Tag: jammu kashmir

  • ಪೊಲೀಸರ ಮೇಲೆ ದಾಳಿ ನಡೆಸಲು ಯೋಜಿಸಿದ್ದ ಉಗ್ರನ ಬಂಧನ

    ಪೊಲೀಸರ ಮೇಲೆ ದಾಳಿ ನಡೆಸಲು ಯೋಜಿಸಿದ್ದ ಉಗ್ರನ ಬಂಧನ

    ಶ್ರೀನಗರ: ಅಮರನಾಥ ಯಾತ್ರೆಗೆ ಕೆಲವು ದಿನಗಳ ಮುಂಚಿತವಾಗಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಇತರ ಭದ್ರತಾ ಪಡೆಗಳೊಂದಿಗೆ ನಡೆಸಿದ ಕಾರ್ಯಾಚರಣೆಯಲ್ಲಿ ಉಗ್ರನೊಬ್ಬನನ್ನು ದೋಡಾದಲ್ಲಿ ಬಂಧಿಸಿದ್ದಾರೆ.

    ಫರೀದ್ ಅಹ್ಮದ್ ಬಂಧಿತ ಉಗ್ರ. ಆತನಿಂದ ಚೈನೀಸ್ ಪಿಸ್ತೂಲ್, 2 ಮ್ಯಾಗಜೀನ್, 14 ಮದ್ದುಗುಂಡುಗಳು ಮತ್ತು ಒಂದು ಮೊಬೈಲ್ ಅನ್ನು ವಶಪಡಿಸಿಕೊಂಡಿದ್ದಾರೆ. ಈತ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದನು. ಫರೀದ್‍ನನ್ನು ಪೊಲೀಸ್ ಅಧಿಕಾರಿಗಳ ಮೇಲೆ ದಾಳಿ ನಡೆಸಲು ನಿಯೋಜಿಸಲಾಗಿತ್ತು.

    ಬಂಧಿತ ಉಗ್ರನ ಸಂಬಂಧಿಯೊಬ್ಬ ಪಾಕಿಸ್ತಾನದಲ್ಲಿದ್ದಾನೆ. ಆತನು ಭಯೋತ್ಪಾದಕರಾಗಿದ್ದಾನೆ. ಇದರಿಂದಾಗಿ ಫರೀದ್ ದೋಡಾದಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರ ಮೇಲೆ ದಾಳಿ ನಡೆಸಲು ಅವನೊಂದಿಗೆ ನಿರಂತರ ಸಂಪರ್ಕದಲ್ಲಿದ್ದನು. ಅದಕ್ಕಾಗಿಯೇ ಅವನಿಗೆ ಮೂರು ತಿಂಗಳ ಹಿಂದೆ ಶಸ್ತ್ರಾಸ್ತ್ರಗಳನ್ನು ಪಡೆದುಕೊಂಡಿದ್ದ ಎಂದು ಎಂದು ಮೂಲಗಳು ತಿಳಿಸಿವೆ.

    ಈ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆಗೆ ಮುಂಚಿತವಾಗಿ ಬಂದಿದ್ದ ಗುಪ್ತಚರ ಮಾಹಿತಿ ಮತ್ತು ಭದ್ರತೆಯನ್ನು ಆಧರಿಸಿ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ದೋಡಾ ಪಟ್ಟಣದ ಹೊರವಲಯದಲ್ಲಿ ದಾಳಿ ನಡೆಸಿ, ಉಗ್ರ ಫರೀದ್‍ನನ್ನು ಬಂಧಿಸಿದ್ದಾರೆ. ಆತನ ಬಳಿ ಇದ್ದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.

    Live Tv

  • ಬೆಂಗಳೂರಲ್ಲಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದ ಜಮ್ಮು ಕಾಶ್ಮೀರ ಪೊಲೀಸರು

    ಬೆಂಗಳೂರಲ್ಲಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದ ಜಮ್ಮು ಕಾಶ್ಮೀರ ಪೊಲೀಸರು

    ಬೆಂಗಳೂರು:  ನಗರದಲ್ಲಿ ನೆಲೆಸಿದ್ದ ವ್ಯಕ್ತಿಯೊಬ್ಬನನ್ನು ಜಮ್ಮು ಕಾಶ್ಮೀರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ತಾಲಿಬ್ ಹುಸೇನ್ ಎಂಬಾತನ್ನು ಕಾಶ್ಮೀರದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳೆದ ಎರಡು ವರ್ಷಗಳಿಂದ ಹುಸೇನ್ ನಗರದ ಶ್ರೀರಾಮಪುರದಲ್ಲಿ ವಾಸವಿದ್ದ. ತಾಲಿಬ್ ಹುಸೇನ್ ಮೂಲತಃ ಜಮ್ಮು ನಿವಾಸಿಯಾಗಿದ್ದಾನೆ. ಇದನ್ನೂ ಓದಿ: ಪತಿಯ ಹತ್ಯೆಗೆ ಸುಪಾರಿ ಕೊಟ್ಟಿದ್ದ ಪತ್ನಿ ಪ್ಲ್ಯಾನ್ ಫ್ಲಾಪ್

    ಜಮ್ಮುವಿನ ಕಿಸ್ತ್‍ವಾರ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಎಂಟು ದಿನದ ಹಿಂದೆ ಪೊಲೀಸರು ಆರೋಪಿ ತಾಲಿಬ್ ಹುಸೇನ್ ವಶಕ್ಕೆ ಪಡೆದುಕೊಂಡು ಜಮ್ಮು ಕಾಶ್ಮೀರಕ್ಕೆ ಕರೆದೊಯ್ದಿದ್ದಾರೆ. ಇದನ್ನೂ ಓದಿ: ಹಿಂದಿ ಹಿಂದುಳಿದ ರಾಜ್ಯಗಳ ಭಾಷೆ, ಇದು ಶೂದ್ರರಿಗೆ ಮಾತ್ರ: ಡಿಎಂಕೆ ಸಂಸದ

  • ಕಾಶ್ಮಿರಿ ಪಂಡಿತೆಯನ್ನು ಹತೈಗೈದ ಉಗ್ರರು

    ಕಾಶ್ಮಿರಿ ಪಂಡಿತೆಯನ್ನು ಹತೈಗೈದ ಉಗ್ರರು

    ಶ್ರೀನಗರ: ಕಾಶ್ಮೀರಿ ಪಂಡಿತೆಯನ್ನು ಉಗ್ರರು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಗೋಪಾಲಪುರಾ ಪ್ರದೇಶದಲ್ಲಿ ನಡೆದಿದೆ.

