Tag: jammu kashmir

  • ಕಾಶ್ಮೀರದಲ್ಲಿ ಮುಂದುವರಿದ ನಾಗರಿಕರ ಹತ್ಯೆ- ಉಗ್ರರ ಗುಂಡಿನ ದಾಳಿಗೆ ಸೇಲ್ಸ್ ಮ್ಯಾನ್ ಬಲಿ

    ಕಾಶ್ಮೀರದಲ್ಲಿ ಮುಂದುವರಿದ ನಾಗರಿಕರ ಹತ್ಯೆ- ಉಗ್ರರ ಗುಂಡಿನ ದಾಳಿಗೆ ಸೇಲ್ಸ್ ಮ್ಯಾನ್ ಬಲಿ

    ಶ್ರೀನಗರ: ಸೇಲ್ಸ್ ಮ್ಯಾನ್ ಮೇಲೆ ಉಗ್ರರು ದಾಳಿ ನಡೆಸಿ ಹತ್ಯೆ ಮಾಡಿರುವ ಘಟನೆ ಕಾಶ್ಮೀರದ ಶ್ರೀನಗರದಲ್ಲಿ ನಡೆದಿದೆ.

    ಮೃತ ದುರ್ದೈವಿಯನ್ನು ಮೊಹಮ್ಮದ್ ಇಬ್ರಾಹಿಂ ಖಾನ್ ಎಂದು ಗುರುತಿಸಲಾಗಿದ್ದು, ಇವರು ಬಂಡಿಪೋರಾದ ನಿವಾಸಿಯಾಗಿದ್ದಾರೆ. ಗುಂಡಿನ ದಾಳಿ ನಂತರ ಮೊಹಮ್ಮದ್ ಇಬ್ರಾಹಿಂ ಖಾನ್ ರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಾಕಾರಿಯಾಗದೇ ಸಾವನ್ನಪ್ಪಿದ್ದಾರೆ.

    ಮೊಹಮ್ಮದ್ ಇಬ್ರಾಹಿಂ ಖಾನ್ ಅವರು ಫಾರ್ಮಸಿಯೊಂದರ ಸೇಲ್ಸ್ ಮ್ಯಾನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಕಳೆದ 24 ಗಂಟೆಗಳಲ್ಲಿ ಶ್ರೀನಗರದಲ್ಲಿ ಉಗ್ರರು ನಡೆಸಿರುವ ಎರಡನೇ ದಾಳಿ ಇದಾಗಿದೆ. ಇದನ್ನೂ ಓದಿ: ರಾಜರತ್ನ ಅಪ್ಪು ಅಗಲಿ 12ನೇ ದಿನ – ಅರಮನೆ ಮೈದಾನದಲ್ಲಿ ಅಭಿಮಾನಿಗಳಿಗೆ ಅನ್ನ ಸಂತರ್ಪಣೆ

    ಈ ಮುನ್ನ ಭಾನುವಾರ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಬಟಮಾಲೂ ಪ್ರದೇಶದಲ್ಲಿ ಭಯೋತ್ಪಾದಕರ ಗುಂಡಿನ ದಾಳಿಗೆ ಒಳಗಾಗಿದ್ದ ಪೊಲೀಸ್ ಸಿಬ್ಬಂದಿ ಗಾಯಗೊಂಡು ಸಾವನ್ನಪ್ಪಿದ್ದರು. ಮೃತರನ್ನು ಎಸ್‍ಡಿ ಕಾಲೋನಿ ಪ್ರದೇಶದಲ್ಲಿ ಕಾನ್‍ಸ್ಟೆಬಲ್ ತೌಸೀಫ್ ಎಂದು ಗುರುತಿಸಲಾಗಿತ್ತು. ಇದನ್ನೂ ಓದಿ: ಕಮಲಾ ನೆಹರು ಆಸ್ಪತ್ರೆಯಲ್ಲಿ ಬೆಂಕಿ ಅವಘಡ – ನಾಲ್ವರು ಮಕ್ಕಳ ದಾರುಣಾ ಸಾವು

    ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ, ಭಯೋತ್ಪಾದಕರು ಜೆಕೆಪಿ ಕಾನ್‍ಸ್ಟೆಬಲ್ ತೌಸಿಫ್ ಅಹ್ಮದ್ ಅವರ ನಿವಾಸದ ಬಳಿ ಬಟಮಾಲೂ ಎಸ್‍ಡಿ ಕಾಲೋನಿಯಲ್ಲಿ ಗುಂಡು ಹಾರಿಸಿದ್ದರ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದರು.

  • ಉಗ್ರಗಾಮಿಗಳ ಗುಂಡಿಗೆ ಪೊಲೀಸ್ ಸಿಬ್ಬಂದಿ ಹುತಾತ್ಮ

    ಉಗ್ರಗಾಮಿಗಳ ಗುಂಡಿಗೆ ಪೊಲೀಸ್ ಸಿಬ್ಬಂದಿ ಹುತಾತ್ಮ

    ಶ್ರೀನಗರ: ಉಗ್ರಗಾಮಿಗಳ ಗುಂಡಿಗೆ ಜಮ್ಮು ಕಾಶ್ಮೀರದ ಪೊಲೀಸ್ ಸಿಬ್ಬಂದಿಯೊಬ್ಬರು ಹುತಾತ್ಮರಾಗಿದ್ದಾರೆ.

    ತೌಸೀಫ್ ಅಹಮದ್ ಹುತಾತ್ಮ ಪೊಲೀಸ್ ಸಿಬ್ಬಂದಿಯಾಗಿದ್ದಾರೆ. ಶ್ರೀನಗರದ ಬಾಟ್‍ಮಲೂ ಪ್ರದೇಶದಲ್ಲಿ ಭಯೋತ್ಪಾದಕರ ಗುಂಡಿಗೆ ಹುತಾತ್ಮರಾಗಿದ್ದಾರೆ.

    ಜಮ್ಮು ಕಾಶ್ಮೀರ ಪೊಲೀಸ್ ಇಲಾಖೆಯ ಕಾನ್‍ಸ್ಟೆಬಲ್ ತೌಸೀಫ್ ಅಹಮದ್ ಅವರ ಮೇಲೆ ಅವರ ಮನೆಯ ಹತ್ತಿರವೇ ರಾತ್ರಿ 8 ಗಂಟೆಗೆ ಉಗ್ರರು ಗುಂಡು ಹಾರಿಸಿದ್ದಾರೆ. ತೀವ್ರವಾಗಿ ಗಾಯಗೊಂಡ ಕಾನ್‍ಸ್ಟೆಬಲ್ ತೌಸೀಫ್ ಅವರನ್ನು ತಕ್ಷಣವೇ ಎಸ್‍ಎಂಎಚ್‍ಎಸ್ ಆಸ್ಪತ್ರೆಗೆ ಕರೆದೊಯ್ಯವ ವೇಳೆ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದರು. ಈ ಪ್ರದೇಶದಲ್ಲಿ ಸಂಪೂರ್ಣವಾಗಿ ನಿಬರ್ಂಧ ಆದೇಶ ಜಾರಿಗೊಳಿಸಲಾಗಿದ್ದು, ಭಯೋತ್ಪಾದಕನ್ನು ಪತ್ತೆಹಚ್ಚಲು ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಇದನ್ನೂ ಓದಿ: ಜಿಮ್ ಮಾಡೋವ್ರಿಗೆ ಅಪ್ಪು ಸಾವು ಬಿಗ್ ಶಾಕ್ – ಜಿಮ್‍ಗೆ ಹೋಗದಂತೆ ಮಕ್ಕಳಿಗೆ ಪೋಷಕರ ಆಕ್ಷೇಪ

