Tag: jammu kashmir

  • ಕಾಶ್ಮೀರದಲ್ಲಿ ದೇಶವಿರೋಧಿ ಕೃತ್ಯಕ್ಕೆ ಸಾಥ್‌ – ತೆಹ್ರೀಕ್-ಎ-ಹುರಿಯತ್‌ಗೆ ನಿಷೇಧ ಹೇರಿದ ಕೇಂದ್ರ ಸರ್ಕಾರ

    ಕಾಶ್ಮೀರದಲ್ಲಿ ದೇಶವಿರೋಧಿ ಕೃತ್ಯಕ್ಕೆ ಸಾಥ್‌ – ತೆಹ್ರೀಕ್-ಎ-ಹುರಿಯತ್‌ಗೆ ನಿಷೇಧ ಹೇರಿದ ಕೇಂದ್ರ ಸರ್ಕಾರ

    ನವದೆಹಲಿ: ಜಮ್ಮು ಕಾಶ್ಮೀರದ (Jammu Kashmir) ತೆಹ್ರೀಕ್-ಎ-ಹುರಿಯತ್ (Tehreek-e-Hurriyat)  ಸಂಘಟನೆಯನ್ನು ಕಾನೂನುಬಾಹಿರ ಸಂಘಟನೆ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ.

    ಈ ಸಂಘಟನೆಯನ್ನು ಭಯೋತ್ಪಾದನಾ ವಿರೋಧಿ ಕಾನೂನು, ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿ ಕಾನೂನುಬಾಹಿರ ಸಂಘಟನೆ ಎಂದು ಅಮಿತ್‌ ಶಾ (Amit Shah) ಘೋಷಣೆ ಮಾಡಿದ್ದಾರೆ.

    ಕೇಂದ್ರ ಸರ್ಕಾರದ ನಿರ್ಧಾರವನ್ನು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ ಅಮಿತ್‌ ಶಾ ಅವರು,ತೆಹ್ರೀಕ್-ಎ-ಹುರಿಯತ್ ಸಂಘಟನೆ ಭಾರತದಿಂದ ಜಮ್ಮು ಕಾಶ್ಮೀರವನ್ನು ಪ್ರತ್ಯೇಕಿಸಲು ಮತ್ತು ಇಸ್ಲಾಮಿಕ್ ಆಳ್ವಿಕೆಯನ್ನು ಸ್ಥಾಪಿಸಲು ನಿಷೇಧಿತ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ. ಈ ಗುಂಪು ಭಾರತ-ವಿರೋಧಿ ಪ್ರಚಾರವನ್ನು ಹರಡುತ್ತಿದೆ. ಜಮ್ಮು ಕಾಶ್ಮೀರದಲ್ಲಿ ಪ್ರತ್ಯೇಕತಾವಾದವನ್ನು ಉತ್ತೇಜಿಸಿ, ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಪ್ರೋತ್ಸಾಹ ನೀಡುತ್ತಿದೆ ಎಂದು ಹೇಳಿದ್ದಾರೆ.  ಇದನ್ನೂ ಓದಿ: Ayodhya Ram Mandir – ಶ್ರೀರಾಮಲಲ್ಲಾ ಅಭಿಷೇಕಕ್ಕೆ ನೇಪಾಳದಿಂದ 16 ಪವಿತ್ರ ನದಿಗಳ ನೀರು

    ಪ್ರಧಾನಿ ನರೇಂದ್ರಮೋದಿ ಅವರು ಭಯೋತ್ಪಾದನೆಯ ವಿರುದ್ಧ ಶೂನ್ಯ-ಸಹಿಷ್ಣು ನೀತಿಯನ್ನು ಪಾಲಿಸುತ್ತಿದ್ದಾರೆ. ಭಾರತ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಯಾವುದೇ ವ್ಯಕ್ತಿ ಅಥವಾ ಸಂಘಟನೆಯನ್ನು ತಕ್ಷಣವೇ ತಡೆಯುತ್ತೇವೆ ಎಂದು ತಿಳಿಸಿದ್ದಾರೆ.  ಇದನ್ನೂ ಓದಿ: ಜ.14 ರಿಂದ ದೇಶದ ಎಲ್ಲಾ ದೇವಾಲಯಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ: ಮೋದಿ ಕರೆ

    ಭಾನುವಾರ ಗೃಹ ಸಚಿವಾಲಯದ ಗೆಜೆಟೆಡ್ ಅಧಿಸೂಚನೆಯಲ್ಲಿ ಹೊರಡಿಸಿ ಈ ನಿರ್ಧಾರ ಕೈಗೊಂಡಿದೆ. ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸಲು ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಮೇಲೆ ನಿರಂತರ ಕಲ್ಲು ತೂರಾಟ ಸೇರಿದಂತೆ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸಲು ಪಾಕಿಸ್ತಾನ ಮತ್ತು ವಿವಿಧ ಇತರ ಮೂಲಗಳಿಂದ ಹಣವನ್ನು ತೆಹ್ರೀಕ್-ಎ-ಹುರಿಯತ್ ಸಂಘಟನೆಯ ನಾಯಕರು ಮತ್ತು ಸದಸ್ಯರು ತೊಡಗಿಸಿಕೊಂಡಿದ್ದಾರೆ. ಈ ಸಂಘಟನೆಯ ಸದಸ್ಯರು ಸಾಂವಿಧಾನಿಕ ಸ್ಥಾಪನೆಗೆ ಸಂಪೂರ್ಣ ಅಗೌರವವನ್ನು ತೋರಿಸಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

    ಕಾಶ್ಮೀರದ ಪ್ರತ್ಯೇಕವಾದಿ ನಾಯಕ ಸೈಯ್ಯದ್‌ ಶಾ ಗಿಲಾನಿ (Syed Ali Shah Geelani)ಅವರು ಆಗಸ್ಟ್‌ 07, 2004ರಂದು ತೆಹ್ರೀಕ್-ಎ-ಹುರಿಯತ್ ಸಂಘಟನೆ ಸ್ಥಾಪಿಸಿದ್ದರು.

  • ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸುವಾಗ ಉಗ್ರರಿಂದ ಗುಂಡೇಟು – ಜಮ್ಮು ಕಾಶ್ಮೀರದ ನಿವೃತ್ತ ಪೊಲೀಸ್‌ ಅಧಿಕಾರಿ ಬಲಿ

    ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸುವಾಗ ಉಗ್ರರಿಂದ ಗುಂಡೇಟು – ಜಮ್ಮು ಕಾಶ್ಮೀರದ ನಿವೃತ್ತ ಪೊಲೀಸ್‌ ಅಧಿಕಾರಿ ಬಲಿ

    ಶ್ರೀನಗರ: ಜಮ್ಮು ಕಾಶ್ಮೀರದ (Jammu Kashmir) ಬಾರಾಮುಲ್ಲಾದಲ್ಲಿ ನಿವೃತ್ತ ಪೊಲೀಸ್‌ ಅಧಿಕಾರಿಯನ್ನು ಮಸೀದಿಯ (Mosque) ಒಳಗಡೆಯೇ ಉಗ್ರರು (Terrorist) ಹತ್ಯೆ ಮಾಡಿದ್ದಾರೆ.

    ಮೊಹಮ್ಮದ್‌ ಶಾಫಿ ಉಗ್ರರ ಗುಂಡೇಟಿಗೆ ಬಲಿಯಾದ ನಿವೃತ್ತ ಪೊಲೀಸ್‌ ಅಧಿಕಾರಿ. ಮಸೀದಿಯ ಒಳಗಡೆ ಪ್ರಾರ್ಥನೆ ಮಾಡುತ್ತಿರುವಾಗಲೇ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.

