Tag: jammu kashmir

  • ಉಗ್ರ ಬಿಟ್ಟಾ ಕರಾಟೆಯ ಪತ್ನಿ ಸೇರಿದಂತೆ ನಾಲ್ವರು ಸರ್ಕಾರಿ ನೌಕರರು ವಜಾ

    ಉಗ್ರ ಬಿಟ್ಟಾ ಕರಾಟೆಯ ಪತ್ನಿ ಸೇರಿದಂತೆ ನಾಲ್ವರು ಸರ್ಕಾರಿ ನೌಕರರು ವಜಾ

    ಶ್ರೀನಗರ: ಭಯೋತ್ಪಾದಕ ಗುಂಪುಗಳೊಂದಿಗೆ ಸಂಪರ್ಕ ಹೊಂದಿರುವ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಆಡಳಿತವು ಬಿಟ್ಟಾ ಕರಾಟೆಯ ಪತ್ನಿ ಸೇರಿದಂತೆ ನಾಲ್ವರು ಸರ್ಕಾರಿ ನೌಕರರನ್ನು ಸೇವೆಯಿಂದಲೇ ವಜಾಗೊಳಿಸಿದೆ.

    ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರ ನಿರ್ದೇಶನದ ಮೇರೆಗೆ ಶನಿವಾರ ನಾಲ್ವರು ಸರ್ಕಾರಿ ನೌಕರರನ್ನು ವಜಾಗೊಳಿಸಿದೆ. ಭಯೋತ್ಪಾದಕರ ಸಂಪರ್ಕವನ್ನು ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಬಿಟ್ಟಾ ಕರಾಟೆಯ ಪತ್ನಿ, ಹಿಜ್ಬುಲ್ ಮುಜಾಹಿದ್ದೀನ್‌ನ ಸೈಯದ್ ಸಲಾವುದ್ದೀನ್ ಪುತ್ರ ಸೇರಿದಂತೆ ನಾಲ್ವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಇನ್ನಿಬ್ಬರು ಮಾಜಿ ಎಲ್‌ಇಟಿ ಭಯೋತ್ಪಾದಕ ಮತ್ತು ಕಾಶ್ಮೀರ ವಿಶ್ವವಿದ್ಯಾಲಯದ ವಿಜ್ಞಾನಿಯಾಗಿದ್ದ ಸಹಾಯಕ ಪ್ರಾಧ್ಯಾಪಕರು ಸೇರಿದ್ದಾರೆ. ಈ ಎಲ್ಲಾ ಸರ್ಕಾರಿ ನೌಕರರು ರಾಜ್ಯದ ಹಿತಾಸಕ್ತಿಗಳಿಗೆ ಹಾನಿ ಉಂಟಾಗುವ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

    ಡಾ. ಮುಹೀತ್ ಅಹ್ಮದ್ ಭಟ್- ಕಾಶ್ಮೀರ ವಿವಿಯ ಕಂಪ್ಯೂಟರ್ ಸೈನ್ಸ್‌ನ ಸ್ನಾತಕೋತ್ತರ ವಿಭಾಗದಲ್ಲಿ ವಿಜ್ಞಾನಿ ಆಗಿದ್ದಾನೆ. ಈತ ಪಾಕಿಸ್ತಾನ ಹಾಗೂ ಅದರ ಕೆಲ ಕಾರ್ಯಗಳನ್ನು ಮುಂದಕ್ಕೆ ತರಲು ವಿದ್ಯಾರ್ಥಿಗಳನ್ನು ಆಮೂಲಾಗ್ರಗೊಳಿಸುವ ಮೂಲಕ ಕಾಶ್ಮೀರಿ ವಿವಿಯಲ್ಲಿ ಪ್ರತ್ಯೇಕವಾದು ಭಯೋತ್ಪಾದಕ ಅಜೆಂಡಾವನ್ನು ಪ್ರಚಾರ ಮಾಡುವ ಕೆಲಸದಲ್ಲಿ ತೊಡಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: ಅರೆಸ್ಟ್ ಮಾಡೋ ಭಯ – ಅಗ್ನಿಪಥ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿ ಆತ್ಮಹತ್ಯೆ

    ಮಾಜಿದ್ ಹುಸೇನ್ ಖಾದ್ರಿ- ಜಮ್ಮು ಕಾಶ್ಮೀರ ವಿಶ್ವ ವಿದ್ಯಾಲಯದ ಮ್ಯಾನೇಜ್‌ಮೆಂಟ್ ಸ್ಟಡೀಸ್ ವಿಭಾಗದ ಹಿರಿಯ ಸಹಾಯಕ ಪ್ರೊಫೆಸರ್ ಆಗಿರುವ ಈತ ಎಲ್‌ಇಟಿ ಸೇರಿದಂತೆ ಅನೇಕ ಭಯೋತ್ಪಾದಕ ಸಂಘಟನೆಗಳೊಂದಿಗೆ ಸುದೀರ್ಘ ಸಂಬಂಧವನ್ನು ಹೊಂದಿದ್ದಾನೆ. ಈ ಹಿಂದೆಯೂ ಸಹ ಈತನ ವಿರುದ್ಧ ಸಾರ್ವಜನಿಕ ಸುರಕ್ಷತಾ ಕಾಯಿದೆಯಡಿ ಪ್ರಕರಣ ದಾಖಲಾಗಿತ್ತು.

    ಸೈಯದ್ ಅಬ್ದುಲ್ ಮುಯೀದ್- ಜೆಕೆಇಡಿಐನ ಐಟಿ ಮ್ಯಾನೇಜರ್ ಆಗಿದ್ದಾನೆ. 3 ಭಯೋತ್ಪಾದಕ ದಾಳಿಗಳಲ್ಲಿ ಈತನ ಪಾತ್ರವಿದೆ ಎಂಬುದು ಬೆಳಕಿಗೆ ಬಂದಿದೆ. ಅಷ್ಟೇ ಅಲ್ಲದೇ ಈತನಿಂದಾಗಿ ಸಂಸ್ಥೆಯಲ್ಲಿ ಪ್ರತ್ಯೇಕತಾವಾದಿ ಕೂಗುಗಳು ಹೆಚ್ಚಾಗಿವೆ. ಇದನ್ನೂ ಓದಿ: ಪಬ್ಲಿಕ್‌ ಟಿವಿ ಬೆಳಕು ಇಂಪ್ಯಾಕ್ಟ್‌ – ವಿದ್ಯಾರ್ಥಿಗಳ ನೆರವಿಗೆ ಧಾವಿಸಿದ ನಾರಾಯಣಸ್ವಾಮಿ

    ಅಸ್ಸಾಬಾ ಉಲ್ ಅರ್ಜಮಂಡ್ ಖಾನ್- ಈಕೆ ಕಾಶ್ಮೀರದ ಗ್ರಾಮೀಣಾಭಿವೃದ್ಧಿ ಇಲಾಖೆಯ ನಿರ್ದೇಶಕಿಯಾಗಿ ಕೆಲಸ ಮಾಡುತ್ತಿದ್ದಾಳೆ. ಈಕೆ ಪಾಸ್‌ಪೋರ್ಟ್‌ಗಾಗಿ ತಪ್ಪು ಮಾಹಿತಿಯನ್ನು ಒದಗಿಸುವಲ್ಲಿ ತೊಡಗಿರುವುದು ಕಂಡುಬಂದಿದೆ. ಈಕೆ ಅನೇಕ ವಿದೇಶಿ ಉಗ್ರರೊಂದಿಗೆ ಸಂಪರ್ಕವನ್ನು ಹೊಂದಿರುವುದು ತಿಳಿದುಬಂದಿದೆ. ಜೊತೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ದೇಶ ವಿರೋಧಿ ಚಟುವಟಿಕೆಗಳಿಗೆ ಧನಸಹಾಯಕ್ಕಾಗಿ ಹಣವನ್ನು ಸಾಗಿಸುವಲ್ಲಿ ಆಕೆ ತೊಡಗಿಸಿಕೊಂಡಿದ್ದಾಳೆ.

