Tag: jammu kashmir

  • ಜಮ್ಮುಕಾಶ್ಮೀರದ ಕುಪ್ವಾರಾದಲ್ಲಿ ಮೇಘಸ್ಫೋಟ – 5 ದಿನಗಳಲ್ಲಿ 3ನೇ ದುರಂತ

    ಜಮ್ಮುಕಾಶ್ಮೀರದ ಕುಪ್ವಾರಾದಲ್ಲಿ ಮೇಘಸ್ಫೋಟ – 5 ದಿನಗಳಲ್ಲಿ 3ನೇ ದುರಂತ

    – ನಿನ್ನೆ ಕಥುವಾದಲ್ಲಿ ಮೇಘಸ್ಫೋಟದಿಂದ 7 ಮಂದಿ ಸಾವು

    ಶ್ರೀನಗರ: ಕಿಶ್ತ್ವಾರ, ಕಥುವಾ ಬಳಿಕ ಈಗ ಜಮ್ಮು ಮತ್ತು ಕಾಶ್ಮೀರದ (Jammu Kashmir) ಕುಪ್ವಾರಾ ಜಿಲ್ಲೆಯಲ್ಲಿ ಮೇಘಸ್ಫೋಟದಿಂದ (Kupwara Cloudburst) ಹಠಾತ್‌ ಪ್ರವಾಹ ಸಂಭವಿಸಿದೆ. 5 ದಿನಗಳಲ್ಲಿ ಇದು 3ನೇ ದುರಂತವಾಗಿದೆ.

    ಉತ್ತರ ಕಾಶ್ಮೀರದ ಕುಪ್ವಾರಾದ ವಾರ್ನೋ ಅರಣ್ಯ ಪ್ರದೇಶದಲ್ಲಿ ಮೇಘಸ್ಫೋಟದಿಂದ ಹಠಾತ್‌ ಪ್ರವಾಹ (Flash Floods) ಸಂಭವಿಸಿದೆ. ಅದೃಷ್ಟವಶಾತ್‌ ಈವರೆಗೆ ಯಾವುದೇ ಪ್ರಾಣಹಾನಿ, ಆಸ್ತಿಪಾಸ್ತಿ ಹಾನಿಯಾಗಲಿ ಸಂಭವಿಸಿಲ್ಲ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ರಣ ಮಳೆಗೆ ನಡುಗಿದ ಮುಂಬೈ – ಹಲವೆಡೆ ಟ್ರಾಫಿಕ್‌ ಜಾಮ್‌, ಶಾಲಾ-ಕಾಲೇಜುಗಳಿಗೆ ರಜೆ, ರೆಡ್‌ ಅಲರ್ಟ್‌ ಘೋಷಣೆ

    Kathua Cloudburst 2

    ಕಥುವಾದಲ್ಲಿ 7 ಮಂದಿ ಸಾವು
    ಇನ್ನೂ ಒಂದು ದಿನದ ಹಿಂದಷ್ಟೇ ಕಥುವಾ (Kathua) ಜಿಲ್ಲೆಯ ಜಂಗ್ಲೋಟ್‌ ಹಳ್ಳಿಯಲ್ಲಿ ಸಂಭವಿಸಿದ ಮೇಘಸ್ಫೋಟದಿಂದ ಐವರು ಮಕ್ಕಳು ಸೇರಿ 7 ಮಂದಿ ಸಾವನ್ನಪ್ಪಿದ್ದಾರೆ. 9ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಜಮ್ಮು ಕಾಶ್ಮೀರ | ಕಥುವಾದಲ್ಲಿ ಮೇಘಸ್ಫೋಟದಿಂದ ಹಠಾತ್‌ ಪ್ರವಾಹ – ನಾಲ್ವರು ಸಾವು

    ಇದಕ್ಕೂ ಮುನ್ನ ಕಳೆದ ಗುರುವಾರ ಜಮ್ಮು ಕಾಶ್ಮೀರದ ಕಿಶ್ತ್ವಾರ ಜಿಲ್ಲೆಯ ಚಶೋತಿ ಗ್ರಾಮದಲ್ಲಿ ಉಂಟಾದ ಮೇಘಸ್ಫೋಟದಿಂದ 65 ಮಂದಿ ಸಾವನ್ನಪ್ಪಿದ್ದು 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸದ್ಯ ನಾಪತ್ತೆಯಾದವರಿಗಾಗಿ ಕಳೆದ 5 ದಿನಗಳಿಂದಲೂ ಇಲ್ಲಿ ಶೋಧಕಾರ್ಯ ನಡೆಯುತ್ತಿದೆ. ಈ ಹೊತ್ತಿನಲ್ಲೇ ಕುಪ್ವಾರಾದಲ್ಲಿ ಮೇಘಸ್ಫೋಟ ಸಂಭವಿಸಿದೆ.  ಇದನ್ನೂ ಓದಿ: Video Viral | ಯೋಧನನ್ನ ಕಂಬಕ್ಕೆ ಕಟ್ಟಿ ಟೋಲ್ ಪ್ಲಾಜಾ ಸಿಬ್ಬಂದಿಯಿಂದ ಥಳಿತ; ನಾಲ್ವರು ಅರೆಸ್ಟ್‌