    ಪೊಲೀಸರು ಈಗ ಆ ಪ್ರದೇಶವನ್ನು ಸುತ್ತುವರಿದಿದ್ದು ಉಗ್ರರ ಪತ್ತೆಗೆ ಮುಂದಾಗಿದ್ದಾರೆ. ಕಳೆದ ಕೆಲ ತಿಂಗಳಿನಿಂದ ಪೊಲೀಸರು ಮತ್ತು ಸೈನಿಕರ ಮೇಲೆ ಕಣಿವೆ ರಾಜ್ಯದಲ್ಲಿ ದಾಳಿಗಳು ಹೆಚ್ಚಾಗುತ್ತಿದೆ.   ಇದನ್ನೂ ಓದಿ: ಶಾಸಕ ಬಿ.ಆರ್ ಪಾಟೀಲ್ ಆಪ್ತ ಬಸವರಾಜ್ ಚೌಲ್ ಪುತ್ರನ ಹತ್ಯೆ

    ಗುರುವಾರ ಮಧ್ಯಾಹ್ನ 3:45ಕ್ಕೆ ರಾಜೌರಿಯ ಪೂಂಚ್ ಪ್ರದೇಶದಲ್ಲಿ ಡೇರಾ ಕಿ ಗಲಿ ಮೂಲಕ ಸಾಗುತ್ತಿದ್ದ ಎರಡು ಸೇನಾ ವಾಹನಗಳ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದರು. ಉಗ್ರರ ಜೊತೆಗಿನ ಗುಂಡಿನ ಚಕಮಕಿಯಲ್ಲಿ ಐವರು ಯೋಧರು (Five Soldiers ) ಹುತಾತ್ಮರಾಗಿದ್ದು, ಮೂವರು ಗಾಯಗೊಂಡಿದ್ದರು.

     

  • ಜಮ್ಮು ಕಾಶ್ಮೀರದಲ್ಲಿ ಉಗ್ರರ ಜೊತೆ ಗುಂಡಿನ ಚಕಮಕಿ – ಐವರು ಯೋಧರು ಹುತಾತ್ಮ, ಮೂವರಿಗೆ ಗಾಯ

    ಜಮ್ಮು ಕಾಶ್ಮೀರದಲ್ಲಿ ಉಗ್ರರ ಜೊತೆ ಗುಂಡಿನ ಚಕಮಕಿ – ಐವರು ಯೋಧರು ಹುತಾತ್ಮ, ಮೂವರಿಗೆ ಗಾಯ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ಪೂಂಚ್ ಜಿಲ್ಲೆಯಲ್ಲಿ ಉಗ್ರರ ಜೊತೆಗಿನ ಗುಂಡಿನ ಚಕಮಕಿಯಲ್ಲಿ ಐವರು ಯೋಧರು (Five Soldiers ) ಹುತಾತ್ಮರಾಗಿದ್ದು, ಮೂವರು ಗಾಯಗೊಂಡಿದ್ದಾರೆ.

    ಗುರುವಾರ ಮಧ್ಯಾಹ್ನ 3:45ಕ್ಕೆ ರಾಜೌರಿಯ ಪೂಂಚ್ ಪ್ರದೇಶದಲ್ಲಿ ಡೇರಾ ಕಿ ಗಲಿ ಮೂಲಕ ಸಾಗುತ್ತಿದ್ದ ಎರಡು ಸೇನಾ ವಾಹನಗಳ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ನಂತರ ಎನ್‌ಕೌಂಟರ್ ಆರಂಭವಾಗಿದೆ.  ಇದನ್ನೂ ಓದಿ: ಹರಿಣರ ಬೇಟೆಯಾಡಿ ಸರಣಿ ಗೆದ್ದ ಭಾರತ – ಧೋನಿ ಟ್ರೆಂಡ್‌ ಮುಂದುವರಿಸಿದ ಕೆ.ಎಲ್‌ ರಾಹುಲ್‌

    ಬುಧವಾರ ರಾತ್ರಿಯಿಂದ ಡಿಕೆಜಿ ಪ್ರದೇಶ ಎಂದು ಕರೆಯಲ್ಪಡುವ ಡೇರಾ ಕಿ ಗಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಈ ಪ್ರದೇಶವು ಭಯೋತ್ಪಾದಕರ ತಾಣವಾಗಿದೆ ಮತ್ತು ಕಳೆದ ಕೆಲವು ವರ್ಷಗಳಿಂದ ಸೇನೆಯ ಮೇಲೆ ಪ್ರಮುಖ ದಾಳಿಗಳು ಈ ಭಾಗದಲ್ಲಿ ನಡೆಯುತ್ತಿದೆ. ಇದನ್ನೂ ಓದಿ: ಬೆಂಗಳೂರು ಏರ್‌ಪೋರ್ಟ್‌ನ ಟರ್ಮಿನಲ್‌ 2ಗೆ ವಿಶ್ವದ ಸುಂದರ ವಿಮಾನ ನಿಲ್ದಾಣ ಗೌರವ

    ಕಳೆದ ಎರಡು ವರ್ಷಗಳಲ್ಲಿ ಈ ಪ್ರದೇಶದಲ್ಲಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ 35ಕ್ಕೂ ಹೆಚ್ಚು ಯೋಧರು ಹುತಾತ್ಮರಾಗಿದ್ದಾರೆ.

     

  • Article 370 Verdict: ಸುಪ್ರೀಂ ಆದೇಶವನ್ನು ಗೌರವಯುತವಾಗಿ ಒಪ್ಪುವುದಿಲ್ಲ: ಪಿ ಚಿದಂಬರಂ

    Article 370 Verdict: ಸುಪ್ರೀಂ ಆದೇಶವನ್ನು ಗೌರವಯುತವಾಗಿ ಒಪ್ಪುವುದಿಲ್ಲ: ಪಿ ಚಿದಂಬರಂ

    ನವದೆಹಲಿ: ಜಮ್ಮು ಕಾಶ್ಮೀರಕ್ಕೆ ನೀಡಲಾದ ವಿಶೇಷ ಸ್ಥಾನಮಾನವನ್ನು (Jammu and Kashmir Special Status) ರದ್ದು ಪಡಿಸಿದ ಕೇಂದ್ರ ಸರ್ಕಾರದ ನಿರ್ಧಾರ ಸರಿ ಎಂದು ಹೇಳುವ ಮೂಲಕ ಸುಪ್ರೀಂ ಕೋರ್ಟ್‌ (Supreme Court) ಐತಿಹಾಸಿಕ ತೀರ್ಪು ನೀಡಿದ್ದು, ಈ ಆದೇಶವನ್ನು ಗೌರವಯುತವಾಗಿ ಒಪ್ಪುವುದಿಲ್ಲ ಎಂದು ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಹೇಳಿದ್ದಾರೆ.

    ಆರ್ಟಿಕಲ್‌ 370 ರದ್ದತಿ ಆದೇಶದ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಭಾರತದ ಸಂವಿಧಾನಕ್ಕೆ ಅನುಗುಣವಾಗಿ ಕಟ್ಟುನಿಟ್ಟಾಗಿ ತಿದ್ದುಪಡಿ ಮಾಡುವವರೆಗೆ 370 ಗೌರವಕ್ಕೆ ಅರ್ಹವಾಗಿದೆ. ರಾಜ್ಯವನ್ನು ವಿಭಜಿಸುವ ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳಿಗೆ ಅದರ ಸ್ಥಾನಮಾನವನ್ನು ಕಡಿಮೆ ಮಾಡುವ ಪ್ರಶ್ನೆಯನ್ನು ಗೌರವಾನ್ವಿತ ಸುಪ್ರೀಂ ಕೋರ್ಟ್ ನಿರ್ಧರಿಸದಿರುವುದು ನಮಗೆ ನಿರಾಶೆಯಾಗಿದೆ ಎಂದು ತಿಳಿಸಿದ್ದಾರೆ.