    ಜಮ್ಮು ಕಾಶ್ಮೀರದ ಶ್ರೀನಗರದ ಆಸ್ಪತ್ರೆಯೊಂದರಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಕೆಲ ಕಾಲ ಗುಂಡಿನ ಚಕಮಕಿ ನಡೆಯಿತು. ಆಸ್ಪತ್ರೆಯಲ್ಲೇ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಒಬ್ಬರು ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯ ಭದ್ರತಾ ಪಡೆಗಳು ಸ್ಥಳಕ್ಕೆ ದೌಡಾಯಿಸಿವೆ. ಶ್ರೀನಗರ-ಬಾರಾಮುಲ್ಲಾ ಹೆದ್ದಾರಿಯಲ್ಲಿ ನಗರದ ಬೆಮಿನಾ ಪ್ರದೇಶದ ಎಸ್‍ಕೆಐಎಂಎಸ್ ಆಸ್ಪತ್ರೆ ಬಳಿ ಈ ಘಟನೆ ನಡೆದಿದೆ. ಬೆಮಿನಾದ  SKIMS ಆಸ್ಪತ್ರೆಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಸ್ವಲ್ಪ ಸಮಯದ ಗುಂಡಿನ ಚಕಮಕಿ ನಡೆಯಿತು. ಆ ಆಸ್ಪತ್ರೆಯ ಸುತ್ತ ಸೇರಿದ್ದ ಜನಸಂದಣಿಯ ಲಾಭವನ್ನು ಪಡೆದುಕೊಂಡು ಭಯೋತ್ಪಾದಕರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಶ್ರೀನಗರ ಪೊಲೀಸರು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

  • ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ – ಬಿಜೆಪಿ ನಾಯಕನ ವಿರುದ್ಧ FIR

    ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ – ಬಿಜೆಪಿ ನಾಯಕನ ವಿರುದ್ಧ FIR

    ಶ್ರೀನಗರ: ಕಾಶ್ಮೀರಿ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಎಂಎಲ್‍ಸಿ ವಿಕ್ರಮ್ ರಾಂಧವಾ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ.

    ವಿಕ್ರಮ್ ರಾಂಧವಾ ಅವರು ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ವೀಡಿಯೋ ವೈರಲ್ ಆದ ಬಳಿಕ ವಕೀಲ ಮುಜಾಫರ್ ಅಲಿ ಶಾ ಅವರ ಲಿಖಿತ ದೂರಿನ ಆಧಾರದ ಮೇಲೆ ಬಹು ಕೋಟೆ ಪೊಲೀಸ್ ಠಾಣೆಯಲ್ಲಿ ವಿಕ್ರಂ ರಾಂಧವಾ ವಿರುದ್ಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸಿಎಂ ತವರು ಜಿಲ್ಲೆಯಲ್ಲಿ ಬಿಜೆಪಿಗೆ ಹಿನ್ನಡೆ – ಕಾಂಗ್ರೆಸ್‌ ಮುನ್ನಡೆ

    ಟಿ-20 ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ತಂಡ ಜಯಗಳಿಸಿದ ನಂತರ ಕಾಶ್ಮೀರದ ಹಲವು ಭಾಗಗಳಲ್ಲಿ ಸಂಭ್ರಮಾಚರಣೆ ಮಾಡಲಾಯಿತು. ಹೀಗಾಗಿ ಈ ಕುರಿತಂತೆ ವಿಕ್ರಮ್ ರಾಂಧವ ಅವರು ಕಾಮೆಂಟ್ ಮಾಡಿದ್ದರು. ಇದನ್ನೂ ಓದಿ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ ದೇಶ್‌ಮುಖ್‌ ಅರೆಸ್ಟ್‌

    ಇದೀಗ ವಿಕ್ರಮ್ ರಾಂಧವ ಅವರ ವಿರುದ್ಧ ಐಪಿಸಿ ಸೆಕ್ಷನ್ 295-ಎ (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಆಕ್ರೋಶಗೊಳಿಸುವ ಉದ್ದೇಶದಿಂದ) ಮತ್ತು 505 (ಸಾರ್ವಜನಿಕ ಕಿಡಿಗೇಡಿತನಕ್ಕೆ ಕೇಡಿಗೆ ಕಾರಣವಾಗುವ ಹೇಳಿಕೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

    ಬಿಜೆಪಿಯ ಜಮ್ಮು-ಕಾಶ್ಮೀರ ಘಟಕವು ವಿಕ್ರಮ್ ರಾಂಧವಾ ಅವರಿಗೆ ಶೋಕಾಸ್ ನೋಟಿಸ್ ನೀಡಿದ್ದು, ಈ ಕುರಿತಂತೆ ಪಕ್ಷದ ಮುಖ್ಯಸ್ಥ ರವೀಂದರ್ ರೈನಾ ಅವರು, ಎಲ್ಲಾ ನಂಬಿಕೆಗಳನ್ನು ಗೌರವಿಸುವ ಪಕ್ಷದ ಮೂಲ ತತ್ವಗಳಿಗೆ ವಿಕ್ರಮ್ ರಾಂಧವಾ ಅವರ ಹೇಳಿಕೆ ವಿರುದ್ಧವಾಗಿವೆ. ವೀಡಿಯೋ ಪಕ್ಷದ ಗಮನಕ್ಕೆ ಬಂದಿದ್ದು, ಅಂತಹ ಭಾಷೆಯನ್ನು ಸಹಿಸಲಾಗದ ಕಾರಣ ಶಿಸ್ತು ಸಮಿತಿಯು ತಕ್ಷಣವೇ ಅವರಿಗೆ ಶೋಕಾಸ್ ನೋಟಿಸ್ ನೀಡಿದೆ. ಇದನ್ನೂ ಓದಿ: ಅಶ್ಲೀಲ ಸಿನಿಮಾಗಳ ವಿವಾದದ ಬಳಿಕ ಟ್ವಿಟ್ಟರ್, ಇನ್‍ಸ್ಟಾ ಡಿಲೀಟ್ ಮಾಡಿದ ರಾಜ್ ಕುಂದ್ರಾ

    ಶೋಕಾಸ್ ನೋಟಿಸ್‍ನಲ್ಲಿ ವಿಕ್ರಮ್ ರಾಂಧವಾ ಅವರು ನೀಡಿರುವ ಹೇಳಿಕೆಗಳಿಗೆ 48 ಗಂಟೆಗಳ ಒಳಗೆ ವಿವರಣೆ ನೀಡುವಂತೆ ತಿಳಿಸಲಾಗಿದ್ದು, “ನೀವು ನಿರ್ದಿಷ್ಟ ಸಮುದಾಯದ ವಿರುದ್ಧ ಸಂಪೂರ್ಣ ಅಜಾಗರೂಕ ಮತ್ತು ದ್ವೇಷವನ್ನು ಉತ್ತೇಜಿಸುವ ಟೀಕೆಗಳನ್ನು ಮಾಡಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದು ಪಕ್ಷಕ್ಕೆ ಸ್ವೀಕಾರಾರ್ಹವಲ್ಲ. ಇದು ಪಕ್ಷಕ್ಕೆ ಅಪಖ್ಯಾತಿ ಮತ್ತು ಮುಜುಗರವನ್ನುಂಟು ಮಾಡಿದೆ” ಹೀಗಾಗಿ ವಿಕ್ರಮ್ ರಾಂಧವಾ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ನೋಟಿಸ್‍ನಲ್ಲಿ ತಿಳಿಸಲಾಗಿದೆ.

