Tag: jammu kashmir

  • ಹೊರಗಡೆಯ ಆಹಾರಕ್ಕೆ ನಿರ್ಬಂಧ ಹೇರಬಹುದು, ಥಿಯೇಟರ್‌ಗಳು ಶುದ್ಧವಾದ ಕುಡಿಯುವ ನೀರು ಫ್ರೀ ನೀಡಬೇಕು: ಸುಪ್ರೀಂ

    ಹೊರಗಡೆಯ ಆಹಾರಕ್ಕೆ ನಿರ್ಬಂಧ ಹೇರಬಹುದು, ಥಿಯೇಟರ್‌ಗಳು ಶುದ್ಧವಾದ ಕುಡಿಯುವ ನೀರು ಫ್ರೀ ನೀಡಬೇಕು: ಸುಪ್ರೀಂ

    ನವದೆಹಲಿ: ಪ್ರೇಕ್ಷಕರು ಹೊರಗಡೆಯಿಂದ ಆಹಾರ ಮತ್ತು ಪಾನೀಯವನ್ನು(Food and Beverage) ಚಲನಚಿತ್ರ ಮಂದಿರಕ್ಕೆ(Cinema Halls) ಕೊಂಡೊಯ್ಯುವುದನ್ನು ನಿಯಂತ್ರಿಸುವ ಹಕ್ಕು ಚಿತ್ರಮಂದಿರದ ಮಾಲೀಕರಿಗೆ ಇದೆ ಎಂದು ಸುಪ್ರೀಂ ಕೋರ್ಟ್(Supreme Court) ಹೇಳಿದೆ.

    ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾ. ಪಿ ಎಸ್ ನರಸಿಂಹ ಅವರ ಪೀಠವು ಚಿತ್ರಮಂದಿರವು ಮಾಲೀಕರ ಖಾಸಗಿ ಆಸ್ತಿಯಾಗಿದೆ. ಆದರೆ ಶುದ್ಧವಾದ ನೀರನ್ನು ಉಚಿತವಾಗಿ ನೀಡಬೇಕು ಎಂದು ಅಭಿಪ್ರಾಯಪಟ್ಟಿದೆ.

    ವೀಕ್ಷಕರು ಮನರಂಜನೆಗಾಗಿ ಸಿನಿಮಾ ಹಾಲ್‌ಗೆ ಭೇಟಿ ನೀಡುತ್ತಾರೆ. ಚಿತ್ರಮಂದಿರದ ಮಾಲೀಕರು ಆಹಾರ ಮತ್ತು ಪಾನೀಯಗಳ ಪ್ರವೇಶವನ್ನು ನಿಯಂತ್ರಿಸುವ ಹಕ್ಕನ್ನು ಹೊಂದಿದ್ದಾರೆ. ಲಭ್ಯವಿರುವ ಪಾನಿಯವನ್ನು ಸೇವಿಸಬೇಕೇ? ಬೇಡವೇ ಎಂಬುದು ಸಂಪೂರ್ಣವಾಗಿ ಚಲನಚಿತ್ರ ಪ್ರೇಕ್ಷಕರ ಆಯ್ಕೆಯ ಮೇಲೆ ಇರುತ್ತದೆ ಎಂದು ಪೀಠ ಹೇಳಿದೆ.

    ವೀಕ್ಷಕರು ಚಲನಚಿತ್ರ ಮಂದಿರಕ್ಕೆ ಪ್ರವೇಶಿಸಿದರೆ, ಅವನು/ಅವಳು ಚಿತ್ರಮಂದಿರದ ಮಾಲೀಕರ ನಿಯಮಗಳಿಗೆ ಬದ್ಧವಾಗಿರಬೇಕು ಮತ್ತು ಇದು ಸ್ಪಷ್ಟವಾಗಿ ಥಿಯೇಟರ್ ಮಾಲೀಕರ ವಾಣಿಜ್ಯ ನಿರ್ಧಾರದ ವಿಷಯವಾಗಿದೆ ಎಂದು ನ್ಯಾಯಾಲಯ ತಿಳಿಸಿದೆ.  ಇದನ್ನೂ ಓದಿ: ವಂದೇ ಭಾರತ್ ಎಕ್ಸ್‌ಪ್ರೆಸ್‌ ಉದ್ಘಾಟನೆಗೊಂಡ 4ನೇ ದಿನಕ್ಕೆ ಕಲ್ಲು ತೂರಾಟ- ಕಿಟಕಿ ಗಾಜು ಪುಡಿ ಪುಡಿ

    ಪ್ರೇಕ್ಷಕರು ತಮ್ಮ ಸ್ವಂತ ಆಹಾರ ಮತ್ತು ಪಾನೀಯಗಳನ್ನು ಚಿತ್ರಮಂದಿರಗಳಿಗೆ ಕೊಂಡೊಯ್ಯುವುದನ್ನು ಮಲ್ಟಿಪ್ಲೆಕ್ಸ್‌ಗಳು ತಡೆಯಬಾರದು ಎಂದು ಜಮ್ಮು ಕಾಶ್ಮೀರ ಹೈಕೋರ್ಟ್‌ 2018ರಲ್ಲಿ ತೀರ್ಪು ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಥಿಯೇಟರ್‌, ಮಲ್ಟಿಪ್ಲೆಕ್ಸ್‌(Multiplexes) ಮಾಲೀಕರು ಮೇಲ್ಮನವಿ ಸಲ್ಲಿಸಿದ್ದರು.

    ಹಾಲ್‌ ನೀಡುವ ಸಿನಿಮಾ ಟಿಕೆಟ್‌ ಜೊತೆ ಮಾತ್ರ ಪ್ರೇಕ್ಷಕರ ಒಪ್ಪಂದ ಇರುತ್ತದೆ. ಆದರೆ ಸಭಾಂಗಣದೊಳಗೆ ತಿನ್ನುವ ವಸ್ತುಗಳನ್ನು ಕೊಂಡೊಯ್ಯಲು ಪ್ರೇಕ್ಷಕರಿಗೆ ಯಾವುದೇ ನಿರ್ಬಂಧ ಇಲ್ಲ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ್ದರು.