    ಕಾಂಗ್ರೆಸ್ (Congress) ಯಾವಾಗಲೂ ಜಮ್ಮು-ಕಾಶ್ಮೀರದ ಕೇಂದ್ರಾಡಳಿತ ಪ್ರದೇಶವಾಗಿ ಮಾರ್ಪಟ್ಟಿರುವ ಸಂಪೂರ್ಣ ರಾಜ್ಯತ್ವವನ್ನು ಮರುಸ್ಥಾಪಿಸಲು ಒತ್ತಾಯಿಸುತ್ತದೆ. ಈ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇವೆ. ಕೂಡಲೇ ಸಂಪೂರ್ಣ ರಾಜ್ಯ ಸ್ಥಾನಮಾನ ಮರುಸ್ಥಾಪಿಸಬೇಕು, ಲಡಾಖ್ ಜನರ ಆಶೋತ್ತರಗಳನ್ನೂ ಈಡೇರಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: Article 370 Verdict – ಇಂದಿನ ತೀರ್ಪು ಕೇವಲ ತೀರ್ಪಲ್ಲ, ಭರವಸೆಯ ದಾರಿದೀಪ: ಮೋದಿ ಸಂತಸ

    ವಿಧಾನಸಭೆ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್‌ನ ನಿರ್ದೇಶನವನ್ನು ನಾವು ಸ್ವಾಗತಿಸುತ್ತೇವೆ. ಅದಾಗ್ಯೂ, ಚುನಾವಣೆಗಳನ್ನು ತಕ್ಷಣವೇ ನಡೆಸಬೇಕು, ಒಂದು ವರ್ಷ ಕಾಯಲು ನಿಖರ ಕಾರಣಗಳಿಲ್ಲ ಎಂದು ಚಿದಂಬರಂ (P Chidambaram) ಹೇಳಿದ್ದಾರೆ.

    2019ರ ಆಗಸ್ಟ್‌ 6 ರಂದು ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರ ಲಡಾಖ್, ಜಮ್ಮು ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಹಲವು ಮಂದಿ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಿದ್ದರು. ವಿಶೇಷ ಸ್ಥಾನವನ್ನು ರದ್ದು ಪಡಿಸಿದ ಕೇಂದ್ರ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ಮುಕ್ತಾಯಗೊಳಿಸಿದ್ದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿಆರ್ ಗವಾಯಿ ಮತ್ತು ಸೂರ್ಯಕಾಂತ್ ಅವರನ್ನೊಳಗೊಂಡ ಐದು ನ್ಯಾಯಾಧೀಶರ ಸಂವಿಧಾನ ಪೀಠ ಸರ್ವಾನುಮತದ ತೀರ್ಪು ಪ್ರಕಟಿಸಿ ಕೇಂದ್ರದ ನಿರ್ಧಾರವನ್ನು ಎತ್ತಿ ಹಿಡಿದಿದೆ.

  • ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು: ಮೊದಲು ಹೇಗಿತ್ತು? ಈಗ ಏನು ಬದಲಾವಣೆಯಾಗಿದೆ?

    ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು: ಮೊದಲು ಹೇಗಿತ್ತು? ಈಗ ಏನು ಬದಲಾವಣೆಯಾಗಿದೆ?

    ನವದೆಹಲಿ: ಜಮ್ಮು ಕಾಶ್ಮೀರಕ್ಕೆ (Jammu Kashnir) ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಮಾಡಿದ ನಂತರ ಕಾಶ್ಮೀರ ಈಗ ಸುರಕ್ಷಿತವಾಗಿದೆ. ಭಯೋತ್ಪಾದಕ ಚಟುವಟಿಕೆಗಳು (Terrorist Activity) 10 ಪಟ್ಟು ಕಡಿಮೆಯಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

    ಆರ್ಟಿಕಲ್ 370ರ (Article 370) ರದ್ದತಿಯ ನಂತರ, ಜಮ್ಮು ಮತ್ತು ಕಾಶ್ಮೀರವು ಸುಧಾರಣೆಗಳ ನೇತೃತ್ವದ ಪರಿವರ್ತಕ ಬದಲಾವಣೆಯ ಗಮನಾರ್ಹ ಯುಗಕ್ಕೆ ಸಾಕ್ಷಿಯಾಗಿದೆ ಮತ್ತು ಜನರ ಸಾಮೂಹಿಕ ಪ್ರಯತ್ನಗಳಿಂದ ನಡೆಸಲ್ಪಟ್ಟಿದೆ ಎಂದು ಹೇಳುವ ಮೂಲಕ ಕೇಂದ್ರ ಸರ್ಕಾರ 2014ರ ಮೊದಲು ಜಮ್ಮು ಕಾಶ್ಮೀರ ಹೇಗಿತ್ತು ಮತ್ತು ಈಗ ಹೇಗಿದೆ ಎಂಬ ಸಂಪೂರ್ಣ ಚಿತ್ರಣವನ್ನು ನೀಡಿದೆ. ಇದನ್ನೂ ಓದಿ: Article 370 Verdict: J&K, ಲಡಾಖ್‌ ಸರ್ವತೋಮುಖ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ – ಅಮಿತ್‌ ಶಾ ಸಂತಸ

    ಭಯೋತ್ಪಾದಕ ಘಟನೆಗಳು:
    1994-2014ರ ನಡುವೆ ಒಟ್ಟು 47,381 ಭಯೋತ್ಪಾದಕ ಘಟನೆಗಳು ನಡೆದಿದ್ದು, ಪ್ರತಿ ವರ್ಷ ಸರಾಸರಿ 2,360 ಭಯೋತ್ಪಾದಕ ಘಟನೆಗಳು ನಡೆದಿದೆ. 2014ರಿಂದ ಒಟ್ಟು 2.197 ಕೃತ್ಯಗಳು ನಡೆದಿದ್ದು, ಪ್ರತಿ ವರ್ಷ ಸರಾಸರಿ 240 ಭಯೋತ್ಪಾದಕ ಘಟನೆಗಳು ನಡೆಯುತ್ತಿವೆ. ಇನ್ನು ನಾಗರಿಕ ಸಾವುನೋವುಗಳಲ್ಲಿ 72% ಕಡಿತವಾಗಿದ್ದು, ಭದ್ರತಾ ಸಿಬ್ಬಂದಿಯ ಸಾವುನೋವುಗಳಲ್ಲಿ 59% ಕಡಿತವಾಗಿದೆ. ಇದನ್ನೂ ಓದಿ: Article 370 Verdict – ಇಂದಿನ ತೀರ್ಪು ಕೇವಲ ತೀರ್ಪಲ್ಲ, ಭರವಸೆಯ ದಾರಿದೀಪ: ಮೋದಿ ಸಂತಸ

    ಗ್ರಾಮಗಳನ್ನು ಸಂಪರ್ಕಿಸಿ ಸಮೃದ್ಧಿಯನ್ನು ಖಾತರಿಪಡಿಸುವಲ್ಲಿ 2014ರ ಮೊದಲು ಪ್ರತಿವರ್ಷ 158 ಕಿಲೋ ಮೀಟರ್ ರಸ್ತೆ ನಿರ್ಮಾಣ ಮಾಡಲಾಗುತ್ತಿತ್ತು. ಆದರೆ ಈಗ ಅಂದರೆ 2014ರ ಬಳಿಕ ಪ್ರತಿ ವರ್ಷಕ್ಕೆ 8,068 ಕಿಲೋ ಮೀಟರ್ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ಸ್ವಾತಂತ್ರದ ನಂತರ ಒಟ್ಟು 24,000 ಮನೆಗಳ ನಿರ್ಮಾಣ ಮಾಡಿದ್ದು, ಪ್ರಸ್ತುತ 5 ವರ್ಷಗಳಲ್ಲಿ 1.45 ಲಕ್ಷ ಮನೆಗಳ ನಿರ್ಮಾಣ ಮಾಡಲಾಗಿದೆ. ಇದನ್ನೂ ಓದಿ: Article 370 Verdict – ಕೇಂದ್ರದ ಎಲ್ಲಾ ನಿರ್ಧಾರವನ್ನು ಪ್ರಶ್ನಿಸಲು ಸಾಧ್ಯವಿಲ್ಲ: ಸುಪ್ರೀಂ ಐತಿಹಾಸಿಕ ತೀರ್ಪಿನಲ್ಲಿ ಏನಿದೆ?