    ಸಾಂಬಾ ಜಿಲ್ಲೆಯ ರಾಜ್ ಕುಮಾರ್ ಅವರ ಪತ್ನಿ ರಜನಿ ಹತ್ಯೆಯಾದ ಕಾಶ್ಮೀರಿ ಪಂಡಿತೆ. ರಜನಿ ಶಾಲಾ ಶಿಕ್ಷಕಿ ಹಾಗೂ ಜಮ್ಮು ವಿಭಾಗದ ಸಾಂಬಾ ನಿವಾಸಿಯಾಗಿದ್ದರು. ಕುಲ್ಗಾಮ್‌ನ ಗೋಪಾಲ್‌ಪೋರಾ ಹೈಸ್ಕೂಲ್‌ನಲ್ಲಿ ರಜನಿ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಆಕೆ ತೀವ್ರವಾಗಿ ಗಾಯಗೊಂಡಿದ್ದರು.

    crime

    ತಕ್ಷಣವೇ ಆಕೆಯನ್ನು ಕುಲ್ಗಾಮ್‌ನ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾದೇ ಮೃತಪಟ್ಟರು. ಘಟನೆ ನಡೆದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭದ್ರತಾ ಪಡೆಗಳು ದೌಡಾಯಿಸಿವೆ. ಇದನ್ನೂ ಓದಿ: ವಿದ್ಯಾಭ್ಯಾಸ ಕೊಡಿಸಲು ಆತ್ಮಹತ್ಯೆಗೆ ಶರಣಾಗಿದ್ದ ರೈತನ ಮಗಳು ಯುಪಿಎಸ್‍ಸಿಯಲ್ಲಿ ಟಾಪರ್

    ಆ ದಾಳಿಯು ಇತ್ತೀಚಿಗೆ ಕಣಿವೆಯಲ್ಲಿ ಕಾಶ್ಮೀರಿ ನಾಗರಿಕ ಹತ್ಯೆಗಳ ಸರಣಿಯಲ್ಲಿ ಒಂದಾಗಿದೆ. ಮೇ 12 ರಂದು ಬುದ್ಗಾಮ್ ಜಿಲ್ಲೆಯಲ್ಲಿ ಕಂದಾಯ ಇಲಾಖೆ ನೌಕರ ರಾಹುಲ್ ಭಟ್ ಅವರನ್ನು ಉಗ್ರರು ಹತ್ಯೆ ಮಾಡಿದ್ದರು. ಕಳೆದ ವಾರ, ಬುದ್ಗಾಮ್‍ನ ಚದೂರ ಪ್ರದೇಶದಲ್ಲಿ ಕಲಾವಿದೆ ಅಮ್ರೀನ್ ಭಟ್ ಸಾವನ್ನಪ್ಪಿದ್ದರು.

    Omar Abdullah

    ಘಟನೆಯ ಬಗ್ಗೆ ನ್ಯಾಶನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಅವರು ಸಂತಾಪ ಸೂಚಿಸಿ, ತುಂಬಾ ದುಃಖವಾಗಿದೆ. ಇದು ನಾಗರಿಕರನ್ನು ಗುರಿಯಾಗಿಸಿಕೊಂಡು ಮಾಡಿರುವ ದಾಳಿಯಾಗಿದೆ. ಸರ್ಕಾರದ ಭರವಸೆಗಳಂತೆ ಖಂಡನೆ ಮತ್ತು ಸಂತಾಪಗಳ ಮಾತುಗಳು ಸುಳ್ಳಾಗಿದೆ ಎಂದರು. ಇದನ್ನೂ ಓದಿ: ನಾಗರಿಕರನ್ನು ಕೊಂದಿದ್ದ ಇಬ್ಬರು ಉಗ್ರರ ಹತ್ಯೆ

  • ಉಗ್ರರ ಗುಂಡಿನ ದಾಳಿಗೆ ಪೊಲೀಸ್‌ ಸಿಬ್ಬಂದಿ ಹುತಾತ್ಮ – 7 ವರ್ಷದ ಮಗಳಿಗೆ ಗಾಯ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಗೆ ಪೊಲೀಸ್‌ ಹುತಾತ್ಮರಾಗಿದ್ದು, ಅವರ ಏಳು ವರ್ಷದ ಮಗಳು ದಾಳಿಯಿಂದ ಗಾಯಗೊಂಡಿದ್ದಾಳೆ.

    ಮಂಗಳವಾರ ಉಗ್ರರು ಶ್ರೀನಗರದಲ್ಲಿದ್ದ ಪೊಲೀಸ್‌ ಮನೆಯ ಹೊರಗಿನಿಂದ ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಿಂದ ಮೃತಪಟ್ಟ ಪೊಲೀಸ್‌ ಸೌರಾ ಪ್ರದೇಶದ ಸೈಫುಲ್ಲಾ ಖಾದ್ರಿ ಎಂದು ಗುರುತಿಸಲಾಗಿದೆ. ಪೊಲೀಸ್‌ ಪುತ್ರಿ ಅಪಾಯದಿಂದ ಪಾರಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ವೈದ್ಯಕೀಯ ವಿದ್ಯಾರ್ಥಿನಿ ವಿಸ್ಮಯಾ ಸಾವು ಪ್ರಕರಣ – ಪತಿಗೆ 10 ವರ್ಷ ಜೈಲು, 12 ಲಕ್ಷ ದಂಡ

    ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಸಂಘಟನೆಯ ಐವರು ‘ಹೈಬ್ರಿಡ್’ ಭಯೋತ್ಪಾದಕರನ್ನು ಬಂಧಿಸಿರುವುದಾಗಿ ಸೋಮವಾರ ತಿಳಿಸಿದ್ದರು. ಅವರಲ್ಲಿ ಮೂವರು ಕಳೆದ ತಿಂಗಳು ಬಾರಾಮುಲ್ಲಾ ಜಿಲ್ಲೆಯಲ್ಲಿ ಸರಪಂಚ್‌ನಲ್ಲಿ ನಡೆದ ಹತ್ಯೆಯಲ್ಲಿ ಭಾಗಿಯಾಗಿದ್ದರು ಎಂದು ಹೇಳಲಾಗಿದೆ.

