶ್ತ್ವಾರ್‌ನಿಂದ ಸ್ಪರ್ಧಿಸಲಿದ್ದಾರೆ.

    ಜಮ್ಮು ಮತ್ತು ಕಾಶ್ಮೀರ ಬಿಜೆಪಿ ಅಧ್ಯಕ್ಷ ರವೀಂದರ್ ರೈನಾ, ಮತ್ತು ಮಾಜಿ ಉಪ ಮುಖ್ಯಮಂತ್ರಿಗಳಾದ ನಿರ್ಮಲ್ ಸಿಂಗ್ ಮತ್ತು ಕವಿಂದರ್ ಗುಪ್ತಾನಂತದ ಪ್ರಮುಖ ಹೆಸರುಗಳು ಮೊದಲ ಪಟ್ಟಿಯಲ್ಲಿ ಕಾಣಿಸಿಕೊಂಡಿಲ್ಲ. ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯು ಮೂರು ಹಂತಗಳಲ್ಲಿ ಸೆ.18 ರಿಂದ ಅ.1 ರವರೆಗೆ ನಡೆಯಲಿದೆ. ಫಲಿತಾಂಶವು ಅ.4 ರಂದು ಪ್ರಕಟವಾಗಲಿದೆ.ಇದನ್ನೂ ಓದಿ: ಜಮ್ಮು ಕಾಶ್ಮೀರ ಚುನಾವಣೆ: ಇಂದು ಬೆಳಗ್ಗೆ ಬಿಡುಗಡೆ ಮಾಡಿದ್ದ ಮೊದಲ ಪಟ್ಟಿ ಹಿಂಪಡೆದ ಬಿಜೆಪಿ

    ಮೊದಲ ಪಟ್ಟಿಯನ್ನು ರದ್ದು ಮಾಡುವ ಮೊದಲು, ಪಕ್ಷವು ಮೊದಲ ಹಂತಕ್ಕೆ (ಸೆ.18) 15 ಅಭ್ಯರ್ಥಿಗಳನ್ನು, ಎರಡನೇ ಹಂತಕ್ಕೆ (ಸೆ.25) 10 ಅಭ್ಯರ್ಥಿಗಳನ್ನು ಮತ್ತು ಮೂರನೇ ಹಂತಕ್ಕೆ (ಅ.1) 19 ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಆ.27 ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದೆ.

  • ಜಮ್ಮು ಕಾಶ್ಮೀರ ಚುನಾವಣೆ: ಇಂದು ಬೆಳಗ್ಗೆ ಬಿಡುಗಡೆ ಮಾಡಿದ್ದ ಮೊದಲ ಪಟ್ಟಿ ಹಿಂಪಡೆದ ಬಿಜೆಪಿ

    ಜಮ್ಮು ಕಾಶ್ಮೀರ ಚುನಾವಣೆ: ಇಂದು ಬೆಳಗ್ಗೆ ಬಿಡುಗಡೆ ಮಾಡಿದ್ದ ಮೊದಲ ಪಟ್ಟಿ ಹಿಂಪಡೆದ ಬಿಜೆಪಿ

    ನವದೆಹಲಿ: ದಿಢೀರ್ ಬೆಳವಣಿಗೆಯಲ್ಲಿ ಜಮ್ಮು ಕಾಶ್ಮೀರ (Jammu Kashmir) ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಇಂದು ಬೆಳಗ್ಗೆ ಪ್ರಕಟಿಸಿದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಹಿಂದಕ್ಕೆ ಪಡೆದಿದೆ.

    ಒಟ್ಟು 90 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿರುವ ಹಿನ್ನೆಲೆ ಇಂದು ಬೆಳಗ್ಗೆ ಬಿಜೆಪಿ (BJP) 44 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು(Candidate List) ಘೋಷಿಸಿತ್ತು. ಇದೀಗ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಹಿಂಪಡೆದಿದ್ದು, ಪರಿಷ್ಕೃತ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದೆ.ಇದನ್ನೂ ಓದಿ: ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆ : ಬಿಜೆಪಿಯಿಂದ 44 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

    ಒಟ್ಟು 90 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಸೆ.18, 25, ಹಾಗೂ ಅ.1 ರಂದು ಮೂರು ಹಂತಗಳಲ್ಲಿ ನಡೆಯಲಿದೆ ಮತ್ತು ಅ.4 ರಂದು ಮತ ಎಣಿಕೆ ನಡೆಯಲಿದೆ.

