Tag: jammu kashmir

  • J&K | ಬೆಳ್ಳಂಬೆಳಗ್ಗೆ ಅವಘಡ – ಸಿಂಧ್ ನದಿಗೆ ಬಿದ್ದ ITBP ಯೋಧರನ್ನು ಕರೆದೊಯ್ಯುತ್ತಿದ್ದ ಬಸ್

    J&K | ಬೆಳ್ಳಂಬೆಳಗ್ಗೆ ಅವಘಡ – ಸಿಂಧ್ ನದಿಗೆ ಬಿದ್ದ ITBP ಯೋಧರನ್ನು ಕರೆದೊಯ್ಯುತ್ತಿದ್ದ ಬಸ್

    – ಕೆಲ ಶಸ್ತ್ರಾಸ್ತ್ರಗಳು ನಾಪತ್ತೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu And Kashmir) ಗಂಡೇರ್ಬಲ್‌ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ಐಟಿಬಿಪಿ (Indo Tibetan Border Police) ಯೋಧರನ್ನು ಕರೆದೊಯ್ಯುತ್ತಿದ್ದ ಬಸ್‌ ಭಾರೀ ಮಳೆಯ ನಡುವೆ ಸಿಂಧ್‌ ನದಿಗೆ ಉರುಳಿ ಬಿದ್ದಿದೆ.

    ಈಗಾಗಲೇ ಎಸ್‌ಡಿಆರ್‌ಎಫ್‌ (SDRF) ತಂಡ ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ. ಸಂಬಂಧಪಟ್ಟ ಸಂಸ್ಥೆಗಳೂ ನೆರವಿಗೆ ಧಾವಿಸಿವೆ.‌ ಭಾರೀ ಮಳೆಯ ಹಿನ್ನೆಲೆ ದುರಂತ ಸಂಭವಿಸಿದ್ದು, ಕೆಲವು ಶಸ್ತ್ರಾಸ್ತ್ರಗಳು ನಾಪತ್ತೆಯಾಗಿವೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ವಿಶ್ವದ ಅತ್ಯಂತ ದುಬಾರಿ ಕಣ್ಗಾವಲು ಉಪಗ್ರಹ ಇಂದು ನಭಕ್ಕೆ; ಭಾರತ-ಅಮೆರಿಕ ಮಹತ್ವದ ಹೆಜ್ಜೆ

    ರಕ್ಷಣಾ ತಂಡಗಳ ಹುಡುಕಾಟದ ವೇಲೆ ಈವರೆಗೆ ಮೂವರು ಶಸ್ತ್ರಾಸ್ತ್ರಗಳು ಸಿಕ್ಕಿವೆ. ಇನ್ನುಳಿದ ಶಸ್ತ್ರಾಸ್ತ್ರಗಳಿಗೆ ಹುಡುಕಾಟ ನಡೆಯುತ್ತಿದೆ. ಈವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ, ಕಾರ್ಯಾಚರಣೆ ಮುಂದುವರಿದಿದೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ – ಪಹಲ್ಗಾಮ್‌ ಪಾತಕಿ ಬೆನ್ನಲ್ಲೇ ಮತ್ತಿಬ್ಬರು ಉಗ್ರರು ಎನ್‌ಕೌಂಟರ್‌

  • ಕಾಶ್ಮೀರದಲ್ಲಿ ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ – ಪಹಲ್ಗಾಮ್‌ ಪಾತಕಿ ಬೆನ್ನಲ್ಲೇ ಮತ್ತಿಬ್ಬರು ಉಗ್ರರು ಎನ್‌ಕೌಂಟರ್‌

    ಕಾಶ್ಮೀರದಲ್ಲಿ ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ – ಪಹಲ್ಗಾಮ್‌ ಪಾತಕಿ ಬೆನ್ನಲ್ಲೇ ಮತ್ತಿಬ್ಬರು ಉಗ್ರರು ಎನ್‌ಕೌಂಟರ್‌

    – ಎಲ್‌ಒಸಿಯಲ್ಲಿ ಒಳನುಸುಳಲು ಯತ್ನಿಸಿದ್ದ ಉಗ್ರರು

    ಶ್ರೀನಗರ: ಪಹಲ್ಗಾಮ್‌ ದಾಳಿಯ ಪಾತಕಿ (Pahalgam Attacker) ಹಾಶಿಮ್‌ ಮೂಸಾ ಹತ್ಯೆ ಬೆನ್ನಲ್ಲೇ ಮತ್ತಿಬ್ಬರು ಉಗ್ರರನ್ನ ಸೇನೆ ಬೇಟೆಯಾಡಿದೆ. ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಇಂದು ಬೆಳಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ (Gun Fight) ಉಗ್ರರನ್ನ ಯೋಧರು ಹೊಡೆದುರುಳಿಸಿದ್ದಾರೆ.

    ಹತ್ಯೆಯಾದ ಇಬ್ಬರು ಉಗ್ರರು ಕಾಶ್ಮೀರದ ಪೂಂಚ್ (Poonch) ಜಿಲ್ಲೆಯ ದೇಗ್ವಾರ್ ಸೆಕ್ಟರ್‌ನ ನಿಯಂತ್ರಣ ರೇಖೆಯ ಬಳಿ ಒಳನುಸುಳಲು ಯತ್ನಿಸಿದ್ದರು. ಭಾರೀ ಮಳೆ ನಡುವೆಯೂ ಮೂವರು ಪಿಓಕೆ ಕಡೆಯಿಂದ ಗಡಿ ದಾಟಲು ಯತ್ನಿಸಿದ್ದರು. ಪೂಂಚ್ ಪ್ರದೇಶದಲ್ಲಿ ಬೇಲಿಯ ಉದ್ದಕ್ಕೂ ಇಬ್ಬರು ಶಂಕಿತರ ಚಲನವಲನ ಪತ್ತೆಯಾಗಿತ್ತು. ಭದ್ರತಾ ಪಡೆಗಳ ಎಚ್ಚರಿಕೆ ಬಳಿಕವೂ ಗುಂಡಿನ ದಾಳಿ ನಡೆಸಿದ್ದರು. ಇದಕ್ಕೆ ಪ್ರತಿದಾಳಿ ನಡೆಸಿದ ಭದ್ರತಾಪಡೆ ಉಗ್ರರನ್ನ ಹೊಡೆದುರುಳಿಸಿದೆ (Encounter). ಇದನ್ನೂ ಓದಿ: Operation Mahadev | ಪಹಲ್ಗಾಮ್‌ ನರಮೇಧಕ್ಕೆ ಕಾರಣವಾಗಿದ್ದ ಪ್ರಮುಖ ಉಗ್ರ ಯೋಧರ ಗುಂಡಿಗೆ ಬಲಿ

    ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಹಾಗೂ ಸೇನೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಉಗ್ರರ ಬೇಟೆ ಯಶಸ್ವಿಯಾಗಿದೆ. ಮೂವರು ಉಗ್ರರು ಒಳನುಸುಳಿದ್ದು, ಇಬ್ಬರನ್ನು ಹತ್ಯೆ ಮಾಡಲಾಗಿದೆ. ಉಳಿದ ಒಬ್ಬನಿಗಾಗಿ ಶೋಧ ಮುಂದುವರಿದಿದೆ. ಇದನ್ನೂ ಓದಿ: ಭಯೋತ್ಪಾದನೆ ವಿರುದ್ಧ ಹೋರಾಡಲು ಆಗದಿದ್ರೆ ಪಾಕ್‌ಗೆ ಸಹಾಯ ಮಾಡಲು ಸಿದ್ಧ: ರಾಜನಾಥ್‌ ಸಿಂಗ್

    Pahalgam Terrorists 

    ಎರಡು ದಿನಗಳ ಹಿಂದೆಯಷ್ಟೇ ʻಆಪರೇಷನ್‌ ಮಹಾದೇವ್‌ʼ (Operation MAHADEV) ಹೆಸರಿನಲ್ಲಿ ನಡೆದ ಪ್ರಮುಖ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಶ್ರೀನಗರದ ಲಿಡ್ವಾಸ್‌ ಪ್ರದೇಶದಲ್ಲಿ ಮೂವರು ಉಗ್ರರನ್ನ ಹತ್ಯೆಗೈದಿದ್ದವು. ಈ ಪೈಕಿ ಓರ್ವ ಪಹಲ್ಗಾಮ್‌ ದಾಳಿಯ ಮಾಸ್ಟರ್‌ ಮೈಂಡ್‌ ಎಂಬುದು ಖಚಿತವಾಗಿದೆ. ಇದನ್ನೂ ಓದಿ: ಪಹಲ್ಗಾಮ್ ದಾಳಿ ಮಾಡಿದವ್ರು ಪಾಕಿಗಳು, ವೋಟರ್ ಐಡಿ, ಚಾಕ್ಲೆಟ್ ಸಾಕ್ಷ್ಯ – ವಿಪಕ್ಷಗಳಿಗೆ ಎಳೆಎಳೆಯಾಗಿ ಘಟನೆ ವಿವರಿಸಿದ ಅಮಿತ್ ಶಾ

    Jammu And Kashmir

    ಪಾತಕಿ ಹಾಶಿಮ್‌ ಮೂಸಾ ಯಾರು?
    ಹಾಶಿಮ್‌ ಮೂಸಾ ಪಾಕಿಸ್ತಾನ ಸೇನೆಯ ಹಿನ್ನೆಲೆ ಹೊಂದಿದ್ದಾನೆ. ಪಹಲ್ಗಾಮ್ ದಾಳಿಯಲ್ಲಿ ISI ಪಾತ್ರದ ಇರುವುದಕ್ಕೆ ಇದು ಪ್ರಬಲ ಸಾಕ್ಷಿಯಾಗಿದೆ. ಪಾಕಿಸ್ತಾನದ ಪ್ಯಾರಾ ಕಮಾಂಡೊ (Pakistani Para Commando) ಆಗಿದ್ದ ಮೂಸಾ ವಿಶೇಷ ತರಬೇತಿ ಪಡೆದಿದ್ದ. ಲಷ್ಕರ್-ಎ-ತೈಬಾದಲ್ಲೂ ಪ್ರಮುಖನಾಗಿ ಗುರುತಿಸಿಕೊಂಡಿದ್ದ, ಅದಕ್ಕಾಗಿಯೇ ಸ್ಥಳೀಯರಲ್ಲದವರನ್ನ ಕೊಲ್ಲಲು, ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಲು ಮೂಸಾನನ್ನ ಭಾರತಕ್ಕೆ ಕಳುಹಿಸಲಾಗಿತ್ತು. ಹಾಶೀಮ್ ಮೂಸಾ LeT ಸಂಘಟನೆಗೆ ಸೇರಿದವನಾಗಿದ್ದು, SSG ಕಮಾಂಡೋ ಯುದ್ಧದಲ್ಲಿ ಪರಿಣತಿ ಹೊಂದಿದ್ದ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಪಹಲ್ಗಾಮ್‌ ಪಾತಕಿಗಳನ್ನ ಕೊಂದಿದ್ದೇವೆ – ʻಸಿಂಧೂರʼ ಚರ್ಚೆ ವೇಳೆ ಅಬ್ಬರಿಸಿದ ಅಮಿತ್‌ ಶಾ

  • ಜಮ್ಮು ಕಾಶ್ಮೀರದಲ್ಲಿ ಭಾರೀ ಮಳೆ – ವರುಣಾರ್ಭಟಕ್ಕೆ ಭೂಕುಸಿತ, ಅಲ್ಲಲ್ಲಿ ಅವಾಂತರ

    ಜಮ್ಮು ಕಾಶ್ಮೀರದಲ್ಲಿ ಭಾರೀ ಮಳೆ – ವರುಣಾರ್ಭಟಕ್ಕೆ ಭೂಕುಸಿತ, ಅಲ್ಲಲ್ಲಿ ಅವಾಂತರ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ಕೆಲವು ಭಾಗಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಅಲ್ಲಲ್ಲಿ ಅವಾಂತರ ಸೃಷ್ಠಿಯಾಗಿದೆ.

    ಪೂಂಚ್ ಜಿಲ್ಲೆಯಲ್ಲಿ ಸರ್ಕಾರಿ ಶಾಲೆಯ ಮೇಲೆ ಭೂಕುಸಿತವಾಗಿದ್ದು, ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಜೊತೆಗೆ ಮೂವರು ಗಾಯಗೊಂಡಿದ್ದಾರೆ. ಬೈಂಚ್-ಕಾಲ್ಸೇನ್ ಪ್ರದೇಶದಲ್ಲಿರುವ ಶಾಲೆ ಇದಾಗಿದ್ದು, ಶಾಲೆಯ ತಗಡಿನ ಛಾವಣಿ ಮೇಲೆ ದೊಡ್ಡ ಬಂಡೆ ಉರುಳಿದ್ದರಿಂದ ಸಾವು-ನೋವು ಸಂಭವಿಸಿದೆ.ಇದನ್ನೂ ಓದಿ: Breaking | ಉಪರಾಷ್ಟ್ರಪತಿ ಹುದ್ದೆಗೆ ಜಗದೀಪ್‌ ಧನಕರ್‌ ರಾಜೀನಾಮೆ

    ಇನ್ನೂ ರಿಯಾಸಿ ಜಿಲ್ಲೆಯಲ್ಲಿರುವ ಮಾತಾ ವೈಷ್ಣೋದೇವಿ ಯಾತ್ರಾ ಮಾರ್ಗದಲ್ಲಿ ಭೂಕುಸಿತ ಸಂಭವಿಸಿದೆ. ಅವಘಡದಲ್ಲಿ ಐವರು ಯಾತ್ರಿಕರು ಸೇರಿದಂತೆ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಭೂಕುಸಿತ ಉಂಟಾಗಿದ್ದ ಜಾಗದಲ್ಲಿ ತೆರವು ಕಾರ್ಯಾಚರಣೆ ನಡೆದಿದೆ.