    ‘ಹೈಬ್ರಿಡ್’ ಭಯೋತ್ಪಾದಕರು ಎಂದರೆ ಭಯೋತ್ಪಾದಕರ ಪಟ್ಟಿಗೆ ಸೇರದ ಆದರೆ ಭಯೋತ್ಪಾದಕ ದಾಳಿಯನ್ನು ನಡೆಸುವಷ್ಟು ಸಾಮರ್ಥ್ಯ ಹೊಂದಿರುತ್ತಾರೆ. ಇದನ್ನೂ ಓದಿ: ಭಾರೀ ಮಳೆಯಿಂದಾಗಿ ಕೇದಾರನಾಥ ಯಾತ್ರೆ ಸ್ಥಗಿತ

  • ದ್ವೇಷದ ವಾತಾವರಣ ಸೃಷ್ಟಿಸಿರುವ ʼದಿ ಕಾಶ್ಮೀರ್‌ ಫೈಲ್ಸ್‌ʼ ಸಿನಿಮಾ ಬ್ಯಾನ್‌ ಮಾಡಿ: ಫಾರೂಕ್‌ ಅಬ್ದುಲ್ಲಾ ಒತ್ತಾಯ

    ದ್ವೇಷದ ವಾತಾವರಣ ಸೃಷ್ಟಿಸಿರುವ ʼದಿ ಕಾಶ್ಮೀರ್‌ ಫೈಲ್ಸ್‌ʼ ಸಿನಿಮಾ ಬ್ಯಾನ್‌ ಮಾಡಿ: ಫಾರೂಕ್‌ ಅಬ್ದುಲ್ಲಾ ಒತ್ತಾಯ

    ಶ್ರೀನಗರ: ದೇಶದಲ್ಲಿ ದ್ವೇಷದ ವಾತಾವರಣ ಸೃಷ್ಟಿಸಿರುವ ವಿವೇಕ್‌ ಅಗ್ನಿಹೋತ್ರಿ ನಿರ್ದೇಶನದ ʼದಿ ಕಾಶ್ಮೀರ್‌ ಫೈಲ್ಸ್‌ʼ ಸಿನಿಮಾವನ್ನು ನಿಷೇಧಿಸಬೇಕು ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್‌ ಅಬ್ದುಲ್ಲಾ ಒತ್ತಾಯಿಸಿದ್ದಾರೆ.

    ಆಧಾರರಹಿತ ಸನ್ನಿವೇಶಗಳನ್ನು ಸಿನಿಮಾ ಒಳಗೊಂಡಿದೆ. ನಾವು ಎಲ್‌ಜಿ ಮನೋಜ್ ಸಿನ್ಹಾ ಅವರನ್ನು ಭೇಟಿ ಮಾಡಿದ್ದೇವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸುವುದೇ ಈ ಸಿನಿಮಾದ ಉದ್ದೇಶ. ಪ್ರವಾಸಿಗರು ಕಣಿವೆಗೆ ಭೇಟಿ ನೀಡುತ್ತಿದ್ದರೆ, ನಿತ್ಯ ಅವರನ್ನು ಹತ್ಯೆ ಮಾಡಲಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬುಲ್ಡೋಜರ್ ಕಾರ್ಯಾಚರಣೆ- ಸ್ವಾತಂತ್ರ್ಯ ಭಾರತದ ಅತಿದೊಡ್ಡ ವಿನಾಶ: ಕೇಜ್ರಿವಾಲ್

    ನಾವು ಒಬ್ಬರಿಗೊಬ್ಬರು ಹತ್ತಿರವಾಗಬೇಕಾದರೆ, ಈ ದ್ವೇಷ ಕೊನೆಗೊಳ್ಳಬೇಕು. ಮುಸಲ್ಮಾನನೊಬ್ಬ ಹಿಂದೂ ವ್ಯಕ್ತಿಯನ್ನು ಕೊಂದು ಅವನ ರಕ್ತ ಮೆತ್ತಿಕೊಂಡಿದ್ದ ಅಕ್ಕಿಯನ್ನು ಅವನ ಹೆಂಡತಿಗೆ ತಿನ್ನಲು ಹೇಳುವ ದೃಶ್ಯ ಸಿನಿಮಾದಲ್ಲಿದೆ. ಇದು ಆಧಾರರಹಿತ ಚಲನಚಿತ್ರವಾಗಿದೆ. ಈ ಸಿನಿಮಾ ದೇಶದಲ್ಲಿ ದ್ವೇಷವನ್ನು ಬಿತ್ತುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಸಹಕಾರಿಯಾಗುವ ಎಲ್ಲದರೊಂದಿಗೂ ನಿಲ್ಲಿರಿ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲು ನಾವು ಬಯಸುವುದಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೇಂದ್ರ ಸಚಿವ ಸಂಜೀವ್ ಬಲ್ಯಾನ್ ಮೇಲೆ ಮಸಿ ಎರಚಿದ ಕೈ ಕಾರ್ಯಕರ್ತರು

    ಕಾಶ್ಮೀರಿ ಪಂಡಿತ್ ಮತ್ತು ಸರ್ಕಾರಿ ನೌಕರ ರಾಹುಲ್ ಭಟ್ ಅವರು ಈಚೆಗೆ ಉಗ್ರರ ಗುಂಡಿಗೆ ಹತ್ಯೆಯಾದರು. ಹತ್ಯೆಗೆ ಸ್ಥಳೀಯರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.