    ಬಿ

    ನಿನ್ನೆ (ಆ.25) ದೆಹಲಿಯಲ್ಲಿ (Delhi) ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವರನ್ನೊಳಗೊಂಡ ಕೇಂದ್ರ ಚುನಾವಣೆ ಸಮಿತಿ ಸಭೆ ನಡೆಸಲಾಗಿತ್ತು. ಸಭೆ ನಡೆದ ಬೆನ್ನಲ್ಲೆ ಇಂದು ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿತ್ತು ಆದರೆ ಇದೀಗ ಪಟ್ಟಿಯನ್ನು ಹಿಂಪಡೆದಿದೆ ಮತ್ತು ಪರಿಷ್ಕೃತ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದೆ.ಇದನ್ನೂ ಓದಿ: ಕೃಷ್ಣಾ ನದಿ ತೀರದಲ್ಲಿ ಮತ್ತೆ ಪ್ರವಾಹ ಭೀತಿ – ಬಸವಸಾಗರ ಜಲಾಶಯದಿಂದ ಭಾರಿ ಪ್ರಮಾಣದ ನೀರು ಬಿಡುಗಡೆ

  • ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆ : ಬಿಜೆಪಿಯಿಂದ 44 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

    ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆ : ಬಿಜೆಪಿಯಿಂದ 44 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

    ನವದೆಹಲಿ:  ಜಮ್ಮು ಕಾಶ್ಮೀರ (Jammu Kashmir) ವಿಧಾನಸಭೆ ಚುನಾವಣೆ ಹಿನ್ನೆಲೆ ಬಿಜೆಪಿ (BJP) 44 ಅಭ್ಯರ್ಥಿಗಳ ಮೊದಲ ಪಟ್ಟಿ (Candidate List) ಘೋಷಿಸಿದೆ.

    ಜಮ್ಮು ಕಾಶ್ಮೀರದಲ್ಲಿ ಒಟ್ಟು 90 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಈ ಬಾರಿಯ ವಿಧಾನಸಭೆ ಚುನಾವಣೆಯು ಸೆ.18, 25, ಹಾಗೂ ಅ.1 ರಂದು ಮೂರು ಹಂತಗಳಲ್ಲಿ ನಡೆಯಲಿದೆ ಮತ್ತು ಅ.4 ರಂದು ಮತ ಎಣಿಕೆ ನಡೆಯಲಿದೆ.ಇದನ್ನೂ ಓದಿ: ದರ್ಶನ್‌ಗೆ ಜೈಲಿನಲ್ಲಿ ರಾಜಾತಿಥ್ಯ – 7 ಮಂದಿ ಅಮಾನತು

    BJP announces list of candidates for the upcoming Jammu and Kashmir Assembly elections. (n/1)#JammuKashmirElections pic.twitter.com/a9e2w7raLe

    — Press Trust of India (@PTI_News) August 26, 2024


    ನಿನ್ನೆ (ಆ.25) ದೆಹಲಿ (Delhi) ಯಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವರನ್ನೊಳಗೊಂಡ ಕೇಂದ್ರ ಚುನಾವಣೆ ಸಮಿತಿ ಸಭೆ ನಡೆಸಲಾಗಿತ್ತು. ಸಭೆ ನಡೆದ ಬೆನ್ನಲ್ಲೆ ಇಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.ಇದನ್ನೂ ಓದಿ: ಕೃಷ್ಣಾ ನದಿ ತೀರದಲ್ಲಿ ಮತ್ತೆ ಪ್ರವಾಹ ಭೀತಿ – ಬಸವಸಾಗರ ಜಲಾಶಯದಿಂದ ಭಾರಿ ಪ್ರಮಾಣದ ನೀರು ಬಿಡುಗಡೆ

    ಇಂದು (ಆ.26) ಬೆಳಗ್ಗೆ 44 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

  • ಕರ್ನಾಟಕ ಸೇರಿದಂತೆ ಯಾವುದೇ ರಾಜ್ಯದಲ್ಲಿ ಸದ್ಯಕ್ಕೆ ಉಪಚುನಾವಣೆ ಇಲ್ಲ

    ಕರ್ನಾಟಕ ಸೇರಿದಂತೆ ಯಾವುದೇ ರಾಜ್ಯದಲ್ಲಿ ಸದ್ಯಕ್ಕೆ ಉಪಚುನಾವಣೆ ಇಲ್ಲ

    ನವದೆಹಲಿ: ಸದ್ಯ ಕರ್ನಾಟಕ (Karnataka) ಸೇರಿದಂತೆ ಯಾವುದೇ ರಾಜ್ಯದಲ್ಲಿ ಉಪ ಚುನಾವಣೆ (By Election) ಮಾಡದೇ ಇರಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ.