  • ಜಮ್ಮು ಕಾಶ್ಮೀರ | ಕಥುವಾದಲ್ಲಿ ಮೇಘಸ್ಫೋಟದಿಂದ ಹಠಾತ್‌ ಪ್ರವಾಹ – ನಾಲ್ವರು ಸಾವು

    ಜಮ್ಮು ಕಾಶ್ಮೀರ | ಕಥುವಾದಲ್ಲಿ ಮೇಘಸ್ಫೋಟದಿಂದ ಹಠಾತ್‌ ಪ್ರವಾಹ – ನಾಲ್ವರು ಸಾವು

    – ರೈಲು ಹಳಿ, ಹೆದ್ದಾರಿಗಳಿಗೆ ಭಾರೀ ಹಾನಿ
    – 4 ದಿನಗಳ ಅಂತರದಲ್ಲಿ 2 ಬಾರಿ ಮೇಘಸ್ಫೋಟ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಕಥುವಾ ಜಿಲ್ಲೆಯ ಜಂಗ್ಲೋಟ್‌ ಹಳ್ಳಿಯಲ್ಲಿ ಮೇಘಸ್ಫೋಟದಿಂದ (Kathua Cloudburst) ಉಂಟಾದ ಹಠಾತ್‌ ಪ್ರವಾಹದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಜಮ್ಮು ಕಾಶ್ಮೀರದ (Jammu Kashmir) ಕಿಶ್ತ್ವಾರ ಜಿಲ್ಲೆಯ ಚಶೋತಿಯಲ್ಲಿ ಉಂಟಾದ ಮೇಘಸ್ಫೋಟದಿಂದ ಜನ ಈಗಷ್ಟೇ ಚೇತರಿಸಿಕೊಳ್ಳುತ್ತಿದ್ದಾರೆ. ಚಶೋತಿ ಗ್ರಾಮದಲ್ಲಿ ನಾಲ್ಕು ದಿನಗಳ ಹಿಂದೆ ಉಂಟಾದ ಮೇಘಸ್ಫೋಟದಿಂದ 60 ಮಂದಿ ಸಾವನ್ನಪ್ಪಿದ್ದು 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸದ್ಯ ನಾಪತ್ತೆಯಾದವರಿಗಾಗಿ ಕಳೆದ ನಾಲ್ಕು ದಿನಗಳಿಂದಲೂ ಇಲ್ಲಿ ಶೋಧಕಾರ್ಯ ನಡೆಯುತ್ತಿದೆ. ಈ ಹೊತ್ತಿನಲ್ಲೇ ಕಥುವಾದಲ್ಲೂ ಪ್ರವಾಹ (Kathua Flood) ಸಂಭವಿಸಿದೆ. ಇದನ್ನೂ ಓದಿ: ಮಂಗಳೂರು-ಬೆಂಗಳೂರು ರೈಲು ಸಂಚಾರ ಮಾರ್ಗದಲ್ಲಿ ಗುಡ್ಡ ಕುಸಿತ – ರಾತ್ರಿಯಿಡೀ ತೆರವು ಕಾರ್ಯ

    ಈ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದ ಸಂಸದ ಹಾಗೂ ಕೇಂದ್ರ ಸಚಿವ ಜಿತೇಂದ್ರ ಸಿಂಗ್ (Jitendra Singh) ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ಮೇಘಸ್ಫೋಟದಿಂದ ರೈಲ್ವೆ ಹಳಿ, ರಾಷ್ಟ್ರೀಯ ಹೆದ್ದಾರಿ -44 ಮತ್ತು ಪೊಲೀಸ್ ಠಾಣೆಗೆ ಹಾನಿಯಾಗಿದೆ. ನಾಗರಿಕ ಆಡಳಿತ, ಮಿಲಿಟರಿ ಮತ್ತು ಅರೆಸೇನಾ ಪಡೆಗಳು ಕಾರ್ಯಪ್ರವೃತ್ತವಾಗಿವೆ. ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಎಕ್ಸ್‌ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ರಷ್ಯಾ-ಉಕ್ರೇನ್‌ ಯುದ್ಧ ನಿಲ್ಲಿಸಲು ಮುಂದಾದ ಟ್ರಂಪ್‌ಗೆ ಯುರೋಪಿಯನ್ ಒಕ್ಕೂಟ ಬೆಂಬಲ – ನಾಳೆಯ ಸಭೆ ಮೇಲೆ ನಿಗಾ

    ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸಹ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ಈ ಬೆನ್ನಲ್ಲೇ ಭಾರತೀಯ ಹವಾಮಾನ ಇಲಾಖೆ ಮೇಘಸ್ಫೋಟ ಸಂಭವಿಸಿದ ಪ್ರದೇಶದಲ್ಲಿ ಇನ್ನೂ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ದರ್ಶನ ಪರ ಅಖಾಡಕ್ಕಿಳಿದ ಪತ್ನಿ ವಿಜಯಲಕ್ಷ್ಮಿ – ಅಭಿಮಾನಿಗಳಿಗೆ ಕೊಟ್ಟ ಸಂದೇಶ ಏನು?

  • ಕಾಶ್ಮೀರದಲ್ಲಿ ಮೇಘಸ್ಫೋಟ | ದುರಂತ ನಡೆದಾಗ ಸ್ಥಳದಲ್ಲಿ 1,200 ಜನ ಇದ್ದರು: ಬಿಜೆಪಿ ಶಾಸಕ ಬಾಂಬ್‌

    ಕಾಶ್ಮೀರದಲ್ಲಿ ಮೇಘಸ್ಫೋಟ | ದುರಂತ ನಡೆದಾಗ ಸ್ಥಳದಲ್ಲಿ 1,200 ಜನ ಇದ್ದರು: ಬಿಜೆಪಿ ಶಾಸಕ ಬಾಂಬ್‌

    – ಈವರೆಗೆ ಸಾವಿನ ಸಂಖ್ಯೆ 60ಕ್ಕೆ ಏರಿಕೆ, 100ಕ್ಕೂ ಅಧಿಕ ಜನರಿಗೆ ಗಾಯ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ ಜಿಲ್ಲೆಯ ಚಶೋತಿಯಲ್ಲಿ ಮೇಘಸ್ಫೋಟದ (Kishtwar cloudburst) ಬಳಿಕ ಸತತ ಮೂರನೇ ದಿನವಾದ ಇಂದು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ಮುಂದುವರೆದಿದೆ. ಗ್ರಾಮದಲ್ಲಿ 60 ಜನರು ಪ್ರಾಣ ಕಳೆದುಕೊಂಡಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಈ ನಡುವೆ

    ಜಮ್ಮು ಮತ್ತು ಕಾಶ್ಮೀರ (Jammu Kashmir) ವಿಧಾನಸಭೆಯ ವಿಪಕ್ಷ ನಾಯಕ ಸುನಿಲ್ ಶರ್ಮಾ, ಮೇಘಸ್ಫೋಟ ಸಂಭವಿಸಿದ ಸ್ಥಳದಲ್ಲಿ ಸುಮಾರು 1200 ಜನರು ಹಾಜರಿದ್ದರು ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಅನಾಮಿಕ ಹೇಳಿದ ಎಲ್ಲಾ ಕಡೆ ಭೂಮಿ ಅಗೆದ್ರೂ ಖಾಲಿ ಖಾಲಿ – ಉತ್ಖನನ ನಿಲ್ಲಿಸಲು ಎಸ್‌ಐಟಿ ನಿರ್ಧಾರ?