     

  • ಕಾಶ್ಮೀರದಲ್ಲಿನ ಭಯೋತ್ಪಾದನೆ ಹಿಂದೆ ಪಾಕ್ ಕೈವಾಡ – ವೀಡಿಯೋ ರಿಲೀಸ್

    ಕಾಶ್ಮೀರದಲ್ಲಿನ ಭಯೋತ್ಪಾದನೆ ಹಿಂದೆ ಪಾಕ್ ಕೈವಾಡ – ವೀಡಿಯೋ ರಿಲೀಸ್

    ನವದೆಹಲಿ: ಕಾಶ್ಮೀರದಲ್ಲಿ ನಡೆಯುತ್ತಿರುವ ಇತ್ತಿಚೀನ ದಾಳಿಗಳ ಹಿಂದೆ ಪಾಕಿಸ್ತಾನದ ಕೈವಾಡ ಇದೆ ಎಂದು ರಾಷ್ಟ್ರೀಯ ಸುದ್ದಿ ಮಾಧ್ಯಮವೊಂದು ವರದಿ ಮಾಡಿದೆ. ವೀಡಿಯೋಯೊಂದನ್ನು ಬಿಡುಗಡೆ ಮಾಡಿರುವ ವಾಹಿನಿ ಈ ಸಾಕ್ಷ್ಯವನ್ನು ಪಾಕ್ ನಿರಾಕರಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

    ವೀಡಿಯೋ ಕಾಶ್ಮೀರದಲ್ಲಿರುವ ಉಗ್ರರಿಗೆ ಪಾಕ್ ಮೂಲದ ಉಗ್ರರು ತರಬೇತಿ ನೀಡುತ್ತಿರುವ ಅಂಶ ಒಳಗೊಂಡಿದೆ. ಕಾಶ್ಮೀರದಲ್ಲಿ ಇತ್ತಿಚೆಗೆ ಬಂಧಿಸಲಾಗಿದ್ದ ಉಗ್ರನಿಂದ ವಶ ಪಡೆಸಿಕೊಂಡಿದ್ದ ಮೊಬೈಲ್‍ನಿಂದ ಈ ವೀಡಿಯೋ ಪಡೆಯಲಾಗಿದೆ ಎಂದು ವಾಹಿನಿ ಹೇಳಿದೆ. ಇದನ್ನೂ ಓದಿ: ರಮೇಶ್‌ಕುಮಾರ್‌ನ ಜೈಲಿಗೆ ಕಳುಹಿಸುತ್ತೇನೆ – ಸುಧಾಕರ್ ಶಪಥ

    ವಿಚಾರಣೆ ವೇಳೆ ಉಗ್ರನಿಂದ ಪೊಲೀಸರು ಮೊಬೈಲ್ ವಶಪಡಿಸಿಕೊಂಡಿದ್ದು ಆ ಮೊಬೈಲ್‍ನಲ್ಲಿ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೇಗೆ ಲೋಡ್ ಮಾಡುವುದು, ಅದನ್ನು ಬಳಕೆ ಮಾಡುವುದು ಹೇಗೆ ಎಂದು ವೀಡಿಯೋ ಕಾಲ್ ಮೂಲಕ ತರಬೇತಿ ನೀಡಲಾಗುತ್ತಿತ್ತು ಎನ್ನಲಾಗಿದೆ. ಹೀಗೆ ತರಬೇತು ನೀಡುತ್ತಿರುವ ವ್ಯಕ್ತಿ ಜೈಶ್-ಎ-ಮೊಹಮ್ಮದ್ ಎಂಬ ಭಯೋತ್ಪಾದಕ ಸಂಘಟನೆಯವನು ಎಂದು ಹೇಳಲಾಗಿದೆ. ಇದನ್ನೂ ಓದಿ: ಜೈಲಿಗೆ ಹೋಗೋ ಸ್ಥಿತಿ ಬಂದರೆ ಹೋಗೋಕೆ ಸಿದ್ಧವಾಗಿದ್ದೇನೆ: ರಮೇಶ್ ಕುಮಾರ್

    ಉಗ್ರರ ದಾಳಿ ಹೆಚ್ಚಾಗುತ್ತಿರುವ ಬೆನ್ನಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾಶ್ಮೀರಕ್ಕೆ ತೆರಳಲು ಮುಂದಾಗಿದ್ದಾರೆ. ಅಕ್ಟೋಬರ್ 23-25 ವರೆಗೂ ಅವರು ಕಾಶ್ಮೀರದಲ್ಲಿ ಇರಲಿದ್ದು, ಭದ್ರತಾ ವ್ಯವಸ್ಥೆಗಳ ಬಗ್ಗೆ ಸಭೆಗಳನ್ನು ನಡೆಸಲಿದ್ದಾರೆ. ಅಮಿತ್ ಶಾ ಭೇಟಿ ಹಿನ್ನಲೆ ಈಗಾಗಲೇ ಭದ್ರತೆಯನ್ನು ಹೆಚ್ಚು ಮಾಡಲಾಗುತ್ತಿದ್ದು, ಜಮ್ಮು ಕಾಶ್ಮೀರ ಪ್ರಮುಖ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಕೋಬಿಂಗ್ ನಡೆಸಲಾಗುತ್ತಿದೆ. ಕಳೆದ ವಾರ ನಡೆದ ಎರಡು ಪ್ರತ್ಯೇಕ ದಾಳಿಯಲ್ಲಿ ಒಂಬತ್ತು ಸೇನಾ ಸಿಬ್ಬಂದಿಗಳು ಹುತಾತ್ಮರಾಗಿದ್ದರು. ಇದನ್ನೂ ಓದಿ: ಡಿಸಿಸಿ ಬ್ಯಾಂಕ್ ನಿಮ್ಮಪ್ಪನ ಮನೆ ಆಸ್ತಿನಾ? – ರಮೇಶ್ ಕುಮಾರ್ ವಿರುದ್ಧ ಸುಧಾಕರ್ ವಾಗ್ದಾಳಿ

  • ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆಗೆ ಹೈಬ್ರಿಡ್ ಉಗ್ರರ ಬಳಕೆ – 700 ಮಂದಿ ವಶಕ್ಕೆ

    ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆಗೆ ಹೈಬ್ರಿಡ್ ಉಗ್ರರ ಬಳಕೆ – 700 ಮಂದಿ ವಶಕ್ಕೆ

    ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆಗೆ ಸಂಬಂಧಿಸಿದಂತೆ 700 ಮಂದಿ ಭಯೋತ್ಪಾದಕ ಸಹಾನುಭೂತಿಗಳನ್ನು ಭದ್ರತಾ ಪಡೆಗಳು ಬಂಧಿಸಿವೆ. ಐದು ದಿನಗಳಲ್ಲಿ ಕಾಶ್ಮೀರ ಕಣಿವೆಯಲ್ಲಿ ಕನಿಷ್ಠ ಏಳು ಜನರನ್ನು ಭಯೋತ್ಪಾದಕರು ಹತ್ಯೆ ಮಾಡಿದ್ದಾರೆ.