    ಹರ್ ಘರ್ ನಲ್ ಸೆ ಜಲ್‌ನ ಯೋಜನೆಯಡಿ 2014ರ ಮೊದಲು 7.82 ಲಕ್ಷ ಮನೆಗಳಿಗೆ ಟ್ಯಾಪ್ ನೀರಿನ ಸಂಪರ್ಕ ಕಲ್ಪಿಸಲಾಗಿದೆ. 2014ರ ನಂತರ ಒಟ್ಟು 13 ಲಕ್ಷ ಮನೆಗಳಿಗೆ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. ಪಿಂಚಣಿ ಫಲಾನುಭವಿಗಳಲ್ಲಿ ಒಟ್ಟು 66% ಹೆಚ್ಚಳವಾಗಿದ್ದು 2014ರ ಮೊದಲು 6 ಲಕ್ಷ ಜನರಿಗೆ ಪಿಂಚಣಿ ನೀಡಲಾಗುತ್ತಿತ್ತು. ಈಗ 10 ಲಕ್ಷ ಜನರಿಗೆ ಪಿಂಚಣಿ ನೀಡಲಾಗುತ್ತಿದೆ. ಇದನ್ನೂ ಓದಿ: 3,500 ಕಿ.ಮೀ ದೂರದ ಥೈಲ್ಯಾಂಡ್‌ನಿಂದ ಅಯೋಧ್ಯೆ ರಾಮಮಂದಿರಕ್ಕೆ ಬರಲಿದೆ ವಿಶೇಷ ಮಣ್ಣು

    21ನೇ ಶತಮಾನದ ಈ ದಶಕವು ಜಮ್ಮು ಮತ್ತು ಕಾಶ್ಮೀರದ ಇತಿಹಾಸದಲ್ಲಿ ಅತ್ಯಂತ ಪ್ರಮುಖ ದಶಕವಾಗಿದೆ. ಈಗ ಹಳೆಯ ಸವಾಲುಗಳನ್ನು ಬಿಟ್ಟು ಹೊಸ ಸಾಧ್ಯತೆಗಳ ಸಂಪೂರ್ಣ ಲಾಭ ಪಡೆಯುವ ಸಮಯ. ಜಮ್ಮು ಮತ್ತು ಕಾಶ್ಮೀರದ ಯುವಕರು ತಮ್ಮ ಪ್ರದೇಶದ ಅಭಿವೃದ್ಧಿಗಾಗಿ ಮತ್ತು ಜಮ್ಮು ಮತ್ತು ಕಾಶ್ಮೀರದ ಜನರ ಅಭಿವೃದ್ಧಿಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಮುಂದೆ ಬರುತ್ತಿದ್ದಾರೆ ಎಂದು ನನಗೆ ಸಂತೋಷವಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಅಭಿವೃದ್ಧಿಯ ಹೊಸ ಸಾಹಸಗಾಥೆಯನ್ನು ಬರೆಯುವವರು ನಮ್ಮ ಯುವಕರು ಎಂದು 2022ರ ಅಕ್ಟೋಬರ್ 30ರಂದು ಜಮ್ಮು ಕಾಶ್ಮೀರ ರೋಜ್‌ಗಾರ್ ಮೇಳದಲ್ಲಿ ಪ್ರಧಾನಿ ಮೋದಿ (Narendra Modi) ಸಂದೇಶ ನೀಡಿದ್ದರು. ಇದನ್ನೂ ಓದಿ: ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು – ಕೇಂದ್ರದ ನಿರ್ಧಾರವನ್ನು ಎತ್ತಿ ಹಿಡಿದ ಸುಪ್ರೀಂ

  • Article 370 Verdict: J&K, ಲಡಾಖ್‌ ಸರ್ವತೋಮುಖ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ – ಅಮಿತ್‌ ಶಾ ಸಂತಸ

    Article 370 Verdict: J&K, ಲಡಾಖ್‌ ಸರ್ವತೋಮುಖ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ – ಅಮಿತ್‌ ಶಾ ಸಂತಸ

    ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ (Jammu And Kashmir) ಸಂವಿಧಾನದ 370ನೇ ವಿಧಿಯ (Article 370) ಅಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದು ಪಡಿಸಿದ ಕೇಂದ್ರ ಸರ್ಕಾರ ನಿರ್ಧಾರ ಸರಿಯಾಗಿದೆ ಎಂದು ಸುಪ್ರೀಂ ಕೋರ್ಟ್ (Supreme Court) ಐತಿಹಾಸಿಕ ತೀರ್ಪು ನೀಡಿದೆ. ಸುಪ್ರೀಂ ತೀರ್ಪನ್ನು ಕೇಂದ್ರ ಸಚಿವ ಅಮಿತ್‌ ಶಾ ಶ್ಲಾಘಿಸಿದ್ದಾರೆ.

    ಜಮ್ಮು‍ & ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದ ಕುರಿತು ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಕೇಂದ್ರ ಸಚಿವ ಅಮಿತ್‌ ಶಾ (Amit Shah) ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಆರ್ಟಿಕಲ್‌ 370 ರದ್ದತಿ ನಿರ್ಧಾರವನ್ನು ಎತ್ತಿಹಿಡಿದ ಭಾರತದ ಗೌರವಾನ್ವಿತ ಸುಪ್ರೀಂ ಕೋರ್ಟ್‌ ತೀರ್ಪನ್ನು ನಾನು ಸ್ವಾಗತಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: Article 370 Verdict – ಇಂದಿನ ತೀರ್ಪು ಕೇವಲ ತೀರ್ಪಲ್ಲ, ಭರವಸೆಯ ದಾರಿದೀಪ: ಮೋದಿ ಸಂತಸ

    2019ರ ಆಗಸ್ಟ್‌ 5 ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಆರ್ಟಿಕಲ್‌ 370 ಅನ್ನು ರದ್ದುಗೊಳಿಸುವ ದೂರದೃಷ್ಟಿಯ ನಿರ್ಧಾರವನ್ನು ತೆಗೆದುಕೊಂಡಿತು. ಅಲ್ಲಿಂದೀಚೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಮತ್ತು ಸಹಜತೆ ನೆಲೆಸಿತು. ಹಿಂಸಾಚಾರದಿಂದಲೇ ನಲುಗಿದ್ದ ಕಣಿವೆ ಪ್ರದೇಶದಲ್ಲಿ ಆದ ಬೆಳವಣಿಗೆ ಮತ್ತು ಅಭಿವೃದ್ಧಿಯು ಮಾನವ ಜೀವನಕ್ಕೆ ಹೊಸ ಅರ್ಥ ತಂದಿತು. ಕೃಷಿ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳಲ್ಲಿನ ಸಮೃದ್ಧಿಯು ಜಮ್ಮು ಮತ್ತು ಕಾಶ್ಮೀರ, ಲಡಾಖ್ ನಿವಾಸಿಗಳ ಆದಾಯ ಮಟ್ಟ ಹೆಚ್ಚಿಸಿತು. ಇಂದು ಸುಪ್ರೀಂ ಕೋರ್ಟ್‌ 370ನೇ ವಿಧಿಯನ್ನು ರದ್ದುಗೊಳಿಸುವ ತೀರ್ಪು ಪ್ರಕಟಿಸಿದ್ದು ಭಾರತದ ಸಂಸತ್ತು ತೆಗೆದುಕೊಂಡ ನಿರ್ಧಾರ ಸಾಂವಿಧಾನಿಕವಾಗಿದೆ ಎಂದು ಸಾಬೀತುಪಡಿಸಿದೆ ಎಂದು #NayaJammuKashmir (ಹೊಸ ಜಮ್ಮುಕಾಶ್ಮೀರ) ಹ್ಯಾಶ್‌ಟ್ಯಾಗ್‌ನೊಂದಿಗೆ ಬರೆದುಕೊಂಡಿದ್ದಾರೆ.