    ಮುಂಬೈನಲ್ಲಿ ಇಡೀ ರಾತ್ರಿ ಸುರಿದ ಮಳೆಯಿಂದಾಗಿ ತಗ್ಗು ಪ್ರದೇಶಗಳು ಮುಳುಗಡೆಯಾಗಿವೆ. ಹೈವೇಗಳಲ್ಲೂ ಮಳೆ ನೀರು ಹರಿಯುತ್ತಿದ್ದು, ವಾಹನ ಸವಾರರು ಪರದಾಡುವಂತಾಗಿತ್ತು. ಉತ್ತರಾಖಂಡ್‌ದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಡೆಹ್ರಾಡೂನ್, ತೆಹ್ರಿ, ಪೌರಿ, ನೈನಿತಾಲ್, ಚಂಪಾವತ್ ಮತ್ತು ಉಧಮ್ ಸಿಂಗ್ ನಗರದ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, 1ರಿಂದ 12ನೇ ತರಗತಿವರೆಗೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.ಇದನ್ನೂ ಓದಿ: ಇನ್ಮುಂದೆ VIP ಸಂಚಾರದ ವೇಳೆ ಸೈರನ್ ಬಳಕೆ ನಿಷೇಧ

  • ಪಹಲ್ಗಾಮ್‌ ದಾಳಿಯನ್ನ TRF ನಡೆಸಿದೆ ಅನ್ನೋದಕ್ಕೆ ಸಾಕ್ಷಿ ತೋರಿಸಿ – ಉಗ್ರ ಸಂಘಟನೆಗೆ ಪಾಕ್‌ ನೇರ ಬೆಂಬಲ

    ಪಹಲ್ಗಾಮ್‌ ದಾಳಿಯನ್ನ TRF ನಡೆಸಿದೆ ಅನ್ನೋದಕ್ಕೆ ಸಾಕ್ಷಿ ತೋರಿಸಿ – ಉಗ್ರ ಸಂಘಟನೆಗೆ ಪಾಕ್‌ ನೇರ ಬೆಂಬಲ

    ಇಸ್ಲಾಮಾಬಾದ್: ಪಾಕಿಸ್ತಾನದ ಉಪ ಪ್ರಧಾನಿ ಹಾಗೂ ವಿದೇಶಾಂಗ ಸಚಿವ ಇಶಾಕ್‌ ದಾರ್‌ (Ishaq Dar) ದಿ ರೆಸಿಸ್ಟೆನ್ಸ್ ಫ್ರಂಟ್ (TRF) ಉಗ್ರ ಸಂಘಟನೆಗೆ ಸಂಸತ್‌ನಲ್ಲಿ ಬಹಿರಂಗವಾಗಿಯೇ ಬೆಂಬಲ ವ್ಯಕ್ತಪಡಿಸಿದ್ದಾರೆ.

    ಪಾಕಿಸ್ತಾನ ಸಂಸತ್ತಿನಲ್ಲಿ ಭಾಷಣ ಮಾಡುವಾಗ, ಪಹಲ್ಗಾಮ್‌ ದಾಳಿಯನ್ನ (Pahalgam attack) ಟಿಆರ್‌ಎಫ್‌ ನಡೆಸಿದೆ ಅನ್ನೋದಕ್ಕೆ ಸಾಕ್ಷಿ ತೋರಿಸಿ ಎಂದು ಕೇಳಿರುವ ಇಶಾಕ್‌ ದಾರ್‌ ಉಗ್ರ ಸಂಘಟನೆಗೆ ನೇರ ಬೆಂಬಲ ಸೂಚಿಸಿದ್ದಾರೆ. ಇದನ್ನೂ ಓದಿ: Uttar Pradesh | ಸ್ಕೂಲ್ ವ್ಯಾನ್‌ನಲ್ಲಿ 4 ವರ್ಷದ ಬಾಲಕಿ ಮೇಲೆ ರೇಪ್ – ಡ್ರೈವರ್ ಬಂಧನ

    USA designates LeT offshoot TRF behind the Pahalgam attack as terrorist organisation Setback for Pakistan

    ಏಪ್ರಿಲ್ 22ರ ಪಹಲ್ಗಾಮ್ ಉಗ್ರ ದಾಳಿ (Pahalgam Attack) ಎಸಗಿದ ಪಾಕಿಸ್ತಾನ (Pakistan) ಮೂಲದ ದಿ ರೆಸಿಸ್ಟೆನ್ಸ್ ಫ್ರಂಟ್ (TRF) ಅನ್ನು ಅಮೆರಿಕದ ವಿದೇಶಾಂಗ ಇಲಾಖೆ ಒಂದು ದಿನದ ಹಿಂದಷ್ಟೇ ಭಯೋತ್ಪಾದಕ ಸಂಘಟನೆ ಪಟ್ಟಿಗೆ ಸೇರಿಸಿತ್ತು. ಜಮ್ಮು ಮತ್ತು ಕಾಶ್ಮೀರದಲ್ಲಿ ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ನಾಗರಿಕರ ಪ್ರಾಣ ಬಲಿ ಪಡೆದ ಘಟನೆಯ ಹೊಣೆಗಾರಿಕೆಯನ್ನು ಈ ಸಂಘಟನೆ ವಹಿಸಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ (Marco Rubio) ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅಮೆರಿಕದ ಈ ಹೇಳಿಕೆ ಬೆನ್ನಲ್ಲೇ ಪಾಕ್‌ ಉಪ ಪ್ರಧಾನಿ ಸಂಸತ್‌ನಲ್ಲಿ ಟಿಆರ್‌ಎಫ್‌ ಪರ ಧ್ವನಿ ಎತ್ತಿದ್ದಾರೆ.  ಇದನ್ನೂ ಓದಿ: ಪಹಲ್ಗಾಮ್‌ ದಾಳಿಯ ಹೊಣೆ ಹೊತ್ತಿದ್ದ ಟಿಆರ್‌ಎಫ್‌ನ್ನು ಉಗ್ರ ಸಂಘಟನೆ ಪಟ್ಟಿಗೆ ಸೇರಿಸಿದ ಅಮೆರಿಕ