    ಚಿತ್ರಮಂದಿರಗಳ ಆವರಣವು ಸಾರ್ವಜನಿಕ ಆಸ್ತಿಯಲ್ಲ. ಅಷ್ಟೇ ಅಲ್ಲದೇ ಥಿಯೇಟರ್‌ ಒಳಗಡೆ ಆಹಾರವನ್ನು ಖರೀದಿಸಲೇಬೇಕೆಂದು ಪ್ರೇಕ್ಷಕರಿಗೆ ನಾವು ಒತ್ತಾಯ ಮಾಡುತ್ತಿಲ್ಲ ಎಂದು ಹಿರಿಯ ವಕೀಲ ಕೆ.ವಿ.ವಿಶ್ವನಾಥನ್ ಅವರು ವಾದ ಮಂಡಿಸಿ ಮಲ್ಟಿಪ್ಲೆಕ್ಸ್‌ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದರು.

    Live Tv
    [brid partner=56869869 player=32851 video=960834 autoplay=true]

  • ಮೋದಿ ಆಡಳಿತದಲ್ಲಿ 2,132 ಉಗ್ರ ದಾಳಿ – 1,538 ಉಗ್ರರ ಹತ್ಯೆ

    ಮೋದಿ ಆಡಳಿತದಲ್ಲಿ 2,132 ಉಗ್ರ ದಾಳಿ – 1,538 ಉಗ್ರರ ಹತ್ಯೆ

    ನವದೆಹಲಿ: ಕೇಂದ್ರದಲ್ಲಿ ನರೇಂದ್ರ ಮೋದಿ (Narendra Modi) ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಭಯೋತ್ಪಾದಕ ದಾಳಿಗಳ (Terrorist Attack) ಸಂಖ್ಯೆ ಇಳಿಕೆಯಾಗಿದೆ ಎಂಬ ಸಂಗತಿ ಬೆಳಕಿಗೆ ಬಂದಿದೆ.

    ಹಿಂದಿನ ಯುಪಿಎ ಸರ್ಕಾರದ (UPA Government) ಅವಧಿಯಲ್ಲಿ ಜಮ್ಮು-ಕಾಶ್ಮೀರದಲ್ಲಿ (Jammu And Kashmir) ಅತಿಹೆಚ್ಚು ಉಗ್ರರನ್ನು ಕೊಲ್ಲಲಾಗಿದೆ. ಆದರೆ ಇಂದಿನ ಬಿಜೆಪಿ (BJP)  ಸರ್ಕಾರದ (Central Government Of India)  ಅವಧಿಯಲ್ಲಿ ಅತಿಹೆಚ್ಚು ಉಗ್ರರನ್ನು ಬಂಧಿಸಲಾಗಿದೆ. ಮೋದಿ ಅವಧಿಯಲ್ಲಿ 2,132 ಉಗ್ರ ದಾಳಿಗಳು ನಡೆದಿದ್ದು, 1,538 ಉಗ್ರರನ್ನು ಕೊಲ್ಲಲಾಗಿದೆ. ಇದನ್ನು ಓದಿ: ತೋಟದ ಕೆಲಸ ಮಾಡುವಂತೆ ತಂದೆ ಒತ್ತಡ – ಮಗ ಆತ್ಮಹತ್ಯೆ

    ಕಳೆದ 18.5 ವರ್ಷದ ಅವಧಿಯಲ್ಲಿ ಜಮ್ಮು-ಕಾಶ್ಮೀರದಲ್ಲಿ (Jammu and Kashmir) ಒಟ್ಟು 11,453 ಭಯೋತ್ಪಾದಕ ದಾಳಿ ನಡೆದಿದ್ದು, 5,543 ಉಗ್ರರನ್ನು ಹತ್ಯೆಗೈದು 2,310 ಉಗ್ರರನ್ನು ಬಂಧಿಸಲಾಗಿದೆ.

    ಮಹಾರಾಷ್ಟ್ರದ ಮಾಹಿತಿ ಹಕ್ಕು ಕಾರ್ಯಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಕೇಂದ್ರ ಗೃಹ ಸಚಿವಾಲಯದ (Ministry of Home Affairs) ಜಮ್ಮು-ಕಾಶ್ಮೀರ ವಿಭಾಗವು ನೀಡಿದ ಉತ್ತರದಲ್ಲಿ ಈ ಅಂಕಿ-ಅಂಶಗಳಿವೆ. ಅದರ ಪ್ರಕಾರ, 2004ರಿಂದ 2013ರ ಯುಪಿಎ ಅವಧಿಯ 10 ವರ್ಷದ ಆಳ್ವಿಕೆಯಲ್ಲಿ ಜಮ್ಮು-ಕಾಶ್ಮೀರದಲ್ಲಿ 9,321 ಭಯೋತ್ಪಾದಕ ದಾಳಿ ನಡೆದಿವೆ. ಆ ವೇಳೆ 4,005 ಉಗ್ರರನ್ನು ಕೊಂದು, 878 ಉಗ್ರರನ್ನು ಬಂಧಿಸಲಾಗಿದೆ.