    ಆರ್ಟಿಕಲ್‌ 370 ರದ್ದಾದ ನಂತರ ಬಡವರು ಹಾಗೂ ವಂಚಿತರ ಹಕ್ಕುಗಳನ್ನು ಪುನರ್‌ಸ್ಥಾಪಿಸಲಾಗಿದೆ. ಇಡೀ ಪ್ರದೇಶವೂ ಸಂಗೀತ ಮತ್ತು ಸಾಂಸ್ಕೃತಿಕ ಪ್ರವಾಸೋದ್ಯಮದಿಂದ ಪ್ರತಿಧ್ವನಿಸುತ್ತಿದೆ. ಭಾರತದೊಂದಿಗೆ ಇಲ್ಲಿನ ಏಕತೆ, ಸಮಗ್ರತೆಯನ್ನು ಬಲಪಡಿಸಲಾಗಿದೆ. ಈ ತೀರ್ಪು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಯಾವಾಗಲೂ ನಮ್ಮ ರಾಷ್ಟ್ರಕ್ಕೆ ಸೇರಿದ್ದು ಎಂಬುದನ್ನು ಸೂಚಿಸಿದ್ದು, ಹೀಗೆ ಮುಂದುವರಿಯಲಿದೆ. ಇದನ್ನೂ ಓದಿ: Article 370 Verdict – ಕೇಂದ್ರದ ಎಲ್ಲಾ ನಿರ್ಧಾರವನ್ನು ಪ್ರಶ್ನಿಸಲು ಸಾಧ್ಯವಿಲ್ಲ: ಸುಪ್ರೀಂ ಐತಿಹಾಸಿಕ ತೀರ್ಪಿನಲ್ಲಿ ಏನಿದೆ?

    ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ನಮ್ಮ ಸರ್ಕಾರವು J&K ಮತ್ತು ಲಡಾಖ್‌ನಲ್ಲಿ ಶಾಶ್ವತವಾಗಿ ಶಾಂತಿ ಸ್ಥಾಪಿಸಲು ಮತ್ತು ಸರ್ವತೋಮುಖ ಅಭಿವೃದ್ಧಿಗೆ ಬದ್ಧವಾಗಿದೆ. ಸುಪ್ರೀಂ ಕೋರ್ಟ್‌ನ ಈ ತೀರ್ಪಿನಿಂದ ಹೊಸ ಪ್ರೋತ್ಸಾಹಗಳೊಂದಿಗೆ ಸ್ಥಳೀಯ ಆರ್ಥಿಕತೆಗೆ ಉತ್ತೇಜನ ಸಿಗಲಿದೆ. ಅತ್ಯಾಧುನಿಕ ಶೈಕ್ಷಣಿಕ ಮೂಲಸೌಕರ್ಯ ನಿರ್ಮಿಸಲಾಗುತ್ತದೆ. ಜೊತೆಗೆ ಬಡವರ ಸಬಲೀಕರಣಕ್ಕಾಗಿ ಎಲ್ಲಾ ರೀತಿಯ ಶಕ್ತಿಯನ್ನು ಬಳಸುತ್ತೇವೆ ಎಂದು ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಕರ್ನಾಟಕದ ಯುವ ಆಟಗಾರ್ತಿ 1.3 ಕೋಟಿಗೆ ಸೇಲ್‌ – ಇತಿಹಾಸ ನಿರ್ಮಿಸಿದ ವೃಂದಾ ದಿನೇಶ್‌

  • Article 370 Verdict – ಇಂದಿನ ತೀರ್ಪು ಕೇವಲ ತೀರ್ಪಲ್ಲ, ಭರವಸೆಯ ದಾರಿದೀಪ: ಮೋದಿ ಸಂತಸ

    Article 370 Verdict – ಇಂದಿನ ತೀರ್ಪು ಕೇವಲ ತೀರ್ಪಲ್ಲ, ಭರವಸೆಯ ದಾರಿದೀಪ: ಮೋದಿ ಸಂತಸ

    ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ (Jammu And Kashmir) ಸಂವಿಧಾನದ 370ನೇ ವಿಧಿಯ (Article 370) ಅಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಪಡಿಸಿದ ಕೇಂದ್ರ ಸರ್ಕಾರ ನಿರ್ಧಾರ ಸರಿಯಾಗಿದೆ ಎಂದು ಸುಪ್ರೀಂಕೋರ್ಟ್ (Supreme Court) ಐತಿಹಾಸಿಕ ತೀರ್ಪು ನೀಡಿದೆ. ಈ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ (Narendra Modi) ಪೋಸ್ಟ್ ಮಾಡಿದ್ದು, ಇಂದಿನ ತೀರ್ಪು ಕೇವಲ ತೀರ್ಪಲ್ಲ, ಭರವಸೆಯ ದಾರಿದೀಪ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

    ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು ಕುರಿತು ಸುಪ್ರೀಂ ಕೋರ್ಟ್ ತೀರ್ಪು ಬಗ್ಗೆ ಪ್ರಧಾನಿ ಮೋದಿ ತಮ್ಮ ಎಕ್ಸ್‌ನಲ್ಲಿ ಬರೆದುಕೊಂಡು ಸಂತಸ ಹಂಚಿಕೊಂಡಿದ್ದಾರೆ. ಆರ್ಟಿಕಲ್ 370 ರದ್ದತಿಗೆ ಸಂಬಂಧಿಸಿದಂತೆ ಇಂದಿನ ಸುಪ್ರೀಂ ಕೋರ್ಟ್ ತೀರ್ಪು ಐತಿಹಾಸಿಕವಾಗಿದೆ ಮತ್ತು 5 ಆಗಸ್ಟ್ 2019 ರಂದು ಭಾರತದ ಸಂಸತ್ತು ತೆಗೆದುಕೊಂಡ ನಿರ್ಧಾರವನ್ನು ಸಾಂವಿಧಾನಿಕವಾಗಿ ಎತ್ತಿಹಿಡಿಯುತ್ತದೆ. ಇದು ಜಮ್ಮು ಕಾಶ್ಮೀರ ಮತ್ತು ಲಡಾಖ್‌ನಲ್ಲಿರುವ ನಮ್ಮ ಸಹೋದರಿಯರು ಮತ್ತು ಸಹೋದರರಿಗೆ ಭರವಸೆ, ಪ್ರಗತಿ ಮತ್ತು ಏಕತೆಯನ್ನು ಪ್ರತಿಧ್ವನಿಸುವ ಘೋಷಣೆಯಾಗಿದೆ. ನ್ಯಾಯಾಲಯವು ತನ್ನ ಆಳವಾದ ಬುದ್ಧಿವಂತಿಕೆಯಲ್ಲಿ, ಭಾರತೀಯರಾದ ನಾವು ಎಲ್ಲಕ್ಕಿಂತ ಹೆಚ್ಚಾಗಿ ಪ್ರೀತಿಸುವ ಮತ್ತು ಏಕತೆಯ ಸಾರವನ್ನು ಬಲಪಡಿಸಿದೆ ಎಂದು ಮೋದಿ ಟ್ವೀಟ್ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ: Article 370 Verdict – ಕೇಂದ್ರದ ಎಲ್ಲಾ ನಿರ್ಧಾರವನ್ನು ಪ್ರಶ್ನಿಸಲು ಸಾಧ್ಯವಿಲ್ಲ: ಸುಪ್ರೀಂ ಐತಿಹಾಸಿಕ ತೀರ್ಪಿನಲ್ಲಿ ಏನಿದೆ?