    ಕೇಂದ್ರ ಸಚಿವ ಜಿತೇಂದ್ರ ಸಿಂಗ್, ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ (DGP) ನಳಿನ್ ಪ್ರಭಾತ್ ಅವರೊಂದಿಗೆ ಶುಕ್ರವಾರ ತಡರಾತ್ರಿ ಧ್ವಂಸಗೊಂಡ ಗ್ರಾಮಕ್ಕೆ ಭೇಟಿ ನೀಡಿ, ಪೊಲೀಸರು, ಸೇನೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF), ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF), ಗಡಿ ರಸ್ತೆ ಸಂಸ್ಥೆ (BRO), ನಾಗರಿಕ ಆಡಳಿತ ಮತ್ತು ಎತ್ತರದ ಪ್ರದೇಶಗಳಲ್ಲಿ ಕೆಲಸ ಮಾಡುತ್ತಿರುವ ಸ್ಥಳೀಯ ಸ್ವಯಂಸೇವಕರು ನಡೆಸುತ್ತಿರುವ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಪರಿಶೀಲಿಸಿದರು. ಇದನ್ನೂ ಓದಿ: ಮುಂಬೈನಲ್ಲಿ ಭಾರೀ ಮಳೆಯಿಂದ ಭೂಕುಸಿತ – ಇಬ್ಬರು ಸಾವು, ಇಂದು ರೆಡ್ ಅಲರ್ಟ್ ಘೋಷಣೆ

    ಈವರೆಗೂ 46 ಶವಗಳನ್ನು ಗುರುತಿಸಲಾಗಿದೆ ಮತ್ತು ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ. 75 ಜನರು ಕಾಣೆಯಾಗಿದ್ದಾರೆ ಎಂದು ಅವರ ಕುಟುಂಬಗಳು ವರದಿ ಮಾಡಿವೆ. ಅಲ್ಲದೇ 84 ಮಂದಿಯನ್ನ ಸ್ಥಳಾಂತರಿಸಲಾಗಿದೆ. ಆದ್ರೆ ಸ್ಥಳೀಯರು ಮತ್ತು ಪ್ರತ್ಯಕ್ಷದರ್ಶಿಗಳು ನೂರಾರು ಜನರು ಹಠಾತ್ ಪ್ರವಾಹದಲ್ಲಿ ಕೊಚ್ಚಿಹೋಗಿ ಬೃಹತ್ ಬಂಡೆಗಳು, ದಿಮ್ಮಿಗಳು ಮತ್ತು ಭಗ್ನಾವಶೇಷಗಳ ಅಡಿಯಲ್ಲಿ ಹೂತುಹೋಗಿರಬಹುದು ಎಂದು ಹೇಳುತ್ತಿದ್ದಾರೆ.

    Jammu and Kashmir 2

    ಮೃತರಲ್ಲಿ ಇಬ್ಬರು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಸಿಬ್ಬಂದಿ ಮತ್ತು ಸ್ಥಳೀಯ ಪೊಲೀಸರ ವಿಶೇಷ ಪೊಲೀಸ್ ಅಧಿಕಾರಿ (SPO) ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಗಸ್ಟ್ 14 ರಂದು ಮಧ್ಯಾಹ್ನ 12:25 ರ ಸುಮಾರಿಗೆ ಮಚೈಲ್ ಮಾತಾ ದೇವಸ್ಥಾನಕ್ಕೆ ಹೋಗುವ ದಾರಿಯಲ್ಲಿರುವ ಕೊನೆಯ ಹಳ್ಳಿಯಾದ ಚಶೋತಿಯಲ್ಲಿ ಈ ದುರಂತ ಸಂಭವಿಸಿದೆ. ಇದನ್ನೂ ಓದಿ: ಉಕ್ರೇನ್‌ ಜೊತೆಗಿನ ಯುದ್ಧ ಕೊನೆಗೊಳಿಸದ ಹೊರತು ನಮ್ಮ ನಡ್ವೆ ಒಪ್ಪಂದವಿಲ್ಲ – ಪುಟಿನ್‌ಗೆ ಟ್ರಂಪ್‌ ಸ್ಟ್ರೈಟ್‌ ಹಿಟ್‌

    ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಶುಕ್ರವಾರ ಸಂಜೆ ಕಿಶ್ತ್ವಾರ್ ತಲುಪಿದರು. ವಿಪತ್ತು ಪೀಡಿತ ಚಶೋತಿ ಗ್ರಾಮಕ್ಕೆ ಸಿಎಂ ಭೇಟಿ ನೀಡಿದರು. ಆ ಪ್ರದೇಶದಲ್ಲಿ ಉಂಟಾದ ಹಾನಿಯನ್ನು ಸಹ ಅವರು ಪರಿಶೀಲಿಸಿದರು. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸಾಧ್ಯವಿರುವ ಎಲ್ಲ ಸಹಾಯದ ಭರವಸೆ ನೀಡಿದ್ದಾರೆ ಎಂದು ಅಬ್ದುಲ್ಲಾ ಹೇಳಿದರು.

  • ಜಮ್ಮು ಕಾಶ್ಮೀರದಲ್ಲಿ ಮೇಘಸ್ಫೋಟ – ಸಾವಿನ ಸಂಖ್ಯೆ 40ಕ್ಕೆ ಏರಿಕೆ, 220 ಮಂದಿ ಮಿಸ್ಸಿಂಗ್‌

    ಜಮ್ಮು ಕಾಶ್ಮೀರದಲ್ಲಿ ಮೇಘಸ್ಫೋಟ – ಸಾವಿನ ಸಂಖ್ಯೆ 40ಕ್ಕೆ ಏರಿಕೆ, 220 ಮಂದಿ ಮಿಸ್ಸಿಂಗ್‌

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಚಶೋತಿ (Chashoti) ಪ್ರದೇಶದಲ್ಲಿಂದು ಸಂಭವಿಸಿದ ಮೇಘಸ್ಫೋಟದಿಂದ (Massive Cloudburst) ಪ್ರವಾಹ ಉಂಟಾಗಿ ಮೃತಪಟ್ಟವರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.

    ಈವರೆಗೆ ಇಬ್ಬರು CISF ಜವಾನರು ಸೇರಿ ಒಟ್ಟು 40 ಮಂದಿ ಸಾವನ್ನಪ್ಪಿದ್ದರೆ, 120ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. 220 ಮಂದಿ ನಾಪತ್ತೆಯಾಗಿದ್ದು, ರಕ್ಷಣಾ ತಂಡಗಳು ಹುಡುಕಾಟ ನಡೆಸುತ್ತಿವೆ. ಇದನ್ನೂ ಓದಿ: ಆಪರೇಷನ್ ಸಿಂಧೂರದಲ್ಲಿ ಅಪ್ರತಿಮ ಸಾಹಸ ಪ್ರದರ್ಶನ – 16 BSF ಯೋಧರಿಗೆ ಶೌರ್ಯ ಪದಕ