    ಅಸ್ಸಬಾ ಖಾನ್ ಯಾರಿಕೆ?: ಅಸ್ಸಬಾ ಖಾನ್ 2011ರಲ್ಲಿ ಹಿಂದೂಗಳ ನರಮೇಧದಲ್ಲಿ ತೊಡಗಿದ್ದ ಬಿಟ್ಟಾ ಕರಾಟೆಯನ್ನು ಮದುವೆಯಾಗಿದ್ದಾಳೆ. ಶ್ರೀನಗರದಲ್ಲಿ 1972ರಲ್ಲಿ ಜನಿಸಿದ್ದ ಫರೂಕ್ ಅಹ್ಮದ್ ದಾರ್ ಅಡ್ಡ ಹೆಸರು ಬಿಟ್ಟಾ. ಸಮರ ಕಲೆಗಳಲ್ಲಿ ಪಾಂಡಿತ್ಯ ಪಡೆದಿದ್ದರಿಂದ ಇತನಿಗೆ ಕರಾಟೆ ಎಂಬ ಹೆಸರು ಬಂದಿದೆ. ಈ ಕಾರಣಕ್ಕೆ ಈತ ಬಿಟ್ಟ ಕರಾಟೆ ಎಂದು ಫೇಮಸ್ ಆಗಿದ್ದಾನೆ. 1990ರ ದಶಕದಲ್ಲಿ ಕಣಿವೆ ರಾಜ್ಯದಲ್ಲಿ ಪಂಡಿತರ ಮೇಲೆ ಎಸಗಿದ ಕೃತ್ಯದಿಂದ ಈತ ಕುಖ್ಯಾತನಾಗಿದ್ದಾನೆ.

    1980-1990ರಲ್ಲಿ ಈತ ಪಂಡಿತರನ್ನು ಹುಡುತ್ತಾ ಶ್ರೀನಗರದ ಬೀದಿಗಳಲ್ಲಿ ಸಂಚರಿಸುತ್ತಿದ್ದ. ಪಂಡಿತರೆಂದು ತಿಳಿದ ತಕ್ಷಣ ಆತ ತನ್ನಲ್ಲಿದ್ದ ಪಿಸ್ತೂಲ್‌ನಿಂದ ಗುಂಡಿಕ್ಕಿ ಕೊಲ್ಲುತ್ತಿದ್ದ. ಕನಿಷ್ಠ 20 ಕಾಶ್ಮೀರಿ ಪಂಡಿತರನ್ನು ಕೊಂದಿದ್ದೇನೆ ಎಂದು ವಿಡಿಯೋ ಸಂದರ್ಶನದಲ್ಲಿ ಒಪ್ಪಿಕೊಂಡಿದ್ದ. ಬಾಲ್ಯ ಸ್ನೇಹಿತ ಸತೀಶ್ ಟಿಕ್ಕೂ ಈತ ಹತ್ಯೆ ಮಾಡಿದ್ದ. ಇದು ಈತ ಹತ್ಯೆ ಮಾಡಿದ ಮೊದಲ ಪ್ರಕರಣ ಆಗಿತ್ತು.

    ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಪಂಡಿತರ ಹತ್ಯೆ ಘಟನೆಗೆ ಸಂಬಂಧಿಸಿದಂತೆ ಬಿಟ್ಟಾ ಕರಾಟೆಯ ವಿರುದ್ಧ 31 ವರ್ಷದ ಹಿಂದೆ ನಡೆದ ಪ್ರಕರಣದ ವಿಚಾರಣೆ ನಡೆಸುವಂತೆ ಟಿಕ್ಕೂ ಕುಟುಂಬಸ್ಥರು ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಇದನ್ನೂ ಓದಿ: 20 ಪಂಡಿತರ ಹತ್ಯೆ, ಕೆಎಎಸ್ ಅಧಿಕಾರಿ ಜೊತೆ ಮದುವೆ – ಕಾಶ್ಮೀರದ ರಕ್ತಪಾತದ ವಿಲನ್ ಬಿಟ್ಟಾ ಕರಾಟೆಯ ಕಥೆಯಿದು

    Live Tv
    [brid partner=56869869 player=32851 video=960834 autoplay=true]

  • ಶೀಘ್ರವೇ ಉದ್ಘಾಟನೆಗೊಳ್ಳಲಿದೆ ದೆಹಲಿ-ಕಾಶ್ಮೀರಕ್ಕೆ ಸಂಪರ್ಕ ಕಲ್ಪಿಸುವ ವಿಶ್ವದ ಅತಿ ಎತ್ತರದ ರೈಲ್ವೇ ಸೇತುವೆ

    ಶೀಘ್ರವೇ ಉದ್ಘಾಟನೆಗೊಳ್ಳಲಿದೆ ದೆಹಲಿ-ಕಾಶ್ಮೀರಕ್ಕೆ ಸಂಪರ್ಕ ಕಲ್ಪಿಸುವ ವಿಶ್ವದ ಅತಿ ಎತ್ತರದ ರೈಲ್ವೇ ಸೇತುವೆ

    ನವದೆಹಲಿ: ದೆಹಲಿಯಿಂದ ಕಾಶ್ಮೀರಕ್ಕೆ ಸಂಪರ್ಕ ಕಲ್ಪಿಸುವ ವಿಶ್ವದ ಅತಿ ಎತ್ತರದ ರೈಲ್ವೇ ಸೇತುವೆ ಪೂರ್ಣಗೊಳ್ಳುವ ಹಂತದಲ್ಲಿದ್ದು, ಭಾರತೀಯ ರೈಲ್ವೇ ಶೀಘ್ರದಲ್ಲೇ ಇದನ್ನು ಸಾರ್ವಜನಿಕ ಪ್ರಯಾಣಕ್ಕಾಗಿ ಉದ್ಘಾಟಿಸಲಿದೆ.