    ಶ್ರೀನಗರ ಮೂಲದ ಸಿಖ್ಖರಾದ ಸುಪಿಂದರ್ ಕೌರ್ ಮತ್ತು ಜಮ್ಮುವಿನ ಹಿಂದೂ, ಚಾಂದ್ ಅವರು ಎರಡು ದಿನಗಳ ನಂತರ ಹತ್ಯೆಗೀಡಾದ ಲಷ್ಕರ್-ಎ-ತೊಯ್ಬಾ(Lashkar-e-Taiba)ದ ನೆರಳು ಸಂಘಟನೆಯಾದ ಮೂರು ಜನರ ಸಾವಿಗೆ ಕಾರಣವಾಗಿದೆ. ಜಮ್ಮು-ಕಾಶ್ಮೀರದಲ್ಲಿ ಇತ್ತೀಚೆಗೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿ ದಾಳಿಗಳು ಹೆಚ್ಚಿದ ಬೆನ್ನಲ್ಲೇ ಪೊಲೀಸರು ಅಲರ್ಟ್ ಆಗಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ 2022ರ ಹಜ್‌ ಪ್ರಕ್ರಿಯೆ ಶೇ.100 ಡಿಜಿಟಲ್‌ ಆಗಿರುತ್ತದೆ: ಕೇಂದ್ರ ಸಚಿವ ನಖ್ವಿ

    ಉಗ್ರರ ಬಗ್ಗೆ ಅನುಕಂಪ ಹೊಂದಿರೋ 700 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗ್ತಿದೆ. ಇವರ ಪೈಕಿ 500 ಮಂದಿ ನಿಷೇಧಿತ ಉಗ್ರ ಅಥವಾ ಧಾರ್ಮಿಕ ಸಂಘಟನೆಗಳ ಲಿಂಕ್ ಹೊಂದಿರೋ ಆರೋಪ ಹೊಂದಿದ್ದಾರೆ ಅಂತ ಕೂಡ ಪೊಲೀಸರು ತಿಳಿಸಿದ್ದಾರೆ. ಜಮ್ಮು-ಕಾಶ್ಮೀರದ 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಎನ್‍ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

    ಐಎಸ್‍ಐಎಸ್‍ (ISIS)ನ ಮ್ಯಾಗ್ಜೀನ್ ವಾಯ್ಸ್ ಆಫ್ ಹಿಂದ್ ಮತ್ತು ಬಟಿಂಡಿಯಲ್ಲಿ ಇತ್ತೀಚೆಗೆ ಸ್ಫೋಟಕ ಪತ್ತೆ ಪ್ರಕರಣ ಸಂಬಂಧ ಶ್ರೀನಗರ, ಬಾರಾಮುಲ್ಲಾ ಮತ್ತು ಅನಂತ್‍ನಾಗ್ ಜಿಲ್ಲೆಗಳಲ್ಲಿ ಈ ದಾಳಿ ನಡೆಸಲಾಗಿದೆ. ಎನ್‍ಐಎ ಅಧಿಕಾರಿಗಳಿಗೆ ಸಿಆರ್ ಪಿಎಫ್(CRPF) ಮತ್ತು ಜಮ್ಮು ಕಾಶ್ಮೀರ ಪೊಲೀಸರು ಸಾಥ್ ನೀಡಿದ್ದಾರೆ. ಈ ನಡುವೆ ಇವತ್ತು ಜಮ್ಮು ಕಾಶ್ಮೀರದ ಕುಲ್ಗಾಂನಲ್ಲಿ ಉಗ್ರರು ಪೊಲೀಸರನ್ನು ಗುರಿಯಾಗಿಸಿ ದಾಳಿ ನಡೆಸಿದ್ದಾರೆ. ಇದ್ರಲ್ಲಿ ಇಬ್ಬರು ಪೊಲೀಸರಿಗೆ ಗಾಯಗಳಾಗಿವೆ.

  • ನಾವು ಕಾಶ್ಮೀರಿ ಮುಸ್ಲಿಮರಿಗಾಗಿ ದನಿ ಎತ್ತುತ್ತೇವೆ: ತಾಲಿಬಾನ್

    ನಾವು ಕಾಶ್ಮೀರಿ ಮುಸ್ಲಿಮರಿಗಾಗಿ ದನಿ ಎತ್ತುತ್ತೇವೆ: ತಾಲಿಬಾನ್

    ಕಾಬೂಲ್: ಅಫ್ಘಾನಿಸ್ತಾನದಲ್ಲಿ ಉಗ್ರಾಡಳಿತವನ್ನು ಜಾರಿಗೆ ತಂದಿರುವ ತಾಲಿಬಾನಿಗಳ ಕೆಟ್ಟ ಕಣ್ಣು ಈಗ ಭಾರತದ ಕಾಶ್ಮೀರದ ಮೇಲೆ ಬಿದ್ದಿದೆ. ನಾವು ಕಾಶ್ಮೀರಿ ಮುಸ್ಲಿಮರಿಗಾಗಿ ಧ್ವನಿ ಎತ್ತುತ್ತೇವೆ ಎಂದು ತಾಲಿಬಾನ್ ಬಹಿರಂಗವಾಗಿ ಹೇಳಿಕೊಂಡಿದೆ.

     

    ಜಮ್ಮುಕಾಶ್ಮೀರಕ್ಕೆ ನೀಡಲಾಗಿದ್ದ ಪ್ರತ್ಯೇಕ ಸ್ಥಾನಮಾನವನ್ನು ಭಾರತ ಸರ್ಕಾರ ಹಿಂಪಡೆದ ನಂತರ ಅಲ್ಲಿನ ಮುಸ್ಲಿಮರು ಸಿಟ್ಟಾಗಿದ್ದಾರೆ. ಅವರಿಗೆ ಧ್ವನಿಯಾಗುವ ಕೆಲಸ ಮಾಡುತ್ತೇವೆ, ಹೋರಾಡುತ್ತೇವೆ ಎಂದು ಹೇಳಿದೆ. ಕೆಳದಿನಗಳ ಹಿಂದೆ ಪಾಕ್ ಟಿವಿ ಚಾನಲ್ ಒಂದರ ಚರ್ಚೆಯಲ್ಲಿ ಆಡಳಿತ ಪಕ್ಷ ಪಿಟಿಐ ಪ್ರತಿನಿಧಿ, ತಾಲಿಬಾನ್ ನಮ್ಮ ಬೆಂಬಲಕ್ಕೆ ಇದೆ ಎಂದು ಘಂಟಾಘೋಷವಾಗಿ ಸಾರಿದ್ದರು. ಕಾಶ್ಮಿರದ ವಿಮುಕ್ತಿಗಾಗಿ ಅವರು ನಮಗೆ ನೆರವು ನೀಡುತ್ತಾರೆ ಎಂದಿದ್ದರು ಎಂಬುದು ಇಲ್ಲಿ ಗಮನಿಸಬೇಕಾದ ವಿಚಾರವಾಗಿದೆ. ಇದನ್ನೂ ಓದಿ: ಅಂದು ಗಾಳಿಯಲ್ಲಿ ಗುಂಡು ಹಾರಿಸಿ ತಾಲಿಬಾನಿಗಳ ಸಂಭ್ರಮ – ಇಂದು ಅಮೆರಿಕದ ವಿರುದ್ಧ ಸಿಟ್ಟು