    ಕಿಶ್ತ್ವಾರದ ಚಶೋತಿಯಲ್ಲಿರುವ ಮಚೈಲ್ ಮಾತಾ ಯಾತ್ರೆಯ ಮಾರ್ಗದಲ್ಲಿ ಈ ದುರಂತ ಸಂಭವಿಸಿದ್ದು, ಭಕ್ತರು ತೀರ್ಥಯಾತ್ರೆ ಕೈಗೊಳ್ಳುವ ಹಾದಿ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಸದ್ಯ ರಕ್ಷಣಾ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಬದುಕುಳಿದವರ ರಕ್ಷಣೆಗಾಗಿ ಶೋಧ ನಡೆಸುತ್ತಿವೆ. ಯಾತ್ರಿಕರನ್ನ ಸ್ಥಳಾಂತರ ಮಾಡುತ್ತಿದ್ದು, ಮತ್ತೊಂದೆಡೆ ಮೃತಪಟ್ಟವರ ಮೃತದೇಹಗಳನ್ನೂ ಹೊರತೆಗೆಯಲಾಗುತ್ತಿದೆ. ಮೇಘಸ್ಫೋಟ ಪೀಡಿತ ಪ್ರದೇಶಕ್ಕೆ ಎರಡು ತಂಡಗಳನ್ನು ರವಾನಿಸಲಾಗಿದೆ ಎಂದು ಎನ್‌ಡಿಆರ್‌ಎಫ್‌ (NDRF) ತಿಳಿಸಿದೆ. ಇದನ್ನೂ ಓದಿ: ವೋಟ್ ಚೋರಿಯಂತಹ ಕೊಳಕು ನುಡಿಗಟ್ಟುಗಳನ್ನು ಬಳಸಬೇಡಿ, ಪುರಾವೆ ನೀಡಿ: ಚುನಾವಣಾ ಆಯೋಗ

    ಜಮ್ಮು ಮತ್ತು ಕಾಶ್ಮೀರದ ಉಧಂಪುರ್‌ನ ಸಂಸದರೂ ಆಗಿರುವ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಮಾತನಾಡಿ, ಮೇಘಸ್ಫೋಟವು ಭಾರೀ ಪ್ರಮಾಣದಲ್ಲಿ ಸಂಭವಿಸಿದೆ. ಶೀಘ್ರದಲ್ಲೇ ನಮಗೆ ಹೆಚ್ಚಿನ ವಿವರಗಳು ತಿಳಿಯಲಿವೆ. ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುವುದು. ವೈದ್ಯಕೀಯ ಚಿಕಿತ್ಸೆಗಾಗಿ ಆಡಳಿತವು ಹೆಲಿ-ರಕ್ಷಣಾ ವ್ಯವಸ್ಥೆಗಳನ್ನು ಸಹ ಮಾಡುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಅತ್ಯುತ್ತಮ ಸೇವೆ – ಪೊಲೀಸ್‌, ಅಗ್ನಿಶಾಮಕ ಸಿಬ್ಬಂದಿ ಸೇರಿ ರಾಜ್ಯದ 19 ಮಂದಿಗೆ ರಾಷ್ಟ್ರಪತಿ ಪದಕ

    ಸ್ವಾತಂತ್ರ್ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳು ರದ್ದು
    ದುರಂತ ನೆನೆದು ಮೃತರಿಗೆ ಜಮ್ಮು ಮತ್ತು ಕಾಶ್ಮೀರ ಸಿಎಂ ಒಮರ್‌ ಅಬ್ದುಲ್ಲಾ ಸಂತಾಪ ಸೂಚಿಸಿದ್ದಾರೆ. ಅಲ್ಲದೇ ಕಿಶ್ತ್ವಾರ್‌ನಲ್ಲಿ ಮೇಘಸ್ಫೋಟದಿಂದ ಉಂಟಾದ ದುರಂತದ ಹಿನ್ನೆಲೆಯಲ್ಲಿ, ನಾಳೆ ಸಂಜೆ ʻಅಟ್ ಹೋಮ್ʼ ಟೀ ಪಾರ್ಟಿಯನ್ನ ರದ್ದುಗೊಳಿಸಿರುವುದಾಗಿ ತಿಳಿಸಿದ್ದಾರೆ. ಬೆಳಗಿನ ಸ್ವಾತಂತ್ರ್ಯ ದಿನಾಚರಣೆಯ ಸಮಯದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ಮುಂದುವರಿಸದಿರಲು ನಿರ್ಧರಿಸಿದ್ದು. ಔಪಚಾರಿಕ ಕಾರ್ಯಕ್ರಮಗಳನ್ನು ಮಾತ್ರ ನಡೆಸಲು ನಿರ್ಧರಿಸಿದ್ದೇವೆ. ಭಾಷಣ, ಮೆರವಣಿಗೆ ಇತ್ಯಾದಿಗಳು ನಿಗದಿಪಡಿಸಿದಂತೆ ನಡೆಯಲಿವೆ ಎಂದು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

  • ಎಲ್‌ಓಸಿಯಲ್ಲಿ ಪಾಕ್ ಒಳನುಸುಳುಕೋರರ ತಡೆದ ಸೇನೆ; ಗುಂಡಿನ ಚಕಮಕಿಯಲ್ಲಿ ಓರ್ವ ಸೈನಿಕ ಹುತಾತ್ಮ

    ಎಲ್‌ಓಸಿಯಲ್ಲಿ ಪಾಕ್ ಒಳನುಸುಳುಕೋರರ ತಡೆದ ಸೇನೆ; ಗುಂಡಿನ ಚಕಮಕಿಯಲ್ಲಿ ಓರ್ವ ಸೈನಿಕ ಹುತಾತ್ಮ

    – ಸ್ವಾತಂತ್ರ್ಯ ದಿನಾಚರಣೆ ಹೊತ್ತಲ್ಲೇ ಗಡಿಯಲ್ಲಿ ಒಳನುಸುಳಲು ಉಗ್ರರ ಯತ್ನ

    ಶ್ರೀನಗರ: ಜಮ್ಮು- ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿಯ ಚುರುಂಡಾ ಪ್ರದೇಶದಲ್ಲಿ ಭಯೋತ್ಪಾದಕರ ಒಳನುಸುಳುವಿಕೆ ಪ್ರಯತ್ನವನ್ನು ಭಾರತೀಯ ಸೇನಾ ಪಡೆಗಳು ವಿಫಲಗೊಳಿಸಿವೆ. ಈ ವೇಳೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಒಬ್ಬ ಸೈನಿಕ ಹುತಾತ್ಮನಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ದಾಳಿಕೋರರನ್ನು ಪತ್ತೆಹಚ್ಚಲು ಪ್ರದೇಶದಲ್ಲಿ ಒಳನುಸುಳುವಿಕೆ ನಿಗ್ರಹ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಗುಂಡಿನ ಚಕಮಕಿ ನಡೆಯುತ್ತಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. ಇದನ್ನೂ ಓದಿ: ಹರ್ ಘರ್ ತಿರಂಗ ಅಭಿಯಾನ – ಮನೆಯ ಮೇಲೆ ಧ್ವಜಾರೋಹಣ ಮಾಡಿದ ಅಮಿತ್ ಶಾ

    ಆ.11 ರಂದು, ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿಯ ಬಳಿ ಅನುಮಾನಾಸ್ಪದ ಚಲನವಲನಗಳನ್ನು ಗಮನಿಸಿ ಬಿಎಸ್‌ಎಫ್ ಸಿಬ್ಬಂದಿ ಗುಂಡು ಹಾರಿಸಿದ ನಂತರ ಗಾಯಗೊಂಡ ಪಾಕಿಸ್ತಾನಿ ಒಳ ನುಸುಳುಕೋರರನ್ನು ಬಂಧಿಸಲಾಗಿತ್ತು.