    ಅಲ್ಲದೇ ಜಮ್ಮು, ಕಾಶ್ಮೀರ ಮತ್ತು ಲಡಾಖ್‌ನ ಚೇತರಿಸಿಕೊಳ್ಳುವ ಜನರಿಗೆ ನಿಮ್ಮ ಕನಸುಗಳನ್ನು ಈಡೇರಿಸುವ ನಮ್ಮ ಬದ್ಧತೆ ಅಚಲವಾಗಿದೆ ಎಂದು ನಾನು ಭರವಸೆ ನೀಡಲು ಬಯಸುತ್ತೇನೆ. ಪ್ರಗತಿಯ ಫಲಗಳು ನಿಮಗೆ ಮಾತ್ರ ತಲುಪುವುದಿಲ್ಲ. ಆದರೆ 370ನೇ ವಿಧಿಯ ಕಾರಣದಿಂದಾಗಿ ನಮ್ಮ ಸಮಾಜದ ಅತ್ಯಂತ ದುರ್ಬಲ ಮತ್ತು ಅಂಚಿನಲ್ಲಿರುವ ವರ್ಗಗಳಿಗೆ ಅದರ ಪ್ರಯೋಜನಗಳನ್ನು ವಿಸ್ತರಿಸಲು ನಾವು ನಿರ್ಧರಿಸಿದ್ದೇವೆ. ಇಂದಿನ ತೀರ್ಪು ಉಜ್ವಲ ಭವಿಷ್ಯದ ಭರವಸೆ ಮತ್ತು ಬಲಿಷ್ಠ, ಹೆಚ್ಚು ಅಖಂಡ ಭಾರತವನ್ನು ನಿರ್ಮಿಸುವ ನಮ್ಮ ಸಾಮೂಹಿಕ ಸಂಕಲ್ಪಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು – ಕೇಂದ್ರದ ನಿರ್ಧಾರವನ್ನು ಎತ್ತಿ ಹಿಡಿದ ಸುಪ್ರೀಂ

  • Article 370 Verdict – ಕೇಂದ್ರದ ಎಲ್ಲಾ ನಿರ್ಧಾರವನ್ನು ಪ್ರಶ್ನಿಸಲು ಸಾಧ್ಯವಿಲ್ಲ: ಸುಪ್ರೀಂ ಐತಿಹಾಸಿಕ ತೀರ್ಪಿನಲ್ಲಿ ಏನಿದೆ?

    ನವದೆಹಲಿ: ಜಮ್ಮು ಕಾಶ್ಮೀರಕ್ಕೆ ನೀಡಲಾದ ವಿಶೇಷ ಸ್ಥಾನಮಾನವನ್ನು (Jammu and Kashmir Special Status) ರದ್ದು ಪಡಿಸಿದ ಕೇಂದ್ರ ಸರ್ಕಾರ ಸರಿ ಎಂದು ಹೇಳುವ ಮೂಲಕ ಸುಪ್ರೀಂ ಕೋರ್ಟ್‌ (Supreme Court) ಐತಿಹಾಸಿಕ ತೀರ್ಪು ನೀಡಿದೆ.

    2019ರ ಆಗಸ್ಟ್‌ 6 ರಂದು ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರ ಲಡಾಖ್, ಜಮ್ಮು ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಹಲವು ಮಂದಿ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಿದ್ದರು.

    ವಿಶೇಷ ಸ್ಥಾನವನ್ನು ರದ್ದು ಪಡಿಸಿದ ಕೇಂದ್ರ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ಮುಕ್ತಾಯಗೊಳಿಸಿದ್ದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿಆರ್ ಗವಾಯಿ ಮತ್ತು ಸೂರ್ಯಕಾಂತ್ ಅವರನ್ನೊಳಗೊಂಡ ಐದು ನ್ಯಾಯಾಧೀಶರ ಸಂವಿಧಾನ ಪೀಠ ಸರ್ವಾನುಮತದ ತೀರ್ಪು ಪ್ರಕಟಿಸಿ ಕೇಂದ್ರದ ನಿರ್ಧಾರವನ್ನು ಎತ್ತಿ ಹಿಡಿದಿದೆ.  ಇದನ್ನೂ ಓದಿ: 3,500 ಕಿ.ಮೀ ದೂರದ ಥೈಲ್ಯಾಂಡ್‌ನಿಂದ ಅಯೋಧ್ಯೆ ರಾಮಮಂದಿರಕ್ಕೆ ಬರಲಿದೆ ವಿಶೇಷ ಮಣ್ಣು 

    ತೀರ್ಪುನಲ್ಲಿರುವ ಪ್ರಮುಖ ಅಂಶಗಳು
    ಆರ್ಟಿಕಲ್ 356 (ರಾಷ್ಟ್ರಪತಿ ಆಳ್ವಿಕೆ ಹೇರಿಕೆ) ಅಡಿಯಲ್ಲಿ ರಾಜ್ಯದ ಪರವಾಗಿ ಕೇಂದ್ರವು ತೆಗೆದುಕೊಳ್ಳುವ ಪ್ರತಿಯೊಂದು ನಿರ್ಧಾರವನ್ನು ಪ್ರಶ್ನಿಸಲು ಸಾಧ್ಯವಿಲ್ಲ. ಆರ್ಟಿಕಲ್ 356ರ ಅಡಿಯಲ್ಲಿ ಘೋಷಣೆ ಜಾರಿ ಮಾಡುವ ಮೊದಲು ಕೇಂದ್ರವು ಲೆಕ್ಕವಿಲ್ಲದಷ್ಟು ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ. ಒಂದು ವೇಳೆ ಅ ನಿರ್ಧಾರವನ್ನು ಪ್ರಶ್ನಿಸಿ ಅನುಮತಿ ನೀಡಿದರೆ ಅದು ಅವ್ಯವಸ್ಥೆಗೆ ಕಾರಣವಾಗುತ್ತದೆ.

    ಜಮ್ಮು ಮತ್ತು ಕಾಶ್ಮೀರದ ಸಂವಿಧಾನಕ್ಕಿಂತಲೂ ಭಾರತದ ಸಂವಿಧಾನ ಮೇಲಿದೆ. 370ನೇ ವಿಧಿಯ ಅಡಿ ನೀಡಲಾದ ವಿಶೇಷ ಸ್ಥಾನಮಾನ ತಾತ್ಕಾಲಿಕ. ಇದು ಶಾಶ್ವತವಲ್ಲ. ಅಂದಿನ ಪರಿಸ್ಥಿತಿಯನ್ನು ಪರಿಗಣಿಸಿ ಈ ವಿಶೇಷ ಸ್ಥಾನ ನೀಡಲಾಗಿದೆ.

    ಜಮ್ಮು ಕಾಶ್ಮೀರಕ್ಕೆ ಭಾರತದ ಸಂವಿಧಾನದ ಅಡಿಯಲ್ಲೇ ವಿಶೇಷ ಸ್ಥಾನ ಮಾನ ನೀಡಿದ್ದರಿಂದ ಇದು ಭಾರತದ ಅವಿಭಾಜ್ಯ ಅಂಗ.