    ಅಫ್ಘಾನಿಸ್ತಾನದಲ್ಲಿ ಅಧಿಕೃತವಾಗಿ ಉಗ್ರಾಡಳಿತ ಆರಂಭವಾಗಲು ಕೌಂಟ್‍ಡೌನ್ ಶುರುವಾಗಿದೆ. ಇರಾನ್ ಮಾದರಿಯಲ್ಲಿ ಅಫ್ಘಾನಿಸ್ತಾನದ ಸರ್ವೋಚ್ಛ ನಾಯಕರನ್ನಾಗಿ ತಾಲಿಬಾನ್ ಸುಪ್ರೀಂ ಅಖುಂಡಾಜಾದ್ ಹೆಸರನ್ನು ಘೋಷಿಸುವ ಸಂಭವ ಇದೆ. ತಾಲಿಬಾನ್ ಸರ್ಕಾರದ ಮುಖ್ಯಸ್ಥನನ್ನಾಗಿ ಮುಲ್ಲಾ ಬರಾದರ್ ಹೆಸರನ್ನು ಅಯ್ಕೆ ಮಾಡಲಾಗಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದಿದೆ. ತಾಲಿಬಾನ್ ಸಂಸ್ಥಾಪಕ ಮುಲ್ಲಾ ಒಮರ್ ಮಗ ಮುಲ್ಲಾ ಯಾಕೂಬ್, ಸಿರಾಜುದ್ದೀನ್ ಹಕ್ಕಾನಿ ಮತ್ತು ಷೇರ್ ಮಹಮ್ಮದ್ ಸ್ಟಾನ್ಜಾಯ್‍ಗೂ ಪ್ರಮುಖ ಜವಾಬ್ದಾರಿಗಳು ಸಿಗಲಿದೆ ಎನ್ನಲಾಗಿದೆ. ಇದನ್ನೂ ಓದಿ: ಶುಕ್ರವಾರದ ನಮಾಜ್ ಬಳಿಕ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸರ್ಕಾರ ರಚನೆ

     

     

    ಮಹಿಳೆಯರನ್ನು ಸರ್ಕಾರದಿಂದ ಹೊರಗಿಡಲು ತಾಲಿಬಾನ್ ತೀರ್ಮಾನಿಸಿದೆ. ಆದರೆ ಇದನ್ನು ಪ್ರಶ್ನಿಸಿ ಮಹಿಳೆಯರು ಕಾಬೂಲ್‍ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಮಹಿಳೆಯರ ಉದ್ಯೋಗ ಮತ್ತು ಶಿಕ್ಷಣದ ಬಗ್ಗೆ ಭರವಸೆ ಕೊಡಬೇಕು ಎಂದು ಒತ್ತಾಯಿಸಿದ್ದಾರೆ. ಮತ್ತೊಂದೆಡೆ, ಪಂಜಶೀರ್ ಪ್ರಾಂತ್ಯ ತಾಲಿಬಾನಿಗಳ ಪಾಲಿಗೆ ಕೈಗೆಟುಕದ ದ್ರಾಕ್ಷಿಯಂತಾಗಿದೆ. ತಾಲಿಬಾನ್ ವಶದಲ್ಲಿದ್ದ ಎರಡು ಪ್ರದೇಶಗಳನ್ನು ವಶಪಡಿಸಿಕೊಂಡಿದೆ. ಹೀಗಾಗಿ ತಾಲಿಬಾನ್ ರಾಕೆಟ್ ದಾಳಿ ನಡೆಸುತ್ತಿದೆ. ಚರಿಕಾರ್ ನಗರದಲ್ಲಿ ಭಾರೀ ಸ್ಫೋಟ ಉಂಟಾಗಿದೆ. ಆದರೆ ಇದಕ್ಕೆಲ್ಲ ಜಗ್ಗದ ಉತ್ತರದ ಪ್ರತಿರೋಧ ಪಡೆ, ನಮ್ಮ ಕಣಿವೆ ಅತಿಕ್ರಮಿಸಲು ಬಂದರೆ ತಾಲಿಬಾನಿಗಳನ್ನು ನೇರ ನರಕಕ್ಕೆ ಕಳಿಸೋದಾಗಿ ಅಬ್ಬರಿಸಿದೆ.

  • ಮೂವರು ಉಗ್ರರನ್ನು ಸದೆಬಡಿದ ಸೈನಿಕರು

    ಮೂವರು ಉಗ್ರರನ್ನು ಸದೆಬಡಿದ ಸೈನಿಕರು

    ಶ್ರೀನಗರ: ಉಗ್ರರು ಹಾಗೂ ಸೈನಿಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಜೈಷ್-ಇ-ಮೊಹಮ್ಮದ್ ಸಂಘಟನೆಯ ಉಗ್ರರನ್ನು ಭಾರತೀಯ ಸೇನೆ ಯೋಧರು ಹೊಡೆದುರುಳಿಸಿದ್ದಾರೆ.

    ಜಮ್ಮು ಕಾಶ್ಮೀರದ ಅವಂತಿಪೂರದ ನಾಗಬೀರನ್ ಟ್ರಾಲ್ ಅರಣ್ಯ ಪ್ರದೇಶದ ಮೇಲ್ಭಾಗ ಶನಿವಾರ ಬೆಳಗಿನ ಜಾವ ಘಟನೆ ನಡೆದಿದ್ದು, ಕಾರ್ಯಾಚರಣೆ ಇನ್ನೂ ಪ್ರಗತಿಯಲ್ಲಿದೆ. ಸೇನೆ ಹಾಗೂ ಪೊಲೀಸರ ಜಂಟಿ ತಂಡಗಳು ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಹೈಪ್ರೊಫೈಲ್ ಸೆಕ್ಸ್ ದಂಧೆ ಬಯಲು – ವಾಟ್ಸಪ್ ನಲ್ಲಿಯೇ ರೇಟ್ ಫೈನಲ್

    ಜೈಷ್-ಇ-ಮೊಹಮ್ಮದ್ ಸಂಘಟನೆಯ ಮೂವರು ಉಗ್ರರನ್ನು ಸದೆಬಡಿಯಲಾಗಿದ್ದು, ಇನ್ನೂ ಕಾರ್ಯಾಚರಣೆ ನಡೆಯುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ ಎಂದು ಜಮ್ಮು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

    ಶುಕ್ರವಾರ ನಡೆದ ಗುಂಡಿನ ಚಕಮಕಿ ವೇಳೆ ಸಹ ಇಬ್ಬರು ಉಗ್ರರನ್ನು ಭದ್ರತಾ ಸಿಬ್ಬಂದಿ ಹೆಡೆಮುರಿ ಕಟ್ಟಿದ್ದರು. ಅವಂತಿಪುರದ ಪಂಪೂರ್ ನಲ್ಲಿ ನಡೆದ ಘಟನೆಯಲ್ಲಿ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳು ಸೇರಿದಂತೆ ದಾಳಿ ಮಾಡುವ ವಸ್ತುಗೋಳನ್ನು ವಶಪಡಿಸಿಕೊಂಡಿದ್ದರು.