    ಇಂದು ಜಮ್ಮು ಕಾಶ್ಮೀರ (Jammu Kashmir) ಮತ್ತು ಹರ್ಯಾಣ (Haryana) ರಾಜ್ಯಗಳ ಚುನಾವಣೆ ದಿನಾಂಕವನ್ನು ಮುಖ್ಯ ಆಯುಕ್ತ ರಾಜೀವ್ ಕುಮಾರ್ ಚುನಾವಣಾ ದಿನಾಂಕ ಪ್ರಕಟಿಸಿದರು. ಈ ವೇಳೆ ಯಾವುದೇ ವಿಧಾನಸಭೆ ಮತ್ತು ಲೋಕಸಭೆಗೆ ಉಪಚುನಾವಣೆ ನಡೆಸುವುದಿಲ್ಲ ಎಂದು ಹೇಳಿದರು.

    46 ವಿಧಾನ ಸಭೆ ಮತ್ತು ಲೋಕಸಭೆಯ 1 ಕ್ಷೇತ್ರಕ್ಕೆ ಉಪಚುನಾವಣೆ ನಡೆಯಬೇಕಿದೆ. ಕೆಲವು ರಾಜ್ಯಗಳಲ್ಲಿ ಹವಾಮಾನ ಸರಿ ಇಲ್ಲ. ಅಸ್ಸಾಂ, ಬಿಹಾರ, ಕೇರಳ ಸೇರಿದಂತೆ ಕೆಲವು ಕಡೆ ಪ್ರವಾಹವಿರುವುದರಿಂದ ಆ ರಾಜ್ಯಗಳಲ್ಲಿ ಚುನಾವಣಾ ಮಾಡಲು ಸಾಧ್ಯವಿಲ್ಲ. ಪರಿಸ್ಥಿತಿ ಸುಧಾರಿಸಿದ ಬಳಿಕ ಚುನಾವಣೆ ಮಾಡುತ್ತೇವೆ ಎಂದು ತಿಳಿಸಿದರು.  ಇದನ್ನೂ ಓದಿ: Assembly elections 2024: ಜಮ್ಮು-ಕಾಶ್ಮೀರದಲ್ಲಿ 3 ಹಂತ, ಹರಿಯಾಣದಲ್ಲಿ ಅ.1ಕ್ಕೆ ಮತದಾನ

    ಒಂದು ಕ್ಷೇತ್ರ ತೆರವಾದ 6 ತಿಂಗಳ ಒಳಗಡೆ ಚುನಾವಣೆ ನಡೆಸಬೇಕಾಗುತ್ತದೆ. ಹೀಗಾಗಿ ಮುಂದಿನ ಡಿಸೆಂಬರ್‌ ಒಳಗಡೆ ಉಪಚುನಾವಣೆ ನಡೆಯಲಿದೆ.

    ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಬೇಕಿದೆ. 2008, 2013, 2018 ಹಾಗೂ 2023ರ ನಾಲ್ಕು ವಿಧಾನಸಭಾ ಚುನಾವಣೆಗಳಲ್ಲಿ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾವಿ ಕ್ಷೇತ್ರದಿಂದ ಸ್ಪರ್ಧಿಸಿ ಸತತವಾಗಿ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

    ಚನ್ನಪಟ್ಟಣದಿಂದ ಜೆಡಿಎಸ್ ಶಾಸಕರಾಗಿದ್ದ ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭೆಯಿಂದ ಗೆದ್ದು ಕೇಂದ್ರದಲ್ಲಿ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆಯ ಸಚಿವರಾಗಿದ್ದಾರೆ.

    ಸಂಡೂರು ಕಾಂಗ್ರೆಸ್ ಶಾಸಕರಾಗಿದ್ದ ಈ ತುಕಾರಾಂ ಅವರು ಬಳ್ಳಾರಿಯಿಂದ ಗೆದ್ದಿದ್ದರಿಂದ ಸಂಡೂರು ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.