    356 ನೇ ವಿಧಿಯಡಿ ಘೋಷಣೆಯ ಸಮಯದಲ್ಲಿ ಕೇಂದ್ರವು ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂಬ ಅರ್ಜಿದಾರರ ವಾದ ಒಪ್ಪಲು ಸಾಧ್ಯವಿಲ್ಲ. ರಾಷ್ಟ್ರಪತಿ ಆಳ್ವಿಕೆಯ ಸಮಯದದಲ್ಲಿ ಕೇಂದ್ರವು  ರಾಜ್ಯದ ಶಾಸಕಾಂಗದ ಅಧಿಕಾರವನ್ನು ಚಲಾಯಿಸಬಹುದು.

    ಜಮ್ಮು ಮತ್ತು ಕಾಶ್ಮೀರದ ಸಂವಿಧಾನ ಸಭೆಯು ಅಸ್ತಿತ್ವದಲ್ಲಿಲ್ಲದಿರುವಾಗ, 370 ನೇ ವಿಧಿಯ ವಿಶೇಷ ಷರತ್ತು ಅಸ್ತಿತ್ವದಲ್ಲಿರುವುದಿಲ್ಲ. ಸಂವಿಧಾನ ರಚನಾ ಸಭೆಯು ಜಮ್ಮು ಮತ್ತು ಕಾಶ್ಮೀರವನ್ನು ಎಂದಿಗೂ ಶಾಶ್ವತ ಸಂಸ್ಥೆಯಾಗಲು ಉದ್ದೇಶಿಸಿರಲಿಲ್ಲ.

    ಜಮ್ಮು ಕಾಶ್ಮೀರ ಭಾರತದೊಂದಿಗೆ ವಿಲೀನಗೊಂಡಾಗ ತನ್ನ ಸಂಪೂರ್ಣ ಸಾರ್ವಭೌಮತ್ವವನ್ನು ಒಪ್ಪಿತ್ತು. ಭಾರತಕ್ಕೆ ಸೇರಿದ ನಂತರ ಅದರ ಪ್ರತ್ಯೇಕ ಸಾರ್ವಭೌಮತ್ವ ಉಳಿಯುವುದಿಲ್ಲ.

    ಲಡಾಖ್‌ ಅನ್ನು ಕೇಂದ್ರಾಡಳಿತ ಪ್ರದೇಶವಾಗಿ ಮಾಡಲಾದ ನಿರ್ಧಾರ ಸರಿಯಾಗಿದೆ.  ಕೇಂದ್ರ ಚುನಾವಣಾ ಆಯೋಗ 2024ರ ಸೆಪ್ಟೆಂಬರ್‌ 30ರ ಒಳಗಡೆ ಜಮ್ಮು ಕಾಶ್ಮೀರ ವಿಧಾನಸಭೆಗೆ ಚುನಾವಣೆ ನಡೆಸಬೇಕು.

  • ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು – ಕೇಂದ್ರದ ನಿರ್ಧಾರವನ್ನು ಎತ್ತಿ ಹಿಡಿದ ಸುಪ್ರೀಂ

    ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು – ಕೇಂದ್ರದ ನಿರ್ಧಾರವನ್ನು ಎತ್ತಿ ಹಿಡಿದ ಸುಪ್ರೀಂ

    ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ (Jammu Kashmir) ಸಂವಿಧಾನದ 370ನೇ ವಿಧಿಯ (Article 370) ಅಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು (Special Status) ರದ್ದು ಪಡಿಸಿದ ಕೇಂದ್ರ ಸರ್ಕಾರ ನಿರ್ಧಾರ ಸರಿಯಾಗಿದೆ ಎಂದು ಸುಪ್ರೀಂಕೋರ್ಟ್‌ (Supreme Court) ಐತಿಹಾಸಿಕ ತೀರ್ಪು ನೀಡಿದೆ. ಅಷ್ಟೇ ಅಲ್ಲದೇ 2024ರ ಸೆಪ್ಟೆಂಬರ್‌ 30ರ ಒಳಗಡೆ ಒಳಗಡೆ ವಿಧಾನಸಭಾ ಚುನಾವಣೆ ನಡೆಸಬೇಕೆಂದು ಚುನಾವಣಾ ಆಯೋಗಕ್ಕೆ ಸೂಚಿಸಿದೆ.

    ವಿಶೇಷ ಸ್ಥಾನವನ್ನು ರದ್ದು ಪಡಿಸಿದ ಕೇಂದ್ರ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ಮುಕ್ತಾಯಗೊಳಿಸಿದ್ದ  ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿಆರ್ ಗವಾಯಿ ಮತ್ತು ಸೂರ್ಯಕಾಂತ್ ಅವರನ್ನೊಳಗೊಂಡ ಐದು ನ್ಯಾಯಾಧೀಶರ ಸಂವಿಧಾನ ಪೀಠದಿಂದ ಸರ್ವಾನುಮತದ ತೀರ್ಪು ಪ್ರಕಟವಾಗಿದೆ.

    ತೀರ್ಪು ಓದಿದ ಸಿಜೆಐ ಚಂದ್ರಚೂಡ್‌ ಅವರು, ಜಮ್ಮು ಕಾಶ್ಮೀರಕ್ಕೆ ನೀಡಲಾದ ವಿಶೇಷ ಸ್ಥಾನಮಾನ ತಾತ್ಕಾಲಿಕ. ಭಾರತದ ಸಂವಿಧಾನದ 1 ಮತ್ತು 370 ನೇ ವಿಧಿಗಳಿಂದ ಸ್ಪಷ್ಟವಾದಂತೆ ಜಮ್ಮು ಮತ್ತು ಕಾಶ್ಮೀರವು ಭಾರತದ ಅವಿಭಾಜ್ಯ ಅಂಗವಾಗಿದೆ. ರಾಜ್ಯದಲ್ಲಿನ ಯುದ್ಧದ ಪರಿಸ್ಥಿತಿಯಿಂದಾಗಿ ಆರ್ಟಿಕಲ್ 370 ವಿಧಿಸಿದ್ದು ಮಧ್ಯಂತರ ವ್ಯವಸ್ಥೆಯಾಗಿದೆ. ರಾಷ್ಟ್ರಪತಿಗಳು ರದ್ದು ಪಡಿಸಿದ ಆದೇಶ ಸರಿಯಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

     

    2019ರ ಆಗಸ್ಟ್‌ 6 ರಂದು ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರ ಲಡಾಖ್, ಜಮ್ಮು ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಹಲವು ಮಂದಿ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಿದ್ದರು.

    ಆಗಸ್ಟ್‌ನಲ್ಲಿ ಆರಂಭವಾದ 16 ದಿನಗಳ ಮ್ಯಾರಥಾನ್ ವಿಚಾರಣೆಯ ಬಳಿಕ ಪೀಠವು ಸೆಪ್ಟೆಂಬರ್ 5 ರಂದು ತನ್ನ ಆದೇಶವನ್ನು ಕಾಯ್ದಿರಿಸಿತ್ತು. ಆರ್ಟಿಕಲ್ 370, ಆರ್ಟಿಕಲ್ 35A ಭಾರತದ ಸಂವಿಧಾನದ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿತ್ತು.  ಇದು ಪ್ರತ್ಯೇಕ ಸಂವಿಧಾನ ಮತ್ತು ಇತರ ಕಾನೂನು ವ್ಯತ್ಯಾಸಗಳ ನಡುವೆ ಪ್ರತ್ಯೇಕ ದಂಡ ಸಂಹಿತೆಯನ್ನು ಹೊಂದಲು ಅನುವು ಮಾಡಿಕೊಡುತ್ತದೆ. ಇದನ್ನು ಕೇಂದ್ರ ಸರ್ಕಾರ ರದ್ದು ಮಾಡಿದ್ದು ಕಾನೂನು ಉಲ್ಲಂಘನೆ ಎಂದು ಅರ್ಜಿದಾರರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

    ಅರ್ಜಿದಾರರಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ನಾಯಕರು ಸೇರಿದ್ದಾರೆ. ವಿಚಾರಣೆಯ ವೇಳೆ, ಕೇಂದ್ರವು ತನ್ನ ಲಾಭಕ್ಕಾಗಿ ಎಲ್ಲವನ್ನೂ ಮಾಡುತ್ತಿದೆ ಮತ್ತು ನೆಲದ ನಿಯಮಕ್ಕೆ ಬದ್ಧವಾಗಿಲ್ಲ ಎಂದು ಅರ್ಜಿದಾರರು ಆರೋಪಿಸಿದರು.