    ಐಫೆಲ್ ಟವರ್‌ಗಿಂತಲೂ ಎತ್ತರವಾಗಿ ನಿರ್ಮಾಣವಾಗಿರುವ ಸೇತುವೆ ವಿಶ್ವದಲ್ಲೇ ಅತಿ ಎತ್ತರದ ರೈಲ್ವೇ ಸೇತುವೆ ಎಂಬ ಹೆಗ್ಗಳಿಕೆಯನ್ನು ಪಡೆಯುತ್ತಿದೆ. ಸೇತುವೆಯ ಉಕ್ಕಿನ ಕಮಾನು ಈ ತಿಂಗಳು ಪೂರ್ಣಗೊಳ್ಳಲಿದ್ದು, ಶೀಘ್ರವೇ ಉದ್ಘಾಟನೆಗೊಳ್ಳುವ ಮೂಲಕ ಹೊಸ ಇತಿಹಾಸವನ್ನೇ ಸೃಷ್ಟಿಸಲಿದೆ.

    ಏನಿದರ ವಿಶೇಷತೆ?
    ಜಮ್ಮು ಕಾಶ್ಮೀರದ ಚೇನಾಬ್ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಸೇತುವೆ ಬಹುತೇಕ ಪೂರ್ಣಗೊಂಡಿದೆ. 2021ರಲ್ಲಿ ಸೇತುವೆಯ ಕಮಾನು ಕೆಲಸ ಪೂರ್ಣಗೊಂಡಿತ್ತು. ಕತ್ರಾದಿಂದ ಬನಿಹಾಲ್‌ಗೆ ಸಂಪರ್ಕ ಕಲ್ಪಿಸುವ 111 ಕಿ.ಮೀ ಉದ್ದದ ರೈಲ್ವೇ ಹಳಿಯಲ್ಲಿ 12.6 ಕಿ.ಮೀ ಉದ್ದದ ಟಿ-49ಬಿ ಸುರಂಗವನ್ನು ನಿರ್ಮಿಸಲಾಗುತ್ತಿದ್ದು, ಶ್ರೀನಗರದಲ್ಲಿ 35 ಸುರಂಗಗಳು ಹಾಗೂ ಬನಿಹಾಲ್ ಮಾರ್ಗದಲ್ಲಿ ಒಟ್ಟು 37 ಸೇತುವೆಗಳನ್ನು ನಿರ್ಮಿಸಲಾಗಿದೆ. ಇದನ್ನೂ ಓದಿ: ಪ್ರಧಾನಿ ಅಭ್ಯರ್ಥಿ ನಿತೀಶ್? – ದೂರವಾಣಿ ಕರೆಗಳ ಬಗ್ಗೆ ಸಿಎಂ ಹೇಳಿದ್ದೇನು?

    ವಿಶ್ವದ ಅತಿ ಎತ್ತರದ ರೈಲ್ವೇ ಸೇತುವೆಯನ್ನು ಅಂದಾಜು 18 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇದು ಪ್ಯಾರಿಸ್‌ನ ಐಫೆಲ್ ಟವರ್‌ಗಿಂತಲೂ 35 ಮೀ. ಎತ್ತರದಲ್ಲಿ ನಿರ್ಮಾಣವಾಗಿದೆ. ಚೆನಾಬ್ ಸೇತುವೆ ಚೆನಾಬ್ ನದಿ ಮಟ್ಟದಿಂದ 359 ಮೀ. ಎತ್ತರದಲ್ಲಿ ನಿರ್ಮಾಣವಾಗಿದ್ದು, 1.3 ಕಿ.ಮೀ. ಉದ್ದವಿದೆ.

    ರೈಲ್ವೇ ಸೇತುವೆ ನಿರ್ಮಾಣಕ್ಕೆ ಕಮಾನು ಸ್ಥಾಪನೆ ಎಂಜಿನಿಯರುಗಳಿಗೆ ದೊಡ್ಡ ಸವಾಲಾಗಿತ್ತು. ರೈಲ್ವೇ ಮಾರ್ಗದ 111 ಕಿ.ಮೀ ನಲ್ಲಿ 97 ಕಿ.ಮೀ ನಷ್ಟು ಸುರಂಗ ಮಾರ್ಗವೇ ಇದೆ. ಇಷ್ಟು ದೂರದ ಸುರಂಗ ಮಾರ್ಗ ದೇಶದ ಬೇರೆ ಯಾವ ಭಾಗಗಳಲ್ಲೂ ಮಾಡಲಾಗಿಲ್ಲ. ಈಗಾಗಲೇ 86 ಕಿ.ಮೀ ಸುರಂಗ ಮಾರ್ಗದ ಕಾಮಗಾರಿ ಪೂರ್ಣಗೊಂಡಿದೆ.

    ಸೇತುವೆ ನಿರ್ಮಾಣಕ್ಕೆ 17 ಕಂಬಗಳನ್ನು ನಿರ್ಮಿಸಲಾಗಿದ್ದು, ಒಟ್ಟು 28,660 ಮೆಟ್ರಿಕ್ ಟನ್‌ನಷ್ಟು ಉಕ್ಕನ್ನು ಬಳಸಲಾಗಿದೆ. ಕಮಾನಿನ ತೂಕ 10,619 ಮೆಟ್ರಿಕ್ ಟನ್ ಇದೆ. ಸೇತುವೆಗೆ ಬಳಸಲಾದ ಉಕ್ಕು 10 ಡಿಗ್ರಿ ಸೆಲ್ಸಿಯಸ್‌ನಿಂದ ಮೈನಸ್ 40 ಡಿಗ್ರಿ ಸೆಲ್ಸಿಯಸ್‌ವರೆಗಿನ ತಾಪಮಾನಕ್ಕೆ ಸೂಕ್ತವಾಗಿದೆ. ಕನಿಷ್ಟ 120 ವರ್ಷಗಳ ಜೀವಿತಾವಧಿ ಈ ರಚನೆಗಿದ್ದು, ಗಂಟೆಗೆ 266 ಕಿ.ಮೀ ವೇಗದ ಗಾಳಿಯನ್ನು ತಡೆದುಕೊಳ್ಳುವ ಸಾಮರ್ಥ್ಯವನ್ನು ಹೊಂದಿದೆ. ಇದನ್ನೂ ಓದಿ: ಲೋಕಾಯುಕ್ತಕ್ಕೆ ಮತ್ತೆ ಬಲ ಬಂದಿದ್ದು, ಭ್ರಷ್ಟಾಚಾರಿಗಳಿಗೆ ನಡುಕ ಹುಟ್ಟಿದೆ: ನ್ಯಾ.ಸಂತೋಷ್‌ ಹೆಗ್ಡೆ

    ಕಾಶ್ಮೀರಕ್ಕೆ ರೈಲು ಮಾರ್ಗವನ್ನು ಹಾಕುವ ಯೋಜನೆಯನ್ನು 1990ರ ದಶಕದಲ್ಲಿ ಆಗಿನ ಪ್ರಧಾನಿ ಪಿ.ವಿ ನರಸಿಂಹರಾವ್ ಅವರು ಪ್ರಕಟಿಸಿದ್ದರು. 2002ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರು ಆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಕರೆದಿದ್ದರು.