    ಹಿರಾನಗರ ವಲಯದ ಚಂದ್ವಾನ್ ಮತ್ತು ಕೊಥೆ ಗಡಿ ಹೊರಠಾಣೆಗಳ ನಡುವೆ ಸಂಜೆ 4 ಗಂಟೆ ಸುಮಾರಿಗೆ ಜಾಗೃತ ಪಡೆಗಳು ಒಳನುಗ್ಗುವವರನ್ನು ಗಮನಿಸಿದರು. ಅವರನ್ನು ನಿಲ್ಲಿಸಲು ಸವಾಲು ಹಾಕಲಾಯಿತು. ನುಸುಳುಕೋರರು ಪದೇ ಪದೇ ಎಚ್ಚರಿಕೆ ನೀಡಿದ್ದರೂ ಕೇಳದ ಹಿನ್ನಲೆ ಮುಂಭಾಗದ ಪೋಸ್ಟ್‌ಗಳನ್ನು ನಿರ್ವಹಿಸುತ್ತಿದ್ದ ಬಿಎಸ್‌ಎಫ್ ಸಿಬ್ಬಂದಿ ಗುಂಡು ಹಾರಿಸಿದರು, ಇದರ ಪರಿಣಾಮವಾಗಿ ಒಳನುಗ್ಗುವವರಲ್ಲಿ ಒಬ್ಬರಿಗೆ ಗಾಯವಾಯಿತು.

  • 1990ರ ಕಾಶ್ಮೀರಿ ಪಂಡಿತ್ ನರ್ಸ್ ಹತ್ಯೆ ಕೇಸ್; ಶ್ರೀನಗರದ 8 ಸ್ಥಳಗಳ ಮೇಲೆ ಎಸ್‌ಐಎ ದಾಳಿ

    1990ರ ಕಾಶ್ಮೀರಿ ಪಂಡಿತ್ ನರ್ಸ್ ಹತ್ಯೆ ಕೇಸ್; ಶ್ರೀನಗರದ 8 ಸ್ಥಳಗಳ ಮೇಲೆ ಎಸ್‌ಐಎ ದಾಳಿ

    ಶ್ರೀನಗರ: 1990ರಲ್ಲಿ ಕಾಶ್ಮೀರಿ ಪಂಡಿತ್ ನರ್ಸ್ ಸರಳಾ ಭಟ್ ಅವರ ಹತ್ಯೆಯ ತನಿಖೆ ನಡೆಸುತ್ತಿರುವ ಜಮ್ಮು ಮತ್ತು ಕಾಶ್ಮೀರ ರಾಜ್ಯ ತನಿಖಾ ಸಂಸ್ಥೆ (SIA) ಮಂಗಳವಾರ ಶ್ರೀನಗರದ (Srinagar) ಎಂಟು ಸ್ಥಳಗಳ ಮೇಲೆ ದಾಳಿ ನಡೆಸಿದೆ.

    ನಿಷೇಧಿತ ಜಮ್ಮು ಮತ್ತು ಕಾಶ್ಮೀರ ಲಿಬರೇಶನ್ ಫ್ರಂಟ್ (JKLF)ನೊಂದಿಗೆ ಈ ಹಿಂದೆ ಸಂಬಂಧ ಹೊಂದಿದ್ದ ವ್ಯಕ್ತಿಗಳ ನಿವಾಸಗಳನ್ನು ಗುರಿಯಾಗಿಸಿಕೊಂಡು ಶೋಧ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಧನುಷ್ ನನ್ನ ಗೆಳೆಯ – ಡೇಟಿಂಗ್ ವದಂತಿಗೆ ತೆರೆ ಎಳೆದ ಮೃಣಾಲ್ ಠಾಕೂರ್

    ಜೆಕೆಎಲ್‌ಎಫ್‌ನ ಮಾಜಿ ನಾಯಕ ಪೀರ್ ನೂರುಲ್ ಹಕ್ ಶಾ, ಯಾಸಿನ್ ಮಲಿಕ್, ಜಾವೀದ್ ಮೀರ್ ಮನೆ ಮೇಲೆ ರೇಡ್ ಮಾಡಲಾಗಿದೆ. ದಾಳಿ ವೇಳೆ ದಾಖಲೆಗಳು ಮತ್ತು ಡಿಜಿಟಲ್ ಡೇಟಾ ಸೇರಿದಂತೆ ಅಪರಾಧ ಸಾಕ್ಷ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್‌ಐಎ ತಿಳಿಸಿದೆ. ಇದನ್ನೂ ಓದಿ: ಎಥೆನಾಲ್‌ ಪೆಟ್ರೋಲ್‌ನಿಂದ ಮೈಲೇಜ್‌ ಕುಸಿತವಾಗಲ್ಲ, ವಿಮೆ ರದ್ದಾಗಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

    35 ವರ್ಷಗಳ ಹಿಂದೆ ಅನಂತನಾಗ್ ಜಿಲ್ಲೆಯ ಸರಳಾ ಭಟ್ (Sarla Bhat), ಶ್ರೀನಗರದ ಸೌರಾದಲ್ಲಿರುವ ಶೇರ್-ಇ-ಕಾಶ್ಮೀರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. 1990ರ ಏಪ್ರಿಲ್ 18ರ ರಾತ್ರಿ ಭಯೋತ್ಪಾದಕರು ಆಕೆಯನ್ನು ಕಿಡ್ನ್ಯಾಪ್ ಮಾಡಿ ಕೊಲೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಾಕ್ಷಿ-ಪುರಾವೆಗಾಗಿ 8 ಕಡೆ ರೇಡ್ ಮಾಡಿರುವ ಎಸ್‌ಐಎ, ಜಮ್ಮು ಮತ್ತು ಕಾಶ್ಮೀರ ಲಿಬರೇಷನ್ ಫ್ರಂಟ್ ಜೊತೆ ನಂಟು ಹೊಂದಿದ್ದ ಹಲವರ ಮನೆಗಳಲ್ಲಿ ಶೋಧ ನಡೆಸಿದೆ.