    ಸುಪ್ರೀಂಕೋರ್ಟ್ ಆದೇಶದ ಹಿನ್ನಲೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತೆಯನ್ನು ಹೆಚ್ಚಿಸಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತಾ ಪಡೆಗಳನ್ನು ಹೆಚ್ಚುವರಿಯಾಗಿ ನಿಯೋಜಿಸಿದೆ.

  • ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು – ಇಂದು ಸುಪ್ರೀಂನಿಂದ ತೀರ್ಪು

    ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು – ಇಂದು ಸುಪ್ರೀಂನಿಂದ ತೀರ್ಪು

    ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ (Jammu Kashmir) ಸಂವಿಧಾನದ 370ನೇ ವಿಧಿಯ (Article 370) ಅಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು (Special Status) ರದ್ದು ಪಡಿಸಿದ ಕೇಂದ್ರ ಸರ್ಕಾರ ನಿರ್ಧಾರ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ಮುಕ್ತಾಯಗೊಳಿಸಿರುವ ಸುಪ್ರೀಂಕೋರ್ಟ್ (Supreme Court) ಇಂದು ತೀರ್ಪು ನೀಡಲಿದೆ.

    ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿಆರ್ ಗವಾಯಿ ಮತ್ತು ಸೂರ್ಯಕಾಂತ್ ಅವರನ್ನೊಳಗೊಂಡ ಐದು ನ್ಯಾಯಾಧೀಶರ ಸಂವಿಧಾನ ಪೀಠವು ತೀರ್ಪು ಪ್ರಕಟಿಸಲಿದೆ.

    ಆಗಸ್ಟ್‌ನಲ್ಲಿ ಆರಂಭವಾದ 16 ದಿನಗಳ ಮ್ಯಾರಥಾನ್ ವಿಚಾರಣೆಯ ಬಳಿಕ ಪೀಠವು ಸೆಪ್ಟೆಂಬರ್ 5 ರಂದು ತನ್ನ ಆದೇಶವನ್ನು ಕಾಯ್ದಿರಿಸಿತ್ತು. ಆರ್ಟಿಕಲ್ 370, ಆರ್ಟಿಕಲ್ 35A ಭಾರತದ ಸಂವಿಧಾನದ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿತ್ತು.  ಇದನ್ನೂ ಓದಿ: ಛತ್ತೀಸ್‌ಗಢದ ನೂತನ ಮುಖ್ಯಮಂತ್ರಿಯಾಗಿ ವಿಷ್ಣು ದೇವ್ ಆಯ್ಕೆ – ʼಮೋದಿ ಕಿ ಗ್ಯಾರಂಟಿʼ ಈಡೇರಿಸೋ ಭರವಸೆ

    ಇದು ಪ್ರತ್ಯೇಕ ಸಂವಿಧಾನ ಮತ್ತು ಇತರ ಕಾನೂನು ವ್ಯತ್ಯಾಸಗಳ ನಡುವೆ ಪ್ರತ್ಯೇಕ ದಂಡ ಸಂಹಿತೆಯನ್ನು ಹೊಂದಲು ಅನುವು ಮಾಡಿಕೊಡುತ್ತದೆ. ಇದನ್ನು ಕೇಂದ್ರ ಸರ್ಕಾರ ರದ್ದು ಮಾಡಿದ್ದು ಕಾನೂನು ಉಲ್ಲಂಘನೆ ಎಂದು ಅರ್ಜಿದಾರರು ವಾದಿಸಿದ್ದರು.

    ಅರ್ಜಿದಾರರಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ನಾಯಕರು ಸೇರಿದ್ದಾರೆ. ವಿಚಾರಣೆಯ ವೇಳೆ, ಕೇಂದ್ರವು ತನ್ನ ಲಾಭಕ್ಕಾಗಿ ಎಲ್ಲವನ್ನೂ ಮಾಡುತ್ತಿದೆ ಮತ್ತು ನೆಲದ ನಿಯಮಕ್ಕೆ ಬದ್ಧವಾಗಿಲ್ಲ ಎಂದು ಅರ್ಜಿದಾರರು ಆರೋಪಿಸಿದ್ದರು. ವಾದ, ಪ್ರತಿ ವಾದ ಕೇಳಿದ್ದ ಸುಪ್ರೀಂಕೋರ್ಟ್ ಆರ್ಟಿಕಲ್ 370 ರದ್ದು ಮಾಡಿದ ನಿರ್ಧಾರ ಸರಿಯೇ? ತಪ್ಪೇ ಇಂದು ತನ್ನ ಆದೇಶದಲ್ಲಿ ತಿಳಿಸಲಿದೆ.

    ಬಿಗಿ ಭದ್ರತೆ: ಸುಪ್ರೀಂಕೋರ್ಟ್ ಆದೇಶದ ಹಿನ್ನಲೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತೆಯನ್ನು ಹೆಚ್ಚಿಸಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತಾ ಪಡೆಗಳನ್ನು ಹೆಚ್ಚುವರಿಯಾಗಿ ನಿಯೋಜಿಸಿದೆ.

    ಈ ಸಂಬಂಧ ಕಳೆದ ಎರಡು ವಾರಗಳಲ್ಲಿ 10 ಕಣಿವೆ ಜಿಲ್ಲೆಗಳಲ್ಲಿ ಭದ್ರತಾ ಪರಿಶೀಲನಾ ಸಭೆಗಳನ್ನು ನಡೆಸಲಾಗಿದೆ. ಡಿಸೆಂಬರ್ 7 ರಂದು ಕಾಶ್ಮೀರದ ಅಧಿಕಾರಿಗಳು ಸಾಮಾಜಿಕ ಮಾಧ್ಯಮ ಬಳಕೆದಾರರಿಗೆ ಐಪಿಸಿ ಸೆಕ್ಷನ್‌ 144 ರ ಅಡಿಯಲ್ಲಿ ಕೋಮು ದ್ವೇಷವನ್ನು ಹರಡಬಹುದಾದ ವಿಷಯದ ಹರಡುವಿಕೆಯನ್ನು ಒಳಗೊಂಡಿರುವ ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ.

    ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಭಯೋತ್ಪಾದನೆ, ಪ್ರತ್ಯೇಕತಾವಾದ, ಬೆದರಿಕೆಗಳು, ಬೆದರಿಕೆ ಅಥವಾ ಕೋಮು ಸೂಕ್ಷ್ಮ ವಿಷಯಗಳಿಗೆ ಸಂಬಂಧಿಸಿದ ವಿಷಯವನ್ನು ಎದುರಿಸುವಾಗ ನಾಗರಿಕರು ತೆಗೆದುಕೊಳ್ಳಬೇಕಾದ ಕ್ರಮಗಳನ್ನು ತಿಳಿಸಲಾಗಿದೆ.