    Live Tv
    [brid partner=56869869 player=32851 video=960834 autoplay=true]

  • ಭದ್ರತಾ ಪಡೆಗಳ ಎನ್‍ಕೌಂಟರ್‌ನಲ್ಲಿ ಎಲ್‍ಇಟಿ ಉಗ್ರ ಬಲಿ

    ಭದ್ರತಾ ಪಡೆಗಳ ಎನ್‍ಕೌಂಟರ್‌ನಲ್ಲಿ ಎಲ್‍ಇಟಿ ಉಗ್ರ ಬಲಿ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭದ್ರತಾ ಪಡೆ ಒಬ್ಬ ಭಯೋತ್ಪಾದಕನನ್ನು ಎನ್‍ಕೌಂಟರ್‌ ಮಾಡಿದೆ.

    ಶನಿವಾರ ರಾತ್ರಿ ಬಿನ್ನರ್ ಪ್ರದೇಶದಲ್ಲಿ ಭಯೋತ್ಪಾದಕರ ವಿರುದ್ಧ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿವೆ. ಈ ವೇಳೆ ಒಬ್ಬ ಎಲ್‍ಇಟಿ ಉಗ್ರ ಸಾವನ್ನಪ್ಪಿದ್ದಾನೆ. ಆತನನ್ನು ಇರ್ಷಾದ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದೆ. ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ(ಎಲ್‍ಇಟಿ) ಜೊತೆ ನಂಟು ಹೊಂದಿದ್ದ ಎಂಬುದು ತನಿಖೆ ವೇಳೆ ತಿಳಿದುಬಂದಿದೆ. ಇದನ್ನೂ ಓದಿ: Commonwealth Games 2022: ಭಾರತಕ್ಕೆ ನಾಲ್ಕನೇ ಪದಕ – ವೇಟ್‍ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕ ಗೆದ್ದ ಬಿಂದ್ಯಾರಾಣಿ ದೇವಿ

    ಈ ಕುರಿತು ಕಾಶ್ಮೀರದ ಪೊಲೀಸರು ಟ್ವೀಟ್ ಮಾಡಿದ್ದು, ಇರ್ಷಾದ್ ಅಹ್ಮದ್ ಭಟ್ ಮೇ 2022 ರಿಂದ ಭಯೋತ್ಪಾದಕ ಕ್ರಿಯೆಯಲ್ಲಿ ಸಕ್ರಿಯನಾಗಿದ್ದ. ಈತ ನಿಷೇಧಿತ ಭಯೋತ್ಪಾದಕ ಸಂಘಟನೆ ಎಲ್‍ಇಟಿಯೊಂದಿಗೆ ಸಂಪರ್ಕ ಹೊಂದಿದ್ದಾನೆ ಎಂದು ಜಮ್ಮು ಮತ್ತು ಕಾಶ್ಮೀರಿ ಪೊಲೀಸರು ತಿಳಿಸಿದ್ದಾರೆ.

    ಪೊಲೀಸರು ಭಯೋತ್ಪಾದಕನಿಂದ ಒಂದು ಎಕೆ ರೈಫಲ್, ಎರಡು ಮ್ಯಾಗಜೀನ್‍ಗಳು ವಶಪಡಿಸಿಕೊಂಡಿದ್ದಾರೆ. ಎನ್‍ಕೌಂಟರ್ ನಡೆದ ಸ್ಥಳದಲ್ಲಿ ಇನ್ನೂ ಶೋಧ ಕಾರ್ಯ ನಡೆಯುತ್ತಿದೆ. ಹೆಚ್ಚಿನ ಮಾಹಿತಿಗಾಗಿ ತನಿಖೆಯನ್ನು ಮುಂದುವರೆಸಿದ್ದೇವೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ವಾವ್ಹ್ ʼಚಿಕನ್ ಚಾಟ್ʼ ಎಷ್ಟು ಟೇಸ್ಟಿ ಗೊತ್ತಾ.. ನೀವು ಟ್ರೈ ಮಾಡಿ 

    Live Tv
    [brid partner=56869869 player=32851 video=960834 autoplay=true]

  • ಜಮ್ಮು ಕಾಶ್ಮೀರದಲ್ಲಿ ಗ್ರೆನೇಡ್‌ ಸ್ಫೋಟ- ಇಬ್ಬರು ಯೋಧರು ಹುತಾತ್ಮ

    ಜಮ್ಮು ಕಾಶ್ಮೀರದಲ್ಲಿ ಗ್ರೆನೇಡ್‌ ಸ್ಫೋಟ- ಇಬ್ಬರು ಯೋಧರು ಹುತಾತ್ಮ

    ಶ್ರೀನಗರ: ಆಕಸ್ಮಿಕವಾಗಿ ನಡೆದ ಗ್ರೆನೇಡ್‌  ಸ್ಫೋಟದಲ್ಲಿ ಕರ್ತವ್ಯದಲ್ಲಿದ್ದ ಇಬ್ಬರು ಯೋಧರು ಹುತಾತ್ಮರಾದ ಘಟನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್‍ನ ಎಲ್‍ಒಸಿ ಬಳಿ ನಡೆದಿದೆ.

    ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್‌ನಲ್ಲಿ ಸೈನಿಕರು ಎಲ್‍ಒಸಿ ಗಡಿಯಲ್ಲಿ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾಗ ಆಕಸ್ಮಿಕವಾಗಿ ಗ್ರೆನೇಡ್‌ ಸ್ಫೋಟ ಸಂಭವಿಸಿದೆ.

    ಗಾಯಗೊಂಡ ಸೈನಿಕರನ್ನು ತಕ್ಷಣವೇ ಹೆಲಿಕಾಪ್ಟರ್ ಮೂಲಕ ಉಧಂಪುರ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಸಂದರ್ಭದಲ್ಲಿ ಸೇನಾ ಕ್ಯಾಪ್ಟನ್ ಮತ್ತು ನೈಬ್ ಸುಬೇದಾರ್(ಜೆಸಿಒ) ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಭಯೋತ್ಪಾದಕರ ಗುಂಡಿಗೆ CRPF ಯೋಧ ಹುತಾತ್ಮ

    ಭಾನುವಾರ ನಡೆದ ಭಯೋತ್ಪಾದಕರ ಗುಂಡಿನ ದಾಳಿಗೆ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಯೋಧರೊಬ್ಬರು ಹುತಾತ್ಮರಾಗಿರುವ ಘಟನೆ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಗೊಂಗೂ ಕ್ರಾಸಿಂಗ್ ಬಳಿ ನಡೆದಿತ್ತು. ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಸಿಆರ್‌ಪಿಎಫ್ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಹುತಾತ್ಮರಾಗಿದ್ದಾರೆ. ಇದನ್ನೂ ಓದಿ: ಡಿಕೆಶಿ ಒಡೆತನದ ಶಾಲೆಗೆ ಬಾಂಬ್ ಬೆದರಿಕೆ

    Live Tv
    [brid partner=56869869 player=32851 video=960834 autoplay=true]