  • ಜಮ್ಮು-ಕಾಶ್ಮೀರ: ಭಯೋತ್ಪಾದಕರ ವಿರುದ್ಧದ ಎನ್‌ಕೌಂಟರ್‌ನಲ್ಲಿ ಭಾರತೀಯ ಸೇನಾ ಕ್ಯಾಪ್ಟನ್‌ ಹುತಾತ್ಮ

    ಜಮ್ಮು-ಕಾಶ್ಮೀರ: ಭಯೋತ್ಪಾದಕರ ವಿರುದ್ಧದ ಎನ್‌ಕೌಂಟರ್‌ನಲ್ಲಿ ಭಾರತೀಯ ಸೇನಾ ಕ್ಯಾಪ್ಟನ್‌ ಹುತಾತ್ಮ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಬುಧವಾರ ನಡೆದ ಭಯೋತ್ಪಾದಕರ ಎನ್‌ಕೌಂಟರ್‌ನಲ್ಲಿ ಭಾರತೀಯ ಸೇನೆಯ ಕ್ಯಾಪ್ಟನ್ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ದೋಡಾ ಜಿಲ್ಲೆಯ ಆಪ್ ಅಸ್ಸಾರ್‌ನಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ 48 ರಾಷ್ಟ್ರೀಯ ರೈಫಲ್ಸ್‌ನ ಭಾರತೀಯ ಸೇನೆಯ ಕ್ಯಾಪ್ಟನ್ ಹುತಾತ್ಮರಾಗಿದ್ದಾರೆ.

    ಅಸ್ಸಾರ್ ಪ್ರದೇಶದಲ್ಲಿ ಮಂಗಳವಾರ ಆರಂಭವಾದ ಕಾರ್ಯಾಚರಣೆ ಇನ್ನೂ ಪ್ರಗತಿಯಲ್ಲಿದೆ. ನಂತರ ಭಾರತೀಯ ಸೇನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶೋಧ ಕಾರ್ಯಾಚರಣೆ ಭಾಗವಾಗಿದ್ದಾರೆ. ಭಾರಿ ಗುಂಡಿನ ಚಕಮಕಿಯ ನಡುವೆ ಭಯೋತ್ಪಾದಕರಿಗಾಗಿ ಶೋಧ ಮುಂದುವರಿದಿದೆ. ಶೋಧ ತಂಡವನ್ನು ಮುನ್ನಡೆಸುತ್ತಿರುವ ಒಬ್ಬ ಅಧಿಕಾರಿ ಗಾಯಗೊಂಡಿದ್ದಾರೆ.

    ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚುತ್ತಿರುವ ಭಯೋತ್ಪಾದನೆ ಸಂಬಂಧಿತ ಘಟನೆಗಳ ಕುರಿತು ಇಂದು ಬೆಳಗ್ಗೆ ಮಹತ್ವದ ಸಭೆ ನಡೆಸಿದ್ದರು. ರಕ್ಷಣಾ ಕಾರ್ಯದರ್ಶಿ ಗಿರಿಧರ್ ಅರಮನೆ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕ-ಲೆಫ್ಟಿನೆಂಟ್ ಜನರಲ್ ಪ್ರತೀಕ್ ಶರ್ಮಾ ಮತ್ತು ಭದ್ರತಾ ಸಂಬಂಧಿತ ಏಜೆನ್ಸಿಗಳ ಮುಖ್ಯಸ್ಥರು ಸಭೆಯಲ್ಲಿ ಉಪಸ್ಥಿತರಿದ್ದರು.

  • ಅಮರನಾಥ್ ಯಾತ್ರೆ ತಾತ್ಕಾಲಿಕ ರದ್ದು

    ಅಮರನಾಥ್ ಯಾತ್ರೆ ತಾತ್ಕಾಲಿಕ ರದ್ದು

    ಶ್ರೀನಗರ: ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಮರನಾಥ್‌ ಯಾತ್ರೆಯನ್ನು (Amarnath Yatra) ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