  • ಆಪರೇಷನ್ ಅಖಾಲ್ | ಭದ್ರತಾ ಸಿಬ್ಬಂದಿ, ಉಗ್ರರ ನಡುವೆ ಗುಂಡಿನ ಚಕಮಕಿ – ಇಬ್ಬರು ಯೋಧರು ಹುತಾತ್ಮ

    ಆಪರೇಷನ್ ಅಖಾಲ್ | ಭದ್ರತಾ ಸಿಬ್ಬಂದಿ, ಉಗ್ರರ ನಡುವೆ ಗುಂಡಿನ ಚಕಮಕಿ – ಇಬ್ಬರು ಯೋಧರು ಹುತಾತ್ಮ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಆಪರೇಷನ್ ಅಖಾಲ್ (Operation Akhal) ಹೆಸರಿನಲ್ಲಿ ನಡೆಯುತ್ತಿರುವ ಕಾರ್ಯಚರಣೆಯಲ್ಲಿ ಉಗ್ರರು ಹಾಗೂ ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದು, ಇಬ್ಬರು ಯೋಧರು (Soldiers) ಹುತಾತ್ಮರಾಗಿದ್ದಾರೆ.

    ಕುಲ್ಗಾಮ್‌ನಲ್ಲಿ (Kulgam) ಶುಕ್ರವಾರ ರಾತ್ರಿಯಿಡೀ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೈನಿಕರು ಹುತಾತ್ಮರಾಗಿದ್ದು, ನಾಲ್ವರು ಸೈನಿಕರು ಗಾಯಗೊಂಡಿದ್ದಾರೆ. ಮೃತ ಯೋಧರನ್ನು ಲ್ಯಾನ್ಸ್ ನಾಯಕ್ ಪ್ರೀತ್ಪಾಲ್ ಸಿಂಗ್ ಮತ್ತು ಸಿಪಾಯಿ ಹರ್ಮಿಂದರ್ ಸಿಂಗ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಸಮಾಧಿ ಶೋಧ ಮ್ಯಾರಥಾನ್ – ಐದು ಅಡಿ ಅಗೆದರೂ ಸಿಕ್ಕಿದ್ದು ಬರೀ ಮಣ್ಣು

    ಹುತಾತ್ಮ ಯೋಧರ ಧೈರ್ಯ ಮತ್ತು ಸಮರ್ಪಣೆ ನಮಗೆ ಶಾಶ್ವತ ಸ್ಫೂರ್ತಿ ನೀಡುತ್ತದೆ. ಭಾರತೀಯ ಸೇನೆಯು ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ. ಮೃತ ಕುಟುಂಬಗಳೊಂದಿಗೆ ಸೇನೆ ಸದಾ ನಿಲ್ಲುತ್ತದೆ ಎಂದು ಚಿನಾರ್ ಕಾರ್ಪ್ಸ್ ಶನಿವಾರ ಎಕ್ಸ್ನಲ್ಲಿ ತಿಳಿಸಿದೆ. ಇದನ್ನೂ ಓದಿ: ಪುಟಿನ್‌ ಭೇಟಿಗೆ ಟ್ರಂಪ್‌ ಮುಹೂರ್ತ ಫಿಕ್ಸ್‌ – ಉಕ್ರೇನ್‌ನಲ್ಲಿ ಶಾಂತಿ ಸ್ಥಾಪನೆಗೆ ಮಾತುಕತೆ

    ಆಪರೇಷನ್ ಅಖಾಲ್ ಕಾರ್ಯಚರಣೆ ಒಂಬತ್ತನೇ ದಿನಕ್ಕೆ ಕಾಲಿಟ್ಟಿದೆ. ಕಾರ್ಯಾಚರಣೆಯ ಆರಂಭದಿಂದ ಇಲ್ಲಿಯವರೆಗೆ ಹನ್ನೊಂದು ಭದ್ರತಾ ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಆಗಸ್ಟ್ 1 ರಂದು ದಕ್ಷಿಣ ಕಾಶ್ಮೀರ ಜಿಲ್ಲೆಯ ಅಖಾಲ್‌ನಲ್ಲಿರುವ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ನಂತರ ಭದ್ರತಾ ಪಡೆಗಳು ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು.

  • ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿಧನ

    ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿಧನ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ (79) (Satyapal Malik) ಅವರಿಂದು ನಿಧನರಾಗಿದ್ದಾರೆ.

    ರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಮಲಿಕ್‌ ದೆಹಲಿಯ (Delhi) ಆರ್‌ಎಂಎಲ್‌ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಟ್ರಂಪ್ ಸುಂಕ ಬೆದರಿಕೆ ನಡ್ವೆ ಅಮೆರಿಕಕ್ಕೆ ತಿವಿದ ಇಂಡಿಯನ್ ಆರ್ಮಿ – ಪಾಕ್‌ಗೆ ಶಸ್ತ್ರಾಸ್ತ್ರ ಪೂರೈಕೆ ಬಗ್ಗೆ 1971ರ ಪೇಪರ್ ಕಟಿಂಗ್‌ ಪೋಸ್ಟ್

    ಜೆ&ಕೆ ಮಾತ್ರವಲ್ಲದೇ ಬಿಹಾರದ ರಾಜ್ಯಪಾಲರಾಗಿಯೂ (Governor) ಸೇವೆ ಸಲ್ಲಿಸಿದ್ದ ಮಲಿಕ್‌ ಅವರು, ಕೃಷಿ ಚಳುವಳಿ ಮತ್ತು ಭ್ರಷ್ಟಾಚಾರದ ಬಗ್ಗೆ ಅವರು ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ಹೇಳುತ್ತಿದ್ದರು. ಆದ್ರೆ ಅವರಿಗೆ ಮೂತ್ರಪಿಂಡದ ಸಮಸ್ಯೆ ಇತ್ತು. ಹೀಗಾಗಿ ದೆಹಲಿಯ ಆರ್‌ಎಂಎಲ್‌ ಆಸ್ಪತ್ರೆಗೆ (RML Hospital) ದಾಖಲಿಸಲಾಗಿತ್ತು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ವೀಸಾ ಅವಧಿ ಮೀರಿ ವಾಸ್ತವ್ಯ; ಭಾರತ ಸೇರಿ ವಿದೇಶಿ ಪ್ರಜೆಗಳಿಗೆ ಅಮೆರಿಕ ಗಡೀಪಾರು ಎಚ್ಚರಿಕೆ