  • ಉಗ್ರರಿಂದ ಗುಂಡಿನ ದಾಳಿ – ಓರ್ವ ಪೊಲೀಸ್‌ ಹುತಾತ್ಮ, ಇಬ್ಬರಿಗೆ ಗಾಯ

    ಉಗ್ರರಿಂದ ಗುಂಡಿನ ದಾಳಿ – ಓರ್ವ ಪೊಲೀಸ್‌ ಹುತಾತ್ಮ, ಇಬ್ಬರಿಗೆ ಗಾಯ

    ಶ್ರೀನಗರ: ಇಲ್ಲಿನ ಡೌನ್ ಟೌನ್ ಪ್ರದೇಶದಲ್ಲಿನ ಪೊಲೀಸ್ ಚೆಕ್ ಪೋಸ್ಟ್ ಮೇಲೆ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಗೆ ಪೊಲೀಸ್‌ ಅಧಿಕಾರಿ ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

    ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ದಾಳಿಕೋರರನ್ನು ಪತ್ತೆಹಚ್ಚಲು ಸೇನಾಪಡೆ ಪ್ರದೇಶವನ್ನು ಸುತ್ತುವರಿದಿದೆ. ಉಗ್ರರ ಗುಂಡಿನ ದಾಳಿಗೆ ಪೊಲೀಸ್‌ ಅಧಿಕಾರಿ ಹುತಾತ್ಮರಾಗಿದ್ದಾರೆ. ಈ ಸಂಬಂಧ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಯುರೋಪ್ ಪ್ರವಾಸ ಕೈಗೊಂಡ ರಾಹುಲ್ – ಕಾಂಗ್ರೆಸ್ ಮಹತ್ವದ ಸಭೆಗೆ ಗೈರು

    ಲಾಲ್ ಬಜಾರ್‌ನಲ್ಲಿ ನಾಕಾ ಪಾರ್ಟಿಯ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಪೊಲೀಸರು ದಾಳಿಕೋರರನ್ನು ಹಿಡಿಯಲು ಪ್ರಯತ್ನಿಸಿದರು. ಆದರೆ ದಾಳಿಕೋರರು ತಪ್ಪಿಸಿಕೊಂಡಿದ್ದಾರೆ ಎಂದು ಪೊಲೀಸ್‌ ಅಧಿಕಾರಿ ಹೇಳಿದ್ದಾರೆ.

    ಗುಂಡಿನ ದಾಳಿ ನಡೆದ ಕೂಡಲೇ ಹಿರಿಯ ಅಧಿಕಾರಿಗಳು ಮತ್ತು ಹೆಚ್ಚಿನ ಸಂಖ್ಯೆಯ ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿವೆ. ಕಾಶ್ಮೀರದಲ್ಲಿ ನಡೆಯುತ್ತಿರುವ ಅಮರನಾಥ ಯಾತ್ರೆಯ ನಡುವೆ ಹೆಚ್ಚಿನ ಭದ್ರತೆ ಇದ್ದರೂ ಈ ದಾಳಿ ನಡೆದಿದೆ. ಇದನ್ನೂ ಓದಿ: ಆರ್ಥಿಕವಾಗಿ ಸ್ಥಿತಿವಂತರಾಗಿದ್ರೆ ಅನುಕಂಪದ ನೌಕರಿಯಿಲ್ಲ – ಹೊಸ ಮಾರ್ಗಸೂಚಿಯಲ್ಲಿ ಏನಿದೆ?

    Live Tv
    [brid partner=56869869 player=32851 video=960834 autoplay=true]

  • ಊರಿಗೆ ವಾಪಾಸಾಗಲು ಅನುಮತಿಗಾಗಿ ಕಾಯುತ್ತಿದ್ದೇವೆ – ಯಾತ್ರೆಯಿಂದಲೇ ಪಬ್ಲಿಕ್ ಟಿವಿಗೆ ಲೈವ್ ಕೊಟ್ಟ ಕನ್ನಡಿಗರು

    ಊರಿಗೆ ವಾಪಾಸಾಗಲು ಅನುಮತಿಗಾಗಿ ಕಾಯುತ್ತಿದ್ದೇವೆ – ಯಾತ್ರೆಯಿಂದಲೇ ಪಬ್ಲಿಕ್ ಟಿವಿಗೆ ಲೈವ್ ಕೊಟ್ಟ ಕನ್ನಡಿಗರು

    ಶ್ರೀನಗರ: ದಕ್ಷಿಣ ಕಾಶ್ಮೀರದಲ್ಲಿರುವ ಅಮರನಾಥನ ಹಿಮಲಿಂಗದ ಗುಹೆ ಬಳಿ ಮೇಘಸ್ಫೋಟ ಸಂಭವಿಸಿದೆ. ಇಲ್ಲಿಯವರೆಗೆ ಸಾವಿನ ಸಂಖ್ಯೆ 15ಕ್ಕೆ ಏರಿಕೆಯಾಗಿದ್ದು, ಇನ್ನೂ 40 ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

    ಅಮರನಾಥನ ದರ್ಶನಕ್ಕೆ ತೆರಳಿರುವ ಸುಮಾರು 500 ಕನ್ನಡಿಗರು ಬೇಸ್ ಕ್ಯಾಂಪ್‌ನಲ್ಲಿ ಉಳಿದಿದ್ದಾರೆ ಎಂಬ ಮಾಹಿತಿ ದೊರೆತಿದೆ. ಬೆಂಗಳೂರು, ಮಂಡ್ಯ, ರಾಮನಗರ, ಹಾಸನ ಸೇರಿದಂತೆ ಹಲವು ಜಿಲ್ಲೆಗಳಿಂದ ಭಕ್ತರು ಅಮರನಾಥನ ದರ್ಶನಕ್ಕೆ ತೆರಳಿ ಸಿಲುಕಿಕೊಂಡಿದ್ದಾರೆ. ಈ ಬಗ್ಗೆ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿರುವ ಯಾತ್ರಾರ್ಥಿ ಮಹಾಪ್ರಭು ಅಲ್ಲಿನ ಪರಿಸ್ಥಿತಿ ಬಗ್ಗೆ ವಿವರಿಸಿದ್ದಾರೆ.

    ಪಬ್ಲಿಕ್ ಟಿವಿಯೊಂದಿಗೆ ವೀಡಿಯೋ ಸಂದರ್ಶನದಲ್ಲಿ ಮಾತನಾಡಿದ ಮಹಾಪ್ರಭು, ನಾವು ಬೇಸ್ ಕ್ಯಾಂಪ್‌ನಲ್ಲಿ ಸುಮಾರು 20 ಜನ ಸ್ನೇಹಿತರೊಂದಿಗೆ ಉಳಿದುಕೊಂಡಿದ್ದೇವೆ. ನಾವು ಇಂದು ಬೆಳಗ್ಗೆ 3 ಗಂಟೆಗೆ ಅಮರನಾಥನ ದರ್ಶನ ಮಾಡಬೇಕಿತ್ತು. ಆದರೆ ರಾತ್ರಿ ಮೇಘಸ್ಫೋಟದ ಸುದ್ದಿ ಬಂದಿದೆ. ಈ ಹಿನ್ನೆಲೆ ಪ್ರಯಾಣ ರದ್ದಾಗಿರುವುದರಿಂದ ನಾವೀಗ ಬೇಸ್‌ಕ್ಯಾಂಪ್‌ನಲ್ಲಿ ಇದ್ದೇವೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಅಮರನಾಥ ಮೇಘಸ್ಫೋಟ: ಸಾವಿನ ಸಂಖ್ಯೆ 15ಕ್ಕೆ ಏರಿಕೆ, 40 ಮಂದಿ ನಾಪತ್ತೆ – ಯಾತ್ರೆಯಲ್ಲಿ ಸಿಲುಕಿದವರಿಗೆ ಕರ್ನಾಟಕ ಸರ್ಕಾರದಿಂದ ಸಹಾಯವಾಣಿ