  • ಮಾಜಿ ಶಾಸಕ ಇದಿನಬ್ಬನವರ ಮೊಮ್ಮಗನಿಗೆ ಐಸಿಸ್ ನಂಟು – ಎನ್‍ಐಎಯಿಂದ ಅರೆಸ್ಟ್

    ಮಾಜಿ ಶಾಸಕ ಇದಿನಬ್ಬನವರ ಮೊಮ್ಮಗನಿಗೆ ಐಸಿಸ್ ನಂಟು – ಎನ್‍ಐಎಯಿಂದ ಅರೆಸ್ಟ್

    – ಬೆಂಗಳೂರು, ಮಂಗಳೂರಿನಲ್ಲಿ ಶಂಕಿತರು ಅರೆಸ್ಟ್
    – ಜಮ್ಮು ಕಾಶ್ಮೀರದ ಇಬ್ಬರು ಅರೆಸ್ಟ್

    ನವದೆಹಲಿ/ಮಂಗಳೂರು: ಐಸಿಸ್ ಜೊತೆ ನಂಟು ಹಿನ್ನೆಲೆಯಲ್ಲಿ ಕರ್ನಾಟಕದ ಇಬ್ಬರು ಮತ್ತು ಜಮ್ಮು ಕಾಶ್ಮೀರದ ಇಬ್ಬರನ್ನು ರಾಷ್ಟ್ರೀಯ ತನಿಖಾ ದಳ(ಎನ್‍ಐಎ) ಬಂಧಿಸಿದೆ.

    ಐಸಿಸ್ ನಂಟು ಹಿನ್ನೆಲೆಯಲ್ಲಿ ಮಂಗಳೂರು, ಬೆಂಗಳೂರು ಮತ್ತು ಜಮ್ಮು ಕಾಶ್ಮೀರದಲ್ಲಿ ಎನ್‍ಐಎ ದಾಳಿ ನಡೆಸಿತ್ತು. ಉಳ್ಳಾಲದ ಮಾಜಿ ಕಾಂಗ್ರೆಸ್ ಶಾಸಕ, ಸಾಹಿತಿ ದಿವಂಗತ ಇದಿನಬ್ಬ ಅವರ ಮೊಮ್ಮಗ ಅಮರ್ ಅಬ್ದುಲ್ ರೆಹಮಾನ್, ಬೆಂಗಳೂರಿನ ಶಂಕರ್ ವೆಂಕಟೇಶ್ ಪೆರುಮಾಳ್, ಶ್ರೀನಗರದ ಹಮೀದ್, ಬಂಡಿಪೋರದ ಮುಜಾಮಿಲ್ ಹಸನ್ ಅವರನ್ನು ಎನ್‍ಐಎ ಬಂಧಿಸಿದೆ.

    ಉಗ್ರ ಚಟುವಟಿಕೆ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿ ಹಣಕಾಸು ಸಂಗ್ರಹ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಮತ್ತು ಜಮ್ಮು ಕಾಶ್ಮೀರದ 5 ಕಡೆ ಎನ್‍ಐಎ ದಾಳಿ ನಡೆಸಿತ್ತು. ಶೋಧ ನಡೆಸಿದ ವೇಳೆ ಲ್ಯಾಪ್ ಟಾಪ್, ಹಾರ್ಡ್ ಡಿಸ್ಕ್, ಪೆನ್ ಡ್ರೈವ್, ಹಲವು ಸಿಮ್ ಗಳು, ಎಲೆಕ್ಟ್ರಾನಿಕ್ ವಸ್ತುಗಳು ಎನ್‍ಐಎ ವಶಕ್ಕೆ ಪಡೆದಿದೆ. ಇದನ್ನೂ ಓದಿ: ಪ್ರವಾಹ, ಕೋವಿಡ್ ನಿರ್ವಹಣೆಗಾಗಿ ನೂತನ ಸಚಿವರಿಗೆ ಜಿಲ್ಲೆಗಳ ಜವಾಬ್ದಾರಿ

    ಬೆಳ್ಳಂಬೆಳಗ್ಗೆ ದಾಳಿ: ಇದಿನಬ್ಬ ಅವರ ಪುತ್ರನ ಮನೆಗೆ ಬುಧವಾರ ನಸುಕಿನಲ್ಲೇ ಎನ್‍ಐಎ ದಾಳಿ ನಡೆಸಿತ್ತು. ಮನೆಯಲ್ಲಿ ಇದಿನಬ್ಬ ಅವರ ಪುತ್ರ ಇಸ್ಮಾಯಿಲ್ ಬಾಷಾ ತಮ್ಮ ಕುಟುಂಬದ ಜೊತೆಗೆ ವಾಸವಿದ್ದಾರೆ.

    ಸಿರಿಯಾ ಮೂಲದ ಐಸಿಸ್ ಉಗ್ರ ಸಂಘಟನೆಯ ಕುರಿತು ನಂಟು ಇರುವ ಶಂಕೆಯಲ್ಲಿ ದಾಳಿ ನಡೆದಿದೆ. ನಾಲ್ಕು ಕಾರುಗಳಲ್ಲಿ 25 ಮಂದಿಯಿದ್ದ ತಂಡ ಉಳ್ಳಾಲದ ಮಾಸ್ತಿಕಟ್ಟೆಗೆ ಆಗಮಿಸಿತ್ತು. ಎನ್‍ಐಎ ಜೊತೆಗೆ ಮಂಗಳೂರಿನ ಸ್ಥಳೀಯ ಪೊಲೀಸರು ಕೂಡ ಭದ್ರತೆ ಒದಗಿಸಿದ್ದರು.

    ಮೂರು ವರ್ಷಗಳ ಹಿಂದೆ ಇಸ್ಮಾಯಿಲ್ ಬಾಷಾರ ಪುತ್ರಿಯ ಮಗಳಾದ ಅಜ್ಮಲ್ ಕುಟುಂಬ ನಿಗೂಢವಾಗಿ ನಾಪತ್ತೆಯಾಗಿತ್ತು. ಅಜ್ಮಲ್‍ಳನ್ನ ಕೇರಳ ಮೂಲದ ಎಂಬಿಎ ಪದವೀಧರ ಸಿಯಾಝ್ ಜೊತೆ ವಿವಾಹ ಮಾಡಿ ಕೊಡಲಾಗಿತ್ತು. ಆದರೆ ಆ ಸಂದರ್ಭದಲ್ಲೇ ಕಾಸರಗೋಡಿನ 17 ಮಂದಿ ಸಿರಿಯಾದ ಐಸಿಸ್ ಉಗ್ರ ಸಂಘಟನೆ ಸೇರಿದ್ದರು. ಆ 17 ಜನರ ಪೈಕಿ ಅಜ್ಮಲ್ ಕುಟುಂಬವೂ ಇತ್ತು. ಈ ಬಗ್ಗೆ ಕೇರಳ ಆಂತರಿಕ ಭದ್ರತಾ ಹಾಗೂ ಗುಪ್ತಚರ ಇಲಾಖೆ ಹಾಗೂ ರಾಷ್ಟ್ರೀಯ ತನಿಖಾ ದಳ ತನಿಖೆ ಆರಂಭಿಸಿತ್ತು. ಅದೇ ತನಿಖೆಯ ಭಾಗವಾಗಿ ಅಜ್ಮಲ್ ಅಜ್ಜ ಇಸ್ಮಾಯಿಲ್ ಭಾಷಾ ಮನೆಗೆ ಇಂದು ದಾಳಿ ನಡೆದಿದೆ.