    ಸತ್ಯಪಾಲ್‌ ಮಲಿಕ್‌ ಯಾರು?
    ಉತ್ತರ ಪ್ರದೇಶದ (UttarPradesh) ಬಾಗ್‌ಪತ್‌ನವರಾದ ಮಲಿಕ್‌ ಮೊದಲ ಬಾರಿಗೆ ಚೌಧರಿ ಚರಣ್ ಸಿಂಗ್ ಅವರ ಭಾರತೀಯ ಕ್ರಾಂತಿ ದಳದಿಂದ ವಿಧಾನಸಭೆಗೆ ಆಯ್ಕೆಯಾದರು. 1970 ರಲ್ಲಿ ಶಾಸಕರಾಗಿ ರಾಜಕೀಯ ವೃತ್ತಿಜೀವನ ಆರಂಭಿಸಿದರು. ರಾಜಕಾರಣಿಯಾಗಿ ಸುಮಾರು 50 ವರ್ಷ ಜೀವನ ಪೂರೈಸಿದರು. ಈ ಅವಧಿಯಲ್ಲಿ ಮಲಿಕ್‌ ಹಲವು ಪಕ್ಷಗಳನ್ನ ಬದಲಾಯಿಸಿದರು. ಇದನ್ನೂ ಓದಿ: ʻಆಪರೇಷನ್ ಸಿಂಧೂರʼ ಯಶಸ್ಸಿಗೆ ಸನ್ಮಾನ – ʻಜೈ ಶ್ರೀರಾಮ್‌, ಹರಹರ ಮಹದೇವ್ʼ ಘೋಷಣೆ ನಡ್ವೆ ಮೋದಿಗೆ ಗೌರವ

    1980 ರಲ್ಲಿ, ಚರಣ್ ಸಿಂಗ್ ನೇತೃತ್ವದ ಲೋಕ ದಳದಿಂದ ರಾಜ್ಯಸಭೆಗೆ ಆಯ್ಕೆಯಾದರು. 1984 ರಲ್ಲಿ, ಅವರು ಕಾಂಗ್ರೆಸ್ ಸೇರಿದರು. 1986 ರಲ್ಲಿ ಕಾಂಗ್ರೆಸ್‌ನಿಂದ ರಾಜ್ಯಸಭೆಗೆ ಆಯ್ಕೆಯಾದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದತಿಯ ನಂತರ ಅವರ 1 ವರ್ಷದ ರಾಜ್ಯಪಾಲರ ಅಧಿಕಾರಾವಧಿ ಮುಕ್ತಾಯವಾಯಿತು. ಇದನ್ನೂ ಓದಿ: ಕೆಂಪು ಕೋಟೆಗೆ ಪ್ರವೇಶಿಸಲು ಯತ್ನ – ಐವರು ಬಾಂಗ್ಲಾ ಪ್ರಜೆಗಳು ಅರೆಸ್ಟ್‌

  • ಪಹಲ್ಗಾಮ್‌ನಲ್ಲಿ ದಾಳಿ ಮಾಡಿದ್ದು ಪಾಕಿಸ್ತಾನ ಉಗ್ರರು: ಭದ್ರತಾ ಸಂಸ್ಥೆ ಸ್ಪಷ್ಟನೆ

    ಪಹಲ್ಗಾಮ್‌ನಲ್ಲಿ ದಾಳಿ ಮಾಡಿದ್ದು ಪಾಕಿಸ್ತಾನ ಉಗ್ರರು: ಭದ್ರತಾ ಸಂಸ್ಥೆ ಸ್ಪಷ್ಟನೆ

    ಶ್ರೀನಗರ: ಜುಲೈ 28ರಂದು ಜಮ್ಮು ಕಾಶ್ಮೀರದಲ್ಲಿ ನಡೆದ ಆಪರೇಷನ್ ಮಹಾದೇವದಲ್ಲಿ (Operation Mahadev) ಮೃತಪಟ್ಟ ಮೂವರು ಉಗ್ರರು ಪಾಕಿಸ್ತಾನದವರು ಎಂಬುದು ತನಿಖೆಯಲ್ಲಿ ದೃಢಪಟ್ಟಿದೆ ಎಂದು ಭದ್ರತಾ ಸಂಸ್ಥೆ ತಿಳಿಸಿದೆ.

    ಭಾರತೀಯ ಭದ್ರತಾ ಏಜೆನ್ಸಿಗಳು ಕಲೆಹಾಕಿದ ಮಾಹಿತಿಗಳು ಸೇರಿದಂತೆ ಪಾಕಿಸ್ತಾನ ಸರ್ಕಾರ ನೀಡಿದ ದಾಖಲೆ ಮತ್ತು ಬಯೋಮೆಟ್ರಿಕ್ ದಾಖಲೆಗಳನ್ನು ತನಿಖೆ ನಡೆಸಿದ ವೇಳೆ ಪಹಲ್ಗಾಮ್‌ನಲ್ಲಿ ದಾಳಿ (Pahalgam Terrorists) ನಡೆಸಿದ್ದ ಈ ಮೂವರು ಪಾಕಿಸ್ತಾನದವರು ಎಂಬುದು ತಿಳಿದುಬಂದಿದೆ. ಉಗ್ರರನ್ನು ಎಲ್‌ಇಟಿ ಹಿರಿಯ ಕಾರ್ಯಕರ್ತರು ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಸಾರಿಗೆ ಮುಷ್ಕರ ನಿಲ್ಲಿಸಲು KSRTC, BMTC ಕೊನೆಯ ಕಸರತ್ತು

    ಏಪ್ರಿಲ್ 22 ರಂದು ಪಹಲ್ಗಾಮ್‌ನ ಬೈಸರನ್ ಹುಲ್ಲುಗಾವಲಿನಲ್ಲಿ ನಡೆದ ಭಯೋತ್ಪಾದಕ ದಾಳಿ ನಂತರ ಈ ಉಗ್ರರು ಡಚಿಗಮ್-ಹರ್ವಾನ್ ಅರಣ್ಯ ಪ್ರದೇಶದಲ್ಲಿ (Dachigam-Harwan Forest) ಅಡಗಿಕೊಂಡಿದ್ದರು. ಇದನ್ನೂ ಓದಿ: ಸಾರಿಗೆ ಮುಷ್ಕರ – ಸಿಎಂ ಸಭೆಯಲ್ಲಿ ಏನಾಯ್ತು? ಸಾರಿಗೆ ಮುಖಂಡರು ಸಂಧಾನ ತಿರಸ್ಕರಿಸಿದ್ದು ಯಾಕೆ?