    ಇಲ್ಲಿ ಸುಮಾರು ಎರಡೂವರೆ ಸಾವಿರ ಜನರು ಇದ್ದಾರೆ. ಸುಮಾರು 500 ಜನ ಕನ್ನಡಿಗರೇ ಇದ್ದಾರೆ. ಚಿಕ್ಕಮಗಳೂರು, ಮಂಡ್ಯ, ರಾಮನಗರದಿಂದಲೂ ಭಕ್ತರು ಬಂದಿದ್ದಾರೆ. ಮೇಘಸ್ಫೋಟದ ಹಿನ್ನೆಲೆ ಪ್ರವಾಹದ ಪರಿಸ್ಥಿತಿ ಉಂಟಾಗಿದ್ದು, ಅಮರನಾಥ ಪ್ರವಾಸ 1 ವಾರದ ವರೆಗೆ ಸ್ಥಗಿತವಾಗಿರುವ ಮಾಹಿತಿಯಿದೆ. ಭಾರೀ ಮಳೆಯೂ ಆಗುತ್ತಿದೆ ಎಂದರು.

    ಒಂದು ಸಂತೋಷ ಪಡುವ ವಿಷಯವೆಂದರೆ ಇಲ್ಲಿ ಲಂಗರ್ಸ್ ಎಂಬ ವ್ಯವಸ್ಥೆ ಮಾಡಿದ್ದಾರೆ. ಅದರಲ್ಲಿ ಪ್ರವಾಸಿಗರಿಗೆ ಊಟದ ವ್ಯವಸ್ಥೆಯಿದೆ. ಆರ್ಮಿ, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಬಿಎಸ್‌ಎಫ್ ತಂಡಗಳು ನಮಗೆ ಸಹಕಾರ ಕೊಡುತ್ತಿದ್ದಾರೆ. ಊಟ ತಿಂಡಿಯ ವ್ಯವಸ್ಥೆಯೂ ಇದೆ. ಆದರೆ ಎಲ್ಲರಲ್ಲೂ ಭಯದ ವಾತಾವರಣವಿದೆ. ಕರ್ನಾಟಕ ಹಾಗೂ ತಮಿಳುನಾಡಿನ ಹೆಚ್ಚಿನ ಯಾತ್ರಿಕರು ಇಲ್ಲಿದ್ದಾರೆ ಎಂದು ತಿಳಿಸಿದರು.

    ಅಮರನಾಥ ಗುಹೆಯ ಬಳಿ ಕರ್ನಾಟಕದ ಒಂದು ತಂಡದಿಂದ 12 ಜನ ಇನ್ನೂ ವಾಪಾಸ್ ಬಂದಿಲ್ಲ. ಯಾತ್ರೆ ವೇಳೆ ಮೊಬೈಲ್ ಫೋನ್‌ಗೆ ಅನುಮತಿ ಇಲ್ಲದ ಕಾರಣ ಅವರಿಗೆ ಸಂಪರ್ಕದ ಅವಕಾಶ ಸಿಕ್ಕಿಲ್ಲ. ಮಾಹಿತಿ ಪ್ರಕಾರ ಇಲ್ಲಿಯವರೆಗೆ ಯಾರೊಬ್ಬ ಕನ್ನಡಿಗರೂ ಅಪಾಯಕ್ಕೆ ಸಿಲುಕಿಲ್ಲ ಎಂದರು. ಇದನ್ನೂ ಓದಿ: ವಿಜಯಪುರದಲ್ಲೂ ಕಂಪಿಸಿದ ಭೂಮಿ – ಓಡೋಡಿ ಮನೆಯಿಂದ ಹೊರ ಬಂದ ಜನತೆ

    ನಮಗೆ ಇಲ್ಲಿಂದ ಶ್ರೀನಗರಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ. ಹೋಗುವ ದಾರಿ ಜ್ಯಾಮ್ ಆಗಿರುವ ಕಾರಣ ನಮಗೆ ತೆರಳಲು ಅನುಮತಿ ಸಿಗುತ್ತಿಲ್ಲ. ನಾವೀಗ ಊರಿಗೆ ವಾಪಾಸಾಗಲು ಅನುಮತಿಗಾಗಿ ಕಾಯುತ್ತಿದ್ದೇವೆ ಎಂದು ತಿಳಿಸಿದರು.

    Live Tv
    [brid partner=56869869 player=32851 video=960834 autoplay=true]

  • ಅಮರನಾಥದಲ್ಲಿ ಮೇಘಸ್ಪೋಟ, 8 ಮಂದಿ ಸಾವು – NDRF, BSF ತಂಡಗಳಿಂದ ಕಾರ್ಯಾಚರಣೆ

    ಅಮರನಾಥದಲ್ಲಿ ಮೇಘಸ್ಪೋಟ, 8 ಮಂದಿ ಸಾವು – NDRF, BSF ತಂಡಗಳಿಂದ ಕಾರ್ಯಾಚರಣೆ

    ಶ್ರೀನಗರ: ದಕ್ಷಿಣ ಕಾಶ್ಮೀರದ ಹಿಮಾಲಯದಲ್ಲಿರುವ ಅಮರನಾಥದಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಕನಿಷ್ಠ 8 ಮಂದಿ ಮೃತಪಟ್ಟಿದ್ದಾರೆ.

    ಇಂದು ಸಂಜೆ 5.30ರ ವೇಳೆಯಲ್ಲಿ ಮೇಘಸ್ಫೋಟ ಸಂಭವಿಸಿದ ನಂತರ ಕನಿಷ್ಠ 8 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ NDRF, SDRF ಹಾಗೂ BSF ತಂಡಗಳಿಂದ ಕಾರ್ಯಾಚರಣೆ ನಡೆಯುತ್ತಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ:  ಅಮರನಾಥ ಯಾತ್ರೆಗೆ ಎರಡೇ ದಿನ: ಯಾತ್ರಾರ್ಥಿಗಳಿಗೆ ಆಧಾರ್, ಸರ್ಕಾರಿ ಗುರುತಿನ ಚೀಟಿ ಕಡ್ಡಾಯ

    ಘಟನಾ ಪ್ರದೇಶಕ್ಕೆ NDRF, SDRF, BSF ಮತ್ತು ಸ್ಥಳೀಯ ರಕ್ಷಣಾಪಡೆಗಳು ಭೇಟಿ ನೀಡಿದ್ದು, ಘಟನಾ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಭದ್ರತೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಜಮ್ಮು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಜೊತೆಗೆ ಮಾತುಕತೆ ನಡೆಸುತ್ತಿದ್ದಾರೆ. ಜನರ ಜೀವ ಉಳಿಸುವುದು ನಮ್ಮ ಆದ್ಯತೆ ಎಂದು ಶಾ ಅವರು ಟ್ವೀಟ್‌ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ: ನನ್ನ `ಕಾಳಿ’ ಹಿಂದುತ್ವವನ್ನು ಕಿತ್ತೊಗೆಯುತ್ತಾಳೆ: ಲೀನಾ ಮಣಿಮೇಕಲೈ ಸ್ಫೋಟಕ ಹೇಳಿಕೆ