    ಪಹಲ್ಗಾಮ್ ಮತ್ತು ಬಾಲ್ಟಾಲ್ ಮಾರ್ಗಗಳು ರದ್ದಾಗಿವೆ. ಇದರಿಂದ ಎರಡೂ ಮಾರ್ಗಗಳಲ್ಲಿ ಯಾತ್ರೆ ಸ್ಥಗಿತಗೊಂಡಿದೆ. ಬುಧವಾರ ನಿರ್ವಹಣಾ ಕಾರ್ಯಕ್ಕಾಗಿ ಪಹಲ್ಗಾಮ್ ಮಾರ್ಗವನ್ನು ಮುಚ್ಚಲಾಗಿತ್ತು. ಇದನ್ನೂ ಓದಿ: ನಿಮ್ಮನ್ನು ದೇಶದೊಳಗೆ ಬಿಟ್ಟುಕೊಳ್ಳಲು ಸಾಧ್ಯವಿಲ್ಲ: ಗಡಿಯಲ್ಲಿ ಬಾಂಗ್ಲಾ ನಿರಾಶ್ರಿತರನ್ನು ತಡೆದ ಸೇನೆ

    ಭಾನುವಾರ ಅಮರನಾಥ ಯಾತ್ರೆಯ ಪಹಲ್ಗಾಮ್ ಮತ್ತು ಬಲ್ಟಾಲ್ ಮಾರ್ಗಗಳಲ್ಲಿ ಭಾರೀ ಮಳೆ ಸುರಿದಿದೆ ಎಂದು ಕಾಶ್ಮೀರದ ವಿಭಾಗೀಯ ಆಯುಕ್ತ ವಿ ಕೆ ಭಿದುರಿ ಹೇಳಿದ್ದಾರೆ. ಮಳೆಯ ಕಾರಣ, ಅಮರನಾಥ ಯಾತ್ರೆಯ ಬಾಲ್ಟಾಲ್ ಅಕ್ಷದ ಮೇಲೆ ತುರ್ತು ದುರಸ್ತಿ ಮತ್ತು ನಿರ್ವಹಣಾ ಕಾರ್ಯವನ್ನು ಕೈಗೊಳ್ಳಬೇಕಾಗಿದೆ. ಯಾತ್ರಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಸೋಮವಾರ ಬಾಲ್ಟಾಲ್ ಮಾರ್ಗದಿಂದ ಯಾವುದೇ ಯಾತ್ರೆಗೆ ಅವಕಾಶ ನೀಡುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

    ಈ ವರ್ಷ ಇದುವರೆಗೆ 3,880 ಮೀಟರ್ ಎತ್ತರದ ಗುಹಾ ದೇಗುಲದಲ್ಲಿ 5.10 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳು ಶಿವನ ದರ್ಶನ ಪಡೆದಿದ್ದಾರೆ. ಇದನ್ನೂ ಓದಿ: ಇದು ಮೋದಿ ಭಾರತ, ಬಾಂಗ್ಲಾದೇಶದಂತಹ ಪರಿಸ್ಥಿತಿ ಉಂಟಾಗಲ್ಲ; ಕಾಂಗ್ರೆಸ್‌ಗೆ ಶೇಖಾವತ್ ತಿರುಗೇಟು

  • ಜಮ್ಮು-ಕಾಶ್ಮೀರದಲ್ಲಿ ಉಗ್ರರೊಂದಿಗೆ ಗುಂಡಿನ ಚಕಮಕಿ – ಓರ್ವ ಯೋಧ ಹುತಾತ್ಮ

    ಜಮ್ಮು-ಕಾಶ್ಮೀರದಲ್ಲಿ ಉಗ್ರರೊಂದಿಗೆ ಗುಂಡಿನ ಚಕಮಕಿ – ಓರ್ವ ಯೋಧ ಹುತಾತ್ಮ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಓರ್ವ ಯೋಧ ಹುತಾತ್ಮರಾಗಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ.

    ಗಡಿ ನಿಯಂತ್ರಣ ರೇಖೆಯ ಬಳಿ ಪೂಂಚ್ ಜಿಲ್ಲೆಯಲ್ಲಿ ಭಯೋತ್ಪಾದಕರ ಒಳನುಸುಳುವಿಕೆ ವಿರುದ್ಧ ಕಾರ್ಯಾಚರಣೆ ವೇಳೆ ಒಬ್ಬ ಯೋಧ ಹುತಾತ್ಮರಾಗಿದ್ದಾರೆ.

    ಕೆಲವು ದಿನಗಳ ಹಿಂದೆ ಕುಪ್ವಾರದ ಕೋವುಟ್ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಖಚಿತ ಮಾಹಿತಿ ನೀಡಲಾಗಿತ್ತು. ಸೇನೆಯು ಜಮ್ಮು-ಕಾಶ್ಮೀರದ ಪೊಲೀಸರೊಂದಿಗೆ ಜಂಟಿ ಶೋಧ ಕಾರ್ಯಾಚರಣೆ ಆರಂಭಿಸಿತ್ತು.

    ಭಾರತೀಯ ಸೇನೆಯ ಕಾರ್ಯಾಚರಣೆ ವೇಳೆ ಉಗ್ರರು ಸಹ ಗುಂಡಿನ ಚಕಮಕಿ ನಡೆಸಿದರು. ಈ ವೇಳೆ ಸೈನಿಕ ಹುತಾತ್ಮರಾಗಿದ್ದಾರೆ. ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಸೇನೆಯು ತಿಳಿಸಿದೆ.

    ಗುಂಡಿನ ಚಕಮಕಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಲ್ಯಾನ್ಸ್‌ ನಾಯಕ್‌ ಸುಭಾಷ್‌ ಕುಮಾರ್‌ ನಂತರ ಕೊನೆಯುಸಿರೆಳೆದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆ ಬಳಿಕ ಸೇನೆಗೆ ಹಸ್ತಾಂತರಿಸಲಾಗಿದೆ.

  • ಜಮ್ಮು ಕಾಶ್ಮೀರದಲ್ಲಿ ಸೇನಾ ಶಿಬಿರದ ಮೇಲೆ ಉಗ್ರರ ದಾಳಿ – ಓರ್ವ ಯೋಧನಿಗೆ ಗಾಯ

    ಜಮ್ಮು ಕಾಶ್ಮೀರದಲ್ಲಿ ಸೇನಾ ಶಿಬಿರದ ಮೇಲೆ ಉಗ್ರರ ದಾಳಿ – ಓರ್ವ ಯೋಧನಿಗೆ ಗಾಯ

    ಶ್ರೀನಗರ: ಸೇನಾ ಶಿಬಿರದ (Army Picket) ಮೇಲೆ ಉಗ್ರರು (Terrorist) ಗುಂಡಿನ ದಾಳಿ ನಡೆಸಿದ ಪರಿಣಾಮ ಓರ್ವ ಯೋಧ (Soldier) ತೀವ್ರ ಗಾಯಗೊಂಡಿರುವ ಘಟನೆ ಜಮ್ಮು-ಕಾಶ್ಮೀರದಲ್ಲಿ (Jammu Kashmir) ನಡೆದಿದೆ.

    ರಜೌರಿಯ (Rajouri) ಹಳ್ಳಿಯಲ್ಲಿ ಉಗ್ರರು ಸೇನಾ ಶಿಬಿರದ ಮೇಲೆ ದಾಳಿ ಮಾಡಿದ್ದಾರೆ. ಮುಂಜಾನೆ ಸುಮಾರು 4 ಗಂಟೆಯ ವೇಳೆಗೆ ದಾಳಿ ನಡೆದಿದೆ ಎಂದು ವರದಿ ತಿಳಿಸಿದೆ. ಈ ವೇಳೆ ಭದ್ರತಾ ಸಿಬ್ಬಂದಿ ಕೂಡ ಉಗ್ರರ ಮೇಲೆ ಪ್ರತಿದಾಳಿ ನಡೆಸಿದ್ದಾರೆ. ಸದ್ಯ ಉಗ್ರರೊಂದಿಗೆ ಗುಂಡಿನ ಚಕಮಕಿ ನಡೆಯುತ್ತಿದೆ. ಇದನ್ನೂ ಓದಿ: Paris Olympic 2024: ಭಾರತೀಯ ಕ್ರೀಡಾಪಟುಗಳಿಗೆ 8.5 ಕೋಟಿ ನೆರವು ಘೋಷಿಸಿದ ಬಿಸಿಸಿಐ

    ಘಟನೆಯ ಬಳಿಕ ಭದ್ರತಾ ಪಡೆಗಳು ಭಯೋತ್ಪಾದಕರಿಗಾಗಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಅಮೆರಿಕ ಅಧ್ಯಕ್ಷೀಯ ಚುನಾವಣಾ ಕಣದಿಂದ ಬೈಡೆನ್‌ ಹೊರಕ್ಕೆ – ಭಾರತ ಮೂಲದ ಕಮಲಾ ಹ್ಯಾರಿಸ್‌ಗೆ ಮಣೆ