    ಇದಿನಬ್ಬ ಪುತ್ರ ಇಸ್ಮಾಯಿಲ್ ಬಾಷಾ ಮಂಗಳೂರಿನಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದರು. ಇವರ ಪುತ್ರರು ವಿದೇಶದಲ್ಲಿದ್ದಾರೆ. ಇವರ ಕುಟುಂಬದವರು ಐಸಿಸ್ ಸಂಬಂಧಿಸಿದ ಯೂಟ್ಯೂಬ್ ಚಾನೆಲ್ ಗಳನ್ನು ಸಬ್ ಸ್ಕ್ರೈಬ್ ಮಾಡಿ, ಮೃದು ಧೋರಣೆ ಅನುಸರಿಸಿದ್ದರು ಎನ್ನಲಾಗಿದೆ. ಅಲ್ಲದೆ, ಐಸಿಸ್ ಸಂಪರ್ಕ ಮತ್ತು ಜಮ್ಮು ಕಾಶ್ಮೀರದ ಉಗ್ರ ಸಂಘಟನೆಯ ಯುವಕರ ಜೊತೆ ಮೊಬೈಲ್ ಸಂಪರ್ಕ ಇರುವ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎನ್ನಲಾಗಿದೆ. ವಿಚಾರಣೆಯ ಅಂತ್ಯದಲ್ಲಿ ಎಂ.ಕೆ.ಇದಿನಬ್ಬನವರ ಮೊಮ್ಮಗನನ್ನು ಎನ್‍ಐಎ ಅಧಿಕಾರಿಗಳು ವಶಕ್ಕೆ ಪಡೆದು ಬಂಧಿಸಿದ್ದಾರೆ.

  • ಕಾಶ್ಮೀರದ ನಾಯಕರ ಜೊತೆ ಮೋದಿ ಸಭೆಗೆ ಪಾಕ್ ಕಿರಿಕ್

    ಕಾಶ್ಮೀರದ ನಾಯಕರ ಜೊತೆ ಮೋದಿ ಸಭೆಗೆ ಪಾಕ್ ಕಿರಿಕ್

    ಇಸ್ಲಾಮಾಬಾದ್/ನವದೆಹಲಿ: ಜಮ್ಮು ಕಾಶ್ಮೀರದ ನಾಯಕರ ಜೊತೆ ಪ್ರಧಾನಿ ನರೇಂದ್ರ ಮೋದಿ ಸರ್ವಪಕ್ಷ ಸಭೆ ಕರೆದಿರುವ ಬೆನ್ನಲ್ಲೇ ಪಾಕಿಸ್ತಾನ ಕಿರಿಕ್ ಎತ್ತಿದೆ.

    ಪಾಕ್ ವಿದೇಶಾಂಗ ಸಚಿವ ಮೊಹಮ್ಮದ್ ಖುರೇಷಿ ತಮ್ಮ ಹೇಳಿಕೆಯನ್ನು ಬಿಡುಗಡೆ ಮಾಡಿ, ಕಾಶ್ಮೀರವನ್ನು ವಿಭಜಿಸಲು ಮತ್ತು ಜನಸಂಖ್ಯಾಶಾಸ್ತ್ರವನ್ನು ಬದಲಾಯಿಸಲು ಭಾರತ ನಡೆಸುವ ಯಾವುದೇ ಕ್ರಮವನ್ನು ವಿರೋಧಿಸುವುದಾಗಿ ಹೇಳಿದೆ. ಇದನ್ನೂ ಓದಿ: ಪ್ರಧಾನಿ ಮೋದಿ ನಮ್ಮ ದೇಶದ ಹೆಮ್ಮೆ: ಗುಲಾಂ ನಬಿ ಆಜಾದ್

    ಜೂನ್ 24 ರಂದು ಪ್ರಧಾನಿ ನರೇಂದ್ರ ಮೋದಿ ಕಾಶ್ಮೀರದ 14 ಪ್ರಮುಖ ರಾಜಕೀಯ ನಾಯಕರ ಜೊತೆ ದೆಹಲಿಯಲ್ಲಿ ಸಭೆಯನ್ನು ಕರೆದಿದ್ದಾರೆ. ಕೇಂದ್ರಾಡಳಿತ ಪ್ರದೇಶದಲ್ಲಿ ಚುನಾವಣೆ ನಡೆಸುವುದೂ ಸೇರಿದಂತೆ ರಾಜಕೀಯ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರದ ಇತರ ಕೆಲವು ನಾಯಕರೂ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ, ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ, ಜೆಕೆಎಪಿ ಪಕ್ಷದ ಅಲ್ತಾಫ್ ಬುಕಾರಿ ಮತ್ತು ಪೀಪಲ್ಸ್ ಕಾನ್ಫರೆನ್ಸ್ ಸಜ್ಜದ್ ಲೋನ್ ಅವರಿಗೆ ಸಭೆಗೆ ಆಹ್ವಾನ ನೀಡುವ ಪ್ರಕ್ರಿಯೆ ಆರಂಭವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಮೆಹಬೂಬಾ ಮುಫ್ತಿ ಪ್ರತಿಕ್ರಿಯಿಸಿ, ಜೂನ್ 24ರ ಸಭೆಗೆ ಆಹ್ವಾನ ದೊರೆತಿದೆ. ಸಭೆಯಲ್ಲಿ ಭಾಗವಹಿಸುವ ಕುರಿತು ಇನ್ನಷ್ಟೇ ನಿರ್ಧಾರ ಕೈಗೊಳ್ಳಬೇಕಿದೆ. ಪಕ್ಷದ ಸದಸ್ಯರ ಜತೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಗುಲಾಂ ನಬಿ ಆಜಾದ್‌ ಕಾರ್ಯ ನೆನೆದು ಭಾವುಕರಾದ ಪ್ರಧಾನಿ ಮೋದಿ

    ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಜಮ್ಮು ಕಾಶ್ಮೀರದ ರಾಜಕೀಯ ಪಕ್ಷಗಳ ಜತೆ ಕೇಂದ್ರ ಸರ್ಕಾರ ನಡೆಸುತ್ತಿರುವ ಮೊದಲ ಸಭೆ ಇದಾಗಿದ್ದು ಮತ್ತೆ ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಸಿಗುತ್ತಾ ಎಂಬ ಪ್ರಶ್ನೆ ಎದ್ದಿದೆ.