    2 ವರ್ಷಗಳ ಬಳಿಕ ಅಮರನಾಥ ಯಾತ್ರೆ: ಸತತ 2 ವರ್ಷಗಳ ನಂತರ ಅಮರನಾಥ ಯಾತ್ರೆ ಮತ್ತೆ ಪ್ರಾರಂಭವಾಗಿದ್ದು, ಸುಮಾರು 2,750 ಯಾತ್ರಿಕರ ಬ್ಯಾಚ್ ಇಂದು ಯಾತ್ರೆಯನ್ನು ಪ್ರಾರಂಭಿಸಿದ್ದಾರೆ. ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿ ಸ್ವಾಭಾವಿಕವಾಗಿ ರೂಪುಗೊಂಡ ಮಂಜುಗಡ್ಡೆಯ ಲಿಂಗವನ್ನು ಹೊಂದಿರುವ ಗುಹಾ ದೇಗುಲ ಜಗತ್‍ಪ್ರಸಿದ್ಧವಾಗಿದೆ. ಅನಂತನಾಗ್ ಜಿಲ್ಲೆಯ ಪಹಲ್ಗಾಮ್‍ನಲ್ಲಿರುವ ನುನ್ವಾನ್ ಬೇಸ್ ಕ್ಯಾಂಪ್‍ನಲ್ಲಿ ಜಿಲ್ಲಾಧಿಕಾರಿ ಪಿಯೂಷ್ ಸಿಂಗ್ಲಾ ಅವರು ಯಾತ್ರೆಗೆ ಚಾಲನೆ ನೀಡಿದ್ದರು. ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಜಮ್ಮು ಬೇಸ್ ಕ್ಯಾಂಪ್‍ನಿಂದ 4,890 ಯಾತ್ರಾರ್ಥಿಗಳ ಮೊದಲ ಬ್ಯಾಚ್‍ಗೆ ಚಾಲನೆ ನೀಡಿದ್ದರು.

    Live Tv
    [brid partner=56869869 player=32851 video=960834 autoplay=true]

  • ಫೈರಿಂಗ್ ರೇಂಜ್‍ನಲ್ಲಿ ಆಕಸ್ಮಿಕ ಸ್ಫೋಟ – ಇಬ್ಬರು ಸೈನಿಕರಿಗೆ ಗಂಭೀರ ಗಾಯ

    ಫೈರಿಂಗ್ ರೇಂಜ್‍ನಲ್ಲಿ ಆಕಸ್ಮಿಕ ಸ್ಫೋಟ – ಇಬ್ಬರು ಸೈನಿಕರಿಗೆ ಗಂಭೀರ ಗಾಯ

    ಶ್ರೀನಗರ: ಫೈರಿಂಗ್ ರೇಂಜ್(ಶೂಟಿಂಗ್ ವ್ಯಾಪ್ತಿ)ನಲ್ಲಿ ಆಕಸ್ಮಿಕವಾಗಿ ಸ್ಫೋಟವಾದ ಹಿನ್ನೆಲೆ ಇಬ್ಬರು ಸೇನಾ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದಿದೆ.

    Jammu and Kashmir: Two Army personnel injured in accidental mine blast in  Poonch district near LoC

    ಪೂಂಚ್ ಜಿಲ್ಲೆಯ ಜುಲ್ಲಾಸ್ ಪ್ರದೇಶದಲ್ಲಿ ಸೈನಿಕರು ಮತ್ತು ಅವರ ಸಹೋದ್ಯೋಗಿಗಳು ಫೈರಿಂಗ್ ರೇಂಜ್‍ನಲ್ಲಿ ತರಬೇತಿ ಪಡೆಯುತ್ತಿದ್ದರು. ಅದೇ ರೀತಿ ಇಂದು ಸಹ ತರಬೇತಿಯನ್ನು ಪಡೆಯುತ್ತಿದ್ದ ವೇಳೆ ಮಧ್ಯಾಹ್ನ 2 ಗಂಟೆ ಸುಮಾರಿಗೆ ಫೈರಿಂಗ್ ರೇಂಜ್‍ನಲ್ಲಿ ಆಕಸ್ಮಿಕ ಸ್ಫೋಟ ಕಾಣಿಸಿಕೊಂಡಿದೆ. ಇದನ್ನೂ ಓದಿ:  ನಿದ್ದೆಯಿಂದ ಎಬ್ಬಿಸಿದಕ್ಕೆ ಪೊಲೀಸರನ್ನ ಅಸಭ್ಯವಾಗಿ ನಿಂದಿಸಿದ ವ್ಯಕ್ತಿಗೆ 1.7 ವರ್ಷ ಜೈಲು ಶಿಕ್ಷೆ 

    3 Army personnel injured in mine blast along LoC in J&K's Poonch district -  India News

    ಘಟನೆ ವೇಳೆ ಪಕ್ಕದಲ್ಲಿಯೇ ಸೈನಿಕರಿದ್ದು, ಇಬ್ಬರಿಗೆ ಗಾಯವಾಗಿದೆ. ಪರಿಣಾಮ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಪೋಷಕರಿಂದ ಮನವಿ- ಭದ್ರತಾಪಡೆಗೆ ಶರಣಾದ ಇಬ್ಬರು ಉಗ್ರರು

    ಪೋಷಕರಿಂದ ಮನವಿ- ಭದ್ರತಾಪಡೆಗೆ ಶರಣಾದ ಇಬ್ಬರು ಉಗ್ರರು

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಾಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆ ವೇಳೆ ಇಬ್ಬರು ಉಗ್ರರು ಶರಣಾಗಿದ್ದಾರೆ.

    ಇಂದು ಮುಂಜಾನೆ ಹಡಿಗಾಂ ಗ್ರಾಮದಲ್ಲಿ ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ ಇಬ್ಬರು ಉಗ್ರರು ಪೋಷಕರ ಮನವಿಯ ಮೇರೆಗೆ ಸೈನಿಕರಿಗೆ ಶರಣಾಗಿದ್ದಾರೆ.

    ಭದ್ರತಾ ಪಡೆಗಳು ಉಗ್ರರ ಅಡಗುತಾಣದ ಮೇಲೆ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಇಬ್ಬರು ಉಗ್ರರ ಪೋಷಕರನ್ನು ಭದ್ರತಾ ಪಡೆಗಳು ಕರೆತಂದಿದ್ದರು. ಈ ವೇಳೆ ಪೋಷಕರು ತಮ್ಮ ಮಕ್ಕಳೊಂದಿಗೆ ಮಾತನಾಡಿ ಶರಣಾಗುವಂತೆ ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಒಟ್ಟಿಗೆ ಫೈಟರ್ ಜೆಟ್ ಹಾರಿಸಿ ಇತಿಹಾಸ ಸೃಷ್ಟಿದ ತಂದೆ- ಮಗಳು

    ಈ ಹಿನ್ನೆಲೆಯಲ್ಲಿ ಆ ಇಬ್ಬರು ಉಗ್ರರು ಪೊಲೀಸರಿಗೆ ಶರಣಾಗಿದ್ದಾರೆ. ಈ ಇಬ್ಬರು ಸ್ಥಳೀಯರಾಗಿದ್ದಾರೆ. ಅಷ್ಟೇ ಅಲ್ಲದೇ ಇತ್ತೀಚೆಗೆ ಭಯೋತ್ಪಾದಕ ಗುಂಪಿಗೆ ಸೇರಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಹಾಗೂ ಅವರಲ್ಲಿದ್ದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಬ್ರಿಟನ್ ಹಣಕಾಸು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಇನ್ಫೋಸಿಸ್ ನಾರಾಯಣಮೂರ್ತಿ ಅಳಿಯ ರಿಷಿ ಸುನಾಕ್

    Live Tv
    [brid partner=56869869 player=32851 video=960834 autoplay=true]

  • ಇಂದಿನಿಂದ ಅಮರನಾಥ ಯಾತ್ರೆ ಪ್ರಾರಂಭ- ಯಾತ್ರೆ ಹೊರಟ 2,750 ಮಂದಿ

    ಇಂದಿನಿಂದ ಅಮರನಾಥ ಯಾತ್ರೆ ಪ್ರಾರಂಭ- ಯಾತ್ರೆ ಹೊರಟ 2,750 ಮಂದಿ

    ಶ್ರೀನಗರ: ಸತತ 2 ವರ್ಷಗಳ ನಂತರ ಅಮರನಾಥ ಯಾತ್ರೆ ಮತ್ತೆ ಪ್ರಾರಂಭವಾಗಿದ್ದು, ಸುಮಾರು 2,750 ಯಾತ್ರಿಕರ ಬ್ಯಾಚ್ ಇಂದು ಯಾತ್ರೆಯನ್ನು ಪ್ರಾರಂಭಿಸಿದ್ದಾರೆ.

    ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿ ಸ್ವಾಭಾವಿಕವಾಗಿ ರೂಪುಗೊಂಡ ಮಂಜುಗಡ್ಡೆಯ ಲಿಂಗವನ್ನು ಹೊಂದಿರುವ ಗುಹಾ ದೇಗುಲ ಜಗತ್‍ಪ್ರಸಿದ್ಧವಾಗಿದೆ. ಅನಂತನಾಗ್ ಜಿಲ್ಲೆಯ ಪಹಲ್ಗಾಮ್‍ನಲ್ಲಿರುವ ನುನ್ವಾನ್ ಬೇಸ್ ಕ್ಯಾಂಪ್‍ನಲ್ಲಿ ಜಿಲ್ಲಾಧಿಕಾರಿ ಪಿಯೂಷ್ ಸಿಂಗ್ಲಾ ಅವರು ಯಾತ್ರೆಗೆ ಚಾಲನೆ ನೀಡಿದರು.

    ಪ್ರಯಾಣವು ಬಹುತೇಕ ಕಾಲ್ನಡಿಗೆಯಲ್ಲೇ ಪ್ರಯಾಣಿಸುತ್ತಾರೆ, ಮಾರ್ಗದುದ್ದಕ್ಕೂ ಶೀಷ್‍ನಾಗ್ ಮತ್ತು ಪಂಚತಾರ್ಣಿಯಲ್ಲಿ ರಾತ್ರಿ ವ್ಯವಸ್ಥೆ ಮಾಡಲಾಗಿದೆ. 43 ದಿನಗಳ ಯಾತ್ರೆಯನ್ನು ಸುಗಮವಾಗಿ ನಡೆಸಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದರು.

    ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಜಮ್ಮು ಬೇಸ್ ಕ್ಯಾಂಪ್‍ನಿಂದ 4,890 ಯಾತ್ರಾರ್ಥಿಗಳ ಮೊದಲ ಬ್ಯಾಚ್‍ಗೆ ಚಾಲನೆ ನೀಡಿದರು. ಅಮರನಾಥ ದೇಗುಲ ಮಂಡಳಿ (ಎಸ್‍ಎಎಸ್‍ಬಿ) ಸಹ ನೈಸರ್ಗಿಕವಾಗಿ ರೂಪುಗೊಂಡ ಮಂಜುಗಡ್ಡೆಯ ಆನ್‍ಲೈನ್ ದರ್ಶನಕ್ಕೆ ಅವಕಾಶ ಕಲ್ಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ:  ಅಮರನಾಥ ಯಾತ್ರೆಗೆ ಎರಡೇ ದಿನ: ಯಾತ್ರಾರ್ಥಿಗಳಿಗೆ ಆಧಾರ್, ಸರ್ಕಾರಿ ಗುರುತಿನ ಚೀಟಿ ಕಡ್ಡಾಯ

    ಜಮ್ಮು ಮತ್ತು ಕಾಶ್ಮೀರ ಆಡಳಿತವು ಪವಿತ್ರ ಗುಹೆಗೆ ಪಹಲ್ಗಾಮ್ ಮತ್ತು ಬಾಲ್ಟಾಲ್ ಮಾರ್ಗಗಳಲ್ಲಿ ಭಾರೀ ಭದ್ರತೆಯನ್ನು ಒದಗಿಸುವ ಮೂಲಕ ಉಗ್ರರ ದಾಳಿಯನ್ನು ತಪ್ಪಿಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಅಮರನಾಥ ಯಾತ್ರೆಗೆ ಕೆಲವೇ ದಿನ – ಗಡಿಯಲ್ಲಿ ಶೋಧ ಕಾರ್ಯ ಚುರುಕು

    ಕೇಂದ್ರಾಡಳಿತ ಪ್ರದೇಶದ ಆರೋಗ್ಯ ಇಲಾಖೆಯು ಯಾತ್ರಾರ್ಥಿಗಳಿಗೆ ಆರೋಗ್ಯ ಸೌಲಭ್ಯಗಳನ್ನು ಒದಗಿಸಲು ವಿಶೇಷ ವ್ಯವಸ್ಥೆಗಳನ್ನು ಮಾಡಿದೆ. 109 ಬೇಸಿಕ್ ಲೈಫ್ ಸಪೋರ್ಟ್ ಅಂಬುಲೆನ್ಸ್‍ಗಳ ವ್ಯವಸ್ಥೆ ಸಹ ಇದೆ. ಪ್ರಾಥಮಿಕ ಚಿಕಿತ್ಸೆಯ ಸಾಮಾಗ್ರಿಗಳನ್ನು ಯಾತ್ರೆ ಮಾರ್ಗ ಮಧ್ಯೆ ಇಡಲಾಗಿದೆ. ಆಗಸ್ಟ್ 11ರವರೆಗೆ ಯಾತ್ರಿಕರು ಯಾತ್ರೆ ಮಾಡಬಹುದು.

    Live Tv