    2014 ರಿಂದ ಈವರೆಗೆ ಜಮ್ಮು-ಕಾಶ್ಮೀರದಲ್ಲಿ 2,132 ಭಯೋತ್ಪಾದಕ ದಾಳಿ ನಡೆದಿದ್ದು, 1,538 ಉಗ್ರರನ್ನು ಕೊಂದು 1,432 ಉಗ್ರರನ್ನು ಬಂಧಿಸಲಾಗಿದೆ. ಇದನ್ನು ಓದಿ: ಸಾವನ್ನಪ್ಪುವ ಮೊದಲು ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ತೆರಳಿದ್ದ ಮೇಸ್ತಾ – ಸಿಬಿಐ ವರದಿಯಲ್ಲಿ ಬಯಲು

    ಕೇಂದ್ರ ಗೃಹ ಸಚಿವಾಲಯವು ಜಮ್ಮು- ಕಾಶ್ಮೀರಕ್ಕೆ ಸಂಬಂಧಿಸಿದಂತೆ ಮಾತ್ರ ಮಾಹಿತಿ ನೀಡಿದೆ. ದೇಶದ ಇತರೆಡೆ ಈ ಅವಧಿಯಲ್ಲಿ ನಡೆದ ಭಯೋತ್ಪಾದಕ ದಾಳಿಗಳ ಮಾಹಿತಿ ನೀಡಿಲ್ಲ. ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್‌ (Surgical Strike) ನಡೆಸಿದ ನಂತರ ಭಯೋತ್ಪಾದಕರಲ್ಲಿ ನಡುಕ ಹುಟ್ಟಿದ್ದು, ಆನಂತರ ಹೆಚ್ಚು ಭಯೋತ್ಪಾದಕ ದಾಳಿಗಳು ನಡೆದಿಲ್ಲ ಎಂದು ಆರ್‌ಟಿಐ ಕಾರ್ಯಕರ್ತ ಪ್ರಫುಲ್ ಸರ್ದಾ ತಮಗೆ ದೊರೆತ ಅಂಕಿ-ಅಂಶಗಳನ್ನು ವಿಶ್ಲೇಷಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಉಗ್ರರ ಗುಂಡೇಟು ತಿಂದು ಆಸ್ಪತ್ರೆ ಸೇರಿದ್ದ ಸೇನಾ ಶ್ವಾನ ʼಜೂಮ್‌ʼ ಸಾವು

    ಉಗ್ರರ ಗುಂಡೇಟು ತಿಂದು ಆಸ್ಪತ್ರೆ ಸೇರಿದ್ದ ಸೇನಾ ಶ್ವಾನ ʼಜೂಮ್‌ʼ ಸಾವು

    ನವದೆಹಲಿ: (New Delhi) ಕಾಶ್ಮೀರದ ಅನಂತನಾಗ್‌ನಲ್ಲಿ ಭಯೋತ್ಪಾದಕರ ಮೇಲಿನ ಎನ್‌ಕೌಂಟರ್‌ನಲ್ಲಿ ಗಾಯಗೊಂಡು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಸೇನಾ ಶ್ವಾನ ‘ಜೂಮ್’ (Zoom) ಗುರುವಾರ ಸಾವನ್ನಪ್ಪಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

    54 ಎಎಫ್‌ವಿಹೆಚ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜೂಮ್‌ ಹೆಸರಿನ ಸೇನಾ ಶ್ವಾನ ಇಂದು ಮಧ್ಯಾಹ್ನ 12 ಗಂಟೆ ಹೊತ್ತಿಗೆ ಮೃತಪಟ್ಟಿದೆ. ಇದನ್ನೂ ಓದಿ: ಕಾಕ್‍ಪಿಟ್, ಕ್ಯಾಬಿನ್‍ನಲ್ಲಿ ಹೊಗೆ – ಹೈದರಾಬಾದ್‍ನಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ ಆದ ಸ್ಪೈಸ್‍ಜೆಟ್ ವಿಮಾನ

    ಅನಂತನಾಗ್‌ನ ಕೋಕರ್‌ನಾಗ್‌ನಲ್ಲಿ ನಡೆದ ಯುದ್ಧ ಕಾರ್ಯಾಚರಣೆಯಲ್ಲಿ ‘ಜೂಮ್’ ಭಯೋತ್ಪಾದಕರ ಮೇಲೆ ದಾಳಿ ಮಾಡಿತ್ತು. ಈ ವೇಳೆ ಎರಡು ಗುಂಡು ತಗುಲಿ ಗಂಭೀರ ಗಾಯಗೊಂಡಿತ್ತು. ತಕ್ಷಣ ಶ್ವಾನವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದೆ.

    ಗುಂಡೇಟು ಬಿದ್ದರೂ ಜೂಮ್‌ ಶ್ವಾನ ಉಗ್ರರ ಮೇಲೆ ದಾಳಿ ಮುಂದುವರಿಸಿತ್ತು. ಭಯೋತ್ಪಾದಕರನ್ನು ನಿಗ್ರಹಿಸುವಲ್ಲಿಯೂ ಯಶಸ್ವಿಯಾಗಿತ್ತು. ಇದನ್ನೂ ಓದಿ: ಹಿಜಬ್‌ ಆಯ್ಕೆಯ ವಿಷಯ: ನ್ಯಾ.ಹೇಮಂತ್ ಗುಪ್ತಾ, ನ್ಯಾ. ಧುಲಿಯಾ ಆದೇಶದಲ್ಲಿ ಏನಿದೆ?

    ನಂತರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರು ಹತರಾಗಿದ್ದಾರೆ. ಎನ್‌ಕೌಂಟರ್‌ನಲ್ಲಿ ‘ಜೂಮ್’ ಜೊತೆಗೆ ಇಬ್ಬರು ಸೈನಿಕರೂ ಗಾಯಗೊಂಡಿದ್ದರು.