  • ಪಾಕಿಸ್ತಾನದ ಏಜೆಂಟ್‌ಗಳು ಹುಟ್ಟಿಕೊಳ್ಳುವುದೇ ಮಂಗಳೂರಿನಲ್ಲಿ: ಎ. ನಾರಾಯಣಸ್ವಾಮಿ

    ಪಾಕಿಸ್ತಾನದ ಏಜೆಂಟ್‌ಗಳು ಹುಟ್ಟಿಕೊಳ್ಳುವುದೇ ಮಂಗಳೂರಿನಲ್ಲಿ: ಎ. ನಾರಾಯಣಸ್ವಾಮಿ

    ಚಾಮರಾಜನಗರ: ಮಂಗಳೂರಿನಲ್ಲಿ ಹಲವು ಸಂಘಟನೆಗಳಿದ್ದು, ಪಾಕಿಸ್ತಾನದ ಏಜೆಂಟ್‌ಗಳು ಹುಟ್ಟಿಕೊಳ್ಳುವುದೇ ಅಲ್ಲಿ ಎಂದು ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಹೇಳಿದರು.

    ಮುಸ್ಲಿಂ ಡಿಫೆನ್ಸ್ ಫೋರ್ಸ್ ಎಂಬ ಸಂಘಟನೆ ಬಗ್ಗೆ ಚಾಮರಾಜನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಮಂಗಳೂರು, ಕೇರಳ, ದೆಹಲಿ ಸೇರಿದಂತೆ ಎಲ್ಲೇ ಸಂಘಟನೆಗಳು ಹುಟ್ಟಿಕೊಳ್ಳಲಿ, ಅವರನ್ನು ಸದೆಬಡಿಯುತ್ತೇವೆ. ಯಾವುದೇ ಕಾರಣಕ್ಕೂ ಅವರನ್ನು ಬಿಡಲ್ಲ. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ದೇಶದ ಗೌರವ, ಸಾರ್ವಭೌಮತೆಗೆ ಕುಂದು ತರುವ ಸಂಸ್ಥೆಗಳನ್ನು ಬಿಡುತ್ತಿಲ್ಲ. ಯಾವುದನ್ನು ಯಾವ ಕಾಲಘಟ್ಟದಲ್ಲಿ ಬ್ಯಾನ್ ಮಾಡಬೇಕೋ, ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಡಿಕೆಶಿ ಏನೇ ಮಾಡಿದ್ರು ಅಂಜುವ ಮಗ ನಾನಲ್ಲ: ಯತ್ನಾಳ್

    ಪಾಕಿಸ್ತಾನ್ ಜಿಂದಾಬಾದ್, ಛೋಟಾ ಪಾಕಿಸ್ತಾನ್ ಎಂದು ಕೂಗುವ ಪ್ರವೃತ್ತಿಗಳು ಜಮ್ಮು ಕಾಶ್ಮೀರದಲ್ಲಿ ಪ್ರಾರಂಭವಾಗಿತ್ತು. ಹಿಂದಿನ ಸರ್ಕಾರಗಳು ಇದನ್ನು ನಿಗ್ರಹಿಸಲು ವಿಫಲವಾಗಿದ್ದವು. ಪಾಕಿಸ್ತಾನದಲ್ಲಿ ಸರ್ಕಾರ ಬದಲಾವಣೆಯಾದಾಗ ಇಂತಹ ಘಟನೆಗಳು ಮತ್ತೆ ಪ್ರಾರಂಭವಾಗಿವೆ. ಇದನ್ನು ನಿಗ್ರಹಿಸುವ ಶಕ್ತಿ ಭಾರತಕ್ಕಿದ್ದು, ನಿಗ್ರಹ ಮಾಡುತ್ತೇವೆ ಎಂದರು. ಇದನ್ನೂ ಓದಿ: ಕೇಜ್ರಿವಾಲ್ ಓರ್ವ ಅರಾಜಕತೆ ಸೃಷ್ಟಿ ಮಾಡುವ ನಾಯಕ: ಸಂದೀಪ್

    ಪಾಕಿಸ್ತಾನದ ಏಜೆಂಟ್‌ನಂತೆ ನಡೆದುಕೊಳ್ಳುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ, ಕೇಂದ್ರ ಸರ್ಕಾರ ಶಕ್ತವಾಗಿದೆ. ಧರ್ಮ ಸಂಘರ್ಷ ಪ್ರಕರಣಗಳು ನಡೆದಾಗ ನಿರ್ಲಕ್ಷ್ಯ ಮಾಡಿಲ್ಲ. ಘಟನೆಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದ್ದು, ಅವರನ್ನು ಬಂಧಿಸಲಾಗುವುದು. ಕವಲಂದೆ ಪ್ರಕರಣದಲ್ಲೂ ಇಬ್ಬರನ್ನೂ ಬಂಧಿಸಲಾಗಿದೆ ಎಂದು ತಿಳಿಸಿದರು.

    ಪಾಕಿಸ್ತಾನ ಏಜೆಂಟ್‌ಗಳು ದೇಶದಲ್ಲಿ ಸಕ್ರಿಯವಾಗಿದ್ದಾರೆ. ಅದಕ್ಕಾಗಿಯೇ ಜಮ್ಮು-ಕಾಶ್ಮೀರದಲ್ಲಿ ಆರ್ಟಿಕಲ್ 370 ತೆಗೆದು ಹಾಕಿದ್ದೇವೆ. ದೇಶದಲ್ಲಿ ರಾಷ್ಟ್ರೀಯತೆ ಮೈಗೂಡಿಸಲು ಏನೇನು ಕಾನೂನು ಬೇಕು ಅದನ್ನು ತರಲಾಗುತ್ತಿದೆ ಎಂದರು.