    2019ರ ಆಗಸ್ಟ್ ನಲ್ಲಿ ಕೇಂದ್ರ ಸರ್ಕಾರ ಜಮ್ಮುಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿ ಜಮ್ಮು ಕಾಶ್ಮೀರ ಮತ್ತು ಲಡಾಖ್ ಅನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿತ್ತು. ರದ್ದಾಗಿದ್ದ ವಿಶೇಷ ಸ್ಥಾನಮಾನದ ಮರು ಸ್ಥಾಪನೆಗಾಗಿ ಕಳೆದ ವರ್ಷ ಅಕ್ಟೋಬರ್ ನಲ್ಲಿ ಜಮ್ಮು ಕಾಶ್ಮೀರದ ರಾಜಕೀಯ ಪಕ್ಷಗಳು ಒಂದಾಗಿ ಗುಪ್ಕಾರ್ ಮೈತ್ರಿಯನ್ನು ಮಾಡಿದ್ದವು. ಎನ್‍ಸಿ, ಪಿಡಿಪಿ, ಸಿಪಿಎಂ, ಪೀಪಲ್ಸ್ ಮೂವ್‍ಮೆಂಟ್ ಮತ್ತು ಅವಾಮಿ ನ್ಯಾಷನಲ್ ಕಾನ್ಫರೆನ್ಸ್ ಪಕ್ಷಗಳು ಮೈತ್ರಿ ಮಾಡಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಿಸಿದ್ದವು.

  • ಶಾಲೆ ನಿರ್ಮಾಣಕ್ಕೆ 1 ಕೋಟಿ ರೂ. ದೇಣಿಗೆ ಕೊಟ್ಟ ನಟ ಅಕ್ಷಯ್ ಕುಮಾರ್

    ಶಾಲೆ ನಿರ್ಮಾಣಕ್ಕೆ 1 ಕೋಟಿ ರೂ. ದೇಣಿಗೆ ಕೊಟ್ಟ ನಟ ಅಕ್ಷಯ್ ಕುಮಾರ್

    ಮುಂಬೈ: ಬಾಲಿವುಡ್ ನಟ ಅಕ್ಷಯ್ ಕುಮಾರ್ ಸೈನಿಕರ ಜೊತೆಗೆ ಹಾಡಿ ಕುಣಿದು, ಶಾಲೆ ನಿರ್ಮಾಣಕ್ಕೆ ಒಂದು ಕೋಟಿ ರೂ. ದೇಣಿಗೆಯನ್ನು ನೀಡಿದ್ದಾರೆ.

    ಅಕ್ಷಯ್ ಕುಮಾರ್ ಇತ್ತೀಚೆಗೆ ಜಮ್ಮು ಕಾಶ್ಮೀರ ಪ್ರದೇಶಕ್ಕೆ ಭೇಟಿ ನೀಡಿದ್ದರು. ಅಲ್ಲಿನ ಜನರೊಂದಿಗೆ ಕೆಲ ಕಾಲ ಬೆರೆತರು. ನಂತರ ಸೈನಿಕರ ಜೊತೆ ಸಂವಾದ ನಡೆಸಿದರು. ಅವರಿಗೆ ಉತ್ಸಾಹ ತುಂಬಲು ಹಾಡಿ, ಕುಣಿದರು. ಬಿಎಸ್‍ಎಫ್ ಸೈನಿಕರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡರು. ಬಾಲಿವುಡ್ ನಟನನ್ನು ನೋಡಲು ಸುತ್ತಮುತ್ತಲಿನ ಹಳ್ಳಿಯ ಜನರು ಮುಗಿಬಿದ್ದಿದ್ದರು. ಈ ವೇಳೆ ಅಲ್ಲಿನ ನೀರೂ ಗ್ರಾಮದಲ್ಲಿ ಶಾಲೆ ನಿರ್ಮಾಣಕ್ಕಾಗಿ 1 ಕೋಟಿ ರೂ. ದೇಣಿಗೆ ನೀಡುವ ಮೂಲಕವಾಗಿ ಅಕ್ಷಯ್ ಕುಮಾರ್ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇದನ್ನೂ ಓದಿ:  ಸೋಯಾ ಬೀಜ ಸಿಗದಿದ್ದಕ್ಕೆ ಕೃಷಿ ಅಧಿಕಾರಿಯನ್ನು ಗೇಟಿಗೆ ಕಟ್ಟಿ ಹಾಕಿದ ರೈತರು

    ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಅಕ್ಷಯ್ ಕುಮಾರ್ ಬ್ಯುಸಿ ಆಗಿದ್ದಾರೆ. ರೋಹಿತ್ ಶೆಟ್ಟಿ ನಿರ್ದೇಶನದಲ್ಲಿ ಅವರು ನಟಿಸಿರುವ ಸೂರ್ಯವಂಶಿ ಚಿತ್ರದ ಬಿಡುಗಡೆಯು ಲಾಕ್‍ಡೌನ್ ಕಾರಣದಿಂದ ತಡವಾಗಿದೆ. ಬಹುನಿರೀಕ್ಷಿತ ಬೆಲ್ ಬಾಟಂ ಸಿನಿಮಾ ಜುಲೈ 27ರಂದು ಚಿತ್ರಮಂದಿರದಲ್ಲಿಯೇ ರಿಲೀಸ್ ಆಗಲಿದೆ ಎಂದು ಅವರು ಇತ್ತೀಚೆಗೆ ಸುದ್ದಿ ನೀಡಿದ್ದಾರೆ. ಇದಲ್ಲದೆ ಅತರಂಗಿರೇ, ಬಚ್ಚನ್ ಪಾಂಡೆ, ರಾಮ್ ಸೇತು ಮುಂತಾದ ಸಿನಿಮಾಗಳಲ್ಲಿ ಅಕ್ಷಯ್ ಕುಮಾರ್ ತೊಡಗಿಕೊಂಡಿದ್ದಾರೆ. ಇದನ್ನೂ ಓದಿ:  ವಿಶ್ವನಾಥ್ ಬಗ್ಗೆ ಮಾತನಾಡಲ್ಲ, ಶಿಸ್ತು ಕ್ರಮ ತೆಗೆದುಕೊಳ್ಳಬೇಕು – ಹೈಕಮಾಂಡ್‍ಗೆ ಸಿಎಂ ಮನವಿ

    ಸಮಾಜಮುಖಿ ಕಾರ್ಯಗಳಲ್ಲಿ ಸದಾ ಮುಂದಿರುತ್ತಾರೆ. ಕಳೆದ ವರ್ಷ ಲಾಕ್‍ಡೌನ್ ಆರಂಭ ಆದಾಗ ಬರೋಬ್ಬರಿ 25 ಕೋಟಿ ರೂ.ಗಳನ್ನು ದೇಣಿಗೆಯಾಗಿ ನೀಡುವ ಮೂಲಕ ಅಕ್ಷಯ್ ಕುಮಾರ್ ಎಲ್ಲರಿಗೂ ಮಾದರಿ ಆಗಿದ್ದರು. ಈಗ ಶಾಲೆ ನಿರ್ಮಾಣಕ್ಕಾಗಿ ಒಂದು ಕೋಟಿ ರೂ. ದೇಣಿಗೆ ನೀಡಿದ್ದಾರೆ.