    Live Tv
    [brid partner=56869869 player=32851 video=960834 autoplay=true]

  • ಬ್ಯಾಕ್ ಟೂ ಬ್ಯಾಕ್ ಭದ್ರತಾ ಪಡೆಗಳಿಂದ ನಾಲ್ವರು ಭಯೋತ್ಪಾದಕರ ಎನ್‍ಕೌಂಟರ್

    ಬ್ಯಾಕ್ ಟೂ ಬ್ಯಾಕ್ ಭದ್ರತಾ ಪಡೆಗಳಿಂದ ನಾಲ್ವರು ಭಯೋತ್ಪಾದಕರ ಎನ್‍ಕೌಂಟರ್

    ಶ್ರೀನಗರ: ಜಮ್ಮು (Jammu) ಮತ್ತು ಕಾಶ್ಮೀರದ (Kashmir) ಶೋಪಿಯಾನ್‍ನಲ್ಲಿ (Shopian) ನಾಲ್ವರು ಭಯೋತ್ಪಾದಕರನ್ನು ಎನ್‍ಕೌಂಟರ್ ಮಾಡಿ ಭದ್ರತಾ ಪಡೆಗಳು ಹತ್ಯೆಗೈದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

    ನಾಲ್ವರು ಭಯೋತ್ಪಾದಕರ ಪೈಕಿ ಮೂವರು ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್‍ನೊಂದಿಗೆ ಸಂಪರ್ಕ ಹೊಂದಿದ್ದು, ನಾಲ್ಕನೇಯವನು ಲಷ್ಕರ್-ಎ-ತೊಯ್ಬಾದೊಂದಿಗೆ ಸಂಪರ್ಕ ಹೊಂದಿದ್ದಾನೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನು ಉಲ್ಲೇಖಿಸಿ ಕಾಶ್ಮೀರ ಪೊಲೀಸರು ಟ್ವೀಟ್ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ : ಒಂದೇ ಗ್ರಾಮ, ಒಂದೇ ಗೋತ್ರ ವಿವಾಹ ನಿಷೇಧಕ್ಕೆ ಸರ್ವ ಜಾತಿಯ ಖಾಪ್ ಮಹಾಪಂಚಾಯತ್ ಒತ್ತಾಯ

    ಶೋಪಿಯಾನ್‍ನ ಡ್ರಾಚ್‍ನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಹತರಾದ ಮೂವರು ಜೈಶ್ ಭಯೋತ್ಪಾದಕರ ಪೈಕಿ ಇಬ್ಬರನ್ನು ಹನನ್ ಬಿನ್ ಯಾಕೂಬ್ ಮತ್ತು ಜಮ್ಶೆಡ್ ಎಂದು ಗುರುತಿಸಲಾಗಿದ್ದು, ಅವರಿಬ್ಬರು ಇತ್ತೀಚೆಗೆ ಪುಲ್ವಾಮಾದಲ್ಲಿ ನಡೆದ ವಿಶೇಷ ಪೊಲೀಸ್ ಅಧಿಕಾರಿ ಮತ್ತು ಕಾರ್ಮಿಕನ ಹತ್ಯೆಯಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮದುವೆ ಮುಗಿಸಿ ವಾಪಸ್ಸಾಗುತ್ತಿದ್ದ ಬಸ್ ಅಪಘಾತ – 25 ಮಂದಿ ದುರ್ಮರಣ

    ಮಂಗಳವಾರ ರಾತ್ರಿ ಮತ್ತು ಬುಧವಾರ ಬೆಳಗ್ಗೆ ಶೋಪಿಯಾನ್‍ನ ಡ್ರಾಚ್ ಮತ್ತು ಮೂಲು ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಪ್ರತ್ಯೇಕವಾಗಿ ಕಾರ್ಯಾಚರಣೆ ನಡೆಸಿದ್ದವು. ಮೂಲುವಿನಲ್ಲಿ ಇನ್ನೂ ಎನ್‍ಕೌಂಟರ್ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಆತ್ಮೀಯ ಸಾವೇ, ನನ್ನ ಜೀವನದಲ್ಲಿ ಬಾ – IPS ಅಧಿಕಾರಿ ಹತ್ಯೆ ಆರೋಪಿ ಡೈರಿಯಲ್ಲಿತ್ತು ನೋವಿನ ಸಾಲು

    ಆತ್ಮೀಯ ಸಾವೇ, ನನ್ನ ಜೀವನದಲ್ಲಿ ಬಾ – IPS ಅಧಿಕಾರಿ ಹತ್ಯೆ ಆರೋಪಿ ಡೈರಿಯಲ್ಲಿತ್ತು ನೋವಿನ ಸಾಲು

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ಐಪಿಎಸ್‌ ಅಧಿಕಾರಿ (IPS officer) ಲೋಹಿಯಾ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಮನೆಯ ಸಹಾಯಕನನ್ನು ಪೊಲೀಸರು ಬಂಧಿಸಿದ್ದಾರೆ.

    ಹಿರಿಯ ಪೊಲೀಸ್‌ ಅಧಿಕಾರಿ ಹೇಮಂತ್‌ ಕುಮಾರ್‌ ಲೋಹಿಯಾ ಅವರ ಕತ್ತು ಸೀಳಿ ಹತ್ಯೆ ಮಾಡಲಾಗಿತ್ತು. ಲೋಹಿಯಾ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಯಾಸಿರ್‌ ಅಹ್ಮದ್‌ (Yasir Ahmed) ಪೊಲೀಸರು ಬಂಧಿಸಿದ್ದಾರೆ. ಯಾಸಿರ್ ಈ ಕೊಲೆ ಪ್ರಕರಣದ ಪ್ರಮುಖ ಆರೋಪಿ ಎಂದು‌ ಹೇಳಲಾಗಿದೆ. ಇದನ್ನೂ ಓದಿ: ಮನೆಯಲ್ಲಿ ಕತ್ತು ಸೀಳಿ ಐಪಿಎಸ್‌ ಅಧಿಕಾರಿ ಹತ್ಯೆ

    ಕೊಲೆಯ ನಂತರ ಯಾಸಿರ್ ಪರಾರಿಯಾಗಿದ್ದ. ಪೊಲೀಸರು ಕಾರ್ಯಾಚರಣೆ ನಡೆಸಿ ಆತನನ್ನು ವಶಕ್ಕೆ ಪಡೆದಿದ್ದಾರೆ. ಯಾಸಿರ್ ಅಹ್ಮದ್ ತೀವ್ರ ಖಿನ್ನತೆಯಿಂದ ಬಳಲುತ್ತಿದ್ದ ಎಂಬುದು ಪೊಲೀಸರ ವಿಚಾರಣೆಯಿಂದ ತಿಳಿದುಬಂದಿದೆ.

    ಹತ್ಯೆಗೂ ಮುನ್ನ ಅಧಿಕಾರಿ ಲೋಹಿಯಾ ಅವರು ತಮ್ಮ ಕಾಲಿಗೆ ಎಣ್ಣೆಯನ್ನು ಹಚ್ಚುತ್ತಿದ್ದರು. ನಂತರ ಒಡೆದ ಬಾಟಲ್‌ನಿಂದ ಅವರ ಕತ್ತನ್ನು ಸೀಳಿ ಹತ್ಯೆ ಮಾಡಲಾಗಿದೆ. ಕೊಲೆ ಬಳಿಕ ಶಂಕಿತ ಆರೋಪಿ ಪರಾರಿಯಾಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    POLICE JEEP

    ಯಾಸಿರ್‌ ಅಹ್ಮದ್ ಸುಮಾರು ಆರು ತಿಂಗಳಿನಿಂದ ಲೋಹಿಯಾ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ. ಆತ ಖಿನ್ನತೆಯಿಂದ ಬಳಲುತ್ತಿದ್ದ ಎಂಬುದು ಪ್ರಾಥಮಿಕ ತನಿಖೆಯಿಂದ ಬಹಿರಂಗವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಟಿವಿ, ವೆಬ್‍ಸೈಟ್‍ಗಳಲ್ಲಿ ಬೆಟ್ಟಿಂಗ್ ಜಾಹೀರಾತು ಪ್ರಸಾರ ಮಾಡಬೇಡಿ: ಕೇಂದ್ರ ಖಡಕ್ ಸೂಚನೆ

    ಯಾಸಿರ್ ಮಾನಸಿಕ ಸ್ಥಿತಿಯನ್ನು ಪ್ರತಿಬಿಂಬಿಸುವ ಡೈರಿ ಸೇರಿದಂತೆ ಕೆಲವು ಸಾಕ್ಷ್ಯಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ʼಆತ್ಮೀಯ ಸಾವೇ.. ನನ್ನ ಜೀವನದಲ್ಲಿ ಬಾʼ ಎಂದು ಒಂದು ಟಿಪ್ಪಣಿ ಬರೆಯಲಾಗಿದೆ. ʼಕ್ಷಮಿಸಿ, ನಾನು ಕೆಟ್ಟ ದಿನ, ವಾರ, ತಿಂಗಳು, ವರ್ಷ, ಜೀವನವನ್ನು ಹೊಂದಿದ್ದೇನೆʼ ಎಂದು ಡೈರಿಯಲ್ಲಿ ಬರೆದಿದೆ.

    ನನ್ನ ಜೀವನವನ್ನು ದ್ವೇಷಿಸುತ್ತೇನೆ. ಜೀವನವು ಕೇವಲ ದುಃಖ ಎಂದು ಬರೆಯಲಾಗಿದೆ. ಅಲ್ಲದೇ ಫೋನ್‌ ಬ್ಯಾಟರಿಯ ರೇಖಾಚಿತ್ರವನ್ನು ಬಿಡಿಸಿ ಅದರಲ್ಲಿ, ಪ್ರೀತಿ 0%, ಉದ್ವೇಗ 90%, ದುಃಖ 99% , ಹುಸಿನಗು 100% ಎಂದಿದೆ.

    Live Tv
    [brid partner=56869869 player=32851 video=960834 autoplay=true]

  • ಕಂದಕಕ್ಕೆ ಉರುಳಿದ ಮಿನಿಬಸ್‌ – 10 ಮಂದಿ ದುರ್ಮರಣ, 28 ಮಂದಿಗೆ ಗಾಯ

    ಕಂದಕಕ್ಕೆ ಉರುಳಿದ ಮಿನಿಬಸ್‌ – 10 ಮಂದಿ ದುರ್ಮರಣ, 28 ಮಂದಿಗೆ ಗಾಯ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu And Kashmir) ಪೂಂಚ್ ಜಿಲ್ಲೆಯಲ್ಲಿ ಕಿಕ್ಕಿರಿದು ತುಂಬಿದ್ದ ಮಿನಿಬಸ್‌ವೊಂದು (Minibus Accident) ಆಳವಾದ ಕಂದಕಕ್ಕೆ ಉರುಳಿ ಹತ್ತು ಜನರು ಸಾವನ್ನಪ್ಪಿದ್ದು, 28 ಮಂದಿ ಗಾಯಗೊಂಡಿದ್ದಾರೆ.

    ಬಸ್ ಗಾಲಿ ಮೈದಾನದಿಂದ ಪೂಂಚ್‌ಗೆ ತೆರಳುತ್ತಿದ್ದಾಗ ಬೆಳಗ್ಗೆ 8.30ರ ಸುಮಾರಿಗೆ ಸಾವ್ಜಿಯಾನ್‌ನ ಗಡಿ ಬೆಲ್ಟ್‌ನ ಬ್ರಾರಿ ನಲ್ಲಾಹ್‌ ಬಳಿ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಬೇಗುಸರಾಯ್‍ನಲ್ಲಿ ಗುಂಡಿನ ದಾಳಿ – 11 ಮಂದಿಗೆ ಗಂಭೀರ ಗಾಯ, ಓರ್ವ ಸಾವು

    ಸೇನೆ, ಪೊಲೀಸರು ಮತ್ತು ಸ್ಥಳೀಯ ಗ್ರಾಮಸ್ಥರು ಜಂಟಿ ರಕ್ಷಣಾ ಕಾರ್ಯಾಚರಣೆಯನ್ನು ತಕ್ಷಣವೇ ಪ್ರಾರಂಭಿಸಿದ್ದರು. ಒಂಬತ್ತು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಗಾಯಗೊಂಡ 28 ಮಂದಿಯಲ್ಲಿ ಒಂಬತ್ತು ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಅಪಘಾತದಲ್ಲಿ ಜೀವಹಾನಿಯ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬ ಸದಸ್ಯರಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅಲ್ಲದೇ ಅಪಘಾತದಲ್ಲಿ ಗಾಯಗೊಂಡವರಿಗೆ 1 ಲಕ್ಷ ರೂ. ಪರಿಹಾರ ಘೋಷಿಸಿದ್ದು, ಸೂಕ್ತ ವೈದ್ಯಕೀಯ ಚಿಕಿತ್ಸೆಗೆ ಅಗತ್ಯ ನೆರವು ಕಲ್ಪಿಸುವಂತೆ ಪೊಲೀಸರು ಮತ್ತು ಸ್ಥಳೀಯ ಆಡಳಿತಕ್ಕೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಸೈರಸ್‌ ಮಿಸ್ತ್ರಿ ಸಾವು ಪ್ರಕರಣ – ಅಪಘಾತಕ್ಕೀಡಾದ ಕಾರು ಪರಿಶೀಲಿಸಲು ಹಾಂಗ್‌ ಕಾಂಗ್‌ನಿಂದ ಬಂದ ಮರ್ಸಿಡಿಸ್ ತಜ್ಞರು

    ಮಿನಿಬಸ್‌ ಅಪಘಾತದ ಕುರಿತು ರಾಷ್ಟ್ರಪತಿ ದ್ರೌಪದಿ ಮುರ್ಮು (draupadi murmu), ಪ್ರಧಾನಿ ಮೋದಿ (narendra modi) ಸೇರಿದಂತೆ ಅನೇಕ ಗಣ್ಯರು ದುಃಖ ವ್ಯಕ್ತಪಡಿಸಿದ್ದಾರೆ. ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50,000 ಪರಿಹಾರ ಘೋಷಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ನಮ್ಮ ಹೊಸ ಪಕ್ಷಕ್ಕೆ ಜಮ್ಮು-ಕಾಶ್ಮೀರದ ಜನರೇ ಹಿಂದೂಸ್ತಾನಿ ಹೆಸರಿಡಲಿ: ಆಜಾದ್‌

    ನಮ್ಮ ಹೊಸ ಪಕ್ಷಕ್ಕೆ ಜಮ್ಮು-ಕಾಶ್ಮೀರದ ಜನರೇ ಹಿಂದೂಸ್ತಾನಿ ಹೆಸರಿಡಲಿ: ಆಜಾದ್‌

    ಶ್ರೀನಗರ: ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ನಂತರ ಗುಲಾಂ ನಬಿ ಆಜಾದ್ ಅವರು ಹೊಸ ರಾಜಕೀಯ ಪ್ರಯಾಣವನ್ನು ಆರಂಭಿಸಿದ್ದಾರೆ. ಜಮ್ಮುವಿನಲ್ಲಿ ಬೃಹತ್‌ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ತಮ್ಮ ಹೊಸ ಪಕ್ಷದ ಹೆಸರು ಮತ್ತು ಧ್ವಜವನ್ನು ಜನರೇ ನಿರ್ಧರಿಸುತ್ತಾರೆ.

    ಜಮ್ಮುವಿನ ಸೈನಿಕ್ ಮೈದಾನದಲ್ಲಿ ತಮ್ಮ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಆಜಾದ್, ಜಮ್ಮು ಮತ್ತು ಕಾಶ್ಮೀರದ ಜನರೊಂದಿಗೆ ನಾವಿದ್ದೇವೆ ಎಂದು ಭರವಸೆಯ ನುಡಿಗಳನ್ನಾಡಿದ್ದಾರೆ. ಇದನ್ನೂ ಓದಿ: 8 ವರ್ಷದಲ್ಲಿ ಭಾರತ ದುರ್ಬಲವಾಗಿದೆ, ವಸ್ತುಗಳ ಬೆಲೆ ಭಾರೀ ಏರಿಕೆಯಾಗಿದೆ: ರಾಹುಲ್ ಕಿಡಿ

    ನಾನು ನನ್ನ ಪಕ್ಷಕ್ಕೆ ಹೆಸರನ್ನು ನಿರ್ಧರಿಸಿಲ್ಲ. ಜಮ್ಮು ಮತ್ತು ಕಾಶ್ಮೀರದ ಜನರು ಪಕ್ಷದ ಹೆಸರು ಮತ್ತು ಧ್ವಜವನ್ನು ನಿರ್ಧರಿಸುತ್ತಾರೆ. ನಾನು ನನ್ನ ಪಕ್ಷಕ್ಕೆ ಹಿಂದೂಸ್ತಾನಿ ಹೆಸರನ್ನು ನೀಡುತ್ತೇನೆ. ಅದು ಎಲ್ಲರಿಗೂ ಅರ್ಥವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

    ಆಜಾದ್ ನೇತೃತ್ವದ ಪಕ್ಷವು ಬಿಜೆಪಿ ಅಥವಾ ಜಮ್ಮು ಮತ್ತು ಕಾಶ್ಮೀರದ ಮುಖ್ಯವಾಹಿನಿಯ ಪಕ್ಷಗಳಾದ ನ್ಯಾಷನಲ್ ಕಾನ್ಫರೆನ್ಸ್ ಅಥವಾ ಪಿಡಿಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಆಯ್ಕೆ ಹೊಂದಿದೆ. ಆದರೆ ಆಜಾದ್ ಅವರು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದರಿಂದ ಅವರಿಗೂ (ಬಿಜೆಪಿ) ಮತ್ತು ನನಗೂ ಪ್ರಯೋಜನವಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಚಿನ್ನ ಗೆದ್ದ ಸೈಕಿಯಾ ಈಗ ಅಸ್ಸಾಂನಲ್ಲಿ ಡಿಎಸ್‌ಪಿ ಆಫೀಸರ್‌

    ಗುಲಾಂ ನಬಿ ಆಜಾದ್‌ ಅವರು ಈಚೆಗೆ ಕಾಂಗ್ರೆಸ್‌ನ ಎಲ್ಲಾ ಸ್ಥಾನಗಳಿಗೂ ರಾಜೀನಾಮೆ ನೀಡಿದ್ದರು. ಅಲ್ಲದೇ ಹೊಸ ಪಕ್ಷ ಸ್ಥಾಪಿಸುವ ಕುರಿತು ಆಶಯ ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪ್ರಧಾನಿ ಮೋದಿ ಒರಟು ಮನುಷ್ಯ ಅಂದುಕೊಂಡಿದ್ದೆ – ಆಜಾದ್

    ಪ್ರಧಾನಿ ಮೋದಿ ಒರಟು ಮನುಷ್ಯ ಅಂದುಕೊಂಡಿದ್ದೆ – ಆಜಾದ್

    ನವದೆಹಲಿ: ಕಾಂಗ್ರೆಸ್ ಮಾಜಿ ನಾಯಕ ಹಾಗೂ ಮಾಜಿ ಸಿಎಂ ಗುಲಾಂ ನಬಿ ಆಜಾದ್ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ತಮ್ಮ ವಾಗ್ದಾಳಿ ಮುಂದುವರಿಸಿದ್ದಾರೆ. ಅಲ್ಲದೇ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

    ರಾಷ್ಟ್ರ ರಾಜಧಾನಿಯಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಆಜಾದ್, ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿದ್ದಾಗ ಹಲವಾರು ಜನರು ಸಾವನ್ನಪ್ಪಿದ ಬಸ್ ದುರಂತವನ್ನು ನೆನಪಿಸಿಕೊಂಡಿದ್ದಾರೆ. ಇದನ್ನೂ ಓದಿ: ಗುಲಾಂ ನಬಿ ಆಜಾದ್‌ ಕಾರ್ಯ ನೆನೆದು ಭಾವುಕರಾದ ಪ್ರಧಾನಿ ಮೋದಿ

    ಜಮ್ಮು ಮತ್ತು ಕಾಶ್ಮೀರದಲ್ಲಿ ಗುಜರಾತ್ ಪ್ರವಾಸಿ ಬಸ್‌ನೊಳಗೆ ಗ್ರೆನೇಡ್ ಸ್ಫೋಟಗೊಂಡಿದ್ದರಿಂದ ಸ್ಥಳದಲ್ಲೇ ನೂರಾರು ಜನ ಸಾವನ್ನಪ್ಪಿದ್ದರು. ಇದು ನಾನು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿದ್ದಾಗ ಸಂಭವಿಸಿದ ಘಟನೆ. ಪ್ರಧಾನಿ ಮೋದಿ ಆಗ ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದರು, ಅಂದು ನನಗೆ ಕರೆ ಮಾಡಿದ್ದರು, ಘಟನೆಯ ಬಗ್ಗೆ ವಿವರ ಪಡೆಯುವ ತುಡಿತ ಅವರಿಗಿತ್ತು. ನಾನು ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸುವ ಕಾರ್ಯದಲ್ಲಿ ನಿರತನಾಗಿದ್ದ ಕಾರಣ ಈ ಕ್ಷಣದಲ್ಲಿ ಮಾತನಾಡಲು ಸಾಧ್ಯವಿಲ್ಲವೆಂದು ತಿಳಿಸುವಂತೆ ನನ್ನ ಸಿಬ್ಬಂದಿಗೆ ಹೇಳಿದ್ದೆ ಎಂದು ನೆನಪಿಸಿಕೊಂಡಿದ್ದಾರೆ.

    ಅಲ್ಲದೇ ಕಳೆದ ವರ್ಷ ರಾಜ್ಯ ಸಭೆಗೆ ವಿದಾಯ ಹೇಳುವ ಸಂದರ್ಭದಲ್ಲಿ ನನ್ನ ನಿಜವಾದ ಸ್ನೇಹಿತ ಗುಲಾಂ ನಬಿ ಆಜಾದ್ ಅವರಿಗೆ ಎಂದು ಭಾವನಾತ್ಮಕವಾಗಿ ವಿದಾಯ ಹೇಳೀದ್ದನ್ನೂ ಸ್ಮರಿಸಿದ್ದಾರೆ. ಇದನ್ನೂ ಓದಿ: ರಾಹುಲ್ ಒಳ್ಳೆಯ ವ್ಯಕ್ತಿ ಆದರೆ ರಾಜಕೀಯಕ್ಕೆ ಯೋಗ್ಯನಲ್ಲ: ಆಜಾದ್

    `ನಾನು ಪ್ರಧಾನಿ ಮೋದಿಯನ್ನು ಒರಟು ಮನುಷ್ಯ ಎಂದು ಭಾವಿಸಿದ್ದೆ, ಆದರೆ ಅವರು ಮಾನವೀಯತೆ ತೋರಿಸಿದರು’ ಎಂದು ಆಜಾದ್ ಹೇಳಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಜಮ್ಮು-ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನಿ ನುಸುಳುಕೋರನ ಬಂಧಿಸಿದ ಬಿಎಸ್‌ಎಫ್‌

    ಜಮ್ಮು-ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನಿ ನುಸುಳುಕೋರನ ಬಂಧಿಸಿದ ಬಿಎಸ್‌ಎಫ್‌

    ಶ್ರೀನಗರ: ಶನಿವಾರ ಮುಂಜಾನೆ ಜಮ್ಮುವಿನ ಅರಿನಾ ಸೆಕ್ಟರ್‌ನಲ್ಲಿನ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನಿ ನುಸುಳುಕೋರನನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಒಂದು ವಾರದಲ್ಲಿ ಇದು ಮೂರನೇ ಅತಿಕ್ರಮಣ ಪ್ರಯತ್ನವಾಗಿದೆ. ಅರಿನಾ ಸೆಕ್ಟರ್‌ನ ಆರ್‌ಎಸ್ ಪುರ ಪ್ರದೇಶದ ಅಂತಾರಾಷ್ಟ್ರೀಯ ಗಡಿಯಲ್ಲಿ ಒಬ್ಬ ಪಾಕಿಸ್ತಾನಿ ಪ್ರಜೆಯನ್ನು ಬಿಎಸ್‌ಎಫ್ ಬಂಧಿಸಿದೆ. ಇದನ್ನೂ ಓದಿ: ಅಗ್ನಿವೀರ್ ಪರೀಕ್ಷೆಯಲ್ಲಿ ಫೇಲ್‌- ಸೇನಾ ಆಕಾಂಕ್ಷಿ ಆತ್ಮಹತ್ಯೆ

    ಇದಕ್ಕೂ ಮೊದಲು ಆಗಸ್ಟ್ 25 ರಂದು, ಜಮ್ಮುವಿನ ಸಾಂಬಾ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಗಡಿಯಲ್ಲಿ ಮಾದಕ ವಸ್ತುಗಳನ್ನು ಕಳ್ಳಸಾಗಣೆ ಮಾಡಲು ಯತ್ನಿಸಿದ ಪಾಕಿಸ್ತಾನಿ ನುಸುಳುಕೋರನ ಮೇಲೆ ಬಿಎಸ್ಎಫ್ ಗುಂಡು ಹಾರಿಸಿತ್ತು.

    ಪಾಕಿಸ್ತಾನ ಕಡೆಯಿಂದ ಗಡಿ ದಾಟಲು ಯತ್ನಿಸಿದ ನುಸುಳುಕೋರನ ಅನುಮಾನಾಸ್ಪದ ಚಲನವಲನವನ್ನು ಗಮನಿಸಿದ ಬಿಎಸ್‌ಎಫ್ ಸಿಬ್ಬಂದಿ ಗುಂಡು ಹಾರಿಸಿದ್ದಾರೆ. ಇದನ್ನೂ ಓದಿ: ನೀಟ್ ಪರೀಕ್ಷೆ: ಒಳಉಡುಪು ಕಳಚಿಡುವಂತೆ ಒತ್ತಾಯಿಸಿದ್ದ ವಿದ್ಯಾರ್ಥಿನಿಯರಿಗೆ ಮರು ಪರೀಕ್ಷೆಗೆ ಅನುಮತಿ

    BSF ಪಡೆಗಳು ತಕ್ಷಣ ನುಸುಳುಕೋರನ ಮೇಲೆ ಗುಂಡು ಹಾರಿಸಿತು. ಗಾಯಗೊಂಡವರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು.

    ಆಗಸ್ಟ್ 21 ರಂದು, ನೌಶೇರಾ ಪಟ್ಟಣದ ಸೆಹರ್ ಮಕ್ರಿ ಪ್ರದೇಶದಲ್ಲಿನ LOCಯಲ್ಲಿ ಭಾರತೀಯ ಸೇನಾ ಪಡೆಗಳು ಆತ್ಮಾಹುತಿ ದಾಳಿಗೆ ಮುಂದಾಗಿದ್ದ ಒಬ್ಬ ನುಸುಳುಕೋರನ ಮೇಲೆ ಗುಂಡು ಹಾರಿಸಿ ಬಂಧಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ನಾಪತ್ತೆ ಆಗಿದ್ದ ಬಿಜೆಪಿ ಮುಖಂಡ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

    ನಾಪತ್ತೆ ಆಗಿದ್ದ ಬಿಜೆಪಿ ಮುಖಂಡ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

    ಶ್ರೀನಗರ: ನಾಪತ್ತೆ ಆಗಿದ್ದ ಬಿಜೆಪಿ ಮುಖಂಡ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಜಮ್ಮು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಪತ್ತೆ ಆಗಿದೆ.

    ಹೀರಾ ನಗರ ಪಟ್ಟಣದಲ್ಲಿರುವ ಮರವೊಂದಕ್ಕೆ ಬಿಜೆಪಿ ಮುಖಂಡ ಸೋಮ್ ರಾಜ್ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿರುವುದನ್ನು ನೋಡಿದ ಗ್ರಾಮಸ್ಥರೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನಾಧರಿಸಿ ಪೊಲೀಸರು ಶವವನ್ನು ವಶಪಡಿಸಿಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

    ಸೋಮ್ ರಾಜ್ ಕಳೆದ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಆದರೆ ಕುಟುಂಬವು ದೂರು ದಾಖಲಿಸಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೇಹದ ಮೇಲೆ ರಕ್ತದ ಕಲೆಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದು, ಈ ಹಿನ್ನೆಲೆಯಲ್ಲಿ ಘಟನೆಯ ತನಿಖೆಗೆ ಪೊಲೀಸರು ವಿಶೇಷ ತನಿಖಾ ತಂಡವನ್ನು (ಎಸ್‍ಐಟಿ) ರಚಿಸಿದ್ದಾರೆ. ಮೃತದೇಹವನ್ನು ಈಗಾಗಲೇ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಫಲಿತಾಂಶ ಇನ್ನೂ ಹೊರಬರಬೇಕಾಗಿದೆ. ಇದನ್ನೂ ಓದಿ: ವೈದ್ಯಕೀಯ ತಪಾಸಣೆಗೆ ವಿದೇಶಕ್ಕೆ ಸೋನಿಯಾ – ಸಾಥ್‌ ನೀಡಲಿದ್ದಾರೆ ರಾಹುಲ್‌, ಪ್ರಿಯಾಂಕಾ

    ಬಿಜೆಪಿ ನಾಯಕ ಸೋಮ್ ರಾಜ್ ಅವರ ನಿಧನಕ್ಕೆ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿ ಸೋಮ್‍ರಾಜ್ ಕುಟುಂಬಸ್ಥರು ಸೋಮ್‍ರಾಜ್‍ನನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದು, ಸರ್ಕಾರ ತಮಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಗಣೇಶೋತ್ಸವ ಫ್ಲೆಕ್ಸ್‌ನಲ್ಲಿದ್ದ ಸಾವರ್ಕರ್ ಫೋಟೋ ಹರಿದುಹಾಕಿದ ಕಿಡಿಗೇಡಿಗಳು

    Live Tv
    [brid partner=56869869 player=32851 video=960834 autoplay=true]