  • ಜಮ್ಮು-ಕಾಶ್ಮೀರ ಗಡಿಯಲ್ಲಿ 200 ಭಯೋತ್ಪಾದಕರು ದಾಳಿಗೆ ಹೊಂಚುಹಾಕುತ್ತಿದ್ದಾರೆ: ಭಾರತ ಸೇನೆ ಎಚ್ಚರಿಕೆ

    ಜಮ್ಮು-ಕಾಶ್ಮೀರ ಗಡಿಯಲ್ಲಿ 200 ಭಯೋತ್ಪಾದಕರು ದಾಳಿಗೆ ಹೊಂಚುಹಾಕುತ್ತಿದ್ದಾರೆ: ಭಾರತ ಸೇನೆ ಎಚ್ಚರಿಕೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿಯುದ್ಧಕ್ಕೂ ಒಳನುಸುಳಲು ಸುಮಾರು 200 ಭಯೋತ್ಪಾದಕರು ಕಾಯುತ್ತಿದ್ದಾರೆ ಎಂದು ಉತ್ತರ ಸೇನಾ ಕಮಾಂಡರ್‌ ಜನರಲ್‌ ಉಪೇಂದ್ರ ದ್ವಿವೇದಿ ಎಚ್ಚರಿಕೆ ನೀಡಿದ್ದಾರೆ.

    ಗಡಿಯಲ್ಲಿ ಭಯೋತ್ಪಾದಕರು ಒಳನುಸುಳುವಿಕೆ ತೀವ್ರವಾಗಿ ಕಡಿಮೆಯಾಗಿದೆ. 2021ರ ಒಪ್ಪಂದದ ನಂತರ ಇಂಡೋ-ಪಾಕ್ ಗಡಿಯಲ್ಲಿ ಕದನ ವಿರಾಮವು ಉತ್ತಮವಾಗಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಎನ್‍ಕೌಂಟರ್‌ನಲ್ಲಿ ಮೂರು ಭಯೋತ್ಪಾದಕರ ಪೈಕಿ ಒಬ್ಬ ಬದುಕುಳಿದ

    ಈ ವರ್ಷ ಇಲ್ಲಿಯವರೆಗೆ 21 ವಿದೇಶಿ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ತರಬೇತಿ ಪಡೆದ ಭಯೋತ್ಪಾದಕರ ಸಂಖ್ಯೆ ಪ್ರತಿ ವರ್ಷವೂ ಕ್ಷೀಣಿಸುತ್ತಿದೆ. ಇಂಡೋ-ಪಾಕ್ ಗಡಿಯಲ್ಲಿ ಸುಮಾರು 200 ಭಯೋತ್ಪಾದಕರ ಸಂಖ್ಯೆ ಇದೆ. ಅವರು ದಾಳಿ ನಡೆಸಲು ಕಾಯುತ್ತಿದ್ದಾರೆ ಎಂದು ದ್ವಿವೇದಿ ಅವರು ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಉದ್ದಕ್ಕೂ ನಿಯೋಜಿಸಿರುವ ಭದ್ರತಾ ಪರಿಸ್ಥಿತಿಯ ಪ್ರಶ್ನೆಗೆ ಉತ್ತರಿಸಿದ್ದಾರೆ.

    ಯಾವುದೇ ಒಳನುಸುಳುವಿಕೆ ನಡೆಯದಂತೆ ಎಲ್ಲಾ ಮೀಸಲು ಪಡೆಗಳನ್ನು ಎರಡನೇ ಹಂತದ ರಕ್ಷಣೆಯಲ್ಲಿ ಇರಿಸಲಾಗಿದೆಯೇ ಎಂಬುದನ್ನು ಖಚಿತಪಡಿಸಿದ್ದೇವೆ. ಕಳೆದ ಒಂದು ವರ್ಷದ ಅವಧಿಯಲ್ಲಿ ಕದನ ವಿರಾಮ ಉಲ್ಲಂಘನೆಗಳ ಸಂಖ್ಯೆಯು ತುಂಬಾ ಕಡಿಮೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ವಾಶ್ ರೂಂನಲ್ಲಿ ಬ್ರಿಟನ್ ಮಹಿಳೆಗೆ ಕಿರುಕುಳ – ಕಾಮುಕ ಅರೆಸ್ಟ್

    ಅಮರನಾಥ ಯಾತ್ರೆ ಕುರಿತು ಮಾತನಾಡಿದ ಅವರು, 2019ಕ್ಕೆ ಹೋಲಿಸಿದರೆ ಈ ವರ್ಷ ಯಾತ್ರಾರ್ಥಿಗಳ ಸಂಖ್ಯೆ ದ್ವಿಗುಣಗೊಳ್ಳುವ ನಿರೀಕ್ಷೆಯಿದೆ. ಯಾತ್ರೆಯ ಸಮಯದಲ್ಲಿ ಯಾವುದೇ ಭಯೋತ್ಪಾದಕ ಕೃತ್ಯಗಳು ನಡೆಯದಂತೆ ಕ್ರಮವಹಿಸಲಾಗುವುದು. ಇದಕ್ಕಾಗಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

  • ಜಮ್ಮು-ಕಾಶ್ಮೀರ ಕ್ಷೇತ್ರ ಪುನರ್‌ವಿಂಗಡಣೆ ವರದಿ ಸಲ್ಲಿಕೆ – ಯಾವ ಪ್ರದೇಶಕ್ಕೆ ಎಷ್ಟು ಸೀಟು?‌

    ಜಮ್ಮು-ಕಾಶ್ಮೀರ ಕ್ಷೇತ್ರ ಪುನರ್‌ವಿಂಗಡಣೆ ವರದಿ ಸಲ್ಲಿಕೆ – ಯಾವ ಪ್ರದೇಶಕ್ಕೆ ಎಷ್ಟು ಸೀಟು?‌

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕ್ಷೇತ್ರ ಪುನರ್‌ವಿಂಗಡಣೆ ಆಯೋಗವು ಗುರುವಾರ ಭಾರತದ ಚುನಾವಣಾ ಆಯೋಗಕ್ಕೆ ಅಂತಿಮ ಆದೇಶವನ್ನು ಸಲ್ಲಿಸಿದೆ.

    ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ನೇತೃತ್ವದ ಆಯೋಗವು ಜಮ್ಮು ಮತ್ತು ಕಾಶ್ಮೀರದ ಕ್ಷೇತ್ರ ಪುನರ್‌ವಿಂಗಡಣೆ ಆದೇಶವನ್ನು ಅಂತಿಮಗೊಳಿಸಲು ಇಂದು ಸಭೆ ನಡೆಸಿತು. ಇದಕ್ಕೆ ಸಂಬಂಧಿಸಿದ ಗೆಜೆಟ್ ಅಧಿಸೂಚನೆ ಕೂಡ ಪ್ರಕಟವಾಗಿದ್ದು, ಕೇಂದ್ರ ಸರ್ಕಾರ ಪ್ರಕಟಿಸಿದ ದಿನಾಂಕದಿಂದ ಈ ಆದೇಶ ಜಾರಿಗೆ ಬರಲಿದೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಬ್ರಾಹ್ಮಣರನ್ನು ಸಿಎಂ ಆಗಿ ನೋಡಲು ಬಯಸುತ್ತೇನೆ: ರಾವ್‍ಸಾಹೇಬ್ ಪಾಟೀಲ್ ದಾನ್ವೆ

    ಕೇಂದ್ರಾಡಳಿತ ಪ್ರದೇಶವಾದ ಜಮ್ಮು-ಕಾಶ್ಮೀರದಲ್ಲಿದ್ದ 90 ವಿಧಾನಸಭಾ ಕ್ಷೇತ್ರಗಳ ಪೈಕಿ 43 ಜಮ್ಮು ಪ್ರದೇಶದ ಭಾಗವಾಗಿ ಮತ್ತು 47 ಕಾಶ್ಮೀರ ಪ್ರದೇಶದ ಭಾಗವಾಗಲಿದೆ ಎಂದು ಅಂತಿಮ ಆದೇಶದಲ್ಲಿ ತಿಳಿಸಲಾಗಿದೆ. ಈವರೆಗೆ ಕಾಶ್ಮೀರದಲ್ಲಿ 46 ಕ್ಷೇತ್ರಗಳಿದ್ದವು. ಜಮ್ಮುವಿನಲ್ಲಿ 37 ಸ್ಥಾನಗಳಿದ್ದವು.

    ಮೊದಲ ಬಾರಿಗೆ ಒಂಬತ್ತು ಸ್ಥಾನಗಳನ್ನು ಪರಿಶಿಷ್ಟ ಪಂಗಡಗಳಿಗೆ (ಎಸ್‌ಟಿ) ಮೀಸಲಿಡಲಾಗಿದೆ. ಜಮ್ಮು ಪ್ರದೇಶದಲ್ಲಿ 6 ಮತ್ತು ಕಾಶ್ಮೀರ ಕಣಿವೆಯಲ್ಲಿ 3. ಅಂತೆಯೇ 7 ಸ್ಥಾನಗಳನ್ನು ಪರಿಶಿಷ್ಟ ಜಾತಿಗೆ (ಎಸ್‌ಸಿ) ಮೀಸಲಿಡಲಾಗಿದೆ. ಈ ಹಿಂದಿನ ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆಯಲ್ಲಿ ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ ಕಲ್ಪಿಸಲು ಸಂವಿಧಾನದಲ್ಲಿ ಅವಕಾಶ ಇರಲಿಲ್ಲ. ಇದನ್ನೂ ಓದಿ: ಡ್ರೋನ್ ಮುಖಾಂತರ ಶಸ್ತ್ರಾಸ್ತ್ರಗಳನ್ನು ಪಡೆದ 4 ಖಲಿಸ್ತಾನಿ ಭಯೋತ್ಪಾದಕರ ಬಂಧನ

    ಎಲ್ಲಾ ಐದು ಸಂಸದೀಯ ಕ್ಷೇತ್ರಗಳು ಮೊದಲ ಬಾರಿಗೆ ಸಮಾನ ಸಂಖ್ಯೆಯ ವಿಧಾನಸಭಾ ಸ್ಥಾನಗಳನ್ನು ಹೊಂದಿವೆ. ಕ್ಷೇತ್ರ ಮರುವಿಂಗಡಣೆ ಉದ್ದೇಶಕ್ಕಾಗಿ ಜಮ್ಮು ಮತ್ತು ಕಾಶ್ಮೀರವನ್ನು ಒಂದೇ ಘಟಕವಾಗಿ ಪರಿಗಣಿಸಲಾಗಿದೆ. ಜಮ್ಮುವಿನ ರಜೌರಿ, ದೋಡಾ, ಉಧಂಪುರ್, ಕಿಶ್ತ್‌ವಾರ, ಕಥುವಾ ಮತ್ತು ಸಾಂಬಾ ಜಿಲ್ಲೆಗಳಲ್ಲಿ ಒಟ್ಟು 6 ವಿಧಾನಸಭಾ ಕ್ಷೇತ್ರಗಳನ್ನು ಹಾಗೂ ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಒಂದು ಕ್ಷೇತ್ರವನ್ನು ಹೊಸದಾಗಿ ಸೃಷ್ಟಿಸಲಾಗಿದೆ.

  • ಸುದೀಪ್ Vs ದೇವಗನ್ – ಈಗ ಭಾರತದ ತುತ್ತ ತುದಿಯಿಂದ ಬಂತು ಪ್ರತಿಕ್ರಿಯೆ

    ಸುದೀಪ್ Vs ದೇವಗನ್ – ಈಗ ಭಾರತದ ತುತ್ತ ತುದಿಯಿಂದ ಬಂತು ಪ್ರತಿಕ್ರಿಯೆ

    ಶ್ರೀನಗರ: ಹಿಂದಿ ರಾಷ್ಟ್ರಭಾಷೆಯನ್ನಾಗಿ ಬಳಸುವುದರ ಕುರಿತು ಬಾಲಿವುಡ್ ನಟ ಅಜಯ್ ದೇವಗನ್ ಹಾಗೂ ಕನ್ನಡದ ಖ್ಯಾತ ನಟ ಕಿಚ್ಚ ಸುದೀಪ್ ಅವರ ನಡುವೆ ಟ್ವೀಟ್ ವಾರ್ ನಡೆಯುತ್ತಿರುವ ಬೆನ್ನಲ್ಲೇ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ನಾಯಕ ಹಾಗೂ ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸಹ ಪ್ರತಿಕ್ರಿಯಿಸಿದ್ದು, ಸುದೀಪ್ ಹೇಳಿಕೆಯನ್ನು ಬೆಂಬಲಿಸಿದ್ದಾರೆ.