    ಸಂಸತ್‌ನಲ್ಲಿ ಮಾತನಾಡಿದ ಇಶಾಕ್‌ ದಾರ್‌, ಅಮೆರಿಕ ಟಿಆರ್‌ಎಫ್‌ ಅನ್ನು ವಿದೇಶಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಸಂಬಂಧಿಸಿದ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದಕ ಗುಂಪು ಟಿಆರ್‌ಎಫ್‌. ಇದು ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ (ಎಲ್‌ಇಟಿ) ನ ಪ್ರಾಕ್ಸಿ ಕೂಡ ಆಗಿದೆ ಅಂತ ಅಮೆರಿಕ ಹೇಳಿದೆ. ಯುಎನ್‌ಎಸ್‌ಸಿ ಹೇಳಿಕೆಯಲ್ಲಿ ಟಿಆರ್‌ಎಫ್ ಉಲ್ಲೇಖವನ್ನು ನಾವು ವಿರೋಧಿಸುತ್ತೇವೆ. ಪಾಕಿಸ್ತಾನ ಇದನ್ನ ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.  ಇದನ್ನೂ ಓದಿ: ಟೇಕಾಫ್ ಆಗಿ 16 ನಿಮಿಷಕ್ಕೆ ಲ್ಯಾಂಡ್ ಆಯ್ತು ಏರ್ ಇಂಡಿಯಾ ವಿಮಾನ

    Pahalgam Terror Attack 2 1

    ಟಿಆರ್‌ಎಫ್‌ ಅನ್ನು ಅಕ್ರಮವೆಂದು ನಾವು ಪರಿಗಣಿಸಲ್ಲ, ಪಹಲ್ಗಾಮ್‌ ದಾಳಿಯನ್ನ ಅವರೇ ನಡೆಸಿದ್ದಾರೆ ಎಂಬುದಕ್ಕೆ ಸಾಕ್ಷಿ ತೋರಿಸಿ ಅಂತಲೂ ಹೇಳಿದ್ದಾರೆ. ಇದನ್ನೂ ಓದಿ: ಪಾಟ್ನಾ ಆಸ್ಪತ್ರೆಯಲ್ಲಿ ಐಸಿಯುಗೆ ನುಗ್ಗಿ ಗ್ಯಾಂಗ್‌ಸ್ಟರ್‌ ಹತ್ಯೆ – ಐವರು ಆರೋಪಿಗಳು ಕೋಲ್ಕತ್ತಾದಲ್ಲಿ ಅರೆಸ್ಟ್‌

  • J&K | ಮೂರು ಬಸ್‌ಗಳ ನಡುವೆ ಅಪಘಾತ – 10ಕ್ಕೂ ಹೆಚ್ಚು ಅಮರನಾಥ ಯಾತ್ರಿಕರಿಗೆ ಗಾಯ

    J&K | ಮೂರು ಬಸ್‌ಗಳ ನಡುವೆ ಅಪಘಾತ – 10ಕ್ಕೂ ಹೆಚ್ಚು ಅಮರನಾಥ ಯಾತ್ರಿಕರಿಗೆ ಗಾಯ

    ಶ್ರೀನಗರ: ಮೂರು ಬಸ್‌ಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ 10ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು (Amarnath Yatra) ಗಾಯಗೊಂಡಿರುವ ಘಟನೆ ಜಮ್ಮು ಕಾಶ್ಮೀರದ (Jammu And Kashmir) ಕುಲ್ಗಾಮ್ (Kulgam) ಜಿಲ್ಲೆಯಲ್ಲಿ ನಡೆದಿದೆ.

    ಗಾಯಾಳು ಯಾತ್ರಿಕರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಎಲ್ಲಾ ಗಾಯಾಳುಗಳ ಸ್ಥಿತಿ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ರಾಯಚೂರು | ಕಸ ವಿಲೇವಾರಿ ವಾಹನಗಳನ್ನು ಕದ್ದೊಯ್ದ ಕಳ್ಳರು

    ಅಮರನಾಥ ಯಾತ್ರೆಗಾಗಿ ಬೇಸ್ ಕ್ಯಾಂಪ್‌ಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೂರು ಬಸ್‌ಗಳು ಹಾನಿಗೊಳಗಾಗಿವೆ. ಬಸ್ಸಿನಲ್ಲಿದ್ದ ಉಳಿದ ಯಾತ್ರಿಕರಿಗೆ ಮೀಸಲು ಬಸ್ ವ್ಯವಸ್ಥೆ ಮಾಡಲಾಗಿದ್ದು, ಯಾತ್ರಿಕರು ಪ್ರಯಾಣ ಮುಂದುವರಿಸಿದ್ದಾರೆ. ಇದನ್ನೂ ಓದಿ: ಜಸ್ಟ್‌ 5 ಸಾವಿರಕ್ಕೆ ಸ್ನೇಹಿತರಿಂದಲೇ ಉತ್ತರ ಕರ್ನಾಟಕದ ಯುವ ಗಾಯಕ ಮಾರುತಿ ಲಠ್ಠೆ ಬರ್ಬರ ಕೊಲೆ

  • ಅಮರನಾಥ ಯಾತ್ರೆಗೆ ತೆರಳುತ್ತಿದ್ದ 5 ಬಸ್‌ಗಳ ನಡುವೆ ಸರಣಿ ಅಪಘಾತ – 30ಕ್ಕೂ ಹೆಚ್ಚು ಮಂದಿಗೆ ಗಾಯ

    ಅಮರನಾಥ ಯಾತ್ರೆಗೆ ತೆರಳುತ್ತಿದ್ದ 5 ಬಸ್‌ಗಳ ನಡುವೆ ಸರಣಿ ಅಪಘಾತ – 30ಕ್ಕೂ ಹೆಚ್ಚು ಮಂದಿಗೆ ಗಾಯ

    ಶ್ರೀನಗರ: ಅಮರನಾಥ ಯಾತ್ರೆಗಾಗಿ (Amarnath Yatra) ತೆರಳುತ್ತಿದ್ದ ಐದು ಬಸ್‌ಗಳ ನಡುವೆ ಸರಣಿ ಅಪಘಾತ ಸಂಭವಿಸಿ, 30ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಕಾಶ್ಮೀರದ (Kashmir) ರಾಂಬನ್‌ನ (Ramban) ಚಂದರ್‌ಕೋಟ್ ಲಂಗರ್ ಪಾಯಿಂಟ್‌ನಲ್ಲಿ ನಡೆದಿದೆ.

    ಅಮರನಾಥ ಯಾತ್ರೆಗಾಗಿ ಭಕ್ತರು ಐದು ಬಸ್‌ಗಳ ಮೂಲಕ ಪಹಲ್ಗಾಮ್‌ಗೆ ತೆರಳುತ್ತಿದ್ದರು. ಈ ವೇಳೆ ಲಂಗರ್ ಪಾಯಿಂಟ್‌ನಲ್ಲಿ ನಾಲ್ಕು ಬಸ್‌ಗಳು ನಿಂತಿದ್ದವು. ಇದೇ ಸಂದರ್ಭದಲ್ಲಿ ಯಾತ್ರೆಯ ಬೆಂಗಾವಲು ಪಡೆಯ ಬಸ್‌ನ ಬ್ರೇಕ್ ಫೇಲ್ ಆಗಿ, ನಿಯಂತ್ರಣ ಕಳೆದುಕೊಂಡು ಇನ್ನುಳಿದ ಬಸ್‌ಗಳಿಗೆ ಡಿಕ್ಕಿ ಹೊಡೆದಿದೆ.ಇದನ್ನೂ ಓದಿ: ಮದುವೆ ದಿಬ್ಬಣಕ್ಕೆ ಹೊರಟಿದ್ದ ಕಾರು ಭೀಕರ ಅಪಘಾತ – ವರ ಸೇರಿ 8 ಮಂದಿ ದುರ್ಮರಣ

    ಅಪಘಾತದಲ್ಲಿ ಗಾಯಗೊಂಡವರನ್ನು ಪ್ರಾಥಮಿಕ ಚಿಕಿತ್ಸೆಗಾಗಿ ಡಿಎಚ್ ರಾಂಬನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ, ಯಾರಿಗೂ ದೊಡ್ಡ ಮಟ್ಟದ ಗಾಯಗಳಾಗಿಲ್ಲ ಎಂದು ಮೂಲಗಳು ತಿಳಿಸಿವೆ.

    ರಾಂಬನ್ ಡಿಸಿ ಮೊಹಮ್ಮದ್ ಅಲಿಯಾಸ್ ಖಾನ್, ಡಿಐಜಿ ಡಿಕೆಆರ್ ಶ್ರೀಧರ್ ಪಾಟೀಲ್, ಎಸ್‌ಎಸ್‌ಪಿ ರಾಂಬನ್ ಕುಲ್ಬೀರ್ ಸಿಂಗ್ ಮತ್ತು ಎಡಿಸಿ ವರುಣ್‌ಜೀತ್ ಸಿಂಗ್ ಚರಕ್ ಆಸ್ಪತ್ರೆಗೆ ಧಾವಿಸಿ, ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ್ದಾರೆ. ಚಿಕಿತ್ಸೆ ಬಳಿಕ ಅಮರನಾಥ ಯಾತ್ರೆಗೆ ತೆರಳಲು ಅನುಮತಿಸಲಾಯಿತು ಎಂದು ತಿಳಿದು ಬಂದಿದೆ.

    ಶನಿವಾರ ಬೆಳಿಗ್ಗೆ 6,900ಕ್ಕೂ ಹೆಚ್ಚು ಯಾತ್ರಿಕರ ತಂಡವು ಭಗವತಿ ನಗರದ ಮೂಲಕ ಅಮರನಾಥ ದೇವಾಲಯ (Amarnath) ಭೇಟಿಗೆ ತೆರಳಿದರು. ಬುಧವಾರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ (Manoj Sinha) ಯಾತ್ರೆಗೆ ಚಾಲನೆ ನೀಡಿದ ನಂತರ ಈವರೆಗೂ ಒಟ್ಟು 24,528 ಯಾತ್ರಿಕರು ಜಮ್ಮುವಿನ ಮೂಲ ಶಿಬಿರದಿಂದ ಯಾತ್ರೆಗೆ ತೆರಳಿದ್ದಾರೆ.ಇದನ್ನೂ ಓದಿ: ಟಿಬಿ ಡ್ಯಾಂನಿಂದ 64 ಸಾವಿರ ಕ್ಯೂಸೆಕ್ ನೀರು ಬಿಡುಗಡೆ – ಶ್ರೀಕೃಷ್ಣದೇವರಾಯ ಸಮಾಧಿ ಮಂಟಪ ಮುಳುಗಡೆ ಭೀತಿ

  • ಬಿಗಿಭದ್ರತೆಯೊಂದಿಗೆ ಅಮರನಾಥ ಯಾತ್ರೆಗೆ ಚಾಲನೆ

    ಬಿಗಿಭದ್ರತೆಯೊಂದಿಗೆ ಅಮರನಾಥ ಯಾತ್ರೆಗೆ ಚಾಲನೆ

    ಶ್ರೀನಗರ: ಹಿಂದೂಗಳ ಪವಿತ್ರ ಅಮರನಾಥ ಯಾತ್ರೆಗೆ (Amarnath Yatra) ಇಂದು ಬಿಗಿಭದ್ರತೆಯೊಂದಿಗೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ (Manoj Sinha) ಅವರು ಚಾಲನೆ ನೀಡಿದರು.

    ಅಧಿಕೃತವಾಗಿ ನಾಳೆಯಿಂದ ಆರಂಭವಾಗಲಿದ್ದು, ಇಂದು ಜಮ್ಮುವಿನ ಭಗವತಿ ನಗರದಲ್ಲಿ 5,880 ಭಕ್ತರಿದ್ದ ಮೊದಲ ಶಿಬಿರಕ್ಕೆ ಧ್ವಜ ಹಾರಿಸುವ ಮೂಲಕ ಚಾಲನೆ ನೀಡಲಾಯಿತು. ಜು.3ರಂದು ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಯಾತ್ರೆ ಅಧಿಕೃತವಾಗಿ ಪ್ರಾರಂಭವಾಗಲಿದ್ದು, ಆ.7ರವರೆಗೆ 38 ದಿನಗಳ ಕಾಲ ಅಮರನಾಥ ಯಾತ್ರೆ ನಡೆಯಲಿದೆ. ಈ ಹಿನ್ನೆಲೆ ಕಥುವಾದ ಲಖನ್‌ಪುರದಿಂದ ಪವಿತ್ರ ಗುಹೆಯವರೆಗೆ ಸುಮಾರು 1 ಲಕ್ಷ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.ಇದನ್ನೂ ಓದಿ: ಏಷ್ಯಾ ಕಪ್‌ ಟೂರ್ನಿಗೆ ಮುಹೂರ್ತ ಫಿಕ್ಸ್‌; ಸೆ.7ಕ್ಕೆ ಭಾರತ-ಪಾಕ್‌ ಮುಖಾಮುಖಿ

    ಜಮ್ಮು-ಶ್ರೀನಗರ ಹೆದ್ದಾರಿ ಸಾವಿರಾರು ಯಾತ್ರಿಕರಿಗೆ ಪ್ರಮುಖ ಮಾರ್ಗಗಳಲ್ಲಿ ಒಂದಾಗಿದೆ. ಹೀಗಾಗಿ ಸಿಆರ್‌ಪಿಎಫ್ ಅದರ ಮೇಲೆ ಕಣ್ಗಾವಲು ಹೆಚ್ಚಿಸಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆ-9 ಶ್ವಾನ ದಳಗಳನ್ನು ಅದರ ಸಿಬ್ಬಂದಿಯೊಂದಿಗೆ ನಿಯೋಜಿಸಲಾಗಿದೆ.

    ಉಧಮ್‌ಪುರ ವಲಯದಂತಹ ಸೂಕ್ಷ್ಮ ಪ್ರದೇಶಗಳ ಮೇಲೆ ವಿಶೇಷ ಗಮನಹರಿಸಿ ಹೆದ್ದಾರಿ ಗಸ್ತು ತಿರುಗುವಿಕೆಯನ್ನು ನಡೆಸಲಾಗುತ್ತಿದೆ. ಈ ಸಂಬಂಧ ಸಭೆ ನಡೆಸಿ ಪೊಲೀಸರು, ಧಾರ್ಮಿಕ ಸಂಸ್ಥೆಗಳು, ಟ್ಯಾಕ್ಸಿ ಒಕ್ಕೂಟಗಳು, ವ್ಯಾಪಾರಿಗಳು, ಮಾರುಕಟ್ಟೆ ಮತ್ತು ಹೋಟೆಲ್ ಸಂಘದ ಅಧಿಕಾರಿಗಳಿಂದ ಸಲಹೆಗಳನ್ನು ಪಡೆದಿದ್ದಾರೆ. ಅಮರನಾಥ ಯಾತ್ರಿಕರಿಗೆ ವಸತಿ ಮತ್ತು ಆಹಾರದಲ್ಲಿ ಯಾವುದೇ ಸಮಸ್ಯೆ ಎದುರಾಗದಂತೆ ಸಾಕಷ್ಟು ಕುಡಿಯುವ ನೀರು ಮತ್ತು ವಿದ್ಯುತ್ ಪೂರೈಕೆಯನ್ನು ಖಚಿತಪಡಿಸಲಾಗಿದೆ ಎಂದು ಆಯುಕ್ತರು ಹೇಳಿದರು.

    ಬೇಸ್ ಕ್ಯಾಂಪ್‌ನಲ್ಲಿ ಯಾತ್ರಿಕರಿಗೆ ಎಸಿ ಹಾಲ್, ಹ್ಯಾಂಗರ್, ಸಮುದಾಯ ಲಂಗಾರ್ ಸೇವೆ, ಸ್ವಚ್ಛ ಮೊಬೈಲ್ ಶೌಚಾಲಯಗಳನ್ನು ಒದಗಿಸಲಾಗಿದೆ. ಇದರೊಂದಿಗೆ, ಕಥುವಾದ ಲಖನ್‌ಪುರದಿಂದ ಲಂಬಾರ್ ಮತ್ತು ರಾಂಬನ್‌ನ ಬನಿಹಾಲ್‌ಗೆ ಯಾತ್ರೆಯ ಮಾರ್ಗದಲ್ಲಿರುವ ಜಿಲ್ಲೆಗಳ ವಸತಿ ಕೇಂದ್ರಗಳಲ್ಲಿ ಯಾತ್ರಿಕರಿಗೆ ಇದೇ ರೀತಿಯ ಸೌಲಭ್ಯಗಳು ಸಿಗುತ್ತವೆ. ಈಗಾಗಲೇ ಜುಲೈ 1ರಿಂದ ಆಫ್‌ಲೈನ್ ನೋಂದಣಿ ಆರಂಭವಾಗಿದೆ.ಇದನ್ನೂ ಓದಿ: ಬೈಕ್ ಟ್ಯಾಕ್ಸಿಗೆ ಕೇಂದ್ರದಿಂದ ಅಸ್ತು – ಮಾರ್ಗಸೂಚಿ ಬಿಡುಗಡೆ

  • ಅಮರನಾಥ ಯಾತ್ರೆ – ಯಾತ್ರಿಕರ ಸುರಕ್ಷತೆಗೆ ಗಸ್ತು ಹೆಚ್ಚಿಸಿದ ಸಿಆರ್‌ಪಿಎಫ್

    ಅಮರನಾಥ ಯಾತ್ರೆ – ಯಾತ್ರಿಕರ ಸುರಕ್ಷತೆಗೆ ಗಸ್ತು ಹೆಚ್ಚಿಸಿದ ಸಿಆರ್‌ಪಿಎಫ್

    ಶ್ರೀನಗರ: ಜುಲೈ 3 ರಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಆರಂಭವಾಗಲಿರುವ ಅಮರನಾಥ ಯಾತ್ರೆಗೆ (Amarnath Yatra) ಮುಂಚಿತವಾಗಿ, ಯಾತ್ರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸಿಆರ್‌ಪಿಎಫ್ (ಕೇಂದ್ರ ಮೀಸಲು ಪೊಲೀಸ್ ಪಡೆ) ಎನ್‌ಹೆಚ್-44ರಲ್ಲಿ ಕಣ್ಗಾವಲು ಹೆಚ್ಚಿಸಿದೆ.

    ಜಮ್ಮು-ಶ್ರೀನಗರ ಹೆದ್ದಾರಿ ಸಾವಿರಾರು ಯಾತ್ರಿಕರಿಗೆ ಪ್ರಮುಖ ಮಾರ್ಗಗಳಲ್ಲಿ ಒಂದಾಗಿದೆ. ಸಿಆರ್‌ಪಿಎಫ್ (CRPF) ಅದರ ಮೇಲೆ ಕಣ್ಗಾವಲು ಹೆಚ್ಚಿಸಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆ-9 ಶ್ವಾನ ದಳಗಳನ್ನು ಅದರ ಸಿಬ್ಬಂದಿಯೊಂದಿಗೆ ನಿಯೋಜಿಸಲಾಗಿದೆ. ಇದನ್ನೂ ಓದಿ: ಶಾಲಾ ಬಸ್, ಲಾರಿ ನಡುವೆ ಸಿಲುಕಿ ಆಟೋ ಅಪ್ಪಚ್ಚಿ – ಪವಾಡ ಸದೃಶವಾಗಿ ಚಾಲಕ ಪಾರು

    ಉಧಮ್‌ಪುರ ವಲಯದಂತಹ ಸೂಕ್ಷ್ಮ ಪ್ರದೇಶಗಳ ಮೇಲೆ ವಿಶೇಷ ಗಮನಹರಿಸಿ ಹೆದ್ದಾರಿ ಗಸ್ತು ತಿರುಗುವಿಕೆಯನ್ನು ನಡೆಸಲಾಗುತ್ತಿದೆ. ಜುಲೈ 2ರಂದು ಶಿಬಿರದಿಂದ ಯಾತ್ರಾರ್ಥಿಗಳ ಮೊದಲ ಬ್ಯಾಚ್‌ಗೆ ಹಸಿರು ನಿಶಾನೆ ತೋರಲಾಗುವುದು, ಆದರೆ ಜುಲೈ 3ರಂದು ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಯಾತ್ರೆ ಅಧಿಕೃತವಾಗಿ ಪ್ರಾರಂಭವಾಗಲಿದೆ. ಇದನ್ನೂ ಓದಿ: ನಮ್ಮ ಸರ್ಕಾರ 5 ವರ್ಷ ಬಂಡೆ ರೀತಿ ಇರುತ್ತೆ: ಒಟ್ಟಾಗಿಯೇ ಇದ್ದೇವೆ ಎಂದು ಹೇಳಿ ಡಿಕೆಶಿಯ ಕೈ ಎತ್ತಿದ ಸಿಎಂ

    ಜುಲೈ 2ರಿಂದ ಭಗವತಿ ನಗರದಿಂದ ಯಾತ್ರೆ ಆರಂಭವಾಗಲಿದೆ ಎಂದು ಆಯುಕ್ತ ರಮೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಸಭೆ ನಡೆಸಿ ಪೊಲೀಸರು, ಧಾರ್ಮಿಕ ಸಂಸ್ಥೆಗಳು, ಟ್ಯಾಕ್ಸಿ ಒಕ್ಕೂಟಗಳು, ವ್ಯಾಪಾರಿಗಳು, ಮಾರುಕಟ್ಟೆ ಮತ್ತು ಹೋಟೆಲ್ ಸಂಘದ ಅಧಿಕಾರಿಗಳಿಂದ ಸಲಹೆಗಳನ್ನು ಪಡೆಯಲಾಯಿತು. ಅಮರನಾಥ ಯಾತ್ರಿಕರಿಗೆ ವಸತಿ ಮತ್ತು ಆಹಾರದಲ್ಲಿ ಯಾವುದೇ ಸಮಸ್ಯೆ ಎದುರಾಗದಂತೆ ಸಾಕಷ್ಟು ಕುಡಿಯುವ ನೀರು ಮತ್ತು ವಿದ್ಯುತ್ ಪೂರೈಕೆಯನ್ನು ಖಚಿತಪಡಿಸಲಾಗಿದೆ ಎಂದು ಆಯುಕ್ತರು ಹೇಳಿದರು. ಇದನ್ನೂ ಓದಿ: 70 ಲಕ್ಷದ ಕಾರು, 800 ಗ್ರಾಂ ಚಿನ್ನ ನೀಡಿದ ಬಳಿಕವೂ ವರದಕ್ಷಿಣೆ ಕಿರುಕುಳ – ನವವಿವಾಹಿತೆ ಆತ್ಮಹತ್ಯೆ

    ಬೇಸ್ ಕ್ಯಾಂಪ್‌ನಲ್ಲಿಯಾತ್ರಿಕರಿಗೆ ಎಸಿ ಹಾಲ್, ಹ್ಯಾಂಗರ್, ಸಮುದಾಯ ಲಂಗಾರ್ ಸೇವೆ, ಸ್ವಚ್ಛ ಮೊಬೈಲ್ ಶೌಚಾಲಯಗಳನ್ನು ಒದಗಿಸಲಾಗಿದೆ. ಇದರೊಂದಿಗೆ, ಕಥುವಾದ ಲಖನ್‌ಪುರದಿಂದ ಲಂಬಾರ್ ಮತ್ತು ರಾಂಬನ್‌ನ ಬನಿಹಾಲ್‌ಗೆ ಯಾತ್ರೆಯ ಮಾರ್ಗದಲ್ಲಿರುವ ಜಿಲ್ಲೆಗಳ ವಸತಿ ಕೇಂದ್ರಗಳಲ್ಲಿ ಯಾತ್ರಿಕರಿಗೆ ಇದೇ ರೀತಿಯ ಸೌಲಭ್ಯಗಳು ಸಿಗುತ್ತವೆ. ಇದನ್ನೂ ಓದಿ: ಹಾಸನ| ಇಂದು ಒಂದೇ ದಿನ ಗೃಹಿಣಿ, ಪ್ರೊಫೆಸರ್‌, ಸರ್ಕಾರಿ ನೌಕರ ಹೃದಯಾಘಾತಕ್ಕೆ ಬಲಿ

    ಜುಲೈ 1 ರಿಂದ ಆಫ್‌ಲೈನ್ ನೋಂದಣಿ ಆರಂಭವಾಗಲಿದೆ ಎಂದು ಆಯುಕ್ತರು ತಿಳಿಸಿದ್ದಾರೆ. ಆನ್‌ಲೈನ್ ನಂತರ ಜುಲೈ 1 ರಿಂದ ಯಾತ್ರಿಕರಿಗೆ ಆಫ್‌ಲೈನ್ ನೋಂದಣಿ ಸೌಲಭ್ಯವನ್ನು ಒದಗಿಸಲಾಗುತ್ತದೆದೆ. ಯಾತ್ರಿಕರು ಒಂದು ದಿನ ಮೊದಲು ಭಗವತಿ ನಗರ ಯಾತ್ರಾ ಮೂಲ ಶಿಬಿರವನ್ನು ತಲುಪುತ್ತಾರೆ, ಮರುದಿನ ಬಾಲ್ಟಾಲ್, ಪಹಲ್ಗಾಮ್ ಮೂಲಶಿಬಿರಕ್ಕೆ ಹೊರಡುತ್ತಾರೆ ಎಂದು ಆಯುಕ್ತರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಹಾಸನ ಯುವಜನತೆಯಲ್ಲಿ ಹೃದಯಾಘಾತ – ತನಿಖೆಗೆ ವಿಶೇಷ ಸಮಿತಿ ರಚಿಸಿದ ಸರ್ಕಾರ

  • ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ – ಹೆಜ್ಜೆ ಹೆಜ್ಜೆಗೂ ಪೊಲೀಸರ ನಿಗಾ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ – ಹೆಜ್ಜೆ ಹೆಜ್ಜೆಗೂ ಪೊಲೀಸರ ನಿಗಾ

    ಶ್ರೀನಗರ: ಜುಲೈ 3ರಿಂದ ಅಮರನಾಥ ಯಾತ್ರೆ (Amarnath Yatra) ಪ್ರಾರಂಭವಾಗಲಿದ್ದು, ಜಮ್ಮು ಕಾಶ್ಮೀರದಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ತಪಾಸಣೆ ನಡೆಸಲು ಹೆಚ್ಚುವರಿ ಚೆಕ್ ಪೋಸ್ಟ್‌ಗಳನ್ನು ನಿರ್ಮಿಸಲಾಗಿದೆ.

    ಪಹಲ್ಗಾಮ್ ಉಗ್ರರ ದಾಳಿ ಬಳಿಕ, ಯಾತ್ರಾರ್ಥಿಗಳ (Pilgrims) ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಜಮ್ಮುವಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಅರೆಸೇನಾ ಪಡೆಗಳು ಚೆಕ್ ಪೋಸ್ಟ್‌ಗಳನ್ನು ನಿರ್ಮಿಸಿದ್ದು, ಯಾತ್ರಾರ್ಥಿಗಳಿಗೆ ಸುಗಮ ಯಾತ್ರೆಯ ಅನುಭವ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಚಾರ್‌ಧಾಮ್ ಯಾತ್ರೆಗಿದ್ದ ನಿರ್ಬಂಧ ತೆರವು

    ರಾಷ್ಟ್ರೀಯ ಹೆದ್ದಾರಿಗಳು, ನಗರದ ಹೊರವಲಯ, ಮೂಲ ಶಿಬಿರ ಭಗವತಿ ನಗರಕ್ಕೆ ಹೋಗುವ ಮಾರ್ಗಗಳು ಸೇರಿದಂತೆ ಸೂಕ್ಷ್ಮ ವಲಯಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ನಿರ್ಮಿಸಿದ್ದು, ದಿನದ 24 ಘಂಟೆಗಳ ಕಾಲ ನಿಗಾ ವಹಿಸಲಿದ್ದಾರೆ. ಇನ್ನೂ ಹೋಟೆಲ್, ಗೆಸ್ಟ್ ಹೌಸ್‌ಗಳ ಮೇಲೆಯೂ ನಿಗಾ ವಹಿಸಲಾಗಿದೆ. ಇದನ್ನೂ ಓದಿ: ಕಸದ ಲಾರಿಯಲ್ಲಿ ಶವ ಪತ್ತೆ | ದಿನಾ ಕುಡಿದು ಬಂದು ರಂಪಾಟ ಮಾಡಿದ್ದಕ್ಕೆ ಮಹಿಳೆಯ ಕೊಲೆ!

    ಅಮರನಾಥ ಯಾತ್ರೆಗೆ 50 ಸಾವಿರ ಯಾತ್ರಾರ್ಥಿಗಳಿಗೆ ವಸತಿ ಸೌಲಭ್ಯ ಮಾಡಿರುವುದಾಗಿ ಜಮ್ಮು ಕಾಶ್ಮೀರ ಆಡಳಿತ ಮಂಡಳಿ ತಿಳಿಸಿದೆ. ಪಹಲ್ಗಾಮ್ ದಾಳಿಯ ಬಳಿಕ ಅಮರನಾಥ ಯಾತ್ರೆಗೆ ನೋಂದಾಯಿಸಿಕೊಳ್ಳುವ ಭಕ್ತರ ಸಂಖ್ಯೆ 10%ನಷ್ಟು ಇಳಿಕೆಯಾಗಿದೆ ಎಂದು ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ತಿಳಿಸಿದ್ದಾರೆ. ಇದನ್ನೂ ಓದಿ: ಗಮನಿಸಿ, ಇನ್ನು ಮುಂದೆ ರೈಲು ಹೊರಡುವ 8 ಗಂಟೆಯ ಮೊದಲು ರಿಸರ್ವೇಷನ್‌ ಲಿಸ್ಟ್‌ ಔಟ್‌

  • ಚಾರ್‌ಧಾಮ್ ಯಾತ್ರೆಗಿದ್ದ ನಿರ್ಬಂಧ ತೆರವು

    ಚಾರ್‌ಧಾಮ್ ಯಾತ್ರೆಗಿದ್ದ ನಿರ್ಬಂಧ ತೆರವು

    ನವದೆಹಲಿ: ತೀವ್ರ ಮಳೆ ಮತ್ತು ಗುಡ್ಡ ಕುಸಿತದ ಕಾರಣಗಳಿಂದ ನಿಷೇಧ ಹೇರಲಾಗಿದ್ದ ಚಾರ್‌ಧಾಮ್ ಯಾತ್ರೆ (Char Dham Yatra) ಮತ್ತೆ ಪುನಾರಂಭಗೊಂಡಿದೆ.

    ಮಳೆ ಪ್ರಮಾಣ ತಗ್ಗಿದ ಹಿನ್ನೆಲೆ ಯಾತ್ರೆಗೆ ಮತ್ತೆ ಅವಕಾಶ ಮಾಡಿಕೊಡುವಂತೆ ಗರ್ವಾಲ್ ವಿಭಾಗೀಯ ಆಯುಕ್ತ ವಿನಯ್ ಶಂಕರ್ ಪಾಂಡೆ ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆ ಚಾರ್‌ಧಾಮ್ ಯಾತ್ರೆಗಿದ್ದ ನಿರ್ಬಂಧ ತೆರವುಗೊಳಿಸಲಾಗಿದೆ. ಯಾತ್ರಾ ಮಾರ್ಗದಲ್ಲಿರುವ ಜಿಲ್ಲೆಗಳ ಆಯಾ ಜಿಲ್ಲಾಧಿಕಾರಿಗಳಿಗೆ ಆಯಾ ಜಿಲ್ಲೆಗಳಲ್ಲಿನ ಹವಾಮಾನ ಪರಿಸ್ಥಿತಿಗಳನ್ನು ಅವಲೋಕಿಸಿ ವಾಹನಗಳನ್ನು ನಿಲ್ಲಿಸುವಂತೆ ಸೂಚಿಸಲಾಗಿದೆ. ಇದನ್ನೂ ಓದಿ:  ಕಸದ ಲಾರಿಯಲ್ಲಿ ಶವ ಪತ್ತೆ | ದಿನಾ ಕುಡಿದು ಬಂದು ರಂಪಾಟ ಮಾಡಿದ್ದಕ್ಕೆ ಮಹಿಳೆಯ ಕೊಲೆ!

    ಇನ್ನು ಜುಲೈ 3ರರಿಂದ ಅಮರನಾಥ ಯಾತ್ರೆ ಹಿನ್ನೆಲೆ ಜಮ್ಮು ಕಾಶ್ಮೀರದಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಜಮ್ಮುನಿಂದ ಕಾಶ್ಮೀರಕ್ಕೆ ಸಂಪರ್ಕಿಸುವ ಹೆದ್ದಾರಿ ಹಾಗೂ ಶ್ರೀನಗರದಿಂದ ಬಾಲ್ಟಾಲ್ ಬೇಸ್ ಕ್ಯಾಂಪ್ ರಸ್ತೆಯಲ್ಲಿ ಭಾರಿ ಭದ್ರತೆ ನೀಡಲಾಗಿದೆ. ಕೇಂದ್ರದ ಮೀಸಲು ಪಡೆಗಳಿಂದ ಭದ್ರತೆ ಹೆಚ್ಚಿಸಿದ್ದು, ಯಾತ್ರೆಯಲ್ಲಿ ಲಕ್ಷಾಂತರ ಜನರು ಭಾಗಿಯಾಗುವ ನಿರೀಕ್ಷೆಯಿದೆ. ಇದನ್ನೂ ಓದಿ: ಗಮನಿಸಿ, ಇನ್ನು ಮುಂದೆ ರೈಲು ಹೊರಡುವ 8 ಗಂಟೆಯ ಮೊದಲು ರಿಸರ್ವೇಷನ್‌ ಲಿಸ್ಟ್‌ ಔಟ್‌