    ಪಾಕಿಸ್ತಾನದ ರಾಷ್ಟ್ರೀಯ ಮಾಹಿತಿ ಮತ್ತು ನೋಂದಣಿ ಪ್ರಾಧಿಕಾರದ ಬಯೋಮೆಟ್ರಿಕ್ ದಾಖಲು, ಮತದಾರರ ಗುರುತಿನ ಚೀಟಿಗಳು ಮತ್ತು ಡಿಜಿಟಲ್ ಸ್ಯಾಟಲೈಟ್ ಫೋನ್ ಮಾಹಿತಿ, ಲಾಗ್‌ಗಳು ಮತ್ತು ಜಿಪಿಎಸ್ ವೇ ಪಾಯಿಂಟ್‌ಗಳು ಸೇರಿದಂತೆ ಭದ್ರತಾ ಸಂಸ್ಥೆಗಳು ಸಂಗ್ರಹಿಸಿದ ಪ್ರಮುಖ ಪುರಾವೆಗಳಲ್ಲಿ ಮೂವರು ಭಯೋತ್ಪಾದಕರು ಪಾಕಿಸ್ತಾನದವರು ಎಂಬುದು ದೃಢಪಟ್ಟಿದೆ. ಅಲ್ಲದೇ ಇದೇ ಮೊದಲ ಬಾರಿಗೆ ಪಾಕಿಸ್ತಾನ ಸರ್ಕಾರವೇ ನೀಡಿರುವ ದಾಖಲೆಗಳು ದೊರೆತಿದ್ದು, ಯಾವುದೇ ಸಂಶಯವಿಲ್ಲದೇ ಉಗ್ರರು ಪಾಕಿಸ್ತಾನಿಗಳು ಎಂಬುದು ಸ್ಪಷ್ಟವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಬಾಂಕೆ ಬಿಹಾರಿ ದೇವಾಲಯ ಕೇಸ್ – ಯುಪಿ ಸರ್ಕಾರಕ್ಕೆ ಸುಪ್ರೀಂ ತೀವ್ರ ತರಾಟೆ

    ಸುಲೇಮಾನ್ ಶಾ ಅಲಿಯಾಸ್ ‘ಫೈಜಲ್ ಜತ್’ ಎ ಗ್ರೇಡ್ ಉಗ್ರನಾಗಿದ್ದು, ದಾಳಿಯ ಮಾಸ್ಟರ್‌ಮೈಂಡ್ ಆಗಿದ್ದಾನೆ. ಈತನ ಆಪ್ತ ಅಬು ಹಮಾಜಿ ಅಲಿಯಾಸ್ ಅಫ್ಘಾನ್ ಕೂಡ ಎ ಗ್ರೇಡ್ ಕಮಾಂಡರ್ ಆಗಿದ್ದ. ಮತ್ತೋರ್ವ ಯಾಸಿರ್ ಅಲಿಯಾಸ್ ಜಿಬ್ರಾನ್ ಕೂಡ ಎ ಗ್ರೇಡ್ ಕಮಾಂಡರ್ ಆಗಿದ್ದು, ಮೂವರನ್ನು ಕೂಡ ಆಪರೇಷನ್ ಮಹಾದೇವ ಕಾರ್ಯಾಚರಣೆ ವೇಳೆ ಹೊಡೆದುರುಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: Dharmasthala | 13 ವರ್ಷದ ಹಿಂದಿನ ಕೇಸ್ ಬಗ್ಗೆ ಮತ್ತೊಂದು ದೂರು – ದೂರುದಾರ ಹೇಳಿದ್ದೇನು?

  • ಜಮ್ಮು ಕಾಶ್ಮೀರ ಭೂಕುಸಿತ – ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌, ಪುತ್ರ ಸಾವು

    ಜಮ್ಮು ಕಾಶ್ಮೀರ ಭೂಕುಸಿತ – ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌, ಪುತ್ರ ಸಾವು

    ಶ್ರೀನಗರ: ಭಾರೀ ಮಳೆಯಿಂದಾಗಿ ಜಮ್ಮು ಮತ್ತು ಕಾಶ್ಮೀರದ (Jammu Kashmir) ರಿಯಾಸಿ (Reasi) ಪ್ರದೇಶದಲ್ಲಿ ಭೂಕುಸಿತ ಉಂಟಾಗಿ, ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್‌ ಹಾಗೂ ಅವರ ಪುತ್ರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

    ಜಮ್ಮು ಮತ್ತು ಕಾಶ್ಮೀರದ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್‌ ರಾಜಿಂದರ್ ಸಿಂಗ್ ರಾಣಾ (Rajinder Singh Rana) ಹಾಗೂ ಅವರ ಪುತ್ರ ಮೃತಪಟ್ಟಿದ್ದಾರೆ. ಅವರ ಪತ್ನಿ ಹಾಗೂ ಇನ್ನಿಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಶುಕ್ರವಾರ ಕುಟುಂಬ ಸಮೇತರಾಗಿ ಧರ್ಮರಿಯಿಂದ ಪಟ್ಟಿಯನ್‌ಗೆ ಕಾರಿನಲ್ಲಿ ಪ್ರಯಾಣಿಸುತ್ತಿರುವಾಗ ಈ ಅವಘಡ ಸಂಭವಿಸಿದೆ.ಇದನ್ನೂ ಓದಿ: ಬಿಹಾರ ಚುನಾವಣಾ ಕರಡು ಪಟ್ಟಿಯಲ್ಲಿ ನನ್ನ ಹೆಸರಿಲ್ಲ, ಚುನಾವಣೆಗೆ ಸ್ಪರ್ಧಿಸೋದು ಹೇಗೆ..?: ತೇಜಸ್ವಿ ಯಾದವ್ ಆರೋಪ

    ಘಟನೆಯ ಬಗ್ಗೆ ಹಿರಿಯ ಅಧಿಕಾರಿಯೊಬ್ಬರು ಮಾತನಾಡಿ, ರಿಯಾಸಿಯ ಸಲೂಖ್ ಇಖ್ತರ್ ನಲ್ಲಾ ಎಂಬ ಪ್ರದೇಶದಲ್ಲಿ ಪ್ರಯಾಣಿಸುತ್ತಿದ್ದಾಗ ಭೂಕುಸಿತ ಉಂಟಾಗಿದ್ದು, ಬೃಹತ್ ಬಂಡೆಯೊಂದು ಕಾರಿಗೆ ಅಪ್ಪಳಿಸಿದೆ. ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಗಾಯಾಳುವನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡವರನ್ನು ರಿಯಾಸಿಯ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

    ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ರಾಜಿಂದರ್ ಸಿಂಗ್ ರಾಣಾ ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಭೂಕುಸಿತದಲ್ಲಿ ಒಬ್ಬ ಅತ್ಯುತ್ತಮ ಅಧಿಕಾರಿಯನ್ನು ಕಳೆದುಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

    ಇದಕ್ಕೂ ಮುನ್ನ ಇದೇ ರೀತಿ ಬೃಹತ್ ಬಂಡೆಯೊಂದು ವಾಹನಕ್ಕೆ ಅಪ್ಪಳಿಸಿ ಇಬ್ಬರು ಸೇನಾ ಸಿಬ್ಬಂದಿ ಸಾವನ್ನಪ್ಪಿದರು.ಇದನ್ನೂ ಓದಿ: ಚುನಾವಣಾ ಆಯೋಗ ಸಂಪೂರ್ಣ ಸತ್ತು ಹೋಗಿದ್ದು, ತನ್ನ ಸ್ವಾಯತ್ತತೆ ಕಳೆದುಕೊಂಡಿದೆ: ರಾಹುಲ್ ಗಾಂಧಿ