    FotoJet

    ಈ ಕುರಿತು ಮಾತನಾಡಿರುವ ಅವರು, ಭಾಷೆಗಳಿಂದಲೇ ನಮ್ಮ ರಾಜ್ಯಗಳು ರೂಪುಗೊಂಡಿದ್ದು ಹಾಗಾಗಿ ಪ್ರಾದೇಶಿಕ ಭಾಷೆಗಳಿಗೆ ಪ್ರಾಮುಖ್ಯತೆ ನೀಡಲಾಗಿದೆ. ಸುದೀಪ್ ಹೇಳಿಕೆ ಸರಿಯಾಗಿದೆ, ಅದನ್ನು ಎಲ್ಲರೂ ಗೌರವಿಸಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಐದೈದು ಸರಣಿಯಲ್ಲಿ ಅವತಾರ್ : 13 ವರ್ಷಗಳ ಬಳಿಕ ತೆರೆಗೆ ಬಂದ ಬಾಕ್ಸ್ ಆಫೀಸ್ ಕಿಂಗ್

    ರಾಷ್ಟ್ರಭಾಷೆಯನ್ನು ಹೊಂದಲು ಭಾರತ ವೈವಿಧ್ಯಮಯ ದೇಶವಾಗಿದೆ. ಭಾರತದ ಪರಿಕಲ್ಪನೆಯು ಪ್ರತಿಯೊಬ್ಬರಿಗೂ ಸ್ಥಳಾವಕಾಶ ನೀಡುತ್ತದೆ. ಭಾರತೀಯ ಕರೆನ್ಸಿ ನೋಟು ಎಲ್ಲ ಭಾಷೆಗಳಿಗೆ ಜಾಗ ನೀಡಿರುವುದು ನಾವು ಕೇವಲ ಒಂದು ಭಾಷೆ, ಸಂಸ್ಕೃತಿ ಮತ್ತು ಧರ್ಮಕ್ಕೆ ಸೀಮಿತವಲ್ಲ ಎಂಬುದು ಅರ್ಥವಾಗುತ್ತದೆ ಎಂದು ಹೇಳಿದ್ದಾರೆ.

    FotoJet

    ಇದೇ ವೇಳೆ ಮಸೀದಿಗಳಲ್ಲಿ ಲೌಡ್‌ಸ್ಪೀಕರ್ ನಿಷೇಧ ಕುರಿತು ಮಾತನಾಡಿರುವ ಅವರು, ರಾಜಕೀಯ ಲಾಭಕ್ಕಾಗಿ ಮತ್ತು ಧರ್ಮದ ವಿರುದ್ಧ ದ್ವೇಷ ಹರಡುವ ಉದ್ದೇಶದಿಂದ ಈ ದೇಶದಲ್ಲಿ ಮುಸ್ಲಿಮರನ್ನು ಮಾತ್ರ ಗುರಿ ಮಾಡಲಾಗುತ್ತಿದೆ. ಮಸೀದಿಗಳಲ್ಲಿ ಲೌಡ್ ಸ್ಪೀಕರ್ ಬಳಸಬೇಡಿ, ಹಲಾಲ್ ಮಾಂಸ ಮಾರಾಟ ಮಾಡಬೇಡಿ, ಹಿಜಬ್ ಧರಿಸಬೇಡಿ ಎಂದು ವಿವಾದ ಎಬ್ಬಿಸಲಾಗುತ್ತಿದೆ. ಭಾರತದಲ್ಲಿ ಕೇವಲ ಮುಸ್ಲಿಮರನ್ನೇ ಏಕೆ ಟಾರ್ಗೆಟ್ ಮಾಡಲಾಗುತ್ತಿದೆ? ಎಂದು ಪ್ರಶ್ನಿಸಿದ್ದಾರೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ. ಇದನ್ನೂ ಓದಿ: ಅಜಯ್ ದೇವಗನ್ ವಿರುದ್ಧವೇ ನಿಂತ ಬಾಲಿವುಡ್ ಇಬ್ಬರೂ ಸ್ಟಾರ್ ನಟರು

    ಬಾರಾಮುಲ್ಲಾದ ಶಾಲೆಯೊಂದರಲ್ಲಿ ಹಿಜಾಬ್ ವಿವಾದ ತಲೆಎತ್ತಿದೆ. ಈಗ ಈ ಜನರು (ಬಿಜೆಪಿ) ಕರ್ನಾಟಕದಂತೆ ಜಮ್ಮು-ಕಾಶ್ಮೀರದಲ್ಲಿಯೂ ರಾಜಕೀಯ ಲಾಭಕ್ಕಾಗಿ ಸಮಸ್ಯೆಯನ್ನು ಹುಟ್ಟುಹಾಕುತ್ತಿರುವುದಾಗಿ ಒಮರ್ ಅಬ್ದುಲ್ಲಾ ಆರೋಪಿಸಿದ್ದಾರೆ.

    ಹಿಜಬ್ ಇಸ್ಲಾಂನ ಮೂಲಭೂತ ಹಕ್ಕು. ಇನ್ನೊಬ್ಬರ ಧಾರ್ಮಿಕ ವಿಚಾರದಲ್ಲಿ ಯಾರೂ ಕೂಡಾ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ. ಒಂದು ವೇಳೆ ಇದು ದೇಶದಲ್ಲಿ ಕಾರ್ಯಗತಗೊಂಡಲ್ಲಿ, ಆಗ ನಮ್ಮ ನಿರ್ಧಾರವೂ ಕೂಡ ವಿಭಿನ್ನವಾಗಿರಲಿದೆ. ರಂಜಾನ್ ತಿಂಗಳಲ್ಲಿ ಅನಾವಶ್ಯಕವಾಗಿ ಪವರ್ ಕಟ್ ಮಾಡುವ ಮೂಲಕ ಉದ್ದೇಶಪೂರ್ವಕವಾಗಿ ಕಾಶ್ಮೀರದ ಜನರನ್ನು ಕೆರಳಿಸುತ್ತಿರುವುದಾಗಿ ಒಮರ್ ದೂರಿದ್ದಾರೆ. ಇದನ್ನೂ ಓದಿ: ರಾಷ್ಟ್ರ ಭಾಷೆ ಹಿಂದಿ: ಅಜಯ್ ದೇವಗನ್ ಪ್ರಶ್ನೆಗೆ ಕಿಚ್ಚ ಸುದೀಪ್ ಖಡಕ್ ಉತ್ತರ

    ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಮುಸ್ಲಿಮರ ಮನೆಗಳನ್ನು ಬುಲ್ಡೋಜರ್ ನಿಂದ ತೆರವುಗೊಳಿಸುತ್ತಿರುವ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಭಾರತವು ದೊಡ್ಡ ಪ್ರಜಾಪ್ರಭುತ್ವ ದೇಶವಾಗಿದೆ. ಆದರೆ ಪ್ರಜಾಪ್ರಭುತ್ವವು ಕೇವಲ ಪದಗಳಲ್ಲಿ ಇರಬಾರದು ಅದು ಕಾರ್ಯದಲ್ಲಿಯೂ ಇರಬೇಕು. ಅಸಹಿಷ್ಣುತೆಯ ವಾತಾವರಣವನ್ನು ನಿಯಂತ್ರಿಸುವ ಈ ಕ್ರಮವು ಈ ದೇಶಕ್ಕೆ ಒಳ್ಳೆಯದಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

  • ವಿಶೇಷ ಸ್ಥಾನಮಾನ ರದ್ದತಿ ನಂತರ ಜಮ್ಮು-ಕಾಶ್ಮೀರಕ್ಕೆ ಮೋದಿ ಮೊದಲ ಭೇಟಿ

    ವಿಶೇಷ ಸ್ಥಾನಮಾನ ರದ್ದತಿ ನಂತರ ಜಮ್ಮು-ಕಾಶ್ಮೀರಕ್ಕೆ ಮೋದಿ ಮೊದಲ ಭೇಟಿ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮುವಿಗೆ ಭೇಟಿ ನೀಡಿದರು. ಇದೇ ವೇಳೆ 20,000 ಕೋಟಿ ರೂ. ಮೊತ್ತದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದರು.

    ನಾನು ಜಮ್ಮು ಮತ್ತು ಕಾಶ್ಮೀರದ ಯುವಕರಿಗೆ ಹೇಳಲು ಬಯಸುತ್ತೇನೆ. ನಿಮ್ಮ ಪೋಷಕರು ಮತ್ತು ಅಜ್ಜ-ಅಜ್ಜಿಯಂದಿರು ಅನುಭವಿಸಿದ ಕಷ್ಟಗಳನ್ನು ನೀವು ಎಂದಿಗೂ ಅನುಭವಿಸುವುದಿಲ್ಲ. ನಾನು ನಿಮಗೆ ಭರವಸೆ ನೀಡುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಉದ್ಧವ್ ಠಾಕ್ರೆ ಎಂಟ್ರಿ – 14 ದಿನಗಳ ಕಸ್ಟಡಿಗೆ ಒಳಗಾದ ಸಂಸದೆ, ಶಾಸಕ ದಂಪತಿ

    MODI 2

    ಈ ಬಾರಿಯ ಪಂಚಾಯತ್ ರಾಜ್ ದಿನವನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಆಚರಿಸಲಾಗುತ್ತಿದೆ. ಇದು ದೊಡ್ಡ ಬದಲಾವಣೆಯನ್ನು ಸೂಚಿಸುತ್ತದೆ. ಜಮ್ಮು ಕಾಶ್ಮೀರದಲ್ಲಿ ಈಗ ಪ್ರಜಾಪ್ರಭುತ್ವ ತಳಮಟ್ಟದಿಂದಲೇ ಕಾರ್ಯನಿರ್ವಹಿಸುತ್ತಿದೆ ಎಂಬುದು ಹೆಮ್ಮೆಯ ವಿಷಯ. ಅದಕ್ಕಾಗಿಯೇ ನಾನು ಇಲ್ಲಿ ದೇಶದಾದ್ಯಂತ ಇರುವ ಪಂಚಾಯತ್‌ಗಳೊಂದಿಗೆ ಸಂವಾದ ನಡೆಸುತ್ತಿದ್ದೇನೆ ಎಂದು ಹೇಳಿದ್ದಾರೆ.

    ಕೇಂದ್ರಾಡಳಿತ ಪ್ರದೇಶವು ಅಭಿವೃದ್ಧಿಯ ಹೊಸ ಚರಿತ್ರೆ ಬರೆಯಲು ಸಜ್ಜಾಗಿದೆ. ಸ್ವಾತಂತ್ರ್ಯದ ಏಳು ದಶಕಗಳ ಅವಧಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ಕೇವಲ 17,000 ಕೋಟಿ ರೂ. ಖಾಸಗಿ ಹೂಡಿಕೆ ಬಂದಿದೆ. ಆದರೆ ಈಗ 38,000 ಕೋಟಿ ರೂ.ಗೆ ತಲುಪಿದೆ ಎಂದು ಒತ್ತು ಹೇಳಿದ್ದಾರೆ. ಇದನ್ನೂ ಓದಿ: ಮೋದಿಯನ್ನು ಭೇಟಿಯಾಗಿ ರುದ್ರಾಕ್ಷಿ ಮಾಲೆ ನೀಡಿದ ಅನುಪಮ್ ಖೇರ್

    NARENDRA MODI

    48 ಗಂಟೆಗಳಲ್ಲಿ ಜಮ್ಮು ಮತ್ತು ಕಾಶ್ಮೀರ ಎರಡು ಭಯೋತ್ಪಾದಕ ದಾಳಿಗಳನ್ನು ಕಂಡ ನಂತರ ಪ್ರಧಾನಿ ಮೋದಿ ಕೇಂದ್ರಾಡಳಿತ ಪ್ರದೇಶಕ್ಕೆ ಭೇಟಿ ನೀಡಿದ್ದರು. ಶುಕ್ರವಾರ ಇಲ್ಲಿನ ಸುಂಜ್ವಾನ್‌ನಲ್ಲಿ ಭಯೋತ್ಪಾದಕರು ಬಸ್ ಮೇಲೆ ದಾಳಿ ನಡೆಸಿದಾಗ ಸಿಐಎಸ್‌ಎಫ್ ಭದ್ರತಾ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದರು.